Tag: Rock Line Venkatesh

  • ಮೋದಿ ಕಾರ್ಯಕ್ರಮ ನಡೆದ ಜಾಗದಲ್ಲೇ ಅಭಿಷೇಕ್-ಅವಿವಾ ಬೀಗರೂಟ

    ಮೋದಿ ಕಾರ್ಯಕ್ರಮ ನಡೆದ ಜಾಗದಲ್ಲೇ ಅಭಿಷೇಕ್-ಅವಿವಾ ಬೀಗರೂಟ

    ದುವೆ, ಆರತಕ್ಷತೆ ಹಾಗೂ ಸಂಗೀತ ಕಾರ್ಯಕ್ರಮಗಳನ್ನು ಮುಗಿಸಿಕೊಂಡಿರುವ ನಟ ಅಭಿಷೇಕ್ (Abhishek), ಮಾಡೆಲ್ ಅವಿವಾ (Aviva) ಜೂನ್ 16 ರಂದು ಮಂಡ್ಯದ ಜನತೆಗೆ ಬೀಗರೂಟ (Beegarota)ಮಾಡಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ಮದುವೆ ಮತ್ತು ಆರತಕ್ಷತೆ ಬೆಂಗಳೂರಿನಲ್ಲಿ ನಡೆದಿರುವ ಕಾರಣದಿಂದಾಗಿ ಬೀಗರೂಟವನ್ನು ಮಂಡ್ಯದಲ್ಲಿ ಏರ್ಪಡಿಸಲಾಗಿದೆ.

    ಈ ಹಿಂದೆ ಮಂಡ್ಯಕ್ಕೆ (Mandya) ಪ್ರಧಾನಿ ನರೇಂದ್ರ ಮೋದಿ ಬಂದಾಗ, ಯಾವ ಜಾಗದಲ್ಲಿ ಅವರಿಗೆ ಕಾರ್ಯಕ್ರಮ ಮಾಡಲು ತಯಾರಿ ಮಾಡಿಕೊಳ್ಳಲಾಗಿತ್ತೋ, ಅದೇ ಜಾಗದಲ್ಲೇ ಬೀಗರೂಟವನ್ನು ಹಮ್ಮಿಕೊಳ್ಳಲಾಗಿದೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕು ಗೆಜ್ಜಲಗೆರೆ ಕಾಲೋನಿ ಬಳಿ 15 ಎಕರೆ ಪ್ರದೇಶದಲ್ಲಿ ಜರ್ಮನ್ ಟೆಂಟ್ ಹಾಕಲಾಗುತ್ತಿದೆ. ಅಲ್ಲಿಯೇ ಬೀಗರೂಟ ನಡೆಯಲಿದೆ. ಇದನ್ನೂ ಓದಿ:ಚಿತ್ರ ನಿರ್ಮಾಣಕ್ಕೆ ಮುಂದಾದ ಬಾಲಿವುಡ್ ನಟಿ ಕೃತಿ ಸನೋನ್

    ಬೀಗರೂಟಕ್ಕೆ ಕನಿಷ್ಠ 50 ಸಾವಿರಕ್ಕೂ ಹೆಚ್ಚು ಜನರು ಆಗಮಿಸುವ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಈಗಾಗಲೇ ಟೆಂಟ್ ಹಾಕುವಂತಹ ಕಾರ್ಯ ನಡೆದಿದ್ದು, ಸುಮಲತಾ ಅಂಬರೀಶ್  ಇಂದು ಅದರ ಪರಿಶೀಲನೆ ಕೂಡ ಮಾಡಿದ್ದಾರೆ. ಬೀಗರೂಟಕ್ಕೆ ಭರ್ಜರಿ ಬಾಡೂಟವೇ ಇರಲಿದ್ದು, ಪಕ್ಕಾ ಮಂಡ್ಯ ಶೈಲಿಯಲ್ಲಿ ಆಹಾರವನ್ನು ಸಿದ್ಧ ಪಡಿಸಲಾಗುತ್ತದೆಯಂತೆ. ಮುದ್ದೆಯೊಂದಿಗೆ ಭರ್ಜರಿ ಮಾಂಸದೂಟ ಕೂಡ ಜೊತೆಯಾಗಲಿದೆ. ಮುದ್ದೆ, ಬೋಟಿ ಗೊಜ್ಜು, ಮೊಟ್ಟೆ, ಮಟನ್, 2 ತರ ಚಿಕನ್, ಗೀ ರೈಸ್, ಅನ್ನ, ತಿಳಿ ಸಾಂಬಾರ್, ಮಜ್ಜಿಗೆ, ಬಾಳೆಹಣ್ಣು, ಬೀಡಾ ನಂದಿನಿ ಐಸ್ ಕ್ರೀಂ ಇರಲಿದೆ.

    ಬೀಗರ ಊಟದ ಸಿದ್ಧತೆಯನ್ನು ಅಂಬರೀಶ್ (Ambareesh) ಕುಟುಂಬದ ಆಪ್ತ, ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್‌ (RockLine Venkatesh)ಪರಿಶೀಲನೆ ನಡೆಸಿದರು. ಈ ವೇಳೆ ಎಲ್ಲರಿಗೂ ಸಲಹೆ ಸೂಚನೆಯನ್ನು ನೀಡಿದ್ದಾರೆ. ಇದೇ ವೇಳೆ ಮಾತನಾಡಿದ ರಾಕ್‌ಲೈನ್ ವೆಂಕಟೇಶ್ ಅಂಬರೀಶ್‌ಗೆ ಪ್ರಿಯವಾದ ಮಂಡ್ಯ ಶೈಲಿಯ ಬಾಡೂಟವನ್ನು ಬೀಗರ ಊಟದ ಮೆನುವಾಗಿ ಮಾಡಲಾಗುತ್ತದೆ. ಎಷ್ಟೇ ಸಾವಿರ ಜನರು ಬಂದರೂ ಊಟದ ವ್ಯವಸ್ಥೆ ಇದ್ದು, ಬೆಳಿಗ್ಗೆ 11ಗಂಟೆಯಿಂದಲೇ ಊಟದ ಆರಂಭವಾಗಲಿದೆ. ಸಿನಿಮಾ ಹಾಗೂ ರಾಜಕೀಯದಲ್ಲಿ ಅಂಬಿ ಕುಟುಂಬ ಪರ ನಿಂತ ಎಲ್ಲರಿಗೂ ಊಟ ಹಾಕಿಸುವುದು ಕುಟುಂಬಸ್ಥರ ಆಸೆ ಇದೆ, ಅದರಂತೆ ಅಭಿಷೇಕ್ ಬೀಗರ ಊಟ ಮಂಡ್ಯದಲ್ಲೇ ಮಾಡಲಾಗ್ತಿದೆ. ಮಂಡ್ಯ ಜಿಲ್ಲೆಯ ಬಾಣಸಿಗರಿಂದಲೇ ಬಾಡೂಟವನ್ನು ತಯಾರು ಮಾಡಿಸಲಾಗುತ್ತದೆ. ಅಂಬರೀಶ್ ಅವರಿಗೆ ಪ್ರಿಯವಾದ ಕೈಮಾ, ಬೋಟಿ ಗೊಜ್ಜು, ಮಟನ್ ಸೇರಿದಂತೆ ಮಂಡ್ಯ ಶೈಲಿಯಲ್ಲೇ ಅಡುಗೆ ಇರಲಿದೆ. ವಧು ವರರಿಗೆ ಕೇಕ್, ಹಾರ – ಬೊಕ್ಕೆ ತರದೆ ಜನರು ಬಂದು ಆಶೀರ್ವಾದ ಮಾಡಿದರೆ ಸಾಕು ಎಂದು ಅಭಿ ಮನವಿ ಮಾಡಿದ್ದಾರೆ ಎಂದು ರಾಕ್‌ಲೈನ್ ಹೇಳಿದರು.

  • ಯೋಗರಾಜ್ ಭಟ್ಟರ ‘ಕೇಡಿ’ತನ ಬಯಲು: ಶಿವಣ್ಣ-ಪ್ರಭುದೇವ್ ಕಾಂಬಿನೇಷನ್ ಚಿತ್ರಕ್ಕೆ ಇದೆಂಥ ಟೈಟಲ್?

    ಯೋಗರಾಜ್ ಭಟ್ಟರ ‘ಕೇಡಿ’ತನ ಬಯಲು: ಶಿವಣ್ಣ-ಪ್ರಭುದೇವ್ ಕಾಂಬಿನೇಷನ್ ಚಿತ್ರಕ್ಕೆ ಇದೆಂಥ ಟೈಟಲ್?

    ರಾಕ್ ಲೈನ್ ವೆಂಕಟೇಶ್ ನಿರ್ಮಾಣದಲ್ಲಿ ತಯಾರಾಗುತ್ತಿರುವ, ಯೋಗರಾಜ್ ಭಟ್ ನಿರ್ದೇಶನದ ಹೊಸ ಸಿನಿಮಾಗೆ ವಿಚಿತ್ರವಾಗಿರುವಂಥ ಶೀರ್ಷಿಕೆ ಇಡಲಾಗಿದೆ. ಈವರೆಗೂ ಟೈಟಲ್ ವಿಷಯದಲ್ಲಿ ಉಪೇಂದ್ರ ಮಾತ್ರ ತಲೆಕೆಡಿಸುತ್ತಿದ್ದರು. ಇದೀಗ ಆ ಸಾಲಿಗೆ ಯೋಗರಾಜ್ ಭಟ್ಟರು ಕೂಡ ಸೇರ್ಪಡೆಗೊಂಡಿದ್ದಾರೆ. ತಮ್ಮ ಹೊಸ ಸಿನಿಮಾಗೆ ತಲೆಯಲ್ಲಿ ಹುಳು ಬಿಡುವಂತಹ ಟೈಟಲ್ ಇಟ್ಟಿದ್ದಾರೆ. ಟೈಟಲ್ ನೋಡಿದವರು, ಏನ್ ಗುರು ಇದರ ಅರ್ಥ ಎಂದು ಕೇಳುವಂತಾಗಿದೆ.

    ಈಗಾಗಲೇ ಬೆಂಗಳೂರಿನಲ್ಲಿ ಈ ಸಿನಿಮಾದ ಚಿತ್ರೀಕರಣ ಶುರುವಾಗಿದ್ದು, ಪ್ರಭುದೇವ್ ಮತ್ತು ಶಿವರಾಜ್ ಕುಮಾರ್ ಪಾಲ್ಗೊಂಡಿದ್ದಾರೆ. ಶೂಟಿಂಗ್ ನಡುವೆಯೇ ಚಿತ್ರಕ್ಕೆ ‘K ಕರಟಕ D ದಮನಕ’ ಎಂದು ವಿಭಿನ್ನ ಶೀರ್ಷಿಕೆ ಇಟ್ಟಿದ್ದಾರೆ. ಹಲವು ದಿನಗಳಿಂದ ಈ ಸಿನಿಮಾದ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆಯುತ್ತಿದ್ದು, ರಾಕ್ ಲೈನ್ ವೆಂಕಟೇಶ್ ಕೂಡ ಈ ಚಿತ್ರಕ್ಕಾಗಿ ಬಣ್ಣ ಹಚ್ಚಿದ್ದಾರೆ. ಅವರು ಈ ಸಿನಿಮಾದಲ್ಲಿ ಪೊಲೀಸ್ ಆಫೀಸರ್ ಪಾತ್ರ ನಿರ್ವಹಿಸುತ್ತಿದ್ದಾರೆ. ಇದನ್ನೂ ಓದಿ: ರಿಯಲ್ ಪ್ರೇಮಿಗಳು ‘ಬಿಗ್ ಬಾಸ್’ ಮನೆಯಲ್ಲಿ ಬೇರೆ ಬೇರೆ ಆಗ್ತಾರಾ?: ದೂರಾಗುವ ಕುರಿತು ಮಾತನಾಡಿದ ನಂದಿನಿ

    ಸದಭಿರುಚಿ ಚಿತ್ರಗಳನ್ನು ಕನ್ನಡ ಚಿತ್ರರಂಗಕ್ಕೆ ನೀಡಿರುವ  ರಾಕ್ ಲೈನ್ ವೆಂಕಟೇಶ್ ನಿರ್ಮಾಣದಲ್ಲಿ, ಹೆಸರಾಂತ ನಿರ್ದೇಶಕ ಯೋಗರಾಜ್ ಭಟ್ ಅವರ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರುತ್ತಿದ್ದು, ಮೊದಲ ಬಾರಿಗೆ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಹಾಗೂ ಇಂಡಿಯನ್ ಮೈಕೆಲ್ ಜಾಕ್ಸನ್ ಪ್ರಭುದೇವ ಅಭಿನಯಿಸುತ್ತಿರುವುದು ವಿಶೇಷ.

    Live Tv
    [brid partner=56869869 player=32851 video=960834 autoplay=true]

  • ಬೆಂಗಳೂರಿನಲ್ಲಿ ನಡೆದ ಶೂಟಿಂಗ್ ನಲ್ಲಿ ಶಿವಣ್ಣ ಜೊತೆ ಸೇರಿಕೊಂಡ ಪ್ರಭುದೇವ

    ಬೆಂಗಳೂರಿನಲ್ಲಿ ನಡೆದ ಶೂಟಿಂಗ್ ನಲ್ಲಿ ಶಿವಣ್ಣ ಜೊತೆ ಸೇರಿಕೊಂಡ ಪ್ರಭುದೇವ

    ನ್ನಡ ಚಿತ್ರರಂಗದ ಪ್ರತಿಷ್ಠಿತ ಸಂಸ್ಥೆ ರಾಕ್‌ಲೈನ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ರಾಕ್‌ಲೈನ್ ವೆಂಕಟೇಶ್ ಅವರು ನಿರ್ಮಿಸುತ್ತಿರುವ “ಪ್ರೊಡಕ್ಷನ್ ನಂ 47” ಚಿತ್ರದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಹಾಗೂ ಇಂಡಿಯನ್ ಮೈಕಲ್ ಜಾಕ್ಸನ್ ಪ್ರಭುದೇವ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ.

    ಹೆಸರಾಂತ ನಿರ್ದೇಶಕ ಯೋಗರಾಜ್ ಭಟ್ ನಿರ್ದೇಶಿಸುತ್ತಿರುವ ಈ ಚಿತ್ರದ ಚಿತ್ರೀಕರಣ ಬೆಂಗಳೂರಿನಲ್ಲಿ ಬಿರುಸಿನಿಂದ ನಡೆಯುತ್ತಿದೆ. ಶಿವರಾಜಕುಮಾರ್, ಪ್ರಭುದೇವ, ತನಿಕೆಲ್ಲ ಭರಣಿ, ಪ್ರಿಯಾ ಆನಂದ್, ನಿಶ್ವಿಕಾ ನಾಯ್ಡು ಮುಂತಾದವರು ಮೊದಲ ಹಂತದ ಚಿತ್ರೀಕರಣದಲ್ಲಿ ಭಾಗಯಾಗಿದ್ದಾರೆ. ಇದನ್ನೂ ಓದಿ:ಮತ್ತೆ ಮಾಜಿ ಬಾಯ್‌ಫ್ರೆಂಡ್ ಜೊತೆ ಕಾಣಿಸಿಕೊಂಡ ಸುಶ್ಮಿತಾ ಸೇನ್

    ಈ ಚಿತ್ರಕ್ಕೆ ವಿ.ಹರಿಕೃಷ್ಣ ಸಂಗೀತ ನಿರ್ದೇಶನ ಮಾಡಿದ್ದು, ಸಂತೋಷ್ ರೈ ಪಾತಾಜೆ ಛಾಯಾಗ್ರಹಣದ ಜವಾಬ್ಧಾರಿ ಹೊತ್ತಿದ್ದಾರೆ. ಶಿವಣ್ಣ – ಪ್ರಭುದೇವ- ಯೋಗರಾಜ್ ಭಟ್ ಹಾಗೂ ರಾಕ್ ಲೈನ್ ವೆಂಕಟೇಶ್ ಅವರಂತಹ ಸಿನಿ ದಿಗ್ಗಜರ ಕಾಂಬಿನೇಶನ್‌ನಲ್ಲಿ ಅದ್ಧೂರಿಯಾಗಿ ಮೂಡಿಬರುತ್ತಿರುವ ಈ ಅಪರೂಪದ ಚಿತ್ರವನ್ನು ಕಣ್ತುಂಬಿಕೊಳ್ಳಲು ಕನ್ನಡ ಕಲಾರಸಿಕರು ಕಾತುರದಿಂದ ಕಾಯುತ್ತಿದ್ದಾರೆ.

     

    Live Tv
    [brid partner=56869869 player=32851 video=960834 autoplay=true]

  • ನಾನು ಅಂಬರೀಶ್ ಅಣ್ಣನ ಅಭಿಮಾನಿ, ಅವರ ಮಗನಿಗೆ ಸಿನಿಮಾ ಮಾಡುತ್ತಿರುವುದು ಹೆಮ್ಮೆ : ನಿರ್ದೇಶಕ ಮಹೇಶ್ ಕುಮಾರ್

    ನಾನು ಅಂಬರೀಶ್ ಅಣ್ಣನ ಅಭಿಮಾನಿ, ಅವರ ಮಗನಿಗೆ ಸಿನಿಮಾ ಮಾಡುತ್ತಿರುವುದು ಹೆಮ್ಮೆ : ನಿರ್ದೇಶಕ ಮಹೇಶ್ ಕುಮಾರ್

    ಭಿಷೇಕ್ ಅಂಬರೀಶ್ ಅವರಿಗೆ ಹೊಸ ಸಿನಿಮಾ ನಿರ್ದೇಶನ ಮಾಡುತ್ತಿರುವ ಅಯೋಗ್ಯ ಚಿತ್ರ ಖ್ಯಾತಿಯ ಮಹೇಶ್ ಕುಮಾರ್ ತಮ್ಮ ಹೊಸ ಸಿನಿಮಾದ ಬಗ್ಗೆ ಮಾತನಾಡಿದ್ದಾರೆ. ಮೊನ್ನೆಯಷ್ಟೇ ಈ ಸಿನಿಮಾದ ಮೋಷನ್ ಪೋಸ್ಟರ್ ಕೂಡ ಬಿಡುಗಡೆ ಆಗಿದೆ.  ನಾನು ಅಂಬರೀಶ್ ಅಣ್ಣನ ದೊಡ್ಡ ಅಭಿಮಾನಿ. ಅವರ ಮಗ ಅಭಿಷೇಕ್ ಅವರಿಗೆ ಸಿನಿಮಾ ಮಾಡುತ್ತಿರುವುದು ಖುಷಿಯಾಗಿದೆ. ನಿರ್ದೇಶನಕ್ಕೆ ಅವಕಾಶ ನೀಡಿರುವ ರಾಕ್ ಲೈನ್ ವೆಂಕಟೇಶ್ ಸರ್ ಮತ್ತು ಮೋಷನ್ ಪೋಸ್ಟರ್ ಬಿಡುಗಡೆ ಮಾಡಿ ಹಾರೈಸಿದ ಸುಮಲತಾ ಅಂಬರೀಶ್ ಅವರಿಗೆ  ಧನ್ಯವಾದ. ರವಿ ಬಸ್ರೂರು, ಟಿ.ಕೆ.ದಯಾನಂದ್ ಸೇರಿದಂತೆ ನನ್ನ ಇಡೀ ಚಿತ್ರತಂಡದ ಸಹಕಾರದಿಂದ ಚಿತ್ರ ಉತ್ತಮವಾಗಿ ಮೂಡಿ ಬರಲಿದೆ ಎಂದು ನಿರ್ದೇಶಕ ಮಹೇಶ್ ಕುಮಾರ್ ತಿಳಿಸಿದರು.

    ಅಂಬರೀಶ್ ಅವರ ಸ್ಮಾರಕದ ಬಳಿ ಈ ಸಮಾರಂಭ ನಡೆಯುತ್ತಿದೆ. ಚಿತ್ರಕ್ಕೆ ಅಂಬರೀಶ್ ಅವರ  ಆಶೀರ್ವಾದ ಸಂಪೂರ್ಣ ಇದೆ. ಇದಕ್ಕೆ ಸಾಕ್ಷಿಯಾಗಿ ಪೋಸ್ಟರ್ ಬಿಡುಗಡೆಯಾಗುತ್ತಿದ್ದಂತೆ ಅಂಬರೀಶ್ ಅವರ ಭಾವಚಿತ್ರದ ಬಲಗಡೆಯಿಂದ ಹೂವು ಬಿತ್ತು. ಚಿತ್ರ ಭರ್ಜರಿ ಯಶಸ್ಸು ಕಾಣಲಿ ಎಂದು ಸುಮಲತಾ ಅಂಬರೀಶ್ ಹಾರೈಸಿದರು. ಅಭಿಷೇಕ್ ಅವರಿಗೆ ಸಿನಿಮಾ ಮಾಡಬೇಕೆಂಬುದು ನನಗೆ ಬಹಳ ದಿನಗಳ ಆಸೆ. ಆದರೆ ಚಿತ್ರದ ಕಥೆ ಚೆನ್ನಾಗಿರಬೇಕು ಅಂತ ಕಾಯುತ್ತಿದೆ. ಅಭಿ ಅವರೆ ಈ ಕಥೆಯ ಬಗ್ಗೆ ನನಗೆ ಹೇಳಿದರು. ಇಷ್ಟವಾಯಿತು. ಚಿತ್ರ ಅದ್ದೂರಿಯಾಗಿ ನಿರ್ಮಾಣವಾಗಲಿದೆ.  ಸುಮಲತಾ ಅಂಬರೀಶ್ ಅವರ ಹುಟ್ಟುಹಬ್ಬದ ದಿನ, ಅಂಬರೀಶ್ ಅವರ ಆಶೀರ್ವಾದದೊಂದಿಗೆ ಮೋಷನ್ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಿತ್ರಕ್ಕೆ ಚಾಲನೆ ನೀಡಿದ್ದೀವಿ. ಮುಂದೆ ಹೆಚ್ಚಿನ ಮಾಹಿತಿ ನೀಡುತ್ತೇವೆ ಎಂದು ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ತಿಳಿಸಿದರು. ಇದನ್ನೂ ಓದಿ: ಜಯಶ್ರೀ, ಚೈತ್ರಾ ಬೆಸ್ಟಿ ಅಂದ ರೂಪೇಶ್- ಸಾನ್ಯಾಗೆ ಶುರುವಾಯ್ತು ಹೊಟ್ಟೆಕಿಚ್ಚು..?

    ಅಪ್ಪನ ಹುಟ್ಟುಹಬ್ಬ ಹಾಗೂ ನನ್ನ ಹುಟ್ಟುಹಬ್ಬಕ್ಕೆ ಏನಾದರೂ ವಿಶೇಷತೆ ಇರುತ್ತಿತ್ತು. ಆದರೆ ನಮ್ಮ ಅಮ್ಮನ ಹುಟ್ಟುಹಬ್ಬದ ದಿನ ಈ ಮೋಷನ್ ಪೋಸ್ಟರ್ ಬಿಡುಗಡೆ ಮಾಡಬೇಕೆಂದು ನನ್ನ ಆಸೆಯಿತ್ತು. ಹಾಗಾಗಿ ಇಂದು ಬಿಡುಗಡೆ ಮಾಡಿದ್ದೀವಿ‌. ಇದೇ ಅಮ್ಮನಿಗೆ ನನ್ನ ಕಡೆಯಿಂದ ಹುಟ್ಟುಹಬ್ಬದ ಉಡುಗೊರೆ. ಮಹೇಶ್ ಕುಮಾರ್ ಮೋಷನ್ ಪೋಸ್ಟರ್ ಬಹಳ ಚೆನ್ನಾಗಿ ಮಾಡಿದ್ದಾರೆ. ಚಿತ್ರವನ್ನು  ಅಷ್ಟೇ ಚೆನ್ನಾಗಿ ಮಾಡುತ್ತಾರೆ ಎಂಬ ಭರವಸೆಯಿದೆ ಎಂದರು ನಾಯಕ‌ ಅಭಿಷೇಕ್ ಅಂಬರೀಶ್.

    Live Tv
    [brid partner=56869869 player=32851 video=960834 autoplay=true]

  • ಸುಮಲತಾ ಹುಟ್ಟು ಹಬ್ಬಕ್ಕೆ ಅಭಿಷೇಕ್ ಅಂಬರೀಶ್ ನಟನೆಯ ಹೊಸ ಸಿನಿಮಾದ ಪೋಸ್ಟರ್ ರಿಲೀಸ್

    ಸುಮಲತಾ ಹುಟ್ಟು ಹಬ್ಬಕ್ಕೆ ಅಭಿಷೇಕ್ ಅಂಬರೀಶ್ ನಟನೆಯ ಹೊಸ ಸಿನಿಮಾದ ಪೋಸ್ಟರ್ ರಿಲೀಸ್

    ಟಿ, ಸಂಸದೆ ಸುಮಲತಾ ಅಂಬರೀಶ್ ಅವರು ಇಂದು ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಇವರ ಹುಟ್ಟು ಹಬ್ಬಕ್ಕಾಗಿ ನಿರ್ದೇಶಕ ಮಹೇಶ್ ಕುಮಾರ್ ತಮ್ಮ ಸಿನಿಮಾದ ಹೊಸ ಪೋಸ್ಟರ್ ರಿಲೀಸ್ ಮಾಡಿದ್ದು, ಈ ಸಿನಿಮಾದಲ್ಲಿ ಅಭಿಷೇಕ್ ಅಂಬರೀಶ್ ನಾಯಕರಾಗಿ ನಟಿಸುತ್ತಿದ್ದಾರೆ. ಪೋಸ್ಟರ್ ನಲ್ಲಿ ಖಡಕ್ ಲುಕ್ ನಲ್ಲಿ ಅಭಿಷೇಕ್ ಕಂಡಿದ್ದಾರೆ.

    ಅಂಬರೀಶ್ ಅವರ ಹುಟ್ಟು ಹಬ್ಬದಂದು ಘೋಷಣೆಯಾಗಿದ್ದ ಅಭಿಷೇಕ್ ಅಂಬರೀಶ್ ಅವರ ಈ ಸಿನಿಮಾದ ಮುಹೂರ್ತ ಇಂದು ಅಂಬರೀಶ್ ಅವರ ಸಮಾಧಿ ಹತ್ತಿರ ನೆರವೇರಿತು. ಇವತ್ತು ಸುಮಲತಾ ಅಂಬರೀಶ್ ಅವರ ಹುಟ್ಟು ಹಬ್ಬವಾಗಿದ್ದರಿಂದ ಈ ಸಂದರ್ಭವನ್ನು ಸಿನಿಮಾ ತಂಡ ಬಳಸಿಕೊಂಡು, ಮೋಷನ್ ಪೋಸ್ಟರ್ ರಿಲೀಸ್ ಮತ್ತು ನಿರ್ಮಾಪಕರ ಹೆಸರು ಘೋಷಣೆ ಮಾಡಲಾಯಿತು. ಇದನ್ನೂ ಓದಿ:ಅವಳು ನನ್ನನ್ನ ಯೂಸ್ ಮಾಡೋಕೆ ಟಿಶ್ಯೂ ಪೇಪರ್ ಅಲ್ಲ ಎನ್ನುವ ಮಾತಿಗೆ ಗಳಗಳನೆ ಅತ್ತ ಸಾನ್ಯ

    ಈ ಹೊಸ ಸಿನಿಮಾವನ್ನು ಅಯೋಗ್ಯ ಚಿತ್ರಖ್ಯಾತಿಯ ಮಹೇಶ್ ಕುಮಾರ್ ನಿರ್ದೇಶನ ಮಾಡುತ್ತಿದ್ದು, ಭಾರತೀಯ ಸಿನಿಮಾ ರಂಗದ ಹೆಮ್ಮೆಯ ಸಂಸ್ಥೆಯು ರಾಕ್ ಲೈನ್ ಪ್ರೊಡಕ್ಷನ್ ಈ ಚಿತ್ರವನ್ನು ತಯಾರು ಮಾಡಲಿದೆ. ಈ ಚಿತ್ರಕ್ಕೆ ರಾಕ್ ಲೈನ್ ವೆಂಕಟೇಶ್ ನಿರ್ಮಾಪಕರು. ಈ ವರ್ಷ ಈಗಾಗಲೇ ಎರಡು ಸಿನಿಮಾಗಳನ್ನು ಘೋಷಣೆ ಮಾಡಿರುವ ರಾಕ್ ಲೈನ್ ಸಂಸ್ಥೆ, ಸುಮಲತಾ ಅವರ ಹುಟ್ಟು ಹಬ್ಬಕ್ಕಾಗಿ ಅವರ ಪುತ್ರ ಅಭಿಷೇಕ್ ಅವರ ಹೊಸ ಸಿನಿಮಾವನ್ನೂ ತಯಾರು ಮಾಡುತ್ತಿರುವುದಾಗಿ ತಿಳಿಸಿದೆ.

    ದುನಿಯಾ ಸೂರಿ ನಿರ್ದೇಶನದ ‘ಬ್ಯಾಡ್ ಮ್ಯಾನರ್ಸ್’ ಸಿನಿಮಾದ ನಂತರ ಅಭಿಷೇಕ್ ಈ ಚಿತ್ರಕ್ಕೆ ಸೈನ್ ಮಾಡಿದ್ದು, ಪಿರಿಯಡ್ ಡ್ರಾಮಾ ಕಥೆಯಲ್ಲಿ ಯಂಗ್ ರೆಬೆಲ್ ಕಾಣಿಸಿಕೊಳ್ಳಲಿದ್ದಾರೆ. ಸಿನಿಮಾಗೆ ಇನ್ನೂ ಶೀರ್ಷಿಕೆ ಇಟ್ಟಿಲ್ಲ. ಸದ್ಯಕ್ಕೆ  ‘AA04’ ಎಂದು ಪೋಸ್ಟರ್ ರಿಲೀಸ್ ಮಾಡಲಾಗಿದೆ. ಈ ಚಿತ್ರದಲ್ಲಿ ಅಭಿಷೇಕ್ ಹೋರಾಟಗಾರನಾಗಿ ಕಾಣಿಸಿಕೊಳ್ಳಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಜ್ಯೂನಿಯರ್ ‘ರೆಬಲ್ ಸ್ಟಾರ್’ ಅಭಿಷೇಕ್ ಚಿತ್ರಕ್ಕೆ ರಾಕ್ ಲೈನ್ ವೆಂಕಟೇಶ್ ನಿರ್ಮಾಪಕ

    ಜ್ಯೂನಿಯರ್ ‘ರೆಬಲ್ ಸ್ಟಾರ್’ ಅಭಿಷೇಕ್ ಚಿತ್ರಕ್ಕೆ ರಾಕ್ ಲೈನ್ ವೆಂಕಟೇಶ್ ನಿರ್ಮಾಪಕ

    ನ್ನಡದ ಖ್ಯಾತ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಸಾಲು ಸಾಲು ಚಿತ್ರಗಳನ್ನು ನಿರ್ಮಾಣ ಮಾಡುತ್ತಿದ್ದಾರೆ.  ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಶಿವರಾಜ್ ಕುಮಾರ್ ನಟನೆಯ ಯೋಗರಾಜ್ ಭಟ್ ನಿರ್ದೇಶನದ ಚಿತ್ರವನ್ನು ನಿರ್ಮಾಣ ಮಾಡುವುದಾಗಿ ಘೋಷಿಸಿದ್ದಾರೆ. ಆ ಸಿನಿಮಾ ಮುಹೂರ್ತ ಕೂಡ ಕಂಡಿದೆ. ಇದೀಗ ಮತ್ತೊಂದು ಸಿನಿಮಾ ಮಾಡುವ ಸುದ್ದಿ ಗಾಂಧಿನಗರದ ಗಲ್ಲಿಗಳಲ್ಲಿ ಕೇಳಿ ಬರುತ್ತಿದೆ. ಈ ಸಿನಿಮಾವನ್ನು ಮಹೇಶ್ ಕುಮಾರ್ ನಿರ್ದೇಶನ ಮಾಡುತ್ತಿದ್ದಾರೆ.

    ಅಂಬರೀಶ್ ಅವರ ಹುಟ್ಟು ಹಬ್ಬದ ದಿನದಂದು ಅಭಿಷೇಕ್ ಅಂಬರೀಶ್ ಅವರಿಗಾಗಿ ಸಿನಿಮಾವೊಂದನ್ನು ಮಾಡಲಿದ್ದೇನೆ ಎಂದು ಮಹೇಶ್ ಕುಮಾರ್ ಹೇಳಿಕೊಂಡಿದ್ದರು. ಸಿನಿಮಾದ ಫಸ್ಟ್ ಲುಕ್ ಕೂಡ ರಿಲೀಸ್ ಮಾಡಿದ್ದರು. ಅಂದು ಸಿನಿಮಾದ ನಿರ್ಮಾಪಕರು ಯಾರು ಎನ್ನುವುದನ್ನು ಬಹಿರಂಗ ಪಡಿಸಿರಲಿಲ್ಲ. ಆ ಸಿನಿಮಾವನ್ನು ರಾಕ್ ಲೈನ್ ವೆಂಕಟೇಶ್ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಕುರಿತು ಮುಂದಿನ ತಿಂಗಳಲ್ಲಿ ಅಧಿಕೃತ ಮಾಹಿತಿ ಹೊರ ಬೀಳಲಿದೆಯಂತೆ. ಇದನ್ನೂ ಓದಿ:ರಮ್ಯಾಕೃಷ್ಣ- ನಿರ್ದೇಶಕ ಕೃಷ್ಣವಂಶಿ ಡಿವೋರ್ಸ್? ಅಸಲಿ ವಿಚಾರ ಬಿಚ್ಚಿಟ್ಟ ಕೃಷ್ಣವಂಶಿ

    ಆಗಸ್ಟ್  27ರಂದು ಸುಮಲತಾ ಅಂಬರೀಶ್ ಅವರ ಹುಟ್ಟು ಹಬ್ಬ. ಅಂದು ಸಿನಿಮಾದ ಶೀರ್ಷಿಕೆಯ ಜೊತೆಗೆ ನಿರ್ಮಾಪಕರ ಹೆಸರು ಕೂಡ ಬಹಿರಂಗವಾಗಲಿದೆ ಎನ್ನುವುದು ಸದ್ಯಕ್ಕೆ ಸಿಕ್ಕಿರುವ ಮಾಹಿತಿ. ಈಗಾಗಲೇ ಪಬ್ಲಿಕ್ ಟಿವಿ ಡಿಜಿಟಲ್ ನಲ್ಲಿ ಈ ಸಿನಿಮಾದ ಕುರಿತು ವಿಸ್ತ್ರತ ವರದಿಯೇ ಪ್ರಕಟವಾಗಿದ್ದು, ಇದೊಂದು ಕ್ರಾಂತಿಕಾರಿಯೊಬ್ಬನ ಸಿನಿಮಾವಾಗಿದ್ದು, ದಂಗೆಯ ಹಿನ್ನೆಲೆಯಾಗಿಟ್ಟುಕೊಂಡು ಸಿನಿಮಾ ಮಾಡಲಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ರಾಕ್ ಲೈನ್ ವೆಂಕಟೇಶ್ ನಿರ್ಮಾಣದ ಚಿತ್ರಕ್ಕೆ ಯೋಗರಾಜ್ ಭಟ್ ನಿರ್ದೇಶಕ

    ರಾಕ್ ಲೈನ್ ವೆಂಕಟೇಶ್ ನಿರ್ಮಾಣದ ಚಿತ್ರಕ್ಕೆ ಯೋಗರಾಜ್ ಭಟ್ ನಿರ್ದೇಶಕ

    ನ್ನಡ ಚಿತ್ರರಂಗಕ್ಕೆ ಸಾಕಷ್ಟು ಹಿಟ್ ಚಿತ್ರಗಳನ್ನು ನೀಡಿರುವ ರಾಕ್ ಲೈನ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ರಾಕ್ ಲೈನ್ ವೆಂಕಟೇಶ್ ಅವರು ನಿರ್ಮಿಸುತ್ತಿರುವ “ಪ್ರೊಡಕ್ಷನ್ ನಂ 47” ಚಿತ್ರದ ಮುಹೂರ್ತ ಸಮಾರಂಭ ರಾಕ್ ಲೈನ್ ಸ್ಟುಡಿಯೋದಲ್ಲಿ ನಡೆಯಿತು. ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಹಾಗೂ ಇಂಡಿಯನ್ ಮೈಕಲ್ ಜಾಕ್ಸನ್ ಪ್ರಭುದೇವ ಅವರು ನಟಿಸುತ್ತಿರುವ ಈ ಚಿತ್ರವನ್ನು ಖ್ಯಾತ ನಿರ್ದೇಶಕ ಯೋಗರಾಜ್ ಭಟ್ ನಿರ್ದೇಶಿಸುತ್ತಿದ್ದಾರೆ.

    ಈ ಚಿತ್ರದ ಮೊದಲ ಸನ್ನಿವೇಶಕ್ಕೆ ಗೀತಾ ಶಿವರಾಜಕುಮಾರ್ ಅವರು ಆರಂಭಫಲಕ ತೋರಿದರು. ಪುಷ್ಪಕುಮಾರಿ ವೆಂಕಟೇಶ್ ಕ್ಯಾಮೆರಾ ಚಾಲನೆ ಮಾಡಿದರು. ರಾಕ್ ಲೈನ್ ವೆಂಕಟೇಶ್ ಅವರ ಸಂಸ್ಥೆ ಅಂದರೆ ನನಗೆ ನಮ್ಮ ಮನೆಯ ಸಂಸ್ಥೆ ಇದ್ದ ಹಾಗೆ. ನನ್ನ ಅವರ ಸ್ನೇಹ ಮೂವತ್ತು ವರ್ಷಕ್ಕೂ ಹಳೆಯದು. ಸ್ನೇಹಿತರಾಗಿ ಬಂದು ನಿರ್ಮಾಪಕರಾದರು. ಇಂತಹ ನಿರ್ಮಾಣ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವುದು ಹಾಗೂ  ಯೋಗರಾಜ್ ಭಟ್ ಅವರ ನಿರ್ದೇಶನದಲ್ಲಿ ಅಭಿನಯಿಸುತ್ತಿರುವುದು ಸಂತಸವಾಗಿದೆ. ಇನ್ನು  ಭಾರತದ ಖ್ಯಾತ ನೃತ್ಯಗಾರ, ನಟ ಪ್ರಭುದೇವ್ ಅವರ ಜೊತೆ ಅಭಿನಯಿಸುತ್ತಿರುವುದು ಖುಷಿ ತಂದಿದೆ. ಜುಲೈ ನಲ್ಲಿ ಚಿತ್ರೀಕರಣ ಆರಂಭವಾಗಲಿದೆ. ಯೋಗರಾಜ್ ಭಟ್ ಉತ್ತಮ ಕಥೆ ಸಿದ್ದಮಾಡಿಕೊಂಡಿದ್ದಾರೆ.‌ ಫನ್, ಎಮೋಷನ್ ಹಾಗೂ ಆಕ್ಷನ್ ಡ್ರಾಮ ಎಲ್ಲಾ ರೀತಿಯ ಅಂಶಗಳಿರುವ ಕಥೆಯಿದು. ಎಲ್ಲರ ಮನಸ್ಸಿಗೂ ಚಿತ್ರ ಹತ್ತಿರವಾಗುತ್ತದೆ ಎಂದು ಶಿವರಾಜಕುಮಾರ್ ತಿಳಿಸಿದರು. ಇದನ್ನೂ ಓದಿ:ಆರೋಗ್ಯದಲ್ಲಿ ಚೇತರಿಕೆ, ನಟ ದಿಗಂತ್ ಆಸ್ಪತ್ರೆಯಿಂದ ಡಿಸ್ಚಾರ್ಜ್

    ಇವತ್ತು ನನಗೆ ತುಂಬಾ ಸಂತೋಷವಾಗಿದೆ.‌ ಸಿನಿಮಾ ನಿರ್ಮಾಣ ಮಾಡಿ ತುಂಬಾ ವರ್ಷವಾಗಿತ್ತು. ಕೊರೋನ ನಂತರ ನಮ್ಮ‌ ಸಂಸ್ಥೆಯ ಮೊದಲ ಚಿತ್ರವಿದು. ಅದರಲ್ಲೂ ಶಿವಣ್ಣ ಅವರ ಜೊತೆ ಮಾಡುತ್ತಿರುವುದು ಖುಷಿಯ ವಿಚಾರ. ಅವರ ಚಿತ್ರ ಮಾಡಲು ಒಳ್ಳೆಯ ಕಥೆ ಬೇಕಿತ್ತು. ಯೋಗರಾಜ್ ಭಟ್ ಇವತ್ತಿನ ಜನರಿಗೆ ಬೇಕಾದಂತಹ ಉತ್ತಮ ಕಥೆ ಆಯ್ಕೆ ಮಾಡಿಕೊಂಡಿದ್ದಾರೆ.  ಹೊಟ್ಟೆ ತುಂಬಾ ನಕ್ಕುನಗಿಸುವ ಚಿತ್ರವಿದು. ಕೊನೆಗೆ ಉತ್ತಮ ಸಂದೇಶ ನೀಡುವ ಚಿತ್ರವೂ ಹೌದು. ಇಂತಹ ಒಳ್ಳೆಯ ಕಥೆ ನನಗೆ ಸಿಕ್ಕಿರುವುದು ಸಂತೋಷ. ಪ್ರಭುದೇವ ನಮ್ಮ ಚಿತ್ರದಲ್ಲಿ ನಟಿಸುತ್ತಿರುವುದು‌ ಕೂಡ ಸಂತಸ ತಂದಿದೆ. ಎಲ್ಲಾ ಕೂಡಿ ಬರಬೇಕು ಅಂತರಲ್ಲಾ ಹಾಗೆ. ಯೋಗರಾಜ್ ಭಟ್ ಅವರ ನಿರ್ದೇಶನ, ವಿ.ಹರಿಕೃಷ್ಣ ಸಂಗೀತ, ಸಂತೋಷ್ ರೈ ಪಾತಾಜೆ ಛಾಯಾಗ್ರಹಣ ಹಾಗೂ ಶಿವರಾಜಕುಮಾರ್ – ಪ್ರಭುದೇವ ಅವರ ನಟನೆ ಮತ್ತು ನೃತ್ಯ ಇಷ್ಟೆಲ್ಲ ಉತ್ತಮ ಅಂಶಗಳಿರುವ ಈ ಚಿತ್ರ ಜನರ ಮೆಚ್ಚುಗೆಗೆ ಪಾತ್ರವಾಗುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ತಿಳಿಸಿದ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಅವರು,  ನಾನು ಒಬ್ಬ ಪ್ರೇಕ್ಷಕನಾಗಿ ಈ ಚಿತ್ರಕ್ಕಾಗಿ ಕಾಯುತ್ತಿರುವೆ ಎಂದರು.

    ನಾನು, ನಿರ್ಮಾಪಕರಿಗೆ ಕಥೆ ಹೇಳುವಾಗ, ನಾವು ಯಾವಾಗ ನೀರು ಕುಡಿಯುತ್ತೇವೊ, ಆಗೆಲ್ಲಾ ಈ ಚಿತ್ರ ನೆನಪಿಗೆ ಬರಬೇಕು ಅಂತಹ ಕಥೆ ಇದು ಎಂದು ಹೇಳಿದ್ದೆ. ಆ ನಂತರ ಇನ್ನೊಂದು ಕಥೆ ಕೂಡ ಮಾಡಿಕೊಂಡಿದ್ದೆ‌. ಆದರೆ ರಾಕ್ ಲೈನ್ ಅವರು , ಅವತ್ತು ನೀರಿನ ಕಥೆ ಹೇಳಿದ್ದಿರಲ್ಲಾ ಅದೇ ಕಥೆ ಸಿನಿಮಾ ಮಾಡಿ ಎಂದರು.  ನಾನು ಮೊದಲಿನಿಂದಲೂ ಶಿವಣ್ಣನ ಅಭಿಮಾನಿ. ಆನವಟ್ಟಿಯಲ್ಲಿ ರಥಸಪ್ತಮಿ ಚಿತ್ರವನ್ನು  ಜನಜಂಗುಳಿಯಲ್ಲಿ ನೋಡಿದ್ದು ಈಗಲೂ ನೆನಪಿದೆ‌. ಶಿವಣ್ಣ ಅವರಿಗೆ ಎರಡು ವರ್ಷಗಳಿಂದ ಕಥೆ ಹೇಳುತ್ತಾ ಬಂದಿದ್ದೀನಿ.  ಬರೆಯುವುದು ಬದಲಾವಣೆ ಮಾಡುವುದು ಹೀಗೆ. ಎರಡು ವರ್ಷದ ನಂತರ ಗಟ್ಟಿ ಕಥೆ ಸಿದ್ದ ಮಾಡಿಕೊಂಡಿದ್ದೇವೆ. ಫನ್, ಎಮೋಷನ್ ಜೊತೆಗೆ ತುಂಬಾ ಬ್ರಿಲಿಯೆಂಟ್ ಆದ ಆಕ್ಷನ್ ಡ್ರಾಮ ಎನ್ನಬಹುದು. ನಾನು ಈ ಚಿತ್ರದಲ್ಲಿ ತಂತ್ರಜ್ಞನಿಗಿಂತ ಹೆಚ್ಚಾಗಿ ಪ್ರೇಕ್ಷಕನಾಗಿ ಕೆಲಸ ಮಾಡುತ್ತಿದ್ದೀನಿ. ನನ್ನ ಹೆಮ್ಮೆಯ ಕ್ಷಣ ಇದು. ಶಿವರಾಜಕುಮಾರ್ ಹಾಗೂ ಪ್ರಭುದೇವ ಇಬ್ಬರೂ ಉತ್ತಮ ನಟರು. ಅವರಿಬ್ಬರು ನಮ್ಮ ಚಿತ್ರಕ್ಕೆ ನೀಡುತ್ತಿರುವ ಪ್ರೋತ್ಸಾಹ ಅಪಾರ. ಇಂತಹ ದಿಗ್ಗಜರ ಜೊತೆ ಕೆಲಸ ಮಾಡಿ ನಾನು ಏನಾದರೂ ಕಲಿಯುತ್ತೀನಿ ಎಂದರು ನಿರ್ದೇಶಕ ಯೋಗರಾಜ್ ಭಟ್.

    Live Tv

  • ಶಿವರಾಜ್ ಕುಮಾರ್ ಹೊಸ ಚಿತ್ರಕ್ಕೆ ಪತ್ನಿ ಗೀತಾ ಶಿವರಾಜ್ ಕುಮಾರ್ ಕ್ಲ್ಯಾಪ್

    ಶಿವರಾಜ್ ಕುಮಾರ್ ಹೊಸ ಚಿತ್ರಕ್ಕೆ ಪತ್ನಿ ಗೀತಾ ಶಿವರಾಜ್ ಕುಮಾರ್ ಕ್ಲ್ಯಾಪ್

    ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತು ಪ್ರಭುದೇವ ಕಾಂಬಿನೇಷನ್ ನ ಚಿತ್ರದ ಮುಹೂರ್ತ ಇಂದು ಬೆಂಗಳೂರಿನ ರಾಕ್ ಲೈನ್ ವೆಂಕಟೇಶ್ ಸ್ಟುಡಿಯೋದಲ್ಲಿರುವ ದೇವಸ್ಥಾನದಲ್ಲಿ ನೆರವೇರಿತು. ಈ ಸಮಾರಂಭದಲ್ಲಿ ಮೊದಲ ದೃಶ್ಯಕ್ಕೆ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಕ್ಲ್ಯಾಪ್ ಮಾಡಿ ಚಿತ್ರಕ್ಕೆ ಚಾಲನೆ ನೀಡಿದರು. ಶಿವರಾಜ್ ಕುಮಾರ್ ಮತ್ತು ಪ್ರಭುದೇವ ಕಾಂಬಿನೇಷನ್ ನ ಮೊದಲ ಸಿನಿಮಾ ಇದಾಗಿದ್ದು, ಈ ಚಿತ್ರಕ್ಕೆ ಇನ್ನೂ ಹೆಸರಿಟ್ಟಿಲ್ಲ.

    ಯೋಗರಾಜ್ ಭಟ್ ನಿರ್ದೇಶನದಲ್ಲಿ ಮೂಡಿ ಬರಲಿರುವ ಈ ಸಿನಿಮಾದಲ್ಲಿ ಹೊಸ ಬಗೆಯ ಕಥೆಯನ್ನು ಹೇಳುವುದಕ್ಕೆ ಹೊರಟಿದ್ದಾರಂತೆ ನಿರ್ದೇಶಕರು. ರಾಕ್ ಲೈನ್ ಪ್ರೊಡಕ್ಷನ್ ನಲ್ಲಿ ನಿರ್ಮಾಣ ಆಗುತ್ತಿರುವ ಈ ಸಿನಿಮಾಗೆ ಸದ್ಯಕ್ಕೆ ಪ್ರೊಡಕ್ಷನ್ ನಂ 27 ಎಂದು ಹೆಸರಿಡಲಾಗಿದೆ. ಇದನ್ನೂ ಓದಿ: ಗ್ರೀನ್ ಇಂಡಿಯಾ ಅಭಿಯಾನಕ್ಕೆ ಸಲ್ಮಾನ್ ಖಾನ್‌ ಸಾಥ್: ಗಿಡ ನೆಡುವಂತೆ ಫ್ಯಾನ್ಸ್‌ಗೆ ಸಲ್ಲು ಮನವಿ

    ಮಹೂರ್ತ ಸಮಾರಂಭಕ್ಕೆ ಶಿವರಾಜ್ ಕುಮಾರ್, ಗೀತಾ ಶಿವರಾಜ್ ಕುಮಾರ್, ರಾಕ್ ಲೈನ್ ವೆಂಕಟೇಶ್ ಸೇರಿದಂತೆ ಹಲವರು ಹಾಜರಿದ್ದರು. ರಾಕ್ ಲೈನ್ ಸ್ಟುಡಿಯೋದಲ್ಲಿರುವ ದೇವಸ್ಥಾನದಲ್ಲೇ ಸಿನಿಮಾದ ಮುಹೂರ್ತ ನಡೆಯಿತು. ಮೊದಲ ಬಾರಿಗೆ ಶಿವರಾಜ್ ಕುಮಾರ್ ಜೊತೆ ಪ್ರಭುದೇವ ನಡೆಸುತ್ತಿದ್ದರೂ, ಇಂದು ಅವರು ಮುಹೂರ್ತಕ್ಕೆ ಹಾಜರಾಗಿರಲಿಲ್ಲ. ಬೇರೊಂದು ಕಾರ್ಯದಲ್ಲಿ ಅವರು ಬ್ಯುಸಿ ಆಗಿರುವುದರಿಂದ ವಿಡಿಯೋ ಸಂದೇಶವೊಂದನ್ನು ಅವರು ಕಳುಹಿಸಿದ್ದರು.

    ಸಿನಿಮಾ ಮಹೂರ್ತಕ್ಕೆ ಹಾಜರಾಗಲು ಆಗುತ್ತಿಲ್ಲ. ಹಾಗಾಗಿ ಕ್ಷಮೆ ಕೇಳುತ್ತೇನೆ. ನಾನೇನಾದರೂ ತಪ್ಪು ಮಾಡಿದರೆ ಎಕ್ಸ್‍ ಕ್ಯೂಸ್ ಮಾಡಿಕೊಳ್ಳಿ. ನಾನು ಪ್ರಬುದ್ಧ ನಟನಲ್ಲ. ನಾನು ಅಷ್ಟು ಮೆಚ್ಯುರ್ ಆಗಿರೋನಲ್ಲ ಎಂದು ಪ್ರಭುದೇವ್ ವಿಡಿಯೋದಲ್ಲಿ ಹೇಳಿದ್ದಾರೆ. ಶಿವರಾಜ್ ಕುಮಾರ್ ಅವರ ಜೊತೆ ಕೆಲಸ ಮಾಡಬೇಕು ಎನ್ನುವುದು ನನ್ನ ಆಸೆ ಆಗಿತ್ತು. ಅದೀಗ ನೆರವೇರುತ್ತಿದೆ ಎಂದೂ ಅವರು ವಿಡಿಯೋದಲ್ಲಿ ಹೇಳಿದ್ದಾರೆ.

    Live Tv

  • ಶಿವರಾಜ್ ಕುಮಾರ್, ಪ್ರಭುದೇವ್ ಕಾಂಬಿನೇಷನ್ ಚಿತ್ರಕ್ಕೆ ಇಂದು ಮುಹೂರ್ತ

    ಶಿವರಾಜ್ ಕುಮಾರ್, ಪ್ರಭುದೇವ್ ಕಾಂಬಿನೇಷನ್ ಚಿತ್ರಕ್ಕೆ ಇಂದು ಮುಹೂರ್ತ

    ದೇ ಮೊದಲ ಬಾರಿಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತು ಪ್ರಭುದೇವ ತೆರೆ ಹಂಚಿಕೊಳ್ಳುತ್ತಿದ್ದು, ಈ ಸಿನಿಮಾದ ಮುಹೂರ್ತ ಇಂದು ಬೆಂಗಳೂರಿನಲ್ಲಿ ನಡೆಯಿತು. ಯೋಗರಾಜ್ ಭಟ್ ನಿರ್ದೇಶನದಲ್ಲಿ ಮೂಡಿ ಬರಲಿರುವ ಈ ಸಿನಿಮಾದಲ್ಲಿ ಹೊಸ ಬಗೆಯ ಕಥೆಯನ್ನು ಹೇಳುವುದಕ್ಕೆ ಹೊರಟಿದ್ದಾರಂತೆ ನಿರ್ದೇಶಕರು. ರಾಕ್ ಲೈನ್ ಪ್ರೊಡಕ್ಷನ್ ನಲ್ಲಿ ನಿರ್ಮಾಣ ಆಗುತ್ತಿರುವ ಈ ಸಿನಿಮಾಗೆ ಸದ್ಯಕ್ಕೆ ಪ್ರೊಡಕ್ಷನ್ ನಂ 27 ಎಂದು ಹೆಸರಿಡಲಾಗಿದೆ.

    ಮಹೂರ್ತ ಸಮಾರಂಭಕ್ಕೆ ಶಿವರಾಜ್ ಕುಮಾರ್, ಗೀತಾ ಶಿವರಾಜ್ ಕುಮಾರ್, ರಾಕ್ ಲೈನ್ ವೆಂಕಟೇಶ್ ಸೇರಿದಂತೆ ಹಲವರು ಹಾಜರಿದ್ದರು. ರಾಕ್ ಲೈನ್ ಸ್ಟುಡಿಯೋದಲ್ಲಿರುವ ದೇವಸ್ಥಾನದಲ್ಲೇ ಸಿನಿಮಾದ ಮುಹೂರ್ತ ನಡೆಯಿತು. ಮೊದಲ ಬಾರಿಗೆ ಶಿವರಾಜ್ ಕುಮಾರ್ ಜೊತೆ ಪ್ರಭುದೇವ ನಡೆಸುತ್ತಿದ್ದರೂ, ಇಂದು ಅವರು ಮುಹೂರ್ತಕ್ಕೆ ಹಾಜರಾಗಿರಲಿಲ್ಲ. ಬೇರೊಂದು ಕಾರ್ಯದಲ್ಲಿ ಅವರು ಬ್ಯುಸಿ ಆಗಿರುವುದರಿಂದ ವಿಡಿಯೋ ಸಂದೇಶವೊಂದನ್ನು ಅವರು ಕಳುಹಿಸಿದ್ದರು. ಇದನ್ನೂ ಓದಿ:ಪತಿ ದಿಗಂತ್ ನೆನೆದು ಭಾವುಕರಾದ ನಟಿ ಐಂದ್ರಿತಾ ರೇ : ಈಗ ಹೇಗಿದ್ದಾರೆ ನಟ ದಿಗಂತ್?

    ಸಿನಿಮಾ ಮಹೂರ್ತಕ್ಕೆ ಹಾಜರಾಗಲು ಆಗುತ್ತಿಲ್ಲ. ಹಾಗಾಗಿ ಕ್ಷಮೆ ಕೇಳುತ್ತೇನೆ. ನಾನೇನಾದರೂ ತಪ್ಪು ಮಾಡಿದರೆ ಎಕ್ಸ್‍ ಕ್ಯೂಸ್ ಮಾಡಿಕೊಳ್ಳಿ. ನಾನು ಪ್ರಬುದ್ಧ ನಟನಲ್ಲ. ನಾನು ಅಷ್ಟು ಮೆಚ್ಯುರ್ ಆಗಿರೋನಲ್ಲ ಎಂದು ಪ್ರಭುದೇವ್ ವಿಡಿಯೋದಲ್ಲಿ ಹೇಳಿದ್ದಾರೆ. ಶಿವರಾಜ್ ಕುಮಾರ್ ಅವರ ಜೊತೆ ಕೆಲಸ ಮಾಡಬೇಕು ಎನ್ನುವುದು ನನ್ನ ಆಸೆ ಆಗಿತ್ತು. ಅದೀಗ ನೆರವೇರುತ್ತಿದೆ ಎಂದೂ ಅವರು ವಿಡಿಯೋದಲ್ಲಿ ಹೇಳಿದ್ದಾರೆ.

    Live Tv

  • ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ ಅಖಾಡಕ್ಕೆ ರಾಕ್ ಲೈನ್ ವೆಂಕಟೇಶ್ : ಉಲ್ಟಾ ಆದ ಲೆಕ್ಕಾಚಾರ

    ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ ಅಖಾಡಕ್ಕೆ ರಾಕ್ ಲೈನ್ ವೆಂಕಟೇಶ್ : ಉಲ್ಟಾ ಆದ ಲೆಕ್ಕಾಚಾರ

    ಮೇ 28ರಂದು ನಡೆಯಲಿರುವ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ ರಂಗೇರಿದೆ. ಅಧ್ಯಕ್ಷ ಸ್ಥಾನಕ್ಕಾಗಿ ನಿರ್ಮಾಪಕರಾದ ಭಾ.ಮಾ ಹರೀಶ್ ಮತ್ತು ಸಾ.ರಾ. ಗೋವಿಂದ್ ನಡುವೆ ಪೈಪೋಟಿ ನಡೆದಿತ್ತು. ಅಚ್ಚರಿ ಎನ್ನುವಂತೆ ಮೇ 18 ರಂದು ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸುವ ಮೂಲಕ ಖ್ಯಾತ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಕುತೂಹಲ ಮೂಡಿಸಿದ್ದರು. ಇದನ್ನೂ ಓದಿ : ‘ಧಾಕಡ್’ ಸೋಲಿಗೆ ಕಂಗೆಟ್ಟ ಕಂಗನಾ ರಣಾವತ್ : ವೀಕೆಂಡ್ ನಲ್ಲೂ ವೀಕ್ ಕಲೆಕ್ಷನ್

    ಅಧ್ಯಕ್ಷ ಸ್ಥಾನಕ್ಕೆ ರಾಕ್ ಲೈನ್ ವೆಂಕಟೇಶ್ ಸ್ಪರ್ಧೆ ಮಾಡಲಿದ್ದಾರೆ ಎಂದು ಯಾರೂ ಊಹಿಸಿರಲಿಲ್ಲ. ಅಲ್ಲದೇ, ಇದೊಂದು ಅನಿರೀಕ್ಷಿತ ಬೆಳವಣಿಗೆ ಆದ ಕಾರಣಕ್ಕಾಗಿ ಕೆಲ ಗಂಟೆಗಳ ಕಾಲ, ವಾಣಿಜ್ಯ ಮಂಡಳಿಯಲ್ಲಿ ಏನಾಗುತ್ತಿದೆ ಎನ್ನುವುದೇ ಗೊಂದಲವಾಗಿತ್ತು. ಅಲ್ಲದೇ, ನೇರವಾಗಿ ರಾಕ್ ಲೈನ್ ವೆಂಕಟೇಶ್ ಅವರು ಅಧ್ಯಕ್ಷ ಖುರ್ಚಿಯ ಮೇಲೆಯೇ ಕಣ್ಣು ಇಟ್ಟಿದ್ದಾರೆ ಎನ್ನುವ ಕಾರಣಕ್ಕಾಗಿ ಇತರ ಸ್ಪರ್ಧೆಗಳಲ್ಲಿ ಆತಂಕ ಮೂಡಿತ್ತು. ಆನಂತರ ಅದೆಲ್ಲವೂ ತಿಳಿ ಆಯಿತು.  ಇದನ್ನೂ ಓದಿ : ಶೀಘ್ರದಲ್ಲೇ ಶಿವರಾಜ್ ಕುಮಾರ್ ಮತ್ತು ಪ್ರಭುದೇವ ಸಿನಿಮಾ ಶುರು : ಯೋಗರಾಜ್ ಭಟ್ ನಿರ್ದೇಶಕ

    ರಾಕ್ ಲೈನ್ ವೆಂಕಟೇಶ್ ಅಧ್ಯಕ್ಷ ಸ್ಥಾನಕ್ಕೆ ಮತ್ತು ಪ್ರದರ್ಶಕರ ವಲಯದಿಂದ ಕಾರ್ಯಕಾರಿ ಮಂಡಳಿಗೆ ಆಯ್ಕೆ ಬಯಸಿ, ನಾಮಪತ್ರ ಸಲ್ಲಿಸಿದ್ದರು. ಅವರು ಪ್ರದರ್ಶಕರ ವಲಯದಿಂದ ಅವಿರೋಧವಾಗಿ ಆಯ್ಕೆಯಾದ ಕಾರಣಕ್ಕಾಗಿ ಅಧ್ಯಕ್ಷ ಸ್ಥಾನದ ನಾಮ ಪತ್ರವನ್ನು ವಾಪಸ್ಸು ಪಡೆದಿದ್ದಾರಂತೆ. ಹಾಗಾಗಿ ಅಧ್ಯಕ್ಷ ಸ್ಥಾನಕ್ಕಾಗಿ ಸಾ.ರಾ. ಗೋವಿಂದು ಮತ್ತು ಭಾ.ಮಾ ಹರೀಶ್ ನಡುವೆ ತೀವ್ರ ಪೈಪೋಟಿ ಎದುರಾಗಿದೆ.