ನೇಪ್ಯಿಡಾವ್: ಮ್ಯಾನ್ಮಾರ್‌ನ (Myanmar) ರಾಖೈನ್ ಪ್ರಾಂತ್ಯದಿಂದ ರೊಹಿಂಗ್ಯಾ (Rohingya) ವಲಸಿಗರನ್ನು ಮಲೇಷ್ಯಾಕ್ಕೆ ಹೊತ್ತೊಯ್ಯುತ್ತಿದ್ದ ಬೋಟ್ (Boat) ಸಮುದ್ರದಲ್ಲಿ ಮುಳುಗಿ 17 ಜನ ಮೃತಪಟ್ಟ ಘಟನೆ ನಡೆದಿದೆ.
ಬೋಟ್‍ನಲ್ಲಿ 50 ಕ್ಕೂ ಹೆಚ್ಚು ಜನ ಇದ್ದರು ಎನ್ನಲಾಗಿದೆ. ಹುಡುಕಾಟದ ವೇಳೆ 17 ಶವಗಳನ್ನು ಪತ್ತೆಹಚ್ಚಲಾಗಿದೆ. ಬದುಕುಳಿದವರಲ್ಲಿ ಎಂಟು ಪುರುಷರಿದ್ದಾರೆ. ದುರ್ಘಟನೆಯ ಬಗ್ಗೆ ಪೊಲೀಸರು ಹೆಚ್ಚಿನ ಮಾಹಿತಿ ಕಲೆ ಹಾಕಲು ತನಿಖೆ ನಡೆಸುತ್ತಿದ್ದಾರೆ. ಕಣ್ಮರೆಯಾದ 25 ಮಂದಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಇದನ್ನೂ ಓದಿ: ಕಾರವಾರ ನೌಕಾನೆಲೆಯಲ್ಲಿ ಬೋಟ್ ಇಂಜಿನ್‍ಗೆ ಬೆಂಕಿ – ತಪ್ಪಿದ ಅನಾಹುತ
ರಾಖೈನ್ ಪ್ರಧಾನವಾಗಿ ಬೌದ್ಧ ಮ್ಯಾನ್ಮಾರ್‍ನ ಪ್ರದೇಶವಾಗಿದ್ದು, ಸುಮಾರು 6 ಲಕ್ಷ ರೊಹಿಂಗ್ಯಾ ಮುಸ್ಲಿಮರನ್ನು ಹೊಂದಿದೆ. ಅವರನ್ನು ನೆರೆಯ ಬಾಂಗ್ಲಾದೇಶದಿಂದ ವಲಸಿಗರು ಎಂದು ವರ್ಗೀಕರಿಸಲಾಗಿದೆ. ಈ ಪ್ರದೇಶದಲ್ಲಿ ಪೌರತ್ವ ನಿರಾಕರಿಸಿರುವುದರಿಂದ ಅವರು ಸಮಸ್ಯೆಗಳನ್ನು ಎದುರಿಸುತ್ತಾರೆ.
ರೊಹಿಂಗ್ಯಾ ಜನಾಂಗ ರಾಖೈನ್‍ನಿಂದ ಬಾಂಗ್ಲಾದೇಶಕ್ಕೆ ವಲಸೆ ಹೋಗುವುದಕ್ಕೆ ತೀವ್ರವಾದ ಮಿಲಿಟರಿ ಬಿಕ್ಕಟ್ಟು ಕಾರಣವಾಗಿದೆ. ಕೊಲೆ ಹಾಗೂ ಲೈಂಗಿಕ ಹಿಂಸೆ ಸೇರಿದಂತೆ ವ್ಯಾಪಕವಾದ ದೌರ್ಜನ್ಯದಿಂದ ಅವರ ವಲಸೆ ನಿರಂತರವಾಗಿ ಮುಂದುವರೆಯುತ್ತಿದೆ. ಇದನ್ನೂ ಓದಿ: ಬೈಡನ್‌ಗೆ ಕೊಲೆ ಬೆದರಿಕೆ ಒಡ್ಡಿದ ವ್ಯಕ್ತಿಯನ್ನು ಗುಂಡಿಕ್ಕಿ ಕೊಂದ ಎಫ್‌ಬಿಐ
ಹೈದರಾಬಾದ್: ಬಿಜೆಪಿಗೆ (BJP) ತಾಕತ್ತಿದ್ದರೆ ಚೀನಾದ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ನಡೆಸುವಂತೆ ಎಐಎಂಐಎಂ (AIMIM) ಮುಖ್ಯಸ್ಥ ಹಾಗೂ ಸಂಸದ ಅಸಾದುದ್ದೀನ್ ಓವೈಸಿ (Asaduddin Owaisi) ಸವಾಲು ಹಾಕಿದ್ದಾರೆ. ಬಿಜೆಪಿ ಮುಖಂಡ ಬಂಡಿ ಸಂಜಯ್ ಕುಮಾರ್ ಅವರ ಸರ್ಜಿಕಲ್ ಸ್ಟ್ರೈಕ್ (Surgical Strike) ಹೇಳಿಕೆಗೆ ಓವೈಸಿ ಟಾಂಗ್ ಕೊಟ್ಟಿದ್ದಾರೆ.
ಸಂಗಾರೆಡ್ಡಿಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಮುಖಂಡನ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ. ತಮ್ಮದೇ ದೇಶದ ನಗರದಲ್ಲಿ ಸರ್ಜಿಕಲ್ ಸ್ಟ್ರೈಕ್ ಮಾಡುವುದಾಗಿ ಅವರು ಹೇಳುತ್ತಾರೆ. ಧೈರ್ಯವಿದ್ದರೆ ಚೀನಾದ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡಲಿ ಎಂದು ಕುಟುಕಿದ್ದಾರೆ. ಇದನ್ನೂ ಓದಿ: ಮೊಬೈಲ್ ನೀರಿಗೆ ಬಿದ್ದಿದ್ದಕ್ಕೆ ಡ್ಯಾಂ ಖಾಲಿ ಮಾಡಿಸಿದ್ದ ಅಧಿಕಾರಿಗೆ ಬಿತ್ತು 53 ಸಾವಿರ ದಂಡ!
2020ರ ಹೈದರಾಬಾದ್ (Hyderabad) ಮುನ್ಸಿಪಲ್ ಚುನಾವಣೆಯ (Municipal Election) ವೇಳೆ ಬಂಡಿ ಸಂಜಯ್ ಕುಮಾರ್ ಅವರು, ಚುನಾವಣೆಯಲ್ಲಿ ಪಾಕಿಸ್ತಾನ (Pakistan), ಅಫ್ಘಾನಿಸ್ತಾನ ಅಥವಾ ರೋಹಿಂಗ್ಯಾ (Rohingya) ಸಮುದಾಯದ ಮತದಾರರನ್ನು ಒಳಗೊಂಡಿರಬಾರದು. ಒಮ್ಮೆ ನಾವು ಗೆದ್ದರೆ ನಗರದಲ್ಲಿ ಸರ್ಜಿಕಲ್ ಸ್ಟ್ರೈಕ್ ನಡೆಸುತ್ತೇವೆ ಎಂದಿದ್ದರು. ಇದಕ್ಕೆ ಓವೈಸಿ ತಿರುಗೇಟು ನೀಡಿದ್ದಾರೆ.
ನವದೆಹಲಿ: ರೋಹಿಂಗ್ಯಾ ಮುಸ್ಲಿಮರಿಗೆ ವಸತಿ ನೀಡುತ್ತೇವೆ ಎಂದು ಹೇಳಿದ್ದ ಕೇಂದ್ರ ಸರ್ಕಾರ ಈಗ ಯಾವುದೇ ಫ್ಲ್ಯಾಟ್ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
ದೆಹಲಿಯಲ್ಲಿರುವ ರೋಹಿಂಗ್ಯಾ ಮುಸ್ಲಿಮರಿಗೆ ಇಡಬ್ಲ್ಯುಎಸ್ ಫ್ಲಾಟ್‌ಗಳನ್ನು ನೀಡಲು ಯಾವುದೇ ನಿರ್ದೇಶನ ನೀಡಿಲ್ಲ ಎಂದು ಕೇಂದ್ರ ಗೃಹ ಸಚಿವಾಲಯ ಹೇಳಿದೆ. ಅಷ್ಟೇ ಅಲ್ಲದೇ ಅಕ್ರಮ ವಿದೇಶಿಗರು ಅವರು ನೆಲೆಸಿರುವ ಸ್ಥಳದಲ್ಲಿಯೇ ಇರುವುದನ್ನು ಖಚಿತಪಡಿಸಿಕೊಳ್ಳುವಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸರ್ಕಾರಕ್ಕೆ ಸೂಚಿಸಿದೆ.
— PIB – Ministry of Home Affairs (@PIBHomeAffairs) August 17, 2022
ದೆಹಲಿಯ ಬಕ್ಕರ್‌ವಾಲಾ ಪ್ರದೇಶದಲ್ಲಿ ರೋಹಿಂಗ್ಯಾ ಮುಸ್ಲಿಮರಿಗೆ ಫ್ಲ್ಯಾಟ್ ನೀಡಲು ಮುಂದಾಗಿದೆ ಎಂದು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಸಚಿವ ಹರ್ದೀಪ್ ಸಿಂಗ್ ಪುರಿ ಟ್ವೀಟ್ ಮಾಡಿ ತಿಳಿಸಿದ್ದರು. ಈ ಸುದ್ದಿ ಪ್ರಕಟವಾಗುತ್ತಿದ್ದಂತೆ ಕೇಂದ್ರ ಸರ್ಕಾರದ ವಿರುದ್ಧವೇ ಸಾಮಾಜಿಕ ಜಾಲತಾಣದಲ್ಲಿ ಭಾರೀ ಟೀಕೆ ವ್ಯಕ್ತವಾಗಿತ್ತು. ರೋಹಿಂಗ್ಯಾ ಮುಸ್ಲಿಮರಿಂದ ದೇಶದ ಭದ್ರತೆಗೆ ಸಮಸ್ಯೆ ಎಂದು ಹಿಂದೆ ಹೇಳಿದ್ದ ಕೇಂದ್ರ ಈಗ ಫ್ಲ್ಯಾಟ್ ನೀಡುವುದು ಎಷ್ಟು ಸರಿ ಎಂಬ ಪ್ರಶ್ನೆಯನ್ನು ಜನ ಎತ್ತಿದ್ದರು. ಚರ್ಚೆ ಜಾಸ್ತಿ ಆಗುತ್ತಿದ್ದಂತೆ ಕೇಂದ್ರ ಸರ್ಕಾರ ರೋಹಿಂಗ್ಯಾ ಮುಸ್ಲಿಮರಿಗೆ ಯಾವುದೇ ಫ್ಲ್ಯಾಟ್ ನೀಡುವುದಿಲ್ಲ ಎಂದು ಸ್ಪಷ್ಟನೆ ನೀಡಿ ಎದ್ದಿದ್ದ ಗೊಂದಲಗಳಿಗೆ ತೆರೆ ಎಳೆದಿದೆ.
ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?
ಗೃಹ ಸಚಿವಾಲಯದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. 1,100 ರೋಹಿಂಗ್ಯಾ ಮುಸ್ಲಿಮರು ಟೆಂಟ್‌ನಲ್ಲಿ ವಾಸಿಸುತ್ತಿದ್ದು ಅವರನ್ನು ಅಪಾರ್ಟ್‌ಮೆಂಟ್‌ಗೆ ಸ್ಥಳಾಂತರ ಮಾಡಲಾಗುತ್ತದೆ. ಈ ಅಪಾರ್ಟ್‌ಮೆಂಟ್‌ಗೆ ಪೊಲೀಸ್ ರಕ್ಷಣೆ ಒದಗಿಸಲಾಗುತ್ತದೆ. ದೇಶದ ನಿರಾಶ್ರಿತರ ಯೋಜನೆಯನ್ನು ಸಿಎಎಗೆ ಜೋಡಿಸಿ ಸುಳ್ಳು ಹಬ್ಬಿಸಿದವರಿಗೆ ಇದು ಕಹಿ ಸುದ್ದಿ. ಇದನ್ನೂ ಓದಿ: ರೋಹಿಂಗ್ಯಾ ಮುಸ್ಲಿಂ ಉಗ್ರರಿಂದ 28 ಹಿಂದೂಗಳ ಮಾರಣಹೋಮ
ದೇಶದಲ್ಲಿ ಆಶ್ರಯ ಪಡೆದವರನ್ನು ಭಾರತ ಯಾವಾಗಲೂ ಸ್ವಾಗತಿಸುತ್ತದೆ. ಎಲ್ಲಾ ರೋಹಿಂಗ್ಯಾ ನಿರಾಶ್ರಿತರನ್ನು ದೆಹಲಿಯ ಬಕ್ಕರ್ವಾಲಾ ಪ್ರದೇಶದ EWS ಫ್ಲಾಟ್‌ಗಳಿಗೆ ಸ್ಥಳಾಂತರಿಸಲಾಗುವುದು. ಅವರಿಗೆ ಮೂಲಭೂತ ಸೌಕರ್ಯಗಳು, ರಾತ್ರಿಯಿಡೀ ದೆಹಲಿ ಪೊಲೀಸರಿಂದ ಭದ್ರತೆ ನೀಡಲಾಗುತ್ತದೆ. ದೇಶದ ಆಶ್ರಯವನ್ನು ಅರಸಿ ಬಂದವರಿಗೆ ಆಶ್ರಯ ಕೊಡಲಿದ್ದೇವೆ. ಭಾರತ 1951 ರ ನಿರಾಶ್ರಿತರ ಸಮಾವೇಶವನ್ನು ಗೌರವಿಸುತ್ತದೆ. ಜನಾಂಗ, ಧರ್ಮವನ್ನು ಲೆಕ್ಕಿಸದೇ ಎಲ್ಲರಿಗೂ ಆಶ್ರಯ ನೀಡುತ್ತದೆ ಎಂದಿದ್ದರು.
Those who made a career out of spreading canards on India’s refugee policy deliberately linking it to #CAA will be disappointed.
ಕೇಂದ್ರ ಈ ಹಿಂದೆ ಹೇಳಿದ್ದೇನು?
ಮ್ಯಾನ್ಮಾರ್‌ನಲ್ಲಿ ನೆಲೆಯಿಲ್ಲದೇ ನಿರಾಶ್ರಿತರಾಗಿ ಭಾರತಲ್ಲಿರುವ ರೋಹಿಂಗ್ಯಾ ಮುಸಲ್ಮಾನರಿಗೆ ಆಶ್ರಯ ನೀಡುವುದು ದೇಶದ ಭದ್ರತೆಗೆ ಕಂಟಕವಾಗಲಿದೆ. ಈ ನಿರಾಶ್ರಿತರು ಪಾಕಿಸ್ತಾನದ ಐಎಸ್‌ಐ ಜೊತೆ ಸಂಪರ್ಕ ಹೊಂದಿದ್ದಾರೆ. ಇವರನ್ನು ದೇಶದೊಳಗೆ ಇರಲು ಬಿಡುವುದು ದೇಶಕ್ಕೆ ಕಂಟಕವಾಗಲಿದೆ ಎಂದು ಕೇಂದ್ರ ಗೃಹ ಸಚಿವಾಲಯ ಈ ಹಿಂದೆ ಸುಪ್ರೀಂಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿತ್ತು.
ಪಾಕ್ ಸೇರಿದಂತೆ ಉಗ್ರ ಸಂಘಟನೆ ಜೊತೆ ಈ ಮುಸ್ಲಿಮರು ಸಂಬಂಧ ಹೊಂದಿದ್ದಾರೆ. ದೇಶದಲ್ಲಿ ಕೋಮುವಾದ ಹರಡುತ್ತಿದ್ದಾರೆ. ಭಾರತದಲ್ಲಿ ನಕಲಿ ಗುರುತಿನ ಪತ್ರ ಪಡೆದು ದೇಶದ್ರೋಹಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ.
ಎಲ್ಲ ದೇಶಗಳಂತೆ ವಲಸೆಗೆಂದು ಬರುವ ಜನರ ಮೇಲೆ ನಮಗೆ ಅನುಕಂಪವಿದೆ. ಆದರೆ ವಿಶೇಷವಾಗಿ ಈ ಪ್ರಕರಣದಲ್ಲಿ ದೇಶದ ಭದ್ರತೆ ವಿಚಾರವೂ ಇರುವ ಕಾರಣ ಈ ಅನುಕಂಪ ದುರ್ಬಳಕೆಯಾಗಬಾರದು.
ಗುಪ್ತಚರ ವರದಿಗಳು ಅಧಿಕೃತವಾಗಿ ಪಾಕಿಸ್ತಾನ ಮೂಲದ ಉಗ್ರರು ಮತ್ತು ಇತರ ದೇಶಗಳಲ್ಲಿರುವ ಉಗ್ರರ ಜೊತೆ ರೋಹಿಂಗ್ಯಾ ಮುಸ್ಲಿಮರಿಗೆ ಸಂಪರ್ಕವಿದೆ ಎನ್ನುವ ಮಾಹಿತಿಯನ್ನು ನೀಡಿವೆ. ಅಷ್ಟೇ ಅಲ್ಲದೇ ದೇಶದಲ್ಲಿರುವ ಬೌದ್ಧರ ಮೇಲೆ ಹಿಂಸಾಚಾರ ನಡೆಯುವ ಭೀತಿಯೂ ಇದೆ.
ವಲಸಿಗರ ನೀತಿಗೆ ಸಂಬಂಧಿಸಿದಂತೆ ವಿಶ್ವಸಂಸ್ಥೆಯ ನೀತಿಗೆ ಭಾರತ ಬದ್ಧವಾಗಿದೆ. ಆದರೆ ಇದರ ಜೊತೆಗೆ ದೇಶದಲ್ಲಿರುವ ಪ್ರಜೆಗಳ ಮಾನವ ಹಕ್ಕುಗಳ ರಕ್ಷಣೆಯನ್ನು ಕಾಪಾಡುವ ಹೊಣೆಗಾರಿಕೆಯೂ ನಮ್ಮ ಮೇಲಿದೆ ಎಂದು ಅಫಿಡವಿತ್‌ನಲ್ಲಿ ಹೇಳಿತ್ತು.
ಏನಿದು ಪ್ರಕರಣ?
ಮ್ಯಾನ್ಮಾರ್ ದೇಶದ ದಕ್ಷಿಣದಲ್ಲಿರುಗ ರಾಖೈನ್ ರಾಜ್ಯದಲ್ಲಿ ರೋಹಿಂಗ್ಯಾ ಜನರಿದ್ದಾರೆ. ಬೌದ್ಧರೆ ಹೆಚ್ಚಾಗಿರುವ ಈ ದೇಶದಲ್ಲಿ ಈಗ ರೋಹಿಂಗ್ಯಾ ಮುಸ್ಲಿಮರ ಮೇಲೆ ದೌರ್ಜನ್ಯ ಆಗುತ್ತಿದ್ದು ಭಾರತ, ಬಾಂಗ್ಲಾದೇಶಕ್ಕೆ ವಲಸೆ ಬರುತ್ತಿದ್ದಾರೆ. ಭದ್ರತೆ ವಿಚಾರವನ್ನು ಇಟ್ಟುಕೊಂಡು ಕೇಂದ್ರ ಸರ್ಕಾರ ವಲಸೆಗಾರರನ್ನು ದೇಶದಿಂದ ಹೊರ ಹಾಕಲು ಮುಂದಾಗುತ್ತಿರುವ ಹಿನ್ನೆಲೆಯಲ್ಲಿ ಇಬ್ಬರು ರೋಹಿಂಗ್ಯ ಮುಸ್ಲಿಮರು ಸುಪ್ರೀಂ ಮೊರೆ ಹೋಗಿ, ನಮಗೆ ಭಾರತದಲ್ಲಿ ನಿರಾಶ್ರಿತರ ಮಾನ್ಯತೆಯನ್ನು ನೀಡಬೇಕು ಎಂದು ಮನವಿ ಮಾಡಿದ್ದರು.
Live Tv
[brid partner=56869869 player=32851 video=960834 autoplay=true]
ನವದೆಹಲಿ: ರೋಹಿಂಗ್ಯಾ ನಿರಾಶ್ರಿತರ ವಿಷಯದಲ್ಲಿ ಕೇಂದ್ರ ಸರ್ಕಾರ ಯೂಟರ್ನ್ ಹೊಡೆದಿದೆ. ದೆಹಲಿಯ ಬಕ್ಕರ್‌ವಾಲಾ ಪ್ರದೇಶದಲ್ಲಿ ರೋಹಿಂಗ್ಯಾ ಮುಸ್ಲಿಮರಿಗೆ ಫ್ಲ್ಯಾಟ್ ನೀಡಲು ಮುಂದಾಗಿದೆ.
ಗೃಹ ಸಚಿವಾಲಯದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. 1,100 ರೋಹಿಂಗ್ಯಾ ಮುಸ್ಲಿಮರು ಟೆಂಟ್‌ನಲ್ಲಿ ವಾಸಿಸುತ್ತಿದ್ದು ಅವರನ್ನು ಅಪಾರ್ಟ್‌ಮೆಂಟ್‌ಗೆ ಸ್ಥಳಾಂತರ ಮಾಡಲಾಗುತ್ತದೆ. ಈ ಅಪಾರ್ಟ್‌ಮೆಂಟ್‌ಗೆ ಪೊಲೀಸ್ ರಕ್ಷಣೆ ಒದಗಿಸಲಾಗುತ್ತದೆ.
ದೇಶದ ನಿರಾಶ್ರಿತರ ಯೋಜನೆಯನ್ನು ಸಿಎಎಗೆ ಜೋಡಿಸಿ ಸುಳ್ಳು ಹಬ್ಬಿಸಿದವರಿಗೆ ಇದು ಕಹಿ ಸುದ್ದಿ ಎಂದು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ಧಾರೆ.
Those who made a career out of spreading canards on India’s refugee policy deliberately linking it to #CAA will be disappointed.
ಈ ನಿರ್ಧಾರವನ್ನು ಶ್ಲಾಘಿಸಿದ ಸಚಿವರು, ದೇಶದಲ್ಲಿ ಆಶ್ರಯ ಪಡೆದವರನ್ನು ಭಾರತ ಯಾವಾಗಲೂ ಸ್ವಾಗತಿಸುತ್ತದೆ. ಎಲ್ಲಾ ರೋಹಿಂಗ್ಯಾ ನಿರಾಶ್ರಿತರನ್ನು ದೆಹಲಿಯ ಬಕ್ಕರ್ವಾಲಾ ಪ್ರದೇಶದ EWS ಫ್ಲಾಟ್‌ಗಳಿಗೆ ಸ್ಥಳಾಂತರಿಸಲಾಗುವುದು. ಅವರಿಗೆ ಮೂಲಭೂತ ಸೌಕರ್ಯಗಳು, ರಾತ್ರಿಯಿಡೀ ದೆಹಲಿ ಪೊಲೀಸರಿಂದ ಭದ್ರತೆ ನೀಡಲಾಗುತ್ತದೆ ಎಂದಿದ್ದಾರೆ.
ಉದ್ದೇಶಪೂರ್ವಕವಾಗಿ ಸಿಎಎ ಮತ್ತು ನಿರಾಶ್ರಿತರ ಯೋಜನೆಯನ್ನು ಜೋಡಿಸಿ ಸುಳ್ಳು ಸುದ್ದಿ ಹಬ್ಬಿಸಲಾಗಿತ್ತು. ದೇಶದ ಆಶ್ರಯವನ್ನು ಅರಸಿ ಬಂದವರಿಗೆ ಆಶ್ರಯ ಕೊಡಲಿದ್ದೇವೆ. ಭಾರತ 1951 ರ ನಿರಾಶ್ರಿತರ ಸಮಾವೇಶವನ್ನು ಗೌರವಿಸುತ್ತದೆ. ಜನಾಂಗ, ಧರ್ಮ ಅಥವಾ ಧರ್ಮವನ್ನು ಲೆಕ್ಕಿಸದೇ ಎಲ್ಲರಿಗೂ ಆಶ್ರಯ ನೀಡುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.
ಮ್ಯಾನ್ಮಾರ್‌ನಲ್ಲಿ ನೆಲೆಯಿಲ್ಲದೇ ನಿರಾಶ್ರಿತರಾಗಿ ಭಾರತಲ್ಲಿರುವ ರೋಹಿಂಗ್ಯಾ ಮುಸಲ್ಮಾನರಿಗೆ ಆಶ್ರಯ ನೀಡುವುದು ದೇಶದ ಭದ್ರತೆಗೆ ಕಂಟಕವಾಗಲಿದೆ. ಈ ನಿರಾಶ್ರಿತರು ಪಾಕಿಸ್ತಾನದ ಐಎಸ್‌ಐ ಜೊತೆ ಸಂಪರ್ಕ ಹೊಂದಿದ್ದಾರೆ. ಇವರನ್ನು ದೇಶದೊಳಗೆ ಇರಲು ಬಿಡುವುದು ದೇಶಕ್ಕೆ ಕಂಟಕವಾಗಲಿದೆ ಎಂದು ಕೇಂದ್ರ ಗೃಹ ಸಚಿವಾಲಯ ಈ ಹಿಂದೆ ಸುಪ್ರೀಂಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿತ್ತು.
ಪಾಕ್ ಸೇರಿದಂತೆ ಉಗ್ರ ಸಂಘಟನೆ ಜೊತೆ ಈ ಮುಸ್ಲಿಮರು ಸಂಬಂಧ ಹೊಂದಿದ್ದಾರೆ. ದೇಶದಲ್ಲಿ ಕೋಮುವಾದ ಹರಡುತ್ತಿದ್ದಾರೆ. ಭಾರತದಲ್ಲಿ ನಕಲಿ ಗುರುತಿನ ಪತ್ರ ಪಡೆದು ದೇಶದ್ರೋಹಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಎಂದು ಕೇಂದ್ರ ಹೇಳಿತ್ತು.
Live Tv
[brid partner=56869869 player=32851 video=960834 autoplay=true]
ನವದೆಹಲಿ: ದೇಶದ ಯಾವುದೇ ಮೂಲೆಯಲ್ಲಿದ್ದರೂ ಅಕ್ರಮ ವಲಸಿಗರನ್ನು ಸರ್ಕಾರ ಗುರುತಿಸಲಿದೆ. ಅಂತರಾಷ್ಟ್ರೀಯ ಕಾನೂನಿಗೆ ವಿರುದ್ಧವಾಗಿ ನೆಲೆಸಿರುವವರನ್ನು ಮುಲಾಜಿಲ್ಲದೆ ದೇಶದಿಂದ ಹೊರ ಹಾಕಲಾಗುವುದು ಎಂದು ಗೃಹ ಸಚಿವ ಅಮಿತ್ ಗುಡುಗಿದ್ದಾರೆ.
ರಾಜ್ಯಸಭೆಯ ಅಧಿವೇಶನದಲ್ಲಿ ಸಮಾಜವಾದಿ ಪಕ್ಷದ ರಾಜ್ಯಸಭಾ ಸದಸ್ಯ ಜವೇದ್ ಅಲಿ ಖಾನ್ ಅವರು ಇತರ ರಾಜ್ಯಗಳಲ್ಲಿಯೂ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‍ಆರ್‍ಸಿ) ಜಾರಿಯಾಗಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಇದು ತುಂಬಾ ಒಳ್ಳೆಯ ಪ್ರಶ್ನೆ. ಎನ್‍ಆರ್‍ಸಿ ಅಸ್ಸಾಂ ಒಪ್ಪಂದದ ಭಾಗವಾಗಿದೆ ಹಾಗೂ ಬಿಜೆಪಿಯ ಚುನಾವಣಾ ಪ್ರಣಾಳಿಕೆಯಲ್ಲಿ ಇದೂ ಒಂದು ಅಂಶವಾಗಿತ್ತು. ಇದರ ಆಧಾರದ ಮೇಲೆಯೇ ಸರ್ಕಾರ ಅಧಿಕಾರಕ್ಕೆ ಬಂದಿದೆ ಎಂದು ತಿಳಿಸಿದರು.
We will detect all the illegal infiltrators living on every inch of our country and deport them as per the international law.
देश की इंच-इंच जमीन पर रह रहे घुसपैठिये की पहचान कर अंतरराष्ट्रीय कानून के आधार पर हम उन्हें देश से निकालेंगे। pic.twitter.com/Uk5x7IHZOT
ದೇಶದ ಪ್ರತಿ ಇಂಚೂ ಬಿಡದೇ, ಅನಧಿಕೃತವಾಗಿ ವಾಸವಿರುವ ಪ್ರತಿಯೊಬ್ಬ ವಿದೇಶಿಗರನ್ನು ಸರ್ಕಾರ ಗುರುತಿಸಲಿದೆ. ಅಂತರಾಷ್ಟ್ರೀಯ ಕಾನೂನಿನ ಅನ್ವಯ ಮುಲಾಜಿಲ್ಲದೆ ಪ್ರತಿಯೊಬ್ಬರನ್ನೂ ಹೊರ ಹಾಕಲಾಗುವುದು ಎಂದು ತಿಳಿಸಿದ್ದಾರೆ.
ಎನ್‍ಆರ್‍ಸಿ ನೋಂದಣಿ ಗಡುವನ್ನು ವಿಸ್ತರಿಸುವಂತೆ ಅಸ್ಸಾಂನಿಂದ ಹೆಚ್ಚು ಮನವಿಗಳು ಕೇಂದ್ರ ಸರ್ಕಾರಕ್ಕೆ ಬರುತ್ತಿವೆ. ಈಗಾಗಲೇ 25 ಲಕ್ಷ ಅರ್ಜಿದಾರರು ಸಹಿ ಹಾಕಿದ್ದು, ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಎಲ್ಲ ತಪ್ಪುಗಳನ್ನು ಸರಿ ಪಡಿಸುವಂತೆ ರಾಷ್ಟ್ರಪತಿಗಳು ತಿಳಿಸಿದ್ದಾರೆ ಎಂದು ಇದೇ ವೇಳೆ ರಾಜ್ಯ ಗೃಹ ಸಚಿವ ನಿತ್ಯಾನಂದ ರೈ ತಿಳಿಸಿದರು.
ಅನೇಕ ನೈಜ ಹೆಸರುಗಳನ್ನು ಕೈ ಬಿಡಲಾಗಿದೆ. ಅಲ್ಲದೆ ಅನೇಕ ನಕಲಿ ಹೆಸರುಗಳನ್ನು ನೋಂದಾಯಿಸಲಾಗಿರುವುದರಿಂದ ಕಾಲಾವಕಾಶವನ್ನು ವಿಸ್ತರಿಸುವಂತೆ ಸರ್ಕಾರ ಸುಪ್ರೀಂ ಕೋರ್ಟ್‍ಗೆ ಮನವಿ ಮಾಡಿದೆ. ಸ್ವಲ್ಪ ತಡವಾಗಬಹುದು ಆದರೆ, ಎನ್ಆರ್ಸಿಯನ್ನು ಯವುದೇ ದೋಶವಿಲ್ಲದೆ ಜಾರಿಗೊಳಿಸಲಾಗುವುದು. ಎನ್ಆರ್ಸಿಯಿಂದ ಯಾವುದೇ ನೈಜ ನಾಗರಿಕರು ಹೊರಗುಳಿಯಬಾರದು ಎಂಬುದು ಸರ್ಕಾರದ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ.
ದೇಶದಲ್ಲಿರುವ ರೊಹಿಂಗ್ಯಾ ಮುಸ್ಲಿಮರ ಕುರಿತು ಪ್ರತಿಕ್ರಿಯಿಸಿದ ಅವರು, ನಿರ್ಧಿಷ್ಟ ಅಂಕಿ ಅಂಶ ನಮ್ಮ ಬಳಿ ಇಲ್ಲ. ದೇಶಾದ್ಯಂತ ರೊಹಿಂಗ್ಯಾ ಮುಸ್ಲಿಮರು ಚದುರಿದ್ದಾರೆ. ಕೆಲವರು ಮರಳಿ ಬಾಂಗ್ಲಾ ದೇಶಕ್ಕೆ ಹೋಗಿದ್ದಾರೆ. ಶೀಘ್ರವೇ ಈ ಕುರಿತು ಅಂಕಿ ಅಂಶಗಳನ್ನು ಕಲೆ ಹಾಕಲಾಗುವುದು ಎಂದು ಉತ್ತರಿಸಿದರು.
ಯಂಗೂನ್: ರೋಹಿಂಗ್ಯಾ ಮುಸ್ಲಿಂ ಉಗ್ರಗಾಮಿಗಳು ರಾಖಿನೆ ರಾಜ್ಯದಲ್ಲಿ 28 ಹಿಂದೂಗಳನ್ನು ಹತ್ಯೆ ಮಾಡಿದ್ದಾರೆ ಎಂದು ಮ್ಯಾನ್ಮರ್ ಆರ್ಮಿ ಅಧಿಕಾರಿಗಳು ಹೇಳಿದ್ದಾರೆ.
ಅರಾಕನ್ ರೋಹಿಂಗ್ಯಾ ಸಾಲ್ವೇಶನ್ ಆರ್ಮಿ (ಎಆರ್‍ಎಸ್‍ಎ) ಉಗ್ರಗಾಮಿಗಳು 28 ಹಿಂದೂಗಳನ್ನು ಕ್ರೂರವಾಗಿ ಹತ್ಯೆ ಮಾಡಿದ್ದಾರೆ ಎಂದು ಮ್ಯಾನ್ಮರ್ ಸೇನೆಯ ಮುಖ್ಯಸ್ಥರು ವೆಬ್‍ಸೈಟ್ ಮೂಲಕ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.
ಉಗ್ರರು 20 ಮಹಿಳೆಯರು, 8 ಪುರುಷರು ಹಾಗೂ 10 ವರ್ಷಕ್ಕಿಂತ ಕೆಳಗಿನ 6 ಮಕ್ಕಳನ್ನು ಹತ್ಯೆ ಮಾಡಿದ ಬಳಿಕ ಶವಗಳನ್ನು ಗುಂಡಿ ತೋಡಿ ಹೂಳಿದ್ದಾರೆ ಎಂದು ಮ್ಯಾನ್ಮಾರ್ ಸೇನೆ ತಿಳಿಸಿದೆ.
ಈ ಹತ್ಯೆ ಹಿಂದೂ ಹಾಗೂ ಮುಸ್ಲಿಂ ಸಮುದಾಯಗಳು ನೆಲೆಸಿರುವ ರಾಖೈನ್ ಖಾ ಮಾಂಗ್ ಸೆಯ್ಕ್ ಎಂಬ ಹಳ್ಳಿಯಲ್ಲಿ ನಡೆದಿದ್ದು, ಯೆ ಬಾವ್ ಕ್ಯಾ ಎಂಬ ಸ್ಥಳದಲ್ಲಿ ದೇಹಗಳು ದೊರೆತಿದೆ ಎಂದು ಸೇನೆಯ ಹಿರಿಯ ಅಧಿಕಾರಿ ತಿಳಿಸಿದ್ದಾರೆ.
ಆಗಸ್ಟ್ 25 ರಂದು ರೋಹಿಂಗ್ಯಾ ಮುಸ್ಲಿಂ ಉಗ್ರಗಾಮಿಗಳು ದಾರಿಯಲ್ಲಿ ಕಾಣಿಸಿಕೊಳ್ಳುವ ಪ್ರತಿಯೊಬ್ಬರನ್ನು ಮನಸ್ಸಿಗೆ ಬಂದಂತೆ ಕೊಲ್ಲುತ್ತಾ ಮುಂದೆ ಸಾಗಿದರು. ಅಷ್ಟೇ ಅಲ್ಲದೇ ಕೆಲ ಜನರನ್ನು ಸ್ಥಳೀಯ ಅರಣ್ಯ ಪ್ರದೇಶಕ್ಕೆ ಬಲವಂತವಾಗಿ ಕರೆದುಕೊಂಡು ಹೋಗಿದ್ದಾರೆ ಎಂದು ಪ್ರತ್ಯಕ್ಷದರ್ಶಿ ವ್ಯಕ್ತಿಗಳು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
ಎಆರ್‍ಎಸ್‍ಎ ಉಗ್ರಗಾಮಿ ಸಂಘಟನೆಗೆ ಸೇರಿದ ಸದಸ್ಯರು ಮ್ಯಾನ್ಮಾರ್ ಸೈನಿಕರ ಮೇಲೆ ದಾಳಿ ನಡೆಸಿದ್ದರು. ಈ ದಾಳಿಯ ನಂತರ ಮ್ಯಾನ್ಮಾರ್ ಸೇನೆ ರೋಹಿಂಗ್ಯಾ ಮುಸ್ಲಿಮರ ದಾಳಿ ನಡೆಸಿತ್ತು. ಮ್ಯಾನ್ಮಾರ್ ಸೇನೆಯ ಹಿಂಸಾಚಾರಕ್ಕೆ ಬೆದರಿ ಸುಮಾರು 4 ಲಕ್ಷಕ್ಕೂ ಅಧಿಕ ರೋಹಿಂಗ್ಯಾ ಮುಸ್ಲಿಮರು ಬಾಂಗ್ಲಾ ದೇಶಕ್ಕೆ ವಲಸೆ ಹೋಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಮ್ಯಾನ್ಮಾರ್ ಸೇನೆಯ ದಬ್ಬಾಳಿಕೆಯನ್ನು ವಿಶ್ವಸಂಸ್ಥೆ ಖಂಡಿಸಿತ್ತು.
ನೇಪಿಡಾ: ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರೀ ಚರ್ಚೆ ಆಗುತ್ತಿರುವ ರೋಹಿಂಗ್ಯಾ ಮುಸ್ಲಿಮರ ಸಂಘರ್ಷದಲ್ಲಿ ಸ್ಪಷ್ಟವಾಗಿ ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ ಆಂಗ್ ಸಾನ್ ಸೂಕಿ ಹೇಳಿದ್ದಾರೆ.
ಮ್ಯಾನ್ಮಾರ್ ವಿದೇಶಾಂಗ ಸಚಿವೆ ಆಗಿರುವ ಆಂಗ್ ಸಾನ್ ಸೂಕಿ, ತಮ್ಮ ದೇಶದಲ್ಲಿ ನಡೆಯುತ್ತಿರುವ ರೋಹಿಂಗ್ಯಾ ಮುಸ್ಲಿಮ್ ಸಂಘರ್ಷದ ಕುರಿತು ಮೊದಲ ಬಾರಿಗೆ ದೇಶವನ್ನು ಉದ್ದೇಶಿಸಿ ಮಾತನಾಡುವ ಮೂಲಕ ಮೌನವನ್ನು ಮುರಿದಿದ್ದಾರೆ.
ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಲವು ಟೀಕೆಗಳನ್ನು ಎದುರಿಸುತ್ತಿರುವ ಮ್ಯಾನ್ಮಾರ್, ದೇಶದ ಕಾನೂನು ಸುವ್ಯವಸ್ಥೆಯ ರಕ್ಷಣೆಗೆ ಹೆಚ್ಚಿನ ಒತ್ತನ್ನು ನೀಡುತ್ತದೆಯೇ ಹೊರತು ಜಾಗತಿಕ ಸಮುದಾಯದ ಒತ್ತಡಕ್ಕೆ ಭಯ ಪಡುವುದಿಲ್ಲ. ಇಲ್ಲಿನ ವಸ್ತು ಸ್ಥಿತಿಯನ್ನು ಕಣ್ಣಾರೆ ಕಂಡಾಗ ಮಾತ್ರ ಪರಿಸ್ಥಿತಿಯನ್ನು ಅರಿಯಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ದೇಶದಲ್ಲಿ ಹಲವು ತಿಂಗಳುಗಳ ಕಾಲ ಶಾಂತಿ ಹಾಗೂ ಸುವ್ಯವಸ್ಥೆ ಸ್ಥಾಪನೆಯಾಗಿತ್ತು. ಆದರೆ ಆಗಸ್ಟ್ 25 ರಂದು 30 ಪೊಲೀಸ್ ಔಟ್‍ಪೋಸ್ಟ್ ಮೇಲೆ ಮುಸ್ಲಿಂ ಶಸ್ತ್ರಸಜ್ಜಿತ ಗುಂಪುಗಳು ದಾಳಿಯನ್ನು ನಡೆಸುವ ಮೂಲಕ ಅಶಾಂತಿಯನ್ನು ಸೃಷ್ಟಿಸಿತ್ತು. ಈ ದಾಳಿಯನ್ನು ನಡೆಸಿದ ಅರ್ಕನ್ ರೋಹಿಂಗ್ಯಾ ಮುಸ್ಲಿಮ್ ಸಂಘಟನೆಯನ್ನು ಭಯೋತ್ಪಾದನಾ ಸಂಘಟನೆ ಎಂದು ಘೋಷಿಸಲಾಗಿದೆ ಎಂದರು.
ಮಾಧ್ಯಮಗಳು ಮತ್ತು ಅಂತರಾಷ್ಟ್ರೀಯ ಸಂಸ್ಥೆಗಳು ದೇಶದಲ್ಲಿ ನಡೆಯುತ್ತಿರುವ ಕಾರ್ಯಾಚರಣೆಯನ್ನು ಮಾನವ ಹಕ್ಕುಗಳ ಉಲ್ಲಂಘನೆ ಎಂದು ಅಪಪ್ರಚಾರವನ್ನು ಮಾಡುತ್ತಿವೆ. ಬೇರೆ ಯಾವ ಭಾಗದಲ್ಲಿಯೂ ನಡೆಯದ ಘಟನೆಗಳು ಇಲ್ಲಿ ಮಾತ್ರ ಏಕೆ ನಡೆಯುತ್ತಿವೆ ಎಂಬುದನ್ನು ಅರ್ಥೈಸಿಕೊಳ್ಳಬೇಕು. 70 ವರ್ಷಗಳ ಅಂತಾರಾಷ್ಟ್ರೀಯ ಸಂಘರ್ಷದ ನಂತರ ಮ್ಯಾನ್ಮಾರ್ ನಲ್ಲಿ ಶಾಂತಿ ನೆಲೆಸಿದೆ. ಹಲವು ಮುಸ್ಲಿಮ್ ಕುಟುಂಬಗಳು ಇಂದಿಗೂ ಮ್ಯಾನ್ಯಾರ್ ಹಳ್ಳಿಗಳಲ್ಲಿ ಉಳಿದುಕೊಂಡಿವೆ ಎಂದು ಮಾಹಿತಿ ನೀಡಿದರು.
ಮಾನವ ಹಕ್ಕುಗಳ ರಕ್ಷಣೆಗಾಗಿ ದೇಶದ ಎಲ್ಲ ಗಡಿ ಪ್ರದೇಶಗಳನ್ನು ಒಳಗೊಂಡಂತೆ ಪ್ರತ್ಯೇಕ ಸಮಿತಿಯೊಂದನ್ನು ನಮ್ಮ ಸರ್ಕಾರವು ರಚಿಸಿದೆ. ನಮ್ಮ ದೇಶದಲ್ಲಿ ನಾವು ಶಾಂತಿ ನೆಲೆಸುವುದನ್ನು ಬಯಸುತ್ತೇವೆ. ಅಲ್ಲದೆ ಎಲ್ಲಾ ರೀತಿಯ ಮಾನವ ಹಕ್ಕುಗಳ ಉಲ್ಲಂಘನೆಯನ್ನು ಸಹ ಖಂಡಿಸುತ್ತೇವೆ ಎಂದರು.
ದೇಶವನ್ನು ತೊರೆದಿರುವ 4 ಲಕ್ಷ ರೋಹಿಂಗ್ಯಾ ಮುಸ್ಲಿಮರು ಮತ್ತೆ ಮ್ಯಾನ್ಯಾರ್ ಗೆ ಬರಲು ಬಯಸಿದರೆ ವಾಪಸ್ ಕರೆತರಲು ಬೇಕಾದ ಕ್ರಮಗಳನ್ನು ಕೈಗೊಳ್ಳಲಾಗುವುದು. ರೋಹಿಂಗ್ಯಾ ಮುಸ್ಲಿಮರಲ್ಲಿ ಸಾಮರಸ್ಯವನ್ನು ತಂದು ದೇಶದಲ್ಲಿ ಮತ್ತೆ ಶಾಂತಿಯನ್ನು ಸ್ಥಾಪಿಸಲು ನಾವು ಮುಂದಾಗುತ್ತೇವೆ. ಈ ರೀತಿಯ ಸಂಘರ್ಷ ನಡೆಯಲು ಕಾರಣ ಏನೆಂಬುದನ್ನು ತಿಳಿಯಲು ನಾವು ರೋಹಿಂಗ್ಯಾರ ಜೊತೆ ಮಾತುಕತೆ ನಡೆಸುತ್ತೇವೆ ಎಂದರು.
ಮ್ಯಾನ್ಯಾರ್ ಸೇನೆ ರೋಹಿಂಗ್ಯಾ ಮುಸ್ಲಿಮರು ನೆಲೆಸಿರುವ ಗ್ರಾಮಗಳಿಗೆ ತೆರಳಿ ಅವರಿಗೆ ಹಿಂಸೆ ನೀಡಿದ್ದು ಅಲ್ಲದೇ ಅವರನ್ನು ಅಲ್ಲಿಂದ ಓಡಿಸಿದ್ದಾರೆ ಎಂದು ವಿಶ್ವಸಂಸ್ಥೆ ಆರೋಪಿಸಿತ್ತು.