Tag: Rohini

  • ವೃದ್ಧರ ಮನೆಯಲ್ಲಿ ಕಳ್ಳತನಕ್ಕೆ ಬಂದು ಏನೂ ಸಿಗ್ಲಿಲ್ಲ ಅಂತ 500 ರೂ. ಇಟ್ಟು ಹೋದ ಕಳ್ಳರು

    ವೃದ್ಧರ ಮನೆಯಲ್ಲಿ ಕಳ್ಳತನಕ್ಕೆ ಬಂದು ಏನೂ ಸಿಗ್ಲಿಲ್ಲ ಅಂತ 500 ರೂ. ಇಟ್ಟು ಹೋದ ಕಳ್ಳರು

    ನವದೆಹಲಿ: ವೃದ್ಧರೊಬ್ಬರ ಮನೆಗೆ ಕಳ್ಳತನಕ್ಕೆಂದು ಬಂದು ಯೋಗ್ಯವಾದ ವಸ್ತು ಏನೂ ಸಿಗದಿದ್ದಾಗ ಕಳ್ಳರು (Thieves) 500 ರೂ. ಬಿಟ್ಟು ಹೋಗಿರುವ ವಿಚಿತ್ರ ಘಟನೆ ನವದೆಹಲಿಯ (New Delhi) ರೋಹಿಣಿಯ ಸೆಕ್ಟರ್ 8ರಲ್ಲಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

    ಘಟನೆ ಜುಲೈ 20ರಂದು ಮಧ್ಯರಾತ್ರಿ ನಡೆದಿದೆ. 80 ವರ್ಷದ ನಿವೃತ್ತ ಎಂಜಿನಿಯರ್ ಎಂ ರಾಮಕೃಷ್ಣ ಜುಲೈ 19ರಂದು ತಮ್ಮ ಪತ್ನಿಯೊಂದಿಗೆ ತಮ್ಮ ಮಗನನ್ನು ಭೇಟಿಯಾಗಲು ಗುರುಗ್ರಾಮಕ್ಕೆ ತೆರಳಿದ್ದರು. ಜುಲೈ 21ರಂದು ರಾಮಕೃಷ್ಣ ಅವರ ನೆರೆಹೊರೆಯವರು ಕರೆ ಮಾಡಿ, ತಮ್ಮ ಮನೆಗೆ ಕಳ್ಳರು ನುಗ್ಗಿದ್ದಾಗಿ ಮಾಹಿತಿ ನೀಡಿದ್ದಾರೆ.

    ತಕ್ಷಣ ಅವರು ತಮ್ಮ ಮನೆಗೆ ಧಾವಿಸಿದ್ದು, ಮುಖ್ಯ ಗೇಟ್‌ನ ಬೀಗ ಒಡೆದಿರುವುದು ಕಂಡುಬಂದಿದೆ. ಆದರೆ ಮನೆ ಒಳಗಡೆ ಯಾವುದೇ ವಸ್ತುಗಳು ಕಳ್ಳತನವಾಗಿಲ್ಲ ಎಂಬುದು ತಿಳಿದುಬಂದಿದೆ. ಆದರೆ ಅವರಿಗೆ ಗೇಟ್ ಬಳಿ 500 ರೂ. ನೋಟ್ ಬಿದ್ದಿರುವುದು ಕಂಡುಬಂದಿದೆ. ಇದನ್ನೂ ಓದಿ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ನಾಟಿ ಕೋಳಿ ಕಳ್ಳರು!

    ಈ ಬಗ್ಗೆ ರಾಮಕೃಷ್ಣ ಪೊಲೀಸರಿಗೆ ದೂರು ನೀಡಿದ್ದಾರೆ. ತಮ್ಮ ಮನೆಯಲ್ಲಿ ಯಾವುದೇ ಬೆಲೆಬಾಳುವ ವಸ್ತುಗಳನ್ನು ಇಟ್ಟಿಲ್ಲ ಎಂದು ಅವರು ಮಾಹಿತಿ ನೀಡಿದ್ದಾರೆ. ಮನೆಯಲ್ಲಿ ಎನೂ ಸಿಗದ ಹಿನ್ನೆಲೆ ಕಳ್ಳರೇ 500 ರೂ. ಇಟ್ಟು ಹೋಗಿರಬಹುದು ಎಂದು ಅವರು ಶಂಕಿಸಿದ್ದಾರೆ.

    ಇದೀಗ ರಾಮಕೃಷ್ಣ ದೂರಿನ ಆಧಾರದ ಮೇಲೆ ಪೊಲೀಸರು ಭಾರತೀಯ ದಂಡಸಂಹಿತೆಯ ಸಂಬಂಧಿಸಿದ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಳ್ಳರ ಪತ್ತೆಗೆ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗ್ಳೂರಿನ ಬಾಡಿಗೆ ಮನೆಯಲ್ಲಿದ್ದುಕೊಂಡೇ ಡ್ರಗ್ಸ್ ಸಪ್ಲೈ ಮಾಡ್ತಿದ್ದ ನೈಜೀರಿಯನ್ ಪ್ರಜೆ ಅರೆಸ್ಟ್!

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪ್ರಿಯಕರನಿಂದ 16 ವರ್ಷದ ಹುಡುಗಿಯ ಬರ್ಬರ ಹತ್ಯೆ- ಆರೋಪಿ ಅರೆಸ್ಟ್

    ಪ್ರಿಯಕರನಿಂದ 16 ವರ್ಷದ ಹುಡುಗಿಯ ಬರ್ಬರ ಹತ್ಯೆ- ಆರೋಪಿ ಅರೆಸ್ಟ್

    ನವದೆಹಲಿ: 16 ವರ್ಷದ ಹುಡುಗಿಯನ್ನು ಆಕೆಯ ಪ್ರಿಯಕರ ಬರ್ಬರವಾಗಿ ಹತ್ಯೆಗೈದ (Murder) ಘಟನೆ ದೆಹಲಿಯ (Delhi) ರೋಹಿಣಿಯಲ್ಲಿ (Rohini) ಭಾನುವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಸಾಕ್ಷಿ (16) ಕೊಲೆಯಾದ ಹುಡುಗಿ. ಸಾಹಿಲ್ ಮತ್ತು ಸಾಕ್ಷಿ ಪರಸ್ಪರ ಪ್ರೀತಿಸುತ್ತಿದ್ದರು. ಇವರಿಬ್ಬರ ಮಧ್ಯೆ ವೈಮನಸ್ಸು ಉಂಟಾದ ಹಿನ್ನೆಲೆ ಭಾನುವಾರ ಸಂಜೆ ರೋಹಿಣಿಯ ಶಹಬಾದ್ ಡೈರಿ ಪ್ರದೇಶದಲ್ಲಿ ಸಾಹಿಲ್, ಸಾಕ್ಷಿಗೆ 20 ಬಾರಿ ಚಾಕುವಿನಿಂದ ಇರಿದಿದ್ದಾನೆ. ಅಲ್ಲದೇ ಬಂಡೆಯನ್ನು ತಲೆಮೇಲೆ ಎತ್ತಿಹಾಕಿ ಆಕೆಯನ್ನು ಹತ್ಯೆಗೈದಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಕಾರು ಅಪಘಾತ- 7 ಮಂದಿ ಎಂಜಿನಿಯರಿಂಗ್ ವಿದ್ಯಾರ್ಥಿಗಳ ದುರ್ಮರಣ

    CRIME 2

    ಸಾಕ್ಷಿ ತನ್ನ ಸ್ನೇಹಿತೆಯ ಮಗನ ಬರ್ತ್‌ಡೇ ಪಾರ್ಟಿಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ಸಂದರ್ಭ ಸಾಹಿಲ್ ಆಕೆಯ ಮೇಲೆ ಹಲ್ಲೆ ನಡೆಸಿ ಚಾಕುವಿನಿಂದ ಇರಿದಿದ್ದಾನೆ. ಶಹಬಾದ್ ಡೈರಿಯ ಕಿರಿದಾದ ಲೇನ್‌ನಲ್ಲಿ ಈ ಘಟನೆ ನಡೆದಿದ್ದು, ಈ ಭೀಕರ ದೃಶ್ಯವನ್ನು ದಾರಿಹೋಕರು ಮೂಕಪ್ರೇಕ್ಷಕರಂತೆ ನೋಡುತ್ತಿದ್ದರು. ಇದನ್ನೂ ಓದಿ: ಪೊಲೀಸರಿಂದ ತಪ್ಪಿಸಿಕೊಳ್ಳಲು ಚಿನ್ನದ ಸರ ನುಂಗಿದ- ಗಂಟಲಲ್ಲಿ ಸಿಲುಕಿ ಆಸ್ಪತ್ರೆಯಲ್ಲಿ ನರಳಾಡಿದ!

    ಚಾಕುವಿನಿಂದ ಇರಿದು ಬಂಡೆ ಎತ್ತಿ ಹಾಕಿ ಕೊಲೆ ಮಾಡಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪರಾರಿಯಾಗಿರುವ ಆರೋಪಿ ಸಾಹಿಲ್‌ನನ್ನು ಪತ್ತೆಹಚ್ಚಿ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: 5, 6 ವರ್ಷದ ಬಾಲಕಿಯರ ಮೇಲೆ ಸಂಬಂಧಿಕನಿಂದಲೇ ರೇಪ್‌ – ಆರೋಪಿ ಎಸ್ಕೇಪ್‌

  • ಲಾಲುಗೆ ಕಿಡ್ನಿ ನೀಡಲು ಮುಂದಾದ ಪುತ್ರಿ – ನವೆಂಬರ್ ಅಂತ್ಯದಲ್ಲಿ ವಿದೇಶಕ್ಕೆ RJD ಮುಖ್ಯಸ್ಥ

    ಲಾಲುಗೆ ಕಿಡ್ನಿ ನೀಡಲು ಮುಂದಾದ ಪುತ್ರಿ – ನವೆಂಬರ್ ಅಂತ್ಯದಲ್ಲಿ ವಿದೇಶಕ್ಕೆ RJD ಮುಖ್ಯಸ್ಥ

    ಪಾಟ್ನಾ: ಕಳೆದ ಹಲವಾರು ವರ್ಷಗಳಿಂದ ಮೂತ್ರಪಿಂಡ ಕಾಯಿಲೆ (kidney) ಹಾಗೂ ಇತರ ಕಾಯಿಲೆಗಳಿಂದ ಬಳಲುತ್ತಿದ್ದ ಆರ್‌ಜೆಡಿ (ರಜದ) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ (Lalu Prasad Yadav) ಅವರಿಗೆ ಪುತ್ರಿ ರೋಹಿಣಿ ಆಚಾರ್ಯ (Rohini Aacharya) ತಮ್ಮ ಕಿಡ್ನಿಯಲ್ಲಿ ಒಂದನ್ನು ದಾನ ಮಾಡಲು ನಿರ್ಧರಿಸಿದ್ದಾರೆ. ಇದರಿಂದ ಲಾಲು ಪ್ರಸಾದ್ ಯಾದವ್ ಹೊಸ ಜೀವನವನ್ನು ಪಡೆದುಕೊಳ್ಳಲಿದ್ದಾರೆ.

    ಅಕ್ಟೋಬರ್‌ನಲ್ಲಿ ಸಿಂಗಾಪುರಕ್ಕೆ (Singapore) ಭೇಟಿ ಕೊಟ್ಟ ಲಾಲು ಪ್ರಸಾದ್ ಯಾದವ್ ಅವರಿಗೆ, ಕಿಡ್ನಿ ಕಸಿ ಮಾಡಿಸಿಕೊಳ್ಳುವಂತೆ ವೈದ್ಯರು ಸಲಹೆ ನೀಡಿದ್ದರು. ಈ ಬಳಿಕ ರೋಹಿಣಿ ಅವರು ಮೂತ್ರಪಿಂಡವನ್ನು ತನ್ನ ತಂದೆಗೆ ದಾನ ಮಾಡಲು ಮುಂದಾಗಿದ್ದಾರೆ. 

    ತಮ್ಮ ಜೀವವನ್ನು ಉಳಿಸಿಕೊಳ್ಳಲು ಮೊದಲಿಗೆ ರೋಹಿಣಿ ಕಿಡ್ನಿಯನ್ನು ಪಡೆಯಲು ಲಾಲು ಪ್ರಸಾದ್ ಒಪ್ಪಿಕೊಳ್ಳಲಿಲ್ಲ. ಆದರೆ ಆಕೆಯ ಮತ್ತು ಕುಟುಂಬಸ್ಥರ ಒತ್ತಡದ ಮೇರೆಗೆ ಕೊನೆಗೆ ಕಿಡ್ನಿ ಪಡೆಯಲು ಒಪ್ಪಿಕೊಂಡಿದ್ದಾರೆ. ನವೆಂಬರ್ 20 ರಿಂದ 24ರ ಒಳಗೆ ಲಾಲು ಅವರು ಮತ್ತೆ ಸಿಂಗಾಪುರಕ್ಕೆ ಭೇಟಿ ನೀಡುವ ಸಾಧ್ಯತೆಯಿದ್ದು, ಈ ಸಮಯದಲ್ಲಿ ಅವರು ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆಗೆ ಒಳಗಾಗುವ ಸಾಧ್ಯತೆಯಿದೆ. ಇದನ್ನೂ ಓದಿ: ಮುರುಘಾ ಮಠದಲ್ಲಿ ಫೋಟೋ ಕಳವು ಪ್ರಕರಣ – ಮಾಜಿ ಶಾಸಕ ಬಸವರಾಜನ್ ವಶಕ್ಕೆ

    ಲಾಲು ಪ್ರಸಾದ್ ಅವರ ಎರಡನೇ ಪುತ್ರಿಯಾಗಿರುವ ರೋಹಿಣಿ ಅವರು ಸಿಂಗಾಪುರದಲ್ಲಿ ನೆಲೆಸಿದ್ದು, ತಮ್ಮ ತಂದೆಗೆ ಮೂತ್ರಪಿಂಡ ಕಾಯಿಲೆ ಸಮಸ್ಯೆ ಇರುವ ಬಗ್ಗೆ ಬಹಳ ಆತಂಕಕ್ಕೊಳಗಾಗಿದ್ದರು. ನಂತರ ಮೂತ್ರಪಿಂಡ ಕಸಿ ಸಲಹೆ ನೀಡಿದ ವೈದ್ಯರ ತಂಡವನ್ನು ಸಂಪರ್ಕಿಸಲು ಲಾಲು ಪ್ರಸಾದ್ ಅವರು ಸಿಂಗಾಪುರಕ್ಕೆ ಭೇಟಿ ನೀಡಿದ್ದರು.

    ಹಲವು ವರ್ಷಗಳಿಂದ ಕಿಡ್ನಿ ಸಮಸ್ಯೆಗೆ ದೆಹಲಿ ಏಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಲಾಲು ಪ್ರಸಾದ್‍ಗೆ ಎಐಐಎಂಎಸ್‍ನ ವೈದ್ಯರು ಕಿಡ್ನಿ ಕಸಿ ಮಾಡಿಸಿಕೊಳ್ಳಲು ಸಲಹೆ ನೀಡಿರಲಿಲ್ಲ. ಆದರೆ ಸಿಂಗಾಪುರಕ್ಕೆ ಭೇಟಿ ನೀಡಿದ ಲಾಲು ಅವರಿಗೆ ಅಲ್ಲಿನ ವೈದ್ಯರು ಕಿಡ್ನಿ ಕಸಿ ಮಾಡಿಸಿಕೊಳ್ಳುವಂತೆ ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಕೊಯಮತ್ತೂರು ಕಾರು ಸ್ಫೋಟ ಪ್ರಕರಣ – 45ಕ್ಕೂ ಹೆಚ್ಚು ಕಡೆ NIA ದಾಳಿ

    Live Tv
    [brid partner=56869869 player=32851 video=960834 autoplay=true]

  • ‘ಧಮ್ಕಿ’ ಸಿನಿಮಾ ಮೂಲಕ ಕನ್ನಡಕ್ಕೆ ಬಂದ ತೆಲುಗಿನ ಪ್ರತಿಭಾನ್ವಿತ ನಟ ವಿಶ್ವಕ್ ಸೇನ್

    ‘ಧಮ್ಕಿ’ ಸಿನಿಮಾ ಮೂಲಕ ಕನ್ನಡಕ್ಕೆ ಬಂದ ತೆಲುಗಿನ ಪ್ರತಿಭಾನ್ವಿತ ನಟ ವಿಶ್ವಕ್ ಸೇನ್

    ತೆಲುಗು ಚಿತ್ರರಂಗದ ಯಂಗ್ ಅಂಡ್ ಪ್ರಾಮಿಸಿಂಗ್ ಹೀರೋ ವಿಶ್ವಕ್ ಸೇನ್ ಫಲಕ್ನುಮಾ ದಾಸ್ ಸಿನಿಮಾ ಮೂಲಕ ತಾವೊಬ್ಬ ಪ್ರತಿಭಾನ್ವಿತ ನಟ ಹಾಗೂ ನಿರ್ದೇಶಕ ಅನ್ನೋದನ್ನು ಸಾಬೀತುಪಡಿಸಿದ್ದಾರೆ. ಈ ಚಿತ್ರದ ಮೂಲಕ ನಿರ್ದೇಶಕನಾಗಿಯೂ ಅದೃಷ್ಟ ಪರೀಕ್ಷೆಗಿಳಿದು ಗೆದ್ದಿರುವ ವಿಶ್ವಕ್ ಸೇನ್ ಇದೀಗ ಧಮ್ಕಿ ಸಿನಿಮಾ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮೆರವಣಿಗೆ ಹೊರಡಲು ಸಜ್ಜಾಗಿದ್ದಾರೆ.

    ಈ ಚಿತ್ರದಲ್ಲಿ ನಾಯಕನಾಗಿ ಬಣ್ಣ ಹಚ್ಚಿರುವ ಅವರು ನಿರ್ದೇಶಕನಾಗಿಯೂ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಮನ್ಮಯೆ ಕ್ರಿಯೇಷನ್ಸ್ ಮತ್ತು ವಿಶ್ವಕ್ ಸೇನ್ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ಕರಾಟೆ ರಾಜು ನಿರ್ಮಾಣ ಮಾಡ್ತಿರುವ ಧಮ್ಕಿ ಚಿತ್ರಕ್ಕೆ ಪ್ರಸನ್ನ ಕುಮಾರ್ ಬೆಜವಾಡ ಕಥೆ ಮತ್ತು ಸಂಭಾಷಣೆ ಬರೆದಿದ್ದು, ವಿಶ್ವಕ್ ಸೇನ್ ಗೆ ಜೋಡಿಯಾಗಿ ನಿವೇತಾ ಪೇತುರಾಜ್ ನಟಿಸುತ್ತಿದ್ದಾರೆ. ಇದನ್ನೂ ಓದಿ:ಪ್ರೀ ವೆಡ್ಡಿಂಗ್ ಫೋಟೋಶೂಟ್‌ನಲ್ಲಿ ಮಿಂಚಿದ `ಕಮಲಿ’ ಖ್ಯಾತಿಯ ಗೇಬ್ರಿಯೆಲಾ- ಸುಹಾಸ್

    ಧಮ್ಕಿ ರೋಮ್ಯಾಂಟಿಕ್ ಕಾಮಿಡಿ, ಆಕ್ಷನ್ ಥ್ರಿಲ್ಲರ್ ಕಂಟೆಂಟ್ ಒಳಗೊಂಡಿದ್ದು, ಸಂಪೂರ್ಣ ಮನರಂಜನೆ ಜೊತೆಗೆ ಪಕ್ಕ ಆಕ್ಷನ್ ಪ್ರೇಮಿಗಳಿಗೆ ಸಿನಿಮಾ ಥ್ರಿಲ್ ನೀಡಲಿದೆ. ಈಗಾಗಲೇ 95ರಷ್ಟು ಶೂಟಿಂಗ್ ಮುಗಿಸಿರುವ ಚಿತ್ರತಂಡ ಉಳಿದ ಭಾಗದ ಚಿತ್ರೀಕರಣವನ್ನೂ ಈ ವಾರದಲ್ಲಿ ಮುಗಿಸಲು ಯೋಜನೆ ಹಾಕಿಕೊಂಡಿದೆ. ಹೈದ್ರಾಬಾದ್ ಸಾರಥಿ ಸ್ಟುಡಿಯೋದಲ್ಲಿ ಚಿತ್ರದ ಕ್ಲೈಮ್ಯಾಕ್ಸ್ ಶೂಟಿಂಗ್ ನಡೆಸಲು ಅದ್ಧೂರಿ ಸೆಟ್ ಹಾಕಿದೆ. ಆದಷ್ಟು ಬೇಗ ಉಳಿದ ಶೂಟಿಂಗ್ ಮುಗಿಸಿ ಬೆಳಗಿನ ಹಬ್ಬ ದೀಪಾವಳಿಗೆ ಫಸ್ಟ್ ಲುಕ್ ರಿಲೀಸ್ ಮಾಡುವ ಮೂಲಕ ಪ್ರಚಾರ ಕಾರ್ಯಕ್ಕೆ ಚಿತ್ರತಂಡ ಮುನ್ನುಡಿ ಬರೆಯಲಿದೆ.ರಾವ್ ರಮೇಶ್, ಹೈಪರ್ ಆದಿ, ರೋಹಿಣಿ ಮತ್ತು ಪೃಥ್ವಿರಾಜ್ ಸೇರಿದಂತೆ ಇತರ ತಾರಾಗಣ ಚಿತ್ರದಲ್ಲಿ. ದಿನೇಶ್ ಕೆ ಬಾಬು ಛಾಯಾಗ್ರಹಣ, ಲಿಯಾನ್ ಜೇಮ್ಸ್ ಸಂಗೀತ ಮತ್ತು ಅನ್ವರ್ ಅಲಿ ಸಂಕಲನ ಚಿತ್ರಕ್ಕಿದೆ..

    Live Tv
    [brid partner=56869869 player=32851 video=960834 autoplay=true]