Tag: rohini court

  • ಸಿಹಿ ಹಂಚಿ ರೇಪ್ – 30 ಮಕ್ಕಳ ಮೇಲೆ ಅತ್ಯಾಚಾರಗೈದವ ಕೊನೆಗೂ ದೋಷಿಯಾದ

    ಸಿಹಿ ಹಂಚಿ ರೇಪ್ – 30 ಮಕ್ಕಳ ಮೇಲೆ ಅತ್ಯಾಚಾರಗೈದವ ಕೊನೆಗೂ ದೋಷಿಯಾದ

    ನವದೆಹಲಿ: ಮಕ್ಕಳ ಮೇಲೆ ಅತ್ಯಾಚಾರ (Rape) ಎಸಗಿ ಬಳಿಕ ಹತ್ಯೆಗೈಯುತ್ತಿದ್ದ ಆರೋಪಿ ರವೀಂದರ್ ಕುಮಾರ್‌ನನ್ನು ದೆಹಲಿಯ (Delhi) ರೋಹಿಣಿ ನ್ಯಾಯಾಲಯವು (Rohini Court) ಶನಿವಾರ ಅಪರಾಧಿ ಎಂದು ಘೋಷಿಸಿದೆ.

    ಅಪರಾಧಿಯು ಉತ್ತರ ಪ್ರದೇಶದ ಕಾಸ್‌ಗಂಜ್ ಮೂಲದವನಾಗಿದ್ದು ಸುಮಾರು 30 ಮಕ್ಕಳ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಆತ ದೆಹಲಿ-ಎನ್‌ಸಿಆರ್ ಮತ್ತು ಪಶ್ಚಿಮ ಉತ್ತರಪ್ರದೇಶದಲ್ಲಿ ಅಪರಾಧಗಳನ್ನು ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಸೇನಾ ವಾಹನದ ಮೇಲೆ ದಾಳಿ – ಓರ್ವ ಉಗ್ರನ ಹತ್ಯೆ

    ಅಪರಾಧಿ ಮದ್ಯ ಮತ್ತು ಮಾದಕವ್ಯಸನಿಯಾಗಿದ್ದು, ಅಮಲೇರಿದ ಸ್ಥಿತಿಯಲ್ಲಿ ಅಪರಾಧಗಳನ್ನು ಮಾಡುತ್ತಿದ್ದ. ಅಲ್ಲದೇ ಮಕ್ಕಳಿಗೆ ಸಿಹಿ ತಿಂಡಿ ಆಮಿಷವೊಡ್ಡಿ ಅತ್ಯಾಚಾರ ಮಾಡಿ ಕೊಲೆ ಮಾಡುತ್ತಿದ್ದ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಕ್ರೇಜ್‌ಗಾಗಿ 300km ವೇಗದಲ್ಲಿ ಸೂಪರ್‌ ಬೈಕ್‌ ರೈಡಿಂಗ್‌ – ಯೂಟ್ಯೂಬರ್‌ ಸಾವು

    ಈ ಕುರಿತು ಹೆಚ್ಚುವರಿ ಸಿಪಿ ವಿಕ್ರಮಜಿತ್ ಸಿಂಗ್, ಅಂತಿಮಾಗಿ ನ್ಯಾಯ ದೊರಕಿದೆ. ಎಷ್ಟೋ ಅಮಾಯಕ ಆತ್ಮಗಳು ಈಗ ನೆಮ್ಮದಿಯಿಂದ ಇರಬಹುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಭಾರತ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದ ಖಲಿಸ್ತಾನಿ ಕಮಾಂಡೋ ಹತ್ಯೆ

  • ದೆಹಲಿ ಕೋರ್ಟ್‌ನಲ್ಲಿ ಗುಂಡು ಹಾರಿಸಿದ್ದ ಆರೋಪಿ ತಿಹಾರ್ ಜೈಲಿನಲ್ಲಿ ಹತ್ಯೆ

    ದೆಹಲಿ ಕೋರ್ಟ್‌ನಲ್ಲಿ ಗುಂಡು ಹಾರಿಸಿದ್ದ ಆರೋಪಿ ತಿಹಾರ್ ಜೈಲಿನಲ್ಲಿ ಹತ್ಯೆ

    ನವದೆಹಲಿ: ಕೋರ್ಟ್‌ನಲ್ಲಿ (Court) ಗುಂಡು ಹಾರಿಸಿದ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಸೇರಿದ್ದ ಗ್ಯಾಂಗ್‌ಸ್ಟರ್ (Gangster) ಟಿಲ್ಲು ತಾಜ್‌ಪುರಿಯಾನನ್ನು (Tillu Tajpuriya) ಬೇರೊಂದು ಗ್ಯಾಂಗ್‌ನ ಸಹ ಕೈದಿಗಳು ಥಳಿಸಿ ಹತ್ಯೆ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಮಂಗಳವಾರ ಮುಂಜಾನೆ ತಿಹಾರ್ ಜೈಲಿನಲ್ಲಿದ್ದ (Tihar Jail) ಟಿಲ್ಲು ತಾಜ್‌ಪುರಿಯಾ ಅಲಿಯಾಸ್ ಸುನೀಲ್ ಮಾನ್‌ನನ್ನು ಮತ್ತೊಬ್ಬ ಗ್ಯಾಂಗ್‌ಸ್ಟರ್ ಯೋಗೇಶ್ ತುಂಡಾ ಹಾಗೂ ಆತನ ಸಹಚರರು ಕಬ್ಬಿಣದ ರಾಡ್‌ಗಳಿಂದ ಥಳಿಸಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಟಿಲ್ಲುನನ್ನು ತಕ್ಷಣ ದೀನ್ ದಯಾಳ್ ಉಪಾಧ್ಯಾಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆತ ಅಲ್ಲಿ ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

    ಘಟನೆಯೇನು?
    2021ರಲ್ಲಿ ದೆಹಲಿಯ ರೋಹಿಣಿ ಕೋರ್ಟ್‌ನಲ್ಲಿ (Rohini Court) ಗ್ಯಾಂಗ್‌ಸ್ಟರ್ ಜಿತೇಂದರ್ ಗೋಗಿಯನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು. ಈ ಪ್ರಕರಣದಲ್ಲಿ ಟಿಲ್ಲು ಪ್ರಮುಖ ಆರೋಪಿಯಾಗಿದ್ದ. ನ್ಯಾಯಾಲಯದ ಒಳಗಡೆ ಇಬ್ಬರು ವಕೀಲರ ವೇಷದಲ್ಲಿ ಬಂದಿದ್ದ ಗ್ಯಾಂಗ್‌ಸ್ಟರ್‌ಗಳು ಜಿತೇಂದರ್ ಗೋಗಿ ಮೇಲೆ ಗುಂಡು ಹಾರಿಸಿ ಕೊಂದಿದ್ದರು. ಆ ವೇಳೆ ಪೊಲೀಸರು ಪ್ರತಿ ದಾಳಿ ನಡೆಸಿ ಆರೋಪಿಗಳಿಬ್ಬರನ್ನೂ ಗುಂಡಿಕ್ಕಿ ಕೊಂದಿದ್ದರು. ಇದನ್ನೂ ಓದಿ: ಮಳೆ, ಹಿಮಪಾತ – ತಂಗಿರುವ ಸ್ಥಳದಲ್ಲಿಯೇ ಇರಿ: ಕೇದಾರನಾಥ ಯಾತ್ರಾರ್ಥಿಗಳಿಗೆ ಎಚ್ಚರಿಕೆ

    ಜಿತೇಂದರ್ ಗೋಗಿ ಗ್ಯಾಂಗ್ ಹಾಗೂ ಟಿಲ್ಲು ಗ್ಯಾಂಗ್ ನಡುವೆ ಹಲವು ವರ್ಷಗಳಿಂದ ದ್ವೇಷವಿತ್ತು. ಈ ಹಿನ್ನೆಲೆ ಗುಂಡಿನ ದಾಳಿ ನಡೆಸಿದ್ದರು. ಜಿತೇಂದರ್ ಗೋಗಿ ಮೇಲೆ ಗುಂಡು ಹಾರಿಸಲು ಟಿಲ್ಲು ತಾಜ್‌ಪುರಿಯಾ ಫೋನ್ ಕಾಲ್ ಮೂಲಕ ಆರೋಪಿಗಳಿಗೆ ಸೂಚನೆಯನ್ನು ನೀಡಿದ್ದ ಎಂಬುದು ಪ್ರಕರಣದ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಇದನ್ನೂ ಓದಿ: ಖರ್ಗೆ ತವರಿನಲ್ಲಿ ಮೋದಿ ದಂಡಯಾತ್ರೆ – 25 ಕ್ಷೇತ್ರದ ಮೇಲೆ ಬಿಜೆಪಿ ಕಣ್ಣು

  • ದೆಹಲಿಯ ರೋಹಿಣಿ ಕೋರ್ಟ್‍ನಲ್ಲಿ ಸ್ಫೋಟ – ಪೊಲೀಸ್ ಸಿಬ್ಬಂದಿಗೆ ಗಾಯ

    ದೆಹಲಿಯ ರೋಹಿಣಿ ಕೋರ್ಟ್‍ನಲ್ಲಿ ಸ್ಫೋಟ – ಪೊಲೀಸ್ ಸಿಬ್ಬಂದಿಗೆ ಗಾಯ

    ನವದೆಹಲಿ: ದೆಹಲಿಯ ರೋಹಿಣಿ ನ್ಯಾಯಾಲಯದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಓರ್ವ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

    ಇಂದು ಬೆಳಗ್ಗೆ ಈ ಘಟನೆ ಸಂಭವಿಸಿದ್ದು, ನ್ಯಾಯಾಲಯದ ಕಲಾಪವನ್ನು ಸ್ಥಗಿತಗೊಳಿಸಲಾಗಿದೆ ಮತ್ತು ಎಲ್ಲಾ ಗೇಟ್‍ಗಳನ್ನು ಮುಚ್ಚಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: 200 ಕೋಟಿ ರೂ. ವಂಚನೆ ಪ್ರಕರಣ – ಇಡಿ ಮುಂದೆ ವಿಚಾರಣೆಗೆ ಹಾಜರಾದ ಜಾಕ್ವೆಲಿನ್

    ಆರಂಭದಲ್ಲಿ ಕೋರ್ಟ್ ರೂಂ 102 ರಲ್ಲಿ ಲ್ಯಾಪ್‍ಟಾಪ್ ಸ್ಫೋಟಗೊಂಡಿದೆ ಎಂದು ಭಾವಿಸಲಾಗಿತ್ತು. ಆದರೆ ದೆಹಲಿ ಪೊಲೀಸ್‍ನ ಉನ್ನತ ಮೂಲಗಳು ಕಡಿಮೆ ತೀವ್ರತೆಯಲ್ಲಿ ಬಾಂಬ್ ಸ್ಫೋಟಗೊಂಡಿದೆ ಎಂದು ಖಚಿತಪಡಿಸಿವೆ. ಘಟನೆಯಲ್ಲಿ ಸುಧಾರಿತ ಸ್ಫೋಟಕ ಸಾಧನವನ್ನು(ಐಇಡಿ) ಮತ್ತು ಟಿಫಿನ್ ಬಾಕ್ಸ್ ತರಹದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದನ್ನೂ ಓದಿ: ಭಾರತ ಶಸ್ತ್ರಾಸ್ತ್ರ ತಯಾರಿಕೆಯಲ್ಲಿ ಆತ್ಮನಿರ್ಭರ್ ಆಗಬೇಕೆಂಬ ಹಂಬಲ ಬಿಪಿನ್ ಅವರಿಗಿತ್ತು: ಬೊಮ್ಮಾಯಿ

    ಈ ಕುರಿತಂತೆ ಪ್ರತಿಕ್ರಿಯಿಸಿದ ದೆಹಲಿ ಪೊಲೀಸರು, “ರೋಹಿಣಿ ನ್ಯಾಯಾಲಯದ ಆವರಣದಲ್ಲಿ ಬೆಳಿಗ್ಗೆ 10.30 ರ ಸುಮಾರಿಗೆ ಲ್ಯಾಪ್‍ಟಾಪ್ ಬ್ಯಾಗ್‍ನಲ್ಲಿ ಸಣ್ಣ ಪ್ರಮಾಣದ ಸ್ಫೋಟ ಸಂಭವಿಸಿದೆ. ಈ ಘಟನೆ ಸಂಭವಿಸಿದ ಸ್ಥಳವನ್ನು ಸುತ್ತುವರಿಯಲಾಗಿದೆ. ಇದೀಗ ವಿಧಿವಿಜ್ಞಾನ ತಜ್ಞರು ಮತ್ತು ಎನ್‍ಎಸ್‍ಜಿ ತಂಡಗಳು ಪರಿಶೀಲನೆ ನಡೆಸುತ್ತಿದ್ದಾರೆ.

    ದೆಹಲಿ ಪೊಲೀಸರ ವಿಶೇಷ ಸೆಲ್ ಘಟನೆ ಕುರಿತಂತೆ ತನಿಖೆ ನಡೆಸುತ್ತಿದ್ದು, ವಿಶೇಷ ಪೊಲೀಸ್ ಆಯುಕ್ತರು – ಕಾನೂನು ಮತ್ತು ಸುವ್ಯವಸ್ಥೆ ಘಟನಾ ಸ್ಥಳಕ್ಕೆ ಆಗಮಿಸಿದ್ದರು. ರಾಷ್ಟ್ರೀಯ ಭದ್ರತಾ ಸಿಬ್ಬಂದಿ (ಎನ್‍ಎಸ್‍ಜಿ) ತಂಡವನ್ನು ಸಹ ಕರೆಸಲಾಗಿತ್ತು. ಇದನ್ನೂ ಓದಿ: ಕೊನೆ ಕ್ಷಣದಲ್ಲಿ ಬಿಪಿನ್‌ ರಾವತ್‌ ಅವ್ರು ಕುಡಿಯಲು ನೀರು ಕೇಳಿದ್ದರು- ಪ್ರತ್ಯಕ್ಷದರ್ಶಿ ಮಾತು

    ಘಟನೆ ಕುರಿತಂತೆ ಬೆಳಗ್ಗೆ 10.40ಕ್ಕೆ ಮಾಹಿತಿ ಲಭಿಸಿದ್ದು, ಏಳು ಅಗ್ನಿಶಾಮಕ ಟೆಂಡರ್‍ಗಳು ಸ್ಥಳಕ್ಕೆ ಧಾವಿಸಿವೆ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ.

  • ರೋಹಿಣಿ ಜಿಲ್ಲಾ ಕೋರ್ಟ್‌ನಲ್ಲಿ ಶೂಟೌಟ್ ಪ್ರಕರಣ – ಇಬ್ಬರ ಬಂಧನ

    ರೋಹಿಣಿ ಜಿಲ್ಲಾ ಕೋರ್ಟ್‌ನಲ್ಲಿ ಶೂಟೌಟ್ ಪ್ರಕರಣ – ಇಬ್ಬರ ಬಂಧನ

    ನವದೆಹಲಿ: ರೋಹಿಣಿ ಜಿಲ್ಲಾ ನ್ಯಾಯಾಲಯದ ಒಳಗೆ ಗುಂಡಿನ ದಾಳಿಯಿಂದ ನಾಲ್ವರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

    ಬಂಧಿತರನ್ನು ಉಮಂಗ್ ಹಾಗೂ ವಿನಯ್ ಎಂದು ಗುರುತಿಸಲಾಗಿದೆ. ಘಟನೆ ನಡೆದ ಎರಡು ದಿನಗಳ ಬಳಿಕ ಪೊಲೀಸರು ನಡೆಸಿದ ಕ್ಷಿಪ್ರ ಕಾರ್ಯಾಚರಣೆಯ ಬಳಿಕ ಇಬ್ಬರನ್ನು ಅರೆಸ್ಟ್ ಮಾಡಲಾಗಿದೆ.

    ಏನಿದು ಘಟನೆ..?
    ಶುಕ್ರವಾರದಂದು ನ್ಯಾಯಾಲಯದ ಒಳಗೆ ಗುಂಡಿನ ದಾಳಿ ಮಾಡಿ ಕುಖ್ಯಾತ ರೌಡಿ ಜಿತೇಂದ್ರ ಗೋಗಿಯನ್ನು ಹತ್ಯೆ ಮಾಡಲಾಗಿತ್ತು. ಟಿಲ್ಲು ಗ್ಯಾಂಗ್ ಸದಸ್ಯರಿಂದ ಈ ದಾಳಿ ನಡೆದಿದ್ದು, ಹಳೆ ದ್ವೇಷದ ಹಿನ್ನಲೆ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದರು. ಟಿಲ್ಲು ಗ್ಯಾಂಗ್ ಇಬ್ಬರು ಸದಸ್ಯರಾದ ರಾಹುಲ್ ಮತ್ತು ಮೋರೀಸ್ ಘಟನೆಯಲ್ಲಿ ಸಾವನ್ನಪ್ಪಿದ್ದರು. ಗ್ಯಾಂಗ್ ಸ್ಟರ್ ಜೀತೇಂದ್ರ ಗೋಗಿ ಹತ್ಯೆಯಾಗಿದ್ದು, ಮತ್ತೋರ್ವನಿಗೆ ಗಂಭೀರ ಗಾಯಗಳಾಗಿತ್ತು.

    ಸಂಘಟಿತ ಅಪರಾಧ ಕಾಯ್ದೆ (MCOCA) ಅಡಿಯಲ್ಲಿ ಜಿತೇಂದ್ರ ಗೋಗಿಯನ್ನು ಬಂಧಿಸಿದ್ದ ದೆಹಲಿ ಪೊಲೀಸ್, ವಿಚಾರಣೆಗಾಗಿ ರೋಹಿಣಿ ಜಿಲ್ಲಾ ನ್ಯಾಯಲಯದ ಮುಂದೆ ಹಾಜರುಪಡಿಸಿದ್ದರು. ಈ ಸಂದರ್ಭದಲ್ಲಿ ವಕೀಲರ ವೇಷದಲ್ಲಿ ಕೋರ್ಟ್ ಹಾಲ್ ಗೆ ಬಂದಿದ್ದ ಇಬ್ಬರು ಟಿಲ್ಲು ಗ್ಯಾಂಗ್ ಸದಸ್ಯರು ದಾಳಿ ನಡೆಸಿದ್ದರು. ಘಟನೆಯಲ್ಲಿ ಜಿತೇಂದ್ರ ಗೋಗಿ ಸೇರಿದಂತೆ ನಾಲ್ಕು ಮಂದಿ ಸ್ಥಳದಲ್ಲಿ ಮೃತಪಟ್ಟಿದ್ದರು. ಇದರಲ್ಲಿ ದಾಳಿ ಮಾಡಿದ್ದ ಇಬ್ಬರು ರೌಡಿಗಳು ಒಳಗೊಂಡಿದ್ದಾರೆ ಎಂದು  ಪೊಲೀಸರು ತಿಳಿಸಿದ್ದು ಕೋರ್ಟ್ ನಲ್ಲಿ ಗುಂಡಿನ ದಾಳಿ ನಡೆಸಿದ ಹಿನ್ನಲೆ ಪ್ರತಿ ದಾಳಿ ನಡೆಸಿ ಅವರನ್ನು ಹೊಡೆದು ಹಾಕಿದೆ ಎಂದು ಹೇಳಿದ್ದರು. ಇದನ್ನೂ ಓದಿ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ- ಆಂಧ್ರ, ಒಡಿಶಾ ಕರಾವಳಿ ಜಿಲ್ಲೆಗಳಲ್ಲಿ ಗುಲಾಬ್ ಚಂಡಮಾರುತ ಭೀತಿ

    ಹತ್ಯೆಯಾಗಿರುವ ಜಿತೇಂದ್ರ ಗೋಗಿ ದೆಹಲಿ ಭೂಗತ ಪಾತಕಿಯಾಗಿದ್ದು ಏಪ್ರಿಲ್‍ನಲ್ಲಿ ಮಹಾರಾಷ್ಟ್ರ ಸಂಘಟಿತ ಅಪರಾಧ ಕಾಯ್ದೆ (MCOCA) ಅಡಿಯಲ್ಲಿ ದೆಹಲಿ ಪೊಲೀಸ್‍ನ ವಿಶೇಷ ಸೆಲ್ ಬಂಧಿಸಿತು. MCOCA ಪ್ರಸ್ತಾವನೆಯು 19 ಸುಲಿಗೆಗಳು, ದರೋಡೆಗಳು, ಕಾರುಗಳ್ಳತನ ಮತ್ತು ದರೋಡೆಗಳ ಜೊತೆಗೆ ಕೊಲೆ ಮತ್ತು ಕೊಲೆ ಯತ್ನದ 19 ಪ್ರಕರಣಗಳನ್ನು ಒಳಗೊಂಡಿವೆ. 2010 ರಲ್ಲಿ ತನ್ನ ತಂದೆಯ ಮರಣದ ನಂತರ ಶಾಲೆಯನ್ನು ಬಿಟ್ಟ ಗೋಗಿ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಲು ಆರಂಭಿಸಿದ, ಸದ್ಯ 30 ವರ್ಷದ ಈ ಗೋಗಿ ರಿಯಲ್ ಎಸ್ಟೇಟ್, ಆಸ್ತಿಯಲ್ಲಿ ವ್ಯಾಪಾರ ವ್ಯವಹರಿಸಲು ಆರಂಭಿಸಿದ್ದನು.

    ಸೆಪ್ಟೆಂಬರ್ 2010 ರಲ್ಲಿ ಪ್ರವೀಣ್ ಎಂಬ ವ್ಯಕ್ತಿಯ ಮೇಲೆ ಗೋಗಿ ಗುಂಡು ಹಾರಿಸಿದ್ದ, ದೆಹಲಿ ವಿಶ್ವವಿದ್ಯಾನಿಲಯದ ಶ್ರದ್ಧಾನಂದ ಕಾಲೇಜಿನಲ್ಲಿ ನಡೆದ ಚುನಾವಣೆಗಳಲ್ಲಿ, ಗೋಗಿ ಮತ್ತು ಆತನ ಸ್ನೇಹಿತರು ಹಲ್ಲೆ ನಡೆಸಿ ಸಂದೀಪ್ ಮತ್ತು ರವೀಂದರ್ ಎಂಬ ಇಬ್ಬರು ವ್ಯಕ್ತಿಗಳ ಮೇಲೆ ಗುಂಡು ಹಾರಿಸಿದರು. ಇದಾದ ಬಳಿಮ ಬಳಿಕ ಗೋಗಿ ಒಂದು ಟೀಂ ಕಟ್ಟಿಕೊಂಡು ಗ್ಯಾಂಗಸ್ಟಾರ್ ಆಗಿ ಬದಲಾಗಿದ್ದನು.