ಬೆಂಗಳೂರು: ರಾಜ್ಯ ಸರ್ಕಾರ ಸೋಮವಾರ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೇರಿದಂತೆ 7 ಮಂದಿ ಜಿಲ್ಲಾಧಿಕಾರಿಗಳ ವರ್ಗಾವಣೆ ಮಾಡಿ ಹೊರಡಿಸಿದ್ದ ಆದೇಶಕ್ಕೆ ಚುನಾವಣಾ ಆಯೋಗ ಆಕ್ಷೇಪ ವ್ಯಕ್ತಪಡಿಸಿದೆ.
ಚುನಾವಣಾ ಪ್ರಕ್ರಿಯೆ ಮುಗಿಯುವರೆಗೂ ಯಾವುದೇ ಅಧಿಕಾರಿಗಳನ್ನು ವರ್ಗಾಯಿಸುವಂತಿಲ್ಲ ಎಂದು ಜನವರಿ 17 ರಂದು ರಾಜ್ಯಸರ್ಕಾರಕ್ಕೆ ಚುನಾವಣಾ ಆಯೋಗ ಪತ್ರ ಬರೆದಿತ್ತು. ಅದರೆ ಸರ್ಕಾರ ಸೋಮವಾರ 7 ಜಿಲ್ಲೆಗಳ ಜಿಲ್ಲಾಧಿಕಾರಿಗಳ ವರ್ಗಾವಣೆಗೆ ಆದೇಶಿದೆ. ಈ ಸಂಬಂಧ ಮಂಗಳವಾರ ವರ್ಗಾವಣೆ ಆದೇಶ ಹೊರಡಿಸಿದ್ದು ಯಾಕೆ ಎಂದು ಪ್ರಶ್ನಿಸಿ ವಿವರಣೆ ನೀಡುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿ ಅವರಿಗೆ ಚುನಾವಣಾ ಆಯೋಗ ಪತ್ರ ಬರೆದಿದೆ. ಇದನ್ನೂ ಓದಿ: ರಾಜಕೀಯದಿಂದ ದೂರ ಉಳಿದು ಉತ್ತಮ ಆಡಳಿತ ನೀಡುವುದಷ್ಟೇ ನನ್ನ ಗುರಿ: ಹಾಸನ ಡಿಸಿ ರೋಹಿಣಿ ಸಿಂಧೂರಿ
ಆಯೋಗದ ಪತ್ರದಲ್ಲಿ ಏನಿದೆ?
ಫೆಬ್ರವರಿ 28ಕ್ಕೆ ಮತದಾರರ ಪಟ್ಟಿ ಪರಿಷ್ಕರಣೆ ನಡೆಯಲಿದ್ದು, ಮತದಾರ ಪಟ್ಟಿ ಪರಿಷ್ಕರಣೆ ಮುಗಿಯುವವರೆಗೆ ವರ್ಗಾವಣೆ ಬೇಡ. ವರ್ಗಾವಣೆ ಆದೇಶ ಜಾರಿಯನ್ನು ಕೂಡಲೇ ನಿಲ್ಲಿಸಬೇಕು. ಚುನಾವಣಾ ಪ್ರಕ್ರಿಯೆಯಲ್ಲಿ ತೊಡಗಿರುವವರನ್ನ ಅದೇ ಸ್ಥಾನದಲ್ಲಿ ಮುಂದುವರಿಸಬೇಕು. ವರ್ಗಾವಣೆ ಬಗ್ಗೆ ಕೇಂದ್ರ ಚುನಾವಣಾ ಆಯೋಗದ ಗಮನಕ್ಕೆ ತರಬೇಕು. ವರ್ಗಾಯಿತ ಜಿಲ್ಲೆಗಳಿಗೆ ತೆರಳದಂತೆ 7 ಜಿಲ್ಲಾಧಿಕಾರಿಗಳಿಗೂ ಆಯೋಗ ಸೂಚನೆ ನೀಡಿದೆ. ಇದನ್ನೂ ಓದಿ: ಹಣ ಹೊಡೆಯಲು ಬಿಟ್ಟಿಲ್ಲ ಅಂತ ಹೆಣ್ಮಗಳ ವರ್ಗ, ಸಿಎಂ ಜೊತೆ ವೇದಿಕೆ ಏರಲ್ಲ- ಸರ್ಕಾರಕ್ಕೆ ಥೂ ಎಂದು ಉಗಿದ ಹೆಚ್‍ಡಿಡಿ
ಈ ಬಗ್ಗೆ ಬೆಂಗಳೂರಲ್ಲಿ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಆಡಳಿತಾತ್ಮಕ ದೃಷ್ಟಿಯಿಂದ ವರ್ಗ ಮಾಡಿದ್ದೇವೆ. ಇದರಲ್ಲಿ ಯಾರ ಒತ್ತಡವೂ ಇಲ್ಲ, ಯಾವ ರಾಜಕೀಯವೂ ಇಲ್ಲ. ಮಹಿಳಾ ಅಧಿಕಾರಿಗಳನ್ನು ವರ್ಗಾವಣೆ ಮಾಡಬಾರದಾ? ಕೋಲಾರ, ಮಂಡ್ಯದಲ್ಲಿ ಮಹಿಳಾ ಡಿಸಿಗಳು ಇಲ್ವಾ? ನಮ್ಮ ವಿರೋಧಿಗಳು ಪ್ರತಿಭಟನೆ ಮಾಡ್ತಿದ್ದಾರೆ ಅಷ್ಟೇ ಅಂತ ಹೇಳಿದ್ರು.
ಇತ್ತೀಚೆಗೆ ಹಾಸನ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದ ರೋಹಿಣಿ ಸಿಂಧೂರಿ ದಾಸರಿ ಅವರನ್ನು ವರ್ಗಾವಣೆಗೊಳಿಸಿ ಆದೇಶ ಹೊರಬಿದ್ದಿದೆ. ಜಿಲ್ಲೆಯಲ್ಲಿ ಕಳೆದ ನಾಲ್ಕು ವರ್ಷಗಳಲ್ಲಿ ಇದು ಐದನೇ ಜಿಲ್ಲಾಧಿಕಾರಿಯ ವರ್ಗಾವಣೆಯಾಗಿದೆ. ಈ ಹಿಂದೆ 2014ರಿಂದ ಈಚೆಗೆ ಜಿಲ್ಲೆಯಿಂದ ಎತ್ತಂಗಡಿಯಾದ ಜಿಲ್ಲಾಧಿಕಾರಿಗಳೆಂದರೆ ಮೋಹನ್ ರಾಜ್, ಅನ್ಬುಕುಮಾರ್, ಉಮೇಶ್ ಕುಸುಗಲ್,ವಿ.ಚೈತ್ರಾ ಮತ್ತು ರೋಹಿಣಿ ಸಿಂಧೂರಿ. ಇದನ್ನೂ ಓದಿ: ಹಣ ಹೊಡೆಯಲು ಬಿಟ್ಟಿಲ್ಲ ಅಂತ ಹೆಣ್ಮಗಳ ವರ್ಗ, ಸಿಎಂ ಜೊತೆ ವೇದಿಕೆ ಏರಲ್ಲ- ಸರ್ಕಾರಕ್ಕೆ ಥೂ ಎಂದು ಉಗಿದ ಹೆಚ್‍ಡಿಡಿ
ಮಂಡ್ಯ ಜಿಲ್ಲಾ ಪಂಚಾಯಿತಿ ಸಿಈಓ ಆಗಿದ್ದ ರೋಹಿಣಿ ಐದು ತಿಂಗಳ ಹಿಂದೆ ಹಾಸನ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. 2009ರ ಬ್ಯಾಚ್‍ನ ಐಎಎಸ್ ಅಧಿಕಾರಿಯಾಗಿರುವ ಸಿಂಧೂರಿ ಹಾಸನಕ್ಕೆ ಬಂದ ಕೂಡಲೆ ಕೆಲ ಆಡಳಿತಾತ್ಮಕ ಕೆಲಸಗಳ ಮೂಲಕ ಸಾರ್ವಜನಿಕರ ಪ್ರಶಂಸೆ ಗಳಿಸಿದ್ದರು. ಜೊತೆಗೆ ಹಾಸನಾಂಬೆ ದರ್ಶನೋತ್ಸವದಲ್ಲಿ ಕೆಲ ಕ್ರಮಗಳನ್ನು ಕೈಗೊಂಡಿದ್ದ ರೋಹಿಣಿ ಮೆಚ್ಚುಗೆ ಗಳಿಸಿದ್ದರು. ಮುಂದಿನ ತಿಂಗಳು ನಡೆಯಲಿರುವ ಬಾಹುಬಲಿಯ ಮಸ್ತಕಾಭಿಷೇಕದ ಯಶಸ್ಸಿಗೆ ಸಾಕಷ್ಟು ಶ್ರಮವಹಿಸಿದ್ದರು. ಆದ್ರೆ ಈಗ ಏಕಾಏಕಿ ವರ್ಗಾವಣೆ ಆಗಿರೋದು ಜಿಲ್ಲೆಯಲ್ಲಿ ಚರ್ಚೆಗೆ ಕಾರಣವಾಗಿದೆ. ಇದನ್ನೂ ಓದಿ: ಕೈ ನಾಯಕರ ದೂರಿನ ಬೆನ್ನಲ್ಲೇ ಹಾಸನ ಡಿಸಿ ರೋಹಿಣಿ ಸಿಂಧೂರಿ ಎತ್ತಂಗಡಿ
ಡಿಸಿ ವರ್ಗಾವಣೆ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವರೂ ಸೇರಿದಂತೆ ಕಾಂಗ್ರೆಸ್ ನಾಯಕರ ಚಿತಾವಣೆ ಅಡಗಿದೆ ಎನ್ನುವ ಮಾತು ಕೇಳಿ ಬರುತ್ತಿದೆ. ಕಳೆದ 10 ರಂದು ಜಿಲ್ಲೆಗೆ ಆಗಮಿಸಿ ಇಲ್ಲಿಯೇ ವಾಸ್ತವ್ಯ ಹೂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ನವರಿಗೆ ಕಾರ್ಯಕರ್ತರ ಮುಖಾಂತರ ಒತ್ತಡ ತಂದು ಈ ವರ್ಗಾವಣೆ ಮಾಡಲಾಗಿದೆ ಎನ್ನುವ ಆರೋಪ ಕೇಳಿಬರುತ್ತಿದೆ.
ಬೆಂಗಳೂರು: ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆಗೆ ಮಾಜಿ ಪ್ರಧಾನಿ ಹೆಚ್‍ಡಿ ದೇವೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶ್ರವಣಬೆಳಗೊಳದಲ್ಲಿ ನಡೆಯೋ ಮಹಾಮಸ್ತಕಾಭಿಷೇಕದಲ್ಲಿ ಹಣ ಹೊಡೆಯಲು ಬಿಟ್ಟಿಲ್ಲ ಅಂತಾ ಹೆಣ್ಮಗಳನ್ನು ವರ್ಗ ಮಾಡಿದ್ದಾರೆ ಅಂತ ವಾಗ್ದಾಳಿ ನಡೆಸಿದ್ದಾರೆ.
ಈ ಬಗ್ಗೆ ಬೆಂಗಳೂರಿನ ತಮ್ಮ ನಿವಾಸದಲ್ಲಿ ಪ್ರತಿಕ್ರಿಯಿಸಿದ ದೇವೇಗೌಡರು, ಪ್ರಾಮಾಣಿಕ ಅಧಿಕಾರಿಯನ್ನು ಸರ್ಕಾರ ವರ್ಗ ಮಾಡಿದೆ. ಅವರು ಬಂದು ಆರು ತಿಂಗಳು ಕೂಡಾ ಆಗಿಲ್ಲ. ಈ ಹಿಂದಿನ ಡಿಸಿಗೂ ಕೂಡ ಸರ್ಕಾರ ಹೀಗೆಯೇ ಮಾಡಿದೆ. ಮಹಾಮಸ್ತಕಾಭಿಷೇಕದ ಸಿದ್ಧತೆ ಕೆಲಸ ನಡೆಯುತ್ತಿದೆ. ಇದರಲ್ಲಿ ಹಣ ಹೊಡೆಯಲು ಆ ಹೆಣ್ಣುಮಗಳು ಬಿಡಲಿಲ್ಲ. ಅಲ್ಲಿನ ಉಸ್ತುವಾರಿ ಸಚಿವರು ಏನ್ ಮಾಡ್ತಿದ್ದಾರೆ ಅಂತಾ ಗೊತ್ತು. ಇಂಥ ಪವಿತ್ರ ಕಾರ್ಯದಲ್ಲೂ ಪರ್ಸಂಟೇಜ್ ಬೇಕಾ ಅಂತ ಪ್ರಶ್ನಿಸಿದ್ರು. ಇದನ್ನೆಲ್ಲ ತಡೆಯಲು ಮುಂದಾಗಿದ್ದಕ್ಕೇ ವರ್ಗಾವಣೆ ಮಾಡಿದ್ದಾರೆ ಎಂದು ಹೇಳಿದ್ರು.
ಸಿಎಂ ಸಿದ್ದರಾಮಯ್ಯ ಜೊತೆಗೆ ನಾನು ವೇದಿಕೆ ಹಂಚಿಕೊಳ್ಳಲ್ಲ. ಈ ಹಿನ್ನೆಲೆಯಲ್ಲಿ ಫೆಬ್ರವರಿ 7ರಂದು ನಡೆಯೋ ಮಹಾಮಸ್ತಾಭಿಷೇಕ ಉದ್ಘಾಟನೆಗೆ ಹೋಗಲ್ಲ. ಈ ಬಗ್ಗೆ ರಾಷ್ಟ್ರಪತಿಗೂ ಪತ್ರ ಬರೆಯುತ್ತೇನೆ ಅಂತ ಹೇಳಿದ್ರು.
ಹಾಸನ ಜಿಲ್ಲೆಯಲ್ಲಿ ಜೆಡಿಎಸ್ ಮುಗಿಸೋದಕ್ಕೆ ಏನ್ ಮಾಡಬೇಕು ಅಂದಾಗ ಡಿಸಿ ರೋಹಿಣಿ ಸಿಂಧೂರಿ ವರ್ಗ ಮಾಡಬೇಕು ಅಂದ್ರಂತೆ. ನಾನು ಆಕೆಯನ್ನು ಡಿಸಿ ಕಚೇರಿಯಲ್ಲಿ ಒಮ್ಮೆ ಭೇಟಿಯಾಗಿದ್ದೆ ಅಷ್ಟೆ ಎಂದು ಹೇಳಿದ್ರು. ಇದನ್ನೂ ಓದಿ: ಕೈ ನಾಯಕರ ದೂರಿನ ಬೆನ್ನಲ್ಲೇ ಹಾಸನ ಡಿಸಿ ರೋಹಿಣಿ ಸಿಂಧೂರಿ ಎತ್ತಂಗಡಿ
ಥೂ ಎಂದು ಉಗಿದ ಹೆಚ್‍ಡಿಡಿ: ಇದೇ ವೇಳೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಹೆಚ್‍ಡಿಡಿ, ಪೊಲೀಸರೇ ರಕ್ಷಣೆ ಕೋರಿ ಗೃಹ ಕಾರ್ಯದರ್ಶಿಗೆ ಮನವಿ ಮಾಡುತ್ತಾರೆ. ಕೆಂಪಯ್ಯ ನವರ ಅಧಿಕಾರದಲ್ಲಿ ನಾವು ಕೆಲಸ ಮಾಡಲು ಸಾಧ್ಯವಿಲ್ಲ. ಜನ ಹೊಡಿತಾರೆ ಅಂತಾ ಪೊಲೀಸರೇ ಮನವಿ ಮಾಡುತ್ತಿದ್ದಾರೆ ಅಂದ್ರೆ ಇದನ್ನು ಯಾರಾದ್ರೂ ಸರ್ಕಾರ ಅಂತಾ ಕರೆಯಲು ಸಾಧ್ಯವೇ? ನಾ ಕಂಡ ಅತ್ಯಂತ ಕೆಟ್ಟ ಸರ್ಕಾರ ಇದು. ಮಾಜಿ ಪ್ರಧಾನಿ ಜಿಲ್ಲೆಯಲ್ಲೇ ಕಲೆಕ್ಷನ್ ಮಾಡಕ್ಕೆ ಅವಕಾಶ ಕೊಡಲ್ಲ ಅಂತಾ ಡಿಸಿ ವರ್ಗಾವಣೆ ಮಾಡ್ತಾರೆ ಅಂದ್ರೆ ಥೂ…. ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಎರಡೆರಡು ಬಾರಿ ಥೂ ಎಂದು ಉಗಿದರು.
ಜನವರಿ 25 ಮತ್ತು ಫೆ. 4ರಂದು ಕರೆ ನೀಡಿರುವ ಬಂದ್‍ಗೆ ಜೆಡಿಎಸ್ ವಿರೋಧಿಸುವುದಿಲ್ಲ. ಈ ಬಂದ್‍ಗಳಿಂದ ಮಹಾದಾಯಿ ಸಮಸ್ಯೆ ವಿವಾದಕ್ಕೆ ಪರಿಹಾರ ಸಿಗಲ್ಲ. ಇದನ್ನು ಸರ್ಕಾರಿ ಪ್ರೇರಿತ ಬಂದ್ ಎನ್ನುತ್ತಿದ್ದಾರೆ ಎಂದರು.
ಬೆಂಗಳೂರು: ಕಾಂಗ್ರೆಸ್ ಕಾರ್ಯಕರ್ತರು ದೂರು ನೀಡಿದ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ಎತ್ತಂಗಡಿ ಮಾಡಲಾಗಿದೆ.
ರೋಹಿಣಿ ಸಿಂಧೂರಿ ಅವರನ್ನು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ(ಕೆಎಸ್‍ಐಐಡಿಸಿ) ಆಡಳಿತ ನಿರ್ದೇಶಕಿಯನ್ನಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ. ರೋಹಿಣಿ ಅವರ ಜಾಗಕ್ಕೆ ಹಾವೇರಿ ಜಿಲ್ಲಾಧಿಕಾರಿಯಾಗಿದ್ದ ಎಂ.ವಿ. ವೆಂಕಟೇಶ್ ಅವರನ್ನು ನೇಮಿಸಲಾಗಿದೆ.
ಕೈ ನಾಯಕರಿಂದ ದೂರು:
ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಹಾಸನ ಭೇಟಿ ಸಂದರ್ಭದಲ್ಲಿ ಸ್ಥಳೀಯ ಕಾಂಗ್ರೆಸ್‍ನ ಕೆಲ ನಾಯಕರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ವರ್ಗಾವಣೆಗೆ ಆಗ್ರಹಿಸಿದ್ದಾರೆ ಎನ್ನುವ ಸುದ್ದಿ ಸದ್ದು ಮಾಡಿತ್ತು. ಜನವರಿ 4ರಂದು ಹಾಸನದ ಮೂರು ಕಡೆ ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಿದ ಸಿಎಂ ಅಂದು ರಾತ್ರಿ ನಗರದ ಪ್ರವಾಸಿ ಮಂದಿರದಲ್ಲಿ ತಂಗಿದ್ದರು. ಈ ಸಂದರ್ಭದಲ್ಲಿ ಸಿಎಂ ರನ್ನು ಭೇಟಿ ಮಾಡಿದ ಹಲವು ನಾಯಕರು, ಜಿಲ್ಲಾಧಿಕಾರಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಹೇಳಿದ್ದರು. ಜೊತೆಗೆ ಉಸ್ತುವಾರಿ ಸಚಿವರಾದ ಎ. ಮಂಜು, ವಿಧಾನ ಪರಿಷತ್ ಸದಸ್ಯ ಗೋಪಾಲಸ್ವಾಮಿ ಸೇರಿದಂತೆ ಹಲವು ನಾಯಕರು ರೋಹಿಣಿ ಅವರ ವರ್ಗಾವಣೆಗೆ ಆಗ್ರಹಿಸಿದ್ದಾರೆ ಎನ್ನುವ ಮಾತು ಕೇಳಿಬಂದಿತ್ತು.
ಈ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ದ ಕಾಂಗ್ರೆಸ್ ನಾಯಕರು, ನಾವು ವರ್ಗಾವಣೆಗೆ ಆಗ್ರಹಿಸಿಲ್ಲ. ಬದಲಾಗಿ ಅವರು ಸಾರ್ವಜನಿಕರ ಸಮಸ್ಯೆಗಳಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ಅದನ್ನು ಸರಿಮಾಡುವಂತೆ ಮುಖ್ಯಮಂತ್ರಿಗಳಿಗೆ ಆಗ್ರಹಿಸಿರುವುದು ನಿಜ ಎಂದು ಹೇಳಿದ್ದರು. ಡಿಸಿ ಪರ ಬ್ಯಾಟಿಂಗ್ ಮಾಡಿದ್ದ ಜಿಲ್ಲೆಯ ಜೆಡಿಎಸ್ ನಾಯಕರು, ಮಸ್ತಕಾಭಿಷೇಕ ಕಾಮಗಾರಿಗಳಲ್ಲಿ ಹಣ ಗುಳುಂ ಮಾಡಲು ಅವಕಾಶ ನೀಡುತ್ತಿಲ್ಲ. ಅದಕ್ಕಾಗಿ ರೋಹಿಣಿ ಅವರ ವರ್ಗಾವಣೆಗೆ ಆಗ್ರಹಿಸಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಇದನ್ನೂ ಓದಿ: ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಕಾರ್ಯಕ್ಕೆ ಸಿಎಂ ಅಭಿನಂದನೆ
ಯಾರು ರೋಹಿಣಿ ಸಿಂಧೂರಿ?:
ಈ ಹಿಂದೆ ಮಂಡ್ಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಹಲವಾರು ಜನೋಪಯೋಗಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದ್ದರು. ರಾಜ್ಯದಲ್ಲಿ ಮೊದಲ ಬಾರಿಗೆ ಭೂ ದಾಖಲೆಗಳ ಕುರಿತಂತೆ ವಿನ್ಯಾಸಗೊಂಡಿರುವ ಎಂ-ಆಸ್ತಿ ಅಪ್ಲಿಕೇಷನ್ ತಂದಿದ್ದರು. ಬಯಲು ಶೌಚಾಲಯ ಮುಕ್ತ ಜಿಲ್ಲೆಯನ್ನಾಗಿ ರೂಪಿಸಲು ಪಣ ತೊಟ್ಟಿದ್ದ ರೋಹಿಣಿ ಸಿಂಧೂರಿ ಅವರು ಹಳ್ಳಿ ಹಳ್ಳಿಗೆ ಹೋಗಿ, ಬಯಲು ಶೌಚಕ್ಕೆ ಹೋಗುವವರಿಗೆ ಶೌಚಾಲಯ ಬಳಸುವಂತೆ ತಿಳುವಳಿಕೆ ಹೇಳುವ ಮೂಲಕ ವಿಶೇಷ ಅಭಿಯಾನ ಮಾಡುತ್ತಿದ್ದರು.
ನಿರ್ಮಲ್ ಭಾರತ್ ಯೋಜನೆಯಡಿ ಸುಮಾರು ಒಂದು ಲಕ್ಷಕ್ಕೂ ಅಧಿಕ ಶೌಚಾಲಯ ನಿರ್ಮಾಣ ಗುರಿ ಸಾಧಿಸಿದ್ದ ಇವರ ಅಧಿಕಾರ ಅವಧಿಯಲ್ಲಿ ಶೌಚಾಲಯ ನಿರ್ಮಾಣದಲ್ಲಿ ಮಂಡ್ಯ ಜಿಲ್ಲೆ ಭಾರತದಲ್ಲಿ ಎರಡನೇ ಸ್ಥಾನದಲ್ಲಿದ್ದರೆ, ಕರ್ನಾಟಕದಲ್ಲಿ ಪ್ರಥಮ ಸ್ಥಾನ ಪಡೆದಿತ್ತು. ಸಿಇಓ ಅವರ ಕಾರ್ಯ ವೈಖರಿಯನ್ನು ನೋಡಿ ಮಂಡ್ಯದ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದರು.
2015ರ ಸೆಪ್ಟೆಂಬರ್ ನಲ್ಲಿ ರೋಹಿಣಿ ಸಿಂಧೂರಿ ಅವರನ್ನು ಸರ್ಕಾರ ಆಹಾರ ನಿಗಮದ ವ್ಯವಸ್ಥಾಪಕ ನಿರ್ದೇಶಕಿಯಾಗಿ ನೇಮಿಸಿ ವರ್ಗಮಾಡಿತ್ತು. ಈಗ ಅಲ್ಲಿಂದ ಮೊದಲ ಬಾರಿಗೆ ಜಿಲ್ಲಾಧಿಕಾರಿಯಾಗಿ ಹಾಸನಕ್ಕೆ ಬಂದಿದ್ದರು. ಕಳೆದ 2017ರ ಜುಲೈ 14ರಿಂದ ಹಾಸನದ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದ ಇವರು ಅಲ್ಪಾವಧಿಯಲ್ಲಿ ದಕ್ಷ ಆಡಳಿತಾಧಿಕಾರಿ ಎಂದು ಹೆಸರು ಪಡೆದುಕೊಂಡಿದ್ದರು. ತಮ್ಮ ಕೆಲಸದಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಪ್ರಶಸ್ತಿಯನ್ನು ಪಡೆದಿದ್ದರು. ಶ್ರವಣಬೆಳಗೋಳ ಮಹಾಮಸ್ತಕಾಭಿಷೇಕ ಸೇರಿದಂತೆ ಹಾಸನದ ಹಲವು ಯೋಜನೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು ಕ್ರಿಯಾಶೀಲರಾಗಿದ್ದರು.
ಹಾಸನ: ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಹಾಸನ ಭೇಟಿ ಸಂದರ್ಭದಲ್ಲಿ ಸ್ಥಳೀಯ ಕಾಂಗ್ರೆಸ್‍ನ ಕೆಲ ನಾಯಕರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ವರ್ಗಾವಣೆಗೆ ಆಗ್ರಹಿಸಿದ್ದಾರೆ ಎನ್ನುವ ಸುದ್ದಿ ಸದ್ದು ಮಾಡಿದೆ.
ಹೌದು. ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅಲ್ಪಾವಧಿಯಲ್ಲಿ ದಕ್ಷ ಆಡಳಿತಾಧಿಕಾರಿ ಎಂದು ಹೆಸರು ಪಡೆದುಕೊಂಡಿರುವವರು. ಮಂಡ್ಯ ಜಿಲ್ಲೆಯ ಸಿಐಓ ಆಗಿದ್ದ ರೋಹಿಣಿ ಕಳೆದ 2017ರ ಜುಲೈ 14ರಿಂದ ಹಾಸನದ ಜಿಲ್ಲಾಧಿಕಾರಿಯಾಗಿದ್ದಾರೆ. ಅಂದ್ರೆ ನಾಲ್ಕು ತಿಂಗಳಿನಿಂದ ಹಾಸನ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತಿದ್ದಾರೆ. ತಮ್ಮ ಕೆಲಸದಿಂದಾಗಿ ಈಗಾಗಲೇ ರಾಜ್ಯದ ಮುಖ್ಯಮಂತ್ರಿಯಿಂದಲೇ ಪ್ರಶಸ್ತಿಯನ್ನು ಪಡೆದಿದ್ದಾರೆ. ಶ್ರವಣಬೆಳಗೋಳ ಮಹಾಮಸ್ತಕಾಭಿಷೇಕ ಸೇರಿದಂತೆ ಹಾಸನದ ಹಲವು ಯೋಜನೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು ಕ್ರಿಯಾಶೀಲರಾಗಿದ್ದಾರೆ. ಆದ್ರೆ ಇತ್ತೀಚೆಗೆ ಹಾಸನ ಜಿಲ್ಲೆಗೆ ಮುಖ್ಯಮಂತ್ರಿಗಳು ಭೇಟಿ ನೀಡಿದ ಸಂದರ್ಭದಲ್ಲಿ ಸ್ಥಳೀಯ ಕಾಂಗ್ರೆಸ್ ನಾಯಕರು ಜಿಲ್ಲಾಧಿಕಾರಿ ವರ್ಗಾವಣೆಗೆ ಆಗ್ರಹಿಸಿದ್ದಾರೆ ಎನ್ನಲಾಗಿದೆ.
ಜನವರಿ 4ರಂದು ಹಾಸನದ ಮೂರು ಕಡೆ ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಿದ ಸಿಎಂ ಅಂದು ರಾತ್ರಿ ನಗರದ ಪ್ರವಾಸಿ ಮಂದಿರದಲ್ಲಿ ತಂಗಿದ್ದರು. ಈ ಸಂದರ್ಭದಲ್ಲಿ ಸಿಎಂ ರನ್ನು ಭೇಟಿ ಮಾಡಿದ ಹಲವು ನಾಯಕರು, ಜಿಲ್ಲಾಧಿಕಾರಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಹೇಳಿದ್ದಾರೆ. ಜೊತೆಗೆ ಉಸ್ತುವಾರಿ ಸಚಿವರಾದ ಎ.ಮಂಜು, ವಿಧಾನ ಪರಿಷತ್ ಸದಸ್ಯ ಗೋಪಾಲಸ್ವಾಮಿ ಸೇರಿದಂತೆ ಹಲವು ನಾಯಕರು ರೋಹಿಣಿ ಅವರ ವರ್ಗಾವಣೆಗೆ ಆಗ್ರಹಿಸಿದ್ದಾರೆ ಎನ್ನುವ ಗುಸುಗುಸು ಕೇಳಿಬರುತ್ತಿದೆ.
ಆದ್ರೆ ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನಾಯಕರು, ನಾವು ವರ್ಗಾವಣೆಗೆ ಆಗ್ರಹಿಸಿಲ್ಲ. ಬದಲಾಗಿ ಅವರು ಸಾರ್ವಜನಿಕರ ಸಮಸ್ಯೆಗಳಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ಅದನ್ನು ಸರಿಮಾಡುವಂತೆ ಮುಖ್ಯಮಂತ್ರಿಗಳಿಗೆ ಆಗ್ರಹಿಸಿರುವುದು ನಿಜ ಎಂದಿದ್ದಾರೆ.
ಡಿಸಿ ಪರ ಬ್ಯಾಟಿಂಗ್ ಮಾಡುತ್ತಿರುವ ಜಿಲ್ಲೆಯ ಜೆಡಿಎಸ್ ನಾಯಕರು, ಮಸ್ತಕಾಭಿಷೇಕ ಕಾಮಗಾರಿಗಳಲ್ಲಿ ಹಣ ಗುಳುಂ ಮಾಡಲು ಅವಕಾಶ ನೀಡುತ್ತಿಲ್ಲ. ಅದಕ್ಕಾಗಿ ರೋಹಿಣಿ ಅವರ ವರ್ಗಾವಣೆಗೆ ಆಗ್ರಹಿಸಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಯಾರು ರೋಹಿಣಿ ಸಿಂಧೂರಿ?: ಈ ಹಿಂದೆ ಮಂಡ್ಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಹಲವಾರು ಜನೋಪಯೋಗಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದ್ದರು. ರಾಜ್ಯದಲ್ಲಿ ಮೊದಲ ಬಾರಿಗೆ ಭೂ ದಾಖಲೆಗಳ ಕುರಿತಂತೆ ವಿನ್ಯಾಸಗೊಂಡಿರುವ ಎಂ -ಆಸ್ತಿ ಅಪ್ಲಿಕೇಷನ್ ತಂದಿದ್ದರು. ಬಯಲು ಶೌಚಾಲಯ ಮುಕ್ತ ಜಿಲ್ಲೆಯನ್ನಾಗಿ ರೂಪಿಸಲು ಪಣ ತೊಟ್ಟಿದ್ದ ರೋಹಿಣಿ ಸಿಂಧೂರಿ ಅವರು ಹಳ್ಳಿ ಹಳ್ಳಿಗೆ ಹೋಗಿ, ಬಯಲು ಶೌಚಕ್ಕೆ ಹೋಗುವವರಿಗೆ ಶೌಚಾಲಯ ಬಳಸುವಂತೆ ತಿಳುವಳಿಕೆ ಹೇಳುವ ಮೂಲಕ ವಿಶೇಷ ಅಭಿಯಾನ ಮಾಡುತ್ತಿದ್ದರು.
ನಿರ್ಮಲ್ ಭಾರತ್ ಯೋಜನೆಯಡಿ ಸುಮಾರು ಒಂದು ಲಕ್ಷಕ್ಕೂ ಅಧಿಕ ಶೌಚಾಲಯ ನಿರ್ಮಾಣ ಗುರಿ ಸಾಧಿಸಿದ್ದ ಇವರ ಅಧಿಕಾರ ಅವಧಿಯಲ್ಲಿ ಶೌಚಾಲಯ ನಿರ್ಮಾಣದಲ್ಲಿ ಮಂಡ್ಯ ಜಿಲ್ಲೆ ಭಾರತದಲ್ಲಿ ಎರಡನೇ ಸ್ಥಾನದಲ್ಲಿದ್ದರೆ, ಕರ್ನಾಟಕದಲ್ಲಿ ಪ್ರಥಮ ಸ್ಥಾನ ಪಡೆದಿತ್ತು. ಸಿಇಓ ಅವರ ಕಾರ್ಯ ವೈಖರಿಯನ್ನು ನೋಡಿ ಮಂಡ್ಯದ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದರು.
2015ರ ಸೆಪ್ಟೆಂಬರ್ ನಲ್ಲಿ ರೋಹಿಣಿ ಸಿಂಧೂರಿ ಅವರನ್ನು ಸರ್ಕಾರ ಆಹಾರ ನಿಗಮದ ವ್ಯವಸ್ಥಾಪಕ ನಿರ್ದೇಶಕಿಯಾಗಿ ನೇಮಿಸಿ ವರ್ಗಮಾಡಿತ್ತು. ಈಗ ಅಲ್ಲಿಂದ ಮೊದಲ ಬಾರಿಗೆ ಜಿಲ್ಲಾಧಿಕಾರಿಯಾಗಿ ಹಾಸನಕ್ಕೆ ಬಂದಿದ್ದಾರೆ.
ಹಾಸನ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ತಂತ್ರಜ್ಞಾನ ಆಧಾರಿತ ಬೆಳೆ ಸಮೀಕ್ಷೆ ಕಾರ್ಯದಲ್ಲಿ ಜಿಲ್ಲೆ ಗಣನೀಯ ಸಾಧನೆ ಮಾಡಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿದ್ದಾರೆ.
ಜಿಲ್ಲೆ ಈಗಾಗಲೇ ಶೇ.80 ಕ್ಕೂ ಅಧಿಕ ಪ್ಲಾಟ್‍ಗಳು ಮುಕ್ತಾಯಗೊಂಡಿದ್ದು, ರೋಹಿಣಿ ಸಿಂಧೂರಿ ಅವರ ಮಾರ್ಗದರ್ಶನ ಹಾಗೂ ನಿರ್ದೇಶನದಂತೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ 900ಕ್ಕೂ ಅಧಿಕ ಸಿಬ್ಬಂದಿ, ಪ್ರತಿದಿನ 14 ಗಂಟೆಗಳು ನಿರಂತರ ಕೆಲಸ ಮಾಡಿ ಬೆಳೆ ಸಮೀಕ್ಷೆ ದಾಖಲೆಯನ್ನು ಬಹುತೇಕ ಮುಕ್ತಾಯಗೊಳಿಸಿದ್ದಾರೆ. ಇದರಿಂದ ತ್ವರಿತವಾಗಿ ಪ್ರಗತಿ ಸಾಧಿಸಿದ ಕಾರಣದಿಂದ ಸಿದ್ದರಾಮಯ್ಯ ಅವರು ಅಭಿನಂದಿಸಿದ್ದಾರೆ.
ಏನಿದು ಸಮೀಕ್ಷೆ?
ಮೊಬೈಲ್ ಆ್ಯಪ್ ಆಧಾರಿತ ಬೆಳೆ ಸಮೀಕ್ಷೆ ಇದಾಗಿದ್ದು, ಪ್ರತಿ ಗ್ರಾಮವಾರು ಸರ್ವೆ ನಂ.ವಾರು ಬೆಳೆಗಳ ವಿವರಗಳನ್ನು ದಾಖಲಿಸಿ ತಂತ್ರಾಂಶದ ಜೊತೆ ಫೋಟೋಗಳನ್ನು ಸಹ ಅಪ್ಲೋಡ್ ಮಾಡಲಾಗುತ್ತಿದೆ.
ಜಿಲ್ಲೆಯ 2,581 ಗ್ರಾಮಗಳಲ್ಲಿ ಬೆಳೆ ಸಮೀಕ್ಷೆ ಕೈಗೊಂಡಿದ್ದು, ಗ್ರಾಮ ಸಹಾಯಕರು, ಲೆಕ್ಕಿಗರು, ಕಂದಾಯ ನಿರೀಕ್ಷಕರು, ತೋಟಗಾರಿಕೆ ಮತ್ತು ಕೃಷಿ ಅಧಿಕಾರಿಗಳು ಒಳಗೊಂಡಂತೆ ಸುಮಾರು 930 ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಇದರಂತೆ ಇಲ್ಲಿವರೆಗೂ ಸುಮಾರು 11,43,891 ಪ್ಲಾಟ್‍ಗಳ ಮಾಹಿತಿಯನ್ನು ಕ್ರೋಢಿಕರಿಸಿ ಅದನ್ನು ಆ್ಯಪ್ ಗೆ ಅಪ್ಲೋಡ್ ಮಾಡಲಾಗಿದೆ.
ಇಡೀ ರಾಜ್ಯದಲ್ಲೇ ಅತಿಹೆಚ್ಚು ಪ್ಲಾಟ್‍ಗಳಲ್ಲಿ ಡೇಟಾ ಕ್ರೋಢಿಕರಿಸಿ ಮಾಹಿತಿ ಅಪ್‍ಡೇಟ್ ಮಾಡಿರುವುದರಲ್ಲಿ ಹಾಸನ ಜಿಲ್ಲೆ ಮುಂಚೂಣಿಯಲ್ಲಿರುವುದು ಹೆಗ್ಗಳಿಕೆಯ ವಿಚಾರವಾಗಿದೆ. ಹಾಸನದ ತಾಲೂಕು ಒಂದರಲ್ಲಿಯೇ ಸುಮಾರು 205 ಜನರನ್ನು ಗಣತಿ ಕಾರ್ಯಕ್ಕೆ ನಿಯೋಜಿಸಲಾಗಿತ್ತು. ಇರುವ 2.95 ಲಕ್ಷ ಪ್ಲಾಟ್‍ಗಳಲ್ಲಿ 5 ಗುಂಟೆಗಿಂತ ಕಡಿಮೆ ಇರುವ ಹಾಗೂ ಕೃಷಿಯೇತರ ಉದ್ದೇಶಕ್ಕೆ ಬಳಸಲಾಗಿರುವ ಜಮೀನುಗಳನ್ನು ಹೊರತುಪಡಿಸಿ ಈಗಾಗಲೇ 2.22 ಪ್ಲಾಟ್‍ಗಳ ಸರ್ವೇ ಕಾರ್ಯ ಮುಗಿದಿದೆ ಎಂದು ಹಾಸನ ತಹಶೀಲ್ದಾರ್ ಶಿವಶಂಕರ್ ಅವರು ತಿಳಿಸಿದ್ದಾರೆ.
ಸಾತೇನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊಂಡಗೌಡನಹಳ್ಳಿ ಗ್ರಾಮದಲ್ಲಿ ಇಂದು ತಹಶೀಲ್ದಾರ್ ಶಿವಶಂಕರ್ ಹಾಗೂ ಗ್ರಾಮ ಲೆಕ್ಕಿಗರಾದ ಸೋಮಶೇಖರ್ ಅವರು ಬೆಳೆ ಸಮೀಕ್ಷೆ ಸಂದರ್ಭದಲ್ಲಿ ಅನುಸರಿಸಲಾಗಿರುವ ಮಾರ್ಗಗಳನ್ನು ತಿಳಿಸಿದ್ದಾರೆ. ಪ್ರತಿಯೊಂದು ಗ್ರಾಮದ ಎಲ್ಲಾ ಪಹಣಿ ವಿವರಗಳನ್ನು ಮೊಬೈಲ್ ನಲ್ಲಿ ಡೌನ್‍ಲೋಡ್ ಮಾಡಿ ನಿಗದಿಪಡಿಸಿರುವ ತಂತ್ರಾಂಶದಲ್ಲಿ ಬೆಳೆ ವಿವರ ಹಾಗೂ ಆಧಾರ್ ಸಂಖ್ಯೆಯನ್ನು ನಮೂದಿಸಲಾಗುವುದು. ಜೊತೆಗೆ ಮುಂಗಾರು, ಹಿಂಗಾರು, ಬೆಸಿಗೆ ಬೆಳೆ, ಮಿಶ್ರ ಬೆಳೆಗಳು ಬಿತ್ತನೆಯಾಗಿದೆಯೇ? ಕಟಾವು ಮಾಡಲಾಗಿದೆಯೇ? ಎಂಬ ಮಾಹಿತಿಯನ್ನು ಕೂಡ ದಾಖಲಿಸಲಾಗುವುದು ಎಂದು ವಿವರಿಸಿದ್ದಾರೆ.
ಉದ್ದೇಶ ಏನು?
ಜಮೀನು ಕ್ಷೇತ್ರವನ್ನು ವಿವಿಧ ಬೆಳೆ ಸ್ವರೂಪಗಳಿಗೆ ಸಮೀಕರಿಸವುದು. ವಿವಿಧ ಬೆಳೆಗಳಿಗೆ ಸರಿಯಾದ ಮೊತ್ತದ ಸಹಾಯ ಧನದ ಅಂದಾಜು ಪ್ರಕ್ರಿಯೆ, ಪ್ರಾಕೃತಿಕ ವಿಕೋಪಗಳ ಸಂದರ್ಭದಲ್ಲಿ ಫಸಲು ನಷ್ಟದ ನೈಜ ಅಂದಾಜು ಮತ್ತು ರೈತರಿಗೆ ಸಕಾಲಿಕ ಮತ್ತು ನ್ಯಾಯಯುತ ಪರಿಹಾರ ಪಾವತಿ ಮಾಡುವುದು. ಪಹಣಿ ಪತ್ರಿಕೆ ಮತ್ತು ವಿಮೆ ದಾಖಲೆಗಳಲ್ಲಿ ಪರಸ್ಪರ ನೈಜ ಮತ್ತು ದಾಖಲೆಗಳ ಪರಿಶೀಲಿಸಲಾಗುತ್ತದೆ.
ಯಾವೆಲ್ಲ ಮಾಹಿತಿ ಸಂಗ್ರಹಿಸಲಾಗುತ್ತದೆ?
ರೈತರ ಮಾಲೀಕತ್ವದ ವಿವರ, ಭೂಮಿಯ ವಿಧ, ಬೆಳೆ ಹೆಸರು, ನೀರಾವರಿ ಮೂಲ, ಬೆಳೆಯ ವಿಸ್ತೀರ್ಣ, ಬೆಳೆ (ಶುದ್ಧ, ಮಿಶ್ರ ಮತ್ತು ಅಂತರ ಬೆಳೆ, ತೋಟದ ಬೆಳೆ, ಪ್ಲಾಂಟೇಷನ್ ಬೆಳೆ, ಭಾಯಯತ ಬೆಳೆ) ಇತ್ಯಾದಿಗಳ ಮಾಹಿತಿ ನೀಡುವುದು. ಜಮೀನಿನ ಛಾಯಾಚಿತ್ರ ವಿವರಗಳನ್ನು ದಾಖಲಿಸಿ ಪ್ರತಿ ಸರ್ವೇ ನಂಬರ್/ ಹಿಸ್ಸಾದ ಜಿಯೋ ಕೋರ್ಡಿನೇಟ್ಸ್ (Geo Co-ordinates) ಮಾಡಲಾಗುತ್ತದೆ. ಬೆಳೆ ವಿವರದ ಜೊತೆಗೆ ಮಾಲೀಕರ ಆಧಾರ್ ವಿವರಗಳನ್ನೂ ಕೂಡ ದಾಖಲಿಸಲಾಗುತ್ತದೆ.
ಮಾಹಿತಿ ಸಂಗ್ರಹಣೆ ಹೇಗೆ?
ಮೊದಲಿಗೆ ಭೌಗೋಳಿಕ ಮಾಹಿತಿ ವ್ಯವಸ್ಥೆ (GIS) ಯೊಂದಿಗೆ ರೈತರ ಮತ್ತು ಬೆಳೆಯ ವಿವರಗಳ ಸಂಗ್ರಹಣೆ ಮಾಡುವುದು. ನಂತರ ಮೇಲ್ವಿಚಾರಕರಿಂದ Random ಸಮೀಕ್ಷೆ ನಡೆಸಿ ಆಯ್ಕೆ ಮಾಡಿದ ದಾಖಲೆಗಳ ಛಾಯಾಚಿತ್ರಗಳ ಪರಿಶೀಲಿಸಲಾಗುತ್ತದೆ. ಅವಶ್ಯಕತೆ ಇದ್ದಲ್ಲಿ ಡಾಟಾವನ್ನು ಸರಿಪಡಿಸಲಾಗುತ್ತದೆ. ಅಂತಿಮವಾಗಿ ಕ್ರೋಡೀಕೃತ ದಾಖಲೆಗಳನ್ನು ವಿವಿಧ ಇಲಾಖೆಗಳಿಂದ ಬಳಕೆ ಮಾಡಿಕೊಳ್ಳಲಾಗುತ್ತದೆ.
ಬೆಳೆ ಸಮೀಕ್ಷೆ – ತಾಲ್ಲೂಕುವಾರು ಪ್ರಗತಿ: (ನ. 16ರ ಅಂತ್ಯಕ್ಕೆ) ಆಲೂರು -ಶೇ98.89, ಬೇಲೂರು -ಶೇ86.02, ಅರಸೀಕೆರೆ -ಶೇ84.36, ಸಕಲೇಶಪುರ -ಶೇ83.74, ಹಾಸನ -ಶೇ75.47, ಚನ್ನರಾಯಪಟ್ಟಣ -ಶೇ74.10, ಅರಕಲಗೂಡು -ಶೇ 72.20 ಹಾಗೂ ಹೊಳೆನರಸೀಪುರ – ಶೇ65 ರಷ್ಟು ಪ್ರಗತಿಯನ್ನು ಸಾಧಿಸಲಾಗಿದೆ.
ಯಾರು ರೋಹಿಣಿ ಸಿಂಧೂರಿ?
ಈ ಹಿಂದೆ ಮಂಡ್ಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಹಲವಾರು ಜನೋಪಯೋಗಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದ್ದರು. ರಾಜ್ಯದಲ್ಲಿ ಮೊದಲ ಬಾರಿಗೆ ಭೂ ದಾಖಲೆಗಳ ಕುರಿತಂತೆ ವಿನ್ಯಾಸಗೊಂಡಿರುವ ಎಂ -ಆಸ್ತಿ ಅಪ್ಲಿಕೇಷನ್ ತಂದಿದ್ದರು.
ಬಯಲು ಶೌಚಾಲಯ ಮುಕ್ತ ಜಿಲ್ಲೆಯನ್ನಾಗಿ ರೂಪಿಸಲು ಪಣ ತೊಟ್ಟಿದ್ದ ರೋಹಿಣಿ ಸಿಂಧೂರಿ ಅವರು ಹಳ್ಳಿ ಹಳ್ಳಿಗೆ ಹೋಗಿ, ಬಯಲು ಶೌಚಕ್ಕೆ ಹೋಗುವವರಿಗೆ ಶೌಚಾಲಯ ಬಳಸುವಂತೆ ತಿಳುವಳಿಕೆ ಹೇಳುವ ಮೂಲಕ ವಿಶೇಷ ಅಭಿಯಾನ ಮಾಡುತ್ತಿದ್ದರು.
ನಿರ್ಮಲ್ ಭಾರತ್ ಯೋಜನೆಯಡಿ ಸುಮಾರು ಒಂದು ಲಕ್ಷಕ್ಕೂ ಅಧಿಕ ಶೌಚಾಲಯ ನಿರ್ಮಾಣ ಗುರಿ ಸಾಧಿಸಿದ್ದ ಇವರ ಅಧಿಕಾರ ಅವಧಿಯಲ್ಲಿ ಶೌಚಾಲಯ ನಿರ್ಮಾಣದಲ್ಲಿ ಮಂಡ್ಯ ಜಿಲ್ಲೆ ಭಾರತದಲ್ಲಿ ಎರಡನೇ ಸ್ಥಾನದಲ್ಲಿದ್ದರೆ, ಕರ್ನಾಟಕದಲ್ಲಿ ಪ್ರಥಮ ಸ್ಥಾನ ಪಡೆದಿತ್ತು. ಸಿಇಓ ಅವರ ಕಾರ್ಯ ವೈಖರಿಯನ್ನು ನೋಡಿ ಮಂಡ್ಯದ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದರು.
2015ರ ಸೆಪ್ಟೆಂಬರ್ ನಲ್ಲಿ ರೋಹಿಣಿ ಸಿಂಧೂರಿ ಅವರನ್ನು ಸರ್ಕಾರ ಆಹಾರ ನಿಗಮದ ವ್ಯವಸ್ಥಾಪಕ ನಿರ್ದೇಶಕಿಯಾಗಿ ನೇಮಿಸಿ ವರ್ಗಮಾಡಿತ್ತು. ಈಗ ಅಲ್ಲಿಂದ ಮೊದಲ ಬಾರಿಗೆ ಜಿಲ್ಲಾಧಿಕಾರಿಯಾಗಿ ಹಾಸನಕ್ಕೆ ಬಂದಿದ್ದಾರೆ.
ಹಾಸನ: ಒಂದು ವರ್ಷಕೊಮ್ಮೆ ಬಾಗಿಲು ತೆಗೆಯುವ ಮತ್ತು ಪವಾಡ ಮಹಿಮೆಗಳಿಂದ ಮನೆಮಾತಾಗಿರುವ ಹಾಸನಾಂಬೆಯ ಗರ್ಭಗುಡಿಯ ಬಾಗಿಲನ್ನು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಗುರುವಾರ ಮಧ್ಯಾಹ್ನ ತೆರೆಯಲಾಗಿದೆ.
ನಗರದ ಹೃದಯ ಭಾಗದಲ್ಲಿರುವ ದೇವಾಲಯದ ಬಾಗಿಲನ್ನು ಇಂದು ಮಧ್ಯಾಹ್ನ ಶಾಸ್ತ್ರೋಕ್ತವಾಗಿ ತೆರೆಯಲಾಗಿದ್ದು, ಸಿದ್ದೇಶ್ವರ ಜಾತ್ರೆ ಹಾಗೂ ಹಾಸನಾಂಬೆಯ ದರ್ಶನೋತ್ಸವದಿಂದ ಹಾಸನದಲ್ಲಿ ಈಗ ಹಬ್ಬದ ವಾತಾವರಣ ಸೃಷ್ಟಿಯಾಗಿದೆ.
ಹಾಸನಾಂಬೆ, ಹಾಸನಮ್ಮ, ಹಾಸನದಮ್ಮ, ಹಸನ್‍ಬಿ ಎಂಬ ಹಲವಾರು ಹೆಸರುಗಳಿಂದ ಕರೆಯಲ್ಪಡುವ ದೇವಾಲಯವನ್ನು ಹಿಂದೂ ಪಂಚಾಗದ ಆಶ್ವೀಜ ಮಾಸದ ಹುಣ್ಣಿಮೆಯ ನಂತರದ ಮೊದಲ ಗುರುವಾರದಂದು ಗರ್ಭಗುಡಿಯ ಬಾಗಿಲು ತೆಗೆಯುವುದು ವಾಡಿಕೆ. ಅದರಂತೆ ಮಧ್ಯಾಹ್ನ 12:32ರಲ್ಲಿ ಆರ್ಧ ನಕ್ಷತ್ರದ ಸಂದರ್ಭದಲ್ಲಿ ತಳವಾರ ವಂಶಸ್ಥರು ಬನ್ನಿ ಎಲೆಗಳು ಮತ್ತು ಬಾಳೆಕಂದನ್ನು ಕತ್ತರಿಸಿದ ಬಳಿಕ ಗರ್ಭಗುಡಿಯ ಬಾಗಿಲು ತೆರೆಯಲಾಗಿದೆ. ಪ್ರತಿವರ್ಷದಂತೆಯೂ ಈ ವರ್ಷವೂ ಕಳೆದ ವರ್ಷ ಹಚ್ಚಿರುವ ದೀಪ ಹಾಗೇ ಉರಿಯುತಿತ್ತು.
ಪೌರಾಣಿಕ ಹಿನ್ನಲೆ ಏನು?
ಉತ್ತರದ ಕಾಶಿಯಿಂದ ದಕ್ಷಿಣದ ಕಡೆಗೆ ವಾಯುವಿಹಾರಕ್ಕೆ ಹೊರಟ ಸಪ್ತಮಾತೃಕೆಯರು ಹಾಸನದ ಸೌಂದರ್ಯ ನೋಡಿ ಇಲ್ಲಿಯೇ ನೆಲೆಸುತ್ತಾರೆ. ಇಲ್ಲಿಯ ಪಾಳೇಗಾರನಾಗಿದ್ದ ಕೃಷ್ಣಪ್ಪನಾಯಕ ಮಾತೆಯರ ಆದೇಶದಂತೆ ದೇವಾಲಯ ಮತ್ತು ಕಲ್ಯಾಣಿಯನ್ನು ನಿರ್ಮಿಸಿದ ಎಂದು ಕಥೆ ಹೇಳುತ್ತದೆ.
ಶಾಸ್ತ್ರೋಕ್ತವಾಗಿ ಪಂಚಾಂಗದ ಪ್ರಕಾರ ಕನಿಷ್ಟ 9 ದಿನ ಮತ್ತು ಗರಿಷ್ಟ 14 ದಿನಗಳು ಮಾತ್ರ ದೇವಿಯ ದರ್ಶನದ ಭಾಗ್ಯ ಲಭಿಸುತ್ತದೆ. ಇದರಿಂದ ದರ್ಶನಕ್ಕಾಗಿ ಭಕ್ತರು ಪ್ರತಿದಿನ ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸುತ್ತಾರೆ. ಈ ಬಾರಿಯೂ ಜಿಲ್ಲಾಡಳಿತದ ವತಿಯಿಂದ ಭಕ್ತರಿಗಾಗಿ ಸರದಿ ಸಾಲುಗಳ ವ್ಯವಸ್ಥೆ, ಪ್ರಸಾದ, ಗಣ್ಯರ ದರ್ಶನ, ಕುಡಿಯುವ ನೀರಿನ ಸೌಲಭ್ಯ, ಹೀಗೆ ಹಲವಾರು ಸಿದ್ಧತೆಗಳನ್ನು ಮಾಡಲಾಗಿದೆ.
ಕಳೆದ ಬಾರಿ ಅಂದಾಜು 10 ಲಕ್ಷ ಮಂದಿ ದರ್ಶನ ಪಡೆದಿದ್ದರು. ಈ ಬಾರಿ ದರ್ಶನ ಕೇವಲ 9 ದಿನಗಳಷ್ಟೇ ಆಗಿದ್ದು, ನೈವೇದ್ಯ, ಅಭಿಷೇಕ ಹೊರತುಪಡಿಸಿದಂತೆ 24 ಗಂಟೆಯ ದರ್ಶನ ಸೌಲಭ್ಯ ವ್ಯವಸ್ಥೆ ಮಾಡಲಾಗಿದೆ.
ಹಾಸನಾಂಬೆ ಹಲವು ಪವಾಡ ಸದೃಶ ಮಹಿಮೆಗಳನ್ನು ಮೈಗೂಡಿಸಿಕೊಂಡಿದ್ದಾಳೆ. ಇಷ್ಟಾರ್ಥವನ್ನು ಸಿದ್ಧಿಸುತ್ತಾಳೆ. ಎಲ್ಲಕ್ಕಿಂತ ಮುಖ್ಯವಾಗಿ ವರ್ಷದ ಹಿಂದೆ ಬಾಗಿಲು ಮುಚ್ಚುವ ವೇಳೆ ಹಚ್ಚಿಟ್ಟ ಹಣತೆ ಹಾಗೆಯೇ ಉರಿಯಲಿದೆ. ದೇವಿಯ ಮಹಿಮೆ ಅಪಾರ ಎನ್ನುವುದು ಅಸಂಖ್ಯಾತ ಭಕ್ತರ ನಂಬಿಕೆ. ಪರಂಪರೆ ಈಗಲೂ ನಡೆದುಕೊಂಡು ಬಂದಿರುವುದರಿಂದ ಪ್ರತಿ ವರ್ಷದಂತೆ ಈ ವರ್ಷವೂ ಭಕ್ತಸಾಗರವೇ ಹರಿದು ಬರುವ ಸಾಧ್ಯತೆ ಇದೆ.
ದೇವಿಯ ದರ್ಶನಕ್ಕೆ ಬರುವ ಭಕ್ತರಿಗಾಗಿ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಮಾಡಲಾಗಿದೆ. ಸರತಿ ಸಾಲಿನಲ್ಲಿ ನಿಂತು ದರ್ಶನ ಪಡೆಯುವಾಗ ಮಳೆ-ಬಿಸಿಲಿನ ತಾಪ ತಪ್ಪಸಿಕೊಳ್ಳಲು ನೆರಳಿನ ವ್ಯವಸ್ಥೆಯನ್ನೂ ಮಾಡಲಾಗಿದೆ. ಉಳಿದಂತೆ ಲಾಡು-ಪ್ರಸಾದಕ್ಕೂ ವ್ಯವಸ್ಥೆ ಮಾಡಲಾಗಿದೆ.
1 ಸಾವಿರ ರೂ. ಶುಲ್ಕ: ಶೀಘ್ರ ದರ್ಶನಕ್ಕೆ 300 ಮತ್ತು ಗಣ್ಯರು ಪ್ರವೇಶದ್ವಾರದಲ್ಲೇ ತೆರಳಿ ನೇರ ದರ್ಶನ ಪಡೆಯಲು ಇದೇ ಮೊದಲ ಬಾರಿ 1 ಸಾವಿರ ರೂ. ಶುಲ್ಕ ನಿಗದಿಪಡಿಸಲಾಗಿದೆ. ಈ ಬಾರಿ 9 ದಿನಗಳ ದರ್ಶನ ಇರುವುದರಿಂದ ಇದಕ್ಕಾಗಿ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಅಪರಾಧ ಪತ್ತೆಗಾಗಿ ಸಿಸಿ ಕ್ಯಾಮೆರಾ ಅಳವಡಿಕೆ, ವೈದ್ಯಕೀಯ ವ್ಯವಸ್ಥೆ ಜೊತೆಗೆ ಒಟ್ಟು ಮೂರು ಶಿಫ್ಟ್ ಗಳಲ್ಲಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಅಕ್ಟೋಬರ್ 21 ರ ಮಧ್ಯಾಹ್ನ ಅಂದ್ರೆ ಬಲಿಪಾಡ್ಯಮಿಯ ಮಾರನೇ ದಿನ ಹಾಸನಾಂಬೆ ಬಾಗಿಲು ಮುಚ್ಚಲಿದೆ. ನೂಕು ನುಗ್ಗಲು ತಡೆಯುವ ಉದ್ದೇಶದಿಂದ ಅಂದೂ ಸಹ ಭಕ್ತರ ದರ್ಶನವನ್ನು ನಿರ್ಬಂಧಿಸಲಾಗಿದೆ.
ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಮಾತನಾಡಿ, ಆಶ್ವೀಜ ಮಾಸದ ಮೊದಲ ಗುರುವಾರದಂದು ಆರಂಭವಾಗುವ ದರ್ಶನ ಬಲಿಪಾಡ್ಯಮಿಯ ಮಾರನೆ ದಿನ ಅಂತಿಮವಾಗಲಿದೆ. ಭಕ್ತರು ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಗಣ್ಯರಾದಿಯಾಗಿ ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸುವ ನಿರೀಕ್ಷೆ ಇದೆ. ಸದ್ಯ ಅಧಿದೇವತೆ ಹಾಸನಾಂಬೆಯ ಮೊದಲ ದಿನದ ದರ್ಶನ ಮುಗಿದಿದ್ದು, ಶುಕ್ರವಾರ ಮುಂಜಾನೆ 5 ಗಂಟೆಯಿಂದ ವಿಶೇಷ ಪೂಜೆ ಅಲಂಕಾರದೊಂದಿಗೆ ದೇವಿಯ ದರ್ಶನಕ್ಕೆ ಅನುವು ಮಾಡಿಕೊಡಲಾಗುತ್ತದೆ. ಇದರೊಂದಿಗೆ ದೇಶದಲ್ಲಿ ಸುಖಃ ಶಾಂತಿ ನೆಲೆಸಲಿ ಎಂಬುದು ನಮ್ಮ ಆಶಯ ಎಂದು ತಿಳಿಸಿದರು.
ಮೊದಲ ದಿನ ಪಶುಸಂಗೋಪನಾ ಸಚಿವ ಎ ಮಂಜು, ವಿಧಾನ ಪರಿಷತ್ ಸದಸ್ಯ ಗೋಪಾಲಸ್ವಾಮಿ, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದರು.
ಹಾಸನ: ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ವಿಧಾನ ಪರಿಷತ್ ಸದಸ್ಯ ಗೋಪಾಲಸ್ವಾಮಿಯವರು ಸಭಾಪತಿ ಶಂಕರಮೂರ್ತಿ ಅವರಿಗೆ ದೂರು ನೀಡಿದ್ದಾರೆ.
ಹಾಸನಾಂಬ ಜಾತ್ರೆ ಪೂರ್ವಭಾವಿ ಸಭೆಯಲ್ಲಿ ರೋಹಿಣಿ ಸಿಂಧೂರಿ ಅವರು ನನ್ನನ್ನು ಆಹ್ವಾನಿಸದೆ, ಶಿಷ್ಟಾಚಾರ ಉಲ್ಲಂಘಿಸಿದ್ದಾರೆ ಎಂದು ಗೋಪಾಲಸ್ವಾಮಿಯವರು ದೂರಿನಲ್ಲಿ ಆರೋಪಿಸಿದ್ದಾರೆ.
ಸೆಪ್ಟೆಂಬರ್ 27 ಡಿಸಿ ಕಚೇರಿಯಲ್ಲಿ ಹಾಸನಾಂಬ ಜಾತ್ರೆ ಪೂರ್ವಭಾವಿ ಸಭೆಗೆ ಇತರೆ ಜನಪ್ರತಿನಿಧಿಗಳನ್ನು ಆಹ್ವಾನಿಸಿದ್ದಾರೆ. ಆದರೆ ನನ್ನನ್ನು ಉದ್ದೇಶಪೂರ್ವಕವಾಗಿ ಆಹ್ವಾನ ನೀಡದೇ ಶಿಷ್ಟಾಚಾರ ಉಲ್ಲಂಘಿಸಿದ್ದಾರೆ. ಹೀಗಾಗಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಶಿಸ್ತುಕ್ರಮವನ್ನು ಕೈಗೊಳ್ಳಬೇಕೆಂದು ಸಭಾಪತಿ ಅವರಲ್ಲಿ ಮನವಿ ಮಾಡಿಕೊಂಡು ಲಿಖಿತ ದೂರು ನೀಡಿದ್ದಾರೆ.
ಹಾಸನ: ನೂತನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಶುಕ್ರವಾರ ಅಧಿಕಾರ ಸ್ವೀಕರಿಸಿದ್ದಾರೆ. ಈ ವೇಳೆ ಜಿಲ್ಲಾಡಳಿತದ ಅಧಿಕಾರಿಗಳು, ಸಿಬ್ಬಂದಿ ನೂತನ ಡಿಸಿಗೆ ಹೂ ಗುಚ್ಛ ನೀಡಿ ಆತ್ಮೀಯವಾಗಿ ಸ್ವಾಗತಿಸಿದರು.
ಈ ವೇಳೆ ಮಾತನಾಡಿದ ಅವರು, ಒಂದೊಂದು ಜಿಲ್ಲೆಯಲ್ಲಿ ಒಂದೊಂದು ರೀತಿಯ ಸಮಸ್ಯೆ ಇರಲಿದೆ. ಆ ಎಲ್ಲಾ ಸಮಸ್ಯೆಗಳನ್ನು ಮನಗಂಡು, ಪ್ರತಿಯೊಬ್ಬರಿಗೂ ಉತ್ತಮ ಆಡಳಿತ ನೀಡಲು ಪ್ರಯತ್ನ ಮಾಡುವುದಾಗಿ ಹೇಳಿದರು.
ಹಾಸನ ಸೂಕ್ಷ್ಮ ಜೊತೆಗೆ ರಾಜಕೀಯವಾಗಿ ಪ್ರಾಬಲ್ಯ ಹೊಂದಿರುವ ಜಿಲ್ಲೆ ಎಂದು ಕೇಳಿದ್ದೇನೆ. ಸರಿಯಾದ ರೀತಿಯಲ್ಲಿ ಕಾನೂನು ಪ್ರಕಾರ, ಜನಪರವಾದ ಆಡಳಿತ ನೀಡಿದರೆ ಯಾವುದೇ ಸಮಸ್ಯೆ ಸೃಷ್ಟಿಯಾಗದು. ರಾಜಕೀಯದಿಂದ ದೂರ ಉಳಿದು ಉತ್ತಮ ಆಡಳಿತ ನೀಡುವುದಷ್ಟೇ ನನ್ನ ಗುರಿ. ಒಳ್ಳೆಯ ಆಡಳಿತ ನೀಡಿದರೆ, ರಾಜಕೀಯದವರಿಗೂ ತಿಳಿಯಲಿದೆ ಅನ್ನೋ ವಿಶ್ವಾಸ ನನ್ನದು ಎಂದರು.
ಹಾಸನ ಜಿಲ್ಲಾಧಿಕಾರಿಯಾಗಿದ್ದ ವಿ. ಚೈತ್ರ ಅವರನ್ನು ಬೆಂಗಳೂರಿನ ಸಮಾಜ ಕಲ್ಯಾಣ ಇಲಾಖೆ ಹಾಗೂ ರೆಸಿಡೆನ್ಸಿಯಲ್ ಎಜುಕೇಷನ್ ಇನ್‍ಸ್ಟಿಟ್ಯೂಟ್ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ಸರ್ಕಾರ ವರ್ಗ ಮಾಡಿದೆ.
ಯಾರು ರೋಹಿಣಿ ಸಿಂಧೂರಿ?
ಈ ಹಿಂದೆ ಮಂಡ್ಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಹಲವಾರು ಜನೋಪಯೋಗಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದ್ದರು. ರಾಜ್ಯದಲ್ಲಿ ಮೊದಲ ಬಾರಿಗೆ ಭೂ ದಾಖಲೆಗಳ ಕುರಿತಂತೆ ವಿನ್ಯಾಸಗೊಂಡಿರುವ ಎಂ -ಆಸ್ತಿ ಅಪ್ಲಿಕೇಷನ್ ತಂದಿದ್ದರು.
ಬಯಲು ಶೌಚಾಲಯ ಮುಕ್ತ ಜಿಲ್ಲೆಯನ್ನಾಗಿ ರೂಪಿಸಲು ಪಣ ತೊಟ್ಟಿದ್ದ ರೋಹಿಣಿ ಸಿಂಧೂರಿ ಅವರು ಹಳ್ಳಿ ಹಳ್ಳಿಗೆ ಹೋಗಿ, ಬಯಲು ಶೌಚಕ್ಕೆ ಹೋಗುವವರಿಗೆ ಶೌಚಾಲಯ ಬಳಸುವಂತೆ ತಿಳುವಳಿಕೆ ಹೇಳುವ ಮೂಲಕ ವಿಶೇಷ ಅಭಿಯಾನ ಮಾಡುತ್ತಿದ್ದರು.
ನಿರ್ಮಲ್ ಭಾರತ್ ಯೋಜನೆಯಡಿ ಸುಮಾರು ಒಂದು ಲಕ್ಷಕ್ಕೂ ಅಧಿಕ ಶೌಚಾಲಯ ನಿರ್ಮಾಣ ಗುರಿ ಸಾಧಿಸಿದ್ದ ಇವರ ಅಧಿಕಾರ ಅವಧಿಯಲ್ಲಿ ಶೌಚಾಲಯ ನಿರ್ಮಾಣದಲ್ಲಿ ಮಂಡ್ಯ ಜಿಲ್ಲೆ ಭಾರತದಲ್ಲಿ ಎರಡನೇ ಸ್ಥಾನದಲ್ಲಿದ್ದರೆ, ಕರ್ನಾಟಕದಲ್ಲಿ ಪ್ರಥಮ ಸ್ಥಾನ ಪಡೆದಿತ್ತು. ಸಿಇಓ ಅವರ ಕಾರ್ಯ ವೈಖರಿಯನ್ನು ನೋಡಿ ಮಂಡ್ಯದ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದರು.
2015ರ ಸೆಪ್ಟೆಂಬರ್ ನಲ್ಲಿ ರೋಹಿಣಿ ಸಿಂಧೂರಿ ಅವರನ್ನು ಸರ್ಕಾರ ಆಹಾರ ನಿಗಮದ ವ್ಯವಸ್ಥಾಪಕ ನಿರ್ದೇಶಕಿಯಾಗಿ ನೇಮಿಸಿ ವರ್ಗಮಾಡಿತ್ತು. ಈಗ ಅಲ್ಲಿಂದ ಮೊದಲ ಬಾರಿಗೆ ಜಿಲ್ಲಾಧಿಕಾರಿಯಾಗಿ ಹಾಸನಕ್ಕೆ ಬಂದಿದ್ದಾರೆ.