ಬೆಂಗಳೂರು: ನಾನು, ನನ್ನ ಗಂಡ ಇನ್ನೂ ಒಟ್ಟಾಗಿದ್ದೇವೆ. ನಮ್ಮ ಕುಟುಂಬ ಚೆನ್ನಾಗಿ ಇರಬೇಕು ಅಂತಾ ಹೋರಾಟ ಮಾಡುತ್ತಿದ್ದೇವೆ ಎಂದು ಐಪಿಎಸ್ ಅಧಿಕಾರಿ ಡಿ. ರೂಪಾ ತಿಳಿಸಿದರು.
ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ಆರ್‍ಟಿಐ ಕಾರ್ಯಕರ್ತ ಗಂಗರಾಜು ಜೊತೆಗಿನ ಆಡಿಯೋ ಸಂಭಾಷಣೆ ವಿಚಾರವಾಗಿ ಸ್ಪಷ್ಟನೆ ನೀಡಿದರು. ಒಬ್ಬ ಐಎಎಸ್ ಅಧಿಕಾರಿ ಕರ್ನಾಟಕದಲ್ಲಿ ಮೃತಪಟ್ಟಿದ್ದರು, ಐಪಿಎಸ್ ಅಧಿಕಾರಿಯೊಬ್ಬರು ತಮಿಳುನಾಡಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಒಬ್ಬ ಐಎಎಸ್ ದಂಪತಿ ಬೇರೆ ಆಗಿದ್ದಾರೆ ಎಂದರು.
ಸುಖ-ಸಂಸಾರಗಳಿಗೆ ಅಡ್ಡಿ ಆಗುತ್ತಿರುವವರನ್ನು ಪ್ರಶ್ನೆ ಮಾಡಿ. ಇಲ್ಲವಾದರೆ, ಹಲವು ಕುಟುಂಬಗಳು ನಾಶವಾಗುತ್ತವೆ. ನಾನು ಧೈರ್ಯವಾದ ಮಹಿಳೆ, ನಾನು ಹೋರಾಡುತ್ತೇನೆ. ಎಲ್ಲ ಮಹಿಳೆಯರಿಗೂ ಆ ಶಕ್ತಿ ಇರುವುದಿಲ್ಲ. ಅಂತಹ ಮಹಿಳೆಯರಿಗೆ ಧ್ವನಿಯಾಗೋಣ. ಕೌಟುಂಬಿಕ ಮೌಲ್ಯಗಳಿಗೆ ಭಾರತ ಹೆಸರುವಾಸಿಯಾಗಿದೆ ಅದನ್ನು ಮುಂದುವರಿಸೋಣ ಎಂದು ಹೇಳಿದರು. ಇದನ್ನೂ ಓದಿ:ಗಂಗರಾಜು ಜೊತೆ ರೂಪಾ ಮಾತಾಡಿರೋ ಆಡಿಯೋ ಲೀಕ್
ನಾನು ಯಾವತ್ತೂ ಭ್ರಷ್ಟಾಚಾರ ಪರವಾಗಿ ಕೆಲಸ ಮಾಡಿಲ್ಲ. ನಾನು ಯಾವತ್ತಿಗೂ ಭ್ರಷ್ಟಾಚಾರ ವಿರುದ್ಧ ಹೋರಾಟ ಮಾಡುತ್ತೇನೆ. ಅವತ್ತು, ಇವತ್ತಿಗೂ ನಾನು ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡೋಳು. ಗಂಗರಾಜುಗೆ ಭ್ರಷ್ಟಾಚಾರ ವಿರುದ್ಧ ಹೋರಾಟ ನಿಲ್ಲಿಸಲು ನಾನು ಹೇಳಿಲ್ಲ. ನಿಲ್ಲಿಸಿ ಅಂತಾ ಹೇಳಿದ್ರೆ ಅದನ್ನು ಪ್ರೂವ್ ಮಾಡಲಿ. ಅನಾವಶ್ಯಕವಾಗಿ ಆಡಿಯೋ ಬಗ್ಗೆ ಚರ್ಚೆ ಮಾಡಲಾಗುತ್ತಿದೆ. ರೋಹಿಣಿ ಸಿಂಧೂರಿ ಭ್ರಷ್ಟಾಚಾರದ ಬಗ್ಗೆ ಮಾತ್ರ ಚರ್ಚೆ ಆಗಲಿ. ಇಲ್ಲಿ ಕೌಟುಂಬಿಕ ಮತ್ತು ವೈಯಕ್ತಿಕ ವಿಚಾರಗಳ ಚರ್ಚೆ ಬೇಡ ಎಂದರು.
ಗಂಗರಾಜು ಮೇಲೆ ಕೂಡ ಹಲವು ಕ್ರಿಮಿನಲ್ ಕೇಸ್‍ಗಳಿವೆ. ವೈಯಕ್ತಿಕ ವಿಚಾರಗಳ ಬಗ್ಗೆ ಚರ್ಚೆ ಮಾಡುವುದಾರೆ, ಯಾವ್ಯಾವ ಐಎಎಸ್ ದಂಪತಿ ಬೇರ್ಪಟ್ಟಿದ್ದಾರೆ. ತಮಿಳುನಾಡಿನ ಯಾವ ಐಪಿಎಸ್ ಅಧಿಕಾರಿ ಆತ್ಮಹತ್ಯೆ ಯಾಕೆ ಮಾಡಿಕೊಂಡರು. ಯಾರಿಂದ ಯಾರು, ಯಾಕೆ ಆತ್ಮಹತ್ಯೆ ಮಾಡಿಕೊಂಡರು, ಇದು ಚರ್ಚೆ ಆಗಲಿ ಎಂದು ಹೇಳಿದರು. ಇದನ್ನೂ ಓದಿ:ಡಿ.ರೂಪಾ ವಿರುದ್ಧ ದೂರು, ದಾಖಲಾಗದ ಎಫ್‍ಐಆರ್- ಕೋರ್ಟ್ ಮೋರೆ ಹೋಗಿ FIRಗೆ ಸಿದ್ಧತೆ?
LIVE TV
[brid partner=56869869 player=32851 video=960834 autoplay=true]
ಮೈಸೂರು: ಐಪಿಎಸ್ ಅಧಿಕಾರಿ ರೂಪಾ (Roopa) ಅವರದ್ದು ಎನ್ನಲಾದ ಆಡಿಯೋವೊಂದು ವೈರಲ್ ಆಗುತ್ತಿದೆ. ಈ ಆಡಿಯೋದಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ (Rohini Sindhuri) ರೂಪಾ ಅವಾಚ್ಯ ಶಬ್ದಗಳನ್ನು ಬಳಸಿ ನಿಂದನೆ ಮಾಡಿದ್ದಾರೆ.
ಈಗಾಗಲೇ ಐಎಎಸ್ ಅಧಿಕಾರಿ ರೋಹಿಣಿ ಮತ್ತು ಐಪಿಎಸ್ ಅಧಿಕಾರಿ ಡಿ.ರೂಪ ನಡುವಿನ ಜಗಳಕ್ಕೆ ಸರ್ಕಾರ ಅಂತ್ಯ ಹಾಡಿದೆ. ರೋಹಿಣಿ ಸಿಂಧೂರಿ, ರೂಪಾ, ಹಾಗೂ ರೂಪಾ ಪತಿ ಮುನೀಷ್ ಮೌದ್ಗಿಲ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿದೆ. ಇದರ ಬೆನ್ನಲ್ಲೇ ಆರ್‌ಟಿಐ ಕಾರ್ಯಕರ್ತ ಗಂಗರಾಜು (Gangaraju) ಜೊತೆಗೆ ರೂಪಾ ಮಾತನಾಡಿರುವ ಆಡಿಯೋವೊಂದು ಲೀಕ್ ಆಗಿದ್ದು, ಚರ್ಚೆಗೆ ಕಾರಣವಾಗುತ್ತದೆ. ಇದನ್ನೂ ಓದಿ: ಹಣವಿಲ್ಲದೇ ಸ್ಥಳೀಯ ಚುನಾವಣೆಯನ್ನು ಮುಂದೂಡಿದ ಶ್ರೀಲಂಕಾ
ಆಡಿಯೋದಲ್ಲಿ ಏನಿದೆ?: ನಮ್ಮವರನ್ನ ಬಳಸಿಕೊಂಡು ಲ್ಯಾಂಡ್ ಡೀಲ್ ಮಾಡುತ್ತಿದ್ದಾಳೆ. ಅವಳಿಂದ ಎಷ್ಟೋ ಮನೆ ಹಾಳಾಗಿದೆ. ಗಂಡನ ರಿಯಲ್ ಎಸ್ಟೇಟ್ ಪ್ರಮೋಟ್ ಮಾಡಲು ಅಧಿಕಾರಿಗಳಿಂದ ಸಾಕಷ್ಟು ಮಾಹಿತಿ ಪಡೆದಿದ್ದಾಳೆ. ಇದನ್ನು ಬೇಕಾದ್ರೆ ರೆಕಾರ್ಡ್ ಮಾಡ್ಕೊಳ್ಳಿ. ನೀವು ಅಕ್ರಮವಾಗಿ ಕೆಲಸ ಮಾಡಿಸಿಕೊಳ್ಳಲು ಬಂದಿದ್ದೀಯಾ ಇಲ್ಲಿಂದ ಎದ್ದು ಹೋಗು ಎಂದು ವ್ಯಕ್ತಿಗೆ ಬೈದು ರೂಪಾ ಕಳುಹಿಸಿದ್ದಾರೆ. ಇದನ್ನೂ ಓದಿ:ಬೇಸಿಗೆ ಆರಂಭದಲ್ಲೇ ಹಣ್ಣು, ತರಕಾರಿ ಏರಿಕೆ
LIVE TV
[brid partner=56869869 player=32851 video=960834 autoplay=true]
ಬೆಂಗಳೂರು: ಐಪಿಎಸ್-ಐಎಎಸ್ (IPS-IAS) ಮಹಿಳಾ ಅಧಿಕಾರಿಗಳ ಜಗಳ ಸದ್ಯಕ್ಕೆ ಸ್ಟಾಪ್ ಆದಂತೆ ಕಾಣುತ್ತಿದೆ. ಆದರೆ ಡಿ.ರೂಪಾ (D.Roopa) ವಿರುದ್ಧ ಕೊಟ್ಟ ಕಂಪ್ಲೆಂಟ್‍ಗೆ ಎಫ್‍ಐಆರ್ ದಾಖಲಿಸದ ಹಿನ್ನೆಲೆ ಕೋರ್ಟ್ ಮುಖಾಂತರ ಎಫ್‍ಐಆರ್ (FIR) ದಾಖಲಿಸಲು ರೋಹಿಣಿ ಕುಟುಂಬ ವಕೀಲರ ಜೊತೆ ಚರ್ಚಿಸಿದೆ.
ಐಪಿಎಸ್ ಅಧಿಕಾರಿ ರೂಪಾ ವಿರುದ್ದ ರೋಹಿಣಿ ಸಿಂಧೂರಿ (Rohini Sindhuri) ಪತಿ ನೀಡಿದ್ದ ದೂರನ್ನ ಪೊಲೀಸರು ಪೆಟಿಷನ್ ಮಾಡಿಕೊಂಡಿದ್ದಾರೆ. ಹಿರಿಯ ಅಧಿಕಾರಿಗಳ ಸಲಹೆ ಪಡೆದು ಎಫ್‍ಐಆರ್ ಬಗ್ಗೆ ಚರ್ಚಿಸುತ್ತಿದ್ದಾರೆ. ಈ ನಡುವೆ ಕಂಪ್ಲೆಂಟ್ ಕೊಟ್ಟು ಎರಡು ದಿನಗಳು ಕಳೆದು ಹೋಗಿದ್ದು, ಪೊಲೀಸರು ಯಾವುದೇ ಆಕ್ಷನ್ ತಗೊಳ್ತಿಲ್ಲ ಅಂತಾ ರೋಹಿಣಿ ಕುಟುಂಬ ಕೋರ್ಟ್ (Court) ಮೊರೆ ಹೋಗುವ ಸಾಧ್ಯತೆಯಿದೆ ಅನ್ನೋ ಮಾಹಿತಿಗಳು ಲಭ್ಯವಾಗಿವೆ.
ಹೌದು. ರೋಹಿಣಿ ಸಿಂಧೂರಿಯ ಮೊಬೈಲ್ ಹ್ಯಾಕ್ (Mobile Hack) ಮಾಡಿ ಫೋಟೋಗಳನ್ನ ಪಡೆದು ವೈರಲ್ ಮಾಡಿ ಮಾನ ಕಳೆದಿದ್ದಾರೆ ಅಂತಾ ರೋಹಿಣಿ ಪತಿ ದೂರು ನೀಡಿದ್ದಾರೆ. ಆದರೆ ಈ ಪ್ರಕರಣದ ಬಗ್ಗೆ ಇದುವರೆಗೂ ಯಾವುದೇ ಆಕ್ಷನ್ ಆಗಿಲ್ಲ ಅನ್ನೋ ಅಸಮಾಧಾನದಲ್ಲಿದೆ ರೋಹಿಣಿ ಕುಟುಂಬ. ಒಂದು ವೇಳೆ ಇವತ್ತು ಪೊಲೀಸರು ಎಫ್‍ಐಆರ್ ದಾಖಲಿಸದೆ ಇದರೆ ಕೋರ್ಟ್ ಮೊರೆ ಹೋಗಿ ಎಫ್‍ಐಆರ್ ದಾಖಲಿಸಲು ರೋಹಿಣಿ ಕುಟುಂಬ ವಕೀಲರನ್ನ ಸಂಪರ್ಕಿಸಲಾಗಿದೆ ಎನ್ನಲಾಗಿದೆ. ಇದನ್ನೂ ಓದಿ:ಕಲಬುರಗಿಯಲ್ಲಿ ಕಳ್ಳತನವಾದ ಬಸ್ ತೆಲಂಗಾಣದಲ್ಲಿ ಪತ್ತೆ
ಬೆಂಗಳೂರು: ರೋಹಿಣಿ ಸಿಂಧೂರಿ (Rohini Sindhuri) ಪತಿ ಸುಧೀರ್ ರೆಡ್ಡಿ (Sudhir Reddy) ನೀಡಿದ ದೂರಿನ ಮೇರೆಗೆ ಪೆಟಿಷನ್ ಸಿದ್ಧಮಾಡಿಕೊಂಡಿರುವ ಬಾಗಲಗುಂಟೆ ಠಾಣೆ ಪೊಲೀಸರು, ಎಫ್‌ಐಆರ್ ಮಾಡಬೇಕಾ? ಬೇಡವಾ? ಅಂತಾ ಹಿರಿಯ ಅಧಿಕಾರಿಗಳು ಹಾಗೂ ಕಾನೂನು ತಜ್ಞರ ಮೊರೆ ಹೋಗಿದ್ದಾರೆ.
ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ (D Roopa Moudgil), ರೋಹಿಣಿ ಸಿಂಧೂರಿ ಅವರ ಖಾಸಗಿ ಫೋಟೋಗಳನ್ನು ಜಾಲತಾಣಗಳಲ್ಲಿ ಹರಿಬಿಟ್ಟ ನಂತರ ಸುಧೀರ್ ರೆಡ್ಡಿ ಡಿ. ರೂಪಾ ವಿರುದ್ಧ ಬಾಗಲಗುಂಟೆ ಪೊಲೀಸ್ ಠಾಣೆಗೆ (Bagalagunte Police Station) ದೂರು ನೀಡಿದ್ದರು. ಈ ದೂರನ್ನ ಪೊಲೀಸ್ರು ಪೆಟಿಷನ್ ಮಾಡಿಕೊಂಡಿದ್ದಾರೆ.
ಪೆಟಿಷನ್ ಮಾಡ್ಕೊಂಡು ಮುಂದಿನ ನಡೆ ಬಗ್ಗೆ ಕಾನೂನು ತಜ್ಞರ ಜೊತೆ ಚರ್ಚಿಸುತ್ತಿದ್ದಾರೆ. ನಿನ್ನೆ ದೂರು ಕೊಟ್ಟಿದ್ದು ಇನ್ನೂ ಎಫ್‌ಐಆರ್ ಆಗದ ಹಿನ್ನೆಲೆಯಲ್ಲಿ ರೋಹಿಣಿ ಕುಟುಂಬ ಕೋರ್ಟ್ ಮೊರೆ ಹೋಗಿ ಎಫ್‌ಐಆರ್ (FIR) ಮಾಡಿಸಲು ತಯಾರಿ ಸಹ ನಡೆಸಿದೆ.
ಒಟ್ಟಿನಲ್ಲಿ ರೂಪಾ ವಿರುದ್ಧ ಎಫ್‌ಐಆರ್ ದಾಖಲಾದರೆ ಬಾಗಲಗುಂಟೆ ಠಾಣೆಗೆ ಹಾಜರಾಗಿ ರೂಪಾ ಮೊಬೈಲ್ ಹ್ಯಾಕ್ ಆರೋಪದ ಬಗ್ಗೆ ಸ್ಪಷ್ಟನೆ ನೀಡಬೇಕಾಗುತ್ತದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಇಬ್ಬರು ಮಹಿಳಾ ಅಧಿಕಾರಿಗಳಿಗೆ ಸರ್ಕಾರದಿಂದ ಖಡಕ್ ಸೂಚನೆ
ರೂಪಾ ವಿರುದ್ಧ ದೂರಿನಲ್ಲಿ ಏನಿತ್ತು?
ನನ್ನ ಧರ್ಮಪತ್ನಿ ರೋಹಿಣಿ ಸಿಂಧೂರಿ ಅವರ ಖಾಸಗಿ ಫೋಟೋಗಳನ್ನ ರೂಪಾ ಅವರು ಸಾಮಾಜಿಕ ಜಾಲಾತಾಣದಲ್ಲಿ ಹಾಕಿ ಸಿಂಧೂರಿ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ. ರೂಪಾ ಅವರು ವೈಯಕ್ತಿಕ ಫೋಟೋಗಳನ್ನ ಹಂಚಿಕೊಂಡಿರೋದು ನೋಡಿದ್ರೆ ಅವರೇ ಹ್ಯಾಕ್ ಮಾಡಿರುವ ಅನುಮಾನ ಗೋಚರಿಸುತ್ತಿದೆ. ಆದ್ದರಿಂದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿ ತೇಜೋವಧೆ ಮಾಡುತ್ತಿರುವ ರೂಪಾ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಜೊತೆಗೆ ಫೋಟೋಗಳು ಸಿಕ್ಕಿದ್ದರ ಹಿಂದಿನ ಸತ್ಯಾಸತ್ಯತೆಯನ್ನ ತನಿಖೆ ಮೂಲಕ ಬಹಿರಂಗಪಡಿಸಬೇಕು ಎಂದು ಸುಧೀರ್ ರೆಡ್ಡಿ ದೂರಿನಲ್ಲಿ ಉಲ್ಲೇಖಿಸಿದ್ದರು.
LIVE TV
[brid partner=56869869 player=32851 video=960834 autoplay=true]
ಬೆಂಗಳೂರು: ಐಪಿಎಸ್ ವರ್ಸಸ್ ಐಎಎಸ್ ಜಟಾಪಟಿ ಹಿನ್ನೆಲೆಯಲ್ಲಿ ಇಬ್ಬರು ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಬಿಸಿ ಮುಟ್ಟಿಸಿದ್ದು, ಐಪಿಎಸ್ ಅಧಿಕಾರಿ ಡಿ. ರೂಪಾ (D Roopa) ಹಾಗೂ ಐಎಎಸ್ ರೋಹಿಣಿ ಸಿಂಧೂರಿ (Rohini Sindhuri) ಅವರನ್ನು ವರ್ಗಾವಣೆಗೊಳಿಸಲು ರಾಜ್ಯ ಸರ್ಕಾರ ಆದೇಶ ಪ್ರಕಟಿಸಿದೆ.
ಐಪಿಎಸ್ ರೂಪಾ, ಐಎಎಸ್ ರೋಹಿಣಿ ಸಿಂಧೂರಿ ವರ್ಗಾವಣೆಗೆ ಸಂಬಂಧಿಸಿ ಸ್ಥಳ ನಿಯುಕ್ತಿಗೊಳಿಸದೇ ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಡಿ. ರೂಪಾ ಕರಕುಶಲ ಅಭಿವೃದ್ಧಿ ನಿಗಮ ಎಂಡಿಯಾಗಿದ್ದರು ಹಾಗೂ ರೋಹಿಣಿ ಸಿಂಧೂರಿ ಧಾರ್ಮಿಕ ದತ್ತಿ ಇಲಾಖೆ ಆಯುಕ್ತೆಯಾಗಿದ್ದರು. ಇವರ ಜೊತೆಗೆ ರೂಪಾ ಅವರ ಪತಿ ಐಎಎಸ್ ಅಧಿಕಾರಿ ಮುನೀಷ್ ಮೌದ್ಗಿಲ್‍ರನ್ನು ರಾಜ್ಯಸರ್ಕಾರ ವರ್ಗಾವಣೆ ಮಾಡಿದೆ.
ಹೆಚ್.ಬಸವರಾಜೇಂದ್ರ ಅವರನ್ನು ರೋಹಿಣಿ ಅವರ ಸ್ಥಾನಕ್ಕೆ ನಿಯೋಜಿಸಿದ್ದರೆ ಭಾರತಿ ಅವರನ್ನು ರೂಪಾ ಅವರ ಜಾಗಕ್ಕೆ ನಿಯೋಜಿಸಲಾಗಿದೆ. ಅಚ್ಚರಿ ಎಂಬಂತೆ ರೂಪಾ ಪತಿ ಮುನಿಶ್ ಮೌದ್ಗಿಲ್ ಅವರನ್ನು ತಕ್ಷಣವೇ ಜಾರಿಗೆ ಬರುವಂತೆ ಪರ್ಸನಲ್ ಮತ್ತು ಅಡ್ಮಿನಿಸ್ಟ್ರೇಟಿವ್ ರಿಫಾರ್ಮ್ಸ್ ಇಲಾಖೆಯ ಮುಖ್ಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಇದನ್ನೂ ಓದಿ: ಮಂಡ್ಯ ಉಸ್ತುವಾರಿಯನ್ನ ಬಿಜೆಪಿ ಪಕ್ಷವೇ ತೆಗೆದುಕೊಂಡಿದೆ : ವಿಜಯೇಂದ್ರ
ಸರ್ವೆ, ಭೂದಾಖಲೆಗಳ ಇಲಾಖೆ ಆಯುಕ್ತರಾಗಿದ್ದ ಮುನೀಶ್ ಮೌದ್ಗಿಲ್‌ರನ್ನು ಡಿಪಿಎಆರ್ ಇಲಾಖೆಯ ಪ್ರಭಾವಯಿಲ್ಲದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ವರ್ಗ ಮಾಡಲಾಗಿದೆ. ಮುನೀಶ್ ಮೌದ್ಗಿಲ್ ಇದ್ದ ಸರ್ವೆ, ಭೂ ದಾಖಲೆಗಳ ಇಲಾಖೆ ಆಯುಕ್ತರ ಜಾಗಕ್ಕೆ ಸಿ. ಎನ್. ಶ್ರೀಧರ್ ವರ್ಗಾವಣೆಗೊಂಡಿದ್ದಾರೆ. ಈ ಕಿತ್ತಾಟಕ್ಕೆ ಮುನೀಶ್ ಮೌದ್ಗಿಲ್ ಸಂಬಂಧಪಟ್ಟಿದ್ದಾರೆ ಎಂದು ಆ ಮೂಲಕ ಸರ್ಕಾರವೇ ಹೇಳಿದಂತಿದೆ. ಇದರಲ್ಲಿ ಮುನೀಶ್ ಮೌದ್ಗಿಲ್ ಅವರದ್ದು ಯಾವ ಥರ ಸಂಬಂಧ, ಖಾಸಗಿನಾ, ವೃತ್ತಿಯದ್ದಾ ಅನ್ನುವ ಪ್ರಶ್ನೆಗಳು ಹುಟ್ಟಿಕೊಂಡಿವೆ.
ಕಳೆದ ಎರಡು ದಿನಗಳಿಂದ ರೂಪಾ ಮೌದ್ಗಿಲ್ ಹಾಗೂ ರೋಹಿಣಿ ಸಿಂಧೂರಿ ಅವರ ನಡುವಿನ ಕಿತ್ತಾಟ ತಾರಕಕ್ಕೇರಿತ್ತು. ಈ ಹಿನ್ನೆಲೆಯಲ್ಲಿ ಒತ್ತಡ, ಮುಜುಗರಕ್ಕೆ ಒಳಗಾದ ಸರ್ಕಾರ ಇಬ್ಬರಿಗೂ ಕರೆಸಿ ಸ್ಪಷ್ಟನೆ ಪಡೆದು, ಬಹಿರಂಗ ಹೇಳಿಕೆ ನೀಡದಂತೆ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡದಂತೆ, ಅಖಿಲ ಭಾರತ ಸೇವೆಗಳ ನಿಯಮಗಳಿಗೆ ಬದ್ಧರಾಗಿರುವಂತೆ ಖಡಕ್ ಎಚ್ಚರಿಕೆ ಕೊಟ್ಟಿತ್ತು. ಇವತ್ತು ಅದರ ಮುಂದುವರಿದ ಭಾಗವಾಗಿ ವರ್ಗಾವಣೆ ಶಾಕ್ ಕೊಟ್ಟಿದೆ.
ವರ್ಗಾವಣೆ ಮಾತ್ರನಾ? ಇನ್ನೂ ಬೇರೆ ಶಿಸ್ತು ಕ್ರಮ ಇದೆಯೋ?: ಸದ್ಯಕ್ಕೆ ಇಬ್ಬರು ಮಹಿಳಾ ಅಧಿಕಾರಿಗಳು ಹಾಗೂ ಮುನೀಶ್ ಮೌದ್ಗಿಲ್ ವರ್ಗ ಮಾಡಿ, ತನ್ನ ವ್ಯಾಪ್ತಿಯಲ್ಲಿ ಸರ್ಕಾರ ಶಿಸ್ತುಕ್ರಮ ಕೈಗೊಂಡಿದೆ. ಆದ್ರೆ ಇಷ್ಟು ಮಾತ್ರದ ಕ್ರಮದಿಂದ ಸಮಸ್ಯೆ ಬಗೆಹರಿಯುತ್ತಾ? ಸರ್ಕಾರಕ್ಕೆ ಹೋದ ಮಾನ ವಾಪಸ್ ಬರುತ್ತಾ? ಆ ಅಧಿಕಾರಿಗಳು ಬುದ್ಧಿ ಕಲೀತಾರಾ? ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಬೇರೆ ಕಠಿಣ ಶಿಕ್ಷೆ ಇಲ್ವಾ ಅನ್ನೋ ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರ್ತಿದೆ. ಇದನ್ನೂ ಓದಿ: ಬೀದಿ ನಾಯಿಗಳ ಅಟ್ಟಹಾಸಕ್ಕೆ 4ರ ಬಾಲಕ ಬಲಿ
LIVE TV
[brid partner=56869869 player=32851 video=960834 autoplay=true]
ಹಾಸನ: ನಮ್ಮ ಸರ್ಕಾರಕ್ಕೆ ಎಲ್ಲರ ಮೇಲೂ ಕ್ರಮ ತೆಗೆದುಕೊಳ್ಳುವ ಶಕ್ತಿಯಿದೆ. ಮುಖ್ಯಮಂತ್ರಿ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಏನು ನಿರ್ದೇಶನ ಕೊಡಬೇಕು ಅದನ್ನು ಕೊಡ್ತಾರೆ. ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ (K Gopalaiah) ಎಂದು ತಿಳಿಸಿದರು.
ಅಧಿಕಾರಿಗಳಾದ ರೋಹಿಣಿ ಸಿಂಧೂರಿ (Rohini Sindhuri) ಹಾಗೂ ರೂಪಾ (D Roopa) ಕಿತ್ತಾಟ ವಿಚಾರ ಕುರಿತು ಹಾಸನ (Hassan) ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ಮಾತನಾಡಿದ ಅವರು, ಇಬ್ಬರು ಹೆಣ್ಣುಮಕ್ಕಳು ಆ ರೀತಿ ಮಾಡಬಾರದಿತ್ತು. ಮುಖ್ಯಮಂತ್ರಿಗಳ ಹಂತದಲ್ಲೇ ಏನು ಕ್ರಮ ತೆಗೆದುಕೊಳ್ಳಬೇಕೋ, ಆ ಕ್ರಮ ತೆಗೆದುಕೊಳ್ಳುವ ಕೆಲಸವನ್ನು ಮಾಡುತ್ತಾರೆ. ನಾನು ಅದರ ಬಗ್ಗೆ ಬೇರೆ ಏನು ಹೇಳಲ್ಲ. ಮುಖ್ಯಮಂತ್ರಿಗಳು ಅದರ ಬಗ್ಗೆ ಕ್ರಮ ವಹಿಸುತ್ತಾರೆ ಎಂದು ಹೇಳಿದರು.
ಇದು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಘಟನೆಯಲ್ಲ. ಯಾರೋ ಇಬ್ಬರು ವ್ಯಕ್ತಿಗಳ ಕಿತ್ತಾಟದಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬರಲ್ಲ. ಅವರು ತಪ್ಪು ಎಸಗಿದ್ದರೆ ಇಬ್ಬರ ಮೇಲೂ ಸರ್ಕಾರ ಕ್ರಮಕೈಗೊಳ್ಳುತ್ತದೆ ಎಂದರು. ಇದನ್ನೂ ಓದಿ: ಹಳೆಯ ಪೀಠೋಪಕರಣ ನೀಡಿದ್ದಕ್ಕೆ ಮದುವೆಯನ್ನು ರದ್ದುಪಡಿಸಿದ ವರ
ಜೆಡಿಎಸ್ ಶಾಸಕ ಎ.ಟಿ.ರಾಮಸ್ವಾಮಿ ಬಿಜೆಪಿ ಸೇರ್ಪಡೆ ಬಗ್ಗೆ ಸುಳಿವು ನೀಡಿದ ಅವರು, ಯಾರೇ ಒಬ್ಬರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸಿಕೊಳ್ಳುವ ಸಂದರ್ಭದಲ್ಲಿ ಗೌರವಯುತವಾಗಿ ಅವರನ್ನು ಕರೆದುಕೊಳ್ಳುವ ಕೆಲಸ ಮಾಡುತ್ತಾರೆ. ಯಾರೇ ಪಕ್ಷ ಸೇರ್ಪಡೆ ಬಗ್ಗೆ ವರಿಷ್ಠರ ಮಟ್ಟದಲ್ಲಿ ನಡೆಯುತ್ತಿದೆ. ಸೂಕ್ತ ಸಂದರ್ಭದಲ್ಲಿ ಬಿಜೆಪಿಗೆ ಸೇರ್ಪಡೆಯಾಗುವ ಕಾರ್ಯಕ್ರಮ ಇರುತ್ತದೆ. 1999ರಲ್ಲಿ ಹಾಸನ ಜಿಲ್ಲೆಯ ಪುಣ್ಯಾತ್ಮರು ಬಿಜೆಪಿಗೆ 4 ಸ್ಥಾನ ಗೆಲ್ಲಿಸಿಕೊಟ್ಟಿದ್ದಾರೆ. ನಮಗೆ ವಿಶ್ವಾಸವಿದೆ ಮತ್ತೆ ಅದು ಪುನರಾವರ್ತನೆ ಆಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಕಡಬದಲ್ಲಿ ಕಾಡಾನೆ ಹಿಡಿಯುವ ಕಾರ್ಯಾಚರಣೆ ಆರಂಭ
LIVE TV
[brid partner=56869869 player=32851 video=960834 autoplay=true]
ಬೆಂಗಳೂರು: ಇನ್ನೊಬ್ಬ ಸರ್ಕಾರಿ ಅಧಿಕಾರಿಯ ವಿರುದ್ಧದ ಆರೋಪಕ್ಕೆ ಮಾಧ್ಯಮ ಬಳಕೆ ಮಾಡಬೇಡಿ. ನಿಮಗೆ ಆರೋಪ ಮಾಡಲು ಸೂಕ್ತ ವೇದಿಕೆಯಿದೆ ಎಂದು ಮಹಿಳಾ ಅಧಿಕಾರಿಗಳಿಗಿಬ್ಬರಿಗೂ ರಾಜ್ಯ ಸರ್ಕಾರ ಖಡಕ್ ಸೂಚನೆ ನೀಡಿದೆ.
ರೋಹಿಣಿ ಸಿಂಧೂರಿ (Rohini Sindhuri), ಡಿ. ರೂಪಾ (D Roopa) ಬೀದಿ ರಂಪಾಟ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ರಾಜ್ಯ ಸರ್ಕಾರ ಇಬ್ಬರಿಗೂ ನೋಟಿಸ್ ಜಾರಿ ಮಾಡಿದೆ. ನಿಮಗೆ ಆರೋಪ ಮಾಡಲು ಸೂಕ್ತ ವೇದಿಕೆ ಇದೆ. ಆದರೆ ಅದನ್ನು ಬಿಟ್ಟು ನೀವು ಮಾಧ್ಯಮ ಮುಂದೆ ಹೋಗಿದ್ದೀರಿ. ಇದರಿಂದ ರಾಜ್ಯ ಸರ್ಕಾರಕ್ಕೆ ಮುಜುಗರ ಆಗಿದೆ. ಇದು ಅಖಿಲ ಭಾರತೀಯ ಸೇವಾ ನಿಯಮಗಳ ಉಲ್ಲಂಘನೆ ಎಂದು ತಿಳಿಸಿದೆ.
ನಿಮ್ಮ ಆರೋಪಗಳನ್ನು ಸಕ್ಷಮ ಪ್ರಾಧಿಕಾರದ ಮುಂದೆ ಮಾಡಬಹುದು. ಮಾಧ್ಯಮಗಳ ಮುಂದೆ ಆರೋಪ ಮಾಡಿದ್ದೀರಾ. ಹೀಗಾಗಿ ನೀವು ಇನ್ನು ಮುಂದೆ ಮಾಧ್ಯಮಗಳ ಮುಂದೆ ಹೋಗಬಾರದು ಎಂದು ತಾಕೀತು ಮಾಡಿದೆ. ಇದನ್ನೂ ಓದಿ: ಮಹಿಳೆ, ಮಕ್ಕಳು ಸೇರಿ ನಾಲ್ವರ ಮೇಲೆ ಆ್ಯಸಿಡ್ ದಾಳಿ
ರಾಜ್ಯ ಸರ್ಕಾರದಿಂದ ಇಬ್ಬರು ಮಹಿಳಾ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದು, ಸಿಬ್ಬಂದಿ ಮತ್ತು ಆಡಳಿತ ಇಲಾಖೆಯಿಂದ ನೋಟಿಸ್ ಜಾರಿ ಮಾಡಿದೆ. ಸಿಎಂ ಸೂಚನೆ ಬಳಿಕ ಮಹಿಳಾ ಅಧಿಕಾರಿಗಳಿಗೆ ನೊಟೀಸ್ ಜಾರಿಯಾಗಿದ್ದು ಸರ್ಕಾರದ ಅಧೀನ ಕಾರ್ಯದರ್ಶಿ ಜೇಮ್ಸ್ ತಾರಕನ್ ಈ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಟರ್ಕಿ, ಸಿರಿಯಾದಲ್ಲಿ ಮತ್ತೆ ಭಾರೀ ಭೂಕಂಪ – ಭೂಮಿಯೇ ಹೋಳಾಗೋ ಭೀತಿಯಲ್ಲಿದ್ದಾರೆ ಜನ
LIVE TV
[brid partner=56869869 player=32851 video=960834 autoplay=true]
ಬೆಂಗಳೂರು: ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ (D Roopa) ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ನಡುವಿನ ಸೋಷಿಯಲ್ ಮೀಡಿಯಾ ಕಚ್ಚಾಟ ಈಗ ಸರ್ಕಾರದ ಅಂಗಳ ತಲುಪಿದೆ. ರೋಹಿಣಿ ಮತ್ತು ರೂಪಾ ಇಬ್ಬರೂ ಪರಸ್ಪರರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮರಿಗೆ (Vandita Sharma) ಸೋಮವಾರ ದೂರು ಕೊಟ್ಟಿದ್ದಾರೆ. ಇದೀಗ ಸರ್ಕಾರದ ನಡೆ ಭಾರೀ ಕುತೂಹಲ ಮೂಡಿಸಿದೆ.
ಭಾನುವಾರದಿಂದ ಸಾಮಾಜಿಕ ಜಾಲತಾಣಗಳಲ್ಲಿ ಕಚ್ಚಾಡುತ್ತಿರುವ ರೂಪಾ ಮೌದ್ಗಿಲ್ ಮತ್ತು ರೋಹಿಣಿ ಸಿಂಧೂರಿ ನಡುವಿನ ಜಟಾಪಟಿ ಪ್ರಕರಣ ಇದೀಗ ಸರ್ಕಾರದ ಮುಖ್ಯ ಕಾರ್ಯದರ್ಶಿ ಎದುರು ನ್ಯಾಯ ಪಂಚಾಯಿತಿಗೆ ಬಂದಿದೆ. ಸೋಮವಾರ ಮಧ್ಯಾಹ್ನ ವಿಧಾನಸೌಧದಲ್ಲಿ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಅವರನ್ನು ಭೇಟಿ ಮಾಡಿದ ರೋಹಿಣಿ ಸಿಂಧೂರಿ, ರೂಪಾ ಮೌದ್ಗಿಲ್ ವಿರುದ್ಧ ಲಿಖಿತ ದೂರು ಕೊಟ್ಟರು. ಇದನ್ನೂ ಓದಿ: ರೂಪಾ ಅವರು ಎತ್ತಿರುವ ಪ್ರಶ್ನೆಗಳು ನೈತಿಕವಾಗಿವೆ: ಪ್ರತಾಪ್ ಸಿಂಹ
ಮೂರು ಪುಟಗಳ ದೂರಿನಲ್ಲಿ ರೋಹಿಣಿ ಅವರು, ತಮ್ಮ ವಿರುದ್ಧ ಇಲ್ಲಸಲ್ಲದ ಆರೋಪಗಳ ಮೂಲಕ ರೂಪಾ ಅವರು ವೈಯಕ್ತಿಕ ತೇಜೋವಧೆ ಮಾಡಿದ್ದಾರೆ. ಹೆಚ್ಚಾಗಿ ನನ್ನ ವೈಯಕ್ತಿಕ ಜೀವನದ ಬಗ್ಗೆ ಮಾತನಾಡಿದ್ದಾರೆ. ರೂಪಾ ಅವರು ಸೇವಾ ನಿಯಮಯಗಳನ್ನು ಉಲ್ಲಂಘಿಸಿದ್ದು, ಅಖಿಲ ಭಾರತೀಯ ಸೇವಾ ನಿಯಮಗಳಡಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ. ಮೈಸೂರು ಡಿಸಿ ಆಗಿದ್ದಾಗಿನ ಆರೋಪಗಳು, ಮಂಡ್ಯ ಸಿಇಒ ತಮ್ಮ ದೂರಿನ ಜತೆಗೆ ರೂಪಾ ಅವರ ಆರೋಪಗಳಿರುವ ಟ್ವಿಟ್ಟರ್, ಫೇಸ್‌ಬುಕ್, ಯೂಟ್ಯೂಬ್, ಮಾಧ್ಯಮ ಸುದ್ದಿ ಪ್ರಸಾರದ ಲಿಂಕ್‌ಗಳನ್ನು ರೋಹಿಣಿ ಸಲ್ಲಿಸಿದ್ದಾರೆ. ಇದನ್ನೂ ಓದಿ: ರೂಪಾ, ರೋಹಿಣಿ ಘನತೆ ಕಾಪಾಡುವಂತೆ ಮೋದಿ ಸಲಹೆ ನೀಡಬೇಕು- ಜಗ್ಗೇಶ್
ಸಿಎಸ್ ಅವರಿಗೆ ದೂರು ಕೊಟ್ಟ ಬಳಿಕ ಮಾತಾಡಿದ ರೋಹಿಣಿ ಸಿಂಧೂರಿ, ರೂಪಾ ಅವರು ಮಾಡಿರುವ ಆರೋಪಗಳು ಸುಳ್ಳಿನಿಂದ ಕೂಡಿವೆ. ನಾನು ಸಾಮಾಜಿಕ ಜಾಲತಾಣದಲ್ಲಿ (Social Media) ಸಕ್ರಿಯವಾಗಿಲ್ಲ. ರೂಪಾ ಮಾಡಿರುವ ವೈಯಕ್ತಿಕ ಆರೋಪದ ಬಗ್ಗೆ ನನ್ನ ಗಂಡ ಮಾತನಾಡಿದ್ದಾರೆ. ಯಾವತ್ತೂ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಆರೋಪಗಳನ್ನು ಮಾಡಬಾರದು. ಸದ್ಯ ಏನೆಲ್ಲಾ ಬೆಳವಣಿಗೆ ನಡೆಯುತ್ತಿದೆ ಎಂಬುದನ್ನು ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಅವರಿಗೆ ತಿಳಿಸಿದ್ದೇನೆ. ಸರ್ಕಾರಿ ಅಧಿಕಾರಿಗಳು ಮತ್ತು ನೌಕರರು ಮಾಧ್ಯಮದ ಮುಂದೆ ಮಾತನಾಡಬಾರದು. ಹೀಗಾಗಿ ನಾನು ಮಾಧ್ಯಮಗಳ ಮುಂದೆ ಬಂದು ಯಾವುದೇ ಹೇಳಿಕೆ ನೀಡಲಿಲ್ಲ. ನಾನು ಪುರುಷ ಐಎಎಸ್ ಅಧಿಕಾರಿಗಳಿಗೆ ಕೆಲ ಫೋಟೋಗಳನ್ನು ಕಳುಹಿಸಿದ್ದೇನೆ ಎಂದು ರೂಪಾ ಆರೋಪ ಮಾಡಿದ್ದಾರೆ. ಮೊದಲು ಆ ಮೂರು ಜನ ಅಧಿಕಾರಿಗಳು ಯಾರೆಂದು ಹೇಳಲಿ ಎಂದು ರೋಹಿಣಿ ಸಿಂಧೂರಿ ಸವಾಲು ಎಸೆದಿದ್ದಾರೆ.
ಇತ್ತ ಐಪಿಎಸ್ ಅಧಿಕಾರಿ ಡಿ.ರೂಪಾ ಸಹ ರೋಹಿಣಿ ಸಿಂಧೂರಿ ವಿರುದ್ಧ ಸಿಎಸ್ ವಂದಿತಾ ಶರ್ಮ ಅವರನ್ನು ಭೇಟಿ ಮಾಡಿ ದೂರು ಸಲ್ಲಿಸಿದರು. ರೋಹಿಣಿ ವಿರುದ್ಧ ತಾವು ಮಾಡಿರುವ ಆರೋಪಗಳ ಬಗ್ಗೆ ಸಿಎಸ್‌ಗೆ ರೂಪಾ ಸ್ಪಷ್ಟನೆ ಕೊಟ್ಟರು. ಅಗತ್ಯ ವಾಟ್ಸಪ್ ಚಾಟ್ಸ್ ದಾಖಲೆ, ಇತರೆ ದಾಖಲೆಗಳನ್ನು ನೀಡಿದ್ದಾರೆ. ಸಾ.ರಾ.ಮಹೇಶ್ ಸಂಧಾನ ಪ್ರಕರಣ, ಮೈಸೂರು ಡಿಸಿ ಆಗಿದ್ದಾಗಿನ ಪ್ರಕರಣಗಳಲ್ಲಿ ರೂಪಾ ಅವರು ಸಹ ಸಿಂಧೂರಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಜತೆಗೆ ರೋಹಿಣಿ ವಿರುದ್ಧ ಇದುವರೆಗೆ ಯಾವುದೇ ಪ್ರಕರಣದಲ್ಲೂ ಕ್ರಮ ಆಗಿಲ್ಲದಿರುವ ಬಗ್ಗೆ ಗಮನ ಹರಿಸುವಂತೆಯೂ ಸಿಎಸ್‌ಗೆ ಮನವಿ ಮಾಡಿದ್ದಾರೆ.
ರೋಹಿಣಿ ಸಿಂಧೂರಿ ಮತ್ತು ರೂಪಾ ಪ್ರಕರಣದಲ್ಲಿ ರೋಹಿಣಿ ಪತಿ ಸುಧೀರ್ ರೆಡ್ಡಿ ಎಂಟ್ರಿ ಕೊಟ್ಟಿದ್ದಾರೆ. ಡಿ.ರೂಪಾ ವಿರುದ್ಧ ಕಾನೂನು ಸಮರ ಸಾರಿದ್ದಾರೆ. ರೂಪಾ ವಿರುದ್ಧ ಸುದೀರ್ ರೆಡ್ಡಿ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನನ್ನ ಧರ್ಮಪತ್ನಿ ರೋಹಿಣಿ ಸಿಂಧೂರಿ ಅವರ ಖಾಸಗಿ ಪೋಟೋಸ್‌ಗಳನ್ನ ಐಪಿಎಸ್ ಅಧಿಕಾರಿಯಾಗಿರೋ ಡಿ.ರೂಪಾ ಸಾಮಾಜಿಕ ಜಾಲಾತಾಣದಲ್ಲಿ ಹಾಕಿ, ಅವರ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಕೆಲಸ ಮಾಡಿದ್ದಾರೆ. ಡಿ.ರೂಪಾ, ಸಿಂಧೂರಿ ಅವರ ತೀರ ವೈಯಕ್ತಿಕ ಪೋಟೋಗಳನ್ನ ಸಾಮಾಜಿಕ ಜಾಲತಾಣದಲ್ಲಿ ಹಾಕಿರೋದು ನೋಡಿದರೆ, ಪೋಟೋಸ್‌ಗಳನ್ನ ಹ್ಯಾಕ್ ಮಾಡಿರೋ ಅನುಮಾನಗಳು ಗೋಚರಿಸುತ್ತಿವೆ. ಅದ್ದರಿಂದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ಬಗ್ಗೆ ಸುಳ್ಳು ಸುದ್ದಿ ಹಾಗೂ ತೇಜೋವಧೆ ಮಾಡುತ್ತಿರುವ ಐಪಿಎಸ್ ಅಧಿಕಾರಿ ಡಿ.ರೂಪಾ ವಿರುದ್ಧ ಕಾನೂನು ಕ್ರಮ ಕೈಗೊಂಡು ಪೋಟೋ ಸಿಕ್ಕಿದ್ದರ ಹಿಂದಿನ ಸತ್ಯಾಸತ್ಯತೆಯನ್ನ ತನಿಖೆಯ ಮೂಲಕ ಬಹಿರಂಗಪಡಿಸುವಂತೆ ದೂರಿನಲ್ಲಿ ಉಲ್ಲೇಖಿಸಿ ಎರಡು ಪುಟಗಳ ದೂರು ದಾಖಲು ಮಾಡಿದ್ದಾರೆ.
ಡಿ.ರೂಪಾ ಮತ್ತು ರೋಹಿಣಿ ಬಳಿ ಸ್ಪಷ್ಟನೆ ಮತ್ತು ಪರಸ್ಪರರ ಮೇಲೆ ದೂರುಗಳನ್ನು ಸ್ವೀಕರಿಸಿದ ಸಿಎಸ್ ವಂದಿತಾ ಶರ್ಮ ಅವರು, ಸಂಜೆ ಸಿಎಂ ಬೊಮ್ಮಾಯಿ ಭೇಟಿ ಮಾಡಿ ವಿವರ ನೀಡಿದರು. ಸಂಪುಟ ಸಭೆಗೂ ಮುನ್ನ ಸಿಎಂ ಭೇಟಿ ಮಾಡಿ ಇಬ್ಬರ ಬಗ್ಗೆಯೂ ಸಿಎಸ್ ಅವರು ಸಿಎಂಗೆ ಮಾಹಿತಿ ನೀಡಿದ್ದಾರೆ. ಇದೀಗ ಸರ್ಕಾರದ ನಡೆ ಕುತೂಹಲ ಮೂಡಿಸಿದೆ. ಇಬ್ಬರು ಅಧಿಕಾರಿಗಳ ಕಚ್ಚಾಟಕ್ಕೆ ಫುಲ್‌ಸ್ಟಾಪ್ ಬೀಳುತ್ತಾ ಅಂತಾ ಕಾದು ನೋಡಬೇಕಿದೆ.
LIVE TV
[brid partner=56869869 player=32851 video=960834 autoplay=true]
ಬೆಂಗಳೂರು: ಡಿ.ರೂಪಾ ಮೌದ್ಗಿಲ್ (D Roopa) ಹಾಗೂ ರೋಹಿಣಿ ಸಿಂಧೂರಿ (Rohini Sindhuri) ನಡುವಿನ ಕಿತ್ತಾಟ ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಬೆನ್ನಲ್ಲೇ ರಾಜ್ಯಸಭಾ ಸದಸ್ಯ ಜಗ್ಗೇಶ್ (Jaggesh), ಅಧಿಕಾರಿಗಳಿಬ್ಬರು ತಮ್ಮ ಘನತೆ ಕಾಪಾಡುವಂತೆ ಪ್ರಧಾನಿ ಮೋದಿ (Narendra Modi) ಸಲಹೆ ನೀಡಬೇಕೆಂದು ಮನವಿ ಮಾಡಿದ್ದಾರೆ.
IPS & IAS are responsible
posts to guide people & work for government as a bridge! There should be no personal vendetta on media.
I request @narendramodi ji @AmitShah ji to advice @D_Roopa_IPS#rohinisindhuri IAS officials to maintain their dignity in public!
ಈ ಕುರಿತು ಟ್ವೀಟ್ ಮಾಡಿರುವ ಜಗ್ಗೇಶ್, ಐಪಿಎಸ್ ಮತ್ತು ಐಎಎಸ್ ಸಾರ್ವಜನಿಕರಿಗೆ ಮಾರ್ಗದರ್ಶನ ನೀಡುವ ಜವಾಬ್ದಾರಿಯುತ ಹುದ್ದೆಗಳು. ಸರ್ಕಾರಕ್ಕಾಗಿ ಸೇತುವೆಯಂತೆ ಕೆಲಸ ಮಾಡಬೇಕು. ಮಾಧ್ಯಮದಲ್ಲಿ ವೈಯಕ್ತಿಕ ದ್ವೇಷವನ್ನು ವ್ಯಕ್ತಪಡಿಸಬಾರದು ಎಂದು ಸಲಹೆ ನೀಡಿದ್ದಾರೆ. ಇದನ್ನೂ ಓದಿ: ರೂಪಾ ಅವರು ಎತ್ತಿರುವ ಪ್ರಶ್ನೆಗಳು ನೈತಿಕವಾಗಿವೆ: ಪ್ರತಾಪ್ ಸಿಂಹ
ನಾನು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ಅಮಿತ್ ಶಾ (Amit Shah) ಅವರಿಗೆ ಮನವಿ ಮಾಡುತ್ತೇನೆ. ಡಿ.ರೂಪಾ ಹಾಗೂ ರೋಹಿಣಿ ಸಿಂಧೂರಿ ಅವರಿಬ್ಬರೂ ಸಾರ್ವಜನಿಕವಾಗಿ ತಮ್ಮ ಘನತೆ ಕಾಪಾಡುವಂತೆ ಸಲಹೆ ನೀಡಬೇಕು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಸಿಂಧೂರಿ ವಿರುದ್ಧ ಮುಖ್ಯ ಕಾರ್ಯದರ್ಶಿಗೆ ರೂಪಾ ದೂರು
ಐಪಿಎಸ್ ರೂಪಾ ಮೌದ್ಗಿಲ್ ಹಾಗೂ ಐಎಎಸ್ ರೋಹಿಣಿ ಸಿಂಧೂರಿ ನಡುವಿನ ಸೋಷಿಯಲ್ ಮೀಡಿಯಾ ಕಚ್ಚಾಟ ಈಗ ಸರ್ಕಾರದ ಅಂಗಳ ತಲುಪಿದೆ. ರೋಹಿಣಿ ಮತ್ತು ರೂಪಾ ಇಬ್ಬರೂ ಪರಸ್ಪರರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮರಿಗೆ (Vandita Sharma) ಇಂದು ದೂರು ಕೊಟ್ಟಿದ್ದಾರೆ. ಇದೀಗ ಸರ್ಕಾರದ ನಡೆ ಭಾರೀ ಕುತೂಹಲ ಮೂಡಿಸಿದೆ.
LIVE TV
[brid partner=56869869 player=32851 video=960834 autoplay=true]
ಮೈಸೂರು: ಐಪಿಎಸ್ ಅಧಿಕಾರಿ ಡಿ.ರೂಪಾ ಅವರು ಎತ್ತಿರುವ ಪ್ರಶ್ನೆಗಳು ನೈತಿಕ ಹಾಗೂ ಕಾನೂನಾತ್ಮಕವಾಗಿವೆ ಎಂದು ಸಂಸದ ಪ್ರತಾಪ್ ಸಿಂಹ (Pratap Simha) ಅಭಿಪ್ರಾಯಪಟ್ಟಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವಾಗ, ಐಪಿಎಸ್ (IPS) ಅಧಿಕಾರಿ ಡಿ.ರೂಪಾ (D.Roopa) ಹಾಗೂ ಐಎಎಸ್ (IAS) ಆಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ಅವರ ನಡುವೆ ನಡೆಯುತ್ತಿರುವ ಜಟಾಪಟಿ ವಿಚಾರಕ್ಕೆ ಪ್ರತಿಕ್ರಿಯೆ ಕೊಟ್ಟರು. ಡಿ.ರೂಪಾ ಎತ್ತಿರುವ ಪ್ರಶ್ನೆಗಳಿಗೆ ಸತ್ಯಶೋಧನೆ ನಡೆಸುವುದು ಪತ್ರಕರ್ತರ ಜವಾಬ್ದಾರಿ. ಕಮಿಟಿ ರಚಿಸಿ ಸತ್ಯಾಸತ್ಯತೆಯನ್ನು ಬಯಲಿಗೆಳೆಯುವಂತೆ ಸರ್ಕಾರಕ್ಕೆ ಹೇಳಬೇಕಾದವರು ಪತ್ರಕರ್ತರು ಎಂದರು.
ಕೋವಿಡ್ ಸಮಯದಲ್ಲಿ ಚಾಮರಾಜನಗರದ ಆಕ್ಸಿಜನ್ ದುರಂತದಲ್ಲಿ ಒಂದೇ ದಿನ 24 ಮಂದಿ ಮೃತಪಟ್ಟಿದ್ದರು. ಅಂದು ಮೈಸೂರಿನ ಮೇಲೆ ಆರೋಪ ಬಂತು. ಬಳಿಕ ಆಕ್ಸಿಜನ್ ಒದಗಿಸುವ ಜವಾಬ್ದಾರಿಯನ್ನು ಉಸ್ತುವಾರಿ ಸಚಿವರು ಹಾಗೂ ಸಂಸದನಾದ ನಾನು ವಹಿಸಿಕೊಂಡೆವು. ಜಿಲ್ಲೆಯಲ್ಲಿ ಕೋವಿಡ್‍ಗೆ ಅನೇಕರು ಮೃತಪಟ್ಟಿದ್ದರು. ಆಗ ಸುಮ್ಮನೆ ವೀಡಿಯೋ ಕಾನ್ಫರೆನ್ಸ್ ಮಾಡಿ ಕಾಲಹರಣ ಮಾಡುವ ಬದಲು ತಪಾಸಣೆ ಮಾಡಬೇಕು ಎಂದು ಹೇಳಿದಾಗ ನಮ್ಮ ಮೇಲೆಯೇ ಆರೋಪಗಳು ಕೇಳಿ ಬಂದ್ದಿದ್ದವು ಎಂದು ನೆನಪಿಸಿಕೊಂಡರು. ಇದನ್ನೂ ಓದಿ:ನಿರ್ದೇಶಕ ಭಗವಾನ್ ನಿಧನಕ್ಕೆ ಸಿಎಂ, ಮಾಜಿ ಸಿಎಂ ಸಂತಾಪ
ಅದೇ ಪ್ರಶ್ನೆಗಳನ್ನು ಇಂದು ಡಿ.ರೂಪಾ ಎತ್ತಿದ್ದಾರೆ. ಹಾಸನದಲ್ಲಿ ಅವರಿದ್ದಾಗ ಏನೇನು ನಡೆದಿದೆ ಎಂದು ತಿಳಿದುಕೊಂಡು ಪ್ರಶ್ನಿಸುವ ಜವಬ್ದಾರಿ ಪತ್ರಕರ್ತರದ್ದು ಎಂದು ಹೇಳಿದರು.
LIVE TV
[brid partner=56869869 player=32851 video=960834 autoplay=true]