Tag: Rohini Sindhuri

  • ದೇವಸ್ಥಾನಗಳಲ್ಲಿನ ತ್ಯಾಜ್ಯ ನಿರ್ವಹಣೆಯ ಸಮಸ್ಯೆ ಪರಿಹಾರಕ್ಕೆ ಸ್ವಚ್ಛ ಮಂದಿರ ಅಭಿಯಾನ

    ದೇವಸ್ಥಾನಗಳಲ್ಲಿನ ತ್ಯಾಜ್ಯ ನಿರ್ವಹಣೆಯ ಸಮಸ್ಯೆ ಪರಿಹಾರಕ್ಕೆ ಸ್ವಚ್ಛ ಮಂದಿರ ಅಭಿಯಾನ

    ಬೆಂಗಳೂರು: ಭಕ್ತಾದಿಗಳಿಗೆ ದೇವಾಲಯಗಳಲ್ಲಿ (Temple) ನೈರ್ಮಲ್ಯದ ವಾತಾವರಣ ಮತ್ತು ಸ್ವಚ್ಚ ಪರಿಸರವನ್ನು ನೀಡುವ ಉದ್ದೇಶವನ್ನು ಹೊಂದಿರುವ ರಾಜ್ಯ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆಯಾದ ಸ್ವಚ್ಛ ಮಂದಿರ ಅಭಿಯಾನ(Swachh Mandira Abhiyan) ಉದ್ಘಾಟನೆಗೆ ಸಿದ್ದವಾಗಿದೆ.

    ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವರಾದ ಶಶಿಕಲಾ ಜೊಲ್ಲೆ (Shashikala Jolle) ಅವರ ಆಶಯದ ಯೋಜನೆಯ ಚಾಲನೆಗೆ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು ಫೆ.10 ರಂದು ನಿಮಿಷಾಂಭ ದೇವಸ್ಥಾನದಿಂದ(Nimishamba Temple) ಉದ್ಘಾಟನೆ ಮಾಡಲಾಗುವುದು ಎಂದು ರಾಜ್ಯ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯ ಆಯುಕ್ತರಾದ ರೋಹಿಣಿ ಸಿಂಧೂರಿ (Rohini Sindhuri) ತಿಳಿಸಿದ್ದಾರೆ. ಇದನ್ನೂ ಓದಿ: Union Budget 2023ː ಕರ್ನಾಟಕಕ್ಕೆ ಬಂಪರ್ ಕೊಡುಗೆ – ರೈಲ್ವೆಗೆ ದಾಖಲೆಯ 7,561 ಕೋಟಿ ಅನುದಾನ

    ಈ ಬಗ್ಗೆ ಮಾಧ್ಯಮ ಪ್ರಕಟಣೆಯನ್ನು ನೀಡಿರುವ ಅವರು, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯು ತನ್ನ ವ್ಯಾಪ್ತಿಯಲ್ಲಿನ ದೇವಸ್ಥಾನಗಳಲ್ಲಿ ನಿರಂತರವಾಗಿ ಹೆಚ್ಚುತ್ತಿರುವ ಘನ ತ್ಯಾಜ್ಯ ನಿರ್ವಹಣೆಯ ಸಮಸ್ಯೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಹೊಸ ಯೋಜನೆಯನ್ನ ಅನುಷ್ಠಾನಗೊಳಿಸುತ್ತಿದೆ. ಸಚಿವರಾದ ಶಶಿಕಲಾ ಜೊಲ್ಲೆ ಅವರು ದೇವಸ್ಥಾನಗಳಲ್ಲಿ ಸ್ವಚ್ಚ ಪರಿಸರವಿಲ್ಲದೆ ಭಕ್ತಾದಿಗಳು ಪಡುತ್ತಿರುವ ತೊಂದರೆಯನ್ನ ನಿವಾರಿಸುವ ನಿಟ್ಟಿನಲ್ಲಿ ಈ ಯೋಜನೆಯನ್ನ ಪ್ರಾರಂಭಿಸಲು ಸೂಚನೆ ನೀಡಿದ್ದರು. ಈ ಹಿನ್ನಲೆಯಲ್ಲಿ ಮೊದಲ ಹಂತದಲ್ಲಿ ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿನ ರಾಜ್ಯದ ಪ್ರಮುಖ 12 ದೇವಾಲಯಗಳಲ್ಲಿ ಸಮಗ್ರ ತ್ಯಾಜ್ಯ ನಿರ್ವಹಣೆಯ “ಸ್ವಚ್ಚ ಮಂದಿರ ಅಭಿಯಾನ”ದ ಅಡಿಯಲ್ಲಿ ಅಭಿವೃದ್ದಿ ಕಾರ್ಯಗಳನ್ನು ಕೈಗೊಂಡಿದ್ದು, ಫೆಬ್ರವರಿ 10 ರಂದು ಶಶಿಕಲಾ ಜೊಲ್ಲೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಶ್ರೀ ನಿಮಿಷಾಂಬ ದೇವಸ್ಥಾನದಲ್ಲಿ ತ್ಯಾಜ್ಯ ನಿರ್ವಹಣೆ ಘಟಕವನ್ನು ಉದ್ಘಾಟಿಸಿ ನಂತರ ವೀಡಿಯೋ ಕಾನ್ಫರೆನ್ಸ್ ಮೂಲಕ ಉಳಿದ 11 ದೇವಸ್ಥಾನಗಳ ಘಟಕಗಳಿಗೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.

    ಸ್ವಚ್ಚ ಮಂದಿರ ಅಭಿಯಾನದ ಮೂಲಕ ದೇವಸ್ಥಾನಗಳಲ್ಲಿ ಹಾಗೂ ದೇವಸ್ಥಾನದ ಆವರಣದಲ್ಲಿ ಉತ್ಪತ್ತಿಯಾಗುವ ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ ಸಮಸ್ಯೆಗಳಿಗೆ ಸಂಬಂಧಿಸಿದಂತಹ ಸವಾಲುಗಳಿಗೆ ವೈಜ್ಞಾನಿಕ ರೀತಿಯಲ್ಲಿ ಪರಿಹಾರಗಳನ್ನು ಒದಗಿಸಲಾಗುವುದು. ತ್ಯಾಜ್ಯ ಉತ್ಪಾದನೆಯನ್ನು ಕಡಿಮೆ ಮಾಡಲು ವ್ಯವಸ್ಥಿತ ಕ್ರಮಗಳನ್ನು ಹುಟ್ಟುಹಾಕುವುದು ಮತ್ತು ದೇವಾಲಯಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಸಂಗ್ರಹಿಸುವುದು, ಸಾಗಿಸುವುದು, ಸಂಸ್ಕರಿಸುವುದು ಮತ್ತು ವಿಲೇವಾರಿ ಮಾಡಲು ಅಗತ್ಯವಾದ ಬೆಂಬಲ ವ್ಯವಸ್ಥೆಗಳೊಂದಿಗೆ ಮೂಲದಲ್ಲಿ ತ್ಯಾಜ್ಯವನ್ನು ಪ್ರತ್ಯೇಕಿಸುವುದು. ಮತ್ತು ತ್ಯಾಜ್ಯವನ್ನು ಜವಾಬ್ದಾರಿಯುತವಾಗಿ ನಿರ್ವಹಿಸಲು ಸೌಲಭ್ಯಗಳನ್ನು ಸ್ಥಾಪಿಸುವ ಮೂಲಕ ದೇವಸ್ಥಾನವನ್ನು ಸುಸ್ಥಿರ ಸಂಸ್ಥೆ ಮತ್ತು ಶೂನ್ಯ ತ್ಯಾಜ್ಯ ಆವರಣವನ್ನಾಗಿ ಮಾಡುವ ಗುರಿಯನ್ನು ಈ ಯೋಜನೆ ಹೊಂದಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿಜೀ ಅವರ ಸ್ವಚ್ಚ ಮಂದಿರ ಪರಿಕಲ್ಪನೆಯನ್ನು ರಾಜ್ಯದಲ್ಲಿ ಅಳವಡಿಸಿಕೊಳ್ಳಬೇಕು ಎನ್ನುವ ಉದ್ದೇಶದಿಂದ “ಸ್ವಚ್ಛ ಮಂದಿರ ಅಭಿಯಾನ” ಯೋಜನೆಯನ್ನು ಪ್ರಾರಂಭಿಸಲಾಗಿದೆ. ಮೊದಲ ಹಂತದಲ್ಲಿ 12 ದೇವಸ್ಥಾನಗಳಲ್ಲಿ ತ್ಯಾಜ್ಯ ನಿರ್ವಹಣಾ ಘಟಕಗಳನ್ನು ಪ್ರಾರಂಭಿಸಲಾಗಿದ್ದು, ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ದೇವಸ್ಥಾನಗಳಲ್ಲಿ ಅಳವಡಿಸಲಾಗುವುದು. ಈ ಸೌಲಭ್ಯದಿಂದಾಗಿ ಪ್ರತಿದಿನ ಈ ದೇವಸ್ಥಾನಗಳಲ್ಲಿ ಉತ್ಪತ್ತಿಯಾಗುವ ಸುಮಾರು 3500 ರಿಂದ 12 ಸಾವಿರ ಕೆಜಿಗಳಷ್ಟು ತ್ಯಾಜ್ಯವನ್ನು ಸಮರ್ಪಕವಾಗಿ ನಿರ್ವಹಿಸಲು ಸಾಧ್ಯವಾಗಲಿದೆ. ಭಕ್ತಾದಿಗಳಿಗೆ ಸ್ವಚ್ಚ, ಸುಂದರ ಹಾಗೂ ನೈರ್ಮಲ್ಯದ ವಾತಾವರಣ ಒದಗಿಸುವುದು ನಮ್ಮ ಪ್ರಮುಖ ಉದ್ದೇಶವಾಗಿದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

    ಮೊದಲ ಹಂತದಲ್ಲಿ ಉದ್ಘಾಟನೆಯಾಗುವ ಘನತ್ಯಾಜ್ಯ ನಿರ್ವಹಣಾ ಘಟಕಗಳನ್ನು ಹೊಂದಿರುವ ದೇವಸ್ಥಾನಗಳ ಪಟ್ಟಿ
    1. ಶ್ರೀ ನಿಮಿಷಾಂಭ ದೇವಾಲಯ, ಗಂಜಾಂ, ಶ್ರೀರಂಗಪಟ್ಟಣ, ಮಂಡ್ಯ ಜಿಲ್ಲೆ
    2. ಶ್ರೀ ಬನಶಂಕರಿ ದೇವಾಲಯ, ಕರಿಯಪ್ಪ ರಸ್ತೆ, ಬೆಂಗಳೂರು ನಗರ ಜಿಲ್ಲೆ
    3. ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯ, ಬೆಂಗಳೂರು ಗ್ರಾಮಾಂತರ ಜಿಲ್ಲೆ
    4. ಶ್ರೀ ರೇವಣ ಸಿದ್ಧೇಶ್ವರ ದೇವಾಲಯ, ರಾಮನಗರ ತಾಲ್ಲೂಕು, ರಾಮನಗರ ಜಿಲ್ಲೆ
    5. ಶ್ರೀ ಕಬ್ಬಾಳಮ್ಮ ದೇವಾಲಯ, ಕನಕಪುರ ತಾಲ್ಲೂಕು, ರಾಮನಗರ ಜಿಲ್ಲೆ
    6. ಶ್ರೀ ಕೆಂಗಲ್ ಆಂಜನೇಯ ಸ್ವಾಮಿ ದೇವಾಲಯ, ರಾಮನಗರ ಜಿಲ್ಲೆ
    7. ಶ್ರೀ ರಂಗನಾಥಸ್ವಾಮಿ ದೇವಾಲಯ, ಶ್ರೀರಂಗಪಟ್ಟಣ, ಮಂಡ್ಯ ಜಿಲ್ಲೆ
    8. ಶ್ರೀ ಚೆನ್ನಕೇಶವಸ್ವಾಮಿ ದೇವಾಲಯ, ಬೇಲೂರು ತಾಲ್ಲೂಕು, ಹಾಸನ ಜಿಲ್ಲೆ
    9. ಶ್ರೀ ದುರ್ಗಪರಮೇಶ್ವರಿ ದೇವಾಲಯ, ಮಂದಾರ್ತಿ, ದಕ್ಷಿಣ ಕನ್ನಡ ಜಿಲ್ಲೆ
    10. ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಾಲಯ, ನಾಯಕನಹಟ್ಟಿ, ಚಳ್ಳಕೆರೆ, ಚಿತ್ರದುರ್ಗ ಜಿಲ್ಲೆ
    11. ಶ್ರೀ ಲಕ್ಷ್ಮಿನರಸಿಂಹಸ್ವಾಮಿ ದೇವಾಲಯ, ದೇವರಾಯನ ದುರ್ಗ, ತುಮಕೂರು ಜಿಲ್ಲ
    12. ಶ್ರೀ ಪೊಳಲಿ ರಾಜರಾಜೇಶ್ವರಿ ದೇವಾಲಯ, ದಕ್ಷಿಣ ಕನ್ನಡ ಜಿಲ್ಲೆ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • IAS ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ 1 ಕೋಟಿ ಮಾನನಷ್ಟ ಮೊಕದ್ದಮೆ

    IAS ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ 1 ಕೋಟಿ ಮಾನನಷ್ಟ ಮೊಕದ್ದಮೆ

    ಮೈಸೂರು: ಐಎಎಸ್ (IAS) ಅಧಿಕಾರಿ ರೋಹಿಣಿ ಸಿಂಧೂರಿ (Rohini sindhuri) ವಿರುದ್ಧ ಜೆಡಿಎಸ್ ಶಾಸಕ ಸಾ.ರಾ ಮಹೇಶ್ (Sa Ra Mahesh) ಅವರಿಂದು 1 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

    ಸಾರಾ ಮಹೇಶ್ ಭೂ ಅಕ್ರಮ ಮಾಡಿದ್ದಾರೆ ಎಂಬ ರೋಹಿಣಿ ಸಿಂಧೂರಿ ಆಡಿಯೊ ವೈರಲ್ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಸುದ್ದಿಗೋಷ್ಠಿ (Pressmeet) ನಡೆಸಿ ಅವರು ಮಾತನಾಡಿದ್ದಾರೆ. ಇದನ್ನೂ ಓದಿ: ರೋಹಿಣಿ ಸಿಂಧೂರಿ ವಿರುದ್ಧ ಕರ್ತವ್ಯ ಲೋಪ ಆರೋಪ – 1,500 ಪುಟಗಳ ದಾಖಲೆ ಸಲ್ಲಿಸಿದ ಸಾ.ರಾ.ಮಹೇಶ್

    ಸಾ.ರಾ ಮಹೇಶ್ ಭೂ ಕಬಳಿಕೆ ಮಾಡಿದ್ದಾರೆ ಎಂದು ರೋಹಿಣಿ ಸಿಂಧೂರಿ ಬಿಂಬಿಸಿದ್ದರು. ಈ ಕಾರಣ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ (Defamation Case) ಹೂಡಿದ್ದೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಹೊಟ್ಟೆನೋವೆಂದು ಖಾಸಗಿ ಕ್ಲಿನಿಕ್ ಸೇರಿದ ಮಹಿಳೆ – ಆಪರೇಷನ್ ನೆಪದಲ್ಲಿ ಎರಡೂ ಕಿಡ್ನಿ ಕದ್ದ ವೈದ್ಯರು

    ಅಲ್ಲದೇ ನಾನು ಬೇಕಿದ್ದರೆ ರಾಜಕಾರಣ (Politics) ಬಿಡುತ್ತೇನೆಯೇ ಹೊರತು ಇಂತಹ ಗೋಮುಖಗಳ ಮುಖವಾಡ ಕಳಚುವುದನ್ನು ಬಿಡುವುದಿಲ್ಲ. ಕಷ್ಟಪಟ್ಟು ಬೆಳೆದ ನನಗೆ ತಮ್ಮ ತಪ್ಪು ಮುಚ್ಚಿಕೊಳ್ಳಲು ಕೆಸರು ಎರಚಿದರು. ನನಗೆ ಆದ ಅನ್ಯಾಯದ ವಿರುದ್ಧ ನ್ಯಾಯ ಸಿಗುವವರೆಗೂ ಹೋರಾಡುತ್ತೇನೆ. ರಾಜಕಾರಣದಲ್ಲಿ ಭ್ರಷ್ಟಾಚಾರ ಹೆಚ್ಚಿದೆ. ಆದರೆ ಎಲ್ಲರೂ ಭ್ರಷ್ಟರಲ್ಲ. ಇವರು ಎಲ್ಲರನ್ನೂ ಭ್ರಷ್ಟರೆಂದು ಬಿಂಬಿಸಲು ಯತ್ನಿಸುತ್ತಾರೆ. ಇಂಥವರ ಮುಖವಾಡ ಕಳಚುತ್ತೇನೆ ಎಂದು ಸವಾಲು ಹಾಕಿದ್ದಾರೆ.

    ನಂತರ ಸಾರಾ ಮಹೇಶ್ ಅವರ ಪರ ವಕೀಲ (Lawyer) ಅರುಣ್ ಕುಮಾರ್ ಮಾತನಾಡಿ, ಮಾನನಷ್ಟ ಮೊಕದ್ದಮೆ ಹೂಡುವ ಮುನ್ನಾ ರೋಹಿಣಿ ಸಿಂಧೂರಿ ಅವರಿಗೆ ಲೀಗಲ್ ನೋಟಿಸ್ ಕೊಟ್ಟಿದ್ದೆವು. ನೋಟಿಸ್‌ಗೆ ರೋಹಿಣಿ ಸಿಂಧೂರಿ ಅವರು ಉತ್ತರ ಕೊಟ್ಟಿದ್ದು, ಸಾರಾ ಮಹೇಶ್ ವಿರುದ್ಧ ಮಾತನಾಡಿರೋ ಧ್ವನಿ ತಮ್ಮದೇ ಎಂದು ಒಪ್ಪಿಕೊಂಡಿದ್ದಾರೆ. ಅಲ್ಲದೇ ಇದು ಖಾಸಗಿ ಸಂಭಾಷಣೆ ಎಂದು ಹೇಳಿದ್ದಾರೆ. ಇದೇ ಉತ್ತರದ ಆಧಾರದ ಮೇಲೆ 1 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ್ದೇವೆ ಎಂದು ತಿಳಿಸಿದ್ದಾರೆ.

    2ನೇ ಜಿಲ್ಲಾ ಸೆಷನ್ಸ್ ನ್ಯಾಯಾಲಯದಿಂದ (District Session Court) ರೋಹಿಣಿ ಸಿಂಧೂರಿ ಅವರಿಗೆ ನೋಟಿಸ್ ಜಾರಿಯಾಗಿದೆ. ಅಕ್ಟೋಬರ್ 20 ರೊಳಗೆ ರೋಹಿಣಿ ಸಿಂಧೂರಿ ಉತ್ತರ ಕೊಡಬೇಕು ಎಂದು ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ರೋಹಿಣಿ ಸಿಂಧೂರಿ ವಿರುದ್ಧ ಕರ್ತವ್ಯ ಲೋಪ ಆರೋಪ – 1,500 ಪುಟಗಳ ದಾಖಲೆ ಸಲ್ಲಿಸಿದ ಸಾ.ರಾ.ಮಹೇಶ್

    ರೋಹಿಣಿ ಸಿಂಧೂರಿ ವಿರುದ್ಧ ಕರ್ತವ್ಯ ಲೋಪ ಆರೋಪ – 1,500 ಪುಟಗಳ ದಾಖಲೆ ಸಲ್ಲಿಸಿದ ಸಾ.ರಾ.ಮಹೇಶ್

    ಮೈಸೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕರ್ತವ್ಯ ಲೋಪ, ಹಣ ದುರುಪಯೋಗ ಆರೋಪಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಗಳಿಗೆ ಶಾಸಕ ಸಾ.ರಾ.ಮಹೇಶ್ 1,500 ಪುಟಗಳಷ್ಟು ದಾಖಲೆಗಳನ್ನ ಸಲ್ಲಿಸಿದ್ದಾರೆ.

    ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಅವರು ಕರ್ತವ್ಯ ಲೋಪ ಎಸಗಿದ ಆರೋಪ ಸಂಬಂಧ ತನಿಖೆ ಆರಂಭವಾಗಿದೆ. ವಸತಿ ಇಲಾಖೆ ಕಾರ್ಯದರ್ಶಿ ಹಾಗೂ ಅಬಕಾರಿ ಇಲಾಖೆಯ ಆಯುಕ್ತ ಡಾ.ಜೆ ರವಿಶಂಕರ್ ನೇತೃತ್ವದಲ್ಲಿ ಮೈಸೂರು ಡಿಸಿ ಕಚೇರಿಯ ಸಭಾಂಗಣದಲ್ಲಿ ತನಿಖೆ ನಡೆಯುತ್ತಿದೆ. ಹೆಚ್ಚುವರಿ ಜಿಲ್ಲಾಧಿಕಾರಿ ಮಂಜುನಾಥ್ ಸ್ವಾಮಿ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದಾರೆ. ಈ ಹಿಂದೆ ಪ್ರಕರಣಗಳ ತನಿಖೆ ಸಂಬಂಧ ಡಾ.ಜೆ.ರವಿಶಂಕರ್ ಅವರು ಶಾಸಕ ಸಾ.ರಾ.ಮಹೇಶ್ ಅವರಿಗೆ ನೋಟಿಸ್ ನೀಡಿದ್ದರು. ಇದೀಗ ತನಿಖಾಧಿಕಾರಿ, ರವಿಶಂಕರ್ ಅವರಿಗೆ ಶಾಸಕರು 1,500 ಪುಟಗಳಷ್ಟು ದಾಖಲೆಗಳನ್ನು ಸಲ್ಲಿಸಿದ್ದಾರೆ. ಇದನ್ನೂ ಓದಿ: ಗುಡ್ ನೈಟ್ ಕಾಯಿಲ್ ಲಿಕ್ವಿಡ್ ಕುಡಿದು 2 ವರ್ಷದ ಮಗು ಸಾವು

    ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇನ್ನು 30 ದಿನದಲ್ಲಿ ವಿಚಾರಣೆ ಪ್ರಕ್ರಿಯೆ ಮುಗಿಯುತ್ತದೆ. ಈ ಪ್ರಕರಣದಲ್ಲಿ ನಾನು ಮಾಡಿದ್ದ ಎಲ್ಲಾ ಆರೋಪಕ್ಕೂ ದಾಖಲೆಗಳನ್ನು ನೀಡಿದ್ದೇನೆ. ಐಎಎಸ್ ಅಧಿಕಾರಿಯನ್ನ ಅಮಾನತು ಮಾಡಬೇಕಾಗಿದೆ. ನನಗೆ ತನಿಖೆಯ ಮೇಲೆ ವಿಶ್ವಾಸವಿದೆ. ನಾನು ಯಾವ ದುರುದ್ದೇಶದಿಂದಲೂ ಈ ಆರೋಪಗಳನ್ನು ಮಾಡಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಫಿನ್‌ಲ್ಯಾಂಡ್ ಪ್ರಧಾನಿಯ ಖಾಸಗಿ ವೀಡಿಯೋ ಲೀಕ್ – ಮುಚ್ಚಿಡಲು ಏನೂ ಇಲ್ಲವೆಂದ ಮರಿನ್

    ರೋಹಿಣಿ ಸಿಂಧೂರಿ ಅವರು ನನ್ನ ಮೇಲೆ ದುರುದ್ದೇಶದ ಭೂ ಅಕ್ರಮ ಆರೋಪ ಮಾಡಿದ್ದರು. ಈ ತನಿಖೆಯ ವರದಿ ಬಂದ ಮೇಲೆ ಜನರಿಗೆ ಆ ಅಧಿಕಾರಿಯ ನಿಜ ಬಣ್ಣ ಗೊತ್ತಾಗಲಿದೆ. ಆ ಐಎಎಸ್ ಅಧಿಕಾರಿಯ ಬಣ್ಣ ಬಯಲು ಮಾಡುವುದೇ ನನ್ನ ಉದ್ದೇಶ ಎಂದು ಅವರು ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ನೋಟಿಸ್

    ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ನೋಟಿಸ್

    ಮೈಸೂರು: ಡಿಸಿ ಆಗಿದ್ದ ವೇಳೆ ಹಲವು ವ್ಯತ್ಯಯಗಳಿಗೆ ಕಾರಣರಾಗಿದ್ದ ಹಿನ್ನೆಲೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ವಸತಿ ಇಲಾಖೆ ನೋಟಿಸ್ ನೀಡಿದೆ.

    ಮೈಸೂರು ಡಿಸಿ ಆಗಿದ್ದ ವೇಳೆ 4 ಆರೋಪಗಳಿಗೆ ಜುಲೈ 30 ರಂದು ಖುದ್ದು ಹಾಜರಾಗಿ ವಿವರಣೆ ನೀಡಬೇಕಾಗಿ ವಸತಿ ಇಲಾಖೆಯ ಕಾರ್ಯದರ್ಶಿ ಡಾ.ಜೆ ರವಿಶಂಕರ್ ರೋಹಿಣಿ ಸಿಂಧೂರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಇದನ್ನೂ ಓದಿ: ಪ್ರವೀಣ್ ಹತ್ಯೆ ಖಂಡಿಸಿ ರಾಜೀನಾಮೆ ಪರ್ವ – ಇದು ಹೇಡಿಗಳ ಲಕ್ಷಣ ಎಂದ ಈಶ್ವರಪ್ಪ

    ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅವ್ಯವಹಾರ, ಡಿಸಿ ಮನೆ ನವೀಕರಣ, ಕೋವಿಡ್ ಸಾವುಗಳ ಬಗ್ಗೆ ತಪ್ಪು ಮಾಹಿತಿ, ಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ ಕರ್ತವ್ಯ ಲೋಪ ಹೀಗೆ 4 ಆರೋಪಗಳು ರೋಹಿಣಿ ಸಿಂಧೂರಿ ಮೇಲಿದ್ದು, ಈ ಬಗ್ಗೆ ಶಾಸಕ ಸಾರಾ ಮಹೇಶ್ ತನಿಖೆಗೆ ಆಗ್ರಹಿಸಿದ್ದರು. ಇದನ್ನೂ ಓದಿ: 1,100 ಎನ್‌ಕೌಂಟರ್ ಪೊಲೀಸರಿಂದಲೇ ಮಾಡಿಸ್ತೇವೆ – ಹಿಂದೂ ಸಮಾಜದ ಮುಖಂಡ

    ಇದೀಗ ರೋಹಿಣಿ ಸಿಂಧೂರಿಗೆ ನೋಟಿಸ್ ನೀಡಲಾಗಿದ್ದು, ಬೆಂಗಳೂರಿನ ವಿಕಾಸಸೌಧದ ವಸತಿ ಇಲಾಖೆಗೆ ಆಗಮಿಸಿ ವಿವರಣೆ ನೀಡುವಂತೆ ತಿಳಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಬೇಲೂರು ಗಳಿಗೆ ತೇರಿನ ದಿನ ಕುರಾನ್ ಪಠಣೆ ನಮ್ಮ ಕೈಪಿಡಿಯಲ್ಲೇ ಇದೆ: ಸಿಇಒ ವಿದ್ಯುಲ್ಲತಾ

    ಬೇಲೂರು ಗಳಿಗೆ ತೇರಿನ ದಿನ ಕುರಾನ್ ಪಠಣೆ ನಮ್ಮ ಕೈಪಿಡಿಯಲ್ಲೇ ಇದೆ: ಸಿಇಒ ವಿದ್ಯುಲ್ಲತಾ

    – ರೋಹಿಣಿ ಸಿಂಧೂರಿಯವರ ಗಮನಕ್ಕೆ ತಂದಿದ್ದೇನೆ
    – ಸರ್ಕಾರದ ನಿರ್ದೇಶನದ ಬಳಿಕ ನಿರ್ಧಾರ ಕೈಗೊಳ್ಳುತ್ತೇವೆ

    ಹಾಸನ: ಈ ಬಾರಿ ಧರ್ಮ ವಿವಾದದ ಹಿನ್ನೆಲೆಯಲ್ಲಿ ಬೇಲೂರು ಚನ್ನಕೇಶವ ಸ್ವಾಮಿ ಜಾತ್ರಾ ಮಹೋತ್ಸವದ ಗಳಿಗೆ ತೇರಿನ ದಿನ ಕುರಾನ್ ಪಠಣೆ ಮಾಡುವ ವಿಚಾರವನ್ನು ಆಯುಕ್ತರಾದ ರೋಹಿಣಿ ಸಿಂಧೂರಿ ಅವರ ಗಮನಕ್ಕೆ ತರಲಾಗಿದೆ ಎಂದು ದೇವಾಲಯದ ಕಾರ್ಯ ನಿರ್ವಹಣಾಧಿಕಾರಿ ವಿದ್ಯುಲ್ಲತಾ ತಿಳಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಳಿಗೆ ತೇರಿನ ದಿನ ಕುರಾನ್ ಪಠಣೆ ಮಾಡುವ ವಿಚಾರ ನಮ್ಮ ಕೈಪಿಡಿಯಲ್ಲೇ ಇದೆ. ಗಳಿಗೆ ತೇರಿನ ದಿನ ದೇವಾಲಯದ ಬಳಿ ನಿಂತು ಕುರಾನ್ ಪಠಣೆ ಮಾಡಲಾಗುತ್ತೆ. ಪ್ರತಿವರ್ಷವೂ ಅದು ನಡೆದುಕೊಂಡು ಬಂದಿದೆ. ಆದರೆ ಈ ವರ್ಷ ಸ್ವಲ್ಪ ಚರ್ಚೆಗಳಾಗುತ್ತಿದೆ. ಹೀಗಾಗಿ ಗಳಿಗೆ ತೇರಿನ ದಿನ (ಚಿಕ್ಕತೇರು) ಕುರಾನ್ ಪಠಣೆ ನಡೆಯುವುದರ ಬಗ್ಗೆ ಆಯುಕ್ತರಾದ ರೋಹಿಣಿ ಸಿಂಧೂರಿಯವರ ಗಮನಕ್ಕೆ ತಂದಿದ್ದೇನೆ. ಅವರ ನಿರ್ದೇಶನದ ನಿರೀಕ್ಷೆಯಲ್ಲಿದ್ದೇವೆ. ಅವರ ನಿರ್ದೇಶನದಂತೆ ನಾವು ನಡೆಯಲಿದ್ದೇವೆ ಎಂದರು.

    ರಥದ ಪಕ್ಕ ನಿಂತು ಕುರಾನ್ ಪಠಣ ಮಾಡಬೇಕು. ಇದು ಮೊದಲಿನಿಂದಲೂ ನಡೆದುಕೊಂಡು ಬಂದ ಸಂಪ್ರದಾಯವಾಗಿದೆ. ಇದೊಂದು ಪ್ರತೀತಿಯಿದೆ. 32 ಪುಟಗಳಿರುವ ಕೈಪಿಡಿಯಲ್ಲಿ ಇದು ಉಲ್ಲೇಖವಾಗಿದೆ. ಇಂದು ಈ ಬಗ್ಗೆ ನಿರ್ದೇಶನ ಬರುವ ನಿರೀಕ್ಷೆಯಿದ್ದು, ನಿರ್ದೇಶನ ಬಂದ ನಂತರ ಅದರಂತೆ ನಡೆಯುತ್ತೇವೆ ಎಂದು ಮಾಹಿತಿ ನೀಡಿದರು.

    ಜಾತ್ರಾ ಮಹೋತ್ಸವದ ಅಂಗವಾಗಿ ದೇವಾಲಯದ ಬಳಿ ನೂರಕ್ಕು ಹೆಚ್ಚು ಮಳಿಗೆ ಹಾಕಲಾಗಿದೆ. ಸುಮಾರು 15 ಜನ ಮುಸ್ಲಿಮರೂ ಕೂಡ ಮಳಿಗೆಗಳಲ್ಲಿ ಅಂಗಡಿ ಹಾಕಿದ್ದಾರೆ. ಜಾತ್ರಾಮಹೋತ್ಸವದ ಸಂದರ್ಭದಲ್ಲಿ ಮುಸ್ಲಿಂಮರಿಗೆ ವ್ಯಾಪಾರಕ್ಕೆ ಅವಕಾಶ ನೀಡಬಾರದು ಎಂಬ ಚರ್ಚೆ ಕೇಳಿಬಂದಿತ್ತು. ಈ ಬಗ್ಗೆ ಹಿಂದೂಪರ ಸಂಘಟನೆಯವರು ಜಿಲ್ಲಾಧಿಕಾರಿ, ತಹಶಿಲ್ದಾರ್, ದೇವಾಲಯದ ಸಿಇಓಗೆ ಮನವಿ ಸಲ್ಲಿಸಿದ್ದರು ಎಂದು ಹೇಳಿದರು. ಇದನ್ನೂ ಓದಿ: ತಿರುಪತಿ ದೇಗುಲದಲ್ಲಿ ಕಾಲ್ತುಳಿತ – ವೆಂಕಟೇಶ್ವರನ ದರ್ಶನಕ್ಕೆ ಭಕ್ತಾದಿಗಳ ನೂಕುನುಗ್ಗಲು

    ಜಾತ್ರೋತ್ಸವದ ಸಂದರ್ಭದಲ್ಲಿ ಮಳಿಗೆ ಹಾಕುವ ವಿಚಾರವಾಗಿ ಸಿದ್ದೇಶ್ ಎಂಬವರು ಟೆಂಡರ್ ಪಡೆದಿದ್ದಾರೆ. ಟೆಂಡರ್ ಪುರಸಭೆ ವ್ಯಾಪ್ತಿಗೆ ಸೇರಿದ್ದು, ದೇವಾಲಯದ ಆಡಳಿತ ಮಂಡಳಿಗೂ ಇದಕ್ಕೂ ಸಂಬಂಧವಿಲ್ಲ. ಈ ಬಾರಿ ಜಾತ್ರಾಮಹೋತ್ಸವದ ಹಿನ್ನೆಲೆಯಲ್ಲಿ ಸುಮಾರು ನೂರು ಮಳಿಗೆಗಳಲ್ಲಿ ಅಂಗಡಿ ಇಡಲಾಗಿದ್ದು, ಅದರಲ್ಲಿ 15 ಮುಸ್ಲಿಂ ಕುಟುಂಬಗಳೂ ಕೂಡ ಸೇರಿವೆ ಎಂದು ಟೆಂಡರ್ ದಾರರು ತಿಳಿಸಿದ್ದಾರೆ. ಇದನ್ನೂ ಓದಿ: ರಾಮನವಮಿಯಂದು ಮಾಂಸಾಹಾರ ಪೂರೈಸಿದ್ದಕ್ಕೆ ವಿದ್ಯಾರ್ಥಿಗಳ ಗಲಾಟೆ: JNUನಿಂದ ವರದಿ ಕೇಳಿದ ಕೇಂದ್ರ

    ದೇವಾಲಯದಲ್ಲಿ ಈಗಾಗಲೇ ಪಾಂಚರಾತ್ರಾ ನಿಮಿತ್ತ ಧಾರ್ಮಿಕ ವಿಧಿ ವಿಧಾನ ನಡೆಯುತ್ತಿವೆ. ನಾಳೆ ಬೆಳಗ್ಗೆ ನಡೆಯಲಿರುವ ಗಳಿಗೆ ತೇರು (ಚಿಕ್ಕತೇರು) ರಥೋತ್ಸವ ನಡೆಯುತ್ತದೆ. ನಾಳೆ ದೇವರಿಗೆ ಸಂಪೂರ್ಣ ಅಲಂಕಾರ, ಮಹಾಮಂಗಳಾರತಿ ನಡೆಯಲಿದೆ.

  • ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮತ್ತೆ ಸಂಕಷ್ಟ

    ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮತ್ತೆ ಸಂಕಷ್ಟ

    ಮೈಸೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಬಟ್ಟೆ ಬ್ಯಾಗ್ ಖರೀದಿ ಅವ್ಯವಹಾರ ಪ್ರಕರಣಕ್ಕೆ ಮರುಜೀವ ಸಿಕ್ಕಿದ್ದು, ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಿದೆ.

    ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ಮೈಸೂರು ಡಿಸಿ ಆಗಿದ್ದ ಸಂದರ್ಭದಲ್ಲಿ ಕೇಳಿ ಬಂದಿದ್ದ ಬಟ್ಟೆ ಬ್ಯಾಗ್ ಖರೀದಿ ಅವ್ಯವಹಾರ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ಆದೇಶ ನೀಡಿದೆ. ಇದನ್ನೂ ಓದಿ: ಮುಸ್ಲಿಮರು ಈ ದೇಶದ ಪ್ರಜೆಗಳು, ಅವ್ರು ವ್ಯಾಪಾರ ಮಾಡದಂತೆ ಬಹಿಷ್ಕರಿಸುವುದು ಸರಿಯಲ್ಲ: ಎಚ್.ವಿಶ್ವನಾಥ್

    ಕೂಡಲೇ ಪ್ರಕರಣದ ತನಿಖೆ ಮಾಡಿ ವರದಿ ನೀಡುವಂತೆ ಮೈಸೂರು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಅವರಿಗೆ ಪೌರಾಡಳಿತ ನಿರ್ದೇಶಕರು ಸೂಚನೆ ನೀಡಿದ್ದಾರೆ. ಚಿಲ್ಲರೆ ಮಾರುಕಟ್ಟೆಯಲ್ಲಿ 10-13 ರೂಪಾಯಿಗೆ ಸಿಗುವ ಬಟ್ಟೆ ಬ್ಯಾಗ್‌ಗೆ 52 ರೂಪಾಯಿ ಕೊಟ್ಟು ಖರೀದಿಸಲಾಗಿದೆ. ಮೈಸೂರು ಮಹಾನಗರ ಪಾಲಿಕೆ, ನಗರಸಭೆ, ಪುರಸಭೆಗಳ ಪೂರ್ವಾನುಮತಿ ಕೂಡ ಪಡೆದಿಲ್ಲ ಎಂದು ಮಾಜಿ ಸಚಿವ ಸಾ.ರಾ.ಮಹೇಶ್ ಗಂಭೀರ ಆರೋಪ ಮಾಡಿದ್ದರು.

    ರೋಹಿಣಿ ಸಿಂಧೂರಿ ಅವರು ಮೈಸೂರು ಡಿಸಿಯಾಗಿದ್ದಾಗ ಅವರ ಮೇಲೆ ಬಟ್ಟೆ ಬ್ಯಾಗ್ ಖರೀದಿ ಅವ್ಯವಹಾರದ ಆರೋಪ ಹೊರಿಸಲಾಗಿತ್ತು. ಅಧಿಕಾರಿಗಳ ನಡುವಿನ ವೈಮನಸ್ಸು, ಅವ್ಯವಹಾರದ ಆರೋಪದ ಕಾರಣದಿಂದಾಗಿ ರೋಹಿಣಿ ಸಿಂಧೂರಿ ಅವರು ಬೇರೆಡೆಗೆ ವರ್ಗಾವಣೆ ಮಾಡಲಾಯಿತು. ಆದರೂ ಪಟ್ಟು ಬಿಡದ ಶಾಸಕ ಸಾ.ರಾ.ಮಹೇಶ್ ಅವರು ಬಟ್ಟೆ ಬ್ಯಾಗ್ ಅವ್ಯವಹಾರಗಳ ಬಗ್ಗೆ ಸದನದಲ್ಲಿ ಗಮನ ಸೆಳೆದಿದ್ದರು. ಈ ಬಗ್ಗೆ ಸೂಕ್ತ ತನಿಖೆ ಆಗಬೇಕು ಎಂದು ಒತ್ತಾಯಿಸಿದ್ದರು. ಇದನ್ನೂ ಓದಿ: ಮಂಗಳೂರು, ಉಡುಪಿ ಬಳಿಕ ಬೆಂಗಳೂರಿಗೂ ವ್ಯಾಪಿಸಿದ ಧರ್ಮ ಸಂಘರ್ಷ

     

  • ರಾಜ್ಯದ 25A ದರ್ಜೆ ದೇವಸ್ಥಾನಗಳ ಸಮಗ್ರ ಅಭಿವೃದ್ಧಿಗೆ ‘ದೈವ ಸಂಕಲ್ಪ’ ಯೋಜನೆ: ಶಶಿಕಲಾ ಜೊಲ್ಲೆ

    ರಾಜ್ಯದ 25A ದರ್ಜೆ ದೇವಸ್ಥಾನಗಳ ಸಮಗ್ರ ಅಭಿವೃದ್ಧಿಗೆ ‘ದೈವ ಸಂಕಲ್ಪ’ ಯೋಜನೆ: ಶಶಿಕಲಾ ಜೊಲ್ಲೆ

    – ಪ್ರತಿವರ್ಷ 1000ಸಿ ದರ್ಜೆಯ ದೇವಸ್ಥಾನಗಳ ಅಭಿವೃದ್ಧಿಗೆ ಕ್ರಮ
    – 12 ಜ್ಯೋತಿರ್ಲಿಂಗ ದರ್ಶನ, ಅಷ್ಟ ವಿನಾಯಕ ಯಾತ್ರೆ, ಕಾಶೀ ಯಾತ್ರೆಗೆ ಪ್ರೋತ್ಸಾಹ ಧನ
    – ತಸ್ಥಿಕ್ ಹಣ ಹೆಚ್ಚಳಕ್ಕೂ ಸರ್ಕಾರಕ್ಕೆ ಪ್ರಸ್ಥಾವನೆ

    ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೇವಸ್ಥಾನಗಳ ಸಮಗ್ರ ಅಭಿವೃದ್ಧಿಯ ಕನಸನ್ನು ರಾಜ್ಯದಲ್ಲೂ ನನಸು ಮಾಡುವ ನಿಟ್ಟಿನಲ್ಲಿ ನೂತನ ಯೋಜನೆ ‘ದೈವ ಸಂಕಲ್ಪ’ ವನ್ನು ಮುಜರಾಯಿ ಇಲಾಖೆಯ ವತಿಯಿಂದ ಪ್ರಾರಂಭಿಸಲಾಗುವುದು ಎಂದು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ ಜೊಲ್ಲೆ ಅವರು ಪ್ರಕಟಿಸಿದ್ದಾರೆ.

    ಇಂದು ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿಯವರು ಕಾಶಿಯನ್ನು ಅಭಿವೃದ್ಧಿಗೊಳಿಸಿದಂತೆ ರಾಜ್ಯದಲ್ಲಿ ಅತಿ ಹೆಚ್ಚು ಭಕ್ತರು ಭೇಟಿ ನೀಡುವ 25 ದೇವಸ್ಥಾನಗಳ ಸಮಗ್ರ ಅಭಿವೃದ್ದಿಗೆ ಮಾಸ್ಟರ್ ಪ್ಲಾನ್ ರೂಪಿಸುವ ಯೋಜನೆ ಇದಾಗಿದೆ. ಮೊದಲ ಹಂತದಲ್ಲಿ 25 ದೇವಸ್ಥಾನಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದ್ದು ದೇವಸ್ಥಾನದ ಮೂಲಭೂತ ಸೌಕರ್ಯ, ಒಣ ಮತ್ತು ಹಸಿ ತ್ಯಾಜ್ಯ ನಿರ್ವಹಣೆ ಸೇರಿದಂತೆ ಸರ್ವತೋಮುಖ ಅಭಿವೃದ್ಧಿಗೊಳಿಸುವ ಯೋಜನೆ ಇದಾಗಲಿದೆ. ದೇವಸ್ಥಾನಗಳಿಗೆ ಭೇಟಿ ನೀಡುವ ಭಕ್ತರಿಗೆ ಯಾವುದೇ ತೊಂದರೆ ಅಗದ ರೀತಿಯಲ್ಲಿ ಸೌಲಭ್ಯಗಳನ್ನು ಕಲ್ಪಿಸಬೇಕು. ದೇವಸ್ಥಾನಕ್ಕೆ ಅವರು ನೀಡುವ ಕಾಣಿಕೆಗಳು ಪಾರದರ್ಶಕತೆಯಿಂದ ಸದುಪಯೋಗ ಆಗಬೇಕು ಎನ್ನುವುದು ನಮ್ಮ ಉದ್ದೇಶವಾಗಿದೆ. ಧಾರ್ಮಿಕ ಶ್ರದ್ಧಾ ಕೇಂದ್ರಗಳನ್ನು ಅಭಿವೃದ್ಧಿಗೊಳಿಸುವುದು ನನ್ನ ಮಹತ್ವದ ಕನಸಾಗಿದ್ದು, ಈ ಯೋಜನೆಯ ಮೊದಲ ಹಂತದ ಅಂದಾಜು ವೆಚ್ಚ 1,140 ಕೋಟಿ ರೂಪಾಯಿಗಳಾಗಿವೆ ಎಂದು ಹೇಳಿದರು. ಇದನ್ನೂ ಓದಿ: RD Parade 2022: ಕರ್ನಾಟಕದ ಸ್ತಬ್ಧಚಿತ್ರಕ್ಕೆ ಎರಡನೇ ಸ್ಥಾನ

    ಪ್ರತಿವರ್ಷ 1000 ಸಿ ದರ್ಜೆಯ ದೇವಸ್ಥಾನಗಳ ಸಮಗ್ರ ಅಭಿವೃದ್ಧಿ:
    ಕಡಿಮೆ ಆದಾಯವಿರುವ ಸಿ ದರ್ಜೆಯ ದೇವಸ್ಥಾನಗಳ ಅಭಿವೃದ್ಧಿ ಸರಿಯಾಗಿ ಅಗುತ್ತಿಲ್ಲ ಎನ್ನುವ ಹಲವಾರು ದೂರುಗಳು ಬಂದಿವೆ. ರಾಜ್ಯದಲ್ಲಿ 34,217ಸಿ ದರ್ಜೆಯ ದೇವಸ್ಥಾನಗಳು ಇವೆ. ಪ್ರತಿವರ್ಷ ಇವುಗಳ ಅಭಿವೃದ್ಧಿಗೆ ಸರ್ಕಾರದ ವತಿಯಿಂದ ಅನುದಾನ ನೀಡಲಾಗುತ್ತಿದೆ. ಆದರೂ, ಸಮಗ್ರವಾಗಿ ಅಭಿವೃದ್ಧಿಪಡಿಸಲು ಸಾಧ್ಯವಾಗುತ್ತಿಲ್ಲ. ಈ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ನಾವು ಪ್ರತಿವರ್ಷ 1000ಸಿ ದರ್ಜೆಯ ದೇವಸ್ಥಾನಗಳನ್ನು ಸಮಗ್ರ ಅಭಿವೃದ್ಧಿಗೊಳಿಸಲು ಕ್ರಮಕೈಗೊಳ್ಳಲಿದ್ದೇವೆ. ಸರ್ಕಾರದ ವತಿಯಿಂದ ಅನುದಾನ ಹಾಗೆಯೇ ದಾನಿಗಳ ಸಹಯೋಗದೊಂದಿಗೆ ಸಮಗ್ರ ಅಭಿವೃದ್ಧಿಗೊಳಿಸಲಾಗುವುದು. ಪ್ರತಿವರ್ಷ ಜಿಲ್ಲೆಯಲ್ಲಿ ಬೇರೆ, ಬೇರೇ ದೇವಸ್ಥಾನಗಳನ್ನು ಅಭಿವೃದ್ಧಿಗೆ ಆಯ್ಕೆ ಮಾಡಿಕೊಳ್ಳುವ ಮೂಲಕ ಎಲ್ಲಾ ಸಿ ದರ್ಜೆಯ ದೇವಸ್ಥಾನಗಳನ್ನು ಹಂತ ಹಂತವಾಗಿ ಅಭಿವೃದ್ಧಿಗೊಳಿಸುವುದು ನಮ್ಮ ಗುರಿಯಾಗಿದೆ ಎಂದು ಹೇಳಿದರು.

    ರಾಜ್ಯದ ದೇವಾಲಯಗಳ ಅಭಿವೃದ್ದಿಗೆ 168 ಕೋಟಿ ವಿಶೇಷ ಅನುದಾನ:
    ದೇವಾಲಯಗಳು ನಮ್ಮೊಂದಿಗೆ ಭಾವನಾತ್ಮಕವಾದ ಸಂಬಂಧ ಹೊಂದಿವೆ. ರಾಜ್ಯದ ದೇವಾಲಯಗಳ ಅಭಿವೃದ್ದಿಗೆ ವಿಶೇಷ ಕಾಳಜಿಯನ್ನು ನಮ್ಮ ಬಿಜೆಪಿ ಸರ್ಕಾರ ವಹಿಸುತ್ತಿದೆ. ಈ ಬಾರಿಯ ಆಯವ್ಯಯದಲ್ಲಿ 119 ಕೋಟಿ ರೂಪಾಯಿಗಳ ಅನುದಾನ ನೀಡಲಾಗಿತ್ತು. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ರಾಜ್ಯದ ದೇವಾಲಯಗಳ ಅಭಿವೃದ್ಧಿಗೆ 168 ಕೋಟಿ ರೂಪಾಯಿಗಳ ವಿಶೇಷ ಅನುದಾನವನ್ನು ನೀಡಿದ್ದು, ಒಟ್ಟಾರೆಯಾಗಿ ಪ್ರಸಕ್ತ ವರ್ಷ ಇದುವರೆಗೂ 287 ಕೋಟಿ ಅನುದಾನ ನೀಡಲಾಗಿದೆ. ಪ್ರತಿವರ್ಷ ಬಜೆಟ್‍ನಲ್ಲಿ 60 ರಿಂದ 70 ಕೋಟಿ ರೂಪಾಯಿಗಳಷ್ಟು ಅನುದಾನ ನೀಡಲಾಗುತ್ತಿತ್ತು, ಬಿಜೆಪಿ ಸರ್ಕಾರ ನಾಲ್ಕು ಪಟ್ಟು ಹೆಚ್ಚು ಅನುದಾನ ನೀಡಿರುವ ಹಿನ್ನಲೆಯಲ್ಲಿ ಮುಜರಾಯಿ ಖಾತೆ ಸಚಿವೆಯಾಗಿ ನಾನು ಮುಖ್ಯಮಂತ್ರಿಗಳಿಗೆ ವಿಶೇಷವಾದ ಅಭಿನಂದನೆ ಸಲ್ಲಿಸುತ್ತೇನೆ ಎಂದರು. ಇದನ್ನೂ ಓದಿ: ಕೋವಿಡ್‌ ಸಂತ್ರಸ್ತರ ಕುಟುಂಬಗಳಿಗೆ 10 ದಿನದೊಳಗೆ ಪರಿಹಾರ ನೀಡಿ: ರಾಜ್ಯಗಳಿಗೆ ಸುಪ್ರೀಂ ಸೂಚನೆ

    ಶ್ರೀಶೈಲದಲ್ಲಿ ಕರ್ನಾಟಕ ಛತ್ರ ನಿರ್ಮಾಣ:
    ಕರ್ನಾಟಕ ರಾಜ್ಯದಿಂದ ಬಹುಸಂಖ್ಯೆಯಲ್ಲಿ ಭಕ್ತರು ತೆರಳುವ ಆಂಧ್ರಪ್ರದೇಶದ ಶ್ರೀಶೈಲದಲ್ಲಿ ಮುಜರಾಯಿ ಇಲಾಖೆ ಒಡೆತನದಲ್ಲಿರುವ ಭೂಮಿಯಲ್ಲಿ ಕರ್ನಾಟಕ ಛತ್ರ ನಿರ್ಮಿಸಲು 85 ಕೋಟಿ ರೂಪಾಯಿಗಳ ವಿಶೇಷ ಅನುದಾನವನ್ನು ಮುಖ್ಯಮಂತ್ರಿಗಳು ನೀಡಿದ್ದಾರೆ. ಲೋಕೋಪಯೋಗಿ ಇಲಾಖೆ ಸಹಯೋಗದಲ್ಲಿ ಈ ಕಟ್ಟಡ ನಿರ್ಮಾಣ ಕಾರ್ಯ ನಡೆಯಲಿದೆ. 45 ಕೋಟಿ ರೂಪಾಯಿ ವೆಚ್ಚದಲ್ಲಿ ಮೊದಲ ಹಂತದ ಯೋಜನೆಯನ್ನು ಕೈಗೆತ್ತಿಕೊಳ್ಳುವಂತೆ ಮುಖ್ಯಮಂತ್ರಿಗಳ ತಿಳಿಸಿದ್ದಾರೆ ಎಂದು ಸಚಿವರು ಹೇಳಿದರು.

    12 ಜ್ಯೋತಿರ್ಲಿಂಗ ಹಾಗೂ ಅಷ್ಟವಿನಾಯಕ ಮತ್ತು ಕಾಶೀ ಯಾತ್ರೆಗೆ ಪ್ರೋತ್ಸಾಹ ಧನ:
    ದೇಶದ ವಿವಿಧ ಭಾಗಗಳಲ್ಲಿರುವ 12 ಜ್ಯೋತಿರ್ಲಿಂಗ ಹಾಗೂ ಅಷ್ಟವಿನಾಯಕ ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡುವುದು ಬಹಳ ಪುಣ್ಯವಾದ ಕೆಲಸ ಎನ್ನುವುದ ಹಿಂದುಗಳ ನಂಬಿಕೆ. ಈ ನಿಟ್ಟಿನಲ್ಲಿ ಕೈಲಾಸ ಮಾನಸ ಸರೋವರ ಮತ್ತು ಚಾರ್‍ಧಾಮ್ ಯಾತ್ರೆಗೆ ನೀಡುವ ಪ್ರೋತ್ಸಾಹ ಧನ ನೀಡುವ ಯೋಜನೆಯಂತೆ ಇವುಗಳಿಗೂ ಪ್ರೋತ್ಸಾಹ/ಸಹಾಯ ಧನ ನೀಡುವ ಯೋಜನೆಯನ್ನು ಪ್ರಾರಂಭಿಸಲಾಗುವುದು. 12 ಜ್ಯೋತಿರ್ಲಿಂಗ ಯಾತ್ರೆ ಮತ್ತು ಅಷ್ಟವಿನಾಯಕ ಪ್ರೋತ್ಸಾಹ ಧನ ನೀಡುವ ಪ್ರಸ್ತಾವನೆ ಸಿದ್ಧವಾಗಿದೆ. ಕಾಶೀ ಯಾತ್ರೆಗೂ ಪ್ರತ್ಯೇಕವಾಗಿ ವಾರ್ಷಿಕವಾಗಿ ಎರಡು ಬಾರಿ ರೈಲಿನಲ್ಲಿ ಪ್ರವಾಸ ಏರ್ಪಡಿಸುವ ಅಥವಾ ಪ್ರೋತ್ಸಾಹ ಧನ ನೀಡುವ ಪ್ರಸ್ತಾವನೆ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದರು. ಇದನ್ನೂ ಓದಿ: ಕಾರಿನಲ್ಲಿ ಏಕಾಂಗಿಯಾಗಿ ಓಡಾಡುವಾಗ ಮಾಸ್ಕ್ ಅಗತ್ಯ ಇಲ್ಲ – ದೆಹಲಿಯಲ್ಲಿ ವಿನಾಯಿತಿ

    ತಸ್ತಿಕ್ ಹಣ ಹೆಚ್ಚಳಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ:
    ರಾಜ್ಯ ಸರ್ಕಾರದ ವತಿಯಿಂದ ರಾಜ್ಯದಲ್ಲಿರುವ ಸಿ ದರ್ಜೆಯ ದೇವಸ್ಥಾನಗಳಿಗೆ ವಾರ್ಷಿಕವಾಗಿ 48 ಸಾವಿರ ರೂಪಾಯಿಗಳ ತಸ್ತಿಕ್ ಹಣವನ್ನು ನೀಡಲಾಗುತ್ತಿದೆ. ಹೆಚ್ಚಿನ ಆದಾಯವಿಲ್ಲದ ದೇವಸ್ಥಾನಗಳ ಅರ್ಚಕರು ಹಾಗೂ ಮೋಕ್ತೇಸರರು ಹಲವಾರು ಬಾರಿ ಈ ಹಣವನ್ನು ಹೆಚ್ಚು ಮಾಡುವಂತೆ ಮನವಿ ಮಾಡಿದ್ದಾರೆ. ಇಂದಿನ ದಿನಮಾನದಲ್ಲಿ ಈ ಹಣ ಸಾಕಾಗುವುದಿಲ್ಲ ಎನ್ನುವುದು ನಮ್ಮ ಗಮನಕ್ಕೆ ಬಂದಿದ್ದು, ತಸ್ತಿಕ್ ಹಣವನ್ನು ಹೆಚ್ಚಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಪ್ರಸ್ತಾವನೆಗೆ ಆರ್ಥಿಕ ಇಲಾಖೆಯ ಅನುಮೋದನೆ ಸಿಗುವಂತೆ ಮಾಡುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗುವುದು ಎಂದು ಹೇಳಿದರು.

    ರಾಜ್ಯದ ದೇವಸ್ಥಾನಗಳ ಜಮೀನು ಸರ್ವೆ:
    ರಾಜ್ಯದ ದೇವಸ್ಥಾನಗಳ ವ್ಯಾಪ್ತಿಯಲ್ಲಿರುವ ಜಮೀನುಗಳ ಸರ್ವೇ ಕಾರ್ಯಕ್ಕೆ ಚುರುಕು ಮುಟ್ಟಿಸುವ ನಿಟ್ಟಿನಲ್ಲಿ ಕಂದಾಯ ಸಚಿವರಾದ ಅಶೋಕ್ ಅವರೊಂದಿಗೆ ಚರ್ಚೆ ನಡೆಸಿದ್ದೇನೆ. ಕೆಲವೇ ದಿನಗಳಲ್ಲಿ ಪ್ರಾರಂಭವಾಗಲಿರುವ ಡ್ರೋನ್ ಸರ್ವೇ ಕಾರ್ಯದಲ್ಲಿ ದೇವಾಲಯಗಳ ಹಾಗೂ ವಕ್ಫ್ ಜಮೀನಿನ ಸಮೀಕ್ಷೆಗಳಿಗೆ ವಿಶೇಷ ಆದ್ಯತೆ ನೀಡಲಾಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ನಾಳೆಯಿಂದ ಥಿಯೇಟರ್‌ ಹೌಸ್‌ ಫುಲ್‌- ಸರ್ಕಾರದಿಂದ ಅನುಮತಿ

    ಅಯೋಧ್ಯೆಯಲ್ಲಿ ಕರ್ನಾಟಕದ ಛತ್ರ:
    ಅಯೋಧ್ಯೆಯಲ್ಲಿ ಕರ್ನಾಟಕ ರಾಜ್ಯದ ಛತ್ರವನ್ನು ನಿರ್ಮಿಸಬೇಕು ಎನ್ನುವ ನಿಟ್ಟಿನಲ್ಲಿ ಈಗಾಗಲೇ ಪತ್ರವ್ಯವಹಾರ ನಡೆಸಲಾಗಿದೆ. ಅಧಿವೇಶನ ಮುಗಿದ ನಂತರ ಆಯೋಧ್ಯೆಗೆ ಭೇಟಿ ನೀಡಿ ಅಲ್ಲಿನ ಪ್ರಮುಖ ಅಧಿಕಾರಿಗಳೊಂದಿಗೆ ಈ ಬಗ್ಗೆ ಚರ್ಚಿಸಲಾಗುವುದು ಎಂದು ತಿಳಿಸಿದರು.

    ಪತ್ರಿಕಾಗೋಷ್ಠಿಯಲ್ಲಿ ಮುಜರಾಯಿ ಆಯುಕ್ತೆ ರೋಹಿಣಿ ಸಿಂಧೂರಿ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

  • ನನಗೆ ಅವರ ಹೆಸರು ಹೇಳೋಕೆ ಬೇಜಾರಾಗುತ್ತೆ – ಸಿಂಧೂರಿ ವಿರುದ್ಧ ಸಾರಾ ಮಹೇಶ್ ಪರೋಕ್ಷ ವಾಗ್ದಾಳಿ

    ನನಗೆ ಅವರ ಹೆಸರು ಹೇಳೋಕೆ ಬೇಜಾರಾಗುತ್ತೆ – ಸಿಂಧೂರಿ ವಿರುದ್ಧ ಸಾರಾ ಮಹೇಶ್ ಪರೋಕ್ಷ ವಾಗ್ದಾಳಿ

    – ವಿಧಾನಭೆಯಲ್ಲಿ ಸ್ವಿಮ್ಮಿಂಗ್ ಪೂಲ್ ವಿಚಾರ ಪ್ರಸ್ತಾಪ

    ಬೆಂಗಳೂರು: ವಿಧಾನಸಭೆ ಕಲಾಪದಲ್ಲಿ ಶಾಸಕ ಸಾ.ರಾ.ಮಹೇಶ್ ಅವರು ರೋಹಿಣಿ ಸಿಂಧೂರಿ ವಿರುದ್ಧ ಹಕ್ಕುಚ್ಯುತಿ ಮಂಡನೆ ಮಾಡಿ, ನನಗೆ ಅವರ ಹೆಸರು ಹೇಳಲು ಬೇಸರವಾಗುತ್ತದೆ ಎಂದು ವಾಗ್ದಾಳಿ ಮಾಡಿದ್ದಾರೆ.

    ವಿಧಾನಸಭಾ ಕಲಾಪದ ವೇಳೆ ಬ್ಯಾಗ್ ಖರೀದಿ ವಿಚಾರ ಪ್ರಸ್ತಾಪ ಮಾಡಿದಾಗ ಹೆಸರು ಹೇಳದೆ ಹಿಂದಿನ ಮೈಸೂರು ಜಿಲ್ಲಾಧಿಕಾರಿ ಎಂದು ಸಾ.ರಾ.ಮಹೇಶ್ ಹೇಳಿದಾಗ, ಹೆಸರು ಹೇಳಿ ಎಂದು ಜೆಡಿಎಸ್ ಶಾಸಕರು ಒತ್ತಾಯಿಸಿದ್ದಾರೆ. ಆಗ ಸಾ.ರಾ.ಮಹೇಶ್ ಅವರು ನನಗೆ ಅವರ ಹೆಸರು ಹೇಳೋದಕ್ಕೆ ಬೇಜಾರ್ ಆಗುತ್ತದೆ ಎಂದು ಪರೋಕ್ಷವಾಗಿ ರೋಹಿಣಿ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದಾರೆ. ಇದನ್ನೂ ಓದಿ:  ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್

    ಹಿಂದಿನ ಮೈಸೂರು ಜಿಲ್ಲಾಧಿಕಾರಿ ಸ್ವಿಮ್ಮಿಂಗ್ ಪೂಲ್ ವಿಚಾರ ಸದನಲ್ಲಿ ಪ್ರಸಾಪವಾಗಿದೆ. ಸ್ವಿಮ್ಮಿಂಗ್ ಪೂಲ್ ಕಟ್ಟಲು 30 ಲಕ್ಷ ರೂಪಾಯಿ ಏಕೆ ಎಂದು ಪ್ರಶ್ನಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಗೆಯೇ ಸ್ವಿಮ್ಮಿಂಗ್ ಪೂಲ್ ಫೋಟೋ ಪ್ರದರ್ಶನ ಮಾಡಿ ಮೈಸೂರು ಜಿಲ್ಲಾಧಿಕಾರಿ ವಿರುದ್ಧ ಹಕ್ಕುಚ್ಯುತಿ ವಿಚಾರ ಪ್ರಸ್ತಾಪ ಮಾಡಿದ್ದಾರೆ. ಇದನ್ನೂ ಓದಿ:  ನನ್ನ ಹೆತ್ತ ತಾಯಿಯನ್ನ ಮತಾಂತರ ಮಾಡಿದ್ದಾರೆ: ಗೂಳಿಹಟ್ಟಿ ಶೇಖರ್

    ಕ್ರೀಯಾ ಯೋಜನೆಯಲ್ಲಿ ಬ್ಯಾಗ್ ಖರೀದಿ ಮಾಡಿದ್ದಾರೆ. ಮೈಸೂರು ಪುರಸಭೆ, ತಾಲೂಕು ಪಂಚಾಯ್ತಿ ಜಿಲ್ಲಾ ಪಂಚಾಯ್ತಿ ಹಕ್ಕು ಮೊಟಕುಗೊಳಿಸಿ ಜಿಲ್ಲಾಧಿಕಾರಿ ನೇರವಾಗಿ ಖರೀದಿ ಮಾಡಿದ್ದಾರೆ. ಸಾ.ರಾ.ಮಹೇಶ್ ಒತ್ತಡ ತಂದು ವರ್ಗಾವಣೆ ಮಾಡಿದ್ದಾರೆ ಅಂತಾ ಯಾರದೋ ಕಾಲು ಕಟ್ಟಿ ಮೈಸೂರಿಗೆ ಜಿಲ್ಲಾಧಿಕಾರಿಯಾಗಿ ಬಂದಿದ್ರು, ಬಂದು ಮಾಡಿದ್ದೆಲ್ಲ ಅನಾಚಾರದ ಕೆಲಸವಾಗಿದೆ. ಮೂವತ್ತು ಲಕ್ಷಕ್ಕೆ ಸ್ವಿಮ್ಮಿಂಗ್ ಪೂಲ್ ಮಾಡಿಸಿಕೊಂಡ್ರು, ಹದಿನೈದು ಲಕ್ಷಕ್ಕೆ ಕಚೇರಿ ನವೀಕರಣ ಮಾಡಿಸಿಕೊಂಡರು ಎಂದು ಹೇಳುವ ಮೂಲಕ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಮಹೇಶ್ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಜೂಜಾಟದ ಬಿಗಿ ಕ್ರಮಕ್ಕೆ, ಪೊಲೀಸ್ ಕಾಯ್ದೆ ತಿದ್ದುಪಡಿ ತರುತ್ತಿದ್ದೇವೆ: ಬೊಮ್ಮಾಯಿ

    ಆರೋಪದ ವೇಳೆ ನ್ಯೂಸ್ ಪೇಪರ್ ಕಟ್ಟಿಂಗ್ಸ್ ತೋರಿಸಿ ರೋಹಿಣಿ ಸಿಂಧೂರಿ ಎಂದ ಸಾ.ರಾ.ಮಹೇಶ್, ನಾನು ಹೆಸರು ಹೇಳಲಿಲ್ಲ, ಆದರೆ ಪೇಪರ್‌ನಲ್ಲಿ  ಇರೋದನ್ನ ಹೇಳಿದ್ದೇನೆ ಅನ್ನೋ ಮೂಲಕ ಹೆಸರೇಳದೆ ಜಾರಿಕೊಂಡರು.

  • ಮಹಿಳಾ ಅಧಿಕಾರಿಗಳು ಅನ್ನೋದೆ ಕೆಲವರಿಗೆ ಅಡ್ವಾಂಟೇಜ್ : ಸಾ.ರಾ ಮಹೇಶ್

    ಮಹಿಳಾ ಅಧಿಕಾರಿಗಳು ಅನ್ನೋದೆ ಕೆಲವರಿಗೆ ಅಡ್ವಾಂಟೇಜ್ : ಸಾ.ರಾ ಮಹೇಶ್

    – ಸದನದಲ್ಲಿ ಬ್ಯಾಗ್ ಪ್ರದರ್ಶಿಸಿ ವಾಗ್ದಾಳಿ
    – ರೋಹಿಣಿ ಸಿಂಧೂರಿ ವಿರುದ್ಧ ಪರೋಕ್ಷ ಕಿಡಿ

    ಬೆಂಗಳೂರು: ಕೋವಿಡ್ ಕಾಲದಲ್ಲಿ ಸರ್ಕಾರ ಒಳ್ಳೆಯ ಕೆಲಸ ಮಾಡುತ್ತಿದೆ. ನಿಕಟ ಪೂರ್ವ ಮುಖ್ಯಮಂತ್ರಿಗಳೂ ಸಾಕಷ್ಟು ಸಹಕಾರ ಕೊಟ್ಟಿದ್ದಾರೆ. ಆದರೆ ಕೆಲವು ಅಧಿಕಾರಿಗಳು ಮಾತ್ರಾ ಭ್ರಷ್ಟರಾಗಿ ಬದುಕುತ್ತಿದ್ದಾರೆ. ಕೇವಲ ಒಂದು ಬ್ಯಾಗ್ ವಿಚಾರದಲ್ಲಿ ಆರೂವರೆ ಕೋಟಿ ರೂಪಾಯಿ ನುಂಗಿದ್ದಾರೆ. ಎಂದು ಜೇಬಿನಲ್ಲಿ ಬ್ಯಾಗ್ ಇಟ್ಟುಕೊಂಡು ಬಂದಿದ್ದ ಜೆಡಿಎಸ್ ಶಾಸಕ ಸಾ.ರಾ ಮಹೇಶ್, ಸದನದಲ್ಲಿ ಬ್ಯಾಗ್ ಪ್ರದರ್ಶನ ಮಾಡಿ ರೋಹಿಣಿ ಸಿಂಧೂರಿ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.

    20 ವರ್ಷದಿಂದ 40 ವರ್ಷದೊಳಗಿನ ಮಹಿಳಾ ಅಧಿಕಾರಿಗಳು ಇದ್ದರೆ ನಮ್ಮವರೇ ನಮಗೆ ವಿಲನ್ ಆಗುತ್ತಾರೆ. ಮಹಿಳಾ ಅಧಿಕಾರಿಗಳು ಅನ್ನೋದೆ ಕೆಲವರಿಗೆ ಅಡ್ವಾಂಟೇಜ್ ಆಗಿದೆ ಎಂದು ಸಾ.ರಾ ಮಹೇಶ್ ಭಾವುಕರಾಗಿ ನುಡಿದರು. ಇದನ್ನೂ ಓದಿ: ರಾಯಚೂರಿನಲ್ಲಿ ಮಕ್ಕಳನ್ನು ಕಾಡುತ್ತಿದೆ ವೈರಲ್ ಫೀವರ್: ಆಸ್ಪತ್ರೆಗಳಲ್ಲಿ ಬೆಡ್ ಸಮಸ್ಯೆ

    ವಿಧಾನಸಭಾ ಅಧಿವೇಶನದಲ್ಲಿ ಪಿಡಿ ಖಾತೆಗಳ ಬಗ್ಗೆ ಎಚ್.ಡಿ ಕುಮಾರಸ್ವಾಮಿ ಪ್ರಸ್ತಾಪ ಮಾಡುತ್ತಿದ್ದಂತೆ ಎದ್ದು ನಿಂತು ಸಾ.ರಾ ಮಹೇಶ್, ರೋಹಿಣಿ ಸಿಂಧೂರಿ ವಿರುದ್ಧ ಆರೋಪ ಮಾಡಲು ಪ್ರಾರಂಭಿಸಿದರು. ಕೆಲ ಅಧಿಕಾರಿಗಳು ಜನರ ತೆರಿಗೆ ಹಣದಲ್ಲಿ ಶೋಕಿ ಮಾಡಿಕೊಂಡು ಬದುಕುತ್ತಿದ್ದಾರೆ. ಬ್ಯಾಗ್ ಖರೀದಿಯಲ್ಲಿ 6.5 ಕೋಟಿ ರೂ. ಅಕ್ರಮ ನಡೆದಿದೆ. ಆ ಅಧಿಕಾರಿ ಮೈಸೂರಿನಲ್ಲಿ ಲೂಟಿ ಮಾಡಿದ್ದಾರೆ ಎಂದು ಹೆಸರು ಹೇಳದೇ ರೋಹಿಣಿ ಸಿಂಧೂರಿ ವಿರುದ್ಧ ಸಾ.ರಾ ಮಹೇಶ್ ಕಿಡಿ ಕಾರಿದ್ದಾರೆ.

    ಕಲಾಪದಲ್ಲಿ ರೋಷಾವೇಶದಿಂದ ಮಾತನಾಡಿದ ಸಾ.ರಾ ಮಹೇಶ್, ಇಂಥ ಅಧಿಕಾರಿಗಳಿಂದ ನಮ್ಮ ರಕ್ಷಣೆಗೆ ಬನ್ನಿ. ಸರ್ಕಾರಕ್ಕೆ ಕ್ರಮ ತೆಗೆದುಕೊಳ್ಳುವ ತಾಕತ್ ಇದ್ಯಾ? ಐಎಎಸ್, ಐಪಿಎಸ್ ಮನೆಗಳ ಮೇಲೆ ಐಟಿ ರೇಡ್ ಆಗುತ್ತಾ? ಎಂಜಿನಿಯರ್, ಸಣ್ಣಪುಟ್ಟ ಅಧಿಕಾರಿಗಳ ಮೇಲೆ ಮಾತ್ರ ಐಟಿ ರೇಡ್ ಆಗುತ್ತದೆ ಎಂದು ಸದನದಲ್ಲಿ ಭಾವೋದ್ವೇಗದಿಂದ ಗದ್ಗದಿತರಾದರು. ಇದನ್ನೂ ಓದಿ: ಹಿರಿಯ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಸ್ವಯಂ ನಿವೃತ್ತಿಗೆ ಅರ್ಜಿ

    ನೆರವಿಗೆ ಧಾವಿಸಿದ ಎಚ್‍ಡಿಕೆ
    ಒಬ್ಬ ಸರ್ಕಾರಿ ಅಧಿಕಾರಿ ಶಾಸಕರ ಮೇಲೆ ಮಾಧ್ಯಮಗಳ ಎದುರು ಹೋಗಿದ್ದು ಯಾಕೆ? ಇವರಿಗೆ ಅಧಿಕಾರ ಯಾರು ಕೊಟ್ರು? ಅವರು ಐಎಎಸ್ ಇರಲಿ, ಬೇರೆ ಇರಲಿ ಎಂದು ಕುಮಾರಸ್ವಾಮಿ ಹೇಳಿದರು. ಈ ವೇಳೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಮಾತನಾಡಿ, ನಾನೂ ಸಹ ಸಿಎಸ್ ಜೊತೆ ಈ ಬಗ್ಗೆ ಮಾತನಾಡಿದ್ದೇನೆ ರೂಲ್ಸ್ ನಲ್ಲಿ ಹೀಗೆ ಅಧಿಕಾರಿಗಳು ಹೋಗಿ ಮಾತಾಡೋದು ಸರಿಯಲ್ಲ. ಸಿಎಸ್ ಸೂಚನೆ ಕೊಟ್ಟಿರಬೇಕು ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಕಬ್ಬಿನ ಗದ್ದೆಗೆ ಬೆಂಕಿ- ನೂರಾರು ಟನ್ ಕಬ್ಬು ಬೆಂಕಿಗಾಹುತಿ

    ಈ ವಿಷಯದ ಬಗ್ಗೆ ಮಾತನಾಡಿದ ಆರ್.ಅಶೋಕ್, ಸಾ.ರಾ ಮಹೇಶ್ ಇದನ್ನು ನಮ್ಮ ಗಮನಕ್ಕೆ ತಂದಿದ್ದಾರೆ. ಸಿಎಸ್ ಜೊತೆ ನಾನೂ ಮಾತಾಡಿದ್ದೇನೆ. ಸರ್ಕಾರಿ ಅಧಿಕಾರಿಗಳು ಮಾಧ್ಯಮಗಳೆದುರು ಹೋಗಿ ಮಾತಾಡುವಂತಿಲ್ಲ. ಕೆಲವು ಅಧಿಕಾರಿಗಳು ಓವರ್ ಆ್ಯಕ್ಟಿಂಗ್ ಮಾಡುತ್ತಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳಲು ಸಿಎಸ್‍ಗೆ ನಾವು ಸೂಚಿಸುತ್ತೇವೆ ಎಂದು ತಿಳಿಸಿದರು.

  • ರೋಹಿಣಿ ಸಿಂಧೂರಿ ವಿರುದ್ಧ ಭ್ರಷ್ಟಾಚಾರ ಆರೋಪ – ಚರ್ಚೆಗೆ ಆಗ್ರಹಿಸಿ ಸಾರಾ ಮಹೇಶ್ ಪ್ರತಿಭಟನೆ

    ರೋಹಿಣಿ ಸಿಂಧೂರಿ ವಿರುದ್ಧ ಭ್ರಷ್ಟಾಚಾರ ಆರೋಪ – ಚರ್ಚೆಗೆ ಆಗ್ರಹಿಸಿ ಸಾರಾ ಮಹೇಶ್ ಪ್ರತಿಭಟನೆ

    ಬೆಂಗಳೂರು: ಜೆಡಿಎಸ್ ಶಾಸಕ ಸಾರಾ ಮಹೇಶ್ ಇಂದು ವಿಧಾನಸಭೆಯ ಬಾವಿಗೆ ಇಳಿದು ಧರಣಿ ನಡೆಸಿದ ಪ್ರಸಂಗ ನಡೆಯಿತು.

    ಅಧಿವೇಶನದ ವೇಳೆ ಮೈಸೂರಿನ ಮಾಜಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮೇಲೆ ಬಂದಿರುವ ಬ್ಯಾಗ್ ಖರೀದಿ ಅಕ್ರಮ ಆರೋಪ ಪ್ರಕರಣದ ಬಗ್ಗೆ ಚರ್ಚೆ ನಡೆಸಲು ಅನಮತಿ ಕೇಳಿದರು. ಇದನ್ನೂ ಓದಿ: 7 ಕೋಟಿ ಮೊತ್ತದ ಅಡಿಕೆಯ ಜೊತೆ 7 ಲಾರಿ ಜಪ್ತಿ – 7 ಮಂದಿ ಅರೆಸ್ಟ್

    ಸಾರಾ ಮಹೇಶ್ ಈಗಲೇ ಹಕ್ಕುಚ್ಯುತಿ ಸೂಚನೆಯ ಚರ್ಚೆ ನಡೆಸುವಂತೆ ಆಗ್ರಹಿಸಿದರು. ಆದರೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅನುಮತಿ ನೀಡಲಿಲ್ಲ. ಇದನ್ನೂ ಓದಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪಟಾಕಿ ಸಂಪೂರ್ಣ ನಿಷೇಧ 

    ಆರೋಪ ಗಂಭೀರವಾಗಿದ್ದು ಚರ್ಚೆ ನಡೆಸಲು ಅನುಮತಿ ನೀಡಬೇಕೆಂದು ಆಗ್ರಹಿಸಿದ್ದರೂ ಸ್ಪೀಕರ್ ಒಪ್ಪಿಗೆ ನೀಡಲಿಲ್ಲ. ಹೀಗಾಗಿ ಚರ್ಚೆಗೆ ಪಟ್ಟು ಹಿಡಿದ ಸಾರಾ ಮಹೇಶ್ ಸದನದ ಬಾವಿಗಿಳಿದು ಧರಣಿ ನಡೆಸಿದರು. ಕೊನೆಗೆ ಸ್ಪೀಕರ್ ಕಾಗೇರಿ ಚರ್ಚೆಗೆ ಅವಕಾಶ ನೀಡುವುದಾಗಿ ಹೇಳಿದ ಬಳಿಕ ಸಾರಾ ಮಹೇಶ್ ಧರಣಿಯನ್ನು ವಾಪಸ್ ಪಡೆದರು.