Tag: Rohini Sindhuri

  • ಚೌಟ್ರಿಯನ್ನು ನಾನೇ ಟ್ರ್ಯಾಲಿ ಹಾಕಿ ಹಿಂದೆ ಮುಂದೆ ಸರಿಸೋಕೆ ಆಗುತ್ತಾ?- ಸರ್ವೆಗೆ ಸ್ವಾಗತಿಸಿದ್ರು ಸಾ.ರಾ ಮಹೇಶ್

    ಚೌಟ್ರಿಯನ್ನು ನಾನೇ ಟ್ರ್ಯಾಲಿ ಹಾಕಿ ಹಿಂದೆ ಮುಂದೆ ಸರಿಸೋಕೆ ಆಗುತ್ತಾ?- ಸರ್ವೆಗೆ ಸ್ವಾಗತಿಸಿದ್ರು ಸಾ.ರಾ ಮಹೇಶ್

    ಮೈಸೂರು: ಚೌಟ್ರಿಯನ್ನು ನಾನೇ ಟ್ರ್ಯಾಲಿ ಹಾಕಿ ಹಿಂದೆ ಮುಂದೆ ಸರಿಸೋಕೆ ಆಗುತ್ತಾ ಎಂದು ಪ್ರಶ್ನಿಸಿರುವ ಶಾಸಕ ಸಾ.ರಾ ಮೇಶ್ ಅವರು ನೀವೇ ಸರ್ವೆಗೆ ಬನ್ನಿ ಎಂದು ಸ್ವಾಗತಿಸಿದ್ದಾರೆ.

    ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಸರ್ವೆಗೆ ನನ್ನ ಸ್ವಾಗತವಿದೆ. ಸರ್ವೆಗೆ ಆಯುಕ್ತರೇ ಬರಲಿ. ಚೌಟ್ರಿಯನ್ನು ನಾನೇ ಟ್ರ್ಯಾಲಿ ಹಾಕಿ ಹಿಂದೆ ಮುಂದೆ ಸರಿಸೋಕೆ ಆಗಲ್ಲ. ಹೀಗಾಗಿ ಸರ್ವೆಗೆ ನೀವೇ ಬನ್ನಿ ಎಂದು ಸಂಪೂರ್ಣವಾಗಿ ಸ್ವಾಗತಿಸಿದ್ದಾರೆ.

    ರಾಜಕಾಲುವೆ, ಗೋಮಾಳದ ಒಂದೇ ಒಂದು ಗುಂಟೆ ಒತ್ತುವರಿ ಆಗಿದ್ದರೆ ಚೆಕ್ ಮಾಡಿ ಬನ್ನಿ. ನಾನೇ ನಿಮಗೆ ಬೊಕ್ಕೆ ನೀಡಿ ಸರ್ವೆಗೆ ಸ್ವಾಗತಿಸುತ್ತೇನೆ. ನಿಮ್ಮ ಶಿಷ್ಯೆನೋ, ಜ್ಯೂನಿಯರ್ ಇದ್ದಾರಲ್ಲ ಅವರು ಆಸ್ತಿ ಘೋಷಣೆ ಮಾಡಿದ್ದಾರಾ ಮನೀಷ್ ಮುದ್ಗಲ್ ಅವರೇ? ಕಾನೂನಿನಲ್ಲಿ ಅವಕಾಶ ಇದ್ದರೂ ಶಿಷ್ಯೆಗಾಗಿ ಸರ್ವೆಗೆ ಆದೇಶ ಮಾಡಿದ್ದೀರಿ. ನಿಮ್ಮ ಕುಚುಕು ಶಿಷ್ಯೆಗಾಗಿ ಆದೇಶ ಮಾಡಿದ್ದೀರಿ ಎಂದು ಶಾಸಕರು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಸಾರಾ ಚೌಟ್ರಿ ಹಳ್ಳದ ಮೇಲೂ ಕಟ್ಟಿಲ್ಲ, ನಾಲೆಯ ಮೇಲೂ ಕಟ್ಟಿಲ್ಲ: ಪ್ರಾದೇಶಿಕ ಆಯುಕ್ತರ ವರದಿಯಲ್ಲಿ ಬಹಿರಂಗ

    ಸಾರಾಗೆ ಭೂ ಕಂಟಕ:
    ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕಿಕ್‍ಬ್ಯಾಕ್ ಆರೋಪ ಮಾಡಿದ್ದ ಶಾಸಕ ಸಾ.ರಾ ಮಹೇಶ್‍ಗೆ ಮತ್ತೆ ಭೂಕಂಟಕ ಎದುರಾದಂತೆ ಇದೆ. ಮೈಸೂರು-ಶ್ರೀರಂಗಪಟ್ಟಣ ವ್ಯಾಪ್ತಿಯಲ್ಲಿ ಸರ್ಕಾರಿ ಭೂಮಿ ಒತ್ತುವರಿ ತನಿಖೆಗೆ ಹೊಸ ತಂಡ ರಚಿಸಿ ಭೂಕಂದಾಯ ಇಲಾಖೆ ಆಯುಕ್ತ ಮನಿಷ್ ಮೌದ್ಗಿಲ್ ಆದೇಶ ಹೊರಡಿಸಿದ್ದರು.

    ಕೇರಗಳ್ಳಿಯ ಸರ್ವೇ ನಂಬರ್ 115, ಯಡಹಳ್ಳಿಯ ಸರ್ವೇ ನಂಬರ್ 69,72, ದಟ್ಟಗಳ್ಳಿಯ ಸರ್ವೇ ನಂಬರ್ 130/3, ಲಿಂಗಾಬುದಿ ಸರ್ವೇ ನಂಬರ್ 10ರಲ್ಲಿ ನಡೆದ ಭೂಒತ್ತುವರಿಗಳ ತನಿಖೆ ನಡೆಸಿ 10 ದಿನದಲ್ಲಿ ವರದಿ ನೀಡಲು ಸೂಚಿಸಿದ್ದಾರೆ. ದಟ್ಟಗಳ್ಳಿ ಮತ್ತು ಲಿಂಗಾಬುದಿ ಸರ್ವೇ ನಂಬರ್ ಗಳಲ್ಲಿ ಸಾರಾ ಮಹೇಶ್ ಒಡೆತನದ ತೋಟ, ಕಲ್ಯಾಣ ಮಂಟಪ ಇದೆ. ಹೀಗಾಗಿ ಸಹಜವಾಗಿಯೇ ಇವುಗಳ ಸರ್ವೇ ಕೂಡ ನಡೆಯಲಿದೆ.

  • ಶಾಸಕ ಸಾ.ರಾ ಮಹೇಶ್‍ಗೆ ಮತ್ತೆ ಭೂಕಂಟಕ?

    ಶಾಸಕ ಸಾ.ರಾ ಮಹೇಶ್‍ಗೆ ಮತ್ತೆ ಭೂಕಂಟಕ?

    ಮೈಸೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕಿಕ್‍ಬ್ಯಾಕ್ ಆರೋಪ ಮಾಡಿದ್ದ ಶಾಸಕ ಸಾ.ರಾ ಮಹೇಶ್‍ಗೆ ಮತ್ತೆ ಭೂಕಂಟಕ ಎದುರಾದಂತೆ ಇದೆ. ಮೈಸೂರು-ಶ್ರೀರಂಗಪಟ್ಟಣ ವ್ಯಾಪ್ತಿಯಲ್ಲಿ ಸರ್ಕಾರಿ ಭೂಮಿ ಒತ್ತುವರಿ ತನಿಖೆಗೆ ಹೊಸ ತಂಡ ರಚಿಸಿ ಭೂಕಂದಾಯ ಇಲಾಖೆ ಆಯುಕ್ತ ಮನಿಷ್ ಮೌದ್ಗಿಲ್ ಆದೇಶ ಹೊರಡಿಸಿದ್ದಾರೆ.

    ಕೇರಗಳ್ಳಿಯ ಸರ್ವೇ ನಂಬರ್ 115, ಯಡಹಳ್ಳಿಯ ಸರ್ವೇ ನಂಬರ್ 69,72, ದಟ್ಟಗಳ್ಳಿಯ ಸರ್ವೇ ನಂಬರ್ 130/3, ಲಿಂಗಾಬುದಿ ಸರ್ವೇ ನಂಬರ್ 10ರಲ್ಲಿ ನಡೆದ ಭೂಒತ್ತುವರಿಗಳ ತನಿಖೆ ನಡೆಸಿ 10 ದಿನದಲ್ಲಿ ವರದಿ ನೀಡಲು ಸೂಚಿಸಿದ್ದಾರೆ. ದಟ್ಟಗಳ್ಳಿ ಮತ್ತು ಲಿಂಗಾಬುದಿ ಸರ್ವೇ ನಂಬರ್‍ ಗಳಲ್ಲಿ ಸಾರಾ ಮಹೇಶ್ ಒಡೆತನದ ತೋಟ, ಕಲ್ಯಾಣ ಮಂಟಪ ಇದೆ. ಹೀಗಾಗಿ ಸಹಜವಾಗಿಯೇ ಇವುಗಳ ಸರ್ವೇ ಕೂಡ ನಡೆಯಲಿದೆ. ಇದನ್ನೂ ಓದಿ: ರೋಹಿಣಿ ಸಿಂಧೂರಿಯಿಂದ 6 ಕೋಟಿ ಅಕ್ರಮ: ಸಾರಾ ಮಹೇಶ್ ಆರೋಪ

    ಈ ಬಗ್ಗೆ ಕೆಆರ್.ನಗರದಲ್ಲಿ ಪ್ರತಿಕ್ರಿಯಿಸಿದ ಸಾ.ರಾ ಮಹೇಶ್, ಸರ್ಕಾರಿ ಭೂಮಿ ಒತ್ತುವರಿ ಸಂಬಂಧ ತನಿಖೆ ನಡೆಸಲು ಭೂ ದಾಖಲೆಗಳ ಅಧಿಕಾರಿಗಳನ್ನು ನೇಮಕಕ್ಕೆ ಸ್ವಾಗತ. ಸಾಮಾನ್ಯ ಅಧಿಕಾರಿಗಳಿಗೆ ಶಿಕ್ಷೆ ಇದೆ. ಆದರೆ ಇದುವರೆಗೂ ಐಎಎಸ್ ಅಧಿಕಾರಿಗಳಿಗೆ ಶಿಕ್ಷೆ ಆಗಿಲ್ಲ. ಐಎಎಸ್ ಅಧಿಕಾರಿಯ ಅಕ್ರಮಗಳ ಬಗ್ಗೆ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಲು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಇದು ನನ್ನ ವಿರುದ್ಧದ ವ್ಯವಸ್ಥಿತ ಪಿತೂರಿಯ ಮುಂದುವರಿದ ಭಾಗ: ರೋಹಿಣಿ ಸಿಂಧೂರಿ

    ನಾನೇನು ಈಗ ಚೌಲ್ಟ್ರಿಯನ್ನು ಟ್ರಾಲಿಯಲ್ಲಿ ತಳ್ಳಲು ಆಗಲ್ಲ. ನಾನು ರಾಜಕಾಲುವೆಗೆ 74 ಮೀಟರ್ ಬಿಟ್ಟಿದ್ದೇವೆ. ಗೋಮಾಳ ಆಗಿದ್ರೆ ಅದಕ್ಕೆ ದಾಖಲೆಗಳು ಇವೆ. ನನ್ನ ಜಾಗದಲ್ಲಿ ಯಾವುದೇ ಗೋಮಾಳ ಇಲ್ಲ ಅಂತ ವರದಿ ಕೊಟ್ಟಿದ್ದಾರೆ. ನೀನು ಸರ್ವೆ ಕಮಿಷನರ್ ಆದ ಮೇಲೆ ರಾಜ್ಯದ ಸುಪ್ರೀಮಾ..? ಎಂದು ಆಯುಕ್ತ ಮನಿಶ್ ಮುದ್ಗಲ್ ಗೆ ಸಾರಾ ಪ್ರಶ್ನೆ ಮಾಡಿದ್ದಾರೆ.

  • ಇದು ನನ್ನ ವಿರುದ್ಧದ ವ್ಯವಸ್ಥಿತ ಪಿತೂರಿಯ ಮುಂದುವರಿದ ಭಾಗ: ರೋಹಿಣಿ ಸಿಂಧೂರಿ

    ಇದು ನನ್ನ ವಿರುದ್ಧದ ವ್ಯವಸ್ಥಿತ ಪಿತೂರಿಯ ಮುಂದುವರಿದ ಭಾಗ: ರೋಹಿಣಿ ಸಿಂಧೂರಿ

    ಮೈಸೂರು: ಮೈಸೂರಿನ ನಿರ್ಗಮಿತ ಡಿಸಿ ರೋಹಿಣಿ ಸಿಂಧೂರಿ ವಿರುದ್ಧ ಶಾಸಕ ಸಾರಾ ಮಹೇಶ್ ಮಾಡಿದ್ದ ಕಿಕ್ ಬ್ಯಾಕ್ ಆರೋಪಕ್ಕೆ ರೋಹಿಣಿ ಸಿಂಧೂರಿ ಸ್ಪಷ್ಟೀಕರಣ ನೀಡಿದ್ದು, ನನ್ನ ಮೇಲೆ ಸತ್ಯಕ್ಕೆ ದೂರವಾದ ಆರೋಪ ಮಾಡಲಾಗಿದೆ. ಇದು ನನ್ನ ವಿರುದ್ಧ ನಡೆಯುತ್ತಿರುವ ವ್ಯವಸ್ಥಿತವಾದ ಪಿತೂರಿಯ ಮುಂದುವರಿದ ಭಾಗ ಎಂದು ತಿರುಗೇಟು ನೀಡಿದ್ದಾರೆ.

    ವಾಟ್ಸ್ ಅಪ್ ಗ್ರೂಪ್ ನಲ್ಲಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ ರೋಹಿಣಿ ಸಿಂಧೂರಿ, ನನ್ನ ಮೇಲೆ ಸತ್ಯಕ್ಕೆ ದೂರವಾದ ಆರೋಪ ಮಾಡಲಾಗಿದೆ. ಇದು ನನ್ನ ವಿರುದ್ಧ ನಡೆಯುತ್ತಿರುವ ವ್ಯವಸ್ಥಿತವಾದ ಪಿತೂರಿಯ ಮುಂದುವರಿದ ದಾಳಿ. ತಾವು ಮಾಡಿರುವ ಅಕ್ರಮ ಮುಚ್ಚಿಕೊಳ್ಳಲು ಮತ್ತು ಮಾಡಿರುವ ಅಕ್ರಮಗಳ ಬಗ್ಗೆ ಯಾವ ಅಧಿಕಾರಿಯೂ ತನಿಖೆಗೆ ಮುಂದಾಗಬಾರದೆಂದು ಹೆದರಿಸುವ ತಂತ್ರದ ಭಾಗ ಇದು. ಇದಕ್ಕೆ ಯಾವ ಅಧಿಕಾರಿಗಳು ಹೆದರದೆ ಇರುವ ಸತ್ಯ ಬಹಿರಂಗಪಡಿಸಬೇಕೆಂದು ಗುಡುಗಿದ್ದಾರೆ. ಇದನ್ನೂ ಓದಿ: ರೋಹಿಣಿ ಸಿಂಧೂರಿಯಿಂದ 6 ಕೋಟಿ ಅಕ್ರಮ: ಸಾರಾ ಮಹೇಶ್ ಆರೋಪ

    ಬಟ್ಟೆ ಬ್ಯಾಗ್ ಖರೀದಿ ಮಾಡಿರುವುದು ಕರ್ನಾಟಕ ಕೈ ಮಗ್ಗ ಅಭಿವೃದ್ಧಿ ಪ್ರಾಧಿಕಾರದಲ್ಲಿ. ಇದು ಸರ್ಕಾದ ಅಧೀನ ಸಂಸ್ಥೆ. ನನ್ನ ಅವಧಿಯಲ್ಲಿ ಒಂದೇ ಒಂದು ಪೈಸೆಯೂ ಹಣ ಬಿಡುಗಡೆಯಾಗಿಲ್ಲ. ಇದರಲ್ಲಿ ಅಕ್ರಮ ಹೇಗೆ ಬರುತ್ತೆ? ನನ್ನ ಮೇಲಿನ ಎಲ್ಲಾ ಆರೋಪಗಳು ಸುಳ್ಳು. ಇದರಲ್ಲಿ ಸತ್ಯದ ಒಂದಂಶವೂ ಇಲ್ಲ. ಮೈಸೂರನ್ನು ಪ್ಲಾಸ್ಟಿಕ್ ಮುಕ್ತ ಮಾಡುವ ಉದ್ದೇಶದಿಂದ ಸ್ಥಳೀಯ ಸಂಸ್ಥೆಗಳಿಗೆ ಉಚಿತವಾಗಿ ಬಟ್ಟೆ ಬ್ಯಾಗ್ ನೀಡಲು ಕರ್ನಾಟಕ ಕೈ ಮಗ್ಗ ಅಭಿವೃದ್ಧಿ ಪ್ರಾಧಿಕಾರಕ್ಕೆ ತಿಳಿಸಲಾಗಿತ್ತು. ಅವರೇ ದರ ನಿಗದಿ ಮಾಡಿ ಪತ್ರ ಕಳಿಸಿದ್ದರು. ಅದರಂತೆ ಅರ್ಡರ್ ನೀಡಲಾಗಿದೆ. ಹೇಳಿ ಕೇಳಿ ಕರ್ನಾಟಕ ಕೈ ಮಗ್ಗ ಅಭಿವೃದ್ಧಿ ನಿಗಮ ರಾಜ್ಯ ಸರ್ಕಾರದ ಅಧೀನ ಸಂಸ್ಥೆ. ಇಂತಹ ಸಂಸ್ಥೆ ಜೊತೆಗಿನ ಅಧಿಕೃತ ವ್ಯವಹಾರದಲ್ಲಿ ಕಿಕ್ ಬ್ಯಾಕ್ ಪ್ರಶ್ನೆ ಎಲ್ಲಿಂದ ಬರುತ್ತೆ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಮೈಸೂರಿನಲ್ಲಿ ಮತ್ತೊಂದು ಪ್ರಕರಣ – ಕಾಲೇಜು ವಿದ್ಯಾರ್ಥಿನಿ ಮೇಲೆ ಹಲ್ಲೆ, ಅತ್ಯಾಚಾರ ಯತ್ನ

  • ರೋಹಿಣಿ ಸಿಂಧೂರಿ ವಿರುದ್ಧ ಮಾನವ ಹಕ್ಕುಗಳ ಆಯೋಗಕ್ಕೆ ದೂರು

    ರೋಹಿಣಿ ಸಿಂಧೂರಿ ವಿರುದ್ಧ ಮಾನವ ಹಕ್ಕುಗಳ ಆಯೋಗಕ್ಕೆ ದೂರು

    ನವದೆಹಲಿ: ಆಕ್ಸಿಜನ್ ಕೊರತೆಯಿಂದ ಚಾಮರಾಜನಗರದಲ್ಲಿ 35 ಮಂದಿ ಸಾವನ್ನಪ್ಪಿರುವ ಪ್ರಕರಣ ತನಿಖೆ ನಡೆಸುವಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ದಾಖಲಿಸಲಾಗಿದೆ. ವಿಧಾನಮಂಡಲ ನಿವೃತ್ತ ಭದ್ರತಾ ಅಧಿಕ್ಷಕ ಎಂ.ಎನ್ ಪಿಳ್ಳಪ್ಪ ದೂರು ದಾಖಲಿಸಿದ್ದಾರೆ.

    ಚಾಮರಾಜನಗರ ಪ್ರಕರಣದಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಸ್ಪಷ್ಟವಾಗಿದೆ. ವರ್ಗಾವಣೆ ಹೊರತುಪಡಿಸಿ ಇನ್ಯಾವುದೇ ಕ್ರಮಗಳನ್ನು ಅಧಿಕಾರಿಗಳ ವಿರುದ್ಧ ತೆಗೆದುಕೊಂಡಿಲ್ಲ. ಈ ಪ್ರಕರಣದಲ್ಲಿ ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ತಪ್ಪಿಸ್ಥರಾಗಿದ್ದು, ಇತರೆ ಅಧಿಕಾರಿಗಳೊಂದಿಗಿನ ಮನಸ್ಥಾಪದ ಕಾರಣ ಈ ಘಟನೆ ನಡೆದಿದೆ. ಈ ಹಿನ್ನೆಲೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಚಾಮರಾಜನಗರ ಆಕ್ಸಿಜನ್ ದುರಂತ – ರೋಹಿಣಿ ಸಿಂಧೂರಿಗೆ ಕ್ಲೀನ್‍ಚಿಟ್

    ರೋಹಿಣಿ ಸಿಂಧೂರಿ ವಿರುದ್ಧ ಅಕ್ರಮ ಈಜುಕೊಳ ನಿರ್ಮಾಣ, ತಿರುಪತಿಯಲ್ಲಿದ್ದ ಮೈಸೂರು ಮಹಾರಾಜರ ಭೂಮಿ ಆಂಧ್ರಪ್ರದೇಶ ಸರ್ಕಾರಕ್ಕೆ ಹಸ್ತಾಂತರ ಸೇರಿ ಹಲವು ಆರೋಪಗಳಿವೆ. ಅವುಗಳ ಬಗ್ಗೆಯೂ ತನಿಖೆಯಾಗಬೇಕಿದ್ದು, ಕೂಡಲೇ ಅವರನ್ನು ಅಮಾನತು ಮಾಡಿ ತನಿಖೆ ಮಾಡಬೇಕು ಎಂದು ಎಂ.ಎನ್ ಪಿಳ್ಳಪ್ಪ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಚಾಮರಾಜನಗರ ಆಕ್ಸಿಜನ್ ದುರಂತ – ತಾಳಿ ಉಳಿಸಿಕೊಡಿ ಅಂತ ಅಂಗಲಾಚಿದ ನವ ವಧು

  • ರೋಹಿಣಿ ಸಿಂಧೂರಿ ಕಾರ್ಯವೈಖರಿ ಬಗ್ಗೆ ಡಿ.ರೂಪ ಮತ್ತೆ ಅಸಮಾಧಾನ

    ರೋಹಿಣಿ ಸಿಂಧೂರಿ ಕಾರ್ಯವೈಖರಿ ಬಗ್ಗೆ ಡಿ.ರೂಪ ಮತ್ತೆ ಅಸಮಾಧಾನ

    ಬೆಂಗಳೂರು: ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಕಾರ್ಯವೈಖರಿಯ ಬಗ್ಗೆ ಹಿರಿಯ ಐಪಿಎಸ್ ಅಧಿಕಾರಿ ಡಿ.ರೂಪ ಇದೀಗ ಮತ್ತೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರೂಪ ಸಮಾಜಿಕ ಜಾಲತಾಣದಲ್ಲಿ ರೋಹಿಣಿ ಸಿಂಧೂರಿ ಮೈಸೂರಿನಲ್ಲಿ ಡಿಸಿಯಾಗಿದ್ದ ಸಮಯದಲ್ಲಿ ಮಾಡಿದ ಕೆಲಸದ ಬಗ್ಗೆ ವ್ಯಂಗ್ಯ ಮಾಡಿದ್ದಾರೆ.

    ಕೊರೊನಾದಿಂದ ರಾಜ್ಯದ, ಜಿಲ್ಲೆಯ ಜನರು ಸಂಕಷ್ಟದಲ್ಲಿದ್ದಾಗ ಸ್ವಿಮ್ಮಿಂಗ್ ಪೂಲ್ ಕಟ್ಟಿಸಿದ್ದ ಅಂದಿನ ಮೈಸೂರು ಡಿಸಿ ರೋಹಿಣಿ ಸಿಂಧೂರಿಯ ಪೂಲ್ ವಿವಾದ ರಾಜ್ಯ ಮಟ್ಟದಲ್ಲಿ ದೊಡ್ಡ ಸುದ್ದಿಯಾಗಿದೆ. ಈ ಮೂಲಕ ರೋಹಿಣಿ ಸರ್ಕಾರದ ಹಾಗೂ ರಾಜ್ಯದ ಜನರ ಕೆಂಗಣ್ಣಿಗೆ ಗುರಿಯಾಗಿ ಡಿಸಿ ಅವಧಿ ಮುಗಿಯುವುದಕ್ಕೆ ಮೊದಲೇ ಮೈಸೂರಿನಿಂದ ವರ್ಗಾವಣೆ ಆದರು. ಈ ಮಧ್ಯೆ ಹಿರಿಯ ಐಪಿಎಸ್ ಅಧಿಕಾರಿ ಡಿ.ರೂಪ ರೋಹಿಣಿ ಸಿಂಧೂರಿ ಕಾರ್ಯವೈಖರಿ ಹಾಗೂ ಭೂಗಳ್ಳರ ವಿರುದ್ಧ ಸಮರ ಸಾರಿದ ದಾಟಿಯ ಬಗ್ಗೆ ಅಸಮಾಧಾನ ವ್ಯಕ್ತಡಿಸಿ ಸಾಮಾಜಿಕ ಜಾಲಾತಾಣದಲ್ಲಿ ನಿತ್ಯ ಬರೆದು ಪೋಸ್ಟ್ ಮಾಡುವ ಮೂಲಕ ರೋಹಿಣಿ ಸಿಂಧೂರಿಯ ಪೂಲ್ ವಿವಾದಕ್ಕೆ ಮರು ಜೀವ ಕೊಡುತ್ತಿದ್ದಾರೆ. ಇದನ್ನೂ ಓದಿ: ರೋಹಿಣಿ ಸಿಂಧೂರಿ ಸ್ವಿಮ್ಮಿಂಗ್ ಪೂಲ್ ವಿವಾದ – ಟ್ವಿಟ್ಟರ್‌ನಲ್ಲಿ ತಿವಿದ ಐಜಿಪಿ ರೂಪಾ

    ಪೋಸ್ಟ್ ನಲ್ಲಿ ಏನಿದೆ?:
    ಮೈಸೂರಿನ ಡಿಸಿಯಾಗಿದ್ದ ರೋಹಿಣಿ ಸಿಂಧೂರಿ ಹತ್ತು ತಿಂಗಳ ಅವಧಿಯಲ್ಲಿ ಒಂದು ಇಂಚು ಭೂಮಿಯನ್ನು ಕೂಡ ಭೂ ಮಾಫಿಯದಿಂದ ಪಡೆದುಕೊಳ್ಳಲಿಲ್ಲ. ಒತ್ತುವರಿ ಮಾಡಿದ್ದ ಭೂಗಳ್ಳರ ವಿರುದ್ಧ ಕಾನೂನಾತ್ಮಕವಾಗಿ ಕ್ರಮಕೈಗೊಳ್ಳಲಿಲ್ಲ. ಮೈಸೂರಿನಲ್ಲಿ ಆಗಿದ್ದಂತಹ ಭೂ ಮಾಫಿಯದ ವಿಚಾರದಲ್ಲಿ ಮೈಸೂರು ಡಿಸಿಯಾಗಿದ್ದ ರೋಹಿಣಿ ಸಿಂಧೂರಿ ಏನೂ ಮಾಡಲಿಲ್ಲ. ರೋಹಿಣಿ ಸಿಂಧೂರಿ ತೋಳ ಬಂತು ತೋಳ ಕಥೆ ಹೇಳಿಕೊಂಡು ಕಾಲ ಕಳೆದ್ರೆ ವಿನಃ ತೋಳ ಹಿಡಿಯುವ ಕೆಲಸ ಆಗಲೇ ಇಲ್ಲ. ಸ್ವಿಮ್ಮಿಂಗ್ ಪೂಲ್ ವಿಚಾರ ಸಣ್ಣದಾಗಿದ್ರು ಅದನ್ನು ಮಾಡಲು ಅನುಮತಿ ಪಡೆದಿಲ್ಲಾ ಅನ್ನೋದು ರೀಜನಲ್ ಕಮೀಷನರ್ ವರದಿಯಲ್ಲಿ ಬಹಿರಂಗವಾಗಿದೆ. ಅಕ್ರಮ ಯಾರೇ ಮಾಡಿದರು ಅಕ್ರಮನೇ ಭೂಮಾಫಿಯಾ ಸೇರಿದಂತೆ ಹಲವು ಪ್ರಕರಣಗಳಲ್ಲಿ ಇನ್ನು ಕ್ರಮ ಆಗಿಲ್ಲ ಆಗಬೇಕು ಎಂದು ಒತ್ತಾಯಿಸಿದ್ದಾರೆ.

  • ಭೂ ಅಕ್ರಮಗಳ ತನಿಖೆ ಮಾಡಿ ಎಂದು ಪ್ರಾದೇಶಿಕ ಆಯುಕ್ತರಿಗೆ ಪತ್ರ ಬರೆದ ರೋಹಿಣಿ ಸಿಂಧೂರಿ

    ಭೂ ಅಕ್ರಮಗಳ ತನಿಖೆ ಮಾಡಿ ಎಂದು ಪ್ರಾದೇಶಿಕ ಆಯುಕ್ತರಿಗೆ ಪತ್ರ ಬರೆದ ರೋಹಿಣಿ ಸಿಂಧೂರಿ

    – ಮುಂದುವರಿದ ಸಾರಾ ವರ್ಸಸ್ ರೋಹಿಣಿ ಸಿಂಧೂರಿ ಜಟಾಪಟಿ

    ಮೈಸೂರು : ಮೈಸೂರಿನ ನಿರ್ಗಮಿತ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮತ್ತು ಶಾಸಕ ಸಾರಾ ಮಹೇಶ್ ನಡುವಿನ ಜಟಾಪಟಿ ಮುಂದುವರಿದಿದೆ. ಮಾಧ್ಯಮಗಳ ವಾಟ್ಸಪ್ ಗ್ರೂಪ್ ಗಳಲ್ಲಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರೋ ರೋಹಿಣಿ ಸಿಂಧೂರಿ, ಡಿಸಿ ಅಧಿಕೃತ ವಸತಿನಿಲಯದಲ್ಲಿ ಸ್ವಿಮಿಂಗ್ ಪೂಲ್ ನಿರ್ಮಾಣಕ್ಕೆ ಸಂಬಂಧಪಟ್ಟಂತೆ ಪ್ರಾದೇಶಿಕ ಆಯುಕ್ತರು ಸರ್ಕಾರಕ್ಕೆ ಸಲ್ಲಿಸಿರುವ ವರದಿಗೆ ಸ್ವಾಗತಿಸಿರುವ ರೋಹಿಣಿ ಸಿಂಧೂರಿ, ಮೈಸೂರಿನಲ್ಲಿ ನಡೆದಿರೋ ಭೂ ಅಕ್ರಮಗಳ ಸಮಗ್ರ ತನಿಖೆಗೂ ಒತ್ತಾಯಿಸಿದ್ದಾರೆ.

    ಈ ಸಂಬಂಧ ಜೂನ್ 11 ರಂದು ಪ್ರಾದೇಶಿಕ ಆಯುಕ್ತರಿಗೆ ಪತ್ರ ಬರೆದಿದ್ದ ರೋಹಿಣಿ ಸಿಂಧೂರಿ ಆ ಪತ್ರವನ್ನು ಮಾಧ್ಯಮಗಳಿಗೆ ವಾಟ್ಸಪ್ ಗ್ರೂಪ್ ನಲ್ಲಿ ಬಿಡುಗಡೆ ಮಾಡಿದ್ದಾರೆ. ಡಿಸಿ ವಸತಿ ಗೃಹದಲ್ಲಿ ಸ್ವಿಮ್ಮಿಂಗ್ ಫೂಲ್ ನಿರ್ಮಾಣ ಕುರಿತ ತಾಂತ್ರಿಕ ದೋಷಗಳ ಕುರಿತು ಸವಿಸ್ತಾರ ವರದಿ ನೀಡಿರುವುದು ಸ್ವಾಗತಾರ್ಹ ವಿಚಾರ ಎಂದಿದ್ದಾರೆ.

    ಮೈಸೂರು ತಾಲೂಕು, ಕಸಬಾ ಹೋಬಳಿ, ದಟ್ಟ ಗಳ್ಳಿ ಸರ್ವೇ ನಂ.123ನಲ್ಲಿ ಇರುವ ಸಾ.ರಾ. ಚೌಟ್ರಿಗೆ ಸಂಬಂಧಿಸಿದಂತೆ ಗೋಲ್‍ಮಾಲ್ ನಡೆದಿದೆ. ಸರಿಯಾದ ದಾಖಲೆಗಳು ಇಲ್ಲ. ಹಾಗಾಗಿ ಸರ್ಕಾರಕ್ಕೆ ನಷ್ಟವಾಗಲಿದ್ದು, ಸಾ.ರಾ.ಮಹೇಶ್ ಅವರಿಗೆ ಲಾಭವಾಗುತ್ತದೆ. ಅಲ್ಲದೆ ಲಿಂಗಾಬುದಿ ಕೆರೆಯ ಬಳಿಯ ಸರ್ವೆ ನಂಬರ್ ನಲ್ಲಿ ಶಾಸಕ ಸಾ.ರಾ.ಮಹೇಶ್, ಮುಡಾ ಅಧ್ಯಕ್ಷ ರಾಜೀವ್ ಅವರು ಪಾಲುದಾರಿಕೆಯಲ್ಲಿ ನಿಯಮ ಉಲ್ಲಂಘಿಸಿ ರೆಸಾರ್ಟ್ ಮಾಡಲು ಮುಂದಾಗಿದ್ದಾರೆ. ಯಾವುದೇ ಕೆರೆಯಿಂದ 75 ಮೀಟರ್ ವರೆಗೆ ಕಟ್ಟಡ ಕಾಮಗಾರಿಗಳನ್ನು ನಿಷೇಧಿಸಿ ಸರ್ವೋಚ್ಚ ನ್ಯಾಯಾಲಯ ಆದೇಶಿಸಿದ್ದು, ಇವರು ಇದಕ್ಕೆ ವಿರುದ್ಧವಾಗಿ ನಡೆಯುತ್ತಿದ್ದಾರೆ. ಹಾಗಾಗಿ ಸ್ವತಂತ್ರವಾಗಿ ಸ್ಥಳ ಪರಿಶೀಲನೆ ಮಾಡಿ, ವರದಿ ನೀಡುವಂತೆ ಪತ್ರ ಬರೆದಿದ್ದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ:ರೋಹಿಣಿ ಸಿಂಧೂರಿ ಸ್ವಿಮ್ಮಿಂಗ್ ಪೂಲ್ ವಿವಾದ – ಟ್ವಿಟ್ಟರ್‌ನಲ್ಲಿ ತಿವಿದ ಐಜಿಪಿ ರೂಪಾ

    ಸಾ.ರಾ.ಕಲ್ಯಾಣ ಮಂಟಪದ ಜಾಗವು ವಸತಿ ಉದ್ದೇಶಕ್ಕೆ ಅನುಮೋದನೆ ಪಡೆದಿದ್ದು, ವ್ಯವಹಾರಿಕ ದೃಷ್ಟಿಯಿಂದ ಕಲ್ಯಾಣ ಮಂಟಪ ಮಾಡಲಾಗಿದೆ. ಹಾಗಾಗಿ ಪರಿಶೀಲನೆ ನಡೆಸಲು ಮುಡಾ ಅಧಿಕಾರಿಗಳಿಗೆ ನಾನು ನಿರ್ದೇಶನ ನೀಡಿದ್ದೆ. ಅಲ್ಲದೇ ಮುಡಾ ಅಧ್ಯಕ್ಷ ಎಚ್.ಎ.ರಾಜೀವ್ ನೂರಾರು ಅಕ್ರಮ ಆಸ್ತಿಗಳಿಗೆ ಅನುಮತಿ ನೀಡುವ ಮೂಲಕ ತಮ್ಮ ವೈಯಕ್ತಿಕ ಲಾಭಕ್ಕೆ ತಮ್ಮ ಸ್ಥಾನವನ್ನು ದುರ್ಬಳಕೆ ಮಾಡಿ ಕೊಂಡಿದ್ದಾರೆ. ಇದರ ಬಗ್ಗೆಯೂ ಸಮಗ್ರ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ರೋಹಿಣಿ ಸಿಂಧೂರಿಯನ್ನ ವೀರಪ್ಪನ್‍ಗೆ ಹೋಲಿಸಿದ ಬಿಜೆಪಿ ಮುಖಂಡ ಮಲ್ಲೇಶ್

  • ರೋಹಿಣಿ ಸಿಂಧೂರಿ ಸ್ವಿಮ್ಮಿಂಗ್ ಪೂಲ್ ವಿವಾದ – ಟ್ವಿಟ್ಟರ್‌ನಲ್ಲಿ ತಿವಿದ ಐಜಿಪಿ ರೂಪಾ

    ರೋಹಿಣಿ ಸಿಂಧೂರಿ ಸ್ವಿಮ್ಮಿಂಗ್ ಪೂಲ್ ವಿವಾದ – ಟ್ವಿಟ್ಟರ್‌ನಲ್ಲಿ ತಿವಿದ ಐಜಿಪಿ ರೂಪಾ

    ಬೆಂಗಳೂರು: ರೋಹಿಣಿ ಸಿಂಧೂರಿ ಮೈಸೂರು ಡಿಸಿಯಾಗಿದ್ದಾಗ ಸರ್ಕಾರಿ ನಿವಾಸದಲ್ಲಿ ನಿಯಮಗಳನ್ನು ಉಲ್ಲಂಘಿಸಿ ಸ್ವಿಮ್ಮಿಂಗ್ ಪೂಲ್ ಮಾಡಿಸಿದ ಕ್ರಮ ಸಾಕಷ್ಟು ಟೀಕೆಗೆ ಒಳಗಾಯ್ತು. ಈಗ ಐಜಿಪಿ ರೂಪಾ ಅವರು ಈ ವಿಚಾರವನ್ನು ಪ್ರಸ್ತಾಪ ಮಾಡಿ  ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿ ತಿವಿದಿದ್ದಾರೆ.

    ಕೊರೊನಾ ಹಾಗೂ ಆರ್ಥಿಕ ವ್ಯವಸ್ಥೆಯಿಂದ ಜನರು ಸಂತ್ರಸ್ತರಾಗಿರುವ ಸಂದರ್ಭದಲ್ಲಿ ಜನರ ಹಣ ಅಂದರೆ ಸಾರ್ವಜನಿಕ ಹಣವ ಬಂಗಲೆಯಲ್ಲಿ ಸ್ವಿಮ್ಮಿಂಗ್ ಪೂಲ್ ಕಟ್ಟಲು ಮುಂದಾಗಿದ್ದು ಮೊಟ್ಟ ಮೊದಲನೆಯದಾಗಿ ರೋಹಿಣಿ ಐಎಎಸ್ ಅವರ ನೈತಿಕ ಪತನ ಎದ್ದು ತೋರಿಸುತ್ತದೆ. ಕಟ್ಟಲು ಪರವಾನಗಿ ತೆಗೆದುಕೊಂಡಿಲ್ಲ ಎನ್ನುವುದು ನಂತರದ ವಿಚಾರ. ಕಟ್ಟುವುದನ್ನು ಮುಂದೂಡಬಹುದಿತ್ತು ಎಂದು ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ : ನಿಯಮಗಳನ್ನು ಗಾಳಿಗೆ ತೂರಿ ಈಜುಕೊಳ ನಿರ್ಮಿಸಿದ್ರು ರೋಹಿಣಿ ಸಿಂಧೂರಿ – ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಕೆ

    ಟ್ವೀಟ್‍ನಲ್ಲಿ ರೋಹಿಣಿ ಫೋಟೋ ಹಾಕಿ ಡಿ ರೂಪ ಉಲ್ಲೇಖ ಮಾಡಿದ್ದಾರೆ. ರೂಪಾ ಅವರ ಟ್ವೀಟ್‍ಗೆ ಸಿಂಧೂರಿ ಯಾವ ಪ್ರತಿಕ್ರಿಯೆ ನೀಡುತ್ತಾರೆ ಎಂಬ ಕುತೂಹಲ ಮೂಡಿದೆ.

  • ಒಂದೇ ತನಿಖೆಗೆ ಎರಡು ರೀತಿ ತನಿಖಾ ವರದಿ ಬರೆದ ಮೈಸೂರು ಪ್ರಾದೇಶಿಕ ಆಯುಕ್ತ

    ಒಂದೇ ತನಿಖೆಗೆ ಎರಡು ರೀತಿ ತನಿಖಾ ವರದಿ ಬರೆದ ಮೈಸೂರು ಪ್ರಾದೇಶಿಕ ಆಯುಕ್ತ

    – ಆಯುಕ್ತರ ತನಿಖೆ ಬಗ್ಗೆಯೆ ಈಗ ಅನುಮಾನ

    ಮೈಸೂರು: ಜಿಲ್ಲೆಯ ನಿರ್ಗಮಿತ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಮೈಸೂರು ಡಿಸಿ ಅಧಿಕೃತ ಸರ್ಕಾರಿ ನಿವಾಸದ ಆವರಣದಲ್ಲಿ ನಿರ್ಮಿಸಿದ್ದ ಈಜುಕೊಳ ವಿಚಾರ ದೊಡ್ಡ ವಿವಾದಕ್ಕೆ ಕಾರಣವಾಗಿತ್ತು. ಈ ವಿವಾದದ ತನಿಖೆಗೆ ಸರ್ಕಾರ ಆದೇಶಿಸಿತ್ತು. ಈಗ ತನಿಖಾ ವರದಿ ಬಂದಿದೆ. ಆದರೆ ಈ ತನಿಖಾ ವರದಿಯೂ ವಿವಾದಕ್ಕೆ ಒಳಗಾಗಿದೆ.

    ಕಾರಣ ಒಂದೇ ದಿನದಲ್ಲಿ ಈ ತನಿಖಾ ವರದಿಯ ಅಂಶಗಳು ಬದಲಾಗಿವೆ. ಒಂದೇ ದಿನದಲ್ಲಿ ಎರಡು ರೀತಿಯ ತನಿಖಾ ರಿಪೋರ್ಟ್ ಅನ್ನು ಮೈಸೂರು ಪ್ರಾದೇಶಿಕ ಆಯುಕ್ತರು ಬರೆದಿದ್ದಾರೆ. ಈಜುಕೊಳದ ತನಿಖೆಯ ಜವಾಬ್ದಾರಿ ಹೊತ್ತಿದ್ದ ಪ್ರಾದೇಶಿಕ ಆಯುಕ್ತರು, ಈಜುಕೊಳ ನಿರ್ಮಾಣದ ತನಿಖೆ ವಿಚಾರದಲ್ಲಿ ಒಂದೇ ದಿನದಲ್ಲಿ ಎರಡು ತನಿಖಾ ವರದಿ ಬರೆದಿರೋದು ಈಗ ಬೆಳಕಿಗೆ ಬಂದಿದೆ. ಮೊದಲ ವರದಿಯಲ್ಲಿ ಒಟ್ಟು 6 ನ್ಯೂನತೆ ನಮೂದು ಮಾಡಲಾಗಿತ್ತು. ಸರ್ಕಾರಕ್ಕೆ ಸಲ್ಲಿಕೆಯಾದ ಎರಡನೇ ವರದಿಯಲ್ಲಿ ಕೇವಲ ಎರಡೇ ನ್ಯೂನತೆ ನಮೂದಾಗಿರೋದು ಅಚ್ಚರಿಗೆ ಕಾರಣವಾಗಿದೆ. ಮೊದಲ ವರದಿಯಲ್ಲಿ ಪ್ರಮುಖವಾಗಿ ಈಜುಕೊಳದ ನಿರ್ಮಾಣಕ್ಕೆ ತಯಾರಾಗಿದ್ದ 32 ಲಕ್ಷ ರೂ ಅಂದಾಜುಪಟ್ಟಿಗೆ ಲೋಕೋಪಯೋಗಿ ಇಲಾಖೆ ಅನುಮೋದನೆ ಪಡೆದಿಲ್ಲ ಹಾಗೂ ಕಾಮಗಾರಿ ನಿರ್ವಹಿಸಿದವರ ಒಪ್ಪಂದ ಪತ್ರಗಳಿಲ್ಲ ಎಂದು ನಮೂದು ಮಾಡಲಾಗಿತ್ತು. ಆದರೆ, ಎರಡನೇ ತನಿಖಾ ವರದಿಯಲ್ಲಿ ಪ್ರಮುಖವಾದ ಈ ಎರಡು ಅಂಶ ದಿಢೀರ್ ಎಂದು ಕೈ ಬಿಟ್ಟಿದ್ದಾರೆ. ಇದನ್ನೂ ಓದಿ: ನಿಯಮಗಳನ್ನು ಗಾಳಿಗೆ ತೂರಿ ಈಜುಕೊಳ ನಿರ್ಮಿಸಿದ್ರು ರೋಹಿಣಿ ಸಿಂಧೂರಿ – ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಕೆ

    ಪ್ರಾದೇಶಿಕ ಆಯುಕ್ತರು ಕೊಟ್ಟ ಮೊದಲ ವರದಿಯಲ್ಲಿ ಈಜುಕೊಳ ನಿರ್ಮಾಣದಲ್ಲಿ ಆಗಿರೋ ಆರ್ಥಿಕ ವಿಚಾರ ಗೌಪ್ಯವಾಗಿರೋದೆ ಪ್ರಮುಖ ಲೋಪ ಎಂದು ಪರೋಕ್ಷವಾಗಿ ನಮೂದಾಗಿತ್ತು. ಆದರೆ ಇದೇ ಅಂಶವನ್ನೇ ಕೈಬಿಟ್ಟು ದಿಢೀರ್ ಎರಡನೇ ಎಡಿಟೆಡ್ ವರದಿ ಕೊಡಲಾಗಿದೆ. ಹಾಗಾದರೆ ಪ್ರಾದೇಶಿಕ ಆಯುಕ್ತರು ಸರ್ಕಾರವನ್ನೇ ಯಾಮಾರಿಸಿದ್ರು ಎಂಬ ಪ್ರಶ್ನೆ ಹುಟ್ಟಿಕೊಂಡಿದ್ದು, ಪ್ರಾದೇಶಿಕ ಆಯುಕ್ತರ ತನಿಖಾ ವರದಿ ಬಗ್ಗೆಯೆ ಅನುಮಾನಗಳು ಸೃಷ್ಟಿಯಾಗಿದೆ.

  • ನಿಯಮಗಳನ್ನು ಗಾಳಿಗೆ ತೂರಿ ಈಜುಕೊಳ ನಿರ್ಮಿಸಿದ್ರು ರೋಹಿಣಿ ಸಿಂಧೂರಿ – ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಕೆ

    ನಿಯಮಗಳನ್ನು ಗಾಳಿಗೆ ತೂರಿ ಈಜುಕೊಳ ನಿರ್ಮಿಸಿದ್ರು ರೋಹಿಣಿ ಸಿಂಧೂರಿ – ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಕೆ

    ಮೈಸೂರು: ಅರನೆ ನಗರಿಯ ನಿರ್ಗಮಿತ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಜಿಲ್ಲಾಧಿಕಾರಿಗಳ ಅಧಿಕೃತ ಸರ್ಕಾರಿ ನಿವಾಸದಲ್ಲಿ ನಿರ್ಮಿಸಿದ್ದ ಈಜುಕೊಳ ವಿಚಾರ ದೊಡ್ಡ ವಿವಾದವಾಗಿತ್ತು. ಈ ಬಗ್ಗೆ ಶಾಸಕ ಸಾರಾ ಮಹೇಶ್ ಸರ್ಕಾರಕ್ಕೆ ದೂರು ನೀಡಿದ್ದರು. ದೂರಿನ ಹಿನ್ನೆಲೆಯಲ್ಲಿ ಸರ್ಕಾರ ಮೈಸೂರಿನ ಪ್ರಾದೇಶಿಕ ಆಯುಕ್ತರಿಗೆ ವಿಚಾರಣೆಗೆ ನಿರ್ದೇಶಿಸಿತ್ತು. ಈ ಬಗ್ಗೆ ವಿಚಾರಣೆ ನಡೆಸಿದ ಪ್ರಾದೇಶಿಕ ಆಯುಕ್ತರು ಸರ್ಕಾರಕ್ಕೆ ವರದಿ ಸಲ್ಲಿಸಿದ್ದು ವರದಿಯ ವಿವರ ಇಲ್ಲಿದೆ. ಈಜುಕೊಳ ನಿರ್ಮಾಣದಲ್ಲಿ ಆಗಿರುವ ಪ್ರಮುಖ ನ್ಯೂನತೆಗಳ ಪ್ರತ್ಯೇಕ ಪಟ್ಟಿ ಮಾಡಲಾಗಿದೆ.

    ನ್ಯೂನತೆಗಳ ಹೀಗಿವೆ..
    1. ಜಿಲ್ಲಾಧಿಕಾರಿಗಳ ಅಧಿಕೃತ ನಿವಾಸದ ಆವರಣದಲ್ಲಿ ಈಜುಕೊಳ ನಿರ್ಮಾಣಕ್ಕೆ ಸಂಬಂಧಪಟ್ಟಂತೆ 32 ಲಕ್ಷ ರೂ. ಗಳಿಗೆ ಅಂದಾಜುಪಟ್ಟಿಯನ್ನು ತಯಾರಿಸಿದ್ದು, ಅಂದಾಜುಪಟ್ಟಿಗೆ ತಾಂತ್ರಿಕ ವರ್ಗದವರಿಂದ ಅಥವಾ ಲೋಕೋಪಯೋಗಿ ಇಲಾಖೆಯಿಂದ ಅನುಮೋದನೆ ಪಡೆದಿಲ್ಲ.
    2. ಈಜುಕೊಳದ ನಿರ್ಮಾಣದ ಬಗ್ಗೆ ಯಾವುದೇ ಪೂರ್ವಭಾವಿ ಆಡಳಿತಾತ್ಮಕ ಮಂಜೂರಾತಿ ಪಡೆದಿಲ್ಲ.
    3. ಈಜುಕೊಳದ ನಿರ್ಮಾಣಕ್ಕೆ ಸಂಬಂಧಪಟ್ಟಂತೆ ಯಾವುದೇ ಕಾರ್ಯಾದೇಶ ಇಲ್ಲ.
    4. ಕಾಮಗಾರಿ ನಿರ್ವಹಿಸಿದವರ ಒಪ್ಪಂದ ಪತ್ರಗಳು ಇಲ್ಲ.
    5. ಪಾರಂಪರಿಕ ಸಂರಕ್ಷಣಾ ಸಮಿತಿಯ ಅನುಮೋದನೆ ಪಡೆದಿಲ್ಲ.

    ಜಿಲ್ಲಾಧಿಕಾರಿಗಳ ಅಧಿಕೃತ ನಿವಾಸದ ಆವರಣದಲ್ಲಿ ಈಜುಕೊಳ ನಿರ್ಮಾಣ ಮಾಡಿರುವುದು ಯಾವುದೇ ಸಾರ್ವಜನಿಕರಿಗೆ ಉಪಯೋಗಿಸಲು ಸಾಧ್ಯವಿರುವುದಿಲ್ಲ. ಜಿಲ್ಲಾಧಿಕಾರಿಗಳ ಅಧಿಕೃತ ನಿವಾಸದ ಆವರಣದಲ್ಲಿ ಈಜುಕೊಳ ನಿರ್ಮಾಣವು ಯಾವುದೇ ಸಾರ್ವಜನಿಕ ಹಿತಾಸಕ್ತಿ ಹೊಂದಿರುವುದಿಲ್ಲ ಎಂದು ವರದಿಯಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ. ಇದನ್ನೂ ಓದಿ: ಮೈಸೂರು ನಿರ್ಗಮಿತ ಡಿಸಿ ರೋಹಿಣಿ ಸಿಂಧೂರಿಗೆ ಸಂಕಷ್ಟ

    ವರದಿಯಲ್ಲಿನ ಬೇರೆ ಪ್ರಮುಖ ಅಂಶಗಳು ಹೀಗಿವೆ:
    – ಜಿಲ್ಲಾಧಿಕಾರಿಗಳ ಅಧಿಕೃತ ನಿವಾಸದಲ್ಲಿ ಈಜುಕೊಳ ನಿರ್ಮಾಣವನ್ನು ನಿರ್ಮಿತಿ ಕೇಂದ್ರ, ಮೈಸೂರು ಸಂಸ್ಥೆಯಿಂದ ಮಾಡಿಸಲಾಗಿರುತ್ತದೆ.


    – ಈಜುಕೊಳ ನಿರ್ಮಾಣ ಮಾಡುವ ಮುಂಚೆ ಯಾವುದೇ ಸಭೆಯಲ್ಲಿ ಮಂಡಿಸಿ ಪೂರ್ವ ಅನುಮೋದನೆ ಪಡೆದಿರುವುದಿಲ್ಲ.
    – ನಿರ್ಮಿತಿ ಕೇಂದ್ರ, ಮೈಸೂರು ಇವರು ಈಜುಕೊಳ ನಿರ್ಮಾಣ ಮಾಡಲು ರೂ.32,55,131-49 ಗಳಿಗೆ ಅಂದಾಜು ಪಟ್ಟಿಯನ್ನು ತಯಾರಿಸಿರುತ್ತಾರೆ.
    – ನಿರ್ಮಿತಿ ಕೇಂದ್ರದಿಂದ ಸಲ್ಲಿಸಿರುವ ಬಿಲ್‍ನಂತೆ ಈಜುಕೊಳ ನಿರ್ಮಾಣದ ನಂತರ ಅಂತಿಮವಾಗಿ 28 ಲಕ್ಷ ರೂ. ವೆಚ್ಚವಾಗಿದೆ.
    – ಈಜುಕೊಳ ನಿರ್ಮಾಣದ ಕಾಮಗಾರಿ ದಿನಾಂಕ 2020ರ ಡಿಸೆಂಬರ್ 31ರಂದು ಪ್ರಾರಂಭಿಸಿ 202021ರ ಫೆಬ್ರವರಿ 26 ಮುಕ್ತಾಯಗೊಳಿಸಲಾಗಿದೆ. ಇದನ್ನೂ ಓದಿ: ಸಾರಾ ಚೌಟ್ರಿ ಹಳ್ಳದ ಮೇಲೂ ಕಟ್ಟಿಲ್ಲ, ನಾಲೆಯ ಮೇಲೂ ಕಟ್ಟಿಲ್ಲ: ಪ್ರಾದೇಶಿಕ ಆಯುಕ್ತರ ವರದಿಯಲ್ಲಿ ಬಹಿರಂಗ


    – ಪ್ರಾಯೋಗಿಕವಾಗಿ ಜಿಲ್ಲಾ ಕೇಂದ್ರದಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಸರ್ಕಾರಿ ಜಾಗದಲ್ಲಾಗಲೀ ಅಥವಾ ತಾಲೂಕು ಕೇಂದ್ರಗಳಲ್ಲಿನ ಸರ್ಕಾರಿ ಜಾಗಗಳಲ್ಲಾಗಲಿ ನಿರ್ಮಾಣ ಮಾಡದೆ ಜಿಲ್ಲಾಧಿಕಾರಿಗಳ ಅಧಿಕೃತ ನಿವಾಸದಲ್ಲಿ ಪುರಾಶತ್ವ ಸಂಗ್ರಹಾಲಯಗಳು ಮತ್ತು ಪರಂಪರ ಇಲಾಖೆ, ಮೈಸೂರು ಇಲಾಖೆಯಿಂದ ಅನುಮತಿ ಪಡೆಯದೆ ಈಜುಕೊಳ ನಿರ್ಮಾಣ ಮಾಡಿರುವುದು ಕಂಡುಬರುತ್ತದೆ. ಎಂದು ತಿಳಿಸಲಾಗಿದೆ.

  • ಮೈಸೂರು ನಿರ್ಗಮಿತ ಡಿಸಿ ರೋಹಿಣಿ ಸಿಂಧೂರಿಗೆ ಸಂಕಷ್ಟ

    ಮೈಸೂರು ನಿರ್ಗಮಿತ ಡಿಸಿ ರೋಹಿಣಿ ಸಿಂಧೂರಿಗೆ ಸಂಕಷ್ಟ

    ಮೈಸೂರು: ಮೈಸೂರು ನಿರ್ಗಮಿತ ಡಿಸಿ ರೋಹಿಣಿ ಸಿಂಧೂರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಒಂದು ಕಡೆ ಶಾಸಕ ಸಾರಾ ಮಹೇಶ್, ಡಿಸಿ ಅಧಿಕೃತ ಸರಕಾರಿ ನಿವಾಸ ನವೀಕರಣ ಸಂಬಂಧ ನೀಡಿದ್ದ ದೂರಿನ ವಿಚಾರಣೆಗೆ ಆದೇಶವಾಗಿದ್ದರೆ ಮತ್ತೊಂದು ಕಡೆ ಚಾಮರಾಜನಗರದಲ್ಲಿನ ನಡೆದಿದ್ದ ಆಕ್ಸಿಜನ್ ಸಾವು ಪ್ರಕರಣದಲ್ಲಿ ದೂರ ದಾಖಲಿಸಲು ಮನವಿ ಸಲ್ಲಿಕೆಯಾಗಿದೆ.

    ಮೈಸೂರು ಜಿಲ್ಲಾಧಿಕಾರಿ ಅಧಿಕೃತ ಸರಕಾರಿ ನಿವಾಸದ ನಡೆದಿದ್ದೆ ಎನ್ನಲಾಗುತ್ತಿರುವ ನವೀಕರಣ ವಿಚಾರದಲ್ಲಿ ತನಿಖೆಗೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಅವರು ಪ್ರಾದೇಶಿಕ ಆಯುಕ್ತರಿಗೆ ತನಿಖೆಗೆ ಆದೇಶಿಸಿದ್ದಾರೆ.

    ಪಾರಂಪರಿಕ ಸಂರಕ್ಷಣಾ ಸಮಿತಿಯ ಅನುಮತಿ ಇಲ್ಲದೆ ಕಟ್ಟಡ ನವೀಕರಿಸಿ ನಿವಾಸದ ನೆಲ ಹಾಸಿಗೆಯ ನವೀಕರಣದ ಮಾಡಲಾಗಿದೆ ಎಂದು ಶಾಸಕ ಸಾರಾ ಮಹೇಶ್ ದೂರು ನೀಡಿದ್ದರು. ಈ ಬಗ್ಗೆ ತನಿಖೆ ನಡೆಸಿ 7 ದಿನಗಳ ಒಳಗೆ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಪ್ರಧಾನ ಕಾರ್ಯದರ್ಶಿಯಿಂದ ಮೈಸೂರು ಪ್ರಾದೇಶಿಕ ಆಯುಕ್ತರಿಗೆ ನಿರ್ದೇಶನ ಬಂದಿದೆ. ಇದನ್ನೂ ಓದಿ: ವರ್ಗಾವಣೆಗೂ ಎರಡು ದಿನ ಮುಂಚೆ ಒತ್ತುವರಿ ತೆರವು, ಭೂ ಅಕ್ರಮದ ತನಿಖೆಗೆ ಆದೇಶಿಸಿದ್ದ ರೋಹಿಣಿ ಸಿಂಧೂರಿ

    ಇನ್ನೊಂದೆಡೆ ಚಾಮರಾಜನಗರ ಆಕ್ಸಿಜನ್ ದುರಂತ ಪ್ರಲರಣದಲ್ಲಿ ರೋಹಿಣಿ ಸಿಂಧೂರಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ತನಿಖಾಧಿಕಾರಿಗೆ ಚಾಮರಾಜನಗರದ ಮುಖಂಡ ಮಲ್ಲೇಶ್ ದೂರು ನೀಡಿದ್ದಾರೆ. ಅಫಿಡವಿಟ್ ಮಾಡಿಸಿದ ಮನವಿ ಪತ್ರ, ಪೆನ್‍ಡ್ರೈವ್ ಅನ್ನು ಆಕ್ಸಿಜನ್ ದುರಂತದ ತನಿಖೆಗಾಗಿ ಸರ್ಕಾರ ನೇಮಕ ಮಾಡಿರುವ ಬಿ.ಎ.ಪಾಟೀಲ್ ಸಮಿತಿಗೆ ಹಸ್ತಾಂತರಿಸಿದ್ದಾರೆ.

    ಮುಖಂಡ ಮಲ್ಲೇಶ್ ಮಾತನಾಡಿ, ಐಪಿಸಿ ಕಾಯ್ದೆ 302 ಅಡಿಯಲ್ಲಿ ರೋಹಿಣಿ ಸಿಂಧೂರಿ ವಿರುದ್ದ ಕೊಲೆ ಪ್ರಕರಣ ದಾಖಲಿಸಬೇಕು. ಅವರ ಸ್ವತ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಮೃತ ಕುಟುಂಬಕ್ಕೆ ಪರಿಹಾರ ಕೊಡಬೇಕು ಎಂದು ಆಗ್ರಹಿಸಿದರು.