Tag: rohit chakrathirtha

  • ಗೌರವಾನ್ವಿತ ಮುಠ್ಠಾಳರನ್ನು ಪಠ್ಯ ಸಮಿತಿಗೆ ನೇಮಕ ಮಾಡಿದ್ದೇ ತಪ್ಪು: ಕುಂ.ವೀರಭದ್ರಪ್ಪ ಆಕ್ರೋಶ

    ಗೌರವಾನ್ವಿತ ಮುಠ್ಠಾಳರನ್ನು ಪಠ್ಯ ಸಮಿತಿಗೆ ನೇಮಕ ಮಾಡಿದ್ದೇ ತಪ್ಪು: ಕುಂ.ವೀರಭದ್ರಪ್ಪ ಆಕ್ರೋಶ

    ರಾಯಚೂರು: ಪರಿಷ್ಕೃತ ಪಠ್ಯದ ಬಗ್ಗೆ ಲೇಖಕ, ಚಿಂತಕ ಕುಂ.ವೀರಭದ್ರಪ್ಪ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥರನ್ನ ಕೂಡಲೇ ಬಂಧಿಸಬೇಕು, ಶಿಕ್ಷಣ ಸಚಿವ ನಾಗೇಶ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

    ಗೌರವಾನ್ವಿತ ಮುಠ್ಠಾಳರನ್ನ ಪಠ್ಯ ಸಮಿತಿಗೆ ನೇಮಕ ಮಾಡಿರುವುದೇ ತಪ್ಪು. ಸರ್ಕಾರದ ಅಧಿಕೃತ ಆದೇಶವಿಲ್ಲದೆ ಟ್ಯೂಟೋರಿಯಲ್ ನಡೆಸುವಂತವರಿಗೆ ಪಠ್ಯ ರಚನೆ‌ ನೀಡಿರುವುದು ಸರಿಯಲ್ಲ. ರಾಷ್ಟ್ರಕವಿ ಕುವೆಂಪು ಅವರ ನಾಡಗೀತೆಯನ್ನೇ ತಿರುಚುವಂತ ಹೀನ ವ್ಯಕ್ತಿ ಪಠ್ಯ ರಚನೆ ಮಾಡುವುದು ಸರಿಯೇ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಅಗ್ನಿಪಥ್ ಬಗ್ಗೆ ಆಸಕ್ತಿ ಇದ್ದವರು ದೇಶ ಸೇವೆ ಮಾಡಿ ಅಂದ್ರೆ ಇವರಿಗ್ಯಾಕೆ ಇಷ್ಟೊಂದು ಉರಿತಿದೆ:  ಬಿ.ಶ್ರೀರಾಮುಲು

    ಪ್ರಜಾಸತ್ತಾತ್ಮಕ ವ್ಯವಸ್ಥೆಗೆ ಹಾಗೂ ಸಂವಿಧಾನಕ್ಕೆ ರೋಹಿತ್ ಚಕ್ರತೀರ್ಥ ಅಪಮಾನ ಮಾಡಿದ್ದಾರೆ. ಬಸವಣ್ಣ ಸೇರಿ ಅನೇಕ ದಾರ್ಶನಿಕರಿಗೆ ಅವಹೇಳನ ಮಾಡಿದ್ದಾರೆ. ಕೂಡಲೇ ರೋಹಿತ್ ಚಕ್ರತೀರ್ಥರನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.

    ಸಿಎಂ ಬಸವರಾಜ ಬೊಮ್ಮಾಯಿ ʼ777 ಚಾರ್ಲಿʼ ಸಿನಿಮಾದ ನಾಯಿಯ ನಟನೆ ಮೆಚ್ಚಿ ಕಣ್ಣೀರಿಟ್ಟು, ತೆರಿಗೆ ವಿನಾಯಿತಿ ನೀಡಿದ್ದಾರೆ. ಇಷ್ಟೊಂದು ಹೃದಯ ವೈಶಾಲ್ಯತೆ ಮೆರೆಯುವ ಸಿಎಂ ಅವರಿಗೆ ಪರಿಷ್ಕೃತ ಪಠ್ಯ ಪುಸ್ತಕದ ಅವಾಂತರಗಳು‌ ಕಾಣಿಸುತ್ತಿಲ್ಲವೆ? ಕೂಡಲೇ ಶಿಕ್ಷಣ ಸಚಿವ ನಾಗೇಶರನ್ನು ಸಚಿವ ಸ್ಥಾನದಿಂದ ಕೈ ಬಿಡಬೇಕೆಂದು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಇಲ್ಲಿ ಕೈದಿಗಳನ್ನ ನೋಡಬೇಕಂದ್ರೂ ಜೈಲರ್‌ಗಳಿಗೆ ಲಂಚ ಕೊಡಬೇಕು – ವೀಡಿಯೋ ವೈರಲ್

    Live Tv

  • ಪಠ್ಯ ಪರಿಷ್ಕರಣೆ ನೆಪದಲ್ಲಿ ಬಿಜೆಪಿ ಸರ್ಕಾರದಿಂದ ಸಾಂಸ್ಕೃತಿಕ ಅತ್ಯಾಚಾರ: ಡಿಕೆಶಿ

    ಪಠ್ಯ ಪರಿಷ್ಕರಣೆ ನೆಪದಲ್ಲಿ ಬಿಜೆಪಿ ಸರ್ಕಾರದಿಂದ ಸಾಂಸ್ಕೃತಿಕ ಅತ್ಯಾಚಾರ: ಡಿಕೆಶಿ

    ಬೆಂಗಳೂರು: ಪಠ್ಯಪುಸ್ತಕ ಪರಿಷ್ಕರಣೆ ನೆಪದಲ್ಲಿ ರಾಜ್ಯ ಬಿಜೆಪಿ ಸರ್ಕಾರವು ಸಾಂಸ್ಕೃತಿಕ ಅತ್ಯಾಚಾರ ನಡೆಸುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ನಗರದ ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಮಾತನಾಡಿದ ಅವರು, ಕುವೆಂಪು ಅವರು ಜಗತ್ತಿಗೆ ವಿಶ್ವಮಾನವ ಸಂದೇಶ ಸಾರಿದ್ದಾರೆ. ಆದರೆ ಬಿಜೆಪಿ ಸರ್ಕಾರ ಮಕ್ಕಳ ಪಠ್ಯಪುಸ್ತಕದಲ್ಲಿ ಕುವೆಂಪು ಸೇರಿದಂತೆ ಮಹಾನ್ ದಾರ್ಶನಿಕರ ವಿಚಾರಗಳನ್ನು ತಿರುಚಿ ಸಾಂಸ್ಕೃತಿಕ ಅತ್ಯಾಚಾರ ನಡೆಸುತ್ತಿದೆ. ಇತಿಹಾಸ ಬದಲಾವಣೆ ಮಾಡಿ ತಮ್ಮ ಅಜೆಂಡಾವನ್ನು ಚಿಕ್ಕ ಮಕ್ಕಳ ತಲೆಗೆ ತುಂಬುವ ಪ್ರಯತ್ನ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ರೋಹಿತ್ ಚಕ್ರತೀರ್ಥಗೆ ಸಂಘಟನೆಗಳಿಂದ ಧಮ್ಕಿ – ಪೊಲೀಸರಿಂದ ಬಿಗಿ ಭದ್ರತೆ

    ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ರಾಜಕೀಯ ನಾಯಕರನ್ನು ಹೊರತುಪಡಿಸಿ ಎಲ್ಲ ಮಠಗಳ ಪೀಠಾಧ್ಯಕ್ಷರು, ಸಾಹಿತಿಗಳು, ಸಂಘಟನೆಗಳು ಒಟ್ಟಾಗಿ ಪಠ್ಯ ಪರಿಷ್ಕರಣೆಯಲ್ಲಿ ಸರ್ಕಾರದ ಮನಸ್ಥಿತಿ ಹಾಗೂ ಧೋರಣೆಯನ್ನು ತೀವ್ರವಾಗಿ ಖಂಡಿಸುತ್ತಿದ್ದಾರೆ. ಬಿಜೆಪಿ ಸರ್ಕಾರದ ನಡೆ ವಿರುದ್ಧ ದನಿ ಎತ್ತಿರುವ ಮಠಾಧೀಶರು, ಸಾಹಿತಿಗಳು, ಚಿಂತಕರು ಹಾಗೂ ಇತರ ಸಂಘಟನೆಗಳು ಇದೇ ತಿಂಗಳು ವಿಧಾನಸೌಧ ಆವರಣದ ಗಾಂಧಿ ಪ್ರತಿಮೆ ಎದುರು ಧರಣಿ ನಡೆಸಲಿದ್ದಾರೆ ಎಂದು ಹೇಳಿದ್ದಾರೆ.

    ಬಸವಣ್ಣನವರ ವಚನಗಳನ್ನು ತಿರುಚಲಾಗಿದೆ, ಅಂಬೇಡ್ಕರ್ ಅವರ ವಿಚಾರಗಳನ್ನು ಪಠ್ಯಕ್ರಮದಿಂದ ತೆಗೆದು ಅಪಮಾನ ಮಾಡಲಾಗಿದೆ. ಇದು ಇಡೀ ಭಾರತ ದೇಶಕ್ಕೆ ಮಾಡಿರುವ ದೊಡ್ಡ ಅಪಮಾನವಾಗಿದೆ. ಮುಖ್ಯವಾಗಿ 9ನೇ ತರಗತಿ ಸಮಾಜ ವಿಜ್ಞಾನ ಪಠ್ಯದಲ್ಲಿ ಬಸವಣ್ಣನವರ ಜನಿವಾರ ವಿಚಾರವನ್ನು ಪ್ರಸ್ತಾಪಿಸಿ ಮಕ್ಕಳಲ್ಲಿ ವಿಷಬೀಜ ಬಿತ್ತಲು ಪ್ರಯತ್ನಿಸುತ್ತಿದೆ ಎಂದು ಖಂಡಿಸಿದ್ದಾರೆ. ಇದನ್ನೂ ಓದಿ: PUC ಪಠ್ಯ ಪರಿಷ್ಕರಣೆ – ಚಕ್ರತೀರ್ಥ ಸಮಿತಿಯಿಂದ ವರದಿ ಪಡೆಯದಿರಲು ಶಿಕ್ಷಣ ಇಲಾಖೆ ತೀರ್ಮಾನ

    TEXTBOOK

    ಮುಖ್ಯಮಂತ್ರಿಗಳು ಕಷ್ಟಪಟ್ಟು ಬಸವಣ್ಣನವರ ವಿಚಾರವನ್ನು ಮಾತ್ರ ಪರಿಶೀಲನೆ ಮಾಡುವುದಾಗಿ ತಿಳಿಸಿದ್ದಾರೆ. ಅವರು ಕೇವಲ ಒಂದು ಪಕ್ಷದ ಮುಖ್ಯಮಂತ್ರಿಯಾಗಿಲ್ಲ. ಇಡೀ ರಾಜ್ಯದ ಮುಖ್ಯಮಂತ್ರಿ ಆಗಿದ್ದಾರೆ. ಹಾಗೆಯೇ ಶಿಕ್ಷಣ ನೀತಿ ಎಂಬುದು ರಾಜ್ಯಕ್ಕೆ ಸಂಬಂಧಿಸಿದ ವಿಚಾರ. ಆರ್‌ಎಸ್‌ಎಸ್ ಚಿಂತನೆಗಳನ್ನು ನೀವೇ ಇಟ್ಟುಕೊಳ್ಳಿ, ನಾವು ಬೇಡ ಎನ್ನುವುದಿಲ್ಲ. ಆದರೆ ಅದು ರಾಷ್ಟ್ರೀಯ ಶಿಕ್ಷಣ ನೀತಿ ಆಗಲು ಸಾಧ್ಯವಿಲ್ಲ ಎಂದು ಗುಡುಗಿದ್ದಾರೆ. ಇದನ್ನೂ ಓದಿ: ಅಂಬೇಡ್ಕರ್ ಮರೆತಿದ್ದು ಕಾಂಗ್ರೆಸ್ ಹೊರತು ನಾವಲ್ಲ: ಬಿಜೆಪಿ ತಿರುಗೇಟು

    TEXT BOOK

    ಪಠ್ಯಪುಸ್ತಕ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ ಎಂಬ ಶಿಕ್ಷಣ ಸಚಿವ ನಾಗೇಶ್ ಆರೋಪಕ್ಕೆ ಪ್ರತಿಕ್ರಿಯಿಸಿದ ಡಿಕೆಶಿ, ಬಸವಣ್ಣ, ಅಂಬೇಡ್ಕರ್, ಕುವೆಂಪು ಅವರ ವಿಚಾರಧಾರೆ ರಾಜಕೀಯ ವಿಚಾರಗಳೇ? ಸಿದ್ದಗಂಗಾ ಶ್ರೀಗಳು ರಾಜಕಾರಣಿಗಳೇ? ನಿರ್ಮಲಾನಂದ ಸ್ವಾಮೀಜಿ ರಾಜಕಾರಣಿಗಳೇ? ಮುರುಘಾ ಶರಣರು ರಾಜಕಾರಣಿಗಳೇ? ಅವರೇ ಉತ್ತರ ಹೇಳಲಿ. ಇಲ್ಲಿ ನಾವು ಬಿಜೆಪಿಯ ನಿಜವಾದ ಮುಖ ಹಾಗೂ ಮನಸ್ಥಿತಿ ವಿರುದ್ಧ ಹೋರಾಡುತ್ತೇವೆ. ಸಚಿವರು ರಾಜೀನಾಮೆ ನೀಡುತ್ತಾರೋ, ಬಿಡುತ್ತಾರೋ ನಮಗೆ ಬೇಡ. ಅವರು ಪರಿಷ್ಕರಣೆ ಮಾಡಿರುವ ಪಠ್ಯಪುಸ್ತಕವನ್ನು ಕಸದ ಬುಟ್ಟಿಗೆ ಎಸೆದು ಹಳೆ ಪಠ್ಯವನ್ನು ಮಕ್ಕಳಿಗೆ ನೀಡಿ ಬೋಧಿಸಬೇಕು ಎಂದು ಒತ್ತಾಯಿಸಿದ್ದಾರೆ.

    ಸರ್ಕಾರದ ಮನಸ್ಥಿತಿ ವಿರುದ್ಧ ನಮ್ಮ ಹೋರಾಟ: ರೋಹಿತ್ ಚಕ್ರತೀರ್ಥ ಅವರಿಗೆ ಪೊಲೀಸ್ ಭದ್ರತೆ ನೀಡಿರುವ ಬಗ್ಗೆ ಉತ್ತರಿಸಿದ ಅವರು, ಅವರಿಗೆ ಪೊಲೀಸ್ ಭದ್ರತೆಯಾದ್ರು ನೀಡಲಿ, ಪ್ಯಾರಾ ಮಿಲಿಟರಿ ಭದ್ರತೆಯಾದ್ರೂ ನೀಡಲಿ. ನಾವು ಆ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ನಮ್ಮ ಹೋರಾಟ ಸರ್ಕಾರದ ಮನಸ್ಥಿತಿಯ ಬಗ್ಗೆ. ಅವರು ಮಾಡಿದ್ದೆಲ್ಲ ಸರಿ ಎಂದು ಮುಖ್ಯಮಂತ್ರಿ ಬೊಮ್ಮಾಯಿಯವರು ಅಧಿಕೃತ ಮುದ್ರೆ ಒತ್ತಿದ್ದಾರೆ ಎಂದು ಕುಟುಕಿದ್ದಾರೆ.

  • ಚಕ್ರತೀರ್ಥ ರೂಪಿಸಿರುವ ಪಠ್ಯಪುಸ್ತಕಗಳನ್ನು ತಡೆಹಿಡಿಯಿರಿ – ಸಿಎಂಗೆ ಪತ್ರ ಬರೆದ ಸಿದ್ದರಾಮಯ್ಯ

    ಚಕ್ರತೀರ್ಥ ರೂಪಿಸಿರುವ ಪಠ್ಯಪುಸ್ತಕಗಳನ್ನು ತಡೆಹಿಡಿಯಿರಿ – ಸಿಎಂಗೆ ಪತ್ರ ಬರೆದ ಸಿದ್ದರಾಮಯ್ಯ

    ಬೆಂಗಳೂರು: ರೋಹಿತ್ ಚಕ್ರತೀರ್ಥನನ್ನು ಸರ್ಕಾರ ಪಠ್ಯ ಪರಿಷ್ಕರಣ ಸಮಿತಿ ಅಧ್ಯಕ್ಷನಾಗಿ ಮಾಡಿದ್ದು ಅಕ್ಷಮ್ಯ. ಈ ಕೂಡಲೇ ವಿಸರ್ಜನೆಗೊಂಡಿರುವ ಸಮಿತಿ ರೂಪಿಸಿರುವ ಪಠ್ಯಪುಸ್ತಕಗಳನ್ನು ತಡೆಹಿಡಿಯಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ.

    ಪತ್ರದಲ್ಲಿ ಏನಿದೆ?
    ನಾಡಿನ ಜನತೆಯ ಆಕ್ರೋಶದ ಬಳಿಕ ಬಹಳ ತಡವಾಗಿಯಾದರೂ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯನ್ನು ವಿಸರ್ಜಿಸಿದ್ದೀರಿ. ಆದರೆ, ಈ ಸಮಿತಿ ಪಠ್ಯದೊಳಗೆ ತುರುಕಿರುವ ಸಂವಿಧಾನ ವಿರೋಧಿ ಮತ್ತು ಸಂಗತಿಗಳನ್ನು ಹಾಗೇ ಉಳಿಸಿಕೊಂಡಿದ್ದೀರಿ. ಜನರ ವಿವೇಕವನ್ನು ಶತಮಾನಗಳಿಂದ ತಿದ್ದುತ್ತಾ ಬಂದಿರುವ ಚಿಂತಕರ ಜೀವಪರ ವಿಚಾರಗಳಿದ್ದ ಪಠ್ಯಗಳಲ್ಲಿನ ವಾಕ್ಯ, ಪದ, ಪ್ಯಾರಾಗಳನ್ನು ತೆಗೆದುಹಾಕಿ, ಉಳಿದವಕ್ಕೆ ಕತ್ತರಿ ಹಾಕಿ ಮಕ್ಕಳ ಭವಿಷ್ಯಕ್ಕೆ ಮಾರಕವಾಗಿರುವ ಪ್ರತಿಗಾಮಿ ಹಾಗೂ ಜಾತಿ ಶ್ರೇಷ್ಠತೆಯ ವ್ಯಸನದ ಸಂಗತಿಗಳನ್ನು ಪಠ್ಯದೊಳಗೆ ಉಳಿಸಿಕೊಳ್ಳುವ ಸರ್ಕಾರದ ಹುನ್ನಾರ ಹಾಗೂ ಪ್ರಧಾನವಾಗಿ ಒಂದು ಜಾತಿಯವರ ಬರಹಗಳನ್ನು, ವಿಚಾರಗಳನ್ನು ನಾಡಿನ ಮೇಲೆ ಹೇರಲು ಹೊರಟಿರುವುದು ಅತ್ಯಂತ ಅಪಾಯಕಾರಿ ನಡೆಯಾಗಿದೆ ಎಂದು ನಾಡಿನ ಅನೇಕ ಚಿಂತಕರು ಪ್ರತಿಭಟಿಸಿದ್ದಾರೆ. ಇದನ್ನೂ ಓದಿ: ಅಂಬೇಡ್ಕರ್ `ಸಂವಿಧಾನ ಶಿಲ್ಪಿ’ ಬಿರುದು ಕೈಬಿಟ್ಟ ರೋಹಿತ್ ಚಕ್ರತೀರ್ಥ ಸಮಿತಿ – ಎಲ್ಲೆಡೆ ಆಕ್ರೋಶ

    ಪಠ್ಯ ಪುಸ್ತಕ ಪರಿಷ್ಕರಣೆಗೆ ಅಗತ್ಯವಾದ ಬೌದ್ಧಿಕ ತಿಳಿವಳಿಕೆ ಮತ್ತು ಅರ್ಹತೆಗಳಿಲ್ಲದ, ಸಾಮಾಜಿಕ ತಾಣಗಳಲ್ಲಿ ಶೂದ್ರ-ದಲಿತ ಪರಂಪರೆ ಮತ್ತು ಸಂಸ್ಕೃತಿ ಬಗೆಗೆ ವಿಕೃತಿ ಕಾರಿಕೊಳ್ಳುವುದನ್ನೇ ಪಾಂಡಿತ್ಯ ಎಂದುಕೊಂಡಿರುವ ಹಾಗೂ ಮಹಿಳೆಯರ ಬಗ್ಗೆ ಕನಿಷ್ಠ ಗೌರವವೂ ಇಲ್ಲದಂತೆ ಬಹಿರಂಗವಾಗಿ ಪೋಸ್ಟ್‌ಗಳನ್ನು ಹಾಕಿ ಅಸಹ್ಯವಾಗಿ ಆಚರಿಸುತ್ತಿದ್ದ ವ್ಯಕ್ತಿಯನ್ನು ಪಠ್ಯ ಪರಿಷ್ಕರಣೆ ಸಮಿತಿಗೆ ಅಧ್ಯಕ್ಷನನ್ನಾಗಿ ಮಾಡಿ ನಾಡಿನ ಸಾಂಸ್ಕೃತಿಕ ಪರಂಪರೆಗೆ ದ್ರೋಹ ಎಸಗಿದ್ದು ಸರ್ಕಾರ ಮಾಡಿರುವ ಗಂಭೀರ ಅಪರಾಧ.

    TEXT BOOK

    ಸರ್ಕಾರದ ಈ ಅಪರಾಧಕ್ಕಾಗಿ ನಾಡಿನ ಪ್ರಮುಖ ಮಠಾಧೀಶರು, ಚಿಂತಕರು ಆಕ್ರೋಶ ಹೊರ ಹಾಕಿದ್ದಾರೆ. ನಾಡಿನ ಸಾಂಸ್ಕೃತಿಕ ಜಗತ್ತು ವ್ಯಾಪಕ ಪ್ರತಿರೋಧ ವ್ಯಕ್ತಪಡಿಸಿದೆ. ಪಠ್ಯಗಳಲ್ಲಿ ಬಸವಣ್ಣ, ನಾರಾಯಣಗುರು, ಅಂಬೇಡ್ಕರ್, ಕುವೆಂಪು, ಸ್ವಾಮಿ ವಿವೇಕಾನಂದ, ಸಾವಿತ್ರಿಬಾಯಿ ಫುಲೆ, ರಾಣಿ ಅಬ್ಬಕ್ಕ ಮುಂತಾದ ಈ ನೆಲದ ನಿಜವಾದ ಜ್ಞಾನ ಪರಂಪರೆ ಮತ್ತು ಅಧ್ಯಾತ್ಮ ಪರಂಪರೆಯ ಹಲವು ಮಹಾತ್ಮರ ಕುರಿತಾದ ಪಠ್ಯಗಳನ್ನು ತೆಗೆದು ಹಾಕಿರುವುದಕ್ಕೆ ಅಥವಾ ಉಳಿಸಿಕೊಂಡಿರುವ ಪಠ್ಯಗಳಲ್ಲಿನ ಸಂವಿಧಾನದ ಆಶಯಗಳನ್ನು ತೆಗೆದಿರುವುದಕ್ಕೆ ಇದುವರೆಗೂ ಸರ್ಕಾರ ಕ್ಷಮೆ ಕೇಳಿಲ್ಲ ಮತ್ತು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುತ್ತೇವೆ ಎನ್ನುವ ಭರವಸೆಯನ್ನೂ ನೀಡಿಲ್ಲ. ಇದನ್ನೂ ಓದಿ: ಹೊಸ ನಾಣ್ಯಗಳ ಮುಖಬೆಲೆ ಬಿಡುಗಡೆ ಮಾಡಿದ ಮೋದಿ

    ಬಸವಣ್ಣನವರ ಕುರಿತಂತೆ ತಿರುಚಿದ ಸಂಗತಿಗಳನ್ನು ಮಕ್ಕಳಿಗೆ ಬೋಧಿಸಲು ಹೊರಟಿದ್ದಾರೆ ಎಂದು ಶ್ರೀಶ್ರೀಶ್ರೀ ಪಂಡಿತಾರಾಧ್ಯ ಸ್ವಾಮೀಜಿಗಳು ಮತ್ತು ಲಿಂಗಾಯತ ಮಠಾಧೀಶರ ಒಕ್ಕೂಟದವರು ನಿಮ್ಮ ಗಮನಕ್ಕೆ ತಂದರು. ಬಳಿಕ, ಬಸವಣ್ಣನವರ ಪಠ್ಯವನ್ನು ತಿರುಚಿ, ಶರಣ ಸಂಸ್ಕೃತಿ ಪರಂಪರೆಗೆ ವಿರುದ್ಧವಾದ ಅಂಶಗಳನ್ನು ಕಪಟತನದಿಂದ ಪಠ್ಯದಲ್ಲಿ ಸೇರಿಸಿದ್ದನ್ನು ಪರಿಷ್ಕರಿಸಲು ಸರ್ಕಾರ ಒಪ್ಪಿಕೊಂಡಿರುವುದನ್ನು ನಾನು ಸ್ವಾಗತಿಸುತ್ತೇನೆ. ಆದರೆ ಈ ಪರಿಷ್ಕರಣೆಯನ್ನು ಯಾರಿಂದ ಮಾಡಿಸುತ್ತೀರಿ? ಬಸವಣ್ಣನವರಿಗೆ ಬಗೆದಿರುವ ದ್ರೋಹದಂತೆಯೇ ಇನ್ನಿತರೆ ಪಾಠಗಳಲ್ಲಿ ಮಾಡಿರುವ ಅನಿಷ್ಠಗಳನ್ನು ಅಳಿಸುವ ಬಗ್ಗೆ ಸರ್ಕಾರದ ನಿಲುವು ಏನು ಎಂಬುದರ ಕುರಿತು ಸರ್ಕಾರ ಏನನ್ನೂ ಹೇಳಿಲ್ಲ. ಹೀಗಾಗಿ ಪಠ್ಯ ಪರಿಷ್ಕರಣಾ ಸಮಿತಿಯ ಆಯ್ಕೆಯಿಂದ ಅದನ್ನು ವಿಸರ್ಜಿಸುವವರೆಗೂ ಸರ್ಕಾರ ಮೇಲಿಂದ ಮೇಲೆ ಅಪರಾಧ ಮಾಡುತ್ತಲೇ ಇದೆ.

    TEXTBOOK

    ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಅಂಬೇಡ್ಕರ್ ಎನ್ನುವ ಸಾಲಿನಿಂದ ಸಂವಿಧಾನ ಶಿಲ್ಪಿ ಎನ್ನುವ ಪದಕ್ಕೆ ಕತ್ತರಿ ಹಾಕಲಾಗಿದೆ. ಅಂಬೇಡ್ಕರ್ ಅವರನ್ನು ಸಂವಿಧಾನ ಶಿಲ್ಪಿ ಎಂದು ಇಡಿ ವಿಶ್ವವೇ ಒಪ್ಪಿಕೊಂಡಿದೆ. ಆದರೆ, ಮನುವಾದಿ ವಿಕೃತ ರೋಗಿಷ್ಠರಿಗೆ ಮಾತ್ರ ಬಾಬಾಸಾಹೇಬರು ಕನಸಿನಲ್ಲೂ ದಿಗಿಲು ಬೀಳಿಸುತ್ತಾರೆ. ನಿಮ್ಮ ಸರ್ಕಾರಕ್ಕೆ ಇದನ್ನು ಕತ್ತರಿಸಿ ಹಾಕುವ ರೋಗ ಬಂದಿದೆ. ಜೊತೆಗೆ ಕನ್ನಡ ರಾಜ್ಯೋತ್ಸವದ ಕುರಿತ ಪಠ್ಯವನ್ನೂ ಕಿತ್ತುಹಾಕಿ ಬಿಜೆಪಿ ನಾಡದ್ರೋಹಿ ಪರಂಪರೆಯನ್ನು ಮುಂದುವರೆಸಿದೆ. ಇಂಥಾ ಅಸಹ್ಯದ ನೂರಾರು ಅಧ್ವಾನಗಳನ್ನು ಪಠ್ಯ ಪರಿಷ್ಕರಣ ಸಮಿತಿ ಮಾಡಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಭೇಟಿ ಮಾಡಿ ಬೆಂಬಲ ಕೇಳುತ್ತೇನೆ, ನಮ್ಮಿಬ್ಬರ ನಡುವೆ ವಿಶ್ವಾಸ ಚೆನ್ನಾಗಿದೆ: ರೇವಣ್ಣ

    ದೇವನೂರು ಮಹದೇವ, ಮೂಡ್ನಾಕೂಡು ಚಿನ್ನಸ್ವಾಮಿಯವರಂತಹ ಹಿರಿಯ ಬರಹಗಾರರು ತಮ್ಮ ತಕರಾರುಗಳನ್ನು ವ್ಯಕ್ತಪಡಿಸಿದಾಗ ಆ ತಕರಾರುಗಳನ್ನು ಕೇಳಿಸಿಕೊಳ್ಳುವ ಸೌಜನ್ಯವೂ ಇಲ್ಲದಂತೆ ಸರ್ಕಾರ ಮತ್ತು ಪಠ್ಯ ಪುಸ್ತಕ ಸಮಿತಿ ವಿಕೃತಿ ಮೆರೆದಿದೆ. ನಾಡಿನ ಹಿರಿಯ ಮಠಾಧೀಶರು ತಮ್ಮ ವಿರೋಧವನ್ನು ವ್ಯಕ್ತಪಡಿಸಿದಾಗ ಅವರುಗಳ ಸಾತ್ವಿಕ ಸಿಟ್ಟನ್ನೂ ಲೇವಡಿ ಮಾಡುವ ರೀತಿಯಲ್ಲಿ ಸಚಿವರು ಮತ್ತು ಪಕ್ಷದ ಮುಖಂಡರಿಂದ ರಾಜಕೀಯ ಹೇಳಿಕೆ ಕೊಡಿಸಲಾಗಿದೆ. ಮಠಾಧೀಶರನ್ನು ಕಾಂಗ್ರೆಸ್ ವಕ್ತಾರರು ಎನ್ನುವ ಅರ್ಥ ಬರುವಂತೆ ಸಚಿವರುಗಳಿಂದ ಪರೋಕ್ಷ ಹೇಳಿಕೆ ಕೊಡಿಸಿ ಮಠ ಪರಂಪರೆಗೆ ಅವಮಾನ ಎಸಗಿದಂತೆ ಸರ್ಕಾರ ವರ್ತಿಸಿದೆ.

    ಪಠ್ಯ ಪರಿಷ್ಕರಣೆಗೆ ಸಂವಿಧಾನದಲ್ಲಿ ನಂಬಿಕೆಯೇ ಇಲ್ಲದ ಮತ್ತು ಈ ನಾಡಿನ ಜನ ಸಂಸ್ಕೃತಿ ಬಗ್ಗೆ ಕನಿಷ್ಠ ಗೌರವ ಇಲ್ಲದವರನ್ನೇ ಹುಡುಕಿ ಸಮಿತಿಯನ್ನು ರಚಿಸಿದ್ದು ಮತ್ತು ನಾಡಿನ ಪ್ರಜ್ಞಾವಂತ ಸಮುದಾಯದ ಆಗ್ರಹಕ್ಕೂ ಲೆಕ್ಕಿಸದೆ ಈ ಸಮಿತಿಯ ಎಲ್ಲಾ ನಿಯಮಬಾಹಿರ ಮತ್ತು ನಾಡದ್ರೋಹಿ ವಿಚಾರಗಳನ್ನು ಪಠ್ಯಗಳಲ್ಲಿ ಉಳಿಸಿಕೊಂಡು ಕೇವಲ ಸಮಿತಿಯನ್ನು ವಿಸರ್ಜಿಸಿರುವುದನ್ನು ನೋಡಿದರೆ ಇದೆಲ್ಲವೂ ಪೂರ್ವಯೋಜಿತ ಷಡ್ಯಂತ್ರದಂತೆ ಕಾಣುತ್ತಿದೆ.

    Text book

    ನಮ್ಮ ನಾಡಗೀತೆಯು ಸರ್ಕಾರದ ಅಧಿಕೃತ ಗುರುತು. ನಾಡಿನ ಸಾರ್ವಭೌಮತೆಯ ಸಂಕೇತ. ಇಂತಹ ಗುರುತರವಾದ ಸಂಗತಿಗೆ ಅವಮಾನ ಮಾಡಿರುವ ಚಕ್ರತೀರ್ಥನನ್ನು ಸರ್ಕಾರ ಪಠ್ಯ ಪರಿಷ್ಕರಣಾ ಸಮಿತಿಯ ಅಧ್ಯಕ್ಷನನ್ನಾಗಿ ಮಾಡಿದ್ದು ಅಕ್ಷಮ್ಯ. ಈತನ ಮೇಲೆ ರಾಷ್ಟ್ರದ್ರೋಹದ ಪ್ರಕರಣ ದಾಖಲಿಸಿ ಕಾನೂನು ಕ್ರಮಕ್ಕೆ ಒಳಪಡಿಸಬೇಕು ಎನ್ನುವ ನಾಡಿನ ಜನತೆಯ, ಲೇಖಕ-ಬರಹಗಾರರ ಮತ್ತು ಸ್ವಾಮೀಜಿಗಳ ಆಗ್ರಹವನ್ನು ಸರ್ಕಾರ ತಕ್ಷಣ ಪಾಲಿಸಬೇಕು ಎಂದು ಒತ್ತಾಯಿಸುತ್ತೇನೆ. ಇದನ್ನೂ ಓದಿ: ಗ್ರಾಮೀಣ ರಸ್ತೆಗೆ ಗೋಡ್ಸೆ ಹೆಸರು – ಪೊಲೀಸರ ಸಮ್ಮುಖದಲ್ಲಿ ತೆರವು

    ಆದ್ದರಿಂದ ಈ ಕೂಡಲೇ ವಿಸರ್ಜನೆಗೊಂಡಿರುವ ಸಮಿತಿ ರೂಪಿಸಿರುವ ಪಠ್ಯ ಪುಸ್ತಕಗಳನ್ನು ತಡೆ ಹಿಡಿಯಬೇಕು. ಈ ಸಮಿತಿಯು ತೂರಿಸಿರುವ ವಾಸ್ತವಕ್ಕೆ ದೂರವಾದ ಸಂಗತಿಗಳನ್ನು ಮತ್ತು ತಿರುಚಿರುವ ವಿಷಯಗಳ ಬಗ್ಗೆ ಉನ್ನತ ಮಟ್ಟದ ಸಮಿತಿಯಿಂದ ವರದಿ ತರಿಸಿಕೊಳ್ಳಬೇಕು. ಈಗಾಗಲೇ ಶಾಲೆಗಳು ಆರಂಭಗೊಂಡಿರುವುದರಿಂದ ಮಕ್ಕಳಿಗೆ ತೊಂದರೆ ಆಗದಂತೆ ಹಿಂದಿನ ಬರಗೂರು ಸಮಿತಿಯ ಪಠ್ಯಗಳನ್ನೇ ಈ ಸಾಲಿಗೂ ಮಕ್ಕಳಿಗೆ ವಿತರಿಸಬೇಕು. ನಿಜವಾದ ಅರ್ಹತೆ ಇರುವ ಶಿಕ್ಷಣ ತಜ್ಞರ ಸಮಿತಿ ಮೂಲಕ ಪರಿಷ್ಕರಣಾ ಸಮಿತಿ ಮಾಡಿರುವ ಅದ್ವಾನಗಳನ್ನು ಕೂಡಲೇ ಸರಿಪಡಿಸಬೇಕು ಹಾಗೂ ನಾಡಿನ ಸಂಸ್ಕೃತಿ, ಪರಂಪರೆ, ಚರಿತ್ರೆ, ಸಂವಿಧಾನದ ಆಶಯಗಳ ಬಗ್ಗೆ ಗೌರವ ಇರುವವರನ್ನು ಸಮಿತಿಗಳಿಗೆ ನೇಮಿಸಬೇಕು. ಇಷ್ಟೆಲ್ಲಾ ಯಡವಟ್ಟುಗಳಿಗೆ ಕಾರಣರಾದ ಶಿಕ್ಷಣ ಸಚಿವ ನಾಗೇಶ್ ಅವರ ರಾಜೀನಾಮೆಯನ್ನು ಕೂಡಲೇ ಪಡೆಯಬೇಕು ಎಂದು ಆಗ್ರಹಿಸುತ್ತೇನೆ.

  • ನಾನು ಐಐಟಿ ಪ್ರೊಫೆಸರ್ ಅಲ್ಲ: ರೋಹಿತ್ ಚಕ್ರತೀರ್ಥ

    ನಾನು ಐಐಟಿ ಪ್ರೊಫೆಸರ್ ಅಲ್ಲ: ರೋಹಿತ್ ಚಕ್ರತೀರ್ಥ

    ಬೆಂಗಳೂರು: ನಾನು ಐಐಟಿ ಪ್ರೊಫೆಸರ್ ಅಲ್ಲ. ಸಚಿವ ಬಿ.ಸಿ ನಾಗೇಶ್ ಅವರು ಬಾಯಿ ತಪ್ಪಿ ಹೇಳಿದ್ದಾರೆ ಎಂದು ಪಠ್ಯ ಪರಿಷ್ಕರಣೆ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಸ್ಪಷ್ಟನೆ ನೀಡಿದ್ದಾರೆ.

    ಪಠ್ಯ ಪರಿಷ್ಕರಣೆ ವಿವಾದ ಸಂಬಂಧ ಪಬ್ಲಿಕ್ ಟಿವಿ ಜೊತೆ ಎಕ್ಸ್ ಕ್ಲೂಸಿವ್ ಆಗಿ ಮಾತನಾಡಿದ ಅವರು, ಉಪನ್ಯಾಸಕನಾಗಿ ನಾನು ನನ್ನ ವೃತ್ತಿ ಜೀವನ ಆರಂಭಿಸಿದ್ದೇನೆ. ಕಳೆದ 10-15 ವರ್ಷಗಳಿಂದ ನಾನು ಶಿಕ್ಷಣ ಕ್ಷೇತ್ರದಲ್ಲಿಯೇ ಇದ್ದೇನೆ. ಶಿಕ್ಷಣ ಸಚಿವರು ಮಾತಿನ ಭರದಲ್ಲಿ ಬಾಯಿ ತಪ್ಪಿ ಹೇಳಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ವೀಸಾ ಹಗರಣ – ಕಾರ್ತಿ ಚಿದಂಬರಂಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

    ನಾನು ನನ್ನ ವೃತ್ತಿ ಜೀವನ ಪ್ರಾರಂಭಿಸಿದಾಗಿನಿಂದ ಐಐಟಿ ಪ್ರವೇಶ ಪರೀಕ್ಷೆಗಳಿಗೆ ತರಬೇತಿ ಕೊಡುತ್ತಿದ್ದೆ. ಮಕ್ಕಳಿಗೆ ಐಐಟಿ, ಜೆಇಇಗೆ ಬೇಕಾದ ಶಿಕ್ಷಣವನ್ನು ನೀಡುತ್ತಿದ್ದೆ ಎಂದು ಹೇಳಿದರು.

    ನನ್ನ ಕೆಲಸ ನಾನು ಮಾಡಿದ್ದೇನೆ. ನನ್ನನ್ನು ಸಮಿತಿಯಿಂದ ವಜಾ ಮಾಡಿದ್ರೂ ಸರಿ. ನನ್ನ ಕೆಲಸ ನನಗೆ ತೃಪ್ತಿ ನೀಡಿದೆ. ನಾನು ಎಲ್ಲದಕ್ಕೂ ಸಿದ್ಧನಿದ್ದೇನೆ ಎಂದು ರೋಹಿತ್ ಚಕ್ರತೀರ್ಥ ಸ್ಪಷ್ಟನೆ ಕೊಟ್ಟರು.

  • ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ಹಂಪ ನಾಗರಾಜಯ್ಯ ರಾಜೀನಾಮೆ

    ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ಹಂಪ ನಾಗರಾಜಯ್ಯ ರಾಜೀನಾಮೆ

    ಬೆಂಗಳೂರು: ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ಹಾಗೂ ಸದಸ್ಯತ್ವಕ್ಕೆ ನಾಡೋಜ ಹಂಪ ನಾಗರಾಜಯ್ಯ ರಾಜೀನಾಮೆ ನೀಡಿದ್ದು, ಈ ಪತ್ರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ರವಾನಿಸಿದ್ದಾರೆ.

    ರೋಹಿತ್ ಚಕ್ರತೀರ್ಥ ವಿರುದ್ಧ ಸಿಡಿದೆದ್ದ ಅವರು, ಕುವೆಂಪು ಕನ್ನಡ ಜ್ಞಾನಪೀಠ ಪ್ರಶಸ್ತಿ ತಂದ ಮೊದಲಿಗರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನವನ್ನು ಪ್ರಾರಂಭಿಸಿದ್ದರು. ಅಷ್ಟೇ ಅಲ್ಲದೇ ಅತ್ಯುನ್ನತ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಿತ್ತು. ಆದರೆ ಕುವೆಂಪು ಹಾಗೂ ಅವರ ಜನಾಂಗವನ್ನು ಅವಾಚ್ಯ ಶಬ್ದದಿಂದ ನಿಂದಿಸಿ, ರಾಷ್ಟ್ರಗೀತೆ ಹಾಗೂ ನಾಡಗೀತೆಯನ್ನು ಲೇವಡಿ ಮಾಡಿದ ವ್ಯಕ್ತಿಯ ವಿರುದ್ಧ ಕ್ರಮಕೈಗೊಂಡಿಲ್ಲ. ಬದಲಾಗಿ ಜವಾಬ್ದಾರಿ ಕೊಟ್ಟಿದ್ದಾರೆ ಎಂದು ಸರ್ಕಾರದ ಆಕ್ರೋಶ ವ್ಯಕ್ತಪಡಿಸಿದರು.

    ಅಮೂಲ್ಯ ಕೃತಿಗಳಿಂದ ಹೊಸಗನ್ನಡ ಸಾಹಿತ್ಯದ ಎಲ್ಲಾ ಪ್ರಕಾರಗಳನ್ನು ಪ್ರಕಟಿಸಿ ಭಾರತೀಯ ಸಾಹಿತ್ಯದಲ್ಲಿ ಕನ್ನಡಕ್ಕೂ ಕರ್ನಾಟಕಕ್ಕೂ ಮಹಾಕವಿ ಕುವೆಂಪು ಅವರು ಗೌರವ ತಂದರು. ಇಂತಹವರನ್ನು ನಿಂದಿಸಿರುವುದು ಅಪಾಯಕಾರಿ ಬೆಳವಣಿಗೆ ಆಗಿದೆ. ಇದರಿಂದ ತಪ್ಪು ಸಂದೇಶಗಳು ರವಾನೆ ಮಾಡಿದಂತಾಗಿದೆ. ವ್ಯಕ್ತಿಗಳ ತೇಜೋವಧೆ ಮಾಡುವುದನ್ನು ಸರ್ಕಾರ ಸಹಿಸುವುದಿಲ್ಲ ಎಂಬ ನಂಬಿಕೆಯೂ ಹುಸಿಯಾಗಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಮಂಗಳೂರಿನಲ್ಲಿ ಹಿಜಬ್ ಹೈಡ್ರಾಮಾ – 12 ಮಂದಿ ಮನೆಗೆ ವಾಪಸ್

    ರಾಷ್ಟ್ರಗೀತೆ, ನಾಡಗೀತೆ, ರಾಷ್ಟ್ರಕವಿ ಕುವೆಂಪು ಅವರನ್ನು ಅಪಮಾನಿಸುತ್ತಿದ್ದರೂ ನೋಡಿಕೊಂಡು ಸುಮ್ಮನಿರುವುದು ಕಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ಹಾಗೂ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಸುಪ್ರೀಂ ಹಿರಿಯ ವಕೀಲ ಸಂಕೇತ ಏಣಗಿ ಬಿಜೆಪಿಗೆ ಸೆಳೆಯಲು ಲಿಂಗಾಯತ ನಾಯಕರ ಸರ್ಕಸ್

  • ಕುವೆಂಪು ಬಗ್ಗೆ ಅವಹೇಳನ – ರೋಹಿತ್ ಚಕ್ರತೀರ್ಥ ವಿರುದ್ಧ ದೂರು

    ಕುವೆಂಪು ಬಗ್ಗೆ ಅವಹೇಳನ – ರೋಹಿತ್ ಚಕ್ರತೀರ್ಥ ವಿರುದ್ಧ ದೂರು

    ಬೆಂಗಳೂರು: ರಾಷ್ಟ್ರಕವಿ ಕುವೆಂಪು ಅವರ ಬಗ್ಗೆ ಅವಹೇಳನ ಮಾಡಲಾಗಿದೆ ಹಾಗೂ ನಾಡಗೀತೆಗೆ ಅಪಮಾನ ಮಾಡಲಾಗಿದೆ ಎಂದು ಆರೋಪಿಸಿ ಪಠ್ಯಪುಸ್ತಕ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ವಿರುದ್ಧ ಪೊಲೀಸ್ ಆಯುಕ್ತರಿಗೆ ದೂರು ನೀಡಲಾಗಿದೆ.

    ರೋಹಿತ್ ಚಕ್ರತೀರ್ಥ ಹಾಗೂ ಲಕ್ಷ್ಮಣ ಅಕಾಶೆ ಕಾರ್ಕಳ ವಿರುದ್ಧ ವಕೀಲ ಎ.ಪಿ.ರಂಗನಾಥ್, ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿಗೆ ದೂರು ನೀಡಿದ್ದಾರೆ. ಜೊತೆಗೆ ಪುನೀತ್ ಕೆರೆಹಳ್ಳಿ ವಿರುದ್ಧ ರೌಡಿಪಟ್ಟಿ ತೆರೆಯಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಹಿಂದೂ ದೇವಸ್ಥಾನ ಕೆಡವಿ ನಿರ್ಮಾಣವಾದ ಒಂದೇ ಒಂದು ಮಸೀದಿಯನ್ನೂ ಬಿಡೋದಿಲ್ಲ: ಈಶ್ವರಪ್ಪ

    ROHIT CHAKRATHEERTHA

    ರಾಷ್ಟ್ರಕವಿ ಕುವೆಂಪು ಅವರ ಬಗ್ಗೆ ಅವಹೇಳನಕಾರಿಯಾಗಿ ಬರೆದು ಸಾಮಾಜಿಕ ಜಾಲಾತಾಣದಲ್ಲಿ ಹಾಕಲಾಗಿತ್ತು. ಅಲ್ಲದೆ ನಾಡಗೀತೆಗೂ ಅಪಮಾನ ಮಾಡಲಾಗಿದೆ. ಲಕ್ಷ್ಮಣ ಎಂಬವರು ಕುವೆಂಪು ಬಗ್ಗೆ ಕೆಟ್ಟ ಪದಗಳಿಂದ ನಿಂದನೆ ಮಾಡಿದ್ದಾರೆ. ಇವರಿಬ್ಬರ ವಿರುದ್ಧ ಸಮಾಜ ಸ್ವಾಸ್ಥ್ಯ ಕದಡುವ ಪ್ರಕರಣದ ಅಡಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಆಯುಕ್ತರಿಗೆ ದೂರು ನೀಡಲಾಗಿದೆ.

  • ಕುವೆಂಪು, ನಾಡಗೀತೆಗೆ ಅವಮಾನ- ರೋಹಿತ್ ಚಕ್ರತೀರ್ಥರ ಮೇಲೆ ಮುಗಿಬಿದ್ದ ಕಾಂಗ್ರೆಸ್

    ಕುವೆಂಪು, ನಾಡಗೀತೆಗೆ ಅವಮಾನ- ರೋಹಿತ್ ಚಕ್ರತೀರ್ಥರ ಮೇಲೆ ಮುಗಿಬಿದ್ದ ಕಾಂಗ್ರೆಸ್

    ಬೆಂಗಳೂರು: ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ ಮುಗಿಯುವಂತೆ ಕಾಣುತ್ತಿಲ್ಲ. ಈ ವಿಷಯದಲ್ಲಿ ಪರಸ್ಪರ ಬಹಿರಂಗ ವಾಗ್ವಾದಕ್ಕೆ ಇಳಿದಿರುವ ಬಿಜೆಪಿ-ಕಾಂಗ್ರೆಸ್ ಮುಖಂಡರು ದಿನಾ ಒಂದಿಲ್ಲ ಒಂದು ವಿವಾದಗಳನ್ನು ತೆರೆದಿಡುತ್ತಿದ್ದಾರೆ.

    ಪರಿಷ್ಕರಣಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಮೇಲೆ ಮುಗಿಬಿದ್ದಿರುವ ಪ್ರತಿಪಕ್ಷಗಳು ಮತ್ತು ಪ್ರಗತಿಪರರು ಇದೀಗ ರೋಹಿತ್ ಅವರ ಹಳೇ ಪೋಸ್ಟ್ ಒಂದನ್ನು ಹರಿಯಬಿಟ್ಟಿದ್ದಾರೆ. ಕುವೆಂಪು ರಚಿತ ನಾಡಗೀತೆಯನ್ನು ವ್ಯಂಗ್ಯ ಮಾಡಿ ರೋಹಿತ್ ಚಕ್ರತೀರ್ಥ 2017 ರಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದ ಪೋಸ್ಟನ್ನು ಈಗ ನೆನಪಿಸಿದ್ದಾರೆ. ಇದರ ವಿರುದ್ಧ ಪೋಲೀಸ್ ಠಾಣೆಯಲ್ಲಿ ಅಂದು ದೂರು ಕೂಡ ದಾಖಲಾಗಿತ್ತು. ಇದನ್ನೂ ಓದಿ: ಜೈಲಿನಲ್ಲಿದ್ದ ನವಜೋತ್‌ ಸಿಂಗ್‌ ಸಿಧು ಆಸ್ಪತ್ರೆಗೆ ದಾಖಲು

    ಕುವೆಂಪು ಮತ್ತು ನಾಡಗೀತೆಗೆ ಅಗೌರವ ತೋರಿದ ವ್ಯಕ್ತಿ ಪಠ್ಯಪರಿಷ್ಕರಣಾ ಸಮಿತಿಗೆ ಅಧ್ಯಕ್ಷರಾಗಿದ್ದಕ್ಕೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಪ್ರಗತಿಪರರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂತಹ ಮನಸ್ಥಿತಿಯ ವ್ಯಕ್ತಿ ಶಿಫಾರಸು ಮಾಡಿರುವುದನ್ನು ಪಠ್ಯದಲ್ಲಿ ಸೇರಿಸುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರದ ನಡೆಗೂ ತೀವ್ರ ಆಕ್ರೋಶ ವ್ಯಕ್ತಪಡಿಸಿ ವಾಗ್ದಾಳಿ ನಡೆಸಿದ್ದಾರೆ. ಒಟ್ಟಿನಲ್ಲಿ ಶಾಲಾ ಮಕ್ಕಳ ಪಠ್ಯ ಪುಸ್ತಕ ವಿಚಾರ ನಿರಂತರ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗುತ್ತಿರುವುದು ದುರದೃಷ್ಟಕರ.