ಅವಶೇಷಗಳಡಿ ಸಿಲುಕಿದ 11 ಮಂದಿಯನ್ನು ರಕ್ಷಣಾ ಸಿಬ್ಬಂದಿಗಳು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನಾ ಸ್ಥಳದಲ್ಲಿ ರಾಷ್ಟ್ರೀಯ ವಿಪತ್ತು ಪಡೆ, ಅಗ್ನಿಶಾಮಕ ದಳ ಮತ್ತು ಸ್ಥಳೀಯ ಪೊಲೀಸರಿಂದ ಶೋಧ ರಕ್ಷಣಾ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಯಚೂರು: ಜಿಲ್ಲೆಯ ಅರಕೇರಾ (Arakera) ತಾಲೂಕಿನ ಆಲ್ದರ್ತಿ ಗ್ರಾಮದಲ್ಲಿ ಅಂಗನವಾಡಿ (Anganwadi) ಕೇಂದ್ರದ ಛಾವಣಿ ಮೇಲ್ಪದರ ಕುಸಿದು (Roof Collapse) ಅಂಗನವಾಡಿ ಶಿಕ್ಷಕಿಗೆ ಗಂಭೀರ ಗಾಯಗಳಾಗಿವೆ.
ಅದೃಷ್ಟವಶಾತ್ ಮಕ್ಕಳಿಗೆ ಯಾವುದೇ ಪ್ರಾಣಾಪಾಯವಾಗಿಲ್ಲ. ಅಂಗನವಾಡಿ ಶಿಕ್ಷಕಿ ಮೇಲೆಯೇ ಕಟ್ಟಡದ ಸೀಲಿಂಗ್ ಕುಸಿದು ಬಿದ್ದಿದ್ದು, ಅಂಗನವಾಡಿ ಶಿಕ್ಷಕಿ ಮಹಾದೇವಮ್ಮಗೆ ಗಂಭೀರ ಗಾಯಗಳಾಗಿವೆ. ತಲೆ, ಕೈ, ಬೆನ್ನಿಗೆ ತೀವ್ರ ಪೆಟ್ಟುಗಳಾಗಿ ಶಿಕ್ಷಕಿ ಕುಸಿದು ಬಿದ್ದಿದ್ದಾರೆ. ಛಾವಣಿ ಮೇಲ್ಪದರ ಬಿದ್ದ ರಭಸಕ್ಕೆ ಶಿಕ್ಷಕಿ ಕುಳಿತಿದ್ದ ಕುರ್ಚಿ ಮುರಿದುಹೋಗಿದೆ. ಇದನ್ನೂ ಓದಿ: 25 ಲಕ್ಷ ವಂಚನೆ, ಸುಧಾಕರ್ ಹೆಸರು ಬರೆದಿಟ್ಟು ಚಾಲಕ ಸೂಸೈಡ್ – ಡೆತ್ನೋಟ್ನಲ್ಲಿ ಏನಿದೆ?
ಗದಗ: ಶಾಲೆಯ ಮೇಲ್ಛಾವಣಿ (Roof) ಪದರ ಕುಸಿದು ಐವರು ವಿದ್ಯಾರ್ಥಿಗಳು ಹಾಗೂ ಓರ್ವ ಶಿಕ್ಷಕರು ಗಾಯಗೊಂಡ ಘಟನೆ ಗದಗ (Gadag) ಜಿಲ್ಲೆ ಗಜೇಂದ್ರಗಡ ತಾಲೂಕಿನ ಚಿಲಝೆರಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ದುರಂತ ನಡೆದಿದೆ. 6ನೇ ತರಗತಿ ಕೊಠಡಿ ಮೇಲ್ಛಾವಣಿ ಕಾಂಕ್ರೀಟ್ ಪದರ ಏಕಾಏಕಿ ಕುಸಿದು ಬಿದ್ದಿದೆ. ಘಟನೆಯಲ್ಲಿ ಎಮ್.ಡಿ ಒಂಟಿ ಎಂಬ ಶಿಕ್ಷಕರ ತಲೆಗೆ ಗಂಭೀರ ಗಾಯಗಳಾಗಿವೆ. ಮಕ್ಕಳ ತಲೆ, ಕೈ, ಕಾಲು, ಮುಖಕ್ಕೆ ಗಾಯಗಳಾಗಿವೆ. ಗಾಯಾಳು ಮಕ್ಕಳು ಹಾಗೂ ಶಿಕ್ಷಕರನ್ನು ಕೂಡಲೇ ಗಜೇಂದ್ರಗಡ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಸ್ಥಳಕ್ಕೆ ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದನ್ನೂ ಓದಿ: ಕಾಂಗ್ರೆಸ್ಗೆ ಕಮಿಷನ್ ಬಿಸಿ, ಹೈಕಮಾಂಡ್ಗೆ ತಲೆನೋವು – ಸಿಎಂ ಮಧ್ಯಪ್ರವೇಶ?
ಶಿಥಿಲಗೊಂಡ ಹಳೆಯ ಕೊಠಡಿಯಲ್ಲಿ ಮಕ್ಕಳು ಶಿಕ್ಷಣ ಪಡೆಯುವ ಅನಿವಾರ್ಯತೆ ಎದುರಾಗಿತ್ತು. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು, ಜನ ಪ್ರತಿನಿಧಿಗಳ ಗಮನಕ್ಕೆ ತರಲಾಗಿದೆ. ಆದರೂ ಪ್ರಯೋಜನವಾಗಿಲ್ಲ ಎಂದು ಶಿಕ್ಷಣ ಇಲಾಖೆ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು. ಘಟನೆ ಸಂಬಂಧ ಗದಗ ಜಿಲ್ಲೆಯ ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕಾಂಗ್ರೆಸ್ ಲೂಟಿಕೋರರ ಸರ್ಕಾರ, ಮಾನ ಮರ್ಯಾದೆ ಇದ್ದರೆ ಸಿಎಂ, ಡಿಕೆಶಿ ರಾಜೀನಾಮೆ ಕೊಡಲಿ: ಛಲವಾದಿ ನಾರಾಯಣಸ್ವಾಮಿ
ಸ್ಯಾಂಟೊ ಡೊಮಿಂಗೊ: ಡೊಮಿನಿಕನ್ ರಿಪಬ್ಲಿಕ್ (Dominican Republic) ರಾಜಧಾನಿ ಸ್ಯಾಂಟೊ ಡೊಮಿಂಗೊದಲ್ಲಿ (Santo Domingo) ನೈಟ್ಕ್ಲಬ್ನಲ್ಲಿ ಛಾವಣಿ ಕುಸಿದು ಕನಿಷ್ಠ 79 ಜನರು ಸಾವನ್ನಪ್ಪಿದ್ದು, 155 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜೆಟ್ ಸೆಟ್ ನೈಟ್ಕ್ಲಬ್ನಲ್ಲಿ ಸಂಭವಿಸಿದ ದುರಂತದಲ್ಲಿ ಜನಪ್ರಿಯ ಗಾಯಕ, ಪ್ರಾಂತೀಯ ಗವರ್ನರ್ ಮತ್ತು ಇಬ್ಬರು ಮಾಜಿ ಮೇಜರ್ ಲೀಗ್ನ ಬೇಸ್ಬಾಲ್ (Baseball) ಆಟಗಾರರಾದ ಆಕ್ಟೇವಿಯೊ ಡೋಟೆಲ್ ಮತ್ತು ಟೋನಿ ಬ್ಲಾಂಕೊ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಈ ವರ್ಷವೇ ನನ್ನ ಮದುವೆ: ಹುಡುಗನ ಬಗ್ಗೆ ಅನುಶ್ರೀ ಮಾತು
ಡೊಮಿನಿಕನ್ ರಿಪಬ್ಲಿಕನ್ನ ತುರ್ತು ಕಾರ್ಯಾಚರಣೆ ಕೇಂದ್ರದ ಮುಖ್ಯಸ್ಥ ಜುವಾನ್ ಮ್ಯಾನುಯೆಲ್ ಮೆಂಡೆಜ್ ಪ್ರಕಾರ, ಛಾವಣಿ ಕುಸಿತದ ಸಮಯದಲ್ಲಿ ಕ್ಲಬ್ ಒಳಗೆ ಇದ್ದ ಜನರ ನಿಖರ ಸಂಖ್ಯೆ ಸ್ಪಷ್ಟವಾಗಿಲ್ಲ. ಮಧ್ಯರಾತ್ರಿ 12:44 ಕ್ಕೆ ಈ ದುರ್ಘಟನೆ ಸಂಭವಿಸಿದೆ. ಕ್ಲಬ್ನಲ್ಲಿ 500 ರಿಂದ 1,000 ಜನರಿದ್ದರು ಕೆಲವು ಮಾಧ್ಯಮಗಳು ತಿಳಿಸಿವೆ ಎಂದರು. ಇದನ್ನೂ ಓದಿ: ಮುಂಬೈ ದಾಳಿಕೋರ ಅಮೆರಿಕದಿಂದ ಗಡಿಪಾರು – ನಾಳೆ ಬೆಳಗ್ಗೆ ಭಾರತಕ್ಕೆ ರಾಣಾ
ಕ್ಲಬ್ನಲ್ಲಿ 700 ಜನರು ಕುಳಿತುಕೊಳ್ಳುವ ಮತ್ತು ಸುಮಾರು 1,000 ಜನರು ನಿಲ್ಲುವ ಸಾಮರ್ಥ್ಯವನ್ನು ಹೊಂದಿತ್ತು. ಘಟನೆಯ ವೀಡಿಯೋಗಳು ವೈರಲ್ ಆಗಿದೆ. ಮಧ್ಯರಾತ್ರಿಯ ನಂತರ ಛಾವಣಿ ಕುಸಿದಾಗ, ಖ್ಯಾತ ಡೊಮಿನಿಕನ್ ಮೆರೆಂಗ್ಯೂ ಗಾಯಕ ರಬ್ಬಿ ಪೆರೆಜ್ ವೇದಿಕೆಯಲ್ಲಿ ಹಾಡುತ್ತಿರುವುದು ವೀಡಿಯೋದಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ಡೀಸೆಲ್ ಬೆಲೆ ಹೆಚ್ಚಳ – ಪ್ರತಿ ವಿದ್ಯಾರ್ಥಿಗೆ 500-600 ರೂ. ಹೆಚ್ಚುವರಿ ಹೊರೆ
ಜೆಟ್ ಸೆಟ್ ನೈಟ್ಕ್ಲಬ್ನಲ್ಲಿ ರಾಜಕಾರಣಿಗಳು, ಕ್ರೀಡಾಪಟುಗಳು ಮತ್ತು ಇತರ ಪ್ರಮುಖ ವ್ಯಕ್ತಿಗಳು ಇದ್ದರು. ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಗಳು ನಡೆಯುತ್ತಿದ್ದು, ಅವಶೇಷಗಳಡಿ ಸಿಲುಕಿದ್ದವರನ್ನು ರಕ್ಷಣೆ ಮಾಡಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: Gadag | ತಂದೆಯಿಂದಲೇ ಅಪ್ರಾಪ್ತ ಮಗಳ ಮೇಲೆ ನಿರಂತರ ಅತ್ಯಾಚಾರ ಆರೋಪ
ಡೊಮಿನಿಕನ್ ರಿಪಬ್ಲಿಕ್ ಅಧ್ಯಕ್ಷ ಲೂಯಿಸ್ ಅಬಿನಾಡರ್ (Luis Abinader) ಘಟನಾ ಸ್ಥಳಕ್ಕೆ ಭೇಟಿ ನೀಡಿ ಮೂರು ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿದರು.
ಬಿಹಾರ: ಆರ್ಕೆಸ್ಟ್ರಾ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಟಿನ್ ಶೆಡ್ ಕುಸಿದು ಅವಘಡ ಸಂಭವಿಸಿದ್ದು, ನೂರಾರು ಮಂದಿ ಗಾಯಗೊಂಡಿರುವ ಘಟನೆ ಬಿಹಾರದ (Bihar) ಸರನ್ ಜಿಲ್ಲೆಯಲ್ಲಿ ನಡೆದಿದೆ. ಘಟನೆ ಕುರಿತ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ.
ಛಾಪ್ರಾದ (Chhapra) ಸಿಸುಪರ್ನಲ್ಲಿ ಮಹಾವೀರ ಮೇಳದ ವೇಳೆ ಈ ಘಟನೆ ನಡೆದಿದೆ. ಬಿಹಾರ ಸರನ್ (Saran) ಜಿಲ್ಲೆಯಲ್ಲಿ ನಡೆದ ಸಂಗೀತ ಕಾರ್ಯಕ್ರಮದಲ್ಲಿ ಸಾವಿರಾರು ಮಂದಿ ಭಾಗಿಯಾಗಿದ್ದು, ಕಿಕ್ಕಿರಿದು ಕುಣಿಯುತ್ತಿದ್ದ ವೇಳೆ ಶಿಥಿಲಗೊಂಡು ಶೆಡ್ ಬಿದ್ದಿದ್ದು, ನೂರಾರು ಮಂದಿ ಗಾಯಗೊಂಡಿದ್ದಾರೆ. ಇದನ್ನೂ ಓದಿ: ಡಿಲೀಟ್ ಮಾಡಿದ್ರೂ ಸಿಕ್ತು ವಿಡಿಯೋ – ಸ್ಫೋಟಕ FSL ವರದಿಯಲ್ಲಿ ಏನಿದೆ?
ಕಾರ್ಯಕ್ರಮ ವೀಕ್ಷಿಸಲು ದಾರಿಯುದ್ದಕ್ಕೂ ಗ್ರಾಮಸ್ಥರು ನಿಂತಿದ್ದರು. ಕೆಲವರು ಟಿನ್ ಶೆಡ್ನ ಮೇಲೆ ಹತ್ತಿದ್ದು ಶೆಡ್ ಬೀಳುವುದಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಘಟನೆ ಸಂಭವಿಸಿದ ತಕ್ಷಣ ಜನರು ಚಲ್ಲಾಪಿಲ್ಲಿಯಾಗಿ ಓಡಲು ಪ್ರಾರಂಭಿಸಿದ್ದು, ಕಾಲ್ತುಳಿತದ ಪರಿಸ್ಥಿತಿ ನಿರ್ಮಾಣವಾಯಿತು ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಬೆಳಗಾವಿ: ಸಾಲಗಾರ ಪತಿಯನ್ನು ಹತ್ಯೆಗೈದು ಸಹಜ ಸಾವು ಎಂದು ಬಿಂಬಿಸಿದ್ದ ಪತ್ನಿ, ಅತ್ತೆ ಅರೆಸ್ಟ್
ಕಾರವಾರ: ಕಟ್ಟಡದ ಮೇಲ್ಛಾವಣಿ ಪದರ ಕುಸಿದು ಐದು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆ ಅಂಕೋಲ ನಗರದ ನಿರ್ಮಲ ಕಾನ್ವೆಂಟ್ ಶಾಲೆಯಲ್ಲಿ ನಡೆದಿದೆ.
ಬುಧವಾರ ಅಂಕೋಲದ ನಿರ್ಮಲ ಕಾನ್ವೆಂಟ್ ಶಾಲೆಯ ನಾಲ್ಕನೇ ತರಗತಿ ಕೊಠಡಿಯಲ್ಲಿ ಮೇಲ್ಛಾವಣಿಯ ಪದರ ಕುಸಿದಿದೆ. ಈ ಸಂದರ್ಭದಲ್ಲಿ ತರಗತಿಯಲ್ಲಿ ಪಾಠ ಕೇಳುತಿದ್ದ ಮೂವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾಗಿದ್ದು, ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಇದನ್ನೂ ಓದಿ: ಪುರುಷರಿಗೆ ಮಹಿಳೆಯರೇ ಸ್ಪೂರ್ತಿ, ಅವರಿಂದಲೇ ನಾವು: ಫಿಡಿಲಿಟಸ್ ಕಾರ್ಪ್ ಸಂಸ್ಥಾಪಕ
ರಾಯಚೂರು: ಜಿಲ್ಲೆಯ ದೇವದುರ್ಗ ತಾಲೂಕು ಜಾಲಹಳ್ಳಿ ಪಟ್ಟಣದ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೋಣೆಯೊಂದರ ಛಾವಣಿ ಕುಸಿದು ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ.
ವಿದ್ಯಾರ್ಥಿಗಳು ಹಾಲು ಕುಡಿಯಲು ತರಗತಿಯಿಂದ ಹೊರಗೆ ಹೋಗಿದ್ದ ಸಂದರ್ಭದಲ್ಲಿ ಕೋಣೆಯ ಛಾವಣಿ ಕುಸಿದಿದೆ. ಸುಮಾರು 100 ವರ್ಷಗಳಷ್ಟು ಹಳೆಯದಾದ ಶಾಲಾ ಕಟ್ಟಡ ಶಿಥಿಲಾವಸ್ಥೆಗೆ ತಲುಪಿದೆ. ಶಾಲೆಯಲ್ಲಿ 24 ಕೋಣೆಗಳಿದ್ದು, ಕೇವಲ 8 ಕೋಣೆಗಳು ಮಾತ್ರವೇ ಬಳಕೆಗೆ ಯೋಗ್ಯವಾಗಿವೆ. ಉಳಿದ ಕೋಣೆಗಳು ಸಂಪೂರ್ಣ ಶಿಥಿಲಗೊಂಡಿದ್ದು, ವಿದ್ಯಾರ್ಥಿಗಳು ಬಯಲಲ್ಲಿ ಕುಳಿತು ಪಾಠ ಕೇಳುತ್ತಿದ್ದಾರೆ. ಇದನ್ನೂ ಓದಿ: ಪಕ್ಕದಲ್ಲಿ ಬಾಂಬ್ ಬಿದ್ದರೂ ಊಟ, ವಸತಿ ನೀಡುತ್ತಿದೆ ಭಾರತೀಯ ರೆಸ್ಟೋರೆಂಟ್
ಶಾಲೆಯ ಸಮಸ್ಯೆಗಳ ಬಗ್ಗೆ ಅನೇಕ ಬಾರಿ ಸಂಬಂಧಪಟ್ಟ ಶಿಕ್ಷಣ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ಸ್ಥಳೀಯ ಶಾಸಕ ಕೆ ಶಿವನಗೌಡ ನಾಯಕ ಪ್ರತಿ ಸಭೆ ಸಮಾರಂಭಗಳಲ್ಲಿ ದೇವದುರ್ಗ ತಾಲೂಕು ಶಿಕ್ಷಣ ಕಾಶಿ ಮಾಡುವುದಾಗಿ ಹೇಳಿಕೊಳ್ಳುತ್ತಾರೆ. ಆದರೆ ಜಾಲಹಳ್ಳಿ ಪಟ್ಟಣದ ಶಾಲೆಗಳ ಬಗ್ಗೆ ಗಮನ ಹರಿಸದೇ ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂದು ವಿದ್ಯಾರ್ಥಿ ಸಂಘಟನೆ ಮುಖಂಡರು ಹಾಗೂ ಪೋಷಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.