Tag: rooftop collapse

  • ಶಾಲೆಯ ಮೇಲ್ಚಾವಣಿ ಕುಸಿತ – 10 ಮಂದಿ ಕಾರ್ಮಿಕರಿಗೆ ಗಾಯ

    ಶಾಲೆಯ ಮೇಲ್ಚಾವಣಿ ಕುಸಿತ – 10 ಮಂದಿ ಕಾರ್ಮಿಕರಿಗೆ ಗಾಯ

    ಭೋಪಾಲ್: ಭಾರತದ ತೇಜಾಜಿ ನಗರದ ನಿರ್ಮಾಣ ಹಂತದಲ್ಲಿರುವ ಶಾಲೆಯ ಮೇಲ್ಛಾವಣಿ ಕುಸಿದು ಹತ್ತು ಕಾರ್ಮಿಕರು ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದಿದೆ.

    ಈ ಘಟನೆ ಗುರುವಾರ ಸಂಜೆ 6 ಗಂಟೆ ಸುಮಾರಿಗೆ ಸಂಭವಿಸಿದ್ದು, ಕಟ್ಟಡ ನಿರ್ಮಾಣ ಸ್ಥಳದಲ್ಲಿ 20 ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಸದ್ಯ ಘಟನಾ ಸ್ಥಳಕ್ಕೆ ಎಸ್‍ಡಿಆರ್‍ಎಫ್, ಪೊಲೀಸರು ಮತ್ತು ಮಹಾನಗರ ಪಾಲಿಕೆಯ ಅಧಿಕಾರಿಗಳು ಆಗಮಿಸಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ರೆಮೋ ಡಿಸೋಜಾ ಸೋದರ ಮಾವ ಸಾವು – ಆತ್ಮಹತ್ಯೆ ಶಂಕೆ

    ಇದೀಗ ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿರುವ ಕಾರ್ಮಿಕರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇದನ್ನೂ ಓದಿ: ಭಾರತದಲ್ಲಿ ಮೂರನೇ ಅಲೆ ಅಧಿಕೃತ – ವಿಶ್ವದಲ್ಲಿ ಕೊರೊನಾ ನಾಲ್ಕನೇ ಅಲೆ ಆರಂಭ

  • ಕುಸಿದ ಶಾಲಾ ಮೇಲ್ಛಾವಣಿ- ರಜೆ ಇದ್ದ ಕಾರಣ ತಪ್ಪಿದ ಅವಘಡ

    ಕುಸಿದ ಶಾಲಾ ಮೇಲ್ಛಾವಣಿ- ರಜೆ ಇದ್ದ ಕಾರಣ ತಪ್ಪಿದ ಅವಘಡ

    ಕಾರವಾರ: ಮಳೆಯ ಆರ್ಭಟದಿಂದ ತೇವವಾಗಿದ್ದ ಶಾಲೆಯ ಮೇಲ್ಛಾವಣಿ ಇಂದು ಕುಸಿದು ಬಿದ್ದಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರದ ನಂದನಗದ್ದಾದ ಬಾಡದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೇಲ್ಛಾವಣಿ ಕುಸಿದಿದೆ.

    70 ವರ್ಷದ ಹಿಂದೆ ನಿರ್ಮಿಸಿದ್ದ ಹಳೆಯ ಕಟ್ಟಡ ಇದಾಗಿದ್ದು ಮಳೆಯಿಂದಾಗಿ ಕಟ್ಟಡ ಕುಸಿಯುವ ಹಂತ ತಲುಪಿತ್ತು. ಆದರೂ ಈ ಕೊಠಡಿಯಲ್ಲಿ ಮಕ್ಕಳಿಗೆ ಪಾಠ ಮಾಡಲಾಗುತ್ತಿತ್ತು. ಇದೇ ಕೊಠಡಿಯಲ್ಲಿ ಕ್ರೀಡಾ ವಸ್ತುಗಳನ್ನು ಇರಿಸಲಾಗುತ್ತಿತ್ತು. ಮೇಲ್ಛಾವಣಿ ಶಿಥಿಲಗೊಂಡ ಕುರಿತು ಶಿಕ್ಷಣಾಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮ ಜರುಗಿಸಿರಲಿಲ್ಲ.

    ಅದೃಷ್ಟವಶಾತ್ ಇಂದು ಭಾನುವಾರವಾಗಿ ಶಾಲೆಗೆ ರಜೆ ಇರುವ ಹಿನ್ನೆಲೆಯಲ್ಲಿ ವಿಧ್ಯಾರ್ಥಿಗಳು ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಮುಖ್ಯ ಶಿಕ್ಷಕರು ಹಾಗೂ ಸಿಬ್ಬಂದಿ ಭೇಟಿ ನೀಡಿಪರಿಶೀಲನೆ ನಡೆಸಿದ್ದು, ಈ ಸಂದರ್ಭದಲ್ಲಿ ಪೋಷಕರು ಸರ್ಕಾರದ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದರು.