Tag: Rotary Club

  • ಸರ್ಕಾರಿ ಕಾಲೇಜಿಗೆ ಉಚಿತವಾಗಿ 30 ಕಂಪ್ಯೂಟರ್ ವಿತರಿಸಿದ ರೋಟರಿ ಕ್ಲಬ್

    ಸರ್ಕಾರಿ ಕಾಲೇಜಿಗೆ ಉಚಿತವಾಗಿ 30 ಕಂಪ್ಯೂಟರ್ ವಿತರಿಸಿದ ರೋಟರಿ ಕ್ಲಬ್

    ಬೀದರ್: ಕಾಂಗ್ನಿಜೆಂಟ್ ತಂತ್ರಜ್ಞಾನವು ಉಚಿತವಾಗಿ ನೀಡಿರುವ 30 ಕಂಪ್ಯೂಟರ್‌ಗಳನ್ನು ರೋಟರಿ ಕ್ಲಬ್ ಆಫ್ ಬೀದರ್ ನ್ಯೂ ಸೆಂಚುರಿಯು ಚಿಟಗುಪ್ಪ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ವಿತರಿಸಿತು.

    ಕಾಲೇಜಿನ ಗಣಿತಶಾಸ್ತ್ರ ಪ್ರಯೋಗಾಲಯ ಹಾಗೂ ಗಣಕ ವಿಜ್ಞಾನ ಪ್ರಯೋಗಾಲಯದಲ್ಲಿ ಅಳವಡಿಸಿದ ಕಂಪ್ಯೂಟರ್‍ಗಳ ಸೇವೆಗೆ ಅಂತರರಾಷ್ಟ್ರೀಯ ರೋಟರಿ ಜಿಲ್ಲೆ 3160 ಗರ್ವನರ್ ತಿರುಪತಿ ನಾಯ್ಡು ಚಾಲನೆ ನೀಡಿದರು. ಕಾಂಗ್ನಿಜೆಂಟ್ ತಂತ್ರಜ್ಞಾನ ಸಂಸ್ಥೆಯು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ವಿತರಿಸಲು ರಾಜ್ಯ ಸರ್ಕಾರಕ್ಕೆ ಉಚಿತವಾಗಿ ಕಂಪ್ಯೂಟರ್‌ಗಳನ್ನು ಕೊಟ್ಟಿದೆ. ಸರ್ಕಾರ ಕಂಪ್ಯೂಟರ್‌ಗಳ ಸಾಗಣೆ ಹಾಗೂ ಅನುಷ್ಠಾನದ ಹೊಣೆಯನ್ನು ರೋಟರಿ ಸಂಸ್ಥೆಗೆ ವಹಿಸಿದೆ ಎಂದು ಅವರು ಹೇಳಿದರು. ಇದನ್ನೂ ಓದಿ: ಎಸಿಬಿ ಅಧಿಕಾರಿಗಳ ಭರ್ಜರಿ ರಣಬೇಟೆ – 503 ಅಧಿಕಾರಿಗಳು 68 ಕಡೆ ದಾಳಿ..! 

    ಉಚಿತ ಕಂಪ್ಯೂಟರ್ ವಿತರಣೆಯಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ರೋಟರಿ ಸಂಸ್ಥೆಯು ಸಾಮಾಜಿಕ ಚಟುವಟಿಕೆಗಳಲ್ಲಿ ನಿರಂತರ ತೊಡಗಿಸಿಕೊಂಡಿದೆ. ಶಿಕ್ಷಣ ಕ್ಷೇತ್ರದ ಪ್ರಗತಿಗೆ ಹೆಚ್ಚು ಪ್ರಾಮುಖ್ಯತೆ ನೀಡಿದೆ. ರೋಟರಿ ಕ್ಲಬ್ ಆಫ್ ಬೀದರ್ ನ್ಯೂ ಸೆಂಚುರಿ ಜಿಲ್ಲೆಯಲ್ಲಿ ಕ್ರಿಯಾಶೀಲವಾಗಿ ಕೆಲಸ ಮಾಡುತ್ತಿದೆ ಎಂದರು.

    ಅಂತರರಾಷ್ಟ್ರೀಯ ರೋಟರಿ ಜಿಲ್ಲೆ 3160 ಸಹಾಯಕ ಗವರ್ನರ್ ಶಿವಕುಮಾರ್ ಯಲಾಲ್ ಮಾತನಾಡಿ, ಬೀದರ್‌ನಲ್ಲಿ ಇನ್ನಷ್ಟು ರೋಟರಿ ಕ್ಲಬ್‍ಗಳನ್ನು ರಚಿಸುವ ಉದ್ದೇಶ ಇದೆ. ಹೊಸ ತಾಲೂಕು ಚಿಟಗುಪ್ಪದಲ್ಲೂ ಕ್ಲಬ್ ಆರಂಭಿಸುವ ಗುರಿ ಹೊಂದಲಾಗಿದೆ ಎಂದು ಮಾಹಿತಿ ಹಂಚಿಕೊಂಡರು. ಇದನ್ನೂ ಓದಿ: ತಾನು ನೆಟ್ಟ ಗಿಡದಲ್ಲಿ ಹಣ್ಣು ಕೀಳಲು ಮುಂದಾದ ಅತ್ತೆಯತ್ತ ಚಾಕು ಬಿಸಿದ ಸೋಸೆ

  • SSLC ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಉಚಿತ ಮಾಸ್ಕ್ ವಿತರಣೆ

    SSLC ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಉಚಿತ ಮಾಸ್ಕ್ ವಿತರಣೆ

    ಚಿಕ್ಕೋಡಿ: ರೋಟರಿ ಕ್ಲಬ್ ವತಿಯಿಂದ ಎಸ್‍ಎಸ್‍ಎಲ್‍ಸಿ ಪರಿಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಮಾಸ್ಕ್ ವಿತರಣೆಯನ್ನು ಚಿಕ್ಕೋಡಿಯಲ್ಲಿ ಮಾಡಲಾಗಿದೆ.

    ಜುಲೈ 19 ಮತ್ತು 22 ರಂದು ನಡೆಯಲಿರುವ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಅಥಣಿಯ ರೋಟರಿ ಕ್ಲಬ್ ಸಂಸ್ಥೆಯ ವತಿಯಿಂದ ಮಾಸ್ಕ್ ವಿತರಿಸಲಾಗಿದೆ. ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರ ಶಿಕ್ಷಣ ಅಧಿಕಾರಿಗಳ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ವತಿಯಿಂದ ಏಳು ಸಾವಿರ ಮಾಸ್ಕಗಳನ್ನು ಶಿಕ್ಷಣ ಇಲಾಖೆಗೆ ಹಸ್ತಾಂತರಿಸಲಾಯಿತು. ಇದನ್ನೂ ಓದಿ: ಹಾಲ್ ಟಿಕೆಟ್‍ಗಾಗಿ ಶಾಲೆಯ ಮುಂದೆ ಧರಣಿ ಕುಳಿತ SSLC ವಿದ್ಯಾರ್ಥಿ

    ಇದೇ ಸಂದರ್ಭದಲ್ಲಿ ಅಥಣಿ ರೋಟರಿ ಕ್ಲಬ್ ಸಂಸ್ಥೆಯ ಗಜಾನನ ಮಂಗಸೂಳಿ ಮಾತನಾಡಿ, ನಮ್ಮ ರೋಟರಿ ಸಂಸ್ಥೆ ಸಾಮಾಜಿಕವಾಗಿ ಶೈಕ್ಷಣಿಕವಾಗಿ ಬಡವರು ನಿರ್ಗತಿಕರು ಸೇರಿದಂತೆ ಹಲವರಿಗೆ ಸಹಾಯ ಹಸ್ತ ಚಾಚುತ್ತ ಬಂದಿದೆ. ಬಹುಮುಖ್ಯವಾಗಿ ಅಥಣಿಯಲ್ಲಿ ರೋಟರಿ ಸಂಸ್ಥೆ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿದೆ ಎಂದರು. ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಅಧ್ಯಕ್ಷರಾದ ಡಾಕ್ಟರ್ ಅಮ್ರುತ್ ಕುಲಕರ್ಣಿ, ಖ್ಯಾತ ಚಿಕ್ಕ ಮಕ್ಕಳ ತಜ್ಞ ವೈದ್ಯರಾದ ಪಿಪಿ ಮೀರಜಕರ, ರೋಟರಿ ಸಂಸ್ಥೆಯ ಸದಸ್ಯರಾದ ಅರುಣ ಯಲಗುದ್ರಿ, ಪ್ರಭಾಕರ ಸತ್ತಿ, ಸಚಿನ ದೇಸಾಯಿ, ಬಾಳಪ್ಪಾ ಬುಕಿಟಗಾರ, ಸೇರಿದಂತೆ ಹಲವರು ಉಪಸ್ಥಿತರಿದ್ದರು. ಇದನ್ನೂ ಓದಿ: ಡಿನ್ನರ್ ಮೀಟಿಂಗ್ ಪಾಲಿಟಿಕ್ಸ್ ನಡುವೆ ಡಿಕೆಶಿ ರಿವೆಂಜ್ ಪಾಲಿಟಿಕ್ಸ್

  • ಜ್ಞಾನದೀವಿಗೆ – ಯಾದಗಿರಿಯ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ ಹಂಚಿಕೆ

    ಜ್ಞಾನದೀವಿಗೆ – ಯಾದಗಿರಿಯ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ ಹಂಚಿಕೆ

    ಯಾದಗಿರಿ: ಪಬ್ಲಿಕ್ ಟಿವಿ ಮತ್ತು ರೋಟರಿ ಕ್ಲಬ್ ಸಂಯೋಗದಲ್ಲಿ ರಾಜ್ಯದ ಸರ್ಕಾರಿ ಶಾಲೆಯ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಟ್ಯಾಬ್ ವಿತರಣೆಯ, ಜ್ಞಾನದೀವಿಗೆ ಕಾರ್ಯಕ್ರಮ ಇಂದು ಯಾದಗಿರಿ ಜಿಲ್ಲೆಯಲ್ಲಿ ನಡೆಯಿತು.

    ಜಿಲ್ಲೆಯ ಶಹಪುರ ತಾಲೂಕಿನ ಚಾಮನಾಳ ಪ್ರೌಢಶಾಲೆಯ ಹತ್ತನೇ ತರಗತಿಯ 94 ವಿದ್ಯಾರ್ಥಿಗಳಿಗೆ 48 ಟ್ಯಾಬ್ ಗಳನ್ನು ಹಂಚಿಕೆ ಮಾಡಲಾಯಿತು. ಶಹಪುರ ಕಾಂಗ್ರೆಸ್ ಶಾಸಕ ಶರಣಬಸಪ್ಪ ದರ್ಶನಾಪುರ ಪಬ್ಲಿಕ್ ಟಿವಿಯ ಜ್ಞಾನ ದೀವಿಗೆ ಅಭಿಯಾನಕ್ಕೆ ದೇಣಿಗೆ ನೀಡಿ ಕೈ ಜೋಡಿಸುವ ಮೂಲಕ ಗಿಡಕ್ಕೆ ನೀರು ಹಾಕಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ತಮ್ಮ ಟ್ಯಾಬ್ ವಿತರಣೆ ಮಾಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರೌಢಶಾಲಾ ಶಿಕ್ಷಣ ಇಲಾಖೆ ವತಿಯಿಂದ ವಿಷಯ ನಿರೀಕ್ಷ ಚಂದ್ರಕಾಂತ್ ಎಸ್‍ಡಿಎಂಸಿ ಅಧ್ಯಕ್ಷ, ರೇವಣ ಸಿದ್ದಪ್ಪ, ಮುಖ್ಯ ಶಿಕ್ಷಕ ಬಸವರಾಜ್ ಭಾಗಿಯಾಗಿದ್ದರು.

    ಚಾಮನಾಳ ಗ್ರಾಮದ ಪ್ರೌಢಶಾಲೆಯಲ್ಲಿ ಅಕ್ಕಪಕ್ಕದ ಸುಮಾರು 8 ಹಳ್ಳಿಗಳ ವಿದ್ಯಾರ್ಥಿಗಳು ಶಿಕ್ಷಣ ಕಲಿಯುತ್ತಿದ್ದಾರೆ. ಇದರಲ್ಲಿ ಅತೀ ಹೆಚ್ಚು ತಾಂಡಗಳಿಂದ ಬರುವ ಮಕ್ಕಳಿದ್ದು, ಆನ್ ಲೈನ್ ಶಿಕ್ಷಣ ಎಂಬುವುದು ಈ ಶಾಲೆಯ ಮಕ್ಕಳಿಗೆ ಗಗನ ಕುಸುಮವಾಗಿತ್ತು. ಮನೆಯಲ್ಲಿನ ಬಡತನ ಎಸ್‍ಎಸ್‍ಎಲ್‍ಸಿ ಉತ್ತಮ ಫಲಿತಾಂಶದ ಕನಸಿಗೆ ನೀರು ಎರಚುತ್ತಿತ್ತು. ಆದರೆ ಪಬ್ಲಿಕ್ ಟಿವಿ ಈ ಮಕ್ಕಳ ಭವಿಷ್ಯಕ್ಕೆ ಈಗ ಆಸರೆಯಾಗಿದೆ. ಪಬ್ಲಿಕ್ ಟಿವಿಯ ಸಣ್ಣ ಪ್ರಯತ್ನ ನೂರಾರು ವಿದ್ಯಾರ್ಥಿಗಳ ಸುಂದರ ನಾಳೆಗಳನ್ನು ಬರೆಯುತ್ತಿದೆ.

    ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಶಾಸಕ ದರ್ಶನಾಪುರ, ಕೊರೊನಾದಂತ ಕಷ್ಟದ ಸಮಯದಲ್ಲಿ ಪಬ್ಲಿಕ್ ಟಿವಿ ಬಡ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಒಂದು ಸರ್ಕಾರ ಮಾಡುವ ಕಾರ್ಯ ಮಾಡುತ್ತಿದೆ. ಇದರ ಜೊತೆಗೆ ಸರ್ಕಾರ ಸಾಕಷ್ಟು ಸೌಲಭ್ಯ ನಿಮಗೆ ನೀಡುತ್ತಿದೆ. ಇದರ ಪ್ರಯೋಜನ ಪಡೆದು ನಿಮ್ಮ ಸುಂದರ ಜೀವನ ರೂಪಿಸಿಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.