Tag: Rouse Avenue Court

  • ಸಾಮಾಜಿಕ ಮಾಧ್ಯಮದಲ್ಲಿ ನೀಡುವ ಮಾಹಿತಿ ನಿಖರ, ನಿಷ್ಪಕ್ಷಪಾತವಾಗಿರಬೇಕು – ಇ.ಡಿ ಕಿವಿಹಿಂಡಿದ ದೆಹಲಿ ಕೋರ್ಟ್

    ಸಾಮಾಜಿಕ ಮಾಧ್ಯಮದಲ್ಲಿ ನೀಡುವ ಮಾಹಿತಿ ನಿಖರ, ನಿಷ್ಪಕ್ಷಪಾತವಾಗಿರಬೇಕು – ಇ.ಡಿ ಕಿವಿಹಿಂಡಿದ ದೆಹಲಿ ಕೋರ್ಟ್

    ನವದೆಹಲಿ: ಸಾಮಾಜಿಕ ಮಾಧ್ಯಮಗಳಲ್ಲಿ ನೀಡುವ ಮಾಹಿತಿ ನಿಖರವಾಗಿರಬೇಕು. ಈ ಮೂಲಕ ಇ.ಡಿ (ED) ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕು ಎಂದು ದೆಹಲಿಯ ರೋಸ್ ಅವೆನ್ಯೂ ಕೋರ್ಟ್ (Rouse Avenue Court) ಎಚ್ಚರಿಸಿದೆ.

    ಈ ಕುರಿತು ರೋಸ್ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ಜಿತೇಂದ್ರ ಸಿಂಗ್ ಅವರು ಮಾತನಾಡಿ, ಇ.ಡಿ ವಾಸ್ತವ ಅಂಶಗಳನ್ನು ನೀಡುವಾಗ ದಾರಿತಪ್ಪಿಸುವ ರೀತಿಯಲ್ಲಿ ಅಥವಾ ಮಾನಹಾನಿ ಮಾಡುವ ರೀತಿಯಲ್ಲಿರಬಾರದು. ಒಂದು ವೇಳೆ ಹಾಗೆ ಮಾಡಿದರೆ ಅದು ಸಂಸ್ಥೆಯ ಘನತೆಗೆ ಧಕ್ಕೆ ಬರುತ್ತದೆ. ಜೊತೆಗೆ ಸಂಬಂಧಪಟ್ಟ ವ್ಯಕ್ತಿಯ ಘನತೆಯ ಮೇಲೂ ಪರಿಣಾಮ ಬೀರುತ್ತದೆ ಎಂದು ಹೇಳಿದ್ದಾರೆ.ಇದನ್ನೂ ಓದಿ: ಹೆಚ್‌ಎನ್ ವ್ಯಾಲಿ ನೀರನ್ನ ಸಂಪುಟ ಸದಸ್ಯರಿಗೆ ಕುಡಿಸಿ ಶುದ್ಧತೆ ಸಾಬೀತುಪಡಿಸಲಿ: ಸಚಿವ ಸುಧಾಕರ್‌ ವಿರುದ್ಧ ಸಂಸದ ಸುಧಾಕರ್‌ ಸವಾಲ್‌

    ಇ.ಡಿಯಂತಹ ತನಿಖಾ ಸಂಸ್ಥೆಯು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸುವುದು ಹಾಗೂ ನ್ಯಾಯಯುತ, ಸಮಂಜಸ ಪ್ರಕ್ರಿಯೆಗಳನ್ನು ನಡೆಸುವ ಜವಾಬ್ದಾರಿ ಹೊಂದಿರುತ್ತದೆ. ಅದಲ್ಲದೇ ಇ.ಡಿಯು ತನ್ನ ಅಧಿಕೃತ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಹಂಚಿಕೊಳ್ಳುವ ಮಾಹಿತಿಯೂ ನಿಖರವಾಗಿರಬೇಕು. ದಾರಿತಪ್ಪಿಸದ ಹಾಗೂ ರೋಚಕತೆಯಿಂದ ಮುಕ್ತವಾಗಿರಬೇಕು. ರಾಜಕೀಯವಾಗಿ ಪಕ್ಷಪಾತ ಮಾಡುವ ಉದ್ದೇಶದಿಂದ ಯಾವುದೇ ವಿಷಯವನ್ನು ಹಂಚಿಕೊಳ್ಳುವುದರಿಂದ ಸಂಸ್ಥೆಯ ಸಮಗ್ರತೆ ಹಾಳಾಗುತ್ತದೆ ಎಂದಿದ್ದಾರೆ.

    ಆಮ್ ಆದ್ಮಿ ಪಕ್ಷದ ನಾಯಕ ಮತ್ತು ದೆಹಲಿಯ ಮಾಜಿ ಸಚಿವ ಸತ್ಯೇಂದರ್ ಜೈನ್ ಅವರು ಬಿಜೆಪಿ ಸಂಸದೆ ಬಾನ್ಸುರಿ ಸ್ವರಾಜ್ ವಿರುದ್ಧ ಹೂಡಿದ್ದ ಮಾನನಷ್ಟ ಮೊಕದ್ದಮೆಯನ್ನು ನ್ಯಾಯಾಲಯ ತಿರಸ್ಕರಿಸಿ, ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ.

    ಖಾಸಗಿ ವಾಹಿನಿಗೆ ನೀಡಿದ್ದ ಸಂದರ್ಶನದಲ್ಲಿ ಬಾನ್ಸುರಿ ಸ್ವರಾಜ್ ಅವರು ಜೈನ್ ಅವರ ಮನೆಯಿಂದ ಇ.ಡಿಯು 1.8 ಕೆಜಿ ಚಿನ್ನ, 133 ಚಿನ್ನದ ನಾಣ್ಯಗಳು ಮತ್ತು 3 ಕೋಟಿ ರೂ. ನಗದು ವಶಪಡಿಸಿಕೊಂಡಿದೆ ಎಂದು ಆರೋಪಿಸಿದ್ದರು. ಈ ಹಿನ್ನೆಲೆ ಬಾನ್ಸುರಿ ಅವರ ವಿರುದ್ಧ ಜೈನ್ ಮಾನನಷ್ಟ ಮೊಕದ್ದಮೆ ಹೂಡಿದ್ದರು.

    ಇ.ಡಿಯು ತನ್ನ ಎಕ್ಸ್ ಖಾತೆಯಲ್ಲಿ, 2022ರ ಜೂ.6ರಂದು ಪಿಎಂಎಲ್‌ಎ ಅಡಿಯಲ್ಲಿ ಸತ್ಯೇಂದರ್ ಜೈನ್ ಮತ್ತು ಇತರರ ಮನೆಯಲ್ಲಿ ಶೋಧ ನಡೆಸಿದೆ. ಈ ವೇಳೆ ವಿವಿಧ ಶಂಕಾಸ್ಪದ ದಾಖಲೆಗಳು, ಡಿಜಿಟಲ್ ದಾಖಲೆಗಳು ಸೇರಿದಂತೆ 2.85 ಕೋಟಿ ರೂ. ನಗದು ಮತು ಒಟ್ಟು 1.80 ಕೆಜಿ ತೂಕದ 133 ಚಿನ್ನದ ನಾಣ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಬರೆದುಕೊಂಡಿತ್ತು.

    ಈ ಕುರಿತು ಜೈನ್ ಅವರು ಮಾತನಾಡಿ, ನಮ್ಮ ಮನೆಯಿಂದ ಇ.ಡಿಯು ಯಾವುದೇ ನಗದು ಅಥವಾ ಚಿನ್ನವನ್ನು ವಶಪಡಿಸಿಕೊಂಡಿಲ್ಲ. ಇ.ಡಿ ನಡೆಸಿರುವ ಪಂಚನಾಮೆಯಲ್ಲಿಯೂ ಈ ಅಂಶ ಸ್ಪಷ್ಟವಾಗಿ ದಾಖಲಾಗಿದೆ. ಆದಾಗ್ಯೂ ಬಾನ್ಸುರಿ ಸ್ವರಾಜ್ ಅವರು ನಮ್ಮ ಮನೆಯಿಂದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದಿದ್ದಾರೆ ಎಂದು ಆಪಾದಿಸಿದ್ದರು.

    ಪ್ರಕರಣವನ್ನು ಪರಿಗಣಿಸಿದ ನ್ಯಾಯಾಧೀಶರು, ಇ.ಡಿ ಹಂಚಿಕೊಂಡಿರುವ ಟ್ವೀಟ್‌ನ್ನು ಗಮನಿಸಿದರೆ ನಿಜಕ್ಕೂ ಜೈನ್ ಅವರ ಮನೆಯಿಂದ ಹಣ ವಶಪಡಿಸಿಕೊಂಡಿದ್ದಾರೆ ಎನ್ನಿಸುತ್ತದೆ. ಹೀಗಾಗಿ ಬಾನ್ಸುರಿ ಸ್ವರಾಜ್ ವಿರುದ್ಧ ಜೈನ್ ಸಲ್ಲಿಸಿದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಇದೇ ವೇಳೆ ನ್ಯಾಯಾಧೀಶರು, ಇಂತಹ ವಿಷಯದಲ್ಲಿ ಜಾಗೃತಿ ವಹಿಸಿ ಎಂದು ಇ.ಡಿಗೆ ಎಚ್ಚರಿಕೆ ನೀಡಿದ್ದಾರೆ.ಇದನ್ನೂ ಓದಿ: ಟೀಕೆಯಿಂದ ಖಿನ್ನತೆಗೆ ಜಾರಿದ್ದೆ, ಆತ್ಮಹತ್ಯೆಗೆ ಯೋಚಿಸಿದ್ದೆ – ಮೌನ ಮುರಿದ ಚಹಲ್‌

  • ಸಿಎಂ ಕೇಜ್ರಿವಾಲ್‌ಗೆ ಬಿಗ್ ರಿಲೀಫ್ – ಹೊಸ ಅಬಕಾರಿ ನೀತಿ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು

    ಸಿಎಂ ಕೇಜ್ರಿವಾಲ್‌ಗೆ ಬಿಗ್ ರಿಲೀಫ್ – ಹೊಸ ಅಬಕಾರಿ ನೀತಿ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು

    ನವದೆಹಲಿ: ನೂತನ ಅಬಕಾರಿ ನೀತಿ ಪ್ರಕರಣಕ್ಕೆ (Liquor Policy Case) ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ (Arvind Kejriwal) ರೋಸ್ ಅವೆನ್ಯೂ ಕೋರ್ಟ್ ನಿರೀಕ್ಷಣಾ‌ ಜಾಮೀನು ಮಂಜೂರು ಮಾಡಿದೆ.

    ಸಮನ್ಸ್ ಹಿನ್ನೆಲೆ ಶನಿವಾರ ಕೋರ್ಟ್ ಮುಂದೆ ಅರವಿಂದ್ ಕೇಜ್ರಿವಾಲ್ ಹಾಜರಾಗಿ ಜಾಮೀನು ನೀಡುವಂತೆ ಮನವಿ ಮಾಡಿದರು. ವಿಚಾರಣೆ ಬಳಿಕ 15,000 ರೂ. ಮೌಲ್ಯದ ಶ್ಯೂರಿಟಿ ಬಾಂಡ್ ಮತ್ತು 1 ಲಕ್ಷ ರೂ. ವೈಯಕ್ತಿಕ ಬಾಂಡ್‌ನೊಂದಿಗೆ ಜಾಮೀನು ಮಂಜೂರು ಮಾಡಲಾಯಿತು‌. ಇದನ್ನೂ ಓದಿ: ನಾವು ಎಷ್ಟು ಅರ್ಜಿಗಳನ್ನು ಪರಿಗಣಿಸಬೇಕು? – EVM ಬೇಡವೆಂದು ಕಾಂಗ್ರೆಸ್‌ ಸಲ್ಲಿಸಿದ್ದ ಅರ್ಜಿ ವಜಾ

    ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ‌ ನಿರ್ದೇಶನಾಲಯದ ಅಧಿಕಾರಿಗಳು ಸಿಎಂ ಅರವಿಂದ್ ಕೇಜ್ರಿವಾಲ್ 8 ಬಾರಿ ಸಮನ್ಸ್ ಜಾರಿ ಮಾಡಿದ್ದರು. ಆದರೆ ವಿಚಾರಣೆಗೆ ಹಾಜರಾಗದ ಹಿನ್ನೆಲೆ ಇಡಿ ಕೋರ್ಟ್ ಮೊರೆ ಹೋಗಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್ ಅರವಿಂದ್ ಕೇಜ್ರಿವಾಲ್ ಅವರಿಗೆ ಖುದ್ದು ಹಾಜರಾಗಲು ಸಮನ್ಸ್ ಜಾರಿ ಮಾಡಿತ್ತು.

    ಇಂದು ವಿಚಾರಣೆ ವೇಳೆ ಅರವಿಂದ್ ಕೇಜ್ರಿವಾಲ್ ನ್ಯಾಯಾಧೀಶರ ಮುಂದೆ ಹಾಜರಾಗುತ್ತಿದ್ದಂತೆ ಅವರ ಅನುಪಸ್ಥಿತಿಯಲ್ಲಿ ವಿಚಾರಣೆ ನಡೆಸಲು ಅನುಮತಿ ನೀಡಬೇಕು ಎಂದು ಮನವಿ ಮಾಡಿದರು. ಇದಕ್ಕೆ ಕೋರ್ಟ್ ಒಪ್ಪಿತು. ಬಳಿಕ ಕೇಜ್ರಿವಾಲ್ ಕೋರ್ಟ್‌ನಿಂದ ಹೊರ ಬಂದರು. ಇನ್ನು ಕೇಜ್ರಿವಾಲ್ ವಿಚಾರಣೆ ಹಿನ್ನೆಲೆ ಕೋರ್ಟ್ ಮುಂದೆ ಭಾರಿ ಭದ್ರತೆ ಒದಗಿಸಲಾಗಿತ್ತು. ಈ ಹಿಂದೆ ಇಡಿ ಸಲ್ಲಿಸಿದ ದೂರಿನ ಪ್ರಕರಣದಲ್ಲಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ವಿಚಾರಣೆಗೆ ತಡೆ ಕೋರಿ ಕೇಜ್ರಿವಾಲ್ ಮಾಡಿದ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿತ್ತು. ಇದನ್ನೂ ಓದಿ: ಚುನಾವಣಾ ಬಾಂಡ್ ಪ್ರಕರಣ – ಅಸಮರ್ಪಕ ಮಾಹಿತಿ ನೀಡಿದ ಎಸ್‌ಬಿಐಗೆ ಮತ್ತೆ ಸುಪ್ರೀಂ ತರಾಟೆ

  • ಅವಕಾಶ ಸಿಕ್ಕಾಗೆಲ್ಲಾ ಲೈಂಗಿಕ ಕಿರುಕುಳಕ್ಕೆ ಯತ್ನ: ಬ್ರಿಜ್ ಭೂಷಣ್ ವಿರುದ್ಧ ದೆಹಲಿ ಪೊಲೀಸ್

    ಅವಕಾಶ ಸಿಕ್ಕಾಗೆಲ್ಲಾ ಲೈಂಗಿಕ ಕಿರುಕುಳಕ್ಕೆ ಯತ್ನ: ಬ್ರಿಜ್ ಭೂಷಣ್ ವಿರುದ್ಧ ದೆಹಲಿ ಪೊಲೀಸ್

    ನವದೆಹಲಿ: ಭಾರತೀಯ ಕುಸ್ತಿ ಫೆಡರೇಷನ್ (WFI) ಮಾಜಿ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh) ಅವರು ಅವಕಾಶ ಸಿಕ್ಕಾಗಲೆಲ್ಲಾ ಮಹಿಳಾ ಕುಸ್ತಿಪಟುಗಳಿಗೆ (Wrestlers) ಲೈಂಗಿಕ ಕಿರುಕುಳ (Sexual Harassment) ನೀಡಲು ಪ್ರಯತ್ನಿಸಿದ್ದಾರೆ ಎಂದು ದೆಹಲಿ ಪೊಲೀಸರು ಶನಿವಾರ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

    ಹಲವು ಉನ್ನತ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಹೊತ್ತಿರುವ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಗೆ ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಶನಿವಾರ ಕೋರ್ಟ್‌ಗೆ ಹಾಜರಾಗುವುದರಿಂದ ವಿನಾಯಿತಿ ನೀಡಿದೆ. ಈ ವೇಳೆ ಬ್ರಿಜ್ ಭೂಷಣ್ ವಿರುದ್ಧ ಗಂಭೀರ ಆರೋಪ ಮಾಡಿರುವ ದೆಹಲಿ ಪೊಲೀಸರು ಇದಕ್ಕೆ ಸಂಬಂಧಿಸಿದಂತೆ ಸಾಕಷ್ಟು ಪುರಾವೆಗಳಿವೆ ಎಂದು ವಾದಿಸಿದ್ದಾರೆ.

    ಮಹಿಳಾ ಕುಸ್ತಿಪಟುವೊಬ್ಬರ ದೂರನ್ನು ಉಲ್ಲೇಖಿಸಿ, ಹೇಳಿಕೆ ನೀಡಿದ ದೆಹಲಿ ಪೊಲೀಸರು, ತಜಕಿಸ್ತಾನದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಆರೋಪಿ ದೂರುದಾರರನ್ನು ಕೋಣೆಗೆ ಕರೆದು ಬಲವಂತವಾಗಿ ತಬ್ಬಿಕೊಂಡಿದ್ದಾರೆ. ದೂರುದಾರರು ಇದನ್ನು ವಿರೋಧಿಸಿದಾಗ ಬ್ರಿಜ್ ಭೂಷಣ್ ತಾನು ನಿಮ್ಮ ತಂದೆಯಂತೆ ಎಂದು ಹೇಳಿ ತಪ್ಪನ್ನು ಮುಚ್ಚಿಹಾಕಲು ಪ್ರಯತ್ನಿಸಿದ್ದಾರೆ. ಅವರಿಗೆ ತಮ್ಮ ಕೃತ್ಯಗಳ ಬಗ್ಗೆ ಸಂಪೂರ್ಣ ಅರಿವಿತ್ತು ಎಂಬುದು ಇಲ್ಲಿ ಸ್ಪಷ್ಟವಾಗಿ ತೋರುತ್ತದೆ ಎಂದು ಪೊಲೀಸರು ನ್ಯಾಯಾಲಯಕ್ಕೆ ಹೇಳಿದ್ದಾರೆ.

    ಮತ್ತೊಂದು ದೂರನ್ನು ಉಲ್ಲೇಖಿಸಿ, ತಜಕಿಸ್ತಾನದಲ್ಲಿ ನಡೆದ ಏಷ್ಯನ್ ಚಾಂಪಿಯನ್‌ಶಿಪ್ ಸಂದರ್ಭದಲ್ಲಿ, ಬ್ರಿಜ್ ಭೂಷಣ್ ಶರಣ್ ಸಿಂಗ್ ಅನುಮತಿಯಿಲ್ಲದೆ ತನ್ನ ಅಂಗಿಯನ್ನು ಮೇಲಕ್ಕೆತ್ತಿ, ಅನುಚಿತವಾಗಿ ತನ್ನ ಹೊಟ್ಟೆಯನ್ನು ಮುಟ್ಟಿದ್ದಾರೆ ಎಂದು ಮಹಿಳಾ ಕುಸ್ತಿಪಟು ಹೇಳಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಗುಜರಾತ್‌ನ ಸೊಹ್ರಾಬುದ್ದೀನ್ ಎನ್‌ಕೌಂಟರ್ ಪ್ರಕರಣವನ್ನು ಉಲ್ಲೇಖಿಸಿ, ಆ ಪ್ರಕರಣದಲ್ಲಿ ಹಲವಾರು ಎಫ್‌ಐಆರ್‌ಗಳನ್ನು ಪ್ರತ್ಯೇಕವಾಗಿ ದಾಖಲಿಸಲಾಗಿದೆ. ಆದರೆ ನ್ಯಾಯಾಲಯವು ಎಲ್ಲವನ್ನೂ ಒಂದೇ ಸ್ಥಳದಲ್ಲಿ ಆಲಿಸಿದೆ ಎಂದು ಹೇಳಿದರು. ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಆರೋಪಗಳ ತನಿಖೆಗಾಗಿ ಸರ್ಕಾರ ರಚಿಸಿದ್ದ ಮೇಲ್ವಿಚಾರಣಾ ಸಮಿತಿಯು ಅವರನ್ನು ದೋಷಮುಕ್ತಗೊಳಿಸಿಲ್ಲ ಎಂದು ದೆಹಲಿ ಪೊಲೀಸರು ಈ ಹಿಂದೆ ನ್ಯಾಯಾಲಯಕ್ಕೆ ತಿಳಿಸಿದ್ದರು. ಇದನ್ನೂ ಓದಿ: ಬಿಜೆಪಿ ಜೊತೆ ದೋಸ್ತಿ – ಜೆಡಿಎಸ್‌ನಲ್ಲಿ ಅಸಮಾಧಾನ ಸ್ಫೋಟ

    ರಾಷ್ಟ್ರ ರಾಜಧಾನಿಯಲ್ಲಿ ತಮ್ಮ ಪ್ರತಿಭಟನೆಯ ನಂತರ ಸಿಂಗ್ ವಿರುದ್ಧ ಮಹಿಳಾ ಕುಸ್ತಿಪಟುಗಳು ಮಾಡಿದ ಆರೋಪಗಳನ್ನು ತನಿಖೆ ಮಾಡಲು ಕೇಂದ್ರ ಕ್ರೀಡಾ ಸಚಿವಾಲಯವು ಭಾರತೀಯ ಬಾಕ್ಸರ್ ಎಂಸಿ ಮೇರಿ ಕೋಮ್ ನೇತೃತ್ವದ ಉಸ್ತುವಾರಿ ಸಮಿತಿಯನ್ನು ರಚಿಸಿತ್ತು. ಅದರ ವರದಿಯನ್ನು ಸಾರ್ವಜನಿಕಗೊಳಿಸಲಾಗಿಲ್ಲ. ಆದರೆ ಬ್ರಿಜ್ ಭೂಷಣ್ ಸಿಂಗ್ ವಿರುದ್ಧದ ಆರೋಪಗಳನ್ನು ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರಿಗೆ ಪ್ರತಿಯನ್ನು ನೀಡಲಾಗಿದೆ.

    ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಾಬೀತಾದರೆ ಗರಿಷ್ಠ 3 ವರ್ಷಗಳ ಜೈಲು ಶಿಕ್ಷೆಯಾಗುತ್ತದೆ. 6 ಬಾರಿ ಸಂಸದರಾಗಿದ್ದ ಅವರ ವಿರುದ್ಧ ಜೂನ್ 15 ರಂದು ಚಾರ್ಜ್ ಶೀಟ್ ಸಲ್ಲಿಸಿದ್ದರು. ಮುಂದಿನ ವಿಚಾರಣೆ ಅಕ್ಟೋಬರ್ 7 ರಂದು ರೋಸ್ ಅವೆನ್ಯೂ ನ್ಯಾಯಾಲಯದಲ್ಲಿ ನಡೆಯಲಿದೆ. ಇದನ್ನೂ ಓದಿ: ಬೆಂಗಳೂರು ಬಂದ್‌ನಿಂದ ಸಮಸ್ಯೆ ಪರಿಹಾರ ಆಗಲ್ಲ, ಬಂದ್ ಕೈಬಿಡಿ: ಪರಮೇಶ್ವರ್ ಮನವಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಡಿಕೆಶಿ ಶೇವಿಂಗ್ ಕಿಟ್‍ಗೆ ಅವಕಾಶ ನೀಡಿದ ಕೋರ್ಟ್

    ಡಿಕೆಶಿ ಶೇವಿಂಗ್ ಕಿಟ್‍ಗೆ ಅವಕಾಶ ನೀಡಿದ ಕೋರ್ಟ್

    ನವದೆಹಲಿ: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರು ಸಲ್ಲಿಸಿದ್ದ ಕೆಲವು ಮನವಿಗಳಿಗೆ ರೋಸ್ ಅವೆನ್ಯೂ ಕೋರ್ಟ್ ಸಮ್ಮತಿ ಸೂಚಿಸಿದೆ.

    ಶೇವಿಂಗ್ ಕಿಟ್, ಪೆನ್ನು ಪೇಪರ್ ಒದಗಿಸುವಂತೆ ಡಿ.ಕೆ.ಶಿವಕುಮಾರ್ ಅರ್ಜಿ ಸಲ್ಲಿಸಿದ್ದರು. ಈ ಕುರಿತು ಇಂದು ರೋಸ್ ಅವೆನ್ಯೂ ಕೋರ್ಟ್ ನಲ್ಲಿ ನ್ಯಾಯಮೂರ್ತಿ ಅಜಯ್ ಕುಮಾರ್ ಕುಹಾರ್ ಅವರ ನೇತೃತ್ವದ ಪೀಠವು ವಿಚಾರಣೆ ನಡೆಸಿದೆ. ಈ ಹಿನ್ನೆಲೆಯಲ್ಲಿ ಮಾಜಿ ಸಚಿವರನ್ನು ತುಘಲಕ್ ರೋಡ್ ಠಾಣೆಯಿಂದ ಇಡಿ ಕಚೇರಿಗೆ ಕರೆತರಲಾಗಿತ್ತು.

    ವಿಚಾರಣೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿ.ಕೆ.ಶಿವಕುಮಾರ್ ಪರ ವಕೀಲ ಮಯಾಂಕ್ ಜೈನ್ ಅವರು, ಶೇವಿಂಗ್ ಕಿಟ್ ಬೇಡಿಕೆಗೆ ಕೋರ್ಟ್ ಸಮ್ಮತಿ ಸೂಚಿಸಿದೆ. ಕುಟುಂಬ ಮತ್ತು ವಕೀಲರ ಭೇಟಿ ವೇಳೆ ತನಿಖಾಧಿಕಾರಿಗಳು ಹಾಜರ ಇರಬಾರದು ಎಂದು ಮನವಿ ಮಾಡಿದ್ದೇವು. ಅದರಂತೆ ಇನ್ನುಮುಂದೆ ಇಡಿ ಅಧಿಕಾರಿಗಳು ಭೇಟಿ ವೇಳೆ ಬರುವುದಿಲ್ಲ. ಡಿ.ಕೆ.ಶಿವಕುಮಾರ್ ಹಾಗೂ ಅವರನ್ನು ಭೇಟಿ ಮಾಡುವ ವಕೀಲರಿಗೆ ಪೆನ್ನು, ಪೇಪರ್ ಬಳಸುವ ಅವಕಾಶ ನೀಡಬೇಕು ಎಂದು ಕೇಳಿಕೊಳ್ಳಲಾಗಿತ್ತು. ಆದರೆ ಕೋರ್ಟ್, ವಕೀಲರಿಗೆ ಮಾತ್ರ ಅವಕಾಶ ನೀಡಿದ್ದು, ಮಾಜಿ ಸಚಿವರು ಪೆನ್ನು, ಪೇಪರ್ ಬಳಸುವಂತಿಲ್ಲ ಅಂತ ಕೋಟ್ ತಿಳಿಸಿದೆ ಎಂದರು.

    ವಿಚಾರಣೆ ಬಳಿಕ ಕೋರ್ಟ್ ಮೂರು ಪುಟದ ಆದೇಶ ನೀಡಿದೆ. ಈ ಆದೇಶದ ಅನ್ವಯ ಇಡಿ ಕಸ್ಟಡಿಯಲ್ಲಿ ಶೇವಿಂಗ್ ಮಾಡಿಕೊಳ್ಳಲು ಡಿ.ಕೆ.ಶಿವಕುಮಾರ್ ಅವರಿಗೆ ಅವಕಾಶ ಸಿಕ್ಕಿದೆ. ಅಷ್ಟೇ ಅಲ್ಲದೆ ಕುಟುಂಬಸ್ಥರು, ವಕೀಲರು ಭೇಟಿಯಾದಾಗ ಜೊತೆಯಲ್ಲಿ ತನಿಖಾಧಿಕಾರಿ ಕುಳಿತುಕೊಳ್ಳುವಂತಿಲ್ಲ. ಡಿ.ಕೆ.ಶಿವಕುಮಾರ್ ಅವರ ಭೇಟಿ ವೇಳೆ ವಕೀಲರು ಪೆನ್ನು, ಪೇಪರ್ ಬಳಸಬಹುದು. ಆದರೆ ಪೆನ್ನು, ಪೇಪರ್ ಬಳಸಲು ಮಾಜಿ ಸಚಿವರಿಗೆ ಅವಕಾಶವಿಲ್ಲ. ಕುಟುಂಬಸ್ಥರು, ವಕೀಲರ ಭೇಟಿಗೆ 30 ನಿಮಿಷಕ್ಕಿಂತ ಹೆಚ್ಚು ಸಮಯ ಸಾಧ್ಯವಿಲ್ಲ ಎಂದು ಕೋರ್ಟ್ ತಿಳಿಸಿದೆ.

    ತುಘಲಕ್ ಠಾಣೆಯಲ್ಲಿ ಡಿ.ಕೆ.ಶಿವಕುಮಾರ್ ಅವರಿಗೆ ಸೊಳ್ಳೆ ಕಾಟ ಶುರುವಾಗಿದೆ. ಹೀಗಾಗಿ ಸಂಸದ ಡಿ.ಕೆ.ಸುರೇಶ್ ಅವರ ನಿವಾಸದಿಂದ ಸಿಬ್ಬಂದಿಯು ಭಾನುವಾರ ರಾತ್ರಿ ಊಟದ ಜೊತೆಗೆ ಬಟ್ಟೆ, ಸೊಳ್ಳೆ ಪರದೆ ತಂದಿದ್ದರು. ಆದರೆ ಊಟ, ಬಟ್ಟೆಯನ್ನು ಮಾತ್ರ ಪಡೆದ ಇಡಿ ಅಧಿಕಾರಿಗಳು ಸೊಳ್ಳೆ ಪರದೆಯನ್ನು ವಾಪಸ್ ಕಳುಹಿಸಿದ್ದಾರೆ.