Tag: Rovman Powell

  • ಸೋಲುವುದು ಕೂಡ ಒಳ್ಳೆಯದೇ, ಒಂದು ಸರಣಿ ಮ್ಯಾಟರ್‌ ಅಲ್ವೇ ಅಲ್ಲ – ಪಾಂಡ್ಯ ಸಮರ್ಥನೆ

    ಸೋಲುವುದು ಕೂಡ ಒಳ್ಳೆಯದೇ, ಒಂದು ಸರಣಿ ಮ್ಯಾಟರ್‌ ಅಲ್ವೇ ಅಲ್ಲ – ಪಾಂಡ್ಯ ಸಮರ್ಥನೆ

    ಲಾಡರ್ಹಿಲ್‌: 2016ರಲ್ಲಿ ಕೊನೆಯ ಬಾರಿಗೆ ಟೀಂ ಇಂಡಿಯಾ (Team india) ವಿರುದ್ಧ ಟಿ20 ಸರಣಿ ಗೆದ್ದಿದ್ದ ವೆಸ್ಟ್ ಇಂಡೀಸ್ (West Indies) ಬರೋಬ್ಬರಿ 7 ವರ್ಷಗಳ ಬಳಿಕ ಟಿ20 ಸರಣಿಯಲ್ಲಿ ಭಾರತವನ್ನ ಸೋಲಿಸಿದೆ. ಆದ್ರೆ ನಾಯಕ ಹಾರ್ದಿಕ್‌ ಪಾಂಡ್ಯ (Hardik Pandya) ಈ ಸೋಲನ್ನ ಸಮರ್ಥನೆ ಮಾಡಿಕೊಂಡಿದ್ದು, ಅಭಿಮಾನಿಗಳಿಂದ ಟೀಕೆಗೆ ಗುರಿಯಾಗಿದ್ದಾರೆ.

    ವಿಂಡೀಸ್‌ ವಿರುದ್ಧ ನಡೆದ T20 ಸರಣಿಯ ಅಂತಿಮ ಪಂದ್ಯದಲ್ಲಿ ಸೋತ ಬಳಿಕ ಪೋಸ್ಟ್‌ ಪ್ರೆಸೆಂಟೇಷನ್‌ನಲ್ಲಿ ಮಾತನಾಡಿದ ಪಾಂಡ್ಯ, ಪಂದ್ಯ ಆರಂಭವಾದ 10 ಓವರ್‌ಗಳ ನಂತರ ರನ್‌ ಗಳಿಸುವ ವೇಗ ಕಳೆದುಕೊಂಡಿದ್ದೆವು. ನಾನು ಕ್ರೀಸ್‌ಗೆ ಇಳಿದ ಮೇಲೂ ಪರಿಸ್ಥಿತಿಯ ಲಾಭ ಪಡೆಯಲು ಆಗಲಿಲ್ಲ. ಒಟ್ಟಿನಲ್ಲಿ ಈ ಸಿರೀಸ್‌ನಲ್ಲಿ ನಾವು ಪರಿಸ್ಥಿತಿಯ ಲಾಭ ಪಡೆದುಕೊಳ್ಳುವಲ್ಲಿ ವಿಫಲವಾದೆವು. ಹೆಚ್ಚು ವಿವರಿಸುವ ಅಗತ್ಯವಿಲ್ಲ. ಆದ್ರೆ ಮುಂದೆ ಇನ್ನಷ್ಟು ಉತ್ತಮವಾಗಿ ಆಡಲು ಪ್ರಯತ್ನಿಸುತ್ತೇವೆ. ನಮ್ಮ ಹುಡುಗರು ನಮ್ಮ ಗುಂಪಿನಲ್ಲೇ ಇದ್ದಾರೆ. ನಮಗೆ ಲೆಕ್ಕಾಚಾರ ಮಾಡಲು ಸಾಕಷ್ಟು ಸಮಯವಿದೆ. ಕೆಲವೊಮ್ಮೆ ಸೋಲುವುದು ಕೂಡ ಒಳ್ಳೆಯದೇ ಎಂದು ಸಮರ್ಥಿಸಿಕೊಂಡಿದ್ದಾರೆ.

    ಇನ್ನೂ ಸ್ಲೋ ಟ್ರ್ಯಾಕ್‌ನಲ್ಲಿ ಮೊದಲು ಬ್ಯಾಟಿಂಗ್‌ ಆಯ್ಕೆ ನಿರ್ಧಾರ ಸಮರ್ಥಿಸಿಕೊಂಡ ಪಾಂಡ್ಯ, ಈ ಆಟಗಳು ನಾವು ಕಲಿಯಬೇಕಾದ ಆಟಗಳಾಗಿವೆ. ನಾವು ಒಂದು ಗುಂಪಿನಂತೆ ಪ್ರದರ್ಶನ ನೀಡಿದ್ದೇವೆ. ಯಾವಾಗ ಬೇಕಾದರೂ ಕಠಿಣ ಮಾರ್ಗವನ್ನ ತೆಗೆದುಕೊಳ್ಳುತ್ತೇವೆ. ಒಂದು ಸರಣಿಯ ಸೋಲು ಮ್ಯಾಟರ್‌ ಆಗಲ್ಲ. ಆದ್ರೆ ಮುಂದಿನ ಗುರಿ ಅದರ ಕಡೆಗೆ ಇರಬೇಕಾದ ಬದ್ಧತೆ ಮುಖ್ಯವಾಗುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: 7 ವರ್ಷಗಳ ಬಳಿಕ ಭಾರತದ ವಿರುದ್ಧ T20 ಸರಣಿ ಜಯ – ಹೊಸ ದಾಖಲೆ ಬರೆದ ವಿಂಡೀಸ್‌

    ಮುಂದಿನ ದಿನಗಳಲ್ಲಿ ವಿಶ್ವಕಪ್‌ (WorldCup 2023) ಟೂರ್ನಿ ಬರುತ್ತಿದೆ. ಆದ್ದರಿಂದ ಸೋಲುವುದು ಒಳ್ಳೆಯದು. ಅದರಿಂದ ನಾವು ಬಹಳಷ್ಟು ಕಲಿಯುತ್ತೇವೆ. ಸೋಲು ಗೆಲುವಿನ ಪ್ರಕ್ರಿಯೆಯ ಒಂದು ಭಾಗವಾಗಿದೆ. ಹಾಗಾಗಿ ನಾನು ಹೆಚ್ಚು ಯೋಚನೆ ಮಾಡುವುದಿಲ್ಲ. ನನ್ನ ಮನಸ್ಸು ಏನು ಹೇಳುತ್ತದೆಯೋ ಅದನ್ನುಅನುಸರಿಸುತ್ತೇನೆ ಎಂದು ಪಾಂಡ್ಯ ಸಮರ್ಥಿಸಿಕೊಂಡಿದ್ದಾರೆ. ಇದನ್ನೂ ಓದಿ: ನಾಟೌಟ್‌ ಅನ್ನು ಔಟ್‌ ಅಂತಾ ಬಿಟ್ಟುಕೊಟ್ರಾ? – DRS ತೆಗೆದುಕೊಳ್ಳದೇ ವಿಂಡೀಸ್‌ ವಿರುದ್ಧ ಮಕ್ಕರ್‌ ಆದ ಗಿಲ್‌

    ಈ ವರ್ಷಾರಂಭದಿಂದ ಪಾಂಡ್ಯ ಟಿ20 ನಾಯಕತ್ವವನ್ನು ಯಶಸ್ವಿಯಾಗಿ ಪೂರೈಸುತ್ತಾ ಬಂದಿದ್ದರು. ವರ್ಷಾರಂಭದಲ್ಲಿ ನಡೆದ ಶ್ರೀಲಂಕಾ ಹಾಗೂ ನ್ಯೂಜಿಲೆಂಡ್‌ ವಿರುದ್ಧ ಟಿ20 ಸರಣಿ ಗೆದ್ದು ಯಶಸ್ವಿ ನಾಯಕ ಎನಿಸಿಕೊಂಡಿದ್ದರು. ಅಲ್ಲದೇ ವಿಂಡೀಸ್‌ ವಿರುದ್ಧ ರೋಹಿತ್‌ ಶರ್ಮಾ (Rohit Sharma) ಹಾಗೂ ಕೊಹ್ಲಿ (Virat Kohli) ಅನುಪಸ್ಥಿತಿಯಲ್ಲಿ ಏಕದಿನ ತಂಡವನ್ನ ಮುನ್ನಡೆಸಿ ಸೈ ಎನಿಸಿಕೊಂಡಿದ್ದರು. ಇದೀಗ ಟಿ20 ಸರಣಿ ಸೋತು ಅಭಿಮಾನಿಗಳಿಂದ ಟೀಕೆಗೆ ಗುರಿಯಾಗಿದ್ದಾರೆ. ಅಲ್ಲದೇ ಸೋಲನ್ನೂ ಸಮರ್ಥಿಸಿಕೊಂಡಿರುವ ಪಾಂಡ್ಯ ಅವರ ನಡೆಯನ್ನ ಅಭಿಮಾನಿಗಳು ಹಿಗ್ಗಾ ಮುಗ್ಗ ಟ್ರೋಲ್‌ ಮಾಡಿದ್ದಾರೆ.

    5 ಪಂದ್ಯಗಳ ಟಿ20 ಸರಣಿಯ ಅಂತಿಮ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 165 ರನ್ ಗಳಿಸಲಷ್ಟೇ ಸಾಧ್ಯವಾಯಿತು. 166 ರನ್‌ಗಳ ಗುರಿ ಪಡೆದ ವಿಂಡೀಸ್ 18 ಓವರ್‌ಗಳಲ್ಲೇ ಕೇವಲ 2 ವಿಕೆಟ್ ನಷ್ಟಕ್ಕೆ 171 ರನ್ ಚಚ್ಚಿ ಜಯ ಸಾಧಿಸಿತು. ಈ ಮೂಲಕ 5 ಪಂದ್ಯಗಳ ಟಿ20 ಸರಣಿಯಲ್ಲಿ 3-2 ಅಂತರದಲ್ಲಿ ಗೆಲುವು ಸಾಧಿಸುವ ಮೂಲಕ ಸರಣಿ ಕೈವಶ ಮಾಡಿಕೊಂಡಿತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಾಟೌಟ್‌ ಅನ್ನು ಔಟ್‌ ಅಂತಾ ಬಿಟ್ಟುಕೊಟ್ರಾ? – DRS ತೆಗೆದುಕೊಳ್ಳದೇ ವಿಂಡೀಸ್‌ ವಿರುದ್ಧ ಮಕ್ಕರ್‌ ಆದ ಗಿಲ್‌

    ನಾಟೌಟ್‌ ಅನ್ನು ಔಟ್‌ ಅಂತಾ ಬಿಟ್ಟುಕೊಟ್ರಾ? – DRS ತೆಗೆದುಕೊಳ್ಳದೇ ವಿಂಡೀಸ್‌ ವಿರುದ್ಧ ಮಕ್ಕರ್‌ ಆದ ಗಿಲ್‌

    ಲಾಡರ್ಹಿಲ್‌: ವಿಂಡೀಸ್‌ ವಿರುದ್ಧ ನಡೆದ ನಿರ್ಣಾಯಕ ಪಂದ್ಯದಲ್ಲಿ ಶುಭಮನ್‌ ಗಿಲ್‌ (Shubman Gill) ಅವರ ಔಟ್‌ ಈಗ ವಿವಾದಕ್ಕೆ ಕಾರಣವಾಗಿದೆ. 4ನೇ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್‌ ಮಾಡಿದ್ದ ಗಿಲ್‌ ನಿರ್ಣಾಯಕ ಪಂದ್ಯದಲ್ಲಿ ಕೈಕೊಟ್ಟರು ಎಂಬ ಟೀಕೆಗಳ ಮಧ್ಯೆ ಗಿಲ್‌ ಔಟಾದ ಕುರಿತು ಚರ್ಚೆಯೊಂದು ಹುಟ್ಟಿಕೊಂಡಿದೆ.

    ಮೊದಲ ಓವರ್‌ನ 5ನೇ ಎಸೆತದಲ್ಲೇ ಯಶಸ್ವಿ ಜೈಸ್ವಾಲ್‌ ಸುಲಭ ಕ್ಯಾಚ್‌ಗೆ ತುತ್ತಾದರು. ಆ ನಂತರ 2ನೇ ಓವರ್‌ನಲ್ಲಿ ಅಕೇಲ್ ಹೊಸೈನ್ (Akeal Hosein) ಬೌಲಿಂಗ್‌ ಮಾಡಿದ 5ನೇ ಎಸೆತದಲ್ಲಿ ಶುಭಮನ್‌ ಗಿಲ್‌ ಲೆಗ್‌ ಸೈಡ್‌ ಮಿಡ್‌ ಆಫ್‌ಗೆ ಬೌಂಡರಿ ಬಾರಿಸಲು ಪ್ರಯತ್ನಿಸಿದರು. ಆದ್ರೆ ಬಾಲ್‌ ಪ್ಯಾಡ್‌ಗೆ ಬಡಿಯಿತು. ಆನ್‌ಫೀಲ್ಡ್‌ ಅಂಪೈರ್‌ ನೇರವಾಗಿ ಔಟ್‌ ತೀರ್ಪು ನೀಡಿದರು. ಈ ವೇಳೆ ನಾನ್‌ ಸ್ಟ್ರೈಕ್‌ನಲ್ಲಿದ್ದ ಸೂರ್ಯಕುಮಾರ್‌ ಯಾದವ್‌ DRS ತೆಗೆದುಕೊಳ್ಳುವಂತೆ ಹೇಳಿದರೂ ಕೇಳದೇ ಗಿಲ್‌ ನೇರವಾಗಿ ಫೀಲ್ಡ್‌ನಿಂದ ಹೊರನಡೆದರು. ನಂತರ ಡಿಆರ್‌ಎಸ್‌ ರಿವಿವ್ಯೂನಲ್ಲಿ ನೋಡಿದಾಗ ಅದು ನಾಟೌಟ್‌ ಆಗಿತ್ತು. ಗಿಲ್‌ ಗ್ರೌಂಡ್‌ನಿಂದ ಹೊರೆನಡೆದಿದ್ದರಿಂದ ಔಟ್‌ ಎಂದೇ ನಿರ್ಧರಿಸಲಾಯಿತು. ಇದನ್ನೂ ಓದಿ: 7 ವರ್ಷಗಳ ಬಳಿಕ ಭಾರತದ ವಿರುದ್ಧ T20 ಸರಣಿ ಜಯ – ಹೊಸ ದಾಖಲೆ ಬರೆದ ವಿಂಡೀಸ್‌

    ಟಿ20 ಸರಣಿಯ ಅಂತಿಮ ಪಂದ್ಯದಲ್ಲಿ ಆರಂಭದಲ್ಲೇ ಪ್ರಮುಖ ವಿಕೆಟ್‌ ಕಳೆದುಕೊಂಡ ಟೀಂ ಇಂಡಿಯಾ (Team India) ಸಾಧಾರಣ ಮೊತ್ತ ಕಲೆಹಾಕಲು ಹೆಣಗಾಡಿತ್ತು. ಆದ್ರೆ ಕಳಪೆ ಬೌಲಿಂಗ್‌ನಿಂದ ಹೀನಾಯ ಸೋಲು ಅನುಭವಿಸಬೇಕಾಯಿತು. ಗಿಲ್‌ ಡಿಆರ್‌ಎಸ್‌ ತೆಗೆದುಕೊಂಡಿದ್ದರೆ ಟೀಂ ಇಂಡಿಯಾಕ್ಕೆ ಮತ್ತಷ್ಟು ರನ್‌ ಸೇರ್ಪಡೆಯಾಗುತ್ತಿತ್ತು. ಇದರಿಂದ ಸರಣಿಯ ಜಯ ಸಾಧಿಸುವ ಹೆಚ್ಚಿನ ಸಾಧ್ಯತೆಗಳು ಇರುತ್ತಿತ್ತು ಎಂದು ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

    ಕಳೆದ ವರ್ಷ ಏಷ್ಯಾಕಪ್‌ (T20 AsiaCup) ಟೂರ್ನಿಯಲ್ಲೂ ಕೆ.ಎಲ್‌ ರಾಹುಲ್‌ (KL Rahul) ಸಹ ನಾಕೌಟ್‌ ಪಂದ್ಯದಲ್ಲಿ ನಾಟೌಟ್‌ ಆಗಿದ್ದರೂ ಡಿಆರ್‌ಎಸ್‌ ತೆಗೆದುಕೊಳ್ಳದೇ ಔಟ್‌ ಅಂತಾ ಬಿಟ್ಟುಕೊಟ್ಟಿದ್ದರು. ಇದನ್ನೂ ಓದಿ: ಸೌದಿ ಕ್ಲಬ್‌ ಸೇರಿದ ಬಳಿಕ ಚೊಚ್ಚಲ ಟ್ರೋಫಿ ಗೆದ್ದ ರೊನಾಲ್ಡೊ – ಅಲ್-ನಾಸ್ರ್‌ಗೆ ಐತಿಹಾಸಿಕ ಜಯ

    5 ಪಂದ್ಯಗಳ ಟಿ20 ಸರಣಿಯ ಅಂತಿಮ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 165 ರನ್ ಗಳಿಸಲಷ್ಟೇ ಸಾಧ್ಯವಾಯಿತು. 166 ರನ್‌ಗಳ ಗುರಿ ಪಡೆದ ವಿಂಡೀಸ್ 18 ಓವರ್‌ಗಳಲ್ಲೇ ಕೇವಲ 2 ವಿಕೆಟ್ ನಷ್ಟಕ್ಕೆ 171 ರನ್ ಚಚ್ಚಿ ಜಯ ಸಾಧಿಸಿತು. ಈ ಮೂಲಕ 5 ಪಂದ್ಯಗಳ ಟಿ20 ಸರಣಿಯಲ್ಲಿ 3-2 ಅಂತರದಲ್ಲಿ ಗೆಲುವು ಸಾಧಿಸುವ ಮೂಲಕ ಸರಣಿ ಕೈವಶ ಮಾಡಿಕೊಂಡಿತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 7 ವರ್ಷಗಳ ಬಳಿಕ ಭಾರತದ ವಿರುದ್ಧ T20 ಸರಣಿ ಜಯ – ಹೊಸ ದಾಖಲೆ ಬರೆದ ವಿಂಡೀಸ್‌

    7 ವರ್ಷಗಳ ಬಳಿಕ ಭಾರತದ ವಿರುದ್ಧ T20 ಸರಣಿ ಜಯ – ಹೊಸ ದಾಖಲೆ ಬರೆದ ವಿಂಡೀಸ್‌

    ಲಾಡರ್ಹಿಲ್‌: 2016ರಲ್ಲಿ ಕೊನೆಯ ಬಾರಿಗೆ ಟೀಂ ಇಂಡಿಯಾ ವಿರುದ್ಧ ಟಿ20 ಸರಣಿ ಗೆದ್ದಿದ್ದ ವೆಸ್ಟ್‌ ಇಂಡೀಸ್‌ (West Indies) ಬರೋಬ್ಬರಿ 7 ವರ್ಷಗಳ ಬಳಿಕ ಟಿ20 ಸರಣಿಯಲ್ಲಿ ಭಾರತವನ್ನ ಸೋಲಿಸಿದೆ. ಈ ಮೂಲಕ 2016ರ ನಂತರ ಮೊದಲ ಬಾರಿಗೆ ವಿಂಡೀಸ್ ಒಂದಕ್ಕಿಂತ ಹೆಚ್ಚು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತವನ್ನು (Team India) ಸೋಲಿಸಿದ ದಾಖಲೆಯನ್ನೂ ಬರೆದಿದೆ.

    ರೋವ್ಮನ್‌ ಪೋವೆಲ್ (Rovman Powell) ನಾಯಕತ್ವದ ವಿಂಡೀಸ್ ತಂಡವು ಟಿ20 ಸರಣಿಯ 5ನೇ ಮತ್ತು ನಿರ್ಣಾಯಕ ಪಂದ್ಯದಲ್ಲಿ ಟೀಂ ಇಂಡಿಯಾವನ್ನ (Team India) 8 ವಿಕೆಟ್‌ಗಳಿಂದ ಏಕಪಕ್ಷೀಯವಾಗಿ ಸೋಲಿಸಿದೆ. ಇದರೊಂದಿಗೆ 5 ಪಂದ್ಯಗಳ ಸರಣಿಯನ್ನ 3-2ರಿಂದ ಗೆದ್ದುಕೊಂಡಿದೆ. ರೊಮಾರಿಯೊ ಶೆಫರ್ಡ್ ಅವರ ಅದ್ಭುತ ಬೌಲಿಂಗ್ ಪ್ರದರ್ಶನ (4 ವಿಕೆಟ್) ಹಾಗೂ ಬ್ರಾಂಡನ್‌ ಕಿಂಗ್‌ (Brandon King) ಮತ್ತು ನಿಕೋಲಸ್‌ ಪೂರನ್‌ (Nicholas Pooran) ಆಕ್ರಮಣಕಾರಿ ಬ್ಯಾಟಿಂಗ್‌ ನೆರವಿನಿಂದ ಸರಣಿ ಗೆದ್ದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಇದನ್ನೂ ಓದಿ: ಭಾರತಕ್ಕೆ 9 ವಿಕೆಟ್‌ಗಳ ಯಶಸ್ವಿ ಜಯ ತಂದ ಗಿಲ್‌, ಜೈಸ್ವಾಲ್‌ – ಇಂದು ರೋಚಕ ಹಣಾಹಣಿ

    ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಹಾರ್ದಿಕ್‌ ಪಾಂಡ್ಯ (Hardik Pandya) ಪಡೆ 20 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 165 ರನ್‌ ಗಳಿಸಲಷ್ಟೇ ಸಾಧ್ಯವಾಯಿತು. 166 ರನ್‌ಗಳ ಗುರಿ ಪಡೆದ ವಿಂಡೀಸ್‌ 18 ಓವರ್‌ಗಳಲ್ಲೇ ಕೇವಲ 2 ವಿಕೆಟ್‌ ನಷ್ಟಕ್ಕೆ 171 ರನ್‌ ಚಚ್ಚಿ ಜಯ ಸಾಧಿಸಿತು. ಈ ಮೂಲಕ 5 ಪಂದ್ಯಗಳ ಟಿ20 ಸರಣಿಯಲ್ಲಿ 3-2 ಅಂತರದಲ್ಲಿ ಗೆಲುವು ಸಾಧಿಸುವ ಮೂಲಕ ಸರಣಿ ಕೈವಶ ಮಾಡಿಕೊಂಡಿತು. ಇದನ್ನೂ ಓದಿ: ಬಾಬರ್‌ ಮೇಲಿನ ಗೌರವ ಇಂದಿಗೂ ಬದಲಾಗಿಲ್ಲ – ಪಾಕ್‌ ಆಟಗಾರನನ್ನ ಬಾಯ್ತುಂಬ ಹೊಗಳಿದ ಕೊಹ್ಲಿ

    4ನೇ ಪಂದ್ಯದಲ್ಲೇ 165 ರನ್‌ಗಳ ಜೊತೆಯಾಟ ನೀಡುವ ಮೂಲಕ ಅಬ್ಬರಿಸಿದ್ದ ಶುಭಮನ್‌ ಗಿಲ್‌ ಹಾಗೂ ಯಶಸ್ವಿ ಜೈಸ್ವಾಲ್‌ ನಿರ್ಣಾಯಕ ಪಂದ್ಯದಲ್ಲೇ ಕೈಕೊಟ್ಟು ಪೆವಿಲಿಯನ್‌ ಸೇರಿದರು. ಇನ್ನೂ ಸಂಜು ಸಾಮ್ಸನ್‌ ಕೂಡ ಅವಕಾಶ ಬಳಕೆ ಮಾಡಿಕೊಳ್ಳುವಲ್ಲಿ ವಿಫಲರಾದರು. ನಾಯಕ ಹಾರ್ದಿಕ್‌ ಪಾಂಡ್ಯ ಕೂಡ ಕೈಚೆಲ್ಲಿದರು. ಸೂರ್ಯಕುಮಾರ್‌ ಯಾದವ್‌ ಅವರ ಜವಾಬ್ದಾರಿ ಅರ್ಧಶತಕದ ನೆರವಿನಿಂದ 165 ರನ್‌ ಗಳಿಸಿದರೂ ಕಳಪೆ ಬೌಲಿಂಗ್‌ ಪ್ರದರ್ಶನದಿಂದ ವಿಂಡೀಸ್‌ ಆಕ್ರಮಣಕ್ಕೆ ತುತ್ತಾಯಿತು. ಟೀಂ ಇಂಡಿಯಾ ಪರ ಸೂರ್ಯಕುಮಾರ್‌ ಯಾದವ್‌ 61 ರನ್‌ (45 ಎಸೆತ, 3 ಸಿಕ್ಸರ್‌, 4 ಬೌಂಡರಿ), ತಿಲಕ್‌ ವರ್ಮಾ 27 ರನ್‌ ಗಳಿಸಿದರು.

    ವಿಂಡೀಸ್‌ ಪರ ನಿಕೋಲಸ್‌ ಪೂರನ್‌ ಹಾಗೂ ಬ್ರಾಂಡನ್‌ ಕಿಂಗ್ಸ್‌ ಜೊತೆಯಾಟಕ್ಕೆ ಟೀಂ ಇಂಡಿಯಾ ಬೌಲರ್‌ಗಳು ಕಂಗಾಲಾದರು. ಆರಂಭಿಕ ಬ್ರಾಂಡನ್‌ ಕಿಂಗ್ಸ್‌ ಅಜೇಯ 85 ರನ್‌ (55 ಎಸೆತ, 5 ಬೌಂಡರಿ, 6 ಸಿಕ್ಸರ್‌) ಸಿಡಿಸಿದರೆ, ನಿಕೋಲಸ್‌ ಪೂರನ್‌ 35 ಎಸೆತಗಳಲ್ಲಿ 47 ರನ್‌ (4 ಸಿಕ್ಸರ್‌, 1 ಬೌಂಡರಿ) ಚಚ್ಚಿ ಔಟಾದರು. ಕೊನೆಯಲ್ಲಿ ನಾಯಕ ರೋವ್ಮನ್‌ ಪೋವೆಲ್‌ 13 ಎಸೆತಗಳಲ್ಲಿ 22 ರನ್‌ ಗಳಿಸಿ ಜಯದ ದಡ ಸೇರಿಸಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಭಾರತಕ್ಕೆ 9 ವಿಕೆಟ್‌ಗಳ ಯಶಸ್ವಿ ಜಯ ತಂದ ಗಿಲ್‌, ಜೈಸ್ವಾಲ್‌ – ಇಂದು ರೋಚಕ ಹಣಾಹಣಿ

    ಭಾರತಕ್ಕೆ 9 ವಿಕೆಟ್‌ಗಳ ಯಶಸ್ವಿ ಜಯ ತಂದ ಗಿಲ್‌, ಜೈಸ್ವಾಲ್‌ – ಇಂದು ರೋಚಕ ಹಣಾಹಣಿ

    ಲಾಡರ್ಹಿಲ್‌: ಯುವತಾರೆ ಯಶಸ್ವಿ ಜೈಸ್ವಾಲ್‌ (Yashasvi Jaiswal) ಹಾಗೂ ಶುಭಮನ್‌ ಗಿಲ್‌ (Shubman Gill) ಸ್ಫೋಟಕ ಬ್ಯಾಟಿಂಗ್‌ ನೆರವಿನಿಂದ ಟೀಂ ಇಂಡಿಯಾ, ವೆಸ್ಟ್‌ ಇಂಡೀಸ್‌ (West Indies) ವಿರುದ್ಧ ಟಿ20 ಸರಣಿಯ 4ನೇ ಪಂದ್ಯದಲ್ಲಿ 9 ವಿಕೆಟ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ 2-2 ಅಂತರದಲ್ಲಿ ಸಮಬಲ ಸಾಧಿಸಿದೆ. ಇಂದು (ಆ.13) ಲಾಡರ್ಹಿಲ್‌ನ ಸೆಂಟ್ರಲ್ ಬ್ರೋವರ್ಡ್ ರೀಜನಲ್ ಪಾರ್ಕ್ ಸ್ಟೇಡಿಯಂ ಟರ್ಫ್ ಕ್ರೀಡಾಂಗಣದಲ್ಲಿ ನಿರ್ಣಾಯಕ ಪಂದ್ಯ ನಡೆಯಲಿದ್ದು, ರಾತ್ರಿ 8ಕ್ಕೆ ಪಂದ್ಯ ಆರಂಭವಾಗಲಿದೆ.

    ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ವೆಸ್ಟ್‌ ಇಂಡೀಸ್‌ ತಂಡ 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 178 ರನ್‌ ಗಳಿಸಿತ್ತು. ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ ಭಾರತ (Team India) 17 ಓವರ್‌ಗಳಲ್ಲೇ ಕೇವಲ 1 ವಿಕೆಟ್‌ ನಷ್ಟಕ್ಕೆ 179 ರನ್‌ ಗಳಿಸಿ ಭರ್ಜರಿ ಜಯ ಸಾಧಿಸಿತು. ಆರಂಭಿಕರಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್‌ ಹಾಗೂ ಶುಭಮನ್‌ ಗಿಲ್‌ ಆರಂಭದಿಂದಲೇ ವಿಂಡೀಸ್‌ ಬೌಲರ್‌ಗಳನ್ನ ಬೆಂಡೆತ್ತಲು ಶುರು ಮಾಡಿದರು. ಮೊದಲ ವಿಕೆಟ್‌ಗೆ ಈ ಜೋಡಿ 94 ಎಸೆತಗಳಲ್ಲಿ 165 ರನ್‌ ಕಲೆಹಾಕಿತ್ತು.

    ಶುಭಮನ್‌ ಗಿಲ್‌ 47 ಎಸೆತಗಳಲ್ಲಿ 77 ರನ್‌ (3 ಬೌಂಡರಿ, 5 ಸಿಕ್ಸರ್)‌ ಗಳಿಸಿ ಔಟಾದರು. ಆದ್ರೆ ಕೊನೆಯವರೆಗೂ ಅಬ್ಬರಿಸಿದ ಯಶಸ್ವಿ 51 ಎಸೆತಗಳಲ್ಲಿ 84 ರನ್‌ (3 ಸಿಕ್ಸರ್‌, 11 ಬೌಂಡರಿ) ಚಚ್ಚಿ ಅಜೇಯರಾಗುಳಿದರು. ಕೊನೆಯಲ್ಲಿ ತಿಲಕ್‌ ವರ್ಮಾ 7 ರನ್‌ ಗಳಿಸಿದರು. ಇದನ್ನೂ ಓದಿ: Asian Championship Trophy Hockey final: ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ ಗೆದ್ದ ಭಾರತ; ಮಲೇಷ್ಯಾ ವಿರುದ್ಧ 4-3 ಅಂತರದ ರೋಚಕ ಜಯ

    ಮೊದಲು ಬ್ಯಾಟಿಂಗ್‌ ಮಾಡಿದ ವಿಂಡೀಸ್‌ ಪರ ಶಿಮ್ರಾನ್‌ ಹೆಟ್ಮೇಯರ್‌ ಭರ್ಜರಿ ಅರ್ಧಶತಕ ಸಿಡಿಸುವ ಮೂಲಕ ತಂಡಕ್ಕೆ ಆಸರೆಯಾದರು. 156.41 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್‌ ಬೀಸಿದ ಹೆಟ್ಮೇಯರ್‌ 39 ಎಸೆತಗಳಲ್ಲಿ 61 ರನ್‌ (4 ಸಿಕ್ಸರ್‌, 3 ಬೌಂಡರಿ) ಗಳಿಸಿದರು. ಇದರೊಂದಿಗೆ ಶಾಯ್‌ ಹೋಪ್‌ 29 ಎಸೆತಗಳಲ್ಲಿ 45 ರನ್‌ (2 ಸಿಕ್ಸರ್‌, 3 ಬೌಂಡರಿಗಳ ಕೊಡುಗೆ ನೀಡಿದರು. ಅಂತಿಮವಾಗಿ ವಿಂಡೀಸ್‌ 178 ರನ್‌ ಗಳಿಸುವಲ್ಲಿ ಯಶಸ್ವಿಯಾಗಿತ್ತು. ಆದ್ರೆ ಕಳಪೆ ಬೌಲಿಂಗ್‌ನಿಂದಾಗಿ ಹೀನಾಯ ಸೋಲು ಅನುಭವಿಸಿತು. ಇದನ್ನೂ ಓದಿ: ಟೀಂ ಇಂಡಿಯಾ ವಿನಾಶದತ್ತ ಸಾಗುತ್ತಿದೆ – ನಾಲಿಗೆ ಹರಿಬಿಟ್ಟ ಪಾಕ್‌ ಮಾಜಿ ಕ್ರಿಕೆಟಿಗ, ಅಭಿಮಾನಿಗಳು ಕೆಂಡ

    ಟೀಂ ಇಂಡಿಯಾ ಪರ ಅರ್ಷ್‌ದೀಪ್‌ ಸಿಂಗ್‌ 4 ಓವರ್‌ಗಳಲ್ಲಿ 38 ರನ್‌ ನೀಡಿ 3 ವಿಕೆಟ್‌, ಕುಲ್‌ದೀಪ್‌ ಯಾದವ್‌ 2 ವಿಕೆಟ್‌ ಕಿತ್ತರೆ, ಅಕ್ಷರ್‌ ಪಟೇಲ್‌, ಯಜುವೇಂದ್ರ ಚಾಹಲ್‌, ಮುಕೇಶ್‌ ಕುಮಾರ್‌ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು. ವಿಂಡೀಸ್‌ ಪರ ರೊಮಾರಿಯೋ ಶೆಫರ್ಡ್ ಒಂದೇ ಒಂದು ವಿಕೆಟ್‌ಗೆ ತೃಪ್ತಿಪಟ್ಟುಕೊಂಡರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ತಿಲಕ್ ವರ್ಮಾ ಫಿಫ್ಟಿ ತಪ್ಪಿಸಿ ಹಿಗ್ಗಾಮುಗ್ಗ ಟ್ರೋಲ್‌ಗೆ ಗುರಿಯಾದ ಪಾಂಡ್ಯ – ಅಭಿಮಾನಿಗಳು ಕೆಂಡ

    ತಿಲಕ್ ವರ್ಮಾ ಫಿಫ್ಟಿ ತಪ್ಪಿಸಿ ಹಿಗ್ಗಾಮುಗ್ಗ ಟ್ರೋಲ್‌ಗೆ ಗುರಿಯಾದ ಪಾಂಡ್ಯ – ಅಭಿಮಾನಿಗಳು ಕೆಂಡ

    -ನಾಯಕನ ಸ್ಥಾನಕ್ಕೆ ಪಾಂಡ್ಯ ಅರ್ಹನಲ್ಲ, ಮಹಿ ಸ್ಥಾನ ತುಂಬೋಕಾಗಲ್ಲ ಅಂತಾ ಟ್ರೋಲ್‌

    ಜಾರ್ಜ್ಟೌನ್ (ಗಯಾನ): ವೆಸ್ಟ್ ಇಂಡೀಸ್ (West Indies) ವಿರುದ್ಧ ನಡೆದ T20 ಸರಣಿಯ 3ನೇ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಆದ್ರೆ ಕೊನೆಯಲ್ಲಿ ನಾಯಕ ಹಾರ್ದಿಕ್ ಪಾಂಡ್ಯ (Hardik Pandya) ಮಾಡಿದ ಎಡವಟ್ಟಿನಿಂದ ಭಾರೀ ಟೀಕೆಗೆ ಗುರಿಯಾಗಿದ್ದಾರೆ.

    ಬ್ಯಾಟಿಂಗ್ ವೈಫಲ್ಯ ಕಾರಣ ಸತತ ಸೋಲುಂಡಿದ್ದ ಟೀಂ ಇಂಡಿಯಾ (Team India), ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯ 3ನೇ ಪಂದ್ಯದಲ್ಲಿ 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿ, ಸರಣಿ ಜಯದ ಕನಸು ಜೀವಂತವಾಗಿರಿಸಿಕೊಂಡಿದೆ. ಸೂರ್ಯಕುಮಾರ್ ಯಾದವ್ (Suryakumar Yadav) ಭರ್ಜರಿ ಬ್ಯಾಟಿಂಗ್‌ನೊಂದಿಗೆ 83 ರನ್ ಗಳಿಸಿದರು. ಇನ್ನೂ ಉತ್ತಮ ಬ್ಯಾಟಿಂಗ್ ಫಾರ್ಮ್‌ನಲ್ಲಿರುವ ಯುವ ಬ್ಯಾಟರ್ ತಿಲಕ್ ವರ್ಮಾ 37 ಎಸೆತಗಳಲ್ಲಿ 49 ರನ್ ಗಳಿಸಿ ಅಜೇಯರಾಗಿ ಉಳಿದರು. ಆದ್ರೆ ಕೊನೆಯಲ್ಲಿ ನಾಯಕ ಹಾರ್ದಿಕ್ ಪಾಂಡ್ಯ ಅರ್ಧಶತಕ ತಪ್ಪಿಸಿದ್ದು ಟ್ರೋಲ್‌ಗೆ ಗುರಿಯಾಗಿದ್ದಾರೆ.

    ಕೊನೆಯ 14 ಎಸೆತಗಳಲ್ಲಿ ಟೀಂ ಇಂಡಿಯಾ ಗೆಲುವಿಗೆ 2 ರನ್‌ಗಳ ಅಗತ್ಯವಿತ್ತು. ಈ ವೇಳೆ 49 ರನ್‌ಗಳಿಸಿದ್ದ ತಿಲಕ್ ವರ್ಮಾ ನಾನ್ ಸ್ಟ್ರೈಕ್‌ನಲ್ಲಿದ್ದರು. 14 ಎಸೆತಗಳಲ್ಲಿ 14 ರನ್‌ಗಳಿಸಿ ಸ್ಟ್ರೈಕ್‌ನಲ್ಲಿದ್ದ ಪಾಂಡ್ಯ ತಿಲಕ್ ವರ್ಮಾಗೆ ಫಿಫ್ಟಿ ಮಾಡುವ ಅವಕಾಶ ಮಾಡಿಕೊಡ್ತಾರೆ ಎಂದು ಭಾವಿಸಲಾಗಿತ್ತು. ಆದ್ರೆ ಪಾಂಡ್ಯ, ರೋವ್ಮನ್ ಪೋವೆಲ್ ಬೌಲಿಂಗ್‌ಗೆ ಸಿಕ್ಸರ್ ಬಾರಿಸುವುದರೊಂದಿಗೆ ವಿನ್ನಿಂಗ್ ಶಾಟ್ ಬಾರಿಸಿದ್ರು. ಇದರಿಂದ ಅಭಿಮಾನಿಗಳು ಪಾಂಡ್ಯ ವಿರುದ್ಧ ಕೆಂಡ ಕಾರಿದ್ದಾರೆ.

    ಎಂ.ಎಸ್ ಧೋನಿ, ರೋಹಿತ್ ಶರ್ಮಾ, ಸಂಜು ಸ್ಯಾಮ್ಸನ್ ಹಾಗೂ ಸೂರ್ಯಕುಮಾರ್ ಯಾದವ್‌ ಅವರನ್ನ ಉದಾಹರಣೆ ನೀಡಿ ಪಾಂಡ್ಯ ಅವ್ರನ್ನ ಹಿಗ್ಗಾಮುಗ್ಗ ಟ್ರೋಲ್ ಮಾಡಿದ್ದಾರೆ. ಇದನ್ನೂ ಓದಿ: ಸೂರ್ಯನ ಆರ್ಭಟಕ್ಕೆ ವಿಂಡೀಸ್‌ ಕಂಗಾಲು, ಭಾರತಕ್ಕೆ 7 ವಿಕೆಟ್‌ಗಳ ಭರ್ಜರಿ ಜಯ – ಸರಣಿ ಜಯದ ಕನಸು ಜೀವಂತ

    ರೋಹಿತ್ ನೋಡಿ ಕಲಿಯಿರಿ ಪಾಂಡ್ಯ:
    ವರ್ಷಾರಂಭದಲ್ಲಿ ಶ್ರೀಲಂಕಾ ವಿರುದ್ಧ ನಡೆದ ಏಕದಿನ ಕ್ರಿಕೆಟ್ ಸರಣಿಯಲ್ಲಿ ಲಂಕಾ ತಂಡದ ನಾಯಕ ದಸುನ್ ಶನಕ ಶತಕ ಪೂರೈಸಲಿ ಎಂದು ಮೊಹಮ್ಮದ್ ಶಮಿ ಅವರ ಮಂಕಡಿಂಗ್ ಮನವಿಯನ್ನು ಕ್ಯಾಪ್ಟನ್ ರೋಹಿತ್ ಶರ್ಮಾ ಹಿಂಪಡೆದಿದ್ದರು. ರೋಹಿತ್ ಮೆರೆದ ಔದಾರ್ಯದಿಂದ ದಸುನ್ ಶನಕಗೆ ಶತಕ ಲಭ್ಯವಾಯಿತು. ಭಾರತ ಪಂದ್ಯ ಗೆದ್ದಿತ್ತು. ಈಗ ಹಾರ್ದಿಕ್ ಪಾಂಡ್ಯ ತಮ್ಮದೇ ತಂಡದ ಆಟಗಾರನ ಜೊತೆಗೆ ನಡೆದುಕೊಂಡ ರೀತಿ ಗಮನಿಸಿದರೆ ಭಯವಾಗುತ್ತದೆ. ಪಾಂಡ್ಯ ಎಷ್ಟು ಕೆಟ್ಟ ವ್ಯಕ್ತಿ ಎಂಬುದನ್ನು ಅಂದಾಜಿಸಿ ಎಂದು ಅಭಿಮಾನಿಯೊಬ್ಬ ತನ್ನ ಟ್ವೀಟ್ ಮೂಲಕ ಕಿಡಿ ಕಾರಿದ್ದಾರೆ.

    ಕೊಹ್ಲಿಗಾಗಿ ಡಿಫೆನ್ಸ್ ಮಾಡಿದ್ದ ಮಹಿ:
    ಹಿಂದೆ ವಿರಾಟ್ ಕೊಹ್ಲಿ ಅವರನ್ನ ಎಂ.ಎಸ್ ಧೋನಿ ನಡೆಸಿಕೊಂಡ ರೀತಿಯ ವಿಡಿಯೋ ಹಂಚಿಕೊಂಡಿರುವ ಅಭಿಮಾನಿಯೊಬ್ಬ, ಅಂದು ವಿರಾಟ್ ಶತಕ ಸಲುವಾಗಿ ಎಂ.ಎಸ್ ಧೋನಿ ಓವರ್‌ನ ಅಂತಿಮ ಎಸೆತದಲ್ಲಿ ಮ್ಯಾಚ್ ಮುಗಿಸುವ ಅವಕಾಶ ಇದ್ದರೂ ಡಿಫೆನ್ಸ್ ಮಾಡಿದ್ದರು. ಇದಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗಿತ್ತು. ಇದನ್ನೂ ಓದಿ: ನಮ್ಮ ಬ್ಯಾಟಿಂಗ್‌ ಕಳಪೆಯಾಗಿತ್ತು – ಅಗ್ರಕ್ರಮಾಂಕದ ಬ್ಯಾಟರ್‌ಗಳ ವಿರುದ್ಧ ಪಾಂಡ್ಯ ಬೇಸರ

    ಅಲ್ಲದೇ 2023ರ ಐಪಿಎಲ್‌ನಲ್ಲಿ ಯಶಸ್ವಿ ಜೈಸ್ವಾಲ್ ಶತಕ ಪೂರೈಸಲು ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಅವಕಾಶ ಮಾಡಿಕೊಟ್ಟಿದ್ದರು. ಮುಂಬೈ ಇಂಡಿಯನ್ಸ್ ತಂಡದಲ್ಲಿದ್ದ ಕ್ಯಾಮರೂನ್ ಗ್ರೀನ್ ಚೊಚ್ಚಲ ಐಪಿಎಲ್ ಶತಕ ದಾಖಲಿಸಲು ಸೂರ್ಯಕುಮಾರ್ ಯಾದವ್ ಒಂದು ರನ್ ತೆಗೆದುಕೊಂಡು ಅವಕಾಶ ಮಾಡಿಕೊಂಡಿದ್ದರು. ಆದ್ರೆ ಈಗ ಪಾಂಡ್ಯ ನಡೆದುಕೊಂಡ ರೀತಿ ಅಭಿಮಾನಿಗಳಿಂದ ತೀವ್ರ ಟೀಕೆಗೆ ಗುರಿಯಾಗಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸೂರ್ಯನ ಆರ್ಭಟಕ್ಕೆ ವಿಂಡೀಸ್‌ ಕಂಗಾಲು, ಭಾರತಕ್ಕೆ 7 ವಿಕೆಟ್‌ಗಳ ಭರ್ಜರಿ ಜಯ – ಸರಣಿ ಜಯದ ಕನಸು ಜೀವಂತ

    ಸೂರ್ಯನ ಆರ್ಭಟಕ್ಕೆ ವಿಂಡೀಸ್‌ ಕಂಗಾಲು, ಭಾರತಕ್ಕೆ 7 ವಿಕೆಟ್‌ಗಳ ಭರ್ಜರಿ ಜಯ – ಸರಣಿ ಜಯದ ಕನಸು ಜೀವಂತ

    ಜಾರ್ಜ್‌ಟೌನ್ (ಗಯಾನಾ): ಸೂರ್ಯಕುಮಾರ್‌ ಯಾದವ್‌ (Suryakumar Yadav), ತಿಲಕ್‌ ವರ್ಮಾ ಭರ್ಜರಿ ಬ್ಯಾಟಿಂಗ್‌ ಹಾಗೂ ಕುಲ್‌ದೀಪ್‌ ಯಾದವ್‌ ಸ್ಪಿನ್‌ ಬೌಲಿಂಗ್‌ ದಾಳಿ ನೆರವಿನಿಂದ ಟೀಂ ಇಂಡಿಯಾ, ವೆಸ್ಟ್‌ ಇಂಡೀಸ್‌ (West Indies) ವಿರುದ್ಧ 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ 5 ಪಂದ್ಯಗಳ ಟಿ20 ಸರಣಿಯನ್ನು 1-2 ಅಂತರದಲ್ಲಿ ಕಾಯ್ದುಕೊಂಡಿದ್ದು ಸರಣಿ ಜಯದ ಕನಸು ಜೀವಂತವಾಗಿಸಿಕೊಂಡಿದೆ.

    ವಿಂಡೀಸ್‌ ನೀಡಿದ 159 ರನ್‌ಗಳ ಗುರಿ ಬೆನ್ನತ್ತಿದ್ದ ಭಾರತ 17.5 ಓವರ್‌ಗಳಲ್ಲೇ 3 ವಿಕೆಟ್‌ ನಷ್ಟಕ್ಕೆ 164 ರನ್‌ ಚಚ್ಚಿ ಗೆಲುವು ಸಾಧಿಸಿತು. ಸ್ಫೋಟಕ ಆರಂಭ ಪಡೆದ ಟೀಂ ಇಂಡಿಯಾ ಪವರ್‌ ಪ್ಲೇನಲ್ಲೇ ಭರ್ಜರಿ ಬ್ಯಾಟಿಂಗ್‌ನೊಂದಿಗೆ 6 ಓವರ್‌ಗಳಲ್ಲಿ 60 ರನ್‌ ಬಾರಿಸಿತ್ತು. ಆರಂಭಿಕರಾದ ಯಶಸ್ವಿ ಜೈಸ್ವಾಲ್‌ ಹಾಗೂ ಶುಭಮನ್‌ ಗಿಲ್‌ ಕಳಪೆ ಪ್ರದರ್ಶನ ನೀಡಿ ಕೈಚೆಲ್ಲಿದರೂ, 3ನೇ ವಿಕೆಟ್‌ಗೆ ಜೊತೆಯಾದ ಸೂರ್ಯಕುಮಾರ್‌ ಯಾದವ್‌ ಹಾಗೂ ತಿಲಕ್‌ ವರ್ಮಾ (Tilak Varma) ಜೋಡಿ ವಿಂಡೀಸ್‌ ಬೌಲರ್‌ಗಳನ್ನ ಹಿಗ್ಗಾಮುಗ್ಗ ಚೆಂಡಾಡಿತು. 51 ಎಸೆತಗಳಲ್ಲಿ ಈ ಜೋಡಿ 87 ರನ್‌ ಬಾರಿಸಿತ್ತು.

    188.63 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್‌ ಬೀಸಿದ ಯಾದವ್‌ ಸೂರ್ಯಕುಮಾರ್‌ ಯಾದವ್‌ 44 ಎಸೆತಗಳಲ್ಲಿ 83 ರನ್‌ (4 ಸಿಕ್ಸರ್‌, 10 ಬೌಂಡರಿ) ಚಚ್ಚಿ ಔಟಾದರು. ನಂತರ ತಿಲಕ್‌ ವರ್ಮಾ 49 ರನ್‌ (37 ಎಸೆತ, 1 ಸಿಕ್ಸರ್‌, 4 ಬೌಂಡರಿ) ಬಾರಿಸಿದರೆ, ಕೊನೆಯಲ್ಲಿ ಹಾರ್ದಿಕ್‌ ಪಾಂಡ್ಯ 15 ಎಸೆತಗಳಲ್ಲಿ 20 ರನ್‌ ಬಾರಿಸಿ ಅಜೇಯರಾಗುಳಿದರು.

    ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ವೆಸ್ಟ್‌ ಇಂಡೀಸ್‌ ಉತ್ತಮ ಆರಂಭ ಪಡೆದುಕೊಂಡಿತು. ಆರಂಭಿಕ ಜೋಡಿ ಮೊದಲ ವಿಕೆಟ್‌ಗೆ 7.4 ಓವರ್‌ಗಳಲ್ಲಿ 55 ರನ್‌ ಕಲೆ ಹಾಕಿತು. ಬ್ರೆಂಡನ್‌ ಕಿಂಗ್‌ 42 ರನ್‌ ಗಳಿಸಿದ್ರೆ, ಕೇಲ್‌ ಮೇಯರ್ಸ್‌ 25 ರನ್‌ ಗಳಿಸಿ ಔಟಾದರು. ಈ ಬೆನ್ನಲ್ಲೇ ಜಾನ್ಸನ್ ಜಾರ್ಲ್ಸ್ 12 ರನ್‌ಗಳಿಸಿ ಪೆವಿಲಿಯನ್‌ ಸೇರಿಕೊಂಡರು. ಇದನ್ನೂ ಓದಿ: ನಮ್ಮ ಬ್ಯಾಟಿಂಗ್‌ ಕಳಪೆಯಾಗಿತ್ತು – ಅಗ್ರಕ್ರಮಾಂಕದ ಬ್ಯಾಟರ್‌ಗಳ ವಿರುದ್ಧ ಪಾಂಡ್ಯ ಬೇಸರ

    ಇನ್ನೂ ಸ್ಫೋಟಕ ಬ್ಯಾಟ್ಸ್‌ಮ್ಯಾನ್‌ ನಿಕೋಲಸ್‌ ಪೂರನ್‌ ಭರ್ಜರಿ ಬ್ಯಾಟಿಂಗ್‌ ನಡೆಸುತ್ತಿದ್ದರು. 12 ಎಸೆತಗಳಲ್ಲಿ 20 ರನ್‌ ಗಳಿಸಿದ್ದಾಗ ಕುಲ್‌ದೀಪ್‌ ಬೌಲಿಂಗ್‌ಗೆ ಸಿಕ್ಸರ್‌ ಬಾರಿಸಲು ಮುಂದಾಗಿ ಸ್ಟಂಪ್‌ಔಟ್‌ ಆದರು. ಭರವಸೆಯ ಆಟಗಾರ ಶಿಮ್ರಾನ್‌ ಹೆಟ್ಮೇಯರ್‌ 9 ರನ್‌ ಗಳಿಸಿ ಕೈಚೆಲ್ಲಿದರೆ ನಾಯಕ ರೋವ್ಮನ್‌ ಪೋವೆಲ್‌ 19 ಎಸೆತಗಳಲ್ಲಿ 40 ರನ್‌ (3 ಸಿಕ್ಸರ್‌, 1 ಬೌಂಡರಿ) ಸಿಡಿಸಿ ಅಜೇಯರಾಗುಳಿದರು.

    ಇನ್ನೂ 4 ಓವರ್‌ಗಳಲ್ಲಿ 28 ರನ್‌ ನೀಡಿದ ಕುಲ್‌ದೀಪ್‌ ಯಾದವ್‌ ಪ್ರಮುಖ 3 ವಿಕೆಟ್‌ ಪಡೆದರೆ ಮುಕೇಶ್‌ ಕುಮಾರ್‌, ಅಕ್ಷರ್‌ ಪಟೇಲ್‌ ತಲಾ ಒಂದೊಂದು ವಿಕೆಟ್‌ ಪಡೆದರು. ಇದನ್ನೂ ಓದಿ: ಪಾಕಿಸ್ತಾನ ತಂಡದಲ್ಲಿ ಎಲ್ಲರೂ ಉತ್ತಮ ಬೌಲರ್‌ಗಳೇ – ರೋಹಿತ್‌ ಶರ್ಮಾ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಮ್ಮ ಬ್ಯಾಟಿಂಗ್‌ ಕಳಪೆಯಾಗಿತ್ತು – ಅಗ್ರಕ್ರಮಾಂಕದ ಬ್ಯಾಟರ್‌ಗಳ ವಿರುದ್ಧ ಪಾಂಡ್ಯ ಬೇಸರ

    ನಮ್ಮ ಬ್ಯಾಟಿಂಗ್‌ ಕಳಪೆಯಾಗಿತ್ತು – ಅಗ್ರಕ್ರಮಾಂಕದ ಬ್ಯಾಟರ್‌ಗಳ ವಿರುದ್ಧ ಪಾಂಡ್ಯ ಬೇಸರ

    ಜಾರ್ಜ್‌ಟೌನ್ (ಗಯಾನಾ): ವೆಸ್ಟ್‌ ಇಂಡೀಸ್‌ (West Indies) ವಿರುದ್ಧದ ಎರಡೂ ಪಂದ್ಯಗಳಲ್ಲಿ ಸತತ ಸೋಲಿನ ಬಳಿಕ ಟೀಂ ಇಂಡಿಯಾ (Team India) ಟಿ20 ತಂಡದ ನಾಯಕ ಹಾರ್ದಿಕ್‌ ಪಾಂಡ್ಯ (Hardik Pandya) ತೀವ್ರ ಬೇಸರ ಹೊರಹಾಕಿದ್ದಾರೆ.

    ಪ್ರಾಮಾಣಿಕವಾಗಿ ಹೇಳಬೇಕೆಂದರೆ ನಮ್ಮ ತಂಡದ ಬ್ಯಾಟಿಂಗ್‌ ಕಳಪೆಯಾಗಿತ್ತು. ಒಂದೆಡೆ ವಿಕೆಟ್‌ ಬೀಳುತ್ತಿದ್ದರೆ ರನ್‌ ಟ್ರ್ಯಾಕ್‌ ನಿಧಾನಗತಿಯಲ್ಲಿ ಸಾಗಿತ್ತು. ನಾವು ಇನ್ನೂ ಉತ್ತಮವಾಗಿ ಬ್ಯಾಟಿಂಗ್‌ ಮಾಡಬಹುದಿತ್ತು. ಕನಿಷ್ಠ 160-170 ರನ್‌ ಗಳಿಸಬಹುದಿತ್ತು. ಆದ್ರೆ ನಮ್ಮ ತಂಡ ಉತ್ತಮ ಬ್ಯಾಟಿಂಗ್‌ ಪ್ರದರ್ಶನ ನೀಡುವಲ್ಲಿ ವಿಫಲವಾಯಿತು. ಮುಂದಿನ ಪಂದ್ಯಗಳಲ್ಲಿ ಬ್ಯಾಟ್ಸ್‌ಮ್ಯಾನ್‌ಗಳು ಹೆಚ್ಚಿನ ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.

    ಅಗ್ರಕ್ರಮಾಂಕದ ಬ್ಯಾಟರ್‌ಗಳಾದ ಶುಭಮನ್ ಗಿಲ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್ ಮತ್ತು ಸಂಜು ಸ್ಯಾಮ್ಸನ್ ರನ್ ಗಳಿಸುವಲ್ಲಿ ವಿಫಲರಾದರು. ಇದರಿಂದ ವಿಂಡೀಸ್‌ಗೆ ಸತತ 2ನೇ ಗೆಲುವು ಲಭಿಸಿದೆ. ಬೌಲರ್‌ಗಳು ಸಮತೋಲನ ಕಾಯ್ದುಕೊಂಡಿದ್ದಾರೆ. ಆದ್ರೆ ಬ್ಯಾಟರ್‌ಗಳು ಉತ್ತಮ ಪ್ರದರ್ಶನ ನೀಡುವುದು ಅವಶ್ಯಕವಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಕೊನೆಯಲ್ಲಿ ಸಿಕ್ಸರ್‌, ಬೌಂಡರಿ ಸಿಡಿಸಿ ಗೆದ್ದ ವಿಂಡೀಸ್‌ – ಭಾರತಕ್ಕೆ ವಿರೋಚಿತ ಸೋಲು

    ತಿಲಕ್‌ ವರ್ಮಾ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಚೊಚ್ಚಲ ಅರ್ಧ ಶತಕ ದಾಖಲಿಸಿದ್ದಾರೆ. 4ನೇ ಕ್ರಮಾಂಕದಲ್ಲಿ ಕ್ರೀಸ್‌ಗೆ ಬರುತ್ತಿರುವ ತಿಲಕ್‌ ವರ್ಮಾ ಆತ್ಮವಿಶ್ವಾಸದಿಂದ ಆಟವಾಡುತ್ತಿದ್ದಾರೆ ಎಂದು ಶ್ಲಾಘಿಸಿದ್ದಾರೆ. ಇದನ್ನೂ ಓದಿ: WorldCup ಟೂರ್ನಿಗೆ ಆಸೀಸ್‌ ಬಲಿಷ್ಠ ತಂಡ ಪ್ರಕಟ – ಸ್ಟಾರ್‌ ಆಲ್‌ರೌಂಡರ್‌ಗೆ T20 ನಾಯಕತ್ವದ ಹೊಣೆ

    ಭಾನುವಾರ ನಡೆದ ಟಿ20 ಸರಣಿಯ 2ನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 152 ರನ್‌ ಗಳಿಸಿತ್ತು. ಸಾಧಾರಣ ಮೊತ್ತದ ಗುರಿ ಬೆನ್ನತ್ತಿದ್ದ ವೆಸ್ಟ್‌ ಇಂಡೀಸ್‌ ನಿಗದಿತ 18.5 ಓವರ್‌ಗಳಲ್ಲೇ 8 ವಿಕೆಟ್‌ ನಷ್ಟಕ್ಕೆ 155 ರನ್‌ ಬಾರಿಸಿ ರೋಚಕ ಗೆಲುವು ಸಾಧಿಸಿದೆ. ಆರಂಭದಲ್ಲಿ ಕಳಪೆ ಬೌಲಿಂಗ್‌ ಪ್ರದರ್ಶಿಸಿದರೂ ಮಧ್ಯಮ ಕ್ರಮಾಂಕದಲ್ಲಿ ಹಿಡಿತ ಸಾಧಿಸಿದ ಟೀಂ ಇಂಡಿಯಾ ಕೊನೆಯ ಎರಡು ಓವರ್‌ಗಳಲ್ಲಿ ರನ್‌ ಕೊಟ್ಟು ಸೋಲನುಭವಿಸಿತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೊನೆಯಲ್ಲಿ ಸಿಕ್ಸರ್‌, ಬೌಂಡರಿ ಸಿಡಿಸಿ ಗೆದ್ದ ವಿಂಡೀಸ್‌ – ಭಾರತಕ್ಕೆ ವಿರೋಚಿತ ಸೋಲು

    ಕೊನೆಯಲ್ಲಿ ಸಿಕ್ಸರ್‌, ಬೌಂಡರಿ ಸಿಡಿಸಿ ಗೆದ್ದ ವಿಂಡೀಸ್‌ – ಭಾರತಕ್ಕೆ ವಿರೋಚಿತ ಸೋಲು

    ಜಾರ್ಜ್‌ಟೌನ್ (ಗಯಾನಾ): ಕೊನೆಯಲ್ಲಿ ಅಕೇಲ್ ಹೊಸೈನ್ (Akeal Hosein) ಹಾಗೂ ಅಲ್ಜರಿ ಜೋಸೆಫ್‌ (Alzarri Joseph) ಬ್ಯಾಟಿಂಗ್‌ ನೆರವಿನಿಂದ ವೆಸ್ಟ್‌ ಇಂಡೀಸ್‌ (West Indies) ಭಾರತದ ವಿರುದ್ಧ ಸತತ 2ನೇ ಜಯ ಸಾಧಿಸಿತು. ಈ ಮೂಲಕ 5 ಪಂದ್ಯಗಳ ಟಿ20 ಸರಣಿಯಲ್ಲಿ 2-0 ಅಂತರದಲ್ಲಿ ಮುನ್ನಡೆ ಸಾಧಿಸಿದೆ. ಇನ್ನೂ ಮೊದಲ ಸೋಲಿನ ಸೇಡು ತೀರಿಸಿಕೊಳ್ಳುವ ಕಾತುರದಲ್ಲಿದ್ದ ಟೀಂ ಇಂಡಿಯಾ ವಿರೋಚಿತ ಸೋಲನುಭವಿಸಿದೆ.

    ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ (Team India) 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 152 ರನ್‌ ಗಳಿಸಿತ್ತು. ಸಾಧಾರಣ ಮೊತ್ತದ ಗುರಿ ಬೆನ್ನತ್ತಿದ್ದ ವೆಸ್ಟ್‌ ಇಂಡೀಸ್‌ ನಿಗದಿತ 18.5 ಓವರ್‌ಗಳಲ್ಲೇ 8 ವಿಕೆಟ್‌ ನಷ್ಟಕ್ಕೆ 155 ರನ್‌ ಬಾರಿಸಿ ರೋಚಕ ಗೆಲುವು ಸಾಧಿಸಿದೆ.

    ಬೌಲಿಂಗ್‌ನಲ್ಲಿ ಶುಭಾರಂಭ ಮಾಡಿದ ಭಾರತ ಮೊದಲ ಓವರ್‌ನಲ್ಲಿ ಕೇವಲ 2 ರನ್‌ಗಳಿಗೆ 2 ವಿಕೆಟ್‌ ಉರುಳಿಸಿತ್ತು. ಬ್ರ್ಯಾಂಡನ್ ಕಿಂಗ್ ಹಾಗೂ ಬ್ರ್ಯಾಂಡನ್ ಕಿಂಗ್ ಶೂನ್ಯಕ್ಕೆ ಔಟಾಗಿ ಪೆವಿಲಿಯನ್‌ಗೆ ಮರಳಿದರು. ಬಳಿಕ 3ನೇ ವಿಕೆಟ್‌ಗೆ ಜೊತೆಯಾದ ಕೇಲ್‌ ಮೇಯರ್ಸ್‌ ಹಾಗೂ ನಿಕೋಲಸ್‌ ಪೂರನ್‌ (Nicholas Pooran) ಸ್ಫೋಟಕ ಪ್ರದರ್ಶನ ನೀಡಿದರು. ಟೀಂ ಇಂಡಿಯಾ ಬೌಲರ್‌ಗಳನ್ನ ಹಿಗ್ಗಾಮುಗ್ಗಾ ದಂಡಿಸಿದ ಈ ಜೋಡಿ 37 ಎಸೆತಗಳಲ್ಲಿ 57 ರನ್‌ ಬಾರಿಸಿತು. ಇದರಿಂದ ಭಾರತದ ಸೋಲು ಖಚಿತವಾಗಿತ್ತು.

    ನಿಕೋಲಸ್‌ ಪೂರನ್‌ 67 ರನ್‌ (40 ಎಸೆತ, 6 ಬೌಂಡರಿ, 4 ಸಿಕ್ಸರ್‌) ಗಳಿಸಿ ಔಟಾದರು. ಈ ಬೆನ್ನಲ್ಲೇ ನಾಯಕ ರೋವ್ಮನ್‌ ಪೋವೆಲ್‌ (Rovman Powell) 21 ರನ್‌, ಆಲ್‌ರೌಂಡರ್‌ ಶಿಮ್ರಾನ್‌ ಹೆಟ್ಮೇಯರ್‌ 22 ರನ್‌ ಗಳಿಸಿ ಔಟಾದರು. 15 ನೇ ಓವರ್‌ನಲ್ಲಿ ವಿಂಡೀಸ್‌ ಮೂರು ವಿಕೆಟ್‌ ಕಳೆದುಕೊಂಡಾಗ ಪಂದ್ಯಕ್ಕೆ ರೋಚಕ ತಿರುವು ಸಿಕ್ಕಿತ್ತು. ಕೊನೆಯಲ್ಲಿ ಬೌಲರ್‌ಗಳಾದ ಅಕೇಲ್ ಹೊಸೈನ್ (16 ರನ್‌) ಹಾಗೂ ಅಲ್ಜರಿ ಜೋಸೆಫ್‌ (10 ರನ್‌) ಸಿಕ್ಸರ್‌, ಬೌಂಡರಿ ಬಾರಿಸುವ ಮೂಲಕ ಜಯದ ದಡ ಸೇರಿಸಿದರು.

    ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಆಯ್ದುಕೊಂಡ ಟೀಂ ಇಂಡಿಯಾ ಆರಂಭದಲ್ಲಿ ಆಘಾತ ಅನುಭವಿಸಿತು. ಮೊದಲ ಸೋಲಿನ ಸೇಡು ತೀರಿಸಿಕೊಳ್ಳುವ ತವಕದಲ್ಲಿದ್ದ ಭಾರತಕ್ಕೆ ನಿರಾಸೆಯಾಗಿತ್ತು. ಏಕೆಂದರೆ ಆರಂಭಿಕ ಶುಭಮನ್‌ ಗಿಲ್‌ (Shubman Gill)  ಮತ್ತೆ ಕಳಪೆ ಪ್ರದರ್ಶನ ತೋರಿದರು. ಗಿಲ್ ಈ ಪಂದ್ಯದಲ್ಲಿ ಕೇವಲ 7 ರನ್‌ಗಳಿಗೆ ವಿಕೆಟ್ ಒಪ್ಪಿಸಿದರು.

    ಈ ಬೆನ್ನಲ್ಲೇ ಸೂರ್ಯಕುಮಾರ್‌ ಯಾದವ್‌ (Suryakumar Yadav) ಅನಗತ್ಯ ರನ್‌ ಕದಿಯಲು ಯತ್ನಿಸಿ ರನೌಟ್‌ಗೆ ತುತ್ತಾಗಿ ಆಘಾತ ನೀಡಿದರು. ನಂತರ ಇಶಾನ್ ಕಿಶನ್ ಹಾಗೂ ತಿಲಕ್ ವರ್ಮಾ ಜವಾಬ್ಧಾರಿಯುತ ಬ್ಯಾಟಿಂಗ್‌ ಪ್ರದರ್ಶನ ನೀಡಿದರು. 3ನೇ ವಿಕೆಟ್‌ಗೆ ಈ ಜೋಡಿ 36 ಎಸೆತಗಳಲ್ಲಿ 42 ರನ್‌ ಕಲೆಹಾಕಿತು. ಅಷ್ಟರಲ್ಲೇ ಇಶಾನ್ 27 ರನ್‌ (2 ಸಿಕ್ಸರ್‌, 2 ಬೌಂಡರಿ, 23 ಎಸೆತ) ಗಳಿಸಿ ಪೆವಿಲಿಯನ್‌ ಸೇರಿಕೊಂಡರು. ನಂತರ ಸಂಜು ಸ್ಯಾಮ್ಸನ್ ಸಿಕ್ಸ್‌ ಬಾರಿಸುವ ಯತ್ನದಲ್ಲಿ 7 ರನ್‌ಗೆ ಸ್ಟಂಪ್ ಔಟ್ ಆದರು.

    ತಿಲಕ್ ವರ್ಮಾ ಈ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದ್ದು ಜವಾಬ್ದಾರಿ ಆಟ ನೀಡಿದರು. 41 ಎಸೆತಗಳಲ್ಲಿ ತಿಲಕ್ 51 ರನ್‌ (1 ಸಿಕ್ಸರ್‌, 5 ಬೌಂಡರಿ) ಬಾರಿಸಿ, ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಚೊಚ್ಚಲ ಅರ್ಧಶತಕ ದಾಖಲಿಸಿದರು. ನಾಯಕ ಹಾರ್ದಿಕ್‌ ಪಾಂಡ್ಯ 24 ರನ್‌, ಅಕ್ಷರ್‌ ಪಟೇಲ್‌ 14 ರನ್‌, ರವಿ ಬಿಷ್ಣೋಯಿ 8 ರನ್‌ ಹಾಗೂ ಅರ್ಷ್‌ದೀಪ್‌ ಸಿಂಗ್‌ 6 ರನ್‌ಗಳ ಕೊಡುಗೆ ನೀಡುವ ಮೂಲಕ ತಂಡದ ಮೊತ್ತ 150ರ ಗಡಿ ದಾಟಿಸುವಲ್ಲಿ ಯಶಸ್ವಿಯಾದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • T20 ಸರಣಿಗೆ ವಿಂಡೀಸ್‌ ಬಲಿಷ್ಠ ತಂಡ ಪ್ರಕಟ – ನಿಕೋಲಸ್‌ ಪೂರನ್‌ ಈಸ್‌ ಬ್ಯಾಕ್‌

    T20 ಸರಣಿಗೆ ವಿಂಡೀಸ್‌ ಬಲಿಷ್ಠ ತಂಡ ಪ್ರಕಟ – ನಿಕೋಲಸ್‌ ಪೂರನ್‌ ಈಸ್‌ ಬ್ಯಾಕ್‌

    ಬ್ರಿಡ್ಜ್‌ಟೌನ್‌: ಇದೇ ಆಗಸ್ಟ್‌ 3 ರಿಂದ 13ರ ವರೆಗೆ ಟೀಂ ಇಂಡಿಯಾ (Team India) ವಿರುದ್ಧ ನಡೆಯಲಿರುವ 5 ಪಂದ್ಯಗಳ ಟಿ20 ಸರಣಿಗೆ ವೆಸ್ಟ್‌ ಇಂಡೀಸ್‌ ಬಲಿಷ್ಠ ತಂಡ ಪ್ರಕಟಿಸಿದ್ದು, ನಿಕೋಲಸ್‌ ಪೂರನ್‌ (Nicholas Pooran) ತಂಡಕ್ಕೆ ಕಂಬ್ಯಾಕ್‌ ಮಾಡಿದ್ದಾರೆ.

    ಯುಎಸ್‌ನಲ್ಲಿ (USA) ಮೇಜರ್‌ ಕ್ರಿಕೆಟ್‌ ಲೀಗ್‌ನಲ್ಲಿ ಪಾಲ್ಗೊಂಡಿದ್ದ ಕಾರಣ ಏಕದಿನ ಕ್ರಿಕೆಟ್‌ ಟೂರ್ನಿಯಿಂದ ನಿಕೋಲಸ್‌ ಪೂರನ್‌ ಹೊರಗುಳಿದಿದ್ದರು. ಮುಂಬೈ ಇಂಡಿಯನ್ಸ್‌ ನ್ಯೂಯಾರ್ಕ್‌ ತಂಡದ ಪರ ಫೈನಲ್‌ ಪಂದ್ಯದಲ್ಲಿ ಬ್ಯಾಟಿಂಗ್‌ ಮಾಡಿದ್ದ ಪೂರನ್‌ ಸ್ಫೋಟಕ ಶತಕ ಸಿಡಿಸಿ ಚಾಂಪಿಯನ್‌ ಪಟ್ಟ ಗೆದ್ದುಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಇದೀಗ ಟೀಂ ಇಂಡಿಯಾ ವಿರುದ್ಧ ನಡೆಯಲಿರುವ 5 ಪಂದ್ಯಗಳ ಟಿ20 ಸರಣಿಗೆ ತಂಡಕ್ಕೆ ಎಂಟ್ರಿ ಕೊಟ್ಟಿದ್ದಾರೆ.

    ರೋವ್ಮನ್‌ ಪೋವೆಲ್‌ (Rovman Powell) ತಂಡದ ನಾಯಕತ್ವ ವಹಿಸಿಕೊಂಡಿದ್ದು, ಕೈಲ್‌ ಮೇಯರ್ಸ್‌ ಉಪನಾಯಕನಾಗಿ ತಂಡವನ್ನ ಮುನ್ನಡೆಸಲಿದ್ದಾರೆ. ಶಿಮ್ರಾನ್‌ ಹೆಟ್ಮೇಯರ್‌, ಶಾಯ್‌ ಹೋಪ್‌, ಅಲ್ಝರಿ ಜೋಸೆಫ್‌, ಜೇಸನ್‌ ಹೋಲ್ಡರ್‌ ಮೊದಲಾದವರು ಬ್ಯಾಟಿಂಗ್‌ ಬಲ ತುಂಬುವ ನಿರೀಕ್ಷೆಯಲ್ಲಿದ್ದಾರೆ. 5 ಪಂದ್ಯಗಳ ಟಿ20 ಸರಣಿಯಲ್ಲಿ ಮೂರು ಪಂದ್ಯಗಳು ವೆಸ್ಟ್‌ ಇಂಡೀಸ್‌ನಲ್ಲಿ ನಡೆಯಲಿದ್ದು ಅಂತಿಮ ಎರಡು ಪಂದ್ಯಗಳು ಅಮೆರಿಕದಲ್ಲಿ ನಡೆಯಲಿದೆ. ಇದನ್ನೂ ಓದಿ: ಟೀಂ ಇಂಡಿಯಾಕ್ಕೆ ಭರ್ಜರಿ ಕಂಬ್ಯಾಕ್‌ – ಐರ್ಲೆಂಡ್‌ T20 ಸರಣಿಗೆ ಬುಮ್ರಾ ನಾಯಕ, ರಿಂಕು ಸಿಂಗ್‌ಗೆ ಚಾನ್ಸ್‌

    ವೆಸ್ಟ್​ ಇಂಡೀಸ್​ ತಂಡ
    ರೋವ್ಮನ್ ಪೊವೆಲ್‌ (ನಾಯಕ), ಕೈಲ್ ಮೇಯರ್ಸ್ (ಉಪ ನಾಯಕ), ಜಾನ್ಸನ್ ಚಾರ್ಲ್ಸ್, ರೋಸ್ಟನ್ ಚೇಸ್, ಶಿಮ್ರೋನ್ ಹೆಟ್​ಮೇರ್​, ಜೇಸನ್ ಹೋಲ್ಡರ್, ಶೈಯ್​ ಹೋಪ್, ಅಕಿಲ್ ಹೊಸೈನ್, ಅಲ್ಜಾರಿ ಜೋಸೆಫ್, ಬ್ರಾಂಡನ್ ಕಿಂಗ್, ಒಬೆಡ್ ಮೆಕಾಯ್, ನಿಕೋಲಸ್ ಪೂರನ್, ರೊಮಾರಿಯೋ ಶೆಫರ್ಡ್​, ಓಡಿಯನ್ ಸ್ಮಿತ್, ಒಶಾನೆ ಥಾಮಸ್. ಇದನ್ನೂ ಓದಿ: 10 ಬೌಂಡರಿ, 13 ಸಿಕ್ಸರ್ – ನಿಕೋಲಸ್ ಪೂರನ್ ಸ್ಫೋಟಕ ಶತಕ; ವಿದೇಶದಲ್ಲೂ ಮುಂಬೈ ಚಾಂಪಿಯನ್

    ಭಾರತ ಟಿ20 ತಂಡ
    ಇಶಾನ್​ ಕಿಶನ್​, ಶುಭಮನ್​ ಗಿಲ್​, ಯಶಸ್ವಿ ಜೈಸ್ವಾಲ್​, ತಿಲಕ್​ ವರ್ಮಾ, ಸೂರ್ಯಕುಮಾರ್​ ಯಾದವ್​, ಸಂಜು ಸ್ಯಾಮ್ಸನ್​, ಹಾರ್ದಿಕ್​​ ಪಾಂಡ್ಯ(ನಾಯಕ), ಅಕ್ಷರ್​ ಪಟೇಲ್, ಯಜುವೇಂದ್ರ ಚಾಹಲ್‌​, ಕುಲ್​ದೀಪ್​ ಯಾದವ್​, ರವಿ ಬಿಷ್ಣೋಯಿ, ಅರ್ಷ್‌​ದೀಪ್​ ಸಿಂಗ್​, ಉಮ್ರಾನ್​ ಮಲಿಕ್​, ಅವೇಶ್​ ಖಾನ್​, ಮುಖೇಶ್​ ಕುಮಾರ್​.

    ಯಾವ ದಿನ ಎಲ್ಲಿ ಪಂದ್ಯ:
    ಮೊದಲ ಟಿ20 ಪಂದ್ಯ ಆಗಸ್ಟ್​ 3, ಸ್ಥಳ: ಟ್ರಿನಿಡಾಡ್
    2ನೇ ಟಿ20 ಪಂದ್ಯ ಆಗಸ್ಟ್​ 6, ಸ್ಥಳ: ಗಯಾನಾ
    3ನೇ ಟಿ20 ಪಂದ್ಯ ಆಗಸ್ಟ್​ 8, ಸ್ಥಳ: ಗಯಾನಾ
    4ನೇ ಟಿ20 ಪಂದ್ಯ ಆಗಸ್ಟ್​ 12, ಸ್ಥಳ: ಫ್ಲೋರಿಡಾ
    5ನೇ ಟಿ20 ಪಂದ್ಯ ಆಗಸ್ಟ್​ 13, ಸ್ಥಳ: ಫ್ಲೋರಿಡಾ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • `ಸೂರ್ಯ’ನ ಶಾಖಕ್ಕೆ ಕರಗಿದ ವಿಂಡೀಸ್ – ಭಾರತಕ್ಕೆ 7 ವಿಕೆಟ್‌ಗಳ ಭರ್ಜರಿ ಜಯ

    `ಸೂರ್ಯ’ನ ಶಾಖಕ್ಕೆ ಕರಗಿದ ವಿಂಡೀಸ್ – ಭಾರತಕ್ಕೆ 7 ವಿಕೆಟ್‌ಗಳ ಭರ್ಜರಿ ಜಯ

    ಟ್ರೆನಿನಾಡ್: ಸೂರ್ಯಕುಮಾರ್ ಯಾದವ್ ಬ್ಯಾಟಿಂಗ್ ಅಬ್ಬರ ಹಾಗೂ ಭುವನೇಶ್ವರ್ ಕುಮಾರ್ ಅವರ ಬೌಲಿಂಗ್ ಬಲದಿಂದ ಭಾರತ ತಂಡ 3ನೇ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಎದುರು 7 ವಿಕೆಟ್ ಭರ್ಜರಿ ಸಾಧಿಸಿದೆ.

    ಇಲ್ಲಿನ ವಾರ್ನರ್ ಪಾರ್ಕ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆತಿಥೇಯ ತಂಡ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 164 ರನ್ ಗಳಿಸಿ, ಭಾರತಕ್ಕೆ 165 ರನ್‌ಗಳ ಗುರಿ ನೀಡಿತು. ಸಾಧಾರಣ ರನ್‌ಗಳ ಗುರಿ ಬೆನ್ನತ್ತಿದ ಭಾರತ 19 ಓವರ್‌ಗಳಲ್ಲೇ 3 ವಿಕೆಟ್ ನಷ್ಟಕ್ಕೆ 165 ರನ್‌ಗಳಿಸಿ ಮುನ್ನಡೆ ಸಾಧಿಸಿತು. ರೋಹಿತ್ ಶರ್ಮಾ ಬಳಗ ಈ ಗೆಲುವಿನ ಮೂಲಕ 5 ಪಂದ್ಯಗಳ ಸರಣಿಯಲ್ಲಿ ಭಾರತ 2-1ರ ಮುನ್ನಡೆ ಸಾಧಿಸಿದೆ.

    https://twitter.com/Abdullah__Neaz/status/1554541514750959616

    165 ರನ್‌ಗಳ ಗುರಿ ಬೆನ್ನಟ್ಟಿದ ಭಾರತ ತಂಡಕ್ಕೆ ಆರಂಭಿಕ ಆಘಾತ ಎದುರಾಯಿತು. ಆರಂಭಿಕರಾಗಿ ಕಣಕ್ಕಿಳಿದ ರೋಹಿತ್ ಶರ್ಮಾ ಅವರು ಬೆನ್ನಿನ ಸ್ನಾಯು ಸೆಳೆತಕ್ಕೆ ಒಳಗಾಗಿ 11 ರನ್‌ಗಳಿಸಿ ಪೆವಿಲಿಯನ್‌ಗೆ ಮರಳಿದರು. ಇದನ್ನೂ ಓದಿ: Commonwealth Games: ಹರ್ಜಿಂದರ್ ಹವಾ – ಭಾರತಕ್ಕೆ ಮತ್ತೊಂದು ಕಂಚು

    ಈ ವೇಳೆ ಮತ್ತೊಬ್ಬ ಆರಂಭಿಕನಾಗಿದ್ದ ಸೂರ್ಯಕುಮಾರ್ ಯಾದವ್‌ಗೆ 2ನೇ ಕ್ರಮಾಂಕದ ಆಟಗಾರ ಶ್ರೇಯಸ್ ಅಯ್ಯರ್ ಸಾಥ್ ನೀಡಿದರು. ಸೂರ್ಯಕುಮಾರ್ ಮತ್ತು ಶ್ರೇಯಸ್ ಅಯ್ಯರ್ 86 ರನ್ ಜೊತೆಯಾಟ ಆಡಿದರು.

    ವಿಂಡೀಸ್ ಬೌಲಿಂಗ್ ದಾಳಿಯನ್ನು ದಿಟ್ಟವಾಗಿ ಎದುರಿಸಿದ ಸೂರ್ಯಕುಮಾರ್ 8 ಬೌಂಡರಿ ಮತ್ತು 4 ಸಿಕ್ಸರ್ ಚಚ್ಚಿದರು. ಡೊಮಿನಿಕ್ ಡ್ರೇಕ್ಸ್ ಎಸೆತದಲ್ಲಿ ಔಟಾಗುವ ಮುನ್ನ ಅವರು ತಂಡವನ್ನು ಉತ್ತಮ ಸ್ಥಿತಿಗೆ ತಂದು ನಿಲ್ಲಿಸಿದ್ದರು. ಇದನ್ನೂ ಓದಿ: ಮೆಕಾಯ್ ಮ್ಯಾಜಿಕ್, 2ನೇ T20ಯಲ್ಲಿ ವಿಂಡೀಸ್‌ಗೆ ರೋಚಕ ಜಯ – ಹೋರಾಡಿ ಸೋತ ಭಾರತ

    ಮಧ್ಯಮ ಕ್ರಮಾಂಕದಲ್ಲಿ ಟೀಂ ಇಂಡಿಯಾಕ್ಕೆ ಆಸರೆಯಾದ ರಿಷಭ್ ಪಂತ್ 26 ಎಸೆತಗಳಲ್ಲಿ 3 ಬೌಂಡರಿ ಹಾಗೂ 1 ಸಿಕ್ಸರ್ ನೊಂದಿಗೆ ಅಜೇಯ 33 ರನ್‌ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು. ದೀಪಕ್ ಹೂಡಾ ಅಜೇಯ 10 ಹಾಗೂ ಹಾರ್ದಿಕ್ ಪಾಂಡ್ಯ 4 ರನ್ ಗಳಿಸಿದರು. ಟೀಂ ಇಂಡಿಯಾ ಬೌಲರ್‌ಗಳಾದ ಭುವನೇಶ್ವರ್ ಕುಮಾರ್ 4 ಓವರ್‌ಗಳಲ್ಲಿ 35 ರನ್ ನೀಡಿ 2 ವಿಕೆಟ್ ಉರುಳಿಸಿದರು. ಹಾರ್ದಿಕ್ ಪಾಂಡ್ಯ, ಅರ್ಶ್ದೀಪ್ ಸಿಂಗ್ ತಲಾ ಒದೊಂದು ವಿಕೆಟ್ ಪಡೆದರು.

    ಮೇಯರ್ಸ್ ಆಸರೆ: ಮೊದಲು ಬ್ಯಾಟ್ ಮಾಡಿದ್ದ ವೆಸ್ಟ್ ಇಂಡೀಸ್ ಕೈಲ್ ಮೇಯರ್ಸ್ ಅವರ ಅರ್ಧಶತಕದ ನೆರವಿನಿಂದ ಉತ್ತಮ ಮೊತ್ತ ಕಲೆಹಾಕಿತ್ತು. 50 ಎಸೆತಗಳನ್ನು ಎದುರಿಸಿದ ಮೇಯರ್ಸ್ 8 ಬೌಂಡರಿ ಮತ್ತು 4 ಸಿಕ್ಸರ್‌ಗಳೊಂದಿಗೆ 73 ರನ್ ಸಿಡಿಸಿ ತಂಡಕ್ಕೆ ಆಧಾರವಾದರು. ಬ್ರೆಂಡನ್ ಕಿಂಗ್ 20 ರನ್, ನಾಯಕ ನಿಕೊಲಸ್ ಪೂರನ್ 22 ರನ್ ಸೇರಿಸಿ ತಂಡಕ್ಕೆ ಆಸರೆಯಾದರು.

    ಒಟ್ಟಿನಲ್ಲಿ ಟೀಂ ಇಂಡಿಯಾವನ್ನು ಕಟ್ಟಿಹಾಕುವಲ್ಲಿ ವೆಸ್ಟ್ ಇಂಡೀಸ್ ಬೌಲರ್‌ಗಳು ವಿಫಲವಾದ್ದರಿಂದ ಗೆಲುವು ಟೀಂ ಇಂಡಿಯಾ ಪಾಲಾಯಿತು.

    Live Tv
    [brid partner=56869869 player=32851 video=960834 autoplay=true]