Tag: rowdysheeter

  • ಮಂಡ್ಯದಲ್ಲಿ ರೌಡಿಶೀಟರ್‌ಗೆ ಶಾಸಕರಿಂದ ಸನ್ಮಾನ

    ಮಂಡ್ಯದಲ್ಲಿ ರೌಡಿಶೀಟರ್‌ಗೆ ಶಾಸಕರಿಂದ ಸನ್ಮಾನ

    ಮಂಡ್ಯ: ಶ್ರೀರಂಗಪಟ್ಟಣ ಕಾಂಗ್ರೆಸ್ ಶಾಸಕರು (Congress MLA)  ರೌಡಿಶೀಟರ್ ಗಳ ಪೋಷಣೆಗೆ ಮುಂದಾದ್ರಾ ಎಂಬ ಪ್ರಶ್ನೆ ಎದ್ದಿದೆ.

    ಕೆಆರ್‍ಎಸ್‍ನಲ್ಲಿ ನೃತ್ಯ ಕಾರಂಜಿ ಉದ್ಘಾಟನೆ ವೇಳೆ ರೌಡಿಶೀಟರ್ ಕೂಡ ಆಗಿರುವ ಗ್ರಾಮಪಂಚಾಯತ್ ಸದಸ್ಯ ದೇವರಾಜ್ ಆಲಿಯಾಸ್ ಬುಲ್ಲಿಗೆ ವೇದಿಕೆಯಲ್ಲಿ ಶಾಸಕ ರಮೇಶ್ ಬಂಡಿಸಿದ್ದೇಗೌಡ (Ramesh Bandisiddegowda) ಸನ್ಮಾನ ಮಾಡಿದ್ದಾರೆ.

    ಹಲವಾರು ಅಪರಾಧ ಕೃತ್ಯದಲ್ಲಿ ಭಾಗಿಯಾಗಿರುವ ದೇವರಾಜ್ ಹೆಸರು ಆಹ್ವಾನ ಪತ್ರಿಕೆಯಲ್ಲಿ ಇರಲಿಲ್ಲ. ಆದರೂ ವೇದಿಕೆಗೆ ರೌಡಿ ಶೀಟರ್ ನನ್ನು ಕರೆದು ಸಮ್ಮಾನಿಸಿದ್ದಾರೆ. ಈ ವೇಳೆ ಶಾಸಕರ ಕಾಲಿಗೆ ರೌಡಿಶೀಟರ್ ಬಿದ್ದಿದ್ದಾರೆ. ಈ ಕ್ಷಣಕ್ಕೆ ಸಚಿವ ಚಲುವರಾಯಸ್ವಾಮಿ ಕೂಡ ಸಾಕ್ಷಿ ಆಗಿದ್ದಾರೆ. ಈ ದೃಶ್ಯ ವೈರಲ್ ಆಗಿದ್ದು, ಆಕ್ರೋಶ ವ್ಯಕ್ತವಾಗಿದೆ. ಇದನ್ನೂ ಓದಿ: ಅಪ್ರಾಪ್ತೆಯನ್ನು ಪುಸಲಾಯಿಸಿ ಆಟೋದಲ್ಲಿ ಕರೆದೊಯ್ದು ಅತ್ಯಾಚಾರಕ್ಕೆ ಯತ್ನ!

    ಇತ್ತ ಶಾಸಕರು ಮಾತ್ರ ತಮ್ಮ ನಡೆಯನ್ನು ಸಮರ್ಥಿಸಿದ್ದಾರೆ. ನನ್ನ ಮೇಲೆಯೂ ಸಿಬಿಐ ಕೇಸ್ ಇದೆ. ಹಾಗಾದ್ರೆ ನಾನು ಕಾರ್ಯಕ್ರಮಕ್ಕೆ ಹೋಗಬಾರದು ಅಲ್ವಾ..? ಆಪಾದನೆ ಇದ್ದ ಮಾತ್ರಕ್ಕೆ ಅಪರಾಧಿ ಅಲ್ಲ ಎಂದು ಶಾಸಕ ರಮೇಶ್ ಬಂಡಿಸಿದ್ದೇಗೌಡ ಹೇಳಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚುನಾವಣಾ ಅಕ್ರಮ ತಡೆಗೆ 16 ಚೆಕ್ ಪೋಸ್ಟ್ ಸ್ಥಾಪನೆ- ಐವರು ರೌಡಿಶೀಟರ್‌ಗಳ ಗಡಿಪಾರು

    ಚುನಾವಣಾ ಅಕ್ರಮ ತಡೆಗೆ 16 ಚೆಕ್ ಪೋಸ್ಟ್ ಸ್ಥಾಪನೆ- ಐವರು ರೌಡಿಶೀಟರ್‌ಗಳ ಗಡಿಪಾರು

    ರಾಮನಗರ: 2023ರ ವಿಧಾನಸಭಾ ಚುನಾವಣೆ (Vidhanasabha Election 2023) ಗೆ ದಿನಾಂಕ ನಿಗದಿ ಹಿನ್ನೆಲೆ ನಿಷ್ಪಕ್ಷಪಾತ ಚುನಾವಣೆಗೆ ರಾಮನಗರ ಜಿಲ್ಲಾಡಳಿತ ಸಿದ್ಧತೆ ನಡೆಸಿದೆ.

    ಈ ಸಂಬಂಧ ಇಂದು ಸುದ್ದಿಗೋಷ್ಠಿ ನಡೆಸಿದ ರಾಮನಗರ ಜಿಲ್ಲಾಧಿಕಾರಿ ಅವಿನಾಶ್ ಮೆನನ್ ರಾಜೇಂದ್ರನ್, ರಾಮನಗರ (Ramanagar) ದಲ್ಲಿ ಒಟ್ಟು 8,84,044 ಮತದಾರರಿದ್ದಾರೆ. ಅದರಲ್ಲಿ 4,35,572 ಪುರುಷ ಮತದಾರರು, 4,50,573 ಮಹಿಳಾ ಮತದಾರರಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 1139 ಮತಗಟ್ಟೆಗಳ ಸ್ಥಾಪನೆ ಮಾಡಲಾಗಿದೆ. ಈ ಬಾರಿ ಗೋ ಗ್ರೀನ್ ಹಾಗೂ ಚನ್ನಪಟ್ಟಣದ ಗೊಂಬೆಗಳ ಥೀಮ್ ನಲ್ಲಿ ಎರಡು ವಿಶೇಷ ಮತಗಟ್ಟೆಗಳ ಸ್ಥಾಪನೆ ಮಾಡಲಾಗಿದೆ. ಅಲ್ಲದೇ ಚುನಾವಣಾ ಅಕ್ರಮ ತಡೆಯಲು ಜಿಲ್ಲೆಯಲ್ಲಿ ಒಟ್ಟು 16 ಚೆಕ್ ಪೋಸ್ಟ್ ಗಳ ನಿರ್ಮಾಣ ಮಾಡಲಾಗಿದೆ. ಚುನಾವಣಾ ಪ್ರಕ್ರಿಯೆಗೆ ಒಟ್ಟು 5775 ಸಿಬ್ಬಂದಿ ನೇಮಕ ಮಾಡಿದ್ದೇವೆ ಎಂದರು.

    VOTE
    ಸಾಂದರ್ಭಿಕ ಚಿತ್ರ

    ಅಲ್ಲದೇ ಪ್ರತಿ ಕ್ಷೇತ್ರ ವ್ಯಾಪ್ತಿಯಲ್ಲಿ 9 ಫ್ಲೈಯಿಂಗ್ ಸ್ವ್ಕಾಡ್ ರಚನೆ ಮಾಡಿ ರಾಜಕೀಯ ಕಾರ್ಯಕ್ರಮಗಳ ಮೇಲೆ ಹದ್ದಿನಕಣ್ಣು ಇಡಲಾಗಿದೆ. ಚುನಾವಣಾ ಅಕ್ರಮದ ಬಗ್ಗೆ ಮಾಹಿತಿ ನೀಡಲು ಸಹಾಯವಾಣಿ ಆರಂಭಿಸಿದ್ದು, ಸಾರ್ವಜನಿಕರು ಕೂಡಾ ಮಾಹಿತಿ ನೀಡಬಹುದಾಗಿದೆ. ಅಲ್ಲದೇ ಚುನಾವಣಾ ಸಮಯದಲ್ಲಿ ಯಾವುದೇ ಅಕ್ರಮ ಜರುಗದಂತೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿ ಐವರು ರೌಡಿಶೀಟರ್‍ಗಳನ್ನು ಗಡಿಪಾರು ಮಾಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: 4ನೇ ಬಾರಿ ಸತತ ಜಯದತ್ತ ಸುಧಾಕರ್ – ಬ್ರೇಕ್ ಹಾಕಲು ಜೆಡಿಎಸ್-ಕಾಂಗ್ರೆಸ್ ಪೈಪೋಟಿ

    ಹಬ್ಬ, ಜಾತ್ರೆಗಳ ಹೆಸರಿನಲ್ಲಿ ರಾಜಕೀಯ ಮುಖಂಡರು ಬಾಡೂಟ ಹಾಕಿಸುವುದರ ಮೇಲೂ ನಿಗಾ ಇಡಲಾಗಿದೆ. ದಾಖಲೆ ಇಲ್ಲದೇ ಹಣಸಾಗಾಟ, ಬ್ಯಾಂಕ್ ವಹಿವಾಟುಗಳ ಬಗ್ಗೆ ಪರಿಶೀಲನೆ ನಡೆಸಿ ಈ ಬಾರಿ ನಿಷ್ಪಕ್ಷಪಾತ ಚುನಾವಣೆ ನಡೆಸಲು ಜಿಲ್ಲಾಡಳಿತ ಸಿದ್ಧವಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಅವಿನಾಶ್ ಮೆನನ್ ರಾಜೇಂದ್ರನ್ ಮಾಹಿತಿ ನೀಡಿದ್ದಾರೆ.

  • ಬೆತ್ತನಗೆರೆ ಶಂಕರನ ರಾಜಕೀಯ ಎಂಟ್ರಿಗೆ ಖಾಕಿ ಬ್ರೇಕ್!

    ಬೆತ್ತನಗೆರೆ ಶಂಕರನ ರಾಜಕೀಯ ಎಂಟ್ರಿಗೆ ಖಾಕಿ ಬ್ರೇಕ್!

    ಬೆಂಗಳೂರು: ರೌಡಿಶೀಟರ್ ಬೆತ್ತನಗೆರೆ ಶಂಕರ (Bettanagere Shankara) ರಾಜಕೀಯಕ್ಕೆ ಎಂಟ್ರಿಕೊಡಲು ಕಸರತ್ತು ನಡೆಸುತ್ತಿದ್ದಾನೆ. ರಾಜಕೀಯದಾಟಕ್ಕೆ ಎಂಟ್ರಿ ಕೊಡಲು ಮುಂದಾಗಿರೋ ಶಂಕರನಿಗೆ ಪೊಲೀಸರು ಶಾಕ್ ಕೊಡಲು ಮುಂದಾಗಿದ್ದಾರೆ. ತಾನು ಆಕಾಂಕ್ಷಿಯಾಗಲು ಹೊರಟಿರೋ ಜಿಲ್ಲೆ ಮೈಸೂರಿನಿಂದಲೇ ಗಡಿಪಾರು ಮಾಡಲು ಪೊಲೀಸರು ಚಿಂತನೆ ನಡೆಸ್ತಿದ್ದಾರೆ.

    ನೆಲಮಂಗಲ ಠಾಣೆ (Nelamangala Police Station) ರೌಡಿಶೀಟರ್ ಆಗಿರೋ ಬೆತ್ತನಗೆರೆ ಶಂಕರ ಹೆಚ್.ಡಿ. ಕೋಟೆಯಿಂದ ಜಿಲ್ಲಾ ಪಂಚಾಯ್ತಿಗೆ ಬಿಜೆಪಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದಾನೆ. ಬಿಜೆಪಿ (BJP) ಏನೋ ಶಂಕರಿಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದರು. ಪೊಲೀಸರು ಮಾತ್ರ ಅವನ ಆಸೆಗೆ ತಣ್ಣೀರು ಎರಚಲು ಮುಂದಾಗಿದ್ದಾರೆ. ಕೊಲೆ, ಸುಪಾರಿ, ಅಕ್ರಮ ಶಸ್ತ್ರಾಸ್ತ್ರ ಸಾಗಣೆ, ಸೇರಿದಂತೆ 15 ಕ್ಕೂ ಹೆಚ್ಚು ಪ್ರಕರಣಗಳಿಂದ ಮೇಲಿಂದ ಮೇಲೆ ಶಂಕರನ ಮೇಲೆ ಎಫ್‍ಐಆರ್ ಗಳು ದಾಖಲಾಗುತ್ತಿದೆ. ಇದನ್ನೂ ಓದಿ; ರೌಡಿಶೀಟರ್ ಬೆತ್ತನಗೆರೆ ಶಂಕರ ಹೆಸರು ಬದಲಾಯಿಸಿಕೊಂಡು ಬಿಜೆಪಿ ಸೇರ್ಪಡೆ

    ಶಂಕರನ ಆಟಾಟೋಪಗಳು ದಿನೇ ದಿನೇ ಹೆಚ್ಚಾಗುತ್ತಿರೋ ಕಾರಣದಿಂದ ಮೈಸೂರಿನಿಂದ ಗಡಿಪಾರು ಮಾಡಲು ಪೊಲೀಸರು ಚಿಂತನೆ ಮಾಡುತ್ತಿದ್ದಾರೆ ಏನ್ನಲಾಗಿದೆ. ಪೊಲೀಸರು ಅಂದುಕೊಂಡಂತೆ ಆದರೆ ಶಂಕರನ ರಾಜಕೀಯ ಪ್ರವೇಶ ಕನಸು ಕನಸಾಗಿಯೇ ಉಳಿಯುತ್ತೆ. ಇದನ್ನೂ ಓದಿ: 3 ದಿನವಾದ್ರೂ ಸಿಗದ ಚಾಲಾಕಿ ಚಿರತೆ – 4ನೇ ದಿನಕ್ಕೆ ಕಾರ್ಯಾಚರಣೆ

    Live Tv
    [brid partner=56869869 player=32851 video=960834 autoplay=true]

  • ಬಿಜೆಪಿಗೆ ಗಲಭೆ ಎಬ್ಬಿಸಲು ರೌಡಿಗಳು ಬೇಕು: ಸಿದ್ದರಾಮಯ್ಯ

    ಬಿಜೆಪಿಗೆ ಗಲಭೆ ಎಬ್ಬಿಸಲು ರೌಡಿಗಳು ಬೇಕು: ಸಿದ್ದರಾಮಯ್ಯ

    ಮಂಡ್ಯ: ಬಿಜೆಪಿ ಅವರಿಗೆ ಗಲಭೆ ಎಬ್ಬಿಸಲು ರೌಡಿಗಳು ಬೇಕು. ಅದೇ ಕಾರಣಕ್ಕೆ ರೌಡಿ ಶೀಟರ್‍ಗಳನ್ನು ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳುತ್ತಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.

    ಮಂಡ್ಯ ಜಿಲ್ಲೆಯ ಕೆಆರ್ ಪೇಟೆ (KR Pete) ಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಇಬ್ಬರು ಎಂಪಿಗಳು ಬಿಜೆಪಿಯವರು ಸೈಲೆಂಟ್ ಸುನೀಲ( (Silent Sunila) ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಅವನು ಸರ್ಚ್ ವಾರೆಂಟ್‍ನಲ್ಲಿದ್ದಾನೆ. ಇಂಥವರ ಜೊತೆ ಓಡಾಡಿ ಸಮರ್ಥನೆ ಮಾಡಿಕೊಳ್ಳುತ್ತಾರೆ. ಬಿಜೆಪಿಯವರಿಗೆ ಇದು ಅಂಟು ರೋಗ ಆಗಿದೆ. ಅದರಲ್ಲೂ ಬಸವರಾಜ ಬೊಮ್ಮಾಯಿಗೆ ಜಾಸ್ತಿಯಾಗಿದೆ. ಏನೇ ಹೇಳಿದರು ಹಿಂದಿನ ಸರ್ಕಾರದಲ್ಲಿ ಆಗಿಲ್ವಾ ಅಂತಾರೆ. ನಿಮ್ಮ ತಪ್ಪುಗಳನ್ನು ಹೇಳಿ ಜನ ನಿಮಗೆ ಅಧಿಕಾರ ಕೊಟ್ಟಿಲ್ಲ. ನೀವು ಅನೈತಿಕವಾಗಿ ಬಂದಿದ್ದೀರಾ ಎಂದು ಕಿಡಿಕಾರಿದ್ರು.

    ನಮ್ಮನ್ನು ಬಿಡಿ ನೀವು ಏನು ಮಾಡಿದ್ದೀರಾ ಅಂತಾ ಹೇಳಿ ರೌಡಿ ಜೊತೆ ವೇದಿಕೆ ಹಂಚಿಕೊಂಡಿದ್ದು ಸರಿನಾ? ಫೈಟರ್ ರವಿ ಆಹಾ ಹೆಸರು ನೋಡು ಫೈಟರ್ ರವಿ (Fighter Ravi) ಅಂತೆ ಆರ್‍ಎಸ್‍ಎಸ್ (RSS) ಬಿಜೆಪಿ ಇಂತಹದ್ದೇ ಕೆಲಸ ಮಾಡುತ್ತದೆ. ಅಶಾಂತಿ ನಿರ್ಮಾಣ ಮಾಡಲು ಇಂತವರು ಅವರಿಗೆ ಬೇಕು ಸಮಾಜದಲ್ಲಿ ಅಶಾಂತಿ ಮೂಡಿಸಲು ಇಂತವರನ್ನು ಸೇರಿಸಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್‍ (Congress) ನವರು ಜೈಲಿಗೆ ಹೋಗಿ ಬಂದಿದ್ದಾರೆ ಅಂತಾರೆ. ಇದನ್ನೂ ಓದಿ: ಮಾಜಿ ಸಿಎಂ ಸಿದ್ದರಾಮಯ್ಯ ಬಯೋಪಿಕ್‌ನಲ್ಲಿ ತಮಿಳು ನಟ ವಿಜಯ್ ಸೇತುಪತಿ

    ಅಮಿತ್ ಶಾ (AmitShah) ಎಲ್ಲಿ ಹೋಗಿದ್ದರು? ಏನು ಮಾವನ ಮನೆಗೆ ಹೋಗಿದ್ರಾ? ಅವರನ್ನು ಗಡಿಪಾರು ಮಾಡಿದ್ರು. ಈ ದೇಶದ ಹೋಮ್ ಮಿನಿಸ್ಟರ್‍ಗೆ ಮೂರು ವರ್ಷಕ್ಕೂ ಹೆಚ್ಚು ಜೈಲಾಗಿತ್ತು. ಅಂತವರೇ ಅಧ್ಯಕ್ಷರು ಹೋಮ್ ಮಿನಿಸ್ಟರ್ ಆಗಿದ್ದಾರೆ. ನಲಪಾಡ್ (Nalpad) ರೌಡಿ ಅಲ್ಲ ಅವನೇನು ರೌಡಿ ಶೀಟರ್ ಇದ್ದಾನಾ? ಅವನ ಮೇಲೆ ಕ್ರಿಮಿನಲ್ ಕೇಸ್ ಇದೆ ಅಷ್ಟೇ. ಅದು ಸಾಬೀತಾಗಿ ಠಾಣೆಯಲ್ಲಿ ಫೋಟೋ ಇದ್ದು ಶಿಕ್ಷೆ ಆದರೆ ಸರಿ. ಮೊಂಡುತನ ಮಾನ ಮರ್ಯಾದೆ ಇಲ್ಲದವು ಬರೀ ಭಂಢತನ ಮಾಡುತ್ತಾರೆ ಎಂದು ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

    Live Tv
    [brid partner=56869869 player=32851 video=960834 autoplay=true]

  • ಸೈಲೆಂಟ್ ಸುನೀಲಗೆ ಬಿಜೆಪಿ ಬಾಗಿಲು ಬಂದ್- ನಳಿನ್ ಕುಮಾರ್ ಕಟೀಲ್ ಸ್ಪಷ್ಟನೆ

    ಸೈಲೆಂಟ್ ಸುನೀಲಗೆ ಬಿಜೆಪಿ ಬಾಗಿಲು ಬಂದ್- ನಳಿನ್ ಕುಮಾರ್ ಕಟೀಲ್ ಸ್ಪಷ್ಟನೆ

    ಬೆಂಗಳೂರು: ಸೈಲೆಂಟ್ ಸುನಿಲ್ (Silent Sunila) ಬಿಜೆಪಿ ಸೇರ್ಪಡೆ ಅವಕಾಶವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸ್ಪಷ್ಟನೆ ನೀಡಿದ್ದಾರೆ.

    `ಸೈಲೆಂಟ್ ಸುನೀಲ’ನ ಜೊತೆ ಬಿಜೆಪಿ (BJP) ನಾಯಕರು ಎಂಬ ಕುರಿತು ಪಬ್ಲಿಕ್ ಟಿವಿ ನಿರಂತರ ವರದಿ ಮಾಡಿದ ಬಳಿಕ ಬಿಜೆಪಿ ಎಚ್ಚೆತ್ತಿದೆ. ಈ ಸಂಬಂಧ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ನಳಿನ್ ಕುಮಾರ್ ಕಟೀಲ್ (Nalin Kumar Kateel) , ಯಾವುದೇ ಕಾರಣಕ್ಕೂ ಸೈಲೆಂಟ್ ಸುನೀಲ್‍ನನ್ನು ಬಿಜೆಪಿಗೆ ಸೇರಿಸಿಕೊಳ್ಳಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಾಜಕಾರಣಿಗಳ ಮಧ್ಯೆ ರೌಡಿಶೀಟರ್ ಸೈಲೆಂಟ್ ಸುನೀಲನ ದರ್ಬಾರ್ – ಪೊಲೀಸರು ಗಪ್‍ಚುಪ್

    ಸೈಲೆಂಟ್ ಸುನಿಲ್ ನಗರದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪಕ್ಷದ ಕೆಲವು ಪ್ರಮುಖರು ಭಾಗವಹಿಸಿದ ಕುರಿತು ಮಾಹಿತಿ ಪಡೆಯುತ್ತಿದ್ದೇನೆ. ಕಾರ್ಯಕ್ರಮದಲ್ಲಿ ಭಾಗವಹಿಸಿದ ಮುಖಂಡರಿಂದ ವಿವರಣೆ ಕೇಳಲಾಗುವುದು. ಪಕ್ಷದ ಪ್ರಮುಖರು ಮುಂದಿನ ದಿನಗಳಲ್ಲಿ ಇಂಥ ಘಟನೆಗಳು ಆಗದಂತೆ ನೋಡಿಕೊಳ್ಳಬೇಕು. ಎಲ್ಲ ವಿಚಾರಗಳನ್ನು ಪಕ್ಷದ ಗಮನಕ್ಕೆ ತರಬೇಕು ಎಂದು ಅವರು ಸೂಚಿಸಿದ್ದಾರೆ.

    ಬಿಜೆಪಿ, ವ್ಯಕ್ತಿಗಳ ನಿರ್ಮಾಣದ ಮೂಲಕ ದೇಶ ನಿರ್ಮಾಣದ ಕಾರ್ಯ ಮಾಡುತ್ತಿದೆ. ಉಗ್ರಗಾಮಿಗಳು, ಭಯೋತ್ಪಾದನಾ ಚಟುವಟಿಕೆಗೆ ಬೆಂಬಲ ಕೊಡುವವರು ಮತ್ತು ಅಪರಾಧ ಹಿನ್ನೆಲೆ ಉಳ್ಳವರನ್ನು ಪಕ್ಷ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ. ಇತ್ತ ಫೈಟರ್ ರವಿ ಪಕ್ಷ ಸೇರ್ಪಡೆ ಬಗ್ಗೆ ಕಟೀಲ್ ಮೌನವಹಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಬರ್ತ್‍ಡೇ ಪಾರ್ಟಿಯಲ್ಲಿ ಹುಬ್ಬಳ್ಳಿಯಲ್ಲಿ ಮೊಳಗಿದ ಗುಂಡಿನ ಸದ್ದು!

    ಬರ್ತ್‍ಡೇ ಪಾರ್ಟಿಯಲ್ಲಿ ಹುಬ್ಬಳ್ಳಿಯಲ್ಲಿ ಮೊಳಗಿದ ಗುಂಡಿನ ಸದ್ದು!

    ಹುಬ್ಬಳ್ಳಿ: ಹುಟ್ಟುಹಬ್ಬದ ಪಾರ್ಟಿಯಲ್ಲಿ ನಗರದಲ್ಲಿ ಗುಂಡಿನ ಸದ್ದು ಮೊಳಗಿರುವ ಅನುಮಾನ ಮೂಡಿದೆ. ನಗರದ ಹೊರವಲಯದ ಕುಸುಗಲ್ ಸಮೀಪದಲ್ಲಿ ಕಲಬುರಗಿ ಫಾರ್ಮ್ ಹೌಸ್‍ನಲ್ಲಿ ಆರ್.ಟಿ.ಐ. ಕಾರ್ಯಕರ್ತನ ಪುತ್ರ ಮತ್ತು 100ಕ್ಕೂ ಹೆಚ್ಚು ರೌಡಿಗಳು ಒಂದೆಡೇ ಸೇರಿ ಭರ್ಜರಿ ಪಾರ್ಟಿ ಮಾಡುವಾಗ ಈ ಪ್ರಕರಣ ನಡೆದಿದೆ ಎನ್ನಲಾಗಿದೆ.

    ಆರ್‌ಟಿಐ ಕಾರ್ಯಕರ್ತರಾದ ಕೇಶ್ವಾಪುರದ ಫಿಲೋಮಿನಾ ಪೌಲ್ ಪುತ್ರ ಸುಂದರ ಪೌಲ್ ಹುಟ್ಟುಹಬ್ಬದ ನಿಮಿತ್ತವಾಗಿ ರಾತ್ರಿ ಫಾರ್ಮ್‍ಹೌಸ್‍ವೊಂದರಲ್ಲಿ ಗುಂಡು-ತುಂಡಿನ ಪಾರ್ಟಿ ಆಯೋಜನೆ ಮಾಡಲಾಗಿತ್ತು. ಈ ಪಾರ್ಟಿಯಲ್ಲಿ ಹೊಸೂರು, ಸೆಟಲ್‍ಮೆಂಟ್ ಸೇರಿದಂತೆ ನಗರದ ವಿವಿಧ ಪ್ರದೇಶದ ರೌಡಿ ಶೀಟರ್‍ಗಳು ಪಾಲ್ಗೊಂಡಿದ್ದರು. ಕೇಕ್ ಕತ್ತರಿಸುವ ಸಮಯದಲ್ಲಿ ವೇದಿಕೆ ಮೇಲೆ ಖುಷಿಯಿಂದ ಆರು ಸುತ್ತಿನ ಗುಂಡು ಹಾರಿಸಿರುವ ಅನುಮಾನ ಮೂಡಿದೆ.‌ ಇದನ್ನೂ ಓದಿ: ಟ್ರಕ್‍ಗಳ ಮುಖಾಮುಖಿ ಡಿಕ್ಕಿ – ಚಾಲಕ ಸಾವು

    ಸುದ್ದಿ ತಿಳಿಯುತ್ತಿದ್ದಂತೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಇನ್ಸ್‌ಪೆಕ್ಟರ್ ರಮೇಶ್ ಗೋಕಾಕ್ ನೇತೃತ್ವದ ತಂಡ ಫಾರ್ಮ್ ಹೌಸ್‍ಗೆ ಭೇಟಿ ನೀಡಿ ಪರಿಶೀಲನೆಗೆ ಮುಂದಾಗಿದೆ. ಸದ್ಯ ಫಿಲೋಮಿನ್ ಪೌಲ್ ಬಳಿ ಇದ್ದ ಲೈಸೆನ್ಸ್ ಪಿಸ್ತೂಲ್ ವಶಕ್ಕೆ ಪಡೆದಿರುವ ಪೊಲೀಸರು, ಎಫ್‍ಐಆರ್ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ. ಸುಂದರ್ ಪೌಲ್ ಉಪಟಳ ಇದೇ ಮೊದಲಲ್ಲ, ಈ ಹಿಂದೇ ಕಾಲೇಜು ಕ್ಯಾಂಪಸ್‍ನಲ್ಲಿ ಪಿಸ್ತೂಲ್ ತೋರಿಸಿ ಸುದ್ದಿಯಾಗಿದ್ದ. ಇದನ್ನೂ ಓದಿ : ಯಶ್ ಮುಂದಿನ ಸಿನಿಮಾ ನರ್ತನ್ ಜೊತೆ ಫಿಕ್ಸ್ : ಘೋಷಣೆಯೊಂದೇ ಬಾಕಿ

  • ರೌಡಿಶೀಟರ್ ಹತ್ಯೆಗೆ ಸ್ಕೆಚ್ – ಕಾರು ರಿವರ್ಸ್ ತೆಗೆದು ಜೆಸಿಬಿ ನಾರಾಯಣ ಬಚಾವ್

    ರೌಡಿಶೀಟರ್ ಹತ್ಯೆಗೆ ಸ್ಕೆಚ್ – ಕಾರು ರಿವರ್ಸ್ ತೆಗೆದು ಜೆಸಿಬಿ ನಾರಾಯಣ ಬಚಾವ್

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ರೌಡಿಶೀಟರ್ ಜೆಸಿಬಿ ನಾರಾಯಣ ಹತ್ಯೆಗೆ ಸ್ಕೆಚ್ ಹಾಕಲಾಗಿದ್ದು, ಭಾರೀ ಅಪಾಯದಿಂದ ಪಾರಾಗಿದ್ದಾರೆ.

    ಹಾಡಹಗಲೇ ರೌಡಿಶೀಟರ್ ಹತ್ಯೆಗೆ ದುಷ್ಕರ್ಮಿಗಳು ಸ್ಕೆಚ್ ಹಾಕಿ ವಿಫಲರಾಗಿದ್ದಾರೆ. ಜೆಸಿಬಿ ನಾರಾಯಣ ಕಾರು ಅಡ್ಡಗಟ್ಟಿ ಹತ್ಯೆಗೆ ಸಂಚು ರೂಪಿಸಿದ್ದಾರೆ. ಆದರೆ ರೌಡಿಶೀಟರ್, ದುಷ್ಕರ್ಮಿಗಳ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಇದನ್ನೂ ಓದಿ: ವೆಡ್ಡಿಂಗ್ ಕೇಕ್ ಬೀಳಿಸಿ ದಂಪತಿಗೆ ಶಾಕ್ ಕೊಟ್ಟ ಸಪ್ಲೈಯರ್

    ಹುಳಿಮಾವು ಠಾಣಾ ವ್ಯಾಪ್ತಿಯ ಡಿಎಲ್‍ಎಫ್ ರಸ್ತೆಯಲ್ಲಿ ರೌಡಿಶೀಟರ್ ಮೇಲೆ ದಾಳಿ ನಡೆಸಲಾಗಿದೆ. ದಾಳಿ ಆಗುತ್ತಿದ್ದಂತೆ ಕಾರು ರಿವರ್ಸ್ ತೆಗೆದುಕೊಂಡು ನಾರಾಯಣ ಬಚಾವ್ ಆಗಿದ್ದಾರೆ. ಇದನ್ನೂ ಓದಿ: ಸರ್ಕಾರ ಆರ್ಡರ್ ನೀಡದಿದ್ರೆ ಕೋವಿಶೀಲ್ಡ್ ಉತ್ಪಾದನೆ ಶೇ.50ರಷ್ಟು ಕಡಿತಕ್ಕೆ ನಿರ್ಧಾರ: ಆದಾರ್ ಪೂನಾವಾಲಾ

    ಘಟನೆ ಸಂಬಂಧ ಬೇಗೂರು ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ಇದನ್ನೂ ಓದಿ: 3ನೇ ಅಲೆ ತೀವ್ರತೆ ಹೆಚ್ಚಾಗಬಹುದು – ಐಎಂಎ ವಾರ್ನಿಂಗ್

  • ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಆನಂದ್ ಬರ್ಬರ ಕೊಲೆ

    ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಆನಂದ್ ಬರ್ಬರ ಕೊಲೆ

    ಬೆಂಗಳೂರು: ಪೀಣ್ಯದಲ್ಲಿ ರೌಡಿಶೀಟರೊಬ್ಬನ ಭೀಕರ ಹತ್ಯೆಯಾಗಿದೆ. ಜೆ.ಸಿ ಆನಂದ್ (36) ಕೊಲೆಯಾದ ರೌಡಿಶೀಟರ್.

    ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ನೆಲಗದರನಹಳ್ಳಿಯ ಶಿವಪುರ ಬಳಿ ಈತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಈ ಘಟನೆ ರಾತ್ರಿ 8 ಗಂಟೆ ಸಮಯದಲ್ಲಿ ನಡೆದಿದೆ.

    ಪೀಣ್ಯ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿದ್ದ ಕೊಲೆಯಾದ ಆನಂದ್, ಕಳೆದ ಮೂರು ದಿನಗಳಿಂದಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದ. ಇದೀಗ ಐದಾರು ಜನ ಬೈಕ್ ನಲ್ಲಿ ಬಂದು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಲೆಗೈದು ಎಸ್ಕೇಪ್ ಆಗಿದ್ದಾರೆ.

    ಸ್ಥಳಕ್ಕೆ ಪೀಣ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಭಾರತಕ್ಕೆ ಹೀನಾಯ ಸೋಲು – ಪಾಕಿಸ್ತಾನಕ್ಕೆ 10 ವಿಕೆಟ್ ಜಯ

  • ಪೊಲೀಸ್ ಠಾಣೆ ಬಳಿಯೇ ರೌಡಿಶೀಟರ್ ಬರ್ಬರ ಹತ್ಯೆ

    ಪೊಲೀಸ್ ಠಾಣೆ ಬಳಿಯೇ ರೌಡಿಶೀಟರ್ ಬರ್ಬರ ಹತ್ಯೆ

    – ಬೆಂಗಳೂರಿನಲ್ಲಿ ಮುಂದುವರಿದ ಸರಣಿ ರೌಡಿಶೀಟರ್ ಗಳ ಕೊಲೆ

    ಬೆಂಗಳೂರು: ನಗರದ ಬಾಣಸವಾಡಿ ಪೊಲೀಸ್ ಠಾಣೆಯ ಕೂಗಳತೆಯ ದೂರದಲ್ಲೇ ರೌಡಿಶೀಟರ್ ಹರೀಶ್ ನನ್ನ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದಾರೆ.

    ನಗರದ ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಶೀಟರ್ ಗಳನ್ನು ಕರೆಸಿ ವಾರ್ನ್ ಪೊಲೀಸರು ವಾರ್ನ್ ಮಾಡುತ್ತಿದ್ದಾರೆ. ಇಂದು ಹರೀಶ್ ನನ್ನು ಬಾಣಸವಾಡಿ ಪೊಲೀಸ್ ಠಾಣೆಗೆ ಕರೆಸಿ, ಯಾವುದೇ ರೌಡಿ ಚಟುವಟಿಕೆ ಗಳಲ್ಲಿ ಭಾಗಿಯಾದಂತೆ ವಾರ್ನ್ ಮಾಡಿ ಹೊರ ಕಳುಹಿಸಿದ್ರು. ಇದೇ ಟೈಂ ಗೆ ಕಾದಿದ್ದ ರೌಡಿಗಳ ಗುಂಪೊಂದು, ಕಾರಿನಲ್ಲಿ ಬಂದು ಏಕಾಏಕಿ ಪೊಲೀಸ್ ಠಾಣಾ ಪಕ್ಕದಲ್ಲೇ ಹರೀಶ್ ಅಟ್ಯಾಕ್ ಮಾಡಿದ್ದಾರೆ.

    ನೋಡು ನೋಡುತ್ತಲೇ ಹರೀಶ್ ನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ, ತಲೆಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾರೆ. ಸದ್ಯ ಬಾಣಸವಾಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ. ಇನ್ನೂ ಬೆಂಗಳೂರಿನಲ್ಲಿ ರೌಡಿ ಚಟುವಟಿಕೆಗಳು ಕಡಿಮೆ ಆಗದೆ ಹೆಚ್ಚಾಗ್ತಿರೋದು ಪೊಲೀಸರಿಗೆ ತಲೆನೋವಾಗಿ ಪರಿಣಾಮಿಸಿದೆ. ಇದನ್ನೂ ಓದಿ: ನೆಲಮಂಗಲದಲ್ಲಿ ರೌಡಿಶೀಟರ್‌ಗಳಿಗೆ ಖಡಕ್ ವಾರ್ನಿಂಗ್

    ಕೊರೊನಾ ಒಂದು ಹಂತಕ್ಕೆ ಮುಗಿದು ಲಾಕ್‍ಡೌನ್ ತೆರವಾಗಿದ್ದೆ ಬಂತು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರೌಡಿಶೀಟರ್ ಗಳ ಬರ್ಬರ ಕೊಲೆಗಳು, ನಟೋರಿಯಸ್ ರೌಡಿಶೀಟರ್ ಗಳ ನಡುವಿನ ಗ್ಯಾಂಗ್ ವಾರ್ ಗಳು ಪೊಲೀಸರ ಕಂಟ್ರೋಲ್ ಗೆ ಸಿಕ್ತಿಲ್ಲ. ಪೊಲೀಸರು ರೌಡಿ ಚಟುವಟಿಕೆಗಳನ್ನು ಕಂಟ್ರೋಲ್ ಮಾಡೋಕೆ ಇನ್ನಿಲ್ಲದ ಹರಸಾಹಸ ಪಡ್ತಿದ್ದಾರೆ. ಆದ್ರೆ ರೌಡಿಗಳು ಮಾತ್ರ ಇದ್ಯಾವುದಕ್ಕೂ ಕೇರ್ ಮಾಡ್ತಿಲ್ಲ. ಎಂದಿನಂತೆ ಹಾಡುಹಗಲೇ ಯಾವುದೇ ಭಯವಿಲ್ಲದೇ ಅಟ್ಟಾಡಿಸಿ ಬರ್ಬರವಾಗಿ ಕೊಲೆ ಮಾಡ್ತಿದ್ದಾರೆ. ಇದನ್ನೂ ಓದಿ: ನಟೋರಿಯಸ್ ರೌಡಿಶೀಟರ್‌ಗಳ ಮನೆ ಮೇಲೆ ಸಿಸಿಬಿ ದಾಳಿ

  • ಬೆಂಗಳೂರಿನಲ್ಲಿ ಮತ್ತೆ ಗುಂಡಿನ ಸದ್ದು- ಕೊಲೆ ಆರೋಪಿಯ ಕಾಲಿಗೆ ಗುಂಡೇಟು

    ಬೆಂಗಳೂರಿನಲ್ಲಿ ಮತ್ತೆ ಗುಂಡಿನ ಸದ್ದು- ಕೊಲೆ ಆರೋಪಿಯ ಕಾಲಿಗೆ ಗುಂಡೇಟು

    ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಮತ್ತೆ ಗುಂಡಿನ ಸದ್ದು ಮೊಳಗಿದ್ದು ರೌಡಿಶೀಟರ್‌ ಮೇಲೆ ಶೂಟೌಟ್‌ ಮಾಡಿ  ಬಂಧಿಸಲಾಗಿದೆ. ನಗರದ ಜಿಕೆಡಬ್ಲ್ಯೂ ಲೇಔಟ್ ನಲ್ಲಿ ರೌಡಿ ಶೀಟರ್ ಸಂತೋಷ್ ಅಲಿಯಾಸ್ ಇಲಿಕುಟ್ಟಿ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿ ಬಂಧಿಸಿದ್ದಾರೆ.

    ರಾಜಗೋಪಾಲನಗರ ಠಾಣಾ ವ್ಯಾಪ್ತಿಯಲ್ಲಿ ಕಳೆದ ತಿಂಗಳು ನಡೆದಿದ್ದ ಶ್ರೀನಿವಾಸ್ ಕೊಲೆ ಪ್ರಕರಣದಲ್ಲಿ ಆರೋಪಿ ಶೀನಿವಾಸ್‌ ಪೊಲೀಸರಿಗೆ ಬೇಕಾಗಿದ್ದ. ಶ್ರೀನಿವಾಸ್ ಕತ್ತಿಗೆ ಮನಬಂದಂತೆ ಲಾಂಗ್‌ ಬೀಸಿ ಸಂತೋಷ್‌ ಕೊಲೆ ಮಾಡಿದ್ದ.

    ಈ ಪ್ರಕರಣ ಸಂಬಂಧ ಬಂಧನಕ್ಕೆ ತೆರಳಿದಾಗ ಪೊಲೀಸ್ ಸಿಬ್ಬಂದಿ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ ಸಂತೋಷ್‌ ಪರಾರಿಯಾಗಲು ಯತ್ನಿಸಿದ್ದ. ಈ ವೇಳೆ ಆತ್ಮ ರಕ್ಷಣೆಗಾಗಿ ರಾಜಗೋಪಾಲ ನಗರ ಪಿಎಸ್ಐ ಹನುಮಂತ ಹಡಿಮನಿ ಅವರು ಕಾಲಿಗೆ ಗುಂಡು ಹಾರಿಸಿ ಶ್ರೀನಿವಾಸ್‌ನನ್ನು ಬಂಧಿಸಿದ್ದಾರೆ.

    ಹೆಡ್ ಕಾನ್ಸ್ ಟೇಬಲ್‌ ಗಾಯಗೊಂಡಿದ್ದು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ. 10 ಪ್ರಕರಣದಲ್ಲಿ ಆರೋಪಿ ಶ್ರೀನಿವಾಸ್ ಪೊಲೀಸರಿಗೆ‌ ಬೇಕಾಗಿದ್ದ.