Tag: RR Nagar Police

  • ನಟ ದರ್ಶನ್‌ ಗನ್‌ ಲೈಸೆನ್ಸ್‌ ತಾತ್ಕಾಲಿಕ ಅಮಾನತು

    ನಟ ದರ್ಶನ್‌ ಗನ್‌ ಲೈಸೆನ್ಸ್‌ ತಾತ್ಕಾಲಿಕ ಅಮಾನತು

    ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Case) ಆರೋಪಿಯಾಗಿರುವ ನಟ ದರ್ಶನ್ (Darshan) ಬಳಿಯಿರುವ ಗನ್ ಲೈಸೆನ್ಸ್ ತಾತ್ಕಾಲಿಕವಾಗಿ ಅಮಾನತ್ತು ಮಾಡಲಾಗಿದೆ ಎಂದು ಪೊಲೀಸ್‌ ಕಮಿಷನರ್‌ ದಯಾನಂದ್‌ ತಿಳಿಸಿದ್ದಾರೆ.

    ಮೂರು ವರ್ಷಕ್ಕಿಂತ ಮೇಲ್ಪಟ್ಟ ಶಿಕ್ಷೆ ವಿಧಿಸಬಹುದಾದ ಕೇಸ್‍ನಲ್ಲಿ ಆರೋಪಿಯಾಗಿರುವ ವ್ಯಕ್ತಿಯ ಬಳಿ ಲೈಸೆನ್ಸ್ ಇರುವ ಗನ್ ಇದ್ದರೆ ಅದನ್ನು ಕೂಡಲೇ ವಶಕ್ಕೆ ಪಡೆಯಲಾಗುತ್ತದೆ. ಅಲ್ಲದೇ ಆ ವ್ಯಕ್ತಿಯ ಲೈಸೆನ್ಸ್ ರದ್ದು ಮಾಡಬಹುದಾಗಿದೆ. ರೇಣುಕಾಸ್ವಾಮಿ ಕೊಲೆ ಕೇಸ್‍ನಲ್ಲಿ ಲೈಸೆನ್ಸ್ ಗನ್ ಬಳಕೆ ಮಾಡಿರೊದು ಎಲ್ಲಿಯೂ ಕಂಡುಬರದ ಕಾರಣ ತಾತ್ಕಾಲಿಕವಾಗಿ ಅಂದರೆ ಕೇಸ್ ಮುಗಿಯುವತನಕ ಅಮಾನತ್ತಿನಲ್ಲಿಡಲು ಪೊಲೀಸರು ನಿರ್ಧರಿಸಿದ್ದಾರೆ.

    ನಟ ದರ್ಶನ್ ಗನ್ ಲೈಸೆನ್ಸ್ ರದ್ದು ಮಾಡಲು ಈಗಾಗಲೇ ಪೊಲೀಸರು ನೋಟಿಸ್ ನೀಡಿದ್ದರು. ನೋಟಿಸ್‍ನಲ್ಲಿ, ನೀವು ಕೊಲೆ ಪ್ರಕರಣದ ಆರೋಪಿಯಾಗಿದ್ದೀರಿ. ಜಾಮೀನಿನ ಮೇಲೆ ಹೊರಗಿರುವುದರಿಂದ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಗಳಿವೆ. ಗನ್ ಇರೋದ್ರಿಂದ ಸಾಕ್ಷಿಗಳನ್ನು ಬೆದರಿಸುವ ಬಗ್ಗೆ ಅನುಮಾನ ಇದೆ. ಆದ್ದರಿಂದ ನಿಮ್ಮ ಲೈಸೆನ್ಸ್ ರದ್ದು ಮಾಡಬೇಕಿದೆ. ಈ ಬಗ್ಗೆ ಒಂದು ವಾರದೊಳಗೆ ಉತ್ತರಿಸಬೇಕು. ನೋಟಿಸ್‍ಗೆ ಉತ್ತರ ನೀಡಿದ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದರು.

    ಪೊಲೀಸರ ನೋಟಿಸ್‍ಗೆ ಉತ್ತರಿಸಿದ್ದ ದರ್ಶನ್, ನಾನು ಸೆಲೆಬ್ರಿಟಿ ಆಗಿರುವುದರಿಂದ ಆತ್ಮರಕ್ಷಣೆಗೆ ಗನ್ ಅವಶ್ಯಕತೆ ಇದೆ. ನನ್ನ ಮೇಲಿರೋ ಕೇಸ್‍ನ ಸಮಯದಲ್ಲಿ ಆ ಗನ್ ಬಳಕೆ ಮಾಡಿಲ್ಲ. ಯಾವುದೇ ಕಾರಣಕ್ಕೂ ಗನ್ ದುರ್ಬಳಕೆ ಮಾಡಿಕೊಳ್ಳಲ್ಲ. ಹಾಗಾಗಿ ಗನ್ ಲೈಸೆನ್ಸ್ ಮುಂದುವರೆಸುವಂತೆ ಮನವಿ ಮಾಡಿಕೊಂಡಿದ್ದರು. ಆದರೆ ಇದೀಗ ಗನ್‌ ಪರವಾನಗಿಯನ್ನು ತಾತ್ಕಾಲಿಕವಾಗಿ ಅಮಾನತಿನಲ್ಲಿಡಲಾಗಿದೆ.

  • ಮಂಡ್ಯದಲ್ಲಿ ಮಹಿಳೆಗೆ 33 ಲಕ್ಷ ಪಂಗನಾಮ – ಐಶ್ವರ್ಯಗೌಡ ವಿರುದ್ಧ ಮತ್ತೊಂದು ಎಫ್‌ಐಆರ್‌

    ಮಂಡ್ಯದಲ್ಲಿ ಮಹಿಳೆಗೆ 33 ಲಕ್ಷ ಪಂಗನಾಮ – ಐಶ್ವರ್ಯಗೌಡ ವಿರುದ್ಧ ಮತ್ತೊಂದು ಎಫ್‌ಐಆರ್‌

    ಮಂಡ್ಯ: ವಂಚಕಿ ಐಶ್ವರ್ಯಗೌಡ (Aishwarya Gowda) ವಿರುದ್ಧ ಮೇಲಿಂದ ಮೇಲೆ ಎಫ್‌ಐಆರ್‌ ದಾಖಲಾಗುತ್ತಲೇ ಇವೆ. 2 ದಿನಗಳ ಹಿಂದೆಯಷ್ಟೇ ಬೆಂಗಳೂರಿನ ಆರ್‌.ಆರ್‌ ನಗರ ಪೊಲೀಸ್‌ ಠಾಣೆಯಲ್ಲಿ ವಂಚನೆ ಪ್ರಕರಣದಲ್ಲಿ ಐಶ್ವರ್ಯ ವಿರುದ್ಧ ಎಫ್‌ಐಆರ್‌ ದಾಖಲಾಗಿತ್ತು. ಇದೀಗ ಮಂಡ್ಯದಲ್ಲಿ (Mandya) ಮತ್ತೊಂದು ಎಫ್‌ಐಆರ್‌ (FIR) ದಾಖಲಾಗಿದೆ.

    ಇಲ್ಲಿನ ಚಾಮುಂಡೇಶ್ವರಿನಗರದ ನಿವಾಸಿ ಭಾಗ್ಯಮ್ಮ ಎಂಬುವವರು ತಮಗೂ ವಂಚನೆ ಮಾಡಿರುವುದಾಗಿ ಮಂಡ್ಯ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಮೇರೆಗೆ ಐಶ್ವರ್ಯಗೌಡ ವಿರುದ್ಧ ಐಪಿಸಿ ಸೆಕ್ಷನ್ 406, 420, 417, 120ಬಿ, 540, 34ರ ಅಡಿ ಕೇಸ್ ದಾಖಲಾಗಿದೆ. ನವ್ಯಶ್ರೀ ಅಲಿಯಾಸ್ ಐಶ್ವರ್ಯಗೌಡ, ಪತಿ ಹರೀಶ್, ಸಹೋದರ ಮಂಜುನಾಥ್ ಹಾಗೂ ಯಶವಂತ್ ಎಂಬುವರ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: 1 ಕೋಟಿಗೂ ಅಧಿಕ ವಂಚನೆ – ಐಶ್ವರ್ಯಗೌಡ, ಪತಿ ಸೇರಿ 7 ಮಂದಿ ವಿರುದ್ಧ ಕೇಸ್‌ ದಾಖಲು

    ದೂರಿನಲ್ಲಿ ಏನಿದೆ?
    2017ರ ಜನವರಿಯಿಂದ ಜೂನ್‌ ತಿಂಗಳ ಅವಧಿಯಲ್ಲಿ ರಿಯಲ್ ಎಸ್ಟೇಟ್ ಹಾಗೂ ಚೀಟಿ ವ್ಯವಹಾರ ಮಾಡುವುದಾಗಿ ಐಶ್ವರ್ಯ ನಂಬಿಸಿದ್ದಾಳೆ. ಒಟ್ಟು 33 ಲಕ್ಷ ರೂ. ನಗದು ಹಾಗೂ 366 ಗ್ರಾಂ ಚಿನ್ನದ ಒಡವೆಗಳನ್ನ ಪಡೆದುಕೊಂಡಿದ್ದಾಳೆ. ಇದು ತನ್ನ ಮೃತ ಗಂಡನ ನಿವೃತ್ತಿಯ ಹಣ ಅಂತ ಭಾಗ್ಯಮ್ಮ ಹೇಳಿಕೊಂಡಿದ್ದಾಳೆ. 1 ಲಕ್ಷಕ್ಕೆ 10 ಪರ್ಸೆಂಟ್‌ ಬಡ್ಡಿ ಹಣ ನೀಡುವುದಾಗಿ ಆಮಿಷ ಒಡ್ಡಿ ಹಣ ಪಡೆದ ಐಶ್ವರ್ಯ ವಂಚನೆ ಎಸಗಿದ್ದಾಳೆ ಎಂದು ದೂರಿನಲ್ಲಿ ಭಾಗ್ಯಮ್ಮ ತಿಳಿಸಿದ್ದಾರೆ. ಇದನ್ನೂ ಓದಿ: ರಸ್ತೆಯಲ್ಲಿ ಸಂಚರಿಸೋದಕ್ಕೂ ಸುಂಕ ಕಟ್ಟಬೇಕೆ? – ಟ್ರಾಫಿಕ್‌ ನಿಯಂತ್ರಣಕ್ಕೆ ಹೊಸ ಸೂತ್ರ – ಏನಿದು ದೆಹಲಿ ಸರ್ಕಾರದ ಪ್ಲ್ಯಾನ್‌?

    ಈಗಾಗಲೇ ಮಂಡ್ಯದ ಪೂರ್ವ ಪೊಲೀಸ್ ಠಾಣೆಯಲ್ಲಿ ರವಿಕುಮಾರ್ ಹಾಗೂ ಪೂರ್ಣಿಮಾ ಎಂಬುವವರು ನೀಡಿದ ದೂರಿನ ಮೇರೆಗೆ ಕೇಸ್‌ ದಾಖಲಾಗಿದೆ. 55 ಲಕ್ಷ ನಗದು ಹಾಗೂ ಚಿನ್ನಾಭರಣ ಪಡೆದು ವಂಚನೆ ಮಾಡಿರುವುದಾಗಿ ಕೇಸ್ ದಾಖಲಾಗಿದೆ.

    ಈ ಮಧ್ಯೆ ಸೋಮವಾರ ಪೊಲೀಸರು ನೋಟೀಸ್ ನೀಡಿದ್ರೂ ವಂಚಕಿ ಐಶ್ವರ್ಯಗೌಡ ವಿಚಾರಣೆಗೆ ಹಾಜರಾಗಿಲ್ಲ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಬೆಂಬಲ ತೊಗರಿ ಖರೀದಿ ಶುರು – ಜಿಲ್ಲೆಯಾದ್ಯಂತ 177 ಖರೀದಿ ಕೇಂದ್ರ ಸ್ಥಾಪನೆ

  • 1 ಕೋಟಿಗೂ ಅಧಿಕ ವಂಚನೆ – ಐಶ್ವರ್ಯಗೌಡ, ಪತಿ ಸೇರಿ 7 ಮಂದಿ ವಿರುದ್ಧ ಕೇಸ್‌ ದಾಖಲು

    1 ಕೋಟಿಗೂ ಅಧಿಕ ವಂಚನೆ – ಐಶ್ವರ್ಯಗೌಡ, ಪತಿ ಸೇರಿ 7 ಮಂದಿ ವಿರುದ್ಧ ಕೇಸ್‌ ದಾಖಲು

    ಬೆಂಗಳೂರು: ಡಿ.ಕೆ ಸುರೇಶ್ ( DK Suresh) ತಂಗಿ ಹೆಸರೇಳಿ 1 ಕೋಟಿ ರೂ.ಗಿಂತಲೂ ಅಧಿಕ ಹಣ ವಂಚನೆ ಮಾಡಿರುವ ಆರೋಪದ ಮೇಲೆ ಐಶ್ವರ್ಯಗೌಡ (Aishwarya Gowda) ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.

    ಮೂಲತಃ ವೈದ್ಯರಾದ ಡಾ.ದಯಾನಂದ ಲಿಂಗೇಗೌಡ ಅವರಿಗೆ ವಂಚನೆ ಮಾಡಿರುವುದಾಗಿ ಆರ್‌.ಆರ್‌ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಐಶ್ವರ್ಯಗೌಡ, ಪತಿ ಹರೀಶ್‌ ಸೇರಿ 7 ಜನರ ವಿರುದ್ಧ ಕೇಸ್‌ ದಾಖಲಾಗಿದೆ. ಇದನ್ನೂ ಓದು: ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಬರೀ ಊಹಾಪೋಹ, ಯಾವುದೇ ಚರ್ಚೆ ನಡೆದಿಲ್ಲ – ಶರಣಪ್ರಕಾಶ್ ಪಾಟೀಲ್

    ದೂರಿನಲ್ಲಿ ಏನಿದೆ?
    ಸ್ನೇಹಿತ ಟಿ.ಪಿ ರಮೇಶ್‌ ಮೂಲಕ ಐಶ್ವರ್ಯಗೌಡ ಪರಿಚಯವಾಗಿದ್ದರು, ಈ ವೇಳೆ ತಾನು ಡಿ.ಕೆ ಸುರೇಶ್‌ ತಂಗಿ ಅಂತ ಹೇಳಿ ವಂಚನೆ ಮಾಡಿದ್ದಾರೆ ಎಂಬುದಾಗಿ ಆರ್.ಆರ್‌ ನಗರ ಪೊಲೀಸ್‌ ಠಾಣೆಗೆ ದಯಾನಂದ ಲಿಂಗೇಗೌಡ ದೂರು ನೀಡಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ರಾಜ್ಯದಲ್ಲಿ ಅತಿ ಹೆಚ್ಚು ಭ್ರಷ್ಟಾಚಾರ ಮಾಡಿದ ಸಿಎಂ – ಜನಾರ್ದನ ರೆಡ್ಡಿ ಲೇವಡಿ

    ಹೊಸದಾಗಿ ಕಂಪನಿ ತೆರೆದಿದ್ದೇವೆ. ಅದಕ್ಕೆ ಡಿ.ಕೆ ಸುರೇಶ್‌ ಅವರೇ ಪಾಲುದಾರರು ಅಂತ ನಂಬಿಸಿದ್ದಾರೆ. ನಮ್ಮ ಕಂಪನಿಯಲ್ಲಿ ಠೇವಣಿ ಹೂಡಿದ್ರೆ ಒಳ್ಳೆ ಲಾಭ ಬರುತ್ತೆ. ಜೊತೆಗೆ ಸಿನಿಮಾ, ಸಿರೀಯಲ್‌ಗಳಿಗೂ ಹಣ ಹೂಡಿಕೆ ಮಾಡ್ತೀವಿ ಅಂತ ಆಮಿಷ ಒಡ್ಡಿದ್ದಾರೆ. ತಾನು ಡಿ.ಕೆ ಸುರೇಶ್‌ ತಂಗಿ ಅಂತ ಹೇಳಿ, 1 ಕೋಟಿಗೂ ಅಧಿಕ ಹಣ ವಂಚನೆ ಮಾಡಿದ್ದಾರೆ. ಹಣ ಕೇಳಲು ಹೋದಾಗಲೆಲ್ಲ ಬೆದರಿಕೆ ಹಾಕುತ್ತಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

  • ಸ್ನೇಹಿತ ಅಂತ ನಂಬಿ ಮೊಬೈಲ್‌ ಕೊಟ್ಟ ಮಹಿಳೆ – ಆಕೆಯ ಬೆತ್ತಲೆ ವೀಡಿಯೋ ರೆಕಾರ್ಡ್‌ ಮಾಡಿ ಬ್ಲ್ಯಾಕ್‌ಮೇಲ್‌

    ಸ್ನೇಹಿತ ಅಂತ ನಂಬಿ ಮೊಬೈಲ್‌ ಕೊಟ್ಟ ಮಹಿಳೆ – ಆಕೆಯ ಬೆತ್ತಲೆ ವೀಡಿಯೋ ರೆಕಾರ್ಡ್‌ ಮಾಡಿ ಬ್ಲ್ಯಾಕ್‌ಮೇಲ್‌

    ಬೆಂಗಳೂರು: ಮಹಿಳೆಯೊಬ್ಬಳು ತನ್ನ ಸ್ನೇಹಿತನ ಮೇಲೆ ನಂಬಿಕೆಯಿಟ್ಟು ಮೊಬೈಲ್‌ ಕೊಟ್ಟಿದ್ದಕ್ಕೆ, ಆಕೆಯ ಮೊಬೈಲ್‌ನಿಂದಲೇ ಬೆತ್ತಲೆ ವೀಡಿಯೋ ರೆಕಾರ್ಡ್‌ ಮಾಡಿ, ಬ್ಲ್ಯಾಕ್‌ ಮೇಲ್‌ ಮಾಡಿರುವ ಘಟನೆ ಬೆಂಗಳೂರಿನ (Bengaluru) ಆರ್.ಆರ್ ನಗರ ಪೊಲೀಸ್ ಠಾಣಾ (RR Nagar Police Station) ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿ ಸಂಜಯ್‌ ಎಂಬಾತನ ವಿರುದ್ಧ ಆರ್‌.ಆರ್‌ ನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

    ಖತರ್ನಾಕ್‌ ಕೃತ್ಯ ಎಸಗಿದ್ದು ಹೇಗೆ?
    ಪಟ್ಟಗೇರೆಪಾಳ್ಯದಲ್ಲಿರುವ ಖಾಸಗಿ ಕಂಪನಿಯಲ್ಲಿ (Private Company) ಕೆಲಸ ಮಾಡ್ತಿದ್ದ ಸಂತ್ರಸ್ತ ಮಹಿಳೆಯು ತನ್ನ ಸಹೋದ್ಯೋಗಿ ಮತ್ತು ಆರೋಪಿ ಸಂಜಯ್ ಮೂವರು ಆಗಾಗ್ಗೆ ಔಟಿಂಗ್ ಹೋಗುತ್ತಿದ್ದರು. ಈ ವೇಳೆ ಸಂಜಯ್ ಜೊತೆಗೆ ಸ್ವಲ್ಪ ಸಲುಗೆಯೂ ಬೆಳೆದಿತ್ತು. ಆಗ ಮಹಿಳೆ ತನ್ನ ಮೊಬೈಲನ್ನ ಸಂಜಯ್‌ಗೆ ಕೊಟ್ಟಿದ್ದಾಳೆ. ಇದನ್ನೇ ಬಂಡವಾಳ ಮಾಡಿಕೊಂಡ ಕಿರಾತಕ ಸಂಜಯ್ ಆಕೆಗೆ ಗೊತ್ತಾಗದಂತೆ ಮೊಬೈಲ್ ನಲ್ಲಿ ಆ್ಯಪ್‌ವೊಂದನ್ನ (Mobile App) ಡೌನ್‌ಲೋಡ್ ಮಾಡಿಟ್ಟಿದ್ದಾನೆ. ಇದನ್ನೂ ಓದಿ: ದೀಪಾವಳಿ ಬಳಿಕ ಜೋರಾಗಲಿದೆ ಶಿಗ್ಗಾಂವಿ ಉಪಸಂಗ್ರಾಮ – ನ.5ಕ್ಕೆ ಭರತ್ ಬೊಮ್ಮಾಯಿ ಪರ ವಿಜಯೇಂದ್ರ ಪ್ರಚಾರ

    ನಂತರ ಆ್ಯಪ್ ಮೂಲಕ ಮಹಿಳೆಯ ಫೋನನ್ನು ತನ್ನ ಮೊಬೈಲ್‌ನಿಂದ ಆಪರೇಟ್ ಮಾಡೋಕೆ ಶುರು ಮಾಡಿದ್ದಾನೆ. ಹೀಗೆ ಒಂದು ದಿನ ಮಹಿಳೆ ಸ್ನಾನಕ್ಕೆ ಮೊಬೈಲ್ ತೆಗೆದುಕೊಂಡು ಹೋದಾಗ, ಈತ ತನ್ನ ಮೊಬೈಲ್ ಬಳಸಿ ಆಕೆಯ ಮೊಬೈಲ್‌ನಲ್ಲಿ ಬೆತ್ತಲೆ ವಿಡಿಯೋ ರೆಕಾರ್ಡ್‌ ಮಾಡಿದ್ದಾನೆ. ಆ ಬೆತ್ತಲೆ ವಿಡಿಯೋ ತನ್ನ ಮೊಬೈಲ್ ನಲ್ಲಿ ಇಟ್ಟುಕೊಂಡು ಬ್ಲ್ಯಾಕ್‌ ಮೇಲ್‌ ಮಾಡೋಕೆ ಶುರು ಮಾಡಿದ್ದಾನೆ. ಇದನ್ನೂ ಓದಿ:  ಕಾರು ಮಾರಾಟ ಭಾರೀ ಕುಸಿತ – 7.90 ಲಕ್ಷ ವಾಹನಗಳು ಸಿದ್ದವಾಗಿದ್ದರೂ ಖರೀದಿಸುತ್ತಿಲ್ಲ ಜನ

    ಮಹಿಳೆಗೆ ವೀಡಿಯೋ ಕಳುಹಿಸಿ ಆ ವೀಡಿಯೋ ನಿನ್ನ ಕಂಪನಿಯ ಗೆಳೆಯ ನನಗೆ ಕಳುಹಿಸಿದ್ದು ಅಂತ ಕಥೆ ಕಟ್ಟಿದ್ದಾನೆ. ಇದರಿಂದ ಅನುಮಾನಗೊಂಡು ಸಂಜಯ್‌ ಮೊಬೈಲ್‌ ಪರಿಶೀಲಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ. ಸದ್ಯ ಯುವಕನ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಇದನ್ನೂ ಓದಿ: ರಾಜ್ಯದಲ್ಲಿ ನಿಲ್ಲದ ವಕ್ಫ್ ಅವಾಂತರ – ಹಿಂದೂ ಅಷ್ಟೇ ಅಲ್ಲ, ಮುಸ್ಲಿಮರ ಪಹಣಿಯಲ್ಲೂ ವಕ್ಫ್!

  • ಪತಿಯನ್ನ ಸ್ನಾನ ಮಾಡುವಂತೆ ಬಾತ್‌ರೂಮ್‌ಗೆ ಕಳುಹಿಸಿ, ಸ್ನೇಹಿತನೊಂದಿಗೆ ಪತ್ನಿ ಎಸ್ಕೇಪ್

    ಪತಿಯನ್ನ ಸ್ನಾನ ಮಾಡುವಂತೆ ಬಾತ್‌ರೂಮ್‌ಗೆ ಕಳುಹಿಸಿ, ಸ್ನೇಹಿತನೊಂದಿಗೆ ಪತ್ನಿ ಎಸ್ಕೇಪ್

    ಬೆಂಗಳೂರು: ಎರಡು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ (Marriage) ಪತ್ನಿ ಗಂಡನಿಗೆ ಕೈಕೊಟ್ಟು ಎಸ್ಕೇಪ್ ಆಗಿದ್ದಾಳೆ ಅಂತಾ ಪತಿ ಪೊಲೀಸ್ ಠಾಣೆಗೆ (RR Nagar Police Station) ದೂರು ನೀಡಿದ್ಧಾನೆ.

    ಬೆಂಗಳೂರಿನ (Bengaluru) ರಾಜರಾಜೇಶ್ವರಿನಗರದ ನಿವಾಸಿ ರಮೇಶ್ ಕಳೆದ ಎರಡು ತಿಂಗಳ ಹಿಂದೆ ಮದುವೆಯಾಗಿದ್ದರು. ಸಂಸಾರದಲ್ಲಿ ಎಲ್ಲವೂ ಚೆನ್ನಾಗಿಯೇ ಇತ್ತು. ಇದನ್ನೂ ಓದಿ: ಘರ್‌ ವಾಪ್ಸಿ ಅಂತ ಮಾಡುವುದಕ್ಕೆ ಹೋದರೆ ಅರ್ಧ ಬಿಜೆಪಿ, ಅರ್ಧ ಜೆಡಿಎಸ್‌ ಖಾಲಿಯಾಗುತ್ತೆ: ಪ್ರಿಯಾಂಕ್‌ ಖರ್ಗೆ

    ಪತಿ ರಮೇಶ್ ಜೊತೆಗೆ ಚೆನ್ನಾಗಿಯೇ ಇದ್ದ ಪತ್ನಿ, ಇದೇ ಆಗಸ್ಟ್ 12ರಂದು ಬೆಳಗ್ಗೆ ಪತಿ ರಮೇಶ್‌ನನ್ನ ಸ್ನಾನ ಮಾಡುವಂತೆ ಬಾತ್ ರೂಮ್‌ಗೆ ಕಳುಹಿಸಿದ್ದಾಳೆ. ಪತಿ ಒಳಗೆ ಹೋದ ತಕ್ಷಣ ಪತ್ನಿ ಹೊರಗಿನಿಂದ ಬಾತ್‌ರೂಮ್ ಬಾಗಿಲು ಹಾಕಿಕೊಂಡು ಮನೆಯ ಬಾಗಿಲನ್ನೂ ಲಾಕ್ ಮಾಡ್ಕೊಂಡು ಎಸ್ಕೇಪ್ ಆಗಿದ್ದಾಳೆ.

    ನಂತರ ಪತಿ ರಮೇಶ್ ಆರ್.ಆರ್ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪತ್ನಿ ತನ್ನ ಸ್ನೇಹಿತ ಕಾರ್ತಿಕ್ ಜೊತೆಗೆ ಹೋಗಿದ್ದಾಳೆ ಅಂತಾ ದೂರಿನಲ್ಲಿ ತಿಳಿಸಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ನಾಪತ್ತೆಯಾಗಿರುವ ರಮೇಶ್ ಪತ್ನಿಗಾಗಿ ಹುಡುಕಾಟ ನಡೆಸಿದ್ದಾರೆ. ಇದನ್ನೂ ಓದಿ: 7 ಶಿಶುಗಳನ್ನ ಹತ್ಯೆ ಮಾಡಿದ್ದ ಬ್ರಿಟಿಷ್‌ ನರ್ಸ್‌ – ಭಾರತೀಯ ಮೂಲದ ವೈದ್ಯನಿಂದ ಸಿಕ್ಕಿಬಿದ್ದಳು ಹಂತಕಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಿಷವುಣಿಸಿ 18 ಶ್ವಾನಗಳ ಹತ್ಯೆ – ಬೆಂಗ್ಳೂರಲ್ಲೊಂದು ಅಮಾನವೀಯ ಘಟನೆ

    ವಿಷವುಣಿಸಿ 18 ಶ್ವಾನಗಳ ಹತ್ಯೆ – ಬೆಂಗ್ಳೂರಲ್ಲೊಂದು ಅಮಾನವೀಯ ಘಟನೆ

    ಬೆಂಗಳೂರು: ಸಾಕು ಪ್ರಾಣಿಗಳ ವಿಚಾರಕ್ಕೆ ಅಕ್ಕಪಕ್ಕದ ಮನೆಯವರ ನಡುವೆ ಕಿತ್ತಾಟ ನಡೆಯುವುದು ಹೊಸತೇನಲ್ಲ. ನಾಯಿ ಬೊಗಳುತ್ತಿದೆ ಎಂದೋ, ಕಚ್ಚಿದೆ ಎಂದೋ ದೊಡ್ಡ ಮಾರಾಮಾರಿಗಳೇ ನಡೆದ ನಿದರ್ಶನಗಳೇ ಇವೆ. ಈ ನಡುವೆ ಮನುಷ್ಯನ ಅಟ್ಟಹಾಸ ಮೀತಿ ಮೀರುತ್ತಿದ್ದು ಅಮಾನವೀಯ ಘಟನೆಗಳು ಹೆಚ್ಚಾಗ್ತಿವೆ. ಬೆಂಗಳೂರಿನಲ್ಲಿ (Bengaluru) ನಡೆದಿರುವ ಘಟನೆ ಇದಕ್ಕೆ ತಾಜಾ ಉದಾಹರಣೆಯಾಗಿದೆ.

    18 ಶ್ವಾಗಳಿಗೆ (Dogs) ವಿಷ ಉಣಿಸಿ ಹತ್ಯೆ ಮಾಡಿರುವ ಘಟನೆ ಆರ್‌ಆರ್ ನಗರದ ಹೊಸಕೆರೆಹಳ್ಳಿ ವಾರ್ಡ್ ಬೌಂಡ್ರಿಯಲ್ಲಿ ನಡೆದಿದೆ. ಇದನ್ನೂ ಓದಿ: 10,000 ಪೊಲೀಸರು.. ಆ್ಯಂಟಿ ಡ್ರೋನ್‌ ಸಿಸ್ಟಮ್‌, ಅತ್ಯಾಧುನಿಕ ಕ್ಯಾಮೆರಾ – ಸ್ವಾತಂತ್ರ್ಯೋತ್ಸವಕ್ಕೆ ಕೆಂಪು ಕೋಟೆಯಲ್ಲಿ ಬಿಗಿ ಭದ್ರತೆ

    ನಗರದಲ್ಲಿ ಅನಿಮಲ್ ಆಕ್ಟಿವಿಸ್ಟ್ ತಂಡ (Animal Activist Team) ಮೃತ ಶ್ವಾನಗಳ ದೇಹ ಪತ್ತೆಗೆ ಶೋಧ ಆರಂಭಿಸಿದೆ. ಇದುವರೆಗೆ 7 ಶ್ವಾನಗಳ ಕಳೇಬರ ಪತ್ತೆಯಾಗಿದ್ದು, ಅದರಲ್ಲಿ 5 ಕಳೇಬರ ಸಂಪೂರ್ಣ ಕೊಳೆತುಹೋಗಿದೆ. ನಾಯಿಗಳ ದೇಹವನ್ನ ಹಗ್ಗ ಮತ್ತು ಚೀಲದಲ್ಲಿ ಹಾಕಿ ತುಂಬಲಾಗಿದೆ. ಈ ಬಗ್ಗೆ ಆರ್‌ಆರ್ ನಗರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಪ್ರೇಮಿಯೊಂದಿಗೆ ಸರಸವಾಡಲು ಸ್ಕೆಚ್ ಹಾಕಿ ಪತಿಯನ್ನೇ ಮುಗಿಸಿದ ಕೇಡಿ ಲೇಡಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]