Tag: RRR

  • RRR- ಸ್ಟಾರ್ ವಾರ್ ಬೆಂಕಿಗೆ ತಣ್ಣನೆಯ ನೀರು ಸುರಿದ ನಿರ್ದೇಶಕ ರಾಜಮೌಳಿ

    RRR- ಸ್ಟಾರ್ ವಾರ್ ಬೆಂಕಿಗೆ ತಣ್ಣನೆಯ ನೀರು ಸುರಿದ ನಿರ್ದೇಶಕ ರಾಜಮೌಳಿ

    ಭಾರತೀಯ ಸಿನಿಮಾ ರಂಗದಲ್ಲೇ ಸ್ಟಾರ್ ವಾರ್ ಗೆ ತೆಲುಗು ಸಿನಿಮಾ ರಂಗ ಫೇಮಸ್. ಸಮಯ ಸಿಕ್ಕಾಗೆಲ್ಲ ಒಬ್ಬ ಕಲಾವಿದ ಮತ್ತೊಬ್ಬ ಕಲಾವಿದನಿಗೆ ಕಾಲೆಳೆಯುತ್ತಲೇ ಇರುತ್ತಾರೆ. ಸಿನಿಮಾಗಳಲ್ಲಿ ಡೈಲಾಗ್ ಮೂಲಕ ಟಾಂಗ್ ಕೊಡುವ ಸಂಪ್ರದಾಯ ಮೊದಲಿನಿಂದಲೂ ತೆಲುಗು ಚಿತ್ರೋದ್ಯಮದಲ್ಲಿದೆ. ಕೇವಲ ಕಲಾವಿದರು ಮಾತ್ರವಲ್ಲ ಅಭಿಮಾನಿಗಳು ಕೂಡ ಅದೇ ಸಂಪ್ರದಾಯವನ್ನೇ ಮುಂದುವರೆಸಿಕೊಂಡು ಬಂದಿದ್ದಾರೆ. ಇದನ್ನು ಸೂಕ್ಷ್ಮವಾಗಿ ಗಮನಿಸಿದ್ದ ನಿರ್ದೇಶಕ ರಾಜಮೌಳಿ, ಆ ಜೇನುಗೂಡಿಗೆ ಕೈ ಹಾಕಿ ಕಚ್ಚಿಸಿಕೊಳ್ಳದೇ ಭರಪೂರ್ ತುಪ್ಪವನ್ನೇ ಪಡೆದುಕೊಂಡಿದ್ದಾರೆ. ಇದನ್ನೂ ಓದಿ : RRR ಸಿನೆಮಾ ನೋಡಲು ಬಾಗಿಲು ಮುರಿದು ಚಿತ್ರಮಂದಿರಕ್ಕೆ ನುಗ್ಗಿದ ಪ್ರೇಕ್ಷಕರು

    ಜೂನಿಯರ್ ಎನ್.ಟಿ.ಆರ್ ಮತ್ತು ರಾಮಚರಣ್ ತೇಜ ಸಿನಿಮಾಗಳು ಯಾವತ್ತಿಗೂ ಪೈಪೋಟಿ ಮಾಡುತ್ತಿವೆ. ಇಬ್ಬರೂ ಅಸಂಖ್ಯಾತ ಅಭಿಮಾನಿಗಳನ್ನು ಹೊಂದಿರುವ ನಟರು. ಈ ಹಿಂದಿನ ಸಿನಿಮಾಗಳಲ್ಲಿ ಪಂಚಿಂಗ್ ಡೈಲಾಗ್ ಮೂಲಕ ಒಬ್ಬರನ್ನೊಬ್ಬರು ಟೀಕಿಸಿಕೊಂಡಿದ್ದಾರೆ. ಕಾಲೆಳೆದಿದ್ದಾರೆ. ಟಾಂಗ್ ಕೊಡುವಂತಹ ಡೈಲಾಗ್ ಹೊಡೆದಿದ್ದಾರೆ. ಇಂತಹ ಇಬ್ಬರು ಸ್ಟಾರ್ ನಟರನ್ನು ಒಟ್ಟಾಗಿಸಿ, ಸಂಭಾಳಿಸಿ ‘ಆರ್.ಆರ್.ಆರ್’ ಸಿನಿಮಾ ಮಾಡಿ ಗೆದ್ದಿದ್ದಾರೆ ರಾಜಮೌಳಿ. ಇದನ್ನೂ ಓದಿ: RRR ಬ್ಯಾನ್ ಮಾಡಿದ್ರೆ ಕೆಜಿಎಫ್‍ಗಿದೆ ಕಂಟಕ

    ಈ ಇಬ್ಬರೂ ಅಭಿಮಾನಿಗಳ ನಾಡಿಮಿಡಿತವನ್ನು ಸರಿಯಾಗಿ ಬಳಸಿಕೊಂಡು, ಹಾಗೆಯೇ ಸಿನಿಮಾದಲ್ಲೂ ದೃಶ್ಯಗಳನ್ನು ಹೆಣೆದಿದ್ದಾರೆ. ಆಯಾ ಪಾತ್ರಕ್ಕೆ ಏನೆಲ್ಲ ಬಿಲ್ಡ್ ಅಪ್ ಬೇಕಿತ್ತೋ ಅಷ್ಟನ್ನೂ ದಯಪಾಲಿಸಿದ್ದಾರೆ. ಯಾರ ಅಭಿಮಾನಿಗೂ ನೋವಾಗದಂತೆ ಚಿತ್ರಿಸಿದ್ದಾರೆ. ಹಾಗಾಗಿ ಇಬ್ಬರೂ ಕಲಾವಿದರ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ. ಇದನ್ನೂ ಓದಿ: ‘ಗಂಗೂಬಾಯಿ’ ಸಿನಿಮಾ ನೋಡಲು ಇಡೀ ಥಿಯೇಟರ್ ಬುಕ್ ಮಾಡಿದ ಪಾಕ್ ನಟ

    ಥಿಯೇಟರ್ ಒಳಗೆ ಹೀಗಿದ್ದರೆ ಚಿತ್ರಮಂದಿರದ ಹೊರಗೆ ಮತ್ತೊಂದು ರೀತಿಯ ವಾತಾವರಣ ಸೃಷ್ಟಿಯಾಗಿದೆ. ತಮ್ಮ ತಮ್ಮ ನೆಚ್ಚಿನ ನಟರ ಪೋಸ್ಟರ್ ಗೆ ಹಾಲು, ಹೂವು ಹಾಕುವುದು, ಪೂಜೆ ಸಲ್ಲಿಸುವುದು ಇದು ಇದ್ದೇ ಇದೆ. ಕೆಲವು ಕಡೆ ರಾಮ್ ಚರಣ್ ತೇಜ ಅವರ ಅಭಿಮಾನಿಗಳು ತಮ್ಮ ನೆಚ್ಚಿನ ನಟನಿಗೆ ಪ್ರಾಮುಖ್ಯತೆ ಕೊಟ್ಟರೆ, ಮತ್ತೊಂದು ಕಡೆ ಜೂನಿಯರ್ ಎನ್.ಟಿ.ಆರ್ ಗೆ ಮಹತ್ವ ನೀಡಿದ್ದಾರೆ. ಆದರೆ, ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಒಟ್ಟಾಗಿಯೇ ಸಿನಿಮಾ ನೋಡುತ್ತಿದ್ದಾರೆ. ಇಂಥದ್ದೊಂದು ಮಹತ್ವದ ಬದಲಾವಣೆಗೆ ‘ಆರ್.ಆರ್.ಆರ್’ ಕಾರಣವಾಗಿದ್ದಂತೂ ಸುಳ್ಳಲ್ಲ.

    ಕೇವಲ ಸಿನಿಮಾ ಮಾಡಿ ಗೆಲ್ಲುವುದಲ್ಲ, ಸ್ಟಾರ್ ಗಳನ್ನು ನಿಭಾಯಿಸಿಕೊಂಡು ಅಭಿಮಾನಿಗಳನ್ನು ಸಮಾಧಾನಿಸುವುದು ಸಿನಿಮಾ ಗೆಲುವಿಗಿಂತ ದೊಡ್ಡದರು. ಅದರಲ್ಲಿ ರಾಜಮೌಳಿ ಭಾರೀ ಅಂತರದಿಂದ ಗೆದ್ದಿದ್ದಾರೆ.

  • RRR ಸಿನೆಮಾ ನೋಡಲು ಬಾಗಿಲು ಮುರಿದು ಚಿತ್ರಮಂದಿರಕ್ಕೆ ನುಗ್ಗಿದ ಪ್ರೇಕ್ಷಕರು

    RRR ಸಿನೆಮಾ ನೋಡಲು ಬಾಗಿಲು ಮುರಿದು ಚಿತ್ರಮಂದಿರಕ್ಕೆ ನುಗ್ಗಿದ ಪ್ರೇಕ್ಷಕರು

    ರಾಯಚೂರು: ಜ್ಯೂ.ಎನ್‌ಟಿಆರ್ ಹಾಗೂ ರಾಮ್ ಚರಣ್ ಅಭಿನಯದ ರಾಜಮೌಳಿ ನಿರ್ದೇಶನದ ಆರ್‌ಆರ್‌ಆರ್ ಸಿನೆಮಾವನ್ನ ನೋಡಲು ಅಭಿಮಾನಿಗಳು ಬಾಗಿಲು ಮುರಿದು ಚಿತ್ರಮಂದಿರಕ್ಕೆ ನುಗ್ಗಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.

    ಬೆಳಿಗ್ಗೆ 5:30 ಕ್ಕೆ ಮೊದಲ ಶೋ ಆರಂಭವಾಗಿದೆ. ಚಿತ್ರಮಂದಿರದ ಬಾಗಿಲು ,ಕಿಟಕಿ ,ಪೈಪ್‌ಗಳನ್ನು  ಮುರಿದು ಅಭಿಮಾನಿಗಳು ಒಳನುಗ್ಗಿ ಸಿನೆಮಾ ವೀಕ್ಷಣೆ ಮಾಡಿದ್ದಾರೆ. ನಗರದ ಪೂರ್ಣಿಮಾ ಚಿತ್ರಮಂದಿರದಲ್ಲಿ ನೂಕುನುಗ್ಗಲು ಉಂಟಾಗಿದೆ. ಟಿಕೆಟ್ ಪಡೆಯದೆ ಚಿತ್ರಮಂದಿರಕ್ಕೆ ಪ್ರೇಕ್ಷಕರು ನುಗ್ಗಿದ್ದಾರೆ. ಗೇಟ್ ಏರಿ ಚಿತ್ರಮಂದಿರದೊಳಗೆ ನುಗ್ಗಿ ಚಿತ್ರ ವೀಕ್ಷಣೆ ಮಾಡಿದ್ದಾರೆ. ನಿಗದಿತ ಸೀಟ್ ಗಿಂತ 250 ಕ್ಕೂ ಹೆಚ್ಚು ಜನ ಒಳನುಗ್ಗಿ ಸಿನೆಮಾ ವೀಕ್ಷಣೆ ಮಾಡಿದ್ದಾರೆ. ಇದನ್ನೂ ಓದಿ: RRR ಬ್ಯಾನ್ ಮಾಡಿದ್ರೆ ಕೆಜಿಎಫ್‍ಗಿದೆ ಕಂಟಕ

    ಆಂಧ್ರಪ್ರದೇಶ, ತೆಲಂಗಾಣ ಗಡಿ ಹಿನ್ನೆಲೆ ಅಭಿಮಾನಿಗಳ ಸಂಖ್ಯೆ ಹೆಚ್ಚಾಗಿದೆ. ನಗರದಲ್ಲಿ ಮೂರು ಚಿತ್ರಮಂದಿರಗಳಲ್ಲಿ ಚಿತ್ರ ಬಿಡುಗಡೆಯಾಗಿದೆ. ಜನರನ್ನ ನಿಯಂತ್ರಿಸಲು ಚಿತ್ರಮಂದಿರ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಚಿತ್ರಮಂದಿರಗಳ ಬಳಿ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಕೆಲವರು ನಕಲಿ ಟಿಕೆಟ್‌ಗಳನ್ನ ಹಿಡಿದು ಒಳನುಗ್ಗಲು ಪ್ರಯತ್ನಿಸಿದ್ದಾರೆ. ಇದನ್ನೂ ಓದಿ: ‘ಗಂಗೂಬಾಯಿ’ ಸಿನಿಮಾ ನೋಡಲು ಇಡೀ ಥಿಯೇಟರ್ ಬುಕ್ ಮಾಡಿದ ಪಾಕ್ ನಟ

     

  • ಮಧ್ಯರಾತ್ರಿಯೇ RRR ರಿಲೀಸ್ – ಥಿಯೇಟರ್‌ನತ್ತ ಮುಗಿಬೀಳುತ್ತಿದ್ದಾರೆ ಅಭಿಮಾನಿಗಳು

    ಮಧ್ಯರಾತ್ರಿಯೇ RRR ರಿಲೀಸ್ – ಥಿಯೇಟರ್‌ನತ್ತ ಮುಗಿಬೀಳುತ್ತಿದ್ದಾರೆ ಅಭಿಮಾನಿಗಳು

    ಬೆಂಗಳೂರು: ಟಾಲಿವುಡ್ ನಟ ರಾಮ್‍ಚರಣ್ ತೇಜ ಹಾಗೂ ಜೂ.ಎನ್‌ಟಿಆರ್ ಅಭಿನಯದ ಬಹುನಿರೀಕ್ಷಿತ ಆರ್‌ಆರ್‌ಆರ್‌ ಸಿನಿಮಾ ಇಂದು ವಿಶ್ವಾದ್ಯಂತ ಬಿಡುಗಡೆಯಾಗಿದೆ.

    ಬಹುಬಲಿ ನಿರ್ದೇಶಕ ರಾಜಮೌಳಿ ಇದೇ ಮೊದಲ ಬಾರಿಗೆ ತೆಲುಗಿನ ಇಬ್ಬರು ಸ್ಟಾರ್ ನಟರಿಗೆ ಒಂದೇ ಸಿನಿಮಾದಲ್ಲಿ ಆ್ಯಕ್ಷನ್ ಕಟ್ ಹೇಳಿದ್ದು, ಸಿನಿಮಾ ನೋಡಲು ಅಭಿಮಾನಿಗಳು ಥಿಯೇಟರ್‌ನತ್ತ ಮುಗಿಬೀಳುತ್ತಿದ್ದಾರೆ. ಅಲ್ಲದೇ ರಾಮ್‍ಚರಣ್ ಹಾಗೂ ಜೂ.ಎನ್‍ಟಿಆರ್ ಕಟೌಟ್‍ಗಳಿಗೆ ಹಾರ ಹಾಕಿ, ಕ್ಷೀರಾಭಿಷೇಕ ಮಾಡಿ, ಪಟಾಕಿ ಸಿಡಿಸಿ ಸಂತಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: RRR ಬ್ಯಾನ್ ಮಾಡಿದ್ರೆ ಕೆಜಿಎಫ್‍ಗಿದೆ ಕಂಟಕ

    ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಅಂಜನ್ ಚಿತ್ರ ಮಂದಿರದಲ್ಲಿ ತಡರಾತ್ರಿ 12:30ಕ್ಕೆ ಆರ್‌ಆರ್‌ಆರ್‌ ಮೊದಲ ಶೋ ಬಿಡುಗಡೆಯಾಗಿದ್ದು, ಸಿನಿಮಾ ವೀಕ್ಷಿಸಿದ ಪ್ರೇಕ್ಷಕರಿಂದ ಭರ್ಜರಿ ರೆಸ್ಪಾನ್ಸ್ ಸಿಗುತ್ತಿದೆ. ಅಂಜನ್ ಥಿಯೇಟರ್ ಆವರಣದಲ್ಲಿ ರಾಮ್ ಚರಣ್ ಹಾಗೂ ಜೂ.ಎನ್‌ಟಿಆರ್ ಅಭಿಮಾನಿಗಳ ಪರಸ್ಪರ ಜೈಕಾರ ಕೂಗಿ ಸಂಭ್ರಮಿಸಿದ್ದಾರೆ. ಅಲ್ಲದೇ ನಗರದ 14ಕ್ಕೂ ಹೆಚ್ಚು ಚಿತ್ರ ಮಂದಿರದಲ್ಲಿ ರಾತ್ರಿ 12 ಹಾಗೂ ಬೆಳಿಗ್ಗೆ 4 ಗಂಟೆಗೆ ಮೊದಲ ಶೋ ಪ್ರದರ್ಶನ ಕಂಡಿದೆ.

    ಬಾಹುಬಲಿ ಸಿನಿಮಾ ನಂತರ ರಾಜಮೌಳಿ ಅವರು ಆರ್‌ಆರ್‌ಆರ್‌ ಸಿನಿಮಾವನ್ನು ನಿರ್ದೇಶಿಸಿದ್ದು, ಈ ಚಿತ್ರದಲ್ಲಿ ಜೂ.ಎನ್‌ಟಿಆರ್ ಮತ್ತು ರಾಮ್ ಚರಣ್ ಮುಖ್ಯಪಾತ್ರದಲ್ಲಿ ಅಭಿನಯಿಸಿದ್ದಾರೆ ಮತ್ತು ಬಾಲಿವುಡ್ ನಟ ಅಜಯ್ ದೇವಗನ್, ನಟಿ ಆಲಿಯಾ ಭಟ್ ಸೇರಿದಂತೆ ಹಲವಾರು ಕಲಾವಿದರು ಆರ್‍ಆರ್‍ಆರ್ ಸಿನಿಮಾದಲ್ಲಿ ಬಣ್ಣಹಚ್ಚಿದ್ದಾರೆ. ಇದನ್ನೂ ಓದಿ: ‘ಗಂಗೂಬಾಯಿ’ ಸಿನಿಮಾ ನೋಡಲು ಇಡೀ ಥಿಯೇಟರ್ ಬುಕ್ ಮಾಡಿದ ಪಾಕ್ ನಟ

    ಡಿವಿವಿ ಎಂಟರ್‍ಟೈನ್ಮೆಂಟ್ ಬ್ಯಾನರ್‌ನಲ್ಲಿ ನಿರ್ಮಾಣವಾಗುತ್ತಿರುವ ಆರ್‌ಆರ್‌ಆರ್‌ ಸಿನಿಮಾಗೆ ವಿ.ವಿಜಯೇಂದ್ರ ಪ್ರಸಾದ್ ಕಥೆ, ಮತ್ತು ಶ್ರೀಕರ್ ಪ್ರಸಾದ್ ಸಂಕಲನವಿದೆ. ಕನ್ನಡ, ತೆಲುಗು, ಮಲಯಾಳಂ ಮತ್ತು ತಮಿಳು ಹಾಗೂ ಹಿಂದಿಯಲ್ಲಿ ರಿಲೀಸ್ ಆಗಿದೆ.

     

  • RRR ಬ್ಯಾನ್ ಮಾಡಿದ್ರೆ ಕೆಜಿಎಫ್‍ಗಿದೆ ಕಂಟಕ

    RRR ಬ್ಯಾನ್ ಮಾಡಿದ್ರೆ ಕೆಜಿಎಫ್‍ಗಿದೆ ಕಂಟಕ

    ಡೀ ಭಾರತೀಯ ಚಿತ್ರರಂಗ ಕಾಯುತ್ತಿರುವ ಸಿನಿಮಾಗಳಲ್ಲಿ RRR ಮತ್ತು ಕೆಜಿಎಫ್ ಪ್ರಮುಖ ಸ್ಥಾನ ಪಡೆದುಕೊಂಡಿದೆ. ಈ ಎರಡು ಸಿನಿಮಾ ನೋಡಬೇಕೆಂದು ಸಿನಿರಸಿಕರು ತುದಿಗಾಲಿನಲ್ಲಿ ನಿಂತಿದ್ದಾರೆ. ನಾಳೆಯೇ RRR ರಿಲೀಸ್ ಆಗಬೇಕಿರುವ ವೇಳೆಯೇ ಕರ್ನಾಟಕದಲ್ಲಿ ವಿರೋಧ ಎದುರಾಗುತ್ತಿದ್ದು, ಸಿನಿಮಾವನ್ನು ಬ್ಯಾನ್ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಈ ಬೆನ್ನಲ್ಲೇ ಕೆಜಿಎಫ್ ಸಿನಿಮಾಗೂ ಸಂಕಟ ಪ್ರಾರಂಭವಾಗಿದೆ.

    RRR ಸಿನಿಮಾ ರಿಲೀಸ್‍ಗೆ ಮಾಡುವುದಾಗಿ ಹೇಳಿದಾಗಿನಿಂದ ಒಂದಲ್ಲ ಒಂದು ವಿವಾದ ಬರುತ್ತಿದೆ. ಈ ಬೆನ್ನಲ್ಲೇ ಸಿನಿಮಾ ರಿಲೀಸ್‍ಗೆ ಕ್ಷಣಗಣನೇ ಪ್ರಾರಂಭವಾಗುತ್ತಿರುವ ಸಮಯದಲ್ಲಿ ಕನ್ನಡಿಗರು ರೊಚ್ಚಿಗೆದ್ದಿದ್ದಾರೆ. ಇದನ್ನೂ ಓದಿ: ಪ್ರಿ ಆಸ್ಕರ್ ಪಾರ್ಟಿಯಲ್ಲಿ ಮೊದಲಬಾರಿ ಮಗಳ ಬಗ್ಗೆ ಮಾತನಾಡಿದ ದೇಸಿ ಗರ್ಲ್ ಪಿಗ್ಗಿ

    ಬೇರೆ ಭಾಷೆಗಳ ಸಿನಿಮಾಗೆ ಅವಕಾಶಕೊಡಲು ನಮ್ಮ ಕನ್ನಡ ಸಿನಿಮಾಗಳನ್ನು ಚಿತ್ರಮಂದಿರಗಳಿಂದ ತೆಗೆದುಹಾಕುತ್ತಿದ್ದಾರೆ. ಪ್ಯಾನ್ ಇಂಡಿಯಾ ಹೆಸರಿನಲ್ಲಿ ಕನ್ನಡ ಸಿನಿಮಾಗಳಿಗೆ ಮೋಸ ಮಾಡುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಈ ಹಿನ್ನೆಲೆ RRR ಸಿನಿಮಾ ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ ಬಾಯ್‍ಕಾಟ್ ಆಭಿಯಾನ ಪ್ರಾರಂಭ ಮಾಡಿದ್ದಾರೆ. ಕರ್ನಾಟಕದಲ್ಲಿ RRR ರಿಲೀಸ್ ಆಗುವುದು ಬೇಡ ಎಂದು ಟ್ವೀಟ್ ಮಾಡುತ್ತಿದ್ದಾರೆ.

    ಪರಿಣಾಮ RRR ಆಭಿಮಾನಿಗಳು, ಒಂದು ವೇಳೆ RRR ಸಿನಿಮಾಗೆ ಕರ್ನಾಟಕದಲ್ಲಿ ತೊಂದರೆ ಕೊಟ್ಟರೆ ಕೆಜಿಎಫ್ ಬ್ಯಾನ್ ಮಾಡಬೇಕಾಗುತ್ತೆ ಹುಷಾರ್ ಎಂದು ಎಚ್ಚರಿಕೆಯನ್ನು ಕೊಟ್ಟಿದ್ದಾರೆ.

    ರೋಚಿಗೆದ್ದ RRR ಫಾನ್ಸ್
    RRR ಫ್ಯಾನ್ಸ್‌ಗೆ ಬಾಯ್‍ಕಾಟ್ ವಿಚಾರ ತಿಳಿದು ಆಕ್ರೋಶಗೊಂಡಿದ್ದಾರೆ. ಈ ಕುರಿತು ಫ್ಯಾನ್ಸ್ ಸೋಶಿಯಲ್ ಮೀಡಿಯಾದಲ್ಲಿ, ಒಂದು ವೇಳೆ ‘RRR’ ಸಿನಿಮಾ ನೀವು ಬ್ಯಾನ್ ಮಾಡಿದ್ದೇ ಆದಲ್ಲಿ, ‘ಕೆಜಿಎಫ್ 2’ ರಿಲೀಸ್ ಹತ್ತಿರದಲ್ಲೇ ಇದೆ ಮರೆಯಬೇಡಿ ಎಂದು ಎಚ್ಚರಿಸಿದ್ದಾರೆ. ಅಲ್ಲದೇ ‘RRR’ ಕನ್ನಡ ವರ್ಷನ್‍ನಲ್ಲಿ ರಿಲೀಸ್ ಆಗುತ್ತಿಲ್ಲ ಅನ್ನೋದು ಚಿತ್ರತಂಡದ ಸಮಸ್ಯೆ ಅಲ್ಲ. ನೀವು ಈ ಸಮಸ್ಯೆಯನ್ನು ಚಿತ್ರತಂಡಕ್ಕೆ ಪ್ರಶ್ನೆ ಮಾಡುವುದು ಸರಿಯಲ್ಲ. ನಿಮ್ಮ ರಾಜ್ಯದ ಡಿಸ್ಟ್ರಿಬ್ಯೂಟರ್ ಜೊತೆ ಮಾತನಾಡಿ ಈ ಸಮಸ್ಯೆ ಬಗ್ಗೆ ಬಗೆಹರಿಸಿಕೊಳ್ಳಿ. ಅದು ಬಿಟ್ಟು ‘RRR’ ಸಿನಿಮಾಗೆ ತೊಂದರೆ ಮಾಡಬೇಡಿ. ಹಾಗೇನಾದರೂ ಆದರೆ, ‘ಕೆಜಿಎಫ್ 2’ ಸಿನಿಮಾಗೆ ನೀವು ಮಾಡಿದ ದುಪ್ಪಟ್ಟು ಡ್ಯಾಮೇಜ್ ಅನ್ನು ನಾವು ‘ಕೆಜಿಎಫ್ 2’ಗೆ ಮಾಡುತ್ತೇವೆ ಎಂದು ಖಡಕ್ ಎಚ್ಚರಿಕೆ ಕೊಟ್ಟರು. ಇದನ್ನೂ ಓದಿ: ʼಗಂಗೂಬಾಯಿ’ ಸಿನಿಮಾ ನೋಡಲು ಇಡೀ ಥಿಯೇಟರ್ ಬುಕ್ ಮಾಡಿದ ಪಾಕ್ ನಟ

    RRR ಸಿನಿಮಾ ಬಂದ್ರೆ ‘ಜೇಮ್ಸ್’ ಸಿನಿಮಾ ಎತ್ತಂಗಡಿ ಮಾಡುತ್ತಾರೆ ಎಂದು ಕನ್ನಡಿಗರು ಆಕ್ರೋಶಗೊಂಡಿದ್ದಾರೆ. ಈ ಹಿನ್ನೆಲೆ ‘RRR’ ಸಿನಿಮಾ ಬಾಯ್‍ಕಾಟ್ ಎಂಬ ಹೋರಾಟ ನಡೆಯುತ್ತಿದೆ. ಇದೀಗ ಈ ದ್ವೇಷದ ಕಿಡಿ ‘ಕೆಜಿಎಫ್ 2’ ಸಿನಿಮಾ ಮೇಲೂ ಪರಿಣಾಮ ಬೀಳುವ ಸಾಧ್ಯತೆ ಹೆಚ್ಚಿದೆ.

  • ಪತ್ರಕರ್ತರಿಗೆ ಮಧ್ಯರಾತ್ರಿಯ ಸರ್ಪ್ರೈಸ್ ಕೊಟ್ಟ RRR ಟೀಮ್..!

    ಪತ್ರಕರ್ತರಿಗೆ ಮಧ್ಯರಾತ್ರಿಯ ಸರ್ಪ್ರೈಸ್ ಕೊಟ್ಟ RRR ಟೀಮ್..!

    ದೇ ಮೊದಲ ಬಾರಿಗೆ ಸಿನಿಮಾ ಪತ್ರಕರ್ತರಿಗೆ ಮಧ್ಯರಾತ್ರಿ ಸಿನಿಮಾ ತೋರಿಸಲು ಮುಂದಾಗಿದೆ  ‘ಆರ್.ಆರ್.ಆರ್’ ಸಿನಿಮಾ ಟೀಮ್. ಈ ಕುರಿತು ಆರ್.ಆರ್.ಆರ್ ಟೀಮ್ ಪತ್ರಕರ್ತರಿಗೆ ಸಂದೇಶ ಕಳುಹಿಸಿದ್ದು, ಕೆ.ಜಿ ರೋಡ್ ಭೂಮಿಕಾ ಚಿತ್ರಮಂದಿರದಲ್ಲಿ ಇಂದು ಮಧ್ಯರಾತ್ರಿ 12.45ಕ್ಕೆ ಪ್ರೆಸ್ ಶೋ ಆಯೋಜನೆ ಮಾಡಲಾಗಿದೆ ಎಂದು ಕಳುಹಿಸಿದ್ದಾರೆ. ಈ ಮೂಲಕ ಮಧ್ಯರಾತ್ರಿಯ ಟಾಸ್ಕ್ ಕೊಟ್ಟಿದ್ದಾರೆ. ಇದನ್ನೂ ಓದಿ : ದಪ್ಪಗಿರೋರಿಗೆ ‘ಸೂ’ ಅನ್ನೋ ಕ್ಯಾರೆಕ್ಟರ್ ಸರ್ಟಿಫಿಕೇಟ್ : ಹಿಗ್ಗಾಮುಗ್ಗ ಝಾಡಿಸಿದ ಗಾಳಿಪಟ ನೀತು

    ಮಧ್ಯರಾತ್ರಿ ನಡೆಯುವ ಈ ಶೋನಲ್ಲಿ ‘ಆರ್.ಆರ್.ಆರ್’ ಕನ್ನಡದ ಅವತರಣಿಕೆಯನ್ನು ತೋರಿಸಲಾಗುತ್ತಿದೆ. ಈ ಚಿತ್ರ ಮಂದಿರದಲ್ಲಿ ಕನ್ನಡಕ್ಕೆ ಡಬ್ ಆಗಿರುವ ಆರ್.ಆರ್.ಆರ್ ಸಿನಿಮಾ ಪ್ರದರ್ಶನವಾಗುತ್ತಿದೆ. ರಾಜಮೌಳಿ ನಿರ್ದೇಶನದ ಆರ್.ಆರ್.ಆರ್ ಸಿನಿಮಾ ನಾಳೆ ವಿಶ್ವದಾದ್ಯಂತ ಹತ್ತು ಸಾವಿರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗುತ್ತಿದೆ. ಕನ್ನಡದಲ್ಲೇ 250ಕ್ಕೂ ಹೆಚ್ಚು ಥಿಯೇಟರ್ ನಲ್ಲಿ ತೆರೆ ಕಾಣುತ್ತಿದೆ. ಈ ದಿನ ಮಧ್ಯರಾತ್ರಿಯಿಂದಲೇ ಅನೇಕ ಕಡೆ ಪ್ರದರ್ಶನಗಳು ನಡೆಯುತ್ತಿವೆ. ಇದನ್ನೂ ಓದಿ : ಶ್ರುತಿ ಹಾಸನ್ ಜತೆ ನನ್ನ ಮದುವೆ ಆಗಿದೆ: ಸ್ಫೋಟಕ ಮಾಹಿತಿ ಹಂಚಿಕೊಂಡ ಬಾಯ್ ಫ್ರೆಂಡ್

    ಆರ್.ಆರ್.ಆರ್ ಸಿನಿಮಾಗಾಗಿ ಕನ್ನಡದ ಜೇಮ್ಸ್ ಚಿತ್ರವನ್ನು ಥಿಯೇಟರ್ ಗಳಿಂದ ಎತ್ತಂಗಡಿ ಮಾಡಲಾಗುತ್ತಿದೆ ಎನ್ನುವ ಆರೋಪ ಕೇಳಿ ಬಂದಿತ್ತು. ಈ ಕುರಿತು ನಟ ಶಿವರಾಜ್ ಕುಮಾರ್ ಕೂಡ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ್ದರು. ಕೊನೆಗೆ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಸಂಧಾನ ಸಭೆ ಕೂಡ ನಡೆಯಿತು. ಈಗ ಸಮಸ್ಯೆ ಬಗೆಹರಿದಿದೆ ಎನ್ನಲಾಗುತ್ತಿದೆ. ಇದನ್ನೂ ಓದಿ : ವರುಣ್ ದವನ್ ಜತೆ ‘ಸಿಟಾಡೆಲ್’ ನಲ್ಲಿ ಸಮಂತಾ: ಕ್ಯಾಮರಾ ಕಣ್ಣಿಗೆ ಹಬ್ಬ

    ಇಂದು ಮುಂಜಾನೆ ಆರ್.ಆರ್.ಆರ್ ಸಿನಿಮಾ ತಂಡದ ವಿರುದ್ಧ ಕನ್ನಡಪರ ಸಂಘಟನೆಗಳು ಕೂಡ ಪ್ರತಿಭಟನೆ ನಡೆಸಿದ್ದವು. ಈ ಸಿನಿಮಾದ ಪೋಸ್ಟರ್ ಕಿತ್ತು ಹಾಕುವ ಮೂಲಕ ಆಕ್ರೋಶ ವ್ಯಕ್ತ ಪಡಿಸಿದವು. ಆನಂತರ ಪ್ರತಿಭಟನೆಯನ್ನು ಕೈ ಬಿಡಲಾಯಿತು.

  • RRR ವಿರುದ್ಧ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ

    RRR ವಿರುದ್ಧ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ

    ತೆಲಂಗಾಣ: ಶೀಘ್ರವೇ ತೆರೆಗೆ ಬರಲಿರುವ ರಾಜಮೌಳಿ ನಿರ್ದೇಶನದ, ನಟರಾದ ರಾಮ್‍ಚರಣ್ ತೇಜ, ಜ್ಯೂನಿಯರ್ ಎನ್‍ಟಿಆರ್ ಅಭಿನಯದ ಆರ್‍ಆರ್‍ಆರ್ ಸಿನಿಮಾ ವಿರುದ್ಧ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ಯನ್ನು ತೆಲಂಗಾಣ ಹೈಕೋರ್ಟ್ ವಜಾಗೊಳಿಸಿದೆ.

    ವಿದ್ಯಾರ್ಥಿನಿ ಅಲ್ಲೂರಿ ಸೌಮ್ಯ ಅವರು ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಅಭಿನಂದ್ ಕುಮಾರ್ ಶಾವಿಳಿ ಅವರಿದ್ದ ಪೀಠ ವಜಾಗೊಳಿಸಿದೆ. ಇದನ್ನೂ ಓದಿ: ಆರ್.ಆರ್.ಆರ್ ಬೈಕಾಟ್ : ಕನ್ನಡ ಪರ ಹೋರಾಟಗಾರರಿಗೇ ಜವಾಬ್ದಾರಿ ಕೊಟ್ಟ ರಾಜಮೌಳಿ ಟೀಮ್

    ಸ್ವಾತಂತ್ರ್ಯ ಹೋರಾಟಗಾರ ಅಲ್ಲೂರಿ ಸೀತಾರಾಮ ರಾಜು ಅವರು ಅಂದಿನ ಬ್ರಿಟಿಷ್ ಸರ್ಕಾರದಲ್ಲಿ ಪೊಲೀಸ್ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದರು ಎಂದು RRR ಚಿತ್ರದಲ್ಲಿ ತೋರಿಸಲಾಗಿದೆ. ಅಲ್ಲದೆ ಅವರನ್ನು ಕೆಟ್ಟದಾಗಿ ಬಿಂಬಿಸಲಾಗಿದ್ದು, ಅವರ ವ್ಯಕ್ತಿತ್ವಕ್ಕೆ ಕಳಂಕ ತರಲಾಗಿದೆ. ಈ ಹಿನ್ನೆಲೆಯಲ್ಲಿ ಚಿತ್ರಕ್ಕೆ ಸೆನ್ಸಾರ್ ಪ್ರಮಾಣ ಪತ್ರ ನೀಡದಂತೆ ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಗೆ (ಸಿಬಿಎಫ್‍ಸಿ) ನಿರ್ದೇಶಿಸಬೇಕು ಎಂದು ವಿದ್ಯಾರ್ಥಿನಿ ಸೌಮ್ಯ ಅರ್ಜಿ ಸಲ್ಲಿಸಿದ್ದರು.

    ಸೆನ್ಸಾರ್ ಪ್ರಮಾಣ ಪತ್ರದ ಸಿಂಧುತ್ವವು ಸವಾಲಿಗೆ ಒಳಪಡದಿರುವ ಹಿನ್ನೆಲೆಯಲ್ಲಿ ಅರ್ಜಿದಾರರಿಗೆ ಪರಿಹಾರ ನೀಡಲು ಯಾವುದೇ ಕಾರಣ ಕಂಡುಬರುತ್ತಿಲ್ಲ. ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಪ್ರತಿ ಅಫಿಡವಿಟ್ ಸಲ್ಲಿಸಿದ್ದ ಸಿಬಿಎಫ್‍ಸಿ ಸಿನಿಮಾ ಕಾಲ್ಪನಿಕ ಕೃತಿಯಾಗಿರುವುದರಿಂದ ಕೆಲ ಸಿನಿಮಾಗಳಿಗೆ ಸ್ವಾತಂತ್ರ್ಯವನ್ನು ಅನುಮತಿಸಲಾಗಿದೆ. ಅರ್ಜಿದಾರರ ವಾದವನ್ನು ಒಪ್ಪಿದರೂ ರಾಜು ಮತ್ತು ಕೊಮರಂ ಭೀಮ್ ಅವರನ್ನು ದೊಡ್ಡ ದೇಶಭಕ್ತರಾಗಿಯೇ ಚಿತ್ರದಲ್ಲಿ ಬಿಂಬಿಸಲಾಗಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಇದನ್ನೂ ಓದಿ:  ಮೌಳಿಯ ರಂಗೀನ್ ಲೋಕದಲ್ಲಿ ಮಿಂದೆದ್ದ ಜನಸಾಗರ… ಒಂದೇ ವೇದಿಕೆಯಲ್ಲಿ ಸೌತ್ ಸ್ಟಾರ್ಸ್‍ಗಳ ಸಮಾಗಮ

    ಇತ್ತೀಚೆಗೆ ಬಾಲಿವುಡ್ ನಟಿ ಆಲಿಯಾ ಭಟ್ ಅಭಿನಯದ `ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾಗೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್, ಹಿತನ್ ಧೀರಜ್‍ಲಾಲ್ ಮೆಹ್ತಾ ಮತ್ತು ಬನ್ಸಾಲಿ ಪ್ರೊಡಕ್ಷನ್ ಚಿತ್ರದಲ್ಲಿ ನೀಡಿದ್ದ ತೀರ್ಪನ್ನು ಅವಲಂಬಿಸಿ ನ್ಯಾಯಾಲಯ ಈ ಆದೇಶ ನೀಡಿದೆ.

  • ಆರ್.ಆರ್.ಆರ್ ಬೈಕಾಟ್ : ಕನ್ನಡ ಪರ ಹೋರಾಟಗಾರರಿಗೇ ಜವಾಬ್ದಾರಿ ಕೊಟ್ಟ ರಾಜಮೌಳಿ ಟೀಮ್

    ಆರ್.ಆರ್.ಆರ್ ಬೈಕಾಟ್ : ಕನ್ನಡ ಪರ ಹೋರಾಟಗಾರರಿಗೇ ಜವಾಬ್ದಾರಿ ಕೊಟ್ಟ ರಾಜಮೌಳಿ ಟೀಮ್

    ರಾಜಮೌಳಿ ನಿರ್ದೇಶನದ ಆರ್.ಆರ್.ಆರ್ ಸಿನಿಮಾ ಕನ್ನಡದಲ್ಲಿ ಡಬ್ ಆಗಿದ್ದರೂ, ಅದು ಕರ್ನಾಟಕದಲ್ಲಿ ಪ್ರದರ್ಶನ ಕಾಣುತ್ತಿಲ್ಲ. ಒಂದೇ ಒಂದು ಥಿಯೇಟರ್ ಕೂಡ ಕನ್ನಡ ಡಬ್ಬಿಂಗ್ ಚಿತ್ರಕ್ಕೆ ಕೊಟ್ಟಿಲ್ಲವೆಂದು ಎರಡು ದಿನಗಳಿಂದ ‘ಬೈಕಾಟ್ ಆರ್.ಆರ್.ಆರ್’ ಹೋರಾಟ ಸೋಷಿಯಲ್ ಮೀಡಿಯಾದಲ್ಲಿ ಶುರುವಾಗಿದೆ. ಕನ್ನಡ ಪರ ಕೆಲ ಹೋರಾಟಗಾರರು ಮತ್ತು ಸತತವಾಗಿ ಡಬ್ಬಿಂಗ್ ಪರ ಒಲವು ತೋರಿರುವ ಕನ್ನಡಿಗರ ‘ಆರ್.ಆರ್.ಆರ್’ ಸಿನಿಮಾ ಕನ್ನಡದಲ್ಲೇ ಬೇಕು ಎಂದು ಕ್ಯಾಂಪೇನ್ ಶುರು ಮಾಡಿದ್ದರು. ಇದನ್ನೂ ಓದಿ : ಅನಿಲ್ ಕಪೂರ್ ಈ ಫೋಟೋ ಹಾಕಬಾರದಿತ್ತು: ಕಿವಿ ಹಿಂಡಿದ ಅಭಿಮಾನಿಗಳು

    ಸೋಷಿಯಲ್ ಮೀಡಿಯಾದಲ್ಲಿ ಈ ಹೋರಾಟ ಕಾವು ಪಡೆದುಕೊಂಡಿತ್ತು. ಕನ್ನಡದಲ್ಲೇ ಆರ್.ಆರ್.ಆರ್ ನೋಡುತ್ತೇವೆ. ಬೇರೆ ಭಾಷೆಯಲ್ಲಿರುವ ಚಿತ್ರವನ್ನು ತಿರಸ್ಕರಿಸುತ್ತೇವೆ ಎಂದು ಅನೇಕ ಕನ್ನಡಿಗರು ಪೋಸ್ಟ್ ಮಾಡಿದ್ದರು. ಈ ಕಾವು ಮತ್ತಷ್ಟು ಜೋರಾಗುತ್ತಿದ್ದಂತೆಯೇ ಕರ್ನಾಟಕದಲ್ಲಿ ವಿತರಣಾ ಹಕ್ಕು ಪಡೆದಿರುವ ಕೆ.ವಿ.ಎನ್ ಸಂಸ್ಥೆಯು ತುಂಬಾ ಜಾಣ್ಮೆಯ ಉತ್ತರವನ್ನು ಕೊಟ್ಟಿದೆ. ಆರ್.ಆರ್.ಆರ್ ಸಿನಿಮಾವನ್ನು ಕನ್ನಡದಲ್ಲಿ ನೋಡಲು ನೀವೇ ನಮಗೆ ಸಹಾಯ ಮಾಡಬೇಕು ಎಂದು ಕನ್ನಡ ಪರ ಹೋರಾಟಗಾರರಿಗೆ ಈ ಜವಾಬ್ದಾರಿ ಹೊರೆಸಿದೆ. ಇದನ್ನೂ ಓದಿ : ರಾಜಕೀಯ ದಾಳವಾದ ಪುನೀತ್ ನಟನೆಯ ‘ಜೇಮ್ಸ್’ ಚಿತ್ರ

    ಈ ಕುರಿತು ಡಬ್ಬಿಂಗ್ ಪರ ಹೋರಾಟಗಾರರಿಗೆ ಅದು ಸುದೀರ್ಘವಾಗಿ ಪತ್ರ ಬರೆದು, “ಆರ್.ಆರ್.ಆರ್ ನಾಯಕ ನಟರಾದ ರಾಮ್ ಚರಣ್ ಮತ್ತು ಜ್ಯೂ.ಎನ್.ಟಿ.ಆರ್ ಕನ್ನಡ ಕಲಿಯಲು ವಿಶೇಷ ಪ್ರಯತ್ನಗಳನ್ನು ಮಾಡಿ, ಮೊದಲ ಬಾರಿಗೆ ತಮ್ಮದೇ ಧ್ವನಿಯಲ್ಲಿ ಡಬ್ ಮಾಡಿದ್ದಾರೆ. ನೀವು ಕನ್ನಡ ಭಾಷೆಯಲ್ಲಿ ಈ ಮಹೋನ್ನತ ದೃಶ್ಯಕಾವ್ಯವನ್ನು ನೋಡಲು ಇಷ್ಟಪಡುತ್ತೀರಿ ಎಂದು ನಾವು ಭಾವಿಸಿದ್ದೇವೆ. ಆದ್ದರಿಂದ ಆರ್.ಆರ್.ಆರ್ ಸಿನಿಮಾವನ್ನು ಕನ್ನಡದ ಅವತರಣಿಕೆಯನ್ನು ಪ್ರದರ್ಶಿಸಲು ಹಿಂದೇಟು ಹಾಕುತ್ತಿರುವ ಥಿಯೇಟರ್ ಮಾಲೀಕರ ಮನವೊಲಿಸುವ ಕಾರ್ಯ ನಡೆಯುತ್ತಿದೆ. ಕನ್ನಡದ ಅವತರಣಿಕೆಯನ್ನು ಹೆಚ್ಚಿನ ಸ್ಕ್ರೀನ್ ಗಳಲ್ಲಿ ಬಿಡುಗಡೆ ಮಾಡಲು ಎಲ್ಲಾ ಪ್ರಯತ್ನಗಳನ್ನೂ ನಾವು ಸತತವಾಗಿ ಮಾಡುತ್ತಿದ್ದೇವೆ. ಈ ಬಗ್ಗೆ ನಾಳೆಯೊಳಗೆ ಸಂಪೂರ್ಣ ಮಾಹಿತಿ ನೀಡಲಿದ್ದೇವೆ. ಕನ್ನಡ ಅವತರಣಿಕೆಯನ್ನು ವೀಕ್ಷಿಸುವ ಮೂಲಕ ಹಾಗೂ ರಾಜ್ಯದಾದ್ಯಂತ ಹೆಚ್ಚಿನ ಪರದೆಗಳಲ್ಲಿ ಕನ್ನಡದ ಆವೃತ್ತಿಯನ್ನೇ ಬಿಡುಗಡೆ ಮಾಡುವುದಕ್ಕೆ ನಮಗೆ ನೀವು ಸಹಾಯ ಮಾಡುತ್ತೀರಿ, ನಮ್ಮನ್ನು ಬೆಂಬಲಿಸುತ್ತೀರಿ ಎಂದು ಭಾವಿಸುತ್ತೇವೆ’’ ಕನ್ನಡದ ಸಿನಿಮಾವನ್ನು ಗೆಲ್ಲಿಸುವ ಜವಾಬ್ದಾರಿ ನಿಮ್ಮದೇ ಎಂದು ಕೈ ತೊಳೆದುಕೊಂಡಿದೆ. ಇದನ್ನೂ ಓದಿ : ಸ್ವಂತ ಜಮೀನು ಮಾರಿ ಆಸ್ಪತ್ರೆ ಕಟ್ಟಿಸಲು ಮುಂದಾದ ಹಿರಿಯ ನಟಿ ಲೀಲಾವತಿ: ಬಹುಪರಾಕ್ ಹೇಳಿದ ಕನ್ನಡ ಜನತೆ

     

     

    ಇನ್ನೆರಡು ದಿನ ಕಳೆದರೆ ಆರ್.ಆರ್. ಆರ್ ಸಿನಿಮಾ ವಿಶ್ವದಾದ್ಯಂತ ಬಿಡುಗಡೆ ಆಗುತ್ತಿದೆ. ಮಾರ್ಚ್ 25ಕ್ಕೆ ಹತ್ತು ಸಾವಿರಕ್ಕೂ ಹೆಚ್ಚಿನ ಚಿತ್ರಮಂದಿರಗಳಲ್ಲಿ ಈ ಸಿನಿಮಾ ತೆರೆ ಕಾಣುತ್ತಿದೆ.

  • ಯಾರು ರಾಜಮೌಳಿ ಅವನು? – RRR ಇವೆಂಟ್ ಬಗ್ಗೆ ವಾಟಾಳ್ ನಾಗರಾಜ್ ಆಕ್ರೋಶ

    ಯಾರು ರಾಜಮೌಳಿ ಅವನು? – RRR ಇವೆಂಟ್ ಬಗ್ಗೆ ವಾಟಾಳ್ ನಾಗರಾಜ್ ಆಕ್ರೋಶ

    ಚಿಕ್ಕಬಳ್ಳಾಪುರ: ಮಾರ್ಚ್ 19 ರಂದು ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿ ಬಳಿ ನಡೆದ ರಾಜಮೌಳಿ ನಿರ್ದೇಶನದ ಆರ್‌ಆರ್‌ಆರ್‌ ಚಿತ್ರದ ಪ್ರೀ ರಿಲೀಸ್ ಇವೆಂಟ್ ವಿರುದ್ಧ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಆಕ್ರೋಶ ಹೊರಹಾಕಿದ್ದಾರೆ.

    ಚಿಕ್ಕಬಳ್ಳಾಪುರ ನಗರದ ರೈಲ್ವೆ ನಿಲ್ದಾಣದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಅಂದು ಪರಭಾಷಾ ಚಿತ್ರಗಳು ಕರ್ನಾಟಕದಲ್ಲಿ ಬೇಡ ಅಂತ ಮೈಸೂರು ನಗರದಲ್ಲಿ ಚಳವಳಿ ಮಾಡಿದೆ. ಆದರೆ ಅದೇ ದಿನ ಚಿಕ್ಕಬಳ್ಳಾಪುರದಲ್ಲಿ ಆರ್‌ಆರ್‌ಆರ್‌ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಮಾಡಿದ್ದಾರೆ. ಇದು ನನಗೆ ಬಹಳ ನೋವು ತಂದಿತು. ಇದು ಗಂಡು ಮೆಟ್ಟಿದ ಕನ್ನಡಿಗರ ನೆಲ, ಇಲ್ಲಿ ಕನ್ನಡಕ್ಕೆ, ಕನ್ನಡಿಗರಿಗೆ, ಮಾನ್ಯತೆ ಗೌರವ ಇರಬೇಕು. ಆದರೆ ತೆಲುಗು ಭಾಷೆಯ ಆರ್‌ಆರ್‌ಆರ್‌ ಚಿತ್ರದ ಪ್ರೀ ರಿಲೀಸ್ ಇವೆಂಟ್ ಮಾಡಿದ್ದಾರೆ. ಮಾನ ಮಾರ್ಯಾದೆ ಇರುವವರು ಮಾಡುವ ಕೆಲಸ ಇದಲ್ಲ ಅಂತ ಅಸಮಾಧಾನ ಹೊರಹಾಕಿದರು. ಇದನ್ನೂ ಓದಿ: ಅಮೆರಿಕಾದಲ್ಲಿ ಅಪ್ಪು ಬರ್ತಡೇ, ಪುನೀತ್ ರಾಜ್ ಕುಮಾರ್ ಮಗಳೇ ಅತಿಥಿ

    ಮುಖ್ಯಮಂತ್ರಿಗಳು ಒಳ್ಳೆಯವರು ಅವರನ್ನು ದಾರಿ ತಪ್ಪಿಸಿ ಕಾರ್ಯಕ್ರಮಕ್ಕೆ ಕರೆ ತಂದಿದ್ದಾರೆ. ಅವರಿಗೆ ಏನಾಗಿದೆ ಅಂದರೆ ಈ ಕಡೆ ಈ ಮಂತ್ರಿ ಆ ಕಡೆ ಆ ಮಂತ್ರಿ ಕರೆದ ಕಡೆ ಹೋಗಬೇಕಿದೆ. ಆರ್‌ಆರ್‌ಆರ್‌ ಪ್ರೀ ರಿಲೀಸ್ ಇವೆಂಟ್ ಮಾಡಿದ್ದು ಕನ್ನಡಿಗರಿಗೆ ಕನ್ನಡ ಚಿತ್ರರಂಗಕ್ಕೆ ಅಪಮಾನ. ಯಾರು ರಾಜಮೌಳಿ ಅವನು? ಅಂತ ಖಾರವಾಗಿ ಪ್ರಶ್ನೆ ಮಾಡಿ, ಏನು ಅವನದು ಹೈದರಾಬಾದ್ ಆಂಧ್ರದಲ್ಲಿ ತೆಲಂಗಾಣದಲ್ಲಿ ಮಾಡಿಕೊಳ್ಳಲಿ. ಕರ್ನಾಟಕದ ನಂದಿಬೆಟ್ಟದ ಪಕ್ಕಕ್ಕೆ ಬಂದು ಕನ್ನಡಿಗರ ನೆಲ ದುರ್ಬಳಕೆ ಮಾಡಿಕೊಂಡಿದ್ದು ಸರಿ ಇಲ್ಲ. ಈ ವಿಚಾರದಲ್ಲಿ ಜಿಲ್ಲಾಡಳಿತ ವಿಫಲ ಪೊಲೀಸ್ ಇಲಾಖೆ ವೈಫಲ್ಯ ಅನುಭವಿಸಿದೆ. ಡಿಸಿಯವರೇ ಕಾರ್ಯಕ್ರಮಕ್ಕೆ ಹೇಗೆ ಅನುಮತಿ ನೀಡಿದ್ದೀರಾ? ಯಾವ ಕಾರಣಕ್ಕೆ ಕೊಟ್ರಿ? ಕನ್ನಡ ಚಿತ್ರ ನಾ ಎಂದಾದರೂ ಈ ತರ ಕಾರ್ಯಕ್ರಮ ಮಾಡಿದ್ದೀರಾ? ಮೆರವಣಿಗೆ ಪ್ರಚಾರ ಮಾಡಿದ್ದೀರಾ. ಯಾವ ತೆವಲಿಗೆ ಮಾಡಿದ್ದೀರಾ? ಏನ್ ತೀಟೆ ನಿಮ್ಮದು, ಅಂತ ಜಿಲ್ಲಾಡಳಿತದ ನಡೆ ಬಗ್ಗೆ ಖಂಡಿಸಿದರು. ಇದನ್ನೂ ಓದಿ: ಆರೋಗ್ಯ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ: ಸುಧಾಕರ್ ರಾಜೀನಾಮೆಗೆ ಎಎಪಿ ಆಗ್ರಹ

    ಕನ್ನಡ ಭಾಷೆಯ ಮೇಲೆ ಈ ರೀತಿಯ ದೌರ್ಜನ್ಯ ಸರಿ ಅಲ್ಲ. ಒಂದು ಕಡೆ ಶಾಸನ ಸಭೆ ನಡೆಯುತ್ತಿದ್ದು, ಇಲ್ಲಿ ನಡೆದಿರುವ ದುರಂತದ ಬಗ್ಗೆ ಖಂಡಿಸುತ್ತೇನೆ. ಸಮಗ್ರ ವಾದ ಉನ್ನತ ಮಟ್ಟದ ತನಿಖೆ ಮಾಡುವಂತೆ ಆಗ್ರಹಿಸುತ್ತೇನೆ ಎಂದರು. ನಿಮ್ಮ ವ್ಯಾಪಾರಕ್ಕೋಸ್ಕರ ಕನ್ನಡಿಗರ ಭೂಮಿ ಬಳಸಿದ್ದು ಅಕ್ಷಮ್ಯ ಅಪರಾಧ. ನಾನು ನನ್ನ ಜೀವನದುದ್ದಕ್ಕೂ ಕನ್ನಡ ಬಿಟ್ಟು ಬೇರೆ ಮಾತು ಇಲ್ಲ ಪಕ್ಷಾಂತರ ಮಾಡಿಲ್ಲ. ಕನ್ನಡಕ್ಕೆ ಅಪಮಾನ ಆಗಿದೆ. ಹೀಗಾಗಿ ಸಚಿವ ಡಾ. ಕೆ. ಸುಧಾಕರ್ ಬಹಿರಂಗ ಕ್ಷಮಾಪಣೆ ಕೇಳಬೇಕು. ಸಚಿವ ಸ್ಥಾನಕ್ಕೆ ಸುಧಾಕರ್ ರಾಜೀನಾಮೆ ಕೊಡಬೇಕು. ಇದು ಕನ್ನಡಿಗರು ಮಾಡಿದ ಅಪಮಾನ ನೋವಿನ ಸಂಗತಿ. ಕರ್ನಾಟಕದಲ್ಲಿ ಪರಭಾಷಾ ಚಿತ್ರಗಳನ್ನ ಬಹಿಷ್ಕಾರ ಹಾಕಬೇಕು. ಶಿವರಾಜ್ ಕುಮಾರ್ ಸಹ ಕಾರ್ಯಕ್ರಮಕ್ಕೆ ಬರಬಾರದಿತ್ತು ಎಂದರು.

  • ಮೌಳಿಯ ರಂಗೀನ್ ಲೋಕದಲ್ಲಿ ಮಿಂದೆದ್ದ ಜನಸಾಗರ… ಒಂದೇ ವೇದಿಕೆಯಲ್ಲಿ ಸೌತ್ ಸ್ಟಾರ್ಸ್‍ಗಳ ಸಮಾಗಮ

    ಮೌಳಿಯ ರಂಗೀನ್ ಲೋಕದಲ್ಲಿ ಮಿಂದೆದ್ದ ಜನಸಾಗರ… ಒಂದೇ ವೇದಿಕೆಯಲ್ಲಿ ಸೌತ್ ಸ್ಟಾರ್ಸ್‍ಗಳ ಸಮಾಗಮ

    ಗಮಗಿಸುಗ ಸ್ಟೇಜ್.. ಕಣ್ಣಾಯಿಸಿದ ಕಡೆಯೆಲ್ಲಾ ಅಭಿಮಾನಿಗಣ. ಇಳಿಸಂಜೆಯಲ್ಲಿ ಸಂಗೀತ-ನೃತ್ಯದ ಯಾನ. ನೆಚ್ಚಿನ ಸ್ಟಾರ್ಸ್ ಕಣ್ತುಂಬಿಕೊಂಡು ಪುಳಕಿತರಾದ ಫ್ಯಾನ್ಸ್. ಇದೆಲ್ಲಾ ಗಡಿನಾಡು ಚಿಕ್ಕಬಳ್ಳಾಪುರದಲ್ಲಿ ನಡೆದ RRR ಅದ್ಧೂರಿ ಪ್ರೀ-ರಿಲೀಸ್ ಇವೆಂಟ್ ಝಲಕ್.

    ಮಾರ್ಚ್ 25ಕ್ಕೆ ಪಂಚ ಭಾಷೆಯಲ್ಲಿ ಅದ್ಧೂರಿಯಾಗಿ ತೆರೆಕಾಣ್ತಿರುವ ಮಲ್ಟಿಸ್ಟಾರ್ ಸಿನಿಮಾ RRR ಪ್ರೀ-ರಿಲೀಸ್ ಇವೆಂಟ್ ಧಾಮ್ ಧೂಮ್ ಅಂತಾ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಇಳಿಸಂಜೆಯಲ್ಲಿ ಅದ್ಧೂರಿಯಾಗಿ ನಡೆದ ಪ್ರೀ-ರಿಲೀಸ್ ಇವೆಂಟ್ ಗೆ ಜನಸಾಗರವೇ ಹರಿದು ಬಂದಿತ್ತು. ಸುಮಾರು ನೂರು ಎಕರೆ ಜಾಗದಲ್ಲಿ ನಡೆದ ಕಾರ್ಯಕ್ರಮಕ್ಕೆ ಸಿಎಂ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವ ಕೆ.ಸುಧಾಕರ್, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಇಡೀ RRR ಬಳಗ ಸಾಕ್ಷಿಯಾಯ್ತು. ಇದನ್ನೂ ಓದಿ: ‘ದಿ ಕಾಶ್ಮೀರ್‌ ಫೈಲ್ಸ್’ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಸಹಾಯ ಮಾಡುವುದಿಲ್ಲ: ಸಂಜಯ್ ರಾವತ್

    ಯಂಗ್ ಟೈಗರ್ ಕನ್ನಡ ಪ್ರೀತಿಗೆ ಕನ್ನಡಿಗರ ಸಲಾಂ
    ಕನ್ನಡ ಭಾಷೆ.. ಕನ್ನಡಿಗರ ಮೇಲೆ ವಿಶೇಷ ಅಭಿಮಾನ ಹೊಂದಿರುವ ಯಂಗ್ ಟೈಗರ್ ಜೂನಿಯರ್ ಎನ್‍ಟಿಆರ್ ಕನ್ನಡದಲ್ಲಿಯೇ ಮಾತು ಆರಂಭಿಸಿ ಎಲ್ಲರ ಗಮನಸೆಳೆದರು. ಅಪ್ಪು ಎಲ್ಲಿಯೂ ಹೋಗಿಲ್ಲ. ಗಾಳಿ, ನೀರು ಎಲ್ಲೆಡೆ ಅಪ್ಪು ಇದ್ದಾರೆ ಅಂತಾ ನೆಚ್ಚಿನ ಗೆಳೆಯನನ್ನು ನೆನೆದ ತಾರಕ್, ಮಾರ್ಚ್ 25ಕ್ಕೆ ತ್ರಿಬಲ್ ಆರ್ ಸಿನಿಮಾವನ್ನು ಫ್ಯಾಮಿಲಿ ಸಮೇತರಾಗಿ ನೋಡಿ ಅಂತ ಮನವಿ ಮಾಡಿಕೊಂಡರು.

    ಅಪ್ಪು ನೆನೆದು ಭಾವುಕ
    ತ್ರಿಬಲ್ ಆರ್ ಸಿನಿಮಾ ಪ್ರೀ-ರಿಲೀಸ್ ಇವೆಂಟ್ ಸ್ಪೆಷಲ್ ಗೆಸ್ಟ್ ಆಗಿ ಆಗಮಿಸಿದ್ದ ನಟ ಶಿವರಾಜ್ ಕುಮಾರ್, ಒಂದು ಕಡೆ ಸಂತೋಷನೂ ಆಗ್ತಾ ಇದೆ. ಮತ್ತೊಂದು ಕಡೆ ದುಃಖ ಇದೆ. ಅಪ್ಪುನ ಕಳೆದುಕೊಂಡು ದುಃಖದಲ್ಲಿದ್ದೇವೆ. ನಮ್ಮ ದುಃಖದಲ್ಲಿ ಭಾರತೀಯ ಚಿತ್ರರಂಗ ಇದೆ, ಸರ್ಕಾರ ಇದೆ. ಬೊಮ್ಮಾಯಿ ಅವರು ಅಣ್ಣನ ಸ್ಥಾನದಲ್ಲಿ ನಿಂತಿದ್ದಾರೆ. ನಮಗಾದಷ್ಟೇ ನೋವು ಅವರಿಗೂ ಆಗಿದೆ. ರಾಮ್ ಚರಣ್, ಜ್ಯೂ.ಎನ್‍ಟಿಆರ್ ಬಂದು ನಾವು ನಿಮ್ಮ ತಮ್ಮ ಎಂದಾಗ ಖುಷಿ ಆಯ್ತು. ಅಪ್ಪುನ ಇವರಲ್ಲಿ, ಅಭಿಮಾನಿಗಳಲ್ಲಿ ಕಾಣುತ್ತಿದ್ದೆ.

    ನಾನು ರಾಜಮೌಳಿ ದೊಡ್ಡ ಫ್ಯಾನ್. ಜ್ಯೂ.ಎನ್‍ಟಿಆರ್ ಅವರ ಎಲ್ಲ ಸಿನಿಮಾ ಫಸ್ಟ್ ಡೇ ಫಸ್ಟ್ ಶೋ ನೋಡ್ತೀನಿ. ರಾಮ್ ಚರಣ್, ಪವನ್ ಕಲ್ಯಾಣ್, ಚಿರಂಜೀವಿ, ಅಜಿತ್, ವಿಜಯ್ ಪ್ರತಿಯೊಬ್ಬರ ಸಿನಿಮಾನೂ ನಾನು ಥಿಯೇಟರ್‍ನಲ್ಲೇ ನೋಡೋದು. ನನಗೆ ಮನೆಯಲ್ಲೇ ಶೋ ಹಾಕಿಸಿಕೊಂಡು ಸಿನಿಮಾ ನೋಡೋದು ಇಷ್ಟ ಇಲ್ಲ. ನಾನು ಅಭಿಮಾನಿ ತರಹ ಥಿಯೇಟರ್ ಗೆ ಹೋಗೆ ಸಿನಿಮಾ ನೋಡೋದು ಎಂದಿದ್ದಾರೆ ಶಿವರಾಜ್‌ಕುಮಾರ್. RRR ಸಿನಿಮಾ ಯಶಸ್ಸು ಆಗಲಿ ಎಂದು ಹಾರೈಸಿದರು.

    ಇಡೀ RRR ಬಳಗಕ್ಕೆ ಧನ್ಯವಾದ ಹೇಳಿದ ಮೌಳಿ
    ಚಿತ್ರಬ್ರಹ್ಮ ರಾಜಮೌಳಿ ಅದ್ಧೂರಿ ಪ್ರೀ-ರಿಲೀಸ್ ಇವೆಂಟ್ ನಲ್ಲಿ ಇಡೀ ಚಿತ್ರತಂಡಕ್ಕೆ ಧನ್ಯವಾದ ತಿಳಿಸಿದರು. ಶಿವಣ್ಣ, ಮುಖ್ಯಮಂತ್ರಿ, ಆರೋಗ್ಯ ಸಚಿವರ ಬಗ್ಗೆ ಕನ್ನಡದಲ್ಲಿಯೇ ಮಾತನಾಡಿ ಗಮನಸೆಳೆದ ಮೌಳಿ, ಇಂತಹ ಅದ್ಧೂರಿ ಇವೆಂಟ್ ಆಯೋಜಿಸಿದ KVN ಸಂಸ್ಥೆಯ ಒಡೆಯ ವೆಂಕಟ್ ಅವರಿಗೆ ಧನ್ಯವಾದ ತಿಳಿಸಿದರು. ರಾಮ್ ಚರಣ್ ಸಿನಿಮಾ ನೋಡಲು ಕಾತುರನಾಗಿದ್ದೇನೆ. ಪ್ರತಿಯೊಬ್ಬರು ಥಿಯೇಟರ್ ಗೆ ಹೋಗಿ ಸಿನಿಮಾ ನೋಡಿ  ಪ್ರೋತ್ಸಾಹಿಸಿ ಎಂದರು.

    ಕಿತ್ತೂರು ರಾಣಿ ಚೆನ್ನಮ್ಮ ಬಗ್ಗೆ ತೋರಿಸಿರುವುದು ಹೆಮ್ಮೆ
    ಸ್ವಾತಂತ್ರ್ಯ ಹೋರಾಟದ ಸತ್ಯಗಳು ಯುವಪೀಳಿಗೆಗೆ ತಿಳಿಸುವ ಕೆಲಸ ಆಗಬೇಕಿದೆ. ಸ್ವಾತಂತ್ರ್ಯ ಸೇನಾನಿ RRR ಸಿನಿಮಾ ನೋಡಿ ಇಡೀ ದೇಶ ಹೆಮ್ಮೆಪಡಲಿದೆ ಎಂದ ಮುಖ್ಯಮಂತ್ರಿ, ಕಿತ್ತೂರು ರಾಣಿ ಚೆನ್ನಮ್ಮ ಬಗ್ಗೆ RRR ಸಿನಿಮಾದಲ್ಲಿ ತೋರಿಸಿರುವುದು ಹೆಮ್ಮೆ ಎಂದರು. ಇದನ್ನೂ ಓದಿ: ಸಿಎಂ ಬೊಮ್ಮಾಯಿ ಅಣ್ಣನ ಸ್ಥಾನದಲ್ಲಿ ನಿಂತು ನಮ್ಮಷ್ಟೇ ದುಃಖ ಅನುಭವಿಸಿದ್ದಾರೆ: ಶಿವಣ್ಣ

    ಭಾರತದ ಅತಿದೊಡ್ಡ ಇವೆಂಟ್‍ನ್ನು ಚಿಕ್ಕಬಳ್ಳಾಪುರದಲ್ಲಿ ಏರ್ಪಡಿಸಿದ್ದ ಪ್ರತಿಷ್ಠಿತ ಕೆವಿಎನ್ ಪ್ರೋಡಕ್ಷನ್ ಹೌಸ್ RRR ಸಿನಿಮಾ ಕರುನಾಡಿನಾದ್ಯಂತ RRR ಚಿತ್ರವನ್ನು ವಿತರಣೆ ಮಾಡಲಿದೆ. ಸುಮಾರು 450 ಕೋಟಿ ಬಜೆಟ್‍ನಲ್ಲಿ ದಾನಯ್ಯ ಸಿನಿಮಾಗೆ ಬಂಡವಾಳ ಹೂಡಿದ್ದು, ರಾಜಮೌಳಿ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಜೂನಿಯರ್ ಎನ್‌ಟಿಆರ್, ರಾಮ್ ಚರಣ್, ಆಲಿಯಾ ಭಟ್, ಅಜಯ್ ದೇವಗನ್ ಸೇರಿದಂತೆ ದೊಡ್ಡತಾರಾಬಳಗ ಸಿನಿಮಾದಲ್ಲಿ ನಟಿಸಿದ್ದು, ಇದೇ 25ಕ್ಕೆ ವಲ್ರ್ಡ್ ವೈಡ್ RRR ಸಿನಿಮಾ ರಿಲೀಸ್ ಅಗ್ತಿದೆ.

  • ಅಪ್ಪು ಇಲ್ಲ ಅಂತ ನೋವು ಪಡ್ಬೇಡಿ, ಅಪ್ಪು ನಮ್ಮ ಜೊತೆಯಲ್ಲೇ ಇರ್ತಾರೆ: ಜ್ಯೂ.ಎನ್‍ಟಿಆರ್

    ಅಪ್ಪು ಇಲ್ಲ ಅಂತ ನೋವು ಪಡ್ಬೇಡಿ, ಅಪ್ಪು ನಮ್ಮ ಜೊತೆಯಲ್ಲೇ ಇರ್ತಾರೆ: ಜ್ಯೂ.ಎನ್‍ಟಿಆರ್

    ಪ್ಪು ಇಲ್ಲ ಅಂತ ಯಾರೂ ನೋವು ಪಡಬೇಡಿ ಅಪ್ಪು ಸದಾ ನಮ್ಮ ಜೊತೆಯಲ್ಲಿಯೇ ಇರುತ್ತಾರೆ ಎಂದು ಟಾಲಿವುಡ್ ನಟ ಜ್ಯೂನಿಯರ್ ಎನ್‍ಟಿಆರ್ ಹೇಳಿದ್ದಾರೆ.

    ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿ ಬಳಿ ನಡೆದ ಆರ್​ಆರ್​ಆರ್ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕರ್ನಾಟಕಕ್ಕೆ ನಮಸ್ಕಾರ ಎಂದು ಕನ್ನಡದಲ್ಲಿ ಮಾತು ಆರಂಭಿಸಿದರು. ನನ್ನ ಅಣ್ಣ ಶಿವರಾಜ್ ಕುಮಾರ್ ಅಂತ ಸಂಭೋಧಿಸಿ, ಅಪ್ಪು ಅವರನ್ನು ನೆನೆದರು. ನೀವು ಗಮನಿಸಿದ್ದಿರೋ ಇಲ್ಲವೋ ಗೊತ್ತಿಲ್ಲ. ಪುನೀತ್ ನಮ್ಮ ಜೊತೆ ಇಲ್ಲ ಅಂತ ನಾನು ಎಂದೂ ನಂಬುವುದಿಲ್ಲ. ಪುನೀತ್ ಪಾರ್ಥೀವ ಶರೀರ ನೋಡಲು ಬಂದಾಗ ನನಗೆ ಅನಿಸಿತು. ನಾನು ಎಲ್ಲಿಗೂ ಹೋಗುತ್ತಿಲ್ಲ. ಈ ಗಾಳಿ, ಮಣ್ಣು, ನೀರು ನಿಮ್ಮ ಹೃದಯದಲ್ಲಿಯೇ ನಾನು ಇರುತ್ತೇನೆ ಅಂತ ಹೇಳಿದ ಹಾಗೆ ಭಾಸವಾಯಿತು. ಮಳೆ, ಗಾಳಿ ರೂಪದಲ್ಲಿ ಈಗ ನಮ್ಮ ಪಕ್ಕದಲ್ಲಿಯೇ ಇದ್ದಾರೆ ಎಂದ ಅಪ್ಪುರನ್ನು ಸ್ಮರಿಸಿದರು. ಇದನ್ನೂ ಓದಿ: ನನ್ನ ಅಪ್ಪು, ನಾನು ಹೇಗೆ ಮರೆಯಲು ಸಾಧ್ಯ: ಬೊಮ್ಮಾಯಿ

    ಪುನೀತ್ ನಮ್ಮ ಜೊತೆಯಲ್ಲಿ ಇಲ್ಲ ಅಂತ ನಾನು ಅಳಲಿಲ್ಲ. ಮುಂದೆಯೂ ಅಳುವುದಿಲ್ಲ. ಏಕೆಂದರೆ ಪುನೀತ್ ಅಂದರೆ ಸೆಲೆಬ್ರೇಷನ್. ಪುನೀತ್ ಎಲ್ಲ ಮೂವಿಗಳನ್ನು ಸೆಲೆಬ್ರೇಟ್ ಮಾಡೋಣ. ಜೇಮ್ಸ್ ಸಿನಿಮಾ ನೋಡುವ ಮೂಲಕ ಪುನೀತ್ ಅವರನ್ನು ಸಂಭ್ರಮಿಸೋಣ. ಪುನೀತ್ ನಗುವನ್ನು ನೆನೆಯೋಣ. ಪುನೀತ್ ಇಲ್ಲ ಅಂತ ಯಾರೂ ನೋವು ಪಡೋದು ಬೇಡ ಎಂದರು. ಇದನ್ನೂ ಓದಿ: ಹಾಲಿವುಡ್ ಖ್ಯಾತ ನಟಿ ಜೊತೆ ಸೆಕ್ಸ್ ಮಾಡಿದ್ದೇನೆ ಎಂಬ ಹೇಳಿಕೆಗೆ 50 ಲಕ್ಷ ಆಫರ್: ಖ್ಯಾತ ನಟ ಬಿಚ್ಚಿಟ್ಟ ರಹಸ್ಯ

    ಇದೇ ವೇಳೆ ಮಾತನಾಡಿದ ನಟ ರಾಮ್ ಚರಣ್ ತೇಜ್ ಸಹ ಅಪ್ಪು ನೆನೆಸಿಕೊಂಡು ಭಾವುಕರಾದರು. ಪುನೀತ್ ರಾಜ್ ಕುಮಾರ್ ನಮ್ಮ ಜೊತೆಯಲ್ಲಿ ಇಲ್ಲ ಅಂದರೆ ನನಗೆ ನಂಬಲು ಆಗುತ್ತಿಲ್ಲ. ನಂಬುವುದಿಲ್ಲ. ತಾರಕ್ ಹೇಳಿದ ಹಾಗೆ ಅವರು ಇಲ್ಲಿ ಎಲ್ಲೋ ನಮಗೆ ಆಶೀರ್ವಾದ ಮಾಡುತ್ತಿದ್ದಾರೆ. ಅಪ್ಪು ಇಲ್ಲದ ಕೊರಗು ಶಿವಣ್ಣನ ಮೂಲಕ ಈಡೇರಿಸಿಕೊಳ್ಳುತ್ತೇವೆ.ನಾವು ಸಾಯೋವವರೆಗೂ ನಿಮ್ಮನ್ನು ನೆನಪಿಸಿಕೊಳ್ಳುತ್ತೇವೆ ಎಂದು ಶಿವಣ್ಣನಿಗೆ ಹೇಳಿದರು.