-ಧರ್ಮಸ್ಥಳ ಕ್ಷೇತ್ರಕ್ಕೆ ಅಪಮಾನ ಮಾಡಿರೋರನ್ನ ಜೈಲಿಗೆ ಹಾಕಬೇಕು
ಬೆಂಗಳೂರು: ಚಡ್ಡಿ ಹಾಕುತ್ತಿದ್ದಾಗ ಇದ್ದ ಆರ್‌ಎಸ್‌ಎಸ್ (RSS) ಈಗ ಬಿಜೆಪಿ ಪುಡಾರಿಗಳು ಬಂದ ಮೇಲೆ ಬದಲಾವಣೆ ಆಗಿದೆ ಅಂತ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ (Belur Gopalakrishna) ಆರ್‌ಎಸ್‌ಎಸ್ ಮತ್ತು ಬಿಜೆಪಿ (BJP) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಆರ್‌ಎಸ್‌ಎಸ್ ಪಥ ಸಂಚಲನದಲ್ಲಿ ಭಾಗಿಯಾಗಿದ್ದ ಪಿಡಿಓ ಅಮಾನತಿಗೆ KAT ತಡೆ ನೀಡಿದ ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಸಹಜವಾಗಿ ಸರ್ಕಾರಿ ಅಧಿಕಾರಗಳು ಹೀಗೆ ಭಾಗವಹಿಸಿ ಗೊಂದಲ ಸೃಷ್ಟಿ ಮಾಡಬಾರದು. ಇಂತಹದ್ರಲ್ಲಿ ಭಾಗಿಯಾಗದೇ ಸುಮ್ಮನೆ ಇರಬೇಕು. ಕೋರ್ಟ್ ಆದೇಶಕ್ಕೆ ನಾವು ತಲೆ ಬಾಗಬೇಕಾಗಿದೆ ಎಂದರು. ಇದನ್ನೂ ಓದಿ: ಕರ್ನಾಟಕ ಪ್ರವಾಸೋದ್ಯಮ ಇಲಾಖೆಯಿಂದ ವಯನಾಡು ಪ್ರಮೋಷನ್: ಸರ್ಕಾರದ ವಿರುದ್ಧ ಬಿಜೆಪಿ ಕಿಡಿ
ಯಾವುದೇ ಸಂಸ್ಥೆ ಕಾರ್ಯಕ್ರಮ ಮಾಡಬೇಕಾದರೆ ಪರ್ಮಿಷನ್ ತೆಗೆದುಕೊಳ್ಳಬೇಕು ಅಂತ ಪ್ರಿಯಾಂಕ್ ಖರ್ಗೆ ಹೇಳಿದ್ದರು. ಇದರಲ್ಲಿ ತಪ್ಪೇನು ಇಲ್ಲ. ಶಾಲಾ ಆವರಣದಲ್ಲಿ ಇಂತಹ ಕಾರ್ಯಕ್ರಮಕ್ಕೆ ಅನುಮತಿ ಕೊಡಬಾರದು. ಈಗ ಕೋರ್ಟ್ ಆದೇಶ ಮಾಡಿದೆ, ನಾವು ಪಾಲನೆ ಮಾಡುತ್ತೇವೆ. ಆದರೆ ಮುಂದೆ ಹೀಗೆ ಅನೇಕರು ಬಂದು ಕಾರ್ಯಕ್ರಮ ಮಾಡುತ್ತೇವೆ ಅಂದರೆ ಸಮಸ್ಯೆ ಆಗುತ್ತದೆ. ಶಾಲೆಗಳಲ್ಲಿ ಕಾರ್ಯಕ್ರಮ ಮಾಡಲು ಅವಕಾಶ ಕೊಡಬಾರದು ಎಂದು ತಿಳಿಸಿದರು. ಇದನ್ನೂ ಓದಿ: ಚೀನಾ ಮೇಲಿನ ಟ್ಯಾರಿಫ್ ಶೇ. 57ರಿಂದ 47ಕ್ಕೆ ಇಳಿಸಿದ ಟ್ರಂಪ್
ಇನ್ನು ಧರ್ಮಸ್ಥಳ ಕೇಸ್‌ನಲ್ಲಿ ಬುರುಡೆ ಗ್ಯಾಂಗ್‌ನಿಂದ ಕೇಸ್ ವಾಪಸ್‌ಗೆ ಅರ್ಜಿ ಹಾಕಿರೋ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಧರ್ಮಸ್ಥಳದ ಕೇಸ್ ದೊಡ್ಡ ಮಟ್ಟದಲ್ಲಿ ಸುದ್ದಿ ಆಗಿತ್ತು. ಇದು ಸಾಮಾನ್ಯ ವಿಚಾರ ಅಲ್ಲ. ದುಷ್ಟ ಶಕ್ತಿ ಸೇರಿಕೊಂಡು ದೇವಸ್ಥಾನಕ್ಕೆ ಹಾನಿ ಮಾಡಿದ್ದವು. ಅದರಂತೆ ಎಸ್‌ಐಟಿ ರಚನೆ ಮಾಡಲಾಗಿತ್ತು. ಈಗ ರಿಪೋರ್ಟ್ ನೋಡಿ ಮುಂದಿನ ತೀರ್ಮಾನ ಅಂತ ಹೋಮ್ ಮಿನಿಸ್ಟರ್ ಹೇಳಿದ್ದಾರೆ. ಆದರೆ ಈ ವಿಷ್ಯದಲ್ಲಿ ಯಾರು ಶಾಮೀಲು ಆಗಿದ್ದಾರೆ ಅವರನ್ನು ಜೈಲಿಗೆ ಕಳುಹಿಸಬೇಕು ಎಂದರು. ಇದನ್ನೂ ಓದಿ: ಬಿಜೆಪಿಯವರಿಗೆ ದುರ್ಬುದ್ಧಿ – ವಯನಾಡ್ ಪ್ರಿಯಾಂಕಾ ಗಾಂಧಿ ಕ್ಷೇತ್ರ ಅಂತ ಆರೋಪ ಮಾಡ್ತಿದ್ದಾರೆ: ರಾಮಲಿಂಗಾರೆಡ್ಡಿ
ಬೆಂಗಳೂರು/ಕಲಬುರಗಿ: ರಾಜ್ಯದಲ್ಲಿ ತೀವ್ರ ಕೂತೂಹಲ ಕೆರಳಿಸಿರುವ ಚಿತ್ತಾಪುರ ಆರ್‌ಎಸ್‌ಎಸ್ ಪಥಸಂಚಲನ (Chittapur RSS Route March) ಕುರಿತು, ಕಲಬುರಗಿಯ ಹೈಕೋರ್ಟ್ ಪೀಠ ಇಂದು ಮಹತ್ವದ ಸೂಚನೆ ನೀಡಿದೆ. ನವೆಂಬರ್ 5ಕ್ಕೆ ಬೆಂಗಳೂರಿನಲ್ಲಿ ಶಾಂತಿಸಭೆ ನಡೆಸಲು ಸೂಚನೆ ನೀಡಿದ್ದು, ನ.7ಕ್ಕೆ ವಿಚಾರಣೆ ಮುಂದೂಡಿ ಆದೇಶಿಸಿದೆ.
ಹೌದು. ಆರ್‌ಎಸ್‌ಎಸ್ ನ.2ರಂದು ಪಥಸಂಚಲನ ನಡೆಸಲು ಅನುಮತಿ ಕೋರಿ ಅರ್ಜಿ ಸಲ್ಲಿಸಿತ್ತು. ಮತ್ತೊಂದೆಡೆ 5 ಸಂಘಟನೆಗಳು ಅಂದೇ ನಮಗೂ ಅವಕಾಶ ಕೊಡಿ ಎಂದು ಅರ್ಜಿ ಹಾಕಿದ್ದವು. ಈ ಎಲ್ಲಾ ಅರ್ಜಿಗಳ ಮೊದಲ ಸುತ್ತಿನ ವಿಚಾರಣೆ ನಡೆಸಿದ್ದ ಕಲಬುರಗಿಯ ಹೈಕೋರ್ಟ್ (Kalaburagi High Court) ನ್ಯಾಯಮೂರ್ತಿ ಎಂ.ಜಿ.ಎಸ್.ಕಮಲ್ ಅವರ ಏಕ ಸದಸ್ಯ ಪೀಠ ಅ28ಕ್ಕೆ ಎಲ್ಲಾ 8 ಸಂಘಟನೆಗಳ ಜೊತೆ ಶಾಂತಿ ಸಭೆ ನಡೆಸಿ ಅಂತಿಮ ವರದಿ ಸಲ್ಲಿಸಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಿತ್ತು. ಜಿಲ್ಲಾಡಳಿತ ನೇತೃತ್ವದಲ್ಲಿ ನಡೆದ ಶಾಂತಿಸಭೆಯಲ್ಲಿ ಒಮ್ಮತಕ್ಕೆ ಬಾರದ ಹಿನ್ನೆಲೆ ಕೋರ್ಟ್ ಮತ್ತೊಂದು ಅವಕಾಶ ನೀಡಿದೆ. ನ.5ರಂದು ಮತ್ತೊಮ್ಮೆ ಬೆಂಗಳೂರಲ್ಲಿ ಶಾಂತಿ ಸಭೆ ನಡೆಸಲು ಸೂಚಿಸಿದ್ದು, ನ.7ಕ್ಕೆ ವಿಚಾರಣೆ ಮುಂದೂಡಿದೆ.
ಅದರಂತೆ ನವೆಂಬರ್ 5ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಎಜಿ ಕಚೇರಿಯಲ್ಲಿ ಸಭೆ ನಡೆಯಲಿದೆ. ಕೋರ್ಟ್ ಸೂಚನೆ ಮೇರೆಗೆ ಅರ್ಜಿದಾರರು ಮತ್ತು ಎಜಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ನ.7ರಂದು ಮತ್ತೆ ವಿಚಾರಣೆ ನಡೆಯಲಿದೆ. ಹೀಗಾಗಿ ನ.2ರಂದು ನಡೆಯಬೇಕಿದ್ದ ಆರ್‌ಎಸ್‌ಎಸ್ ಪಥಸಂಚನಲ ಮುಂದೂಡಿಕೆಯಾಗಲಿದೆ. ಇದನ್ನೂ ಓದಿ: ಹೈಕೋರ್ಟ್ ತೀರ್ಪು ಪಾಲಿಸುತ್ತೇವೆ, ಎಲ್ಲರಿಗೂ ಸಮಾನ ಅವಕಾಶ ನೀಡಿ: ಕಲಬುರಗಿ ಆರ್‌ಎಸ್‌ಎಸ್
ಶಾಂತಿಸಭೆಗೆ ಒಪ್ಪಿದ ಎಜಿ ಶಶಿಕಿರಣ್ ಶೆಟ್ಟಿ
ಜಿಲ್ಲಾಡಳಿತ ತೆಗೆದುಕೊಳ್ಳುವ ನಿರ್ಧಾರಕ್ಕೆ ಸಹಕರಿಸಲು ಅರ್ಜಿದಾರರಿಗೆ ಹೈಕೋರ್ಟ್ ಸೂಚನೆ ನೀಡಿದೆ. ಜೊತೆಗೆ ಶಾಂತಿ ಸಭೆ ನಡೆಸುವ ಸ್ಥಳದ ಬಗ್ಗೆ ಅರ್ಜಿದಾರರಿಗೆ ಮಾಹಿತಿ ನೀಡಬೇಕು. ಪ್ರತಿ ಸಂಘಟನೆಯಿಂದ ಮೂರು ಜನರು ಭಾಗಿಯಾಗಲು ಅವಕಾಶ ಇರಲಿದೆ ಎಂದು ಕೋರ್ಟ್ ಹೇಳಿತು. ಕೋರ್ಟ್ ಸೂಚನೆಯನ್ನ ಎಜಿ ಶಶಿಕಿರಣ್ ಶೆಟ್ಟಿ ಸ್ವಾಗತಿಸಿದರು.
ಆರ್‌ಎಸ್‌ಎಸ್ ಅಕ್ಟೋಬರ್ 19 ರಂದೇ ಪಥಸಂಚಲನ ಕಾರ್ಯಕ್ರಮ ಆಯೋಜನೆ ಮಾಡಿತ್ತು. ಆದರೆ ಅರ್ಜಿಯಲ್ಲಿ ಸರಿಯಾದ ಮಾಹಿತಿ ನೀಡಿಲ್ಲ ಮತ್ತು ಹಲವು ಸಂಘಟನೆಗಳು ಪಥಸಂಚಲನಕ್ಕೆ ಅನುಮತಿ ಕೋರಿದ್ದರಿಂದ ಚಿತ್ತಾಪುರ ತಹಶೀಲ್ದಾರ್ ನಾಗಯ್ಯ ಹಿರೇಮಠ ಕಾನೂನು ಸುವ್ಯವಸ್ಥೆ ಕಾರಣ ನೀಡಿ ತಡೆ ನೀಡಿದ್ದರು. ಇದನ್ನೂ ಓದಿ: ಚಿತ್ತಾಪುರ ಶಾಂತಿ ಸಭೆಯಲ್ಲಿ ಅಶಾಂತಿ, ಸಂಘಟನೆಗಳ ಮಧ್ಯೆ ಮೂಡದ ಒಮ್ಮತ: ಇಂದು ಏನಾಯ್ತು?
ಕಲಬುರಗಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಶತಮಾನೋತ್ಸವ ಹಾಗೂ ವಿಜಯದಶಮಿಯ ಅಂಗವಾಗಿ ರಾಜ್ಯಾದ್ಯಂತ ಈವರೆಗೂ 500 ಸ್ಥಳಗಳಲ್ಲಿ ಗಣವೇಷಧಾರಿ ಸ್ವಯಸೇವಕರಿಂದ ಪಥಸಂಚಲನ ನಡೆದಿವೆ. ಎಲ್ಲಿಯೂ ಅಹಿತಕರ ಘಟನೆ ನಡೆದಿಲ್ಲ. ಆದರೂ ಕಲಬುರಗಿ ಹೈಕೋರ್ಟ್ (Kalaburagi) ಪೀಠದ ತೀರ್ಪಿಗನುಗುಣವಾಗಿ ನಾವು ನಡೆಯುತ್ತೇವೆ ಎಂದು ಆರ್‌ಎಸ್‌ಎಸ್ ಜಿಲ್ಲಾ ಸಂಘಚಾಲಕ ಅಶೋಕ್ ಪಾಟೀಲ್ ಸ್ಪಷ್ಟಪಡಿಸಿದ್ದಾರೆ.
ಮಂಗಳವಾರ ಹೈಕೋರ್ಟ್ ನಿರ್ದೇಶನದಂತೆ ಜಿಲ್ಲಾಡಳಿತ ಕಚೇರಿಯಲ್ಲಿ ವಿವಿಧ ಸಂಘಟನೆಗಳ ಶಾಂತಿ ಸಭೆ ಬಳಿಕ ಸಂಘದಿಂದ ಅಧಿಕೃತವಾಗಿ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಸಂಘವು ದೇಶದ ಎಲ್ಲ ಸಮುದಾಯಗಳ ಭಾಷೆ, ಪಂಥ, ನಂಬಿಕೆ ಗೌರವಿಸುವ ಸಂಘಟನೆಯಾಗಿದೆ. ಪಥಸಂಚಲನ (RSS Flag March) ಯಾರ ವಿರುದ್ಧವೂ ಅಲ್ಲ ಎಂದು ಹೇಳಿದರು.
ಚಿತ್ತಾಪುರ ಒಂದು ಐತಿಹಾಸಿಕ ನಗರ. ಸಂಘದ ಸಂಚಲನದಿಂದ ಯಾವುದೇ ರೀತಿಯ ಅಹಿತಕರ ಘಟನೆ ನಮ್ಮ ಕಡೆಯಿಂದ ಆಗುವುದಿಲ್ಲ. ನ.2 ರಂದು ನಡೆಸಲು ಉದ್ದೇಶಿಸಿರುವ ಪಥಸಂಚಲನವು ಚಿತ್ತಾಪುರ ತಾಲೂಕಿನ ಪೂರ್ವ ನಿರ್ಧಾರಿತ ಕಾರ್ಯಕ್ರಮ. ತಾಲೂಕಿನ ಸ್ವಯಂಸೇವಕರೇ ಸಂಚಲನದಲ್ಲಿ ಭಾಗಿಯಾಗಲಿದ್ದಾರೆ. ಹಿಂದೆಯೂ ಚಿತ್ತಾಪುರದಲ್ಲಿ ಸಂಚಲನಗಳು ಶಾಂತವಾಗಿ ನಡೆದಿದ್ದು,ಈಗಲೂ ಸಹ ಶಾಂತವಾಗಿಯೇ ನಡೆಯಲಿದೆ ಎಂಬ ಭರವಸೆ ನಮ್ಮದು. ಹೈಕೋರ್ಟ್‌ನಲ್ಲಿ ಈ ಪ್ರಕರಣವಿದ್ದು ನ್ಯಾಯಾಲಯದ ತೀರ್ಪಿಗನುಗುಣವಾಗಿ ನಾವು ನಡೆಯುತ್ತೇವೆ ಎಂದು ಸ್ಪಷ್ಟಪಡಿಸಿದರು.
ದೇಶದ ಎಲ್ಲಾ ಸಮುದಾಯಗಳ ಭಾವನೆ ಗೌರವಿಸುವ ಆರ್‌ಎಸ್‌ಎಸ್ ಎಲ್ಲರಿಗೂ ಸಮಾನವಾಗಿ ಅವಕಾಶವನ್ನು ಬೇರೆ ಬೇರೆ ಸಮಯದಲ್ಲಿ ನೀಡಬೇಕೆಂದು ಕೇಳಿಕೊಳ್ಳುತ್ತದೆ. ಅವರವರ ವಿಚಾರ ಹೇಳುವ ಎಲ್ಲಾ ಅವಕಾಶಗಳಿವೆ. ಹೀಗಾಗಿ ಎಲ್ಲರಿಗೂ ಕೂಡ ಅನುಕೂಲವಾಗುವಂತೆ ದಿನಗಳನ್ನು ನೀಡುವಂತೆ ವಿನಂತಿಸಿದರು. ಮಾನ್ಯ ಜಿಲ್ಲಾಧಿಕಾರಿಗಳು ಹಾಗೂ ಶಾಂತಿ ಸಭೆಗೆ ಬಂದಿರುವ ಎಲ್ಲ ಸಜ್ಜನ ನಾಗರೀಕರಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘ ಮನವಿ ಮಾಡುತ್ತಿದ್ದು, ನಾವೆಲ್ಲರೂ ಕೂಡಿ ದೇಶದ ಏಳಿಗೆಗೆ ಶ್ರಮಿಸೋಣ ಎಂದು ಹೇಳಿದ್ದಾರೆ.
ನವದೆಹಲಿ: ಆರ್‌ಎಸ್‌ಎಸ್ (RSS) ಗುರಿಯಾಗಿಸಿಕೊಂಡು ಸಾರ್ವಜನಿಕ ಸ್ಥಳಗಳಲ್ಲಿ ಪಥ ಸಂಚಲನ, ಸಭೆ-ಸಮಾವೇಶಗಳಿಗೆ ನಿರ್ಬಂಧ ಹೇರಿದ್ದ ರಾಜ್ಯ ಕಾಂಗ್ರೆಸ್ (Congress) ಸರ್ಕಾರದ ಆದೇಶಕ್ಕೆ ಧಾರವಾಡ ಹೈಕೋರ್ಟ್ ಪೀಠ ತಾತ್ಕಾಲಿಕ ತಡೆ ನೀಡಿ ನೀತಿಪಾಠ ಹೇಳಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಚಾಟಿ ಬೀಸಿದ್ದಾರೆ.
ನವದೆಹಲಿಯಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಸರ್ಕಾರದ ಜಾಗ, ಆವರಣಗಳಲ್ಲಿ ಕಾರ್ಯಕ್ರಮ ನಡೆಸಲು ಖಾಸಗಿ ಸಂಸ್ಥೆಗಳು ಪೂರ್ವಾನುಮತಿ ಪಡೆಯಬೇಕೆಂದು ಹೊರಡಿಸಿದ ಆದೇಶಕ್ಕೆ ಧಾರವಾಡ ಹೈಕೋರ್ಟ್ ಪೀಠ ತಾತ್ಕಾಲಿಕ ತಡೆ ನೀಡಿದೆ. ಇದು ಸಂವಿಧಾನದ ಮೌಲ್ಯಕ್ಕೆ ಸಿಕ್ಕ ಜಯವಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಕೇಂದ್ರ ಚುನಾವಣಾ ಆಯುಕ್ತ ರಾಜಕೀಯ ಪುಢಾರಿ: ಯತೀಂದ್ರ ಸಿದ್ದರಾಮಯ್ಯ
ರಾಜ್ಯ ಕಾಂಗ್ರೆಸ್ ಸರ್ಕಾರ ಸಂವಿಧಾನದ ಮೂಲ ಆಶಯಗಳ ವಿರೋಧವಾಗಿ ನಡೆಯುತ್ತಿದೆ ಎಂಬುದಕ್ಕೆ ಹೈಕೋರ್ಟ್ ಪೀಠ ನೀಡಿದ ಈ ಮಹತ್ವದ ತೀರ್ಪೇ ಸಾಕ್ಷಿ. ಸಂವಿಧಾನ ವಿರೋಧಿ ಕ್ರಮಗಳನ್ನು ಅನುಸರಿಸುವ ಸರ್ಕಾರಕ್ಕೆ ನ್ಯಾಯಾಲಯದ ಈ ತೀರ್ಪು ಎಚ್ಚರಿಕೆಯ ಗಂಟೆಯಾಗಿದೆ. ಈ ಸರ್ಕಾರ ಇನ್ನಾದರೂ ಸಂವಿಧಾನದ ಮೂಲ ಆಶಯ ಗೌರವಿಸುವ ಕಾರ್ಯವನ್ನು ಪಾಲಿಸಲಿ ಎಂದು ಸಲಹೆ ನೀಡಿದರು. ಇದನ್ನೂ ಓದಿ: ಚಿತ್ತಾಪುರ ಶಾಂತಿ ಸಭೆಯಲ್ಲಿ ಅಶಾಂತಿ, ಸಂಘಟನೆಗಳ ಮಧ್ಯೆ ಮೂಡದ ಒಮ್ಮತ: ಇಂದು ಏನಾಯ್ತು?
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಚಟುವಟಿಕೆಗಳನ್ನೇ ಗುರಿಯಾಗಿಸಿಕೊಂಡು ಹೊರಡಿಸಿದ್ದ ಈ ಆದೇಶದ ಹಿಂದಿನ ಪಿತೂರಿಗೆ ನ್ಯಾಯಾಲಯ ತಡೆವೊಡ್ಡಿದಂತಾಗಿದೆ. ಅಲ್ಲದೇ, ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬ ಪಾಠವನ್ನು ಸರ್ಕಾರಕ್ಕೆ ಮಾಡಿದೆ ಎಂದು ಸಚಿವ ಅಭಿಪ್ರಾಯಪಟ್ಟರು. ಇದನ್ನೂ ಓದಿ: ಧಾರವಾಡ ಹೈಕೋರ್ಟ್ ಆದೇಶಕ್ಕೆ ಮೇಲ್ಮನವಿ ಸಲ್ಲಿಸುತ್ತೇವೆ: ಸಿದ್ದರಾಮಯ್ಯ
ಧಾರವಾಡ: ಸರ್ಕಾರಿ ಜಾಗಗಳಲ್ಲಿ ಆರ್‌ಎಸ್‌ಎಸ್ ಪಥಸಂಚಲನಕ್ಕೆ (RSS March) ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದ್ದ ಸರ್ಕಾರಕ್ಕೆ ಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ. ಸರ್ಕಾರದ ಆದೇಶಕ್ಕೆ ಧಾರವಾಡ ವಿಭಾಗೀಯ ಪೀಠ ತಡೆ ನೀಡಿದೆ.
ಸರ್ಕಾರಿ ಆವರಣದಲ್ಲಿ ಖಾಸಗಿ ಸಂಘಟನೆಗಳು ಅನುಮತಿ ಪಡೆಯಬೇಕೆಂಬ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಧಾರವಾಡ ವಿಭಾಗೀಯ ಪೀಠಕ್ಕೆ ಪುನಶ್ಚೇತನ ಸೇವಾ ಸಂಸ್ಥೆ ಅರ್ಜಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿದ ಪೀಠವು ಸರ್ಕಾರದ ಆದೇಶಕ್ಕೆ ತಡೆ ನೀಡಿದೆ. ನ.17ಕ್ಕೆ ವಿಚಾರಣೆಯನ್ನು ಮುಂದೂಡಿ ಪೀಠ ಆದೇಶ ಹೊರಡಿಸಿದೆ. ಸರ್ಕಾರದ ಪರ ವಕೀಲರಿಗೆ ನಾಳೆ ತಕರಾರು ಸಲ್ಲಿಸಲು ಸೂಚನೆ ನೀಡಿದೆ. ಇದನ್ನೂ ಓದಿ: ಕೋಲಾರದ ಮಾಲೂರಿನಲ್ಲಿ ಯಶಸ್ವಿ RSS ಶತಾಬ್ದಿ ಪಥಸಂಚಲನ – ಮಹಿಳೆಯರಿಂದ ಗಣ ವೇಷಧಾರಿಗಳ ಮೇಲೆ ಪುಷ್ಪಾರ್ಚನೆ
ವಿಚಾರಣೆ ವೇಳೆ ಪುನಶ್ಚೇತನ ಸಂಸ್ಥೆಯ ವಕೀಲರಿಂದ ವಾದ ಮಂಡಿಸಿ, ಯಾವುದೇ ಪಾರ್ಕ್ ಮತ್ತು ಸರ್ಕಾರದ ಆಸ್ತಿಯಲ್ಲಿ ಯಾವುದೇ ಸಂಘ ಸಂಸ್ಥೆ ಕಾರ್ಯಕ್ರಮ ನಡೆಸುವಂತಿಲ್ಲ. ಇದಕ್ಕೆ ಅಧಿಕಾರಿಗಳ ಅನುಮತಿ ಪಡೆಯಬೇಕು ಎಂದು ಇದೆ. ಸರ್ಕಾರದ ಆಸ್ತಿ ಎಂದರೆ ರೋಡ್ ಅಂತಾನಾ? 10 ಕ್ಕೂ ಹೆಚ್ಚು ಜನರು ಸೇರಿದರೆ ಅದು ತಪ್ಪಾ ಎಂದು ಕರ್ನಾಟಕ ಪೊಲೀಸ್ ಕಾಯ್ದೆಯ ಬಗ್ಗೆ ಪ್ರಶ್ನಿಸಿದರು.
ಸ್ಥಳೀಯ ಸಂಸ್ಥೆ ಇದನ್ನ ನೋಡಬೇಕು, ಸರ್ಕಾರ ಅಲ್ಲ. ಯಾರು ಇದನ್ನ ಆದೇಶ ಮಾಡಿದ್ದು ಎಂದ ನ್ಯಾಯಮೂರ್ತಿ ಕೇಳಿದರು. ‘ಕ್ಯಾಬಿನೆಟ್ ಆದೇಶ ಮಾಡಿದೆ. ಸರ್ಕಾರ ಶಾಲಾ-ಕಾಲೇಜು, ಉದ್ಯಾನ ಮತ್ತು ಇತರ ಕಡೆ ಸಾರ್ವಜನಿಕರು ಬಳಸಲು ಇದೆ. ರಾಜ್ಯದ ಹಲವು ಸಂಸ್ಥೆ ಪ್ರಚಾರ ತರಬೇತಿ ಉದ್ದೇಶದಿಂದ ಸರ್ಕಾರದ ಆಸ್ತಿ ಅನುಮತಿ ಪಡೆಯದೇ ಮಾಡೋದು ಅಕ್ರಮ ಎಂದು ಹೇಳ್ತಾರೆ’ ಎಂದು ವಕೀಲರು ವಾದಿಸಿದರು. ಇದನ್ನೂ ಓದಿ: ಚಿತ್ತಾಪುರದಲ್ಲಿ RSS ಪಥಸಂಚಲನ ವಿವಾದ – ಅ.28ಕ್ಕೆ ಶಾಂತಿ ಸಭೆ ನಡೆಸಲು ಕೋರ್ಟ್ ಸೂಚನೆ
ಬೆಂಗಳೂರು: ಆರ್‌ಎಸ್‌ಎಸ್ (RSS) ರಿಜಿಸ್ಟರ್ ಆಗಿದ್ಯಾ ಎಂದು ಕೇಳಿದ್ರೆ ತಪ್ಪಾ? ಆಗಿದ್ರೆ ದಾಖಲೆ ತಂದು ಮುಖದ ಮೇಲೆ ಬಿಸಾಕಲಿ ಎಂದು ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಟಾಂಗ್ ಕೊಟ್ಟಿದ್ದಾರೆ.
ಬಹಿರಂಗ ಚರ್ಚೆಗೆ ಬನ್ನಿ ಎಂದರೂ ಚರ್ಚೆಗೆ ಬರಲ್ಲ. ಏನಾದ್ರೂ ಕಂಟೆಂಟ್ ಇದ್ರೆ ಬರ್ತಿದ್ರು, ಬರೀ ವೈಯಕ್ತಿಕವಾಗಿ ಮಾತಾಡ್ತಾರೆ. ಆರ್‌ಎಸ್‌ಎಸ್ ರಿಜಿಸ್ಟರ್ ಆಗಿದ್ಯಾ ಎಂದು ಕೇಳಿದ್ರೆ ತಪ್ಪಾ? ದಾಖಲೆ ತಂದು ಮುಖದ ಮೇಲೆ ಬಿಸಾಕಲಿ. ಇವರಿಗೆ ಎಲ್ಲಿಂದ ದೇಣಿಗೆ ಸಿಗುತ್ತಿದೆ? ದೇವಸ್ಥಾನದ ಹುಂಡಿ ಲಾಕ್ ಆಗಿರುತ್ತೆ. ಅದನ್ನ ತಗೆಯಬೇಕಾದ್ರೆ ತಹಶಿಲ್ದಾರ್ ಬರಬೇಕು. ಎಲ್ಲವನ್ನೂ ಪಾರದರ್ಶಕವಾಗಿ ತೆಗೆಯುತ್ತಾರೆ. ಆದರೆ, ಆರ್‌ಎಸ್‌ಎಸ್‌ಗೆ ಎಲ್ಲಿಂದ ದೇಣಿಗೆ ಬರ್ತಿದೆ. ದೇಣಿಗೆ ಮೂಲ ಗೊತ್ತಾಗಬೇಕಲ್ವಾ? ರಾಜ್ಯ, ದೇಶ, ವಿದೇಶದಿಂದ ಬರುತ್ತಿದ್ಯಾ? ಇದರ ಮೂಲ ಗೊತ್ತಾಗಬೇಕಲ್ವಾ? ದೇಶದ ದೊಡ್ಡ ಎನ್‌ಜಿಓ ಅಂತ ಮೋದಿ ಹೇಳ್ತಾರಲ್ವಾ? ಅದರ ಲೆಕ್ಕವನ್ನು ಕೊಡಲಿ ಈಗ. ಸರ್ದಾರ್ ವಲ್ಲಭಬಾಯ್ ಪಟೇಲ್‌ರಿಂದ ಹಿಡಿದು, ಇಂದಿರಾಗಾAಧಿ ವರೆಗೆ ನಾವು ದೊಡ್ಡ ಮನಸ್ಸು ಮಾಡಿಕೊಂಡು ಬಂದ್ವಿ ಅದೇ ತಪ್ಪಾಗಿದೆ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ಕಲ್ಲಡ್ಕ ಪ್ರಭಾಕರ್ ಭಟ್ ಆಗ್ಲಿ, ಅವರಪ್ಪ ಆಗ್ಲಿ ಕಾನೂನು ಒಂದೇ: ಪ್ರಿಯಾಂಕ್ ಖರ್ಗೆ
ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥಸಂಚಲನ ಮಾಡೇ ಮಾಡ್ತೀವಿ ಎಂಬ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಕಲ್ಲಡ್ಕ ಪ್ರಭಾಕರ್ ಭಟ್ ಆಗಲಿ ಅವರ ಅಪ್ಪ ಆದ್ರೂ ಕಾನೂನು ಒಂದೇ. ಕಲ್ಲಡ್ಕ ಪ್ರಭಾಕರ್ ಭಟ್ ಯಾರು? ಕೋರ್ಟ್‌ಗಿಂತ ಅವರು ದೊಡ್ಡವರಾ? ಕೋರ್ಟ್ ಅನುಮತಿ ಸಿಗದೆ ಪಥಸಂಚಲನ ಮಾಡ್ತಾರಾ? ಮಾಡಲಿ ಆಮೇಲೆ ನೋಡೋಣ. ಅನುಮತಿ ಇಲ್ಲದೆ ಮಾಡಿದ್ರೆ ಸರ್ಕಾರ ಕತ್ತೆ ಕಾಯುತ್ತಾ ಎಂದು ವಾಗ್ದಾಳಿ ನಡೆಸಿದರು.
ಆರ್‌ಎಸ್‌ಎಸ್ ಹೊಗಳೋದು ಬಿಜೆಪಿಯಲ್ಲಿ ಇರುವವರಿಗೆ ಅನಿವಾರ್ಯ. ಬಸವರಾಜ ಬೊಮ್ಮಾಯಿ ಸಾಹೇಬ್ರು ಎಲ್ಲ ಜ್ಞಾನ ಇರುವ ಮನುಷ್ಯ. ಕಾನೂನಿನ ಅರಿವು ಅವರಿಗೆ ತುಂಬಾ ಚೆನ್ನಾಗಿಯೇ ಇದೆ.ಸುಪ್ರಿಂ ಕೋರ್ಟ್ ತನಕ ಬೊಮ್ಮಾಯಿಯವರ ತಂದೆ ಹೋರಾಟ ಮಾಡಿದ್ರು. ಅದೇ ಜಡ್ಜ್ಮೆಂಟ್ ನೋಡಿಬಿಟ್ಟರೆ ಬೊಮ್ಮಾಯಿಯವರು ಬಿಜೆಪಿ ಬಿಟ್ಟು ಹೊರಗೆ ಬರುತ್ತಾರೆ ಎಂದು ಟಾಂಗ್ ಕೊಟ್ಟರು. ಇದನ್ನೂ ಓದಿ: ಕೈ ಪಾಳಯದಲ್ಲಿ ರೀಶಫಲ್ V/S ಪವರ್ ಶೇರ್ ಜಟಾಪಟಿ – ಪುನಾರಚನೆ ಸುಳಿವು ಕೊಟ್ಟ ಸಿಎಂ, ಡಿಕೆಶಿಯಿಂದ ಹೈಕಮಾಂಡ್ ದಾಳ
ಭಾರತೀಯ ಸಂಸ್ಕೃತಿಯ ವಾರಸುದಾರರ ಸಂಸ್ಕೃತಿ ಹೇಗಿದೆ ನೋಡಿ. ಇವರ ಸಂಸ್ಕೃತಿ ಇದು. ಇವರೆಲ್ಲ ನಡೆಯಲಾರದ ನಾಣ್ಯಗಳು. ಇವರನ್ನು ಮುಂದೆ ಬಿಟ್ಟು ನಮ್ಮನ್ನು ಟೀಕೆ ಮಾಡಿಸುತ್ತಾರೆ. ಇವರಿಗೆ ಹೇಳುವುದಕ್ಕೆ ಬೇರೆ ವಿಷಯಗಳಿಲ್ಲ. ಅದಕ್ಕೆ ನಮ್ಮ ಬಣ್ಣ, ನಮ್ಮ ಹೇರ್ ಲಾಸ್ ಇದರ ಬಗ್ಗೆಯೇ ಮಾತಾಡ್ತಾರೆ ಎಂದು ಪ್ರತಾಪ್ ಸಿಂಹಗೆ ಪರೋಕ್ಷವಾಗಿ ತಿರುಗೇಟು ನೀಡಿದರು.
ಆರ್‌ಎಸ್‌ಎಸ್ ದೇವರಿಗಿಂತ ದೊಡ್ಡವರಾಗಿಬಿಟ್ಟಿದೆಯಾ? ಆರ್‌ಎಸ್‌ಎಸ್‌ಗೆ ದೇಣಿಗೆ ಕೊಡುವವರು ಯಾರು ಎಂಬ ಮಾಹಿತಿ ಬೇಕು. ಇವರಿಗೆ ಎಲ್ಲಿಂದ ದೇಣಿಗೆ ಬರುತ್ತಿದೆ? ಹೊರ ರಾಜ್ಯ ಹೊರದೇಶದಿಂದ ಬರುತ್ತಿದೆಯಾ? ಮಾಹಿತಿ ಕೊಡಿ. ಒಂದು ದೇವಸ್ಥಾನದ ಹುಂಡಿ ಹಣಕ್ಕೂ ಲೆಕ್ಕ ಇರುತ್ತದೆ. ಹುಂಡಿಗೆ ಎಷ್ಟು ಹಣ ಬಿದ್ದಿದೆ ಎಂಬುದನ್ನು ಎಣಿಸಿ ಲೆಕ್ಕ ಇಡುತ್ತಾರೆ. ಅದನ್ನು ದೇವಸ್ಥಾನದ ಜೀರ್ಣೋದ್ಧಾರಕ್ಕೆ ಬಳಸುತ್ತಾರೆ. ಹಾಗಾದರೆ ಆರ್‌ಎಸ್‌ಎಸ್ ದೇವಸ್ಥಾನ ದೇವರಿಗಿಂತ ದೊಡ್ಡವರಾಗಿಬಿಟ್ಟರಾ ಎಂದು ಪ್ರಶ್ನಿಸಿದರು.
ನನ್ನ ಮಾತಲ್ಲಿ ಹಿಂದೆ ಒಂದು, ಮುಂದೆ ಒಂದು ಇಲ್ಲ. ನಾನು ಸಾರ್ವಜನಿಕವಾಗಿ ಏನು ಮಾತಾಡುತ್ತೀನೋ ಖಾಸಗಿಯಾಗಿಯೂ ಅದನ್ನೇ ಮಾತಾಡ್ತೀನಿ. ನಾನು ಯಾರ ಮೇಲೂ ಪ್ರಭಾವ ಬೀರುತ್ತಿಲ್ಲ. 11 ಸಂಘಟನೆಗಳು ಚಿತ್ತಾಪುರದಲ್ಲಿ ಕಾರ್ಯಕ್ರಮ ಮಾಡಲು ಅನುಮತಿ ಕೋರಿವೆ. ಅದಕ್ಕೆ ಶಾಂತಿ ಸಭೆ ಅಧಿಕಾರಿಗಳು ಮಾಡ್ತಾರೆ. ಅಧಿಕಾರಿಗಳೇ ತೀರ್ಮಾನ ಮಾಡಿ ಕೋರ್ಟ್‌ಗೆ ಸಲ್ಲಿಕೆ ಮಾಡ್ತಾರೆ. ಕೋರ್ಟ್ ಏನು ತೀರ್ಮಾನ ಮಾಡುತ್ತದೆಯೋ ಅದನ್ನೇ ನಾವೂ ಪಾಲನೆ ಮಾಡುತ್ತೇವೆ ಎಂದು ತಿಳಿಸಿದರು.
ಕೋಲಾರ: ರಾಜ್ಯದಲ್ಲಿ ಹಲವು ಗೊಂದಲ, ಪರ-ವಿರೋಧದ ನಡುವೆಯೂ ಕೋಲಾರ (Kolar) ಜಿಲ್ಲೆ ಮಾಲೂರು (Malur) ಪಟ್ಟಣದಲ್ಲಿ ಆರ್‌ಎಸ್‌ಎಸ್ ಪಥಸಂಚಲನ (RSS Parade) ಅದ್ಧೂರಿಯಾಗಿ ಅತ್ಯಂತ ಯಶಸ್ವಿಯಾಗಿ ನಡೆದಿದೆ. ಜಿಲ್ಲಾಡಳಿತದ ಅನುಮತಿ ಪಡೆದು ಸರ್ಕಾರಿ ಜೂನಿಯರ್ ಕಾಲೇಜು ಮೈದಾನದ ಕ್ರೀಡಾಂಗಣದಲ್ಲೇ ಜಮಾವಣೆಗೊಂಡು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್‌ನಲ್ಲಿ ಪಥಸಂಚಲನ ನಡೆಸಲಾಯಿತು.
ಹಲವು ಗೊಂದಲ ವಾದ-ವಿವಾದಗಳ ನಡುವೆಯೂ ಇಂದು ಕೋಲಾರ ಜಿಲ್ಲೆ ಮಾಲೂರು ಪಟ್ಟಣದಲ್ಲಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯ ಅನುಮತಿ ಪಡೆದು ಆರ್‌ಎಸ್‌ಎಸ್ ಪಥಸಂಚಲನ ಎಂದಿಗಿಂತಲೂ ಅದ್ಧೂರಿಯಾಗಿ ನಡೆಯಿತು. ಸುಮಾರು ಮೂರು ಸಾವಿರಕ್ಕೂ ಅಧಿಕ ಆರ್‌ಎಸ್‌ಎಸ್ ಗಣವೇಷಧಾರಿಗಳು ಜಮಾವಣೆಗೊಂಡು ನಗರದಲ್ಲಿ ನಾಲ್ಕು ಕಿ.ಮೀ ಪಥಸಂಚಲನಕ್ಕೆ ಅನುಮತಿ ಪಡೆದು ಪೊಲೀಸರು ನೀಡಿದ ರೂಟ್ ಪ್ರಕಾರವಾಗಿಯೇ ಪಥಸಂಚಲನ ನಡೆಸಲಾಯಿತು.
ಮೊದಲಿಗೆ ಮಾಲೂರು ಹೊಂಡಾ ಸ್ಟೇಡಿಯಂನಲ್ಲಿ ಜಮಾವಣೆಗೊಂಡು ನಂತರ ಆರ್‌ಎಸ್‌ಎಸ್ ಗೀತೆ ಹಾಡಿ ಅಲ್ಲಿಂದ ಮಾಲೂರಿನ ಬಿಇಓ ಕಚೇರಿ ವೃತ್ತ, ಕುವೆಂಪು ವೃತ್ತ, ಧರ್ಮರಾಯ ಸ್ವಾಮಿ ದೇವಾಲಯ, ಅಗ್ರಹಾರ ಬೀದಿ, ಕುಂಬಾರಪೇಟೆ ವೃತ್ತ, ದೊಡ್ಡಪೇಟೆ, ಮಹಾರಾಜ ಸರ್ಕಲ್, ಬಾಬುರಾವ್ ರಸ್ತೆ, ಕೆಂಪೇಗೌಡ ಸರ್ಕಲ್, ಮಾರಿಕಾಂಭಾ ಸರ್ಕಲ್, ಬ್ರಹ್ಮಕುಮಾರಿ ರಸ್ತೆ, ಅರಳೇರಿ ರಸ್ತೆಯ ಮೂಲಕ ಮತ್ತೆ ಹೋಂಡಾ ಸ್ಟೇಡಿಯಂವರೆಗೆ ನಾಲ್ಕು ಕಿ.ಮೀ ಪಥಸಂಚಲನ ನಡೆಯಿತು. ಪಥಸಂಚಲನದ ದಾರಿಯುದ್ದಕ್ಕೂ ಸಾವಿರಾರು ಜನರು ರಸ್ತೆ ಬದಿಯಲ್ಲಿ ನಿಂತು ಪಥಸಂಚಲನವನ್ನು ಕಣ್ತುಂಬಿಕೊಂಡರು. ಜನರು ತಮ್ಮ ಮೊಬೈಲ್‌ಗಳಲ್ಲಿ ಫೋಟೋ ವಿಡಿಯೋ ಮಾಡಿಕೊಂಡರು. ಇನ್ನು ಪಥಸಂಚಲನ ಸಾಗಿದ ದಾರಿಯುದ್ದಕ್ಕೂ ಜನರು ರಸ್ತೆಯ ಇಕ್ಕೆಲಗಳಲ್ಲಿ ನಿಂತು ಪಥ ಸಂಚಲನದ ಗಣವೇಷಧಾರಿಗಳ ಮೇಲೆ ಹೂವಿನ ಸುರಿಮಳೆಗೈದರು. ಇನ್ನು ನಗರದ ಮಸೀದಿ ಬೀದಿಯಲ್ಲೂ ಕೂಡಾ ಜನರು ಗಣವೇಷಧಾರಿಗಳು ಸಾಗುವ ರಸ್ತೆಯಲ್ಲಿ ಹೂ ಹಾಕಿ ಸ್ವಾಗತಿಸಿದರು. ಪಥಸಂಚಲನದ ನಂತರ ಮಾತನಾಡಿದ ಮಾಜಿ ಸಂಸದ ಮುನಿಸ್ವಾಮಿ ಯಾರು ಎಷ್ಟೇ ವಿರೋಧ ಮಾಡಿದಷ್ಟು ಜನ ಬೆಂಬಲ ಜಾಸ್ತಿಯಾಗುತ್ತದೆ, ಯಾರೋ ಕೆಲವು ಕುನ್ನಿಗಳು ಆರ್‌ಎಸ್‌ಎಸ್ ಬಗ್ಗೆ ಮಾತನಾಡುತ್ತಾರೆ, ಜನರ ಬೆಂಬಲ ಆರ್‌ಎಸ್‌ಎಸ್ ಪರ ಇದೆ ಅನ್ನೋದಕ್ಕೆ ಮಾಲೂರಿನ ಪಥಸಂಚಲನವೇ ಸಾಕ್ಷಿ ಎಂದರು.
ಇನ್ನು ಆರ್‌ಎಸ್‌ಎಸ್ ಮೊದಲಿನಿಂದಲೂ ರಾಜ್ಯದಲ್ಲಿ ಹಲವು ಗೊಂದಲಗಳಿದ್ದರೂ ಕೂಡಾ ಜಿಲ್ಲಾಡಳಿತದ ಅನುಮತಿ ಪಡೆದು, ಪೊಲೀಸ್ ಇಲಾಖೆಯ ಅನುಮತಿ ಪಡೆದು ಯಶಸ್ವಿಯಾಗಿ ನಿರೀಕ್ಷೆಗೂ ಮೀರಿದ ಗಣವೇಷಧಾರಿಗಳನ್ನು ಸೇರಿಸಿಕೊಂಡು ಪಥಸಂಚಲ ನಡೆಸಲಾಗಿದೆ. ಆರ್‌ಎಸ್‌ಎಸ್ ಅಸ್ಥಿತ್ವಕ್ಕೆ ಬಂದು ನೂರು ವರ್ಷಗಳು ಪೂರೈಸಿದ ಹಿನ್ನೆಲೆಯಲ್ಲಿ ಶತಾಬ್ದಿ ಪಥಸಂಚಲನ ನಡೆಸುವ ಮೂಲಕ ದೇಶದಾಂದ್ಯಂತ ಒಂದು ಸಂಚಲನ ಮೂಡಿಸುವ ಪ್ರಯತ್ನಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಪರೋಕ್ಷವಾಗಿ ಮೂಗುದಾರ ಹಾಕುವ ಪ್ರಯತ್ನ ಮಾಡಿತಾದರೂ, ಇಂದು ಮಾಲೂರಿನಲ್ಲಿ ಪೊಲೀಸ್ ಸರ್ಪಗಾವಲಿನಲ್ಲಿ ಯಶಸ್ವಿಯಾಗಿ ನಡೆಯಿತು. ಇನ್ನು ಪಥಸಂಚಲದಲ್ಲಿ ವಿಶೇಷ ಆಕರ್ಷಣೆ ಎನ್ನುವಂತೆ ಪುಟಾಣಿ ಮಕ್ಕಳು ಕೂಡಾ ಗಣವೇಷ ಧರಿಸಿ ಕೋಲು ಹಿಡಿದು ಪಥಸಂಚಲದಲ್ಲಿ ಸಾಗಿ ಗಮನ ಸೆಳೆದರು. ಇನ್ನು ಪಥಸಂಚಲನದಲ್ಲಿ ಮಾಜಿ ಸಚಿವ ಕೃಷ್ಣಯ್ಯಶೆಟ್ಟಿ, ಮಾಜಿ ಶಾಸಕ ಮಂಜುನಾಥಗೌಡ, ಮಾಜಿ ಸಂಸದ ಮುನಿಸ್ವಾಮಿ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.
ಬಹಿರಂಗ ಚರ್ಚೆಗೆ ಬನ್ನಿ ಎಂದರೂ ಚರ್ಚೆಗೆ ಬರಲ್ಲ. ಏನಾದ್ರೂ ಕಂಟೆಂಟ್ ಇದ್ರೆ ಬರುತ್ತಿದ್ದರು. ಬರೀ ವೈಯಕ್ತಿಕವಾಗಿ ಮಾತನಾಡುತ್ತಾರೆ. ಆರ್‌ಎಸ್‌ಎಸ್ ರಿಜಿಸ್ಟರ್ ಆಗಿದ್ಯಾ ಎಂದು ಕೇಳಿದ್ರೆ ತಪ್ಪಾ? ದಾಖಲೆ ತಂದು ಮುಖದ ಮೇಲೆ ಬಿಸಾಕಲಿ. ಇವರಿಗೆ ಎಲ್ಲಿಂದ ದೇಣಿಗೆ ಸಿಗುತ್ತಿದೆ? ದೇವಸ್ಥಾನದ ಹುಂಡಿ ಲಾಕ್ ಆಗಿರುತ್ತೆ. ಅದನ್ನ ತೆಗೆಯಬೇಕಾದರೆ ತಹಶೀಲ್ದಾರ್ ಬರಬೇಕು, ಎಲ್ಲವನ್ನೂ ಪಾರದರ್ಶಕವಾಗಿ ತೆಗೆಯುತ್ತಾರೆ. ಆದರೆ ಆರ್‌ಎಸ್‌ಎಸ್‌ಗೆ ಎಲ್ಲಿಂದ ದೇಣಿಗೆ ಬರುತ್ತಿದೆ. ದೇಣಿಗೆ ಮೂಲ ಗೊತ್ತಾಗಬೇಕಲ್ವಾ? ರಾಜ್ಯ, ದೇಶ, ವಿದೇಶದಿಂದ ಬರುತ್ತಿದ್ಯಾ? ಇದರ ಮೂಲ ಗೊತ್ತಾಗಬೇಕಲ್ವಾ? ದೇಶದ ದೊಡ್ಡ ಎನ್‌ಜಿಓ ಅಂತ ಮೋದಿ ಹೇಳ್ತಾರಲ್ವಾ? ಅದರ ಲೆಕ್ಕವನ್ನು ಕೊಡಲಿ ಈಗ. ಸರ್ದಾರ್ ವಲ್ಲಬಾಯ್ ಪಟೇಲ್‌ರಿಂದ ಹಿಡಿದು ಇಂದಿರಾಗಾಂಧಿವರೆಗೆ ನಾವು ದೊಡ್ಡ ಮನಸ್ಸು ಮಾಡಿಕೊಂಡು ಬಂದಿದ್ದೇವೆ, ಅದೇ ತಪ್ಪಾಗಿದೆ ಎಂದು ಹರಿಹಾಯ್ದರು. ಇದನ್ನೂ ಓದಿ: ಈರುಳ್ಳಿ ಮೂಟೆಯಲ್ಲಿ ಶ್ರೀಗಂಧ ತುಂಡುಗಳ ಕಳ್ಳಸಾಗಣೆ – 18 ಮೂಟೆಗಳಲ್ಲಿ 750 ಕೆಜಿ ಶ್ರೀಗಂಧ ವಶಕ್ಕೆ
ಆರ್‌ಎಸ್‌ಎಸ್ ಹೊಗಳೋದು ಬಿಜೆಪಿಯಲ್ಲಿ ಇರುವವರಿಗೆ ಅನಿವಾರ್ಯ. ಬಸವರಾಜ ಬೊಮ್ಮಾಯಿ ಸಾಹೇಬ್ರು ಎಲ್ಲ ಜ್ಞಾನ ಇರುವ ಮನುಷ್ಯ, ಕಾನೂನಿನ ಅರಿವು ಅವರಿಗೆ ತುಂಬಾ ಚೆನ್ನಾಗಿಯೇ ಇದೆ. ಸುಪ್ರೀಂ ಕೋರ್ಟ್ ತನಕ ಬೊಮ್ಮಾಯಿಯವರ ತಂದೆ ಹೋರಾಟ ಮಾಡಿದ್ರು. ಅದೇ ಜಡ್ಜ್ಮೆಂಟ್ ನೋಡಿಬಿಟ್ಟರೆ ಬೊಮ್ಮಾಯಿಯವರು ಬಿಜೆಪಿ ಬಿಟ್ಟು ಹೊರಗೆ ಬರುತ್ತಾರೆ. ಭಾರತೀಯ ಸಂಸ್ಕೃತಿಯ ವಾರಸುದಾರರ ಸಂಸ್ಕೃತಿ ಹೇಗಿದೆ ನೋಡಿ ಇವರ ಸಂಸ್ಕೃತಿ ಇದು. ಇವರೆಲ್ಲ ನಡೆಯಲಾರದ ನಾಣ್ಯಗಳು, ಇವರನ್ನು ಮುಂದೆ ಬಿಟ್ಟು ನಮ್ಮನ್ನು ಟೀಕೆ ಮಾಡಿಸುತ್ತಾರೆ. ಇವರಿಗೆ ಹೇಳುವುದಕ್ಕೆ ಬೇರೆ ವಿಷಯಗಳಿಲ್ಲ. ಅದಕ್ಕೆ ನಮ್ಮ ಬಣ್ಣ ನಮ್ಮ ಹೇರ್ ಲಾಸ್ ಇದರ ಬಗ್ಗೆಯೇ ಮಾತನಾಡುತ್ತಾರೆ ಎಂದರು. ಇದನ್ನೂ ಓದಿ: ಪ್ರೀತಿಸುವಂತೆ ಫ್ಯಾಷನ್ ಡಿಸೈನರ್‌ಗೆ ಕಿರುಕುಳ – ಇವಿಪಿ ಫಿಲ್ಮ್ ಸಿಟಿ ಮಾಲೀಕನ ವಿರುದ್ಧ ಎಫ್‍ಐಆರ್
ಆರ್‌ಎಸ್‌ಎಸ್ ದೇವರಿಗಿಂತ ದೊಡ್ಡವರಾಗಿಬಿಟ್ಟಿದೆಯಾ? ಆರ್‌ಎಸ್‌ಎಸ್‌ಗೆ ದೇಣಿಗೆ ಕೊಡುವವರು ಯಾರು ಎಂಬುದು ಮಾಹಿತಿ ಬೇಕು. ಇವರಿಗೆ ಎಲ್ಲಿಂದ ದೇಣಿಗೆ ಬರುತ್ತಿದೆ? ಹೊರ ರಾಜ್ಯ ಹೊರದೇಶದಿಂದ ಬರುತ್ತಿದೆಯಾ? ಮಾಹಿತಿ ಕೊಡಿ. ಒಂದು ದೇವಸ್ಥಾನದ ಹುಂಡಿ ಹಣಕ್ಕೂ ಲೆಕ್ಕ ಇರುತ್ತದೆ. ಹುಂಡಿಗೆ ಎಷ್ಟು ಹಣ ಬಿದ್ದಿದೆ ಎಂಬುದನ್ನು ಎಣಿಸಿ ಲೆಕ್ಕ ಇಡುತ್ತಾರೆ. ಅದನ್ನು ದೇವಸ್ಥಾನದ ಜೀರ್ಣೋದ್ಧಾರಕ್ಕೆ ಬಳಸುತ್ತಾರೆ. ಹಾಗಾದರೆ ಆರ್‌ಎಸ್‌ಎಸ್ ದೇವಸ್ಥಾನ ದೇವರಿಗಿಂತ ದೊಡ್ಡವರಾಗಿಬಿಟ್ಟರಾ ಎಂದು ಕೆಂಡಕಾರಿದರು. ಇದನ್ನೂ ಓದಿ: ರಾಜ್ಯದಲ್ಲಿ ಉದ್ಯಮ ವಲಯಕ್ಕೆ ಮೂಲ ಸೌಕರ್ಯಗಳ ಕೊರತೆ; ಸರ್ಕಾರದ ಗಮನಕ್ಕೆ ತರಲು ಮುಂದಾದ FKCCI
ನನ್ನ ಮಾತಲ್ಲಿ ಹಿಂದೆ ಒಂದು, ಮುಂದೆ ಒಂದು ಇಲ್ಲ. ನಾನು ಸಾರ್ವಜನಿಕವಾಗಿ ಏನು ಮಾತನಾಡುತ್ತೇನೋ ಖಾಸಗಿಯಾಗಿಯೂ ಅದನ್ನೇ ಮಾತನಾಡುತ್ತೇನೆ. ನಾನು ಯಾರ ಮೇಲೂ ಪ್ರಭಾವ ಬೀರುತ್ತಿಲ್ಲ. 11 ಸಂಘಟನೆಗಳು ಚಿತ್ತಾಪುರದಲ್ಲಿ ಕಾರ್ಯಕ್ರಮ ಮಾಡಲು ಅನುಮತಿ ಕೋರಿವೆ. ಅದಕ್ಕೆ ಶಾಂತಿ ಸಭೆ ಅಧಿಕಾರಿಗಳು ಮಾಡುತ್ತಾರೆ. ಅಧಿಕಾರಿಗಳೇ ತೀರ್ಮಾನ ಮಾಡಿ ಕೋರ್ಟ್‌ಗೆ ಸಲ್ಲಿಕೆ ಮಾಡುತ್ತಾರೆ. ಕೋರ್ಟ್ ಏನು ತೀರ್ಮಾನ ಮಾಡುತ್ತದೆಯೋ ಅದನ್ನೇ ನಾವೂ ಪಾಲನೆ ಮಾಡುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಕೈದಿಗೆ 20,000ಕ್ಕೆ ಮೊಬೈಲ್ ಮಾರಲು ಯತ್ನ – ಪರಪ್ಪನ ಅಗ್ರಹಾರ ಜೈಲು ವೀಕ್ಷಕ ಬಂಧನ
ಎಲ್ಲವೂ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಪಕ್ಷ ಏನು ಹೇಳುತ್ತದೋ ಅದನ್ನೇ ನಾವು ಮಾಡುತ್ತೇವೆ. ತ್ಯಾಗ ಅಲ್ಲ, ಫಾಲೋವಿಂಗ್ ದಿ ಆರ್ಡರ್. ಪಕ್ಷದಿಂದ ನಾನೇ ಹೊರತು, ನನ್ನಿಂದ ಪಕ್ಷ ಅಲ್ಲ ಅಲ್ವಾ? ಬಿ ಫಾರಂ ಬೇಕಾದಾಗ ಪಕ್ಷ ಬೇಕು, ಚುನಾವಣೆ ಗೆಲ್ಲಬೇಕು ಅಂದಾಗ ಪಕ್ಷ ಬೇಕು. ಪಕ್ಷ ಹೇಳಿದಾಗ ಎಲ್ಲ ಕೆಲಸಕ್ಕೂ ನಾವು ಸಿದ್ಧರಿದ್ದೇವೆ. ನಾನೇ ಇರಬಹುದು, ಕೃಷ್ಣ ಬೈರೇಗೌಡ ಇರಬಹುದು, ದಿನೇಶ್ ಇರಬಹುದು. ಪಕ್ಷ ಸೂಚನೆ ಕೊಟ್ಟರೆ ಎಲ್ಲ ಕೆಲಸವನ್ನೂ ಮಾಡಬೇಕಾಗುತ್ತದೆ. ನಾಳೆ ಚಿತ್ತಾಪುರ ಬೇಡ ಉತ್ತರ ಕನ್ನಡದಿಂದ ಸ್ಪರ್ಧೆ ಮಾಡು ಅಂದ್ರೆ ನಾನು ಅದಕ್ಕೂ ಸಿದ್ಧವಾಗಿರಬೇಕಾಗುತ್ತದೆ. ಇದನ್ನೂ ಓದಿ: ವಿದ್ಯಾವಂತರು ʻಎ ಖಾತಾ’ ಪರಿವರ್ತನೆ ಒಪ್ಪುತ್ತಿರೋದಕ್ಕೆ ಧನ್ಯವಾದ; ಕುಮಾರಸ್ವಾಮಿ ಖಾಲಿ ಟ್ರಂಕ್ ಎಂದ ಡಿಕೆಶಿ
ಕಲಬುರಗಿ ಅಧಃಪತನಕ್ಕೆ ಖರ್ಗೆ ಕೊಡುಗೆ ಹೆಚ್ಚಲ್ಲವೇ ಎಂಬ ಸುನೀಲ್‌ಕುಮಾರ್ ಆರೋಪಕ್ಕೆ ಪ್ರತಿಕ್ರಿಯಿಸಿ, ಕಲಬುರಗಿ ಹಿಂದುಳಿದ ಜಿಲ್ಲೆ ಅಂತಲೇ 371ಜೆ ತಂದಿರೋದು. ಕಾಮನ್ ಸೆನ್ಸ್ ಇಲ್ಲದೆ ಮಾತನಾಡುತ್ತಾರೆ. ಕಲಬುರಗಿ ತಂದಿರೋ ಸೆಂಟ್ರಲ್ ಯೂನಿವರ್ಸಿಟಿನ ಆರ್‌ಎಸ್‌ಎಸ್ ಶಾಖೆ ಮಾಡಿಟ್ಟಿದ್ದೀರ. ಕಲಬುರಗಿಗೆ ಇದುವರೆಗೂ ಒಂದು ಸಚಿವ ಸ್ಥಾನ ಕೊಟ್ಟಿಲ್ಲ. ಕಲಬುರಗಿ, ಯಾದಗಿರಿ ಅಂತ ಬಂದಾಗ ಪಶು ಸಂಗೋಪನಾ ಇಲಾಖೆ ಫಿಕ್ಸ್. ದನ ಕಾಯೋ ಮಂತ್ರಿ ಸ್ಥಾನ ಕೊಟ್ಟಿದ್ದೀರ ಅಷ್ಟೇ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ದತ್ತಪೀಠದ ಗೋರಿಗಳು ನಕಲಿ – ಹಿಂದೂಪರ ಸಂಘಟನೆಗಳ ಆರೋಪ
ಹಿಂದೆ ನಿಮ್ಮ ಸರ್ಕಾರವೇ ಇತ್ತು ಆರ್‌ಎಸ್‌ಎಸ್ ವಿರುದ್ಧ ತನಿಖೆ ಮಾಡಬಹುತ್ತಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿ, ಅದೇ ತಪ್ಪಾಗಿರೋದು ನಮ್ಮದು. ಸರ್ದಾರ್ ಪಟೇಲ್ ಅವರಿಂದ ಹಿಡಿದು ಇಂದಿರಾಗಾಂಧಿ ಅವರ ತನಕ ದೊಡ್ಡ ಮನಸ್ಸು ಮಾಡಿ ಮಾಡಿ ಇವರು ಈ ತರ ಬೆಳೆದಿದ್ದಾರೆ. ಎಲ್ಲ ಹಿಂದುಳಿದ ವರ್ಗದವರಿಗೆ, ದಲಿತರಿಗೆ ಆಳು ಮಾಡಲು ಇಟ್ಟುಕೊಂಡಿದ್ದಾರೆ. ಆರ್‌ಎಸ್‌ಎಸ್‌ನಲ್ಲಿ ಜಾತಿ ಅನ್ನೋದು ಇಲ್ಲ ಅಂತ ಮಹಾನುಭಾವ ಹೇಳುತ್ತಿದ್ದ. ಎಲ್ಲರನ್ನೂ ನಾವು ಕರ್ಕೊಳ್ಳುತ್ತೇವೆ ಅಂತ ಮಹಾನುಭಾವ ಹೇಳುತ್ತಿದ್ದ. ಹೌದು ನೀವು ಕರ್ಕೊಂಡ್ರೆ ಆಳಾಗಿ ಕರೆದುಕೊಳ್ತೀರಾ, ಸರಸಂಘಚಾಲಕರನ್ನಾಗಿ ಒಬ್ಬ ಮಹಿಳೆ ಅಥವಾ ದಲಿತರಿಗೆ ಮಾಡಿ. ಅದು ಯಾಕೆ ಒಂದೇ ಒಂದು ಕಮ್ಯುನಿಟಿಗೆ ಸೀಮಿತ? ಮುಸ್ಲಿಮರು ಮತ್ತು ದಲಿತರು ಒಂದು ದಿನ ಆರ್‌ಎಸ್‌ಎಸ್ ಒಪ್ಪಬೇಕಾಗುತ್ತೆ ಅಂತ ಕಾಗೇರಿ ಸಾಹೇಬ್ರು ಸ್ಪೀಕರ್ ಇದ್ದಾಗ ನನಗೆ ಹೇಳಿದ್ರು. ಮೋಹನ್ ಭಾಗವತರನ್ನ ಇಳಿಸಿ ದಲಿತರನ್ನು ಮಾಡಿ ಅಂತ ನಾನು ಹೇಳಿದೆ ಆಗ ಕೋಲಾಹಲ ಆಯ್ತು, ಅಸೆಂಬ್ಲಿ ಮುಂದಕ್ಕೆ ಹಾಕಿದ್ರು ಎಂದರು. ಇದನ್ನೂ ಓದಿ: ತೀವ್ರ ಕಳಪೆ ಮಟ್ಟಕ್ಕೆ ಕುಸಿದ ದೆಹಲಿ ವಾಯುಗುಣಮಟ್ಟ – ಅ.29, 30ರಂದು ಕೃತಕ ಮಳೆ ಸಾಧ್ಯತೆ
ಕೋಲಾರ: ಚಿತ್ತಾಪುರ ಆರ್‌ಎಸ್‌ಎಸ್ ಪಥಸಂಚಲನ (RSS Route March) ಪ್ರಕರಣ ದಿನದಿಂದ ದಿನಕ್ಕೆ ಜಟಿಲವಾಗುತ್ತಿದ್ದು, ಹೈಕೋರ್ಟ್ ಸೂಚನೆ ಮೇರೆಗೆ ಇಂದು ಜಿಲ್ಲಾಡಳಿತ ಆರ್‌ಎಸ್‌ಎಸ್ ಸೇರಿ 8 ಸಂಘಟನೆಗಳಿಗೆ ಶಾಂತಿ ಸಭೆಗೆ ಆಗಮಿಸಲು ನೋಟಿಸ್ ನೀಡುತ್ತಿದೆ. ಹೀಗಾಗಿ ಜಿಲ್ಲಾಡಳಿತದ ಶಾಂತಿ ಸಭೆಯ ನಿರ್ಧಾರದತ್ತ ಇದೀಗ ಎಲ್ಲರ ಚಿತ್ತ ನೆಟ್ಟಿದೆ. ಈ ನಡುವೆ ಆರ್‌ಎಸ್‌ಎಸ್ ಶತಮಾನೋತ್ಸವದ ಪ್ರಯುಕ್ತ ಕೋಲಾರದ (Kolara) ಮಾಲೂರಿನಲ್ಲಿ ಇಂದು ಪಥಸಂಚಲನ ಹಮ್ಮಿಕೊಳ್ಳಲಾಗಿದೆ.
ಪಥಸಂಚಲನಕ್ಕೆ ಮಧ್ಯಾಹ್ನ 2 ಗಂಟೆಯಿಂದ ಸಂಜೆ 6 ಗಂಟೆವರೆಗೆ ಅನುಮತಿ ಪಡೆಯಲಾಗಿದೆ. ಹೀಗಾಗಿ ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಪಥಸಂಚಲನ ಆರಂಭವಾಗಲಿದ್ದು, ಒಟ್ಟು 4 ಕಿಮೀ ಪಥಸಂಚನ ನಡೆಯಲಿದೆ. ಸಾವಿರಾರು ಗಣವೇಶಧಾರಿಗಳು ಇದರಲ್ಲಿ ಭಾಗಿಯಾಗುವ ಸಾಧ್ಯತೆಯಿದೆ.
ಎಲ್ಲೆಲ್ಲಿ ಪಥಸಂಚಲನ?
ಮಾಲೂರು ಹೋಂಡಾ ಸ್ಟೇಡಿಯಂ ನಿಂದ ಆರಂಭವಾಗಿ ಪಥಸಂಚನಲ ಶುರುವಾಗಿ ಬಿಇಓ ಆಫೀಸ್ ರಸ್ತೆ ಮಾರ್ಗವಾಗಿ ಕುವೆಂಪು ವೃತ್ತ, ಧರ್ಮರಾಯ ಸ್ವಾಮಿ ದೇವಾಲಯ, ಅಗ್ರಹಾರ ಬೀದಿ, ಕುಂಬಾರಪೇಟೆ ವೃತ್ತ. ದೊಡ್ಡಪೇಟೆ, ಮಹಾರಾಜ ಸರ್ಕಲ್, ಬಾಬುರಾವ್ ರಸ್ತೆ, ಕೆಂಪೇಗೌಡ ಸರ್ಕಲ್, ಮಾರಿಕಾಂಭಾ ಸರ್ಕಲ್, ಬ್ರಹ್ಮಕುಮಾರಿ ರಸ್ತೆ, ಅರಳೇರಿ ರಸ್ತೆಯ ಮೂಲಕ ಮತ್ತೆ ಹೋಂಡಾ ಸ್ಟೇಡಿಯಂ ನಲ್ಲಿ ಕೊನೆಗೊಳ್ಳಲಿದೆ.
ಬಿಗಿ ಬಂದೋಬಸ್ತ್
ಆರ್‌ಎಸ್‌ಎಸ್ ಪಥ ಸಂಚಲನ ಹಿನ್ನೆಲೆ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಸುಮಾರು 250 ಹೆಚ್ಚು ಪೊಲೀಸರಿಂದ ಭದ್ರತೆ ನೀಡಲಾಗಿದೆ. ಮಾಜಿ ಶಾಸಕರು, ಮಾಜಿ ಸಂಸದರು ಸೇರಿ ನೂರಾರು ಮುಖಂಡರು ಪಥಚಂದಲನದಲ್ಲಿ ಪಾಲ್ಗೊಳ್ಳಲಿದ್ದಾರೆ.
ಕಲಬುರಗಿ: ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥಸಂಚಲನ (Chittapur RSS Route March) ವಿಚಾರಕ್ಕೆ ಸಂಬಂಧಿಸಿದಂತೆ ಕಲಬುರಗಿ ಹೈಕೋರ್ಟ್ ಪೀಠದಲ್ಲಿ ಅರ್ಜಿ ವಿಚಾರಣೆ ನಡೆದಿದ್ದು, ಅಕ್ಟೋಬರ್ 28 ರಂದು ಸಂಘಟನೆಗಳ ಶಾಂತಿ ಸಭೆ ನಡೆಸಿ ಅಕ್ಟೋಬರ್ 30 ರಂದು ಅರ್ಜಿ ವಿಚಾರಣೆಗೆ ಹಾಜರಾಗಲು ಸೂಚಿಸಿದೆ. ಹೀಗಾಗಿ ಅ.28ರಂದು ಶಾಂತಿ ಸಭೆಗೆ ಹಾಜರಾಗುವಂತೆ ವಿವಿಧ ಸಂಘಟನೆಗಳಿಗೆ ಕಲಬುರಗಿ (Kalaburagi) ಜಿಲ್ಲಾಡಳಿತ ಮನವಿ ಮಾಡಿದೆ.
ಆರ್‌ಎಸ್‌ಎಸ್ (RSS), ದಲಿತ ಸಂಘಟನೆ ಸೇರಿ 8 ಸಂಘಟನೆಗಳಿಗೆ ಇಂದು ನೋಟಿಸ್ ನೀಡಲಾಗುತ್ತಿದ್ದು, ಕಲಬುರಗಿ ಡಿಸಿ ಫೌಜೀಯಾ ತರನ್ನುಂ ಹಾಗೂ ಎಸ್ಪಿ ಅಡ್ಡೂರ್ ಶ್ರೀನಿವಾಸಲು ನೇತೃತ್ವದಲ್ಲಿ ಶಾಂತಿ ಸಭೆ ನಡೆಯಲಿದೆ.
ಅ.30ರಂದು ಮತ್ತೆ ವಿಚಾರಣೆ
ಸಚಿವ ಪ್ರಿಯಾಂಕ್ ಖರ್ಗೆ ಕ್ಷೇತ್ರ ಕಲಬುರಗಿ ಜಿಲ್ಲೆ ಚಿತ್ತಾಪುರದಲ್ಲಿ ನವೆಂಬರ್ 2ರಂದು ಆರ್‌ಎಸ್‌ಎಸ್ ಪಥಸಂಚಲನ ವಿಚಾರಕ್ಕೆ ಸಂಬಂಧಿಸಿದಂತೆ ಕಲಬುರಗಿ ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ನಿನ್ನೆ ಆರ್‌ಎಸ್‌ಎಸ್ ಅರ್ಜಿ ವಿಚಾರಣೆ ನಡೆದಿದ್ದು, ಆರ್‌ಎಸ್‌ಎಸ್ ಪರ ಅರುಣ್ ಶ್ಯಾಮ್ ವಾದ ಮಂಡಿಸಿದ್ದರು. ಇನ್ನೂ ಎರಡು ಕಡೆ ವಾದ ಆಲಿಸಿದ ಕಲಬುರಗಿ ಹೈಕೋರ್ಟ್ ಏಕಸದಸ್ಯ ಪೀಠ, ಅಕ್ಟೋಬರ್ 28 ರಂದು ಎಲ್ಲಾ ಸಂಘಟನೆಗಳ ಶಾಂತಿ ಸಭೆ ನಡೆಸಲು ಜಿಲ್ಲಾಡಳಿತ ಮತ್ತು ಸರ್ಕಾರದ ಪರ ವಕೀಲರಿಗೆ ಸೂಚಿಸಿದೆ. ಶಾಂತಿ ಸಭೆ ನಡೆಸಿದ ವರದಿಯನ್ನ ತೆಗೆದುಕೊಂಡು ಅಕ್ಟೋಬರ್ 30 ರಂದು ಅರ್ಜಿ ವಿಚಾರಣೆಗೆ ಹಾಜರಾಗಲು ಹೈಕೋರ್ಟ್ ಸೂಚಿಸಿದೆ.
ಆರ್‌ಎಸ್‌ಎಸ್ ಪಥಸಂಚಲನಕ್ಕೆ ಕೌಂಟರ್ ಆಗಿ ಭೀಮ್ ಆರ್ಮಿ, ದಲಿತ್ ಪ್ಯಾಂಥರ್, ಹಸಿರು ಸೇನೆ, ಕ್ರಿಶ್ಚಿಯನ್ ವೇಲ್ ಫೇರ್ ಅಸೋಸಿಯೇಷನ್, ಎಸ್‌ಟಿಗೆ ಸೇರಿಸಲು ಆಗ್ರಹಿಸಿ ಕುರುಬ ಸಮುದಾಯ ಹೀಗೆ ಒಟ್ಟು 7 ಸಂಘಟನೆಗಳು ನವೆಂಬರ್ 2ರಂದೇ ಅನುಮತಿಗಾಗಿ ಅರ್ಜಿ ಸಲ್ಲಿಸಿದ ಹಿನ್ನೆಲೆ ಎಲ್ಲಾ ಸಂಘಟನೆಗಳಿಗೂ ಅಕ್ಟೋಬರ್ 28ರಂದು ಶಾಂತಿ ಸಭೆ ಕರೆದು ಸಮಸ್ಯೆ ಬಗೆಹರಿಸುವಂತೆ ಸೂಚಿಸಲಾಗಿದೆ. ಆದರೆ ಅಕ್ಟೋಬರ್ 28ರಂದು ನಡೆಯುವ ಸಭೆಯಲ್ಲಿ ಸಹ ಒಮ್ಮತಕ್ಕೆ ಬರೋದು ಬಹುತೇಕ ಡೌಟ್ ಆಗಿದ್ದು, ಎಲ್ಲಾ ಸಂಘಟನೆಗಳು ಆರ್‌ಎಸ್‌ಎಸ್ ಪಥಸಂಚಲನ ದಿನವೇ ಅನುಮತಿಗೆ ಪಟ್ಟು ಹಿಡಿಯುವ ಸಾಧ್ಯತೆಯಿದೆ.
ಸದ್ಯ ಆರ್‌ಎಸ್‌ಎಸ್ ಪಥಸಂಚಲನಕ್ಕೆ ಹೆಜ್ಜೆಹೆಜ್ಜೆಗೂ ಕಂಟಕ ಎದುರಾಗಿದ್ದು, ಶಾಂತಿ ಸಭೆಯಲ್ಲಿ ಸಹ ಅಶಾಂತಿ ಆಗುವ ಲಕ್ಷಣಗಳಿವೆ. ಹೀಗಾಗಿ ಅಕ್ಟೋಬರ್ 30ರಂದು ಅರ್ಜಿ ವಿಚಾರಣೆ ನಡೆದು ಅಂದೇ ಪಥಸಂಚಲನ ಭವಿಷ್ಯ ನಿರ್ಧಾರವಾಗಲಿದ್ದು, ಇಡೀ ದೇಶದ ಚಿತ್ತ ಚಿತ್ತಾಪುರ ಪಥಸಂಚಲನ ಮತ್ತು ಹೈಕೋರ್ಟ್ ಪೀಠದತ್ತ ನೆಟ್ಟಿರೋದು ಸತ್ಯ.