Tag: RSS ban

  • ಆರ್‌ಎಸ್‌ಎಸ್ ಬ್ಯಾನ್ ಮಾಡ್ಬೇಕು ಅಂತ ನಾನೆಲ್ಲಿ ಹೇಳಿದ್ದೇನೆ? – ಪ್ರಿಯಾಂಕ್ ಖರ್ಗೆ

    ಆರ್‌ಎಸ್‌ಎಸ್ ಬ್ಯಾನ್ ಮಾಡ್ಬೇಕು ಅಂತ ನಾನೆಲ್ಲಿ ಹೇಳಿದ್ದೇನೆ? – ಪ್ರಿಯಾಂಕ್ ಖರ್ಗೆ

    – ಆರ್‌ಎಸ್‌ಎಸ್‌ನಲ್ಲಿ ಲೈಂಗಿಕ ಕಿರುಕುಳ ಕೊಡ್ತಾರೆ ಅಂತ ಪುಸ್ತಕ ಬರೆದಿದ್ದಾರೆ
    – ಶಾಲೆಗಳಲ್ಲಿ ಆರ್‌ಎಸ್‌ಎಸ್‌ನಿಂದಾಗುತ್ತಿರುವ ಬ್ರೇನ್ ವಾಷಿಂಗ್ ನಿಲ್ಲಲೆಂದು ಆಕ್ರೋಶ

    ಬೆಂಗಳೂರು: ಆರ್‌ಎಸ್‌ಎಸ್ ಬ್ಯಾನ್ (RSS Ban) ಮಾಡಬೇಕು ಅಂತ ನಾನೆಲ್ಲಿ ಹೇಳಿದ್ದೇನೆ? ಸರ್ಕಾರಿ ಶಾಲೆಗಳು, ಸಾರ್ವಜನಿಕ ಸ್ಥಳಗಳಲ್ಲಿ ಚಟುವಟಿಕೆ ಬೇಡ ಎಂದು ಹೇಳಿದ್ದೇನೆ ಅಷ್ಟೇ ಎಂದು ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ತಿಳಿಸಿದ್ದಾರೆ.

    ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಆರ್‌ಎಸ್‌ಎಸ್ ಬ್ಯಾನ್ ಮಾಡಬೇಕು ಅಂತ ನಾನೆಲ್ಲಿ ಹೇಳಿದ್ದೇನೆ? ಅಂತ ಪ್ರಶ್ನೆ ಮಾಡಿದ್ದಾರೆ. ಸಂಘ ರಿಜಿಸ್ಟರ್ ಆಗಿದ್ದರೆ ಕಾಪಿ ಕೊಡಲಿ ಅವರ ಕಚೇರಿ ಮೇಲೆ ರಾಷ್ಟ್ರಧ್ವಜ ಹಾರಿಸಲು 55 ವರ್ಷ ಬೇಕಾಯಿತು ಎಂದರಲ್ಲೇ ಮುನಿರತ್ನ ಗಣವೇಶ ಹಾಕಿಕೊಂಡು, ಗಾಂಧಿಜಿ ಫೋಟೋ ಹಿಡಿದುಕೊಂಡು ಪ್ರತಿಭಟಿಸಿದ್ದು ಹಸ್ಯಾಸ್ಪದ ಅವರಿಗೆ ಆರ್‌ಎಸ್‌ಎಸ್ ಇತಿಹಾಸ ಗೊತ್ತಿಲ್ಲ ಅನ್ನಿಸುತ್ತೆ ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ಚಾಮರಾಜಪೇಟೆ | ಆರ್‌ಎಸ್‌ಎಸ್‌ ಕಚೇರಿಗೆ ಪೊಲೀಸರಿಂದ ಬಿಗಿ ಭದ್ರತೆ

    ಮುಖದ ಮೇಲೆ ಉಗಿದಿದ್ದಾರೆ ಖರ್ಗೆ
    ಇನ್ನೂ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಗೃಹ ಸಚಿವರಾಗಿದ್ದಾಗ ಆರ್‌ಎಸ್‌ಎಸ್ ಕಚೇರಿಗೆ ಹೋಗಿದ್ದಾರೆ ಅಂತ ಫೋಟೋ ಹಾಕಿದ ವಿಚಾರಕ್ಕೆ ಪ್ರತಿಕ್ರಿಯಿಸಿ, ಗೃಹ ಸಚಿವರಾಗಿ ಅವರು ಅಲ್ಲಿ ಹೋಗಿ ತಾಕೀತು ಮಾಡಿದ್ದರು. ಶಿವಾಜಿನಗರ ಸೆನ್ಸಿಟಿವ್ ಏರಿಯಾ ಇಲ್ಲಿ ಬಾಲ ಬಿಚ್ಚಿದ್ರೆ ಹುಷಾರ್ ಅಂತ ಮುಖದ ಮೇಲೆ ಉಗಿದಿದ್ದಾರೆ. ಅದನ್ನ ಹೇಳಲ್ಲ ಇವರು ಅಂದಿನ ಪೊಲೀಸ್ ಅಧಿಕಾರಿಗಳ ಜೊತೆಗೆ ಹೋಗಿದ್ದರು, ಶಾಖೆಗೆ ಹೋಗಿದ್ದಲ್ಲ ತಾಕೀತು ಮಾಡೋಕೆ ಹೋಗಿದ್ದು ಅಂತ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: RSS ಚಟುವಟಿಕೆ ಬ್ಯಾನ್‌ಗೆ ಸಚಿವ ಪ್ರಿಯಾಂಕ್ ಪತ್ರ – ಇತ್ತ ಕಾಂಗ್ರೆಸ್‌ ಶಾಸಕರ ಶಾಲೆಯಲ್ಲೇ ಪಥಸಂಚಲನ

    ಆರ್‌ಎಸ್‌ಎಸ್‌ಗೆ ಗಾಂಧಿ ಕೊಂದ ಇತಿಹಾಸ ಇದೆ
    ಆರ್‌ಎಸ್‌ಎಸ್‌ಗೆ (RSS) ಇತಿಹಾಸ ಇದೆ ಎಂಬ ಡಿಕೆಶಿ ವಿಚಾರಕ್ಕೆ ಪ್ರತಿಕ್ರಿಯಿಸಿ, ಹೌದು ಅದರದ್ದೇ ಇತಿಹಾಸ ಇದೆ, ಅದು ಸುಳ್ಳಿನ ಇತಿಹಾಸ. ಅದನ್ನ ಆರ್‌ಎಸ್‌ಎಸ್‌ನವರು ಪಾಸಿಟಿವ್ ಆಗಿ ತಗೊಂಡಿದಾರೆ ಅಷ್ಟೇ. ಸುಳ್ಳಿನ ಇತಿಹಾಸ, ಗಾಂಧಿ ಕೊಂದ ಇತಿಹಾಸ ಇದೆ. ದೇಶದಲ್ಲಿ ಕೋಮು ವಿಷ ಬೀಜ ಬಿತ್ತಿದ ಇತಿಹಾಸ ಇದೆ. ಅವರಿಗೆ ಇತಿಹಾಸ ಗೊತ್ತಿಲ್ಲದಿದ್ರೆ ನಾನು ಇತಿಹಾಸದ ಪಾಠ ಮಾಡುತ್ತೇನೆ ಎಂದು ಕುಟುಕಿದ್ದಾರೆ.

    ಕೇರಳ ಹುಡುಗನ ಇನ್‌ಸ್ಟಾ ಗ್ರಾಮ್ ನೋಡಲಿ
    ಆರ್‌ಎಸ್‌ಎಸ್‌ನಲ್ಲಿ ಲೈಂಗಿಕ ಕಿರುಕುಳದ ಆರೋಪದ ಬಗ್ಗೆ ಉತ್ತರಿಸಿ, ಕೇರಳದ ಹುಡುಗ ಮಾಡಿದ್ದ ಅವನ ಇನ್ ಸ್ಟ್ರಾಗ್ರಾಮ್ ನೋಡಿದ್ರೆ ಗೊತ್ತಾಗುತ್ತೆ. ರಾಜ್ಯದಲ್ಲೂ ಒಬ್ಬರು ಪುಸ್ತಕ ಬರೆದಿದ್ದರು, ಹನುಮೇ ಗೌಡ ಅಂತ ಆರ್‌ಎಸ್‌ಎಸ್‌ನಲ್ಲಿ ಲೈಂಗಿಕ ಕಿರುಕುಳ ಕೊಡ್ತಾರೆ ಅಂತ ಬರೆದಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: RSS ನಿಷೇಧಕ್ಕೆ ಪ್ರಿಯಾಂಕ್‌ ಖರ್ಗೆ ಪತ್ರ – ಸರ್ಕಾರದ ನಡೆಯ ಮೇಲೆ ನಿಗಾ ಇಡಲು ಬಿಜೆಪಿ ಸಮಿತಿ ರಚನೆ

  • RSS ಚಟುವಟಿಕೆ ಬ್ಯಾನ್‌ಗೆ ಸಚಿವ ಪ್ರಿಯಾಂಕ್ ಪತ್ರ – ಇತ್ತ ಕಾಂಗ್ರೆಸ್‌ ಶಾಸಕರ ಶಾಲೆಯಲ್ಲೇ ಪಥಸಂಚಲನ

    RSS ಚಟುವಟಿಕೆ ಬ್ಯಾನ್‌ಗೆ ಸಚಿವ ಪ್ರಿಯಾಂಕ್ ಪತ್ರ – ಇತ್ತ ಕಾಂಗ್ರೆಸ್‌ ಶಾಸಕರ ಶಾಲೆಯಲ್ಲೇ ಪಥಸಂಚಲನ

    ಕಲಬುರಗಿ: ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ (RSS) ಕಾರ್ಯಕ್ರಮ ನಿಷೇಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಚಿವ ಪ್ರಿಯಾಂಕ್‌ ಖರ್ಗೆ (Priyank Kharge) ಪತ್ರ ಬರೆದಿದ್ದಾರೆ. ಶಾಲಾ-ಕಾಲೇಜು ಮೈದಾನಗಳು, ಸಾರ್ವಜನಿಕ ಪಾರ್ಕ್, ಮುಜರಾಯಿ ದೇವಸ್ಥಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಕ್ಕೆ ಅವಕಾಶ ನೀಡಬಾರದು. ಈ ಸಂಬಂಧ, ಕಾನೂನು ರೂಪಿಸಬೇಕು ಅಂತ ಮನವಿ ಸಲ್ಲಿಸಿದ್ದಾರೆ. ಆದ್ರೆ ಪ್ರಿಯಾಂಕ್‌ ಖರ್ಗೆ ಅವರ ಪತ್ರಕ್ಕೆ ಈಗ ಕಾಂಗ್ರೆಸ್‌ ಶಾಸಕರೇ (Congress MLA) ಕೌಂಟರ್‌ ಕೊಡುವ ಕೆಲಸ ಮಾಡಿದ್ದಾರೆ.

    ಅಫಜಲಪುರ ಕಾಂಗ್ರೆಸ್ ಶಾಸಕ ಎಂ.ವೈ.ಪಾಟೀಲ್ (MY Patil) ಅನುದಾನಿತ ಶಾಲೆಯಲ್ಲಿ ಆರ್‌ಎಸ್‌ಎಸ್‌ ಪಥಸಂಚಲನ ನಡೆದಿದೆ. ಅಫಜಲಪುರ್ ಪಟ್ಟಣದ ಬಸವೇಶ್ವರ ವೃತದ ಬಳಿಯಿರುವ ಶಾಸಕರ ಮಹಾಂತೇಶ್ವರ ವಿದ್ಯಾವರ್ಧಕ ಶಿಕ್ಷಣ ಸಂಸ್ಥೆಯ ಶಾಲಾ ಆವರಣದಲ್ಲಿ ನಿನ್ನೆ (ಅ.12) ಸಂಜೆ ಆಕರ್ಷಕ ಆರ್‌ಎಸ್‌ಎಸ್‌ ಪಥಸಂಚಲನ ನಡೆಸಲಾಗಿದೆ.

    ಪಥಸಂಚಲನದಲ್ಲಿ ನೂರಾರು ಆರ್‌ಎಸ್‌ಎಸ್‌ ಕಾರ್ಯಕರ್ತರು ಭಾಗಿಯಾಗಿದ್ದಾರೆ. ಬಳಿಕ ಶಾಲಾ ಆವರಣದಲ್ಲಿಯೇ ಬೌದ್ಧಿಕ ಕಾರ್ಯಕ್ರಮ ಕೂಡ ನಡೆದಿದೆ. ಇದು ವಿಪಕ್ಷಗಳ ಬಾಯಿಗೆ ಆಹಾರವಾಗಿದೆ.

    ನಿಗಾ ಇಡಲು ಬಿಜೆಪಿ ಕೋರ್‌ ಕಮಿಟಿ ಸಭೆಯಲ್ಲಿ ನಿರ್ಣಯ
    ಈ ಬೆನ್ನಲ್ಲೇ ಎಚ್ಚೆತ್ತ ಬಿಜೆಪಿ ಪ್ರಿಯಾಂಕ್ ಖರ್ಗೆ ಪತ್ರದ ಪರಿಣಾಮಗಳ ಮೇಲೆ ನಿಗಾ ಇಡಲು ಭಾನುವಾರ ಕೋರ್‌ ಕಮಿಟಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಪ್ರಿಯಾಂಕ್ ಖರ್ಗೆ ಪತ್ರದ ಸಾಧಕ ಬಾಧಕಗಳ ಅಧ್ಯಯನ ನಡೆಸಲು ತೀರ್ಮಾನಿಸಲಾಗಿದ್ದು, ಇದಕ್ಕಾಗಿ ಮೂವರು ಸದಸ್ಯರ ಸಮಿತಿ ರಚಿಸಿ ನಿರ್ಣಯ ಕೈಗೊಳ್ಳಲಾಗಿದೆ.

    ಎಮ್‌ಎಲ್‌ಸಿಗಳಾದ ಎನ್. ರವಿಕುಮಾರ್, ಕೆ.ಎಸ್ ನವೀನ್ ಅವರನ್ನೊಳಗೊಂಡ ಮೂವರ ಸಮಿತಿ ರಚಿಸಲಾಗಿದ್ದು, ಸಂಘದ ಚಟುವಟಿಕೆಗಳ ನಿಷೇಧ ಪ್ರಸ್ತಾಪದ ಸಾಧಕ ಬಾಧಕಗಳ ಅಧ್ಯಯನಕ್ಕೆ ಸೂಚಿಸಲಾಗಿದೆ. ಸರ್ಕಾರದ ಮುಂದಿನ ನಡೆಯ ಮೇಲೆ ಈ ಸಮಿತಿ ಸದಾ ನಿಗಾ ಇಡಲಿದೆ. ಒಂದೊಮ್ಮೆ ಸರ್ಕಾರ ನಿಷೇಧ ತೀರ್ಮಾನ ಮಾಡಿದ್ರೆ ಅದರಿಂದಾಗುವ ಪರಿಣಾಮಗಳ ಅಧ್ಯಯನ ಮಾಡಲಿದೆ.

  • RSS ನಿಷೇಧಕ್ಕೆ ಪ್ರಿಯಾಂಕ್‌ ಖರ್ಗೆ ಪತ್ರ – ಸರ್ಕಾರದ ನಡೆಯ ಮೇಲೆ ನಿಗಾ ಇಡಲು ಬಿಜೆಪಿ ಸಮಿತಿ ರಚನೆ

    RSS ನಿಷೇಧಕ್ಕೆ ಪ್ರಿಯಾಂಕ್‌ ಖರ್ಗೆ ಪತ್ರ – ಸರ್ಕಾರದ ನಡೆಯ ಮೇಲೆ ನಿಗಾ ಇಡಲು ಬಿಜೆಪಿ ಸಮಿತಿ ರಚನೆ

    ಬೆಂಗಳೂರು: ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ (RSS) ಕಾರ್ಯಕ್ರಮ ನಿಷೇಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಚಿವ ಪ್ರಿಯಾಂಕ ಖರ್ಗೆ (Priyank Kharge) ಪತ್ರ ಬರೆದಿದ್ದಾರೆ.

    ಶಾಲಾ-ಕಾಲೇಜು ಮೈದಾನಗಳು, ಸಾರ್ವಜನಿಕ ಪಾರ್ಕ್, ಮುಜರಾಯಿ ದೇವಸ್ಥಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಕ್ಕೆ ಅವಕಾಶ ನೀಡಬಾರದು. ಈ ಸಂಬಂಧ, ಕಾನೂನು ರೂಪಿಸಬೇಕು ಅಂತ ಅ. 4ರಂದು ಮನವಿ ಸಲ್ಲಿಸಿದ್ದಾರೆ. ಇದಕ್ಕೆ ಸಿಎಂ ಸಿದ್ದರಾಮಯ್ಯ ಸ್ಪಂದಿಸಿದ್ದು, ಪರಿಶೀಲಿಸಿ ಕೂಡಲೆ ಅಗತ್ಯ ಕ್ರಮ ವಹಿಸಿ ಎಂದು ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಿಯಾಂಕ್ ಖರ್ಗೆ, ಆರ್‌ಎಸ್‌ಎಸ್‌ಗೂ ತಾಲಿಬಾನ್‌ಗೂ (Taliban) ಏನೂ ವ್ಯತ್ಯಾಸ ಇಲ್ಲ. ಸರ್ಕಾರಿ ಶಾಲೆಯಲ್ಲಿ ಬೈಠಕ್ ಆಗಬಾರದು. ನಮ್ಮದು ಬಸವ ತತ್ವದ ಮೇಲೆ ನಡೆಯುವ ಸರ್ಕಾರ ಅಂದಿದ್ದಾರೆ.

    ನಿಗಾ ಇಡಲು ಬಿಜೆಪಿ ಕೋರ್‌ ಕಮಿಟಿ ಸಭೆಯಲ್ಲಿ ನಿರ್ಣಯ
    ಈ ಬೆನ್ನಲ್ಲೇ ಎಚ್ಚೆತ್ತ ಬಿಜೆಪಿ ಪ್ರಿಯಾಂಕ್ ಖರ್ಗೆ ಪತ್ರದ ಪರಿಣಾಮಗಳ ಮೇಲೆ ನಿಗಾ ಇಡಲು ಕೋರ್‌ ಕಮಿಟಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಪ್ರಿಯಾಂಕ್ ಖರ್ಗೆ ಪತ್ರದ ಸಾಧಕ ಬಾಧಕಗಳ ಅಧ್ಯಯನ ನಡೆಸಲು ತೀರ್ಮಾನಿಸಲಾಗಿದ್ದು, ಇದಕ್ಕಾಗಿ ಮೂವರು ಸದಸ್ಯರ ಸಮಿತಿ ರಚಿಸಿ ನಿರ್ಣಯ ಕೈಗೊಳ್ಳಲಾಗಿದೆ.

    ಎಮ್‌ಎಲ್‌ಸಿಗಳಾದ ಎನ್. ರವಿಕುಮಾರ್, ಕೆ.ಎಸ್ ನವೀನ್ ಅವರನ್ನೊಳಗೊಂಡ ಮೂವರ ಸಮಿತಿ ರಚಿಸಲಾಗಿದ್ದು, ಸಂಘದ ಚಟುವಟಿಕೆಗಳ ನಿಷೇಧ ಪ್ರಸ್ತಾಪದ ಸಾಧಕ ಬಾಧಕಗಳ ಅಧ್ಯಯನಕ್ಕೆ ಸೂಚಿಸಲಾಗಿದೆ. ಸರ್ಕಾರದ ಮುಂದಿನ ನಡೆಯ ಮೇಲೆ ಈ ಸಮಿತಿ ಸದಾ ನಿಗಾ ಇಡಲಿದೆ. ಒಂದೊಮ್ಮೆ ಸರ್ಕಾರ ನಿಷೇಧ ತೀರ್ಮಾನ ಮಾಡಿದ್ರೆ ಅದರಿಂದಾಗುವ ಪರಿಣಾಮಗಳ ಅಧ್ಯಯನ ಮಾಡಲಿದೆ.