ಮೈಸೂರು: ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‍ಗೆ ಜೈಲಿನಲ್ಲಿ ನೀಡಿರುವ 6106 ನಂಬರ್ ಇನ್ಮುಂದೆ ನಮಗೆ ಇದೇ ಲಕ್ಕಿ ನಂಬರ್ ಎಂದು ಅಭಿಮಾನಿಯೊಬ್ಬ ಗಾಡಿ ಮೇಲೆ ಹಾಕಿಸಿಕೊಳ್ಳಲು ಮುಂದಾಗಿದ್ದಾನೆ.
ಬನ್ನೂರಿನ ದರ್ಶನ್ ಅಭಿಮಾನಿ ಧನುಷ್, ದರ್ಶನ್‍ಗೆ ನೀಡಿರುವ ನಂಬರ್‍ನ್ನು ಆರ್‍ಟಿಓನಲ್ಲಿ ರಿಜಿಸ್ಟರ್ ಮಾಡಿಸಲು ಮುಂದಾಗಿದ್ದಾನೆ. ಈ ವೇಳೆ ನಟನ ಜೈಲುವಾಸ ನೆನೆದು ಕಣೀರಿಟ್ಟು, ಶೀಘ್ರ ಬಿಡುಗಡೆಯಾದರೆ 101 ತೆಂಗಿನಕಾಯಿ ಒಡೆಯುವುದಾಗಿ ನಾಡ ಅಧಿದೇವತೆ ಚಾಮುಂಡಿಯಲ್ಲಿ ಹರಕೆ ಹೊತ್ತಿದ್ದಾನೆ. ಇದನ್ನೂ ಓದಿ: ಪವಿತ್ರಾಗೌಡಗೆ ಕೋಟಿ ಕೋಟಿ ಹಣ ಕೊಟ್ಟಿದ್ರಾ ಸೌಂದರ್ಯ ಜಗದೀಶ್?
ಬೆಂಗಳೂರು: ಇಲ್ಲಿನ ವೀರಭದ್ರನಗರದಲ್ಲಿ (Veerabhadra Nagar )ಬೆಂಕಿ ಕೆನ್ನಾಲಿಗೆಗೆ 19 ಬಸ್‌ಗಳು ಸುಟ್ಟು ಕರಕಲಾದ ಘಟನೆ (Bus Fire Incident) ನಡೆದಿದ್ದು, ಗಿರಿನಗರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಬಳಿಕ ತನಿಖೆ ಆರಂಭಿಸಿರುವ ಪೊಲೀಸರಿಗೆ ಕಚೇರಿಯಲ್ಲಿದ್ದ ಲಕ್ಷ-ಲಕ್ಷ ಹಣವೂ ಸಹ ಬೆಂಕಿಗಾಹುತಿಯಾಗಿದೆ ಅನ್ನೋ ಮಾಹಿತಿಗೆ ತಿಳಿದುಬಂದಿರುವುದಾಗಿ ಮೂಲಗಳು ತಿಳಿಸಿವೆ.
ಸದ್ಯ ಎಫ್‌ಐಆರ್ ದಾಖಲಿಸಿರುವ ಪೊಲೀಸರು FSL, ಅಗ್ನಿಶಾಮಕ ಇಲಾಖೆ, RTO ಮೂರು ಇಲಾಖೆಗಳ ವರದಿಗಾಗಿ ಕಾಯುತ್ತಿದ್ದಾರೆ. ಮೂರು ಇಲಾಖೆಗಳ ವರದಿ ಕೈ ಸೇರಿದ ಬಳಿಕ ಅಧಿಕೃತ ತನಿಖೆ ಆರಂಭಿಸುವುದಾಗಿ ಪೊಲೀಸ್ ಇಲಾಖೆ ಮೂಲಗಳು ತಿಳಿಸಿವೆ. ಇದನ್ನೂ ಓದಿ: ವಿಶ್ವಕಪ್‌ನಲ್ಲಿ ಪಾಕ್ ಕಳಪೆ ಪ್ರದರ್ಶನ – ಮೊದಲನೇಯ ದೊಡ್ಡ ವಿಕೆಟ್ ಪತನ
ಈ ನಡುವೆ ನಿನ್ನೆಯೇ ಲೊ ಬಿಪಿಯಿಂದ ಆಸ್ಪತ್ರೆ ಸೇರಿರುವ ಮಾಲೀಕ ಶ್ರೀನಿವಾಸ್ ಅವರನ್ನಯು ಡಿಸ್ಚಾರ್ಜ್ ಬಳಿಕ ನೋಟಿಸ್ ಕೊಟ್ಟು ಪೊಲೀಶರು ವಿಚಾರಣೆಗೆ ಕರೆತರಲಿದ್ದಾರೆ. ಈ ನಡುವೆ ಆಫೀಸ್ ನಲ್ಲಿ ಇಟ್ಟಿದ್ದ 8 ಲಕ್ಷ ರೂ. ಸಹ ಬೆಂಕಿಗಾಹುತಿ ಅನ್ನೊ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿರುವುದಾಗಿ ಅಧಿಕಾರಿ ಮೂಲಗಳು ತಿಳಿಸಿದ್ದಾರೆ. ಇದನ್ನೂ ಓದಿ: ನ್ಯಾನೋ ಕೇಸ್, ಮಮತಾಗೆ ತೀವ್ರ ಮುಖಭಂಗ – ಕೊನೆಗೂ ಗೆದ್ದ ಟಾಟಾ ಮೋಟಾರ್ಸ್
ಆಕಸ್ಮಿಕ ಬೆಂಕಿಯಿಂದ 19 ಖಾಸಗಿ ಬಸ್‌ಗಳು ಸುಟ್ಟು ಕರಕಲಾದ ಘಟನೆ ಬೆಂಗಳೂರಿನ ವೀರಭದ್ರನಗರದಲ್ಲಿ ನಡೆದಿದೆ. ಎಸ್‌ವಿ ಕೋಚ್ ವರ್ಕ್ಶಾಪ್ ಗ್ಯಾರೇಜ್‌ನಲ್ಲಿ ಈ ಅನಾಹುತ ಸಂಭವಿಸಿದೆ. ಬಸ್‌ನ ಟೈರ್, ಡೀಸೆಲ್ ಟ್ಯಾಂಕ್‌ಗಳು ಸ್ಫೋಟಗೊಂಡು ಒಂದರಿಂದ ಒಂದಕ್ಕೆ ಬೆಂಕಿ ವ್ಯಾಪಿಸಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. 60ಕ್ಕೂ ಹೆಚ್ಚು ಅಗ್ನಿಶಾಮಕ ಪಡೆಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಅವಘಡಕ್ಕೆ ಬ್ಯಾಟರಿಯಲ್ಲಿ ಕಾಣಿಸಿಕೊಂಡ ಬೆಂಕಿಯೇ ಕಾರಣ ಎನ್ನಲಾಗಿದೆ.
ಈ ಬಗ್ಗೆ ತನಿಖೆ ನಡೆಯುತ್ತಿದ್ದು, ಘಟನಾ ಸ್ಥಳಕ್ಕೆ ಡಿಸಿಎಂ ಡಿಕೆ ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಭೇಟಿ ನೀಡಿ ಘಟನೆ ಬಗ್ಗೆ ಮಾಹಿತಿ ಪಡೆದಿದ್ದಾರೆ. ಸ್ಪಾರ್ಕ್ ಉಂಟಾಗುವ ಎಲ್ಲಾ ಸ್ಥಳಗಳಲ್ಲೂ ಅಗ್ನಿಶಾಮಕ ಇಲಾಖೆಯ ನಿಯಮಗಳ ಪಾಲನೆ ಆಗ್ತಿದೆಯೇ ಎಂಬುದನ್ನು ಪರಿಶೀಲನೆ ನಡೆಸುವಂತೆ ಡಿಸಿಎಂ ಸೂಚನೆ ನೀಡಿದ್ದಾರೆ.
ಕೋಲಾರ: ನಗರದಲ್ಲಿ ಆರ್.ಟಿ.ಓ (RTO) ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಒಂದೇ ನಂಬರ್‌ನ ಎರಡು ಬಸ್‍ಗಳನ್ನು (Bus) ವಶಕ್ಕೆ ಪಡೆದಿದ್ದಾರೆ.
ತೆರಿಗೆ ವಂಚಿಸಲು ಬಸ್ ಮಾಲೀಕರು ಒಂದೇ ನಂಬರ್‌ನ ಎರಡು ಬಸ್‍ಗೆ ಬಳಸಿದ್ದಾರೆ. ಈ ವಿಚಾರ ಕೆಜಿಎಫ್ ಆರ್.ಟಿ.ಓ ಅಧಿಕಾರಿಗಳ ಗಮನಕ್ಕೆ ಬರುತ್ತಿದ್ದಂತೆ ದಾಳಿ ನಡೆಸಿದ್ದಾರೆ. ಎರಡು ಬಸ್‍ಗಳು ತಮಿಳುನಾಡಿನ (Tamil Nadu) ಖಾಸಗಿ ಟೂರ್ಸ್ ಅಂಡ್ ಟ್ರಾವೆಲ್ಸ್ ಕಂಪನಿಗೆ ಸೇರಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ವೀಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಯುವಕ ಚಿಂತಾಜನಕ
ಕೋವಿಡ್ ಬಳಿಕ ಮೆಟಾ ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಮ್ ಅನ್ನು ಕೊನೆಗೊಳಿಸಿ ಆಫೀಸ್‌ಗೆ ಮರಳುವಂತೆ ತಿಳಿಸಿತ್ತು. ಆದರೆ ಬಹುತೇಕ ಉದ್ಯೋಗಿಗಳು ಮನೆಯಿಂದಲೇ ಕೆಲಸವನ್ನು ಮುಂದುವರಿಸಲು ಆದ್ಯತೆ ನೀಡಿದ್ದಾರೆ. ಇದೀಗ ರಿಟರ್ನ್ ಟು ಆಫೀಸ್ (RTO) ನೀತಿಯ ಮೇಲೆ ಮೆಟಾ ಕಟ್ಟುನಿಟ್ಟಿನ ಕ್ರಮವನ್ನು ತೆಗೆದುಕೊಳ್ಳಲು ಮುಂದಾಗಿದೆ.
ಈ ಬಗ್ಗೆ ಮೆಟಾದ ಮಾನವ ಸಂಪನ್ಮೂಲ ಮುಖ್ಯಸ್ಥರಾದ ಲೋರಿ ಗೋಲರ್ ಕಂಪನಿಯಲ್ಲಿ ಆರ್‌ಟಿಒ ಕುರಿತಾಗಿ ಉದ್ಯೋಗಳಿಗೆ ಇ-ಮೇಲ್ ಕಳುಹಿಸಿದ್ದಾರೆ. ಹೊಸ ನೀತಿಯಂತೆ ಕಂಪನಿಯ ಉದ್ಯೋಗಿಗಳು ನಿಯೋಜಿಸಲಾದ ಕಚೇರಿಯಿಂದಲೇ ಕೆಲಸ ಮಾಡಬೇಕು ಅಥವಾ ವಾರಕ್ಕೆ ಕನಿಷ್ಠ 3 ದಿನವಾದರೂ ಕಚೇರಿಯಲ್ಲಿ ಹಾಜರಿರಬೇಕು. ಆದರೆ ಈಗಾಗಲೇ ಮನೆಯಿಂದ ಕೆಲಸ ಮಾಡಲು ಅನುಮೋದನೆ ನೀಡಲಾಗಿರುವ ಉದ್ಯೋಗಿಗಳಿಗೆ ಈ ನೀತಿಯಿಂದ ವಿನಾಯಿತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮೇಡ್ ಇನ್ ಚೈನಾಗೆ ಭಾರತ ಶಾಕ್!
ಆರ್‌ಟಿಒ ನೀತಿ ಸೆಪ್ಟೆಂಬರ್ 5 ರಿಂದ ಜಾರಿಗೆ ಬರಲಿದೆ. ಇತರ ಕಂಪನಿಗಳಂತೆ ಈ ನೀತಿಯನ್ನು ಉದ್ಯೋಗಿಗಳು ಉಲ್ಲಂಘನೆ ಮಾಡಿದ್ದಲ್ಲಿ ಅವರ ಮೇಲೆ ಶಿಸ್ತಿನ ಕ್ರಮವನ್ನು ತೆಗೆದುಕೊಳ್ಳಲಾಗುವುದು. ಕಂಪನಿಯ ಕೆಲಸವೂ ಕೂಡಾ ಭವಿಷ್ಯದಲ್ಲಿ ತಂತ್ರಜ್ಞಾನ ಬೆಳೆದಂತೆ ಸುಧಾರಿಸುತ್ತದೆ ಎಂಬ ಭರವಸೆಯಿದೆ ಎಂದು ಮೆಟಾ ವಕ್ತಾರರು ತಿಳಿಸಿದ್ದಾರೆ.
ಈ ಹಿಂದೆ ಟ್ವಿಟ್ಟರ್ ಸೇರಿದಂತೆ ಹಲವು ಕಂಪನಿಗಳು ಕೂಡಾ ತನ್ನ ಉದ್ಯೋಗಿಗಳನ್ನು ಕಚೇರಿಗಳಿಗೆ ಮರಳುವಂತೆ ಎಚ್ಚರಿಕೆಯನ್ನು ನೀಡಿದ್ದವು. ಈಗ ಎಕ್ಸ್ ಆಗಿ ಬದಲಾಗಿರುವ ಟ್ವಿಟ್ಟರ್ ಅನ್ನು ಎಲೋನ್ ಮಸ್ಕ್ ಸ್ವಾಧೀನಪಡಿಸಿಕೊಂಡ ಬಳಿಕ ಉದ್ಯೋಗಿಗಳಿಗೆ ವಾರಕ್ಕೆ 40 ಗಂಟೆ ಕಚೇರಿಯಲ್ಲಿ ಹಾಜರಿರುವಂತೆ ತಿಳಿಸಲಾಗಿತ್ತು. ಒಂದು ವೇಳೆ ಉದ್ಯೋಗಿಗಳು ವರ್ಕ್ ಫ್ರಂ ಹೋಮ್ ಕೊನೆಗೊಳಿಸಿ ಕಚೇರಿಗೆ ಮರಳಲು ಇಷ್ಟಪಡದೇ ಹೋದರೆ ಅವರು ದಾರಾಳವಾಗಿ ರಾಜೀನಾಮೆ ಸಲ್ಲಿಸಬಹುದು ಎಂದು ಮಸ್ಕ್ ಹೇಳಿದ್ದರು. ಇದನ್ನೂ ಓದಿ: ಸಿಮ್ ಕಾರ್ಡ್ ಡೀಲರ್‌ಗಳ ಪೊಲೀಸ್ ಪರಿಶೀಲನೆ ಕಡ್ಡಾಯ
ಸಾರಥಿ ವೆಬ್ ಸೈಟ್ ಮೂಲಕ ವಿಳಾಸ ಬದಲಾವಣೆ, ಹೆಸರು ಬದಲಾವಣೆಯಂತಹ ಸೇವೆಗಳನ್ನು ಮನೆಯಲ್ಲೇ ಶುಲ್ಕ ಪಾವತಿಸಿ ಅನ್‌ಲೈನ್‌ನಲ್ಲೇ ಮಾಡಬಹುದು ಎಂದು ಆರ್‌ಇಟಿಒ ತಿಳಿಸಿದೆ. ಇದನ್ನೂ ಓದಿ: ಹೆದ್ದಾರಿಯನ್ನು ಅಡವಿಟ್ಟು ಸಾಲ ಪಡೆದ ಪಾಕಿಸ್ತಾನ
ಇನ್ನು ಮುಂದೆ ಡ್ರೈವಿಂಗ್ ಲೈಸೆನ್ಸ್, ಫಿಸಿಕಲ್ ಟೆಸ್ಟ್, ಫಿಟ್ನೆಸ್ ಟೆಸ್ಟ್ ರಿನಿವಲ್ ಮಾಡಿಸಲು ಮಾತ್ರ ಆರ್‌ಟಿಒ ಕಚೇರಿಗೆ ಹೋಗಬೇಕು. ಉಳಿದಂತೆ ಯಾವುದೇ ಕೆಲಸಗಳಿಗೆ ಆರ್‌ಟಿಒ ಕಚೇರಿಗೆ ಹೋಗಬೇಕಿಲ್ಲ.
ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ತಂದೆ ಮಗನ ನಡುವೆ ಆರಂಭವಾದ ಗಲಾಟೆ ಮಗನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಕಾಮಾಕ್ಷಿ ಪಾಳ್ಯದಲ್ಲಿ ನಡೆದಿದೆ.
ಕೊಲೆಯಾದ ಸಂತೋಷ್ ಮತ್ತು ಆತನ ತಂದೆ ಗುರುರಾಜ್ ಇಬ್ಬರು ಆರ್‌ಟಿಓ ಏಜೆಂಟ್‍ಗಳಾಗಿ ಕೆಲಸ ಮಾಡಿಕೊಂಡಿದ್ದರು. ಸಂತೋಷ್ ಇತ್ತೀಚೆಗೆ ಸ್ನೇಹಿತರೊಂದಿಗೆ ಪ್ರವಾಸ ಹೋಗಿ ಬಂದಿದ್ದರು. ಇದು ತಂದೆ ಗುರುರಾಜ್‍ಗೆ ಕೋಪ ತರಿಸಿತ್ತು. ಸಂತೋಷ್ ಪ್ರವಾಸ ಮುಗಿಸಿ ಮನೆಗೆ ಬಂದ ಬಳಿಕ ಸರಿಯಾಗಿ ಕೆಲಸ ಮಾಡಲ್ಲ ಯಾವಾಗ ಬೇಕು ಆಗ ಕೆಲಸ ಬಿಟ್ಟು ಹೋಗಿ ಬಿಡುತ್ತಿಯಾ ಎಂದು ಗುರುರಾಜ್ ಮಗ ಸಂತೋಷ್‍ಗೆ ಬೈದಿದ್ದಾರೆ. ಇದನ್ನೂ ಓದಿ: ಕಲ್ಲಿದ್ದಲು ಕೊರತೆಯಿಂದ ವಿದ್ಯುತ್ ಕ್ಷಾಮ ಆತಂಕ – ರಾಜ್ಯದ 3 ಸ್ಥಾವರಗಳ ಅರ್ಧಕ್ಕರ್ಧ ಘಟಕಗಳು ಬಂದ್
ತಂದೆ ಮಗನ ಮಧ್ಯೆ ಗಲಾಟೆ ವಿಕೋಪಕ್ಕೆ ತಿರುಗಿ ಗುರುರಾಜ್ ಮಗ ಸಂತೋಷ್ ಎದೆಯ ಭಾಗಕ್ಕೆ ಚಾಕುವಿನಿಂದ ಬಲವಾಗಿ ಚುಚ್ಚಿದ್ದಾರೆ. ಪರಿಣಾಮ ರಕ್ತಸ್ರಾವವಾಗಿ ಮಗ ಸಂತೋಷ್ ಪ್ರಾಣ ಬಿಟ್ಟಿದ್ದಾರೆ. ಘಟನೆ ಸಂಬಂಧ ಕಾಮಾಕ್ಷಿ ಪಾಳ್ಯ ಪೊಲೀಸ್ ಠಾಣೆಯಲ್ಲಿ ಕೊಲೆ ಕೇಸ್ ದಾಖಲಾಗಿದ್ದು, ಆರೋಪಿ ಗುರುರಾಜ್‍ನನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ರಿತು ರಾಜ್ ಅವಸ್ಥಿ ಪ್ರಮಾಣ ವಚನ ಸ್ವೀಕಾರ
ಚಿಕ್ಕಬಳ್ಳಾಪುರ: ನಿನ್ನೆಯಷ್ಟೇ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮರಿನಾಯಕನಹಳ್ಳಿ ಬಳಿ ಲಾರಿ ಹಾಗೂ ಜೀಪ್ ನಡುವೆ ಮುಖಾಮುಖಿ ಡಿಕ್ಕಿಯಾಗಿ 8 ಜನ ಸಾವನ್ನಪ್ಪಿದ್ದು, ಮತ್ತೆ 8 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ಆರ್‌ಟಿಓ ಹಾಗೂ ಪೊಲೀಸರು ಮಾತ್ರ ಎಚ್ಚೆತ್ತುಕೊಂಡಿಲ್ಲ.
ಗ್ರಾಮೀಣ ಭಾಗದಿಂದ ಚಿಂತಾಮಣಿ ನಗರಕ್ಕೆ ಶಾಲಾ ಕಾಲೇಜಿಗೆ ಬರುವ ವಿದ್ಯಾರ್ಥಿಗಳು ಖಾಸಗಿ ಬಸ್‍ಗಳ ಟಾಪ್ ಮೇಲೆ ಪ್ರಯಾಣ ಮಾಡುತ್ತಿದ್ದಾರೆ. ಬಸ್‍ಗಳ ಟಾಪ್ ಮೇಲೆ ಸಾವಿನ ಸವಾರಿ ಮಾಡುತ್ತಿದ್ದರೂ ಆರ್‌ಟಿಓ ಅಧಿಕಾರಿಗಳು ಮಾತ್ರ ಕಂಡು ಕಾಣದಂತೆ ಸುಮ್ಮನಾಗಿದ್ದಾರೆ. ಇದನ್ನೂ ಓದಿ: ಸುಪ್ರೀಂ ಆದೇಶ ಹಿಂದೂಗಳಿಗೆ ಮಾತ್ರವೇ – ಮೈಸೂರು ಡಿಸಿಗೆ ಯತ್ನಾಳ್ ಪ್ರಶ್ನೆ
ಖಾಸಗಿ ಬಸ್ ಗಳ ಟಾಪ್ ಸೇರಿದಂತೆ ಮಿತಿ ಮೀರಿದ ಪ್ರಯಾಣಿಕರನ್ನು ಕಿಕ್ಕಿರಿದು ತುಂಬಿಕೊಂಡು ಖಾಸಗಿ ಬಸ್‍ಗಳು ಬೇಕಾಬಿಟ್ಟಿ ಸಂಚಾರ ಮಾಡುತ್ತಿದ್ದರೂ, ಹೇಳುವವರು ಕೇಳುವವರು ಯಾರು ಇಲ್ಲದಂತಾಗಿದೆ. ಬಸ್‍ನ ಬಾಗಿಲಿನಲ್ಲಿಯೇ ನಿಂತು ವಿದ್ಯಾರ್ಥಿಗಳು ಪ್ರಯಾಣ ಮಾಡುತ್ತಾ ಸಾವಿನ ಜೊತೆ ಸೆಣಸಾಡುವಂತಿದೆ. ಪ್ರತಿ ನಿತ್ಯ ಖಾಸಗಿ ಬಸ್ ಗಳಲ್ಲಿ ಇದೇ ಪರಿಸ್ಥಿತಿ ಇದ್ದರೂ ಇಲ್ಲಿನ ಅಧಿಕಾರಿಗಳು ಮಾತ್ರ ಕಣ್ಣಿಲ್ಲದಂತವರಾಗಿದ್ದಾರೆ. 60-70 ಜನ ತುಂಬುವ ಖಾಸಗಿ ಬಸ್‍ನಲ್ಲಿ 120ಕ್ಕೂ ಹೆಚ್ಚು ಮಂದಿ ಪ್ರಯಾಣ ಮಾಡುತ್ತಿದ್ದಾರೆ. ಅದರಲ್ಲೂ ಬೆಳಿಗ್ಗೆ ಹಾಗೂ ಸಂಜೆ ಶಾಲಾ-ಕಾಲೇಜುಗಳಿಗೆ ಬರುವಾಗ ಹಾಗೂ ಮನೆಗೆ ಹೋಗುವಾಗ ಬಸ್‍ಗಳು ವಿದ್ಯಾರ್ಥಿಗಳಿಂದ ಕಿಕ್ಕಿರಿದು ತುಂಬಿರುತ್ತವೆ. ಒಬ್ಬರ ಮೇಲೆ ಒಬ್ಬರು ಬಿದ್ದು ಪ್ರಯಾಣ ಮಾಡುತ್ತಿದ್ದಾರೆ. ಬಸ್‍ಗಳ ಟಾಪ್ ಮೇಲೆಯೇ 30-40 ಮಂದಿ ಪ್ರಯಾಣ ಮಾಡುತ್ತಾರೆ. ಇದನ್ನೂ ಓದಿ: ಯಾದಗರಿಯಲ್ಲಿ ಮಹಿಳೆಯನ್ನು ನಗ್ನಗೊಳಿಸಿ ಥಳಿಸಿದ ನಾಲ್ವರು ಅರೆಸ್ಟ್
ಬಟ್ಲಹಳ್ಳಿ, ಚೇಳೂರು ಮುರುಗಮಲ್ಲ ಕಡೆಯ ಗ್ರಾಮೀಣ ಭಾಗಗಳಿಂದ ಶಾಲಾ ಕಾಲೇಜುಗಳ ಸಮಯದಲ್ಲಿ ಹೆಚ್ಚಿನ ಸರ್ಕಾರಿ ಬಸ್ ಸೌಲಭ್ಯ ಇಲ್ಲ. ಎರಡು ಮೂರು ಬಸ್‍ಗಳು ಮಾತ್ರ ಸಂಚಾರ ಮಾಡುತ್ತವೆ. ಹೀಗಾಗಿ ಈ ಸಮಯದಲ್ಲಿ ಖಾಸಗಿ ಬಸ್‍ಗಳು ಹೆಚ್ಚಾಗಿ ಸಂಚಾರ ಮಾಡುತ್ತವೆ. ಹಾಗಾಗಿ ಖಾಸಗಿ ಬಸ್‍ಗಳನ್ನೇ ಜನ ಹಾಗೂ ವಿದ್ಯಾರ್ಥಿಗಳು ಅವಲಂಬಿಸಿದ್ದಾರೆ. ಆದರೆ ಖಾಸಗಿ ಬಸ್‍ಗಳ ಅತಿ ವೇಗ ಚಾಲನೆ ನೋಡಿದರೆ ಮಕ್ಕಳನ್ನು ಶಾಲಾ ಕಾಲೇಜುಗಳಿಗೆ ಕಳಿಸುವುದಕ್ಕೂ ಭಯವಾಗುತ್ತದೆ ಎಂದು ಪೋಷಕರು ಬೇಸರ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ಯುಬಿ ಸಿಟಿ ಬಳಿ ಸೂಪರ್ ಸ್ಟಾರ್ ಅಮಿತಾಭ್ ಬಚ್ಚನ್ ಅವರಿಗೆ ಸೇರಿದ ಕಾರನ್ನು ಆರ್‌ಟಿಒ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಇಂದು ಸಂಜೆ ನಗರದ ಯುಬಿ ಸಿಟಿ ಬಳಿ ಆರ್‌ಟಿಒ ಅಧಿಕಾರಿಗಳು ಪರಿಶೀಲನೆಗೆ ಇಳಿದಿದ್ದರು. ಈ ವೇಳೆ ನಟ ಅಮಿತಾಭ್ ಹೆಸರಿನಲ್ಲಿ ನೊಂದಣಿ ಆಗಿರುವ ಐಷಾರಾಮಿ ರೋಲ್ಸ್ ರಾಯ್ಸ್ ಕಾರು ಪತ್ತೆಯಾಗಿತ್ತು.
ಎರಡು ವರ್ಷದಿಂದ ಇನ್ಶುರೆನ್ಸ್ ಇಲ್ಲದೇ, ಮಹಾರಾಷ್ಟ್ರ ರಿಜಿಸ್ಟರ್ ಆಗಿರುವ ರೋಲ್ಸ್ ರಾಯ್ ಕಾರು ಇನ್ನೂ ಅಮಿತಾಭ್ ಬಚ್ಚನ್ ಹೆಸರಿನಲ್ಲೇ ಇದೆ. ಉದ್ಯಮಿ ಬಾಬು 2019 ರಲ್ಲಿ 6 ಕೋಟಿ ರೂ. ಕೊಟ್ಟು ಅಮಿತಾಭ್ ಬಚ್ಚನ್ ಬಳಿ ಈ ಖರೀದಿ ಮಾಡಿದ ವಿಚಾರ ಪರಿಶೀಲನೆ ವೇಳೆ ತಿಳಿದು ಬಂದಿದೆ. ಆದರೆ ವಾಹನದ ಎಲ್ಲಾ ದಾಖಲೆ ಗಳು ಇನ್ನೂ ಬಚ್ಚನ್ ಹೆಸರಲ್ಲೇ ಇರೋದು ಪತ್ತೆಯಾಗಿದೆ. ಇದನ್ನೂ ಓದಿ: ಕೆಜಿಎಫ್ ಟೀಂ ಅಲ್ಲ ಅದು ಫ್ಯಾಮಿಲಿ: ಶ್ರೀನಿಧಿ ಶೆಟ್ಟಿ
ಇದೇ ವೇಳೆ ಪರಿಷತ್ ಸದಸ್ಯ ಫಾರೂಕ್ ಅವರಿಗೆ ಸೇರಿದ ಎರಡು ಐಷಾರಾಮಿ ಕಾರುಗಳು ಕೂಡ ಪತ್ತೆಯಾಗಿವೆ. ಇನ್ಶುರೆನ್ಸ್ ಇಲ್ಲದ, ಸೂಕ್ತ ದಾಖಲೆ ಇಲ್ಲದ, ಬೇರೆ ಬೇರೆ ರಾಜ್ಯಗಳಲ್ಲಿ ನೋಂದಣಿ ಮಾಡಿ, ಒಂದೇ ನಂಬರ್ ನಲ್ಲಿ ಬೇರೆ ಬೇರೆ ಕಾರುಗಳು ಓಡಾಟ ಮಾಡುತ್ತಿರುವುದನ್ನು ಆರ್‌ಟಿಒ ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಸದ್ಯ ಕಾರ್ಯಾಚರಣೆ ಮುಂದುವರಿದಿದ್ದು ಹದಿಮೂರು ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ.
ಸಾರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತ ನರೇಂದ್ರ ಹೋಳ್ಕರ್ ನೇತೃತ್ವದಲ್ಲಿ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ರಾಜಣ್ಣ, ಮೋಟಾರ್ ವಾಹನ ನಿರೀಕ್ಷಕರಾದ ಸುಧಾಕರ್, ತಿಪ್ಪೇಸ್ವಾಮಿ, ವಿಶ್ವನಾಥ ಶೆಟ್ಟರ್, ರಂಜಿತ್, ರಾಜೇಶ್ ಮತ್ತು ರಾಜ್ ಕುಮಾರ್ ಅವರನ್ನ ಒಳಗೊಂಡ ತಂಡ ಇಂದು ಕಾರ್ಯಾಚರಣೆ ನಡೆಸಿತು.
ನೆಲಮಂಗಲ: ಹೆಲ್ಮೆಟ್ ಧರಿಸದವರಿಗೆ ಪೊಲೀಸರು ಫೈನ್ ಹಾಕಿದವರನ್ನು ನೋಡಿದ್ದೇವೆ, ಆದರೆ ಇಲೊಬ್ಬರು ಆರ್.ಟಿ.ಓ ಅಧಿಕಾರಿ ಹೆಲ್ಮೆಟ್ ಹಾಕಿರುವವರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ತುಳಸಿ ಗಿಡ ಕೊಟ್ಟು ಅಭಿನಂದಿಸಿದ್ದಾರೆ.
ರಸ್ತೆ ಸುರಕ್ಷತಾ ಅಭಿಯಾನದ ಅಂಗವಾಗಿ ನೆಲಮಂಗಲ ಪ್ರಾದೇಶಿಕ ಸಾರಿಗೆ ಕಛೇರಿವತಿಯಿಂದ ತುಮಕೂರು ರಸ್ತೆಯ ಜಾಸ್ ಟೋಲ್ ಬಳಿ ದ್ವಿಚಕ್ರ ವಾಹನ ಸವಾರರಿಗೆ ಅರಿವು ಮೂಡಿಸುವ ಕೆಲಸ ಮಾಡಿದ್ದಾರೆ. ಹೆಲ್ಮೆಟ್ ಧರಿಸಿ ವಾಹನ ಓಡಿಸುವುದರಿಂದ ಉಂಟಾಗುವ ಪ್ರಯೋಜನಗಳು ಮತ್ತು ಅಸುರಕ್ಷ ಹೆಲ್ಮೆಟ್ ಧರಿಸುವದರಿಂದ ಆಗುವ ತೊಂದರೆಗಳು ಮತ್ತು ಕೇಂದ್ರ ಮೋಟಾರು ವಾಹನಗಳ ನಿಯಮಗಳ ಬಗ್ಗೆ ಹಿರಿಯ ಮೋಟಾರು ವಾಹನ ನಿರೀಕ್ಷಕರಾದ ಡಾ. ಧನ್ವಂತರಿ ಒಡೆಯರ್ ಈ ಬಗ್ಗೆ ಅರಿವು ಮೂಡಿಸಿದ್ದಾರೆ. ಇದನ್ನೂ ಓದಿ: ಕುಂದಾಪುರದಿಂದ ಹೊರಟಿದೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪರಿಗೆ ಪತ್ರ
ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನ ಸವಾರರು ವಾಹನ ಓಡಿಸಿದರೆ 3 ತಿಂಗಳು ಲೈಸನ್ಸ್ ರದ್ದು ಪಡಿಸಲಾಗುವುದು. ಕರ್ನಾಟಕ ಮೋಟಾರು ವಾಹನ ನಿಯಮಗಳ ಪ್ರಕಾರ 4 ವರ್ಷ ಮೇಲ್ಪಟ್ಟ ಎಲ್ಲ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿರಬೇಕು ಎಂದು ಅರಿವು ಮೂಡಿಸಿ, ಹೆಲ್ಮೆಟ್ ಧರಿಸದ 10 ಸವಾರರಿಗೆ ದಂಡ ವಿಧಿಸಿ ಸುರಕ್ಷಿತ ಹೆಲ್ಮೆಟ್ ಧರಿಸಿದ 58 ಸವಾರರಿಗೆ ತುಳಸಿ ಗಿಡ ನೀಡಿ ಅಭಿನಂದಿಸಿದರು.
ನೆಹರು ಯುವ ಕೇಂದ್ರದ ಸದಸ್ಯರಾದ ಶ್ರೀ ಮಂಜುನಾಥ್ ಮಾತನಾಡಿ ಅಸುರಕ್ಷಿತ ಹೆಲ್ಮೆಟ್ ಧರಿಸಬೇಡಿ ಎಂದು ಕಿವಿ ಮಾತು ಹೇಳಿದರು. ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್‍ನ ಗೋಪಾಲ್ ರವರು ತುಳಸಿ ಗಿಡ ನೀಡಿದರು. ಪರಿಸರ ಕ್ರಾಂತಿ ಸಂಸ್ಥೆಯ ಅಧ್ಯಕ್ಷರು ಹನುಮಂತರಾಜು ಪರಿಸರ ರಕ್ಷಣೆ ಬಗ್ಗೆ ಅರಿವು ಮೂಡಿಸಿದರು.
ಬೆಂಗಳೂರು: ಕೋವಿಡ್ ನಿಯಮಗಳನ್ನು ಗಾಳಿಗೆ ತೂರಿ ಕಳ್ಳ ಮಾರ್ಗದಲ್ಲಿ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ನಾಲ್ಕು ಬಸ್‍ಗಳನ್ನು ಸಾರಿಗೆ ಇಲಾಖೆ ಹೆಚ್ಚುವರಿ ಆಯುಕ್ತ ನರೇಂದ್ರ ಹೋಳ್ಕರ್ ನೇತೃತ್ವದ ತಂಡ ದಾಳಿ ಮಾಡಿ ಜಪ್ತಿ ಮಾಡಿದೆ.
ಬಾಗೇಪಲ್ಲಿ, ಅತ್ತಿಬೆಲೆ ಮತ್ತು ಎಸ್ಟೀಮ್ ಮಾಲ್ ಬಳಿ ದಾಳಿ ನಡೆಸಿ ಈ ಬಸ್‍ಗಳನ್ನು ಆರ್‍ಟಿಒ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಕೋವಿಡ್ ನಿಯಮಾವಳಿಗಳ ಪ್ರಕಾರ ಯಾವುದೇ ಬಸ್‍ಗಳು ಕಾರ್ಯಾರಣೆ ಮಾಡುವಂತಿಲ್ಲ. ಆದರೆ ಈ ನಾಲ್ಕು ಖಾಸಗಿ ಬಸ್‍ಗಳು ನಿಯಮಗಳನ್ನು ಉಲ್ಲಂಘಿಸಿ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದವು.
ಬಾಗೇಪಲ್ಲಿಯಲ್ಲಿ ಮೋಟಾರ್ ವಾಹನ ನಿರೀಕ್ಷಕ ಸಿ.ತಿಪ್ಪೇಸ್ವಾಮಿ, ವೆಂಕಟೇಶ್, ಜಿ.ಎನ್.ಸುರೇಶ್ ತಂಡ ಕಾರ್ಯಾಚರಣೆ ನಡೆಸಿ ಮೂರು ಬಸ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಎಆರ್ ಟಿಒ ರಾಜಣ್ಣ, ಕೃಷ್ಣಾನಂದ, ಇನ್‍ಸ್ಪೆಕ್ಟರ್ ರಾಜ್ ಕುಮಾರ್, ಸುಧಾಕರ್, ರಾಜೇಶ್, ಜಗದೀಶ್ ಮತ್ತು ಜಯಣ್ಣ ಅವರನ್ನೊಳಗೊಂಡ ತಂಡ ಕ್ಷಿಪ್ರ ಕಾರ್ಯಾಚರಣೆ ನಡೆಸಿ ರಾತ್ರಿ ವೇಳೆಯಲ್ಲಿ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಒಂದು ಬಸ್‍ನ್ನು ವಶಪಡಿಸಿಕೊಂಡಿದ್ದಾರೆ.
ನೇಪಾಳಕ್ಕೆ ತೆರಳಲು ಸಿದ್ಧವಾಗಿದ್ದ ಬಸ್‍ನಲ್ಲಿದ್ದ ಪ್ರಯಾಣಿಕರನ್ನು ವಾಪಸ್ ಕಳುಹಿಸಿಲಾಗಿದೆ. ಇನ್ನೂ ಮೂರು ಬಸ್ ಗಳಲ್ಲಿದ್ದ ಪ್ರಯಾಣಿಕರಿಗೆ ಕೆಎಸ್‍ಆರ್‍ಟಿಸಿ ಬಸ್‍ಗಳ ವ್ಯವಸ್ಥೆ ಮಾಡಿ ಅವರ ಊರುಗಳಿಗೆ ತಲುಪಿಸಲಾಗಿದೆ.