Tag: Rudhiram

  • ಮಲಯಾಳಂ ಸಿನಿಮಾ ಶೂಟಿಂಗ್ ನಲ್ಲಿ ಬ್ಯುಸಿಯಾದ ರಾಜ್ ಬಿ ಶೆಟ್ಟಿ

    ಮಲಯಾಳಂ ಸಿನಿಮಾ ಶೂಟಿಂಗ್ ನಲ್ಲಿ ಬ್ಯುಸಿಯಾದ ರಾಜ್ ಬಿ ಶೆಟ್ಟಿ

    ನ್ನಡದ ಹೆಸರಾಂತ ನಟ, ನಿರ್ದೇಶಕ ರಾಜ್ ಬಿ ಶೆಟ್ಟಿ (Raj B Shetty) ಮಲಯಾಳಂ ಸಿನಿಮಾ ರಂಗಕ್ಕೆ ಹಾರಿದ್ದಾರೆ. ರಮ್ಯಾ ನಿರ್ಮಾಣದ ಚೊಚ್ಚಲು ಸಿನಿಮಾದ ಶೂಟಿಂಗ್ ಮುಗಿಸಿರುವ ರಾಜ್, ಮಲಯಾಳಂ ಹೊಸ ಸಿನಿಮಾದ ಚಿತ್ರೀಕರಣದಲ್ಲಿ ಅವರು ಭಾಗಿಯಾಗಿದ್ದಾರೆ. ಇದು ಇವರ ಚೊಚ್ಚಲು ಮಲಯಾಳಂ ಸಿನಿಮಾವಾಗಿದ್ದು, ಚಿತ್ರಕ್ಕೆ ರುಧಿರಂ (Rudhiram) ಎಂದು ಹೆಸರಿಡಲಾಗಿದೆ.

    ರುಧಿರಂ ಸಿನಿಮಾದಲ್ಲಿ ರಾಜ್ ಬಿ ಶೆಟ್ಟಿ ಕೇವಲ ನಟನೆಯನ್ನು ಮಾತ್ರ ಮಾಡುತ್ತಿದ್ದಾರೆ. ಜಿಶೋ ಲೋನ್ ಆಂಟೋನಿ (Jisho Lone Antony) ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರುತ್ತಿದೆ. ಫೆಬ್ರವರಿ 14 ರಂದು ಈ ಚಿತ್ರಕ್ಕೆ ಮುಹೂರ್ತವಾಗಿದ್ದು, ಇದೀಗ ಚಿತ್ರೀಕರಣವನ್ನು ಆರಂಭಿಸಿದ್ದಾರೆ ನಿರ್ದೇಶಕರು. ರಾಜ್ ಬಿ ಶೆಟ್ಟಿ ಜೊತೆ ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ಅಪರ್ಣಾ ಬಾಲಮುರಳಿ (Aparna Balamurali) ನಾಯಕಿಯಾಗಿ ನಟಿಸುತ್ತಿದ್ದಾರೆ. ಇದನ್ನೂ ಓದಿ: ಜಾಹೀರಾತಿನ ಪೋಸ್ಟ್‌ನೊಂದಿಗೆ ಮುದ್ದು ಮಗುವಿನ ಫೋಟೋ ಹಂಚಿಕೊಂಡ ನಟಿ ಆಲಿಯಾ

    ಒಂದು ಮೊಟ್ಟೆಯ ಕಥೆ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಪದಾರ್ಪಣೆ ಮಾಡಿದವರು ರಾಜ್ ಬಿ ಶೆಟ್ಟಿ. ಆನಂತರ ಅನೇಕ ಸಿನಿಮಾಗಳಲ್ಲಿ ನಟನಾಗಿ, ನಿರ್ದೇಶಕರಾಗಿ ಕೆಲಸ ಮಾಡಿದವರು ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ ತಂಡದ ಸಕ್ರೀಯ ಸದಸ್ಯನಾಗಿರುವ ರಾಜ್, ತಮ್ಮದೇ ಆದ ರೀತಿಯ ಕಥೆಗಳನ್ನು ಆಯ್ಕೆ ಮಾಡಿಕೊಳ್ಳುವ ಮೂಲಕ ಅಪಾರ ಅಭಿಮಾನಿ ಬಳಗ ಹೊಂದಿದ್ದಾರೆ. ಈ ಎಲ್ಲದರ ಯಶಸ್ಸೇ ಇಂದು ಅವರನ್ನು ಮಲಯಾಳಂ ಚಿತ್ರರಂಗಕ್ಕೆ ಕರೆದುಕೊಂಡು ಹೋಗಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮಲಯಾಳಂಗೆ ಹಾರಿದ ರಾಜ್ ಬಿ. ಶೆಟ್ಟಿ : ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ನಾಯಕಿ

    ಮಲಯಾಳಂಗೆ ಹಾರಿದ ರಾಜ್ ಬಿ. ಶೆಟ್ಟಿ : ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ನಾಯಕಿ

    ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ನಿರ್ಮಾಣದ ಚಿತ್ರಕ್ಕೆ ಆಕ್ಷನ್ ಕಟ್ ಜೊತೆಗೆ ನಾಯಕನಾಗಿ ನಟಿಸುತ್ತಿರುವ ರಾಜ್ ಬಿ ಶೆಟ್ಟಿ ಇದೀಗ ಮತ್ತೊಂದು ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಸಿನಿಮಾ ನಾಲ್ಕು ಭಾಷೆಗಳಲ್ಲಿ ಮೂಡಿ ಬರುತ್ತಿರುವುದು ವಿಶೇಷ. ಮೂಲ ಮಲಯಾಳಂನಲ್ಲಿ ತಯಾರಾದರೂ, ಇತರ ಮೂರು ಭಾಷೆಗಳಿಗೆ ಈ ಚಿತ್ರವನ್ನು ಡಬ್ ಮಾಡುವುದಾಗಿ ಚಿತ್ರತಂಡ ಹೇಳಿಕೊಂಡಿದೆ. ಹೀಗಾಗಿ ಇದೊಂದು ಪ್ಯಾನ್ ಇಂಡಿಯಾ ಸಿನಿಮಾ ಎಂದು ಘೋಷಣೆ ಆಗಿದೆ.

    ರಾಜ್ ಬಿ ಶೆಟ್ಟಿ (Raj B Shetty) ನಾಯಕನಾಗಿ ನಟಿಸುತ್ತಿರುವ ಈ ಸಿನಿಮಾಗೆ ‘ರುಧಿರಂ’ (Rudhiram) ಎಂದು ಹೆಸರಿಡಲಾಗಿದೆ. ಈ ಸಿನಿಮಾದ ಮೂಲಕ ರಾಜ್ ಬಿ ಶೆಟ್ಟಿ ಅವರು ಮಲಯಾಳಂ ಸಿನಿಮಾ ರಂಗ ಪ್ರವೇಶ ಮಾಡಿದ್ದಾರೆ. ಈ ಸಿನಿಮಾದ ಪೋಸ್ಟರ್ ಇದೀಗ ರಿಲೀಸ್ ಆಗಿದೆ. ಚಿತ್ರವನ್ನು  ಜಿಶೋ ಲೋನ್ ಆಂಟನಿ (Jisho Lone Antony) ನಿರ್ದೇಶನ ಮಾಡುತ್ತಿದ್ದು, ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ಅಪರ್ಣ ಬಾಲಮುರಳಿ (Aparna Bala Murali) ನಾಯಕಿಯಾಗಿ ನಟಿಸುತ್ತಿದ್ದಾರೆ. ಇದನ್ನೂ ಓದಿ:ಹನ್ಸಿಕಾ ಮೋಟ್ವಾನಿಗೆ ರೊಮ್ಯಾಂಟಿಕ್‌ ಆಗಿ ಪ್ರಪೋಸ್‌ ಮಾಡಿದ ಭಾವಿ ಪತಿ

    ನಾಲ್ಕು ಭಾಷೆಗಳಲ್ಲಿ ಈ ಸಿನಿಮಾ ಮೂಡಿ ಬರಲಿದ್ದು, ಪ್ಯಾನ್ ಇಂಡಿಯಾ ಸಿನಿಮಾವಾಗಿ ರೆಡಿ ಮಾಡುತ್ತಿದ್ದಾರಂತೆ ನಿರ್ಮಾಪಕರು. ಕನ್ನಡ, ತಮಿಳು, ತೆಲುಗು ಹಾಗೂ ಮಲಯಾಳಂನಲ್ಲಿ ಈ ಸಿನಿಮಾ ರೆಡಿ ಆಗುತ್ತಿದ್ದು, ಹಿಂದಿಯಲ್ಲಿ ಮಾಡುವ ಕುರಿತು ಇನ್ನೂ ತೀರ್ಮಾನ ತಗೆದುಕೊಂಡಿಲ್ಲ. ಸದ್ಯಕ್ಕೆ ಚಿತ್ರತಂಡ ಇಷ್ಟು ಮಾಹಿತಿಯನ್ನು ನೀಡಿದ್ದು, ಉಳಿದಂತೆ ಮುಂದಿನ ದಿನಗಳಲ್ಲಿ ಹೆಚ್ಚಿನ ಮಾಹಿತಿ ಸಿಗಬಹುದು.

    Live Tv
    [brid partner=56869869 player=32851 video=960834 autoplay=true]