Tag: Rudresh gowda

  • ಬೇಲೂರು ಶಾಸಕ ರುದ್ರೇಶ್‍ಗೌಡ ಇನ್ನಿಲ್ಲ

    ಬೇಲೂರು ಶಾಸಕ ರುದ್ರೇಶ್‍ಗೌಡ ಇನ್ನಿಲ್ಲ

    ಹಾಸನ: ಬೇಲೂರು ತಾಲೂಕಿನ ಕಾಂಗ್ರೆಸ್ ಶಾಸಕ ವೈಎನ್ ರುದ್ರೇಶ್ ಗೌಡ ವಿಕ್ರಂ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

    ವೈಎನ್ ರುದ್ರೇಶ್ ಗೌಡ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿ ಉಸಿರಾಟದ ತೊಂದರೆ, ಬಹುಅಂಗಾಂಗ ವೈಫಲ್ಯದ ಹಿನ್ನೆಲೆಯಲ್ಲಿ ಅವರ ಆರೋಗ್ಯ ಕ್ಷೀಣವಾಗಿದ್ದು, ಬೆಂಗಳೂರಿನ ವಿಕ್ರಂ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಅವರು ಐಸಿಯುನಲ್ಲಿ ಕೊನೆಯುಸಿರೆಳೆದಿದ್ದಾರೆ.

    ಶಾಸಕರ ನಿಧನದಿಂದ ಸ್ವಕ್ಷೇತ್ರ ಬೇಲೂರಿನಲ್ಲಿ ಮೌನ ಮಡುಗಟ್ಟಿದ್ದು, ಅಂತಿಮ ದರ್ಶನಕ್ಕಾಗಿ ಬೇಲೂರಿನ ಕಾಲೇಜು ಮೈದಾನದಲ್ಲಿ ಪೊಲೀಸರಿಂದ ಬ್ಯಾರಿಕೇಡ್ ಅಳವಡಿಕೆ ಮಾಡಲಾಗಿದೆ. ಸಂಜೆ ವೇಳೆಗೆ ಮೃತದೇಹ ಹಾಸನಕ್ಕೆ ಬರುವ ನಿರೀಕ್ಷೆ ಇದೆ. ಈಗಾಗಲೇ ಶಾಸಕರ ಕುಟುಂಬ ಸದಸ್ಯರು ಬೆಂಗಳೂರಿಗೆ ದೌಡಾಯಿಸಿದ್ದಾರೆ.

    ಅನಾರೋಗ್ಯದ ಕಾರಣ ರುದ್ರೇಶ್‍ಗೌಡ ಶುಕ್ರವಾರದಂದು ರಾಜ್ಯಸಭೆ ಚುನಾವಣೆಯಲ್ಲಿ ಮತದಾನ ಮಾಡಲು ಆಗಿರಲಿಲ್ಲ. ಹೀಗಾಗಿ ಶುಕ್ರವಾರವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದರು.

    ರಾಜ್ಯಸಭೆ ಚುನಾವಣೆಗೆ ಬೆಂಗಳೂರಿಗೆ ಬಂದಿದ್ದ ರುದ್ರೇಶ್ ಗೌಡರಿಗೆ ಹೃದಯಾಘಾತವಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

  • ಬೇಲೂರು ಶಾಸಕ ರುದ್ರೇಶ್‍ಗೌಡ ಆರೋಗ್ಯ ಸ್ಥಿತಿ ಗಂಭೀರ – ವಿಕ್ರಂ ಆಸ್ಪತ್ರೆಯ ವೆಂಟಿಲೇಟರ್ ನಲ್ಲಿ ಚಿಕಿತ್ಸೆ

    ಬೇಲೂರು ಶಾಸಕ ರುದ್ರೇಶ್‍ಗೌಡ ಆರೋಗ್ಯ ಸ್ಥಿತಿ ಗಂಭೀರ – ವಿಕ್ರಂ ಆಸ್ಪತ್ರೆಯ ವೆಂಟಿಲೇಟರ್ ನಲ್ಲಿ ಚಿಕಿತ್ಸೆ

    ಹಾಸನ: ಬೇಲೂರು ತಾಲೂಕಿನ ಕಾಂಗ್ರೆಸ್ ಶಾಸಕ ವೈಎನ್ ರುದ್ರೇಶ್ ಗೌಡ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಉಸಿರಾಟದ ತೊಂದರೆ, ಬಹುಅಂಗಾಂಗ ವೈಫಲ್ಯದ ಹಿನ್ನೆಲೆಯಲ್ಲಿ ಅವರ ಆರೋಗ್ಯ ಕ್ಷೀಣವಾಗಿದ್ದು, ಬೆಂಗಳೂರಿನ ವಿಕ್ರಂ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಡಾ. ವಿಜಯ್ ಮತ್ತು ತಂಡದಿಂದ ಸದ್ಯ ಶಾಸಕರನ್ನು ವೆಂಟಿಲೇಟರ್‍ನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ. ಹೀಗಾಗಿ ಶಾಸಕರು ಸಾವು-ಬದುಕಿನ ಮಧ್ಯೆ ಹೋರಾಟ ಮಾಡುತ್ತಿದ್ದಾರೆ ಅಂತ ವಿಕ್ರಂ ಆಸ್ಪತ್ರೆಯ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭಿಸಿದೆ.

    ಅನಾರೋಗ್ಯದ ಕಾರಣ ರುದ್ರೇಶ್‍ಗೌಡ ಶುಕ್ರವಾರದಂದು ರಾಜ್ಯಸಭೆ ಚುನಾವಣೆಯಲ್ಲಿ ಮತದಾನ ಮಾಡಲು ಆಗಿರಲಿಲ್ಲ. ಹೀಗಾಗಿ ಶುಕ್ರವಾರವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದರು. ಈಗಾಗಲೇ ಶಾಸಕರ ಕುಟುಂಬ ಸದಸ್ಯರು ಬೆಂಗಳೂರಿಗೆ ದೌಡಾಯಿಸಿದ್ದಾರೆ.

    ರಾಜ್ಯಸಭೆ ಚುನಾವಣೆಗೆ ಬೆಂಗಳೂರಿಗೆ ಬಂದಿದ್ದ ರುದ್ರೇಶ್ ಗೌಡರಿಗೆ ಹೃದಯಾಘಾತವಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.