Tag: Rukmini Vasanth

  • ಮದರಾಸಿ ಟ್ರೈಲರ್‌ ರಿಲೀಸ್ – ಮಾಸ್ ಲುಕ್‌ನಲ್ಲಿ ಶಿವಕಾರ್ತಿಕೇಯನ್

    ಮದರಾಸಿ ಟ್ರೈಲರ್‌ ರಿಲೀಸ್ – ಮಾಸ್ ಲುಕ್‌ನಲ್ಲಿ ಶಿವಕಾರ್ತಿಕೇಯನ್

    ಮರನ್ ಸೂಪರ್ ಸಕ್ಸಸ್ ಬಳಿಕ ಶಿವಕಾರ್ತಿಕೇಯನ್ ನಟಿಸುತ್ತಿರುವ ಬಹು ನಿರೀಕ್ಷಿತ ಸಿನಿಮಾ ಮದರಾಸಿ (Madharaasi). ಎ.ಆರ್ ಮುರುಗದಾಸ್ (A R Murugadas) ನಿರ್ದೇಶನದ ಈ ಚಿತ್ರದ ಟ್ರೈಲರ್‌ ರಿಲೀಸ್ ಆಗಿದೆ.

    ಆಕ್ಷನ್ ಪ್ಯಾಕ್ಡ್ ಟ್ರೈಲರ್‌ನಲ್ಲಿ ಶಿವಕಾರ್ತಿಕೇಯನ್ (Sivakarthikeyan) ಮಾಸ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಟ್ರೈಲರ್‌ ಉದ್ದಕ್ಕೂ ಬಂದೂಕು ಮತ್ತು ಸ್ಫೋಟದ ಸದ್ದೇ ಜೋರಾಗಿದೆ. ಕನ್ನಡತಿ ರುಕ್ಮಿಣಿ ವಸಂತ್ (Rukmini Vasanth), ಶಿವಕಾರ್ತಿಕೇಯನ್‌ಗೆ ಜೋಡಿಯಾಗಿ ಸಾಥ್ ಕೊಟ್ಟಿದ್ದಾರೆ. ಇದನ್ನೂ ಓದಿ: ಶಿವಣ್ಣನ ಕಾಲಿಗೆ ಬಿದ್ದು ಕ್ಷಮೆ ಕೇಳಿದ ಮಡೆನೂರು ಮನು

    ಪ್ರೀತಿ ಜೊತೆ ದ್ವೇಷ, ಪ್ರತೀಕಾರದ ಅಂಶಗಳನ್ನು ಬ್ಲೆಂಡ್ ಮಾಡಿ ಟ್ರೈಲರ್‌ ಕಟ್ ಮಾಡಲಾಗಿದೆ. ಕನ್ನಡದಲ್ಲಿಯೂ ಟ್ರೈಲರ್‌ ಬಿಡುಗಡೆಯಾಗಿದೆ. ವಿದ್ಯುತ್ ಜಮ್ವಾಲ್, ಬಿಜು ಮೆನನ್, ಶಬೀರ್ ಕಲ್ಲರಕ್ಕಲ್, ವಿಕ್ರಾಂತ್ ತಾರಾಬಳಗದಲ್ಲಿದ್ದಾರೆ. ಅನಿರುದ್ಧ್ ರವಿಚಂದರ್ ಸಂಗೀತ ಚಿತ್ರಕ್ಕಿದೆ.

  • ಕೈಯ್ಯಾರೆ ಮಣ್ಣಿನ ಮಡಿಕೆ ಮಾಡಿದ ಕಾಂತಾರ ಕನಕವತಿ ರುಕ್ಮಿಣಿ ವಸಂತ್

    ಕೈಯ್ಯಾರೆ ಮಣ್ಣಿನ ಮಡಿಕೆ ಮಾಡಿದ ಕಾಂತಾರ ಕನಕವತಿ ರುಕ್ಮಿಣಿ ವಸಂತ್

    ದಿನದಿಂದ ದಿನಕ್ಕೆ ಸಪ್ತಸಾಗರದಾಚೆ ಎಲ್ಲೋ ಪುಟ್ಟಿಯ ಖ್ಯಾತಿ ಹೆಚ್ಚುತ್ತಿದೆ. ರುಕ್ಮಿಣಿ ವಸಂತ್ (Rukmini Vasanth) ಮುಟ್ಟಿದ್ದೆಲ್ಲಾ ಚಿನ್ನವಾಗುತ್ತಿದೆ. ಬಹುಭಾಷೆಯ ಚಿತ್ರರಂಗದಲ್ಲಿ ಬ್ಯುಸಿಯಾಗಿರುವ ರುಕ್ಮಿಣಿ ವಸಂತ್ ಇದೀಗ ಜೇಡಿ ಮಣ್ಣಿನಿಂದ ಮಡಿಕೆ ಮಾಡಿದ್ದಾರೆ.

    ಮಣ್ಣು ಹಿಡಿದು ತಾವೇ ಕೈಯ್ಯಾರೆ ಮಡಿಕೆ ಅಚ್ಚಿನಲ್ಲಿ ಮಣ್ಣು ಹಾಕಿ ಅದಕ್ಕೊಂದು ಹಾರ್ಟ್‌ಶೇಪ್ ಕೊಟ್ಟಿದ್ದಾರೆ. ಸುಂದರವಾದ ಬೌಲ್ ಸಿದ್ಧಪಡಿಸಿದ್ದಾರೆ. ಸತತ ಪ್ರಯತ್ನದ ಬಳಿಕ ಮಡಿಕೆ ತಯಾರಾದಂತಿದೆ. ಹೀಗಾಗಿ ಆ ವೀಡಿಯೋವನ್ನ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿರುವ ರುಕ್ಮಿಣಿ ವಸಂತ್ ಅದಕ್ಕೊಂದು ಅರ್ಥಪೂರ್ಣ ಕ್ಯಾಪ್ಷನ್ ಕೊಟ್ಟಿದ್ದಾರೆ. `ನಿಧಾನವಾಗಿ ಸಿಗುವ ಹರ್ಷ ಹೀಗೆ ಸುಂದರವಾಗಿ ಇರುತ್ತದೆ ಅಲ್ಲವೇ’ ಎಂದಿದ್ದಾರೆ.

    ವಿಶೇಷ ಮಣ್ಣಿನಿಂದ ರುಕ್ಮಿಣಿ ತಾವೇ ಕೈಯಾರೆ ಮಾಡಿಕೊಂಡಿರುವ ಮಡಿಕೆಯು ಬಳಸಲು ಯೋಗ್ಯವೋ ಇಲ್ಲವೋ, ಆದರೆ ನೋಡಲು ಅದ್ಭುತವಾಗಿದೆ. ಮಣ್ಣು ತಂದು ತಾವೇ ಕುಳಿತು ಸಿದ್ಧಮಾಡಿ ಅದನ್ನ ಬಾಕ್ಸ್ನಲ್ಲಿ ಪ್ಯಾಕ್ ಮಾಡುವವರೆಗೂ ಸಂಪೂರ್ಣ ವೀಡಿಯೋವನ್ನ ರುಕ್ಮಿಣಿ ಶೇರ್ ಮಾಡಿದ್ದಾರೆ. ಇದೀಗ ಸ್ಟಾರ್ ನಟರ ಚಿತ್ರಗಳ ನಾಯಕಿಯಾಗಿರುವ ರುಕ್ಮಿಣಿ ಕಾಂತಾರ 1 ಚಿತ್ರದಲ್ಲಿ ನಟಿಸಿದ್ದಾರೆ. ಜೊತೆಗೆ ಟಾಕ್ಸಿಕ್ ಚಿತ್ರದಲ್ಲೂ ನಟಿಸಿರುವ ವದಂತಿ ಇದೆ. ಒಟ್ಟಿನಲ್ಲಿ ಅರ್ಥಪೂರ್ಣ ಸಂದೇಶದ ಜೊತೆ ಸರಳ ವೀಡಿಯೋಗಳ ಮೂಲಕವೇ ರುಕ್ಮಿಣಿ ವಸಂತ್ ಜನಮೆಚ್ಚುಗೆ ಪಡೆದ ನಟಿ.

  • ಟಾಕ್ಸಿಕ್‌ನಲ್ಲೂ ಇದ್ದಾರಾ ರುಕ್ಮಿಣಿ..?

    ಟಾಕ್ಸಿಕ್‌ನಲ್ಲೂ ಇದ್ದಾರಾ ರುಕ್ಮಿಣಿ..?

    ನ್ನಡದ ನಟಿ ರುಕ್ಮಿಣಿ ವಸಂತ್ (Rukmini Vasanth) ಕೆರಿಯರ್ ಗ್ರಾಫ್ ಏರುತ್ತಿದೆ. ಕಾಂತಾರ 1 ರಲ್ಲಿ ರುಕ್ಮಿಣಿ ನಟಿಸಿರುವ ಕುರಿತು ಈಗಾಗ್ಲೇ ಚಿತ್ರತಂಡ ಘೋಷಿಸಿದೆ. `ಸಪ್ತಸಾಗರದಾಚೆ ಎಲ್ಲೋ’ ಚಿತ್ರದ ಬಳಿಕ ರುಕ್ಮಿಣಿ ವಸಂತ್ ಬಹುಬೇಡಿಕೆಯ ಸ್ಯಾಂಡಲ್‌ವುಡ್ ನಟಿಯಾಗಿ ಗುರುತಿಸಿಕೊಂಡವರು. ತಮಿಳು, ತೆಲುಗು ಉದ್ಯಮದಲ್ಲೂ ಅವಕಾಶ ಪಡೆದುಕೊಂಡವರು. ಪ್ರಶಾಂತ್ ನೀಲ್ ಹಾಗೂ ಜೂ.ಎನ್‌ಟಿಆರ್ ಚಿತ್ರಕ್ಕೂ ಇವರೇ ನಾಯಕಿ ಎನ್ನಲಾಗುತ್ತಿದೆ. ಇದಿ ಇದೀಗ ಈ ನಟಿಯ ಕುರಿತಾಗಿ ಹೊಸ ಸುದ್ದಿಯೊಂದು ವೈರಲ್ ಆಗುತ್ತಿದೆ. ಅದುವೇ ಟಾಕ್ಸಿಕ್ ಚಿತ್ರದಲ್ಲೂ ರುಕ್ಮಿಣಿ ವಸಂತ್ ನಟಿಸಿದ್ದಾರೆ ಅನ್ನೋದೇ ಆ ವೈರಲ್ ಸುದ್ದಿ.

    ಯಶ್ (Yash) ನಿರ್ಮಿಸಿ ನಟಿಸುತ್ತಿರುವ ಟಾಕ್ಸಿಕ್ (Toxic) ಚಿತ್ರದ ಶೂಟಿಂಗ್ ಬೆಂಗಳೂರು, ಮುಂಬೈನಲ್ಲಿ ಜೋರಾಗಿ ನಡೆಯುತ್ತಿದೆ. ಈ ಚಿತ್ರದಲ್ಲಿ ಹಲವು ಹೆಸರಾಂತ ನಟಿಯರಿರೋದು ಕನ್ಫರ್ಮ್ ಆಗಿದೆ. ನಯನ್‌ತಾರಾ, ಕಿಯಾರಾ ಅಡ್ವಾನಿ, ತಾರಾ ಸುತಾರಿಯಾ, ಹ್ಯುಮಾ ಖುಮೇಶಿ ನಟಿಸುತ್ತಿರುವ ಸುದ್ದಿ ರಿವೀಲ್ ಆಗಿತ್ತು. ಇದೇ ಚಿತ್ರದಲ್ಲಿ ರುಕ್ಮಿಣಿ ವಸಂತ್ ಕೂಡ ನಟಿಸಿದ್ದು, ಈಗಾಗ್ಲೇ ಕೆಲ ದಿನಗಳ ಕಾಲ ತಮ್ಮ ಶೆಡ್ಯೂಲ್‌ನ್ನೂ ಮುಗಿಸಿದ್ದಾರೆ ಎನ್ನಲಾಗುತ್ತಿದೆ. ಅಲ್ಲಿಗೆ ಟಾಕ್ಸಿಕ್‌ನಲ್ಲಿ ಕನ್ನಡದ ನಟಿಗೆ ಅವಕಾಶವೇ ಇಲ್ವಾ ಅನ್ನೋ ಕೊರತೆಯನ್ನ ರುಕ್ಮಿಣಿ ವಸಂತ್ ತುಂಬಿರುವ ಸಾಧ್ಯತೆ ಇದೆ. ಇದನ್ನೂ ಓದಿ: ದರ್ಶನ್‌ ನೋಡಲು ಜೈಲಿಗೆ ಆಗಮಿಸಿದ ಪತ್ನಿ ವಿಜಯಲಕ್ಷ್ಮಿ

    `ಟಾಕ್ಸಿಕ್’ ಚಿತ್ರ ಪ್ಯಾನ್‌ವರ್ಲ್ಡ್‌ನ ತೆರೆ ಕಾಣಲು ಸಿದ್ಧವಿದೆ. 2026 ಮಾರ್ಚ್ 19ಕ್ಕೆ ರಿಲೀಸ್ ದಿನಾಂಕ ಘೋಷಣೆಯಾಗಿದೆ. ಚಿತ್ರೀಕರಣ ಇನ್ನೂ ಮುಗಿದಿಲ್ಲ. ಇದೀಗ ರುಕ್ಮಿಣಿ ವಸಂತ್ ಇದೇ ಚಿತ್ರದಲ್ಲಿ ನಟಿಸಿರುವ ಸುದ್ದಿ ತೂರಿಬಂದಿದೆ. ಇದುವರೆಗೂ ಚಿತ್ರದ ತಾರಾಗಣದ ಕುರಿತಾಗಿ ಚಿತ್ರತಂಡ ಆಫಿಷಿಯಲ್ ಕನ್ಫರ್ಮೇಷನ್ ಯಾವುದನ್ನೂ ಅಧಿಕೃತ ನೀಡಿಲ್ಲ. ಇದೀಗ ರುಕ್ಮಿಣಿ ವಸಂತ್ ನಟಿಸಿರುವ ಸುದ್ದಿ ವದಂತಿಯಾಗಿದ್ದು ಮುಂದಿನ ದಿನಗಳಲ್ಲಿ ಚಿತ್ರತಂಡವೇ ಕನ್ಫರ್ಮ್ ಮಾಡಬೇಕಿದೆ.

  • ಕಾಂತಾರ ಚಾಪ್ಟರ್ 1| ಕನಕವತಿಯ ಮೊದಲ ನೋಟ ವರಮಹಾಲಕ್ಷ್ಮಿಯಂದು ಅನಾವರಣ

    ಕಾಂತಾರ ಚಾಪ್ಟರ್ 1| ಕನಕವತಿಯ ಮೊದಲ ನೋಟ ವರಮಹಾಲಕ್ಷ್ಮಿಯಂದು ಅನಾವರಣ

    ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ, ರಿಷಬ್ ಶೆಟ್ಟಿ (Rishab Shetty) ನಿರ್ದೇಶಿಸಿರುವ ಬಹುನಿರೀಕ್ಷಿತ ಕಾಂತಾರ ಚಾಪ್ಟರ್ 1 (Kantara: Chapter 1) ಚಿತ್ರದಲ್ಲಿ ನಟಿ ರುಕ್ಮಿಣಿ ವಸಂತ್ (Rukmini Vasanth) ಕನಕವತಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ವರಮಹಾಲಕ್ಷ್ಮಿ (Varamahalakshmi) ಹಬ್ಬದ ಈ ಶುಭದಿನದಂದು, ಚಿತ್ರತಂಡವು ಅವರ ಮೊದಲ ನೋಟವನ್ನು ಅನಾವರಣಗೊಳಿಸಿದೆ.

    ನಾಯಕ ನಟ ರಿಷಬ್ ಶೆಟ್ಟಿ ಅವರ ಹುಟ್ಟುಹಬ್ಬದಂದು ಬಿಡುಗಡೆಯಾಗಿದ್ದ ಅವರ ಫಸ್ಟ್‌ಲುಕ್ ಮತ್ತು ನಂತರ ಬಂದ ಶೂಟಿಂಗ್ ಮುಕ್ತಾಯದ ವೀಡಿಯೋಗಳು ಈಗಾಗಲೇ ಭಾರೀ ಕುತೂಹಲ ಮೂಡಿಸಿವೆ. ಇದೀಗ ‘ಕನಕವತಿ’ಯ ಪಾತ್ರದ ಪರಿಚಯ, ಚಿತ್ರದ ಕುರಿತಾದ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ.


    ಚಿತ್ರದಲ್ಲಿನ ಅದ್ಭುತ ದೃಶ್ಯ ವೈಭವಕ್ಕೆ ಅರವಿಂದ್ ಎಸ್. ಕಶ್ಯಪ್ ಅವರ ಛಾಯಾಗ್ರಹಣ ಮತ್ತು ಬಿ. ಅಜನೀಶ್ ಲೋಕನಾಥ್ ಅವರ ಸಂಗೀತ ಜೀವ ತುಂಬಲಿದೆ. ವಿಜಯ್ ಕಿರಗಂದೂರು ಅವರ ಹೊಂಬಾಳೆ ಫಿಲ್ಮ್ಸ್, ಸದಾ ಭಾರತೀಯ ಸಂಸ್ಕೃತಿಯನ್ನು ಎತ್ತಿ ಹಿಡಿಯುವ ಮತ್ತು ಭಾವನಾತ್ಮಕ ಕಥೆಗಳನ್ನು ಹೇಳುವ ತನ್ನ ಬದ್ಧತೆಯನ್ನು ಈ ಚಿತ್ರದ ಮೂಲಕ ಮತ್ತೊಮ್ಮೆ ಪ್ರದರ್ಶಿಸಿದೆ.

    ವರಮಹಾಲಕ್ಷ್ಮಿ ದೇವಿಯ ಆಶೀರ್ವಾದದೊಂದಿಗೆ, ಹೊಂಬಾಳೆ ಫಿಲ್ಮ್ಸ್ ಕನಕವತಿಯ ಈ ಮೊದಲ ನೋಟವನ್ನು ಹೆಮ್ಮೆಯಿಂದ ಪ್ರಸ್ತುತಪಡಿಸಿದೆ.  ‘ಕಾಂತಾರ ಚಾಪ್ಟರ್ 1’ ಚಿತ್ರವು ಅಕ್ಟೋಬರ್ 2, 2025 ರಂದು ಕನ್ನಡ ಸೇರಿದಂತೆ ತೆಲುಗು, ಹಿಂದಿ, ತಮಿಳು, ಮಲಯಾಳಂ, ಬಂಗಾಳಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ವಿಶ್ವಾದ್ಯಂತ ಬಿಡುಗಡೆಯಾಗಲಿದೆ.

  • ಬಿಗ್ ಆಫರ್ ಗಿಟ್ಟಿಸಿಕೊಂಡ ಕನ್ನಡತಿ- ಪ್ರಭಾಸ್‌ಗೆ ರುಕ್ಮಿಣಿ ವಸಂತ್ ನಾಯಕಿ?

    ಬಿಗ್ ಆಫರ್ ಗಿಟ್ಟಿಸಿಕೊಂಡ ಕನ್ನಡತಿ- ಪ್ರಭಾಸ್‌ಗೆ ರುಕ್ಮಿಣಿ ವಸಂತ್ ನಾಯಕಿ?

    ನ್ನಡದ ನಟಿ ರುಕ್ಮಿಣಿ ವಸಂತ್ (Rukmini Vasanth) ಅವರಿಗೆ ಸೌತ್‌ನಲ್ಲಿ ಬೇಡಿಕೆ ಹೆಚ್ಚಾಗಿದೆ. ಪ್ರಭಾಸ್ (Prabhas) ನಟನೆಯ ‘ಸ್ಪಿರಿಟ್’ ಚಿತ್ರಕ್ಕೆ (Spirit) ರುಕ್ಮಿಣಿ ವಸಂತ್ ನಾಯಕಿಯಾಗಿ ಆಯ್ಕೆಯಾಗಿದ್ದಾರೆ ಎನ್ನಲಾದ ಸುದ್ದಿಯೊಂದು ಹರಿದಾಡುತ್ತಿದೆ. ಇದನ್ನೂ ಓದಿ:ಎಲ್ಲಾ ಸಂದರ್ಭಕ್ಕೂ ನಗುವೇ ಒಳ್ಳೆಯ ಉತ್ತರ – ದರ್ಶನ್ ಭೇಟಿ ಬಳಿಕ ಪವಿತ್ರಾ ಪೋಸ್ಟ್!

    ‘ಭೈರತಿ ರಣಗಲ್, ಭಘೀರ’ ಸಿನಿಮಾದ ಬಳಿಕ ರುಕ್ಮಿಣಿ ವಸಂತ್‌ಗೆ (Rukmini Vasanth) ತೆಲುಗು, ತಮಿಳಿನಿಂದ ಭರ್ಜರಿ ಆಫರ್ಸ್‌ ಅರಸಿ ಬರುತ್ತಿವೆ. ಪ್ರಭಾಸ್ ಜೊತೆ ನಟಿಸುವ ಆಫರ್ ರುಕ್ಮಿಣಿಗೆ ಸಿಕ್ಕಿದೆಯಂತೆ. ಮೊದಲಿಗೆ ‘ಸ್ಪಿರಿಟ್’ ಸಿನಿಮಾಗೆ ದೀಪಿಕಾ ಪಡುಕೋಣೆ ಆಯ್ಕೆ ಆಗಿದ್ದರು. ಆದರೆ ಅವರು ಹೆಚ್ಚಿನ ಸಂಭಾವನೆ ಕೇಳಿದ್ದಕ್ಕೆ ರುಕ್ಮಿಣಿ ಅವರನ್ನು ನಟಿಸಲು ಕೇಳಲಾಗಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಒಟ್ನಲ್ಲಿ ಕನ್ನಡದ ನಟಿಯನ್ನ ಪ್ರಭಾಸ್ ಜೊತೆಗೆ ನೋಡಲು ಫ್ಯಾನ್ಸ್ ಕಾಯ್ತಿದ್ದಾರೆ. ಇದನ್ನೂ ಓದಿ:ನಮ್ಮ ಜಗಳ ನಮ್ಮಲ್ಲೇ ಇರಬೇಕಿತ್ತು, ನಾನು ಸತ್ತರೂ ಯಾರೂ ಕಾರಣರಲ್ಲ: ಸಹ ಕಲಾವಿದೆ

    ವಿಜಯ್ ಸೇತುಪತಿ, ರುಕ್ಮಿಣಿ ನಟನೆಯ ‘ಏಸ್’ ಚಿತ್ರ ಇಂದು ರಿಲೀಸ್ ಆಗಿದೆ. ಅಮರನ್ ನಟ ಶಿವಕಾರ್ತಿಕೇಯನ್ ಜೊತೆಗಿನ ‘ಮದರಾಸಿ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ರಾಮ್ ಚರಣ್ ಜೊತೆಗೆ ನಟಿಸಲು ಕೂಡ ನಟಿಯ ಜೊತೆ ಮಾತುಕತೆ ಆಗಿದೆ ಎನ್ನಲಾಗಿದೆ.

    ಕರ್ನಾಟಕದಿಂದ ರಶ್ಮಿಕಾ ಮಂದಣ್ಣ (Rashmika Mandanna), ಶ್ರೀಲೀಲಾ ಅವರಂತೆಯೇ ರುಕ್ಮಿಣಿ ವಸಂತ್ ಕೂಡ ಸಕ್ಸಸ್‌ಗಾಗಿ ಸಿನಿಮಾ ಆಯ್ಕೆಯಲ್ಲಿ ಚ್ಯುಸಿಯಾಗಿದ್ದಾರೆ. ಹೀಗೆ ಸೌತ್‌ನಿಂದ ಸಾಕಷ್ಟು ಸಿನಿಮಾ ಅವಕಾಶಗಳು ನಟಿಯನ್ನು ಅರಸಿ ಬರುತ್ತಿವೆ.

  • ಶಿವಕಾರ್ತಿಕೇಯನ್ ಜೊತೆ ಅದೃಷ್ಟ ಪರೀಕ್ಷೆಗಿಳಿದ ಕನ್ನಡತಿ ರುಕ್ಮಿಣಿ ವಸಂತ್‌

    ಶಿವಕಾರ್ತಿಕೇಯನ್ ಜೊತೆ ಅದೃಷ್ಟ ಪರೀಕ್ಷೆಗಿಳಿದ ಕನ್ನಡತಿ ರುಕ್ಮಿಣಿ ವಸಂತ್‌

    ‘ಅಮರನ್’ (Amaran) ಸಿನಿಮಾ ಬಳಿಕ ಶಿವಕಾರ್ತಿಕೇಯನ್ ಕೈಗೆತ್ತಿಕೊಂಡಿರುವ ಬಹುನಿರೀಕ್ಷಿತ ಪ್ರಾಜೆಕ್ಟ್ ಮದರಾಸಿ. ಆ್ಯಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಗ್ಲಿಂಪ್ಸ್‌ ಭಾರೀ ಸದ್ದು ಮಾಡುತ್ತಿದೆ. ಈ ಚಿತ್ರಕ್ಕೆ ಎ.ಆರ್. ಮುರುಗದಾಸ್ ಆ್ಯಕ್ಷನ್ ಕಟ್‌ ಹೇಳಿದ್ದು, ‘ಸಪ್ತ ಸಾಗರದಾಚೆ ಎಲ್ಲೋ’ ನಾಯಕಿ ರುಕ್ಮಿಣಿ ವಸಂತ್ ಅವರು (Rukmini Vasanth) ಶಿವಕಾರ್ತಿಕೇಯನ್‌ಗೆ ಜೋಡಿಯಾಗಿ ಸಾಥ್‌ ಕೊಟ್ಟಿದ್ದಾರೆ. ಸದ್ಯ ಚಿತ್ರದ ಶೂಟಿಂಗ್‌ ಭರದಿಂದ ಸಾಗುತ್ತಿದ್ದು, ಇದೀಗ ಚಿತ್ರತಂಡ ‘ಮದರಾಸಿ’ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಮಾಡಿದೆ. ಇದನ್ನೂ ಓದಿ:1.3 ಕೋಟಿ ಮೌಲ್ಯದ ಲಕ್ಷುರಿ ಕಾರು ಖರೀದಿಸಿದ ರಿಷಬ್ ಶೆಟ್ಟಿ

    ಈ ವರ್ಷ ಸೆಪ್ಟೆಂಬರ್ 5ರಂದು ‘ಮದರಾಸಿ’ ಸಿನಿಮಾ ರಿಲೀಸ್‌ ಆಗಲಿದೆ. ಸ್ಪೆಷಲ್ ಪೋಸ್ಟರ್‌ ಮೂಲಕ‌ ಚಿತ್ರತಂಡ ಬಿಡುಗಡೆ ದಿನಾಂಕ ರಿವೀಲ್‌ ಮಾಡಿದೆ. ಪೋಸ್ಟರ್‌ನಲ್ಲಿ ಶಿವಕಾರ್ತಿಕೇಯನ್‌ ಸಖತ್‌ ರಗಡ್‌ ಆಗಿ ಕಾಣಿಸಿಕೊಂಡಿದ್ದಾರೆ. ವಿದ್ಯುತ್ ಜಮ್ವಾಲ್ ಖಳನಾಯಕನಾಗಿ ಅಬ್ಬರಿಸಿದ್ದಾರೆ. ಇದನ್ನೂ ಓದಿ:ಅದ್ಧೂರಿಯಾಗಿ ಎಂಗೇಜ್‌ಮೆಂಟ್‌ ಮಾಡಿಕೊಂಡ ನಟಿ ವೈಷ್ಣವಿ ಗೌಡ

    ಬಿಜು ಮೆನನ್, ಶಬೀರ್ ಮತ್ತು ವಿಕ್ರಾಂತ್ ಹಲವರು ತಾರಾಬಳಗದಲ್ಲಿದ್ದಾರೆ. ಶ್ರೀಕರ್ ಪ್ರಸಾದ್ ಸಂಕಲನ, ಅರುಣ್ ವೆಂಜರಮೂಡು ಕಲಾ ನಿರ್ದೇಶನ, ಕೆವಿನ್ ಮಾಸ್ಟರ್ ಮತ್ತು ದಿಲೀಪ್ ಮಾಸ್ಟರ್ ಆಕ್ಷನ್ ಚಿತ್ರಕ್ಕಿದೆ. ಎನ್. ಶ್ರೀಲಕ್ಷ್ಮಿ ಪ್ರಸಾದ್ ಶ್ರೀ ಲಕ್ಷ್ಮಿ ಮೂವೀಸ್ ಬ್ಯಾನರ್ ಅಡಿಯಲ್ಲಿ ಚಿತ್ರ ನಿರ್ಮಾಣ ಮಾಡುತ್ತಿದ್ದು, ಪ್ಯಾನ್‌ ಇಂಡಿಯಾ ಲೆವೆಲ್‌ನಲ್ಲಿ ‘ಮದರಾಸಿ’ ಸಿನಿಮಾ ಮೂಡಿ ಬರುತ್ತಿದೆ.

  • ದಕ್ಷಿಣದತ್ತ ‘ಸಪ್ತಸಾಗರದ’ ಚೆಲುವೆ- ಬ್ಯಾಕ್‌ ಟು ಬ್ಯಾಕ್‌ ಚಿತ್ರಗಳಲ್ಲಿ ರುಕ್ಮಿಣಿ ಬ್ಯುಸಿ

    ದಕ್ಷಿಣದತ್ತ ‘ಸಪ್ತಸಾಗರದ’ ಚೆಲುವೆ- ಬ್ಯಾಕ್‌ ಟು ಬ್ಯಾಕ್‌ ಚಿತ್ರಗಳಲ್ಲಿ ರುಕ್ಮಿಣಿ ಬ್ಯುಸಿ

    ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರದ ಪುಟ್ಟಿ ಎಂದೇ ಫೇಮಸ್ ಆಗಿರುವ ರುಕ್ಮಿಣಿ ವಸಂತ್ (Rukmini Vasanth) ಅವರು ತೆಲುಗು, ತಮಿಳಿನಲ್ಲಿ ಬ್ಯುಸಿಯಾಗಿದ್ದಾರೆ. ಸ್ಟಾರ್ ನಟರ ಸಿನಿಮಾಗಳಲ್ಲಿ ನಟಿಸಲು ಅವರಿಗೆ ಅವಕಾಶಗಳು ಅರಸಿ ಬರುತ್ತಿವೆ. ಇದನ್ನೂ ಓದಿ:‘ಕಿಸ್ಸಿಕ್‌’ ಬೆಡಗಿ ಶ್ರೀಲೀಲಾಗೆ ಖುಲಾಯಿಸಿದ ಅದೃಷ್ಟ- ನಟಿಗೆ ಬಿಗ್‌ ಆಫರ್

    ರಕ್ಷಿತ್ ಶೆಟ್ಟಿ ನಟನೆಯ ‘ಸಪ್ತ ಸಾಗರದಾಚೆ ಎಲ್ಲೋ’ ಸೈಡ್ ಎ ಹಾಗೂ ಸೈಡ್ ಬಿನಲ್ಲಿ ನಟಿಸಿದ್ಮೇಲೆ ರುಕ್ಮಿಣಿಗೆ ಅದೃಷ್ಟ ಖುಲಾಯಿಸಿದೆ. ತೆಲುಗು, ತಮಿಳಿನ ಸಿನಿಮಾದಲ್ಲಿ ನಟಿಸಲು ಬಂಪರ್ ಆಫರ್ ಸಿಕ್ಕಿದೆ. ಅವರು ಕೂಡ ಸಖತ್ ಚೂಸಿಯಾಗಿ ಸಿನಿಮಾಗಳನ್ನು ಆಯ್ಕೆ ಮಾಡಿಕೊಳ್ತಿದ್ದಾರೆ.

    ಶಿವಕಾರ್ತಿಕೇಯನ್ ನಟನೆಯ 23ನೇ ಚಿತ್ರ ‘ಮದರಾಸಿ’ ಚಿತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರವನ್ನು ನಿರ್ದೇಶಕ ಎ.ಆರ್ ಮುರುಗದಾಸ್ ನಿರ್ದೇಶನ ಮಾಡಿದ್ದಾರೆ. ಸದ್ಯದಲ್ಲೇ ಈ ಸಿನಿಮಾದ ರಿಲೀಸ್ ಬಗ್ಗೆ ಮಾಹಿತಿ ಸಿಗಲಿದೆ.

    ಮಾಸ್ ಮಹಾರಾಜ ರವಿತೇಜ ಜೊತೆ ನಟಿಸುವ ಅವಕಾಶ ಸಿಕ್ಕಿದೆ. ಇದರೊಂದಿಗೆ ಜ್ಯೂ.ಎನ್‌ಟಿಆರ್ ಮತ್ತು ಪ್ರಶಾಂತ್ ನೀಲ್ ನಿರ್ದೇಶನದ ಹೊಸ ಚಿತ್ರದಲ್ಲಿ ರುಕ್ಮಿಣಿ ನಾಯಕಿ ಎನ್ನಲಾದ ಸುದ್ದಿಯೊಂದು ಹರಿದಾಡುತ್ತಿದೆ. ಈ ವಿಚಾರ ನಿಜನಾ? ಎಂಬುದು ಚಿತ್ರತಂಡದ ಕಡೆಯಿಂದ ಅಧಿಕೃತ ಮಾಹಿತಿ ಹೊರಬೀಳಬೇಕಿದೆ. ಇನ್ನೂ ತಮಿಳು ನಟ ವಿಜಯ್ ಸೇತುಪತಿ ನಟನೆಯ ಹೊಸ ಸಿನಿಮಾದಲ್ಲಿ ಅವರು ನಟಿಸಿದ್ದಾರೆ. ಈ ವರ್ಷ ಅಕ್ಟೋಬರ್‌ನಲ್ಲಿ ಚಿತ್ರ ರಿಲೀಸ್ ಆಗಲಿದೆ.

    ಅಂದಹಾಗೆ, ಸೌತ್‌ನಲ್ಲಿ ಕನ್ನಡದ ನಟಿಮಣಿಯರ ದರ್ಬಾರ್ ಜೋರಾಗಿದೆ. ಅನುಷ್ಕಾ ಶೆಟ್ಟಿ, ರಶ್ಮಿಕಾ ಮಂದಣ್ಣ, ಶ್ರೀಲೀಲಾ ಬಳಿಕ ರುಕ್ಮಿಣಿ ವಸಂತ್ ಕೂಡ ಭಾರೀ ಸದ್ದು ಮಾಡುತ್ತಿದ್ದಾರೆ. ಅವರ ಹಾದಿಯನ್ನೇ ರುಕ್ಮಿಣಿ ಅನುಸರಿಸುತ್ತಿದ್ದಾರೆ.

  • ವಿಜಯ್ ಸೇತುಪತಿಗೆ ರುಕ್ಮಿಣಿ ವಸಂತ್ ನಾಯಕಿ- ‘ACE’ ಚಿತ್ರದ ಗ್ಲಿಂಪ್ಸ್ ರಿಲೀಸ್

    ವಿಜಯ್ ಸೇತುಪತಿಗೆ ರುಕ್ಮಿಣಿ ವಸಂತ್ ನಾಯಕಿ- ‘ACE’ ಚಿತ್ರದ ಗ್ಲಿಂಪ್ಸ್ ರಿಲೀಸ್

    ಡ್ಡೆಹುಡುಗರ ಕ್ರಶ್ ರುಕ್ಮಿಣಿ ವಸಂತ್ (Rukmini Vasanth) ಅವರು ಕಾಲಿವುಡ್‌ನತ್ತ (Kollywood) ಮುಖ ಮಾಡಿದ್ದಾರೆ. ಕೆಲ ತಿಂಗಳುಗಳ ಹಿಂದೆಯೇ ವಿಜಯ್ ಸೇತುಪತಿಗೆ ರುಕ್ಮಿಣಿ ನಾಯಕಿಯಾಗಿರುವ ವಿಚಾರ ಅನೌನ್ಸ್ ಆಗಿದೆ. ಇದೀಗ ರುಕ್ಮಿಣಿ ಹುಟ್ಟುಹಬ್ಬದ ಹಿನ್ನೆಲೆ ಅವರ ಪಾತ್ರದ ಗ್ಲಿಂಪ್ಸ್ ಅನ್ನು ಚಿತ್ರತಂಡ ರಿವೀಲ್ ಮಾಡಿದೆ.

    ವಿಜಯ್ ಸೇತುಪತಿಗೆ (Vijay Sethupathi) ಜೋಡಿಯಾಗಿ ACE ಸಿನಿಮಾದಲ್ಲಿ ರುಕ್ಕು ಎಂಬ ಪಾತ್ರದಲ್ಲಿ ರುಕ್ಮಿಣಿ ನಟಿಸಿದ್ದಾರೆ. ಚಿತ್ರದ ಗ್ಲಿಂಪ್ಸ್ನಲ್ಲೂ ನಟಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ಇನ್ನೂ ಸದ್ಯ ಹುಟ್ಟುಹಬ್ಬಕ್ಕೆ ನಟಿಗೆ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಇದನ್ನೂ ಓದಿ:ಮದುವೆಯ ಬಳಿಕ ಕಾಕ್‌ಟೈಲ್ ಪಾರ್ಟಿಯಲ್ಲಿ ಮಿಂಚಿದ ನಾಗಚೈತನ್ಯ ಪತ್ನಿ

    ಇನ್ನೂ ಬೀರಬಲ್, ಸಪ್ತಸಾಗರದಾಚೆ ಎಲ್ಲೋ, ಬಾನದಾರಿಯಲಿ, ಬಘೀರ, ಭೈರತಿ ರಣಗಲ್ ಸಿನಿಮಾದಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ.

  • ಜ್ಯೂ.ಎನ್‌ಟಿಆರ್‌ಗೆ ರುಕ್ಮಿಣಿ ವಸಂತ್ ನಾಯಕಿ

    ಜ್ಯೂ.ಎನ್‌ಟಿಆರ್‌ಗೆ ರುಕ್ಮಿಣಿ ವಸಂತ್ ನಾಯಕಿ

    ನ್ನಡದ ನಟಿ ರುಕ್ಮಿಣಿ ವಸಂತ್‌ಗೆ (Rukmini Vasanth) ಸೌತ್‌ನಲ್ಲಿ ಬೇಡಿಕೆ ಹೆಚ್ಚಾಗಿದೆ. ಸದ್ಯ ಕನ್ನಡ ಸಿನಿಮಾಗಳ ಜೊತೆ ಕಾಲಿವುಡ್‌ನಲ್ಲಿ ಬ್ಯುಸಿಯಿರುವ ಬೆಡಗಿ ಈಗ ತೆಲುಗಿನಿಂದ ಬುಲಾವ್ ಬಂದಿದೆ. ಟಾಲಿವುಡ್‌ನ ಸ್ಟಾರ್ ನಟನಿಗೆ ರುಕ್ಮಿಣಿ ವಸಂತ್ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಇದನ್ನೂ ಓದಿ:ತಲೈವಾ ಆರೋಗ್ಯದಲ್ಲಿ ಏರುಪೇರು- ಹೆಲ್ತ್ ಅಪ್‌ಡೇಟ್ ತಿಳಿಸಿದ ಪತ್ನಿ ಲತಾ

    ಸದ್ಯ ಹರಿದಾಡುತ್ತಿರುವ ಸುದ್ದಿ ಏನಪ್ಪಾ ಅಂದರೆ, ಜ್ಯೂ.ಎನ್‌ಟಿಆರ್ (Jr.Ntr) ನಟಿಸುತ್ತಿರುವ ಹೊಸ ಸಿನಿಮಾಗೆ ರುಕ್ಮಿಣಿ ವಸಂತ್ ಹೀರೋಯಿನ್ ಆಗಿ ಆಯ್ಕೆಯಾಗಿದ್ದಾರೆ ಎನ್ನಲಾದ ಸುದ್ದಿ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ಚಿತ್ರವನ್ನು ಡೈರೆಕ್ಟರ್ ಪ್ರಶಾಂತ್ ನೀಲ್ ಆ್ಯಕ್ಷನ್ ಕಟ್ ಹೇಳಲಿದ್ದಾರೆ.

    ಇತ್ತೀಚೆಗಷ್ಟೇ ಪ್ರಶಾಂತ್ ನೀಲ್ ಮತ್ತು ತಾರಕ್ ಕಾಂಬಿನೇಷನ್‌ನ ಹೊಸ ಸಿನಿಮಾದ ಮುಹೂರ್ತ ನೆರವೇರಿದೆ. ಈ ಚಿತ್ರಕ್ಕೆ ಕನ್ನಡದ ನಟಿಗೆ ಮಣೆ ಹಾಕಿದೆ ಎನ್ನಲಾಗಿದೆ. ಈ ವಿಚಾರ ಅದೆಷ್ಟರ ಮಟ್ಟಿಗೆ ಸತ್ಯ ಎಂಬುದನ್ನು ಚಿತ್ರತಂಡ ಅಧಿಕೃತವಾಗಿ ತಿಳಿಸುವವರೆಗೂ ಕಾದುನೋಡಬೇಕಿದೆ.

    ಅಂದಹಾಗೆ, ಶ್ರೀಮುರಳಿ ಜೊತೆ ಬಘೀರ, ಶಿವಣ್ಣ ಜೊತೆ ಭೈರತಿ ರಣ್‌ಗಲ್, ವಿಜಯ್ ಸೇತುಪತಿ ಜೊತೆಗಿನ ಸಿನಿಮಾ, ಶಿವಕಾರ್ತಿಕೇಯನ್ ಜೊತೆಗಿನ ಹೊಸ ಚಿತ್ರ ಸೇರಿದಂತೆ ಹಲವು ಸಿನಿಮಾಗಳು ಅವರ ಕೈಯಲ್ಲಿವೆ.

  • ವಿಜಯ್‌ ದೇವರಕೊಂಡ ಅಲ್ಲ, ರಾಮ್‌ ಪೋತಿನೇನಿಗೆ ರುಕ್ಮಿಣಿ ವಸಂತ್‌ ನಾಯಕಿ

    ವಿಜಯ್‌ ದೇವರಕೊಂಡ ಅಲ್ಲ, ರಾಮ್‌ ಪೋತಿನೇನಿಗೆ ರುಕ್ಮಿಣಿ ವಸಂತ್‌ ನಾಯಕಿ

    ನ್ನಡದ ಬ್ಯೂಟಿ ರುಕ್ಮಿಣಿ ವಸಂತ್‌ಗೆ (Rukmini Vasanth) ಪರಭಾಷೆಯಲ್ಲಿ ಬೇಡಿಕೆ ಹೆಚ್ಚಾಗಿದೆ. ತಮಿಳಿನ ಬಿಗ್ ಸ್ಟಾರ್‌ಗಳ ನಟಿಸಿದ ಮೇಲೆ ತೆಲುಗಿನಲ್ಲಿ ರುಕ್ಮಿಣಿಗೆ ಅದೃಷ್ಟ ಒಲಿದು ಬಂದಿದೆ. ವಿಜಯ್ ದೇವರಕೊಂಡ (Vijay Devarakonda) ಅಲ್ಲ, ರಾಮ್ ಪೋತಿನೇನಿಗೆ ಕನ್ನಡದ ನಟಿ ಜೋಡಿಯಾಗ್ತಿದ್ದಾರೆ. ಇದನ್ನೂ ಓದಿ:ಒಂದೇ ಚಿತ್ರದಲ್ಲಿ ರಣ್‌ಬೀರ್, ಆಲಿಯಾ ಭಟ್, ವಿಕ್ಕಿ ಕೌಶಲ್- ಬನ್ಸಾಲಿ ಆ್ಯಕ್ಷನ್ ಕಟ್

    ವಿಜಯ್ ಸೇತುಪತಿ, ಶಿವ ಕಾರ್ತಿಕೇಯನ್‌ಗೆ ಹೀರೋಯಿನ್ ಆಗಿ ನಟಿಸಿದ ನಂತರ ತೆಲುಗಿನಿಂದ ನಟಿಗೆ ಬುಲಾವ್ ಬಂದಿದೆ. ವಿಜಯ್ ದೇವರಕೊಂಡಗೆ ಅಲ್ಲ, ಬದಲಾಗಿ ರಾಮ್ ಪೋತಿನೇನಿ (Ram Pothineni) ಮುಂಬರುವ ಚಿತ್ರಕ್ಕೆ ರುಕ್ಮಿಣಿ ವಸಂತ್ ಸಹಿ ಹಾಕಿದ್ದಾರೆ ಎಂಬ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಗ್ರಾಸವಾಗಿದೆ.

    ತೆಲುಗಿನಿಂದ ಸಾಕಷ್ಟು ಸಿನಿಮಾತಂಡದಿಂದ ನಟಿಗೆ ಆಫರ್ ಸಿಕ್ಕಿದೆ. ಆದರೆ ಕಥೆ ಮತ್ತು ಪಾತ್ರಕ್ಕೆ ಹೆಚ್ಚು ಪ್ರಾಮುಖ್ಯತೆ ಕೊಡುವ ನಟಿ ಈಗ ರಾಮ್ ನಟಿಸಲಿರುವ ಚಿತ್ರ ಕಥೆ ಇಷ್ಟವಾಗಿ ಓಕೆ ಎಂದಿದ್ದಾರೆ ಎಂಬುದು ಇನ್‌ಸೈಡ್ ನ್ಯೂಸ್. ಚಿತ್ರತಂಡ ಕಡೆಯಿಂದ ಅಫಿಷಿಯಲ್ ಅನೌನ್ಸ್‌ಮೆಂಟ್ ಬರುವವರೆಗೂ ಕಾಯಬೇಕಿದೆ. ‌ ಅಲ್ಲಿಗೆ ಕೆಲ ತಿಂಗಳುಗಳಿಂದ ವಿಜಯ್‌ ದೇವರಕೊಂಡಗೆ ರುಕ್ಮಿಣಿ ನಾಯಕಿ ಎಂದು ಹರಿದಾಡುತ್ತಿದ್ದ ಸುದ್ದಿಗೆ ಈಗ ಸ್ಪಷ್ಟನೆ ಸಿಕ್ಕಿದೆ.

    ಅಂದಹಾಗೆ, ಕನ್ನಡದಲ್ಲಿ ಶಿವಣ್ಣ ಜೊತೆ ಭೈರತಿ ರಣಗಲ್, ಶ್ರೀಮುರಳಿ ಜೊತೆ ಬಘೀರ ಸೇರಿದಂತೆ ಹಲವು ಚಿತ್ರಗಳನ್ನು ರುಕ್ಮಿಣಿ ವಸಂತ್ ಒಪ್ಪಿಕೊಂಡಿದ್ದಾರೆ.