Tag: Rupesh Shetty

  • ಕರಾವಳಿ ಕಥೆ ಹೊತ್ತ ‘ಅಧಿಪತ್ರ’ ಟೀಸರ್ ರಿಲೀಸ್

    ಕರಾವಳಿ ಕಥೆ ಹೊತ್ತ ‘ಅಧಿಪತ್ರ’ ಟೀಸರ್ ರಿಲೀಸ್

    ಸಿನಿಮಾವೊಂದು ಆರಂಭವಾದ ಬಳಿಕ ಕ್ರಿಯಾಶೀಲತೆಯ ಹಾದಿಯಲ್ಲಿಯೇ ಪ್ರೇಕ್ಷಕರನ್ನು ಸೆಳೆಯೋದಿದೆಯಲ್ಲಾ? ಅದು ನಿಜಕ್ಕೂ ಸವಾಲಿನ ಸಂಗತಿ. ಈ ನಿಟ್ಟಿನಲ್ಲಿ ನೋಡುವುದಾದರೆ, ಅಧಿಪತ್ರ ಮೊದಲ ಪ್ರಯತ್ನದಲ್ಲಿಯೇ ಗೆದ್ದಂತಿದೆ. ಬಿಡುಗಡೆಯಾಗಿರುವ ಅಧಿಪತ್ರ  (Adhipatra) ಟೀಸರ್ (Teaser) ಕುತೂಹಲವನ್ನು ಗರಿಗೆದರುವಂತೆ ಮಾಡಿದೆ.

    ಕರಾವಳಿ ಭಾಗದ ಕಥೆ ಹೊತ್ತು ಬಂದಿರುವ ಅಧಿಪತ್ರ ಸಿನಿಮಾ ಮೊದಲ‌ ತುಣುಕಿನಲ್ಲಿ‌ ಕರಾವಳಿ ಭಾಗದ ವಿಶೇಷ ಆಚರಣೆ ಆಟಿ ಕಳಂಜಾ , ಯಕ್ಷಗಾನ, ಹುಲಿ ಕುಣಿತದ ಜೊತೆಗೆ ಪ್ರೇಕ್ಷಕರನ್ನು ಸೀಟಿನ‌ ತುದಿಗೆ ಕುರಿಸುವ ಕಂಟೆಂಟ್ ಕೂಡ ಇದೆ. ಆದರೆ ಆ ಕಂಟೆಂಟ್ ಏನೂ ಅನ್ನೋದನ್ನು ಚಿತ್ರತಂಡ ಬಿಟ್ಟುಕೊಟ್ಟಿಲ್ಲ. ಖಾಕಿ‌ ಖದರ್ ನಲ್ಲಿ ರೂಪೇಶ್ ಶೆಟ್ಟಿ ಅದ್ಭುತವಾಗಿ ಕಾಣಿಸಿಕೊಂಡಿದ್ದಾರೆ. ಮೊದಲ ಪ್ರಯತ್ನದಲ್ಲಿಯೇ ನಿರ್ದೇಶಕ‌ ಚಯನ್ ಶೆಟ್ಟೆ ಗಟ್ಟಿ ಕಥೆಯೊಂದನ್ನು ಹೊತ್ತು ಬಂದಿರುವ ಸೂಚನೆ ಕೊಟ್ಟಿದ್ದಾರೆ.

    ‘ಕಾಂತಾರ’ ಸಿನಿಮಾದ ಖ್ಯಾತಿಯ ಪ್ರಕಾಶ್ ತುಮಿನಾಡು, ಎಂ.ಕೆ.‌ ಮಠ, ರಘು ಪಾಂಡೇಶ್ವರ್, ದೀಪಕ್ ರೈ, ಕಾರ್ತಿಕ್ ಭಟ್, ಅನಿಲ್ ಉಪ್ಪಾಲ್, ಪ್ರಶಾಂತ್ ತಾರಾಬಳಗದಲ್ಲಿದ್ದು, ಗಿಚ್ಚಿ ಗಿಲಿಗಿಲಿ’ ಖ್ಯಾತಿಯ ಜಾಹ್ನವಿ ನಾಯಕಿಯಾಗಿ ಬಣ್ಣ ಹಚ್ಚಿದ್ದಾರೆ.

    ಕೆ ಆರ್ ಸಿನಿಕಂಬೈನ್ಸ್ ಬ್ಯಾನರ್‌ನಡಿ‌ ದಿವ್ಯಾ ನಾರಾಯಣ್,  ಕುಲದೀಪ್ ರಾಘವ್ ಲಕ್ಷ್ಮೇ ಗೌಡ ‌ಚಿತ್ರ ನಿರ್ಮಾಣ ಮಾಡಿದ್ದು, ಕಾರ್ತಿಕ್ ಶೆಟ್ಟಿ ಹಾಗೂ ಸತೀಶ್ ಶೆಟ್ಟಿ ಸಹ ನಿರ್ಮಾಣದಲ್ಲಿ ಹೆಗಲು ಕೊಟ್ಟಿದ್ದಾರೆ. ಶೂಟಿಂಗ್  ಮುಗಿಸಿರುವ ಚಿತ್ರತಂಡ ಸದ್ಯ ಪೋಸ್ಟ್ ಪ್ರೋಡಕ್ಷನ್ ಕೆಲಸದಲ್ಲಿಯೇ ಬ್ಯುಸಿ ಆಗಿದೆ. ಇನ್ನೇನು ಕೆಲವೇ ದಿನಗಳಲ್ಲಿ ಬಿಡುಗಡೆ ದಿನಾಂಕ ಘೋಷಿಸಲಿದೆ.

  • ರೂಪೇಶ್ ಶೆಟ್ಟಿಯ ‘ಅಧಿಪತ್ರ’ ಚಿತ್ರದ ಆಡಿಯೋ ರೈಟ್ಸ್  ಲಹರಿ ಆಡಿಯೋ ಪಾಲು

    ರೂಪೇಶ್ ಶೆಟ್ಟಿಯ ‘ಅಧಿಪತ್ರ’ ಚಿತ್ರದ ಆಡಿಯೋ ರೈಟ್ಸ್ ಲಹರಿ ಆಡಿಯೋ ಪಾಲು

    ಬಿಗ್ ಬಾಸ್ ಖ್ಯಾತಿಯ ರೂಪೇಶ್ ಶೆಟ್ಟಿ (RupeshShetty) ನಟನೆಯ‌ ಬಹು ನಿರೀಕ್ಷಿತ ಸಿನಿಮಾ ಅಧಿಪತ್ರ (Adhipatra). ಈಗಾಗಲೇ ಮೇಕಿಂಗ್ ಹಾಗೂ ಕಂಟೆಂಟ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಈ ಚಿತ್ರದ ಆಡಿಯೋ ಹಕ್ಕು ಪ್ರತಿಷ್ಠಿತ ಆಡಿಯೋ‌ ಸಂಸ್ಥೆ ಲಹರಿ (Lahari Audio) ಖರೀದಿ ಮಾಡಿದೆ. 2024 ಬಹು ನಿರೀಕ್ಷಿತ ಸಿನಿಮಾ ಸಾಲಿನಲ್ಲಿ ಅಧಿಪತ್ರ ಕೂಡ ಒಂದು.

    ಅಧಿಪತ್ರ ಸಿನಿಮಾದ ಶೂಟಿಂಗ್ ಹಾಗೂ ಮೇಕಿಂಗ್ ನಿಂದಲೂ ಎಲ್ಲರ ಗಮನ ಸೆಳದಿದೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸ ಭರದಿಂದ ಸಾಗುತ್ತಿದೆ. ತೆರೆಗೆ ಬರಲು ರೆಡಿಯಾಗ್ತಿರುವ ಅಧಿಪತ್ರ ಸಿನಿಮಾದ ಟೀಸರ್ ಬಿಡುಗಡೆಗೆ ತಯಾರಿ ನಡೆದಿದೆ. ಇದೇ ತಿಂಗಳ 10ರಂದು ಲಹರಿ ಆಡಿಯೋದಲ್ಲಿ ಚಿತ್ರದ ಮೊದಲ ಝಲಕ್ ಹೊರಬೀಳಲಿದೆ.

    ಚಿತ್ರಕ್ಕೆ ಚಯನ್ ಶೆಟ್ಟಿ ಆಕ್ಷನ್ ಕಟ್ ಹೇಳಿದ್ದು, ಇದು ಇವರ ಚೊಚ್ಚಲ  ಚಿತ್ರ. ಆಡ್ ಇಂಡಸ್ಟ್ರಿ ನಲ್ಲಿ ಕ್ರಿಯೇಟಿವ್ ಆಡ್ಸ್ ಮೂಲಕ ಗಮನ ಸೆಳೆದಿದ ಚಯನ್ ಶೆಟ್ಟಿ ಈಗ ಅಧಿಪತ್ರ ಆಕ್ಷನ್  ಕಟ್ ಹೇಳಿದ್ದಾರೆ , ರೂಪೇಶ್ ಗೆ ಜೋಡಿಯಾಗಿ ಗಿಚ್ಚಿ ಗಿಲಿಗಿಲಿ ಖ್ಯಾತಿಯ ಜಾಹ್ನವಿ ಸಾಥ್ ಕೊಟ್ಟಿದ್ದಾರೆ. ಕಾಂತಾರ ಖ್ಯಾತಿಯ ಪ್ರಕಾಶ್ ತುಮಿನಾಡು, ರಘು ಪಾಂಡೇಶ್ವರ್, ಎಂಕೆ‌ ಮಠ, ದೀಪಕ್ ರೈ, ಅನಿಲ್ ಉಪ್ಪಾಲ್, ಕಾರ್ತಿಕ್ ಭಟ್, ಪ್ರಶಾಂತ್ ತಾರಾಬಳಗದಲ್ಲಿದ್ದಾರೆ.

     

    ಸಸ್ಪೆನ್ಸ್ ಥ್ರಿಲ್ಲರ್ ಶೈಲಿಯಲ್ಲಿ ಅಧಿಪತ್ರ ಸಿನಿಮಾವನ್ನು . ಕೆ ಆರ್ ಸಿನಿಕಂಬೈನ್ಸ್ ಬ್ಯಾನರ್‌ನಡಿ‌ ದಿವ್ಯಾ ನಾರಾಯಣ್,  ಕುಲದೀಪ್ ರಾಘವ್ ಲಕ್ಷ್ಮೇ ಗೌಡ ‌ಬಂಡವಾಳ ಹೂಡಿದ್ದು, ಕಾರ್ತಿಕ್ ಶೆಟ್ಟಿ ಹಾಗೂ ಸತೀಶ್ ಶೆಟ್ಟಿ ಸಹ ನಿರ್ಮಾಣದಲ್ಲಿ ಹೆಗಲು ಕೊಟ್ಟಿದ್ದಾರೆ.

  • ‘ಅಧಿಪತ್ರ’ ಚಿತ್ರದಲ್ಲಿ ರೂಪೇಶ್ ಶೆಟ್ಟಿಯ ಖಾಕಿ ಖದರ್

    ‘ಅಧಿಪತ್ರ’ ಚಿತ್ರದಲ್ಲಿ ರೂಪೇಶ್ ಶೆಟ್ಟಿಯ ಖಾಕಿ ಖದರ್

    ಬಿಗ್ ಬಾಸ್ ಖ್ಯಾತಿಯ ರೂಪೇಶ್ ಶೆಟ್ಟಿ (Rupesh Shetty) ನಟನೆಯ ಅಧಿಪತ್ರ (Adhipatra) ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ. ಬಂಡೆ ಮಹಾಕಾಳಿ ಆಶೀರ್ವಾದ ಪಡೆದು ಶೂಟಿಂಗ್ ಅಖಾಡಕ್ಕೆ ಧುಮುಕಿದ್ದ ಚಿತ್ರತಂಡ ಕುಂದಾಪುರದ ಕೆರಾಡಿ ಭಾಗದಲ್ಲಿ ಚಿತ್ರೀಕರಣ ನಡೆಸ್ತಿದೆ. ಈಗಾಗಲೇ 10 ದಿನ ಶೂಟಿಂಗ್ ಕಂಪ್ಲೀಟ್ ಮಾಡಿದ್ದು, ನಾಯಕ ರೂಪೇಶ್ ಖಾಕಿ ಖದರ್ ನಲ್ಲಿ ಕಾಣಿಸಿಕೊಂಡಿರುವ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿವೆ.

    ತುಳು ಸಿನಿಮಾರಂಗದಲ್ಲಿ ರೂಪೇಶ್ ಶೆಟ್ಟಿಗೆ ಸಾಕಷ್ಟು ಅನುಭವ ಇದೆ. ಸಿನಿಮಾದ ನಾನಾ ವಿಭಾಗಗಳಲ್ಲಿ ಕೆಲಸ ಮಾಡಿದ್ದಾರೆ. ನಟನಾಗಿ ಮತ್ತು ನಿರ್ದೇಶಕನಾಗಿ ಅವರು ಅಲ್ಲಿ ನೆಲೆ ಕಂಡುಕೊಂಡಿದ್ದಾರೆ. ಬಿಗ್ ಬಾಸ್ ಗೆ ಕಾಲಿಟ್ಟ ಬಳಿಕ ಅವರಿಗೆ ಜನಪ್ರಿಯತೆ ಹೆಚ್ಚಾಯಿತು. ಬಿಗ್ ಬಾಸ್ ವಿನ್ ಆದ ಬಳಿಕ ಅವರು ತುಳು ಭಾಷೆಯ ‘ಸರ್ಕಸ್’ ಸಿನಿಮಾವನ್ನು ನಿರ್ದೇಶಿಸಿ, ನಿರ್ಮಾಣ ಮಾಡಿದರು. ಆ ಸಿನಿಮಾದಿಂದ ಅವರಿಗೆ ದೊಡ್ಡ ಯಶಸ್ಸು ಸಿಕ್ಕಿತು. ಕನ್ನಡದಲ್ಲಿ ಸ್ವಲ್ಪ ತಡವಾಗಿ ಆದರೂ ಪರವಾಗಿಲ್ಲ, ಒಂದು ಒಳ್ಳೆಯ ಕಥೆಯ ಮೂಲಕ, ಡಿಫರೆಂಟ್ ಆದಂತಹ ಪಾತ್ರದ ಮೂಲಕ ಪ್ರೇಕ್ಷಕರ ಎದುರು ಬರಬೇಕು ಎಂಬುದು ರೂಪೇಶ್ ಶೆಟ್ಟಿ ಅವರ ಉದ್ದೇಶ ಆಗಿತ್ತು. ಅದೆಲ್ಲವನ್ನೂ ಗಮನದಲ್ಲಿ ಇಟ್ಟುಕೊಂಡು ಅವರು ‘ಅಧಿಪತ್ರ’ ಸಿನಿಮಾ ಒಪ್ಪಿಕೊಂಡಿದ್ದಾರೆ.

    ಸುದ್ದಿವಾಹಿನಿಯಲ್ಲಿ ನಿರೂಪಕಿಯಾಗಿ ಗುರುತಿಸಿಕೊಂಡಿರುವ ಜಾಹ್ನವಿ (Jahnavi), ಅಲ್ಲಿಂದ ಕಿರುತೆರೆ ರಿಯಾಲಿಟಿ ಶೋಗಳಲ್ಲಿಯೂ ಕಣಕ್ಕಿಳಿದು ಇದೀಗ ನೇರವಾಗಿ ಸಿನಿಮಾ ನಾಯಕಿಯಾಗಿ ಹೊಸ ಇನ್ನಿಂಗ್ಸ್‌ ಆರಂಭಿಸಿದ್ದಾರೆ. ರೂಪೇಶ್‌ ಶೆಟ್ಟಿ ಅಧಿಪತ್ರ ಚಿತ್ರದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ.

    ಈ ಹಿಂದೆ ಕೆಲವು ಸಿನಿಮಾಗಳಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿರುವ ಚಯನ್ ಶೆಟ್ಟಿ (Chayan Shetty), ಅಧಿಪತ್ರ ಚಿತ್ರದ ಮೂಲಕ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದಾರೆ. ಕೆ ಆರ್ ಸಿನಿಕಂಬೈನ್ಸ್ ಬ್ಯಾನರ್ ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದು, ನೈಜ ಘಟನೆಯಿಂದ ಸ್ಫೂರ್ತಿ ಪಡೆದು ಸಸ್ಪೆನ್ಸ್ ಥ್ರಿಲ್ಲರ್ ಶೈಲಿಯಲ್ಲಿ ಸಿನಿಮಾ ಮೂಡಿಬರಲಿದೆ.

  • ರೂಪೇಶ್ ಶೆಟ್ಟಿ-ಜಾಹ್ನವಿ ‘ಅಧಿಪತ್ರ’ ಸಿನಿಮಾಗೆ ಮುಹೂರ್ತ

    ರೂಪೇಶ್ ಶೆಟ್ಟಿ-ಜಾಹ್ನವಿ ‘ಅಧಿಪತ್ರ’ ಸಿನಿಮಾಗೆ ಮುಹೂರ್ತ

    ಬಿಗ್ ಬಾಸ್ ಖ್ಯಾತಿಯ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ (Rupesh Shetty) ನಟನೆಯ ‘ಅಧಿಪತ್ರ’ (Adhipatra) ಸಿನಿಮಾ ಇಂದು ಸೆಟ್ಟೇರಿದೆ. ಬೆಂಗಳೂರಿನ ಬಂಡೆ ಮಹಾಕಾಳಿ ಸನ್ನಿಧಿಯಲ್ಲಿ ಮುಹೂರ್ತ (Muhurta) ನೆರವೇರಿದೆ. ಈಗಾಗಲೇ ತುಳು ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ರೂಪೇಶ್ ಸ್ಯಾಂಡಲ್ ವುಡ್ ನಲ್ಲಿ ಹೊಸ ಹೆಜ್ಜೆ ಇಟ್ಟಿದ್ದಾರೆ.

    ನಟ ರೂಪೇಶ್ ಶೆಟ್ಟಿ ಮಾತನಾಡಿ, ಬಿಗ್ ಬಾಸ್ ಆದ್ಮೇಲೆ ಕನ್ನಡ ಸಿನಿಮಾ ಯಾವಾಗ ಎಂದು ಎಲ್ಲರೂ ಕೇಳುತ್ತಿದ್ದರು. ಬಿಗ್ ಬಾಸ್ ಗೂ ಮುಂಚೆ ‘ಸರ್ಕಸ್’ ಎಂಬ ತುಳು ಸಿನಿಮಾ ನಿರ್ದೇಶನ ಮಾಡಿ ನಟಿಸಿದ್ದೆ. ಆ ಚಿತ್ರದ ಕೆಲಸ ತುಂಬಾ ಇತ್ತು. ಈ ಚಿತ್ರದ ಕೆಲಸ ಮುಗಿಸಿ ಬೇರೆ ಸಿನಿಮಾ ಒಪ್ಪಿಕೊಳ್ಳುವುದು ಎಂದು ತೀರ್ಮಾನ ಮಾಡಿದ್ದೆ. ದೇವರ ದಯೆಯಿಂದ ಆ ಚಿತ್ರ ಹಿಟ್ ಆಗಿದೆ. 150 ಥಿಯೇಟರ್ ಗಳಲ್ಲಿ ಓಡಿದೆ. ಅಧಿಪತ್ರ ಸಿನಿಮಾ ನಿರ್ದೇಶಕರು ಕಥೆ ಹೇಳಿದಾಗ ಇಂಟ್ರೆಸ್ಟ್ ಎನಿಸಿತು. ಅವರ ಮೊದಲ ಸಿನಿಮಾವಾದರೂ ಸ್ಕ್ರೀನ್ ಪ್ಲೇ ವಿವರಿಸಿದಾಗ ಎಷ್ಟು ತಯಾರಾಗಿದ್ದರೂ ಎಂದರೆ ಪ್ರತಿ ಸೀನ್ ಡ್ರಾಯಿಂಗ್ ಮಾಡಿಕೊಂಡಿದ್ದರು. ನನಗೆ ಅದನ್ನು ನೋಡಿ ತುಂಬಾ ಧೈರ್ಯ ಬಂತು. ಅವರಿಗೆ ಒಂದು ವಿಷನ್ ಇದೆ. ಈ ಕಾರಣದಿಂದ ಅಧಿಪತ್ರ ಸಿನಿಮಾ ಒಪ್ಪಿಕೊಂಡಿದ್ದೇನೆ. ಸದ್ಯದಲ್ಲಿ ಈ ಚಿತ್ರಕ್ಕಾಗಿ ನನ್ನ ಗೆಟಪ್ ಬದಲಾಗಲಿದೆ ಎಂದರು.

    ನಟಿ ಜಾಹ್ನವಿ ಮಾತನಾಡಿ, ಅಧಿಪತ್ರ ಸಿನಿಮಾ ಈಗ ಶುರುವಾಗಿದೆ. ಇವತ್ತು ಮುಹೂರ್ತ ಆಗಿದೆ. ಈ ರೀತಿ ಒಂದು ಸಿನಿಮಾ ಬರ್ತಿದೆ ಅಂದಾಗಲೇ ತುಂಬಾ ಚೆನ್ನಾಗಿ ಪ್ರಮೋಷನ್ ಸಿಕ್ತಿದೆ. ಟೈಟಲ್ ತುಂಬಾ ಕ್ಯಾಚಿಯಾಗಿದೆ. ನನ್ನ ಪಾತ್ರದ ಹೆಸರು ಬೃಹತಿ. ನನ್ನ ಪಾತ್ರದ ಹೆಸರು ಕೂಡ ವಿಭಿನ್ನವಾಗಿದೆ. ಈ ಸಿನಿಮಾ ತುಂಬಾ ಪಾಸಿಟಿವ್ ಆಗಿದೆ ಎಂದರು. ನಿರ್ದೇಶಕ ಚಯನ್ ಶೆಟ್ಟಿ (Chayan Shetty) ಮಾತನಾಡಿ, ರೂಪೇಶ್ ಶೆಟ್ಟಿ ಹುಟ್ಟಹಬ್ಬಕ್ಕೆ ಟೈಟಲ್ ಅನೌನ್ಸ್ ಮಾಡಿದ್ದೆವು. ಆ ದಿನವೇ ನಮಗೆ ಒಳ್ಳೆ ಪ್ರೋತ್ಸಾಹ ಸಿಕ್ಕಿದೆ. ರೂಪೇಶ್ ಶೆಟ್ಟಿ ಅವರ ಹಿಂದಿನ ಸಿನಿಮಾಗಳಿಗಿಂತ ಈ ಚಿತ್ರದಲ್ಲಿ ವಿಭಿನ್ನ ಪಾತ್ರ ನಿರ್ವಹಿಸಲಿದ್ದಾರೆ. ಗಣೇಶ್ ಹಬ್ಬದ ಬಳಿಕ ಶೂಟಿಂಗ್ ಶುರುವಾಗಲಿದೆ. ಚಿತ್ರದಲ್ಲಿ ಎರಡು ಹಾಡುಗಳಿವೆ.

    ತುಳು ಸಿನಿಮಾರಂಗದಲ್ಲಿ ರೂಪೇಶ್ ಶೆಟ್ಟಿಗೆ ಸಾಕಷ್ಟು ಅನುಭವ ಇದೆ. ಸಿನಿಮಾದ ನಾನಾ ವಿಭಾಗಳಲ್ಲಿ ಕೆಲಸ ಮಾಡಿದ್ದಾರೆ. ನಟನಾಗಿ ಮತ್ತು ನಿರ್ದೇಶಕನಾಗಿ ಅವರು ಅಲ್ಲಿ ನೆಲೆ ಕಂಡುಕೊಂಡಿದ್ದಾರೆ. ಬಿಗ್ ಬಾಸ್ ಗೆ ಕಾಲಿಟ್ಟ ಬಳಿಕ ಅವರಿಗೆ ಜನಪ್ರಿಯತೆ ಹೆಚ್ಚಾಯಿತು. ಬಿಗ್ ಬಾಸ್ ವಿನ್ ಆದ ಬಳಿಕ ಅವರು ತುಳು ಭಾಷೆಯ ‘ಸರ್ಕಸ್’ ಸಿನಿಮಾವನ್ನು ನಿರ್ದೇಶಿಸಿ, ನಿರ್ಮಾಣ ಮಾಡಿದರು. ಆ ಸಿನಿಮಾದಿಂದ ಅವರಿಗೆ ದೊಡ್ಡ ಯಶಸ್ಸು ಸಿಕ್ಕಿತು. ಕನ್ನಡದಲ್ಲಿ ಸ್ವಲ್ಪ ತಡವಾಗಿ ಆದರೂ ಪರವಾಗಿಲ್ಲ, ಒಂದು ಒಳ್ಳೆಯ ಕಥೆಯ ಮೂಲಕ, ಡಿಫರೆಂಟ್ ಆದಂತಹ ಪಾತ್ರದ ಮೂಲಕ ಪ್ರೇಕ್ಷಕರ ಎದುರು ಬರಬೇಕು ಎಂಬುದು ರೂಪೇಶ್ ಶೆಟ್ಟಿ ಅವರ ಉದ್ದೇಶ ಆಗಿತ್ತು. ಅದೆಲ್ಲವನ್ನೂ ಗಮನದಲ್ಲಿ ಇಟ್ಟುಕೊಂಡು ಅವರು ‘ಅಧಿಪತ್ರ’ ಸಿನಿಮಾ ಒಪ್ಪಿಕೊಂಡಿದ್ದಾರೆ.

    ಸುದ್ದಿವಾಹಿನಿಯಲ್ಲಿ ನಿರೂಪಕಿಯಾಗಿ ಗುರುತಿಸಿಕೊಂಡಿರುವ ಜಾಹ್ನವಿ, ಅಲ್ಲಿಂದ ಕಿರುತೆರೆ ರಿಯಾಲಿಟಿ ಶೋಗಳಲ್ಲಿಯೂ ಕಣಕ್ಕಿಳಿದು ಇದೀಗ ನೇರವಾಗಿ ಸಿನಿಮಾ ನಾಯಕಿಯಾಗಿ ಹೊಸ ಇನ್ನಿಂಗ್ಸ್‌ ಆರಂಭಿಸಿದ್ದಾರೆ. ರೂಪೇಶ್‌ ಶೆಟ್ಟಿ ಅಧಿಪತ್ರ ಚಿತ್ರದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಈ ಹಿಂದೆ ಕೆಲವು ಸಿನಿಮಾಗಳಲ್ಲಿ ಸಹಾಯಕ ನಿರ್ದೇಶಕರಾಗಿ ಹಾಗೂ ಇವರು ನಿರ್ದೇಶನ ಮಾಡಿದ ಶಾರ್ಟ್ ಫಿಲಂ ಸಾಮಾಜಿಕ ಜಾಲತಾಣಗಳಲ್ಲಿ ಉತ್ತಮ ಪ್ರಶಂಸೆ ಪಡೆದಿತ್ತು ಹಾಗೂ ಕೆಲವು ಜಾಹಿರಾತುಗಳಿಗೆ ನಿರ್ದೇಶನ ಮಾಡಿರುವ ಅನುಭವ ಹೊಂದಿರುವ ಚಯನ್ ಶೆಟ್ಟಿ, ಅಧಿಪತ್ರ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.  ಈ ಸಿನಿಮಾಕ್ಕೆ ಕೆ ಆರ್ ಸಿನಿಕಂಬೈನ್ಸ್ ಬ್ಯಾನರ್  ಬಂಡವಾಳ ಹೂಡುತ್ತಿದ್ದು, ನೈಜ ಘಟನೆಯಿಂದ ಸ್ಫೂರ್ತಿ ಪಡೆದು ಸಸ್ಪೆನ್ಸ್ ಥ್ರಿಲ್ಲರ್ ಶೈಲಿಯಲ್ಲಿ ಸಿನಿಮಾ ಮೂಡಿಬರಲಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹುಟ್ಟುಹಬ್ಬಕ್ಕೆ ‘ಅಧಿಪತ್ರ’ ಹೊರಡಿಸಿದ ರೂಪೇಶ್ ಶೆಟ್ಟಿ : ಸರ್ಕಸ್ ನಂತರ ಇನ್ನೇನಿದ್ರೂ ಸುನಾಮಿನೇ ಎಂದ ಫ್ಯಾನ್ಸ್

    ಹುಟ್ಟುಹಬ್ಬಕ್ಕೆ ‘ಅಧಿಪತ್ರ’ ಹೊರಡಿಸಿದ ರೂಪೇಶ್ ಶೆಟ್ಟಿ : ಸರ್ಕಸ್ ನಂತರ ಇನ್ನೇನಿದ್ರೂ ಸುನಾಮಿನೇ ಎಂದ ಫ್ಯಾನ್ಸ್

    ರ್ಕಸ್ ಎಲ್ಲಾ ಮುಗೀತು ಇನ್ನೇನಿದ್ರೂ ಸುನಾಮಿನೇ ಹೀಗಂತ ರೂಪೇಶ್ ಶೆಟ್ಟಿ (Rupesh Shetty) ಹೇಳುವ ಮೊದಲೇ ಅವರ ಅಭಿಮಾನಿ ಬಳಗ ಸಾರಿ ಸಾರಿ ಹೇಳ್ತಿದೆ. ‘ಶೆಟ್ರೆ ಅಖಾಡನೂ ನಿಮ್ದೆ, ಆಟನೂ ನಿಮ್ದೆ ನುಗ್ತಾಯಿರಿ’ ಅಂತ ಧೈರ್ಯ ತುಂಬುತ್ತಿದೆ. ಭಕ್ತಬಳಗ ಇಷ್ಟೊಂದು  ಸ್ಫೂರ್ತಿ ತುಂಬುವಾಗ, ಅಭಿಮಾನಿ ದೇವರುಗಳು ಇಷ್ಟೊಂದು ಸ್ಥೈರ್ಯ ಹೇಳುವಾಗ ಶೆಟ್ರು ಸುಮ್ನಿರೋದಕ್ಕೆ ಸಾಧ್ಯಾವಾ? ಯಾವುದೇ ಕಾರಣಕ್ಕೂ ಇಲ್ಲ. ಹೀಗಾಗಿಯೇ ರಾಕ್‍ಸ್ಟಾರ್ ರೂಪೇಶ್ ಶೆಟ್ರು ಮೈ ಕೊಡವಿಕೊಂಡು ಅಖಾಡಕ್ಕೆ ಇಳಿದಿದ್ದಾರೆ. ಹೊಸ ಹುರುಪಿನಿಂದ, ಹೊಸ ಹುಮ್ಮಸ್ಸಿನಿಂದ ಹುಟ್ಟುಹಬ್ಬದಂದೇ (Birthday) ಕಣಕ್ಕಿಳಿದಿದ್ದಾರೆ. ಅದು `ಅಧಿಪತ್ರ’ ಹೆಸರಿನ ಹೊಸ ಚಿತ್ರದ ಮೂಲಕ ಎನ್ನುವುದು ವಿಶೇಷ

    ಅಂದ್ಹಾಗೇ, ಇವತ್ತು ರಾಕ್‍ಸ್ಟಾರ್ ರೂಪೇಶ್ ಶೆಟ್ಟಿಯವರ ಹುಟ್ಟುಹಬ್ಬ. ಬರ್ತ್‍ಡೇ ಸಂಭ್ರಮದಲ್ಲಿರೋ ಶೆಟ್ರಿಗೆ `ಅಧಿಪತ್ರ’ (Adhipatra) ಉಡುಗೊರೆಯಾಗಿ ಸಿಕ್ಕಿದೆ. ಹುಟ್ಟುಹಬ್ಬದಂದು ಅಧಿಕೃತವಾಗಿ ಚಿತ್ರ ಘೋಷಣೆಯಾಗಿದೆ. ಚಯನ್ ಶೆಟ್ಟಿ (Chayan Shetty) ಅನ್ನೋರು ಸಿನಿಮಾ ನಿರ್ದೇಶನ ಮಾಡಲಿದ್ದಾರೆ. ಕೆ.ಆರ್ ಸಿನಿಕಂಬೈನ್ಸ್ ಬ್ಯಾನರ್ ಅಡಿಯಲ್ಲಿ ಕನ್ನಡದಲ್ಲಿ ಈ ಚಿತ್ರ ಮೂಡಿಬರಲಿದೆ. ಸದ್ಯಕ್ಕೆ ಇಷ್ಟು ಮಾಹಿತಿಯನ್ನ ಪೋಸ್ಟರ್ ಮೂಲಕ ಹಂಚಿಕೊಂಡಿರುವ ಚಿತ್ರತಂಡ, ಶೀರ್ಷಿಕೆಯಿಂದಲೇ ಚಿತ್ರಪ್ರೇಮಿಗಳ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ. ನಮಗೆಲ್ಲ ಅಧಿಪತಿ ಬಗ್ಗೆ ಗೊತ್ತಿದೆ, ಇದೇನಿದು `ಅಧಿಪತ್ರ’ ಅಂತ ಕಲಾಭಿಮಾನಿಗಳು ಕುತೂಹಲದ ಹುಳಬಿಟ್ಕೊಂಡು ತಲೆಕೆಡಿಸಿಕೊಳ್ಳುವಂತಾಗಿದೆ.

    ಟೈಟಲ್ ಮೂಲಕವೇ ಇಷ್ಟೊಂದು ಕುತೂಹಲ ಮೂಡಿಸಿರೋ ರೂಪೇಶ್ ಶೆಟ್ರು `ಅಧಿಪತ್ರ’ನಾಗಿ ಯಾವ ಅವತಾರ ತಾಳುತ್ತಾರೋ? `ಅಧಿಪತ್ರ’ನ ಪಕ್ಕದಲ್ಲಿ ಅದ್ಯಾವ ಮುದ್ದುಬೊಂಬೆ ನಾಯಕಿಯಾಗಿ ನಿಂತು ಸೌಂಡ್ ಮಾಡುತ್ತಾಳೋ ಗೊತ್ತಿಲ್ಲ. ಆದರೆ, ಸರ್ಕಸ್ ಮೂಲಕ ರೂಪೇಶ್ ಶೆಟ್ರು ಸಿಕ್ಕಾಪಟ್ಟೆ ಸೌಂಡ್ ಮಾಡ್ತಿದ್ದಾರೆ. ಬಿಗ್‍ಬಾಸ್ ಮನೆಯಿಂದ ಹೊರಬಂದು `ಸರ್ಕಸ್’ ಹೆಸರಿನ ಸಿನಿಮಾಗೆ ಬಣ್ಣ ಹಚ್ಚಿದ ರೂಪೇಶ್, ನಿರ್ದೇಶನ, ನಿರ್ಮಾಣದ ಜವಬ್ದಾರಿ ಹೊತ್ತುಕೊಂಡರು. ತಾನೇನು, ತನ್ನ ತಾಕತ್ತೇನು ಎಂಬುದನ್ನ ಪ್ರೂ ಮಾಡಲು ಪಣತೊಟ್ಟರು. ಅದರಂತೇ ತುಳು ಭಾಷೆಯಲ್ಲಿ `ಸರ್ಕಸ್’ ಮಾಡಿ ಸಪ್ತಸಾಗರ ದಾಟಿದ್ದಾರೆ. ಕರ್ನಾಟಕ ಮಾತ್ರವಲ್ಲ ದುಬೈ, ಅಬುದಾಬಿ, ಪುಣೆ, ಕತಾರ್ ಸೇರಿದಂತೆ ಹತ್ತಾರು ಕಂಟ್ರಿಗಳಲ್ಲಿ `ಸರ್ಕಸ್’ ರಿಲೀಸ್ ಮಾಡಿ ಸಕ್ಸಸ್ ಕಂಡಿದ್ದಾರೆ. ಇದನ್ನೂ ಓದಿ:D51: ಧನುಷ್ ಹೊಸ ಸಿನಿಮಾಗೆ ರಶ್ಮಿಕಾ ಮಂದಣ್ಣ ಹೀರೋಯಿನ್

    ಅಚ್ಚರಿ ಅಂದರೆ `ಸರ್ಕಸ್’ ಬಿಡುಗಡೆಗೊಂಡು 50 ದಿನ ಕಳೆದಿದೆ, ಆದರೆ, ಥಿಯೇಟರ್ ನಲ್ಲಿ ಸಿನಿಮಾ ಈಗಲೂ ಹೌಸ್‍ಫುಲ್ ಪ್ರದರ್ಶನ ಕಾಣ್ತಿದೆ. ರೂಪೇಶ್ ಶೆಟ್ರ ಶ್ರಮಕ್ಕೆ ಯಶಸ್ಸಿನ ಜೊತೆಗೆ ಝಣಝಣ ಕಾಂಚಾಣವೂ ಹರಿದುಬರುತ್ತಿದೆ. ಇದರ ಬೆನ್ನಲ್ಲೇ ರಾಕ್‍ಸ್ಟಾರ್ ರೂಪೇಶ್ `ಅಧಿಪತ್ರ’ನಾಗಿ ಗಂಧದಗುಡಿಗೆ ಅಡಿಯಿಡಲು ರೆಡಿಯಾಗಿದ್ದಾರೆ. ತುಳು ಮಾತ್ರವಲ್ಲ ಕನ್ನಡದಲ್ಲೂ ಒಳ್ಳೊಳ್ಳೆ ಸಿನಿಮಾ ಮಾಡಬೇಕು ಅದನ್ನು ಕರ್ನಾಟಕದ ಮೂಲೆಮೂಲೆಗೆ ತಲುಪಿಸಬೇಕು. ಹೊರರಾಜ್ಯ, ಹೊರದೇಶದಲ್ಲೂ ನನ್ನ ಸಿನಿಮಾಗಳು ಸದ್ದು ಮಾಡಬೇಕು ಎನ್ನುವ ಕನಸು ಕಂಡಿದ್ದಾರೆ. ಈಗಾಗಲೇ ಸರ್ಕಸ್ ಮೂಲಕ ಗಡಿದಾಟಿ ಗಹಗಹಿಸಿರೋ ರೂಪೇಶ್, ಕನ್ನಡ ಸಿನಿಮಾದ ಮೂಲಕ ಸಪ್ತಸಾಗರ ದಾಟುವ ಹಂಬಲದಲ್ಲಿದ್ದಾರೆ. ಅದನ್ನು `ಅಧಿಪತ್ರ’ದ ಮೂಲಕ ಈಡೇರಿಸಿಕೊಳ್ತಾರಾ ಕಾದುನೋಡಬೇಕಿದೆ.

    ಅಧಿಪತ್ರ ಸಿನಿಮಾದ ಶೂಟಿಂಗ್ ಸೆಪ್ಟೆಂಬರ್‍ನಿಂದ ಆರಂಭಗೊಳ್ಳಲಿದೆ. ಡೇಂಜರ್ ಝೋನ್, ಸ್ಮೈಲ್ ಪ್ಲೀಸ್, ನಿಶ್ಯಬ್ದ-2, ಅನುಷ್ಕಾ ಸೇರಿದಂತೆ ಕನ್ನಡದಲ್ಲಿ ಕೆಲ ಸಿನಿಮಾಗಳಿಗೆ ಬಣ್ಣ ಹಚ್ಚಿದ್ದಾರೆ. ಆದರೆ, ತುಳು ಸಿನಿಮಾಗಳಿಂದ ಸಿಕ್ಕಂತಹ ಯಶಸ್ಸು ರೂಪೇಶ್‍ಗೆ ಕನ್ನಡ ಚಿತ್ರಗಳಿಂದ ಸಿಕ್ಕಿಲ್ಲ. ಹೀಗಾಗಿ, ಕನ್ನಡ ಭಾಷೆಯ ಸಿನಿಮಾದ ಮೂಲಕ ದೊಡ್ಡ ಮಟ್ಟದ ಯಶಸ್ಸಿನ ನಿರೀಕ್ಷೆಯಲ್ಲಿದ್ದಾರೆ. ಬಿಗ್‍ಬಾಸ್ ಸೀಸನ್ 9 ವಿನ್ನರ್ ಆದ್ಮೇಲೆ ರೂಪೇಶ್ ಶೆಟ್ಟಿ ಕರ್ನಾಟಕದ ಮೂಲೆ ಮೂಲೆ ತಲುಪಿದ್ದಾರೆ. ಅಪಾರ ಅಭಿಮಾನಿ ಬಳಗ ಸಂಪಾದಿಸಿದ್ದಾರೆ. ಹೀಗಾಗಿ, ಮುಂದಿನ ಕನ್ನಡ ಸಿನಿಮಾಗಳ ಮೂಲಕ ರೂಪೇಶ್ ಶೆಟ್ಟಿ ಗೆದ್ದು ಬೀಗೋದು ಗ್ಯಾರಂಟಿ ಎನ್ನುವ ಭರವಸೆಯಿದೆ. ಹತ್ತು ವರ್ಷದ ಸರ್ಕಸ್‍ಗೆ ಸಕ್ಸಸ್ ಸಿಕ್ಕಿದೆ. ಇನ್ನೇನಿದ್ರು ಸುನಾಮಿ ಎಬ್ಬಿಸಿ ಸಾಮ್ರಾಜ್ಯ ಕಟ್ಟೋದಷ್ಟೇ ಬಾಕಿ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮತ್ತೆ ಬೋಲ್ಡ್ ಫೋಟೋ ಹಂಚಿಕೊಂಡ ಸಾನ್ಯಾ ಅಯ್ಯರ್

    ಮತ್ತೆ ಬೋಲ್ಡ್ ಫೋಟೋ ಹಂಚಿಕೊಂಡ ಸಾನ್ಯಾ ಅಯ್ಯರ್

    ಬಿಗ್ ಬಾಸ್ ಮಾಜಿ ಸ್ಪರ್ಧಿ ಹಾಗೂ ಕಿರುತೆರೆ ನಟಿ ಸಾನ್ಯಾ ಅಯ್ಯರ್ (Sanya Iyer), ಇತ್ತೀಚೆಗಷ್ಟೇ ಬಾಲಿವುಡ್ (Bollywood) ಖ್ಯಾತ ಫೋಟೋಗ್ರಾಫರ್ ಡಬೂ ರತ್ನಾನಿ (Daboo Ratnani) ಅವರಿಂದ ಫೋಟೋಶೂಟ್ (Photo Shoot) ಮಾಡಿಸಿಕೊಂಡಿದ್ದರು. ಆ ಫೋಟೋಗಳನ್ನು ಒಂದೊಂದೇ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಈ ಹಿಂದೆ ಬಿಳಿ ಬಣ್ಣದ ಕಾಸ್ಟ್ಯೂಮ್ ನಲ್ಲಿ ಥೇಟ್ ರಾಣಿಯಂತೆ ಕಂಡಿದ್ದರು. ಈ ಬಾರಿ ಹಳದಿ ಮತ್ತು ಬಿಳಿ ಬಣ್ಣದ ಕಾಂಬಿನೇಷನ್ ನ ಡ್ರೆಸ್ ಹಾಕಿ ಮಿಂಚಿದ್ದಾರೆ.

    ಬಾಲಿವುಡ್ ನ ಖ್ಯಾತ ನಟ ನಟಿಯರ ಫೋಟೋಗಳನ್ನು ತಮ್ಮ ಕ್ಯಾಮೆರಾದಲ್ಲಿ ಸೆರೆ ಹಿಡಿದ ಶ್ರೇಯಸ್ಸು ಡಬು ರತ್ನಾನಿಗೆ ಸಲ್ಲುತ್ತದೆ. ಅಮಿತಾಭ್ ಬಚ್ಚನ್ ರಿಂದ ಹಿಡಿದು ಈ ಹೊತ್ತಿನ ಯುವ ನಟರವರೆಗೂ ಡಬು ತಮ್ಮ ಕ್ಯಾಮೆರಾದಲ್ಲಿ ಅವರನ್ನು ಸೆರೆ ಹಿಡಿದಿದ್ದಾರೆ. ಈ ಹಿಂದೆ ಕನ್ನಡದ ಹೆಸರಾಂತ ನಟ ಯಶ್ ಕೂಡ ಇವರ ಬಳಿ ಫೋಟೋಶೂಟ್ ಮಾಡಿಸಿಕೊಂಡಿದ್ದರು. ಇಂದು ಸಾನ್ಯಾ ಕೂಡ ಅವರ ಕ್ಯಾಮೆರಾದಲ್ಲಿ ಸೆರೆಯಾಗಿದ್ದಾರೆ.

    ಕೆಲವು ಘಟನೆಗಳ ನಂತರ ಸಾನ್ಯಾ ತಮ್ಮ ಬದುಕನ್ನು ನಾಜೂಕಾಗಿ ಕಟ್ಟಿಕೊಳ್ಳುತ್ತಿದ್ದಾರೆ. ಅಲ್ಲದೇ ಗ್ಲಾಮರ್ ಬಗ್ಗೆಯೂ ಅವರು ಕಾಳಜಿ ತಗೆದುಕೊಳ್ಳುತ್ತಿದ್ದಾರೆ. ಈ ಕುರಿತು ಅವರು ಮಾತನಾಡಿ, ‘ಕಂಬಳದಲ್ಲಿ ನಾನು ಕುಡಿದುಕೊಂಡು ಬಂದಿದ್ದೆ ಎಂದು ಸುಳ್ಳು ಸುದ್ದಿ ಹಬ್ಬಿಸಿದರು. ಅದು ಸುಳ್ಳು. ನಾನು ಜೀರೋ ಶುಗರ್ ಡಯೆಟ್ ಮಾಡುತ್ತಿದ್ದೇನೆ. ಮುಂಬೈನಲ್ಲಿ ಶೂಟಿಂಗ್ ಇರುವ ಕಾರಣಕ್ಕಾಗಿ ಇದೆಲ್ಲವನ್ನೂ ಮಾಡುತ್ತಿದ್ದೇನೆ. ಅಂಥದ್ದರಲ್ಲಿ ಮದ್ಯಪಾನ ಹೇಗೆ ಮಾಡಲಿ? ಜೊತೆಗೆ ನಾನು ರುದ್ರಾಕ್ಷಿಯನ್ನು ಧರಿಸಿದ್ದೇನೆ. ಇದನ್ನು ಧರಿಸಿದಾಗ ಮದ್ಯಪಾನ, ಧೂಮಪಾನ ಮಾಡಲ್ಲ. ಸುಮ್ಮನೆ ನನ್ನ ಮೇಲೆ ಆಪಾದನೆ ಹೊರಿಸಲಾಗುತ್ತಿದೆ’ ಎಂದಿದ್ದರು.

    ಈಗಾಗಲೇ ಜೀವನಲ್ಲಿ ಒಂದು ಲವ್ ಫೆಲ್ಯೂವರ್ ಕಂಡಿರುವ ಪುಟ್ಟಗೌರಿ ಖ್ಯಾತಿಯ ಸಾನ್ಯಾ ಅಯ್ಯರ್ ಮತ್ತು ರೂಪೇಶ್ ಶೆಟ್ಟಿ (Rupesh Shetty) ನಡುವೆ ಏನೋ ನಡೀತಾ ಇದೆ ಎನ್ನುವುದು ಬಿಗ್ ಬಾಸ್ ಮನೆಯಲ್ಲಿದ್ದವರ ಗುಮಾನಿಯಾಗಿತ್ತು. ಅದಕ್ಕೆ ಪುಷ್ಠಿ ಎನ್ನುವಂತೆ ಈ ಜೋಡಿ ಸದಾ ಜೊತೆಯಾಗಿಯೇ ಕ್ಯಾಮೆರಾ ಮುಂದೆ ಕಾಣಿಸಿಕೊಳ್ಳುತ್ತಿತ್ತು. ಅದಕ್ಕೂ ಅವರು ಸ್ಪಷ್ಟನೆ ನೀಡಿದ್ದಾರೆ.

    ರೂಪೇಶ್ ಮತ್ತು ತಮ್ಮ ನಡುವೆ ಅಂಥದ್ದೂ ಏನೂ ಇಲ್ಲ, ನಾವು ಜಸ್ಟ್ ಫ್ರೆಂಡ್ಸ್ ಎಂದು ಹೇಳುವ ಮೂಲಕ ತಿಳಿಗೊಳಿಸಲು ಪ್ರಯತ್ನಿಸಿದ್ದಾರೆ. ಏನೇ ಪ್ರಯತ್ನಿಸಿದರೂ, ಅವರುಗಳ ನಡೆ ಮಾತ್ರ ಹಲವು ಅನುಮಾನಗಳನ್ನು ಬಿತ್ತಿದೆ. ಬಿಗ್ ಬಾಸ್ ಮನೆಯಿಂದ ಆಚೆ ಬಂದ ಮೇಲೂ ಸಾನ್ಯಾ ಮತ್ತು ರೂಪೇಶ್ ಹಲವಾರು ಬಾರಿ ಭೇಟಿ ಮಾಡಿದ್ದಾರೆ. ಹಾಗಾಗಿ ಇಬ್ಬರೂ ಪ್ರೀತಿಸುತ್ತಿದ್ದಾರೆ ಎನ್ನುವ ವಿಚಾರ ಹಾಗೆಯೇ ಜನರ ಮನಸ್ಸಿನಲ್ಲಿ ಉಳಿದಿದೆ.

    ತಮ್ಮ ತಾಯಿಯನ್ನು ಅಭಿಮಾನದಿಂದ ಕಾಣುವ ಸಾನ್ಯಾ. ಅವರ ತಾಯಿಯ ಬಗ್ಗೆ ಯಾರೇ ಕೆಟ್ಟ ಕಾಮೆಂಟ್ ಮಾಡಿದರೂ ಸಹಿಸುವುದಿಲ್ಲ. ಇತ್ತೀಚಿಗೆ ದೀಪಾ ಅಯ್ಯರ್ ಅವರ (Deepa Iyer) ಹುಟ್ಟುಹಬ್ಬವಿತ್ತು. ಹಾಗಾಗಿ ಸಾನ್ಯ ಅಮ್ಮನಿಗೆ ಸರ್ಪ್ರೈಸ್ ಉಡುಗೊರೆ ನೀಡಿದ್ದರು. ದೊಡ್ಡ ಹೊಟೇಲಿಗೆ ಕರೆದೊಯ್ದು ಕೇಕ್ ಆರ್ಡರ್ ಮಾಡಿ ಅಮ್ಮನಿಂದ ಕಟ್ ಮಾಡಿಸಿದ್ದರು. ಈ ಖುಷಿಯ ಸನ್ನಿವೇಶವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ವೀಡಿಯೋ ಶೇರ್ ಆಗ್ತಿದಂತೆ ದೀಪಾ ಅವರ ಡ್ರೆಸ್‌ಗೆ ನೆಗೆಟಿವ್ ಕಾಮೆಂಟ್‌ ಹರಿದು ಬಂದಿತ್ತು.

     

    ಅಮ್ಮನ ಬಗ್ಗೆ ಕೆಟ್ಟದಾಗಿ ಕಾಮೆಂಟ್ ಮಾಡಿದವರನ್ನು ಚಳಿಬಿಡಿಸಿದ್ದರು ಸಾನ್ಯಾ. ನನ್ನ ತಾಯಿ ನನಗೆ ಹೆಮ್ಮೆ. ಮಾತನಾಡಲು ನೀವ್ಯಾರು? ಒಂದು ಸಲ ನಿಮ್ಮ ತಾಯಿಯನ್ನು ಪ್ರೀತಿಸಿ ನೋಡಿ, ಆಗ ಇಂತಹ ಕಾಮೆಂಟ್ ಗಳು ಬರಲಾರವು ಎಂದಿದ್ದರು. ಈ ಮೂಲಕ ತಾಯಿಯ ಬಗೆಗಿನ ಅಭಿಮಾನವನ್ನು ಮೆರೆದಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬಾಲಿವುಡ್ ಖ್ಯಾತ ಫೋಟೋಗ್ರಾಫರ್ ಕ್ಯಾಮೆರಾದಲ್ಲಿ ಕಂಡಂತೆ ಸಾನ್ಯಾ ಅಯ್ಯರ್

    ಬಾಲಿವುಡ್ ಖ್ಯಾತ ಫೋಟೋಗ್ರಾಫರ್ ಕ್ಯಾಮೆರಾದಲ್ಲಿ ಕಂಡಂತೆ ಸಾನ್ಯಾ ಅಯ್ಯರ್

    ಕಿರುತೆರೆಯ ಮುದ್ದಾದ ಗೊಂಬೆ ಎಂದೇ ಖ್ಯಾತರಾಗಿರುವ ಸಾನ್ಯಾ ಅಯ್ಯರ್ (Sanya Iyer), ಇತ್ತೀಚೆಗಷ್ಟೇ ಬಾಲಿವುಡ್ ನಲ್ಲಿ ಪ್ರಾಜೆಕ್ಟ್ ಮಾಡುತ್ತಿರುವುದಾಗಿ ಹೇಳಿಕೊಂಡಿದ್ದರು. ಮುಂಬೈನಲ್ಲಿ ಅದರ ಶೂಟಿಂಗ್ ಇರಲಿದೆ ಎಂದೂ ಹಂಚಿಕೊಂಡಿದ್ದರು. ಈ ಖುಷಿಯಲ್ಲೇ ಅವರು ಬಾಲಿವುಡ್ (Bollywood) ಖ್ಯಾತ ಫೋಟೋಗ್ರಾಫರ್ ಡಬೂ ರತ್ನಾನಿ (Daboo Ratnani) ಅವರಿಂದ ಫೋಟೋಶೂಟ್ (Photo Shoot) ಮಾಡಿಸಿಕೊಂಡಿದ್ದಾರೆ. ಬಿಳಿ ಬಣ್ಣದ ಕಾಸ್ಟ್ಯೂಮ್ ನಲ್ಲಿ ಥೇಟ್ ರಾಣಿಯಂತೆ ಕಂಡಿದ್ದಾರೆ.

    ಬಾಲಿವುಡ್ ನ ಖ್ಯಾತ ನಟ ನಟಿಯರ ಫೋಟೋಗಳನ್ನು ತಮ್ಮ ಕ್ಯಾಮೆರಾದಲ್ಲಿ ಸೆರೆ ಹಿಡಿದ ಶ್ರೇಯಸ್ಸು ಡಬು ರತ್ನಾನಿಗೆ ಸಲ್ಲುತ್ತದೆ. ಅಮಿತಾಭ್ ಬಚ್ಚನ್ ರಿಂದ ಹಿಡಿದು ಈ ಹೊತ್ತಿನ ಯುವ ನಟರವರೆಗೂ ಡಬು ತಮ್ಮ ಕ್ಯಾಮೆರಾದಲ್ಲಿ ಅವರನ್ನು ಸೆರೆ ಹಿಡಿದಿದ್ದಾರೆ. ಈ ಹಿಂದೆ ಕನ್ನಡದ ಹೆಸರಾಂತ ನಟ ಯಶ್ ಕೂಡ ಇವರ ಬಳಿ ಫೋಟೋಶೂಟ್ ಮಾಡಿಸಿಕೊಂಡಿದ್ದರು. ಇಂದು ಸಾನ್ಯಾ ಕೂಡ ಅವರ ಕ್ಯಾಮೆರಾದಲ್ಲಿ ಸೆರೆಯಾಗಿದ್ದಾರೆ.

    ಕೆಲವು ಘಟನೆಗಳ ನಂತರ ಸಾನ್ಯಾ ತಮ್ಮ ಬದುಕನ್ನು ನಾಜೂಕಾಗಿ ಕಟ್ಟಿಕೊಳ್ಳುತ್ತಿದ್ದಾರೆ. ಅಲ್ಲದೇ ಗ್ಲಾಮರ್ ಬಗ್ಗೆಯೂ ಅವರು ಕಾಳಜಿ ತಗೆದುಕೊಳ್ಳುತ್ತಿದ್ದಾರೆ. ಈ ಕುರಿತು ಅವರು ಮಾತನಾಡಿ, ‘ಕಂಬಳದಲ್ಲಿ ನಾನು ಕುಡಿದುಕೊಂಡು ಬಂದಿದ್ದೆ ಎಂದು ಸುಳ್ಳು ಸುದ್ದಿ ಹಬ್ಬಿಸಿದರು. ಅದು ಸುಳ್ಳು. ನಾನು ಜೀರೋ ಶುಗರ್ ಡಯೆಟ್ ಮಾಡುತ್ತಿದ್ದೇನೆ. ಮುಂಬೈನಲ್ಲಿ ಶೂಟಿಂಗ್ ಇರುವ ಕಾರಣಕ್ಕಾಗಿ ಇದೆಲ್ಲವನ್ನೂ ಮಾಡುತ್ತಿದ್ದೇನೆ. ಅಂಥದ್ದರಲ್ಲಿ ಮದ್ಯಪಾನ ಹೇಗೆ ಮಾಡಲಿ? ಜೊತೆಗೆ ನಾನು ರುದ್ರಾಕ್ಷಿಯನ್ನು ಧರಿಸಿದ್ದೇನೆ. ಇದನ್ನು ಧರಿಸಿದಾಗ ಮದ್ಯಪಾನ, ಧೂಮಪಾನ ಮಾಡಲ್ಲ. ಸುಮ್ಮನೆ ನನ್ನ ಮೇಲೆ ಆಪಾದನೆ ಹೊರಿಸಲಾಗುತ್ತಿದೆ’ ಎಂದಿದ್ದರು.

    ಈಗಾಗಲೇ ಜೀವನಲ್ಲಿ ಒಂದು ಲವ್ ಫೆಲ್ಯೂವರ್ ಕಂಡಿರುವ ಪುಟ್ಟಗೌರಿ ಖ್ಯಾತಿಯ ಸಾನ್ಯಾ ಅಯ್ಯರ್ ಮತ್ತು ರೂಪೇಶ್ ಶೆಟ್ಟಿ (Rupesh Shetty) ನಡುವೆ ಏನೋ ನಡೀತಾ ಇದೆ ಎನ್ನುವುದು ಬಿಗ್ ಬಾಸ್ ಮನೆಯಲ್ಲಿದ್ದವರ ಗುಮಾನಿಯಾಗಿತ್ತು. ಅದಕ್ಕೆ ಪುಷ್ಠಿ ಎನ್ನುವಂತೆ ಈ ಜೋಡಿ ಸದಾ ಜೊತೆಯಾಗಿಯೇ ಕ್ಯಾಮೆರಾ ಮುಂದೆ ಕಾಣಿಸಿಕೊಳ್ಳುತ್ತಿತ್ತು. ಅದಕ್ಕೂ ಅವರು ಸ್ಪಷ್ಟನೆ ನೀಡಿದ್ದಾರೆ.

    ರೂಪೇಶ್ ಮತ್ತು ತಮ್ಮ ನಡುವೆ ಅಂಥದ್ದೂ ಏನೂ ಇಲ್ಲ, ನಾವು ಜಸ್ಟ್ ಫ್ರೆಂಡ್ಸ್ ಎಂದು ಹೇಳುವ ಮೂಲಕ ತಿಳಿಗೊಳಿಸಲು ಪ್ರಯತ್ನಿಸಿದ್ದಾರೆ. ಏನೇ ಪ್ರಯತ್ನಿಸಿದರೂ, ಅವರುಗಳ ನಡೆ ಮಾತ್ರ ಹಲವು ಅನುಮಾನಗಳನ್ನು ಬಿತ್ತಿದೆ. ಬಿಗ್ ಬಾಸ್ ಮನೆಯಿಂದ ಆಚೆ ಬಂದ ಮೇಲೂ ಸಾನ್ಯಾ ಮತ್ತು ರೂಪೇಶ್ ಹಲವಾರು ಬಾರಿ ಭೇಟಿ ಮಾಡಿದ್ದಾರೆ. ಹಾಗಾಗಿ ಇಬ್ಬರೂ ಪ್ರೀತಿಸುತ್ತಿದ್ದಾರೆ ಎನ್ನುವ ವಿಚಾರ ಹಾಗೆಯೇ ಜನರ ಮನಸ್ಸಿನಲ್ಲಿ ಉಳಿದಿದೆ.

    ತಮ್ಮ ತಾಯಿಯನ್ನು ಅಭಿಮಾನದಿಂದ ಕಾಣುವ ಸಾನ್ಯಾ. ಅವರ ತಾಯಿಯ ಬಗ್ಗೆ ಯಾರೇ ಕೆಟ್ಟ ಕಾಮೆಂಟ್ ಮಾಡಿದರೂ ಸಹಿಸುವುದಿಲ್ಲ. ಇತ್ತೀಚಿಗೆ ದೀಪಾ ಅಯ್ಯರ್ ಅವರ (Deepa Iyer) ಹುಟ್ಟುಹಬ್ಬವಿತ್ತು. ಹಾಗಾಗಿ ಸಾನ್ಯ ಅಮ್ಮನಿಗೆ ಸರ್ಪ್ರೈಸ್ ಉಡುಗೊರೆ ನೀಡಿದ್ದರು. ದೊಡ್ಡ ಹೊಟೇಲಿಗೆ ಕರೆದೊಯ್ದು ಕೇಕ್ ಆರ್ಡರ್ ಮಾಡಿ ಅಮ್ಮನಿಂದ ಕಟ್ ಮಾಡಿಸಿದ್ದರು. ಈ ಖುಷಿಯ ಸನ್ನಿವೇಶವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ವೀಡಿಯೋ ಶೇರ್ ಆಗ್ತಿದಂತೆ ದೀಪಾ ಅವರ ಡ್ರೆಸ್‌ಗೆ ನೆಗೆಟಿವ್ ಕಾಮೆಂಟ್‌ ಹರಿದು ಬಂದಿತ್ತು.

    ಅಮ್ಮನ ಬಗ್ಗೆ ಕೆಟ್ಟದಾಗಿ ಕಾಮೆಂಟ್ ಮಾಡಿದವರನ್ನು ಚಳಿಬಿಡಿಸಿದ್ದರು ಸಾನ್ಯಾ. ನನ್ನ ತಾಯಿ ನನಗೆ ಹೆಮ್ಮೆ. ಮಾತನಾಡಲು ನೀವ್ಯಾರು? ಒಂದು ಸಲ ನಿಮ್ಮ ತಾಯಿಯನ್ನು ಪ್ರೀತಿಸಿ ನೋಡಿ, ಆಗ ಇಂತಹ ಕಾಮೆಂಟ್ ಗಳು ಬರಲಾರವು ಎಂದಿದ್ದರು. ಈ ಮೂಲಕ ತಾಯಿಯ ಬಗೆಗಿನ ಅಭಿಮಾನವನ್ನು ಮೆರೆದಿದ್ದರು.

  • ರೂಪೇಶ್ ಗೆ ಬಿಗ್ ಬಾಸ್ ಕೊಟ್ಟಿದ್ದು 60 ಲಕ್ಷ: ನಿಜವಾಗಿಯೂ ಅವರ ಕೈಗೆ ಬರೋದೆಷ್ಟು?

    ರೂಪೇಶ್ ಗೆ ಬಿಗ್ ಬಾಸ್ ಕೊಟ್ಟಿದ್ದು 60 ಲಕ್ಷ: ನಿಜವಾಗಿಯೂ ಅವರ ಕೈಗೆ ಬರೋದೆಷ್ಟು?

    ಬಿಗ್ ಬಾಸ್ ಸೀಸನ್ 9ರ ಟೈಟಲ್ ಗೆದ್ದಿರುವ ರೂಪೇಶ್ ಶೆಟ್ಟಿಗೆ ವಾಹಿನಿಯಿಂದ ಬಂದ ಬಹುಮಾನ ಮೊತ್ತ ಬರೋಬ್ಬರಿ 60 ಲಕ್ಷ. ಇಷ್ಟೊಂದು ಮೊತ್ತದ ಹಣವು ರೂಪೇಶ್ ಪಾಲಾಗಿದ್ದಕ್ಕೆ ಹಲವರು ಅಚ್ಚರಿ ವ್ಯಕ್ತ ಪಡಿಸಿದ್ದಾರೆ. ಈ ಪ್ರಮಾಣದ ಹಣವನ್ನು ಅವರು ಏನು ಮಾಡುತ್ತಾರೆ ಎಂದೂ ಪ್ರಶ್ನಿಸಿದ್ದಾರೆ. ಬಿಗ್ ಬಾಸ್ ವೇದಿಕೆಯ ಮೇಲೆ ಕಿಚ್ಚ ಸುದೀಪ್ 60 ಲಕ್ಷ ರೂಪಾಯಿ ಬಹುಮಾನವನ್ನು ಘೋಷಿಸಿದ್ದಾರೆ. ಆದರೆ, ಅಸಲಿಯಾಗಿ ರೂಪೇಶ್ ಕೈಗೆ ಅಷ್ಟೊಂದು ಮೊತ್ತ ಬರುವುದಿಲ್ಲ.

    ಹೌದು, ಆ ಪ್ರಮಾಣದ ಹಣವನ್ನು ಘೋಷಣೆ ಮಾಡಿದ್ದರೂ, ಅಂದಾಜು ಶೇ.30ರಷ್ಟು ತೆರಿಗೆ ಕಡಿತವಾಗಲಿದ್ದು, ಆ ನಂತರ ಅವರ ಕೈಗೆ ಅಂದಾಜು 42 ಲಕ್ಷ ರೂಪಾಯಿಯಷ್ಟು ಬರಬಹುದು. ಈ ಹಣದಲ್ಲಿ ಅವರು ಹಲವು ಯೋಜನೆಗಳನ್ನು ಹಾಕಿಕೊಂಡಿದ್ದಾರಂತೆ. ಅಲ್ಲದೇ, ಸಾಲ ಇರುವುದರಿಂದ ಸ್ವಲ್ಪ ಮೊತ್ತವನ್ನು ಸಾಲಕ್ಕಾಗಿ ಮೀಸಲಿಡಲಿದ್ದಾರೆ. ಸಿನಿಮಾ, ಸಾಲ, ದೇವರ ಹರಕೆ ಮತ್ತು ಒಂದಷ್ಟು ಸಮಾಜಸೇವೆಗೂ ಅದರಲ್ಲಿ ಮೀಸಲಾಗಿಡುವುದಾಗಿ ಅವರು ಪಬ್ಲಿಕ್ ಟಿವಿ ಡಿಜಿಟಲ್ ಜೊತೆ ಮಾತನಾಡುತ್ತಾ ಹೇಳಿದ್ದಾರೆ. ಇದನ್ನೂ ಓದಿ:ನಾನಿಲ್ಲಿ ಗೆದ್ದಿರುವಂಥದ್ದು ನಿಮ್ಮಿಂದ, ನೀವು ನನ್ನನ್ನು ಗೆಲ್ಲಿಸಿದ್ದೀರಿ: ರೂಪೇಶ್ ಶೆಟ್ಟಿ

    ರೂಪೇಶ್ ಶೆಟ್ಟಿ ಅವರಿಗೆ 60 ಲಕ್ಷ ರೂಪಾಯಿಗಳ ಬಹುಮಾನ ನೀಡಿದ್ದರೆ, ರನ್ನರ್ ಅಪ್ ಆಗಿರುವ ರಾಕೇಶ್ ಅಡಿಗಗೆ ವಾಹಿನಿಯಿಂದ ಏಳು ಲಕ್ಷ ರೂಪಾಯಿ ಹಾಗೂ ಪ್ರಾಯೋಜಕರ ಅತ್ಯುತ್ತಮ ನಾಯಕ ಬಹುಮಾನವಾಗಿ ಐದು ಲಕ್ಷ ರೂಪಾಯಿ ಒಟ್ಟು 12 ಲಕ್ಷ ರೂಪಾಯಿಯನ್ನು ಬಹುಮಾನವಾಗಿ ರಾಕೇಶ್ ಅಡಿಗ ಪಡೆದುಕೊಂಡಿದ್ದಾರೆ.

    ಈ ಸೀಸನ್ ನಲ್ಲಿ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡವರು ದೀಪಿಕಾ ದಾಸ್. ಅವರಿಗೂ ಕೂಡ ಐದು ಲಕ್ಷ ರೂಪಾಯಿಗಳನ್ನು ಬಹುಮಾನವಾಗಿ ನೀಡಲಾಗಿದೆ. ನಾಲ್ಕನೇ ಸ್ಥಾನದಲ್ಲಿದ್ದ ರೂಪೇಶ್ ರಾಜಣ್ಣ ಅವರಿಗೆ ಮೂರು ಲಕ್ಷ ರೂಪಾಯಿಗಳು ಬಹುಮಾನ ಬಂದಿದೆ. ಹೀಗೆ ಫಿನಾಲೆ ವೇದಿಕೆಯ ಮೇಲಿದ್ದ ದಿವ್ಯಾ ಉರುಡುಗ ಹೊರತುಪಡಿಸಿ ಬಹುತೇಕರಿಗೆ ಲಕ್ಷ ಲಕ್ಷ ರೂಪಾಯಿ ಬಹುಮಾನ ಬಂದಿದೆ.

    Live Tv
    [brid partner=56869869 player=32851 video=960834 autoplay=true]

  • ಬಿಗ್ ಬಾಸ್ ಟ್ರೋಫಿಯನ್ನು ರಾಕೇಶ್ ಅಡಿಗ ಗೆಲ್ಲಬೇಕಿತ್ತು: ಹೀಗೊಂದು ಅಭಿಯಾನ

    ಬಿಗ್ ಬಾಸ್ ಟ್ರೋಫಿಯನ್ನು ರಾಕೇಶ್ ಅಡಿಗ ಗೆಲ್ಲಬೇಕಿತ್ತು: ಹೀಗೊಂದು ಅಭಿಯಾನ

    ನ್ನಡದ ಬಿಗ್ ಬಾಸ್ ಸೀಸನ್ 9ರ ಟ್ರೋಫಿ ರೂಪೇಶ್ ಶೆಟ್ಟಿ ಪಾಲಾಗಿದೆ. ಆ ಟ್ರೋಫಿಯ ಜೊತೆಗೆ ಅವರು ಸಂಭ್ರಮಿಸುತ್ತಿದ್ದಾರೆ. ಆದರೆ, ಈ ಟ್ರೋಫಿ ರಾಕೇಶ್ ಅಡಿಗ ಕೈಯಲ್ಲಿ ಇರಬೇಕಿತ್ತು ಎನ್ನುವ ಅಭಿಯಾನ ಸೋಷಿಯಲ್ ಮೀಡಿಯಾದಲ್ಲಿ ಶುರುವಾಗಿದೆ. ಈ ಟ್ರೋಫಿಗೆ ರಾಕೇಶ್ ಅರ್ಹವಾದ ಸ್ಪರ್ಧಿ. ಅವರು 99 ದಿನಗಳ ಕಾಲವೂ ಮನರಂಜಿಸುತ್ತಾ, ಎಲ್ಲರೊಂದಿಗೆ ಬೆರೆಯುತ್ತಾ ಕೋಪ ಮಾಡಿಕೊಳ್ಳದೇ ಆಡಿದ್ದಾರೆ. ಹಾಗಾಗಿ ಟ್ರೋಫಿಗೆ ಅವರು ಅರ್ಹರು ಎಂದು ಸಾಕಷ್ಟು ಜನ ಪೋಸ್ಟ್ ಮಾಡುತ್ತಿದ್ದಾರೆ.

    ಹಾಗಂತ ರೂಪೇಶ್ ಶೆಟ್ಟಿ ಆಟ ಕಳಪೆಯೇನೂ ಇರಲಿಲ್ಲ. ಅವರೂ ಈ ಟ್ರೋಫಿಗೆ ಅರ್ಹರೇ ಆಗಿದ್ದಾರೆ. ಮನೆಯಲ್ಲಿ ಇದ್ದಷ್ಟು ದಿನವೂ ಒಳ್ಳೆಯ ರೀತಿಯಲ್ಲೇ ಆಟವಾಡಿದ್ದಾರೆ. ಪ್ರತಿ ಟಾಸ್ಕ್ ನಲ್ಲೂ ಉತ್ತಮ ಪ್ರದರ್ಶನ ಮಾಡಿದ್ದಾರೆ. ಆದರೆ, ರಾಕೇಶ್ ಗೆ ಇದ್ದ ತಾಳ್ಮೆ ಮತ್ತು ಜಾಣನಡೆ ರೂಪೇಶ್ ಅವರಲಿಲ್ಲ ಇರಲಿಲ್ಲ ಎನ್ನುವುದು ಕೆಲವರ ವಾದ. ಒಂದು ಕಡೆ ರಾಕೇಶ್ ಬೆಂಬಲಿಗರು ಈ ಟ್ರೋಫಿ ರಾಕೇಶ್ ಗೆ ಬರಬೇಕಿತ್ತು ಎಂದರೆ, ಇನ್ನೂ ಹಲವರು ರೂಪೇಶ್ ಗೆಲುವಲ್ಲಿ ಯಾವುದೇ ಅನುಮಾನವಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ನಾನಿಲ್ಲಿ ಗೆದ್ದಿರುವಂಥದ್ದು ನಿಮ್ಮಿಂದ, ನೀವು ನನ್ನನ್ನು ಗೆಲ್ಲಿಸಿದ್ದೀರಿ: ರೂಪೇಶ್ ಶೆಟ್ಟಿ

    ರೂಪೇಶ್ ಶೆಟ್ಟಿ ಸೂಕ್ತ ಸ್ಪರ್ಧಿ ಆಗಿದ್ದರು. ಅವರಿಗೆ ಜನರ ಬೆಂಬಲವೂ ಇತ್ತು. ಸಾಕಷ್ಟು ವೋಟುಗಳನ್ನು ಕೂಡ ಪಡೆದಿದ್ದಾರೆ. ಜನಪ್ರಿಯ ವ್ಯಕ್ತಿ ಕೂಡ ಅವರಿಗಿದ್ದಾರೆ. ಈ ಆಯ್ಕೆಯಲ್ಲಿ ಯಾವುದೇ ಮೋಸ ಅಥವಾ ಅನುಮಾನವಿಲ್ಲ ಎಂದು ರೂಪೇಶ್ ಬೆಂಬಲಿಗರು ಉತ್ತರಿಸುತ್ತಿದ್ದಾರೆ. ಈ ಪರ ಮತ್ತು ವಿರೋಧದ ಪೋಸ್ಟ್ ಗಳು ಸೋಷಿಯಲ್ ಮೀಡಿಯಾದಲ್ಲಿ ತುಂಬಿ ಹೋಗಿವೆ. ಪರಸ್ಪರರು ಪಾಸಿಟಿವ್ ಮತ್ತು ನೆಗೆಟಿವ್ ಕಾಮೆಂಟ್ ಗಳನ್ನು ಹಾಕುತ್ತಾ ವೈರಲ್ ಮಾಡುತ್ತಿದ್ದಾರೆ.

    ರೂಪೇಶ್ ಮತ್ತು ರಾಕೇಶ್ ಇಬ್ಬರೂ ಈ ಟ್ರೋಫಿಗೆ ಅರ್ಹರೇ ಆಗಿದ್ದಾರೆ. ಆದರೆ, ಟ್ರೋಫಿ ಒಬ್ಬರಿಗೆ ಸಿಗಬೇಕು. ಯಾರಿಗೆ ಟ್ರೋಫಿ ಹೋಗಬೇಕು ಎನ್ನುವುದಕ್ಕೆ ಬಿಗ್ ಬಾಸ್ ಗೆ ಅದರದ್ದೇ ಆದ ನಿಯಮಾವಳಿಗಳು ಇರುತ್ತವೆ. ಹೀಗಾಗಿ ರೂಪೇಶ್ ಕೈಯಲ್ಲಿ ಬಿಗ್ ಬಾಸ್ ಗೆಲುವಿನ ಟ್ರೋಫಿ ಇದೆ. ಚರ್ಚೆ ಕೂಡ ಮುಂದುವರೆದಿದೆ.

    Live Tv
    [brid partner=56869869 player=32851 video=960834 autoplay=true]

  • ಬಿಗ್ ಬಾಸ್ ಫಿನಾಲೆಗೆ ಬಂದವರಿಗೆ ಯಾರಿಗೆ ಎಷ್ಟು ಲಕ್ಷ ಮೊತ್ತದ ಬಹುಮಾನ?

    ಬಿಗ್ ಬಾಸ್ ಫಿನಾಲೆಗೆ ಬಂದವರಿಗೆ ಯಾರಿಗೆ ಎಷ್ಟು ಲಕ್ಷ ಮೊತ್ತದ ಬಹುಮಾನ?

    ಕನ್ನಡ ಬಿಗ್ ಬಾಸ್ (Bigg Boss) ಸೀಸನ್ 9 ನಿನ್ನೆಯಷ್ಟೇ ಫಿನಾಲೆ ಮುಗಿದಿದೆ. ಈ ಬಾರಿ ಫಿನಾಲೆ ವೇದಿಕೆಯನ್ನು ರೂಪೇಶ್ ಶೆಟ್ಟಿ, ರಾಕೇಶ್ ಅಡಿಗ, ದಿವ್ಯಾ ಉರುಡುಗ, ರೂಪೇಶ್ ರಾಜಣ್ಣ ಮತ್ತು ದೀಪಿಕಾ ದಾಸ್  ಇದ್ದರು. ಈ ಐವರಲ್ಲಿ ಯಾರ ಕೈಯಲ್ಲಿ ಬಿಗ್ ಬಾಸ್ ಟ್ರೋಫಿ ಇರಲಿದೆ ಎನ್ನುವ ಕುತೂಹಲವಂತೂ ಇತ್ತು. ಕೊನೆಗೂ ರೂಪೇಶ್ ಶೆಟ್ಟಿ ಕೈಗೆ ಬಿಗ್ ಬಾಸ್ ಸೀಸನ್ 9ರ ಟ್ರೋಫಿ ಬಂದಿದೆ. ರನ್ನರ್ ಅಪ್ ಸ್ಥಾನವು ರಾಕೇಶ್ ಅಡಿಗ ಪಾಲಾಗಿದೆ. ಉಳಿದ ಸ್ಥಾನಗಳನ್ನು ದೀಪಿಕಾ ದಾಸ್ ಮತ್ತು ರೂಪೇಶ್ ರಾಜಣ್ಣ ಪಡೆದಿದ್ದಾರೆ. ಹಾಗಾದರೆ, ಯಾರಿಗೆ ಎಷ್ಟು ಮೊತ್ತದ ಬಹುಮಾನ ಬಂದಿದೆ ಎನ್ನುವ ಕುತೂಹಲ ಎಲ್ಲರದ್ದು.

    ಸೀಸನ್ 9ರ ಟ್ರೋಫಿ ಎತ್ತಿರುವ ರೂಪೇಶ್ ಶೆಟ್ಟಿ (Rupesh Shetty) ಅವರಿಗೆ ಬರೋಬ್ಬರಿ 60 ಲಕ್ಷ ರೂಪಾಯಿಗಳ ಬಹುಮಾನ (Prize) ವನ್ನು ನೀಡಲಾಗಿದೆ. ರನ್ನರ್ ಅಪ್ ಆಗಿರುವ ರಾಕೇಶ್ ಅಡಿಗಗೆ (Rakesh Adiga) ವಾಹಿನಿಯಿಂದ ಏಳು ಲಕ್ಷ ರೂಪಾಯಿ ಹಾಗೂ ಪ್ರಾಯೋಜಕರ ಅತ್ಯುತ್ತಮ ನಾಯಕ ಬಹುಮಾನವಾಗಿ ಐದು ಲಕ್ಷ ರೂಪಾಯಿ ಒಟ್ಟು 12 ಲಕ್ಷ ರೂಪಾಯಿಯನ್ನು ಬಹುಮಾನವಾಗಿ ರಾಕೇಶ್ ಅಡಿಗ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ಅದೃಷ್ಟದಿಂದಲೇ ಇಷ್ಟು ದಿನ ಬಿಗ್ ಬಾಸ್‌ನಲ್ಲಿದ್ದರು: ದಿವ್ಯಾಗೆ ಸಂಬರ್ಗಿ ಟಾಂಗ್

    ಈ ಸೀಸನ್ ನಲ್ಲಿ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡವರು ದೀಪಿಕಾ ದಾಸ್ (Deepika Das). ಅವರಿಗೂ ಕೂಡ ಐದು ಲಕ್ಷ ರೂಪಾಯಿಗಳನ್ನು ಬಹುಮಾನವಾಗಿ ನೀಡಲಾಗಿದೆ. ನಾಲ್ಕನೇ ಸ್ಥಾನದಲ್ಲಿದ್ದ ರೂಪೇಶ್ ರಾಜಣ್ಣ ಅವರಿಗೆ ಮೂರು ಲಕ್ಷ ರೂಪಾಯಿಗಳು ಬಹುಮಾನ ಬಂದಿದೆ. ಹೀಗೆ ಫಿನಾಲೆ ವೇದಿಕೆಯ ಮೇಲಿದ್ದ ದಿವ್ಯಾ ಉರುಡುಗ ಹೊರತುಪಡಿಸಿ ಬಹುತೇಕರಿಗೆ ಲಕ್ಷ ಲಕ್ಷ ರೂಪಾಯಿ ಬಹುಮಾನ ಬಂದಿದೆ.

    Live Tv
    [brid partner=56869869 player=32851 video=960834 autoplay=true]