Tag: Rural

  • ಕಾಂಗ್ರೆಸ್‌ Vs ಬಿಜೆಪಿ – ಗ್ರಾಮೀಣ, ನಗರದ ಜನತೆ ಈ ಬಾರಿ ಯಾರ ಪರ? 2019 ರಲ್ಲಿ ಏನಾಗಿತ್ತು?

    ಕಾಂಗ್ರೆಸ್‌ Vs ಬಿಜೆಪಿ – ಗ್ರಾಮೀಣ, ನಗರದ ಜನತೆ ಈ ಬಾರಿ ಯಾರ ಪರ? 2019 ರಲ್ಲಿ ಏನಾಗಿತ್ತು?

    – 2014, 2019ರಲ್ಲಿ ಬಿಜೆಪಿ ಪರ ಒಲವು

    2014 ಮತ್ತು 2019ರ ಎರಡೂ ಲೋಕಸಭಾ ಚುನಾವಣೆಯಲ್ಲಿ (Lok Sabha Election) ನಗರ ಪ್ರದೇಶ (Urban) ಮತ್ತು ಗ್ರಾಮೀಣ (Rural) ಭಾಗದ ಜನರು ಬಿಜೆಪಿಯನ್ನು ಹೆಚ್ಚಿನ ಸಂಖ್ಯೆ ಮೆಚ್ಚಿಕೊಂಡಿದ್ದರಿಂದ ಎರಡೂ ಬಾರಿ ಎನ್‌ಡಿಎ (NDA) ಸರ್ಕಾರ ಅಧಿಕಾರಕ್ಕೆ ಏರಿದೆ.

    ಹೌದು.ಕಾಂಗ್ರೆಸ್‌ (Congress) ತನ್ನ ಚುನಾವಣಾ ಪ್ರಚಾರದಲ್ಲಿ ಬಿಜೆಪಿ (BJP) ನಗರ ಪ್ರದೇಶದ ಪಕ್ಷ. ಗ್ರಾಮೀಣ ಭಾಗದ ಜನರ ಸಮಸ್ಯೆ ಬಿಜೆಪಿ ಗೊತ್ತಿಲ್ಲ ಎಂದು ಹೇಳುತ್ತಿತ್ತು. ಆದರೆ ಈಗ ನಗರ ಪ್ರದೇಶದ ಜನರಂತೆ ಗ್ರಾಮೀಣ ಭಾಗದ ಜನರು ಬಿಜೆಪಿಯನ್ನು ಮೆಚ್ಚಿಕೊಂಡಿದ್ದರಿಂದ ಎರಡು ಬಾರಿ ಮೋದಿ ಪ್ರಧಾನಿಯಾಗಿದ್ದಾರೆ.

     

     

    2019ರಲ್ಲಿ ಏನಾಯ್ತು?
    ದೇಶದಲ್ಲಿ 202 ಗ್ರಾಮೀಣ ಕ್ಷೇತ್ರಗಳಿದ್ದರೆ 341 ನಗರ/ ಕ್ಷೇತ್ರಗಳಿವೆ. 202 ಗ್ರಾಮೀಣ ಕ್ಷೇತ್ರಗಳ ಪೈಕಿ ಬಿಜೆಪಿ 123 ರಲ್ಲಿ ಗೆದ್ದುಕೊಂಡರೆ ಕಾಂಗ್ರೆಸ್‌ ಕೇವಲ 15 ಸ್ಥಾನಗಳಲ್ಲಿ ಮಾತ್ರ ಗೆದ್ದುಕೊಂಡಿತ್ತು. ನಗರದ ಪ್ರದೇಶದ 341 ಕ್ಷೇತ್ರಗಳಲ್ಲಿ ಬಿಜೆಪಿ 180 ರಲ್ಲಿ ಗೆದ್ದುಕೊಂಡರೆ ಕಾಂಗ್ರೆಸ್‌ 37 ಕ್ಷೇತ್ರಗಳಲ್ಲಿ ಜಯಗಳಿಸಿತ್ತು. ಇದನ್ನೂ ಓದಿ: 7 ವರ್ಷಗಳಿಂದ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿತ – ಮದುವೆಗೆ ಹೊರಟಿದ್ದವರು ಗ್ರೇಟ್‌ ಎಸ್ಕೇಪ್‌!

    ರಾಜಸ್ಥಾನ, ಉತ್ತರ ಪ್ರದೇಶ, ಮಧ್ಯಪ್ರದೇಶದ ಗ್ರಾಮೀಣ ಭಾಗದಲ್ಲಿ ಬಿಜೆಪಿ ಉತ್ತಮ ಸಾಧನೆ ಮಾಡಿತ್ತು. ಬಿಹಾರದಲ್ಲಿ ಜೆಡಿಯು ಹೆಚ್ಚಿನ ಸ್ಥಾನ ಗೆದ್ದರೂ ನಂತರ ಎನ್‌ಡಿಎ ಒಕ್ಕೂಟದಿಂದ ಹೊರ ಬಂದಿತ್ತು.

    ಗುಜರಾತ್‌, ರಾಜಸ್ಥಾನ, ಹರ್ಯಾಣ, ದೆಹಲಿಯ ಎಲ್ಲ ನಗರ ಕ್ಷೇತ್ರಗಳನ್ನು ಬಿಜೆಪಿ ಗೆದ್ದುಕೊಂಡಿತ್ತು. ಆದರೆ ಆಂಧ್ರಪ್ರದೇಶ, ಕೇರಳ, ತಮಿಳುನಾಡಿನಲ್ಲಿ ಬಿಜೆಪಿ ಒಂದೇ ಒಂದು ನಗರ ಕ್ಷೇತ್ರಗಳನ್ನು ಗೆದ್ದುಕೊಂಡಿಲ್ಲ. ಆದರೆ ಕರ್ನಾಟಕದಲ್ಲಿ 25 ಮತ್ತು ತೆಲಂಗಾಣದಲ್ಲಿ ಉತ್ತಮ ಸಾಧನೆ ಮಾಡಿದ ಕಾರಣ ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಗೆದ್ದುಕೊಂಡಿತ್ತು. ಇದನ್ನೂ ಓದಿ: ಕೇಜ್ರಿವಾಲ್‌, ಕೆ.ಕವಿತಾಗೆ ಜೈಲೇ ಗತಿ – ನ್ಯಾಯಾಂಗ ಬಂಧನ ಮತ್ತೆ 14 ದಿನ ವಿಸ್ತರಣೆ

    ಗ್ರಾಮೀಣ ಕ್ಷೇತ್ರದಲ್ಲಿ ಯಾರ ಸಾಧನೆ ಎಷ್ಟು?
    ಒಟ್ಟು ಸ್ಥಾನಗಳು -202
    ಬಿಜೆಪಿ -123
    ಕಾಂಗ್ರೆಸ್‌ – 15
    ಜೆಡಿಯು -15
    ಬಿಜೆಡಿ -10
    ಎಲ್‌ಜೆಪಿ – 6
    ಬಿಎಸ್‌ಪಿ -6
    ಟಿಎಂಸಿ – 5
    ಇತರರು – 22

    ನಗರ ಪ್ರದೇಶದಲ್ಲಿ ಯಾರ ಸಾಧನೆ ಎಷ್ಟು?
    ಒಟ್ಟು ಸ್ಥಾನಗಳು 341
    ಬಿಜೆಪಿ – 180
    ಕಾಂಗ್ರೆಸ್‌ – 37
    ಡಿಎಂಕೆ – 23
    ವೈಎಸ್‌ಆರ್‌ಸಿಪಿ – 20
    ಟಿಎಂಸಿ – 17
    ಶಿವಸೇನಾ -17
    ಇತರರು – 47

    ಗ್ರಾಮಿಣ ಭಾಗದಲ್ಲಿ ಬಿಜೆಪಿ ಯಶಸ್ವಿಯಾಗಿದ್ದು ಹೇಗೆ?
    ಶೌಚಾಲಯ, ಎಲ್‌ಪಿಜಿ ಸಬ್ಸಿಡಿ, ಬಡವರಿಗೆ ಮನೆ, ರೈತರಿಗೆ ಕೃಷಿ ಸಮ್ಮಾನ್‌ ಯೋಜನೆ, ಮನೆ ಮನೆಗೆ ನಲ್ಲಿ ನೀರು, ಉಚಿತ ಅಕ್ಕಿ ಇತ್ಯಾದಿ ಯೋಜನೆಗಳಿಂದಾಗಿ ಬಿಜೆಪಿ 2019ರಲ್ಲಿ ಗ್ರಾಮೀಣ ಭಾಗದಲ್ಲೂ ಬಿಜೆಪಿ ಕಮಾಲ್‌ ಮಾಡಿತ್ತು.

    ಲೋಕಸಭಾ ಚುನಾವಣೆ ಈಗಾಗಲೇ ಆರಂಭವಾಗಿದ್ದು ಈ ಬಾರಿ ನಗರ ಮತ್ತು ಗ್ರಾಮೀಣ ಭಾಗದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ಎಷ್ಟು ಸ್ಥಾನ ಗೆಲ್ಲಬಹುದು ಎಂಬ ಕುತೂಹಲ ಹೆಚ್ಚಾಗಿದೆ.

  • ಹೊಸಕೋಟೆ ಸಮೀಪ ಸರಣಿ ಅಪಘಾತ – ಸ್ಥಳದಲ್ಲೇ ಯುವತಿ ದಾರುಣ ಸಾವು!

    ಹೊಸಕೋಟೆ ಸಮೀಪ ಸರಣಿ ಅಪಘಾತ – ಸ್ಥಳದಲ್ಲೇ ಯುವತಿ ದಾರುಣ ಸಾವು!

    ಬೆಂಗಳೂರು: ಭೀಕರ ಸರಣಿ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ದಾರುಣ ಸಾವಿಗೀಡಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಸಮೀಪ ನಡೆದಿದೆ.

    ರಾಷ್ಟ್ರೀಯ ಹೆದ್ದಾರಿ-75ರ ಹೊಸಕೋಟೆ ಪೊಲೀಸ್ ಠಾಣೆಯ ಕೋರ್ಟ್ ಸರ್ಕಲ್ ಬಳಿ ಕ್ಯಾಂಟರ್, ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ. ಈ ವೇಳೆ ಕ್ಯಾಂಟರ್ ಡಿಕ್ಕಿಯಾಗಿ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಮೃತ ಯುವತಿಯನ್ನು ಬನ್ನೇರುಘಟ್ಟ ಮೂಲದ ಸುಧಾ (20) ಎಂದು ಗುರುತಿಸಲಾಗಿದೆ.

    ಕೋರ್ಟ್ ವೃತ್ತದ ಬಳಿ ತಾಯಿಮಗಳಿಬ್ಬರು ರಸ್ತೆ ದಾಟುತ್ತಿದ್ದ ವೇಳೆ ಡಿಕ್ಕಿ ಹೊಡೆದ ಕ್ಯಾಂಟರ್ ಬಳಿಕ ಯುವತಿ ಮೇಲೆಯೇ ಹರಿದಿದೆ. ನಂತರ ಕೆಎಸ್‌ಆರ್‌ಟಿಸಿ ಬಸ್‌ಗೆ ಹಿಂಬದಿಯಿಂದ ಡಿಕ್ಕಿಯೊಡೆದಿದೆ. ಸದ್ಯ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

    ಕ್ಯಾಂಟರ್ ಚಾಲಕ ಕೋಲ್ಕತ್ತಾ ಮೂಲದ ಷರೀಫ್‌ ಉಲ್ಲಾ (30), ಮುಳಬಾಗಿಲಿನ ಬೈಕ್ ಸವಾರ ನಜೀರ್ ಖಾನ್ (65) ಗಂಭೀರವಾಗಿ ಗಾಯಗೊಂಡಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಹುಳುಕುಗಳು ಶ್ವೇತಪತ್ರದಲ್ಲಿ ಬಯಲು; ಯುಪಿಎ ಅವಧಿ ಕಿಕ್‌ಬ್ಯಾಕ್, ಹಗರಣಗಳ ಕಾಲ: ಅಶ್ವಥ್ ನಾರಾಯಣ್

    ಯುವತಿಯ ಮೃತದೇಹವನ್ನು ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಹೊಸಕೋಟೆ ಸಿಲಿಕಾನ್ ಸಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಹೊಸಕೋಟೆ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮಂಗನ ಕಾಯಿಲೆಗೆ ಹೊಸ ವ್ಯಾಕ್ಸಿನ್ ತಯಾರಿಸಲು ಐಸಿಎಂಆರ್ ಒಪ್ಪಿಗೆ ಸೂಚಿಸಿದೆ: ದಿನೇಶ್ ಗುಂಡೂರಾವ್

  • ಎರಡು ದಿನಗಳಲ್ಲಿ 20ಕ್ಕೂ ಹೆಚ್ಚು ಮನೆಗಳ್ಳತನ – ಆತಂಕದಲ್ಲಿ ಗಡಿಭಾಗದ ಜನರು

    ಎರಡು ದಿನಗಳಲ್ಲಿ 20ಕ್ಕೂ ಹೆಚ್ಚು ಮನೆಗಳ್ಳತನ – ಆತಂಕದಲ್ಲಿ ಗಡಿಭಾಗದ ಜನರು

    ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಗಡಿಯಲ್ಲಿರುವ ಕಾಗವಾಡ ತಾಲೂಕಿನ ಐನಾಪೂರ ಹಾಗೂ ಮೋಳೆ ಗ್ರಾಮದಲ್ಲಿ ಸುಮಾರು 20ಕ್ಕೂ ಹೆಚ್ಚು ಮನೆಗಳಲ್ಲಿ ಕಳ್ಳತನವಾಗಿದ್ದು, ಇದರಿಂದ ಗ್ರಾಮೀಣ ಭಾಗದಲ್ಲಿ ಭಯದ ವಾತಾವರಣ ಉಂಟಾಗಿದೆ.

    ಕಳೆದ ಎರಡು ದಿನಗಳ ಹಿಂದೆ ಐನಾಪುರ ಪಟ್ಟಣದ ಹೃದಯಭಾಗದಲ್ಲಿರುವ 13 ಮನೆಗಳ ಬೀಗ ಮುರಿದು ಏಕಕಾಲಕ್ಕೆ ಕಳ್ಳತನ ಮಾಡಿ ಮನೆಯಲ್ಲಿದ್ದ ಚಿನ್ನಾಭರಣ, ಬೆಳ್ಳಿ, ನಗದು ಹಣ ಹೀಗೆ ಲಕ್ಷಾಂತರ ರೂ. ಮೌಲ್ಯದ ಬೆಲೆಬಾಳುವ ಆಭರಣ ಹಾಗೂ ನಗದು ಕಳ್ಳತನ ನಡೆದಿದೆ. ಮನೆಯಲ್ಲಿ ಯಾರು ಇಲ್ಲದ ಸಮಯವನ್ನು ನೋಡಿಕೊಂಡು ಈ ಕೃತ್ಯ ಮಾಡಲಾಗಿದೆ. ಇದನ್ನೂ ಓದಿ: ಸಿಖ್, ಬೌದ್ಧರಂತೆ ಲಿಂಗಾಯತಕ್ಕೂ ಪ್ರತ್ಯೇಕ ಧರ್ಮದ ಸ್ಥಾನಮಾನ ನೀಡಬೇಕು: ಎಸ್.ಎಂ.ಜಾಮದಾರ

    ಸಿದ್ದು ದಶರಥ ಜಾಧವ ಅವರ ಮನೆಯಲ್ಲಿ 7 ಗ್ರಾಂ ಚಿನ್ನಾಭರಣ, 10 ಗ್ರಾಂ ಬೆಳ್ಳಿ ಆಭರಣ ಮತ್ತು 20 ಸಾವಿರ ನಗದು, ಬಸಪ್ಪ ವಡಿಯರ ಮನೆಯಿಂದ 12 ಗ್ರಾಂ ಚಿನ್ನಾಭರಣ, 10 ಗ್ರಾಂ ಬೆಳ್ಳಿಯ ಆಭರಣ, 10 ಸಾವಿರ ನಗದು ಸೇರಿದಂತೆ 13 ಮನೆಗಳ ಬೀಗ ಮುರಿದು ಖದೀಮರು ಕಳ್ಳತನ ಮಾಡಿದ ಘಟನೆ ವರದಿಯಾಗಿದೆ.

    ಇಂದು ನಸುಕಿನ ಜಾವ ಮೋಳೆ ಗ್ರಾಮದಲ್ಲಿ ಐದಕ್ಕೂ ಹೆಚ್ಚು ಮನೆ ಕಳ್ಳತನವಾಗಿದೆ. ಮೋಳೆ ಗ್ರಾಮದ ಸೇವಂತ ರೂಪ ಅವರ ಮನೆಯಲ್ಲಿ 12 ಗ್ರಾಂ ಬಂಗಾರ, ಅರ್ಧ ಕೆಜಿ ಬೆಳ್ಳಿ ಹಾಗೂ 5,000 ನಗದು ಹಣ ಕಳ್ಳತನವಾಗಿದೆ. ಕಳ್ಳತನ ನಡೆದ ಸ್ಥಳಕ್ಕೆ ಅಥಣಿ ಡಿವೈಎಸ್‍ಪಿ ಎಸ್.ವಿ.ಗಿರೀಶ್, ಸಿಪಿಐ ಶಂಕರಗೌಡ ಪಾಟೀಲ್ ಹಾಗೂ ಅಥಣಿ ಪಿಐಬಿಎಂ ರಬಕವಿ ಭೇಟಿ ನೀಡಿ ಪರಶೀಲಿಸಿದ್ದು, ಮನೆಯವರಿಂದ ಕಳ್ಳತನ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.

    ಗಡಿಭಾಗದಲ್ಲಿ ಹೀಗೆ ಕಳ್ಳರು ತಮ್ಮ ಕೈಚಳಕ ತೊರಿಸುತ್ತಿದ್ದು, ಈ ಕಳ್ಳರ ಗ್ಯಾಂಗ್ ದೊಡ್ಡ ಪ್ರಮಾಣದಲ್ಲಿದೆ. ಇದರಿಂದ ಗ್ರಾಮೀಣ ಭಾಗದಲ್ಲಿ ಜನರು ರಾತ್ರಿ ಹೊತ್ತು ಸಂಚರಿಸಲು ಭಯಗೊಳ್ಳುತ್ತಿದ್ದಾರೆ. ಈ ಕಳ್ಳರ ಗ್ಯಾಂಗ್ ಅನ್ನು ಪೊಲೀಸ್ ಇಲಾಖೆ ಆದಷ್ಟು ಬೇಗ ಬಂಧಿಸಬೇಕಿದೆ. ಇದನ್ನೂ ಓದಿ: ಲೂಟಿಗೊಳಗಾದ ವೃದ್ಧನ ರಕ್ಷಣೆಗೆ ನಿಂತ ಹಿರಿಯ ಪೊಲೀಸ್ ಅಧಿಕಾರಿ

  • ಗ್ರಾಮೀಣ ಭಾಗದಲ್ಲಿ ಬಿಜೆಪಿ ಕಮಾಲ್: ನಗರ, ಗ್ರಾಮೀಣದಲ್ಲಿ ಯಾರು ಎಷ್ಟು ಸ್ಥಾನ ಗೆದ್ದಿದ್ದಾರೆ?

    ಗ್ರಾಮೀಣ ಭಾಗದಲ್ಲಿ ಬಿಜೆಪಿ ಕಮಾಲ್: ನಗರ, ಗ್ರಾಮೀಣದಲ್ಲಿ ಯಾರು ಎಷ್ಟು ಸ್ಥಾನ ಗೆದ್ದಿದ್ದಾರೆ?

    ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಈ ಭಾರತೀಯ ಜನತಾ ಪಕ್ಷ ಕೇವಲ ನಗರದ ಪ್ರದೇಶದಲ್ಲಿ ಹೆಚ್ಚಿನ ಸ್ಥಾನಗಳಿಸುವುದರ ಜೊತೆಗೆ ಗ್ರಾಮೀಣ ಭಾಗದಲ್ಲೂ ತನ್ನ ಸಾಮರ್ಥ್ಯವನ್ನು ವೃದ್ಧಿಸಿದೆ.

    ಬಿಜೆಪಿಯನ್ನು ನಗರದ ಜನತೆ ಜಾಸ್ತಿ ಬೆಂಬಲಿಸಿದರೆ, ಗ್ರಾಮೀಣ ಭಾಗದ ಜನತೆ ಕಾಂಗ್ರೆಸ್ ಬೆಂಬಲಿಸುತ್ತಾರೆ ಎನ್ನುವ ಮಾತಿದೆ. ಗುಜರಾತ್ ಚುನಾವಣೆಯಲ್ಲಿ ಇದು ಸಾಬೀತಾಗಿತ್ತು. ಹೀಗಾಗಿ ಈ ಬಾರಿ ಗ್ರಾಮೀಣ ಭಾಗದಲ್ಲಿ ಹೆಚ್ಚು ಮತದಾನವಾಗಿರುವ ಕಾರಣ ಕಾಂಗ್ರೆಸ್ ಹೆಚ್ಚಿನ ಸ್ಥಾನ ಗೆಲ್ಲಬಹುದು ಎನ್ನುವ ಲೆಕ್ಕಾಚಾರವನ್ನು ರಾಜಕೀಯ ಪಂಡಿತರು ಮುಂದಿಟ್ಟಿದ್ದರು. ಆದರೆ ಈ ಲೆಕ್ಕಾಚಾರ ತಲೆಕೆಳಗಾಗಿದ್ದು ಗ್ರಾಮೀಣ ಭಾಗದಲ್ಲೂ ಬಿಜೆಪಿ ಕಳೆದ ಬಾರಿಗಿಂತ ಹೆಚ್ಚು ಸ್ಥಾನವನ್ನು ಗೆದ್ದುಕೊಂಡಿದೆ.

    ಈ ಬಾರಿ ಎಷ್ಟು ಏರಿಕೆಯಾಗಿದೆ?
    ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಗ್ರಾಮೀಣ ಭಾಗದಲ್ಲಿ 82, ನಗರದಲ್ಲಿ 40 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಆದರೆ ಈ ಬಾರಿ ಗ್ರಾಮೀಣ ಭಾಗದಲ್ಲಿ 51 ಸ್ಥಾನ, ನಗರಗಳಲ್ಲಿ 27 ಸ್ಥಾನಗಳನ್ನು ಗೆದ್ದುಕೊಂಡಿದೆ.

    2013ರಲ್ಲಿ ಗ್ರಾಮೀಣದಲ್ಲಿ 22, ನಗರದಲ್ಲಿ 18 ಸ್ಥಾನ ಗೆದ್ದಿದ್ದ ಬಿಜೆಪಿ, ಈ ಬಾರಿ ಗ್ರಾಮೀಣ ಭಾಗದಲ್ಲಿ ಗೆದ್ದ ಸ್ಥಾನಗಳ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿದೆ. ಗ್ರಾಮೀಣ ಭಾಗದಲ್ಲಿ 69, ನಗರದಲ್ಲಿ 35 ಸ್ಥಾನಗಳನ್ನು ಬುಟ್ಟಿಗೆ ಹಾಕಿಕೊಂಡಿದೆ.

    ಜನತಾ ದಳ ಸ್ಥಾನದ ಪ್ರಮಾಣದಲ್ಲಿ ನಿಖರತೆಯನ್ನು ಮುಂದುವರೆಸಿದ್ದು, 2013 ರಲ್ಲಿ ಗ್ರಾಮೀಣದಲ್ಲಿ 30, ನಗರದಲ್ಲಿ 10 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಈ ಬಾರಿ ಗ್ರಾಮೀಣ ಭಾಗದಲ್ಲಿ 2 ಕ್ಷೇತ್ರ ಕಳೆದುಕೊಂಡು 28 ಸ್ಥಾನ ಗೆದ್ದರೆ, ನಗರ ಭಾಗದಲ್ಲಿ ಒಟ್ಟು 9 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.

    ಈ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಬಿಜೆಪಿ ಗೆದ್ದರೂ ಶೇಖಡವಾರು ಮತಗಳಿಕೆಯ ಪ್ರಮಾಣದಲ್ಲಿ ಕಾಂಗ್ರೆಸ್ ಮುಂದಿದೆ. 2013 ರಲ್ಲಿ ಕಾಂಗ್ರೆಸ್ 36.6% ಮತ ಪಡೆದಿದ್ದರೆ, ಈ ಬಾರಿ 38% ಮತ ಪ್ರಮಾಣ ಪಡೆದಿದೆ. ಬಿಜೆಪಿ 2013 ರಲ್ಲಿ ಕೇವಲ 19.9% ಮತಗಳನ್ನು ಪಡೆದಿದ್ದರೆ, ಈ ಬಾರಿ 36.2% ರಷ್ಟು ಮತ ಪಡೆದಿದೆ. ಉಳಿದಂತೆ ಜೆಡಿಎಸ್ 2013ರಲ್ಲಿ 20.2% ಮತ ಪಡೆದಿದ್ದರೆ, ಈ ಬಾರಿ 18.4% ರಷ್ಟು ಮತ ಪಡೆಯುವಲ್ಲಿ ಯಶಸ್ವಿಯಾಗಿದೆ.