Tag: Rural Area

  • ಗ್ರಾಮೀಣ ಪ್ರದೇಶದ ಬಡ SSLC ಟಾಪರ್ಸ್‍ಗೆ ಚಿನ್ನದ ಉಂಗುರ ಕೊಟ್ಟ ನಾಟಿ ವೈದ್ಯ

    ಗ್ರಾಮೀಣ ಪ್ರದೇಶದ ಬಡ SSLC ಟಾಪರ್ಸ್‍ಗೆ ಚಿನ್ನದ ಉಂಗುರ ಕೊಟ್ಟ ನಾಟಿ ವೈದ್ಯ

    ನೆಲಮಂಗಲ: ಗ್ರಾಮೀಣ ಭಾಗದ ಶಾಲೆಯ ಬಡ ಮಕ್ಕಳಿಗೆ ವಿದ್ಯಾಭ್ಯಾಸ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ತಂದೆ-ತಾಯಿ ಹೆಸರಲ್ಲಿ ವಿದ್ಯಾರ್ಥಿಗಳಿಗೆ ನಾಟಿ ವೈದ್ಯ ರವಿಕುಮಾರ್‌ ಚಿನ್ನದ ಉಂಗುರ ಕೊಟ್ಟಿದ್ದಾರೆ.

    ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿ ಸರ್ಕಾರಿ ಪ್ರೌಢಶಾಲೆ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಟಾಪರ್ಸ್ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಮೂರು ವಿದ್ಯಾರ್ಥಿಗಳಿಗೆ ಚಿನ್ನದ ಉಂಗುರಗಳನ್ನು ಪ್ರತಿಭಾ ಪುರಸ್ಕಾರವಾಗಿ ನೀಡಲಾಯಿತು. ಭಟ್ಟರಹಳ್ಳಿ ಗ್ರಾಮದ ನಾಟಿ ವೈದ್ಯ ಗಂಗಣ್ಣ ಅವರು ನಿರ್ಮಿಸಿ ಸರ್ಕಾರಕ್ಕೆ ಬಿಟ್ಟುಕೊಟ್ಟ ಸೋಲದೇವನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರತಿ ವರ್ಷವು ಒಬ್ಬ ವಿದ್ಯಾರ್ಥಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿತ್ತು. ಇದನ್ನೂ ಓದಿ:  ಬೆಂಗಳೂರು ವಿಶ್ವವಿದ್ಯಾಲಯಕ್ಕೆ ನೂತನ ಕುಲಪತಿಗಳ ನೇಮಕ 

    ಕಳೆದ ಎರಡು ವರ್ಷಗಳ ಕಾಲ ಕೋವಿಡ್ ಕಾರಣ ಕಾರ್ಯಕ್ರಮ ಮುಂದೂಡಿದ್ದು, ಈಗ ಮೂರು ಸಾಲಿನ ಒಬ್ಬೊಬ್ಬ ವಿದ್ಯಾರ್ಥಿಗೆ ಚಿನ್ನದ ಉಂಗುರ ನೀಡಿದ ರವಿಕುಮಾರ್ ತನ್ನ ತಂದೆ-ತಾಯಿಯ ಕೆಲಸವನ್ನು ಮುಂದುವರಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ನೆಲಮಂಗಲ ಕ್ಷೇತ್ರ ಶಿಕ್ಷಣಾಧಿಕಾರಿ ತಿಮ್ಮಯ್ಯ ಸೇರಿದಂತೆ ಶಾಲೆಯ ಉಪನ್ಯಾಸಕ ವೃಂದ ಹಾಗೂ ಗ್ರಾಮ ಪಂಚಾಯಿತಿ ಸ್ಥಳೀಯ ಮುಖಂಡರು ಭಾಗಿಯಾಗಿದ್ದರು.

  • ಗ್ರಾಮೀಣ ಭಾಗಕ್ಕೂ ವಕ್ಕರಿಸಿದ ಕೊರೊನಾ ಮಹಾಮಾರಿ

    ಗ್ರಾಮೀಣ ಭಾಗಕ್ಕೂ ವಕ್ಕರಿಸಿದ ಕೊರೊನಾ ಮಹಾಮಾರಿ

    ಬೆಳಗಾವಿ/ಚಿಕ್ಕೋಡಿ: ಮಹಾಮಾರಿ ಕೊರೊನಾ ವೈರಸ್ ಗ್ರಾಮೀಣ ಭಾಗಕ್ಕೂ ವಕ್ಕರಿಸಿದೆ. ಜಿಲ್ಲೆಯ ಕಾಗವಾಡ ತಾಲೂಕಿನ ಮೊಳವಾಡ, ಹುಕ್ಕೇರಿ ತಾಲೂಕಿನ ದೊಂಡಗಟ್ಟಿ ಹಾಗೂ ಮೊದಗಾ ಗ್ರಾಮದವರಲ್ಲಿ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ.

    ಮೊಳವಾಡ ಗ್ರಾಮದ ಇಬ್ಬರು ಮಹಿಳೆಯರು ಮತ್ತು ಒಬ್ಬ ಪುರುಷರಲ್ಲಿ ಕೊರೊನಾ ಕಾಣಿಸಿಕೊಂಡಿದೆ. ಹುಕ್ಕೇರಿ ಇಬ್ಬರಲ್ಲಿ ಕೊರೊನಾ ಪಾಸಿಟಿವ್ ಬಂದಿದೆ. ದೊಂಡಗಟ್ಟಿ ಹಾಗೂ ಮೊದಗಾ ಗ್ರಾಮದ ತಲಾ ಒಬ್ಬ ಮಹಿಳೆಯಲ್ಲಿ ಸೋಂಕು ದೃಢಪಟ್ಟಿದೆ.

    ಲಾಕ್‍ಡೌನ್‍ಗೂ ಮುನ್ನವೇ ಮೊಳವಾಡ ಗ್ರಾಮದ 15 ಜನರ ತಂಡ ಉತ್ತರ ಭಾರತದ ಜೈನ್ ದೇವಸ್ಥಾನಗಳಿಗೆ ಪ್ರವಾಸಕ್ಕೆ ತೆರಳಿದ್ದರು. ಲಾಕ್‍ಡೌನ್ ಸಡಿಲಿಕೆ ಬಳಿಕ ಗ್ರಾಮಕ್ಕೆ ವಾಪಸ್ಸಾಗಿದ್ದು, ಗ್ರಾಮಕ್ಕೆ ಬರುತ್ತಿದ್ದಂತೆ ಯಾತ್ರಾರ್ಥಿಗಳನ್ನ ಶಿರಗುಪ್ಪಿ ಗ್ರಾಮದ ಸರ್ಕಾರಿ ಹಾಸ್ಟೆಲ್ ನಲ್ಲಿ ಕ್ವಾರಂಟೈನ್ ಮಾಡಲಾಗಿತ್ತು.

    ಇನ್ನೂ ಮುಂಬೈ ನಗರದಿಂದ ಹುಕ್ಕೇರಿ ತಾಲೂಕಿನ ಮೊದಗಾ ಹಾಗೂ ದೊಂಡಗಟ್ಟಿಯ ಗ್ರಾಮಕ್ಕೆ ವಾಪಸ್ಸಾಗಿದ್ದ ಮಹಿಳೆಯರನ್ನ ಸರ್ಕಾರಿ ಶಾಲೆಯಲ್ಲಿ ಕ್ವಾರಂಟೈನ್ ಮಾಡಲಾಗಿತ್ತು.

  • ಗ್ರಾಮೀಣ ಭಾಗದ ಕ್ಯಾನ್ಸರ್ ರೋಗಿಗಳಿಗೆ ಪಿಂಕ್ ವೆಹಿಕಲ್ ಬಿಡುಗಡೆಗೆ ಚಿಂತನೆ

    ಗ್ರಾಮೀಣ ಭಾಗದ ಕ್ಯಾನ್ಸರ್ ರೋಗಿಗಳಿಗೆ ಪಿಂಕ್ ವೆಹಿಕಲ್ ಬಿಡುಗಡೆಗೆ ಚಿಂತನೆ

    – ಬಜೆಟ್‍ನಲ್ಲಿ ಆರೋಗ್ಯ ಇಲಾಖೆಯಡಿ ಘೋಷಿಸುವ ಸಾಧ್ಯತೆ

    ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವರಾಗಿದ್ದ ಶ್ರೀರಾಮುಲು ಅವರ ಕನಸಿನ ಕೂಸು 108 ಆರೋಗ್ಯ ಕವಚ ವಾಹನ ಸೌಲಭ್ಯ ಜಾರಿಗೆ ತಂದಿದ್ದು ಈಗ ಇತಿಹಾಸ. 108 ವಾಹನ ಶ್ರೀರಾಮುಲುಗೆ ಜನಪ್ರಿಯತೆಯ ಜೊತೆಗೆ ಒಳ್ಳೆಯ ಹೆಸರನ್ನು ತಂದುಕೊಟ್ಟಿತ್ತು.

    ಈಗ ಅಂತಹದ್ದೇ ಜನಪ್ರಿಯತೆಯನ್ನು ನೀಡಬಲ್ಲ ಮತ್ತೊಂದು ವಾಹನವನ್ನು ಆರೋಗ್ಯ ಸಚಿವ ಶ್ರೀರಾಮುಲು ಈ ಸರ್ಕಾರದಲ್ಲಿ ಬಿಡಲು ಹೊರಟಿದ್ದಾರೆ. ‘ಪಿಂಕ್ ಬಸ್’ ಹೆಸರಿನ ಮೊಬೈಲ್ ವಾಹನವನ್ನು ಗ್ರಾಮೀಣ ಭಾಗದ ಜನರಿಗಾಗಿ ಆರೋಗ್ಯ ಇಲಾಖೆಯಡಿ ಈ ಬಾರಿಯ ಬಜೆಟ್‍ನಲ್ಲಿ ಘೋಷಿಸಲಾಗುತ್ತಿದೆ ಎನ್ನಲಾಗುತ್ತಿದೆ.

    2008 ರ ನವಂಬರ್ 01 ರಂದು ಜಾರಿಯಾದ ‘108 ಆರೋಗ್ಯ ಕವಚ’ ಸೇವೆಯು ರಾಜ್ಯದ ಗ್ರಾಮೀಣ ಮತ್ತು ನಗರ ಪ್ರದೇಶದ ಜನರಿಗೆ ಸಮಗ್ರ ತುರ್ತು ಚಿಕಿತ್ಸೆ ಸೇವೆಯನ್ನು ನೀಡುವ ಸಲುವಾಗಿ ಕಾರ್ಯನಿರ್ವಹಿಸುತ್ತಿದೆ. ಆದರೆ ಪಿಂಕ್ ಬಸ್ ವಿಶೇಷವಾಗಿ ಗ್ರಾಮೀಣ ಭಾಗದ ಕ್ಯಾನ್ಸರ್ ರೋಗಿಗಳಿಗಾಗಿ ಜಾರಿಗೊಳಿಸಲಾಗುತ್ತಿದೆ. ಈ ಪಿಂಕ್ ಸಂಚಾರಿ ಬಸ್ ಕ್ಯಾನ್ಸರ್ ತಪಾಸಣೆಯ ಪ್ರಯೋಗಾಲಯ ಹೊಂದಿರುತ್ತದೆ. ಸುಮಾರು 4-5 ಸಿಬ್ಬಂದಿ ಕೆಲಸ ನಿರ್ವಹಿಸಲಿದ್ದಾರೆ.

    ಮಹಿಳೆಯರಲ್ಲಿ ಇತ್ತೀಚೆಗೆ ಸಾಮಾನ್ಯವಾಗಿ ಕಾಣಸಿಗುತ್ತಿರುವ ಸ್ತನ ಮತ್ತು ಗರ್ಭಕೋಶ ಕ್ಯಾನ್ಸರ್ ಸೇರಿದಂತೆ ಎಲ್ಲಾ ರೀತಿಯ ಕ್ಯಾನ್ಸರ್ ಪರೀಕ್ಷೆ ಪಿಂಕ್ ಪ್ರಯೋಗಾಲಯದಲ್ಲಿ ನಡೆಯಲಿದೆ. ಮೆಮೋಗ್ರಫಿ ಪರೀಕ್ಷೆಗಳನ್ನು ಮಾಡಿಸಲು ದೂರದ ಗ್ರಾಮೀಣ ರೋಗಿಗಳು ಜಿಲ್ಲಾ ಕೇಂದ್ರ ಆಸ್ಪತ್ರೆಗಳಿಗೆ ಹೋಗುವುದು ಪಿಂಕ್ ವಾಹನದಿಂದ ತಪ್ಪಲಿದೆ. ಪಿಂಕ್ ವಾಹನದ ರೂಪುರೇಷೆ ಹೇಗಿರಲಿದೆ ಯೋಜನೆಗೆ ತಗಲುವ ವೆಚ್ಚ ಸೇರಿದಂತೆ ಇನ್ನಷ್ಟು ವಿವರಗಳು ಬಜೆಟ್‍ನಲ್ಲಿ ಹೊರಬೀಳಲಿದೆ.