ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಮಂಡಿಸಿದ ಬಜೆಟ್‌ನಲ್ಲಿ, ಗ್ರಾಮೀಣ ಆರ್ಥಿಕತೆಗೆ ವೇಗವರ್ಧಕವಾಗಿ ಭಾರತೀಯ ಅಂಚೆ ಸೇವೆಗಳು (Indian Postal Service) ಕಾರ್ಯನಿರ್ವಹಿಸಲಿವೆ ಎಂದು ತಿಳಿಸಿದ್ದಾರೆ.
ಗ್ರಾಮೀಣಾಭಿವೃದ್ಧಿಗಾಗಿ ಭಾರತೀಯ ಅಂಚೆ ಸೇವೆಗಳನ್ನು ವಿಸ್ತರಿಸಲಾಗುವುದು. ಇದರಿಂದ ಸೂಕ್ಷ್ಮ ಉದ್ಯಮಗಳಿಗೆ ಡಿಬಿಟಿ, ಕ್ರೆಡಿಟ್ ಸೇವೆಗಳು, ವಿಮೆ ಸೇರಿದಂತೆ ಇತರ ಸೇವೆಗಳು ಲಭ್ಯವಾಗುತ್ತವೆ. ವಿಶ್ವಕರ್ಮರು, ಮಹಿಳೆಯರು, ಸ್ವಸಹಾಯ ಗುಂಪುಗಳು, ಎಂಎಸ್ಎಂಇಗಳು ಇತ್ಯಾದಿ ವಿವಿಧ ಕ್ಷೇತ್ರಗಳಲ್ಲಿ ಹೆಚ್ಚುತ್ತಿರುವ ಅಗತ್ಯಗಳನ್ನು ಪೂರೈಸಲು ಭಾರತೀಯ ಅಂಚೆ ಸೇವೆ ದೊಡ್ಡ ಸಾರ್ವಜನಿಕ ಲಾಜಿಸ್ಟಿಕ್ಸ್ ಸಂಸ್ಥೆಯಾಗಿ ಪರಿವರ್ತಿಸಲಾಗುವುದು ಎಂದು ಹೇಳಿದರು.ಇದನ್ನೂ ಓದಿ: ಇದು ಜನಸಾಮಾನ್ಯರ ಬಜೆಟ್.. ಉಳಿತಾಯ, ಹೂಡಿಕೆಗೆ ಉತ್ತೇಜನ: ಮೋದಿ ಬಣ್ಣನೆ
ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆ.01 ರಂದು ಸಂಸತ್ತಿನಲ್ಲಿ 2025-26ರ ಬಜೆಟ್ ಅನ್ನು ಮಂಡಿಸುತ್ತಾ, 1.5 ಲಕ್ಷ ಗ್ರಾಮೀಣ ಅಂಚೆ ಕಚೇರಿಗಳನ್ನು ಹೊಂದಿರುವ ಭಾರತೀಯ ಅಂಚೆಯನ್ನು ಇಂಡಿಯಾ ಪೋಸ್ಟ್ ಪಾವತಿ ಬ್ಯಾಂಕ್ ಮತ್ತು 2.4 ಲಕ್ಷ ಅಂಚೆ ಸೇವಕರ ವಿಶಾಲ ಪೂರಕ ಸಂಪರ್ಕ ಜಾಲವನ್ನು ಗ್ರಾಮೀಣ ಆರ್ಥಿಕತೆಗೆ ವೇಗವರ್ಧಕವಾಗಿ ಕಾರ್ಯನಿರ್ವಹಿಸಲು ಮರುಸ್ಥಾಪಿಸಲಾಗುವುದು ಎಂದರು.
ಭಾರತ ಅಂಚೆಯ ನೂತನ ವಿಸ್ತೃತ ಸೇವೆಗಳ ವ್ಯಾಪ್ತಿಯು ಈ ಕೆಳಗಿನವುಗಳನ್ನು ಒಳಗೊಂಡಿರುತ್ತದೆ ಎಂದು ಬಜೆಟ್‌ನಲ್ಲಿ ಪ್ರಸ್ತಾಪಿಸಿದರು.
1) ಗ್ರಾಮೀಣ ಸಮುದಾಯ ಕೇಂದ್ರ ಸಹ-ಸ್ಥಳ
2) ಸಾಂಸ್ಥಿಕ ಖಾತೆ ಸೇವೆಗಳು
3) ಡಿ.ಬಿ.ಟಿ., ನಗದು ಪಾವತಿ ಮತ್ತು ಇ.ಎಂ.ಐ ಸ್ವೀಕಾರ
4) ಸೂಕ್ಷ್ಮ ಉದ್ಯಮಗಳಿಗೆ ಕ್ರೆಡಿಟ್ ಸೇವೆಗಳು
5) ವಿಮೆ
6) ನೆರವಿನ ಡಿಜಿಟಲ್ ಸೇವೆಗಳು.
ಭಾರತ ಅಂಚೆಯನ್ನು ದೊಡ್ಡ ಸಾರ್ವಜನಿಕ ಸಾಗಣೆ (ಲಾಜಿಸ್ಟಿಕ್ಸ್) ಸಂಸ್ಥೆಯಾಗಿ ಪರಿವರ್ತಿಸಲಾಗುವುದು. ಇದು ವಿಶ್ವಕರ್ಮರು, ನವೋದ್ಯಮಿಗಳು, ಮಹಿಳೆಯರು, ಸ್ವಸಹಾಯ ಗುಂಪುಗಳು, ಎಂಎಸ್ಎಂಇಗಳು ಮತ್ತು ದೊಡ್ಡ ವ್ಯಾಪಾರ ಸಂಸ್ಥೆಗಳು ಮುಂತಾದ ವಿವಿಧ ಕ್ಷೇತ್ರಗಳಲ್ಲಿ ಹೆಚ್ಚುತ್ತಿರುವ ಅಗತ್ಯಗಳನ್ನು ಪೂರೈಸುತ್ತದೆ. ಗ್ರಾಮೀಣ ಪ್ರದೇಶಗಳಲ್ಲಿ ಭಾರತ ಅಂಚೆ ಪಾವತಿ ಬ್ಯಾಂಕ್‌ನ ಸೇವೆಗಳನ್ನು ಇನ್ನೂ ಉತ್ತಮಗೊಳಿಸಲಾಗುವುದು ಹಾಗೂ ಆಳಗೊಳಿಸಲಾಗುವುದು ಮತ್ತು ವಿಸ್ತರಿಸಲಾಗುವುದು ಎಂದರು.ಇದನ್ನೂ ಓದಿ: Budget 2025| ಕಿತ್ತಾಟ ನಡೆಸಿದ್ರೂ ಮಾಲ್ಡೀವ್ಸ್‌ಗೆ ಅನುದಾನ ಹೆಚ್ಚಳ,ಬಾಂಗ್ಲಾಗೂ ಸಹಾಯ- ಯಾವ ದೇಶಕ್ಕೆ ಎಷ್ಟು ಕೋಟಿ?
ಬೆಂಗಳೂರು: ಗ್ರಾಮೀಣ ಜನರಲ್ಲಿ ಹಾಗೂ ವಿದ್ಯಾರ್ಥಿ ಸಮೂಹದಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸ ಮೂಡಿಸಬೇಕು ಎಂದು ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೊಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಹೇಳಿದರು.
ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಷಿಪ್ ಕಾರ್ಯಕ್ರಮದಡಿ ಆಯ್ಕೆಗೊಂಡು, ಕಲ್ಯಾಣ ಕರ್ನಾಟಕ ಪ್ರದೇಶದ ವಿವಿಧ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 44 ಮಂದಿ ಫೆಲೊಗಳೊಂದಿಗೆ ಏರ್ಪಡಿಸಲಾಗಿದ್ದ ವಿಚಾರ ವಿನಿಮಯ ಕಾರ್ಯಕ್ರಮದಲ್ಲಿ ಸಚಿವರು ಜ.24ರಂದು ಬೆಂಗಳೂರಿನ ವಿಕಾಸಸೌಧದಲ್ಲಿ ಮಾತನಾಡಿದರು. ಇದನ್ನೂ ಓದಿ: ಗೋಹತ್ಯೆ ಮಾಡಿ ಹೊಟ್ಟೆಯಲ್ಲಿದ್ದ ಕರುವಿನ ಮಾಂಸ ಕೊಂಡೊಯ್ದಿದ್ದ ಪಾಪಿ ಅರೆಸ್ಟ್
ಆರ್ಥಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದಿರುವ ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿಯ ದೃಷ್ಟಿಯಿಂದ ಫೆಲೊಗಳು ಸೇತುವೆಗಳಂತೆ ಕಾರ್ಯನಿರ್ವಹಿಸಬೇಕು. ಈ ಪ್ರದೇಶದ ಅಭಿವೃದ್ಧಿಗಾಗಿ ಸರ್ಕಾರ ರಚಿಸಿರುವ ಗೋವಿಂದರಾವ್ ಸಮಿತಿಗೆ ಪೂರಕ ಅಂಕಿ ಅಂಶಗಳ ದತ್ತಾಂಶಗಳನ್ನು ನೀಡುವ ದೃಷ್ಟಿಯಲ್ಲಿಯೂ ಫೆಲೊಗಳು ಕಾರ್ಯಪ್ರವೃತ್ತರಾಗಬೇಕೆಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು. ಇದನ್ನೂ ಓದಿ: ಶಾಸಕ ಇಕ್ಬಾಲ್ ಹುಸೇನ್ ವಿರುದ್ಧ ಭೂಕಬಳಿಕೆ ಆರೋಪ – ಗ್ರಾಮಸ್ಥರಿಂದ ದಾಖಲೆ ಬಿಡುಗಡೆ
ಗ್ರಾಮ ಪಂಚಾಯತಿಗಳ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಜೊತೆ ನಿಕಟ ಸಂಪರ್ಕ ಇರಿಸಿಕೊಂಡು ಗ್ರಾಮ ಪಂಚಾಯತಿಗಳಲ್ಲಿ ಇರುವ ನ್ಯೂನತೆಗಳನ್ನು ಸರಿಪಡಿಸಲು ವರದಿಯನ್ನು ಸಿದ್ಧಪಡಿಸಿ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಬೇಕು. ಆ ಮೂಲಕ ಗ್ರಾಮ ಪಂಚಾಯತಿಗಳ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದು ಸಚಿವರು ಫೆಲೊಗಳಿಗೆ ಸೂಚಿಸಿದರು. ಇದನ್ನೂ ಓದಿ: ನಾಲ್ವರು ಇಸ್ರೇಲ್ ಮಹಿಳಾ ಸೈನಿಕರನ್ನು ಬಿಡುಗಡೆ ಮಾಡಿದ ಹಮಾಸ್ ಉಗ್ರರು
ರಾಜೀವ್ ಗಾಂಧಿ ಗ್ರಾಮೀಣಾಭಿವೃದ್ಧಿ ಫೆಲೊಷಿಪ್ ಕಾರ್ಯಕ್ರಮದಡಿ 2024ರ ಜೂನ್ ತಿಂಗಳಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ 44 ಮಂದಿ ಫೆಲೊಗಳನ್ನು ಆಯ್ಕೆ ಮಾಡಿ ಕಲ್ಯಾಣ ಕರ್ನಾಟಕ ಭಾಗದ ವಿವಿಧ ತಾಲೂಕುಗಳಿಗೆ ನಿಯೋಜಿಸಲಾಗಿದೆ. ಸ್ಥಳೀಯ ಆಡಳಿತವನ್ನು ಬಲಪಡಿಸಲು ಫೆಲೊಗಳು ವಿವಿಧ ಚಟುವಟಿಕೆಗಳಲ್ಲಿ ನಿರತರಾಗಿದ್ದಾರೆ. ಇದನ್ನೂ ಓದಿ: ಬಡ್ಡಿ ಹಣಕ್ಕೆ ಮನಬಂದಂತೆ ಹಲ್ಲೆ – ಬೆತ್ತಲೆಗೊಳಿಸಿ ಚಿತ್ರಹಿಂಸೆ
ಕಲ್ಯಾಣ ಕರ್ನಾಟಕ ಭಾಗದ ವಿವಿಧ ತಾಲೂಕುಗಳಿಗೆ ನಿಯೋಜನೆಗೊಂಡಿರುವ ಫೆಲೊಗಳು ಕಳೆದ ಐದು ತಿಂಗಳಲ್ಲಿ ಮಾಡಿರುವ ಕಾರ್ಯಚಟುವಟಿಕೆಗಳನ್ನು ಸಭೆಯಲ್ಲಿ ಸಚಿವರ ಗಮನಕ್ಕೆ ತರಲಾಯಿತು. 62 ಪುಸ್ತಕ ಗೂಡುಗಳ ಆರಂಭ, 39 ಅರಿವು ಕೇಂದ್ರಗಳ ಪುನರಾರಂಭ, ವೃತ್ತಪತ್ರಿಕೆಗಳೊಂದಿಗೆ 56 ಅರಿವು ಕೇಂದ್ರಗಳ ಆರಂಭ, 116 ಕೂಸಿನಮನೆ ಪುನರಾರಂಭ, 66 ಕೂಸಿನ ಮನೆಗಳ ಮೂಲಭೂತ ಸೌಲಭ್ಯ ಸುಧಾರಣೆ, 95 ಕೂಸಿನ ಮನೆಗಳ ನಿರ್ವಹಣೆಯಲ್ಲಿ ಸುಧಾರಣೆ, 86 ಕೂಸಿನಮನೆಗಳಲ್ಲಿ ಪೌಷ್ಠಿಕ ಆಹಾರ ವಿತರಣೆಗೆ ಚಾಲನೆ, 61 ಗ್ರಾಮ ಪಂಚಾಯತಿಗಳಲ್ಲಿ ತ್ಯಾಜ್ಯ ಸಂಗ್ರಹ, ವಿಂಗಡಣೆ ಹಾಗೂ ವಿಲೇವಾರಿಗೆ ಚಾಲನೆ, 197 ಗ್ರಾಮ ಪಂಚಾಯತಿಗಳ ಸರ್ವ ಸದಸ್ಯರ ಸಭೆ ಏರ್ಪಾಟು, 104 ಗ್ರಾಮ ಪಂಚಾಯತಿಗಳ ಸಭಾ ನಡಾವಳಿ ಪಿ2.0 ತಂತ್ರಾಂಶದಲ್ಲಿ ಅಳವಡಿಕೆ, 508 ಗ್ರಾಮ ಪಂಚಾಯತಿಗಳಲ್ಲಿ ಉಪ-ಸಮಿತಿಗಳ ರಚನೆ ಮುಂತಾದ ಸುಧಾರಣ ಕಾರ್ಯ ಫೆಲೊಗಳು ಸಾಧ್ಯ ಮಾಡಿರುವುದನ್ನು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು. ಇದನ್ನೂ ಓದಿ: ಮೀಟರ್ ಬಡ್ಡಿ ದಂಧೆಕೋರರ ಟಾರ್ಚರ್ – ಯುವಕ ನೇಣಿಗೆ ಶರಣು
ಬೆಂಗಳೂರು: ರಾಜ್ಯದ ಕೃಷಿ (Agriculture) ಕ್ಷೇತ್ರದ ಬಲವರ್ಧನೆ ಹಾಗೂ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಪೂರಕವಾಗಿ ಬೇಕಾಗಿರುವ ವಿವಿಧ ಸಹಾಯ ಮತ್ತು ಆರ್ಥಿಕ ಸಹಕಾರವನ್ನು ಶೀಘ್ರ ಒದಗಿಸುವಂತೆ ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ (N Chaluvarayaswamy) ಕೇಂದ್ರದ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದು, ನೆರವಿನ ಭರವಸೆಯನ್ನೂ ಸಹ ಪಡೆದಿದ್ದಾರೆ.
Held a detailed meeting with Shri @ChouhanShivraj avaru, Union Minister of Agriculture and Farmers Welfare & Minister of Rural Development, on Policy Interventions & Financial Assistance for Karnataka in Agriculture, Watershed Development, and in transforming University of… pic.twitter.com/LQf0U7alG9
ಬೆಂಗಳೂರಿನ (Bengaluru) ಕುಮಾರಕೃಪಾ ಅತಿಥಿ ಗೃಹದಲ್ಲಿ ಕಂದಾಯ ಸಚಿವರಾದ ಕೃಷ್ಣಭೈರೇಗೌಡ, ಗ್ರಾಮೀಣಾಭಿವೃದ್ಧಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರೊಂದಿಗೆ ಕೇಂದ್ರ ಕೃಷಿ, ರೈತ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರು, ಶಿವರಾಜ್ ಸಿಂಗ್ ಚೌಹಾಣ್ (Shivraj Singh Chouhan) ಅವರನ್ನು ಭೇಟಿ ಮಾಡಿ, ಮನವಿ ಅರ್ಪಿಸಿ ಚಲುವರಾಯಸ್ವಾಮಿರವರು ರಾಜ್ಯದ ಬೇಡಿಕೆಗಳನ್ನು ಮಂಡಿಸಿದರು. ಇದನ್ನೂ ಓದಿ: ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೋಲ್ಕತ್ತಾ ಟ್ರೈನಿ ವೈದ್ಯೆ ರೇಪ್ ಕೇಸ್ – ಸಂಜಯ್ ರಾಯ್ ದೋಷಿ
ರಾಜ್ಯದಲ್ಲಿ ಕೃಷಿ ಇಲಾಖೆ ಶೇ.99 ರಷ್ಟು ಆರ್ಥಿಕ ಹಾಗೂ ಭೌತಿಕ ಗುರಿ ಸಾಧನೆ ಮಾಡಿದ್ದು, ಕೇಂದ್ರ ಪುರಸ್ಕೃತ ಯೋಜನೆಗಳಲ್ಲೂ ಶೇ.124ರಷ್ಟು ಅನುದಾನ ಬಳಸಿಕೊಂಡಿದೆ. ಈ ಹಿನ್ನಲೆಯಲ್ಲಿ ಈ ಬಾರಿಯೂ ಇದೇ ರೀತಿ ಹಣಕಾಸಿನ ನೆರವು ಒದಗಿಸಬೇಕೆಂದು ಸಚಿವರು ಕೋರಿದರು. ಕೇಂದ್ರ ಕೃಷಿ ಸಚಿವರು ಇದಕ್ಕೆ ಮುಕ್ತ ಮನಸ್ಸಿನ ಸಮ್ಮತಿ ಸೂಚಿಸಿದರು.
ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಿಂದ ರೈತರಿಗೆ ಕೃಷಿ ಯಾಂತ್ರಿಕರಣಕ್ಕೆ ಹೆಚ್ಚಿನ ಅನುಕೂಲವಾಗುತ್ತಿದ್ದು, ಈ ಭಾರಿ ಇನ್ನಷ್ಟು ಅಧಿಕ ಆರ್ಥಿಕ ನೆರವು ಒದಗಿಸುವಂತೆ ಮನವಿ ಮಾಡಿದ ಅವರು ಆನೇಕಲ್ ತಾಲ್ಲೂಕಿನ, ಕಾಚನಾಯಕನಹಳ್ಳಿ ಗ್ರಾಮದಲ್ಲಿ ಗುರುತಿಸಲಾಗಿರುವ 20 ಎಕರೆ ಪ್ರದೇಶದಲ್ಲಿ ಫೆಸ್ಟಿಸೈಡ್ಸ್ ಫಾರ್ಮುಲೇಷನ್ ಟೆಕ್ನಾಲಜಿ ಸಂಸ್ಥೆ ಪ್ರಾರಂಭಕ್ಕೆ ಅನುಮೋದನೆ ಒದಗಿಸುವಂತೆ ಕೋರಿದರು. ಇದನ್ನೂ ಓದಿ: ಕಾಂಗ್ರೆಸ್ ಪಕ್ಷದ ಅಪ್ಪಂದಿರ ಮನೆಯಿಂದ ಈ ಸರ್ಕಾರ ಅನುದಾನ ಕೊಡ್ತಿಲ್ಲ – ಪ್ರಿಯಾಂಕ್ ಖರ್ಗೆ ವಿರುದ್ಧ ಅಶೋಕ್ ಕಿಡಿ
ಸಾವಯವ, ಸಿರಿಧಾನ್ಯ ಉತ್ಪಾದನೆ ಹಾಗೂ ಮೌಲ್ಯವರ್ಧಿತ ಉತ್ಪನ್ನಗಳ ತಯಾರಿ ಮತ್ತು ಮಾರಾಟದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದ್ದು ಇದನ್ನು ಇನ್ನಷ್ಟು ಉತ್ತಮಪಡಿಸಲು ಕೇಂದ್ರ ಸರ್ಕಾರದ ನೆರವು ಮತ್ತು ಪ್ರೋತ್ಸಾಹದ ಅಗತ್ಯವಿದೆ ಎಂದಿರುವ ಅವರು ಜ.23 ರಿಂದ 25ರ ವರೆಗೆ ನಗರದ ಅರಮನೆ ಮೈದಾನದಲ್ಲಿ ಅಂತಾರಾಷ್ಟ್ರೀಯ ಸಾವಯವ ಸಿರಿಧಾನ್ಯ ಮೇಳದಲ್ಲಿ ಭಾಗವಹಿಸುವಂತೆ ಶಿವರಾಜ್ ಸಿಂಗ್ ಚೌಹಾಣ್ ರನ್ನ ಅಹ್ವಾನಿಸಿದರು.
ಹಿಂಗಾರು ಜೋಳಕ್ಕೆ ನೀಡಲಾಗುತ್ತಿರುವ ಬೆಂಬಲ ಬೆಲೆ ಸೌಲಭ್ಯವನ್ನು ಮುಂಗಾರಿನಿಂದಲೇ ಅನುಷ್ಠಾನಗೊಳಿಸಲು ನಿರ್ದೇಶನ ನೀಡಬೇಕು. ರಾಗಿ, ಜೋಳದಂತೆ ಇತರೆ ಸಿರಿಧಾನ್ಯಗಳನ್ನ (ತೃಣ ಧಾನ್ಯಗಳು) ಕನಿಷ್ಠ ಬೆಂಬಲ ಬೆಲೆ ಯೋಜನೆ ವ್ಯಾಪ್ತಿಗೆ ಸೇರ್ಪಡೆಗೊಳಿಸಬೇಕೆಂದು ಚಲುವರಾಯಸ್ವಾಮಿ ಅವರು ಕೇಂದ್ರ ಕೃಷಿ ಸಚಿವರಿಗೆ ಮನವಿ ಮಾಡಿದರು.
ಗುಣಮಟ್ಟ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಹಾಲಿ ಇರುವ ವಿವಿಧ ಕಾಯ್ದೆಗಳಿಗೆ ತಿದ್ದುಪಡಿ ತರುವುದು, ಬೀಜ ಕಾಯ್ದೆಯಡಿ ದಂಡ ಮತ್ತು ಪರವಾನಿಗೆ ಶುಲ್ಕ ಹೆಚ್ಚಳ ಕುರಿತು ರಾಷ್ಟ್ರೀಯ ಆಹಾರ ಸುರಕ್ಷತಾ ಕಾಯ್ದೆ ಪಿಎಂಕೆಎಸ್‌ವೈ – ಪಿಡಿಎಂಸಿ ವ್ಯವಸ್ಥೆಗಳ ಸುಧಾರಣೆಗಳ ಬಗ್ಗೆ ಚಲುವರಾಯಸ್ವಾಮಿರವರು ಕೇಂದ್ರ ಸಚಿವರ ಗಮನ ಸೆಳೆದರು.
ಅಲ್ಲದೇ ಜಲಾನಯನ ಅಭಿವೃದ್ಧಿ ಇಲಾಖೆಯ ವ್ಯಾಪ್ತಿಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದ್ದು, ಈಗಾಗಲೇ ವಿಶ್ವಬ್ಯಾಂಕ್ ನೆರವಿನೊಂದಿಗೆ 567.98 ರೂ. ಕೋಟಿಗಳ ವೆಚ್ಚದಲ್ಲಿ ಯೋಜನೆ ಜಾರಿಗೊಳಿಸಿದೆ. ರಾಜ್ಯದಲ್ಲಿ ಇನ್ನೂ 59.69 ಹೆಕ್ಟೇರ್ ಪ್ರದೇಶವನ್ನು ಜಲಾನಯನ ಅಭಿವೃದ್ಧಿ ಯೋಜನೆಯ ವ್ಯಾಪ್ತಿಗೆ ಸೇರಿಸಬೇಕಾಗಿದ್ದು, ಹೊಸದಾಗಿ 92 ಯೋಜನೆಗಳ ಅನುಮೋದನೆಗಾಗಿ ಪ್ರಸ್ತಾವನೆ ಸಲ್ಲಿಸಿದ್ದು, ಅನುಮೋದನೆ ಮತ್ತು ಅನುದಾನ ಒದಗಿಸುವಂತೆ ಮನವಿ ಮಾಡಿದರು. ಇದನ್ನೂ ಓದಿ: 60 ಜನ ಕಾಂಗ್ರೆಸ್‌ನವರು ನಮ್ಮೊಟ್ಟಿಗೆ ಬರಲು ರೆಡಿಯಾಗಿದ್ದರು – ಯತ್ನಾಳ್ ಬಾಂಬ್
ಕರ್ನಾಟಕದ ಕೃಷಿ ಸಚಿವರು, ಕಂದಾಯ ಸಚಿವರು ಮತ್ತು ಗ್ರಾಮೀಣಾಭಿವೃದ್ಧಿ ಸಚಿವರ ಅಭಿಪ್ರಾಯ, ಮನವಿಗಳನ್ನು ಸ್ವೀಕರಿಸಿ ಚರ್ಚೆ ನಡೆಸಿದ ನಂತರ ಮಾತನಾಡಿದ ಕೇಂದ್ರ ಕೃಷಿ, ರೈತ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರು ಶಿವರಾಜ್ ಸಿಂಗ್ ಚೌಹಾಣ್ ಅವರು ರಾಜ್ಯದ ಅಭಿವೃಧ್ಧಿಯ ದೃಷ್ಟಿಯಿಂದ ಒಟ್ಟಾಗಿ ಕಾರ್ಯನಿರ್ವಹಿಸೋಣ, ರಾಜ್ಯಕ್ಕೆ ಬೇಕಾದ ಎಲ್ಲಾ ರೀತಿಯ ನೆರವನ್ನು ಒದಗಿಸಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ತಿಳಿಸಿದರು.
ಆರ್ಥಿಕ ವರ್ಷ ಕೊನೆಯಾಗುತ್ತಿದ್ದು, ಒದಗಿಸುವ ಅನುದಾನವನ್ನು ಸಂಪೂರ್ಣವಾಗಿ ವೆಚ್ಚ ಮಾಡಿ ಹಣ ಸದ್ಭಳಕೆ ಪ್ರಮಾಣ ಪತ್ರವನ್ನು ನೀಡಿದ ಕೂಡಲೇ ಕೃಷಿ ಹಾಗೂ ಇತರೆ ಇಲಾಖೆಗಳಿಗೆ ಹೆಚ್ಚುವರಿ ಅನುದಾನ ಒದಗಿಸಲಾಗುವುದು ಆತ್ಮ ಯೋಜನೆಯಡಿ ಅಗತ್ಯ ಪ್ರಮಾಣದ ಸಿಬ್ಬಂದಿಯನ್ನು ಸಹ ಒದಗಿಸಲಾಗುವುದು ಎಂದು ಶಿವರಾಜ್ ಸಿಂಗ್ ಚೌಹಾಣ್ ಅವರು ಹೇಳಿದರು.
ಲೋಕಸಭಾ ಸದಸ್ಯರಾದ ಬಿ.ವೈ.ರಾಘವೇಂದ್ರ ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳೂ ಸಹ ಈ ಸಭೆಯಲ್ಲಿ ಭಾಗವಹಿಸಿದ್ದರು.
ರಾಯಚೂರು: ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮದ ಹಿನ್ನೆಲೆ ಲಿಂಗಸುಗೂರು ತಾಲೂಕಿನ ಕಳ್ಳಿಲಿಂಗಸುಗೂರಿನಲ್ಲಿ ಇಂದು ಅಪರ ಜಿಲ್ಲಾಧಿಕಾರಿಯಾದ ದುರುಗೇಶ್ ಗ್ರಾಮ ವಾಸ್ತವ್ಯ ಮಾಡುತ್ತಿರುವುದರಿಂದ ಗ್ರಾಮಸ್ಥರು ಅಧಿಕಾರಿಗಳಿಗೆ ಭರ್ಜರಿ ಸ್ವಾಗತ ಕೋರಿದ್ದಾರೆ.
ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಕುಂಭ, ಕಳಸ, ಡೊಳ್ಳು ಸಹಿತ ಮೆರವಣಿಗೆ ಮೂಲಕ ಅಧಿಕಾರಿಗಳನ್ನು ಗ್ರಾಮಕ್ಕೆ ಬರಮಾಡಿಕೊಂಡಿದ್ದಾರೆ. ಸಾರ್ವಜನಿಕರಿಂದ ಎಡಿಸಿ ದುರಗೇಶ್ ಅಹವಾಲು ಸ್ವೀಕರಿಸುತ್ತಿದ್ದಾರೆ. ಅರ್ಜಿಗಳಿಗೆ ಸ್ಥಳದಲ್ಲೇ ಪರಿಹಾರ ಸಿಗುವ ಭರವಸೆಯಲ್ಲಿ ಗ್ರಾಮಸ್ಥರು ತಮ್ಮ ಸಮಸ್ಯೆಗಳನ್ನ ಅಧಿಕಾರಿಗಳ ಮುಂದೆ ತೋಡಿಕೊಳ್ಳುತ್ತಿದ್ದಾರೆ.
ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮ ಕಳ್ಳಿಲಿಂಗಸೂಗೂರಿನ ನಾಗಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ನಡೆಯುತ್ತಿದೆ. ಅಪರ ಜಿಲ್ಲಾಧಿಕಾರಿ ದುರುಗೇಶ್ ಜೊತೆಯಲ್ಲಿ ಸಹಾಯಕ ಆಯುಕ್ತ ರಾಜಶೇಖರ ಡಂಬಳ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಅಹವಾಲು ಸ್ವೀಕರಿಸುವ ಜೊತೆ ಸರ್ಕಾರಿ ಕಾರ್ಯಕ್ರಮಗಳು ಹಾಗೂ ಸೌಲಭ್ಯಗಳ ಸದ್ಬಳಕೆ ಬಗ್ಗೆ ಅಧಿಕಾರಿಗಳು ಗ್ರಾಮಸ್ಥರಿಗೆ ಅರಿವು ಮೂಡಿಸಲಿದ್ದಾರೆ.
ಬೆಂಗಳೂರು: ಸಿಎಂ ಸಿದ್ದರಾಮಯ್ಯನವರು ಗ್ರಾಮೀಣಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಒಟ್ಟು 14,061 ಕೋಟಿ ರೂ. ಅನುದಾನವನ್ನು ಪ್ರಕಟಿಸಿದ್ದಾರೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ – 14,061 ಕೋಟಿ
– ನಮ್ಮ ಗ್ರಾಮ ನಮ್ಮ ಯೋಜನೆಗೆ – 20 ಕೋಟಿ ಅನುದಾನ
– ಗ್ರಾಮೀಣಾ ನೀರು ಪುರೈಕೆಗೆ – 2,200 ಕೋಟಿ
– 2500 ಶುದ್ಧ ನೀರು ಘಟಕೆ ಸ್ಥಾಪನೆ
– ಬಯಲು ಬಹಿರ್ದಸೆ ಮುಕ್ತಾವಾಗಿಸಲು – 1585 ಕೋಟಿ
– ಗ್ರಾಮೀಣ ರಸ್ತೆ ನಿರ್ವಹಣ ನೀತಿ ಜಾರಿ
– 100 ಕೋಟಿ ವೆಚ್ಚದಲ್ಲಿ ನಮ್ಮ ಹೊಲ ನಮ್ಮ ದಾರಿ ಯೋಜನೆ
– ಮುಖ್ಯಮಂತ್ರಿಗಳ ಗ್ರಾಮ ವಿಕಾಸ ಯೋಜನೆಯಡಿ 1 ಸಾವಿರ ಗ್ರಾಮಗಳ ಸರ್ವತೋಮುಖ ಅಭಿವೃದ್ಧಿ
– 1765 ಕೋಟಿ ವೆಚ್ಚದಲ್ಲಿ ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆ
– ಜಿಲ್ಲಾ ಪಂ. ಅಬೀವೃದ್ಧಿ ಅನುದಾನ 4 ಕೊಟಿಗೆ ಹೆಚ್ಚಳ
– ಗ್ರಾಮ, ತಾಲೂಕು, ಜಿ.ಪಂ ಸದಸ್ಯರ ಗೌರವ ಧನ ಹೆಚ್ಚಳ
– ಜಿಲ್ಲಾ ಪಂ. ಸದಸ್ಯರಿಗೆ 5 ಸಾವಿರ ಗೌರವಧನ, ತಾ. ಅಧ್ಯಕ್ಷರಿಗೆ 6 ಸಾವಿರ, ಉಪಾಧ್ಯಕ್ಷರಿಗೆ 4 ಸಾವಿರ, ತಾ.ಪಂ. ಸದಸ್ಯರಿಗೆ 3 ಸಾವಿರ, ಗ್ರಾ.ಪಂ. ಅಧ್ಯಕ್ಷರಿಗೆ 3,ಉಪಾಧ್ಯಕ್ಷರಿಗೆ 2 ಸಾವಿರ, ಸದಸ್ಯರಿಗೆ 1 ಸಾವಿರ ಗೌರವಧನ
– 3 ಕೋಟಿ ವೆಚ್ಚದಲ್ಲಿ ಒಂದು ಮಾದರಿ ಪರಾಂಪರಿಕ ಗ್ರಾಮ ಸ್ಥಾಪನೆ
————–
ಯೋಜನೆ ಮತ್ತು ಪ್ರದೇಶ ಅಭಿವೃದ್ಧಿ – 1828 ಕೋಟಿ
– ಶಾಸಕರ ಕ್ಷೇತ್ರಾಭಿವೃದ್ಧಿ ಕಾರ್ಯಕ್ರಮಗಳಿಗೆ 600 ಕೋಟಿ
– ನಕ್ಸಲ್ ಬಾದಿತ 9 ತಾಲೂಕುಗಳಿಗೆ ವಿಶೇಷ ಅನುದಾನ
– ಅಭಿವೃದ್ಧಿ ಕಾಮಗಾರಿಗಳಿಗಾಗಿ 2.25 ಕೋಟಿ
– ಪ್ರಾದೇಶಿಕ ಅಸಮತೋಲನ ತಗ್ಗಿಸಲು – 3 ಸಾವಿರ ಕೋಟಿ
– ಮಲೆನಾಡು ಅಭಿವೃದ್ಧಿ ಮಂಡಳಿಗೆ 60 ಕೋಟಿ, ಬಯಲು ಸೀಮೆ-50, ಕರಾವಳಿ ಪ್ರದೇಶ-20 ಕೋಟಿ
– ಹೈ-ಕ ಪ್ರದೇಶ ಅಭಿವೃದ್ಧಿಗೆ 1500 ಕೋಟಿ