Tag: Rural Karnataka Band

  • ಜನವರಿ 8ಕ್ಕೆ ಗ್ರಾಮೀಣ ಕರ್ನಾಟಕ ಬಂದ್

    ಜನವರಿ 8ಕ್ಕೆ ಗ್ರಾಮೀಣ ಕರ್ನಾಟಕ ಬಂದ್

    ಶಿವಮೊಗ್ಗ: ಜನವರಿ 8ಕ್ಕೆ ಅಖಿಲ ಭಾರತ ರೈತ ಸಂಘರ್ಷ ಸಮಿತಿ ದೇಶದಾದ್ಯಂತ ಗ್ರಾಮೀಣ ಕರ್ನಾಟಕ ಬಂದ್ ಗೆ ಕರೆ ಕೊಟ್ಟಿದೆ.

    ನಗರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೈತ ಸಂಘದ ಗೌರವಾಧ್ಯಕ್ಷ ಎಚ್.ಆರ್.ಬಸವರಾಜಪ್ಪ, ಸುಮಾರು 200ಕ್ಕೂ ಹೆಚ್ಚು ರೈತ ಸಂಘಟನೆಗಳು ಒಳಗೊಂಡು ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ರಚನೆಯಾಗಿದೆ. ರೈತರ ಹಲವು ಬೇಡಿಕೆ ಈಡೇರಿಸಲು ಆಗ್ರಹಿಸಿ ಜ.8 ರಂದು ಅಖಿಲ ಭಾರತ ರೈತ ಸಂಘರ್ಷ ಸಮಿತಿಯಿಂದ ಗ್ರಾಮೀಣ ಕರ್ನಾಟಕ ಬಂದ್ ನಡೆಯಲಿದೆ ಎಂದು ತಿಳಿಸಿದರು.

    ಈ ಸಮಿತಿ ವತಿಯಿಂದ ಹಲವು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರ್ಕಾರಗಳ ವಿರುದ್ಧ ಗ್ರಾಮೀಣ ಭಾರತ್ ಬಂದ್ ನಡೆಯಲಿದೆ ಎಂದು ತಿಳಿಸಿದರು. ಅಂದು ಹಳ್ಳಿಗಳಲ್ಲಿ ರೈತರು ತರಕಾರಿ, ಧಾನ್ಯ, ಹಾಲು ಸೇರಿದಂತೆ ಯಾವುದೇ ಉತ್ಪನ್ನ ಮಾರಾಟ ಮಾಡದೇ ಸರ್ಕಾರಗಳ ವಿರುದ್ಧ ಪ್ರತಿಭಟನೆ ನಡೆಸಲಿದ್ದಾರೆ. ವಾಹನ ಸಂಚಾರಕ್ಕೆ ಯಾವುದೇ ತೊಂದರೆ ಮಾಡಲ್ಲ ಎಂದು ಬಸವರಾಜಪ್ಪ ಸ್ಪಷ್ಟಪಡಿಸಿದ್ದಾರೆ.

    ಈ ಪ್ರತಿಭಟನೆ ಮೂಲಕ ಋಣಮುಕ್ತ ಕಾಯ್ದೆಗೆ ಆಗ್ರಹಿಸಿ, ಡಾ.ಸ್ವಾಮಿನಾಥನ್ ವರದಿ ಜಾರಿಗಾಗಿ ರಾಜ್ಯದ ಪ್ರವಾಹ ಪೀಡಿತರಿಗೆ ಸೂಕ್ತ ಪರಿಹಾರ ನೀಡಲು ಒತ್ತಾಯಿಸಿ ಬಗರ್ ಹುಕುಂ ಸಕ್ರಮಕ್ಕಾಗಿ, ಭೂ ಸುಧಾರಣಾ ತಿದ್ದುಪಡಿ ಕೈ ಬಿಡಲು ಆಗ್ರಹಿಸಲಾಗುವುದು ಎಂದರು. ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ಡಾ.ಚಿಕ್ಕಸ್ವಾಮಿ, ಹಿಟ್ಟೂರು ರಾಜು, ರಾಮಚಂದ್ರ, ಟಿ.ಎಂ.ಚಂದ್ರಪ್ಪ ಹಾಜರಿದ್ದರು.