ಮಾಸ್ಕೋ: ರಷ್ಯಾ-ಉಕ್ರೇನ್ (Russia-Ukraine Conflict) ಸಂಘರ್ಷದಲ್ಲಿ ಕದನ ವಿರಾಮದ ಬಗ್ಗೆ ಹೆಚ್ಚಿನ ಗಮನ ಹರಿಸಿದ್ದಕ್ಕೆ ಟ್ರಂಪ್ ಮತ್ತು ಮೋದಿ ಅವರಿಗೆ ಧನ್ಯವಾದ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಕೃತಜ್ಞತೆ ಸಲ್ಲಿಸಿದ್ದಾರೆ.
ಉಕ್ರೇನ್‌ನಲ್ಲಿ 30 ದಿನಗಳ ಕದನ ವಿರಾಮಕ್ಕಾಗಿ ವಾಷಿಂಗ್ಟನ್‌ನ ಯೋಜನೆಯ ಕುರಿತು ಪುಟಿನ್ ತಮ್ಮ ಮೊದಲ ಹೇಳಿಕೆಯನ್ನು ನೀಡಿದ್ದಾರೆ. ಉಕ್ರೇನ್ ಸಂಘರ್ಷದ ಬಗ್ಗೆ ಗಮನ ಹರಿಸಿದ್ದಕ್ಕಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಗೂ ಇತರೆ ರಾಷ್ಟ್ರಗಳ ಮುಖ್ಯಸ್ಥರಿಗೆ ಕೃತಜ್ಞತೆ ಸಲ್ಲಿಸುತ್ತೇನೆಂದು ತಿಳಿಸಿದ್ದಾರೆ. ಇದನ್ನೂ ಓದಿ: ರಷ್ಯಾ-ಉಕ್ರೇನ್ ಯುದ್ಧ; ಅಮೆರಿಕದ ಕದನ ವಿರಾಮ ಪ್ರಸ್ತಾಪಕ್ಕೆ ರಷ್ಯಾ ಒಪ್ಪಿಗೆ
ಮೊದಲನೆಯದಾಗಿ, ಉಕ್ರೇನ್ ಸಂಘರ್ಷ ಇತ್ಯರ್ಥಕ್ಕೆ ಇಷ್ಟೊಂದು ಗಮನ ನೀಡಿದ್ದಕ್ಕಾಗಿ ಅಮೆರಿಕದ ಅಧ್ಯಕ್ಷ ಟ್ರಂಪ್ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ತಮ್ಮದೇ ದೇಶಕ್ಕೆ ಸಂಬಂಧಿಸಿದಂತೆ ಸಾಕಷ್ಟು ಕೆಲಗಳಿವೆ. ಈ ನಡುವೆಯೂ ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾದ ಅಧ್ಯಕ್ಷರು, ಭಾರತದ ಪ್ರಧಾನಿ, ಬ್ರೆಜಿಲ್ ಮತ್ತು ದಕ್ಷಿಣ ಆಫ್ರಿಕಾದ ಗಣರಾಜ್ಯದ ಅಧ್ಯಕ್ಷರು ನಮ್ಮ ವಿಷಯಕ್ಕೆ ಸಾಕಷ್ಟು ಸಮಯ ನೀಡಿದ್ದಾರೆ. ಅವರಿಗೆ ನಾನು ಆಭಾರಿ. ಏಕೆಂದರೆ, ಇದೆಲ್ಲವೂ ಯುದ್ಧವನ್ನು ನಿಲ್ಲಿಸುವ ಮತ್ತು ಮಾನವ ಸಾವು-ನೋವುಗಳನ್ನು ತಡೆಗಟ್ಟುವ ಉದಾತ್ತ ಯೋಜನೆಯಾಗಿದೆ ಎಂದು ಪುಟಿನ್ ಹೇಳಿದ್ದಾರೆ.
ಕಳೆದ ತಿಂಗಳು ಶ್ವೇತಭವನದಲ್ಲಿ ಟ್ರಂಪ್ ಅವರೊಂದಿಗಿನ ಸಭೆಯಲ್ಲಿ ಪ್ರಧಾನಿ ಮೋದಿ, ರಷ್ಯಾ ಮತ್ತು ಉಕ್ರೇನ್ ನಡುವಿನ ಸಂಘರ್ಷದ ವಿಚಾರದಲ್ಲಿ ಭಾರತ ತಟಸ್ಥವಾಗಿಲ್ಲ ಎಂದು ಒತ್ತಿ ಹೇಳಿದ್ದರು. ಭಾರತ ತಟಸ್ಥವಾಗಿಲ್ಲ. ಭಾರತ ಶಾಂತಿಯ ಪರವಾಗಿ ನಿಂತಿದೆ. ಇದು ಯುದ್ಧದ ಯುಗವಲ್ಲ ಎಂದು ನಾನು ಈಗಾಗಲೇ ಅಧ್ಯಕ್ಷ ಪುಟಿನ್ ಅವರಿಗೆ ಹೇಳಿದ್ದೇನೆ. ಈ ವಿಚಾರದಲ್ಲಿ ಟ್ರಂಪ್ ನಿಲುವಿಗೆ ನನ್ನ ಬೆಂಬಲ ಇರುತ್ತದೆ ಎಂದು ಸ್ಪಷ್ಟಪಡಿಸಿದ್ದರು. ಇದನ್ನೂ ಓದಿ: ರಷ್ಯಾ ಜೊತೆ ಅಮೆರಿಕ ಮಾತುಕತೆಗೆ ಸಿದ್ಧರೆ – ಈಗಾಗಲೇ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿರುವ ಉಕ್ರೇನ್
ಈ ಮಧ್ಯೆ, ಯಾವುದೇ ಷರತ್ತುಗಳಿಲ್ಲದೆ ಕದನ ವಿರಾಮ ಪ್ರಸ್ತಾವನೆಗೆ ರಷ್ಯಾ ಒಪ್ಪಿಗೆ ನೀಡಬೇಕೆಂದು ಅಮೆರಿಕ ಒತ್ತಾಯಿಸಿತ್ತು. ಆದಾಗ್ಯೂ, ಕೆಲವು ಷರತ್ತುಗಳೊಂದಿಗೆ ಕದನ ವಿರಾಮಕ್ಕೆ ಪುಟಿನ್ ಒಪ್ಪಿಗೆ ಸೂಚಿಸಿದ್ದಾರೆ.
ಅದು 2022, ಫೆಬ್ರವರಿ 24ರ ಸಂದರ್ಭ. ಇಡೀ ಜಗತ್ತೇ ಬೆಚ್ಚಿ ಬೀಳುವಂತಹ ಘೋಷಣೆಯೊಂದನ್ನು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Volodymyr Zelensky) ಮಾಡಿದರು. ಉಕ್ರೇನ್ ಮೇಲೆ ಯುದ್ಧ ನಡೆಸುವುದಾಗಿ ಘೋಷಿಸಿ ಬಿಟ್ಟರು. ಎರಡು ಮಹಾಯುದ್ಧಗಳ ಭೀಕರತೆಗೆ ನಲುಗಿ ಶಾಂತಿಯ ಮಂತ್ರ ಜಪಿಸುತ್ತಿದ್ದ ವಿಶ್ವಕ್ಕೆ, ಈ ಘೋಷಣೆ ನಿಜಕ್ಕೂ ನುಂಗಲಾರದ ತುತ್ತಾಯಿತು. ವಿಶ್ವಯುದ್ಧಗಳಿಂದಾದ ಸಾವು-ನೋವು, ಆರ್ಥಿಕ ಪ್ರಕ್ಷುಬ್ಧತೆ, ದೇಶ ದೇಶಗಳ ನಡುವಿನ ಕಂದಕ, ವೈಮನಸ್ಸಿನ ಗಾಯದ ಗುರುತು ಇನ್ನೂ ಮಾಡಿಲ್ಲ. ಒಬ್ಬರ ವಿರುದ್ಧ ಮತ್ತೊಬ್ಬರು ಕತ್ತಿ ಮಸೆಯುತ್ತಲೇ ಇದ್ದಾರೆ. ಇಂತಹ ಹೊತ್ತಿನಲ್ಲಿ ಪುಟಿನ್ (Vladimir Putin) ನಿರ್ಧಾರ ಭೂವಾಸಿಗಳಿಗೆ ಮತ್ತೆ ಸಂಕಷ್ಟ ತಂದಿಟ್ಟಿದೆ.
ಉಕ್ರೇನ್ ಮೇಲೆ ರಷ್ಯಾ (Ukraine-Russia) ನಡೆಸುತ್ತಿರುವ ಯುದ್ಧಕ್ಕೆ 18 ತಿಂಗಳು ತುಂಬಿದೆ. ರಷ್ಯಾದ ಆಕ್ರಮಣದಿಂದ ಹತ್ತಾರು ಸಾವಿರ ಜನರ ಮಾರಣಹೋಮವಾಗಿದೆ. ಲಕ್ಷಾಂತರ ಜನರು ಗಂಟುಮೂಟೆ ಕಟ್ಟಿಕೊಂಡು ನೆಲೆ ಇಲ್ಲದಂತೆ ಅಲೆಮಾರಿಗಳಾಗಿದ್ದಾರೆ. ರಷ್ಯಾ ಮತ್ತು ಉಕ್ರೇನ್ ಯುದ್ಧದಿಂದ ಪ್ರಪಂಚದಾದ್ಯಂತ ಆರ್ಥಿಕ ಪ್ರಕ್ಷುಬ್ಧತೆ ತಲೆದೋರಿದೆ. 2ನೇ ಮಹಾಯುದ್ಧದ (World War 2) ನಂತರ ಯೂರೋಪ್‌ನಲ್ಲಿ ಎಂದೂ ಕಂಡಿರದ ಮಟ್ಟದಲ್ಲಿ ಅಪಾರ ಸಾವು-ನೋವು ಈ ಯುದ್ಧದಲ್ಲಿ ಆಗಿದೆ ಎಂದು ವಿಶ್ಲೇಷಿಸಲಾಗಿದೆ. ಇದನ್ನೂ ಓದಿ: ಪಾಕಿಸ್ತಾನದ ಯಾವ ಪ್ರಧಾನಿಯೂ 5 ವರ್ಷ ಪೂರೈಸಿಲ್ಲ – ಕಾರಣಗಳೇನು?
ಎರಡನೇ ಮಹಾಯುದ್ಧದ ಭೀಕರತೆ
1939ರಿಂದ 1945 ರ ವರೆಗೆ ನಡೆದ ಜಾಗತಿಕ ಅನೇಕ ದೇಶಗಳನ್ನೊಳಗೊಂಡ ಯುದ್ಧ ಎರಡನೇ ಮಹಾಯುದ್ಧ. ಪ್ರಧಾನವಾಗಿ ಯೂರೋಪ್ ಮತ್ತು ಏಷಿಯಾ ಖಂಡದಲ್ಲಿ ನಡೆದ ಈ ಯುದ್ಧದಲ್ಲಿ ಮಿತ್ರ ರಾಷ್ಟ್ರ (ಜರ್ಮನಿ, ರಷ್ಯಾ, ಇಂಗ್ಲೆಂಡ್ ಮತ್ತು ಅಮೆರಿಕ) ಹಾಗೂ ಅಕ್ಷ ರಾಷ್ಟ್ರ (ಜರ್ಮನಿ, ಇಟಲಿ ಮತ್ತು ಜಪಾನ್) ಎಂಬ ಎರಡು ಬಣಗಳಿದ್ದವು. ಬರೋಬ್ಬರಿ 70 ರಾಷ್ಟ್ರಗಳ ಸೈನ್ಯಗಳು ಭಾಗವಹಿಸಿದ್ದ ಈ ಯುದ್ಧದಲ್ಲಿ 6 ಕೋಟಿಗೂ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಅಂದಾಜಿಸಲಾಗಿದೆ. ಮನುಕುಲದ ಇತಿಹಾಸದಲ್ಲೇ ಇದು ಅತಿ ಹೆಚ್ಚು ಸಾವು-ನೋವಾದ ಯುದ್ಧ.
ಯುದ್ಧದಿಂದ ರಷ್ಯಾ ಮತ್ತು ಉಕ್ರೇನ್ ಎರಡೂ ರಾಷ್ಟ್ರಗಳಲ್ಲಿ ಎಷ್ಟು ಸಾವು-ನೋವಾಗಿದೆ? ಯುದ್ಧದಲ್ಲಿ ಮನೆ ಕಳೆದುಕೊಂಡು ಎಷ್ಟು ಜನ ವಲಸೆ ಹೋಗಿದ್ದಾರೆ? ಉಕ್ರೇನ್ ಹಾಗೂ ರಷ್ಯಾದ ಮೇಲೆ ಯುದ್ಧ ಯಾವ ರೀತಿಯ ಪರಿಣಾಮ ಬೀರಿದೆ? ಈ ಯುದ್ಧದಿಂದ ಜಾಗತಿಕವಾಗಿ ಉಂಟಾದ ಬಿಕ್ಕಟ್ಟೇನು? ಉಕ್ರೇನ್‌ಗೆ ಒದಗಿ ಬಂದ ನೆರವು ಮೊದಲಾದ ವಿಷಯಗಳ ಬಗ್ಗೆ ಇಲ್ಲಿ ಚರ್ಚಿಸಲಾಗಿದೆ.
ರಷ್ಯಾ-ಉಕ್ರೇನ್ ಯುದ್ಧದಲ್ಲಿ ಮಡಿದವರೆಷ್ಟು?
ಎರಡನೆಯ ಮಹಾಯುದ್ಧದ ನಂತರ ಯೂರೋಪ್‌ನಲ್ಲಿ ಕಂಡುಬರದ ಮಟ್ಟದಲ್ಲಿ ಈ ಯುದ್ಧವು ಸಾವನ್ನು ಉಂಟುಮಾಡಿದೆ. ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಹೈ ಕಮಿಷನರ್ (OHCHR) ಪ್ರಕಾರ, ಜುಲೈ ಅಂತ್ಯದ ವೇಳೆಗೆ 9,000 ಕ್ಕೂ ಹೆಚ್ಚು ನಾಗರಿಕರು ಹತ್ಯೆಯಾಗಿದ್ದಾರೆ. 16,000 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ದಾಖಲಿಸಲಾಗಿದೆ. ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಸಾವು-ನೋವಾಗಿದೆ. ಆ ಬಗ್ಗೆ ಹೆಚ್ಚಿನ ವಿವರ ಲಭ್ಯವಾಗಿಲ್ಲ. ಯುದ್ಧದಲ್ಲಿ ಮೃತಪಟ್ಟವರು ಮತ್ತು ಗಾಯಗೊಂಡವರ ಸಂಖ್ಯೆ ಎರಡೂ ಸೇರಿ 5,00,000 ದಷ್ಟಿದೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ. ಇದನ್ನೂ ಓದಿ: AsiaCup ಟೂರ್ನಿಯಲ್ಲಿ ಭಾರತದ್ದೇ ಮೇಲುಗೈ – ಗೆದ್ದವರು, ಬಿದ್ದವರ ಕಥೆ
1,12,000 ರಷ್ಯಾದ ಸೈನಿಕರು ಸಾವಿಗೀಡಾಗಿದ್ದಾರೆ. 1,70,000 ದಿಂದ 1,80,000 ವರೆಗೆ ಸೈನಿಕರು ಗಾಯಗೊಂಡಿದ್ದಾರೆ ಎಂದು ಉಕ್ರೇನ್ ಬೆಂಬಲಿಸುವ ಯುನೈಟೆಡ್ ಸ್ಟೇಟ್ಸ್ ಅಧಿಕಾರಿಗಳು ತಿಳಿಸಿದ್ದಾರೆ. ಉಕ್ರೇನ್‌ನಲ್ಲಿ 70,000 ದಿಂದ 1,00,000 ವರೆಗೆ ಸೈನಿಕರು ಹತರಾಗಿದ್ದಾರೆ ಎಂದು ಹೇಳಲಾಗಿದೆ. ಆದರೆ ಅಮೆರಿಕದ ಅಂಕಿ ಅಂಶಗಳನ್ನು ರಷ್ಯಾ ಅಧಿಕಾರಿಗಳು ತಳ್ಳಿ ಹಾಕಿದ್ದಾರೆ. ಅಂಕಿಅಂಶದಲ್ಲಿ ಹೆಚ್ಚಿನ ಸಂಖ್ಯೆಯನ್ನು ತೋರಿಸಲಾಗಿದೆ. ಪ್ರಚಾರಕ್ಕಾಗಿ ಯುಎಸ್ ಹೀಗೆ ಮಾಡುತ್ತಿದೆ ಎಂದು ರಷ್ಯಾ ಅಧಿಕಾರಿಗಳು ಆರೋಪಿಸಿದ್ದಾರೆ.
ಸ್ಥಳಾಂತರ ಆದವರೆಷ್ಟು?
2022 ರ ಆಕ್ರಮಣದಿಂದ, ಲಕ್ಷಾಂತರ ಉಕ್ರೇನಿಯನ್ನರು ತಮ್ಮ ಮನೆಗಳಿಂದ ಬೇರೆಡೆಗೆ ಸ್ಥಳಾಂತರಗೊಂಡಿದ್ದಾರೆ. 4.1 ಕೋಟಿಯಷ್ಟು ಜನಸಂಖ್ಯೆಯನ್ನು ಉಕ್ರೇನ್ ರಾಷ್ಟ್ರ ಹೊಂದಿದೆ. 1.7 ಕೋಟಿಯಷ್ಟು ಜನರಿಗೆ ತುರ್ತು ಮಾನವೀಯ ನೆರವಿನ ಅಗತ್ಯವಿದೆ. 50 ಲಕ್ಷಕ್ಕೂ ಹೆಚ್ಚು ಮಂದಿ ಉಕ್ರೇನ್ ನಿರಾಶ್ರಿತರು ಯೂರೋಪ್‌ನಾದ್ಯಂತ ಆಶ್ರಯ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ.
ಉಕ್ರೇನ್ ಪರಿಸ್ಥಿತಿ ಹೇಗಿದೆ?
ಯುದ್ಧ ಪ್ರಾರಂಭವಾದಾಗಿನಿಂದಲೂ ರಷ್ಯಾವು ಉಕ್ರೇನ್‌ನ 11 ಪ್ರತಿಶತದಷ್ಟು ಭೂಪ್ರದೇಶವನ್ನು ವಶಪಡಿಸಿಕೊಂಡಿದೆ. ಈ ಭೂಪ್ರದೇಶದ ಅಮೆರಿಕದ ರಾಜ್ಯಗಳಾದ ಮೆಸ್ಸಾಚುಸೆಟ್ಸ್, ನ್ಯೂ ಹ್ಯಾಂಪ್‌ಶೈರ್ ಮತ್ತು ಕನೆಕ್ಟಿಕಟ್‌ಗೆ ಸಮಾನವಾಗಿದೆ ಎಂದು ಹಾರ್ವರ್ಡ್ ಕೆನಡಿ ಸ್ಕೂಲ್‌ನಲ್ಲಿರುವ ಬೆಲ್ಫರ್ ಸೆಂಟರ್ ವರದಿಯಲ್ಲಿ ತಿಳಿಸಿದೆ. 2014 ರಲ್ಲಿ ಉಕ್ರೇನ್‌ನಿಂದ ಕ್ರಿಮಿಯಾವನ್ನು ರಷ್ಯಾ ಸ್ವಾಧೀನಪಡಿಸಿಕೊಂಡಿತ್ತು. ಒಟ್ಟಾರೆ ರಷ್ಯಾ ಈಗ ಉಕ್ರೇನ್‌ನ ಸುಮಾರು 17.5% ಭೂಭಾಗವನ್ನು ನಿಯಂತ್ರಿಸುತ್ತಿದೆ. ಇದು ಸುಮಾರು 41,000 ಚದರ ಮೈಲಿಗಳು (106,000 ಚದರ ಕಿಮೀ) ಇದೆ. ಇದನ್ನೂ ಓದಿ: Chandrayaan-3: ‘ಸ್ಮೈಲ್ ಪ್ಲೀಸ್’ – ವಿಕ್ರಂನ ಫೋಟೋ ಕ್ಲಿಕ್ಕಿಸಿದ ಪ್ರಗ್ಯಾನ್
ಉಕ್ರೇನ್ ತನ್ನ ಕರಾವಳಿಯ ಒಂದು ಭಾಗವನ್ನು ಕಳೆದುಕೊಂಡಿದೆ. ಅದರ ಆರ್ಥಿಕತೆಯು ದುರ್ಬಲಗೊಂಡಿದೆ. ಹೋರಾಟದಿಂದ ಕೆಲವು ನಗರಗಳು ಪಾಳುಭೂಮಿಗಳಾಗಿ ಮಾರ್ಪಟ್ಟಿವೆ. ಉಕ್ರೇನ್‌ನ ಆರ್ಥಿಕತೆಯು 2022 ರಲ್ಲಿ 30% ರಷ್ಟು ಕುಸಿತ ಕಂಡಿದೆ. ಈ ವರ್ಷ 1% ರಿಂದ 3% ರಷ್ಟು ಬೆಳೆಯುವ ಮುನ್ಸೂಚನೆ ಇದೆ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ ವಿಶ್ಲೇಷಿಸಿದೆ.
ರಷ್ಯಾದಲ್ಲಿ ಪರಿಸ್ಥಿತಿ ಯಾವ ರೀತಿ ಇದೆ?
ಉಕ್ರೇನ್ ಮೇಲೆ ಆಕ್ರಮಣ ನಡೆಸಿರುವ ರಷ್ಯಾ ವಿರುದ್ಧ ಪಾಶ್ಚಿಮಾತ್ಯ ರಾಷ್ಟ್ರಗಳು ನಿರ್ಬಂಧದ ಅಸ್ತ್ರವನ್ನು ಹೂಡಿವೆ. ಇದರಿಂದ ರಷ್ಯಾದ ಆರ್ಥಿಕತೆಗೆ ದೊಡ್ಡ ಪೆಟ್ಟು ಕೊಟ್ಟಂತಾಗಿದೆ. ರಷ್ಯಾವು ಮಿಲಿಟರಿಗೆ ಹೆಚ್ಚಿನ ಹಣ ವಿನಿಯೋಗಿಸುತ್ತಿದೆ. ಇದರಿಂದ ಇತರೆ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿವೆ. 2022 ರಲ್ಲಿ ರಷ್ಯಾ ಆರ್ಥಿಕತೆಯು 2.1% ನಷ್ಟು ಕುಸಿತ ಕಂಡಿತ್ತು. ಈ ವರ್ಷ 1.5% ರಷ್ಟು ಆರ್ಥಿಕ ಬೆಳವಣಿಗೆ ಸಾಧಿಸಬಹುದು ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ ವರದಿ ಮಾಡಿದೆ.
ಯುದ್ಧದ ಮಧ್ಯಾವಧಿಯಲ್ಲಿ ಬಹುರಾಷ್ಟ್ರೀಯ ಕಂಪನಿಗಳ ನಿರ್ಗಮನ, ಮಾನವ ಬಂಡವಾಳದ ನಷ್ಟ, ಜಾಗತಿಕ ಹಣಕಾಸು ಮಾರುಕಟ್ಟೆಗಳಿಂದ ಸಂಪರ್ಕ ಕಡಿತದಿಂದ ರಷ್ಯಾದ ಆರ್ಥಿಕತೆಯು ಕುಂಠಿತಗೊಂಡಿದೆ ಎಂದು IMF ವಕ್ತಾರ ಜೂಲಿ ಕೊಜಾಕ್ ಕಳೆದ ತಿಂಗಳು ಹೇಳಿದ್ದರು. ಈ ಅವಧಿಯಲ್ಲಿ ರಷ್ಯಾದಲ್ಲಿ ಉತ್ಪಾದನೆಯು ಯುದ್ಧ ಪೂರ್ವದಲ್ಲಿದ್ದ ಪ್ರಮಾಣಕ್ಕಿಂತ 7 ಪ್ರತಿಶತದಷ್ಟು ಕಡಿಮೆಯಾಗಿದೆ ಎನ್ನಲಾಗಿದೆ. ರಷ್ಯಾ ತನ್ನ 2023 ರ ರಕ್ಷಣಾ ವೆಚ್ಚದ ಗುರಿಯನ್ನು 100 ಶತಕೋಟಿ ಡಾಲರ್‌ಗಿಂತ ಹೆಚ್ಚು ಹೊಂದಿದೆ. ಎಲ್ಲಾ ಸಾರ್ವಜನಿಕ ವೆಚ್ಚದ ಮೂರನೇ ಒಂದು ಭಾಗವನ್ನು ಮಿಲಿಟರಿಗಾಗಿಯೇ ವಿನಿಯೋಗಿಸುತ್ತಿದೆ ಎಂದು ವಿಶ್ಲೇಷಿಸಲಾಗಿದೆ. ಇದನ್ನೂ ಓದಿ: ಅದಾನಿ ಷೇರು ಶಾರ್ಟ್ ಸೆಲ್ಲಿಂಗ್, 16 ಕಂಪನಿಗಳಿಗೆ ಭಾರೀ ಲಾಭ – ಇಡಿ ತನಿಖಾ ವರದಿಯಲ್ಲಿ ಏನಿದೆ?
ಜಾಗತಿಕ ಹಣದುಬ್ಬರ, ಆಹಾರ ಬಿಕ್ಕಟ್ಟು
ರಷ್ಯಾದ ಆಕ್ರಮಣ ಮತ್ತು ಪಾಶ್ಚಿಮಾತ್ಯ ನಿರ್ಬಂಧಗಳು ಗೊಬ್ಬರ, ಗೋಧಿ, ಲೋಹಗಳ ಬೆಲೆಗಳಲ್ಲಿ ಏರಿಕೆಗೆ ಕಾರಣವಾಯಿತು. ಈ ಯುದ್ಧವು ಹಣದುಬ್ಬರದ ಅಲೆ ಮತ್ತು ಜಾಗತಿಕ ಆಹಾರ ಬಿಕ್ಕಟ್ಟನ್ನು ಉತ್ತೇಜಿಸಿತು. ಸೌದಿ ಅರೇಬಿಯಾದ ನಂತರ ರಷ್ಯಾ ವಿಶ್ವದ ಎರಡನೇ ಅತಿದೊಡ್ಡ ತೈಲ ರಫ್ತುದಾರ. ಅಷ್ಟೇ ಅಲ್ಲ ನೈಸರ್ಗಿಕ ಅನಿಲ, ಗೋಧಿ, ಸಾರಜನಕ ಗೊಬ್ಬರ ಮತ್ತು ಪಲ್ಲಾಡಿಯಂನ ರಫ್ತುದಾರ ಕೂಡ. ಉಕ್ರೇನ್‌ನ ಮೇಲೆ ರಷ್ಯಾದ ಆಕ್ರಮಣದ ಸ್ವಲ್ಪ ಕಾಲದ ನಂತರ, ಅಂತಾರಾಷ್ಟ್ರೀಯ ತೈಲ ಬೆಲೆಗಳು 2008 ರ ದಾಖಲೆಗಳನ್ನೂ ಮೀರಿ ಗರಿಷ್ಠ ಮಟ್ಟಕ್ಕೆ ಏರಿತು.
ಪಾಶ್ಚಾತ್ಯ ರಾಷ್ಟ್ರಗಳಿಂದ ಉಕ್ರೇನ್‌ಗೆ ಒದಗಿಬಂದ ನೆರವು
ಯುನೈಟೆಡ್ ಸ್ಟೇಟ್ಸ್ ಉಕ್ರೇನ್‌ಗೆ ಇದುವರೆಗೆ 43 ಶತಕೋಟಿಗೂ ಹೆಚ್ಚು ಡಾಲರ್ ಭದ್ರತಾ ನೆರವನ್ನು ನೀಡಿದೆ. ಇದರಲ್ಲಿ ಸ್ಟಿಂಗರ್ ವಿಮಾನ-ವಿರೋಧಿ ವ್ಯವಸ್ಥೆಗಳು, ಜಾವೆಲಿನ್ ಆಂಟಿ-ಆರ್ಮರ್ ಸಿಸ್ಟಮ್‌ಗಳು, 155mm ಹೊವಿಟ್ಜರ್‌ಗಳು ಮತ್ತು ರಾಸಾಯನಿಕ, ಜೈವಿಕ, ವಿಕಿರಣಶಾಸ್ತ್ರ ಮತ್ತು ಪರಮಾಣು ದಾಳಿಯಿಂದ ರಕ್ಷಿಸುವ ಉಪಕರಣಗಳು ಸೇರಿವೆ. ಯುನೈಟೆಡ್ ಸ್ಟೇಟ್ಸ್, ಯುರೋಪಿಯನ್ ಒಕ್ಕೂಟ, ಬ್ರಿಟನ್, ಜರ್ಮನಿ ಮತ್ತು ಜಪಾನ್ ದೇಶಗಳು ಉಕ್ರೇನ್‌ಗೆ ಅಪಾರ ಬೆಂಬಲ ನೀಡಿವೆ. ಪಾಶ್ಚಿಮಾತ್ಯ ರಾಷ್ಟ್ರಗಳು ಉಕ್ರೇನ್‌ಗೆ ಶಸ್ತ್ರಾಸ್ತ್ರ ಪೂರೈಸುತ್ತಿರುವುದರಿಂದ ಯುದ್ಧ ಮತ್ತಷ್ಟು ಹೆಚ್ಚಾಗಲು ಕಾರಣವಾಗುತ್ತಿದೆ ಎಂದು ರಷ್ಯಾ ಆರೋಪಿಸಿದೆ.
ನವದೆಹಲಿ: ಉಕ್ರೇನ್ ವಿರುದ್ಧ ಯುದ್ಧ ನಡೆಸುತ್ತಿರುವ ರಷ್ಯಾ ಮೇಲೆ ಈಗಾಗಲೇ ಹಲವು ನಿರ್ಬಂಧಗಳನ್ನು ಅಮೆರಿಕ ವಿಧಿಸಿದೆ. ಅಂತೆಯೇ ರಷ್ಯಾದೊಂದಿಗೆ ಈ ಹಿಂದೆಯೇ ಭಾರತ ಮಾಡಿಕೊಂಡಿದ್ದ ರಕ್ಷಣಾ ಒಪ್ಪಂದಕ್ಕೂ ಅಮೆರಿಕ ನಿರ್ಬಂಧ ಹಾಕಲಿದೆಯೇ ಎಂಬ ವಿಚಾರ ಚರ್ಚೆಯನ್ನು ಹುಟ್ಟುಹಾಕಿದೆ.
ಎಸ್-400 ವಾಯು ರಕ್ಷಣಾ ಕ್ಷಿಪಣಿ ವ್ಯವಸ್ಥೆಗಳ ಐದು ಘಟಕಗಳನ್ನು ಖರೀದಿಸಲು 2018ರ ಅಕ್ಟೋಬರ್‌ನಲ್ಲಿ ರಷ್ಯಾದೊಂದಿಗೆ ಭಾರತವು ಒಪ್ಪಂದಕ್ಕೆ ಸಹಿ ಹಾಕಿತ್ತು. ಇದನ್ನು ಖರೀದಿಸಲು ಭಾರತಕ್ಕೆ ಅಮೆರಿಕ ನಿರ್ಬಂಧ ಹಾಕುತ್ತಾ ಎಂಬ ವಿಚಾರ ಈಗ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಆಗುತ್ತಿದೆ. ಇದನ್ನೂ ಓದಿ: ಇರಾಕ್‍ನಿಂದ ತೈಲ ಖರೀದಿಗೆ ನಿರ್ಬಂಧ- ಭಾರತಕ್ಕೆ ಅಮೆರಿಕದಿಂದ ಗುಡ್‍ನ್ಯೂಸ್
ಎಸ್-400 ಮಿಸೈಲ್ ಡಿಫೆನ್ಸ್ ಸಿಸ್ಟಮ್ ಖರೀದಿಸಲು ಕಾಟ್ಸಾ ಕಾನೂನಿನಡಿಯಲ್ಲಿ ಅಮೆರಿಕವು ತನ್ನ ಪ್ರಮುಖ ಪಾಲುದಾರರಲ್ಲಿ ಒಂದಾದ ಭಾರತದ ಮೇಲೆ ನಿರ್ಬಂಧಗಳನ್ನು ವಿಧಿಸಬೇಕೆ ಅಥವಾ ನಿರ್ಬಂಧವನ್ನು ಮನ್ನಾ ಮಾಡಬೇಕೆ ಎಂಬುದನ್ನು ಅಮೆರಿಕ ಅಧ್ಯಕ್ಷ ಜೋ ಬೈಡೆನ್ ನಿರ್ಧರಿಸುತ್ತಾರೆ ಎಂದು ಹಿಡಿಯ ಆಡಳಿತ ಅಧಿಕಾರಿ ಡೊನಾಲ್ಡ್ ಲೂ ತಿಳಿಸಿದ್ದಾರೆ.
ಆಡಳಿತವು ಕಾಟ್ಸಾ ಕಾನೂನನ್ನು ಅನುಸರಿಸುತ್ತದೆ. ಆ ಕಾನೂನನ್ನು ಸಂಪೂರ್ಣವಾಗಿ ಕಾರ್ಯಗತಗೊಳಿಸುತ್ತದೆ. ಆದರೆ ರಷ್ಯಾ ಮತ್ತು ಉಕ್ರೇನ್ ಯುದ್ಧದ ಸಂದರ್ಭದಲ್ಲಿ ಕಾಟ್ಸಾ ಕಾನೂನಿನ ಅಡಿಯಲ್ಲಿ ನಿರ್ಬಂಧಗಳನ್ನು ವಿಧಿಸುವ ಮತ್ತು ಮನ್ನಾ ಮಾಡುವ ಬಗ್ಗೆ ಯುಎಸ್ ಅಧ್ಯಕ್ಷರ ನಿರ್ಧಾರದ ಬಗ್ಗೆ ನಾನು ಏನನ್ನೂ ಹೇಳಲು ಸಾಧ್ಯವಾಗುವುದಿಲ್ಲ ಎಂದು ಡೊನಾಲ್ಡ್ ಲೂ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಏನಿದು ಎಸ್-400 ಟ್ರಯಂಫ್? ಹೇಗೆ ಕೆಲಸ ಮಾಡುತ್ತೆ? ಅಮೆರಿಕ, ಚೀನಾ, ಪಾಕಿಸ್ತಾನಕ್ಕೆ ಆತಂಕ ಯಾಕೆ?
ಭಾರತವು ಈಗ ನಮ್ಮ ಪ್ರಮುಖ ಭದ್ರತಾ ಪಾಲುದಾರ. ಆ ಪಾಲುದಾರಿಕೆಯನ್ನು ಮುಂದುವರಿಸುವುದನ್ನು ನಾವು ಗೌರವಿಸುತ್ತೇವೆ ಎಂದು ಲೂ ಹೇಳಿದ್ದಾರೆ.
ಏನಿದು ಕಾಟ್ಸಾ?:
ರಕ್ಷಣಾ ಹಾಗೂ ಆರ್ಥಿಕ ಒಪ್ಪಂದಗಳನ್ನು ಭದ್ರಪಡಿಸಲು ಅಮೆರಿಕ ಕಾಟ್ಸಾ(ಕೌಂಟರಿಂಗ್ ಅಮೆರಿಕಾಸ್ ಅಡ್ವರ್ಸರೀಸ್ ಥ್ರೂ ಸ್ಯಾಂಕ್ಷನ್ಸ್ ಆಕ್ಟ್) ಕಾಯ್ದೆಯನ್ನು ತಂದಿದೆ. ವಿಶ್ವದ ದೊಡ್ಡಣ್ಣನಾಗಿರುವ ಅಮೆರಿಕ ಅಭಿವೃದ್ಧಿ ಹೊಂದುತ್ತಿರುವ ದೇಶಗಳ ಜೊತೆ ಉತ್ತಮ ಬಾಂಧವ್ಯಕ್ಕಾಗಿ ದ್ವಿಪಕ್ಷೀಯ ಮಾತುಕತೆ ನಡೆಸುತ್ತದೆ. ದ್ವಿಪಕ್ಷೀಯ ಸಂಬಂಧ ಹೊಂದಿರುವ ದೇಶಗಳು ಅಮೆರಿಕ ನಿರ್ಬಂಧ ಹೇರಿದ ದೇಶಗಳೊಂದಿಗೆ ರಕ್ಷಣಾ ವ್ಯವಹಾರ ನಡೆಸಿದರೆ ಆ ದೇಶಗಳ ಮೇಲೆ ನಿರ್ಬಂಧ ಹೇರುವ ಅಧಿಕಾರ ಈ ಕಾಯ್ದೆಯಲ್ಲಿದೆ.
ಹಿಂದೆಯೂ ನಿರ್ಬಂಧ ವಿಧಿಸಲಾಗಿತ್ತು:
ಭಯೋತ್ಪಾದನೆಗೆ ಉತ್ತೇಜನ ನೀಡುತ್ತಿದೆ ಎಂದು 2018ರಲ್ಲಿ ಇರಾನ್‌ಗೆ ಅಮೆರಿಕ ಹಲವು ನಿರ್ಬಂಧಗಳನ್ನು ವಿಧಿಸಿತ್ತು. ಈ ವೇಳೆ ಭಾರತ ಸೇರಿದಂತೆ 8 ರಾಷ್ಟ್ರಗಳು ಇರಾನ್‌ನಿಂದ ತೈಲ ಆಮದು ಮಾಡಿಕೊಳ್ಳಬಾರದು ಎಂದು ನಿರ್ಬಂಧಿಸಿತ್ತು. ಆದರೆ ತೈಲ ಖರೀದಿಗೆ ಅವಕಾಶ ಮಾಡಿಕೊಡಬೇಕು ಎಂದು ಆ ರಾಷ್ಟ್ರಗಳು ಒತ್ತಾಯಿಸಿದ ನಂತರ ನಿರ್ಬಂಧವನ್ನು ತೆರವುಗೊಳಿಸಲಾಗಿತ್ತು. ಇದನ್ನೂ ಓದಿ: ಉಕ್ರೇನ್ ವಿರುದ್ಧ ಯುದ್ಧ – ಚರ್ಚೆಯಾಗುತ್ತಿದೆ ಭಾರತದ ಐತಿಹಾಸಿಕ ಕೊಹಿನೂರು ವಜ್ರ
ವಿಶ್ವಸಂಸ್ಥೆಯ ಕಾಯ್ದೆಯಲ್ಲ:
ರಷ್ಯಾದಿಂದ ಟ್ರಯಂಫ್ ಖರೀದಿಗೆ ಅಮೆರಿಕದಿಂದ ವಿರೋಧ ವ್ಯಕ್ತವಾಗುತ್ತಿದ್ದ ಬೆನ್ನಲ್ಲೇ 2018ರಲ್ಲಿ ಆಗಿನ ರಕ್ಷಣಾ ಸಚಿವೆಯಾಗಿದ್ದ ನಿರ್ಮಲಾ ಸೀತಾರಾಮನ್ ಪ್ರತಿಕ್ರಿಯಿಸಿ, ಕಾಟ್ಸಾ ಕಾಯ್ದೆ ಅಮೆರಿಕದ್ದು ಹೊರತು ವಿಶ್ವಸಂಸ್ಥೆಯದ್ದಲ್ಲ. ಇದು ಭಾರತ ಮತ್ತು ರಷ್ಯಾದ ಆಂತರಿಕ ವಿಚಾರ ಎಂದು ಹೇಳಿ ತಿರುಗೇಟು ನೀಡಿದ್ದರು.
ನವದೆಹಲಿ: ವಿಶ್ವಸಂಸ್ಥೆಯ ಸಾಮಾನ್ಯ ಅಧಿವೇಶನ(ಯುಎನ್‌ಜಿಎ)ದಲ್ಲಿ ಉಕ್ರೇನ್ ವಿರುದ್ಧ ರಷ್ಯಾ ನಡೆಸುತ್ತಿರುವ ಯುದ್ಧ ಖಂಡಿಸುವ ನಿರ್ಣಯದಿಂದ ಮತ್ತೆ ಭಾರತ ದೂರ ಉಳಿದಿದ್ದರೆ ಅಫ್ಘಾನಿಸ್ತಾನ, ನೇಪಾಳ ನಿರ್ಣಯದ ಪರವಾಗಿ ಮತವನ್ನು ಚಲಾಯಿಸಿವೆ.
ರಷ್ಯಾ ವಿರುದ್ಧದ ನಿರ್ಣಯಕ್ಕೆ ಸಂಬಂಧಿಸಿದಂತೆ ಭಾರತ ಸೇರಿದಂತೆ 35 ರಾಷ್ಟ್ರಗಳು ತಟಸ್ಥ ಧೋರಣೆಯನ್ನು ಅನುಸರಿಸಿವೆ. ನಿರ್ಣಯದ ಪರವಾಗಿ 141 ದೇಶಗಳು ಇದ್ದರೆ, ವಿರುದ್ಧವಾಗಿ 5 ರಾಷ್ಟ್ರಗಳು ಮತ ಚಲಾಯಿಸಿವೆ. ನಿರ್ಣಯ ಮಂಡನೆಯಲ್ಲಿ 193 ಸದಸ್ಯ ರಾಷ್ಟ್ರಗಳು ಪಾಲ್ಗೊಂಡಿದ್ದವು. ತನ್ನ ಪರಮಾಣು ಪಡೆಗಳ ಸನ್ನದ್ಧತೆಯನ್ನು ಹೆಚ್ಚಿಸುವ ರಷ್ಯಾದ ನಿರ್ಧಾರವನ್ನು ಸಭೆಯಲ್ಲಿ ಖಂಡಿಸಲಾಯಿತು. ಇದನ್ನೂ ಓದಿ: ಪುಟಿನ್‍ನನ್ನು ಬಂಧಿಸಿದವರಿಗೆ 7.5 ಕೋಟಿ – ರಷ್ಯನ್ ಉದ್ಯಮಿ ಘೋಷಣೆ!
ರಾಜಕೀಯ ಮಾತುಕತೆ, ಮಧ್ಯಸ್ಥಿಕೆ ಮತ್ತು ಇತರ ಶಾಂತಿಯುತ ವಿಧಾನಗಳ ಮೂಲಕ ರಷ್ಯಾ ಮತ್ತು ಉಕ್ರೇನ್ ನಡುವಿನ ಸಂಘರ್ಷ ತಕ್ಷಣದ ಶಾಂತಿಯುತ ಅಗತ್ಯ ಎಂದು ನಿರ್ಣಯದ ಪರವಾಗಿದ್ದ ರಾಷ್ಟ್ರಗಳು ಒತ್ತಿ ಹೇಳಿವೆ.
ಕೆನಡಾ, ಫ್ರಾನ್ಸ್, ಜರ್ಮನಿ, ಜರ್ಮನಿ, ಐರ್ಲ್ಯಾಂಡ್, ಕುವೈತ್, ಸಿಂಗಾಪೂರ್, ಟರ್ಕಿ, ಉಕ್ರೇನ್, ಯುನೈಟೆಡ್ ಕಿಂಗ್‌ಡಮ್, ಯುನೈಟೆಡ್ ಸ್ಟೇಟ್ಸ್ ಸೇರಿದಂತೆ 141 ದೇಶಗಳು ರಷ್ಯಾ ವಿರುದ್ಧದ ಖಂಡನ ನಿರ್ಣಯದ ಪರವಾಗಿ ಮತ ಚಲಾಯಿಸಿದೆ. ಈ ರಾಷ್ಟ್ರಗಳ ಜೊತೆ ಭೂತನ್, ಅಫ್ಘಾನಿಸ್ತಾನ, ನೇಪಾಳ ನಿರ್ಣಯದ ಪರವಾಗಿ ಮತ ಚಲಾಯಿಸಿದೆ. ಭಾರತ, ಬಾಂಗ್ಲಾದೇಶ, ಪಾಕಿಸ್ತಾನ, ಶ್ರೀಲಂಕಾ, ಚೀನಾ ಸೇರಿದಂತೆ 35 ರಾಷ್ಟ್ರಗಳು ಮತವನ್ನು ಚಲಾಯಿಸದೇ ನಿರ್ಣಯದಿಂದ ದೂರ ಉಳಿದಿವೆ. ಇದನ್ನೂ ಓದಿ: ಯುದ್ಧ ವಿರೋಧಿ ರಷ್ಯನ್ನರ ಬಂಧನ- ಪುಟಿನ್ ರಷ್ಯಾದವನಲ್ಲ ಎಂದ ನಾವೆಲ್ನಿ
ಕಳೆದ ಶುಕ್ರವಾರ ಇದೇ ರೀತಿ ನಿರ್ಣಯ ಮಂಡಿಸ ಭಾರತ ತಟಸ್ಥ ಧೋರಣೆ ಅನುಸರಿಸಿತ್ತು. ಈ ವೇಳೆ ನಿರ್ಣಯದ ಪರವಾಗಿ 11 ರಾಷ್ಟ್ರಗಳು ಮತ ಚಲಾಯಿಸಿದ್ದವು. ಆದರೆ ಭಾರತ, ಚೀನಾ ಸೇರಿದಂತೆ 3 ರಾಷ್ಟ್ರಗಳು ನಿರ್ಣಯದಿಂದ ದೂರ ಉಳಿದಿದ್ದವು.
ಜೈಲಿನಲ್ಲಿರುವ ಕ್ರೆಮ್ಲಿನ್ ವಿಮರ್ಶಕ ಹಾಗೂ ವಿಪಕ್ಷ ನಾಯಕ ಅಲೆಕ್ಸಿ ನಾವೆಲ್ನಿ ರಷ್ಯಾದಲ್ಲಿ ಯುದ್ಧ ವಿರೋಧಿ ಪ್ರತಿಭಟನೆಗಳಿಗೆ ಕರೆ ನೀಡಿದ್ದಾರೆ. ಪುಟಿನ್ ಅವರನ್ನು ʼನಿಸ್ಸಂಶಯವಾಗಿ ಹುಚ್ಚು ತ್ಸಾರ್ʼ ಎಂದು ಕರೆದಿರುವ ನಾವೆಲ್ನಿ, ರಷ್ಯನ್ನರು ಯುದ್ಧವನ್ನು ಬೆಂಬಲಿಸುವುದಿಲ್ಲ ಎಂದು ಜಗತ್ತಿಗೆ ಹೇಳಬೇಕು ಎಂದು ಕರೆ ನೀಡಿದ್ದಾರೆ.
ರಷ್ಯಾದ ಪಡೆಗಳು ಉಕ್ರೇನ್ ಮೇಲೆ ತಮ್ಮ ದಾಳಿಯನ್ನು ವಿಸ್ತರಿಸುತ್ತಿರುವಂತೆ, ಬ್ಯಾಕ್ ಹೋಮ್ ಪ್ರದರ್ಶನಕಾರರು ಯುದ್ಧವನ್ನು ಖಂಡಿಸುವ ಪೋಸ್ಟರ್‌ಗಳನ್ನು ಹಿಡಿದು ‘ಯುದ್ಧ ಬೇಡ’ ಎಂದು ಘೋಷಣೆ ಕೂಗುತ್ತಾ ನಗರಗಳಲ್ಲಿ ಮೆರವಣಿಗೆ ನಡೆಸುತ್ತಿದ್ದಾರೆ. ಸ್ವತಂತ್ರ ಮೇಲ್ವಿಚಾರಣಾ ಗ್ರೂಪ್ OVD-ಇನ್ಫೋ ಪ್ರಕಾರ, ರಷ್ಯಾದಲ್ಲಿ ಒಟ್ಟು 7,000 ಪ್ರತಿಭಟನಾಕಾರರನ್ನು ಬಂಧಿಸಲಾಗಿದೆ. ಇದನ್ನೂ ಓದಿ: ರಷ್ಯಾದ ಯುದ್ಧನೌಕೆಗಳು ಕ್ರೈಮಿಯಾವನ್ನು ಬಿಟ್ಟು ಒಡೆಸ್ಸಾದತ್ತ ಹೋಗುತ್ತಿವೆ: ಅಮೇರಿಕ
ಪುಟಿನ್ ಅವರ ವಿರೋಧಿಗಳಲ್ಲಿ ಪ್ರಮುಖರಾದ ನಾವೆಲ್ನಿ ಅವರು ಜರ್ಮನಿಯಿಂದ ಹಿಂದಿರುಗಿದ ನಂತರ ಕಳೆದ ವರ್ಷ ಜೈಲಿನಲ್ಲಿದ್ದಾರೆ. ಶಾಂತಿ ಸ್ಥಾಪನೆಗಾಗಿ ನಾವು ಬೀದಿಗಿಳಿದು ಹೋರಾಟ ನಡೆಸುತ್ತೇವೆ ಎಂದು ತಿಳಿಸಿದ್ದಾರೆ.
ಉಕ್ರೇನ್ ವಿರುದ್ಧ ಯುದ್ಧ ಘೋಷಿಸಿರುವ ಪುಟಿನ್ ವಿರುದ್ಧ ರಷ್ಯನ್ನರಿಂದಲೇ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಸಾವಿರಾರು ಸಂಖ್ಯೆಯಲ್ಲಿ ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಪುಟಿನ್ ನಡೆಗೆ ರಷ್ಯಾ ತಾರಾಗಣ, ಕ್ರೀಡಾಪಟುಗಳು, ಚಿಂತಕರು ಸಹ ವಿರೋಧ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಒಂದು ವಾರದೊಳಗೆ 1 ಮಿಲಿಯನ್ ಜನ ಉಕ್ರೇನ್‍ನಿಂದ ಪಲಾಯನ: ವಿಶ್ವಸಂಸ್ಥೆ
ನಾನು ಯುಎಸ್‌ಎಸ್‌ಆರ್‌ನವನು. ನಾನು ಹುಟ್ಟಿದ್ದೇ ಇಲ್ಲಿ. ಬಾಲ್ಯದಿಂದಲೂ ಈ ನೆಲದಲ್ಲಿ ಆಡಿ ಬೆಳೆದಿದ್ದೇನೆ. ಶಾಂತಿಗಾಗಿ ಬೀದಿಗಿಳಿದು ಹೋರಾಡಲು ಕರೆ ನೀಡುತ್ತೇನೆ. ಆದರೆ ಪುಟಿನ್ ರಷ್ಯಾದವನಲ್ಲ ಎಂದು ನಾವೆಲ್ನಿ ತಿಳಿಸಿದ್ದಾರೆ.
ಬುಕಾರೆಸ್ಟ್: ಯುದ್ಧಪೀಡಿತ ಉಕ್ರೇನ್‌ನಲ್ಲಿ ವಿವಿಧ ದೇಶಗಳ ವಿದ್ಯಾರ್ಥಿಗಳು, ಪ್ರಜೆಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ತಮ್ಮ ದೇಶಗಳಿಗೆ ವಾಪಸ್ ಆಗಲು ಶತಪ್ರಯತ್ನ ನಡೆಸುತ್ತಿದ್ದಾರೆ. ಇಂತಹ ಬಿಕ್ಕಟ್ಟಿನ ಸಂದರ್ಭದಲ್ಲಿ ಭಾರತದ ಧ್ವಜ, ಪಾಕಿಸ್ತಾನ ಮತ್ತು ಟರ್ಕಿಶ್ ವಿದ್ಯಾರ್ಥಿಗಳು ಯುದ್ಧಪೀಡಿತ ಪ್ರದೇಶದಿಂದ ಪಾರಾಗಲು ನೆರವಾಗಿದೆ.
ಉಕ್ರೇನ್ನಿಂದ ರೊಮೇನಿಯಾದ ಬುಕಾರೆಸ್ಟ್ ನಗರಕ್ಕೆ ಆಗಮಿಸಿದ ಭಾರತೀಯ ವಿದ್ಯಾರ್ಥಿಗಳು, ರಾಷ್ಟ್ರೀಯ ತ್ರಿವರ್ಣ ಧ್ವಜವು ತಮಗೆ ಮತ್ತು ಕೆಲವು ಪಾಕಿಸ್ತಾನಿ, ಟರ್ಕಿಶ್ ವಿದ್ಯಾರ್ಥಿಗಳಿಗೆ ಯುದ್ಧ ಪೀಡಿತ ದೇಶದ ವಿವಿಧ ಚೆಕ್‌ಪೋಸ್ಟ್‌ಗಳನ್ನು ಸುರಕ್ಷಿತವಾಗಿ ದಾಟಲು ಸಹಾಯ ಮಾಡಿದೆ ಎಂದು ತಿಳಿಸಿದ್ದಾರೆ.
ಭಾರತೀಯ ವಿದ್ಯಾರ್ಥಿಗಳು ಮಾರುಕಟ್ಟೆಯಲ್ಲಿ ಕಲರ್ ಸ್ಪ್ರೈ ಮತ್ತು ಕರ್ಟೈನ್ ಖರೀದಿಸಿ ಸ್ವತಃ ತಾವೇ ಧ್ವಜದ ಚಿತ್ರವನ್ನು ಬಿಡಿಸಿದ್ದಾರೆ. ವಿದ್ಯಾರ್ಥಿಗಳೇ ರೂಪಿಸಿದ ತ್ರಿವರ್ಣ ಧ್ವಜ ಮಾದರಿ, ಅವರು ಗಡಿ ದಾಟಲು ಸಹಾಯವಾಗಿದೆ. ಈ ಕುರಿತು ಅನುಭವವನ್ನೂ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಉಕ್ರೇನ್ ಮೇಲೆ ರಷ್ಯಾ ವ್ಯಾಕ್ಯೂಮ್ ಬಾಂಬ್ ಪ್ರಯೋಗ ಆರೋಪ – ಏನಿದರ ವಿಶೇಷ?
ತ್ರಿವರ್ಣ ಧ್ವಜ ಹಿಡಿದುಕೊಂಡು ಪಾಕಿಸ್ತಾನ ಮತ್ತು ಟರ್ಕಿಶ್ ವಿದ್ಯಾರ್ಥಿಗಳು ಸಹ ಚೆಕ್‌ಪೋಸ್ಟ್‌ಗಳನ್ನು ದಾಟಿದ್ದಾರೆ ಎಂದು ಭಾರತದ ವಿದ್ಯಾರ್ಥಿಯೊಬ್ಬ ತಿಳಿಸಿದ್ದಾನೆ.
Indian tricolour came to rescue of fleeing Pakistani, Turkish students from Ukraine
ನವದೆಹಲಿ: ಉಕ್ರೇನ್‌ನಲ್ಲಿ ಭಾರತೀಯ ಪ್ರಜೆಗಳು ಕೇಂದ್ರ ಸರ್ಕಾರದ ವಿರುದ್ಧ ಗಂಭೀರ ಆರೋಪಗಳನ್ನು ಮಾಡುತ್ತಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಯುದ್ಧಪೀಡಿತ ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯ ಪ್ರಜೆಗಳನ್ನು ವಾಪಸ್ ಕರೆತರುವ ಪ್ರಯತ್ನಗಳನ್ನು ನಿಲ್ಲಿಸುವುದಿಲ್ಲ ಎಂದು ಮೋದಿ ಸ್ಪಷ್ಟಪಡಿಸಿದ್ದಾರೆ.
ಉತ್ತರ ಪ್ರದೇಶ ಚುನಾವಣೆ ಹಿನ್ನೆಲೆಯಲ್ಲಿ ಅಭಿಯಾನವೊಂದರಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಭಾರತ ಉದಯೋನ್ಮುಖ ಶಕ್ತಿಯಾಗಿ ಬೆಳೆದಿದೆ. ಉಕ್ರೇನ್‌ನಿಂದ ಭಾರತೀಯರನ್ನು ವಾಪಸ್ ಕರೆತರುವ ಸಾಮರ್ಥ್ಯವೂ ನಮ್ಮ ಸರ್ಕಾರಕ್ಕಿದೆ. ಈ ಪ್ರಯತ್ನವನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಖೆರ್ಸನ್ ನಗರ ರಷ್ಯಾ ವಶ, ಏಕಕಾಲದಲ್ಲಿ ಮೂರು ಕಡೆ ವೈಮಾನಿಕ ದಾಳಿ- 21 ಜನ ಸಾವು
ಸಶಸ್ತ್ರ ಪಡೆಗಳ ಶೌರ್ಯ ಮತ್ತು ಮೇಕ್ ಇನ್ ಇಂಡಿಯಾವನ್ನು ಪ್ರಶ್ನಿಸುವವರು ದೇಶವನ್ನು ಬಲಿಷ್ಠಗೊಳಿಸಲಾರರು ಎಂದು ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯ ಚುನಾವಣೆಗಳ ಆಕ್ರಮಣಕಾರಿ ಪ್ರಚಾರದ ನಡುವೆ, ಉಕ್ರೇನ್ ಬಿಕ್ಕಟ್ಟು ಮತ್ತು ಅಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳ ಅವಸ್ಥೆಯು ಸರ್ಕಾರದ ಮೇಲೆ ವಿರೋಧದ ಅಲೆಯನ್ನು ಹುಟ್ಟುಹಾಕಿದೆ. ಉಕ್ರೇನ್‌ನಿಂದ ಭಾರತೀಯರನ್ನು ಸ್ಥಳಾಂತರಿಸುವ ಕುರಿತು ಪ್ರಧಾನಿ ಮೋದಿ ನೇತೃತ್ವದಲ್ಲಿ ಈವರೆಗೂ ನಾಲ್ಕು ಸಭೆಗಳು ನಡೆದಿವೆ. ಇದನ್ನೂ ಓದಿ:ಪಕ್ಕದಲ್ಲಿ ಬಾಂಬ್ ಬಿದ್ದರೂ ಊಟ, ವಸತಿ ನೀಡುತ್ತಿದೆ ಭಾರತೀಯ ರೆಸ್ಟೋರೆಂಟ್
ಉಕ್ರೇನ್‌ನಲ್ಲಿ ಮಂಗಳವಾರ ರಷ್ಯಾ ಸೇನಾ ಪಡೆ ನಡೆಸಿದ ಶೆಲ್ ದಾಳಿಗೆ ಕರ್ನಾಟಕದ ವೈದ್ಯಕೀಯ ವಿದ್ಯಾರ್ಥಿ ನವೀನ್ ಬಲಿಯಾಗಿದ್ದಾರೆ. ಈ ಘಟನೆಯಾದ ಬಳಿಕ ಕೇಂದ್ರ ಸರ್ಕಾರದ ವಿರುದ್ಧ ಅಪಸ್ವರಗಳು ಕೇಳಿ ಬಂದಿದ್ದು, ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಸ್ಥಳಾಂತರಿಸುವ ಕುರಿತು ಒತ್ತಡ ಹೆಚ್ಚಾಗಿದೆ.
ಕೀವ್: ನೀವು ನಮ್ಮೊಂದಿಗಿದ್ದೇವೆ ಎಂಬುದನ್ನು ಸಾಬೀತುಪಡಿಸಿ, ಕತ್ತಲಿನ ವಿರುದ್ಧ ಬೆಳಕು ಜಯ ಸಾಧಿಸುತ್ತೆ ಎಂದು ಯೂರೋಪ್ ರಾಷ್ಟ್ರಗಳ ನಾಯಕರಿಗೆ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಭಾವಾವೇಷದಲ್ಲಿ ಕರೆ ನೀಡಿದ್ದಾರೆ.
ಯೂರೋಪ್ ನಾಯಕರೊಂದಿಗೆ ವೀಡಿಯೋ ಕರೆಯಲ್ಲಿ ಮಾತನಾಡಿದ ಅವರು, ನಾವು ನಮ್ಮ ನೆಲಕ್ಕಾಗಿ, ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿದ್ದೇವೆ. ನಮ್ಮ ದೇಶದ ಎಲ್ಲಾ ದೊಡ್ಡ ನಗರಗಳನ್ನು ಈಗ ನಿರ್ಬಂಧಿಸಲಾಗಿದೆ. ನೀವು ನಮ್ಮೊಂದಿಗಿದ್ದೀರಿ ಎಂಬುದನ್ನು ಸಾಬೀತುಪಡಿಸಿ. ನಮ್ಮನ್ನು ಇಲ್ಲಿಂದ ಹೋಗಲು ಬಿಡುವುದಿಲ್ಲ ಎಂದು ನೀವು ಸಾಬೀತುಪಡಿಸಿ. ನೀವು ನಿಜವಾಗಿಯೂ ಯುರೋಪಿಯನ್ನರು ಎಂದು ತೋರಿಸಿ. ಜೀವನವು ಸಾವಿನ ವಿರುದ್ಧ ಹಾಗೂ ಬೆಳಕು ಕತ್ತಲೆಯ ವಿರುದ್ಧ ಗೆಲ್ಲುತ್ತದೆ ಎಂದು ಭಾವುಕವಾಗಿ ನುಡಿದಿದ್ದಾರೆ. ಇದನ್ನೂ ಓದಿ: ರಷ್ಯಾ ಹಣಕಾಸು ಸಂಸ್ಥೆಗಳಿಗೆ ವೀಸಾ, ಮಾಸ್ಟರ್ ಕಾರ್ಡ್ ಬ್ಲಾಕ್ – ATMಗಳ ಮುಂದೆ ರಷ್ಯನ್ನರ ದಂಡು
ಇಂದು ನಾವು ನಿಮ್ಮೆಲ್ಲರನ್ನೂ, ಯೂರೋಪಿಯನ್ ಒಕ್ಕೂಟದ ದೇಶಗಳನ್ನು ಒಗ್ಗೂಡಿಸಿದ್ದೇವೆ. ಇದು ನನಗೆ ಖುಷಿಯ ವಿಚಾರ. ಆದರೆ ಇದಕ್ಕಾಗಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಬೆಲೆ ತೆರಬೇಕು ಎಂದು ನನಗೆ ತಿಳಿದಿರಲಿಲ್ಲ. ರಷ್ಯಾ ಆಕ್ರಮಣ ನನಗೆ, ಪ್ರತಿಯೊಬ್ಬ ಉಕ್ರೇನಿಯನ್ನರಿಗೆ ಮತ್ತು ದೇಶಕ್ಕೆ ದೊಡ್ಡ ದುರಂತವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಇಂದು ನಾವು ಮೌಲ್ಯಗಳಿಗಾಗಿ, ಹಕ್ಕುಗಳಿಗಾಗಿ, ಸ್ವಾತಂತ್ರ್ಯಕ್ಕಾಗಿ, ಸಮಾನವಾಗಿರಬೇಕೆಂಬ ಬಯಕೆಗಾಗಿ ಹೋರಾಡುತ್ತಿದ್ದೇವೆ. ರಷ್ಯಾ ಭಯೋತ್ಪಾದಕ ರಾಷ್ಟ್ರವಾಗಿದೆ. ಇದನ್ನು ಯಾರೂ ಕ್ಷಮಿಸುವುದಿಲ್ಲ, ಮರೆಯುವುದಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಉಕ್ರೇನ್ ಮೇಲೆ ರಷ್ಯಾ ವ್ಯಾಕ್ಯೂಮ್ ಬಾಂಬ್ ಪ್ರಯೋಗ ಆರೋಪ – ಏನಿದರ ವಿಶೇಷ?
ಮಾಸ್ಕೋ: ಯುಎಸ್ ಪಾವತಿ ಕಾರ್ಡ್ ಸಂಸ್ಥೆಗಳಾದ ವೀಸಾ ಮತ್ತು ಮಾಸ್ಟರ್ ಕಾರ್ಡ್ ತಮ್ಮ ನೆಟ್‌ವರ್ಕ್‌ನಿಂದ ರಷ್ಯಾದ ಹಣಕಾಸು ಸಂಸ್ಥೆಗಳನ್ನು ನಿರ್ಬಂಧಿಸಿವೆ. ಉಕ್ರೇನ್ ಮೇಲಿನ ರಷ್ಯಾ ಆಕ್ರಮಣಕ್ಕೆ ವಿರೋಧ ವ್ಯಕ್ತಪಡಿಸಿರುವ ಅಮೆರಿಕ ಹಲವು ನಿರ್ಬಂಧಗಳನ್ನು ವಿಧಿಸುತ್ತಿದೆ.
ಸೋಮವಾರದಿಂದಲೇ ಈ ನಿರ್ಬಂಧ ಅನ್ವಯವಾಗುವಂತೆ ಕ್ರಮ ಕೈಗೊಳ್ಳಲಾಗಿದೆ. ಮಾನವೀಯ ಸಹಾಯಕ್ಕಾಗಿ 15.14 ಕೋಟಿ (2 ಮಿಲಿಯನ್ ಡಾಲರ್) ದೇಣಿಗೆ ನೀಡುವುದಾಗಿ ವೀಸಾ ಸ್ಪಷ್ಟಪಡಿಸಿದೆ. ಮಾಸ್ಟರ್ ಕಾರ್ಡ್ ಕೂಡ 15.14 ಕೋಟಿ ರೂ. ಕೊಡುಗೆ ನೀಡುವುದಾಗಿ ತಿಳಿಸಿದೆ. ಇದನ್ನೂ ಓದಿ: ಉಕ್ರೇನ್ ಮೇಲೆ ರಷ್ಯಾ ವ್ಯಾಕ್ಯೂಮ್ ಬಾಂಬ್ ಪ್ರಯೋಗ ಆರೋಪ – ಏನಿದರ ವಿಶೇಷ?
ಸರ್ಕಾರದ ನಿರ್ಬಂಧಗಳ ಪ್ರಕಾರ ವಿಶೇಷವಾಗಿ ಗೊತ್ತುಪಡಿಸಿದ ರಾಷ್ಟ್ರದ್ದು ಎಂದು ಪಟ್ಟಿ ಮಾಡಲಾದ ಘಟಗಳಿಗೆ ವೀಸಾ ತನ್ನ ನೆಟ್‌ವರ್ಕ್‌ಗೆ ಪ್ರವೇಶವನ್ನು ಅಮಾನತುಗೊಳಿಸಿದೆ. ರಷ್ಯಾದ ಕೇಂದ್ರ ಬ್ಯಾಂಕ್ ಮತ್ತು ಎರಡನೇ ಅತಿ ದೊಡ್ಡ ಸಾಲದಾತ ವಿಟಿಬಿ ಸೇರಿದಂತೆ ವಿವಿಧ ಹಣಕಾಸು ಸಂಸ್ಥೆಗಳನ್ನು ಈ ಪಟ್ಟಿಗೆ ಸೇರಿಸಲಾಗಿದೆ. ಯುಎಸ್, ಬ್ರಿಟನ್, ಯೂರೋಪ್ ಮತ್ತು ಕೆನಡಾ ದೇಶಗಳು ರಷ್ಯಾದ ಮೇಲೆ ಹೊಸ ನಿರ್ಬಂಧಗಳನ್ನು ಶನಿವಾರವೂ ಘೋಷಿಸಿವೆ.
ಹಲವು ನಿರ್ಬಂಧಗಳ ಹಿನ್ನೆಲೆಯಲ್ಲಿ ಬ್ಯಾಂಕ್ ಕಾರ್ಡ್‌ಗಳು ಕಾರ್ಯನಿರ್ವಹಿಸುವುದನ್ನು ನಿಲ್ಲಿಸಬಹುದು, ಬ್ಯಾಂಕ್‌ಗಳು ನಗದು ಹಿಂಪಡೆಯುವಿಕೆಯನ್ನು ಮಿತಿಗೊಳಿಸಬಹುದು ಎಂದು ಆತಂಕದಲ್ಲಿ ರಷ್ಯನ್ನರು ಎಟಿಎಂಗಳ ಮುಂದೆ ಅಪಾರ ಸಂಖ್ಯೆಯಲ್ಲಿ ಜಮಾಯಿಸುತ್ತಿದ್ದಾರೆ. ಭಾನುವಾರ ಮತ್ತು ಸೋಮವಾರ ಎಟಿಎಂಗಳ ಮುಂದೆ ರಷ್ಯನ್ನರ ಉದ್ದದ ಕ್ಯೂ ಇದ್ದ ದೃಶ್ಯಗಳು ಕಂಡುಬಂದಿದ್ದವು. ಇದನ್ನೂ ಓದಿ: ಊಟ ತರಲು ನನ್ನ ಬಳಿ ದುಡ್ಡಿಲ್ಲ, ಸ್ವಲ್ಪ ಹಣ ಹಾಕು ಅಂದ ಅದೇ ನವೀನ್‍ನ ಕೊನೆ ಮಾತು: ಶ್ರೀಕಾಂತ್
ರಷ್ಯಾ ಕಳೆದ ವಾರ ಉಕ್ರೇನ್ ಮೇಲೆ ಯುದ್ಧವನ್ನು ಸಾರಿತು. ಇದಕ್ಕೆ ಅನೇಕ ಪಾಶ್ಚಿಮಾತ್ಯ ರಾಷ್ಟ್ರಗಳು ವಿರೋಧ ವ್ಯಕ್ತಪಡಿಸಿವೆ. ಅನೇಕ ಪಾಶ್ಚಿಮಾತ್ಯ ಬ್ಯಾಂಕ್‌ಗಳು, ವಿಮಾನಯಾನ ಸಂಸ್ಥೆಗಳು ರಷ್ಯಾದೊಂದಿಗೆ ಸಂಬಂಧವನ್ನು ಕಡಿತಗೊಳಿಸಿವೆ. ರಷ್ಯಾದ ಕ್ರಮಗಳು ಸ್ವೀಕಾರಾರ್ಹವಲ್ಲ ಎಂದು ವಿರೋಧಿಸಿವೆ. ಇದನ್ನೂ ಓದಿ: ಉಕ್ರೇನ್‌ನಲ್ಲಿ ಶೆಲ್ ದಾಳಿಗೆ ಮಡಿದ ಕನ್ನಡಿಗನಿಗೆ ಸ್ಯಾಂಡಲ್ ವುಡ್ ಕಣ್ಣೀರು
ವಾಷಿಂಗ್ಟನ್: ರಷ್ಯಾ ದಾಳಿಯಿಂದ ಸಂಕಷ್ಟಕ್ಕೆ ಸಿಲುಕಿರುವ ಉಕ್ರೇನ್‌ಗೆ ಭದ್ರತಾ ನೆರವು ನೀಡುವುದಾಗಿ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಘೋಷಿಸಿದ್ದಾರೆ.
ಉಕ್ರೇನ್‌ಗೆ ತುರ್ತು ರಕ್ಷಣಾ ನೆರವಾಗಿ 4,503 ಕೋಟಿ ರೂ. (600 ಮಿಲಿಯನ್ ಡಾಲರ್) ನೀಡುವುದಾಗಿ ಶನಿವಾರ ಜೋ ಬೈಡೆನ್ ತಿಳಿಸಿದ್ದಾರೆ.
1961ರ ವಿದೇಶಿ ನೆರವು ಕಾಯಿದೆಯಡಿ ರಕ್ಷಣಾ ಇಲಾಖೆಯ ಸೇವೆಗಳು, ಉಪಕರಣ ಖರೀದಿ, ಮಿಲಿಟರಿ ಶಿಕ್ಷಣ ಮತ್ತು ತರಬೇತಿಗಾಗಿ 2,626 ಕೋಟಿ ರೂ. ಹಾಗೂ ಒಟ್ಟು ನೆರವಿಗಾಗಿ 1,876 ಕೋಟಿ ರೂ. ಬಿಡುಗಡೆ ಮಾಡುವಂತೆ ರಾಜ್ಯ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್‌ಗೆ ಸೂಚಿಸಿದ್ದಾರೆ. ಇದನ್ನೂ ಓದಿ: ಉಕ್ರೇನ್‍ನಲ್ಲಿ ಸಿಲುಕಿದ್ದ ವಿದ್ಯಾರ್ಥಿನಿಯ ಸಂಪರ್ಕ ಸಿಗದೇ ಪಾಲಕರು ಕಂಗಾಲು
ಉಕ್ರೇನ್ ಮೇಲೆ ಮಿಲಿಟರಿ ದಾಳಿ ನಡೆಸುವುದಾಗಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಘೋಷಿಸಿದ್ದರು. ಇದಾದ ಕೆಲವೇ ಹೊತ್ತಿನಲ್ಲಿ ರಷ್ಯಾ ಸೇನೆ ಮತ್ತು ಕ್ಷಿಪಣಿಗಳು ಉಕ್ರೇನ್ ಮೇಲೆ ದಾಳಿ ನಡೆಸಿತು. ರಷ್ಯಾ ನಡೆಗೆ ಅಮೆರಿಕ ಸೇರಿದಂತೆ ಅನೇಕ ಯೂರೋಪ್ ರಾಷ್ಟ್ರಗಳು ವಿರೋಧ ವ್ಯಕ್ತಪಡಿಸಿವೆ.