Tag: russia woman

  • ಇದೇ ರೀತಿ 20 ದೇಶದ ಕಾಡಿನಲ್ಲಿ ವಾಸವಿದ್ದೆವು – ಗೋಕರ್ಣ ಗುಹೆಯಲ್ಲಿ ವಾಸವಿದ್ದ ರಷ್ಯಾ ಮಹಿಳೆ ಮಾತು

    ಇದೇ ರೀತಿ 20 ದೇಶದ ಕಾಡಿನಲ್ಲಿ ವಾಸವಿದ್ದೆವು – ಗೋಕರ್ಣ ಗುಹೆಯಲ್ಲಿ ವಾಸವಿದ್ದ ರಷ್ಯಾ ಮಹಿಳೆ ಮಾತು

    – ನಾವು ಮೂವರು ಪ್ರಕೃತಿಯ ಮಧ್ಯೆ ಖುಷಿಯಾಗಿ ಜೀವನ ಮಾಡುತ್ತಿದ್ದೆವು ಎಂದ ಮೋಹಿ

    ಬೆಂಗಳೂರು: 20 ದೇಶದಲ್ಲಿ ಇದೇ ರೀತಿ ಕಾಡಿನಲ್ಲಿ ವಾಸವಿದ್ದೆವು, ಪ್ರಕೃತಿಯ ಜೊತೆಗಿದ್ದು ಅಪಾರವಾದ ಅನುಭವ ಸಿಗುತ್ತದೆ ಎಂದು ಗೋಕರ್ಣ ಗುಹೆಯಲ್ಲಿ (Gokarna Cave) ವಾಸವಿದ್ದ ರಷ್ಯಾ ಮಹಿಳೆ (Russia Woman) ಮೋಹಿ ತಮ್ಮ ಅನುಭವ ಹಂಚಿಕೊಂಡಿದ್ದಾರೆ.

    ಸುದ್ದಿ ಮಾಧ್ಯಮದೊಂದಿಗೆ ಮಾತನಾಡಿದ ಮಹಿಳೆ, ನನ್ನ ದೊಡ್ಡ ಮಗ ಸಾವನ್ನಪ್ಪಿದ್ದ. ಹೀಗಾಗಿ ವೀಸಾ ಪಡೆಯಲು ಸಾಧ್ಯವಾಗಿರಲಿಲ್ಲ. ಭಾರತದ ವೀಸಾ ಅವಧಿ ಮುಗಿದಿತ್ತು. ಅದಕ್ಕಾಗಿ ನಾನು 20 ದೇಶದಲ್ಲಿ ಇದೇ ರೀತಿ ಕಾಡಿನಲ್ಲಿ ವಾಸವಿದ್ದೆ. ಪ್ರಕೃತಿಯ ಜೊತೆಗಿದ್ದು ಅಪಾರವಾದ ಅನುಭವ ಸಿಗುತ್ತದೆ. ಬದುಕಿನಲ್ಲಿ ಚಂದನೆಯ ಅನುಭವ ಸಿಗಬೇಕು ಎನ್ನುವ ಕಾರಣಕ್ಕೆ ಗುಹೆಯಲ್ಲಿ ಪ್ರಕೃತಿಯ ಮಧ್ಯೆ ವಾಸವಾಗಿದ್ದೆ. ಇನ್ನೂ ನನ್ನ ಮಕ್ಕಳು ಯಾವತ್ತೂ ಹಸಿವೆಯಿಂದ ಬಳಲುತ್ತಿರಲಿಲ್ಲ. ಒಳ್ಳೊಳ್ಳೆ ಆಹಾರವನ್ನು ತಯಾರಿಸಿ ತಿನ್ನುತ್ತಿದ್ದೆವು ಎಂದರು.ಇದನ್ನೂ ಓದಿ: Uttara Kannada | ದಟ್ಟ ಅರಣ್ಯದ ಗುಹೆಯಲ್ಲಿ ಚಿಕ್ಕ ಮಕ್ಕಳೊಂದಿಗೆ ವಾಸ – ರಷ್ಯಾ ಮೂಲದ ಮಹಿಳೆಯ ರಕ್ಷಣೆ

    ನಾವು ಕಾಡಿನ ಮಧ್ಯೆ ಇದ್ದ ನದಿಯಲ್ಲಿ ಈಜುತ್ತಿದ್ದೇವೆ, ಮಕ್ಕಳು ಕೂಡ ಈಜುತ್ತಿದ್ದರು. ಮಕ್ಕಳು ವಾಟರ್ ಫಾಲ್ಸ್‌ನಲ್ಲಿ ಚೆನ್ನಾಗಿ ಆಟವಾಡುತ್ತಿದ್ದರು. ಚೆನ್ನಾಗಿ ನಿದ್ದೆ ಕೂಡ ಮಾಡುತ್ತಿದ್ದೆವು. ನಾವು ಮೂರು ಜನ ಪ್ರಕೃತಿಯ ಮಧ್ಯೆ ಖುಷಿಯಾಗಿ ಜೀವನ ಮಾಡುತ್ತಿದ್ದೆವು. ಹಳ್ಳಿಯ ಪಕ್ಕದಲ್ಲಿಯೇ ಈ ಗುಹೆ ಇತ್ತು. ಗುಹೆ ಅಂದ್ರೆ ತೀರಾ ಸಣ್ಣ ಇಕ್ಕಟ್ಟು ಗುಹೆ ಅಲ್ಲ, ವಾಸಕ್ಕೆ ಯೋಗ್ಯವಾಗಿದ್ದ ಗುಹೆಯಾಗಿತ್ತು. ಇನ್ನೂ ಗುಹೆಯೊಳಗೆ ಹಾವುಗಳು ಆಗಾಗ ಹರಿದಾಡುತ್ತಿದ್ದವು, ಆದರೆ ನಾವು ಅವುಗಳಿಗೆ ಏನು ಮಾಡುತ್ತಿರಲಿಲ್ಲ. ಹೀಗಾಗಿ ಹಾವುಗಳು ಸುಮ್ಮನೇ ಹೋಗುತ್ತಿದ್ದವು. ನಾನು ಯಾವತ್ತೂ ಮಕ್ಕಳನ್ನು ವೈದ್ಯರ ಬಳಿ ಕರೆದುಕೊಂಡು ಹೋಗಿರಲಿಲ್ಲ. ಇಲ್ಲಿಗೆ ಬಂದ ಮೇಲೆ ವೈದ್ಯರ ಬಳಿ ಮಕ್ಕಳನ್ನು ಕರೆದುಕೊಂಡು ಹೋದರು. ಪ್ರಕೃತಿಯ ಮಧ್ಯೆ ಇದ್ದೆವು, ಹೀಗಾಗಿ ಆರೋಗ್ಯವಾಗಿಯೇ ಇರುತ್ತೇವೆ ಎಂದು ತಿಳಿಸಿದರು.

    ಜು.12ರಂದು ಗೋಕರ್ಣದ ರಾಮತೀರ್ಥ ದಟ್ಟಾರಣ್ಯದಲ್ಲಿನ ಗುಹೆಯಲ್ಲಿ ಏಕಾಂತವಾಗಿ ವಾಸಿಸುತ್ತಿದ್ದ ರಷ್ಯಾ ಮೂಲದ ಮಹಿಳೆ ಹಾಗೂ ಎರಡು ಪುಟ್ಟ ಮಕ್ಕಳನ್ನು ರಕ್ಷಣೆ ಮಾಡಲಾಗಿತ್ತು. ಮಹಿಳೆಯನ್ನು ಮೋಹಿ (40), ಅವರ ಪುಟ್ಟ ಮಕ್ಕಳಾದ ಪ್ರೆಯಾ (06) ಹಾಗೂ ಅಮಾ (4) ಎಂದು ಗುರುತಿಸಲಾಗಿತ್ತು.

    ರಷ್ಯಾದಿಂದ ಬಿಸಿನೆಸ್ ವಿಸಾದಡಿ ಗೋವಾಕ್ಕೆ ಬಂದಿದ್ದ ಈ ಮಹಿಳೆ ಗೋವಾ ಮೂಲಕ ಗೋಕರ್ಣಕ್ಕೆ ಬಂದು ಇಲ್ಲಿನ ದಟ್ಟ ಅರಣ್ಯವಾದ ರಾಮತೀರ್ಥ ಬಳಿಯ ಗುಹೆಯಲ್ಲಿ ತನ್ನ ಮಕ್ಕಳೊಂದಿಗೆ ವಾಸವಿದ್ದಳು. ಅಲ್ಲಿಯೇ ಚಿಕ್ಕ ರುದ್ರನ ಮೂರ್ತಿ ಇಟ್ಟುಕೊಂಡು ಪೂಜಾ ಕಾರ್ಯ ಮಾಡುತ್ತಾ ದಿನ ಕಳೆಯುತಿದ್ದಳು.

    ರಷ್ಯಾದ ಮೋಹಿಗೆ ಆಧ್ಯಾತ್ಮದ ಕಡೆ ಹೆಚ್ಚು ಆಸಕ್ತಿ ಇರುವುದರಿಂದ ಪ್ರಕೃತಿಯಲ್ಲಿ ಇರಬೇಕು ಎಂದು ತನ್ನ ಮಕ್ಕಳೊಂದಿಗೆ ಏಕಾಂಗಿಯಾಗಿ ಗುಹೆ ಸೇರಿದ್ದಳು. ಗುಡ್ಡ ಕುಸಿತವಾಗಿರುವ ರಾಮತೀರ್ಥ ಗುಡ್ಡದ ಗುಹೆಯಲ್ಲಿ ತಮ್ಮ ಪುಟ್ಟ ಮಕ್ಕಳೊಂದಿಗೆ ಕತ್ತಲಲ್ಲೇ ಬದುಕು ಕಳೆಯುತಿದ್ದಳು. ಎಸ್.ಪಿ ಎಂ ನಾರಾಯಣ್ ಸಲಹೆಯಂತೆ ಆಕೆಗೆ ಸ್ಥಳೀಯ ಎನ್‌ಜಿಓ ಮೂಲಕ ಆಪ್ತ ಸಮಾಲೋಚನೆ ನಡೆಸಿ ಬೆಂಗಳೂರಿಗೆ ಕಳುಹಿಸಿಕೊಡಲಾಗಿತ್ತು. ರಷ್ಯಾ ರಾಯಭಾರ ಕಚೇರಿಯನ್ನು ಸಂಪರ್ಕಿಸಿ, ಆಕೆಯನ್ನು ಆಕೆಯ ದೇಶಕ್ಕೆ ಪುನಃ ಕಳುಹಿಸಿಕೊಡಲು ವ್ಯವಸ್ಥೆ ಮಾಡಲಾಗಿತ್ತು.ಇದನ್ನೂ ಓದಿ: ಭಾರತಕ್ಕೆ ಟೆಸ್ಲಾ ಎಂಟ್ರಿ | ಮೈಲೇಜ್‌ ಎಷ್ಟು? ಬೇರೆ ದೇಶದಲ್ಲಿ ದರ ಎಷ್ಟಿದೆ? ಭಾರತದಲ್ಲಿ ದುಬಾರಿ ಯಾಕೆ?

  • Uttara Kannada | ದಟ್ಟ ಅರಣ್ಯದ ಗುಹೆಯಲ್ಲಿ ಚಿಕ್ಕ ಮಕ್ಕಳೊಂದಿಗೆ ವಾಸ – ರಷ್ಯಾ ಮೂಲದ ಮಹಿಳೆಯ ರಕ್ಷಣೆ

    Uttara Kannada | ದಟ್ಟ ಅರಣ್ಯದ ಗುಹೆಯಲ್ಲಿ ಚಿಕ್ಕ ಮಕ್ಕಳೊಂದಿಗೆ ವಾಸ – ರಷ್ಯಾ ಮೂಲದ ಮಹಿಳೆಯ ರಕ್ಷಣೆ

    ಕಾರವಾರ: ಹಿಂದೂ ಧರ್ಮದ ಧಾರ್ಮಿಕತೆಗೆ ವಾಲಿದ ರಷ್ಯಾ (Russia) ಮೂಲದ ಮಹಿಳೆಯೊಬ್ಬಳು ತನ್ನ ಇಬ್ಬರು ಪುಟ್ಟ ಮಕ್ಕಳೊಂದಿಗೆ ದಟ್ಟಾರಣ್ಯದಲ್ಲಿನ ಗುಹೆಯಲ್ಲಿ ಏಕಾಂತವಾಗಿ ವಾಸವಿದ್ದು ಇವರನ್ನು ರಕ್ಷಿಸಿದ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಕುಮಟಾ (Kumta) ತಾಲೂಕಿನ ಗೋಕರ್ಣದ ರಾಮತೀರ್ಥದ ಅರಣ್ಯದಲ್ಲಿ ನಡೆದಿದೆ.

    ಮೋಹಿ (40), ಅವರ ಪುಟ್ಟ ಮಕ್ಕಳಾದ ಪ್ರೆಯಾ (06) ಹಾಗೂ ಅಮಾ (4) ರಕ್ಷಣೆಗೊಳಗಾದ ರಷ್ಯಾ ಮೂಲದ ಪ್ರಜೆಗಳು. ರಷ್ಯಾದಿಂದ ಬಿಸಿನೆಸ್ ವಿಸಾ ದಡಿ ಗೋವಾಕ್ಕೆ ಬಂದಿದ್ದ ಈ ಮಹಿಳೆ ಗೋವಾ ಮೂಲಕ ಗೋಕರ್ಣಕ್ಕೆ ಬಂದು ಇಲ್ಲಿನ ದಟ್ಟ ಅರಣ್ಯವಾದ ರಾಮತೀರ್ಥ ಬಳಿಯ ಗುಹೆಯಲ್ಲಿ ತನ್ನ ಮಕ್ಕಳೊಂದಿಗೆ ವಾಸವಿದ್ದಳು. ಅಲ್ಲಿಯೇ ಚಿಕ್ಕ ರುದ್ರನ ಮೂರ್ತಿ ಇಟ್ಟುಕೊಂಡು ಪೂಜಾ ಕಾರ್ಯ ಮಾಡುತ್ತಾ ದಿನ ಕಳೆಯುತಿದ್ದಳು. ಸಿಪಿಐ ಶ್ರೀಧರ್ ನೇತ್ರತ್ವದ ತಂಡ ಈ ಭಾಗದಲ್ಲಿ ಗುಡ್ಡ ಕುಸಿತವಾದ್ದರಿಂದ ಗಸ್ತು ತಿರುಗುವಾಗ ಗುಹೆಯಲ್ಲಿ ಯಾರೋ ವಾಸವಾಗಿರುವುದನ್ನು ಪತ್ತೆ ಮಾಡಿ ವಿದೇಶಿ ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ. ಇದನ್ನೂ ಓದಿ:  ದೆಹಲಿಯಲ್ಲಿ ಕುಸಿದು ಬಿದ್ದ 4 ಅಂತಸ್ತಿನ ಕಟ್ಟಡ – 14 ತಿಂಗಳ ಮಗು ಸೇರಿ 8 ಮಂದಿ ರಕ್ಷಣೆ

    ರಷ್ಯಾದ ಮೋಹಿಗೆ ಆಧ್ಯಾತ್ಮದ ಕಡೆ ಹೆಚ್ಚು ಆಸಕ್ತಿ ಇರುವುದರಿಂದ ಪ್ರಕೃತಿಯಲ್ಲಿ ಇರಬೇಕು ಎಂದು ತನ್ನ ಮಕ್ಕಳೊಂದಿಗೆ ಏಕಾಂಗಿಯಾಗಿ ಗುಹೆ ಸೇರಿದ್ದಳು. ಗುಡ್ಡ ಕುಸಿತವಾಗಿರುವ ರಾಮತೀರ್ಥ ಗುಡ್ಡದ ಗುಹೆಯಲ್ಲಿ ತಮ್ಮ ಪುಟ್ಟ ಮಕ್ಕಳೊಂದಿಗೆ ಕತ್ತಲಲ್ಲೇ ಬದುಕು ಕಳೆಯುತಿದ್ದಳು. ಎಸ್.ಪಿ ಎಂ ನಾರಾಯಣ್ ಸಲಹೆಯಂತೆ ಆಕೆಗೆ ಸ್ಥಳೀಯ ಎನ್‌ಜಿಓ ಮೂಲಕ ಆಪ್ತ ಸಮಾಲೋಚನೆ ನಡೆಸಿ ಬೆಂಗಳೂರಿಗೆ ಕಳುಹಿಸಿಕೊಡಲಾಗಿದ್ದು, ರಷ್ಯಾ ರಾಯಭಾರ ಕಚೇರಿಯನ್ನು ಸಂಪರ್ಕಿಸಲಾಗಿದ್ದು ಆಕೆಯನ್ನು ಆಕೆಯ ದೇಶಕ್ಕೆ ಪುನಃ ಕಳುಹಿಸಿಕೊಡಲು ವ್ಯವಸ್ಥೆ ಮಾಡಲಾಗಿದೆ. ಇದನ್ನೂ ಓದಿ: ಬೆಂಗಳೂರಲ್ಲಿ ಮಳೆ ಅವಾಂತರ – ಕಾರಿನ ಮೇಲೆ ಬಿದ್ದ ಬೃಹತ್‌ ಮರ, ಚಾಲಕ ಗ್ರೇಟ್‌ ಎಸ್ಕೇಪ್‌

  • ಹಂಪಿ ಉತ್ಸವದ ವೇಳೆ ರಷ್ಯಾ ಯುವತಿಯೊಂದಿಗೆ ಪೂಜಾರಿಯ ಸೆಕ್ಸ್- ಪ್ರಶ್ನಿಸಿದ ಯುವಕನ ಮೇಲೆ ಹಲ್ಲೆ

    ಹಂಪಿ ಉತ್ಸವದ ವೇಳೆ ರಷ್ಯಾ ಯುವತಿಯೊಂದಿಗೆ ಪೂಜಾರಿಯ ಸೆಕ್ಸ್- ಪ್ರಶ್ನಿಸಿದ ಯುವಕನ ಮೇಲೆ ಹಲ್ಲೆ

    – ಉತ್ಸವದಲ್ಲಿ ಎಸಿ ಮೇಲೆ ಜೆಡಿಎಸ್ ಶಾಸಕನ ದರ್ಪ
    – ಕಾರ್ಯಕ್ರಮ ತಡವಾಗಿದ್ದನ್ನು ಪ್ರಶ್ನಿಸಿದ ಮಂಗಳಮುಖಿಗೆ ಲಾಠಿ ಏಟು

    ಬಳ್ಳಾರಿ: ಮೂರು ದಿನಗಳ ಹಂಪಿ ಉತ್ಸವದ ಉದ್ಘಾಟನೆ ದಿನವೇ ಮೂರು ವಿಭಿನ್ನ ಅವಾಂತರ ಸೃಷ್ಠಿಯಾದ ಘಟನೆ ನಡೆದಿದೆ. ಹಂಪಿ ಉತ್ಸವದ ವೇಳೆಯೇ ರಷ್ಯಾ ಯುವತಿ ಜೊತೆ ಪೂಜಾರಿ ಸೆಕ್ಸ್ ಮಾಡಿದ್ದು, ಇದನ್ನು ಪ್ರಶ್ನಿಸಿದ ವ್ಯಕ್ತಿಯ ಮೇಲೆ  ಹಲ್ಲೆ ನಡೆಸಿದ್ದಾರೆ.

    ಹಂಪಿಯ ಆಂಜನೇಯ ದೇವಾಲಯದ ಬಳಿ ರಷ್ಯಾ ಯುವತಿಯೊಬ್ಬಳು ದೇವಾಲಯದ ಪೂಜಾರಿ ರಾಜಮೋಹನ್ ಜೊತೆ ಸೆಕ್ಸ್ ನಲ್ಲಿ ತೊಡಗಿದ್ದಳು. ಇದನ್ನು ಕಂಡ ಸ್ಥಳೀಯರು ಇಬ್ಬರನ್ನು ಹಿಡಿಯಲು ಯತ್ನಿಸಿದರು.

    ಈ ವೇಳೆ ರತಿಕ್ರೀಡೆಯಲ್ಲಿ ತೊಡಗಿದ್ದ ವಿದೇಶಿ ಮಹಿಳೆ ಹಾಗೂ ಪೂಜಾರಿ ಸ್ಥಳೀಯ ಯುವಕ ರಾಜಶೇಖರ್ ಎಂಬಾತನ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದರು. ಆದ್ರೆ ಸ್ಥಳೀಯರು ವಿದೇಶಿ ಮಹಿಳೆಯನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

    ಹಂಪಿ ಉತ್ಸವದ ಉದ್ಘಾಟನೆ ದಿನವೇ ಮತ್ತೊಂದು ಅವಾಂತರ ನಡೆದಿದೆ. ಹಂಪಿ ಉತ್ಸವದಲ್ಲಿ ಎಸಿ ಮೇಲೆ ಜೆಡಿಎಸ್ ಶಾಸಕ ದರ್ಪ ತೋರಿದ್ದಾರೆ. ಪುತ್ರನನ್ನು ವೇದಿಕೆಯ ಮೇಲೆ ಬಿಡದಿದ್ದಕ್ಕೆ ಗರಂ ಆದ ಹಗರಿಬೊಮ್ಮನಹಳ್ಳಿ ಶಾಸಕ ಭೀಮಾ ನಾಯ್ಕ್, ಹೊಸಪೇಟೆ ಎಸಿಗೆ ಅವ್ಯಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಕೊನೆಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್, ಶಾಸಕ ಆನಂದ್ ಸಿಂಗ್ ಸ್ಥಳಕ್ಕೆ ಬಂದು ಪರಿಸ್ಥಿತಿ ತಿಳಿಗೊಳಿಸಿದ್ರು. ಶಾಸಕರು ಅಧಿಕಾರಿಯನ್ನು ಎಲ್ಲಾ ಜನರ ಮುಂದೆ ಅವ್ಯಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದನ್ನು ಕಂಡ ಸಚಿವರು, ಮಾಧ್ಯಮವರಿಗೆ ಸುದ್ದಿ ಮಾಡದಂತೆ ಮನವಿ ಮಾಡಿ ಕಾರ್ಯಕ್ರಮದ ಹೆಸರು ಕೆಡಿಸದಂತೆ ಹೇಳಿದ್ರು.

    ಟಿಪ್ಪು ಗಾಯನ ಕಾರ್ಯಕ್ರಮ ತಡವಾಗಿದ್ದನ್ನು ಪ್ರಶ್ನಿಸಿದ ಮಂಗಳಮುಖಿಯೊಬ್ಬರನ್ನು ಪೊಲೀಸರು ಹಿಗ್ಗಾಮುಗ್ಗಾ ಥಳಿಸಿ ಠಾಣೆಗೆ ಕರೆದೊಯ್ದುರು. ಹೀಗಾಗಿ ಹಂಪಿ ಉತ್ಸವದ ಮೊದಲ ದಿನವೇ ಮೂರು ಅವಘಡಗಳು ಸಂಭವಿಸಿದ್ದು ಜನರ ಆಕ್ರೋಶಕ್ಕೆ ಕಾರಣವಾಯಿತು.

    ಈ ಎಲ್ಲಾ ಅವಾಂತರ ಅನಾಚಾರಗಳ ನಡುವೆ ಹಂಪಿ ಉತ್ಸವ ಸಾಂಸ್ಕೃತಿಕ ಕಾರಣಕ್ಕೆ ಕಳೆಗಟ್ಟಿತ್ತು. ಬಸವಣ್ಣ ವೇದಿಕೆಯಲ್ಲಿ ಸ್ಯಾಂಡಲ್‍ವುಡ್ ಗಾಯಕ ಟಿಪ್ಪು ಹಾಗೂ ಸಂಗಡಿಗರು, ಗಾಯತ್ರಿ ಪೀಠ ಮೈದಾನ ವೇದಿಕೆಯಲ್ಲಿ ಬಾಲಿವುಡ್ ಗಾಯಕ ಕುನಾಲ್ ಗಾಂಜಾವಾಲ ಹಾಡುಗಳನ್ನು ಹಾಡಿ ಪೇಕ್ಷಕರನ್ನು ಹುಚ್ಚೆದ್ದು ಕುಣಿಯುವಂತೆ ಮಾಡಿದ್ರು.

    ಈ ನಡುವೆ ಸಿಎಂ ಸಿದ್ದರಾಮಯ್ಯ ಬಿಜೆಪಿ ಶಾಸಕ ಆನಂದ್ ಸಿಂಗ್ ಕಾಲೆಳೆದರು. ಹಂಪಿ ಉತ್ಸವಕ್ಕೂ ಮುನ್ನ ಕಮಲಾಪುರ ವನ್ಯಮೃಗಾಲಯ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ಶಾಸಕ ಆನಂದ್‍ಸಿಂಗ್ ಹೆಸರು ಕೂಗಿ “ಏ ಆನಂದ್ ಸಿಂಗ್ ಮುಂದೆ ನಾವೇ ಅಧಿಕಾರಕ್ಕೆ ಬರುತ್ತೇವೆ” ಅಂತಾ ಟಾಂಗ್ ಕೊಟ್ರು. ಇದಕ್ಕೆ ಪ್ರತಿಯಾಗಿ ಬಿಜೆಪಿ ಶಾಸಕ ಆನಂದಸಿಂಗ್, ಮುಂದೆ ನಾವೇ ಅಧಿಕಾರಕ್ಕೆ ಬರುತ್ತೇವೆ ಬಿಡಿ ಅಂತಾ ಸಿಎಂಗೆ ಕಿಚಾಯಿಸಿದ್ರು.