Tag: russia

  • ಉಕ್ರೇನ್‍ನನ್ನು ವಶಪಡಿಸಿಕೊಳ್ಳುವಷ್ಟು ಶಕ್ತಿ ರಷ್ಯಾಕ್ಕಿಲ್ಲ: ಝೆಲೆನ್ಸ್ಕಿ

    ಉಕ್ರೇನ್‍ನನ್ನು ವಶಪಡಿಸಿಕೊಳ್ಳುವಷ್ಟು ಶಕ್ತಿ ರಷ್ಯಾಕ್ಕಿಲ್ಲ: ಝೆಲೆನ್ಸ್ಕಿ

    ಕೀವ್: ರಷ್ಯಾದ ಆಕ್ರಮಣಕಾರರು ಸಾಕಷ್ಟು ಶಸ್ತ್ರಾಸ್ತ್ರಗಳನ್ನು ಹೊಂದಿದ್ದಾರೆ. ಆದರೆ ಅವರು ಉಕ್ರೇನ್‍ನನ್ನು ವಶಪಡಿಸಿಕೊಳ್ಳುವಷ್ಟು ಶಕ್ತಿಯನ್ನು ರಷ್ಯಾ ಹೊಂದಿಲ್ಲ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಟೀಕಿಸಿದರು.

    ಫೆಬ್ರವರಿ 24ರಂದು ದಾಳಿ ನಡೆಸಿದ ರಷ್ಯಾದ ವಿರುದ್ಧ ಉಕ್ರೇನ್‍ನ ಜನರನ್ನು ಒಗ್ಗೂಡಿಸಲು ಈ ವೀಡಿಯೋ ಸಂದೇಶವನ್ನು ಬಿಡುಗಡೆ ಮಾಡಿದ್ದಾರೆ. ಉಕ್ರೇನ್‌ನ ಜನರಿಗೆ ಧೈರ್ಯ ತುಂಬುವ  ಹಾಗೂ ದೇಶಕ್ಕಾಗಿ ಹೋರಾಡಲು ಸ್ಪೂರ್ತಿ ನೀಡುವ ಸಂದೇಶ ಇದರಲ್ಲಿದೆ.

    ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಸಂದೇಶವನ್ನು ಪೋಸ್ಟ್ ಮಾಡಿರುವ ಅವರು, ರಷ್ಯಾದ ಆಕ್ರಮಣಕಾರರು ನಮ್ಮನ್ನು ವಶಪಡಿಸಿಕೊಳ್ಳಲು ಸಾಧ್ಯವಿಲ್ಲ. ಅವರು ಕೇವಲ ಹಿಂಸೆಯ ಮೇಲೆ ಮಾತ್ರ ಹಿಡಿತವನ್ನು ಸಾಧಿಸಿದ್ದಾರೆ ಜೊತೆಗೆ ಅವರ ಹತ್ತಿರ ಶಸ್ತ್ರಾಸ್ತ್ರಗಳು ಹೆಚ್ಚಿವೆ. ಆದರೆ ಅವರಿಗೆ ಉಕ್ರೇನ್‍ನನ್ನು ವಶ ಪಡಿಸಿಕೊಳ್ಳುವ ಶಕ್ತಿ ಹಾಗೂ ಮನೋಭಾವವು ಇಲ್ಲ ಎಂದು ಹೇಳಿದರು. ಇದನ್ನೂ ಓದಿ: ಮಮತಾ ಬ್ಯಾನರ್ಜಿ ಬಿಜೆಪಿ ಏಜೆಂಟ್: ಕಾಂಗ್ರೆಸ್

    ರಷ್ಯಾದ ಆಕ್ರಮಣಕಾರರು ಸಾಮಾನ್ಯ ಜೀವನಕ್ಕೆ ಯಾವುದೇ ನೈಸರ್ಗಿಕ ಆಧಾರವನ್ನು ಹೊಂದಿಲ್ಲ. ಆದ್ದರಿಂದ ಜನರು ಸಂತೋಷ ಪಡುತ್ತಿದ್ದಾರೆ. ಜೊತೆಗೆ ಕನಸು ಕಾಣುತ್ತಿದ್ದಾರೆ. ಆದರೆ ಅವರು ಸಾಮಾನ್ಯ ಜೀವನನ್ನು ನಡೆಸಲು ಅಸಮರ್ಥರಾಗಿದ್ದಾರೆ. ರಷ್ಯಾ ವಿದೇಶಿ ಭೂಮಿಗೆ ಬಂದಿದೆ. ಅದರ ಕನಸುಗಳನ್ನು ನನಸು ಮಾಡಿಕೊಳ್ಳಲು ಅಸಾಧ್ಯ. ರಷ್ಯಾವು ದೇಶವನ್ನು ಒಡೆದು, ಉಕ್ರೇನ್‍ನಲ್ಲಿ ಹೊಸ ಸುಳ್ಳು ಗಣರಾಜ್ಯಗಳನ್ನು ರಚಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಇದನ್ನೂ ಓದಿ: ಯಾವುದೇ ಧರ್ಮದ ಬಗ್ಗೆ ಅಗೌರವ ತೋರಿದ್ರೆ ಸಹಿಸುವುದಿಲ್ಲ: ಭಗವಂತ್ ಮಾನ್

  • ಪ್ರಾರ್ಥನಾ ಮಂದಿರದ ಮೇಲೂ ಕ್ಷಿಪಣಿ, ಬಾಂಬ್ ದಾಳಿ – ಕೀವ್ ವಶಕ್ಕೆ ರಷ್ಯಾ ಹರಸಾಹಸ

    ಪ್ರಾರ್ಥನಾ ಮಂದಿರದ ಮೇಲೂ ಕ್ಷಿಪಣಿ, ಬಾಂಬ್ ದಾಳಿ – ಕೀವ್ ವಶಕ್ಕೆ ರಷ್ಯಾ ಹರಸಾಹಸ

    ಕೀವ್: ಉಕ್ರೇನ್ ವಿರುದ್ಧ ಯುದ್ಧ ಸಾರಿರುವ ರಷ್ಯಾದ ದಾಳಿ 18ನೇ ದಿನಕ್ಕೆ ಕಾಲಿಟ್ಟಿದೆ. ಉಕ್ರೇನ್‍ನ ಪ್ರಾರ್ಥನಾ ಮಂದಿರಗಳನ್ನು ಬಿಡದೆ ರಷ್ಯಾ ದಾಳಿ ಮುಂದುವರಿಸಿದೆ.

    ರಷ್ಯಾ ಮಿಲಿಟರಿ ಪಡೆ ಉಕ್ರೇನ್ ರಾಜಧಾನಿ ಕೀವ್ ನಗರಕ್ಕೆ 4 ಕಿ.ಮೀ ದೂರದಲ್ಲಿ ಇದ್ದು ಕೀವ್ ವಶಪಡಿಸಿಕೊಳ್ಳಲು ಹರಸಾಹಸ ಪಡುತ್ತಿದೆ. ಉಕ್ರೇನ್‍ನ ಕೀವ್ ಮತ್ತು ಖಾರ್ಕಿವ್ ನಗರದಲ್ಲಿ ಘನಘೋರ ಯುದ್ಧ ಆಗುತ್ತಿದ್ದು, ರಷ್ಯಾದ ಕ್ಷಿಪಣಿ, ಬಾಂಬ್ ದಾಳಿಗೆ ನಗರಗಳು ಹೊತ್ತಿ ಉರಿಯುತ್ತಿದೆ. ಇನ್ನೊಂದೆಡೆ ಮರಿಯುಪೋಲ್‍ನಲ್ಲಿ ರಷ್ಯಾದ ದಾಳಿಗೆ ಸಿಕ್ಕ ಸಿಕ್ಕಲ್ಲಿ ರಕ್ತಪಾತವಾಗುತ್ತಿದೆ. ಕೀವ್ ನಗರಕ್ಕೆ ಮತ್ತಷ್ಟು ಹತ್ತಿರವಾದ ರಷ್ಯಾ ಸೇನೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರದೊಂದಿಗೆ ಲಗ್ಗೆ ಇಟ್ಟಿದೆ. ಈಗಾಗಲೇ ಎರಡು ಕಡೆಯ ನೂರಾರು ಯುದ್ಧ ಟ್ಯಾಂಕರ್‌ಗಳು ಉಡೀಸ್ ಆಗಿದೆ. ಇದನ್ನೂ ಓದಿ: ಗೊರಗುಂಟೆಪಾಳ್ಯ ಫ್ಲೈಓವರ್‌ನಲ್ಲಿ ರಾತ್ರಿ ಸಂಚಾರ ಬಂದ್

    ಉಕ್ರೇನ್‍ನಲ್ಲಿರುವ ಪ್ರಾರ್ಥನಾ ಮಂದಿಗಳನ್ನು ಬಿಡದಂತೆ ರಷ್ಯಾ ದಾಳಿ ಮುಂದುವರಿಸಿದ್ದು, ಉಕ್ರೇನ್‍ನ ಜನರನ್ನು ಸ್ಥಳಾಂತರಿಸುವ ಬೆಂಗಾವಲು ಪಡೆಯ ಮೇಲೆ ದಾಳಿ ನಡೆಸಿ ರಷ್ಯಾ ಸೇನೆ ಗುಂಡಿನ ಮಳೆ ಸುರಿಸಿದೆ. ದಾಳಿಯಲ್ಲಿ 7 ನಾಗರಿಕರು ಸಾವನ್ನಪ್ಪಿರುವ ಬಗ್ಗೆ ಉಕ್ರೇನ್‍ನ ಗುಪ್ತಚರ ಮೂಲಗಳಿಂದ ಮಾಹಿತಿ ಹೊರಬಿದ್ದಿದೆ. ಇತ್ತ ಉಕ್ರೇನ್ ಪ್ರತಿರೋಧ ಮತ್ತಷ್ಟು ತೀವ್ರಗೊಳಿಸಿದ್ದು, ರಷ್ಯಾದ 2 ಹೆಲಿಕಾಪ್ಟರ್‌ಗಳನ್ನು ಹೊಡೆದುರುಳಿಸಿದೆ. ಖೆರ್ಸನ್ ಬಳಿಯ ಒಬ್ಲಾಸ್ಟ್ ಸಮೀಪ ಹೆಲಿಕಾಫ್ಟರ್ ಧ್ವಂಸವಾಗಿದೆ. ಇದನ್ನೂ ಓದಿ: 122 ಮಾಜಿ ಸಂಸದರು, ಶಾಸಕರ ಭದ್ರತೆ ಹಿಂಪಡೆದ ಭಗವಂತ್ ಮಾನ್

    ರಷ್ಯಾ ದಾಳಿಗೆ ಉಕ್ರೇನ್ ಪ್ರತಿರೋಧ ಒಡ್ಡುತ್ತಿರುವ ನಡುವೆಯೂ ರಷ್ಯಾ ಅಧ್ಯಕ್ಷ ಪುಟಿನ್ ಜೊತೆ ಮಾತುಕತೆಗೆ ಸಿದ್ಧ ಎಂದು ವೊಲೊಡಿಮಿರ್ ಝೆಲೆನ್ಸ್ಕಿ ಪುನರುಚ್ಚರಿಸಿದ್ದಾರೆ. ನಾವು ಮಾತುಕತೆಗೆ ಸಿದ್ಧ ಆದರೆ ನಾವು ತಿಳಿಸುವ ಸ್ಥಳಕ್ಕೆ ಪುಟಿನ್ ಬಂದರೆ ಮಾತ್ರ ಎಂದಿದ್ದಾರೆ. ಇದನ್ನೂ ಓದಿ: ರಷ್ಯಾ ಯೋಧರ ತಾಯಂದಿರ ಬಳಿ ಉಕ್ರೇನ್ ಅಧ್ಯಕ್ಷರ ಮನವಿ ಏನು ಗೊತ್ತಾ?

    ಈಗಾಗಲೇ ಯುದ್ಧ ಪ್ರಾರಂಭವಾದಗಿನಿಂದ ಉಕ್ರೇನ್‍ನ 1,300ಕ್ಕೂ ಹೆಚ್ಚು ಉಕ್ರೇನ್ ಸೈನಿಕರು ಸಾವನ್ನಪ್ಪಿದ್ದಾರೆ. ಯುದ್ಧ ನಿಲ್ಲಿಸಲು ನಾವು ಸಿದ್ಧರಿದ್ದೇವೆ ಪುಟಿನ್ ಜೊತೆ ಮಾತುಕತೆಗೆ ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್ ಮಧ್ಯಸ್ಥಿಕೆ ವಹಿಸುವಂತೆ ಝೆಲೆನ್ಸ್ಕಿ ಮನವಿ ಮಾಡಿಕೊಂಡಿದ್ದಾರೆ.

  • ರಷ್ಯಾ-ಉಕ್ರೇನ್ ಯುದ್ಧ – ಇನ್‍ಸ್ಟಾಗ್ರಾಮ್ ನಿರ್ಬಂಧಿಸಲು ಮುಂದಾದ ರಷ್ಯಾ

    ರಷ್ಯಾ-ಉಕ್ರೇನ್ ಯುದ್ಧ – ಇನ್‍ಸ್ಟಾಗ್ರಾಮ್ ನಿರ್ಬಂಧಿಸಲು ಮುಂದಾದ ರಷ್ಯಾ

    ಮಾಸ್ಕೋ: ಉಕ್ರೇನ್ ಹಾಗೂ ರಷ್ಯಾ ನಡುವೆ ಸಂಘರ್ಷ ಮುಂದುವರಿದಿದ್ದು, ಮಾರ್ಚ್ 14ರಿಂದ ಇನ್‍ಸ್ಟಾಗ್ರಾಮ್ ಬಳಕೆಗೆ ಸಂಪೂರ್ಣ ನಿರ್ಬಂಧ ಹೇರಲು ರಷ್ಯಾ ಸರ್ಕಾರ ಮುಂದಾಗಿದೆ.

    ಈಗಾಗಲೇ ರಷ್ಯಾ ಫೇಸ್‍ಬುಕ್ ಹಾಗೂ ಟ್ವಿಟ್ಟರ್‌ಗೆ ಪ್ರವೇಶವನ್ನು ನಿರ್ಬಂಧಿಸಿದೆ. ಇದೀಗ ಇನ್‍ಸ್ಟಾಗ್ರಾಮ್ ಮೇಲೆ ಮಾರ್ಚ್ 14ರಿಂದ ನಿರ್ಬಂಧ ಹೇರಲು ನಿರ್ಧರಿಸಿದೆ. ರಷ್ಯಾ ಸೈನಿಕರ ವಿರುದ್ಧ ಹಿಂಸಾಚಾರ ನಡೆಸಲು ಇನ್‍ಸ್ಟಾಗ್ರಾಮ್‍ನಲ್ಲಿ ಬಳಕೆದಾರರಿಗೆ ಮೆಟಾ ತನ್ನ ದ್ವೇಷದ ಭಾಷಣದ ಮೂಲಕ ಕರೆ ನೀಡಲು ನಿರ್ಧರಿಸಿದ್ದರಿಂದ ಈ ಕ್ರಮ ಕೈಗೊಳ್ಳಲು ರಷ್ಯಾ ಮುಂದಾಗಿದೆ. ಇದನ್ನೂ ಓದಿ: ರಷ್ಯಾ, ಉಕ್ರೇನ್ ಘರ್ಷನೆಯಿಂದ 3ನೇ ವಿಶ್ವ ಯುದ್ಧವಾಗದಂತೆ ತಡೆಯಲು ನಾವು ಶ್ರಮಿಸಬೇಕು: ಜೋ ಬೈಡೆನ್

    “ಉಗ್ರವಾದಿ ಚಟುವಟಿಕೆಯನ್ನು ಎದುರಿಸುವ” ಫೆಡರಲ್ ಕಾನೂನಿಗೆ ಅನುಸಾರವಾಗಿ, ರಷ್ಯಾದ ಒಕ್ಕೂಟದ ಪ್ರಾಸಿಕ್ಯೂಟರ್ ಜನರಲ್ ಕಚೇರಿಯು ಮೆಟಾ ಪ್ಲಾಟ್‍ಫಾಮ್ರ್ಸ್ ಅನ್ನು ಉಗ್ರಗಾಮಿ ಸಂಘಟನೆ ಎಂದು ಗುರುತಿಸಿದೆ. ರಷ್ಯಾ ಒಕ್ಕೂಟದ ಪ್ರದೇಶದಲ್ಲಿ ಅದರ ಚಟುವಟಿಕೆಗಳನ್ನು ನಿಷೇಧಿಸಲು ನ್ಯಾಯಾಲಯಕ್ಕೆ ಅರ್ಜಿಯನ್ನು ಕಳುಹಿಸಲಾಗಿದೆ ಎಂದು ತಿಳಿಸಿದೆ.

    ಈಗಾಗಲೇ ರಷ್ಯಾ ದೇಶದಲ್ಲಿ ಫೇಸ್‍ಬುಕ್ ನಿರ್ಬಂಧಿಸಿದ್ದು, ವಾಟ್ಸಾಪ್ ಮಾತ್ರ ಕಾರ್ಯನಿರ್ವಹಿಸಲು ಅವಕಾಶ ನೀಡಿದೆ. ಕಾರಣ ವಾಟ್ಸಾಪ್ ಮೆಟಾ ವಿರುದ್ಧದ ಕ್ರಮಗಳಿಂದ ಪ್ರಭಾವಿತವಾಗುವುದಿಲ್ಲ. ಇದು ಮಾಹಿತಿಯನ್ನು ಪೋಸ್ಟ್ ಮಾಡಲಾಗದಂತಹ ಸಂವಹನ ಸಾಧನವಾಗಿದೆ ಎಂದು ಮೂಲವೊಂದು ಸರ್ಕಾರಿ ಸ್ವಾಮ್ಯದ ಸಂಸ್ಥೆ ಆರ್‍ಐಎ ನೊವೊಸ್ಟಿಗೆ ತಿಳಿಸಿದೆ. ಇದನ್ನೂ ಓದಿ: ಉಕ್ರೇನ್‌ ಮೇಯರ್‌ ಕಿಡ್ನಾಪ್ ಮಾಡಿದ ರಷ್ಯಾ ಸೇನೆ

    ಟಿಕ್‍ಟಾಕ್, ಚೀನಾದ ಒಡೆತನದ ವೀಡಿಯೋ ಅಪ್ಲಿಕೇಶನ್ ಆಗಿದ್ದು, ರಷ್ಯಾದಲ್ಲಿ ಲೈವ್-ಸ್ಟ್ರೀಮಿಂಗ್ ಮತ್ತು ವೀಡಿಯೋಗಳನ್ನು ಅಪ್‍ಲೋಡ್ ಮಾಡುವುದನ್ನು ಸ್ಥಗಿತಗೊಳಿಸುವುದಾಗಿ ಹೇಳಿದೆ.

  • ರಷ್ಯಾ, ಉಕ್ರೇನ್ ಘರ್ಷನೆಯಿಂದ 3ನೇ ವಿಶ್ವ ಯುದ್ಧವಾಗದಂತೆ ತಡೆಯಲು ನಾವು ಶ್ರಮಿಸಬೇಕು: ಜೋ ಬೈಡೆನ್

    ರಷ್ಯಾ, ಉಕ್ರೇನ್ ಘರ್ಷನೆಯಿಂದ 3ನೇ ವಿಶ್ವ ಯುದ್ಧವಾಗದಂತೆ ತಡೆಯಲು ನಾವು ಶ್ರಮಿಸಬೇಕು: ಜೋ ಬೈಡೆನ್

    ನ್ಯೂಯಾರ್ಕ್: ಅಮೆರಿಕಾದ ಅಧ್ಯಕ್ಷ ಜೋ ಬೈಡೆನ್ ಶುಕ್ರವಾರ ನ್ಯಾಟೋ ಮತ್ತು ರಷ್ಯಾ ನಡುವಿನ ಮೊದಲ ಘರ್ಷಣೆಯು ಮೂರನೇ ಮಹಾಯುದ್ಧಕ್ಕೆ ಕಾರಣವಾಗಬಹುದು ಹೀಗಾಗಿ ನಾವು ಅದನ್ನು ತಡೆಯಲು ಶ್ರಮಿಸಬೇಕು ಎಂದು ಹೇಳಿದ್ದಾರೆ.

    ನ್ಯಾಟೋ ತನ್ನ ಭೂಪ್ರದೇಶದ ಪ್ರತಿಯೊಂದು ಇಂಚನ್ನು ರಕ್ಷಿಸುತ್ತದೆ. ಆದರೆ ಅದು ಉಕ್ರೇನ್‍ನಲ್ಲಿ ರಷ್ಯಾದ ವಿರುದ್ಧ ಯುದ್ಧ ಮಾಡುವುದಿಲ್ಲ ಎಂದು ಹೇಳಿದ್ದಾರೆ. ನ್ಯಾಟೋ ಉಕ್ರೇನ್‍ನಲ್ಲಿ ರಷ್ಯಾದ ವಿರುದ್ಧ ಯುದ್ಧ ಮಾಡುವುದಿಲ್ಲ ಎಂದು ಯುಎಸ್ ಅಧ್ಯಕ್ಷ ಟ್ವಿಟ್ಟರ್ ಮೂಲಕ ತಿಳಿಸಿದ್ದಾರೆ. ಏಕೆಂದರೆ ಅದು ಮೂರನೇ ಮಹಾಯುದ್ಧಕ್ಕೆ ಕಾರಣವಾಗಬಹುದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಉಕ್ರೇನ್‌ ಮೇಯರ್‌ ಕಿಡ್ನಾಪ್ ಮಾಡಿದ ರಷ್ಯಾ ಸೇನೆ

    ನಾನು ಸ್ಪಷ್ಟವಾಗಿರಲು ಬಯಸುತ್ತೇನೆ. ನಾವು ನ್ಯಾಟೋದ ಪ್ರತಿಯೊಂದು ಇಂಚನ್ನು ಒಂದು ಏಕೀಕೃತ ಮತ್ತು ಕಲಾಯಿ ನ್ಯಾಟೋದ ಸಂಪೂರ್ಣ ಶಕ್ತಿಯೊಂದಿಗೆ ರಕ್ಷಿಸುತ್ತೇವೆ. ಆದರೆ ನಾವು ಉಕ್ರೇನ್‍ನಲ್ಲಿ ರಷ್ಯಾದ ವಿರುದ್ಧ ಯುದ್ಧ ಮಾಡುವುದಿಲ್ಲ. ನ್ಯಾಟೋ ಮತ್ತು ರಷ್ಯಾದ ನಡುವಿನ ನೇರ ಮುಖಾಮುಖಿ 3ನೇ ವಿಶ್ವ ಯುದ್ಧವಾಗದಂತೆ ನಾವು ತಡೆಯಲು ಶ್ರಮಿಸಬೇಕು ಎಂದು ಟ್ವೀಟ್ ಮಾಡಿದ್ದಾರೆ.

    ಆದಾಗ್ಯೂ, ಬಿಡೆನ್ ಅವರು ಲಾಟ್ವಿಯಾ, ಎಸ್ಟೋನಿಯಾ, ಲಿಥುವೇನಿಯಾ ಮತ್ತು ರೊಮೇನಿಯಾದಂತಹ ರಷ್ಯಾದ ಗಡಿಯಲ್ಲಿ 12,000 ಸೈನಿಕರನ್ನು ಸ್ಥಳಾಂತರಿಸಿದ್ದಾರೆ. ವ್ಲಾಡಿಮಿರ್ ಪುಟಿನ್ ಅವರು ಉಕ್ರೇನ್ ವಿರುದ್ಧ ನಡೆಸಿದ ಯುದ್ಧದಲ್ಲಿ ವಿಜಯಶಾಲಿಯಾಗುವುದಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ನೆದರ್‌ಲ್ಯಾಂಡ್‌ನ ಅಮೆರಿಕ ರಾಯಭಾರಿಯಾಗಿ ಭಾರತ ಮೂಲದ ಮಹಿಳೆ ನಾಮನಿರ್ದೇಶನ

    ಯುಎಸ್ ನೇತೃತ್ವದ ನಿರ್ಬಂಧಗಳು ರಷ್ಯಾದ ಆರ್ಥಿಕತೆಯ ಮೇಲೆ ಕೆಟ್ಟದಾಗಿ ಪರಿಣಾಮ ಬೀರುತ್ತಿದೆ. ಇದರ ಮಧ್ಯೆ, ಜಿ7 ರಾಷ್ಟ್ರಗಳು ಪ್ರಮುಖ ಉತ್ಪನ್ನಗಳಿಗೆ ಸಂಬಂಧಿಸಿದಂತೆ ರಷ್ಯಾಕ್ಕೆ ಅತ್ಯಂತ ಒಲವುಳ್ಳ ರಾಷ್ಟ್ರದ ಸ್ಥಾನಮಾನವನ್ನು ನೀಡಲು ನಿರಾಕರಿಸಲು ಒಪ್ಪಿಕೊಂಡಿವೆ. ಇದರಿಂದ ವಿಶ್ವ ವ್ಯಾಪಾರ ಸಂಸ್ಥೆಯಲ್ಲಿ ರಷ್ಯಾದ ಸದಸ್ಯತ್ವದ ಪ್ರಯೋಜನಗಳನ್ನು ಹಿಂತೆಗೆದುಕೊಳ್ಳುತ್ತದೆ ಎಂದು ತಿಳಿಸಿದ್ದಾರೆ.

  • ಉಕ್ರೇನ್‌ ಮೇಯರ್‌ ಕಿಡ್ನಾಪ್ ಮಾಡಿದ ರಷ್ಯಾ ಸೇನೆ

    ಉಕ್ರೇನ್‌ ಮೇಯರ್‌ ಕಿಡ್ನಾಪ್ ಮಾಡಿದ ರಷ್ಯಾ ಸೇನೆ

    ಕೀವ್‌: ದಕ್ಷಿಣ ಉಕ್ರೇನ್‌ನ ಮೆಲಿಟೊಪೋಲ್‌ನ ಮೇಯರ್‌ ಅವರನ್ನು ರಷ್ಯಾದ ಸೈನಿಕರು ಅಪಹರಿಸಿದ್ದಾರೆ ಎಂದು ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್‌ ಝೆಲೆನ್‌ಸ್ಕಿ ತಿಳಿಸಿದ್ದಾರೆ.

    10 ಆಕ್ರಮಿತರ ಗುಂಪು ಮೆಲಿಟೊಪೋಲ್‌ನ ಮೇಯರ್‌ ಇವಾನ್‌ ಫೆಡೋರೊವ್‌ ಅವರನ್ನು ಅಪಹರಿಸಿದೆ ಎಂದು ಉಕ್ರೇನ್‌ ಸಂಸತ್‌ ಟ್ವಿಟ್ಟರ್‌ನಲ್ಲಿ ತಿಳಿಸಿದೆ. ಇದನ್ನೂ ಓದಿ: ನಾನೊಬ್ಬ ಅಧ್ಯಕ್ಷ, ಆದರೆ ಅದಕ್ಕೂ ಮೊದಲು 2 ಮಕ್ಕಳ ತಂದೆ: ಉಕ್ರೇನ್ ಅಧ್ಯಕ್ಷ

    ಮೇಯರ್‌ ಅವರು ನಗರದ ಬಿಕ್ಕಟ್ಟಿನ ಕೇಂದ್ರದಲ್ಲಿ ಮೂಲಸೌಕರ್ಯ ಪೂರೈಕೆಯಲ್ಲಿನ ಸಮಸ್ಯೆಗಳ ಬಗ್ಗೆ ವ್ಯವಹರಿಸುತ್ತಿದ್ದಾಗ ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದೆ. ಶುಕ್ರವಾರ ತಡರಾತ್ರಿ ವೀಡಿಯೋ ಸಂದೇಶವೊಂದರಲ್ಲಿ ಝೆಲೆನ್‌ಸ್ಕಿ ಅಪಹರಣವನ್ನು ದೃಢಪಡಿಸಿದ್ದಾರೆ.

    ಇದು ನಿಸ್ಸಂಶಯವಾಗಿ ಆಕ್ರಮಣಕಾರರ ದೌರ್ಬಲ್ಯದ ಸಂಕೇತವಾಗಿದೆ. ಅವರು ಕಾನೂನುಬದ್ಧ ಸ್ಥಳೀಯ ಉಕ್ರೇನಿಯನ್‌ ಅಧಿಕಾರಿಗಳ ಪ್ರತಿನಿಧಿಗಳನ್ನು ಹಿಂಸಿಸುವ ಪ್ರಯತ್ನಿಸುತ್ತಿರುವ ಭಯೋತ್ಪಾದನೆಯ ಹೊಸ ಹಂತಕ್ಕೆ ತಲುಪಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ರಷ್ಯಾ ಉಕ್ರೇನ್ ಮೇಲೆ ವ್ಯಾಕ್ಯೂಮ್ ಬಾಂಬ್ ಹಾಕುವುದು ಖಚಿತ ಎಂದ ಬ್ರಿಟನ್

    ಮೇಯರ್‌ ಅಪಹರಣವು ನಿರ್ದಿಷ್ಟ ವ್ಯಕ್ತಿ, ಸಮುದಾಯ, ಉಕ್ರೇನ್‌ ವಿರುದ್ಧ ಮಾತ್ರವಲ್ಲ. ಪ್ರಜಾಪ್ರಭುತ್ವದ ವಿರುದ್ಧ ಎಸಗಿದ ಅಪರಾಧವಾಗಿದೆ. ರಷ್ಯಾದ ಆಕ್ರಮಣಕಾರಕ ಕೃತ್ಯಗಳು ಇಸ್ಲಾಮಿಕ್‌ ಸ್ಟೇಟ್‌ ಭಯೋತ್ಪಾದಕರಂತಿದೆ ಎಂದು ಟೀಕಿಸಿದ್ದಾರೆ.

  • ಉಕ್ರೇನ್‍ನ ಮರಿಯುಪೋಲ್‍ನಲ್ಲಿ ಅರ್ಧ ಗಂಟೆಗೊಂದು ಬಾಂಬ್ ಸ್ಫೋಟ

    ಉಕ್ರೇನ್‍ನ ಮರಿಯುಪೋಲ್‍ನಲ್ಲಿ ಅರ್ಧ ಗಂಟೆಗೊಂದು ಬಾಂಬ್ ಸ್ಫೋಟ

    ಕೀವ್: ಉಕ್ರೇನ್ ವಿರುದ್ಧ ಯುದ್ಧ ಸಾರಿರುವ ರಷ್ಯಾದ ದಾಳಿ ಸತತ 16ನೇ ದಿನವೂ ಮುಂದುವರಿದೆ. ಉಕ್ರೇನ್‍ನ ಮರಿಯುಪೋಲ್‍ನಲ್ಲಿ ಅರ್ಧ ಗಂಟೆಗೊಂದು ಬಾಂಬ್ ಸ್ಫೋಟವಾಗುತ್ತಿರುವ ಬಗ್ಗೆ ವರದಿಯಾಗಿದೆ.

    ಯುದ್ಧ ಪ್ರಾರಂಭವಾಗಿ 16 ದಿನಕ್ಕೆ ಕಾಲಿಟ್ಟಿದ್ದು, ಯುದ್ಧದ ಪರಿಣಾಮ ಮಾತ್ರ ಅಕ್ಷರಶಃ ಘನಘೋರವಾಗಿದೆ. ಈಗಾಗಲೇ ಉಕ್ರೇನ್‍ನ ಬಹುತೇಕ ನಗರಗಳಲ್ಲಿ ಕ್ಷಿಪಣಿ, ರಾಕೆಟ್‍ಗಳ ದಾಳಿಯಿಂದ ಜನ ಕಂಗೆಟ್ಟಿದ್ದಾರೆ. ಮರಿಯುಪೋಲ್‍ನಲ್ಲಿ ಆಸ್ಪತ್ರೆಯ ಮೇಲೆ ದಾಳಿ ನಡೆಸಿರುವ ರಷ್ಯಾ ಸೇನೆ ಆಸ್ಪತ್ರೆಯಲ್ಲಿದ್ದ 17ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದೆ. ಇದನ್ನೂ ಓದಿ: ರಷ್ಯಾ ಉಕ್ರೇನ್ ಮೇಲೆ ವ್ಯಾಕ್ಯೂಮ್ ಬಾಂಬ್ ಹಾಕುವುದು ಖಚಿತ ಎಂದ ಬ್ರಿಟನ್

    ಈಗಾಗಲೇ ರಷ್ಯಾ ದಾಳಿಗೆ ಉಕ್ರೇನ್‍ನ ಇವಾನೋ, ಲಸ್ಕ್ ಸೇರಿದಂತೆ ಹಲವು ನಗರಗಳ ಮೇಲೆ ಡೋಂಸ್ಟೆ ಮಿಸೈಲ್ ದಾಳಿ ನಡೆಸಲಾಗಿದೆ. ರಷ್ಯಾ ಸತತವಾಗಿ ಕೀವ್ ವಶಪಡಿಸಿಕೊಳ್ಳಲು ಪ್ರಯತ್ನಿಸುತ್ತಿದೆ. ಈ ನಡುವೆ ನಿನ್ನೆ ಉಕ್ರೇನ್ ಮತ್ತು ರಷ್ಯಾದ ವಿದೇಶಾಂಗ ಸಚಿವರು ಸಂಧಾನ ಮಾತುಕತೆಗೆ ಮುಂದಾಗಿದ್ದು, ಆದರೆ ಅದು ಫಲ ಪ್ರದವಾಗಿಲ್ಲ ಎಂದು ವರದಿಯಾಗಿದೆ. ಇದನ್ನೂ ಓದಿ: ಬಾಂಬ್ ಶೆಲ್ಟರ್‌ನಿಂದ ಲೈವ್ ಸ್ಟ್ರೀಮ್ ಮಾಡಿದ ಉಕ್ರೇನ್ ರಾಕ್ ಬ್ಯಾಂಡ್!

  • ಬಾಂಬ್ ಶೆಲ್ಟರ್‌ನಿಂದ ಲೈವ್ ಸ್ಟ್ರೀಮ್ ಮಾಡಿದ ಉಕ್ರೇನ್ ರಾಕ್ ಬ್ಯಾಂಡ್!

    ಕೀವ್: ಯೂಟ್ಯೂಬ್‌ನಲ್ಲಿ ಲೈವ್ ಸ್ಟ್ರೀಮ್‌ಗಳನ್ನು ಎಲ್ಲರೂ ನೋಡಿಯೇ ಇರುತ್ತಾರೆ. ಜನರ ಗಮನ ಸೆಳೆಯಲು ಯೂಟ್ಯೂಬರ್ಸ್‌ಗಳು ಹೊಸ ಹೊಸ ರೀತಿಯಲ್ಲಿ ವ್ಲಾಗ್, ಲೈವ್ ಸ್ಟ್ರೀಮ್ ಮಾಡುತ್ತಲೇ ಇರುತ್ತಾರೆ. ಇಲ್ಲೊಂದು ಉಕ್ರೇನ್‌ನ ರಾಕ್ ಬ್ಯಾಂಡ್ ಭೀಕರ ಯುದ್ಧದ ನಡುವೆಯೂ ಬಾಂಬ್ ಶೆಲ್ಟರ್‌ನಿಂದ ಲೈವ್ ಸ್ಟ್ರೀಮ್ ಮಾಡಿ ಜನರ ಹುಬ್ಬೇರಿಸುವಂತೆ ಮಾಡಿದ್ದಾರೆ.

    ರಷ್ಯಾ ಉಕ್ರೇನ್ ಮೇಲೆ ದಾಳಿ ನಡೆಸಲು ಪ್ರಾರಂಭಿಸಿ ಇಂದಿಗೆ 16 ನೇ ದಿನ. ಇಂತಹ ಪರಿಸ್ಥಿತಿಯಲ್ಲಿ ಮನೆ, ನೆಲೆ ಕಳೆದುಕೊಂಡವರು ಸಾವಿರಾರು. ಉಕ್ರೇನ್‌ನ ಸೆಲೋ ಐ ಲುಡಿ ಎಂಬ ರಾಕ್ ಬ್ಯಾಂಡ್ ಯುದ್ಧದ ಪರಿಸ್ಥಿತಿಯಲ್ಲಿ ಬಾಂಬ್ ಶೆಲ್ಟರ್‌ನಿಂದ ಯೂಟ್ಯೂಬ್‌ನಲ್ಲಿ ತಮ್ಮ ಗಾಯನದ ಲೈವ್ ಸ್ಟ್ರೀಮ್ ಮಾಡಿದ್ದಾರೆ. ಇದನ್ನೂ ಓದಿ: ರಷ್ಯಾ ಉಕ್ರೇನ್ ಮೇಲೆ ವ್ಯಾಕ್ಯೂಮ್ ಬಾಂಬ್ ಹಾಕುವುದು ಖಚಿತ ಎಂದ ಬ್ರಿಟನ್

    ಈ ಬ್ಯಾಂಡ್ ಹಿಂದೆ ತಮ್ಮ ಸ್ಟುಡಿಯೋದಿಂದ ಯೂಟ್ಯೂಬ್‌ನಲ್ಲಿ ಲೈವ್ ಸ್ಟ್ರೀಮ್ ಮಾಡುತ್ತಿದ್ದು, ಯುದ್ಧದಿಂದಾಗಿ ತಮ್ಮ ಮನೆ, ಸ್ಟುಡಿಯೋ ಎಲ್ಲವನ್ನೂ ಕಳೆದುಕೊಂಡಿದೆ. ಇದೀಗ ಬಾಂಬ್ ಶೆಲ್ಟರ್‌ನಲ್ಲಿ ಆಶ್ರಯ ಪಡೆದುಕೊಂಡಿರುವ ರಾಕ್ ಬ್ಯಾಂಡ್ ತಂಡ ಅಲ್ಲಿಂದಲೇ ತಮ್ಮ ಲೈವ್ ಸ್ಟ್ರೀಮ್ ನಡೆಸುತ್ತಿದೆ. ಇದನ್ನೂ ಓದಿ: ರಷ್ಯಾದಿಂದ ತೈಲ ಆಮದಿಗೆ ಮಾತ್ರ ಅಮೆರಿಕ ನಿರ್ಬಂಧ – ಯುರೇನಿಯಂಗೆ ಇಲ್ಲ ನಿಷೇಧ

    ವಿಶ್ವಸಂಸ್ಥೆ ನೀಡಿರುವ ವರದಿಯ ಪ್ರಕಾರ ಉಕ್ರೇನ್‌ನಲ್ಲಿ ಯುದ್ಧ ಪ್ರಾರಂಭವಾದಾಗಿನಿಂದ ಸುಮಾರು ೨೦ ಲಕ್ಷ ಉಕ್ರೇನಿಯನ್ನರು ದೇಶವನ್ನು ತೊರೆದಿದ್ದಾರೆ. ಉಕ್ರೇನ್‌ನ ಹೆಚ್ಚಿನ ಪ್ರಜೆಗಳು ಹತ್ತಿರದ ದೇಶಗಳಾದ ಪೋಲೆಂಡ್, ಹಂಗೇರಿ, ಸ್ಲೋವಾಕಿಯಾ, ರಷ್ಯಾ ಹಾಗೂ ಮಾಲ್ಡಿವ್ಸ್‌ಗೆ ಪಲಾಯನ ಮಾಡಿದ್ದಾರೆ.

  • ರಷ್ಯಾ ಉಕ್ರೇನ್ ಮೇಲೆ ವ್ಯಾಕ್ಯೂಮ್ ಬಾಂಬ್ ಹಾಕುವುದು ಖಚಿತ ಎಂದ ಬ್ರಿಟನ್

    ರಷ್ಯಾ ಉಕ್ರೇನ್ ಮೇಲೆ ವ್ಯಾಕ್ಯೂಮ್ ಬಾಂಬ್ ಹಾಕುವುದು ಖಚಿತ ಎಂದ ಬ್ರಿಟನ್

    ಲಂಡನ್: ರಷ್ಯಾ ಉಕ್ರೇನ್ ಯುದ್ಧ ಕಳೆದ 16 ದಿನಗಳಿಂದ ನಡೆಯುತ್ತಿದ್ದು, ಇದೀಗ ರಷ್ಯಾ ಉಕ್ರೇನ್ ಮೇಲೆ ಟಿಒಎಸ್-1ಎ (TOS-1A) ಆಯುಧವನ್ನು ಬಳಸುವುದು ಖಚಿತವಾಗಿದೆ ಎಂದು ಯುನೈಟೆಡ್ ಕಿಂಗ್ಡಮ್(ಬ್ರಿಟನ್)ನ ರಕ್ಷಣಾ ಸಚಿವಾಲಯ ತಿಳಿಸಿದೆ.

    ಟಿಒಎಸ್-1ಎ ಥರ್ಮೋಬಾರಿಕ್ ರಾಕೆಟ್ ಹಾಗೂ ನಿರ್ವಾತ(ವ್ಯಾಕ್ಯೂಮ್) ಬಾಂಬ್ ಒಳಗೊಂಡಿದೆ. ಈ ಆಯುಧ ಬಳಕೆಯಿಂದ ಬೆಂಕಿ ಹಾಗೂ ಭಯಾನಕ ಸ್ಫೋಟ ಸಂಭವಿಸಲಿದೆ ಎಂದು ಮೂಲಗಳು ತಿಳಿಸಿವೆ. ಮಿನಿಸ್ಟ್ರಿ ಆಫ್ ಡಿಫೆನ್ಸ್ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಈ ಆಯುಧದ ಬಗ್ಗೆ ತಿಳಿಸಿದೆ. ಇದನ್ನೂ ಓದಿ: ಉಕ್ರೇನ್ ಮೇಲೆ ರಷ್ಯಾ ವ್ಯಾಕ್ಯೂಮ್ ಬಾಂಬ್ ಪ್ರಯೋಗ ಆರೋಪ – ಏನಿದರ ವಿಶೇಷ?

    ಜಾಗತಿಕವಾಗಿ ತಯಾರಿಸಲಾಗಿರುವ ಎಲ್ಲಾ ಬಾಂಬುಗಳಿಗಿಂತಲೂ ವ್ಯಾಕ್ಯೂಮ್ ಬಾಂಬ್ ಅತ್ಯಂತ ಶಕ್ತಿಶಾಲಿಯಾಗಿದೆ. ಇದನ್ನು ಥರ್ಮೋಬಾರಿಕ್ ವೆಪನ್ ಎಂತಲೂ ಕರೆಯಲಾಗುತ್ತಿದ್ದು, ಇದು ವಾತಾವರಣದ ಆಮ್ಲಜನಕವನ್ನು ಹೀರಿಕೊಂಡು ಸ್ಫೋಟಿಸುತ್ತದೆ. ಇದನ್ನೂ ಓದಿ: ರಷ್ಯಾದಿಂದ ತೈಲ ಆಮದಿಗೆ ಮಾತ್ರ ಅಮೆರಿಕ ನಿರ್ಬಂಧ – ಯುರೇನಿಯಂಗೆ ಇಲ್ಲ ನಿಷೇಧ

    ಅಣು ಬಾಂಬ್‌ನ ಬಳಿಕ ಬರುವ ಅತ್ಯಂತ ಭಯಾನಕ ಬಾಂಬ್ ಇದಾಗಿದ್ದು, ಇದನ್ನು ಪ್ರಯೋಗಿಸಿದ ಬಳಿಕ ಮನುಷ್ಯನ ದೇಹವನ್ನೇ ಆವಿಯಾಗಿಸುತ್ತದೆ. ಈ ಬಾಂಬ್ ಅನ್ನು ಮೊದಲಿಗೆ ಅಮೆರಿಕ ತಯಾರಿಸಿತ್ತು. ಬಳಿಕ 2007ರಲ್ಲಿ ರಷ್ಯಾ ಈ ಬಾಂಬ್ ಅನ್ನು ಅಭಿವೃದ್ಧಿ ಮಾಡಿ ಸಿರಿಯಾ ಮೇಲೆ ಪ್ರಯೋಗ ಮಾಡಿತ್ತು ಎಂಬ ಆರೋಪ ಇದೆ.

  • ಪಂಚ ರಾಜ್ಯಗಳ ಚುನಾವಣೆ ಮುಗಿಯಿತು – ಪೆಟ್ರೋಲ್, ಡಿಸೇಲ್ ದರ ಏರಿಕೆಗೆ ಸಜ್ಜಾಗಿ

    ಪಂಚ ರಾಜ್ಯಗಳ ಚುನಾವಣೆ ಮುಗಿಯಿತು – ಪೆಟ್ರೋಲ್, ಡಿಸೇಲ್ ದರ ಏರಿಕೆಗೆ ಸಜ್ಜಾಗಿ

    ಬೆಂಗಳೂರು: ಪಂಚರಾಜ್ಯಗಳ ಚುನಾವಣೆ ಮುಗಿದು ಫಲಿತಾಂಶ ಕೂಡ ಹೊರಬಿದ್ದಿದೆ. ಈ ಬೆನ್ನಲ್ಲೇ ಅಡುಗೆ ಎಣ್ಣೆ ದರ ಏರಿಕೆ ಮಧ್ಯೆ ಜನರಿಗೆ ಮತ್ತೊಂದು ಶಾಕ್ ಎದುರಾಗಿದೆ. ಪೆಟ್ರೋಲ್, ಡಿಸೇಲ್ ದರ ಏರಿಕೆ ಆಗುವ ಸಾಧ್ಯತೆ ದಟ್ಟವಾಗಿದೆ.

    ಪಂಚರಾಜ್ಯಗಳ ಚುನಾವಣೆ ಘೋಷಣೆ ಆದ ಬಳಿಕ ಪೆಟ್ರೋಲ್ ಮತ್ತು ಡಿಸೇಲ್ ದರದಲ್ಲಿ ಏರಿಕೆ ಆಗಿರಲಿಲ್ಲ. ಇದೀಗ ಚುನಾವಣೆ ಮುಗಿದು ಫಲಿತಾಂಶ ಕೂಡ ಸಿಕ್ಕಾಗಿದೆ. ಇದೀಗ ಕೇಂದ್ರ ತೈಲ ದರವನ್ನು ಹೆಚ್ಚಿಸಲು ಚಿಂತಿಸಿದೆ. ಕೆಲ ದಿನಗಳಿಂದ ಅಡುಗೆ ಎಣ್ಣೆ ಬೆಲೆ ಏರಿಕೆ ಕಂಡಿದೆ. ಆದರೆ ಪೆಟ್ರೋಲ್, ಡಿಸೇಲ್ ದರ ಮಾತ್ರ ಏರಿಕೆ ಕಂಡಿರಲಿಲ್ಲ. ಆದರೆ ಸದ್ಯದಲ್ಲೇ ಏರಿಕೆ ಕಾಣುವ ಸಾಧ್ಯತೆ ಇದೆ. ಇದನ್ನೂ ಓದಿ: ಪಂಚರಾಜ್ಯಗಳ ಫಲಿತಾಂಶದ ಬೆನ್ನಲ್ಲೇ ರಾಜ್ಯಕ್ಕೆ ಬರಲಿದ್ದಾರೆ ಮೋದಿ – ಕಲಬುರಗಿಗೆ ಯಾಕೆ?

    ಒಂದು ಕಡೆ ರಷ್ಯಾ, ಉಕ್ರೇನ್ ನಡುವಿನ ಯುದ್ಧದಿಂದಾಗಿ ಕಚ್ಚಾ ತೈಲ ಬೆಲೆ ಏರಿಕೆ ಕಾಣುತ್ತಿದೆ. ಹಾಗಾಗಿ ತೈಲ ಬೆಲೆ ಏರಿಕೆ ಮಾಡುವುದು ಅನಿವಾರ್ಯವಾಗಿದೆ. ಇದರಿಂದಾಗಿ ಸರ್ಕಾರ ಜನರ ಮೇಲೆ ತೈಲ ಹೊರೆ ಹಾಕಲು ಸಜ್ಜಾಗುತ್ತಿದೆ. ಈವರೆಗೆ ಪಂಚ ರಾಜ್ಯಗಳ ಚುನಾವಣೆ ಗಮನದಲ್ಲಿಟ್ಟು ತೈಲ ಬೆಲೆ ಏರಿಕೆ ಆಗಿರಲಿಲ್ಲ. ಚುನಾವಣೆ ಘೋಷಣೆಗೂ ಮುನ್ನಾ ತೈಲ ಬೆಲೆ ಗಗನಕ್ಕೇರಿತ್ತು. ಆ ಬಳಿಕ ಸ್ಥಿರತೆ ಕಾಪಾಡಿಕೊಂಡಿದ್ದ ದರ ಇದೀಗ ಏರಿಕೆಯತ್ತ ಹೆಜ್ಜೆ ಇಡಲು ಸಿದ್ಧವಾಗಿದೆ. ಇದನ್ನೂ ಓದಿ: Exclusive -ಕರ್ನಾಟಕದಲ್ಲಿ ಅವಧಿಗೂ ಮುನ್ನವೇ ಚುನಾವಣೆ?

    ಉಕ್ರೇನ್ ಮತ್ತು ರಷ್ಯಾ ಯುದ್ಧದ ಪರಿಣಾಮ ಕೆಲ ವಸ್ತುಗಳ ಬೆಲೆ ಏರಿಕೆ ಕಾಣುತ್ತಿದೆ. ಹೀಗಾಗಿ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಕೂಡ ಏರಿಕೆ ಆಗುವ ಸಾಧ್ಯತೆ ಇದೆ. ಸದ್ಯಕ್ಕೆ ಪೆಟ್ರೋಲ್ ರೇಟ್ ಲೀಟರ್‌ಗೆ 100.06 ರೂಪಾಯಿ. ಮತ್ತು ಡಿಸೇಲ್ ಬೆಲೆ ಲೀಟರ್‌ಗೆ 85.04 ರೂಪಾಯಿ ಇದೆ. ಕೆಲದಿನಗಳಲ್ಲಿ ತೈಲ ಬೆಲೆ 2 ರಿಂದ 3 ಅಥವಾ ಅದಕ್ಕಿಂತ ಹೆಚ್ಚಾಗುವ ಸಾಧ್ಯತೆ ಇದೆ.

  • ರಷ್ಯಾದಿಂದ ತೈಲ ಆಮದಿಗೆ ಮಾತ್ರ ಅಮೆರಿಕ ನಿರ್ಬಂಧ – ಯುರೇನಿಯಂಗೆ ಇಲ್ಲ ನಿಷೇಧ

    ರಷ್ಯಾದಿಂದ ತೈಲ ಆಮದಿಗೆ ಮಾತ್ರ ಅಮೆರಿಕ ನಿರ್ಬಂಧ – ಯುರೇನಿಯಂಗೆ ಇಲ್ಲ ನಿಷೇಧ

    ವಾಷಿಂಗ್ಟನ್: ಉಕ್ರೇನ್ ಮೇಲೆ ಯುದ್ಧ ಸಾರಿದ್ದಕ್ಕೆ ರಷ್ಯಾದ ಮೇಲೆ ಅಮೆರಿಕ ತೈಲ ಖರೀದಿಗೆ ನಿರ್ಬಂಧ ಹೇರಿದೆ. ಆದರೆ ಯುರೋನಿಯಂ ಖರೀದಿ ನಿಷೇಧ ಹೇರದೆ ಇರುವ ವಿಚಾರ ಈಗ ಚರ್ಚೆಗೆ ಗ್ರಾಸವಾಗಿದೆ.

    ಅಮೆರಿಕ ಅಣು ಸ್ಥಾವರಗಳಿಗೆ ಯುರೋನಿಯಂ ಅಗತ್ಯವಿದೆ. ರಷ್ಯಾ ಹಾಗೂ ಅದರ ಮಿತ್ರರಾಷ್ಟ್ರಗಳಾದ ಕಝಕಿಸ್ತಾನ ಹಾಗೂ ಉಜ್ಬೇಕಿಸ್ತಾನದಲ್ಲಿ ಅತೀ ಹೆಚ್ಚು ಯುರೇನಿಯಂ ಸಿಗುತ್ತಿದ್ದು, ಅಮೆರಿಕ ಕೂಡಾ ಈ ದೇಶಗಳಿಂದಲೇ ಯುರೇನಿಯಂ ಅನ್ನು ಆಮದು ಮಾಡಿಕೊಳ್ಳುತ್ತದೆ. ಇದನ್ನೂ ಓದಿ: ಕಚ್ಚಾ ತೈಲ ಬೆಲೆಯಲ್ಲಿ ಭಾರೀ ಇಳಿಕೆ

    ಯುದ್ಧದ ಕಾರಣಕ್ಕೆ ಅಮೆರಿಕ ರಷ್ಯಾದಿಂದ ಆಮದಾಗುತ್ತಿದ್ದ ಕಚ್ಚಾತೈಲವನ್ನು ನಿಷೇಧಿಸಿದ್ದರೂ ಯುರೇನಿಯಂ ಆಮದಿಗೆ ಯಾವುದೇ ಕಡಿವಾಣ ಹಾಕಿಲ್ಲ. ಇದೀಗ ಈ ವಿಚಾರವಾಗಿ ಅಮೆರಿಕದ ನಡೆಯನ್ನು ಜನರು ಪ್ರಶ್ನಿಸುತ್ತಿದ್ದಾರೆ. ಇದನ್ನೂ ಓದಿ: 12 ಸಾವಿರ ರಷ್ಯಾ ಸೈನಿಕರ ಸಾವು – 20 ಲಕ್ಷ ಉಕ್ರೇನಿಯನ್ನರು ಪಲಾಯನ

    ಅಮೆರಿಕ ಅಧ್ಯಕ್ಷ ತೈಲ ನಿಷೇಧವನ್ನು ಘೋಷಿಸಿದ ಬಳಿಕ ಶ್ವೇತ ಭವನದಿಂದ ಬಿಡುಗಡೆಯಾದ ದಾಖಲೆಯಲ್ಲಿ ಯುರೇನಿಯಂ ಬಗ್ಗೆ ಯಾವುದೇ ನಿಷೇಧವನ್ನು ಉಲ್ಲೇಖಿಸಿಲ್ಲ ಎಂದು ವರದಿಗಳು ತಿಳಿಸಿವೆ.