Tag: russia

  • ನಿವಾಸದ ಮೇಲೆ ದಾಳಿ – ಉಕ್ರೇನ್ ಅಧ್ಯಕ್ಷ ಎಲ್ಲಿ ಅವಿತಿದ್ದಾರೆ?

    ನಿವಾಸದ ಮೇಲೆ ದಾಳಿ – ಉಕ್ರೇನ್ ಅಧ್ಯಕ್ಷ ಎಲ್ಲಿ ಅವಿತಿದ್ದಾರೆ?

    ಕೀವ್: ಉಕ್ರೇನ್ ರಷ್ಯಾ ಯುದ್ಧದ ನಡುವೆ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸಿ÷್ಕ ತನ್ನ ದೇಶದಿಂದ ಓಡಿ ಹೋಗಿದ್ದಾರೆ ಎಂದು ಸುದ್ದಿಯಾಗಿದೆ. ರಷ್ಯಾದ ಸ್ಟೇಟ್ ಡುಮಾ ಸ್ಪೀಕರ್ ವ್ಯಾಚೆಸ್ಲಾವ್ ಝೆಲೆನ್ಸ್ಕಿಪೋಲೆಂಡ್‌ನಲ್ಲಿ ಅಡಗಿದ್ದಾರೆ ಎಂಬ ಹೇಳಿಕೆ ನೀಡಿದ್ದರು.

    ಈ ಮಧ್ಯೆ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ನಿವಾಸ ಮರಿನ್ಸ್ಕಿ ಪ್ಯಾಲೆಸ್ ಮೇಲೂ ದಾಳಿ ನಡೆದಿದೆ ಎಂದು ವರದಿಯಾಗಿದೆ. ಇದೀಗ ಎಲ್ಲರಲ್ಲೂ ಕಾಡುತ್ತಿರುವ ಪ್ರಶ್ನೆ ಝೆಲೆನ್ಸ್ಕಿ ಎಲ್ಲಿದ್ದಾರೆ ಎಂಬುದು.

    ಝೆಲೆನ್ಸ್ಕಿ ದೇಶದಿಂದ ಪಲಾಯನ ಮಾಡಿದ್ದಾರೆ ಎಂಬ ವಿಷಯವನ್ನು ರಷ್ಯಾ ಹೇಳುತ್ತಿದ್ದಂತೆ ಇದನ್ನು ಝೆಲೆನ್ಸ್ಕಿ ಸುಳ್ಳು ಎಂದು ಸಾಬೀತು ಮಾಡಿದ್ದರು. ತಮ್ಮ ನಿವಾಸದ ಮುಂಭಾಗದಿಂದಲೇ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ್ದಾ ಹಾಗೂ ತಾವು ದೇಶವನ್ನು ತೊರೆಯುವುದಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಾನು ಕೀವ್‍ನಲ್ಲಿದ್ದೇನೆ, ತಪ್ಪಿಸಿಕೊಂಡು ಹೋಗಿಲ್ಲ: ಉಕ್ರೇನ್ ಅಧ್ಯಕ್ಷ

    ಯುದ್ಧ ಪ್ರಾರಂಭವಾಗುತ್ತಿದ್ದಂತೆ ಅಮೆರಿಕ ಉಕ್ರೇನ್ ಅಧ್ಯಕ್ಷನನ್ನು ಸ್ಥಳಾಂತರಿಸಲು ಮುಂದಾಗಿತ್ತು. ಆದರೆ ಅದನ್ನು ಝೆಲೆನ್ಸ್ಕಿ ನಿರಾಕರಿಸಿದ್ದಾರೆ ಎಂದು ವರದಿಯಾಗಿದೆ. ಉಕ್ರೇನ್ ಅಧ್ಯಕ್ಷ ಕೀವ್ ತೊರೆದು ಪೋಲೆಂಡ್‌ನಲ್ಲಿ ಅಡಗಿದ್ದಾರೆ ಎಂಬ ವದಂತಿಯನ್ನು ಉಕ್ರೇನ್ ಸುಳ್ಳು ಎಂದಿದೆ.

    ಝೆಲೆನ್ಸ್ಕಿ ದೇಶವನ್ನು ತೊರೆಯುವ ವರದಿಗಳ ಮಧ್ಯೆ ಉಕ್ರೇನ್‌ನ ಮಾಜಿ ಪ್ರಧಾನಿ ಅಜರೋವ್, ಅಧ್ಯಕ್ಷ ಝೆಲೆನ್ಸ್ಕಿ ಕೀವ್‌ನ ಹೃದಯಭಾಗದಲ್ಲಿರುವ ಬಂಕರ್‌ನಲ್ಲಿರಬಹುದು ಎಂದಿದ್ದಾರೆ. ಏಕೆಂದರೆ ಈ ಬಂಕರ್ ಅಣ್ವಸ್ತ್ರ ದಾಳಿಗೂ ಹಾಳಾಗುವುದಿಲ್ಲ. ಕೀವ್‌ನಲ್ಲಿ ಸಾವಿರಾರು ಜನರು ತಮ್ಮ ಪ್ರಾಣ ಉಳಿಸಿಕೊಳ್ಳಲು ಬಂಕರ್‌ನಲ್ಲೇ ಅಡಗಿ ಕೂತಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: ಯೂರೋಪ್‌ನಲ್ಲಿ ಸೈಬರ್ ಅಟ್ಯಾಕ್ – ಇಂಟರ್‌ನೆಟ್ ಇಲ್ಲದೇ ಸಾವಿರಾರು ಜನ ಪರದಾಟ

    ಝೆಲೆನ್ಸ್ಕಿ ಶುಕ್ರವಾರ ರಾತ್ರಿ ತನ್ನ ಮೇಲೆ ರಷ್ಯಾ ಮಾರಣಾಂತಿಕ ದಾಳಿ ನಡೆಸಲು ಪ್ರಯತ್ನ ಪಟ್ಟಿದೆ ಎಂದಿದ್ದಾರೆ. ತಮ್ಮ ನಿವಾಸ ಮರಿನ್ಸ್ಕಿ ಅರಮನೆ ಮೇಲೆ ದಾಳಿ ಮಾಡಿರುವ ಫೋಟೋಗಳನ್ನು ಕೂಡಾ ಹಂಚಿಕೊಂಡಿದ್ದರು. ರಷ್ಯಾ ತನ್ನ ಮೇಲೆ ಮಾಡಿರುವ ದಾಳಿ ವಿಫಲವಾಗಿದೆ ಎಂದು ವ್ಯಂಗ್ಯವಾಡಿದ್ದರು.

    ಝೆಲೆನ್ಸ್ಕಿ ಶನಿವಾರ ಯುಎಸ್ ಡೆಮಾಕ್ರೆಟಿಕ್ ಹಾಗೂ ರಿಪಬ್ಲಿಕನ್ ಸೆನೆಟ್‌ಗಳೊಂದಿಗೆ ವರ್ಚುವಲ್ ಸಭೆ ನಡೆಸಲಿದ್ದಾರೆ ಎಂದು ವರದಿಗಳು ತಿಳಿಸಿವೆ.

  • ರಷ್ಯಾ-ಉಕ್ರೇನ್ ಯುದ್ಧ: ಗಗನಕ್ಕೇರಿದ ಅಡುಗೆ ಎಣ್ಣೆ ದರ

    ರಷ್ಯಾ-ಉಕ್ರೇನ್ ಯುದ್ಧ: ಗಗನಕ್ಕೇರಿದ ಅಡುಗೆ ಎಣ್ಣೆ ದರ

    ನವದೆಹಲಿ: ಉಕ್ರೇನ್ ವಿರುದ್ಧ ರಷ್ಯಾ ದಾಳಿ ನಡೆಸುತ್ತಿರುವ ಹಿನ್ನೆಲೆ ಭಾರತೀಯ ಶೇರು ಮಾರುಕಟ್ಟೆಯಲ್ಲಿ ಅಡುಗೆ ಎಣ್ಣೆಯ ದರ ಗಗನಕ್ಕೇರಿದೆ.

    ಕಳೆದ ಒಂದು ವಾರದಿಂದ ದಿನದಿಂದ ದಿನಕ್ಕೆ ಅಡುಗೆ ತೈಲ ದರ ಏರಿಕೆಯಾಗುತ್ತಿದ್ದು, ಕೆಲ ಪ್ರಾವಿಷನ್ ಸ್ಟೋರ್‌ಗಳಿಗೆ ಸ್ಟಾಕ್ ಕೂಡ ಕಡಿಮೆ ಬರುತ್ತಿದೆ. ರಷ್ಯಾ ಮತ್ತು ಉಕ್ರೇನ್ ನಡುವಿನ ಸಂಘರ್ಷದಿಂದ ಒಂದು ಲೀಟರ್ ಅಡುಗೆ ಎಣ್ಣೆ ದರ ಬರೋಬ್ಬರಿ 30-45 ರೂ ಏರಿಕೆಯಾಗಿದೆ. ಇದನ್ನೂ ಓದಿ: ಸುಳ್ಳು ಸುದ್ದಿ ಹಬ್ಬಿಸುವ ಫೇಸ್‍ಬುಕ್, ಟ್ವಿಟ್ಟರ್‌ ಖಾತೆ ಮೇಲೆ ರಷ್ಯಾ ನಿಷೇಧ ಹೇರಿದೆ

    ಅಡುಗೆ ಎಣ್ಣೆಗಾಗಿ ರಷ್ಯಾದ ಮೇಲೆ ಹೆಚ್ಚಾಗಿ ಅವಲಂಬನೆಯಾಗಿರುವುದರಿಂದ ಈ ಯುದ್ಧದ ಪರಿಣಾಮವಾಗಿ ಎಲ್ಲಾ ವೆರೈಟಿ ಅಡುಗೆ ಎಣ್ಣೆಗಳ ದರ ಏರಿಕೆಯಾಗಿದೆ. ಮತ್ತೊಂದೆಡೆ ಚಿನ್ನ ಬೆಳ್ಳಿಯ ಬೆಲೆ ಕೂಡ ಏರಿಕೆಯಾಗಿದೆ. ಇದನ್ನೂ ಓದಿ: ಉಕ್ರೇನ್ ಮೇಲೆ ರಷ್ಯಾ ಯುದ್ಧ; ಗಗನಕ್ಕೇರಿದ ತೈಲ, ಚಿನ್ನದ ಬೆಲೆ – ಭಾರತದ ಶೇರು ಮಾರುಕಟ್ಟೆಯಲ್ಲಿ ತಲ್ಲಣ

    ಅಡುಗೆ ಎಣ್ಣೆ ದರ:
    ಸನ್ ಫ್ಯೂರ್ ಎಣ್ಣೆ – 140- 180
    ಗೋಲ್ಡ್ ವಿನ್ನರ್ – 145- 166
    ಪಾಮ್ ಆಯಿಲ್ – 140- 160
    ಶೇಂಗಾ ಎಣ್ಣೆ – 150- 185

  • ರಷ್ಯಾದಲ್ಲಿ ಫೇಸ್‍ಬುಕ್, ಟ್ವಿಟ್ಟರ್‌  ಬ್ಯಾನ್‌

    ರಷ್ಯಾದಲ್ಲಿ ಫೇಸ್‍ಬುಕ್, ಟ್ವಿಟ್ಟರ್‌ ಬ್ಯಾನ್‌

    ಮಾಸ್ಕೋ: ಉಕ್ರೇನ್ ಮೇಲೆ ರಷ್ಯಾ ನಡೆಸುತ್ತಿರುವ ದಾಳಿ ಕುರಿತಾಗಿ ಸುಳ್ಳು ಸುದ್ದಿ ಹಬ್ಬಿಸುವ ಫೇಸ್‍ಬುಕ್, ಟ್ವಿಟ್ಟರ್‌ ಖಾತೆ ಮೇಲೆ ರಷ್ಯಾ ನಿಷೇಧ ಹೇರಿದೆ.

    ಉಕ್ರೇನ್ ಸಂಘರ್ಷಕ್ಕೆ ಸಂಬಂಧಿಸಿದಂತೆ ತಾರತಮ್ಯ ತೋರಿದೆ ಎಂದು ಆರೋಪಿಸಿರುವ ರಷ್ಯಾದ ಮಾಧ್ಯಮ ನಿಯಂತ್ರಕ ಫೇಸ್‍ಬುಕ್ ಹಾಗೂ ಟ್ವಿಟ್ಟರ್‌ ಜೊತೆಗೆ ಬಿಬಿಸಿ, ಆ್ಯಪಲ್ ಹಾಗೂ ಗೂಗಲ್ ಆ್ಯಪ್ ಸ್ಟೋರ್‌ಗಳ ಮೇಲೂ ನಿರ್ಬಂಧ ಹೇರಲಾಗಿದೆ. ಉಕ್ರೇನ್ ಸಂಘರ್ಷದ ವರದಿಗೆ ಸಂಬಂಧಿಸಿದಂತೆ ರಷ್ಯಾ ಮಾಧ್ಯಮಗಳ ಮೇಲೆ ಫೇಸ್‍ಬುಕ್ ಹಾಗೂ ಟ್ವಿಟ್ಟರ್‌ ನಿರ್ಬಂಧವನ್ನು ಹೇರಿತ್ತು. ಈ ತಾರತಮ್ಯ ಧೋರಣೆಯನ್ನು ಖಂಡಿಸಿರುವ ರಷ್ಯಾ, ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಇದನ್ನೂ ಓದಿ: ಭಾರತದ ವಿದ್ಯಾರ್ಥಿಯ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಭರಿಸಲಿದೆ: ಎಂಇಎ

    2020 ಅಕ್ಟೋಬರ್‌ನಿಂದ ರಷ್ಯಾದ ಮಾಧ್ಯಮಗಳ ಮೇಲೆ ನಿರ್ಬಂಧಕ್ಕೆ ಸಂಬಂಧಿಸಿದಂತೆ 26 ಪ್ರಕರಣ ಫೇಸ್‍ಬುಕ್ ದಾಖಲಿಸಿದೆ. ಕೆಲವು ನ್ಯೂಸ್ ಏಜೆನ್ಸಿ ಮೇಲಿನ ಇತ್ತೀಚಿನ ನಿರ್ಬಂಧಗಳು ಇದು ಒಳಗೊಂಡಿವೆ. ಈ ನಡುವೆ ಫೇಸ್‍ಬುಕ್ ಮೇಲಿನ ನಿರ್ಬಂಧ ತೆರವುಗೊಳಿಸಲು ಎಲ್ಲ ಪ್ರಯತ್ನ ಮಾಡಲಾಗುತ್ತದೆ ಎಂದು ಮೆಟಾ ಅಧ್ಯಕ್ಷ ನಿಕ್ ಕ್ಲೆಗ್ ತಿಳಿಸಿದ್ದಾರೆ. ಇದನ್ನೂ ಓದಿ: ಕದನ ವಿರಾಮ ಘೋಷಿಸಿ: ರಷ್ಯಾ, ಉಕ್ರೇನ್‌ಗೆ ಭಾರತ ಮನವಿ

    ಉಕ್ರೇನ್ ಯುದ್ಧಕ್ಕೆ ಸಂಬಂಧಪಟ್ಟಂತೆ ನಕಲಿ ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮಕ್ಕೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಆದೇಶಿಸಿದ್ದಾರೆ.

  • ರಷ್ಯಾ ದಾಳಿಯಿಂದ 28 ಮಕ್ಕಳು ಸಾವು, 840 ಮಕ್ಕಳಿಗೆ ಗಾಯ – ಉಕ್ರೇನ್ ಸರ್ಕಾರ

    ರಷ್ಯಾ ದಾಳಿಯಿಂದ 28 ಮಕ್ಕಳು ಸಾವು, 840 ಮಕ್ಕಳಿಗೆ ಗಾಯ – ಉಕ್ರೇನ್ ಸರ್ಕಾರ

    ಕೀವ್: ಉಕ್ರೇನ್ ಮೇಲೆ ರಷ್ಯಾ ದಾಳಿ ಆರಂಭಿಸಿದಾಗಲಿಂದಲೂ ಇದುವರೆಗೂ 28 ಮಕ್ಕಳು ಸಾವನ್ನಪ್ಪಿದ್ದಾರೆ ಮತ್ತು 840 ಮಕ್ಕಳು ಗಾಯಗೊಂಡಿದ್ದಾರೆ ಎಂದು ಉಕ್ರೇನ್ ಸರ್ಕಾರ ತಿಳಿಸಿದೆ.

    ಮಾಧ್ಯಮವೊಂದರಲ್ಲಿ ಮಾತನಾಡಿದ ಉಕ್ರೇನ್‍ನ ರಾಷ್ಟ್ರೀಯ ಭದ್ರತಾ ಮಂಡಳಿಯ ಮುಖ್ಯಸ್ಥ ಒಲೆಕ್ಸಿ ಡ್ಯಾನಿಲೋವ್ ಅವರು, ದಾಳಿಯಿಂದ ತಪ್ಪಿಸಿಕೊಳ್ಳಲು ಮಹಿಳೆಯರು ಮತ್ತು ಮಕ್ಕಳಿಗೆ ಅವಕಾಶ ಮಾಡಿಕೊಡುವಂತೆ ರಷ್ಯಾಕ್ಕೆ ಮನವಿ ಮಾಡಿದ್ದಾರೆ. ಇದೇ ವೇಳೆ ಮಾನವೀಯತೆ ಎಲ್ಲದ್ದಕ್ಕಿಂತ ಮುಖ್ಯ ಎಂದು ಹೇಳಿದ್ದಾರೆ. ಇದನ್ನೂ ಓದಿ: ಭಾರತದ ವಿದ್ಯಾರ್ಥಿಯ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಭರಿಸಲಿದೆ: ಎಂಇಎ

    ರಷ್ಯಾ ಉಕ್ರೇನ್ ಮೇಲೆ ಫೆಬ್ರವರಿ 24 ರಂದು ದಾಳಿ ನಡೆಸಲು ಆರಂಭಿಸಿತು. ಅಂದಿನಿಂದ ದೇಶಾದ್ಯಂತ ಮುಷ್ಕರಗಳು ಪ್ರಾರಂಭಗೊಂಡಿತು. ರಷ್ಯಾ ಆಕ್ರಮಣದಿಂದ ಉಕ್ರೇನ್‍ನಲ್ಲಿ ನೂರಾರು ನಾಗರಿಕರು ಸಾವನ್ನಪ್ಪಿದ್ದಾರೆ ಮತ್ತು ಒಂದು ದಶಲಕ್ಷಕ್ಕೂ ಹೆಚ್ಚು ಉಕ್ರೇನಿಯನ್ನರು ನೆರೆಯ ದೇಶಗಳಿಗೆ ಪಲಾಯನ ಮಾಡಿದ್ದಾರೆ. ಈ ವಾರಾಂತ್ಯದಲ್ಲಿ ಉಕ್ರೇನಿಯನ್ ಮತ್ತು ರಷ್ಯಾದ ನಿಯೋಗಗಳು ಮೂರನೇ ಸುತ್ತಿನ ಮಾತುಕತೆ ನಡೆಸಲು ಯೋಜಿಸಿದೆ. ಇದನ್ನೂ ಓದಿ: ಕದನ ವಿರಾಮ ಘೋಷಿಸಿ: ರಷ್ಯಾ, ಉಕ್ರೇನ್‌ಗೆ ಭಾರತ ಮನವಿ

  • ಉಕ್ರೇನ್‌ನ 2 ನಗರಗಳಲ್ಲಿ ಕದನ ವಿರಾಮ ಘೋಷಿಸಿದ ರಷ್ಯಾ

    ಉಕ್ರೇನ್‌ನ 2 ನಗರಗಳಲ್ಲಿ ಕದನ ವಿರಾಮ ಘೋಷಿಸಿದ ರಷ್ಯಾ

    ಕೀವ್: ಉಕ್ರೇನ್‍ನ 2 ನಗರಗಳಲ್ಲಿ ರಷ್ಯಾ ಕದನ ವಿರಾಮ ಘೋಷಿಸಿದ್ದು, ಈ ಅವಧಿಯಲ್ಲಿ ಉಕ್ರೇನ್ ಬಿಟ್ಟು ತೆರಳುವಂತೆ ನಾಗರಿಕರಿಗೆ ಸೂಚಿಸಲಾಗಿದೆ.

    ಈಗಾಗಲೇ ರಷ್ಯಾ ದಾಳಿಗೆ ಉಕ್ರೇನ್‌ ನಲುಗಿ ಹೋಗಿದೆ.  ಆದರೆ ರಷ್ಯಾ ಮುಂದಿನ 6 ಗಂಟೆಗಳ ಕಾಲ ಕದನ ವಿರಾಮ ಘೋಷಣೆ ಮಾಡಿದೆ. ಮರಿಯುಪೋಲ್, ವೋಲ್‍ನೋವಾಕ ನಗರಗಳಲ್ಲಿ ಕದನ ವಿರಾಮ ಘೋಷಿಸಲಾಗಿದೆ. ಕದನ ವಿರಾಮದ ನಂತರ ಮತ್ತಷ್ಟು ದಾಳಿ ನಡೆಯಲಿದೆ. ಭಾರತೀಯ ಕಾಲಮಾನಕ್ಕೆ ಅನ್ವಯವಾಗುವಂತೆ ಇಂದು ಸಂಜೆ 7:30ಕ್ಕೆ ಕದನ ವಿರಾಮ ಅಂತ್ಯವಾಗಲಿದೆ ಎಂದು ರಷ್ಯಾದ ರಕ್ಷಣಾ ಸಚಿವಾಲಯ ತಿಳಿಸಿದೆ.

    ಇಂದು ರಾತ್ರಿ ಕ್ಷಿಪಣಿ ದಾಳಿ ಇನ್ನಷ್ಟು ತೀವ್ರವಾಗುವ ಸಾಧ್ಯತೆಯಿದೆ. ಖಾರ್ಕಿವ್‌, ಕೀವ್‌ ಸುಮಿ ಮೇಲೆ ಬಾಂಬ್‌ ದಾಳಿ ನಡೆಯುವ ಸಾಧ್ಯತೆಯಿದೆ. ಮರಿಯುಪೋಲ್‌ಗೆ ಮುತ್ತಿಗೆ ಹಾಕುತ್ತಿರುವಾಗ, ರಷ್ಯಾದ ಪಡೆಗಳು ಅದರ ವಿದ್ಯುತ್, ಆಹಾರ, ನೀರು ಮತ್ತು ಸಾರಿಗೆಯನ್ನು ಕಡಿತಗೊಳಿಸಿದ್ದವು. ಇದರಿಂದ ನಾಗರಿಕ ಪ್ರದೇಶಗಳ ಮೇಲೆ ರಷ್ಯಾ ಬಾಂಬ್‌ ದಾಳಿ ಮಾಡುತ್ತಿದೆ ಎಂದು ಟೀಕಿಸುತ್ತಿರುವ ಬೆನ್ನಲ್ಲೆ ರಷ್ಯಾ ಈ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ಅಲ್ಪ ಅವಧಿಯವರೆಗೆ ಕದನ ವಿರಾಮ ಘೋಷಿಸಿದೆ. ಇದನ್ನೂ ಓದಿ: ಭಾರತದ ಗೋಧಿ ಚೆನ್ನಾಗಿದೆ, ನಿಮ್ಮದು ಕಳಪೆಯಾಗಿದೆ: ಪಾಕಿಸ್ತಾನ ವಿರುದ್ಧ ತಾಲಿಬಾನ್ ಕಿಡಿ

    ಉಕ್ರೇನ್ ಹಾಗೂ ರಷ್ಯಾ ಕದನ ವಿರಾಮ ಘೋಷಿಸುವಂತೆ ಭಾರತ ಕೋರಿತ್ತು. ಅಲ್ಲಿ ಸಿಲುಕಿರುವ ಭಾರತೀಯರನ್ನು ಸುರಕ್ಷಿತವಾಗಿ ಕರೆತರಲು ಎರಡೂ ದೇಶಗಳು ಕದನ ವಿರಾಮವನ್ನು ಅನುಷ್ಠಾನಗೊಳಿಸಬೇಕಿದೆ. ಐರೋಪ್ಯ ಒಕ್ಕೂಟಗಳು ಕದನ ವಿರಾಮ ಘೋಷಿಸಲು ಹಲವು ದಿನಗಳಿಂದಲೇ ರಷ್ಯಾ ಹಾಗೂ ಉಕ್ರೇನ್‍ಗೆ ಮನವಿ ಮಾಡಿದ್ದವು. ಭಾರತ ಶುಕ್ರವಾರ ಕದನ ವಿರಾಮ ಘೋಷಿಸುವಂತೆ ಮನವಿ ಮಾಡಿತ್ತು.  ಇದನ್ನೂ ಓದಿ: ಕದನ ವಿರಾಮ ಘೋಷಿಸಿ: ರಷ್ಯಾ, ಉಕ್ರೇನ್‌ಗೆ ಭಾರತ ಮನವಿ

  • ಕದನ ವಿರಾಮ ಘೋಷಿಸಿ: ರಷ್ಯಾ, ಉಕ್ರೇನ್‌ಗೆ ಭಾರತ ಮನವಿ

    ನವದೆಹಲಿ: ಉಕ್ರೇನ್ ವಿರುದ್ಧ ರಷ್ಯಾ ಭೀಕರ ಯುದ್ಧ ನಡೆಸುತ್ತಿದ್ದು, ಅಲ್ಲಿ ಸಾವಿರಾರು ಭಾರತೀಯ ವಿದ್ಯಾರ್ಥಿಗಳು ಸಿಲುಕಿಕೊಂಡಿದ್ದಾರೆ. ಭಾರತ ಅವರೆಲ್ಲರನ್ನೂ ಸ್ಥಳಾಂತರಿಸುವ ಕಾರ್ಯ ಮಾಡುತ್ತಿದ್ದರೂ ಹಲವರು ಇನ್ನೂ ಯುದ್ಧದ ಪರಿಸ್ಥಿತಿಯಿಂದ ತಪ್ಪಿಸಿಕೊಂಡು ಸುರಕ್ಷಿತ ಸ್ಥಳಕ್ಕೆ ಮರಳಲು ಸಾಧ್ಯವಾಗುತ್ತಿಲ್ಲ. ಸ್ಥಳೀಯ ಮಟ್ಟದಲ್ಲಿ ಕದನ ವಿರಾಮ ಘೋಷಿಸುವಂತೆ ರಷ್ಯಾ ಹಾಗೂ ಉಕ್ರೇನ್‌ಗೆ ಭಾರತ ಮನವಿ ಮಾಡಿದೆ.

    ಉಕ್ರೇನ್‌ನಲ್ಲಿ ಫಿರಂಗಿ ದಾಳಿ ನಡೆಯುತ್ತಿದೆ. ಅಲ್ಲಿನ ಪರಿಸ್ಥಿತಿ ಅಪಾಯಕಾರಿಯಾಗಿದ್ದು, ಇಂತಹ ಸನ್ನಿವೇಶದಲ್ಲಿ ನಮ್ಮ ವಿದ್ಯಾರ್ಥಿಗಳು ಪ್ರಯಾಣಿಸುವುದು ನಮಗೆ ಇಷ್ಟವಿಲ್ಲ. ಅವರ ಪ್ರಯಾಣಕ್ಕೆ ಸುರಕ್ಷಿತ ಮಾರ್ಗ ಬೇಕು. ಆಗ ಮಾತ್ರ ನಾವು ವಿದ್ಯಾರ್ಥಿಗಳನ್ನು ಸ್ಥಳಾಂತರಿಸಬಹುದು ಎಂದು ಭಾರತ ತಿಳಿಸಿದೆ. ಇದನ್ನೂ ಓದಿ: ಭಾರತದ ವಿದ್ಯಾರ್ಥಿಯ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಭರಿಸಲಿದೆ: ಎಂಇಎ

     

    ವಿದ್ಯಾರ್ಥಿಗಳ ಸ್ಥಳಾಂತರಕ್ಕಾಗಿ ಎರಡೂ ಕಡೆಯವರು ಸ್ಥಳೀಯ ಕದನ ವಿರಾಮ ಘೋಷಿಸಿ ಎಂದು ಭಾರತ ರಷ್ಯಾ ಹಾಗೂ ಉಕ್ರೇನ್‌ಗೆ ಮನವಿ ಮಾಡಿದೆ.

    ಖಾರ್ಕಿವ್‌ನಲ್ಲಿ 300 ಭಾರತೀಯರು ಹಾಗೂ ಸುಮಿಯಲ್ಲಿ 700 ಭಾರತೀಯರು ಸಿಲುಕಿರುವುದಾಗಿ ವರದಿಗಳು ತಿಳಿಸಿವೆ. ಇದೀಗ ಉಕ್ರೇನ್‌ನಲ್ಲಿ ಒಟ್ಟು 2,000 ದಿಂದ 3,000 ಭಾರತೀಯರು ಸಿಲುಕಿರುವುದಾಗಿ ಅಂದಾಜಿಸಲಾಗಿದೆ. ಇದನ್ನೂ ಓದಿ: ‘ಆಪರೇಷನ್ ಗಂಗಾ’ ನೆನಪಿಗಾಗಿ ಮಗಳಿಗೆ ಗಂಗಾ ಅಂತ ಹೆಸರಿಡ್ತೀನಿ: ಉಕ್ರೇನ್‍ನಿಂದ ವಾಪಸಾದ ಭಾರತೀಯ

    ಉಕ್ರೇನ್ ಹಾಗೂ ರಷ್ಯಾ ಕದನ ವಿರಾಮ ಘೋಷಿಸುವಂತೆ ಭಾರತ ಕೋರಿದ್ದು, ಅಲ್ಲಿ ಸಿಲುಕಿರುವ ಭಾರತೀಯರನ್ನು ಸುರಕ್ಷಿತವಾಗಿ ಕರೆತರಲು ಎರಡೂ ದೇಶಗಳು ಕದನ ವಿರಾಮವನ್ನು ಅನುಷ್ಠಾನಗೊಳಿಸಬೇಕಿದೆ. ಐರೋಪ್ಯ ಒಕ್ಕೂಟಗಳು ಕದನ ವಿರಾಮ ಘೋಷಿಸಲು ಹಲವು ದಿನಗಳಿಂದಲೇ ರಷ್ಯಾ ಹಾಗೂ ಉಕ್ರೇನ್‌ಗೆ ಮನವಿ ಮಾಡುತ್ತಿವೆ. ಭಾರತ ಶುಕ್ರವಾರ ಕದನ ವಿರಾಮ ಘೋಷಿಸುವಂತೆ ಮನವಿ ಮಾಡಿದೆ.

  • ‘ಆಪರೇಷನ್ ಗಂಗಾ’ ನೆನಪಿಗಾಗಿ ಮಗಳಿಗೆ ಗಂಗಾ ಅಂತ ಹೆಸರಿಡ್ತೀನಿ: ಉಕ್ರೇನ್‍ನಿಂದ ವಾಪಸಾದ ಭಾರತೀಯ

    ‘ಆಪರೇಷನ್ ಗಂಗಾ’ ನೆನಪಿಗಾಗಿ ಮಗಳಿಗೆ ಗಂಗಾ ಅಂತ ಹೆಸರಿಡ್ತೀನಿ: ಉಕ್ರೇನ್‍ನಿಂದ ವಾಪಸಾದ ಭಾರತೀಯ

    ವಾರ್ಸಾ: ಉಕ್ರೇನ್‍ನ ಕೀವ್‌ನಲ್ಲಿ ಸಿಲುಕಿದ್ದ ಕೇರಳದ ವ್ಯಕ್ತಿಯನ್ನು ಹಾಗೂ ಆತನ ಪತ್ನಿಯನ್ನು ʼಆಪರೇಷನ್ ಗಂಗಾʼದಡಿಯಲ್ಲಿ ಭಾರತ ರಕ್ಷಿಸಿದ್ದಕ್ಕೆ ತಮ್ಮ ಮಗುವಿಗೆ ಗಂಗಾ ಎಂಬ ಹೆಸರನ್ನು ಇಡಲು ನಿರ್ಧರಿಸಿದ್ದಾರೆ.

    ಅಭಿಜಿತ್ ಕೇರಳದ ನಿವಾಸಿ. ರಷ್ಯಾ ದಾಳಿಗೆ ಪುಟ್ಟ ರಾಷ್ಟ್ರ ಉಕ್ರೇನ್ ನಲುಗಿ ಹೋಗಿದೆ. ಅಲ್ಲಿನ ಕೀವ್ ನಗರದಲ್ಲಿ ಅಭಿಜಿತ್ ಪುಟ್ಟದಾದ ರೆಸ್ಟೋರೆಂಟ್‍ನ್ನು ಇಟ್ಟುಕೊಂಡಿದ್ದರು. ಆದರೆ ರಷ್ಯಾ ದಾಳಿಯಿಂದಾಗಿ ಅಭಿಜಿತ್ ಹಾಗೂ ಅವರ ಗರ್ಭಿಣಿ ಪತ್ನಿಯು ಉಕ್ರೇನ್‌ಲ್ಲಿ ಸಿಲುಕಿದ್ದರು. ನಂತರ ಅವರನ್ನು ರಕ್ಷಿಸಿ, ಸುರಕ್ಷಿತವಾಗಿ ಪೋಲೆಂಡಿಗೆ ಕರೆತರಲಾಯಿತು.

    ಈ ಬಗ್ಗೆ ಮಾತನಾಡಿದ ಅವರು, ದಾಳಿಯಿಂದ ಸುರಕ್ಷಿತವಾಗಿ ಪಾರಾದ ಬಗ್ಗೆ ಸಂತೋಷ ವ್ಯಕ್ತಪಡಿಸಿ, ನನ್ನ ಪತ್ನಿ ಒಂಬತ್ತು ತಿಂಗಳ ಗರ್ಭಿಣಿ. ಇದರಿಂದಾಗಿ ಪೋಲೆಂಡ್‍ನಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾಳೆ. ಪತ್ನಿ ಹಾಗೂ ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ಆಸ್ಪತ್ರೆಯಲ್ಲಿ ತಿಳಿಸಿದ್ದಾರೆ. ಮಾರ್ಚ್ 26ಕ್ಕೆ ಮಗು ಜನಿಸುವ ನಿರೀಕ್ಷೆಯಿದೆ ಎಂದರು.

    ಇದೇ ವೇಳೆ ಅವರು ಭಾರತ ಸರ್ಕಾರ ಪ್ರಾರಂಭಿಸಿದ ರಕ್ಷಣಾ ಕಾರ್ಯಾಚರಣೆಯ ಆಪರೇಷನ್ ಗಂಗಾ ಹೆಸರಿನ ನೆನಪಿಗಾಗಿ ನನ್ನ ಮಗುವಿಗೆ ಗಂಗಾ ಎಂದು ಹೆಸರಿಡುತ್ತೇನೆ ಎಂದಿದ್ದಾರೆ. ವೈದ್ಯಕೀಯ ಸುರಕ್ಷತೆಯ ಕಾರಣದಿಂದಾಗಿ ಪೋಲೆಂಡ್‍ನ ಆಸ್ಪತ್ರೆಯಲ್ಲಿ ಪತ್ನಿಯೂ ಇರಬೇಕಾದ ಕಾರಣದಿಂದಾಗಿ ಅವರನ್ನು ಬಿಟ್ಟು ತಾವೊಬ್ಬರೇ ಭಾರತಕ್ಕೆ ಬರುವುದಾಗಿ ತಿಳಿಸಿದರು. ಇದನ್ನೂ ಓದಿ: ನವೀನ್ ಮೃತದೇಹ ಪಡೆಯಲು ಎಲ್ಲ ಪ್ರಯತ್ನ: ಬಸವರಾಜ ಬೊಮ್ಮಾಯಿ

    ನಾನು ಉಕ್ರೇನ್‍ನಿಂದ ಪೋಲೆಂಡ್‍ಗೆ ಬರಲು ಒಂದು ಪೈಸೆ ಖರ್ಚು ಮಾಡಿಲ್ಲ. ಎಲ್ಲವನ್ನು ಭಾರತ ಸರ್ಕಾರವೇ ನೋಡಿಕೊಂಡಿದೆ ಎಂದು ಸಂತಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಕೈಕೊಟ್ಟಿತೆ ನ್ಯಾಟೋ- ರಷ್ಯಾ ಬಾಂಬ್‌ ದಾಳಿ ತಡೆಗೆ ಉಕ್ರೇನ್‌ ಮನವಿ ತಿರಸ್ಕಾರ

    ಉಕ್ರೇನ್‍ನಲ್ಲಿ ಸಿಲುಕಿರುವ ಭಾರತದ ಪ್ರಜೆಗಳನ್ನು ರಕ್ಷಿಸಲು ಸರ್ಕಾರ ಆಪರೇಷನ್ ಗಂಗಾವನ್ನು ಪ್ರಾರಂಭಿಸಿದೆ. ಭಾರತದ ಏರ್ ಫೋರ್ಸ್‍ನವರು ಇದರಲ್ಲಿ ಪಾಲ್ಗೊಂಡು ಪ್ರಜೆಗಳನ್ನು ರಕ್ಷಿಸುವ ಕಾರ್ಯ ಚುರುಕುಗೊಳಿಸಿದ್ದಾರೆ.

  • ಉಕ್ರೇನ್‍ನಿಂದ ಹಿಂತಿರುಗಿದ ವಿದ್ಯಾರ್ಥಿಗಳಿಗೆ ಕಾಲೇಜುಗಳಲ್ಲಿ ಅನುಮತಿ ನೀಡಿ – ಪ್ರಧಾನಿಗೆ ಐಎಂಎ ಪತ್ರ

    ಉಕ್ರೇನ್‍ನಿಂದ ಹಿಂತಿರುಗಿದ ವಿದ್ಯಾರ್ಥಿಗಳಿಗೆ ಕಾಲೇಜುಗಳಲ್ಲಿ ಅನುಮತಿ ನೀಡಿ – ಪ್ರಧಾನಿಗೆ ಐಎಂಎ ಪತ್ರ

    ನವದೆಹಲಿ: ಯುದ್ಧ ಪೀಡಿತ ಉಕ್ರೇನ್‍ನಿಂದ ಹಿಂತಿರುಗಿರುವ ವೈದ್ಯಕೀಯ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಭಾರತೀಯ ವೈದ್ಯಕೀಯ ಸಂಘ(ಐಎಂಎ) ಶುಕ್ರವಾರ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಕಳುಹಿಸಿದೆ.

    ಉಕ್ರೇನ್‍ನಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದ ಭಾರತೀಯ ವಿದ್ಯಾರ್ಥಿಗಳ ಭವಿಷ್ಯ ಇದೀಗ ಅನಿಶ್ಚಿತತೆಗೊಂಡಿದೆ. ಅವರೀಗ ದುರದೃಷ್ಟಕರ ಬಲಿಪಶುಗಳಾಗಿ ಹೊರಹೊಮ್ಮಿದ್ದಾರೆ ಎಂದು ಪತ್ರದಲ್ಲಿ ಬರೆಯಲಾಗಿದೆ. ಇದನ್ನೂ ಓದಿ: ಒಂದೇ ಹಳಿಯಲ್ಲಿ ಎರಡು ರೈಲು – ಅಪಾಯದಿಂದ ಪಾರಾಗುವ ಹೊಸ ತಂತ್ರಜ್ಞಾನ ಪರೀಕ್ಷೆ ಯಶಸ್ವಿ

    ಉಕ್ರೇನ್‍ನಿಂದ ಭಾರತಕ್ಕೆ ಹಿಂದಿರುಗಿರುವ ವಿದ್ಯಾರ್ಥಿಗಳು ತಮ್ಮ ಉಳಿದ ವ್ಯಾಸಂಗವನ್ನು ಭಾರತೀಯ ವೈದ್ಯಕೀಯ ಕಾಲೇಜುಗಳಲ್ಲಿ ಮುಂದುವರಿಸಲು ಅವಕಾಶ ನೀಡುವಂತೆ ಕೋರಲಾಗಿದೆ. ಸ್ಥಳಾಂತರಗೊಂಡಿರುವ ವಿದ್ಯಾರ್ಥಿಗಳು ದೇಶದಲ್ಲಿರುವ ವೈದ್ಯಕೀಯ ಕಾಲೇಜುಗಳಲ್ಲಿ ವ್ಯಾಸಂಗವನ್ನು ಮುಂದುವರಿಸಲು ಅನುಕೂಲ ಮಾಡುವಂತೆ ಶಿಫಾರಸು ಮಾಡಿದೆ.

    ಉಕ್ರೇನ್‍ನಲ್ಲಿ ಪದವಿಯನ್ನು ಪ್ರಾರಂಭಿಸಿ, ಭಾರತದಲ್ಲಿ ವ್ಯಾಸಂಗವನ್ನು ಪೂರ್ಣಗೊಳಿಸಿದ್ದಲ್ಲಿ ವಿದ್ಯಾರ್ಥಿಗಳು ಭಾರತೀಯ ವೈದ್ಯಕೀಯ ಪದವೀಧರರಾಗಿಯೇ ಇರುತ್ತಾರೆ. ಅವರಿಗೆ ವಿದೇಶದ ಪ್ರಗತಿಪತ್ರವನ್ನು ನೀಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಇದನ್ನೂ ಓದಿ: ಮಹಿಳೆಯರ ಮೇಲೆ ರಷ್ಯಾ ಸೈನಿಕರಿಂದ ಅತ್ಯಾಚಾರ: ಉಕ್ರೇನ್‌ ಸಚಿವ ಆರೋಪ

    ಫೆಬ್ರವರಿ 24ರಂದು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಉಕ್ರೇನ್ ಮೇಲೆ ದಾಳಿ ನಡೆಸಿದಾಗಿನಿಂದ ಉಕ್ರೇನ್‍ನ ವಾಯುನೆಲೆಯನ್ನು ಮುಚ್ಚಲಾಗಿದೆ. ಯುದ್ಧ ಪೀಡಿತ ದೇಶದಲ್ಲಿ ಭಾರತದ ಸಾವಿರಾರು ವೈದ್ಯಕೀಯ ವಿದ್ಯಾರ್ಥಿಗಳು ಸಿಲುಕಿಕೊಂಡಿದ್ದು, ಅವರನ್ನು ಉಕ್ರೇನ್‍ನ ಗಡಿ ದೇಶಗಳಿಗೆ ತಲುಪಿಸಿ ಅಲ್ಲಿಂದ ಭಾರತಕ್ಕೆ ಏರ್‍ಲಿಫ್ಟ್ ಮಾಡಲಾಗುತ್ತಿದೆ.

  • ತಮ್ಮ ಹಡಗನ್ನೇ ಸ್ಫೋಟಿಸಿಕೊಂಡ ಉಕ್ರೇನ್ ಸೇನೆ!

    ತಮ್ಮ ಹಡಗನ್ನೇ ಸ್ಫೋಟಿಸಿಕೊಂಡ ಉಕ್ರೇನ್ ಸೇನೆ!

    ಕೀವ್: ಉಕ್ರೇನ್ ಮೇಲೆ ರಷ್ಯಾ ಯುದ್ಧ ಶುರು ಮಾಡಿ ಇವತ್ತಿಗೆ ಒಂಬತ್ತನೇ ದಿನ. ಈ ನಡುವೆ ಉಕ್ರೇನ್‍ನ ಹಡಗೊಂದನ್ನು ಉಕ್ರೇನ್ ಸೈನಿಕರೇ ಸ್ಫೋಟಿಸಿ ಮುಳುಗಿಸಿದ್ದಾರೆ.

    ರಷ್ಯಾ ಸೇನೆ ಕಂಡುಕೇಳರಿಯದ ರೀತಿಯಲ್ಲಿ ಉಕ್ರೇನ್ ಮೇಲೆ ಬಾಂಬ್, ಕ್ಷಿಪಣಿ ದಾಳಿ ನಡೆಸ್ತಿವೆ. ಈ ಹಿನ್ನೆಲೆ ಖಾರ್ಕೀವ್, ಚೆರ್ನಿಹೀವ್, ಸುಮಿ, ಕೀವ್ ನಗರಗಳು ತತ್ತರಿಸಿದ್ದು, ಸ್ಮಶಾನದಂತಾಗಿಬಿಟ್ಟಿವೆ. ಸದ್ಯ ರಷ್ಯಾ ಆರ್ಮಿ ಕೀವ್‍ನಿಂದ 20 ಮೈಲಿ ದೂರದಲ್ಲಿ ಬೀಡುಬಿಟ್ಟಿದೆ. ಮುಂದಿನ ಆದೇಶಕ್ಕಾಗಿ ಕಾಯ್ತಿದೆ. ಇದನ್ನೂ ಓದಿ: 16 ಗಂಟೆ ಟ್ರಾನ್‍ನಲ್ಲೇ ನಿಂತುಕೊಂಡೆ ಪ್ರಯಾಣ ಮಾಡಿದ್ದೇವೆ: ನೋವು ಹಂಚಿಕೊಂಡ ವಿದ್ಯಾರ್ಥಿಗಳು!

    ಜಾಪೋರಿಷಿಯಾ ಸಮೀಪದ ಎನರ್ವೋದರ್ ನಗರ ವಶಕ್ಕೆ ಪಡೆಯಲು ಮುಂದಡಿ ಇಟ್ಟಿದೆ. ಭಾರೀ ಸಾವು-ನೋವು, ಆರ್ಥಿಕ ನಷ್ಟ ಉಂಟಾಗ್ತಿದ್ದರೂ, ರಷ್ಯಾ ಸೇನೆ ವಿರುದ್ಧ ಉಕ್ರೇನ್ ಪಡೆಗಳು ಹಿಂದಡಿಯಿಟ್ಟಿಲ್ಲ. ತೀವ್ರ ಸ್ವರೂಪದಲ್ಲಿ ತಿರುಗೇಟು ನೀಡುತ್ತಿವೆ. ಗೆರಿಲ್ಲಾ ಮಾದರಿಯ ಯುದ್ಧವ್ಯೂಹದ ಮೂಲಕ ರಷ್ಯಾ ಪಡೆಗಳನ್ನು ಎದಿರುಸುತ್ತಿವೆ. ಕಂಡಕಂಡದಲ್ಲಿ ರಷ್ಯಾದ ಯುದ್ಧ ಟ್ಯಾಂಕ್‍ಗಳಿಗೆ ಬೆಂಕಿ ಹಚ್ಚುತ್ತಿವೆ.

    ಕೀವ್ ಜೂನಲ್ಲಿನ ಪ್ರಾಣಿಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ. ಈ ಮಧ್ಯೆ ಉಕ್ರೇನ್‍ನ ಹಡಗೊಂದನ್ನು ಉಕ್ರೇನ್ ಸೈನಿಕರೇ ಸ್ಫೋಟಿಸಿ ಮುಳುಗಿಸಿದ್ದಾರೆ. ಮೊದಲು ಇದನ್ನು ನ್ಯಾಟೋ ಸದಸ್ಯ ರಾಷ್ಟ್ರ ಎಸ್ಟೋನಿಯಾಗೆ ಸೇರಿದ ಹಡಗು ಎಂದು ಹೇಳಲಾಗಿತ್ತು. ಈಗ ಉಕ್ರೇನ್‌ ನೌಕಾ ಸೇನೆಯವರೇ ನೌಕೆಯನ್ನುಸ್ಫೋಟಿಸಿ ಮುಳುಗಿಸಿದ್ದಾರೆ. ಒಂದು ವೇಳೆ ಈ ನೌಕೆ ರಷ್ಯಾ ಸೇನೆಗೆ ಸಿಕ್ಕಿದರೆ ವಿಜಯಿ ಆಗಿದ್ದೇವೆ ಎಂದು ಹೇಳಿಕೊಳ್ಳುವ ಸಾಧ್ಯತೆ ಇತ್ತು. ಶತ್ರು ರಾಷ್ಟ್ರಕ್ಕೆ ಮಾಹಿತಿ ಸುಲಭವಾಗಿ ಸಿಗುವ ಸಾಧ್ಯತೆ ಇತ್ತು. ಈ ಕಾರಣಕ್ಕೆ ಉಕ್ರೇನ್‌ ಸೇನೆಯೇ ಹಡಗನ್ನು ಸ್ಫೋಟಗೊಳಿಸಿದೆ ಎಂದು ವರದಿಯಾಗಿದೆ.

    ಇದೇ ನಡೆದರೇ ಮೂರನೇ ಮಹಾ ಯುದ್ಧ ಶುರುವಾಗಲಿದೆ ಎಂಬ ಮಾತು ಕೇಳಿಬಂದಿತ್ತು. ಈ ಮಧ್ಯೆ ರಷ್ಯಾ-ಉಕ್ರೇನ್ ನಡ್ವೆ ಮಧ್ಯಸ್ಥಿಕೆ ವಹಿಸಲು ಸಿದ್ಧ ಎಂದು ಸೌದಿ ರಾಜ ಮೊಹ್ಮದ್ ಬಿನ್ ಸಲ್ಮಾನ್ ಪ್ರಕಟಿಸಿದ್ದಾರೆ. ಅತ್ತ ರಷ್ಯಾದಲ್ಲಿ ಫೇಸ್‍ಬುಕ್, ಟ್ವಿಟ್ಟರ್ ಮೇಲೆ ನಿಷೇಧ ಹೇರಲಾಗಿದೆ. ಸೇನೆ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ್ರೇ ಜೈಲಿಗೆ ಕಳಿಸುವ ಹೊಸ ಕಾಯ್ದೆಯನ್ನು ರಷ್ಯಾದಲ್ಲಿ ಜಾರಿ ಮಾಡಲಾಗಿದೆ. ಇದನ್ನೂ ಓದಿ: ಉಪ್ಪು ಹುಳಿ ಖಾರ ಇಲ್ಲದ, ಯಾರದ್ದೋ ಒತ್ತಡದಿಂದ ಓದಿದ ಬಜೆಟ್: ಕುಮಾರಸ್ವಾಮಿ

  • ದಯವಿಟ್ಟು ನನ್ನನ್ನು ಭಾರತಕ್ಕೆ ಕರೆಸಿಕೊಳ್ಳಿ: ಉಕ್ರೇನ್‍ನಲ್ಲಿ ಗುಂಡು ತಗುಲಿದ ವಿದ್ಯಾರ್ಥಿ

    ದಯವಿಟ್ಟು ನನ್ನನ್ನು ಭಾರತಕ್ಕೆ ಕರೆಸಿಕೊಳ್ಳಿ: ಉಕ್ರೇನ್‍ನಲ್ಲಿ ಗುಂಡು ತಗುಲಿದ ವಿದ್ಯಾರ್ಥಿ

    ಕೀವ್: ಉಕ್ರೇನ್‍ನಲ್ಲಿ ಗುಂಡು ತಗುಲಿ ಗಾಯಗೊಂಡಿದ್ದ ವಿದ್ಯಾರ್ಥಿ ಇದೀಗ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದೆಹಲಿ ಮೂಲದ ವಿದ್ಯಾರ್ಥಿ ಹರ್ಜೋತ್ ಸಿಂಗ್ ಗುಂಡು ತಗುಲಿದ ಭೀಕರ ಸನ್ನಿವೇಶದ ಬಗ್ಗೆ ಆಸ್ಪತ್ರೆಯಲ್ಲಿ ವಿವರಿಸಿದ್ದಾರೆ.

    ಇದು ಫೆಬ್ರವರಿ 27ರಂದು ನಡೆದ ಘಟನೆ. ನಾನು ಹಾಗೂ ನನ್ನ ಇಬ್ಬರು ಸ್ನೇಹಿತರು ಕ್ಯಾಬ್‍ನಲ್ಲಿ ಪ್ರಯಾಣಿಸುತ್ತಿದ್ದಾಗ 3 ರಿಂದ 4 ಜನರು ನಮ್ಮ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಇದರಿಂದ ನನಗೆ ಅನೇಕ ಗುಂಡುಗಳು ತಗುಲಿ ಗಾಯಗಳಾಗಿದ್ದವು ಎಂದು ಹರ್ಜೋತ್ ತಿಳಿಸಿದರು. ಇದನ್ನೂ ಓದಿ: ಮತ್ತೊಬ್ಬ ಭಾರತೀಯ ವಿದ್ಯಾರ್ಥಿಗೆ ಗುಂಡೇಟು- ಆಸ್ಪತ್ರೆಗೆ ದಾಖಲು

    ನನಗೆ ಮಾರ್ಚ್ 2ರಂದು ಪ್ರಜ್ಞೆ ಬಂದಿತ್ತು. ಪ್ರಜ್ಞೆ ಬಂದ ತಕ್ಷಣ ನಾನು ನನ್ನ ಮನೆಯವರಿಗೆ ಕರೆ ಮಾಡಿದ್ದೆ. ಸದ್ಯ ದೇವರು ನನಗೆ ಹೊಸ ಜೀವನವನ್ನು ನೀಡಿದ್ದಾರೆ. ನಾನು ಭಾರತಕ್ಕೆ ಹಿಂದಿರುಗಲು ಬಯಸುತ್ತೇನೆ. ಈ ಅಮೂಲ್ಯ ಜೀವನವನ್ನು ನನ್ನ ಕುಟುಂಬದೊಂದಿಗೆ ಕಳೆಯಲು ಬಯಸುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಮೋದಿ 5ನೇ ಸಭೆ – ಉಕ್ರೇನ್‍ನಿಂದ 18 ಸಾವಿರ ಮಂದಿ ಸ್ವದೇಶಕ್ಕೆ

    ಹರ್ಜೋತ್ ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ಉಕ್ರೇನ್‍ನಿಂದ ತವರಿಗೆ ಕರೆಸಿಕೊಳ್ಳುವಂತೆ ಹರ್ಜೋತ್ ಭಾರತ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.