Tag: russia

  • ಯುದ್ಧಪೀಡಿತ ಉಕ್ರೇನ್‍ನಿಂದ  ಬೆಳಗಾವಿಗೆ ವಿದ್ಯಾರ್ಥಿನಿ – ಕುಟುಂಬಸ್ಥರಲ್ಲಿ ಹರ್ಷ

    ಯುದ್ಧಪೀಡಿತ ಉಕ್ರೇನ್‍ನಿಂದ ಬೆಳಗಾವಿಗೆ ವಿದ್ಯಾರ್ಥಿನಿ – ಕುಟುಂಬಸ್ಥರಲ್ಲಿ ಹರ್ಷ

    ಬೆಳಗಾವಿ: ಯುದ್ಧಪೀಡಿತ ಉಕ್ರೇನ್‍ನಿಂದ ಬೆಳಗಾವಿಯ ಎಂಬಿಬಿಎಸ್ ವಿದ್ಯಾರ್ಥಿನಿ ಫೈಜಾ ಸುಬೇದಾರ್ ಸುರಕ್ಷಿತವಾಗಿ ಆಗಮಿಸಿದ್ದು, ಕುಟುಂಬಸ್ಥರಲ್ಲಿ ಸಂಭ್ರಮ ಮನೆಮಾಡಿದೆ.

    ಬೆಳಗಾವಿ ತಾಲೂಕಿನ ಸಂತಿಬಸ್ತವಾಡ ಗ್ರಾಮದ ಫೈಜಾ ಸುಬೇದಾರ್ ವಿದ್ಯಾರ್ಥಿನಿಯನ್ನು ಅಂಬೇಡ್ಕರ್ ಜನಜಾಗೃತಿ ವೇದಿಕೆಯಿಂದ ಸ್ವಾಗತಿಸಿಕೊಳ್ಳಲಾಯಿತು. ಮಗಳು ಸುರಕ್ಷಿತವಾಗಿ ಮರಳಿದ ಹಿನ್ನೆಲೆ ಕುಟುಂಬಸ್ಥರಲ್ಲಿಯೂ ಸಂಭ್ರಮ ಮನೆಮಾಡಿತು. ಇದನ್ನೂ ಓದಿ:  ಮಾಲೀಕ ಯುದ್ಧಕ್ಕೆ ಹೋಗಿದ್ದಾರೆ, ಅವರ ಮಕ್ಕಳನ್ನು ಬಿಟ್ಟು ನಾನು ಬರಲ್ಲ ಎಂದ ವಿದ್ಯಾರ್ಥಿನಿ!

    ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ ಫೈಜಾ, ನಾವು ರೊಮೇನಿಯಾ ಗಡಿಗೆ ಬಂದು ಅಲ್ಲಿಂದ 12 ಗಂಟೆ ಪ್ರಯಾಣ ಮಾಡಿ ಏರ್‍ಪೆÇೀರ್ಟ್ ತಲುಪಿದ್ವಿ. ನಾವು ಉಕ್ರೇನ್ ಪಶ್ಚಿಮ ಭಾಗದಲ್ಲಿ ಇದ್ವಿ. ಅಲ್ಲಿ ಅಷ್ಟೊಂದು ತೊಂದರೆ ಇರಲಿಲ್ಲ. ನಮ್ಮ ಭಾರತ ಸರ್ಕಾರದ ಬಗ್ಗೆ ನನಗೆ ಹೆಮ್ಮೆ ಇದೆ ಎಂದು ಸಂತೋಷ ವ್ಯಕ್ತಪಡಿಸಿದರು.

    ನಾವು ವಾಪಾಸ್ ಆಗಿರುವುದು ಬಹಳ ಸಂತೋಷ ಆಗ್ತಿದೆ. ಇದಕ್ಕೆ ಕಾರಣವಾದ ಪ್ರಧಾನಿ ಮೋದಿ ಅವರಿಗೂ ಧನ್ಯವಾದ ತಿಳಿಸುತ್ತೇನೆ. ಯುದ್ದ ಆರಂಭವಾದಾಗ ನಮಗೆ ಬಹಳ ಭಯ ಅನಿಸಿತ್ತು. ನಾನು ವೆಸ್ಟರ್ನ್ ಉಕ್ರೇನ್‍ದಲ್ಲಿದ್ದೆ. ಅಲ್ಲಿ ಯುದ್ಧದ ಭೀತಿ ಇರಲಿಲ್ಲ. ಏಕಾಏಕಿ ಯುದ್ದ ಆರಂಭವಾಗಿದನ್ನು ಕೇಳಿ ಶಾಕ್ ಆಯ್ತು. ಬೆಳಂಬೆಳಗ್ಗೆ ಐದು ಗಂಟೆಗೆ ಯುದ್ಧ ಆರಂಭವಾದ ಸುದ್ದಿ ತಿಳಿಯಿತು. ಯಾರು ಕೂಡ ರಷ್ಯಾ ಯುದ್ಧ ಮಾಡುತ್ತೆ ಎಂದು ಊಹೆಯನ್ನೂ ಸಹ ಮಾಡಿಕೊಂಡಿರಲಿಲ್ಲ ಎಂದು ತಮ್ಮ ಅನುಭವವನ್ನು ಹಂಚಿಕೊಂಡರು.

    ಮೊದಲ ವಿಮಾನದಲ್ಲಿ ನಾನು ವಾಪಸ್ ಬಂದಿದ್ದಕ್ಕೆ ಬಹಳ ಖುಷಿಯಾಗ್ತಿದೆ. ನಮ್ಮ ವಿಮಾನದಲ್ಲಿ ಹದಿನೈದು ಜನ ವಿದ್ಯಾರ್ಥಿಗಳು ವಾಪಸ್ ಬಂದ್ರು. ಮುಂಬೈನಲ್ಲಿ ಕೇಂದ್ರ ಸಚಿವ ಪಿಯೂಷ್ ಗೋಯಲ್ ನಮ್ಮನ್ನು ಸ್ವಾಗತಿಸಿದ್ರು. ಖಾರ್ಕೀವ್‍ನಲ್ಲಿ ಪರಿಸ್ಥಿತಿ ಬಹಳ ಗಂಭೀರವಾಗಿದೆ ಎಂದು ವಿವರಿಸಿದರು. ಇದನ್ನೂ ಓದಿ: ಕಾಂಗ್ರೆಸ್ ಅಗೌರವದಿಂದ ನೋವಾಗಿದೆ: ಬಿಜೆಪಿ ಸೇರ್ಪಡೆಯಾದ ಗುಲಾಂ ನಬಿ ಸೋದರಳಿಯ

    ಖಾರ್ಕೀವ್, ಕೀವ್‍ನಲ್ಲಿದ್ದ ವಿದ್ಯಾರ್ಥಿಗಳನ್ನು ಆದಷ್ಟು ಬೇಗ ಕರೆಯಸಿಕೊಳ್ಳಬೇಕು. ಎಟಿಎಂಗಳಲ್ಲಿ ಹಣ ಸಿಗುತ್ತಿಲ್ಲ, ಊಟಕ್ಕೂ ಅವರಿಗೆ ತುಂಬಾ ತೊಂದರೆ ಆಗ್ತಿದೆ. ಹೀಗಾಗಿ ನನ್ನಂತೆ ಅವರನ್ನು ಸುರಕ್ಷಿತವಾಗಿ ಮರಳಿ ದೇಶಕ್ಕೆ ಬರಬೇಕು ಎಂದು ಕೋರಿಕೊಂಡರು.

  • ಉಕ್ರೇನ್ ದಾಳಿಗೆ 4,300 ರಷ್ಯಾ ಸೈನಿಕರ ಸಾವು – ಸುಕೋಯ್ ಫೈಟರ್ ಜೆಟ್ ಧ್ವಂಸ

    ಉಕ್ರೇನ್ ದಾಳಿಗೆ 4,300 ರಷ್ಯಾ ಸೈನಿಕರ ಸಾವು – ಸುಕೋಯ್ ಫೈಟರ್ ಜೆಟ್ ಧ್ವಂಸ

    ಕೀವ್: ಉಕ್ರೇನ್ ವಿರುದ್ಧ ಯುದ್ಧ ಸಾರಿರುವ ರಷ್ಯಾ ಸೇನೆಗೆ ಉಕ್ರೇನ್ ತಿರುಗೇಟು ನೀಡುತ್ತಿದೆ. ರಷ್ಯಾದ 4,300ಕ್ಕೂ ಹೆಚ್ಚು ಸೈನಿಕರನ್ನು ಹೊಡೆದುರುಳಿಸಿದ್ದೇವೆ ಎಂದು ಉಕ್ರೇನ್ ಸಚಿವರೊಬ್ಬರು ತಿಳಿಸಿದ್ದಾರೆ.

    ಉಕ್ರೇನ್ ಮೇಲೆ ರಷ್ಯಾ ಸೇನೆ ಮುಗಿಬಿದ್ದಿದೆ. ರಷ್ಯಾ ಸೇನೆಗೆ ತಕ್ಕ ತಿರುಗೇಟು ನೀಡುತ್ತಿದ್ದು, ಈಗಾಗಲೇ ಉಕ್ರೇನ್ ದಾಳಿಗೆ 4,300ಕ್ಕೂ ಹೆಚ್ಚು ರಷ್ಯಾ ಸೈನಿಕರ ಸಾವನ್ನಪ್ಪಿದ್ದಾರೆ. ನೂರಾರು ರಷ್ಯಾ ಸೇನಾ ವಾಹನಗಳು ಸುಟ್ಟು ಬೂದಿಯಾಗಿವೆ ಎಂಬ ಮಾಹಿತಿ ಹೊರಬಿದ್ದಿದೆ. ಇದನ್ನೂ ಓದಿ: ಈ ಕ್ಷಣವೇ ನಮ್ಮ ದೇಶ ಬಿಟ್ಟು ಹೋಗಿ- ಉಕ್ರೇನ್ ಬಾಲಕಿಯ ಸಿಟ್ಟು

    ರಷ್ಯಾ ಕ್ಷಿಪಣಿ ಮತ್ತು ಬಾಂಬ್ ದಾಳಿ ನಡೆಸುತ್ತಿದ್ದು, ಉಕ್ರೇನ್ ಮಿಲಿಟರಿ ಪಡೆ ಕೂಡ ಪ್ರತಿ ದಾಳಿ ನಡೆಸುತ್ತಿದೆ. ರಷ್ಯಾ ಸೈನ್ಯ ಉಕ್ರೇನ್ ರಾಜಧಾನಿ ಕೀವ್‍ನ ಅಸುಪಾಸಿನಲ್ಲಿದೆ. ಉಕ್ರೇನ್ ಕೀವ್‍ನಲ್ಲಿ ಕರ್ಫ್ಯೂ ಜಾರಿಗೆ ತಂದಿದ್ದು, ಸೋಮವಾರದವರೆಗೆ ಯಾರು ಕೂಡ ಮನೆಯಿಂದ ಹೊರ ಬರದಂತೆ ಆದೇಶ ಹೊರಡಿಸಿದೆ. ಇದನ್ನೂ ಓದಿ: ರಷ್ಯಾ ಸಂಧಾನ ಆಹ್ವಾನ ತಿರಸ್ಕರಿಸಿದ ಉಕ್ರೇನ್ – ಕೀವ್, ಖಾರ್ಕಿವ್ ಪ್ರದೇಶದಲ್ಲಿ ಗುಂಡಿನ ಸುರಿಮಳೆ

    ಈಗಾಗಲೇ ರಷ್ಯಾ ದಾಳಿಗೆ ಅನಿಲ ಘಟಕಗಳು ಸ್ಫೋಟಗೊಂಡಿವೆ. ಸುಕೋಯ್ ಫೈಟರ್ ಜೆಟ್ ಧ್ವಂಸವಾಗಿದೆ. ಉಕ್ರೇನ್‍ನಲ್ಲಿ ಮನೆ ವಾಹನಗಳು ಸುಟ್ಟು ಕರಕಲಾಗಿದೆ. ಇತ್ತ ಉಕ್ರೇನ್ ಕೂಡ ಪ್ರತಿ ಸವಾಲು ಹಾಕಿದ್ದು, ರಷ್ಯಾದ ಸೇನಾ ವಾಹನಗಳು, ಹೆಲಿಕಾಪ್ಟರ್‌ಗಳನ್ನು ಉಡೀಸ್ ಮಾಡಿದೆ. ಖಾರ್ಕಿವ್ ನಗರಕ್ಕೆ ರಷ್ಯಾ ಸೇನೆ ಎಂಟ್ರಿ ಕೊಟ್ಟಿದ್ದು, ಗುಂಡಿನ ದಾಳಿಗೆ ಉಕ್ರೇನ್ ನಾಗರಿಕರು ಬಲಿಯಾಗಿದ್ದಾರೆ.  ಇದನ್ನೂ ಓದಿ: ರಷ್ಯಾ ಸೈನಿಕರನ್ನು ಸೆರೆ ಹಿಡಿದು ಅರೆಬೆತ್ತಲೆಗೊಳಿಸಿ ಸಿಗರೇಟ್ ಸೇದಿಸಿದ ಉಕ್ರೇನ್ ಸೇನೆ

  • ರಷ್ಯಾ ಸಂಧಾನ ಆಹ್ವಾನ ತಿರಸ್ಕರಿಸಿದ ಉಕ್ರೇನ್ – ಕೀವ್, ಖಾರ್ಕಿವ್ ಪ್ರದೇಶದಲ್ಲಿ ಗುಂಡಿನ ಸುರಿಮಳೆ

    ರಷ್ಯಾ ಸಂಧಾನ ಆಹ್ವಾನ ತಿರಸ್ಕರಿಸಿದ ಉಕ್ರೇನ್ – ಕೀವ್, ಖಾರ್ಕಿವ್ ಪ್ರದೇಶದಲ್ಲಿ ಗುಂಡಿನ ಸುರಿಮಳೆ

    ಕೀವ್: ಉಕ್ರೇನ್ ವಿರುದ್ಧ ಯುದ್ಧ ಘೋಷಣೆಗ ವಿಶ್ವದ ಇತರ ರಾಷ್ಟ್ರಗಳಿಂದ ವಿರೋಧ ವ್ಯಕ್ತವಾಗುತ್ತಿದ್ದಂತೆ ರಷ್ಯಾ, ಉಕ್ರೇನ್ ಜೊತೆ ಸಂಧಾನಕ್ಕೆ ಆಹ್ವಾನ ನೀಡಿದೆ. ಆದರೆ ಉಕ್ರೇನ್ ಮಾತ್ರ ಈ ಸಂಧಾನ ಆಹ್ವಾನ ನಿರಾಕರಿಸಿದೆ ಎಂದು ವರದಿಯಾಗಿದೆ.

    ರಷ್ಯಾ ಸೇನೆ ಉಕ್ರೇನ್‍ನಲ್ಲಿ ರಕ್ತಪಾತ ಮುಂದುವರಿಸಿದೆ. ಈ ನಡೆಯನ್ನು ವಿಶ್ವದ ಇತರ ರಾಷ್ಟ್ರಗಳು ವಿರೋಧಿಸುತ್ತಿದೆ. ಹಾಗಾಗಿ ರಷ್ಯಾದ ಅಧ್ಯಕ್ಷ ವಾಡ್ಲಿಮಿರ್ ಪುಟಿನ್, ಉಕ್ರೇನ್ ಜೊತೆಗೆ ಸಂಧಾನಕ್ಕೆ ನಿಯೋಗ ಕಳುಹಿಸಲು ಒಪ್ಪಿದ್ದರು. ಬೆಲಾರಸ್‍ನಲ್ಲಿ ಸಂಧಾನಕ್ಕೆ ರಷ್ಯಾ, ಉಕ್ರೇನ್‍ಗೆ ಆಹ್ವಾನ ನೀಡಿತ್ತು. ಆದರೆ ಈ ಆಹ್ವಾನವನ್ನು ಉಕ್ರೇನ್ ತಿರಸ್ಕರಿಸಿದೆ. ನಾವು ಬೆಲಾರಸ್‍ನಲ್ಲಿ ಸಂಧಾನ ನಡೆಯಲು ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಮಾಲೀಕ ಯುದ್ಧಕ್ಕೆ ಹೋಗಿದ್ದಾರೆ, ಅವರ ಮಕ್ಕಳನ್ನು ಬಿಟ್ಟು ನಾನು ಬರಲ್ಲ ಎಂದ ವಿದ್ಯಾರ್ಥಿನಿ!

    ಯಾಕೆ ನಿರಾಕರಣೆ:
    ಉಕ್ರೇನ್, ರಷ್ಯಾ ನೀಡಿದ ಸಂಧಾನ ಆಹ್ವಾನವನ್ನು ನಿರಾಕರಿಸಲು ಒಂದು ಕಾರಣವಿದೆ. ಉಕ್ರೇನ್ ವಿರುದ್ಧದ ಯುದ್ಧದಲ್ಲಿ ಬೆಲಾರಸ್ ರಷ್ಯಾ ಜೊತೆಗಿದೆ. ಹೀಗಾಗಿ ಬೆಲಾರಸ್‍ನಲ್ಲಿ ಮಾತುಕತೆ ಸಿದ್ಧವಿಲ್ಲ ಎಂದ ಉಕ್ರೇನ್ ಸಂಧಾನ ಮಾತುಕತೆಯನ್ನು ತಿರಸ್ಕರಿಸಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ರಷ್ಯಾ ಸೈನಿಕರನ್ನು ಸೆರೆ ಹಿಡಿದು ಅರೆಬೆತ್ತಲೆಗೊಳಿಸಿ ಸಿಗರೇಟ್ ಸೇದಿಸಿದ ಉಕ್ರೇನ್ ಸೇನೆ

    ಇನ್ನೊಂದೆಡೆ ಉಕ್ರೇನ್‍ನ ಕೀವ್, ಖಾರ್ಕಿವ್ ಪ್ರದೇಶದಲ್ಲಿ ರಷ್ಯಾ ಗುಂಡಿನ ಸುರಿಮಳೆ ಸುರಿಸಿದೆ. ಖಾರ್ಕಿವ್ ಪ್ರದೇಶದಲ್ಲಿ ರಷ್ಯಾ ಮಿಲಿಟರಿ ವಾಹನಗಳನ್ನು ಸದೆಬಡಿದು ಉಕ್ರೆನ್ ಮಿಲಿಟರಿ ಪಡೆ ಸವಾಲೊಡ್ಡುತ್ತಿದೆ. ಈಗಾಗಲೇ ಖಾರ್ಕಿವ್ ಪ್ರದೇಶಕ್ಕೆ ರಷ್ಯಾ ಮಿಲಿಟರಿ ಪಡೆ ಎಂಟ್ರಿಯಾಗಿದೆ. ರಷ್ಯಾ ಪಡೆಯನ್ನು ಹತ್ತಿಕ್ಕಲು ಕೀವ್, ಖಾರ್ಕಿವ್ ನಗರದಲ್ಲಿ ಉಕ್ರೇನ್ ಸೈನಿಕರು ಬಿಗಿ ಬಂದೋಬಸ್ತ್ ಮಾಡಿಕೊಂಡಿದ್ದಾರೆ. ಕಳೆದೆರೆಡು ದಿನಗಳಿಂದ ಕೀವ್, ಖಾರ್ಕಿವ್ ಭಾಗದಲ್ಲಿ ರಷ್ಯಾ ಬಾಂಬ್ ಸ್ಫೋಟಕಗಳನ್ನು ನಡೆಸುತ್ತಿದೆ. ಇದನ್ನೂ ಓದಿ: ಭಾರತದ ಧ್ವಜವಿದ್ದ ಕಾರಣ ಸುಲಭವಾಗಿ ಗಡಿ ದಾಟಿದ್ದೇವೆ: ವಿದ್ಯಾರ್ಥಿಗಳು

  • ಮಾಲೀಕ ಯುದ್ಧಕ್ಕೆ ಹೋಗಿದ್ದಾರೆ, ಅವರ ಮಕ್ಕಳನ್ನು ಬಿಟ್ಟು ನಾನು ಬರಲ್ಲ ಎಂದ ವಿದ್ಯಾರ್ಥಿನಿ!

    ಮಾಲೀಕ ಯುದ್ಧಕ್ಕೆ ಹೋಗಿದ್ದಾರೆ, ಅವರ ಮಕ್ಕಳನ್ನು ಬಿಟ್ಟು ನಾನು ಬರಲ್ಲ ಎಂದ ವಿದ್ಯಾರ್ಥಿನಿ!

    ಕೀವ್: ಮನುಷ್ಯನಿಗೆ ಮಾನವೀಯತೆಯ ಮೌಲ್ಯ ತುಂಬಾ ಮುಖ್ಯ. ಅದಕ್ಕೆ ಉತ್ತಮವಾದ ಉದಾಹರಣೆ ಇಲ್ಲಿದೆ. ರಷ್ಯಾ ಮತ್ತು ಉಕ್ರೇನ್‍ನಲ್ಲಿ ಭೀಕರ ಯುದ್ಧ ನಡೆಯುತ್ತಿದ್ದು, ಅಲ್ಲಿಂದ ಹೊರಗೆ ಬಂದರೆ ಸಾಕು ಎಂದು ಕಾಯುತ್ತಿರುವ ಜನಗಳ ಮಧ್ಯೆ ಹರ್ಯಾಣ ವೈದ್ಯಕೀಯ ವಿದ್ಯಾರ್ಥಿನಿಯು ಉಕ್ರೇನ್ ಬಿಟ್ಟು ಬರಲು ನಿರಾಕರಿಸಿದ್ದಾಳೆ.

    ಹರ್ಯಾಣ ವಿದ್ಯಾರ್ಥಿನಿ ನೇಹಾ ಉಕ್ರೇನ್‍ನಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದಾಳೆ. ಆದರೆ ಕಳೆದ 2 ದಿನಗಳಿಂದ ಉಕ್ರೇನ್ ಪರಿಸ್ಥಿತಿ ಸರಿಯಿಲ್ಲದ ಕಾರಣ ಎಲ್ಲ ವಿದ್ಯಾರ್ಥಿಗಳನ್ನು ಅವರವರ ದೇಶಕ್ಕೆ ಕಳುಹಿಸಲಾಗುತ್ತಿದೆ. ನೇಹಾ ಪೇಯಿಂಗ್ ಗೆಸ್ಟ್ ಆಗಿ ಉಕ್ರೇನ್ ನಿವಾಸದಲ್ಲಿ ಉಳಿದುಕೊಂಡಿದ್ದಳು. ಆದರೆ ಮನೆಯ ಮಾಲೀಕ ಯೋಧನಾಗಿದ್ದು, ತನ್ನ ದೇಶಕ್ಕೆ ಸೇವೆ ಸಲ್ಲಿಸಲು ಉಕ್ರೇನಿಯನ್ ಸೈನ್ಯಕ್ಕೆ ಸ್ವಯಂಪ್ರೇರಣೆಯಿಂದ ಸೇರಿಕೊಂಡಿದ್ದಾನೆ. ಪರಿಣಾಮ ನೇಹಾಗೆ ತನ್ನ ಮೂರು ಮಕ್ಕಳನ್ನು ನೋಡಿಕೊಳ್ಳಲು ನನ್ನ ಹೆಂಡತಿಗೆ ಸಹಾಯ ಮಾಡು ಎಂದು ಹೇಳಿ ಆತ ಹೋಗಿದ್ದಾನೆ. ಇದನ್ನೂ ಓದಿ: ಉಕ್ರೇನ್‍ನಲ್ಲಿರುವ ಕಟ್ಟ ಕಡೆಯ ವಿದ್ಯಾರ್ಥಿಯನ್ನು ಸುರಕ್ಷಿತವಾಗಿ ಕರೆತರುವ ತನಕ ಆಪರೇಷನ್ ನಿಲ್ಲದು: ಆರ್.ಅಶೋಕ್

    ನೇಹಾನನ್ನು ತನ್ನ ದೇಶಕ್ಕೆ ಹೋಗುವಂತೆ ಕೇಳಿದಾಗ, ನಾನು ಬದುಕಬಹುದು ಅಥವಾ ಸಾಯಬಹುದು. ನಾನು ಈ ಮಕ್ಕಳನ್ನು ಮತ್ತು ಅವರ ತಾಯಿಯನ್ನು ಇಂತಹ ಪರಿಸ್ಥಿತಿಯಲ್ಲಿ ಬಿಟ್ಟು ಬರುವುದಿಲ್ಲ ಎಂದು ಕಣ್ಣೀರಿಟ್ಟಿದ್ದಾಳೆ.

    ನಾವು ಹೊರಗೆ ಬಾಂಬ್ ಸ್ಫೋಟಗಳನ್ನು ಕೇಳಿಸಿಕೊಳ್ಳುತ್ತಿದ್ದೇವೆ. ಆದರೆ ಇಲ್ಲಿಯವರೆಗೆ ನಾವು ಚೆನ್ನಾಗಿಯೇ ಇದ್ದೇವೆ. ನಮಗೆ ಯಾವುದೇ ರೀತಿಯ ಅಪಾಯವಾಗಿಲ್ಲ. ನಾನು, ಮಕ್ಕಳು ಮತ್ತು ಮಾಲೀಕನ ಹೆಂಡತಿ ಬಂಕರ್ ನಲ್ಲಿ ಸುರಕ್ಷಿತವಾಗಿ ಇದ್ದೇವೆ ಎಂದು ತನ್ನ ತಾಯಿಗೆ ಮತ್ತು ಕುಟುಂಬ ಸ್ನೇಹಿತರಿಗೆ ತಿಳಿಸಿದ್ದಾಳೆ. ಇದನ್ನೂ ಓದಿ: ಚುನಾವಣೆಗೂ ಮುನ್ನ ಭಾರೀ ಅವಘಡ – ಮಗು ಸೇರಿ ಇಬ್ಬರ ಸಾವು, ಐವರಿಗೆ ಗಾಯ

    ಹರಿಯಾಣದ ವಿದ್ಯಾರ್ಥಿನಿ ನೇಹಾ(17) ಒಂದೆರಡು ವರ್ಷಗಳ ಹಿಂದೆ ಭಾರತೀಯ ಸೇನೆಯಲ್ಲಿದ್ದ ತನ್ನ ತಂದೆಯನ್ನು ಕಳೆದುಕೊಂಡಿದ್ದಳು. ಕಳೆದ ವರ್ಷ ನೇಹಾ ಉಕ್ರೇನ್‍ನ ವೈದ್ಯಕೀಯ ಕಾಲೇಜಿಗೆ ದಾಖಲಾಗಿದ್ದಳು. ಎಂಬಿಬಿಎಸ್ ವಿದ್ಯಾರ್ಥಿನಿಯಾಗಿರುವ ನೇಹಾಗೆ ಹಾಸ್ಟೆಲ್ ಸೌಕರ್ಯ ಸಿಗದ ಕಾರಣ ಉಕ್ರೇನ್‍ನ ರಾಜಧಾನಿ ಕೀವ್‍ನಲ್ಲಿ ಎಂಜಿನಿಯರ್ ಮನೆಯಲ್ಲಿ ನೆಲೆಸಿದ್ದಾಳೆ.

  • ಭಾರತದ ಧ್ವಜವಿದ್ದ ಕಾರಣ ಸುಲಭವಾಗಿ ಗಡಿ ದಾಟಿದ್ದೇವೆ: ವಿದ್ಯಾರ್ಥಿಗಳು

    ಭಾರತದ ಧ್ವಜವಿದ್ದ ಕಾರಣ ಸುಲಭವಾಗಿ ಗಡಿ ದಾಟಿದ್ದೇವೆ: ವಿದ್ಯಾರ್ಥಿಗಳು

    ನವದೆಹಲಿ: ಭಾರತದ ಧ್ವಜ ಇದ್ದ ಕಾರಣ ನಾವು ಎಲ್ಲೂ ನಿಲ್ಲದೇ ಸುಲಭವಾಗಿ ಗಡಿಯನ್ನು ತಲುಪಿ ಸ್ವದೇಶವನ್ನು ತಲುಪಿದ್ದೇವೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ.

    ರೂಮೇನಿಯಾದಿಂದ ಇಂದು ಬೆಳಗ್ಗೆ ದೆಹಲಿಗೆ ಏರ್‌ ಇಂಡಿಯಾ ವಿಮಾನದ ಮೂಲಕ ವಿದ್ಯಾರ್ಥಿಗಳು ಆಗಮಿಸಿದ್ದಾರೆ. ಈ ವೇಳೆ ಬಿಹಾರ ವಿದ್ಯಾರ್ಥಿಗಳು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ಬೈಡನ್ ದೌರ್ಬಲ್ಯದಿಂದಲೇ ಈ ಅನಾಹುತವಾಗಿದೆ: ಟ್ರಂಪ್

    ರಾಷ್ಟ್ರಧ್ವಜ ನೋಡಿ ಉಕ್ರೇನ್‌ ಮತ್ತು ರಷ್ಯಾದವರು ಯಾರೂ ನಮ್ಮನ್ನು ತಡೆಯಲಿಲ್ಲ ನಡೆಯಲಿಲ್ಲ. ಸುಲಭವಾಗಿ ನಾವು ಗಡಿಯನ್ನು ತಲುಪಿದ್ದೇವೆ ಎಂದು ತಿಳಿಸಿದ್ದಾರೆ.

    ಉಕ್ರೇನ್‌ ಮೂಲಕ ಭಾರತಕ್ಕೆ ಬರುತ್ತಿರುವ ವಿದ್ಯಾರ್ಥಿಯೊಬ್ಬನ ವೀಡಿಯೋ ವೈರಲ್‌ ಆಗಿದೆ. ಈ ವೀಡಿಯೋದಲ್ಲಿ ನಾವು ಮೂರು ರಾಜ್ಯವನ್ನು ದಾಟಿ ಬರುತ್ತಿದ್ದೇವೆ. ಗಡಿಯಲ್ಲಿ ಸೈನಿಕರು ಪೊಲೀಸರು ಎಲ್ಲರೂ ಇದ್ದಾರೆ. ಆದರೆ ನಮ್ಮ ರಾಷ್ಟ್ರಧ್ವಜವನ್ನು ನೋಡಿ ತಪಾಸಣೆ ಮಾಡದೇ ಬಿಟ್ಟುಬಿಟ್ಟಿದ್ದಾರೆ ಎಂದು ಹೇಳಿದ್ದಾನೆ.

    ಉಕ್ರೇನ್‌ನಿಂದ ಭಾರತಕ್ಕೆ ಬರುತ್ತಿರುವ ವಿದ್ಯಾರ್ಥಿಗಳಿಗೆ ಮತ್ತು ಪ್ರಜೆಗಳಿಗೆ ರಾಷ್ಟ್ರಧ್ವಜದೊಂದಿಗೆ ಬರುವಂತೆ ರಾಯಭಾರ ಕಚೇರಿ ಸೂಚಿಸಿತ್ತು. ಅದರಂತೆ ವಿದ್ಯಾರ್ಥಿಗಳು ರಾಷ್ಟ್ರಧ್ವಜವನ್ನು ಬ್ಯಾಗಿನ ಮುಂಭಾಗ ಸಿಕ್ಕಿಸಿಕೊಂಡು ಗಡಿಯನ್ನು ದಾಟಿ ಏರ್‌ ಇಂಡಿಯಾ ವಿಮಾನವನ್ನು ಹತ್ತುತ್ತಿದ್ದಾರೆ. ಇದನ್ನೂ ಓದಿ: ಉಕ್ರೇನ್‍ನಲ್ಲಿರುವ ಕಟ್ಟ ಕಡೆಯ ವಿದ್ಯಾರ್ಥಿಯನ್ನು ಸುರಕ್ಷಿತವಾಗಿ ಕರೆತರುವ ತನಕ ಆಪರೇಷನ್ ನಿಲ್ಲದು: ಆರ್.ಅಶೋಕ್

    ಉಕ್ರೇನ್‌ ಮತ್ತು ರಷ್ಯಾದ ಮಧ್ಯೆ ಭಾರತದ ಸಂಬಂಧ ಉತ್ತಮವಾಗಿದೆ. ಪ್ರಧಾನಿ ನರೇಂದ್ರ ಮೋದಿ ರಷ್ಯಾ ಅಧ್ಯಕ್ಷ ಪುಟಿನ್‌ ಮತ್ತು ವೊಲೊಡಿಮಿರ್ ಝೆಲೆನ್ಸ್ಕಿಜೊತೆ ದೂರವಾಣಿ ಕರೆ ಮಾಡಿ ನಮ್ಮ ವಿದ್ಯಾರ್ಥಿಗಳಿಗೆ ಆಗುತ್ತಿರುವ ಸಮಸ್ಯೆಯನ್ನು ತಿಳಿಸಿದ್ದರು.

    ಎರಡು ರಾಷ್ಟ್ರಗಳ ಮಧ್ಯೆ ಯುದ್ಧ ನಡೆಯುತ್ತಿರುವಾಗ ಸಂಚಾರ ಮಾಡುವುದು ಬಹಳ ಕಷ್ಟ. ಗಡಿಯಲ್ಲಿ ಸೈನಿಕರು ತಪಾಸಣೆ ಮಾಡಿಯೇ ಬಿಡುತ್ತಾರೆ. ಹೀಗಿರುವಾಗ ಭಾರತದ ಧ್ವಜ ನೋಡಿ ಸೈನಿಕರು ಸುಲಭವಾಗಿ ನಮ್ಮನ್ನು ಬಿಡುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಳ್ಳುತ್ತಿದ್ದಾರೆ.

  • ರಷ್ಯಾ ಸೈನಿಕರನ್ನು ಸೆರೆ ಹಿಡಿದು ಅರೆಬೆತ್ತಲೆಗೊಳಿಸಿ ಸಿಗರೇಟ್ ಸೇದಿಸಿದ ಉಕ್ರೇನ್ ಸೇನೆ

    ರಷ್ಯಾ ಸೈನಿಕರನ್ನು ಸೆರೆ ಹಿಡಿದು ಅರೆಬೆತ್ತಲೆಗೊಳಿಸಿ ಸಿಗರೇಟ್ ಸೇದಿಸಿದ ಉಕ್ರೇನ್ ಸೇನೆ

    ಕೀವ್: ಉಕ್ರೇನ್ ವಿರುದ್ಧ ಯುದ್ಧ ಘೋಷಿಸರುವ ರಷ್ಯಾ 4ನೇ ದಿನವಾದ ಇಂದು ಕೂಡ ಹಲವು ದಾಳಿಗಳನ್ನು ನಡೆಸಿದೆ. ಇತ್ತ ಉಕ್ರೇನ್ ಸೈನಿಕರು ರಷ್ಯಾದ ಸೈನಿಕರನ್ನು ಹಿಡಿದು ಅರೆಬೆತ್ತಲೆಗೊಳಿಸಿ ಸಿಗರೇಟ್ ಸೇದಿಸಿದ್ದಾರೆ.

    ರಷ್ಯಾ, ಉಕ್ರೇನ್‍ನ ರಾಜಧಾನಿ ಕೀವ್‍ಗೆ ನುಗ್ಗಲು ದಾರಿ ಹುಡುಕುತ್ತಿದೆ. ರಷ್ಯಾದ ಮಿಲಿಟರಿ ಪಡೆ ಈಗಾಗಲೇ ಉಕ್ರೇನ್‍ನ ಮಿಲಿಟರಿ ನೆಲೆಗಳು ಮತ್ತು ಇತರ ಸ್ಥಳಗಳ ಮೇಲೆ ಬಾಂಬ್ ಮತ್ತು ಕ್ಷಿಪಣಿ ದಾಳಿ ಮುಂದುವರಿಸಿದೆ. ಉಕ್ರೇನ್ ಕೂಡ ರಷ್ಯಾ ದಾಳಿಗೆ ಪ್ರತಿರೋಧ ಒಡ್ಡುತ್ತಿದೆ. ಇಂದು ಕೀವ್‍ಗೆ ಪ್ರವೇಶಿಸಲು ಪ್ರಯತ್ನಿಸಿದ ರಷ್ಯನ್ ಮೇಜರ್‌ಗೆ ಥಳಿಸಿ ಸಿಗರೇಟ್ ಸೇದುವಂತೆ ಉಕ್ರೇನ್ ಸೇನೆ ಒತ್ತಾಯಿಸಿದ ವೀಡಿಯೋ ಒಂದು ವೈರಲ್ ಆಗುತ್ತಿದೆ. ಇದನ್ನೂ ಓದಿ: ರಷ್ಯಾ ಸಶಸ್ತ್ರ ಪಡೆಗಳ ನಿಷ್ಕಲ್ಮಶ ಸೇವೆಗೆ ಪುಟಿನ್‌ ಧನ್ಯವಾದ

    ರಷ್ಯನ್ ಮೇಜರ್‌ನ್ನು ಹಿಡಿದು ಥಳಿಸಿ ಬಳಿಕ ರಷ್ಯಾದ ಸೇನಾ ಸಮವಸ್ತ್ರವನ್ನು ತೆಗೆಸಿದೆ. ಬಳಿಕ ಸಿಗರೇಟ್ ಸೇದಿಸಿ ಬಂಧನದಲ್ಲಿಟ್ಟಿದೆ. ಈ ಮೂಲಕ ರಷ್ಯಾದ ದಾಳಿಗೆ ತೀವ್ರ ಪ್ರತಿರೋಧ ಒಡ್ಡುತ್ತಿರುವ ಉಕ್ರೇನ್ ಸೇನೆ ರಷ್ಯಾದೊಂದಿಗಿನ ಸಂಧಾನ ಆಹ್ವಾನವನ್ನು ತೀರಸ್ಕರಿಸಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ರಾಷ್ಟ್ರಗೀತೆ ಹಾಡಿದ ಉಕ್ರೇನ್ ಮಹಿಳೆಯ ವೀಡಿಯೋ ವೈರಲ್

  • ಬೈಡನ್ ದೌರ್ಬಲ್ಯದಿಂದಲೇ ಈ ಅನಾಹುತವಾಗಿದೆ: ಟ್ರಂಪ್

    ಬೈಡನ್ ದೌರ್ಬಲ್ಯದಿಂದಲೇ ಈ ಅನಾಹುತವಾಗಿದೆ: ಟ್ರಂಪ್

    ವಾಷಿಂಗ್ಟನ್: ರಷ್ಯಾ ಹಾಗೂ ಉಕ್ರೇನ್ ಯುದ್ಧ ಹಿನ್ನೆಲೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರತಿಕ್ರಿಯಿಸಿದ್ದು, ಪುಟಿನ್‍ನ ಬುದ್ಧಿವಂತಿಕೆಯಿಂದ ಸಮಸ್ಯೆಯಾಗುತ್ತಿಲ್ಲ. ಆದರೆ ಅಮೆರಿಕ ಅಧ್ಯಕ್ಷ ದೌರ್ಬಲ್ಯವೇ ಈ ಅನಾಹುತಕ್ಕೆ ಕಾರಣವಾಗಿದೆ ಸಮಸ್ಯೆಯಾಗಿದೆ ಎಂದು ಕಿಡಿಕಾರಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರಿಗೂ ತಿಳಿದಿರುವಂತೆ ನಮ್ಮ ಚುನಾವಣೆಯನ್ನು ಸರಿಯಾಗಿ ನಡೆಸಿದ್ದರೆ ಮತ್ತು ನಾನು ಅಧ್ಯಕ್ಷನಾಗಿದ್ದರೆ ಈ ದುರಂತ ಎಂದಿಗೂ ಸಂಭವಿಸುತ್ತಿರಲಿಲ್ಲ ಎಂದರು.

    Joe Biden

    ಅಮೆರಿಕವು ಪ್ರಬಲ ಅಧ್ಯಕ್ಷರನ್ನು ಹೊಂದಿದ್ದರೆ ಜಗತ್ತು ಯಾವಾಗಲೂ ಸುರಕ್ಷಿತವಾಗಿರುತ್ತದೆ. ದುರ್ಬಲ ಅಮೆರಿಕದ ಅಧ್ಯಕ್ಷರಿಂದ ಜಗತ್ತು ಯಾವಾಗಲೂ ಅಪಾಯದಲ್ಲಿದೆ. ಉಕ್ರೇನ್ ರಾಜಧಾನಿ ಕೀವ್‍ನ ಮೇಲೆ ರಷ್ಯಾ ನಡೆಸಿದ ದಾಳಿಯಿಂದಾಗಿ ಬಿಡೆನ್‍ನ ದೌರ್ಬಲ್ಯ ತೋರುತ್ತಿದೆ ಎಂದು ಬಿಡನ್ ವಿರುದ್ಧ ವಾಗ್ದಾಳಿ ನಡೆಸಿದರು.

    ಅಫ್ಘಾನಿಸ್ತಾನದಿಂದ ಸ್ಥಿತಿಯನ್ನು ನೋಡಿದ ನಂತರವೂ ಪುಟಿನ್ ಅವರು ನಿರ್ದಯವಾಗಿ ಉಕ್ರೇನ್ ಮೇಲೆ ಆಕ್ರಮಣ ಮಾಡುವ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಎಂಬುದರಲ್ಲಿ ನನಗೆ ಸಂದೇಹವಿಲ್ಲ ಎಂದ ಅವರು ಪುಟಿನ್ ಅವರು ಬುದ್ಧಿವಂತದಾಗಿದ್ದಾರೆ. ಆದರೆ ಸಮಸ್ಯೆ ಅವರ ಬುದ್ಧಿವಂತಿಕೆಯಲ್ಲ, ನಮ್ಮ ನಾಯಕರ ದೌರ್ಬಲ್ಯವಾಗಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಉಕ್ರೇನ್‍ನಲ್ಲಿರುವ ಕಟ್ಟ ಕಡೆಯ ವಿದ್ಯಾರ್ಥಿಯನ್ನು ಸುರಕ್ಷಿತವಾಗಿ ಕರೆತರುವ ತನಕ ಆಪರೇಷನ್ ನಿಲ್ಲದು: ಆರ್.ಅಶೋಕ್

    ಇದೇ ವೇಳೆ ರಷ್ಯಾದ ದಾಳಿಯನ್ನು ಖಂಡಿಸಿದ ಅವರು, ಉಕ್ರೇನ್ ಮೇಲೆ ರಷ್ಯಾದ ದಾಳಿ ಭಯಾನಕವಾಗಿದೆ. ಇದು ಎಂದಿಗೂ ಸಂಭವಿಸದ ದೌರ್ಜನ್ಯವಾಗಿದೆ. ಉಕ್ರೇನ್‍ನ ಜನರ ಸುರಕ್ಷತೆಗಾಗಿ ನಾವು ಪ್ರಾರ್ಥಿಸುತ್ತೇವೆ ಎಂದ ಅವರು, ಉಕ್ರೇನಿಯನ್ ಅಧ್ಯಕ್ಷ ವೊಲೊಡ್ಮಿರ್ ಝೆಲೆನ್ಸ್ಕಿ ಹೋರಾಟವನ್ನು ಶ್ಲಾಘಿಸಿದರು. ಇದನ್ನೂ ಓದಿ: ಮುದ್ದಿನ ನಾಯಿ ಇಲ್ಲದೆ ಬರುವುದಿಲ್ಲ- ಉಕ್ರೇನ್‍ನಲ್ಲಿ ಸಿಲುಕಿರುವ ವಿದ್ಯಾರ್ಥಿ

  • ಉಕ್ರೇನ್‍ನಲ್ಲಿರುವ ಕಟ್ಟ ಕಡೆಯ ವಿದ್ಯಾರ್ಥಿಯನ್ನು ಸುರಕ್ಷಿತವಾಗಿ ಕರೆತರುವ ತನಕ ಆಪರೇಷನ್ ನಿಲ್ಲದು: ಆರ್.ಅಶೋಕ್

    ಉಕ್ರೇನ್‍ನಲ್ಲಿರುವ ಕಟ್ಟ ಕಡೆಯ ವಿದ್ಯಾರ್ಥಿಯನ್ನು ಸುರಕ್ಷಿತವಾಗಿ ಕರೆತರುವ ತನಕ ಆಪರೇಷನ್ ನಿಲ್ಲದು: ಆರ್.ಅಶೋಕ್

    ಬೆಂಗಳೂರು: ಉಕ್ರೇನ್‍ನಲ್ಲಿರುವ ವಿದ್ಯಾರ್ಥಿಗಳನ್ನು ರಾಜ್ಯಕ್ಕೆ ಸುರಕ್ಷಿತವಾಗಿ ಕರೆತರಲು ಕ್ರಮಕೈಗೊಳ್ಳುವುದಾಗಿ ಆರ್.ಅಶೋಕ್ ಹೇಳಿದರು.

    ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 12 ವಿದ್ಯಾರ್ಥಿಗಳ ಮೊದಲತಂಡವನ್ನು ತಾಯ್ನಾಡಿಗೆ ಖುದ್ದು ಆರ್.ಅಶೋಕ್ ಅವರು ಸ್ವಾಗತಿಸಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಲ ವಿದ್ಯಾರ್ಥಿಗಳು ರೊಮೆನಿಯಾ ಮೂಲಕ ಭಾರತಕ್ಕೆ ಮರಳಿದ್ದಾರೆ. ಮುಂಬೈ ಹಾಗೂ ನವದೆಹಲಿಗೆ ಆಗಮಿಸಿರುವ ವಿದ್ಯಾರ್ಥಿಗಳನ್ನು ಬೆಂಗಳೂರಿಗೆ ಸರ್ಕಾರವೇ ಎಲ್ಲ ವ್ಯವಸ್ಥೆ ಮಾಡಿ ಕರೆತರಲಾಗುತ್ತಿದೆ. ಕಂದಾಯ ಇಲಾಖೆಯ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ವಿದ್ಯಾರ್ಥಿಗಳ ಪ್ರಯಾಣ ಹಾಗೂ ಇನ್ನಿತರ ವೆಚ್ಚಗಳನ್ನು ಭರಿಸಲಾಗುತ್ತಿದೆ ಎಂದರು. ಇದನ್ನೂ ಓದಿ:  ಕನ್ನಡಿಗರ ರಕ್ಷಣೆಯ ಸಂಪೂರ್ಣ ವೆಚ್ಚ ಸರ್ಕಾರ ಭರಿಸಲಿದೆ: ಬೊಮ್ಮಾಯಿ

    ಉಕ್ರೇನ್‍ನಿಂದ ಇನ್ನುಳಿದ ವಿದ್ಯಾರ್ಥಿಗಳನ್ನು ಕರೆತರಲು ಕೇಂದ್ರ ವಿದೇಶಾಂಗ ಸಚಿವರ ಜೊತೆ ಮುಖ್ಯಮಂತ್ರಿಗಳು ನಿರಂತರ ಸಂಪರ್ಕದಲ್ಲಿದ್ದಾರೆ. ಕೇಂದ್ರ ಹಾಗೂ ರಾಜ್ಯದ ಸಹಾಯವಾಣಿಗಳು ನಿರಂತರವಾಗಿ ಕಾರ್ಯನಿರ್ವಹಿಸುತ್ತಿವೆ. ಹಲವಾರು ವಿದ್ಯಾರ್ಥಿಗಳು ಹಾಗೂ ಪೆÇೀಷಕರ ಜೊತೆಗೆ ಚರ್ಚಿಸಲಾಗಿದೆ ಎಂದು ಹೇಳಿದರು.

    ಉಕ್ರೇನ್ ನ ಕರಕೈನಲ್ಲಿ ಬಹಳಷ್ಟು ವಿದ್ಯಾರ್ಥಿಗಳು ಸಿಲುಕಿದ್ದು, ಅದೇ ಪ್ರದೇಶದಲ್ಲಿ ಪ್ರಸ್ತುತ ಯುದ್ಧ ನಡೆಯುತ್ತಿರುವುದಾಗಿ ತಿಳಿದುಬಂದಿದೆ. ವಿದ್ಯಾರ್ಥಿಗಳ ಸುರಕ್ಷತೆಯ ಜೊತೆಗೆ ಊಟ ಮತ್ತು ನೀರಿನ ವ್ಯವಸ್ಥೆಯನ್ನು ಪೂರೈಸಲು ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಮಾಡಲಾಗಿದೆ. ವಿದ್ಯಾರ್ಥಿಗಳ ಸುರಕ್ಷತೆಗೆ ಆದ್ಯತೆ ನೀಡುವ ಜೊತೆಗೆ ಅವರನ್ನು ಭಾರತಕ್ಕೆ ಕರೆತರುವ ಬಗ್ಗೆಯೂ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿದೆ ಎಂದು ತಿಳಿಸಿದರು. ಇದನ್ನೂ ಓದಿ:  ಚುನಾವಣೆಗೂ ಮುನ್ನ ಭಾರೀ ಅವಘಡ – ಮಗು ಸೇರಿ ಇಬ್ಬರ ಸಾವು, ಐವರಿಗೆ ಗಾಯ

    ರಾಜ್ಯದ ಅಧಿಕಾರಿಗಳು ಕ್ಷಣ-ಕ್ಷಣದ ಮಾಹಿತಿ ಪಡೆಯುತ್ತಿದ್ದಾರೆ. ಪೋಷಕರು ಧೈರ್ಯದಿಂದ ಇರಬೇಕು. ಯಾವುದೇ ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ. ಸರ್ಕಾರ ನಿಮ್ಮ ಮಕ್ಕಳ ರಕ್ಷಣೆಗೆ ಸಕಲಸಿದ್ಧತೆ ಮಾಡುತ್ತದೆ ಎಂದು ಭರವಸೆ ಕೊಟ್ಟರು. ಉಕ್ರೇನ್ ನಲ್ಲಿರುವ ಕಟ್ಟ ಕಡೆಯ ವಿದ್ಯಾರ್ಥಿಯನ್ನು ಪೋಷಕರ ಮಡಿಲಿಗೆ ತಲುಪಿಸುವ ತನಕ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಮರೋಪಾದಿಯಲ್ಲಿ ಕಾರ್ಯ ನಿರ್ವಹಿಸುತ್ತದೆ ಎಂದು ವಿಶ್ವಾಸದ ಮಾತುಗಳನ್ನಾಡಿದರು.

  • ರಷ್ಯಾ ಸಶಸ್ತ್ರ ಪಡೆಗಳ ನಿಷ್ಕಲ್ಮಶ ಸೇವೆಗೆ ಪುಟಿನ್‌ ಧನ್ಯವಾದ

    ರಷ್ಯಾ ಸಶಸ್ತ್ರ ಪಡೆಗಳ ನಿಷ್ಕಲ್ಮಶ ಸೇವೆಗೆ ಪುಟಿನ್‌ ಧನ್ಯವಾದ

    ಮಾಸ್ಕೋ: ರಷ್ಯಾ ಒಕ್ಕೂಟದ ವಿಶೇಷ ಸಶಸ್ತ್ರ ಪಡೆಗಳ ಕಾರ್ಯಾಚರಣೆಗೆ ಮತ್ತು ಅವರ ನಿಷ್ಕಲ್ಮಶ ಸೇವೆಗೆ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಧನ್ಯವಾದ ಅರ್ಪಿಸಿದ್ದಾರೆ.

    ಮಾಸ್ಕೋ ಕ್ರೆಮ್ಲಿನ್‍ನಲ್ಲಿ ಮಾತನಾಡಿದ ಅವರು, ನಾನು ವಿಶೇಷ ಕಾರ್ಯಾಚರಣೆ ಪಡೆಗಳ ಕಮಾಂಡ್, ಸಿಬ್ಬಂದಿಗೆ, ರಷ್ಯಾದ ಜನತೆ ಮತ್ತು ನಮ್ಮ ಮಹಾನ್ ಮಾತೃಭೂಮಿಗೆ ಅವರು ಮಾಡಿದ ನಿಷ್ಕಲ್ಮಶ ಸೇವೆಗಾಗಿ ಧನ್ಯವಾದ ಹೇಳಲು ಬಯಸುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ರಾಷ್ಟ್ರಗೀತೆ ಹಾಡಿದ ಉಕ್ರೇನ್ ಮಹಿಳೆಯ ವೀಡಿಯೋ ವೈರಲ್

    ಫೆಬ್ರವರಿ 24 ರಂದು ರಷ್ಯಾ ಉಕ್ರೇನ್ ವಿರುದ್ಧ ಯುದ್ಧ ಘೋಷಿಸಿತು. ಅಂದಿನಿಂದ ರಷ್ಯಾದ ಪಡೆಗಳು ಉಕ್ರೇನ್‍ನಾದ್ಯಂತ ಮಿಲಿಟರಿ ನೆಲೆಗಳು ಮತ್ತು ಇತರ ಸ್ಥಳಗಳ ಮೇಲೆ ದಾಳಿ ನಡೆಸಲು ಪ್ರಾರಂಭಿಸಿದೆ. ಇದೀಗ ರಷ್ಯಾದ ಪಡೆಗಳು ಉಕ್ರೇನ್ ರಾಜಧಾನಿ ಕೀವ್ ಒಳ ನುಗ್ಗಲು ದಾರಿ ಹುಡುಕುತ್ತಿದೆ. ಇದನ್ನೂ ಓದಿ: ಉಕ್ರೇನ್‍ನ ಅನಾಥಾಶ್ರಮಗಳ ಮೇಲೆ ರಷ್ಯಾ ದಾಳಿ- ಬಾಲಕಿ ಸೇರಿ 6 ಮಂದಿ ಸಾವು

    ಇದೀಗ ರಷ್ಯಾದ ಪಡೆ ಉಕ್ರೇನ್ ದೇಶದ ಎರಡನೇ ಅತಿದೊಡ್ಡ ನಗರವಾದ ಖಾರ್ಕಿವ್‍ನಲ್ಲಿ ಗ್ಯಾಸ್ ಪೈಪ್‍ಲೈನ್ ಸ್ಫೋಟಗೊಳಿಸಿದ್ದಾರೆ. ರಷ್ಯಾದ ಕ್ಷಿಪಣಿಗಳು ಕೈವ್‍ನ ನೈಋತ್ಯದ ಉಕ್ರೇನಿಯನ್ ಪಟ್ಟಣವಾದ ವಾಸಿಲ್ಕಿವ್‍ಗೆ ಅಪ್ಪಳಿಸಿ ತೈಲ ಟರ್ಮಿನಲ್ ಸುಟ್ಟು ಹಾಕಲಾಗಿದೆ.

    ಭಾನುವಾರ ರಷ್ಯಾ ಪಡೆಗಳು ದಕ್ಷಿಣ ಉಕ್ರೇನಿಯನ್ ನಗರಗಳಾದ ಖೆರ್ಸನ್ ಮತ್ತು ಬರ್ಡಿಯಾನ್ಕ್ಸ್‍ವನ್ನು ಸಂಪೂರ್ಣವಾಗಿ ನಿರ್ಬಂಧಿಸಿವೆ. ಹೆನಿಚೆಸ್ಕ್ ಪಟ್ಟಣ ಮತ್ತು ಖೆರ್ಸನ್ ಬಳಿಯ ವಿಮಾನ ನಿಲ್ದಾಣವನ್ನು ವಶಪಡಿಸಿಕೊಂಡಿದೆ ಎಂದು ರಷ್ಯಾದ ರಕ್ಷಣಾ ಸಚಿವಾಲಯ ತಿಳಿಸಿದೆ.

  • ಕನ್ನಡಿಗರ ರಕ್ಷಣೆಯ ಸಂಪೂರ್ಣ ವೆಚ್ಚ ಸರ್ಕಾರ ಭರಿಸಲಿದೆ: ಬೊಮ್ಮಾಯಿ

    ಕನ್ನಡಿಗರ ರಕ್ಷಣೆಯ ಸಂಪೂರ್ಣ ವೆಚ್ಚ ಸರ್ಕಾರ ಭರಿಸಲಿದೆ: ಬೊಮ್ಮಾಯಿ

    ಬೆಂಗಳೂರು: ಉಕ್ರೇನ್‍ನಲ್ಲಿರೋ ಕನ್ನಡಿಗರು ವಾಪಸ್ ಕರೆ ತರುವ ಸಂಪೂರ್ಣ ವೆಚ್ಚ ರಾಜ್ಯ ಸರ್ಕಾರವೇ ಭರಿಸಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

    ಬೆಂಗಳೂರಿನಲ್ಲಿ ಕನ್ನಡಿಗರ ರಕ್ಷಣೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ಉಕ್ರೇನ್‍ನಿಂದ ಮೊದಲ ತಂಡ ಭಾರತಕ್ಕೆ ಆಗಮಿಸಿದೆ. ವೆಸ್ಟರ್ನ್ ಭಾಗದಲ್ಲಿ ಇದ್ದ ವಿದ್ಯಾರ್ಥಿಗಳು ಈಗ ಆಗಮಿಸಿದ್ದಾರೆ. ದೆಹಲಿ ಹೈ ಕಮಿಷನರ್ ಗೆ ಸೂಚನೆ ಕೊಟ್ಟಿದ್ದೇನೆ. ಮುಂಬೈಯಿಂದಲೂ ಕರೆ ತರಲು ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು. ಇದನ್ನೂ ಓದಿ:  ಶುಭ ಭಾನುವಾರ, ಶುಭ ಗಳಿಗೆಯಲ್ಲಿ ಇಂದು ಪಾದಯಾತ್ರೆಗೆ ಚಾಲನೆ: ಡಿಕೆಶಿ

    ರಾಷ್ಟ್ರೀಯ ವಿಪತ್ತು ನಿರ್ವಹಣೆ ಅಧಿಕಾರಿಗಳು ದೆಹಲಿಯಲ್ಲಿ ಇದ್ದಾರೆ. ಅವರನ್ನು ಕರ್ನಾಟಕಕ್ಕೆ ತರುವ ಕೆಲಸ ಆಗುತ್ತದೆ. ಇದಕ್ಕೆ ತಗಲುವ ಸಂಪೂರ್ಣ ವೆಚ್ಚ ಸರ್ಕಾರವೇ ಭರಿಸಲಿದೆ ಎಂದು ಭರವಸೆ ಕೊಟ್ಟರು. ಕೇಂದ್ರದ ವಿದೇಶಾಂಗ ಸಚಿವರ ಜೊತೆ ಮಾತುಕತೆ ನಡೆಸಿದ್ದೇನೆ. ಅವರ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ. ಎರಡು ಹೆಲ್ಪ್ ಲೈನ್ ಈಗಾಗಲೇ ವ್ಯವಸ್ಥೆ ಮಾಡಲಾಗಿದೆ. ವಿದ್ಯಾರ್ಥಿಗಳು ಮತ್ತು ಪೋಷಕರ ಜೊತೆ ನಾನು ಮಾತಾಡಿದ್ದೇನೆ. ಎಲ್ಲ ಮಾಹಿತಿಗಳನ್ನು ಪಡೆದುಕೊಂಡಿದ್ದೇನೆ ಎಂದು ವಿವರಿಸಿದರು.

    ಕರಕೈ ಎನ್ನುವ ಪ್ರದೇಶದಲ್ಲಿ ಹೆಚ್ಚು ವಿದ್ಯಾರ್ಥಿಗಳು ಇದ್ದಾರೆ. ಅದು ನಾರ್ತ್ ಇಸ್ಟ್ ಪ್ರದೇಶದಲ್ಲಿ ಇದೆ. ಸುತ್ತಮುತ್ತಲಿನ ಪ್ರದೇಶದಲ್ಲಿ ಯುದ್ಧ ನಡೆಯುತ್ತಿದೆ. ಹೀಗಾಗಿ ಮೆಟ್ರೋ, ಬಂಕರ್ ಗಳಲ್ಲಿ ವಿದ್ಯಾರ್ಥಿಗಳು ಉಳಿದುಕೊಂಡಿದ್ದಾರೆ. ಸಣ್ಣ ಪ್ರದೇಶದಲ್ಲಿ ದೊಡ್ಡ ಸಂಖ್ಯೆಯ ಜನರು ಒಂದೇ ಕಡೆ ಸೇರಿಕೊಂಡಿದ್ದಾರೆ. ಇದು ಆತಂಕ ಉಂಟು ಮಾಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇದನ್ನೂ ಓದಿ: ಸಹಾಯಕ ಪ್ರಾಧ್ಯಾಪಕರ ಹುದ್ದೆ ಪರೀಕ್ಷೆಗೆ ಡ್ರೆಸ್ ಕೋಡ್ ಕಡ್ಡಾಯ!

    ಮೊದಲು ಅವರಿಗೆ ಊಟ, ನೀರು ನೀಡಲು ವಿದೇಶಾಂಗ ಸಚಿವರ ಜೊತೆ ಮಾತಾಡಿದ್ದೇನೆ. ಯುದ್ಧದ ವಾತಾವರಣ ಕಡಿಮೆ ಆದ ಮೇಲೆ ಅವರನ್ನು ಕರೆಸುವ ಕೆಲಸ ಆಗುತ್ತದೆ ಎಂದು ಭರವಸೆ ಕೊಟ್ಟರು.