Tag: russia

  • ಉಕ್ರೇನ್‍ನಿಂದ ತಾಯ್ನಾಡಿಗೆ ಬಂದ್ರು ಭಾರತೀಯರು – ಮುಂಬೈನಲ್ಲಿ ವಿಮಾನ ಲ್ಯಾಂಡಿಂಗ್

    ಉಕ್ರೇನ್‍ನಿಂದ ತಾಯ್ನಾಡಿಗೆ ಬಂದ್ರು ಭಾರತೀಯರು – ಮುಂಬೈನಲ್ಲಿ ವಿಮಾನ ಲ್ಯಾಂಡಿಂಗ್

    ಮುಂಬೈ: ಉಕ್ರೇನ್‍ನಿಂದ 219 ಭಾರತೀಯ ವಿದ್ಯಾರ್ಥಿಗಳನ್ನು ಹೊತ್ತ ಏರ್ ಇಂಡಿಯಾ ವಿಮಾನ ಇಂದು ರಾತ್ರಿ ಮುಂಬೈಗೆ ಬಂದಿಳಿದಿದೆ.

    ಇಂದು ಮಧ್ಯಾಹ್ನ ರೊಮೇನಿಯಾದ ರಾಜಧಾನಿ ಬುಕಾರೆಸ್ಟ್‍ನಿಂದ ಭಾರತದ ಪ್ರಜೆಗಳನ್ನು ಹೊತ್ತು ವಿಮಾನ ಟೇಕಾಫ್ ಆಗಿತ್ತು. ಉಕ್ರೇನ್‍ನಿಂದ ಸುರಕ್ಷಿತವಾಗಿ ಸ್ಥಳಾಂತರಿಸಲ್ಪಟ್ಟ ಭಾರತೀಯರನ್ನು ಮುಂಬೈ ವಿಮಾನ ನಿಲ್ದಾಣಕ್ಕೆ ಬಂದು ಇಳಿಸಿದೆ. ಈ ವೇಳೆ ಕೇಂದ್ರ ಸಚಿವ ಪಿಯೂಷ್ ಗೋಯಲ್ ವಿದ್ಯಾರ್ಥಿಗಳನ್ನು ಸ್ವಾಗತಿಸಿದರು. ಇದನ್ನೂ ಓದಿ:  ಉಕ್ರೇನ್‍ನಲ್ಲಿ ಸಿಲುಕಿದ್ದಾರೆ ಕೊಡಗಿನ ಒಟ್ಟು 10 ವಿದ್ಯಾರ್ಥಿಗಳು

    ರೊಮೇನಿಯಾದಿಂದ ಮೂರು ವಿಮಾನಗಳು ಭಾರತಕ್ಕೆ ಆಗಮಿಸಲಿವೆ. ಈ ಪೈಕಿ ಒಂದು ಮುಂಬೈನಲ್ಲಿ ಲ್ಯಾಂಡ್ ಆಗಿದ್ದು, ಬಾಕಿ ಎರಡು ವಿಮಾನ ದೆಹಲಿಗೆ ಬರಲಿವೆ. ಆ ವಿಮಾನ ಇಂದು ಮಧ್ಯರಾತ್ರಿ ಒಂದು ವಿಮಾನ ದೆಹಲಿ ತಲುಪಿದ್ರೆ. ಮತ್ತೊಂದು ನಾಳೆ ಬೆಳಗ್ಗೆ ಐದು ಗಂಟೆಗೆ ರೊಮೇನಿಯಾದಿಂದ ಹೊರಡಲಿದ್ದು, 27 ರ ಮಧ್ಯರಾತ್ರಿ ತಲುಪಲಿದೆ ಎಂದು ತಿಳಿಸಲಾಗಿದೆ.

    ಹಂಗೇರಿಯಿಂದ ಒಂದು ವಿಮಾನ ದೆಹಲಿಗೆ ಆಗಮಿಸಲಿದೆ. ನಾಳೆ ಬೆಳಗ್ಗೆ 6-7 ಗಂಟೆಗೆ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಲಿದೆ. ಇದನ್ನೂ ಓದಿ:  ಫೋನ್‌ನಲ್ಲಿ ಮಾತನಾಡುವಾಗ ಬಾಂಬ್ ಹಾಕುತ್ತಿದ್ದಾರೆ ಎಂದು ಬಂಕರ್‌ಗೆ ಓಡಿ ಹೋದ: ಪೋಷಕರ ಅಳಲು

  • ಪುಟಿನ್ ನಡೆಗೆ ರಷ್ಯಾ ಪ್ರಜೆಗಳಿಂದಲೇ ಖಂಡನೆ – ಉಕ್ರೇನ್‍ನಲ್ಲಿ ರಷ್ಯಾದ ಬಾವುಟ ಹಾರಾಟ

    ಪುಟಿನ್ ನಡೆಗೆ ರಷ್ಯಾ ಪ್ರಜೆಗಳಿಂದಲೇ ಖಂಡನೆ – ಉಕ್ರೇನ್‍ನಲ್ಲಿ ರಷ್ಯಾದ ಬಾವುಟ ಹಾರಾಟ

    ಕೀವ್: ಉಕ್ರೇನ್‍ನಲ್ಲಿ ರಷ್ಯಾ ರಕ್ತದೋಕುಳಿ ನಡೆಸುತ್ತಿದೆ. ರಷ್ಯಾ ಸೈನಿಕರ ರಾಕ್ಷಸೀ ಕೃತ್ಯಕ್ಕೆ 25ಕ್ಕೂ ಹೆಚ್ಚು ದೇಶಗಳು ಕೆಂಡಾಮಂಡಲವಾಗಿವೆ. ವಿಶ್ವದೆಲ್ಲೆಡೆ ಜನ ಪ್ರತಿಭಟನೆ ನಡೆಸುತ್ತಿದ್ದಾರೆ. ವಿಪರ್ಯಾಸ ಅಂದ್ರೆ ರಷ್ಯಾ ಅಧ್ಯಕ್ಷ ವಾಡ್ಲಿಮಿರ್ ಪುಟಿನ್ ನಡೆಯನ್ನು ರಷ್ಯಾ ಪ್ರಜೆಗಳೇ ತೀವ್ರವಾಗಿ ಖಂಡಿಸಿದ್ದಾರೆ.

    ನಮ್ಮದೇ ಸಂಸ್ಕೃತಿಯ, ನಮ್ಮದೇ ಭಾಷಿಕರ ದೇಶ ಉಕ್ರೇನ್‍ನಲ್ಲಿ ಯುದ್ಧ ನಿಲ್ಲಿಸಿ ಎಂದು ಸಾವಿರಾರು ರಷ್ಯನ್ನರು ವಿವಿಧೆಡೆ ಪ್ರತಿಭಟನೆ ನಡೆಸಿದ್ದಾರೆ. ಈ ಪ್ರತಿಭಟನೆಯನ್ನು ಬಲವಂತವಾಗಿ ಹತ್ತಿಕ್ಕುವ ಕೆಲಸವನ್ನು ರಷ್ಯಾ ಸರ್ಕಾರ ಮಾಡುತ್ತಿದೆ. ಮಹಿಳೆಯರು ಎನ್ನುವುದನ್ನು ನೋಡದೇ ಕೂದಲಿಡಿದು ಕ್ರೌರ್ಯ ಮೆರೆದಿದೆ. ಇನ್ನು ಅಮೆರಿಕಾದ ಲಾಸ್ ಏಂಜಲಿಸ್, ಚಿಲಿಯ ಸ್ಯಾಂಟಿಯಾಗೋ, ಜರ್ಮನಿಯ ಬರ್ಲಿನ್, ಬ್ರಿಟನ್‍ನ ಲಂಡನ್ ಸೇರಿ ವಿಶ್ವದ ವಿವಿಧೆಡೆ ಪುಟಿನ್ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಪೋಲ್ಯಾಂಡ್ ಫುಟ್‍ಬಾಲ್ ಸ್ಟೇಡಿಯಂನಲ್ಲಿ ಉಕ್ರೇನ್ ಪರ ಘೋಷಣೆ ಮುಗಿಲು ಮುಟ್ಟಿತ್ತು. ಇದನ್ನೂ ಓದಿ: Russia-Ukraine War – ಏನಿದು ರಷ್ಯಾ ಟ್ಯಾಂಕರ್‌ಗಳ ಮೇಲೆ Z ಮಾರ್ಕ್?

    ಇತ್ತ ಉಕ್ರೇನ್‍ನ ಬಹುತೇಕ ಭಾಗಗಳು ರಷ್ಯಾ ತಾತ್ಕಾಲಿಕವಾಗಿ ತನ್ನ ಹಿಡಿತಕ್ಕೆ ತೆಗೆದುಕೊಂಡಿದೆ. ಕೆಲವೆಡೆ ರಷ್ಯಾದ ಬಾವುಟಗಳು ಹಾರಿವೆ. ಆದ್ರೇ ರಷ್ಯಾ ಹೇಳುತ್ತಿರುವುದು ಮಾತ್ರ ಬೇರೆ. ತಾವು ಉಕ್ರೇನ್ ದೇಶವನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳುತ್ತಿಲ್ಲ. ಪಾಶ್ಚಾತ್ಯ ಸೆರೆಯಿಂದ ಬಿಡಿಸುತ್ತಿದ್ದೇವೆ. ಕೀವ್‍ನಲ್ಲಿರುವ ಸರ್ಕಾರವನ್ನು ಪದಚ್ಯುತ ಗೊಳಿಸಿ ಉಕ್ರೇನ್‍ಗೆ ಹೊಸ ಸ್ವಾತಂತ್ರ್ಯ ನೀಡುತ್ತೇವೆ. ಹೊಸ ಸರ್ಕಾರ ಸ್ಥಾಪನೆ ನಂತರ ಸೇನೆಯನ್ನು ವಾಪಸ್ ಪಡೆಯುತ್ತೇವೆ ಎಂದಿದೆ. ಇದನ್ನೂ ಓದಿ: ನಿನ್ನೆ ಮದುವೆಯಾಗಿ ಇಂದು ದೇಶ ಸೇವೆಗೆ ಗನ್‌ ಹಿಡಿದ ದಂಪತಿ

    ಉಕ್ರೇನ್ ಸರ್ಕಾರದ ಮೇಲೆ ದಾಳಿಗೆ ಪುಟಿನ್ ಆದೇಶ ನೀಡಿದ್ದಾರೆ. ಶರಣಾಗಲು ಅಧ್ಯಕ್ಷರಿಗೆ ಕರೆ ನೀಡಿದ್ದಾರೆ. ಆದರೆ ಹೋರಾಟವನ್ನು ನಿಲ್ಲಿಸಿ ಶಸ್ತ್ರತ್ಯಾಗ ಮಾಡುವ ಪ್ರಶ್ನೆಯೇ ಇಲ್ಲ ಎಂದು ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಎಂತಹ ಪರಿಸ್ಥಿತಿ ಬಂದರೂ ಕೀವ್ ಬಿಟ್ಟುಕೊಡಲ್ಲ. ನಮ್ಮ ಸೈನಿಕರು ವಿರೋಚಿತವಾಗಿ ಹೋರಾಡುತ್ತಿದ್ದಾರೆ. ನಮ್ಮವರು ರಷ್ಯಾದ ಸಾವಿರಾರು ಸೈನಿಕರನ್ನು ಕೊಂದಿದ್ದಾರೆ. ಈ ಹಂತದಲ್ಲಿ ನಮ್ಮವರನ್ನು ನಾವು ಕಳೆದಕೊಂಡಿದ್ದೇವೆ. ಆದರೆ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಇವತ್ತೊಂದು ರಾತ್ರಿ ಧೈರ್ಯವಾಗಿರಿ ಎಂದು ಝೆಲೆನ್ಸ್ಕಿ ದೇಶದ ಜನೆತೆಗೆ ಕರೆ ನೀಡಿದ್ದಾರೆ. ಈ ಮಧ್ಯೆ, ಉಕ್ರೇನ್ ನೆರವಿಗೆ ಪೊಲೆಂಡ್ ಧಾವಿಸುವ ಮುನ್ಸೂಚನೆ ನೀಡಿದೆ. ರಷ್ಯಾದ ಕ್ರಮವನ್ನು ಬಹಿರಂಗವಾಗಿ ಖಂಡಿಸಿದೆ. ವಿಶ್ವಸಂಸ್ಥೆ 150 ಕೋಟಿ ರೂಪಾಯಿ ನೆರವು ಪ್ರಕಟಿಸಿದೆ. ಇದನ್ನೂ ಓದಿ: ಪೋಷಕರನ್ನು ಕಳೆದುಕೊಂಡು ನಡುಬೀದಿಯಲ್ಲೇ ಬಾಲಕನ ಆಕ್ರಂದನ

  • ಉಕ್ರೇನ್‍ನಲ್ಲಿ ಸಿಲುಕಿದ್ದಾರೆ ಕೊಡಗಿನ ಒಟ್ಟು 10 ವಿದ್ಯಾರ್ಥಿಗಳು

    ಉಕ್ರೇನ್‍ನಲ್ಲಿ ಸಿಲುಕಿದ್ದಾರೆ ಕೊಡಗಿನ ಒಟ್ಟು 10 ವಿದ್ಯಾರ್ಥಿಗಳು

    ಮಡಿಕೇರಿ: ರಷ್ಯಾದ ಆಕ್ರಮಣಕಾರಿ ದಾಳಿಯಿಂದ ಉಕ್ರೇನ್ ದೇಶ ನಲುಗಿ ಹೋಗುತ್ತಿದೆ. ಇತ್ತ ಕರ್ನಾಟಕದಿಂದ ಉನ್ನತ ವಿದ್ಯಾಭ್ಯಾಸಕ್ಕಾಗಿ ತೆರಳಿದ್ದ ವಿದ್ಯಾರ್ಥಿಗಳು ಈ ದಾಳಿಯಿಂದ ಮತ್ತೆ ದೇಶಕ್ಕೆ ಮರಳುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಅದರಂತೆ ಕೊಡಗು ಜಿಲ್ಲೆಯ ಸುಮಾರು 10 ವಿದ್ಯಾರ್ಥಿಗಳು ಉಕ್ರೇನ್ ನಲ್ಲಿ ಸಿಲುಕಿದ್ದಾರೆ. ಅವರನ್ನು ಕರೆತರುವ ಪ್ರಯತ್ನ ಜಿಲ್ಲಾಡಳಿತ ನಡೆಸುತ್ತಿದೆ.

    ಈ ಕುರಿತು ಕೊಡಗು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಪಬ್ಲಿಕ್ ಟಿವಿ ಗೆ ಸ್ಪಷ್ಟನೆ ನೀಡಿದ್ದಾರೆ. ಪಬ್ಲಿಕ್ ಟಿವಿಯೊಂದಿಗೆ ಮಾತಾನಾಡಿದ ಅವರು, ಈಗಾಗಲೇ ಉಕ್ರೇನ್ ನಲ್ಲಿ ಜಿಲ್ಲೆಯ ಇಬ್ಬರು ಹುಡುಗರು, 8 ಹುಡುಗಿಯರು ಸಿಲುಕಿದ್ದಾರೆ. ಅವರೆಲ್ಲರು ಪೆÇೀಷಕರನ್ನು ಮತ್ತು ಜಿಲ್ಲಾಡಳಿತವನ್ನು ಸಂಪರ್ಕಿಸಿದ್ದಾರೆ ಎಂದು ವಿವರಿಸಿದರು. ಇದನ್ನೂ ಓದಿ: ಫೋನ್‌ನಲ್ಲಿ ಮಾತನಾಡುವಾಗ ಬಾಂಬ್ ಹಾಕುತ್ತಿದ್ದಾರೆ ಎಂದು ಬಂಕರ್‌ಗೆ ಓಡಿ ಹೋದ: ಪೋಷಕರ ಅಳಲು

    ಅಷ್ಟು ವಿದ್ಯಾರ್ಥಿಗಳನ್ನು ಭಾರತೀಯ ರಾಯಭಾರಿ ಅಧಿಕಾರಿಗಳು ಸಂಪರ್ಕಿಸಿದ್ದಾರೆ. ಎಲ್ಲರೂ ಬಂಕರ್‍ಗಳಲ್ಲಿ ರಕ್ಷಣೆ ಪಡೆದಿದ್ದಾರೆ. ಎಲ್ಲರನ್ನೂ ಸುರಕ್ಷಿತವಾಗಿ ಕರೆತರಲು ಭಾರತ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ತಿಳಿಸಿದರು.

    ಕೊಡಗಿನ 10 ವಿದ್ಯಾರ್ಥಿಗಳು ಹೆಸರು ಈ ಕೆಳಗಿನಂತಿವೆ:
    1)ಅಶ್ವಿನ್ ಕುಮಾರ್ – ಕೊಡಗು
    2)ಚಂದನ್ ಗೌಡ – ಕುಶಾಲನಗರ
    3)ಅಲಿಶಾ ಸೈಯದ್ – ಕೊಡಗು
    4)ಲಿಖೀತ್ – ಕುಶಾಲನಗರ
    5)ಅಕ್ಷಿತಾ ಅಕ್ಕಮ್ಮ – ಕುಶಾಲನಗರ
    6)ಎಂ.ಪಿ.ನಿರ್ಮಲಾ – ಅಮ್ಮತ್ತಿ ವಿರಾಜಪೇಟೆ ತಾಲೂಕು
    7)ಅರ್ಜುನ್ ವಸಂತ್- ಶಾನಿವಾರಸಂತೆ
    8)ಸಿನಿಯಾ.ವಿ.ಜೆ – ಪೋನ್ನಂಪೇಟೆ
    9)ತೇಜಸ್ವಿನಿ – ವಿರಾಜಪೇಟೆ
    10)ಶೀತಲ್ – ಸಂಪತ್ – ಗೋಣಿಕೋಪ್ಪ

  • ಈಗಲೂ ತಟಸ್ಥ ನೀತಿ ಸರಿಯಲ್ಲ: ಭಾರತದ ನಡೆಗೆ ಮನೀಶ್‌ ತಿವಾರಿ ಆಕ್ಷೇಪ

    ಈಗಲೂ ತಟಸ್ಥ ನೀತಿ ಸರಿಯಲ್ಲ: ಭಾರತದ ನಡೆಗೆ ಮನೀಶ್‌ ತಿವಾರಿ ಆಕ್ಷೇಪ

    ನವದೆಹಲಿ: ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸಭೆಯಲ್ಲಿ ರಷ್ಯಾ ವಿರುದ್ಧ ಮತ ಚಲಾಯಿಸದೇ ಭಾರತ ತಟಸ್ಥ ನೀತಿಯನ್ನು ಅನುಸರಿಸಿದ್ದಕ್ಕೆ ಕಾಂಗ್ರೆಸ್‌ ಮುಖಂಡ ಮನೀಶ್‌ ತಿವಾರಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

    ನಮ್ಮ ಕಷ್ಟಗಳಲ್ಲಿ ರಷ್ಯಾ ನಮ್ಮ ಬೆಂಬಲಕ್ಕೆ ನಿಂತಿದೆ. ಆದರೆ ಸ್ನೇಹಿತ ತಪ್ಪು ಮಾಡಿದರೆ, ನಾವು ಆತನನ್ನು ಸರಿಪಡಿಸಬೇಕು. ಒಂದು ಕಡೆ ಪ್ರಜಾಪ್ರಭುತ್ವವನ್ನು ಪ್ರತಿಪಾದಿಸುವ ರಾಷ್ಟ್ರಗಳು ಮತ್ತು ಇತರರು ನಿರಂಕುಶ ಮಾರ್ಗವನ್ನು ಬೆಂಬಲಿಸುವ ಸಂದರ್ಭದಲ್ಲಿ ಭಾರತ ತನ್ನ ಪಕ್ಷವನ್ನು ಆರಿಸಿಕೊಳ್ಳಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: Russia-Ukraine War – ಏನಿದು ರಷ್ಯಾ ಟ್ಯಾಂಕರ್‌ಗಳ ಮೇಲೆ Z ಮಾರ್ಕ್?

    ಭಾರತದ ಅಲಿಪ್ತ ಆಂದೋಲನ (NAM) ನೀತಿ 1991 ರಿಂದ ಕ್ರಮೇಣ ಕೊನೆಗೊಂಡಿದೆ. ಈಗಲೂ ಭಾರತವು ಅದೇ ನೀತಿಗೆ ಮರಳಲು ಯೋಚಿಸಿದರೆ ಅದು ತಪ್ಪಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನಿನ್ನೆ ಮದುವೆಯಾಗಿ ಇಂದು ದೇಶ ಸೇವೆಗೆ ಗನ್‌ ಹಿಡಿದ ದಂಪತಿ

    ಉಕ್ರೇನ್ ಮೇಲೆ ರಷ್ಯಾ ದಾಳಿಯನ್ನು ಖಂಡಿಸಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತೀಯ ಕಾಲಮಾನ ಶನಿವಾರ ನಸುಕಿನ ಜಾವ ಸಭೆ ಆಯೋಜಿಸಲಾಗಿತ್ತು. ಅಮೆರಿಕ ಮತ್ತು ಆಲ್ಬೇನಿಯಾ ಸಂಯುಕ್ತವಾಗಿ ಮಂಡಿಸಿದ ನಿರ್ಣಯದ ಮೇಲೆ ಮತದಾನ ನಡೆದಿತ್ತು.

    ಭಾರತ, ಚೀನಾ, ಯುಎಇ ದೇಶಗಳು ಮತದಾನದಿಂದ ದೂರ ಉಳಿದಿದ್ದರೆ ಪೋಲೆಂಡ್, ಇಟಲಿ, ನ್ಯೂಜಿಲೆಂಡ್ ಸೇರಿ 11 ದೇಶಗಳು ನಿರ್ಣಯದ ಪರವಾಗಿ ಮತ ಹಾಕಿವೆ. ರಷ್ಯಾ ದೇಶ ಊಹಿಸಿದಂತೆಯೇ ವಿಟೋ ಅಧಿಕಾರ ಚಲಾಯಿಸಿ, ನಿರ್ಣಯ ಪಾಸ್ ಆಗದಂತೆ ತಡೆದಿದೆ. ಈ ಬಗ್ಗೆ ಅಮೆರಿಕ ಆಕ್ರೋಶ ಹೊರಹಾಕಿದೆ. ಈ ವಿಚಾರವನ್ನು ಸಾಮಾನ್ಯ ಸಭೆಗೆ ಕೊಂಡೊಯ್ಯುವುದಾಗಿ ಘೋಷಿಸಿದೆ.

    ಈ ಬಿಕ್ಕಟ್ಟಿನ ಬಗ್ಗೆ ಮಾತನಾಡಿದ ಭಾರತದ ಶಾಶ್ವತ ರಾಯಭಾರಿ ತಿರುಮೂರ್ತಿ, ವಿವಾದ ಇತ್ಯರ್ಥಕ್ಕೆ ಚರ್ಚೆಯೊಂದೇ ಸಮಾಧಾನ. ಆದರೆ ಈ ಕ್ಷಣದಲ್ಲಿ ಅದು ಸಾಧ್ಯವಾಗಿಲ್ಲ. ಎರಡು ದೇಶಗಳು ರಾಜತಾಂತ್ರಿಕ ಮಾರ್ಗವನ್ನು ಕೈಬಿಟ್ಟಿದ್ದಕ್ಕೆ ವಿಷಾದವಿದೆ. ಸದ್ಯಕ್ಕೆ ಈ ಖಂಡನಾ ನಿರ್ಣಯದಿಂದ ದೂರ ಇರಲು ಭಾರತ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.

  • ಪೋಲೆಂಡ್, ಬಲ್ಗೇರಿಯಾ, ಜೆಕ್ ವಿಮಾನ ಪ್ರಯಾಣ ನಿಷೇಧಿಸಿದ ರಷ್ಯಾ

    ಪೋಲೆಂಡ್, ಬಲ್ಗೇರಿಯಾ, ಜೆಕ್ ವಿಮಾನ ಪ್ರಯಾಣ ನಿಷೇಧಿಸಿದ ರಷ್ಯಾ

    ಮಾಸ್ಕೋ: ರಷ್ಯಾದಾಳಿಯ ಬೆನ್ನಲ್ಲೆ ಇಡೀ ಉಕ್ರೇನ್ ದೇಶ ಸ್ಮಶಾನ ದಂತೆ ಆವರಿಸಿದೆ. ರಷ್ಯಾದ ಪಡೆಗಳು ಉಕ್ರೇನ್ ಮೇಲಿನ ದಾಳಿಯನ್ನು ಮುಂದುವರಿಸಿದೆ. ಉಕ್ರೇನ್ ಹಾಗೂ ರಷ್ಯಾ ಯುದ್ಧ ಸಂಘರ್ಷ ವಿಶ್ವದಲ್ಲೇ ಭಾರಿ ಆತಂಕವನ್ನುಂಟು ಮಾಡಿದೆ. ಇದೀಗ ಪೋಲೆಂಡ್, ಬಲ್ಗೇರಿಯಾ, ಜೆಕ್ ಗಣರಾಜ್ಯಗಳ ವಿಮಾನಯಾನ ಸಂಸ್ಥೆಗಳನ್ನು ರಷ್ಯಾ ನಿಷೇಧಿಸಿದೆ ಎಂದು ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.

    ಉಕ್ರೇನ್ ಮೇಲಿನ ದಾಳಿಯ ಹಿನ್ನೆಲೆಯಲ್ಲಿ ಜೆಕ್ ಗಣರಾಜ್ಯ, ಪೋಲೆಂಡ್ ಮತ್ತು ಬಲ್ಗೇರಿಯಾ ರಾಷ್ಟ್ರಗಳು ರಷ್ಯಾದ ವಿಮಾನಗಳಿಗೆ ತಮ್ಮ ವಾಯುಪ್ರದೇಶವನ್ನು ಮುಚ್ಚುವುದಾಗಿ ಹೇಳಿದ್ದವು. ಇದಕ್ಕೆ ಪ್ರತಿಕಾರವಾಗಿ ಈ ಮೂರು ರಾಷ್ಟ್ರಗಳ ವಿಮಾನಯಾನ ಸಂಸ್ಥೆಗಳನ್ನು ನಿಷೇಧಿಸಲಾಗಿದೆ ಎಂದು ರಷ್ಯಾದ ನಾಗರಿಕ ವಿಮಾನಯಾನ ಪ್ರಾಧಿಕಾರ ತಿಳಿಸಿದೆ. ಇದನ್ನೂ ಓದಿ: ಪೋಷಕರನ್ನು ಕಳೆದುಕೊಂಡು ನಡುಬೀದಿಯಲ್ಲೇ ಬಾಲಕನ ಆಕ್ರಂದನ

    ಈ ವಾರದ ಆರಂಭದಲ್ಲಿ ರಷ್ಯಾ ವಿಮಾನಗಳಿಗೆ ಬ್ರಿಟನ್ ಸಹ ನಿಷೇಧ ಹೇರುವ ನಿರ್ಧಾರ ಕೈಗೊಂಡಿತ್ತು. ಇದಕ್ಕೆ ಪ್ರತಿಯಾಗಿ ರಷ್ಯಾ ಕೂಡ ಬ್ರಿಟನ್‍ಗೆ ತೆರಳುವ ಎಲ್ಲ ವಿಮಾನಗಳಿಗೆ ತಡೆಯೊಡ್ಡಿದೆ. ರಷ್ಯಾ ದಾಳಿ ಮಾಡಿದಾಗಿನಿಂದ ಈ ವರೆಗೆ 198 ಜನರು ಮೃತಪಟ್ಟಿದ್ದಾರೆ ಎಂದು ಉಕ್ರೇನ್ ಹೇಳಿಕೊಂಡಿದೆ. ಇದನ್ನೂ ಓದಿ: ಶತ್ರುಗಳನ್ನು ತಡೆಯಲು ಸೇತುವೆ ಜೊತೆ ತನ್ನನ್ನು ಸ್ಫೋಟಿಸಿಕೊಂಡ ಉಕ್ರೇನ್ ಯೋಧ

    ನಾವು ಶಸ್ತ್ರ ತ್ಯಾಗ ಮಾಡುವುದಿಲ್ಲ. ನಮ್ಮ ಸೈನ್ಯ ಮತ್ತು ನಮ್ಮ ದೇಶದ ಮೇಲೆ ನಾವು ವಿಶ್ವಾಸವಿಟ್ಟಿದ್ದೇವೆ. ನಾವು ಅದನ್ನು ರಕ್ಷಿಸುತ್ತೇವೆ. ಕೀವ್ ಅನ್ನು ಬಿಟ್ಟುಕೊಡುವ ಮಾತೇ ಇಲ್ಲ ಉಕ್ರೇನ್‍ನ ಅಧ್ಯಕ್ಷ ವ್ಲಾಡಿಮಿರ್ ಝೆಲೆನ್‍ಸ್ಕಿ ಹೇಳಿದ್ದಾರೆ. ಉಕ್ರೇನ್ ವಿರುದ್ಧ ರಷ್ಯಾ ನಡೆಸಿದ ಕಾರ್ಯಾಚರಣೆಯಲ್ಲಿ ಮೂವರು ಮಕ್ಕಳು ಸೇರಿದಂತೆ 198 ಉಕ್ರೇನ್ ಪ್ರಜೆಗಳು ಮೃತಪಟ್ಟಿದ್ದಾರೆ ಎಂದು ಉಕ್ರೇನ್ ಆರೋಗ್ಯ ಸಚಿವ ವಿಕ್ಟರ್ ಲಿಯಾಶ್ಕೊ ಹೇಳಿದ್ದಾರೆ. ಇದನ್ನೂ ಓದಿ:  ಉಕ್ರೇನ್‌ ಬಿಕ್ಕಟ್ಟು – ಬೆಂಗಳೂರು ವಿದ್ಯಾರ್ಥಿನಿಯ ವೀಡಿಯೋ ಶೇರ್‌ ಮಾಡಿ ಕೇಂದ್ರಕ್ಕೆ ರಾಗಾ ಮನವಿ

    ಬಾಂಬ್ ಸ್ಫೋಟಕ್ಕೆ ಜನರು ದಿಕ್ಕಾಪಾಲಾಗಿ ಓಡುತ್ತಿದ್ದಾರೆ. ಈಗಾಗಲೇ ಕೀವ್ ನಗರವನ್ನು ರಷ್ಯಾ ಸೇನೆ ಸಂಪೂರ್ಣವಾಗಿ ಸುತ್ತವರಿದಿದ್ದು, ಕ್ಷಣಕ್ಷಣಕ್ಕೂ ಆತಂಕ ಸೃಷ್ಟಿಯಾಗುತ್ತಿದೆ. ಕೀವ್‌ನಲ್ಲಿ ಭಾರೀ ಪ್ರಮಾಣದಲ್ಲಿ ಗುಂಡಿನ ಚಕಮಕಿ ನಡೆಯುತ್ತಿದೆ. ಇಂಟರ್‍ನೆಟ್ ಸೇವೆ ಕೂಡ ಸ್ಥಗಿತಗೊಂಡಿದೆ.

  • ಶತ್ರುಗಳನ್ನು ತಡೆಯಲು ಸೇತುವೆ ಜೊತೆ ತನ್ನನ್ನು ಸ್ಫೋಟಿಸಿಕೊಂಡ ಉಕ್ರೇನ್ ಯೋಧ

    ಶತ್ರುಗಳನ್ನು ತಡೆಯಲು ಸೇತುವೆ ಜೊತೆ ತನ್ನನ್ನು ಸ್ಫೋಟಿಸಿಕೊಂಡ ಉಕ್ರೇನ್ ಯೋಧ

    ಕೀವ್: ಶತ್ರುಗಳ ಟ್ಯಾಂಕರ್‌ಗಳನ್ನು ತಡೆಯಲು ಉಕ್ರೇನ್ ಸೈನಿಕನೊಬ್ಬ ಸೇತುವೆ ಜೊತೆಗೆ ತನ್ನನ್ನು ಸ್ಫೋಟಿಸಿಕೊಂಡು ಪ್ರಾಣ ತ್ಯಾಗವನ್ನು ಮಾಡಿದ್ದಾರೆ.

    ನಾವು ಬದುಕಿರುವವರೆಗೂ ಹೋರಾಡುತ್ತೇವೆ ಎಂದು ಉಕ್ರೇನ್ ಸೇನೆ ಹೇಳಿದೆ. ಈ ಬೆನ್ನಲ್ಲೆ ಮೆರೈನ್ ಬೆಟಾಲಿಯನ್ ಎಂಜಿನಿಯರ್ ವಿಟಾಲಿ ಸ್ಕಕುನ್ ವೊಲೊಡಿಮಿರೊವಿಚ್ ಅವರು, ರಷ್ಯಾದ ಆಕ್ರಮೀಕ ಕ್ರೈಮಿಯಾವನ್ನು ಉಕ್ರೇನ್ ಮುಖ್ಯ ಭೂಭಾಗಕ್ಕೆ ಸಂಪರ್ಕಿಸುವ ಸೇತುವೆಯಲ್ಲಿ ಶತ್ರುಗಳ ಟ್ಯಾಂಕರ್‌ಗಳನ್ನು ತಡೆಯಲು ಸ್ಫೋಟಿಸಿದ್ದಾರೆ.

    ಉಕ್ರೇನಿನ ಮಿಲಿಟರಿ ಪ್ರಕಾರ ರಷ್ಯಾದ ಟ್ಯಾಂಕ್‍ಗಳು ಆಕ್ರಮಣ ಮಾಡಿದಾಗ ವೊಲೊಡಿಮಿರೊವಿಚ್ ಅವರನ್ನು ದಕ್ಷಿಣ ಪ್ರಾಂತ್ಯದ ಖೆರ್ಸನ್‍ನಲ್ಲಿರುವ ಹೆನಿಚೆಸ್ಕ್ ಸೇತುವೆ ಭದ್ರತೆ ನಿಯೋಜಿಸಲಾಗಿತ್ತು. ರಷ್ಯಾದ ಟ್ಯಾಂಕ್‍ಗಳನ್ನು ತಡೆಯುವ ಏಕೈಕ ಮಾರ್ಗವೆಂದರೆ ಸೇವೆಯನ್ನು ಸ್ಫೋಟಿಸುವುದು ಎಂದು ಸೈನ್ಯ ನಿರ್ಧರಿಸುತ್ತು. ಈ ಪ್ರಕಾರವಾಗಿ ವೊಲೊಡಿಮಿರೊವಿಚ್ ಈ ಕೆಲಸಕ್ಕೆ ಸ್ವಯಂ ಪ್ರೇರಿತರಾಗಿ ಮುಂದಾದರು. ಸೇತುವೆಯನ್ನು ಸ್ಫೋಟಿಸಿದ ವೊಲೊಡಿಮಿರೊಚ್ ಅವರಿಗೆ ವಾಪಸ್ ಆಗಲು ಸಾಧ್ಯವಾಗಲಿಲ್ಲ. ಹೀಗಾಗಿ ಅವರು ಸಾವನ್ನಪ್ಪಿದ್ದಾರೆ ಎಂದು ಸಶಸ್ತ್ರ ಪಡೆಗಳ ಜನರಲ್ ಸ್ಟಾಫ್ ಹೇಳಿದ್ದಾರೆ.

    ಉಕ್ರೇನ್ ಮೇಲೆ ಮಿಲಿಟರಿ ದಾಳಿ ನಡೆಸುವುದಾಗಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಘೋಷಿಸಿದ್ದರು. ಇದಾದ ಕೆಲವೇ ಹೊತ್ತಿನಲ್ಲಿ ರಷ್ಯಾ ಸೇನೆ ಮತ್ತು ಕ್ಷಿಪಣಿಗಳು ಉಕ್ರೇನ್ ಮೇಲೆ ದಾಳಿ ನಡೆಸಿತು. ರಷ್ಯಾ ನಡೆಗೆ ಅಮೆರಿಕ ಸೇರಿದಂತೆ ಅನೇಕ ಯೂರೋಪ್ ರಾಷ್ಟ್ರಗಳು ವಿರೋಧ ವ್ಯಕ್ತಪಡಿಸಿವೆ. ಉಕ್ರೇನ್ ಮೇಲೆ ಸತತ ಮೂರನೇ ದಿನವೂ ರಷ್ಯಾ ದಾಳಿ ಮುಂದುವರಿಸಿದೆ. ಉಕ್ರೇನ್‍ನಲ್ಲಿ ಈವರೆಗೆ 198 ಮಂದಿ ಸಾವಿಗೀಡಾಗಿದ್ದಾರೆ. ಸದ್ಯ ರಷ್ಯಾ ಸೇನಾ ಪಡೆ ಉಕ್ರೇನ್ ರಾಜಧಾನಿ ಕೀವ್ ಪ್ರವೇಶಿಸಿದ್ದು, ಬೃಹತ್ ಕಟ್ಟಡಗಳ ಮೇಲೆ ಕ್ಷಿಪಣಿಗಳ ದಾಳಿ ನಡೆಸಲಾಗಿದೆ.  ಇದನ್ನೂ ಓದಿ: ಪೋಷಕರನ್ನು ಕಳೆದುಕೊಂಡು ನಡುಬೀದಿಯಲ್ಲೇ ಬಾಲಕನ ಆಕ್ರಂದನ

    ಬಾಂಬ್ ಸ್ಫೋಟಕ್ಕೆ ಜನರು ದಿಕ್ಕಾಪಾಲಾಗಿ ಓಡುತ್ತಿದ್ದಾರೆ. ಈಗಾಗಲೇ ಕೀವ್ ನಗರವನ್ನು ರಷ್ಯಾ ಸೇನೆ ಸಂಪೂರ್ಣವಾಗಿ ಸುತ್ತವರಿದಿದ್ದು, ಕ್ಷಣಕ್ಷಣಕ್ಕೂ ಆತಂಕ ಸೃಷ್ಟಿಯಾಗುತ್ತಿದೆ. ಕೀವ್‌ನಲ್ಲಿ ಭಾರೀ ಪ್ರಮಾಣದಲ್ಲಿ ಗುಂಡಿನ ಚಕಮಕಿ ನಡೆಯುತ್ತಿದೆ. ಇಂಟರ್‍ನೆಟ್ ಸೇವೆ ಕೂಡ ಸ್ಥಗಿತಗೊಂಡಿದೆ. ಈ ಮಧ್ಯೆಯೂ ಉಕ್ರೇನ್ ಅಧ್ಯಕ್ಷ ದಿಟ್ಟತನದ ಮಾತಗಳನ್ನಾಡಿದ್ದಾರೆ. ಇದನ್ನೂ ಓದಿ:  ಉಕ್ರೇನ್‌ ಬಿಕ್ಕಟ್ಟು – ಬೆಂಗಳೂರು ವಿದ್ಯಾರ್ಥಿನಿಯ ವೀಡಿಯೋ ಶೇರ್‌ ಮಾಡಿ ಕೇಂದ್ರಕ್ಕೆ ರಾಗಾ ಮನವಿ

    ಕೀವ್ ತೊರೆಯುವಂತೆ ಅಮೆರಿಕ ಝೆಲೆಸ್ಕಿಗೆ ಸಲಹೆ ನೀಡಿತ್ತು. ಆದರೆ ದೊಡ್ಡಣ್ಣನ ಸಲಹೆಯನ್ನು ಉಕ್ರೇನ್ ಅಧ್ಯಕ್ಷ ಧಿಕ್ಕರಿಸಿದ್ದಾರೆ. ನಾನು ನನ್ನ ದೇಶದಲ್ಲಿಯೇ ಇರುತ್ತೇನೆ. ನನಗ್ಯಾವ ಜೀವ ಭಯ ಇಲ್ಲ. ಹೀಗಾಗಿ ನನಗೆ ಸ್ಥಳಾಂತರ ಬೇಡ, ಮದ್ದುಗುಂಡುಗಳು ಬೇಕು. ರಷ್ಯಾ ಸೇನೆ ವಿರುದ್ಧ ನಾನು ಕೊನೆಯವರೆಗೂ ಹೋರಾಟ ಮಾಡುತ್ತೇನೆ ಎಂದು ಆಕ್ರೋಶ ಹೊರಹಾಕಿದ್ದಾರೆ.

  • Russia-Ukraine War – ಏನಿದು ರಷ್ಯಾ ಟ್ಯಾಂಕರ್‌ಗಳ ಮೇಲೆ Z ಮಾರ್ಕ್?

    Russia-Ukraine War – ಏನಿದು ರಷ್ಯಾ ಟ್ಯಾಂಕರ್‌ಗಳ ಮೇಲೆ Z ಮಾರ್ಕ್?

    ಕೀವ್: ರಷ್ಯಾ, ಉಕ್ರೇನ್ ವಿರುದ್ಧ ತನ್ನ ದಾಳಿಯನ್ನು ಮುಂದುವರಿಸುತ್ತಿದೆ. ಈ ನಡುವೆ ರಷ್ಯಾದ ಮಿಲಿಟರಿ ಪಡೆಯ ಯುದ್ಧ ಟ್ಯಾಂಕ್ ಮತ್ತು ವಾಹನಗಳ ಮೇಲಿರುವ ಝಡ್ (Z) ಮಾರ್ಕ್ ತೀವ್ರ ಚರ್ಚೆಗೆ ಕಾರಣವಾಗಿದೆ.

    ಏನಿದು Z ಮಾರ್ಕ್
    ಉಕ್ರೇನ್ ವಿರುದ್ಧ ಯುದ್ಧ ಸಾರಿರುವ ರಷ್ಯಾ ತನ್ನ ದಾಳಿಯನ್ನು ಮತ್ತಷ್ಟು ಹೆಚ್ಚಿಸಿದೆ. ಮೂರನೇ ದಿನವಾದ ಇಂದು ಉಕ್ರೇನ್‍ನ ಕೀವ್ ನಗರದಲ್ಲಿ ಕ್ಷಿಪಣಿ, ಬಾಂಬ್‍ಗಳ ಸುರಿಮಳೆಗೈದಿದೆ. ಈ ಎಲ್ಲದರ ನಡುವೆ ರಷ್ಯಾದ ಯುದ್ಧ ಟ್ಯಾಂಕರ್, ಬಂಕರ್ ಮತ್ತು ಎಲ್ಲಾ ಯುದ್ಧೋಪಕರಣಗಳ ಮೇಲೆ Z ಮಾರ್ಕ್ ಒಂದು ಎಲ್ಲರ ಗಮನಸೆಳೆಯುತ್ತಿದೆ. ಇದನ್ನೂ ಓದಿ: ನಿನ್ನೆ ಮದುವೆಯಾಗಿ ಇಂದು ದೇಶ ಸೇವೆಗೆ ಗನ್‌ ಹಿಡಿದ ದಂಪತಿ

    ಸಾಮಾಜಿಕ ಜಾಲತಾಣಗಳಲ್ಲೂ ಕೂಡ Z ಮಾರ್ಕ್‍ನ ಟ್ಯಾಂಕರ್‌ಗಳ ವೀಡಿಯೋ ವೈರಲ್ ಆಗುತ್ತಿದೆ. ಆದರೆ ಈ ಮಾರ್ಕಿಂಗ್ ಬಗ್ಗೆ ರಷ್ಯಾ ಆರ್ಮಿ ಯಾವುದೇ ರೀತಿಯ ಸ್ಪಷ್ಟನೆ ನೀಡಿಲ್ಲ. ಅಲ್ಲದೇ ಈ Z ಅಕ್ಷರ ರಷ್ಯಾದ ವರ್ಣಮಾಲೆಗಲಲ್ಲೂ ಇಲ್ಲ ಇದು ಸಿರಿಲಿಕ್ ಲಿಪಿಯಾಗಿರುವುದು ಇನ್ನಷ್ಟು ಕುತೂಹಲ ಮೂಡಿಸಿದೆ.

    ಈ ಮಾರ್ಕಿಂಗ್ ಬಗ್ಗೆ ಇದೀಗ ಎಲ್ಲಡೆ ಮಾತುಕತೆ ಆರಂಭವಾಗಿದ್ದು, ರಕ್ಷಣಾ ತಜ್ಞರ ಪ್ರಕಾರ, ಉಕ್ರೇನ್ ಮತ್ತು ರಷ್ಯಾ ಸೇನೆಯ ಸೈನಿಕರು ಮತ್ತು ಯುದ್ಧ ಉಪಕರಣಗಳ ವ್ಯತ್ಯಾಸಕ್ಕಾಗಿ ಈ ಚಿಹ್ನೆ ಬಳಸಲಾಗುತ್ತಿದೆ. ಈ ಎರಡು ದೇಶಗಳ ಮಿಲಿಟರಿ ಪಡೆ ಟ್ಯಾಂಕ್‍ಗಳು ಒಂದೇ ರೀತಿ ಇರುವುದರಿಂದ ರಷ್ಯಾ ಈ ರೀತಿ ಮಾಡಿರಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಪೋಷಕರನ್ನು ಕಳೆದುಕೊಂಡು ನಡುಬೀದಿಯಲ್ಲೇ ಬಾಲಕನ ಆಕ್ರಂದನ

    ರಷ್ಯಾದ ಬಲಿಷ್ಠ ಯುದ್ಧ ಟ್ಯಾಂಕರ್ T-72 ತದ್ರೂಪಿಯಾಗಿ ಉಕ್ರೇನ್‍ನ ಯುದ್ಧ ಟ್ಯಾಂಕರ್ T-80 ಇದೆ. ಈ ಎಲ್ಲಾ ಕಾರಣಗಳನ್ನು ಮನಗಂಡು ರಷ್ಯಾ ತನ್ನ ಯುದ್ಧೋಪಕರಣಗಳಿಗೆ Z ಮಾರ್ಕ್ ಮಾಡಿರಬಹುದು ಎಂಬ ಮಾತು ಕೇಳಿಬರುತ್ತಿದೆ. ಇದನ್ನೂ ಓದಿ: ಉಕ್ರೇನ್‍ನ ಬಹುಮಹಡಿ ಕಟ್ಟಡಕ್ಕೆ ಕ್ಷಿಪಣಿ ದಾಳಿ ನಡೆಸಿದ ರಷ್ಯಾ – ಭೀಕರ ದೃಶ್ಯ ವೈರಲ್

    ಈ ಹಿಂದೆ 1944ರಲ್ಲಿ ನಾರ್ಮಂಡಿ ವಶ ಪಡೆಯುವ ವೇಳೆ ಮಿತ್ರ ರಾಷ್ಟ್ರಗಳಿಗೆ ತಿಳಿಯಲೆಂದು ಅಮೆರಿಕ ತನ್ನ ಸೇನಾ ವಾಹನಗಳ ಮೇಲೆ ಕಪ್ಪು ಮತ್ತು ಬಿಳಿ ಪಟ್ಟಿಗಳನ್ನು ಹಾಕಿಕೊಂಡಿತ್ತು.

  • ಫೋನ್‌ನಲ್ಲಿ ಮಾತನಾಡುವಾಗ ಬಾಂಬ್ ಹಾಕುತ್ತಿದ್ದಾರೆ ಎಂದು ಬಂಕರ್‌ಗೆ ಓಡಿ ಹೋದ: ಪೋಷಕರ ಅಳಲು

    ಫೋನ್‌ನಲ್ಲಿ ಮಾತನಾಡುವಾಗ ಬಾಂಬ್ ಹಾಕುತ್ತಿದ್ದಾರೆ ಎಂದು ಬಂಕರ್‌ಗೆ ಓಡಿ ಹೋದ: ಪೋಷಕರ ಅಳಲು

    ಬೀದರ್: ವೈದ್ಯಕೀಯ ಶಿಕ್ಷಣ ಪಡೆಯಲು ಉಕ್ರೇನ್‍ಗೆ ಹೋಗಿದ್ದ ಬೀದರ್ ಮೂಲದ ಮತ್ತಿಬ್ಬರು ವಿದ್ಯಾರ್ಥಿಗಳು ಉಕ್ರೇನ್‍ನಲ್ಲಿ ಸಿಲುಕಿಕೊಂಡು ಪರದಾಡುತ್ತಿದ್ದು, ಇತ್ತ ಅವರ ಪೋಷಕರು, ತಂಗಿ ಆತಂಕದಲ್ಲಿ ಕಣ್ಣೀರು ಹಾಕುತ್ತಿದ್ದಾರೆ.

    ಬೀದರ್ ನಗರದ ದೀಕ್ಷಿತ್ ಕಾಲೋನಿಯ ಶಶಾಂಕ್ ವಿಜಯ್ ಕುಮಾರ್ ಪೋಷಕರು ಮಗ ಪಾರಾಗಿ ಮನೆಗೆ ಬರಲಿ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಬೀದರ್‍ನ ಒಟ್ಟು ನಾಲ್ಕು ವಿದ್ಯಾರ್ಥಿಗಳು ಉಕ್ರೇನ್ ನಲ್ಲಿ ಸಿಲುಕಿಕೊಂಡು ಪರದಾಡುತ್ತಿದ್ದಾರೆ. ಇದನ್ನೂ ಓದಿ:  ಉಕ್ರೇನ್‍ನಲ್ಲಿ ಸಿಲುಕಿರುವ ವಿದ್ಯಾರ್ಥಿನಿ ಹೆತ್ತವರಿಗೆ ಧೈರ್ಯ ತುಂಬಿದ ಎಸ್‍ಪಿ 

    ಉಕ್ರೇನ್ ನಲ್ಲಿ ಯುದ್ಧ ನಡೆಯುತ್ತಿದ್ದು, ಅದು ಎಲ್ಲಿಗೆ ಹೋಗಿ ಮುಟ್ಟುತ್ತೋ ಗೊತ್ತಿಲ್ಲ. ಹೀಗಾಗೀ ನಾವು ಆತಂಕ ಪಡುತ್ತಿದ್ದೇವೆ. ನಾವು ನನ್ನ ಮಗನ ಜೊತೆ ಫೋನ್‍ನಲ್ಲಿ ಮಾತನಾಡುವಾಗ ಬಾಂಬ್ ಹಾಕುತ್ತಿದ್ದಾರೆ ಎಂದು ಬಂಕರ್‍ಗೆ ಓಡಿ ಹೋಗಿದ್ದಾನೆ. ಇದನ್ನು ನೋಡಿ ನಮಗೆ ಭಯವಾಗುತ್ತಿದೆ. ಉಕ್ರೇನ್ ನ ಎಲ್ಲಕಡೆ ಭಯಾನಕ ಸ್ಥಿತಿ ಇದ್ದು, ಇದರಿಂದ ನಮ್ಮಗೆ ಬಹಳ ದುಃಖವಾಗುತ್ತಿದೆ. ನಮ್ಮ ಮಕ್ಕಳನ್ನು ಸೇಫಾಗಿ ಕರೆದುಕೊಂಡು ಬನ್ನಿ ಎಂದು ಭಾವುಕರಾದರು.

    ಅಲ್ಲಿ ನಮ್ಮ ಅಣ್ಣನಿಗೆ ನೀರು, ಊಟ ಸೇರಿದಂತೆ ಬಹಳ ತೊಂದರೆಯಾಗುತ್ತಿದೆ. ನಾನು ಅವನನ್ನು ಬಹಳ ನೆನಪಿಸಿಕೊಳ್ಳುತ್ತಿದ್ದೇನೆ. ಹೀಗಾಗೀ ನಮ್ಮ ಅಣ್ಣ ಬೇಗ ಮನೆಗೆ ಬರಬೇಕು ಎಂದು ತಂಗಿ ಆತಂಕದಲ್ಲಿ ಕಣ್ಣೀರು ಹಾಕಿದರು. ಇದನ್ನೂ ಓದಿ:  ಮತ್ತೆ ಕಂಗನಾಗೆ ಬಂತು ಕಂಟಕ – ‘ಲಾಕ್‍ಆಪ್’ ವಿರುದ್ಧ ಕಾಪಿರೈಟ್ 

  • ಉಕ್ರೇನ್‍ನಲ್ಲಿ ಸಿಲುಕಿದ್ದ ವಿದ್ಯಾರ್ಥಿನಿಯ ಸಂಪರ್ಕ ಸಿಗದೇ ಪಾಲಕರು ಕಂಗಾಲು

    ಉಕ್ರೇನ್‍ನಲ್ಲಿ ಸಿಲುಕಿದ್ದ ವಿದ್ಯಾರ್ಥಿನಿಯ ಸಂಪರ್ಕ ಸಿಗದೇ ಪಾಲಕರು ಕಂಗಾಲು

    ಧಾರವಾಡ: ಉಕ್ರೇನ್‍ನಲ್ಲಿ ಧಾರವಾಡದ ಮತ್ತೋರ್ವ ವಿದ್ಯಾರ್ಥಿನಿ ಸಿಲುಕಿಕೊಂಡಿದ್ದು ಸಂಪರ್ಕಕ್ಕೆ ಸಿಗದೇ ಕುಟುಂಬಸ್ಥರು ಆತಂಕಕ್ಕೆ ಒಳಗಾಗಿದ್ದಾರೆ.

    ಮೆಹಬೂಬ ನಗರದ ಫೌಜಿಯಾ ಮುಲ್ಲಾ ಉಕ್ರೇನ್‍ದಲ್ಲಿ ಸಿಲುಕಿದ ವಿದ್ಯಾರ್ಥಿನಿ. ಧಾರವಾಡದಲ್ಲಿ ಇರುವ ಈ ವಿದ್ಯಾರ್ಥಿನಿಯ ಕುಟುಂಬದವರು ಸತತವಾಗಿ ವಿದ್ಯಾರ್ಥಿನಿಗೆ ಸಂಪರ್ಕ ಮಾಡುತ್ತಿದ್ದಾರೆ. ಆದರೆ ಸಂಪರ್ಕಕ್ಕೆ ಸಿಗುತ್ತಿಲ್ಲ. ನಿನ್ನೆ ಕರೆ ಮಾಡಿದ್ದ ಫೌಜಿಯಾ, ಆರಾಮಾಗಿ ಇದ್ದೇವೆ. ರಾಯಭಾರಿ ಕಚೇರಿ ಸಂಪರ್ಕದಲ್ಲಿದ್ದೇವೆ ಎಂದಿದ್ದಳು.

    ರಾಯಭಾರ ಕಚೇರಿ ನಿನ್ನೆ ಬೇರೆ ಕಡೆ ಸ್ಥಳಾಂತರ ಮಾಡುವುದಾಗಿ ಹೇಳಿತ್ತು. ಆದರೆ ಫೌಜಿಯಾ ನಿನ್ನೆ ಸಂಜೆ ಮಾಡಿದ್ದ ಕರೆಯೇ ಕೊನೆಯದಾಗಿರುವುದರಿಂದ ಕುಟುಂಬದವರು ಆತಂಕಕ್ಕೆ ಒಳಗಾಗಿದ್ದಾರೆ. ಈ ಬಗ್ಗೆ ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ ಫೌಜಿಯಾ ತಂದೆ ಮಹಮ್ಮದ್ ಇಸಾಕ್ ಅವರು, ನಮ್ಮ ಮಕ್ಕಳು ಸುರಕ್ಷಿತವಾಗಿ ಮನೆಗೆ ಬಂದರೆ ಸಾಕು, ನಮ್ಮ ರಾಜ್ಯದ ಅನೇಕರು ಫೌಜಿಯಾ ಅವಳ ಜೊತೆಯಲ್ಲಿದ್ದಾರಂತೆ ಎಂದು ತಿಳಿಸಿದರು. ಇದನ್ನೂ ಓದಿ: ನಿಮ್ಮೊಂದಿಗೆ ನಾವಿದ್ದೇವೆ: ಐಫೆಲ್‌ ಟವರ್‌ನಲ್ಲಿ ಉಕ್ರೇನ್‌ ರಾಷ್ಟ್ರೀಯ ವರ್ಣ ಬೆಳಗಿಸಿ ಫ್ರಾನ್ಸ್‌ ಅಭಯ

    ಟರ್ನಾಪಿಲ್ ನಗರದಲ್ಲಿ ಸಿಲುಕಿರುವ ಯುವತಿ ಬಳಿ 8 ದಿನಕ್ಕೆ ಆಗುವಷ್ಟು ಆಹಾರ ಇದೆ ಎಂದು ಮಾಹಿತಿ ನೀಡಿದ ಅವರು, ಡಿಸೆಂಬರ್‍ಲ್ಲಿ ಅವಳು ಉಕ್ರೇನ್‍ಗೆ ಹೋಗಿದ್ದಳು. ವಾಪಸ್ ಬರಲು ಕತಾರ ಏರಲೈನ್ಸ್‍ಗೆ ಟಿಕೆಟ್ ಸಹ ಬುಕ್ ಮಾಡಿದ್ದಳು ಎಂದು ಹೇಳಿದರು. ಇದನ್ನೂ ಓದಿ: ಪೋಷಕರನ್ನು ಕಳೆದುಕೊಂಡು ನಡುಬೀದಿಯಲ್ಲೇ ಬಾಲಕನ ಆಕ್ರಂದನ

  • ರಷ್ಯಾ ಮಾಧ್ಯಮಗಳ ಜಾಹೀರಾತಿಗೆ ನಿರ್ಬಂಧ  ಹೇರಿದ ಫೇಸ್‍ಬುಕ್

    ರಷ್ಯಾ ಮಾಧ್ಯಮಗಳ ಜಾಹೀರಾತಿಗೆ ನಿರ್ಬಂಧ ಹೇರಿದ ಫೇಸ್‍ಬುಕ್

    ವಾಷಿಂಗ್ಟನ್: ರಷ್ಯಾದ ಪಡೆಗಳು ಉಕ್ರೇನ್ ಮೇಲಿನ ದಾಳಿಯನ್ನು ಮುಂದುವರಿಸಿದೆ. ಉಕ್ರೇನ್ ಹಾಗೂ ರಷ್ಯಾ ಯುದ್ಧ ಸಂಘರ್ಷ ವಿಶ್ವದಲ್ಲೇ ಭಾರಿ ಆತಂಕವನ್ನುಂಟು ಮಾಡಿದೆ. ಇದರ ನಡವಲ್ಲೇ ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಹಣ ಸಂಪಾದಿಸುವ ರಷ್ಯಾದ ಮಾಧ್ಯಮಗಳಿಗೆ ಫೇಸ್‍ಬುಕ್ ನಿರ್ಬಂಧ ವಿಧಿಸಿದೆ.

    ನಿನ್ನೆ ರಷ್ಯಾದ ನಾಲ್ಕು ಸರ್ಕಾರಿ ಸ್ವಾಮ್ಯದ ಮಾಧ್ಯಮ ಸಂಸ್ಥೆಗಳು ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿದ ವಿಚಾರದ ಸ್ವತಂತ್ರ ಫ್ಯಾಕ್ಟ್ ಚೆಕ್ ಮತ್ತು ಲೇಬಲ್ ಹಾಕುವುದನ್ನು ನಿಲ್ಲಿಸುವಂತೆ ರಷ್ಯಾದ ಅಧಿಕಾರಿಗಳು ನಮಗೆ ಆದೇಶಿಸಿದರು. ಅದನ್ನು ನಾವು ನಿರಾಕರಿಸಿದ್ದೇವೆ ಎಂದು ಫೇಸ್‍ಬುಕ್‍ನ ಮಾತೃ ಸಂಸ್ಥೆ ಮೆಟಾದ ನಿಕ್ ಕ್ಲೆಗ್ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ?: ನಾವು ಈಗ ರಷ್ಯಾದ ಮಾಧ್ಯಮಗಳು ವಿಶ್ವದ ಯಾವುದೇ ಭಾಗದಲ್ಲಿ ನಮ್ಮ ಮಾಧ್ಯಮಗಳ ಮೂಲಕ ಜಾಹೀರಾತುಗಳನ್ನು ಪ್ರಕಟಿಸುವುದು ಅಥವಾ ಹಣ ಗಳಿಸುವುದನ್ನು ನಿಷೇಧಿಸುತ್ತಿದ್ದೇವೆ. ಫೇಸ್‍ಬುಕ್ ರಷ್ಯಾದ ಸರ್ಕಾರಿ ಸ್ವಾಮ್ಯದ ಮಾಧ್ಯಮಗಳಿಗೆ ಲೇಬಲ್ ಹಾಕುವುದನ್ನು ಮುಂದುವರಿಸುತ್ತದೆ ಎಂದು ಫೇಸ್‍ಬುಕ್‍ನ ಭದ್ರತಾ ನೀತಿ ವಿಭಾಗ ಮುಖ್ಯಸ್ಥ ನಥಾನಿಯಲ್ ಗ್ಲೀಚರ್ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ನಿನ್ನೆ ಮದುವೆಯಾಗಿ ಇಂದು ದೇಶ ಸೇವೆಗೆ ಗನ್‌ ಹಿಡಿದ ದಂಪತಿ

    ಉಕ್ರೇನ್ ಮೇಲೆ ರಷ್ಯಾದ ಆಕ್ರಮಣದ ನೆಲೆಗಟ್ಟಿನಲ್ಲಿ ಸಾಮಾಜಿಕ ಮಾಧ್ಯಮ ನೆಟ್‍ವರ್ಕ್‍ಗಳು ಪ್ರಮುಖ ಪಾತ್ರ ವಹಿಸುತ್ತಿವೆ. ಕೆಲವೊಮ್ಮೆ ತಪ್ಪುದಾರಿಗೆಳೆಯುವ ಮಾಹಿತಿ ಕೂಡ ಕಂಡುಬರುತ್ತಿದೆ. ದಶಕಗಳಲ್ಲಿ ತಲೆದೋರಿರುವ ಯುರೋಪಿನ ಅತಿದೊಡ್ಡ ಭೌಗೋಳಿಕ ರಾಜಕೀಯ ಬಿಕ್ಕಟ್ಟನ್ನು ಗುರುತಿಸುವತ್ತ ತ್ವರಿತವಾಗಿ ಬೆಳವಣಿಗೆ ಕಾಣುತ್ತಿರುವ ಸಂಘರ್ಷದ ನೈಜ-ಸಮಯದ ಮೇಲ್ವಿಚಾರಣೆ ಕೂಡ ಮಾಡುತ್ತಿವೆ. ಇದನ್ನೂ ಓದಿ:  ಉಕ್ರೇನ್‌ ಬಿಕ್ಕಟ್ಟು – ಬೆಂಗಳೂರು ವಿದ್ಯಾರ್ಥಿನಿಯ ವೀಡಿಯೋ ಶೇರ್‌ ಮಾಡಿ ಕೇಂದ್ರಕ್ಕೆ ರಾಗಾ ಮನವಿ

    ರಷ್ಯಾದ ನಾಗರಿಕರ ಹಕ್ಕುಗಳನ್ನು ಉಲ್ಲಂಘಿಸುತ್ತಿದೆ ಎಂದು ಆರೋಪಿಸಿ, ಫೇಸ್‍ಬುಕ್ ಬಳಕೆಯನ್ನು ಸೀಮಿತಗೊಳಿಸಲಾಗುತ್ತಿದೆ. ಉಕ್ರೇನ್‍ನಲ್ಲಿ ಹೆಚ್ಚುತ್ತಿರುವ ಮಿಲಿಟರಿ ಸಂಘರ್ಷಕ್ಕೆ ಪ್ರತಿಕ್ರಿಯೆಯಾಗಿ ಪರಿಸ್ಥಿತಿಯನ್ನು ಅವಲೋಕಿಸಲು ಫೇಸ್‍ಬುಕ್ ವಿಶೇಷ ಕಾರ್ಯಾಚರಣೆ ಕೇಂದ್ರವನ್ನು ಸ್ಥಾಪಿಸಿದೆ ಎಂದು ಗ್ಲೀಚರ್ ಹೇಳಿದ್ದಾರೆ. ಉಕ್ರೇನ್‍ನಲ್ಲಿ ಬೆಳಗಾವಿ ಯೋಧನ ಪುತ್ರಿ – ಮಗಳನ್ನು ರಕ್ಷಿಸುವಂತೆ ಪ್ರಧಾನಿ ಕೋರಿದ ಸೈನಿಕ

    ಉಕ್ರೇನ್ ರಾಜಧಾನಿ ಕಿವ್‍ನಲ್ಲಿ ಇಂಟರ್‌ನೆಟ್‌ ಸಂಪರ್ಕ ಸಂಪೂರ್ಣ ಸ್ಥಗಿತಗೊಂಡಿದೆ. ಉಕ್ರೇನ್ ಮೇಲೆ ರಷ್ಯಾ ಯುದ್ಧ ಸಾರಿ ಮೂರನೇ ದಿನವಾಗಿದೆ. ಇದು ಯುದ್ಧದಿಂದಾಗ ಪರಿಣಾಮವೋ, ಸೈಬರ್ ಸಮಸ್ಯೆಯೋ, ಬೇಕಂತಲೇ ಆಗಿದ್ದೋ ಎಂಬುದು ಇನ್ನೂ ಗೊತ್ತಾಗಿಲ್ಲ.