Tag: Russian

  • ರಷ್ಯಾ ದಂಗೆ ಮಾತುಕತೆ ಮೂಲಕ ದಮನ – ಬೆಲಾರಸ್ ಅಧ್ಯಕ್ಷ ಮಧ್ಯಸ್ತಿಕೆಯಿಂದ ಮಾರ್ಗ ಮಧ್ಯೆಯೇ ಹೋರಾಟ ಕೈಬಿಟ್ಟ ಪ್ರಿಗೋಜಿನ್

    ರಷ್ಯಾ ದಂಗೆ ಮಾತುಕತೆ ಮೂಲಕ ದಮನ – ಬೆಲಾರಸ್ ಅಧ್ಯಕ್ಷ ಮಧ್ಯಸ್ತಿಕೆಯಿಂದ ಮಾರ್ಗ ಮಧ್ಯೆಯೇ ಹೋರಾಟ ಕೈಬಿಟ್ಟ ಪ್ರಿಗೋಜಿನ್

    ಮಾಸ್ಕೋ: ರಷ್ಯಾ (Russia) ದಂಗೆ ಮಾತುಕತೆ ಮೂಲಕವೇ ದಮನವಾಗಿದೆ. ಬೆಲಾರಸ್ ಅಧ್ಯಕ್ಷ ಲೂಕಶೆಂಕೋ ಮಧ್ಯಸ್ತಿಕೆ ಪರಿಣಾಮ ಮಾರ್ಗ ಮಧ್ಯೆಯೇ ಹೋರಾಟವನ್ನು ವ್ಯಾಗ್ನರ್ ಮುಖ್ಯಸ್ಥ ಪ್ರಿಗೋಜಿನ್ ಕೈ ಬಿಟ್ಟಿದ್ದಾನೆ.

    ಮಾಸ್ಕೋ ಸನಿಹಕ್ಕೆ ಬಂದಿದ್ದ ವಾಗ್ನರ್‌ಗಳಿಗೆ (Wagner Private Army) ವಾಪಸ್ ಉಕ್ರೇನ್‌ಗೆ ಮರಳುವಂತೆ ಸೂಚಿಲಾಗಿದೆ. ದೇಶದ್ರೋಹದ ಶಿಕ್ಷೆಯಿಂದ ಪಾರು ಮಾಡುವ ಭರವಸೆಯನ್ನು ಬೆಲಾರಸ್ ಅಧ್ಯಕ್ಷ ನೀಡಿದ್ದಾರೆ. ಭಾರೀ ದಂಗೆ ಆಗಬಹುದು ಎಂಬ ಲೆಕ್ಕಾಚಾರದಲ್ಲಿ ರಷ್ಯಾ ಈಗ ನಿಟ್ಟುಸಿರು ಬಿಟ್ಟಿದೆ. ಇದನ್ನೂ ಓದಿ: ಪುಟಿನ್‌ಗೆ ಅಡುಗೆ ಭಟ್ಟನಾಗಿದ್ದ ಪ್ರಿಗೋಜಿನ್ – ರಷ್ಯಾ ಅಧ್ಯಕ್ಷನ ವಿರುದ್ಧವೇ ತಿರುಗಿ ಬಿದ್ದದ್ದು ಯಾಕೆ?

    ಪುಟಿನ್‌ ಆಪ್ತ ಯೆವ್ಗೆನಿ ಪ್ರಿಗೋಜಿನ್ ನೇತೃತ್ವದ ವ್ಯಾಗ್ನರ್ ಖಾಸಗಿ ಸೈನ್ಯ ಮೊದಲು ರೋಸ್ಟೋವ್ ನಗರವನ್ನು ವಶಪಡಿಸಿಕೊಂಡಿತ್ತು. ನಂತರ ಮಾಸ್ಕೋದ ಹೆಚ್ಚಿನ ಭಾಗವನ್ನು ಆಕ್ರಮಿಸಿ ಮುಂದುವರಿದಿತ್ತು. ಹೆಚ್ಚಿನ ಅನಾಹುತ ತಪ್ಪಿಸಲು ಮಧ್ಯಪ್ರವೇಶಿಸಿದ ಬೆಲಾರಸ್‌ ಅಧ್ಯಕ್ಷ ಮಾತುಕತೆ ಮೂಲಕ ದಂಗೆ ಶಮನಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಈ ಕುರಿತು ಆಡಿಯೋ ಸಂದೇಶ ರವಾನಿಸಿರುವ ಪ್ರಿಗೋಜಿನ್‌, ರಕ್ತ ಚೆಲ್ಲುವ ಅಪಾಯದ ಕಾರಣ ಹೋರಾಟಗಾರರು ದಂಗೆ ನಿಲ್ಲಿಸಿ ಹಿಂತಿರುಗಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

    ಉಕ್ರೇನ್‌ (Ukraine) ವಿರುದ್ಧ ದಾಳಿ ನಡೆಸುತ್ತಿರುವ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌ (Vladimir Putin) ಆಪ್ತನೇ ರಷ್ಯಾ ಸೇನೆ ವಿರುದ್ಧ ಬಂಡಾಯ ಏಳುವ ಮೂಲಕ ಶಾಕ್‌ ನೀಡಿದ್ದ. ಯೆವ್ಗೆನಿ ಪ್ರಿಗೋಜಿನ್ (Yevgeny Prigozhin) ನಾಯಕತ್ವದ ಖಾಸಗಿ ಸೇನೆ ವ್ಯಾಗ್ನರ್ (Wagner) ರಷ್ಯಾ ಪಡೆಗಳ ವಿರುದ್ಧ ತಿರುಗಿಬಿದ್ದಿದ್ದು, ದಾಳಿಗೆ ಮುಂದಾಗಿತ್ತು. ಇದನ್ನೂ ಓದಿ: ಪುಟಿನ್‌ ಆಪ್ತ ಕೆಂಡ – ರಷ್ಯಾ ಸೈನಿಕರ ವಿರುದ್ಧವೇ ಖಾಸಗಿ ಸೇನೆಯಿಂದ ಬಂಡಾಯ

  • ರಷ್ಯಾದಿಂದ ಭಾರತ ಖರೀದಿಸುತ್ತಿರುವ S-400 ಕ್ಷಿಪಣಿಗೆ ಎದುರಾಗಿದ್ದ ಕಾಟ್ಸಾ ಭೀತಿ ದೂರ

    ರಷ್ಯಾದಿಂದ ಭಾರತ ಖರೀದಿಸುತ್ತಿರುವ S-400 ಕ್ಷಿಪಣಿಗೆ ಎದುರಾಗಿದ್ದ ಕಾಟ್ಸಾ ಭೀತಿ ದೂರ

    ವಾಷಿಂಗ್ಟನ್: ರಷ್ಯಾದಿಂದ ಎಸ್-400 ಕ್ಷಿಪಣಿ ಖರೀದಿಸಿದ್ದಕ್ಕೆ ಪ್ರತಿಯಾಗಿ ಕಾಟ್ಸಾ ಕಾಯ್ದೆಯಡಿ ಭಾರತದ ಮೇಲೆ ಯಾವುದೇ ದಿಗ್ಬಂಧನ ವಿಧಿಸದಿರುವುದಕ್ಕೆ ಅಮೆರಿಕ ಪ್ರತಿನಿಧಿಗಳ ಸಭೆ ಒಪ್ಪಿಗೆ ಸೂಚಿಸಿದೆ.

    ಕಾಯ್ದೆ ತಿದ್ದುಪಡಿ ವಿಧೇಯಕವನ್ನು ಇಂಡೋ ಅಮೆರಿಕನ್ ಸದಸ್ಯ ರೋ ಖನ್ನಾ ಅಮೆರಿಕ ಪ್ರತಿನಿಧಿಗಳ ಸಭೆಯಲ್ಲಿ ಮಂಡಿಸಿದ್ರು. ಇದಕ್ಕೆ ಮೇಜುಕುಟ್ಟುವ ಮೂಲಕ ಅಮೆರಿಕಾದ ಕೆಳಸಭೆ ಅನುಮೋದನೆ ನೀಡಿದೆ. 2014ರಲ್ಲಿ ಕ್ರಿಮಿಯಾವನ್ನು ರಷ್ಯಾ ಆಕ್ರಮಿಸಿದ್ದಕ್ಕೆ ಮತ್ತು 2016ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ರಷ್ಯಾ ಮೂಗು ತೂರಿಸಿದ್ದಕ್ಕೆ ಪ್ರತಿಯಾಗಿ 2017ರಲ್ಲಿ ಅಮೆರಿಕ ಕಾಟ್ಸಾ ಕಾಯ್ದೆಯನ್ನು ಜಾರಿ ಮಾಡಿತ್ತು. ರಷ್ಯಾದ ಸೇನೆ ಮತ್ತು ಗೂಢಚರ್ಯೆ ಪಡೆಗಳ ಜೊತೆ ವ್ಯವಹಾರ ಹೊಂದಿರುವ ದೇಶಗಳ ಮೇಲೆ ಶಿಕ್ಷಾತ್ಮಕ ದಿಗ್ಬಂಧನ ವಿಧಿಸುವುದು ಕಾಟ್ಸಾ ಕಾಯ್ದೆಯ ಉದ್ದೇಶವಾಗಿದೆ. ಇದನ್ನೂ ಓದಿ: ಜ್ಞಾನವಾಪಿ ವಿವಾದ – ಹಿಂದೂಗಳಿಗೆ ಪೂಜೆ ಮಾಡಲು ಅನುಮತಿ ನೀಡುವಂತೆ ಕೋರಿ ಸುಪ್ರೀಂಗೆ ಅರ್ಜಿ

    ಈ ತಿದ್ದುಪಡಿ ಕಾಯ್ದೆಯು ಚೀನಾದಂತಹ ಆಕ್ರಮಣಕಾರರನ್ನು ತಡೆಯಲು ಸಹಾಯ ಮಾಡುವ ನಿಟ್ಟಿನಲ್ಲಿ ವಿನಾಯಿತಿಯನ್ನು ಭಾರತಕ್ಕೆ ಒದಗಿಸಲು ಬೈಡನ್ ಆಡಳಿತ ಅನುವು ಮಾಡಿಕೊಟ್ಟಿದೆ. ಚೀನಾದಂತಹ ಆಕ್ರಮಣಕಾರರನ್ನು ತಡೆಯಲು ನೆರವಾಗಲು ರಷ್ಯಾದಿಂದ ಭಾರತ ಖರೀದಿಸುತ್ತಿರುವ ಎಸ್-400 ಕ್ಷಿಪಣಿ ರಕ್ಷಣಾ ವ್ಯವಸ್ಥೆಗೆ ಕಾಟ್ಸಾ ಕಾಯ್ದೆಯಿಂದ ವಿನಾಯಿತಿ ನೀಡುವ ತಿದ್ದುಪಡಿ ಮಸೂದೆಗೆ ಅಮೆರಿಕದ ಪ್ರತಿನಿಧಿ ಸಭೆಯಲ್ಲಿ ಧ್ವನಿಮತದ ಮೂಲಕ ಅಂಗೀಕಾರ ಸಿಕ್ಕಿದೆ. ಇದನ್ನೂ ಓದಿ: ಭಗತ್‌ ಸಿಂಗ್‌ ಒಬ್ಬ ಭಯೋತ್ಪಾದಕ: ಶಿರೋಮಣಿ ಅಕಾಲಿ ದಳ ಸಂಸದ ವಿವಾದಾತ್ಮಕ ಹೇಳಿಕೆ

    ಅಮೆರಿಕ ಮಾಡಿರುವ ತಿದ್ದುಪಡಿಯು ಅತ್ಯಂತ ಮಹತ್ವದ್ದಾಗಿದ್ದು, ಇದರಿಂದ ಭಾರತ ಮತ್ತು ಅಮೆರಿಕ ನಡುವಿನ ಸಂಬಂಧ ಇನ್ನಷ್ಟು ಗಟ್ಟಿಯಾಗಬಹುದಾಗಿದೆ. ಅಕ್ಟೋಬರ್ 2018ರಲ್ಲಿ ಎಸ್-400 ವಾಯು ರಕ್ಷಣಾ ಕ್ಷಿಪಣಿ ಐದು ಘಟಕಗಳನ್ನು ಖರೀದಿಸಲು ಭಾರತ ರಷ್ಯಾದೊಂದಿಗೆ ಒಪ್ಪಂದ ಮಾಡಿಕೊಂಡಿತ್ತು. ಬಳಿಕ ಭಾರತದ ಮೇಲೆ ಅಮೆರಿಕ ಕಾಟ್ಸಾ ಕಾಯ್ದೆಯ ಮೂಲಕ ಕ್ರಮ ಕೈಗೊಳ್ಳುವ ಸಾಧ್ಯತೆ ಹೆಚ್ಚಿತ್ತು.

    Live Tv
    [brid partner=56869869 player=32851 video=960834 autoplay=true]

  • ಚೀನಾ ಬ್ಯಾಂಕ್‍ನಲ್ಲಿ ಖಾತೆ ಆರಂಭಕ್ಕೆ ರಷ್ಯಾದ ಕಂಪನಿಗಳು ದೌಡು!

    ಚೀನಾ ಬ್ಯಾಂಕ್‍ನಲ್ಲಿ ಖಾತೆ ಆರಂಭಕ್ಕೆ ರಷ್ಯಾದ ಕಂಪನಿಗಳು ದೌಡು!

    ಬೀಜಿಂಗ್: ರಷ್ಯಾದ ಮೇಲೆ ಅಮೆರಿಕ ಯುರೋಪಿಯನ್ ದೇಶಗಳು ಸೇರಿದಂತೆ ಹಲವು ದೇಶಗಳು ನಾನಾ ಆರ್ಥಿಕ ನಿರ್ಬಂಧಗಳನ್ನು ಹೇರಿದೆ. ಈ ಬೆನ್ನಲ್ಲೇ ರಷ್ಯನ್ ಉದ್ಯಮಿಗಳು ಮತ್ತು ಕಂಪನಿಗಳು ತಮ್ಮ ದೇಶದಲ್ಲಿರುವ ಚೀನಾ ಮೂಲದ ಬ್ಯಾಂಕ್‍ಗಳಲ್ಲಿ ಖಾತೆ ಆರಂಭಿಸುತ್ತಿದ್ದಾರೆ.

    ರಷ್ಯಾ ರಾಜಧಾನಿ ಮಾಸ್ಕೋ ಸೇರಿದಂತೆ ಹಲವು ಪ್ರಮುಖ ನಗರಗಳಲ್ಲಿ ಚೀನಾದ ಇಂಡಸ್ಟ್ರಿಯಲ್ ಆ್ಯಂಡ್ ಕಮರ್ಷಿಯಲ್ ಬ್ಯಾಂಕ್ ಆಫ್ ಚೀನಾ, ಅಗ್ರಿಕಲ್ಚರ್ ಬ್ಯಾಂಕ್ ಆಫ್ ಚೀನಾ ಹೀಗೆ ಮೊದಲಾದವುಗಳು ಹಲವು ವರ್ಷಗಳಿಂದ ಸೇವೆಸಲ್ಲಿಸುತ್ತಿದೆ. ಕಳೆದ ಕೆಲವು ದಿನಗಳಿಂದ ಈ ಬ್ಯಾಂಕ್‍ಗಳಲ್ಲಿ ರಷ್ಯಾದ ಮೂಲದ 200 ರಿಂದ 300 ಉದ್ಯಮಿಗಳು ಹೊಸ ಬ್ಯಾಂಕ್ ಖಾತೆ ತೆರದಿದ್ದಾರೆ ಎಂದು ಬ್ಯಾಂಕ್ ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ. ಇದನ್ನೂ ಓದಿ: ಒಲಿಂಪಿಕ್ಸ್ ಮುಗಿಯುವವರೆಗೆ ಯುದ್ಧವನ್ನು ಮುಂದೆ ಹಾಕಿ ಎಂದಿದ್ದ ಚೀನಾ!

    ಆರ್ಥಿಕ ನಿರ್ಬಂಧ ಹಿನ್ನಲೆಯಲ್ಲಿ ರಷ್ಯಾದ ಉದ್ಯಮಿಗಳು ಇದೀಗ ಅಮೆರಿಕದ ಡಾಲರ್, ಯರೋಪ್‍ನ ಯುರೋ, ರಷ್ಯಾದ ರೂಬಲ್ ಬಳಸಿ ಜಾಗತಿಕ ಮಟ್ಟದಲ್ಲಿ ವಹಿವಾಟು ನಡೆಸುವುದು ಅಸಾಧ್ಯ. ಹೀಗಾಗಿ ಇವುಗಳನ್ನು ಹೊರತುಪಡಿಸಿದರೆ ಇನ್ನು ಮಾನ್ಯತೆ ಹೊಂದಿರುವ ಚೀನಾದ ಕರೆನ್ಸಿಯಾದ ಯುವಾನ್‍ನಲ್ಲೇ ವಹಿವಾಟು ನಡೆಸಬೇಕು. ಇದನ್ನೂ ಓದಿ: ಪುಟಿನ್‍ನನ್ನು ಬಂಧಿಸಿದವರಿಗೆ 7.5 ಕೋಟಿ – ರಷ್ಯನ್ ಉದ್ಯಮಿ ಘೋಷಣೆ!

    ಜಾಗತಿಕ ನಿರ್ಬಂಧದಿಂದ ಡಾಲರ್‌ನಲ್ಲಿ ವಹಿವಾಟು ಅಸಾಧ್ಯವಾಗಿದೆ. ಹೀಗಾಗಿ ಚೀನಿ ಕರೆನ್ಸಿಯಲ್ಲಿ ವಹಿವಾಟಿಗೆ ರಷ್ಯನ್ನರು ಸಜ್ಜಾಗಿದ್ದಾರೆ. ಹೀಗಾಗಿ ಅಗತ್ಯ ಹಣಕಾಸಿನ ವಹಿವಾಟಿಗೆ ಅವಕಾಶ ಕಲ್ಪಿಸಲು ರಷ್ಯಾ ಕಂಪನಿಗಳು ಚೀನಾ ಬ್ಯಾಂಕ್‍ಗಳನ್ನು ಖಾತೆ ತೆರೆಯುತ್ತಿದ್ದಾರೆ ಎನ್ನಲಾಗಿದೆ.

  • ಉಕ್ರೇನ್‌ನಲ್ಲಿರುವ ಭಾರತೀಯರು ಭಾರತಕ್ಕೆ ಬನ್ನಿ – ವಿದೇಶಾಂಗ ಇಲಾಖೆ

    ಉಕ್ರೇನ್‌ನಲ್ಲಿರುವ ಭಾರತೀಯರು ಭಾರತಕ್ಕೆ ಬನ್ನಿ – ವಿದೇಶಾಂಗ ಇಲಾಖೆ

    ಕೀವ್‌: ರಷ್ಯಾ ಮತ್ತು ಉಕ್ರೇನ್ ನಡುವೆ ಯುದ್ಧದ ಕಾಮೋಡ ದಟ್ಟವಾಗುತ್ತಿದ್ದು, ಉಕ್ರೇನ್‍ನಲ್ಲಿರುವ ಭಾರತೀಯರು ದೇಶಕ್ಕೆ ಮರಳುವಂತೆ ವಿದೇಶಾಂಗ ಇಲಾಖೆ ಸೂಚನೆ ನೀಡಿದೆ. ಉಕ್ರೇನ್ ರಾಜಧಾನಿ ಕೀವ್‍ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಗೆ ಈ ಮಾಹಿತಿ ರವಾನಿಸಿದ್ದು ವಿದ್ಯಾರ್ಥಿಗಳು ಆದ್ಯತೆಯಲ್ಲಿ ದೇಶ ತೊರೆಯುವಂತೆ ಹೇಳಿದೆ.

    ಉಕ್ರೇನ್‍ನಲ್ಲಿ ಅನಿಶ್ಚಿತೆ ಹೆಚ್ಚುತ್ತಿದೆ, ರಷ್ಯಾ ಯಾವುದೇ ಸಂದರ್ಭದಲ್ಲೂ ದಾಳಿ ಮಾಡುವ ಸಾಧ್ಯತೆಗಳಿದ್ದು ಯುದ್ಧದ ವಾತಾವರಣ ಹೆಚ್ಚಾಗಿದೆ. ಹೀಗಾಗಿ ಅಲ್ಲಿ ಅನಿವಾರ್ಯವಲ್ಲದೇ ಭಾರತೀಯರು, ವಿಶೇಷವಾಗಿ ವಿದ್ಯಾರ್ಥಿಗಳು ದೇಶಕ್ಕೆ ಮರಳಿ ಎಂದು ತಿಳಿಸಲಾಗಿದೆ. ಅಲ್ಲದೇ ಉಕ್ರೇನ್‍ಗೆ ಅನಿವಾರ್ಯವಲ್ಲದ ಪ್ರಯಾಣ ಮಾಡದಂತೆ ಭಾರತೀಯರಿಗೆ ಮನವಿ ಮಾಡಿದೆ. ಇದನ್ನೂ ಓದಿ: ವೈಟಿಪಿಎಸ್ ಶಾಖೋತ್ಪನ್ನ ವಿದ್ಯುತ್ ಕೇಂದ್ರದಲ್ಲಿ ಅವಘಡ – ವಿದ್ಯುತ್ ಉತ್ಪಾದನೆ ಸ್ಥಗಿತ

    ಕೀವ್‍ನಲ್ಲಿರುವ ರಾಯಭಾರ ಕಚೇರಿಯು ಉಕ್ರೇನ್‍ನಲ್ಲಿರುವ ಭಾರತೀಯರನ್ನು ತನ್ನ ಕಚೇರಿಯೊಂದಿಗೆ ಸಂಪರ್ಕದಲ್ಲಿರಲು ಮನವಿ ಮಾಡಿದೆ, ಅಗತ್ಯವಿದ್ದಾಗ ಸಂಪರ್ಕಿಸುವುದಾಗಿ ಅದು ತಿಳಿಸಿದೆ. ಉಕ್ರೇನ್‍ನಲ್ಲಿ ವಾಸಿಸುವ ಭಾರತೀಯರಿಗೆ ಎಲ್ಲಾ ಸೇವೆಗಳನ್ನು ಒದಗಿಸುತ್ತದೆ ಎಂದು ಮಾರ್ಗಸೂಚಿಗಳಲ್ಲಿ ಹೇಳಲಾಗಿದೆ. ಇದಕ್ಕೂ ಮೊದಲು ಜನವರಿ 26 ರಂದು, ಭಾರತೀಯ ರಾಯಭಾರ ಕಚೇರಿಯು ಉಕ್ರೇನ್‍ನಲ್ಲಿ ವಾಸಿಸುವ ಎಲ್ಲಾ ಭಾರತೀಯರನ್ನು ನೋಂದಾಯಿಸಲು ಕೇಳಿಕೊಂಡಿದ್ದು, ಯಾವುದೇ ಮಾಹಿತಿಯನ್ನು ತ್ವರಿತವಾಗಿ ರವಾನಿಸುವ ಸಾಧ್ಯತೆಗಳಿದೆ. ಇದನ್ನೂ ಓದಿ: ಹೋಟೆಲ್‍ನಲ್ಲಿ ಊಟ, ತಿಂಡಿ ಸಪ್ಲೈಗೆ ಬಂತು ರೋಬೋ – ಮೈಸೂರಿನ ಜನತೆಯ ಮನಗೆದ್ದ ಸಪ್ಲೇಯರ್ ಲೇಡಿ

    ರಷ್ಯಾ ಉಕ್ರೇನ್ ಗಡಿ ವಿವಾದ ತಾರಕಕ್ಕೇರಿದ್ದು ಎರಡು ಕಡೆಯ ಸೇನೆಗಳು ಜಮಾವಣೆಗೊಂಡಿವೆ. ರಷ್ಯಾ ಹೆಚ್ಚು ಸೈನಿಕರನ್ನು ನಿಯೋಜನೆ ಮಾಡಿದ್ದು ಯುದ್ಧಕ್ಕೆ ಸನ್ನದ್ಧವಾಗಿದೆ ಎಂದು ಉಕ್ರೇನ್ ಆರೋಪಿಸಿದೆ. ಆದರೆ ಈ ಆರೋಪವನ್ನು ರಷ್ಯಾ ನಿರಾಕರಿಸಿದೆ. ಈ ನಡುವೆ ರಷ್ಯಾ-ಉಕ್ರೇನ್ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಭಾರತವೂ ಸೇರಿದಂತೆ ಯಾವುದೇ ರಾಷ್ಟ್ರದ ಪಾತ್ರವನ್ನು ಅಮೆರಿಕ ಸ್ವಾಗತಿಸುತ್ತದೆ ಎಂದು ಅಮೆರಿಕ ಈ ಹಿಂದೆ ಶ್ವೇತಭವನದ ವಕ್ತಾರರು ಹೇಳಿದ್ದರು.

  • ಸೆಕ್ಸ್ ಕ್ಲಬ್‍ನಲ್ಲಿ ಸಿಕ್ಕಿಬಿದ್ದವರು ಕ್ಯಾಮೆರಾ ಕಣ್ಣಿನಿಂದ ತಪ್ಪಿಸಿಕೊಂಡ ವಿಡಿಯೋ ವೈರಲ್

    ಸೆಕ್ಸ್ ಕ್ಲಬ್‍ನಲ್ಲಿ ಸಿಕ್ಕಿಬಿದ್ದವರು ಕ್ಯಾಮೆರಾ ಕಣ್ಣಿನಿಂದ ತಪ್ಪಿಸಿಕೊಂಡ ವಿಡಿಯೋ ವೈರಲ್

    ಮಾಸ್ಕೋ: ಅಕ್ರಮವಾಗಿ ನಡೆಯುತ್ತಿದ್ದ ಸೆಕ್ಸ್ ಕ್ಲಬ್ ಮೇಲೆ ರಷ್ಯಾ ಪೊಲೀಸರು ದಾಳಿ ಮಾಡಿದ್ದು, ಈ ವೇಳೆ ಆರೋಪಿಗಳು ಕ್ಯಾಮೆರಾ ಕಣ್ಣಿನಿಂದ ತಪ್ಪಿಸಿಕೊಳ್ಳಲು ಅನುಸರಿಸಿದ ತಂತ್ರ ಸಖತ್ ವೈರಲ್ ಆಗಿದೆ.

    ರಷ್ಯಾದ ರೊಸ್ತೊವ್-ಆನ್-ಡಾನ್ ನಗರದ ಬಿಡಿಎಸ್‍ಎಂ ಕ್ಲಬ್‍ನಲ್ಲಿ ಅಕ್ರಮವಾಗಿ ಸೆಕ್ಸ್ ಚಟುವಟಿಗಳು ನಡೆಯುತ್ತಿತ್ತು. ಈ ಕುರಿತು ಮಾಹಿತಿ ಪಡೆದ ಪೊಲೀಸರು ಕ್ಲಬ್ ಮೇಲೆ ದಾಳಿ ಮಾಡಿದ್ದರು. ಆರೋಪಿಗಳು ಕ್ಯಾಮೆರಾ ಕಣ್ಣಿನಿಂದ ತಪ್ಪಿಸಿಕೊಂಡ ರೀತಿ, ನಗೆ ತರುವಂತಿದೆ.

    ಆರೋಪಿಗಳು ಮಾಡಿದ್ದೇನು?:
    ಪೊಲೀಸ್ ದಾಳಿಯನ್ನು ಅರಿತ ಸೆಕ್ಸ್ ನಿರತ ಮಹಿಳೆಯರು ಹಾಗೂ ಪುರುಷರು ಬೆನ್ನು ಮೇಲೆ ಮಾಡಿ, ದೀಢ್ ನಮಸ್ಕಾರ ಹಾಕುವ ರೀತಿ ಮಲಗಿದ್ದಾರೆ. ಉಳಿದಂತೆ ಕೆಲವರು ಮಂಡಿ ಊರಿ, ಕೆಲಕ್ಕೆ ಕತ್ತು ತಾಗಿಸಿದ್ದಾರೆ. ಅಷ್ಟೇ ಅಲ್ಲದೆ ಯಾವುದೇ ರೀತಿಯಲ್ಲಿಯೂ ಮುಖ ಕಾಣಬಾರದು ಅಂತಾ ಕೈಗಳಿಂದ ಮುಚ್ಚಿಕೊಂಡಿದ್ದಾರೆ. ಅವರು ಬಳಸಿದ ತಂತ್ರ ನೋಡಿ ಪೊಲೀಸರು ತಬ್ಬಿಬ್ಬಾಗಿದ್ದಾರೆ. ಆದರೆ ಈ ಕುರಿತು ಎಲ್ಲಿಯೂ ಹೇಳಿಕೊಂಡಿರಲಿಲ್ಲ.

    ದಾಳಿಯ ಕುರಿತು ಪೊಲೀಸರು ಯಾವುದೇ ಮಾಹಿತಿ ನೀಡಿರಲಿಲ್ಲ. ಆದರೆ ಬಿಡಿಎಸ್‍ಎಂ ಕ್ಲಬ್‍ನಲ್ಲಿ ನಡೆದ ಈ ದಾಳಿಯ ಕುರಿತು ನವೆಂಬರ್ 4ರಂದು ವಿಡಿಯೋ ವೈರಲ್ ಆಗಿದೆ. ಸಾಮಾನ್ಯವಾಗಿ ಪೊಲೀಸರು ದಾಳಿ ಮಾಡಿರುವ ಕುರಿತು ಮಾಹಿತಿ ನೀಡುತ್ತಾರೆ. ಆದರೆ ಈ ಬಾರಿ ಯಾವುದೇ ಮಾಹಿತಿ ನೀಡದೇ ಚರ್ಚೆಗೆ ಕಾರಣವಾಗಿದೆ.

    ಬಿಡಿಎಸ್‍ಎಂ ಕ್ಲಬ್ ಮೇಲಿನ ದಾಳಿ ವಿಚಾರವನ್ನು ಪೊಲೀಸ್ ಇಲಾಖೆ ಏಕೆ ಬಚ್ಚಿಟ್ಟಿತ್ತು? ಪ್ರಕರಣವನ್ನು ಕೈಬಿಡುವಂತೆ ಲಂಚ ನೀಡಲಾಗಿತ್ತೇ? ಯಾವ ಕಾರಣಕ್ಕೆ ಕ್ರಮ ಕೈಗೊಳ್ಳಲಿಲ್ಲ ಎನ್ನುವ ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿವೆ ಎಂದು ವರದಿಯಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv