Tag: Russian Army

  • ರಷ್ಯಾ ಮಿಲಿಟರಿ ಸೇರಿದ್ದ ಭಾರತ ಮೂಲದ ಸೈನಿಕ ಉಕ್ರೇನ್ ಸೇನೆ ಮುಂದೆ ಶರಣು

    ರಷ್ಯಾ ಮಿಲಿಟರಿ ಸೇರಿದ್ದ ಭಾರತ ಮೂಲದ ಸೈನಿಕ ಉಕ್ರೇನ್ ಸೇನೆ ಮುಂದೆ ಶರಣು

    ಕೈವ್: ರಷ್ಯಾ ಮಿಲಿಟರಿಯಲ್ಲಿ ( Russian Army) ಸೇವೆ ಸಲ್ಲಿಸುತ್ತಿದ್ದ ಭಾರತ ಮೂಲದ ಸೈನಿಕ ಉಕ್ರೇನ್ (Ukraine) ಮುಂದೆ ಶರಣಾಗಿದ್ದಾರೆ ಎಂದು ಉಕ್ರೇನ್ ಸೇನೆ ತಿಳಿಸಿದೆ. ಉಕ್ರೇನಿಯನ್ ಮಿಲಿಟರಿ ತನ್ನ ಟೆಲಿಗ್ರಾಮ್ ಚಾನೆಲ್‌ನಲ್ಲಿ ಈ ವೀಡಿಯೋವನ್ನು ಬಿಡುಗಡೆ ಮಾಡಿದೆ.

    ಗುಜರಾತ್‌ನ (Gujarat) 22 ವರ್ಷದ ಮಜೋತಿ ಸಾಹಿಲ್ ಮೊಹಮ್ಮದ್ ಹುಸೇನ್ ಉಕ್ರೇನ್ ಪಡೆ ಮುಂದೆ ಶರಣಾದ ಸೈನಿಕ. ಈ ವಿಷಯದ ಬಗ್ಗೆ ಭಾರತೀಯ ಅಧಿಕಾರಿಗಳು ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಕೈವ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ವರದಿಯ ಸತ್ಯಾಸತ್ಯತೆಯನ್ನು ಪರಿಶೀಲಿಸುತ್ತಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಇದುವರೆಗೆ ಉಕ್ರೇನ್ ಅಧಿಕಾರಿಗಳಿಂದ ಯಾವುದೇ ಔಪಚಾರಿಕ ಮಾಹಿತಿ ಬಂದಿಲ್ಲ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಇನ್ಮುಂದೆ ಬುಕ್ ಆದ ರೈಲ್ವೆ ಟಿಕೆಟ್ ದಿನಾಂಕ ಬದಲಿಸಲು ಅವಕಾಶ

    ಹುಸೇನ್ ಹೆಚ್ಚಿನ ಅಧ್ಯಯನಕ್ಕೆಂದು ರಷ್ಯಾಗೆ ಹೋಗಿದ್ದರು. ಅಲ್ಲಿ ಮಾದಕವಸ್ತು ಸಂಬಂಧಿತ ಪ್ರಕರಣದಲ್ಲಿ ಸಿಲುಕಿ 7 ವರ್ಷಗಳ ಶಿಕ್ಷೆಯನ್ನು ವಿಧಿಸಲಾಯಿತು. ಜೈಲು ಶಿಕ್ಷೆ ತಪ್ಪಿಸಲು ರಷ್ಯಾದ ಮಿಲಿಟರಿ ಒಪ್ಪಂದಕ್ಕೆ ಸಹಿ ಹಾಕುವ ಅವಕಾಶವನ್ನು ಹುಸೇನ್‌ಗೆ ನೀಡಲಾಯಿತು. ಇದನ್ನೂ ಓದಿ: LPG ತುಂಬಿದ್ದ ಟ್ರಕ್‌ಗೆ ಟ್ಯಾಂಕರ್ ಡಿಕ್ಕಿ – ಸಿಲಿಂಡರ್‌ಗಳ ಸರಣಿ ಸ್ಫೋಟ, ಕಿ.ಮೀಗಟ್ಟಲೇ ಕಾಣಿಸಿದ ಜ್ವಾಲೆ

    ನನಗೆ ಜೈಲಿನಲ್ಲಿರಲು ಇಷ್ಟವಿರಲಿಲ್ಲ, ಆದ್ದರಿಂದ ನಾನು ವಿಶೇಷ ಮಿಲಿಟರಿ ಕಾರ್ಯಾಚರಣೆಗಾಗಿ ಒಪ್ಪಂದಕ್ಕೆ ಸಹಿ ಹಾಕಿದೆ. ಆದರೆ ನಾನು ಅಲ್ಲಿಂದ ಹೊರಬರಲು ಬಯಸಿದ್ದೆ ಎಂದು ಹುಸೇನ್ ಹೇಳಿದ್ದಾರೆ. ಕೇವಲ 16 ದಿನಗಳ ತರಬೇತಿಯ ನಂತರ, ನನ್ನನ್ನು ಅಕ್ಟೋಬರ್ 1 ರಂದು ಮೂರು ದಿನಗಳ ಕಾಲ ನಡೆದ ಮೊದಲ ಯುದ್ಧ ಕಾರ್ಯಾಚರಣೆಗೆ ಕಳುಹಿಸಲಾಯಿತು. ತಮ್ಮ ಕಮಾಂಡರ್ ಜೊತೆಗಿನ ಘರ್ಷಣೆಯ ನಂತರ ಉಕ್ರೇನ್ ಸೇನೆ ಮುಂದೆ ಶರಣಾಗಲು ನಿರ್ಧರಿಸಿದೆ ಎಂದು ಹುಸೇನ್ ವೀಡಿಯೋದಲ್ಲಿ ವಿವರಿಸಿದ್ದಾರೆ. ಇದನ್ನೂ ಓದಿ: ಉ.ಕರ್ನಾಟಕದಲ್ಲಿ ಪ್ರವಾಹ – ಕೇಂದ್ರದಿಂದ ನೆರೆಪೀಡಿತ ಜಿಲ್ಲೆಗಳಿಗೆ ಪರಿಹಾರ ನೀಡುವಂತೆ ಮೋದಿಗೆ ಯತ್ನಾಳ್ ಪತ್ರ

  • ʻತುಂಬಾ ಅಪಾಯಕಾರಿʼ ದೂರವಿರಿ – ರಷ್ಯಾ ಸೇನೆ ಸೇರುತ್ತಿರುವ ಭಾರತೀಯರಿಗೆ MEA ವಾರ್ನಿಂಗ್‌

    ʻತುಂಬಾ ಅಪಾಯಕಾರಿʼ ದೂರವಿರಿ – ರಷ್ಯಾ ಸೇನೆ ಸೇರುತ್ತಿರುವ ಭಾರತೀಯರಿಗೆ MEA ವಾರ್ನಿಂಗ್‌

    – ಮಿಲಿಟರಿ ಉದ್ಯೋಗದ ಆಮಿಷವೊಡ್ಡಿ ಯುದ್ಧಕ್ಕೆ ನಿಯೋಜನೆ

    ನವದೆಹಲಿ: ಉಕ್ರೇನ್‌ (Ukraine) ವಿರುದ್ಧದ ಯುದ್ಧದಲ್ಲಿ ಹೋರಾಡಲು ಭಾರತೀಯರು ರಷ್ಯಾ ಸೇನೆ ಸೇರುತ್ತಿರುವ ವರದಿಗಳನ್ನು ನಾವು ನೋಡಿದ್ದೇವೆ. ಹೀಗೆ ರಷ್ಯಾ ಸೇನೆ ಸೇರಲು ಬಯಸುತ್ತಿರುವ ಎಲ್ಲಾ ಭಾರತೀಯರು ದೂರಬೇಕು. ಏಕೆಂದ್ರೆ ಇದು ತುಂಬಾ ಅಪಾಯಕಾರಿ ಕೋರ್ಸ್‌ ಎಂದು ವಿದೇಶಾಂಗ ಸಚಿವಾಲಯ (Ministry of External Affairs) ಹೇಳಿದೆ.

    ಇತ್ತೀಚೆಗೆ ರಷ್ಯಾದ ಸೈನ್ಯಕ್ಕೆ (Russian Army) ಭಾರತೀಯರನ್ನ ನೇಮಸಿಕೊಳ್ಳಲಾಗಿದೆ ಎಂಬ ವರದಿಗಳನ್ನ ನೋಡಿದ್ದೇವೆ. ಕಳೆದ ಒಂದು ವರ್ಷದಿಂದ ಸರ್ಕಾರವು ಹಲವಾರು ಸಂದರ್ಭಗಳಲ್ಲಿ ಇದರಲ್ಲಿನ ಅಪಾಯಗಳನ್ನ ಒತ್ತಿ ಹೇಳಿದೆ. ಇದೀಗ ಮತ್ತೆ ಭಾರತೀಯರಿಗೆ (Indians) ಸಚಿವಾಲಯ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಉಕ್ರೇನ್ ವಿರುದ್ಧ ಯುದ್ಧ – ರಷ್ಯಾ ಪರ ಹೋರಾಡ್ತಿದ್ದ 12 ಭಾರತೀಯರು ಬಲಿ, 16 ಮಂದಿ ನಾಪತ್ತೆ

    ದೆಹಲಿ ಮತ್ತು ಮಾಸ್ಕೋದಲ್ಲಿರುವ ರಷ್ಯಾದ (Russia) ಅಧಿಕಾರಿಗಳೊಂದಿಗೆ ಈ ವಿಷಯ ಚರ್ಚಿಸಿದ್ದೇವೆ. ಈ ಪದ್ದತಿಯನ್ನ ಕೊನೆಗೊಳಿಸಬೇಕು. ನಮ್ಮ ಪ್ರಜೆಗಳನ್ನು ಬಿಡುಗಡೆ ಮಾಡಬೇಕು ಎಂದು ಕೇಳಿಕೊಂಡಿದ್ದೇವೆ. ರಷ್ಯಾ ಸೇನೆಯಲ್ಲಿ ಸಿಲುಕಿರುವ ಕುಟುಂಬದೊಂದಿಗೆ ನಾವು ಸಂಪರ್ಕದಲ್ಲಿದ್ದೇವೆ ಎಂದು ಸಚಿವಾಲಯ ಹೇಳಿದೆ.

    ಮುಂದುವರಿದು.. ರಷ್ಯಾ ಸೇನೆ ಸೇರಲು ಬಯಸುತ್ತಿರುವ ಎಲ್ಲಾ ಭಾರತೀಯ ಪ್ರಜೆಗಳು ದೂರವಿರಿ, ಯಾವುದೇ ಆಮಿಷಗಳಿಗೆ ಬಲಿಯಾಗಬೇಡಿ. ಏಕೆಂದ್ರೆ ಇದು ತುಂಬಾ ಅಪಾಯಕಾರಿಯಾದ ಕೋರ್ಸ್‌ ಎಂದು ಎಚ್ಚರಿಸಿದೆ. ಇದನ್ನೂ ಓದಿ: ರಷ್ಯಾ ಸೇನೆಯಲ್ಲಿ ಸಿಲುಕಿದ್ದಾರೆ 20 ಭಾರತೀಯರು – ವಾಪಸ್‌ ಕರೆತರಲು ಹರಸಾಹಸ

    Russia-UkraineWar

    ಘಟನೆ ಬೆಳಕಿಗೆ ಬಂದಿದ್ದು ಹೇಗೆ?
    ಪೂರ್ವ ಉಕ್ರೇನ್‌ನ ಡೊನೆಟ್ಸ್ಕ್ ಪ್ರದೇಶದಲ್ಲಿ ನೆಲೆಸಿರುವ ಇಬ್ಬರು ಭಾರತೀಯರು ಆರೋಪಿಸಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಉದ್ಯೋಗದ ಆಮಿಷವೊಡ್ಡಿ ನಮ್ಮನ್ನು ರಷ್ಯಾಕ್ಕೆ ಕರೆತಂದು ಉಕ್ರೇನ್‌ ವಿರುದ್ಧ ಯುದ್ಧದಲ್ಲಿ ಹೋರಾಡಲು ನಿಯೋಜಿಸಲಾಗಿದೆ ಎಂದು ಹೇಳಿಕೊಂಡಿದ್ದರು.

    ವರದಿಗಳ ಪ್ರಕಾರ, ಇಬ್ಬರು ನೇಮಕಾತಿದಾರರು ಕಳೆದ 6 ತಿಂಗಳ ಹಿಂದೆ ವಿದ್ಯಾರ್ಥಿ ಅಥವಾ ಸಂದರ್ಶಕ ವೀಸಾದಲ್ಲಿ ರಷ್ಯಾಕ್ಕೆ ಪ್ರಯಾಣಿಸಿದ್ದರು. ಉದ್ಯೋಗ ಕೊಡಿಸುವುದಾಗಿ ಹೇಳಿ ಭರವಸೆ ನೀಡಿದ ಏಜೆಂಟ್ ತಮ್ಮನ್ನು ಯುದ್ಧಭೂಮಿಗೆ ಕಳುಹಿಸಿದ್ದಾರೆ ಅಂತ ಹೇಳಿಕೊಂಡಿದ್ದರು. ಇದನ್ನೂ ಓದಿ: ಪುಟಿನ್ ಜೊತೆ ಮೋದಿ ಚರ್ಚೆ – ಸೇನೆಯಲ್ಲಿದ್ದ ಭಾರತೀಯರ ಬಿಡುಗಡೆಗೆ ರಷ್ಯಾ ಅಸ್ತು

    Stranded at warzone 4 Indians seek rescue after being duped into joining Wagner Group

    ಸೇನೆಯಲ್ಲಿ ಸಿಲುಕಿದ್ದ ಕಲಬುರಗಿ ಯುವಕ
    ಕಳೆದ ವರ್ಷ ಫೆಬ್ರವರಿಯಲ್ಲಿ ಮೊದಲ ಬಾರಿಗೆ ಈ ಪ್ರಕರಣ ಬೆಳಕಿಗೆ ಬಂದಿತ್ತು. ಜಮ್ಮು ಮತ್ತು ಕಾಶ್ಮೀರದ ಯುವಕ, ತೆಲಂಗಾಣದ 22 ವರ್ಷದ ಯುವಕ ಮತ್ತು ಕಲಬುರಗಿಯ ಮೂವರು ವ್ಯಾಗ್ನರ್‌ ಪಡೆಯಲ್ಲಿ ಕೆಲಸ ಮಾಡುತ್ತಿದ್ದು ರಷ್ಯಾ ಗಡಿಯಲ್ಲಿ ಸಿಲುಕಿದ್ದರು. ನಮ್ಮನ್ನು ನಕಲಿ ಸೇನಾ ಉದ್ಯೋಗ ದಂಧೆಯಿಂದ ತಕ್ಷಣವೇ ರಕ್ಷಿಸಬೇಕು ಎಂದು ಮೊರೆಯಿಟ್ಟಿದ್ದರು. ತೆಲಂಗಾಣದ ನಾರಾಯಣಪೇಟ್ ಜಿಲ್ಲೆಯ ಮೊಹಮ್ಮದ್ ಸುಫಿಯಾನ್ ತನ್ನ ಕುಟುಂಬಕ್ಕೆ ಕಳುಹಿಸಿದ ವಿಡಿಯೋದಲ್ಲಿ ದಯವಿಟ್ಟು ನಮ್ಮನ್ನು ರಕ್ಷಿಸಿ ಎಂದು ಮನವಿ ಮಾಡಿದ್ದರು.

    ನಾವು ಹೈಟೆಕ್ ವಂಚನೆಗೆ ಬಲಿಯಾಗಿದ್ದೇವೆ. ನಮ್ಮ ಇಚ್ಛೆಗೆ ವಿರುದ್ಧವಾಗಿ ಉಕ್ರೇನ್‌ನೊಂದಿಗೆ ರಷ್ಯಾದಲ್ಲಿ ನಡೆಯುತ್ತಿರುವ ಯುದ್ಧದಲ್ಲಿ ಹೋರಾಡಲು ನಮ್ಮನ್ನು ಒತ್ತಾಯಿಸಲಾಗುತ್ತಿದೆ. ಸೇನೆಯ ಭದ್ರತಾ ಸಹಾಯಕ ಕೆಲಸದ ಭರವಸೆಯೊಂದಿಗೆ ನಾವು ಕಳೆದ ವರ್ಷದ ಡಿಸೆಂಬರ್‌ನಲ್ಲಿ ರಷ್ಯಾಕ್ಕೆ ಬಂದಿದ್ದೇವೆ. ನಂತರ ನಾವು ವಂಚನೆಗೆ ಒಳಗಾದ ವಿಚಾರ ತಿಳಿಯಿತು ಎಂದು ಹೇಳಿಕೊಂಡಿದ್ದರು.