Tag: s.jaishankar

  • ಕಾಬೂಲ್ ರಾಯಭಾರ ಕಚೇರಿ 4 ವರ್ಷದ ಬಳಿಕ ಪುನಾರಂಭಕ್ಕೆ ಭಾರತ ನಿರ್ಧಾರ – ಎಸ್.ಜೈಶಂಕರ್ ಘೋಷಣೆ

    ಕಾಬೂಲ್ ರಾಯಭಾರ ಕಚೇರಿ 4 ವರ್ಷದ ಬಳಿಕ ಪುನಾರಂಭಕ್ಕೆ ಭಾರತ ನಿರ್ಧಾರ – ಎಸ್.ಜೈಶಂಕರ್ ಘೋಷಣೆ

    ನವದೆಹಲಿ: ಕಾಬೂಲ್ (Kabul) ರಾಯಭಾರ ಕಚೇರಿಯನ್ನು 4 ವರ್ಷಗಳ ಬಳಿಕ ಪುನಾರಂಭಿಸಲು ಭಾರತ ನಿರ್ಧರಿಸಿದೆ. ವಿದೇಶಾಂಗ ಸಚಿವ ಜೈಶಂಕರ್ (S.Jaishankar) ಮತ್ತು ತಾಲಿಬಾನ್ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ (Amir Khan Muttaqi) ನಿಯೋಗದ ಸಭೆಯ ಬಳಿಕ ಭಾರತ ಈ ಬಗ್ಗೆ ಘೋಷಣೆ ಮಾಡಿದೆ.

    ಈ ಬಗ್ಗೆ ಪ್ರತಿಕ್ರಿಯಿಸಿರುವ ವಿದೇಶಾಂಗ ಸಚಿವ ಜೈಶಂಕರ್, ಕಾಬೂಲ್‌ನಲ್ಲಿರುವ ಭಾರತದ ತಾಂತ್ರಿಕ ಮಿಷನ್‌ನ್ನು ಭಾರತದ ರಾಯಭಾರ ಕಚೇರಿಯ ಸ್ಥಾನಮಾನಕ್ಕೆ ಉನ್ನತೀಕರಿಸಲಾಗಿದೆ. ಈ ನಿರ್ಧಾರ ಅಫ್ಘಾನಿಸ್ತಾನದೊಂದಿಗೆ ಭಾರತದ ಸಂಬಂಧವನ್ನು ಗಟ್ಟಿಗೊಳಿಸುವ ನಮ್ಮ ಉದ್ದೇಶವನ್ನು ಎತ್ತಿ ತೋರಿಸುತ್ತದೆ. ಅಲ್ಲದೇ ಇದು ಅಫ್ಘಾನ್ ಜನರು ಮತ್ತು ಅವರ ಭವಿಷ್ಯದ ಬಗ್ಗೆ ಭಾರತದ ಬದ್ಧತೆಯಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕಾಬೂಲ್‌ ಮೇಲೆ ಪಾಕ್‌ ಏರ್‌ಸ್ಟ್ರೈಕ್‌ – ಇಸ್ಲಾಮಾಬಾದ್‌, ರಾವಲ್ಪಿಂಡಿಯಲ್ಲಿ ಇಂಟರ್‌ನೆಟ್‌ ಬಂದ್‌

    ಭಾರತವು ಅಫ್ಘಾನಿಸ್ತಾನದ ಮೂಲಸೌಕರ್ಯ ಉಪಕ್ರಮಗಳಿಗೆ ಬೆಂಬಲವನ್ನು ನೀಡುತ್ತಿದೆ. ಇದರ ಜೊತೆ ಈಗಾಗಲೇ ನಡೆಯುತ್ತಿರುವ ಇತರ ಯೋಜನೆಗಳನ್ನು ಪೂರ್ಣಗೊಳಿಸುವ ಕ್ರಮಗಳನ್ನು ನಾವು ಚರ್ಚಿಸಬಹುದು. ಇದರ ಜೊತೆ ಭಾರತವು ಆರು ಹೊಸ ಅಭಿವೃದ್ಧಿ ಯೋಜನೆಗಳನ್ನು ಸಹ ಪ್ರಾರಂಭಿಸಲಿದೆ. ಅವುಗಳ ವಿವರಗಳನ್ನು ಮಾತುಕತೆಯ ನಂತರ ಅಂತಿಮಗೊಳಿಸಲಾಗುವುದು.

    ಎರಡೂ ರಾಷ್ಟ್ರಗಳು ಗಡಿಯಾಚೆಗಿನ ಭಯೋತ್ಪಾದನೆಯ ಬೆದರಿಕೆ ಎದುರಿಸುತ್ತಿದೆ. ಭಯೋತ್ಪಾದನೆಯನ್ನು ಎದುರಿಸಲು ನಾವು ಪ್ರಯತ್ನ ಮುಂದುವರಿಸಬೇಕು ಎಂದು ಅವರು ಹೇಳಿದರು. ಇದೇ ವೇಳೆ ಪಹಲ್ಗಾಮ್‌ ದಾಳಿಯ ನಡುವೆ ಎರಡು ದೇಶಗಳ ನಡುವಿನ ಸಂಬಂಧ ಹಾಗೂ ಮುಂದುವರಿದಿದ್ದ ವ್ಯಾಪಾರದ ವಿಚಾರ ಚರ್ಚೆಯಾಯಿತು.

    ಭಾರತವು ಅಫ್ಘಾನ್ ಆಸ್ಪತ್ರೆಗಳಿಗೆ MRI ಮತ್ತು CT ಸ್ಕ್ಯಾನ್ ಯಂತ್ರಗಳನ್ನು ಒದಗಿಸಲಿದೆ. ರೋಗನಿರೋಧಕ ಮತ್ತು ಕ್ಯಾನ್ಸರ್ ಔಷಧಿಗಳಿಗೆ ಲಸಿಕೆಗಳನ್ನು ಒದಗಿಸಲಿದೆ. 20 ಆಂಬ್ಯುಲೆನ್ಸ್ ದೇಣಿಗೆಯ ಭಾಗವಾಗಿ ಐದು ಆಂಬ್ಯುಲೆನ್ಸ್‌ಗಳನ್ನು ಅಫ್ಘಾನ್ ನಿಯೋಗಕ್ಕೆ ಇದೇ ವೇಳೆ ಅವರು ಹಸ್ತಾಂತರಿಸಿದರು.

    ಇತ್ತೀಚಿಗೆ ಅಫ್ಘಾನ್‌ನಲ್ಲಿ ಭೂಕಂಪ ಸಂಭವಿಸಿದ್ದಾಗ ಭಾರತವು ಕೆಲವೇ ಗಂಟೆಗಳಲ್ಲಿ ಪರಿಹಾರ ಸಾಮಗ್ರಿಗಳನ್ನು ತಲುಪಿಸಿತ್ತು. ಭೂಕಂಪ ಪೀಡಿತ ಪ್ರದೇಶಗಳಲ್ಲಿ ಮನೆಗಳನ್ನು ಪುನರ್ನಿರ್ಮಿಸಲು ಸಹಾಯವನ್ನು ನೀಡಿತ್ತು. ನೆರವು ಇನ್ನೂ ಮುಂದುವರೆದಿದೆ. ಇನ್ನೂ ಕಾಬೂಲ್ ಮತ್ತು ನವದೆಹಲಿ ನಡುವೆ ಹೆಚ್ಚುವರಿ ವಿಮಾನಗಳ ಹಾರಾಟವನ್ನು ಚರ್ಚಿಸಿ, ವ್ಯಾಪಾರ ಮತ್ತು ವಾಣಿಜ್ಯವನ್ನು ಹೆಚ್ಚಿಸುವಲ್ಲಿ ಆಸಕ್ತಿ ಇದೆ ಎಂದು ಜೈಶಂಕರ್ ಹೇಳಿದರು.

    ವಿದ್ಯಾರ್ಥಿವೇತನ ಕಾರ್ಯಕ್ರಮಗಳು ಮತ್ತು ತರಬೇತಿಯನ್ನು ಉಲ್ಲೇಖಿಸಿ ಆಫ್ಘನ್ ವಿದ್ಯಾರ್ಥಿಗಳ ಶಿಕ್ಷಣದ ಬಗ್ಗೆ ಭಾರತದ ಬದ್ಧತೆಯನ್ನು ಅವರು ಪುನರುಚ್ಚರಿಸಿದರು. ಏಪ್ರಿಲ್ 2025 ರಲ್ಲಿ ಹೊಸದಾಗಿ ಪರಿಚಯಿಸಲಾದ ವೀಸಾ ಮಾಡ್ಯೂಲ್ ವೈದ್ಯಕೀಯ, ವ್ಯವಹಾರ ಮತ್ತು ವಿದ್ಯಾರ್ಥಿ ಉದ್ದೇಶಗಳಿಗಾಗಿ ನೀಡಲಾಗುವ ವೀಸಾಗಳಲ್ಲಿ ಗಮನಾರ್ಹವಾಗಿ ಹೆಚ್ಚಳವಾಗಿದೆ. ಇದೇ ವೇಳೆ ಅಫ್ಘಾನ್‌ ಕ್ರಿಕೆಟ್‌ ತಂಡಕ್ಕೆ ತನ್ನ ಬೆಂಬಲ ನೀಡಲಿದೆ ಎಂದು ಇದೇ ವೇಳೆ ಅವರು ಹೇಳಿದರು. ಇದನ್ನೂ ಓದಿ: ಭಯೋತ್ಪಾದಕ ಗುಂಪು ಜೆಇಎಂ ಮಹಿಳಾ ವಿಭಾಗ ಆರಂಭ – ‘ಆಪರೇಷನ್‌ ಸಿಂಧೂರ’ದಲ್ಲಿ ಗಂಡನ ಕಳೆದುಕೊಂಡ ಮಹಿಳೆಗೆ ಚುಕ್ಕಾಣಿ

  • ನಾನು ಭಾರತದ ದೊಡ್ಡ ಅಭಿಮಾನಿ – ರಷ್ಯಾದ ತೈಲ ಖರೀದಿ ನಿಲ್ಲಿಸುವಂತೆ ಮತ್ತೆ ಅಮೆರಿಕ ಒತ್ತಾಯ

    ನಾನು ಭಾರತದ ದೊಡ್ಡ ಅಭಿಮಾನಿ – ರಷ್ಯಾದ ತೈಲ ಖರೀದಿ ನಿಲ್ಲಿಸುವಂತೆ ಮತ್ತೆ ಅಮೆರಿಕ ಒತ್ತಾಯ

    – ತೈಲ ಖರಿದಿ ಕೊಲ್ಲುವವರಿಗೆ ಫಂಡಿಂಗ್‌ ಮಾಡಿದಂತೆ ಎಂದ ಕ್ರಿಸ್‌ ರೈಟ್‌

    ವಾಷಿಂಗ್ಟನ್‌: ನಾನು ಭಾರತದ ದೊಡ್ಡ ಅಭಿಮಾನಿ ಎಂದು ಹೇಳಿಕೊಂಡಿರುವ ಅಮೆರಿಕದ ಇಂಧನ ಕಾರ್ಯದರ್ಶಿ ಕ್ರಿಸ್ ರೈಟ್ (Chris Wright೦, ಭಾರತವು ರಷ್ಯಾದ ತೈಲ (Russian Oil) ಖರೀದಿಯನ್ನು ನಿಲ್ಲಿಸುವಂತೆ ಒತ್ತಾಯಿಸಿದರು.

    ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನಲ್ಲಿ ಮಾತನಾಡುತ್ತಾ, ಭಾರತದ ಜೊತೆಗೆ ಇಂಧನ, ವ್ಯಾಪಾರದಂತಹ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವ ಕುರಿತು ವಿದೇಶಾಂಗ ಸಚಿವ ಎಸ್‌. ಜೈಶಂಕರ್‌ (S Jaishankar0 ಅವರೊಂದೊಗೆ ಚರ್ಚಿಸಿದ್ದೇನೆ. ಆದ್ರೆ ಅವರು ರಷ್ಯಾದಿಂದ ರಿಯಾಯಿತಿ ದರದಲ್ಲಿ ಕಚ್ಚಾತೈಲ ಖರೀದಿರುತ್ತಿರುವ ನಿರ್ಧಾರವನ್ನು ಮರುಪರಿಶೀಲಿಸಬೇಕು ಎಂದು ಹೇಳಿದರು. ಇದನ್ನೂ ಓದಿ: ಅಮೆರಿಕದ H-1B ವೀಸಾ ಹೊಡೆತ ಬೆನ್ನಲ್ಲೇ ಕೌಶಲ್ಯಪೂರ್ಣ ಭಾರತೀಯರಿಗೆ ಜರ್ಮನಿ ಸ್ವಾಗತ

    ನಾವು ಭಾರತದ ಜೊತೆಗೆ ಉಜ್ವಲ ಭವಿಷ್ಯವನ್ನು ಎದುರು ನೋಡುತ್ತಿದ್ದೇವೆ. ಆದ್ರೆ ಉಕ್ರೇನ್‌ ಸಂಘರ್ಷದಲ್ಲಿ ರಷ್ಯಾ ಜೊತೆಗಿನ ಹೊಂದಾಣಿಕೆಯನ್ನು ಅವರು ಕೈಬಿಡಬೇಕು ಕ್ರಿಸ್‌ ರೈಟ್‌ ತಿಳಿಸಿದ್ರು. ಇದನ್ನೂ ಓದಿ: ಟ್ರಂಪ್‌ H-1B ವೀಸಾ ಟಫ್‌ ರೂಲ್ಸ್‌ ನಡುವೆಯೂ ಭಾರತೀಯರಿಗೆ ಮಣೆ ಹಾಕಿದ ಕಂಪನಿಗಳು – ಮೈಸೂರಲ್ಲಿ ಓದಿದ್ದ ವ್ಯಕ್ತಿಗೆ ಸಿಇಒ ಪಟ್ಟ

    ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಅವರು ಯುದ್ಧ ಕೊನೆಗೊಳ್ಳುವುದನ್ನ ಹೊರತುಪಡಿಸಿ ಬೇರೇನನ್ನೂ ಬಯಸುವುದಿಲ್ಲ. ಯುರೋಪ್‌ ರಾಷ್ಟ್ರಗಳು ಈಗಾಗಲೇ ಯುದ್ಧ ನಿಲ್ಲಿಸೋದಕ್ಕಾಗಿ ರಷ್ಯಾದ ಮೇಲೆ ಒತ್ತಡ ಹೇರಲು ಎಲ್ಲಾ ಮಾರ್ಗಗಳನ್ನ ಹುಡುಕುತ್ತಿವೆ. ಭಾರತ ತೈಲ ಖರೀದಿ ನಿಲ್ಲಿಸಿದ್ರೆ ಸಂಘರ್ಷ ನಿಲ್ಲಿಸಲು ಹೆಚ್ಚು ಪ್ರಯೋಜನವಾಗುತ್ತದೆ. ಭಾರತದ ಜೊತೆಗೆ, ಇಂಧನ ಮತ್ತು ಮುಕ್ತ ವ್ಯಾಪಾರ ಸಹಕಾರದ ವಿಷಯದಲ್ಲಿ ನಾನು ಬದ್ಧನಾಗಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ: PublicTV Explainer: ಭಾರತದ ಯುವ ಪ್ರತಿಭೆಗಳಿಗೆ ಅಮೆರಿಕ ವೀಸಾ ತಡೆಗೋಡೆ?; ಏನಿದು H-1B ವೀಸಾ ಹೊಸ ರೂಲ್ಸ್‌?

    ಇನ್ನೂ ಭಾರತವು ನಿರಂತರವಾಗಿ ತೈಲ ಖರೀದಿಸುತ್ತಿರುವ ಬಗ್ಗೆ ಮಾತನಾಡಿದ ಕ್ರಿಸ್‌ ರೈಟ್‌, ಭಾರತವು ರಷ್ಯಾದ ತೈಲ ಖರೀದಿ ಮಾಡುವ ಅಗತ್ಯವಿಲ್ಲ. ಏಕೆಂದ್ರೆ ಭಾರತ ರಿಯಾಯಿತಿ ದರದಲ್ಲಿ ರಷ್ಯಾದ ತೈಲ ಖರೀದಿ ಮಾಡುವುದು, ಪ್ರತಿವಾರ ಸಾವಿರಾರು ಜನರನ್ನು ಕೊಲ್ಲುವ ವ್ಯಕ್ತಿಗೆ ಹಣ ನೀಡಿದಂತಾಗುತ್ತಿದೆ. ಅಮೆರಿಕ ಭಾರತವನ್ನು ಶಿಕ್ಷಿಸಲು ಬಯಸುವುದಿಲ್ಲ, ಬದಲಾಗಿ ಯುದ್ಧವನ್ನು ಕೊನೆಗೊಳಿಸಲು ಬಯಸುತ್ತದೆ. ಹಾಗಾಗಿ ರಷ್ಯಾದ ತೈಲ ಖರೀದಿ ನಿಲ್ಲಿಸಬೇಕು. ಅಮೆರಿಕ ಬಳಿ ಮಾರಾಟ ಮಾಡಲು ತೈಲ ಇದೆ. ಭಾರತ ನಮ್ಮ ಸಂಬಂಧವನ್ನು ಬಯಸಿದ್ರೆ, ರಷ್ಯಾದ ತೈಲ ಖರೀದಿ ನಿಲ್ಲಿಸಲಿ ಎಂದು ಮನವಿ ಮಾಡಿದ್ದಾರೆ.

  • 3 ವರ್ಷಗಳ ನಂತರ ಮೊದಲ ಬಾರಿಗೆ ಭಾರತಕ್ಕೆ ಚೀನಾ ವಿದೇಶಾಂಗ ಸಚಿವ ಭೇಟಿ

    3 ವರ್ಷಗಳ ನಂತರ ಮೊದಲ ಬಾರಿಗೆ ಭಾರತಕ್ಕೆ ಚೀನಾ ವಿದೇಶಾಂಗ ಸಚಿವ ಭೇಟಿ

    ನವದೆಹಲಿ: ಚೀನಾ ವಿದೇಶಾಂಗ ಸಚಿವ ವಾಂಗ್ ಯಿ ಸೋಮವಾರ ಸಂಜೆ ದೆಹಲಿಯಲ್ಲಿ ಎಸ್.ಜೈಶಂಕರ್ ಅವರನ್ನು ಭೇಟಿಯಾದರು. ಮೂರು ವರ್ಷಗಳ ಬಳಿಕ ವಾಂಗ್‌ ಯಿ ಮೊದಲ ಭೇಟಿ ಇದಾಗಿದೆ.

    ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಹ ಚೀನಾ ವಿದೇಶಾಂಗ ಸಚಿವ ಭೇಟಿಯಾಗಲಿದ್ದಾರೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವ್ಯಾಪಾರ ಸುಂಕಗಳಿಂದ ಹೊಡೆತಕ್ಕೆ ಸಿಲುಕಿರುವ ವಿಶ್ವದ ಎರಡು ದೊಡ್ಡ ಆರ್ಥಿಕತೆಗಳ ನಡುವಿನ ಮುರಿದ ಸಂಬಂಧ ಸರಿಯಾಗುವ ಸುಳಿವು ಸಿಕ್ಕಂತಾಗಿದೆ.

    ಗಡಿ ಮತ್ತು ಪ್ರಾದೇಶಿಕ ಭದ್ರತಾ ದೃಷ್ಟಿಕೋನದಿಂದ ವಾಂಗ್ ಯಿ ಅವರ ಭಾರತ ಭೇಟಿ ಮತ್ತು ಪ್ರಧಾನಿಯವರ ಚೀನಾ ಪ್ರವಾಸವು ಮಹತ್ವದ್ದಾಗಿದೆ. ಲಡಾಖ್ ಮತ್ತು ಅರುಣಾಚಲ ಪ್ರದೇಶದಲ್ಲಿನ ದೀರ್ಘಕಾಲದ ವಿವಾದಗಳಿಗೆ ಯಾವುದೇ ಶಾಂತಿಯುತ ಪರಿಹಾರಕ್ಕೆ ದಾರಿ ಸಹಕಾರಿಯಾಗುವ ಸಾಧ್ಯತೆ ಇದೆ.

    ಚೀನಾ ಸಚಿವರ ಭೇಟಿಯು ಸ್ಥಗಿತಗೊಂಡ ಗಡಿ ವಿವಾದ ಪರಿಹಾರ ಕಾರ್ಯವಿಧಾನಗಳನ್ನು ಪುನರಾರಂಭಿಸಲು ಮಾತ್ರವಲ್ಲದೆ, ಕೋವಿಡ್ ಸಾಂಕ್ರಾಮಿಕದ ಆರಂಭಿಕ ದಿನಗಳಲ್ಲಿ ನಿಲ್ಲಿಸಲಾದ ಮತ್ತು ಲಡಾಖ್‌ನಲ್ಲಿನ ಹಿಂಸಾಚಾರದ ನಂತರ ಸ್ಥಗಿತಗೊಂಡಿದ್ದ ವೀಸಾಗಳು ಹೀಗೆ ಹಲವು ಕ್ರಮಗಳಿಗೆ ಸಹಕಾರಿಯಾಗಬಹುದು ಎಂದು ನಿರೀಕ್ಷಿಸಲಾಗಿದೆ.

  • ಆಪರೇಷನ್ ಸಿಂಧೂರ ಶುರುವಾದ ಅರ್ಧ ಗಂಟೆಯ ನಂತರವೇ ಪಾಕಿಸ್ತಾನಕ್ಕೆ ಮಾಹಿತಿ ನೀಡಿದ್ದೆವು: ಜೈಶಂಕರ್

    ಆಪರೇಷನ್ ಸಿಂಧೂರ ಶುರುವಾದ ಅರ್ಧ ಗಂಟೆಯ ನಂತರವೇ ಪಾಕಿಸ್ತಾನಕ್ಕೆ ಮಾಹಿತಿ ನೀಡಿದ್ದೆವು: ಜೈಶಂಕರ್

    ನವದೆಹಲಿ: ಪಾಕಿಸ್ತಾನ ಮತ್ತು ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿರುವ (PoK) 9 ಭಯೋತ್ಪಾದಕರ ಅಡಗುತಾಣಗಳ ಮೇಲೆ ದಾಳಿ ನಡೆಸಿದ 30 ನಿಮಿಷಗಳ ನಂತರವೇ ಭಾರತ ಆಪರೇಷನ್‌ ಸಿಂಧೂರ (Operation Sindoor) ಮೊದಲ ಹಂತದ ಮಾಹಿತಿಯನ್ನು ನೀಡಲಾಯಿತು ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ (S Jaishankar) ಸಂಸದೀಯ ಸಭೆಗೆ ತಿಳಿಸಿದರು.

    ವಿದೇಶಾಂಗ ಸಚಿವಾಲಯದ ಸಮಾಲೋಚನಾ ಸಮಿತಿಯನ್ನುದ್ದೇಶಿಸಿ ಮಾತನಾಡಿದ ಸಚಿವರು ಭಾರತ ಆಪರೇಷನ್ ಸಿಂಧೂರ ಕಾರ್ಯಾಚರಣೆ ಬಗ್ಗೆ ಪಾಕ್‌ ಸೇನೆಗೆ ಮೊದಲೇ ಮಾಹಿತಿ ನೀಡಿದೆ ಎಂಬ ಕಾಂಗ್ರೆಸ್ (Congress) ಆರೋಪವನ್ನು ತಳ್ಳಿಹಾಕಿದರು. 9 ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ ನಡೆಸಿದ ನಂತರವೇ ಮಾಹಿತಿ ನೀಡಲಾಯಿತು. ಸತ್ಯ ತಿಳಿಯದೇ ತಪ್ಪು ನಿರೂಪಣೆ ಮಾಡುವುದು ʻಅಪ್ರಾಮಾಣಿಕತೆʼ ಎಂದು ʻಕೈʼ ನಾಯಕರಿಗೆ ತಿವಿದರು. ಇದನ್ನೂ ಓದಿ: ಶಾಂತಿಯುತವಾಗಿ ಬದುಕಬೇಕಾದ್ರೆ ರೊಟ್ಟಿ ತಿನ್ನಿ, ಇಲ್ಲದಿದ್ರೆ ನನ್ನ ಬುಲೆಟ್‌ಗಳು ಯಾವಾಗಲೂ ರೆಡಿ ಇರುತ್ತೆ: ಮೋದಿ ವಾರ್ನಿಂಗ್‌

    ನಾವು ಭಯೋತ್ಪಾದಕ ನೆಲೆಗಳ ಮೇಲೆ ಮಾತ್ರ ದಾಳಿ ಮಾಡುತ್ತಿದ್ದೇವೆ ಮತ್ತು ಮಿಲಿಟರಿಯ ಮೇಲೆ ಅಲ್ಲ. ಆದ್ದರಿಂದ ನೀವು ಈ ದಾಳಿಯಿಂದ ದೂರವಿರಬೇಕು ಮತ್ತು ಮಧ್ಯಪ್ರವೇಶಿಸಬಾರದು ಎಂದು ಪಾಕಿಸ್ತಾನಕ್ಕೆ ತಿಳಿಸಲಾಯಿತು. ಇಸ್ಲಾಮಾಬಾದ್ ಆರಂಭಿಸಿದ ಭಾರತ ಮತ್ತು ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರ (DGMO) ನಡುವೆ ನೇರ ಸಂವಹನದ ನಂತರ ಎರಡೂ ದೇಶಗಳ ನಡುವಿನ ಕದನ ವಿರಾಮ ಜಾರಿಗೆ ಬಂದಿತು ಎಂದು ಜೈಶಂಕರ್‌ ಹೇಳಿದರು.

    ಅಲ್ಲದೇ ಪಾಕಿಸ್ತಾನದೊಂದಿಗೆ ತಾವು ಎಂದಿಗೂ ಮಾತನಾಡಿಲ್ಲ. ಅವರ ಕೋರಿಕೆಯ ಮೇರೆಗೆ ಮಿಲಿಟರಿ ಕಾರ್ಯಾಚರಣೆ ನಿಲ್ಲಿಸುವ ನಿರ್ಧಾರವನ್ನ ದ್ವಿಪಕ್ಷೀಯವಾಗಿ ತೆಗೆದುಕೊಳ್ಳಲಾಗಿದೆ. ಇದರಲ್ಲಿ ಮೂರನೇ ವ್ಯಕ್ತಿಯ ಮಧ್ಯಪ್ರವೇಶಿಲ್ಲ ಎಂದು ಟ್ರಂಪ್‌ ಹಸ್ತಕ್ಷೇಪದ ಬಗ್ಗೆ ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಮಹಾ ಮಳೆಗೆ ಮುಂಬೈ ಮೆಟ್ರೋ ಸ್ಟೇಷನ್ ಸಂಪೂರ್ಣ ಜಲಾವೃತ

    ಇದೇ ವೇಳೆ ಸಿಂಧೂ ಜಲ ಒಪ್ಪಂದವನ್ನು ಪುನರಾರಂಭಿಸಲು ಅಥವಾ ಮಾರ್ಪಡಿಸಲು ಸರ್ಕಾರ ಉದ್ದೇಶಿಸಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ಒಪ್ಪಂದವು ಪ್ರಸ್ತುತ ಸ್ಥಗಿತಗೊಂಡಿದೆ. ಅದರ ನಿಯಮಗಳನ್ನು ಮರುಪರಿಶೀಲಿಸಲು ಅಥವಾ ಬದಲಾಯಿಸಲು ತಕ್ಷಣದ ಯೋಜನೆಗಳಿಲ್ಲ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಕರ್ನಾಟಕ ಸಿಜೆ ಸೇರಿ ಮೂವರ ಹೆಸರು ಸುಪ್ರೀಂ ಕೋರ್ಟ್ ಜಡ್ಜ್ ನೇಮಕಕ್ಕೆ ಶಿಫಾರಸು

  • ಉಗ್ರರು ಪಾಕಿಸ್ತಾನದಲ್ಲೇ ಅಡಗಿದ್ರೂ ನುಗ್ಗಿ ಹೊಡೆಯುತ್ತೇವೆ: ಜೈಶಂಕರ್‌

    ಉಗ್ರರು ಪಾಕಿಸ್ತಾನದಲ್ಲೇ ಅಡಗಿದ್ರೂ ನುಗ್ಗಿ ಹೊಡೆಯುತ್ತೇವೆ: ಜೈಶಂಕರ್‌

    ನವದೆಹಲಿ: ಉಗ್ರರು ಪಾಕಿಸ್ತಾನದಲ್ಲೇ (Pakistan) ಇರಲಿ, ಎಲ್ಲೇ ಇರಲಿ ಅವರಿರುವ ಜಾಗಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದು ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ (S.Jaishankar) ತಿಳಿಸಿದ್ದಾರೆ.

    ನೆದರ್ಲ್ಯಾಂಡ್ಸ್ ಮೂಲದ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಜೈಶಂಕರ್, ವಿಶ್ವಸಂಸ್ಥೆ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ಹೆಸರಿಸಲಾದ ಭಯೋತ್ಪಾದಕ ತಾಣಗಳ ಮೇಲೆ ಭಾರತ ದಾಳಿ ಮಾಡಿದೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು ನಿಯಮಿತವಾಗಿ ಪಟ್ಟಿಯನ್ನು ಬಿಡುಗಡೆ ಮಾಡುತ್ತದೆ. ಇದರಲ್ಲಿ ಪ್ರಮುಖ ಭಯೋತ್ಪಾದಕರು, ಅವರ ವಾಸಸ್ಥಳ ಮತ್ತು ಅವರು ಎಲ್ಲಿಂದ ಕಾರ್ಯನಿರ್ವಹಿಸುತ್ತಾರೆ ಎಂಬುದರ ಕುರಿತು ವಿವರಗಳನ್ನು ನೀಡಲಾಗುವುದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಜಮ್ಮು & ಕಾಶ್ಮೀರದ ಕಿಶ್ತ್ವಾರ್‌ನಲ್ಲಿ ಉಗ್ರರೊಂದಿಗೆ ಗುಂಡಿನ ಚಕಮಕಿ – ಓರ್ವ ಯೋಧ ಹುತಾತ್ಮ

    ಏಪ್ರಿಲ್ 22 ರಂದು (ಪಹಲ್ಗಾಮ್‌ ದಾಳಿ) ನಾವು ನೋಡಿದ ರೀತಿಯ ಕೃತ್ಯಗಳು ನಡೆದರೆ, ತಕ್ಕ ಉತ್ತರ ನೀಡುತ್ತಾರೆ. ನಾವು ಭಯೋತ್ಪಾದಕರ ಮೇಲೆ ದಾಳಿ ಮಾಡುತ್ತೇವೆ ಎಂಬ ಸ್ಪಷ್ಟ ಸಂದೇಶ ಆ ಕಾರ್ಯಾಚರಣೆಯಲ್ಲಿ ಇದೆ. ಹೀಗಾಗಿ, ಆಪರೇಷನ್‌ ಸಿಂಧೂರ ಮುಂದುವರೆದಿದೆ. ಭಯೋತ್ಪಾದಕರು ಪಾಕಿಸ್ತಾನದಲ್ಲಿದ್ದರೆ, ಅವರು ಇರುವ ಸ್ಥಳದಲ್ಲಿಯೇ ನಾವು ಅವರನ್ನು ಹೊಡೆಯುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.

    ಕಾಶ್ಮೀರದ ಆರ್ಥಿಕತೆಯ ಆಧಾರಸ್ತಂಭವಾಗಿರುವ ಪ್ರವಾಸೋದ್ಯಮಕ್ಕೆ ಹಾನಿ ಮಾಡುವ ಮತ್ತು ಧಾರ್ಮಿಕ ವೈಷಮ್ಯವನ್ನು ಸೃಷ್ಟಿಸುವ ಗುರಿಯನ್ನು ಈ ದಾಳಿ ಹೊಂದಿದೆ ಎಂದು ಪಹಲ್ಗಾಮ್‌ ಭಯೋತ್ಪಾದಕ ದಾಳಿ ಕುರಿತು ಮಾತನಾಡಿದ್ದಾರೆ. ಇದನ್ನೂ ಓದಿ: ಪಾಕ್‌ನ ಉಗ್ರವಾದದ ನಿಜ ಬಣ್ಣ ಬಯಲು ಮಾಡಲು ವಿದೇಶಕ್ಕೆ ಹೊರಟ ಸರ್ವಪಕ್ಷಗಳ ನಿಯೋಗ

    ಭಾರತ ಮತ್ತು ಪಾಕಿಸ್ತಾನದ ನಡುವೆ ಸಂಘರ್ಷವಾಯಿತು. ಅದು ಏನೆಂದು ನೀವು ಅರ್ಥ ಮಾಡಿಕೊಳ್ಳಬೇಕು. ಪಹಲ್ಗಾಮ್‌ ಭಯೋತ್ಪಾದಕ ದಾಳಿಗೆ 26 ಪ್ರವಾಸಿಗರು ಬಲಿಯಾದರು. ಧಾರ್ಮಿಕ ವೈಷಮ್ಯ ಸೃಷ್ಟಿಸುವ ಉದ್ದೇಶದಿಂದ ಈ ಕೃತ್ಯ ಎಸಗಲಾಯಿತು. ಅಲ್ಲಿನ ಸೇನಾ ಮುಖ್ಯಸ್ಥರು ಧಾರ್ಮಿಕ ದೃಷ್ಟಿಕೋನದಲ್ಲೇ ನಡೆಸಲ್ಪಡುತ್ತಾರೆ ಎಂದು ಪಾಕ್‌ ವಿರುದ್ಧ ಕಿಡಿಕಾರಿದ್ದಾರೆ.

  • ಇತಿಹಾಸದಲ್ಲೇ ಮೊದಲು – ತಾಲಿಬಾನ್‌ ವಿದೇಶಾಂಗ ಸಚಿವರ ಜೊತೆ ಜೈಶಂಕರ್‌ ಮಾತುಕತೆ

    ಇತಿಹಾಸದಲ್ಲೇ ಮೊದಲು – ತಾಲಿಬಾನ್‌ ವಿದೇಶಾಂಗ ಸಚಿವರ ಜೊತೆ ಜೈಶಂಕರ್‌ ಮಾತುಕತೆ

    ನವದೆಹಲಿ: ಇತಿಹಾಶದಲ್ಲೇ ಮೊದಲ ಬಾರಿಗೆ ತಾಲಿಬಾನ್‌ (Taliban) ವಿದೇಶಾಂಗ ಸಚಿವರ ಜೊತೆ ಎಸ್‌.ಜೈಶಂಕರ್‌ (S.Jaishankar) ಮಾತುಕತೆ ನಡೆಸಿದ್ದಾರೆ.

    ಪ್ರಾದೇಶಿಕ ಚಲನಶೀಲತೆಯಲ್ಲಿ ಹೊಸ ಅಧ್ಯಾಯ ಇದು ಎನ್ನಲಾಗಿದೆ. ವಿದೇಶಾಂಗ ಸಚಿವ ಎಸ್. ಜೈಶಂಕರ್ ಗುರುವಾರ ತಾಲಿಬಾನ್‌ನ ಹಂಗಾಮಿ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಅವರೊಂದಿಗೆ ದೂರವಾಣಿ ಕರೆಯಲ್ಲಿ ಮಾತನಾಡಿದ್ದಾರೆ. ಅಫ್ಘಾನಿಸ್ತಾನದ ತಾಲಿಬಾನ್ ಆಡಳಿತದ ಜೊತೆ ಭಾರತವು ನಡೆಸಿದ ಮೊದಲ ಸಚಿವ ಮಟ್ಟದ ಸಂಪರ್ಕ ಇದಾಗಿರುವುದರಿಂದ ಈ ಕರೆ ಮಹತ್ವದ್ದಾಗಿದೆ. ಇದನ್ನೂ ಓದಿ: ಕೊನೆಗೂ ಭಾರತದ ಮುಂದೆ ಮಂಡಿಯೂರಿದ ಪಾಕ್‌ – ಶಾಂತಿ ಮಾತುಕತೆಗೆ ಪಾಕ್‌ ಪ್ರಧಾನಿ ಆಹ್ವಾನ

    ಜಮ್ಮು ಮತ್ತು ಕಾಶ್ಮೀರದಲ್ಲಿ ಧಾರ್ಮಿಕ ಪ್ರೇರಿತ ದಾಳಿಯಲ್ಲಿ ಪಾಕಿಸ್ತಾನದ ನಂಟು ಹೊಂದಿರುವ ಭಯೋತ್ಪಾದಕರು, 26 ನಾಗರಿಕರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಪಹಲ್ಗಾಮ್‌ ದಾಳಿಯನ್ನು ಅಫ್ಘಾನಿಸ್ತಾನ ಖಂಡಿಸಿದೆ.

    ಇಂದು ಸಂಜೆ ಅಫ್ಘಾನ್ ವಿದೇಶಾಂಗ ಸಚಿವ ಮೌಲವಿ ಅಮೀರ್ ಖಾನ್ ಮುತ್ತಕಿ ಅವರೊಂದಿಗೆ ಉತ್ತಮ ಸಂಭಾಷಣೆ ನಡೆಸಲಾಯಿತು. ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಅವರು ಖಂಡಿಸಿದ್ದಕ್ಕೆ ನಮ್ಮ ಹೃದಯಪೂರ್ವಕ ಧನ್ಯವಾದಗಳು. ಚರ್ಚೆಯ ಸಮಯದಲ್ಲಿ ಅವರು ಅಫ್ಘಾನ್ ಜನರೊಂದಿಗಿನ ನಮ್ಮ (ಭಾರತದ) ಸಾಂಪ್ರದಾಯಿಕ ಸ್ನೇಹ ಮತ್ತು ಅವರ ಅಭಿವೃದ್ಧಿ ಅಗತ್ಯಗಳಿಗೆ ನಿರಂತರ ಬೆಂಬಲವನ್ನು ಒತ್ತಿ ಹೇಳಿದರು. ಸಹಕಾರವನ್ನು ಮುಂದಕ್ಕೆ ಕೊಂಡೊಯ್ಯುವ ಮಾರ್ಗಗಳು ಮತ್ತು ವಿಧಾನಗಳ ಬಗ್ಗೆ ಚರ್ಚಿಸಲಾಯಿತು ಎಂದು ಎಕ್ಸ್‌ನಲ್ಲಿ ಜೈಶಂಕರ್‌ ಪೋಸ್ಟ್‌ ಹಾಕಿದ್ದಾರೆ. ಇದನ್ನೂ ಓದಿ: ಡಮ್ಮಿ ಜೆಟ್‌, 15 ಬ್ರಹ್ಮೋಸ್‌ ಕ್ಷಿಪಣಿ ದಾಳಿ, 11 ಏರ್‌ಬೇಸ್‌ ಧ್ವಂಸ – ಪಾಕ್‌ ಕರೆಯ ಹಿಂದಿದೆ ಭಾರತದ ಪರಾಕ್ರಮದ ಕಥೆ

    ಜಮ್ಮು ಮತ್ತು ಕಾಶ್ಮೀರದ ಘಟನೆಗಳಿಗೆ ತಾಲಿಬಾನ್ ಕಾರಣ ಎಂಬ ಪಾಕಿಸ್ತಾನ ಸುಳ್ಳು ಸುದ್ದಿ ಹರಡಿದೆ ಎಂದು ಜೈಶಂಕರ್‌ ಇದೇ ವೇಳೆ ತಿಳಿಸಿದ್ದಾರೆ. ಪಾಕಿಸ್ತಾನಿ ಮಾಧ್ಯಮಗಳಲ್ಲಿ ಸುಳ್ಳು ಮತ್ತು ಆಧಾರರಹಿತ ವರದಿಗಳ ಮೂಲಕ ಭಾರತ ಮತ್ತು ಅಫ್ಘಾನಿಸ್ತಾನದ ನಡುವೆ ಅಪನಂಬಿಕೆಯನ್ನು ಸೃಷ್ಟಿಸುವ ಇತ್ತೀಚಿನ ಪ್ರಯತ್ನಗಳನ್ನು ಮುತಾಕಿ ದೃಢವಾಗಿ ತಿರಸ್ಕರಿಸಿದ್ದಾರೆ ಎಂದು ಬರೆದಿದ್ದಾರೆ.

  • ಜೈಶಂಕರ್, ಜೆ.ಪಿ ನಡ್ಡಾ ಸೇರಿ 25 ಪ್ರಮುಖರಿಗೆ ಭದ್ರತೆ ಹೆಚ್ಚಳ

    ಜೈಶಂಕರ್, ಜೆ.ಪಿ ನಡ್ಡಾ ಸೇರಿ 25 ಪ್ರಮುಖರಿಗೆ ಭದ್ರತೆ ಹೆಚ್ಚಳ

    ನವದೆಹಲಿ: ಆಪರೇಷನ್ ಸಿಂಧೂರದ (Operation Sindoor) ಬಳಿಕ ವಿದೇಶಾಂಗ ಸಚಿವ ಎಸ್.ಜೈಶಂಕರ್‌ಗೆ (S Jaishankar) ಸೇರಿ 25 ಪ್ರಮುಖರಿಗೆ ಭದ್ರತೆ ಹೆಚ್ಚಿಸಲಾಗಿದ್ದು, ಬುಲೆಟ್ ಪ್ರೂಫ್ ಕಾರು, ಕಮಾಂಡೋ ಸೆಕ್ಯೂರಿಟಿಯನ್ನು ನೀಡಲಾಗಿದೆ.

    ಏ.22ರಂದು ನಡೆದ ಪಹಲ್ಗಾಮ್ ದಾಳಿಯ ಬಳಿಕ ಭಾರತ (India) ಹಾಗೂ ಪಾಕಿಸ್ತಾನದ (Pakistan) ನಡುವಿನ ಉದ್ವಿಗ್ನತೆ ಜೋರಾಗಿದ್ದು, ಕದನ ವಿರಾಮ ಘೋಷಣೆಯಾದ ಬಳಿಕ ವಿದೇಶಾಂಗ ಸಚಿವಾಲಯದ ವಿನಂತಿ ಮೇರೆಗೆ 25 ಪ್ರಮುಖರಿಗೆ ನೀಡುವ ಭದ್ರತೆಯನ್ನು ಹೆಚ್ಚಿಸಲಾಗಿದೆ.ಇದನ್ನೂ ಓದಿ: ಪಾಕಿಸ್ತಾನದ ವಿರುದ್ಧ ಕದನ ವಿರಾಮ ಘೋಷಣೆ ಯಾಕೆ? ಮೋದಿ ಉತ್ತರ ಕೊಡಲಿ – ದಿನೇಶ್ ಗುಂಡೂರಾವ್

    ದೆಹಲಿ ಪೊಲೀಸ್ ಆಯುಕ್ತ ಸಂಜಯ್ ಅರೋರಾ ಅವರು ಹಿರಿಯ ಅಧಿಕಾರಿಗಳೊಂದಿಗೆ ಭಾನುವಾರ ನಡೆಸಿದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, 25 ವಿಐಪಿಗಳ ಪಟ್ಟಿಯನ್ನು ತಯಾರಿಸಲಾಗಿದೆ. ಪಟ್ಟಿಯಲ್ಲಿ ವಿದೇಶಾಂಗ ಸಚಿವ ಎಸ್.ಜೈಶಂಕರ್, ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ, ಜೆಪಿ ನಡ್ಡಾ, ಭೂಪೇಂದರ್ ಯಾದವ್, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ, ಬಿಜೆಪಿ ಸಂಸದ ನಿಶಿಕಾಂತ್ ದುಬೆ, ಸುಧಾಂಶು ತ್ರಿವೇದಿ ಹಾಗೂ ಬಿಜೆಪಿಯ ಪ್ರಮುಖ ನಾಯಕ ಮುರಳಿ ಮನೋಹರ್ ಜೋಶಿ ಅವರ ಹೆಸರಿದೆ ಎಂದು ಮೂಲಗಳು ತಿಳಿಸಿವೆ.

    ಈಗಾಗಲೇ Z ಸೆಕ್ಯೂರಿಟಿ ಹೊಂದಿರುವ ಜೈಶಂಕರ್ ಅವರಿಗೆ ಮತ್ತೆ ಭದ್ರತೆ ಹೆಚ್ಚಿಸಲಾಗಿದ್ದು, ಒಂದು ಬುಲೆಟ್ ಪ್ರೂಫ್ ಕಾರು, 4-6 ಕಮಾಂಡೋ ಸೇರಿ 22 ಸಿಬ್ಬಂದಿ, ಭದ್ರತೆಗೆ ಬೆಂಗಾವಲು ವಾಹನಗಳು, 33 ಸಿಆರ್‌ಪಿಎಫ್ ಕಮಾಂಡೋ ಹಾಗೂ ದಿನದ 24/7 ಭದ್ರತೆ ನೀಡಲಾಗಿದೆ. ಜೊತೆಗೆ ದೆಹಲಿಯಲ್ಲಿರುವ ಸರ್ಕಾರಿ ನಿವಾಸಕ್ಕೆ ಬಿಗಿ ಭದ್ರತೆ ಒದಗಿಸಲಾಗಿದೆ. ಇದಕ್ಕೂ ಮುನ್ನ ಕಳೆದ ವರ್ಷ ಅಕ್ಟೋಬರ್‌ನಲ್ಲಿ ಜೈಶಂಕರ್ ಅವರ ಭದ್ರತೆಯನ್ನು Y ನಿಂದ Zಗೆ ಹೆಚ್ಚಿಸಲಾಗಿತ್ತು.

    ಭದ್ರತೆಗಾಗಿ ಒದಗಿಸುತ್ತಿರುವ ಕಾರುಗಳಲ್ಲಿ ಪ್ರಥಮ ಚಿಕಿತ್ಸಾ ಕಿಟ್ ಇರಿಸುವಂತೆ ಹಾಗೂ ಭದ್ರತಾ ಸಿಬ್ಬಂದಿಗೆ ಫೈರಿಂಗ್ ಹಾಗೂ ವೈದ್ಯಕೀಯ ತುರ್ತು ಪರಿಸ್ಥಿತಿಗಳ ಕುರಿತು ತರಬೇತಿ ನೀಡುವಂತೆ ತಿಳಿಸಲಾಗಿದೆ.

    ಮೇ 7ರಂದು ಭಾರತೀಯ ಸೇನೆ ನಡೆಸಿದ `ಆಪರೇಷನ್ ಸಿಂಧೂರ್’ದಲ್ಲಿ ಪಾಕ್‌ನ 9 ಭಯೋತ್ಪಾದಕ ತಾಣಗಳ ಮೇಲೆ ದಾಳಿ ನಡೆಸಲಾಗಿತ್ತು. ಇದಾದ ಬಳಿಕ ಪಾಕ್ ನಿಯಂತ್ರಣ ರೇಖೆ, ಜಮ್ಮು ಮತ್ತು ಕಾಶ್ಮೀರದಾದ್ಯಂತ ಅಪ್ರಚೋದಿತ ಶೆಲ್ ದಾಳಿ ನಡೆಸಿತು. ಬಳಿಕ ಮೇ 10ರಂದು, ಭಾರತ ಮತ್ತು ಪಾಕಿಸ್ತಾನ ಕದನ ವಿರಾಮ ಘೋಷಿಸಿದ್ದು, ಇದಾದ ಬಳಿಕ ಈ ಬೆಳವಣಿಗೆ ನಡೆದಿದೆ.ಇದನ್ನೂ ಓದಿ: ಶೋಪಿಯಾನ್‌ನಲ್ಲಿ ಉಗ್ರರ ಹತ್ಯೆ- ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದ ಭದ್ರತಾ ಪಡೆ

  • ಗುಂಡಿನ ದಾಳಿ, ಮಿಲಿಟರಿ ಕಾರ್ಯಾಚರಣೆ ನಿಲ್ಲಿಸಲು ಭಾರತ-ಪಾಕ್‌ ಒಪ್ಪಂದ: ಜೈಶಂಕರ್‌

    ಗುಂಡಿನ ದಾಳಿ, ಮಿಲಿಟರಿ ಕಾರ್ಯಾಚರಣೆ ನಿಲ್ಲಿಸಲು ಭಾರತ-ಪಾಕ್‌ ಒಪ್ಪಂದ: ಜೈಶಂಕರ್‌

    – ಭಯೋತ್ಪಾದನೆ ವಿರುದ್ಧ ಮಾತ್ರ ಭಾರತ ಎಂದೂ ರಾಜಿಯಾಗಲ್ಲ: ಸ್ಪಷ್ಟಪಡಿಸಿದ ವಿದೇಶಾಂಗ ಸಚಿವ

    ನವದೆಹಲಿ: ಭಾರತ ಮತ್ತು ಪಾಕಿಸ್ತಾನ (India Pakistan Conflict) ಇಂದು ಗುಂಡಿನ ದಾಳಿ ಮತ್ತು ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸುವ ಬಗ್ಗೆ ಒಪ್ಪಂದ ಮಾಡಿಕೊಂಡಿವೆ ಎಂದು ವಿದೇಶಾಂಗ ಸಚಿವ ಎಸ್.ಜೈಶಂಕರ್‌ (S.Jaishankar) ಸ್ಪಷ್ಟಪಡಿಸಿದ್ದಾರೆ.

    ಈ ಕುರಿತು ಎಕ್ಸ್‌ನಲ್ಲಿ ಸಚಿವ ಮಾಹಿತಿ ಹಂಚಿಕೊಂಡಿದ್ದಾರೆ. ‘ಭಾರತವು ಭಯೋತ್ಪಾದನೆಯ ಎಲ್ಲಾ ರೂಪಗಳು ಮತ್ತು ಅಭಿವ್ಯಕ್ತಿಗಳ ವಿರುದ್ಧ ದೃಢ ಮತ್ತು ರಾಜಿಯಾಗದ ನಿಲುವನ್ನು ಹೊಂದಿದೆ. ಅದು ಹಾಗೆಯೇ ಮುಂದುವರಿಯುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಭಾರತ- ಪಾಕ್ ನಡುವೆ ಕದನ ವಿರಾಮ

    ಭಾರತ ಮತ್ತು ಪಾಕ್‌ ತ್ವರಿತ ಶಾಂತಿ ಮಾತುಕತೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಒತ್ತಾಯಿಸಿದ್ದರು. ಅಮೆರಿಕ ಮಧ್ಯಸ್ಥಿಕೆಯೊಂದಿಗೆ ಕೊನೆಗೂ ಭಾರತ ಮತ್ತು ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿವೆ.

    ಉಭಯ ದೇಶಗಳ ನಡುವೆ ಕದನ ವಿರಾಮ ಒಪ್ಪಂದ ಆಗಿದೆ ಎಂದು ಡೊನಾಲ್ಡ್‌ ಟ್ರಂಪ್‌ ಎಕ್ಸ್‌ ಪೋಸ್ಟ್‌ ಮೂಲಕ ತಿಳಿಸಿದ್ದರು. ಅದರ ಬೆನ್ನಲ್ಲೇ ಎರಡೂ ದೇಶಗಳು ಅಧಿಕೃತವಾಗಿ ಕದನ ವಿರಾಮದ ಬಗ್ಗೆ ತಿಳಿಸಿವೆ. ಇದನ್ನೂ ಓದಿ: ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿದೆ: ಪಾಕ್ ವಿದೇಶಾಂಗ ಸಚಿವ ಘೋಷಣೆ

  • ತಾಲಿಬಾನ್‌ ಜೊತೆ ಪಾಕಿಸ್ತಾನ ಡಬಲ್‌ ಗೇಮ್‌ ಆಡುತ್ತಿದೆ: ಜೈಶಂಕರ್‌

    ತಾಲಿಬಾನ್‌ ಜೊತೆ ಪಾಕಿಸ್ತಾನ ಡಬಲ್‌ ಗೇಮ್‌ ಆಡುತ್ತಿದೆ: ಜೈಶಂಕರ್‌

    ನವದೆಹಲಿ: ತಾಲಿಬಾನ್ (Taliban) ಜೊತೆ ಪಾಕಿಸ್ತಾನ (Pakistan) ಡಬಲ್ ಗೇಮ್ ಆಡುತ್ತಿದೆ ಎಂದು ವಿದೇಶಾಂಗ ಸಚಿವ ಎಸ್.ಜೈಶಂಕರ್‌ (Jaishankar) ಟೀಕಿಸಿದ್ದಾರೆ.

    ಗುಜರಾತ್‌ನ ಚರೋತರ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದಲ್ಲಿ ಮಾತನಾಡಿದ ಅವರು, ಪಾಕಿಸ್ತಾನ ಡಬಲ್ ಗೇಮ್ ಆಡುತ್ತಿದೆ. ಆದರೆ, ಅಫ್ಘಾನಿಸ್ತಾನದಿಂದ ಅಮೆರಿಕನ್ನರು ಹೊರಟುಹೋದಾಗ, ಡಬಲ್ ಗೇಮ್ ಆಟ ಮುಂದುವರಿಸಲು ಪಾಕಿಸ್ತಾನಗೆ ಸಾಧ್ಯವಾಗುತ್ತಿಲ್ಲ ಎಂದು ಟಾಂಗ್‌ ಕೊಟ್ಟಿದ್ದಾರೆ. ಇದನ್ನೂ ಓದಿ: ಟ್ರಂಪ್‌ ಬೆದರಿಕೆ ನಡುವೆ ಭಾರತದ ಪ್ರಜೆಗಳಿಗೆ 85,000 ವೀಸಾ ನೀಡಿದ ಚೀನಾ

    ಅಫ್ಘಾನಿಸ್ತಾನದಲ್ಲಿ ಸಂಪೂರ್ಣವಾಗಿ ಭಯೋತ್ಪಾದನೆ ಸೃಷ್ಟಿಸಿದ್ದು ಪಾಕಿಸ್ತಾನ. ಡಬಲ್‌ ಗೇಮ್‌ನಿಂದ ಅವರು ಪಡೆಯುತ್ತಿದ್ದ ಪ್ರಯೋಜನ ಈಗ ಇಲ್ಲವಾಗಿದೆ. ಪಾಕಿಸ್ತಾನವೇ ಉತ್ತೇಜಿಸಿದ ಭಯೋತ್ಪಾದನಾ ವ್ಯವಸ್ಥೆ ಈಗ ಆ ದೇಶವನ್ನೇ ಕಚ್ಚಲು ಹೊರಟಿದೆ ಎಂದು ಹೇಳಿದ್ದಾರೆ.

    ನೆರೆಯ ದೇಶದಿಂದ ಇಂತಹ ನಡವಳಿಕೆಯನ್ನು ಇನ್ಮುಂದೆ ಸಹಿಸಲಾಗುವುದಿಲ್ಲ ಎಂದು ಭಾರತೀಯರು ಸಾಮೂಹಿಕವಾಗಿ ಭಾವಿಸಿದ್ದಾರೆ. ಆ ಭಾವನೆ ಭಾರತೀಯ ಸಮಾಜದಲ್ಲಿ ಬಹಳ ಪ್ರಬಲವಾಗಿತ್ತು. ಆದರೆ ಆ ಸಮಯದಲ್ಲಿ ಸರ್ಕಾರವು ಅದನ್ನು ಸಂಪೂರ್ಣವಾಗಿ ಅರ್ಥಮಾಡಿಕೊಂಡಿಲ್ಲದಿರಬಹುದು ಎಂದು ಅಭಿಪ್ರಾಯ ಪಟ್ಟಿದ್ದಾರೆ.

    ಭಾರತ ಬದಲಾಗಿದೆ. ಪಾಕಿಸ್ತಾನವೂ ಬದಲಾಗಿದೆ ಎಂದು ನಾನು ಹೇಳಲು ಬಯಸುತ್ತೇನೆ. ದುರದೃಷ್ಟವಶಾತ್ ಅವರು ಹಲವು ವಿಧಗಳಲ್ಲಿ ತಮ್ಮ ಕೆಟ್ಟ ಅಭ್ಯಾಸಗಳನ್ನು ಮುಂದುವರಿಸುತ್ತಿದ್ದಾರೆ ಎಂದು ಬೇಸರ ಹೊರಹಾಕಿದ್ದಾರೆ. ಇದನ್ನೂ ಓದಿ: National Herald Case| ಫಸ್ಟ್‌ ಟೈಂ ರಾಹುಲ್‌, ಸೋನಿಯಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆ

    2014 ರ ನಂತರ ಭಾರತದಲ್ಲಿ ಸರ್ಕಾರ ಬದಲಾದ ನಂತರ ಭಯೋತ್ಪಾದಕ ಕೃತ್ಯಗಳು ನಡೆದರೆ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂಬ ದೃಢ ಸಂದೇಶವನ್ನು ಪಾಕಿಸ್ತಾನಕ್ಕೆ ನೀಡಲಾಗಿತ್ತು. ಈ ಅವಧಿಯಲ್ಲಿ ನಾವು (ಭಾರತ) ಆರ್ಥಿಕವಾಗಿ ಮತ್ತು ರಾಜಕೀಯವಾಗಿ ಬೆಳೆದಿದ್ದೇವೆ. ಜಗತ್ತಿನಲ್ಲಿ ನಮ್ಮ ಸ್ಥಾನಮಾನ ಸುಧಾರಿಸಿದೆ. ಆದರೆ, ಪಾಕಿಸ್ತಾನವು ಹಳೆಯ ನೀತಿಯನ್ನು ಮುಂದುವರಿಸಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

  • ತಹವ್ವೂರ್‌ ರಾಣಾ ಹಸ್ತಾಂತರವು ಮುಂಬೈ ದಾಳಿ ಸಂತ್ರಸ್ತರಿಗೆ ನ್ಯಾಯ ಒದಗಿಸುವಲ್ಲಿ ದೊಡ್ಡ ಹೆಜ್ಜೆ : ಜೈಶಂಕರ್‌

    ತಹವ್ವೂರ್‌ ರಾಣಾ ಹಸ್ತಾಂತರವು ಮುಂಬೈ ದಾಳಿ ಸಂತ್ರಸ್ತರಿಗೆ ನ್ಯಾಯ ಒದಗಿಸುವಲ್ಲಿ ದೊಡ್ಡ ಹೆಜ್ಜೆ : ಜೈಶಂಕರ್‌

    ನವದೆಹಲಿ: ಉಗ್ರ ತಹವ್ವೂರ್‌ ರಾಣಾನ ಹಸ್ತಾಂತರವು 26/11 ಸಂತ್ರಸ್ತರಿಗೆ ಒದಗಿಸಿದ ನ್ಯಾಯದಲ್ಲಿ ದೊಡ್ಡ ಹೆಜ್ಜೆಯಾಗಿದೆ ಎಂದು ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಅಭಿಪ್ರಾಯಪಟ್ಟಿದ್ದಾರೆ.

    ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಜೈಶಂಕರ್‌, ನಮ್ಮ ಉಭಯ ದೇಶಗಳ ನಡುವಿನ ಭಯೋತ್ಪಾದನಾ ನಿಗ್ರಹದ ಸಹಕಾರವನ್ನು ಪ್ರಶಂಸಿಸಿ. ಇದು ನಿಜಕ್ಕೂ 26/11 ದಾಳಿಯ ಬಲಿಪಶುಗಳಿಗೆ ನ್ಯಾಯವನ್ನು ಖಾತ್ರಿಪಡಿಸುವ ಒಂದು ದೊಡ್ಡ ಹೆಜ್ಜೆಯಾಗಿದೆ ಎಂದು ತಿಳಿಸಿದ್ದಾರೆ.

    ಜೈಶಂಕರ್‌ ಪೋಸ್ಟ್‌ಗೆ ಕಾಮೆಂಟ್‌ ಮಾಡಿರುವ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ, 2008 ರ ಭೀಕರ ಮುಂಬೈ ಭಯೋತ್ಪಾದಕ ದಾಳಿಯನ್ನು ಯೋಜಿಸುವಲ್ಲಿ ಪಾತ್ರ ವಹಿಸಿದ ಆರೋಪಗಳನ್ನು ಎದುರಿಸುತ್ತಿರುವ ತಹವ್ವೂರ್ ಹುಸೇನ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಿದ್ದೇವೆ. ಈ ದಾಳಿಗಳಲ್ಲಿ ಪ್ರಾಣ ಕಳೆದುಕೊಂಡ 6 ಅಮೆರಿಕನ್ನರು ಸೇರಿದಂತೆ 166 ಜನರಿಗೆ ನ್ಯಾಯಕ್ಕಾಗಿ ನಾವು ಭಾರತದೊಂದಿಗೆ ಬಹಳ ಹಿಂದಿನಿಂದಲೂ ಪ್ರಯತ್ನಿಸುತ್ತಿದ್ದೇವೆ. ಆ ದಿನ ಬಂದಿದ್ದಕ್ಕೆ ನನಗೆ ಸಂತೋಷವಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.

    64 ವರ್ಷದ ಪಾಕಿಸ್ತಾನ ಮೂಲದ ಕೆನಡಾದ ಪ್ರಜೆ ರಾಣಾನನ್ನು ಅಮೆರಿಕ ಗುರುವಾರ ಭಾರತಕ್ಕೆ ಹಸ್ತಾಂತರಿಸಿತು. ವಿಮಾನ ನಿಲ್ದಾಣದಲ್ಲಿಯೇ ಉಗ್ರನನ್ನು ಬಂಧಿಸಿದ ಎನ್‌ಐಎ ವಿಚಾರಣೆಗೆ ಒಳಪಡಿಸಿದೆ.