Tag: s.jaishankar

  • 9 ವರ್ಷಗಳ ನಂತ್ರ ಇದೇ ಮೊದಲು – ಪಾಕ್‌ಗೆ ಪ್ರಯಾಣಿಸಲಿದ್ದಾರೆ ಭಾರತದ ವಿದೇಶಾಂಗ ಸಚಿವ ಜೈಶಂಕರ್‌

    9 ವರ್ಷಗಳ ನಂತ್ರ ಇದೇ ಮೊದಲು – ಪಾಕ್‌ಗೆ ಪ್ರಯಾಣಿಸಲಿದ್ದಾರೆ ಭಾರತದ ವಿದೇಶಾಂಗ ಸಚಿವ ಜೈಶಂಕರ್‌

    ನವದೆಹಲಿ: ಇದೇ ಅಕ್ಟೋಬರ್‌ ಮಧ್ಯದಲ್ಲಿ ನಡೆಯಲಿರುವ ಶಾಂಘೈ ಸಹಕಾರ ಸಂಘಟನೆಯ (SCO) ಸಮಾವೇಶದಲ್ಲಿ ಪಾಲ್ಗೊಳ್ಳಲು ವಿದೇಶಾಂಗ ಸಚಿವ ಎಸ್.ಜೈಶಂಕರ್ (S Jaishankar) ಪಾಕಿಸ್ತಾನಕ್ಕೆ ತೆರಳಲಿದ್ದಾರೆ ಎಂದು ಕೇಂದ್ರ ಸರ್ಕಾರ ಶುಕ್ರವಾರ ಹೇಳಿದೆ. ಕಳೆದ 9 ವರ್ಷಗಳಲ್ಲಿ ಅಂದ್ರೆ 2015ರಿಂದ ಇದೇ ಮೊದಲಬಾರಿಗೆ ಪಾಕಿಸ್ತಾನಕ್ಕೆ ಭಾರತದ ವಿದೇಶಾಂಗ ಸಚಿವರೊಬ್ಬರು ಪ್ರಯಾಣಿಸುತ್ತಿದ್ದಾರೆ ಎನ್ನಲಾಗಿದೆ.

    ಇದೇ ಅಕ್ಟೋಬರ್‌ 15 ಮತ್ತು 16ರಂದು ಪಾಕಿಸ್ತಾನವು (Pakistan) ಇಸ್ಲಾಮಾಬಾದ್‌ನಲ್ಲಿ ಶಾಂಘೈ ಸಹಕಾರ ಸಂಸ್ಥೆ ಶೃಂಗಸಭೆ ಆಯೋಜಿಸುತ್ತಿದೆ. ಇದರಲ್ಲಿ ಪಾಲ್ಗೊಳ್ಳಲು ಭಾರತದ ವಿದೇಶಾಂಗ ಸಚಿವ ಎಸ್‌. ಜೈ ಶಂಕರ್ ಪಾಕ್‌ಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ‘ನನ್ನ ಹೃದಯದ ಒಂದು ಭಾಗ’ ಎನ್ನುತ್ತಾ ಸಿಹಿಸುದ್ದಿ ಕೊಟ್ಟ ಶ್ರೀನಿಧಿ ಶೆಟ್ಟಿ

    ಭಾರತ, ಚೀನಾ, ರಷ್ಯಾ, ಪಾಕಿಸ್ತಾನ, ಕಝಾಕಿಸ್ತಾನ್, ಕಿರ್ಗಿಸ್ತಾನ್, ತಜಕಿಸ್ತಾನ್ ಮತ್ತು ಉಜ್ಬೇಕಿಸ್ತಾನ್ ಒಳಗೊಂಡಿರುವ SCO, ಪ್ರಭಾವಿ ಆರ್ಥಿಕ ಮತ್ತು ಭದ್ರತಾ ಸಂಸ್ಥೆಯಾಗಿದೆ. ಈ ಪ್ರಮುಖ ಪ್ರಾದೇಶಿಕ ಗುಂಪಿನ ಭಾಗವಾಗಿ, ಪಾಕಿಸ್ತಾನ ಮತ್ತು ಭಾರತ ಎರಡೂ ಶೃಂಗಸಭೆ ಸಭೆಗಳನ್ನು ನಡೆಸಬಹುದು. ಭಾರತ ಕಳೆದ ವರ್ಷ SCO ಶೃಂಗಸಭೆಯನ್ನು ಆಯೋಜಿಸಿತ್ತು, ಈ ಶೃಂಗಸಭೆಯನ್ನು ವರ್ಚುವಲ್ ಮೋಡ್‌ನಲ್ಲಿ ಆಯೋಜಿಸಲಾಗಿತ್ತು. ಇದರಲ್ಲಿ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಸಹ ಭಾಗವಹಿಸಿದ್ದರು.

    ಪಾಕಿಸ್ತಾನವು ಶಾಂಘೈ ಸಹಕಾರ ಸಂಸ್ಥೆ (SCO) ಕೌನ್ಸಿಲ್ ಆಫ್ ಹೆಡ್ಸ್ ಆಫ್ ಗವರ್ನಮೆಂಟ್ (CHG) ನ ರೊಟೇಟೆಡ್ ಅಧ್ಯಕ್ಷರನ್ನು ಹೊಂದಿದೆ. ಹೀಗಾಗಿ, ಅಕ್ಟೋಬರ್‌ನಲ್ಲಿ ಎರಡು ದಿನಗಳ SCO ಸರ್ಕಾರದ ಮುಖ್ಯಸ್ಥರ ಸಭೆಯನ್ನು ಆಯೋಜಿಸಲಿದೆ. ಇಸ್ಲಾಮಾಬಾದ್ ಶೃಂಗಸಭೆಯು ಸಚಿವರ ಸಭೆ ಮತ್ತು SCO ಸದಸ್ಯ ರಾಷ್ಟ್ರಗಳ ನಡುವೆ ಹಣಕಾಸು, ಆರ್ಥಿಕ, ಸಾಮಾಜಿಕ-ಸಾಂಸ್ಕೃತಿಕ ಮತ್ತು ಮಾನವೀಯ ಸಹಕಾರದ ಮೇಲೆ ಕೇಂದ್ರೀಕರಿಸಿ ಚರ್ಚೆಗಳು ನಡೆಯಲಿದೆ. ಇದನ್ನೂ ಓದಿ: ರೇಣುಕಾ ಮುಖ ನಾಯಿ ಕಚ್ಚಿ ತಿಂದಿದೆ, ದರ್ಶನ್ ಹೊಡೆದಿಲ್ಲ: ಕೋರ್ಟ್‌ನಲ್ಲಿ ವಕೀಲ ಸಿ.ವಿ ನಾಗೇಶ್ ವಾದ ಹೇಗಿತ್ತು?

    9 ವರ್ಷಗಳಲ್ಲೇ ಇದೇ ಮೊದಲು:
    ಇದಕ್ಕೂ ಮೊದಲು ಪ್ರಧಾನಿ ನರೇಂದ್ರ ಮೋದಿ ಅವರನ್ನು ಪಾಕಿಸ್ತಾನ ಎಸ್‌ಸಿಒ ಶೃಂಗಸಭೆಗೆ ಆಹ್ವಾನಿಸಿತ್ತು. ಆದರೆ ಡಿಸೆಂಬರ್ 2015 ರಿಂದ ಯಾವುದೇ ಭಾರತೀಯ ವಿದೇಶಾಂಗ ಸಚಿವರು ಪಾಕಿಸ್ತಾನಕ್ಕೆ ಭೇಟಿ ನೀಡಿಲ್ಲ. ದಿವಂಗತ ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ 2015 ರಲ್ಲಿ ಅಫ್ಘಾನಿಸ್ತಾನದ ಭದ್ರತಾ ಸಮ್ಮೇಳನದಲ್ಲಿ ಭಾಗವಹಿಸಲು ಇಸ್ಲಾಮಾಬಾದ್‌ಗೆ ಭೇಟಿ ನೀಡಿದ್ದರು. ಇದನ್ನೂ ಓದಿ: ಭಯೋತ್ಪಾದನೆ ಆರೋಪದಿಂದ ಕುಟುಂಬ ರಕ್ಷಿಸಲು 2.5 ಕೋಟಿ ಲಂಚಕ್ಕೆ ಬೇಡಿಕೆ – NIA ಅಧಿಕಾರಿಯನ್ನೇ ಬಂಧಿಸಿದ ಸಿಬಿಐ

  • ಜೀವನವು ಖಟಾ-ಖಟ್ ಅಲ್ಲ, ಕಠಿಣ ಪರಿಶ್ರಮ ಬೇಕು: ರಾಹುಲ್‌ಗೆ ಜೈಶಂಕರ್‌ ಟಾಂಗ್‌

    ಜೀವನವು ಖಟಾ-ಖಟ್ ಅಲ್ಲ, ಕಠಿಣ ಪರಿಶ್ರಮ ಬೇಕು: ರಾಹುಲ್‌ಗೆ ಜೈಶಂಕರ್‌ ಟಾಂಗ್‌

    ಜಿನೀವಾ: ಜೀವನವು ಖಟಾ-ಖಟ್ (ಸುಲಭವಾದ ಕೆಲಸ) ಅಲ್ಲ. ಅದಕ್ಕೆ ಕಠಿಣ ಪರಿಶ್ರಮ ಮತ್ತು ಶ್ರದ್ಧೆಯ ಅಗತ್ಯವಿದೆ ಎಂದು ಹೇಳುವ ಮೂಲಕ ವಿದೇಶಾಂಗ ಸಚಿವ ಎಸ್‌ ಜೈಶಂಕರ್‌ (S Jaishankar) ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿಗೆ (Rahul Gandhi) ಟಾಂಗ್‌ ನೀಡಿದ್ದಾರೆ.

    ಸ್ವಿಟ್ಜರ್ಲೆಂಡ್‌ನ ಜಿನೀವಾದಲ್ಲಿ ನರೇಂದ್ರ ಮೋದಿ (Narendra Modi) ನೇತೃತ್ವದ ಸರ್ಕಾರ ಕೈಗೊಂಡಿರುವ ಮೂಲಸೌಕರ್ಯ ಅಭಿವೃದ್ಧಿ ವಿಚಾರದ ಬಗ್ಗೆ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.

    ನೀವು ಮೂಲಸೌಕರ್ಯ ಮತ್ತು ಮಾನವ ಸಂಪನ್ಮೂಲಗಳನ್ನು ನಿರ್ಮಿಸುವವರೆಗೆ ಆ ನೀತಿಗಳನ್ನು ಜಾರಿಗೆ ತರುವವರೆಗೆ ಅದು ಕಠಿಣ ಕೆಲಸ ಎಂದು ಹೇಳಿದರು.

    ಒಂದು ದೇಶವು ತನ್ನ ಉತ್ಪಾದನಾ ಸಾಮರ್ಥ್ಯವನ್ನು ಅಭಿವೃದ್ಧಿಪಡಿಸದೇ ದೊಡ್ಡ ಶಕ್ತಿಯಾಗಲು ಸಾಧ್ಯವಿಲ್ಲ. ಹಿಂದಿನ ಸರ್ಕಾರ ಉತ್ಪಾದನಾ ವಲಯವನ್ನು ನಿರ್ಲಕ್ಷಿಸಿದ ಕಾರಣ ನಾವು ಚೀನಾ (China) ಉತ್ಪನ್ನಗಳನ್ನು ಆಮದು ಮಾಡಿಕೊಳ್ಳಬೇಕಾಗಿದೆ ಎಂದು ಹೇಳುವ ಮೂಲಕ ರಾಹುಲ್‌ ಗಾಂಧಿಗೆ ತಿರುಗೇಟು ನೀಡಿದರು. ಇದನ್ನೂ ಓದಿ: ನಾನಿನ್ನೂ ವೆಬ್‌ಸೀರಿಸ್‌ ನೋಡಿಲ್ಲ, ಮಾಡುವವರು ಸರ್ಕಾರವನ್ನು ಒಳ್ಳೆಯ ರೀತಿಯಲ್ಲಿ ತೋರಿಸಲ್ಲ: ಎಸ್.ಜೈಶಂಕರ್

    ಲೋಕಸಭಾ ಚುನಾವಣೆಯ ಪ್ರಚಾರ ಭಾಷಣದಲ್ಲಿ ರಾಹುಲ್‌ ಗಾಂಧಿ ಕಾಂಗ್ರೆಸ್ (Congress) ಅಧಿಕಾರಕ್ಕೆ ಬಂದರೆ ಮಹಿಳೆಯರ ಖಾತೆಗಳಿಗೆ ಹಣ ವರ್ಗಾವಣೆ ಮಾಡುವ ವಿಚಾರ ಪ್ರಸ್ತಾಪಿಸುವ ವೇಳೆ ಪದೇ ಪದೇ ಖಟಾ-ಖಟ್ (khata-khat) ಪದವನ್ನು ಉಲ್ಲೇಖಿಸುತ್ತಿದ್ದರು.

    ಟೆಕ್ಸಾಸ್‌ ವಿಶ್ವವಿದ್ಯಾಲಯದ ನಡೆದ ಸಂವಾದಲ್ಲಿ ಮಾತನಾಡಿದ ರಾಹುಲ್‌, ಭಾರತದಂತೆ ಪಶ್ಚಿಮದಲ್ಲಿ ಉದ್ಯೋಗದ ಸಮಸ್ಯೆ ಇದೆ. ಆದರೆ ಚೀನಾ ಮತ್ತು ವಿಯೆಟ್ನಾಂನಂತಹ ಅನೇಕ ದೇಶಗಳು ಅಂತಹ ಸವಾಲನ್ನು ಎದುರಿಸುವುದಿಲ್ಲ ಏಕೆಂದರೆ ಅವು ಉತ್ಪಾದನಾ ವಲಯದ ದೇಶಗಳು ಎಂದು ಹೇಳಿಕೆ ನೀಡಿದ್ದರು.

     

  • ನಾನಿನ್ನೂ ವೆಬ್‌ಸೀರಿಸ್‌ ನೋಡಿಲ್ಲ, ಮಾಡುವವರು ಸರ್ಕಾರವನ್ನು ಒಳ್ಳೆಯ ರೀತಿಯಲ್ಲಿ ತೋರಿಸಲ್ಲ: ಎಸ್.ಜೈಶಂಕರ್

    ನಾನಿನ್ನೂ ವೆಬ್‌ಸೀರಿಸ್‌ ನೋಡಿಲ್ಲ, ಮಾಡುವವರು ಸರ್ಕಾರವನ್ನು ಒಳ್ಳೆಯ ರೀತಿಯಲ್ಲಿ ತೋರಿಸಲ್ಲ: ಎಸ್.ಜೈಶಂಕರ್

    -1984ರಲ್ಲಿ ಹೈಜಾಕ್ ಆದ ವಿಮಾನದಲ್ಲಿ ನನ್ನ ಅಪ್ಪನೂ ಇದ್ದರು

    ನವದೆಹಲಿ: ಐಸಿ 814 ವಿಮಾನ ಹೈಜಾಕ್‌ನಲ್ಲಿ ನನ್ನಪ್ಪನೂ ಇದ್ದರು ಎಂದು ವಿದೇಶಾಂಗ ಸಚಿವ ಎಸ್.ಜೈಶಂಕರ್ (S Jaishankar) ಬಹಿರಂಗಪಡಿಸಿದರು.

    ಸ್ವಿಟ್ಜರ್‌ಲ್ಯಾಂಡ್‌ನ (Switzerland) ಜಿನೇವಾದಲ್ಲಿ (Geneva) ಇಂಡಿಯನ್ ಡಯಸ್ಪೋರಾದಲ್ಲಿ ಮಾತನಾಡಿದ ಅವರು, ಐಸಿ814 ದಿ ಕಂದಹಾರ್ ಹೈಜಾಕ್ (IC 814 The Kandahar Hijack) ನೆಟ್‌ಫ್ಲಿಕ್ಸ್ ವೆಬ್‌ಸೀರಿಸ್ (Netflix Webseries) ವಿವಾದದ ಬಗ್ಗೆ ಮಾತನಾಡಿದರು.ಇದನ್ನೂ ಓದಿ: ಕೇಜ್ರಿವಾಲ್‌ಗೆ ಜಾಮೀನು – 6 ತಿಂಗಳ ಬಳಿಕ ಜೈಲಿನಿಂದ ಹೊರಬಂದ ದೆಹಲಿ ಸಿಎಂ

    ಮುಸ್ಲಿಂ ಹೆಸರಿನ ಬದಲಾಗಿ, ಹಿಂದೂಗಳ ಹೆಸರನ್ನು ಬಳಸಿರುವ ವಿವಾದದ ಕುರಿತಾಗಿ ಮಾತನಾಡಿ, ಐಸಿ814 ಹೈಜಾಕ್ ಮಾಡಿದ ವಿಮಾನದಲ್ಲಿ ನನ್ನಪ್ಪ ಕೂಡ ಇದ್ದರು ಎಂದು ಬಹಿರಂಗ ಪಡಿಸಿದ್ದಾರೆ. ನನ್ನ ತಂದೆ ಕೃಷ್ಣಸ್ವಾಮಿ ಸುಬ್ರಹ್ಮಣ್ಯಂ  ಅವರು ಐಸಿ814 ವಿಮಾನದಲ್ಲಿದ್ದರು.

    ಇನ್ನೂ ನಾನು ಐಸಿ814 ದಿ ಕಂದಹಾರ್ ಹೈಜಾಕ್ ನೆಟ್‌ಫ್ಲಿಕ್ಸ್ ವೆಬ್‌ಸೀರಿಸ್ ಅನ್ನು ನೋಡಿಲ್ಲ. ಆದ್ದರಿಂದ ನಾನು ಆ ಕುರಿತು ಯಾವುದೇ ಅಭಿಪ್ರಾಯವನ್ನು ಹಂಚಿಕೊಳ್ಳುವುದಿಲ್ಲ ಎಂದರು. 1984ರಲ್ಲಿ ಯುವ ಅಧಿಕಾರಿಯಾಗಿ ಅಪಹರಣವನ್ನು ವ್ಯವಹರಿಸುವ ತಂಡದ ಭಾಗವಾಗಿದ್ದೆ. ಆಗ ಮನೆಗೆ ಕರೆ ಮಾಡಿ ತಡವಾಗಿ ಬರುತ್ತೇನೆಂದು ತಿಳಿಸಿದಾಗ ನನ್ನ ತಂದೆ ಅದೇ ವಿಮಾದಲ್ಲಿದ್ದರೆಂದು ತಿಳಿದು ಬಂದಿತು.ಇದನ್ನೂ ಓದಿ: ಅಪ್ರಾಪ್ತ ಬಾಲಕಿ ಮೇಲೆ ರೈಲ್ವೇ ಸಿಬ್ಬಂದಿಯಿಂದ ಲೈಂಗಿಕ ದೌರ್ಜನ್ಯಕ್ಕೆ ಯತ್ನ

    ಒಂದು ಕಡೆ ಅಪಹರಣವನ್ನು ವ್ಯವಹರಿಸುವ ಭಾಗವಾಗಿ ಮತ್ತು ಇನ್ನೊಂದು ಕಡೆ ನನ್ನ ತಂದೆ ಆ ವಿಮಾದಲ್ಲಿದ್ದರೆಂದು ಸರ್ಕಾರಕ್ಕೆ ಒತ್ತಾಯಿಸುವುದಾ ಎಂದು ಹೇಳಿದರು.

  • ದುಬೈನಲ್ಲಿ ಕಾರು-ಲಾರಿ ಡಿಕ್ಕಿ: ಬೆಳಗಾವಿ ಮೂಲದ ಒಂದೇ ಕುಟುಂಬದ ನಾಲ್ವರ ಸಜೀವ ದಹನ

    ದುಬೈನಲ್ಲಿ ಕಾರು-ಲಾರಿ ಡಿಕ್ಕಿ: ಬೆಳಗಾವಿ ಮೂಲದ ಒಂದೇ ಕುಟುಂಬದ ನಾಲ್ವರ ಸಜೀವ ದಹನ

    ಬೆಳಗಾವಿ: ಒಂದು ಕುಟುಂಬದ ನಾಲ್ವರು ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ದುಬೈನ (Dubai) ಓಮಾನ್‌ನಲ್ಲಿ (Oman) ನಡೆದಿದೆ.

    ಬೆಳಗಾವಿ (Belagavi) ಜಿಲ್ಲೆಯ ಗೋಕಾಕ್ (Gokak) ತಾಲೂಕಿನ ನಿವಾಸಿಗಳಾದ ಪವನಕುಮಾರ್ ತಹಶಿಲ್ದಾರ, ಪೂಜಾ, ವಿಜಯಾ, ಆದಿಶೇಷ ಮೃತಪಟ್ಟವರು.ಇದನ್ನೂ ಓದಿ: ಶೋಭಿತಾ ಜೊತೆ ಮದುವೆ ಹೇಗಿರಬೇಕು?- ರಿವೀಲ್ ಮಾಡಿದ ನಾಗಚೈತನ್ಯ


    ದುಬೈಗೆ ತಾಯಿ, ಇಬ್ಬರು ಮಕ್ಕಳು ಹಾಗೂ ಅಳಿಯನೊಂದಿಗೆ ಪ್ರವಾಸಕ್ಕೆ ತೆರಳಿದ್ದರು. ಆ ಸಂದರ್ಭದಲ್ಲಿ ಹೈಮಾ ಪ್ರದೇಶದಲ್ಲಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡಿದೆ. ಸ್ಥಳದಲ್ಲೇ ನಾಲ್ವರು ಸಜೀವ ದಹನಗೊಂಡಿದ್ದಾರೆ.

    ಮೃತದೇಹಗಳನ್ನು ಭಾರತಕ್ಕೆ ತರಲು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಮಾತುಕತೆ ನಡೆಸುತ್ತಿದ್ದು, ವಿದೇಶಾಂಗ ಸಚಿವ ಎಸ್.ಜೈಶಂಕರ್ (S. Jaishankar) ಹಾಗೂ ಪ್ರಹ್ಲಾದ್ ಜೋಶಿಗೆ (Pralhad Joshi) ಮನವಿ ಸಲ್ಲಿಸಿದ್ದಾರೆ.ಇದನ್ನೂ ಓದಿ: ಪೊಲೀಸರ ಮೇಲೆ ಮಚ್ಚಿನಿಂದ ಹಲ್ಲೆ- ರೌಡಿಶೀಟರ್ ಕಾಲಿಗೆ ಪಿಎಸ್‌ಐ ಗುಂಡೇಟು

  • ಉಕ್ರೇನ್‌ಗೆ ಮೋದಿ ಭೇಟಿ – ಝೆಲೆನ್ಸ್ಕಿ ಜೊತೆ ಮಾತುಕತೆ; ಯುದ್ಧದಲ್ಲಿ ಮಡಿದ ಮಕ್ಕಳ ಸ್ಮಾರಕ ವೀಕ್ಷಿಸಿದ ಪ್ರಧಾನಿ!

    ಉಕ್ರೇನ್‌ಗೆ ಮೋದಿ ಭೇಟಿ – ಝೆಲೆನ್ಸ್ಕಿ ಜೊತೆ ಮಾತುಕತೆ; ಯುದ್ಧದಲ್ಲಿ ಮಡಿದ ಮಕ್ಕಳ ಸ್ಮಾರಕ ವೀಕ್ಷಿಸಿದ ಪ್ರಧಾನಿ!

    ಕೈವ್‌: ಕಳೆದ ಎರಡೂವರೆ ವರ್ಷಗಳಿಂದ ಯುದ್ಧದ ಕುಲುಮೆಯಲ್ಲಿ ಬೇಯುತ್ತಿರುವ ಉಕ್ರೇನ್‌ಗೆ ಇದೀಗ ಪ್ರಧಾನಿ ಮೋದಿ ಭೇಟಿ ನೀಡಿದ್ದಾರೆ. ಉಕ್ರೇನ್‌ನ ಕೈವ್‌ಗೆ ಬಂದಿಳಿದಿರುವ ನಮೋ (Narendra Modi) ಶುಕ್ರವಾರ (ಆ.23) ಅಧ್ಯಕ್ಷ ವ್ಲಾಡಮಿರ್‌ ಝೆಲೆನ್ಸ್ಕಿ (Volodymyr Zelensky) ಅವರನ್ನು ಭೇಟಿಯಾಗಿದ್ದಾರೆ. ಇದಕ್ಕೂ ಮುನ್ನ ಪ್ರಧಾನಿ ಮೋದಿ ಕೈವ್‌ನ ರೈಲ್ವೆ ನಿಲ್ದಾಕ್ಕೆ ಬಂದಿಳಿಯುತ್ತಿದ್ದಂತೆ ಅಲ್ಲಿನ ಭಾರತೀಯರು ಆತ್ಮೀಯವಾಗಿ ಸ್ವಾಗತ ಕೋರಿದ್ದಾರೆ.

    ನಂತರ ಕೈವ್‌ನಲ್ಲಿ (Kyiv) ಭೇಟಿಯಾದ ಉಭಯ ನಾಯಕರು ಪರಸ್ಪರ ಕೈಕುಲುಕಿ ಅಪ್ಪಿಕೊಂಡಿದ್ದಾರೆ. ಪ್ರಧಾನಿ ಉಕ್ರೇನ್‌ಗೆ ಭೇಟಿ (PM Modi In UKraine) ನೀಡಿದ ಫೋಟೋ ವೀಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ಸದ್ದು ಮಾಡುತ್ತಿವೆ. ಇದನ್ನೂ ಓದಿ: ನೇಪಾಳದಲ್ಲಿ ನದಿಗೆ ಉರುಳಿತು 40 ಭಾರತೀಯರಿದ್ದ ಬಸ್ಸು – 14 ಮಂದಿ ಸಾವು

    ಶುಕ್ರವಾರ ಕೈವ್‌ನಲ್ಲಿ ಭೇಟಿಯಾದ ಉಭಯ ನಾಯಕರು ದ್ವಿಪಕ್ಷೀಯ ಸಭೆ ನಡೆಸಿದ್ದಾರೆ. 30 ವರ್ಷಗಳ ಹಿಂದೆ ಭಾರತ ಮತ್ತು ಉಕ್ರೇನ್ ನಡುವೆ ರಾಜತಾಂತ್ರಿಕ ಸಂಬಂಧಗಳನ್ನು ಸ್ಥಾಪಿಸಿದ ನಂತರ ದೇಶಕ್ಕೆ ಕಾಲಿಟ್ಟ ಮೊದಲ ಭಾರತೀಯ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಪ್ರಧಾನಿ ಮೋದಿ ಅವರ ಉಕ್ರೇನ್ ಭೇಟಿ ಐತಿಹಾಸಿಕವಾಗಿದೆ. ಉಕ್ರೇನ್ ಮತ್ತು ರಷ್ಯಾ ನಡುವಿನ ನಡೆಯುತ್ತಿರುವ ಸಂಘರ್ಷದ ನಡುವೆ ಪ್ರಧಾನಿ ಮೋದಿ ಮತ್ತು ಝೆಲೆನ್ಸ್ಕಿ ಭೇಟಿ ಬಹಳ ಮಹತ್ವವನ್ನು ಪಡೆದುಕೊಂಡಿದೆ.

    ನಂತರ ಮುನ್ನ ರಷ್ಯಾ ದಾಳಿಯಲ್ಲಿ ಹುತಾತ್ಮರಾದವರಿಗೆ ಮೋದಿ ನಮನ ಸಲ್ಲಿಸಿದ್ರು. ಉಕ್ರೇನ್‌ನ ಇತಿಹಾಸದ ಮ್ಯೂಸಿಯಂ ವೀಕ್ಷಿಸಿದ್ರು. ಹುತಾತ್ಮರ ಸ್ಮಾರಕದ ಬಳಿ ಮೋದಿ ಅವರನ್ನು ಉಕ್ರೇನ್ ಅಧ್ಯಕ್ಷ ಝೆಲೆನ್‌ಸ್ಕಿ ತಬ್ಬಿಕೊಂಡ್ರು. ನಂತರ ರಷ್ಯಾ-ಉಕ್ರೇನ್ ಯುದ್ಧವನ್ನು ಕೊನೆಗಾಣಿಸುವ ಸಂಬಂಧ ಉಭಯ ನಾಯಕರು ಮಹತ್ವದ ಚರ್ಚೆ ನಡೆಸಿದ್ರು. ರಷ್ಯಾ ಹಾಗೂ ಉಕ್ರೇನ್ ಸಂಘರ್ಷ ಮಕ್ಕಳಿಗೆ ವಿನಾಶಕಾರಿ ಎಂದ ಮೋದಿ, ಶಾಂತಿ ಮರುಸ್ಥಾಪನೆ ಅಗತ್ಯವನ್ನು ಒತ್ತಿ ಹೇಳಿದ್ರು. ಇದನ್ನೂ ಓದಿ: ಮಾಜಿ ಪ್ರಧಾನಿ ಶೇಖ್‌ ಹಸೀನಾ, ಬಾಂಗ್ಲಾದ ಆಲ್‌ರೌಂಡರ್‌ ಶಕೀಬ್‌ ವಿರುದ್ಧ ಕೊಲೆ ಪ್ರಕರಣ ದಾಖಲು

    ಇದೇ ವೇಳೆ, ಉಭಯ ದೇಶಗಳ ಮಧ್ಯೆ 4 ಒಪ್ಪಂದಗಳಾದವು. ಇದಕ್ಕೂ ಮುನ್ನ, ಮಹಾತ್ಮ ಗಾಂಧಿ ವಿಗ್ರಹಕ್ಕೆ ಪುಷ್ಪ ನಮನ ಸಲ್ಲಿಸಿದ ಮೋದಿ, ಬಾಪೂಜಿ ಆಶಯಗಳು ವಿಶ್ವವ್ಯಾಪಿಯಾಗಿವೆ. ಕೋಟ್ಯಂತರ ಮಂದಿಗೆ ಸ್ಪೂರ್ತಿಯಾಗಿದೆ ಎಂದು ಬಣ್ಣಿಸಿದ್ರು. ಗಾಂಧಿ ತೋರಿಸಿದ ಹಾದಿಯಲ್ಲಿ ನಡೆಯಬೇಕೆಂದು ಮೋದಿ ಕರೆ ಕೊಟ್ಟರು. ಇದೇ ವೇಳೆ ಅವರು 2022ರಲ್ಲಿ ಉಕ್ರೇನ್‌-ರಷ್ಯಾ ಯುದ್ಧದ ಸಂದರ್ಭದಲ್ಲಿ ಅಲ್ಲಿ ಸಿಲುಕಿದ್ದ ಭಾರತೀಯ ವಿದ್ಯಾರ್ಥಿಗಳ ರಕ್ಷಣೆಗೆ ಸಹಾಯ ಮಾಡಿದ ಪೋಲೆಂಡ್‌ಗೆ ಕೃತಜ್ಞತೆ ಸಲ್ಲಿಸಿದರು.

    ಉಕ್ರೇನ್ ಸಂಘರ್ಷದ ಸಂದರ್ಭದಲ್ಲಿ ಭಾರತೀಯ ವಿದ್ಯಾರ್ಥಿಗಳನ್ನ ರಕ್ಷಿಸಲು ನೀವು ನೀಡಿದ ಸಹಾಯವನ್ನು ಭಾರತದ ಜನರು ಎಂದಿಗೂ ಮರೆಯಲು ಸಾಧ್ಯವಿಲ್ಲ. ಇದಕ್ಕಾಗಿ ನಾನು ಸರ್ಕಾರ ಮತ್ತು ಪೋಲೆಂಡ್ ಜನರಿಗೆ ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಹೇಳಿ ಪೋಲೆಂಡ್‌ ಪ್ರಧಾನಿ ಡೊನಾಲ್ಡ್ ಟಸ್ಕ್ ಅವರಿಗೆ ಆತ್ಮೀಯ ಧನ್ಯವಾದ ಅರ್ಪಿಸಿದರು. ಇದನ್ನೂ ಓದಿ: ನಮ್ಮ ಸಂಸ್ಕೃತಿಯಲ್ಲಿ ಮಾನವೀಯತೆಯೇ ಮೊದಲು, ಯುದ್ಧದ ಸಮಯವಲ್ಲ: ಪೋಲೆಂಡ್‍ನಲ್ಲಿ ಮೋದಿ ಶಾಂತಿ ಮಂತ್ರ

  • ಬಾಂಗ್ಲಾ ಕ್ರಾಂತಿ ಹಿಂದೆ ಪಾಕ್‌ ಕೈವಾಡ ಇದ್ಯಾ – ಸರ್ವಪಕ್ಷ ಸಭೆಯಲ್ಲಿ ರಾಹುಲ್‌ ಪ್ರಶ್ನೆಗೆ ಉತ್ತರ ಕೊಟ್ಟ ಜೈಶಂಕರ್‌

    ಬಾಂಗ್ಲಾ ಕ್ರಾಂತಿ ಹಿಂದೆ ಪಾಕ್‌ ಕೈವಾಡ ಇದ್ಯಾ – ಸರ್ವಪಕ್ಷ ಸಭೆಯಲ್ಲಿ ರಾಹುಲ್‌ ಪ್ರಶ್ನೆಗೆ ಉತ್ತರ ಕೊಟ್ಟ ಜೈಶಂಕರ್‌

    – ಎಸ್‌ ಜೈಶಂಕರ್‌ ನೇತೃತ್ವದಲ್ಲಿ ನಡೆದ ಸಭೆ

    ನವದೆಹಲಿ: ಬಾಂಗ್ಲಾದೇಶದಲ್ಲಿ (Bangladesh Unrest) ನಡೆದ ಕ್ಷಿಪ್ರ ಕ್ರಾಂತಿ ಸಂಬಂಧ ಇಂದು ವಿದೇಶಾಂಗ ಸಚಿವ ಎಸ್‌ ಜೈಶಂಕರ್‌ (S Jaishankar) ಅವರು ಸರ್ವಪಕ್ಷ ಸಭೆ ನಡೆಸಿದರು.

    ಈ ಸಭೆಯಲ್ಲಿ ಲೋಕಸಭೆಯಲ್ಲಿ ವಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರು ಮೂರು ಪ್ರಶ್ನೆಗಳನ್ನು ಕೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಸ್ಥಾಪಿತ ಸರ್ಕಾರವನ್ನು ಉರುಳಿಸುವ ಹಿಂದೆ ವಿದೇಶಿ ಕೈವಾಡ ಇದ್ಯಾ? ಪಾಕ್‌ ಪಾತ್ರದ ಬಗ್ಗೆ ಪ್ರಶ್ನೆ ಕೇಳಿದ್ದಾರೆ. ಇದಕ್ಕೆ ಜೈಶಂಕರ್‌, ವಿದೇಶಿ ಪಿತೂರಿಯ ಬಗ್ಗೆ ಈಗ ಏನು ಹೇಳಲು ಸಾಧ್ಯವಿಲ್ಲ. ಹಾಗೆಂದ ಮಾತ್ರಕ್ಕೆ ಆರೋಪವನ್ನು ತಳ್ಳಿ ಹಾಕಲು ಆಗುವುದಿಲ್ಲ. ಪಾಕಿಸ್ತಾನದ ರಾಜತಾಂತ್ರಿಕ ಅಧಿಕಾರಿ ಸಾಮಾಜಿಕ ಜಾಲತಾಣದಲ್ಲಿ ಬಾಂಗ್ಲಾದೇಶದ ಆಂದೋಲನವನ್ನು ಬೆಂಬಲಿಸುವ ಪ್ರೊಫೈಲ್‌ ಚಿತ್ರ ಹಾಕಿದ್ದಾರೆ ಎಂದು ತಿಳಿಸಿರುವುದಾಗಿ ಮೂಲಗಳು ತಿಳಿಸಿವೆ. ಇದನ್ನೂ ಓದಿ: ರಾಜಾಶ್ರಯಕ್ಕೆ ಹಸೀನಾ ಯುಕೆಗೆ ಹೋಗೋದು ಯಾಕೆ? – ವಾಯುನೆಲೆಯಲ್ಲಿ ದೋವಲ್‌ ಭೇಟಿ

    ಢಾಕಾದಲ್ಲಿನ ಅಧಿಕಾರ ಬದಲಾವಣೆಯ ರಾಜತಾಂತ್ರಿಕ ಪರಿಣಾಮಗಳನ್ನು ಎದುರಿಸಲು ಸರ್ಕಾರದ ಅಲ್ಪಾವಧಿಯ ಮತ್ತು ದೀರ್ಘಾವಧಿಯ ಕಾರ್ಯತಂತ್ರ ಏನು ಎಂಬ ಪ್ರಶ್ನೆಗೆ ಸದ್ಯ ಈಗ ಅಲ್ಲಿ ಹಲವು ವಿದ್ಯಮಾನಗಳು ನಡೆಯುತ್ತಿದೆ. ಕೇಂದ್ರವು ತನ್ನ ಮುಂದಿನ ನಡೆಯನ್ನು ಉತ್ತಮಗೊಳಿಸಲು ನಡೆಯುತ್ತಿರುವ ವಿದ್ಯಮಾನಗಳನ್ನು ಸೂಕ್ಷ್ಮವಾಗಿ ವಿಶ್ಲೇಷಿಸುತ್ತಿದೆ ಎಂದು ಸಚಿವರು ಉತ್ತರಿಸಿದರು. ಇದನ್ನೂ ಓದಿ: ದೇಶ ತೊರೆದ ಶೇಖ್ ಹಸೀನಾಗೆ ಭಾರತ ಆಶ್ರಯ – ʻಮಹಾ ಪಲಾಯನʼ ಬೆನ್ನಲ್ಲೇ ಉದ್ರಿಕ್ತರಿಂದ ಸಂಭ್ರಮಾಚರಣೆ

    ಬಾಂಗ್ಲಾದೇಶದಲ್ಲಿ ಈ ಸಮಸ್ಯೆ ಹೇಗೆ ವ್ಯಾಪಿಸಿದೆ ಮತ್ತು ದೇಶದ ಪರಿಸ್ಥಿತಿಯ ಬಗ್ಗೆ ಜೈಶಂಕರ್ ನಾಯಕರಿಗೆ ವಿವರಿಸಿದರು. ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಕ್ ಹಸೀನಾ (Sheikh Hasina) ಭಾರತಕ್ಕೆ ಹೇಗೆ ಆಗಮಿಸಿದರು? ಈಗ ಶೇಕ್ ಹಸೀನಾ ಅವರನ್ನು ಭಾರತ ಹೇಗೆ ನೋಡಿಕೊಳ್ಳುತ್ತಿದೆ ಎಂಬುದರ ಕುರಿತು ಅವರು ಮಾಹಿತಿ ನೀಡಿದರು.

    ಶೇಕ್ ಹಸೀನಾ ಅವರು ಸದ್ಯ ನಮ್ಮ ದೇಶದಲ್ಲಿದ್ದಾರೆ. ಅವರ ಮುಂದಿನ ನಿರ್ಧಾರ ಏನು ಎಂದು ತಿಳಿಸಲು ಭಾರತ ಸರ್ಕಾರ ಅವರಿಗೆ ಸಮಯ ನೀಡಲು ಬಯಸಿದೆ ಎಂದು ಜೈಶಂಕರ್ ಹೇಳಿದರು. ಇದನ್ನೂ ಓದಿ: ಬಾಂಗ್ಲಾದೇಶದಲ್ಲಿ ಕ್ಷಿಪ್ರಕ್ರಾಂತಿ – ಹಿಂದೂ ದೇವಸ್ಥಾನಗಳ ಮೇಲೆ ಪುಂಡರ ದಾಳಿ

    ಕೇಂದ್ರ ಸರ್ಕಾರ ಬಾಂಗ್ಲಾದೇಶ ಸೇನೆಯೊಂದಿಗೂ ಸಂಪರ್ಕದಲ್ಲಿದೆ ಎಂದು ಸಭೆಯಲ್ಲಿ ಜೈಶಂಕರ್ ನಾಯಕರಿಗೆ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆಎ.

    ಬಾಂಗ್ಲಾದೇಶದಲ್ಲಿ 20,000 ಭಾರತೀಯ ಪ್ರಜೆಗಳಿದ್ದಾರೆ ಎಂದು ಪಕ್ಷದ ಸಭೆಯಲ್ಲಿ ನಾಯಕರಿಗೆ ತಿಳಿಸಲಾಯಿತು. ಮೂಲಗಳ ಪ್ರಕಾರ, ಇದುವರೆಗೆ 8,000 ಭಾರತೀಯ ಪ್ರಜೆಗಳು ಹಿಂತಿರುಗಿದ್ದಾರೆ. ಭಾರತ ಸರ್ಕಾರವು ಭಾರತೀಯ ಪ್ರಜೆಗಳೊಂದಿಗೆ ಸಂಪರ್ಕದಲ್ಲಿದೆ ಮತ್ತು ಅಲ್ಲಿನ ಹೈಕಮಿಷನ್ ಕಾರ್ಯನಿರ್ವಹಿಸುತ್ತಿದೆ ಎಂದು ಜೈಶಂಕರ್ ಸಭೆಗೆ ತಿಳಿಸಿದರು.

  • ಭಾರತಕ್ಕೆ ಬಂದ ಶೇಖ್ ಹಸೀನಾ – ಗಡಿಯಲ್ಲಿ ಭದ್ರತೆ ಕುರಿತು ಮೋದಿ ನಿವಾಸದಲ್ಲಿ ಹೈವೋಲ್ಟೇಜ್ ಸಭೆ

    ಭಾರತಕ್ಕೆ ಬಂದ ಶೇಖ್ ಹಸೀನಾ – ಗಡಿಯಲ್ಲಿ ಭದ್ರತೆ ಕುರಿತು ಮೋದಿ ನಿವಾಸದಲ್ಲಿ ಹೈವೋಲ್ಟೇಜ್ ಸಭೆ

    ನವದೆಹಲಿ: ನೆರೆಯ ಬಾಂಗ್ಲಾದೇಶದ (Bangladesh) ಪ್ರಕ್ಷುಬ್ಧತೆಯ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಅಧಿಕೃತ ನಿವಾಸದಲ್ಲಿ ಕ್ಯಾಬಿನೆಟ್ ಸಮಿತಿಯು ಭದ್ರತೆಗೆ ಸಂಬಂಧಿಸಿದಂತೆ ಉನ್ನತಮಟ್ಟದ ಸಭೆ ನಡೆಸಲಾಗಿದೆ. ಸಭೆಯಲ್ಲಿ ವಿದೇಶಾಂಗ ಸಚಿವ ಎಸ್.ಜೈಶಂಕರ್, ಅಮಿತ್ ಶಾ, ನಿರ್ಮಲಾ ಸೀತಾರಾಮನ್, ರಾಜನಾಥ್ ಸಿಂಗ್ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

    ಸಭೆಯಲ್ಲಿ ವಿದೇಶಾಂಗ ಸಚಿವ ಎಸ್.ಜೈಶಂಕರ್ (S Jaishankar) ಅವರು ಬಾಂಗ್ಲಾದೇಶದ ಪರಿಸ್ಥಿತಿಯ ಬಗ್ಗೆ ಪ್ರಧಾನಿ ಮೋದಿಯವರಿಗೆ ವಿವರಿಸಿದರು. ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಕೂಡ ಜೈಶಂಕರ್ ಅವರೊಂದಿಗೆ ಈ ವಿಚಾರವಾಗಿ ಮಾತನಾಡಿದ್ದಾರೆ.

    ಬಾಂಗ್ಲಾದ ಮಾಜಿ ಪ್ರಧಾನಿ ಶೇಖ್ ಹಸೀನಾ (Sheikh Hasina) ಅವರು ಬಾಂಗ್ಲಾದೇಶದ ಸೇನಾ ಹೆಲಿಕಾಪ್ಟರ್ ಮೂಲಕ ದೆಹಲಿ ಬಳಿಯ ವಾಯುನೆಲೆಗೆ ಬಂದಿಳಿದರು. ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು ಶೇಖ್ ಹಸೀನಾ ಅವರನ್ನು ಭೇಟಿ ಮಾಡಿದರು. ನಂತರ ಅವರು ಲಂಡನ್‍ಗೆ ತೆರಳುವ ನಿರೀಕ್ಷೆಯಿದೆ. ಅಲ್ಲಿ ಅವರು ಆಶ್ರಯ ಪಡೆಯಬಹುದು ಎಂದು ಮೂಲಗಳು ತಿಳಿಸಿವೆ.

    ಇದರ ಬೆನ್ನಲ್ಲೇ ಬಾಂಗ್ಲಾದೇಶದ ಸೇನಾ ಮುಖ್ಯಸ್ಥ ಜನರಲ್ ವೇಕರ್-ಉಜ್-ಝಮಾನ್ ಅವರು ರಾಜ್ಯ ದೂರದರ್ಶನದಲ್ಲಿ ಹಸೀನಾ ಅವರು ರಾಜೀನಾಮೆ ನೀಡಿದ್ದಾರೆ. ಸೇನೆಯು ಸರ್ಕಾರವನ್ನು ರಚಿಸಲಿದೆ ಎಂದು ಮಾಹಿತಿ ನೀಡಿದ್ದಾರೆ.

    ಶೇಖ್ ಹಸೀನಾ ಅವರು ಜುಲೈ ಆರಂಭದಿಂದ ತನ್ನ ಸರ್ಕಾರದ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗಳನ್ನು ಹತ್ತಿಕ್ಕಲು ಪ್ರಯತ್ನಿಸಿದರು ಆದರೆ ಭಾನುವಾರ ಪ್ರತಿಭಟನೆ ತೀವ್ರ ಸ್ವರೂಪ ಪಡೆದ ನಂತರ ಸುಮಾರು 100 ಜನರು ಸಾವನ್ನಪ್ಪಿದರು. ಇದಾದ ಬಳಿಕ ಪ್ರತಿಭಟನೆ ತೀವ್ರಗೊಂಡು ಅವರ ನಿವಾಸದ ಮೇಲೂ ದಾಳಿ ನಡೆಯಿತು. ಇದಕ್ಕೂ ಮುನ್ನವೇ ಅವರು ಅಲ್ಲಿಂದ ಪಲಾಯನ ಮಾಡಿದ್ದರು.

    ಬಾಂಗ್ಲಾ ಕ್ಷಿಪ್ರ ರಾಜಕೀಯ ಬೆಳವಣಿಗೆ ಬೆನ್ನಲ್ಲೇ, ಭಾರತ-ಬಾಂಗ್ಲಾ ಗಡಿಭಾಗದಲ್ಲಿ ಬಿಗಿ ಭದ್ರತೆ ನಿಯೋಜಿಸಲಾಗಿದೆ. ಬಿಎಸ್‍ಎಫ್ ಭದ್ರತಾ ಪಡೆಗಳನ್ನು ರವಾನಿಸಿ ಭದ್ರತೆ ಹೆಚ್ಚಿಸಲಾಗಿದೆ. ಬಿಎಸ್‍ಎಫ್ ಸಿಬ್ಬಂದಿಯ ರಜೆ ರದ್ದು ಮಾಡಲಾಗಿದೆ. ಬಾಂಗ್ಲಾದಲ್ಲಿನ ಬೆಳವಣಿಗೆಗಳ ಮೇಲೆ ನಿಗಾ ವಹಿಸಿದ್ದು, ಭಾರತ-ಬಾಂಗ್ಲಾ ರೈಲು ಸಂಚಾರ ಸಹ ಸ್ಥಗಿತಗೊಳಿಸಿದೆ.

    ಬಾಂಗ್ಲಾದಲ್ಲಿ ಹಿಂಸಾಚಾರಕ್ಕೆ ಕಾರಣ ಏನು?
    ಬಾಂಗ್ಲಾದೇಶದಲ್ಲಿ ಪ್ರಸ್ತುತ ಸರ್ಕಾರಿ ಉದ್ಯೋಗಗಳಲ್ಲಿ 56% ಕೋಟಾ ವ್ಯವಸ್ಥೆ ಕಾಯ್ದಿರಿಸಲಾಗಿದೆ. ಇದರಲ್ಲಿ 1971ರ ವಿಮೋಚನಾ ಸ್ವಾತಂತ್ರ್ಯ ಹೋರಾಟಗಾರರ ಕುಟುಂಬದವರಿಗೆ 30% ಹಿಂದುಳಿದ ಜಿಲ್ಲೆಗಳ ಜನಕ್ಕೆ, 10% ಮಹಿಳೆಯರಿಗೆ 10% ಜನಾಂಗೀಯ ಅಲ್ಪಸಂಖ್ಯಾತರಿಗೆ 5% ಹಾಗೂ ಅಂಗವಿಕಲರಿಗೆ 1% ಮೀಸಲಾತಿ ಕಲ್ಪಿಸಲಾಗಿದೆ. ವಿಮೋಚನಾ ಹೋರಾಟದ ಕುಟುಂಬಸ್ಥರಿಗೆ ಕಲ್ಪಿಸಿರುವ ±30% ಮೀಸಲಾತಿ ರದ್ದು ಪಡಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದರು. ಈ ಬೇಡಿಕೆಯನ್ನು ನಿರ್ಗಮಿತ ಪ್ರಧಾನಿ ಶೇಕ್ ಹಸೀನಾ ತಿರಸ್ಕರಿಸಿದ್ದರಿಂದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ವಿದ್ಯಾರ್ಥಿಗಳ ಪ್ರತಿಭಟನೆಗೆ ಸೇನೆ, ವಿಪಕ್ಷಗಳಿಂದ ಸಂಪೂರ್ಣ ಬೆಂಬಲ ವ್ಯಕ್ತವಾಗಿದ್ದರಿಂದ ಆಕ್ರೋಶ ಕಟ್ಟೆಯೊಡಿದಿದೆ. ಇದರ ಬೆನ್ನಲ್ಲೇ ಶೇಖ್ ಹಸೀನಾ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ಭಾರತಕ್ಕೆ ಬಂದಿದ್ದಾರೆ.

  • ಶ್ರೀಲಂಕಾ ನೌಕಪಡೆಯಿಂದ ಭಾರತದ 22 ಮೀನುಗಾರರ ಅರೆಸ್ಟ್

    ಶ್ರೀಲಂಕಾ ನೌಕಪಡೆಯಿಂದ ಭಾರತದ 22 ಮೀನುಗಾರರ ಅರೆಸ್ಟ್

    ಕೊಲಂಬೊ: ತಮಿಳುನಾಡಿನ (Tamil Nadu) ನೆಡುಂತೀವು ಬಳಿಯ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ 22 ಮೀನುಗಾರರನ್ನು ಶ್ರೀಲಂಕಾದ ನೌಕಾಪಡೆ ಬಂಧಿಸಿದೆ. ಅಲ್ಲದೇ 3 ಮೀನುಗಾರರ ದೋಣಿಗಳನ್ನು ಶ್ರೀಲಂಕಾದ ನೌಕಾಪಡೆ (Sri Lankan Navy) ವಶಪಡಿಸಿಕೊಂಡಿದೆ.

    ಮೀನುಗಾರರನ್ನು ನಿರಂತರವಾಗಿ ಶ್ರೀಲಂಕಾ ಬಂಧಿಸುತ್ತಿರುವ ವಿಚಾರವಾಗಿ, ಜೂ.19 ರಂದು ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ (MK Stalin) ಅವರು ಕೇಂದ್ರ ವಿದೇಶಾಂಗ ಸಚಿವ ಎಸ್ ಜೈಶಂಕರ್ (S Jaishankar) ಅವರಿಗೆ ಪತ್ರ ಬರೆದಿದ್ದರು. ಇಂತಹ ಘಟನೆಗಳು ಮೀನುಗಾರರ ಜೀವನೋಪಾಯಕ್ಕೆ ಅಡ್ಡಿಪಡಿಸುತ್ತವೆ. ಅಲ್ಲದೇ ಇಡೀ ಮೀನುಗಾರ ಸಮುದಾಯದಲ್ಲಿ ಭಯ ಹುಟ್ಟು ಹಾಕುತ್ತದೆ. ಬಂಧನಕ್ಕೊಳಗಾಗಿರುವ ಎಲ್ಲಾ ಮೀನುಗಾರರು ಮತ್ತು ಅವರ ದೋಣಿಗಳನ್ನು ಶೀಘ್ರ ಬಿಡುಗಡೆ ಮಾಡಲು ಕ್ರಮಕೈಗೊಳ್ಳುವಂತೆ ಅವರು ಒತ್ತಾಯಿಸಿದ್ದರು. ಪತ್ರ ಬರೆದ ಬೆನ್ನಲ್ಲೇ ಮತ್ತೆ ಮೀನುಗಾರರ ಬಂಧನವಾಗಿದೆ. ಇದನ್ನೂ ಓದಿ: 24 ವರ್ಷಗಳ ನಂತರ ಉ.ಕೊರಿಯಾಗೆ ರಷ್ಯಾ ಅಧ್ಯಕ್ಷ ಭೇಟಿ – ನ್ಯಾಟೊ ಒಕ್ಕೂಟ ರಾಷ್ಟ್ರಗಳಲ್ಲಿ ನಡುಕ!

    ಬಂಧಿತ ಮೀನುಗಾರರ ಬಿಡುಗಡೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಕುಟುಂಬಸ್ಥರು ಒತ್ತಾಯಿಸಿದ್ದಾರೆ. ಇದು ಅವರ ದೈನಂದಿನ ಜೀವನ ಮತ್ತು ಜೀವನೋಪಾಯಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ಅಳಲು ತೋಡಿಕೊಂಡಿದ್ದಾರೆ.

    ಇತ್ತೀಚೆಗೆ ತಮಿಳುನಾಡಿನ 19 ಮೀನುಗಾರರನ್ನು ಶ್ರೀಲಂಕಾದ ಕೊಲಂಬೊದಿಂದ ಏರ್ ಇಂಡಿಯಾ ವಿಮಾನದ ಮೂಲಕ ಚೆನ್ನೈಗೆ ಕಳುಹಿಸಲಾಗಿತ್ತು. ಅವರನ್ನು ಮಾರ್ಚ್ 6 ರಂದು ಸಮುದ್ರದ ಗಡಿ ದಾಟಿದ್ದಕ್ಕಾಗಿ ಶ್ರೀಲಂಕಾ ನೌಕಾಪಡೆ ಬಂಧಿಸಿತ್ತು. ಈ ಮೀನುಗಾರರು 9 ಮಂದಿ ಮೈಲಾಡುತುರೈ, ನಾಲ್ವರು ಪುದುಕೊಟ್ಟೈ ಮತ್ತು ಆರು ಮಂದಿ ಪುದುಚೇರಿಯ ಕಾರೈಕಲ್‍ನಿಂದ ಸೇರಿದ್ದರು. ಇದನ್ನೂ ಓದಿ: ದರ್ಶನ್ ಪ್ರಕರಣ: ತಪ್ಪಿಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂದ ನಿರ್ದೇಶಕ ಓಂ ಪ್ರಕಾಶ್ ರಾವ್

  • ಕುವೈತ್‌ನ ಕಾರ್ಮಿಕರ ಶಿಬಿರದಲ್ಲಿ ಅಗ್ನಿ ದುರಂತ – 40 ಮಂದಿ ಭಾರತೀಯರು ಸಾವು

    ಕುವೈತ್‌ನ ಕಾರ್ಮಿಕರ ಶಿಬಿರದಲ್ಲಿ ಅಗ್ನಿ ದುರಂತ – 40 ಮಂದಿ ಭಾರತೀಯರು ಸಾವು

    – 30ಕ್ಕೂ ಹೆಚ್ಚು ಮಂದಿಗೆ ಗಾಯ

    ಕುವೈತ್‌: ಕಾರ್ಮಿಕರ ಶಿಬಿರದಲ್ಲಿ (Labour Camp) ಸಂಭವಿಸಿದ ಅಗ್ನಿ ದುರಂತರದಲ್ಲಿ ಕನಿಷ್ಠ 40 ಮಂದಿ ಭಾರತೀಯರು ಸಾವನ್ನಪ್ಪಿದ ಘಟನೆ ಕುವೈತ್‌ನ (Kuwait) ಮಂಗಾಫ್ ನಗರದಲ್ಲಿ (Mangaf City) ನಡೆದಿದೆ.

    ಸ್ಥಳೀಯ ಕಾಲಮಾನ ಬೆಳಗ್ಗೆ 6 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ. ಅಗ್ನಿ ಅವಘಡದಿಂದ ಗಾಯಗೊಂಡ ಸುಮಾರು 43ಕ್ಕೂ ಹೆಚ್ಚು ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕುವೈತ್ ಆರೋಗ್ಯ ಸಚಿವಾಲಯ ತಿಳಿಸಿದೆ. ಈ ಅವಘಡದಲ್ಲಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕುವೈತ್‌ನಲ್ಲಿರುವ ಭಾರತೀಯ ರಾಯಭಾರಿ ತಿಳಿಸಿದ್ದಾರೆ. ಇದನ್ನೂ ಓದಿ: ಬೆಳಗಾವಿ ಕೋರ್ಟ್ ಆವರಣದಲ್ಲೇ ಪಾಕಿಸ್ತಾನ ಜಿಂದಾಬಾದ್ ಘೋಷಣೆ

    ಘಟನೆಯ ಕುರಿತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ಕುವೈತ್ ನಗರದಲ್ಲಿ ಅಗ್ನಿ ದುರಂತದ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. 40ಕ್ಕೂ ಹೆಚ್ಚು ಸಾವುಗಳು ಸಂಭವಿಸಿದ್ದು, 50ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ನಮ್ಮ ರಾಯಭಾರಿ ಶಿಬಿರಕ್ಕೆ ಹೋಗಿದ್ದಾರೆ. ನಾವು ಹೆಚ್ಚಿನ ಮಾಹಿತಿಗಾಗಿ ಕಾಯುತ್ತಿದ್ದೇವೆ ಎಂದು ಜೈಶಂಕರ್ ತಿಳಿಸಿದ್ದಾರೆ. ಇದನ್ನೂ ಓದಿ: ಭಾರತಕ್ಕೆ ಮೋಸ – ಚೀಟಿಂಗ್‌ ಕತಾರ್‌ ವಿರುದ್ಧ ಅಭಿಮಾನಿಗಳು ಕೆಂಡ

    ಕುವೈತ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಸಹಾಯವಾಣಿ ಸಂಖ್ಯೆಯನ್ನು ಬಿಡುಗಡೆ ಮಾಡಿದೆ. ಅಲ್ಲದೇ ಅಗ್ನಿ ಅವಘಡದಲ್ಲಿ ಕೆಲವು ಭಾರತೀಯ ಕಾರ್ಮಿಕರು ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ರಾಯಭಾರ ಕಚೇರಿಯು ಸಾಧ್ಯವಿರುವ ಎಲ್ಲಾ ಸಹಾಯವನ್ನು ನೀಡಲಿದೆ ಎಂದಿದ್ದಾರೆ. ಇದನ್ನೂ ಓದಿ: ಬಸವಕಲ್ಯಾಣದಲ್ಲಿ ಭಾರೀ ಮಳೆ – ಕೆರೆ ಒಡೆದು ರೈತರ ಜಮೀನಿಗೆ ನುಗ್ಗಿದ ನೀರು

    ಕಟ್ಟಡದಲ್ಲಿ ಕಾಣಿಸಿಕೊಂಡ ಬೆಂಕಿಯನ್ನು ನಿಯಂತ್ರಿಸಿದ್ದು, ಅಧಿಕಾರಿಗಳು ಘಟನೆಗೆ ಕಾರಣವನ್ನು ಹುಡುಕುತ್ತಿದ್ದಾರೆ ಎಂದು ವರದಿಗಳು ತಿಳಿಸಿದೆ. ಇದನ್ನೂ ಓದಿ: ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು, ಸಚಿವರಾಗಿ ಪವನ್‌ ಕಲ್ಯಾಣ್‌ ಪ್ರಮಾಣವಚನ ಸ್ವೀಕಾರ

  • ಇರಾನ್‌ ವಶಪಡಿಸಿಕೊಂಡಿದ್ದ ಹಡಗಿನಲ್ಲಿದ್ದ ಭಾರತೀಯ ಸಿಬ್ಬಂದಿ ಸ್ವದೇಶಕ್ಕೆ ವಾಪಸ್‌

    ಇರಾನ್‌ ವಶಪಡಿಸಿಕೊಂಡಿದ್ದ ಹಡಗಿನಲ್ಲಿದ್ದ ಭಾರತೀಯ ಸಿಬ್ಬಂದಿ ಸ್ವದೇಶಕ್ಕೆ ವಾಪಸ್‌

    ನವದೆಹಲಿ: ಇರಾನ್‌ (Iran) ವಶಪಡಿಸಿಕೊಂಡಿದ್ದ ಹಡಗಿನಲ್ಲಿದ್ದ ಭಾರತೀಯ (Iran) ನಾವಿಕರೊಬ್ಬರು ಸುರಕ್ಷಿತವಾಗಿ ಕೇರಳಕ್ಕೆ (Kerala) ಆಗಮಿಸಿದ್ದಾರೆ.

    ಟೆಹರಾನ್‌ನಲ್ಲಿರುವ ಭಾರತೀಯ ಮಿಷನ್ ಮತ್ತು ಇರಾನ್ ಸರ್ಕಾರದ ಸಂಘಟಿತ ಪ್ರಯತ್ನಗಳೊಂದಿಗೆ ಡೆಕ್‌ ಕೆಡೆಟ್‌ ಆಗಿದ್ದ ಕೇರಳದ ತ್ರಿಶ್ಯೂರಿನ ಟೆಸ್ಸಾ ಜೋಸೆಫ್ (Ann Tessa Joseph) ಅವರು ಕೊಚ್ಚಿನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿದಿದ್ದಾರೆ ಎಂದು ವಿದೇಶಾಂಗ ಸಚಿವಾಲಯದ (MEA) ವಕ್ತಾರ ರಣಧೀರ್ ಜೈಸ್ವಾಲ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗ್ಳೂರಿನ ಬಿಸ್ಮಿಲ್ಲಾ ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದ ನಾಲ್ವರು ಬಾಂಗ್ಲಾ ಪ್ರಜೆಗಳು ಅರೆಸ್ಟ್!

    ಹಡಗಿನಲ್ಲಿದ್ದ ಉಳಿದ 16 ಭಾರತೀಯರೊಂದಿಗೆ ನಾವು ಸಂಪರ್ಕದಲ್ಲಿದ್ದೇವೆ. ಅವರೆಲ್ಲರೂ ಆರೋಗ್ಯವಾಗಿದ್ದು, ಭಾರತದಲ್ಲಿನ ಅವರ ಕುಟುಂಬ ಸದಸ್ಯರೊಂದಿಗೆ ಸಂಪರ್ಕದಲ್ಲಿದ್ದಾರೆ. ಉಳಿದ ಸಿಬ್ಬಂದಿಯ ಯೋಗಕ್ಷೇಮವನ್ನು ವಿಚಾರಿಸಿಕೊಳ್ಳಲು ಇರಾನ್ ಅಧಿಕಾರಿಗಳೊಂದಿಗೆ ನಾವು ಸಂಪರ್ಕದಲ್ಲಿದ್ದೇವೆ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ. ಇದನ್ನೂ ಓದಿ: ಪಶ್ಚಿಮ ಬಂಗಾಳ – ರಾಮನವಮಿ ಶೋಭಾಯಾತ್ರೆಯ ವೇಳೆ ಬಾಂಬ್‌ ಸ್ಫೋಟ, ಕಲ್ಲು ತೂರಾಟ

    ಜೋಸೆಫ್ ಭಾರತಕ್ಕೆ ಬಂದಿಳಿದ ನಂತರ ವಿದೇಶಾಂಗ ಸಚಿವ ಎಸ್ ಜೈಶಂಕರ್‌ (S Jaishankar) ಅವರು, ಇರಾನ್‌ನಲ್ಲಿರುವ ಭಾರತೀಯ ಮಿಷನ್‌ನ ಅದ್ಭುತ ಕೆಲಸ. ಟೆಸ್ಸಾ ಜೋಸೆಫ್ ಮನೆಗೆ ತಲುಪಿದ್ದಕ್ಕೆ ಸಂತೋಷವಾಗಿದೆ. ದೇಶ ಅಥವಾ ವಿದೇಶದಲ್ಲಿ ಇರಲಿ ಮೋದಿ ಕೀ ಗ್ಯಾರಂಟಿ ಯಾವಾಗಲೂ ಕೆಲಸ ಮಾಡುತ್ತದೆ ಎಂದು ಪೋಸ್ಟ್‌ ಮಾಡಿದ್ದಾರೆ.

    ಏಪ್ರಿಲ್‌ 14 ರಂದು ಜೈಶಂಕರ್‌ ಇರಾನ್‌ ವಿದೇಶಾಂಗ ಸಚಿವ ಅಮೀರ್-ಅಬ್ದುಲ್ಲಾಹಿಯಾನ್ ಜೊತೆ ಮಾತುಕತೆ ನಡೆಸಿದ್ದರು. ಈ ಮಾತುಕತೆಯ ನಂತರ ಇರಾನ್‌ ಭಾರತೀಯ ಅಧಿಕಾರಿಗಳಿಗೆ ತನ್ನ ಪ್ರಜೆಗಳನ್ನು ಭೇಟಿಯಾಗಲು ಅನುಮತಿ ನೀಡಿತ್ತು. ಇದನ್ನೂ ಓದಿ: ಹುಬ್ಬಳ್ಳಿ ಕಾಲೇಜ್‌ ಕ್ಯಾಂಪಸ್‌ನಲ್ಲಿ ಚಾಕುವಿನಿಂದ ಇರಿದು ವಿದ್ಯಾರ್ಥಿನಿಯ ಹತ್ಯೆ – ಯುವಕ ಅರೆಸ್ಟ್‌

    ಇರಾನ್‌ ವಶಪಡಿಸಿಕೊಂಡ ಹಡಗಿನಲ್ಲಿ 17 ಮಂದಿ ಭಾರತೀಯ ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದು, ಇವರ ಸುರಕ್ಷಿತ ಬಿಡುಗಡೆ ಸಂಬಂಧ ಭಾರತ ಸರ್ಕಾರ ಇರಾನ್‌ ಜೊತೆ ನಿರಂತರ ಮಾತುಕತೆ ನಡೆಸುತ್ತಿದೆ.

    ಯುಎಇಯಿಂದ (UAE) ಸರಕು ತುಂಬಿಸಿಕೊಂಡು ಮುಂಬೈ (Mumbai) ಬಂದರಿಗೆ ಬರುತ್ತಿದ್ದ MCS Aries ಹೆಸರಿನ ಕಂಟೈನರ್‌ ಶಿಪ್‌ ಅನ್ನು Strait of Hormuz ಬಳಿ ಇರಾನ್‌ ಏ.14 ರಂದು ವಶಪಡಿಸಿಕೊಂಡಿತ್ತು. ಪೋರ್ಚುಗೀಸ್‌ ಧ್ವಜ ಹೊಂದಿದ್ದ ಈ ಹಡಗಿನ ಮೇಲೆ ಇರಾನ್‌ ನೌಕಾ ದಳದ ಸೈನಿಕರು ಹೆಲಿಕಾಪ್ಟರ್‌ನಿಂದ ನೇರವಾಗಿ ಇಳಿದು ದಾಳಿ ಮಾಡಿ ವಶ ಪಡಿಸಿಕೊಂಡಿದ್ದಾರೆ. ಈ ಹಡಗು ಇಸ್ರೇಲಿ (Israel) ಬಿಲಿಯನೇರ್ ಇಯಾಲ್ ಆಫರ್ ಒಡೆತನದ ಲಂಡನ್ ಮೂಲದ ಜೊಡಿಯಾಕ್ ಮಾರಿಟೈಮ್‌ನೊಂದಿಗೆ ಕಂಪನಿಯೊಂದಿಗೆ ಸಂಯೋಜಿತವಾಗಿದೆ. ಈ ಹಡಗು ಏ.15ರ ರಾತ್ರಿ ಮುಂಬೈ ಬಂದರಿಗೆ ಆಗಮಿಸಬೇಕಿತ್ತು.