Tag: s.jaishankar

  • ಭಾರತೀಯ ಸಿಬ್ಬಂದಿ ಭೇಟಿಗೆ ಅಧಿಕಾರಿಗಳಿಗೆ ಇರಾನ್‌ ಅವಕಾಶ

    ಭಾರತೀಯ ಸಿಬ್ಬಂದಿ ಭೇಟಿಗೆ ಅಧಿಕಾರಿಗಳಿಗೆ ಇರಾನ್‌ ಅವಕಾಶ

    ನವದೆಹಲಿ/ಟೆಹರಾನ್‌: ಹೈಜಾಕ್‌ ಆಗಿರುವ ಹಡಗಿನಲ್ಲಿರುವ ಭಾರತೀಯ ಸಿಬ್ಬಂದಿಯನ್ನು ಭೇಟಿಯಾಗಲು ಅಧಿಕಾರಿಗಳಿಗೆ ಇರಾನ್‌ (Iran) ಅವಕಾಶ ನೀಡಿದೆ.

    ಭಾನುವಾರ ವಿದೇಶಾಂಗ ಸಚಿವ ಎಸ್‌ ಜೈಶಂಕರ್‌ (S Jaishankar) ಇರಾನ್‌ ವಿದೇಶಾಂಗ ಸಚಿವ ಅಮೀರ್-ಅಬ್ದುಲ್ಲಾಹಿಯಾನ್ ಜೊತೆ ಮಾತುಕತೆ ನಡೆಸಿದ್ದರು. ಈ ಮಾತುಕತೆಯ ನಂತರ ಇರಾನ್‌ ಭಾರತೀಯ ಅಧಿಕಾರಿಗಳಿಗೆ ತನ್ನ ಪ್ರಜೆಗಳನ್ನು ಭೇಟಿಯಾಗಲು ಅನುಮತಿ ನೀಡಿದೆ.

    ಇರಾನ್‌ ವಶಪಡಿಸಿಕೊಂಡ ಹಡಗಿನಲ್ಲಿ 17 ಮಂದಿ ಭಾರತೀಯ ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದು, ಇವರ ಬಿಡುಗಡೆ ಸಂಬಂಧ ಭಾರತ ಸರ್ಕಾರ ಇರಾನ್‌ ಜೊತೆ ಮಾತುಕತೆ ನಡೆಸುತ್ತಿದೆ. ಇದನ್ನೂ ಓದಿ: ಭಾರತದಲ್ಲಿ ದಾಖಲೆ – ಚುನಾವಣೆ ನಡೆಯುವ ಮೊದಲೇ ನಗದು, ಮದ್ಯ ಸೇರಿ ಒಟ್ಟು 4,658 ಕೋಟಿ ಮೌಲ್ಯದ ವಸ್ತುಗಳು ವಶ

    ಯುಎಇಯಿಂದ (UAE) ಸರಕು ತುಂಬಿಸಿಕೊಂಡು ಮುಂಬೈ (Mumbai) ಬಂದರಿಗೆ ಬರುತ್ತಿದ್ದ MCS Aries ಹೆಸರಿನ ಕಂಟೈನರ್‌ ಶಿಪ್‌ ಅನ್ನು Strait of Hormuz ಬಳಿ ಇರಾನ್‌ ಏ.14 ರಂದು ವಶಪಡಿಸಿಕೊಂಡಿತ್ತು.

     

    ಪೋರ್ಚುಗೀಸ್‌ ಧ್ವಜ ಹೊಂದಿದ್ದ ಈ ಹಡಗಿನ ಮೇಲೆ ಇರಾನ್‌ ಸೈನಿಕರು ಹೆಲಿಕಾಪ್ಟರ್‌ನಿಂದ ನೇರವಾಗಿ ಇಳಿದು ದಾಳಿ ಮಾಡಿ ವಶ ಪಡಿಸಿದ್ದಾರೆ. ಈ ಹಡಗು ಇಸ್ರೇಲಿ (Israel) ಬಿಲಿಯನೇರ್ ಇಯಾಲ್ ಆಫರ್ ಒಡೆತನದ ಲಂಡನ್ ಮೂಲದ ಜೊಡಿಯಾಕ್ ಮಾರಿಟೈಮ್‌ನೊಂದಿಗೆ ಕಂಪನಿಯೊಂದಿಗೆ ಸಂಯೋಜಿತವಾಗಿದೆ. ಈ ಹಡಗು ಏ.15ರ ರಾತ್ರಿ ಮುಂಬೈ ಬಂದರಿಗೆ ಆಗಮಿಸಬೇಕಿತ್ತು.

  • ಉಗ್ರರಿಗೆ ನಿಯಮಗಳಿಲ್ಲ, ಪ್ರತಿಕ್ರಿಯೆಗಳಿಗೂ ನಿಯಮ ಇಲ್ಲ: ಜೈಶಂಕರ್

    ಉಗ್ರರಿಗೆ ನಿಯಮಗಳಿಲ್ಲ, ಪ್ರತಿಕ್ರಿಯೆಗಳಿಗೂ ನಿಯಮ ಇಲ್ಲ: ಜೈಶಂಕರ್

    ಪುಣೆ: ಗಡಿಯಾಚೆಯಿಂದ ನಡೆಯುವ ಯಾವುದೇ ಭಯೋತ್ಪಾದನಾ (Terrorism) ಕೃತ್ಯಕ್ಕೆ ಪ್ರತ್ಯುತ್ತರ ನೀಡಲು ಭಾರತ (India) ಬದ್ಧವಾಗಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ (S Jaishankar) ಹೇಳಿದ್ದಾರೆ.

    ಪುಣೆಯಲ್ಲಿ ಯುವಕರನ್ನು ಉದ್ದೇಶಿಸಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಉಗ್ರರಿಗೆ (Terrorist) ಯಾವುದೇ ನಿಯಮಗಳಿಲ್ಲ. ಹೀಗಾಗಿ ಅವರಿಗೆ ನೀಡುವ ಉತ್ತರಕ್ಕೂ ಯಾವುದೇ ನಿಯಮ ಇಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ನಮ್ಮ ಬಲಿಷ್ಠ ಸರ್ಕಾರದ ಅವಧಿಯಲ್ಲಿ ಉಗ್ರರು ಅವರ ನೆಲದಲ್ಲೇ ಹತ್ಯೆಯಾಗುತ್ತಿದ್ದಾರೆ: ಮೋದಿ

    2008 ರಲ್ಲಿ ಮುಂಬೈ (Mumbai Attack) ಮೇಲೆ ದಾಳಿ ನಡೆಯಿತು. ಈ ದಾಳಿಯ ನಂತರ ಪಾಕಿಸ್ತಾನದ ಮೇಲೆ ದಾಳಿ ಮಾಡಬೇಕಾ ಬೇಡವೇ ಎಂಬುದರ ಬಗ್ಗೆ ಸರ್ಕಾರಿ ಮಟ್ಟದಲ್ಲಿ ಸಾಕಷ್ಟು ಚರ್ಚೆ ನಡೆಯಿತು. ಕೊನೆಗೆ ಪಾಕಿಸ್ತಾನದ ಮೇಲೆ ದಾಳಿ ಮಾಡದೇ ಇರುವುದಕ್ಕಿಂತ ಮೇಲೆ ದಾಳಿ ಮಾಡುವ ವೆಚ್ಚ ಹೆಚ್ಚು ಎಂದು ಆ ಸಮಯದಲ್ಲಿ ತೀರ್ಮಾನಕ್ಕೆ ಬರಲಾಯಿತು ಎಂದರು.

    ಈಗ ಇದೇ ರೀತಿಯ ದಾಳಿ ನಡೆದರೆ ಮತ್ತು ಅದಕ್ಕೆ ಪ್ರತಿಕ್ರಿಯಿಸದಿದ್ದರೆ ಮುಂದಿನ ದಾಳಿಗಳನ್ನು ತಡೆಯುವುದು ಹೇಗೆ ಎಂದು ಪ್ರಶ್ನಿಸಿದರು.  ಇದನ್ನೂ ಓದಿ: LokSabha Election- ಲೋಕ ಅಖಾಡಲ್ಲಿ ಬಿಜೆಪಿಯ ಸಿನಿ ತಾರೆಯರು

     

    ನರೇಂದ್ರ ಮೋದಿ (Narendra Modi) ಅವರು 2014 ರಲ್ಲಿ ಪ್ರಧಾನಿಯಾಗಿ ಬಂದರು. ಈ ಸಮಸ್ಯೆ 2014ರಿಂದ ಆರಂಭವಾಗಿಲ್ಲ.ಇದು 1947 ರಿಂದ ಆರಂಭವಾಗಿದೆ. ಮೊದಲು ಪಾಕಿಸ್ತಾನದಿಂದ ಬಂದು ಕಾಶ್ಮೀರದ ಮೇಲೆ ದಾಳಿ ಮಾಡಿದರು. ಇದು ಭಯೋತ್ಪಾದನೆ. ಪಟ್ಟಣಗಳಿಗೆ ಬೆಂಕಿ ಹಚ್ಚಿ ಜರನ್ನು ಕೊಲ್ಲುತ್ತಿದ್ದರು. ಉಗ್ರರಲ್ಲಿ ಮೊದಲು ನೀವು ಹೋಗಿ ನಂತರ ನಾವು ಬರುತ್ತೇವೆ ಎಂದು ಪಾಕ್‌ ಸೇನೆ ಹೇಳಿತ್ತು ಎಂಬುದಾಗಿ ತಿಳಿಸಿದರು.

     

  • ಮೋದಿ ಸರ್ಕಾರದಲ್ಲಿ ವಿದೇಶದಲ್ಲಿ ನೆಲೆಸಿರೋ ಭಾರತೀಯರಿಗೂ ರಕ್ಷಣೆ ಸಿಕ್ತಿದೆ: ಜೈಶಂಕರ್ ಶ್ಲಾಘನೆ

    ಮೋದಿ ಸರ್ಕಾರದಲ್ಲಿ ವಿದೇಶದಲ್ಲಿ ನೆಲೆಸಿರೋ ಭಾರತೀಯರಿಗೂ ರಕ್ಷಣೆ ಸಿಕ್ತಿದೆ: ಜೈಶಂಕರ್ ಶ್ಲಾಘನೆ

    – ಕೇಂದ್ರ ಸರ್ಕಾರದ ಸಾಧನೆಗಳನ್ನು ಹಾಡಿಹೊಗಳಿದ ವಿದೇಶಾಂಗ ಸಚಿವ

    ಚಿಕ್ಕೋಡಿ: ಕಳೆದ 10 ವರ್ಷಗಳಲ್ಲಿ ಪ್ರಧಾನಿ ಮೋದಿ (Narendra Modi) ದೇಶಕ್ಕೆ ಬಲಿಷ್ಠ ಬುನಾದಿ ಹಾಕಿದ್ದಾರೆ. ಮೋದಿ ಸರ್ಕಾರದಲ್ಲಿ ವಿದೇಶದಲ್ಲಿ ನೆಲೆಸಿರುವ ಭಾರತದ ಪ್ರಜೆಗಳಿಗೂ ರಕ್ಷಣೆ ಸಿಗ್ತಿದೆ ಎಂದು ಭಾರತೀಯ ವಿದೇಶಾಂಗ ಸಚಿವ ಡಾ.ಎಸ್‌ ಜೈಶಂಕರ್ (S Jaishankar) ಶ್ಲಾಘಿಸಿದರು.

    ಬೆಳಗಾವಿ (Belagavi) ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಖಾಸಗಿ ಶಾಲೆಯ ಉದ್ಘಾಟನೆ ಸಮಾರಂಭದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಕೆಲವೇ ವರ್ಷಗಳಲ್ಲಿ ಭಾರತ ಆರ್ಥಿಕವಾಗಿ ಅಭಿವೃದ್ಧಿ ಹೊಂದಿದ ದೇಶಗಳ ಪೈಕಿ ಮೊದಲ ಸ್ಥಾನಕ್ಕೆ ಬರಲಿದೆ ಎಂದು ಶ್ಲಾಘಿಸಿದರು. ಇದನ್ನೂ ಓದಿ: ಹಿಮಾಚಲ ಪ್ರದೇಶ: 15 ಬಿಜೆಪಿ ಶಾಸಕರ ಅಮಾನತುಗೊಳಿಸಿದ ಸ್ಪೀಕರ್‌ 

    ಭಾರತದ ಪ್ರಜೆಗಳಿಗೆ ಪ್ರಧಾನಿ ಮೋದಿ ಹಲವಾರು ಯೋಜನೆಗಳನ್ನು ನೀಡಿದ್ದಾರೆ. ಮುದ್ರಾ, ಉಜ್ವಲಾ ಯೋಜನೆ ವಿತರಣೆ ಸೇರಿದಂತೆ ಅನೇಕ ಯೋಜನೆಗಳನ್ನ ನೀಡಿದ್ದಾರೆ. ಭಾರತದಲ್ಲಿ ಡಿಜಿಟಲ್ ಇಂಡಿಯಾ ಅನ್ನೋದು ಬಹಳ ಪ್ರಭಾವ ಬೀರಿದೆ. ಅಮೆರಿಕಕ್ಕಿಂತಲೂ ಭಾರತದಲ್ಲಿ ಡಿಜಿಟಲ್ ಹೆಚ್ಚು ಉಪಯೋಗವಾಗ್ತಿದೆ. ಕೋವಿಡ್‌ ಬಂದಾಗ ಭಾರತ ನಷ್ಟ ಅನುಭವಿಸಲಿದೆ ಎಂದು ಪಾಶ್ಚಿಮಾತ್ಯ ದೇಶಗಳು ಟೀಕಿಸಿದ್ದವು. ವಾಕ್ಸಿನ್ ಅಂತೂ ಬಹಳ ಕಷ್ಟದ ಮಾತಾಗಿತ್ತು. ಆದ್ರೆ ಭಾರತ ತನ್ನ ಪ್ರತಿಯೊಬ್ಬ ಪ್ರಜೆಗೂ ವ್ಯಾಕ್ಸಿನ್ ನೀಡುವಲ್ಲಿ ಯಶಸ್ವಿಯಾಯ್ತು. ಇಂದು ಭಾರತದ ಪ್ರಗತಿ ಹಾಗೂ ಉನ್ನತಿ ಬಗ್ಗೆ ಬಹಳ ಚರ್ಚೆಯಾಗುತ್ತಿದೆ ಎಂದು ಕೇಂದ್ರ ಸರ್ಕಾರದ ಸಾಧನೆಗಳನ್ನು ಹಾಡಿಹೊಗಳಿದರು.

    ಶಿಕ್ಷಣದಿಂದ ಮಾತ್ರ ಒಂದು ದೇಶ ಬಹಳ ಉನ್ನತಿ ಹೊಂದಲು ಸಾಧ್ಯ. ಕಳೆದ 10 ವರ್ಷಗಳಲ್ಲಿ ಮೋದಿ ಸರ್ಕಾರ ಶಿಕ್ಷಣಕ್ಕೆ ಬಹಳ ಪ್ರಾಮುಖ್ಯತೆ ನೀಡಿದೆ. ಪ್ರತಿದಿನ ಭಾರತದಲ್ಲಿ 30 ಕಿಮೀ ರಾಷ್ಟ್ರೀಯ ಹೆದ್ದಾರಿ ನಿರ್ಮಾಣವಾಗುತ್ತೆ. ವಾರಕ್ಕೊಂದರಂತೆ ಭಾರತದಲ್ಲಿ ಹೊಸ ವಿಶ್ವವಿದ್ಯಾಲಯ ಪ್ರಾರಂಭವಾಗ್ತಿದೆ‌. ಇವೆಲ್ಲವೂ ಸರ್ಕಾರ ಮಾಡಲೇಬೇಕಾದ ಕೆಲಸಗಳು. ಮುಂದಿನ ದಿನಗಳಲ್ಲಿ ಎಲ್ಲವೂ ಡಿಜಿಟಲ್‌ ಆಗಲಿದೆ. ಈಗಾಗಲೇ ಕೃತಕ ಬುದ್ಧಿಮತ್ತೆ ತಾಂತ್ರಿಕತೆ, ಎಲೆಕ್ಟ್ರಿಕಲ್‌ ವಾಹನ ಈ ಜನರೇಷನ್‌ನ ನಾಡಿಮಿಡಿತವಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಕೇವಲ 100 ರೂ. ಕ್ಯಾನ್ಸರ್‌ಗೆ ಚಿಕಿತ್ಸೆ – ಟಾಟಾ ಸಂಸ್ಥೆಯಿಂದ ಮಾತ್ರೆ ಅಭಿವೃದ್ಧಿ

    ಭಾರತದಲ್ಲಿ ಮೊದಲು 77 ಪಾಸ್‌ಪೋರ್ಟ್ ಕೇಂದ್ರಗಳಿದ್ದವು. ಈಗ 575 ಪಾಸ್‌ಪೋರ್ಟ್ ಕೇಂದ್ರಗಳಿವೆ. ಕೋಟ್ಯಂತರ ಜನರು ವಿದೇಶಗಳಲ್ಲಿ ನೆಲೆಸಿದ್ದಾರೆ‌. ಅವರೆಲ್ಲರನ್ನು ವಂದೇ ಭಾರತ ಎಂಬ ವೇದಿಕೆಯಡಿಯಲ್ಲಿ ಒಗ್ಗೂಡಿಸಲಾಗಿದೆ. ವಿದೇಶಗಳಲ್ಲಿ ಅನೇಕ ಯುದ್ಧದ ಪರಿಸ್ಥಿತಿ ನಿರ್ಮಾಣವಾಗಿದೆ. ವಿದೇಶಗಳಲ್ಲಿ ನೆಲೆಸುವ ಪ್ರತಿಯೊಬ್ಬ ಭಾರತೀಯನನ್ನ ಕಾಪಾಡುವುದು ನಮ್ಮ ಕರ್ತವ್ಯ. ಪ್ರಧಾನಿ ಮೋದಿ ಸರ್ಕಾರದಲ್ಲಿ ವಿದೇಶದಲ್ಲಿ ನೆಲೆಸಿರುವ ಭಾರತದ ಪ್ರಜೆಗಳಿಗೂ ರಕ್ಷಣೆ ಸಿಗ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇದನ್ನೂ ಓದಿ: ಮಹಿಳೆಯರು ಏನನ್ನು ಧರಿಸಬೇಕು ಅನ್ನೋದು ಅವರ ವೈಯಕ್ತಿಕ ವಿಚಾರ – ಹಿಜಬ್‌ ಬಗ್ಗೆ ಕೇಳಿದ್ದಕ್ಕೆ ರಾಹುಲ್‌ ಉತ್ತರ

  • ವಿದೇಶಾಂಗ ಸಚಿವ ಜೈಶಂಕರ್ ಫೆ.28ಕ್ಕೆ ಹುಬ್ಬಳ್ಳಿಗೆ ಆಗಮನ

    ವಿದೇಶಾಂಗ ಸಚಿವ ಜೈಶಂಕರ್ ಫೆ.28ಕ್ಕೆ ಹುಬ್ಬಳ್ಳಿಗೆ ಆಗಮನ

    ಹುಬ್ಬಳ್ಳಿ: ಭಾರತೀಯ ವಿದೇಶಾಂಗ ಸಚಿವ ಎಸ್. ಜೈಶಂಕರ್ (S Jaishankar) ಅವರು ಫೆ.28ರಂದು ವಾಣಿಜ್ಯ ನಗರಿ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ (PM Narendra Modi) ನೇತೃತ್ವದಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ (Dharwad Lok Sabha Constituency) ಕೇಂದ್ರ ಸರ್ಕಾರ ಕೈಗೊಂಡ ಅಭಿವೃದ್ಧಿ ಕಾರ್ಯಗಳ ಕುರಿತಾದ ಪುಸ್ತಕವನ್ನು ಜೈಶಂಕರ್ ಅಂದು ಬಿಡುಗಡೆಗೊಳಿಸಲಿದ್ದಾರೆ.  ಇದನ್ನೂ ಓದಿ: ಮೊದಲ 100 ದಿನ ಏನು ಮಾಡಬೇಕು? – ಹೊಸ ಸರ್ಕಾರದ ಕೆಲಸಕ್ಕೆ ಈಗಲೇ ತಯಾರಿ ಆರಂಭಿಸಿದ ಮೋದಿ

     

    ಹುಬ್ಬಳ್ಳಿ ಬಿವಿಬಿ ಕಾಲೇಜು ಆವರಣದಲ್ಲಿ ಫೆ.28ರಂದು ಸಂಜೆ 4:30ಕ್ಕೆ ಪುಸ್ತಕ ಬಿಡುಗಡೆ ಸಮಾರಂಭ ಜರುಗಲಿದೆ. ಇದನ್ನೂ ಓದಿ: 2017ರಲ್ಲಿ ಶಂಕುಸ್ಥಾಪನೆ ಈಗ ಲೋಕಾರ್ಪಣೆ – ಮೋದಿಯಿಂದ ದೇಶದ ಅತೀ ಉದ್ದದ ಕೇಬಲ್‌ ಸೇತುವೆ ಉದ್ಘಾಟನೆ

    ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಧಾರವಾಡ ಲೋಕಸಭೆ ಕ್ಷೇತ್ರದಲ್ಲಿ ಕಳೆದ 10 ವರ್ಷಗಳಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳು ಹಾಗೂ ಕ್ಷೇತ್ರದ ಸಂಸದ ಪ್ರಹ್ಲಾದ್‌ ಜೋಶಿ (Pralhad Joshi) ಅವರ 16 ವರ್ಷದ ಅವಧಿಯಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳ ಸಂಪೂರ್ಣ ಮಾಹಿತಿ ಒಳಗೊಂಡ ಪುಸ್ತಕ ಇದಾಗಿದೆ.

    ಕ್ಷೇತ್ರದ ಪ್ರತಿಯೊಬ್ಬ ನಾಗರಿಕನ ಸಬಲೀಕರಣಕ್ಕಾಗಿ ಕೈಗೊಂಡ ಚಟುವಟಿಕೆಗಳನ್ನು ಈ ಪುಸ್ತಕ ವಿಸ್ತಾರವಾಗಿ ಒಳಗೊಂಡಿದೆ ಎಂದು ಸಚಿವ ಪ್ರಹ್ಲಾದ್‌ ಜೋಶಿ ತಿಳಿಸಿದ್ದಾರೆ.

     

  • ರಷ್ಯಾ ಯುದ್ಧಭೂಮಿಯಲ್ಲಿ ಸಿಲುಕಿರುವ ಕಲಬುರಗಿ ಯುವಕರು – ರಕ್ಷಣೆಗಾಗಿ ವಿದೇಶಾಂಗ ಸಚಿವರಿಗೆ ಖರ್ಗೆ ಪತ್ರ

    ರಷ್ಯಾ ಯುದ್ಧಭೂಮಿಯಲ್ಲಿ ಸಿಲುಕಿರುವ ಕಲಬುರಗಿ ಯುವಕರು – ರಕ್ಷಣೆಗಾಗಿ ವಿದೇಶಾಂಗ ಸಚಿವರಿಗೆ ಖರ್ಗೆ ಪತ್ರ

    ಕಲಬುರಗಿ: ಯುದ್ಧಪೀಡಿತ ರಷ್ಯಾದಲ್ಲಿ (Russia) ಸಿಲುಕಿರುವ ಕಲಬುರಗಿ (Kalaburagi) ಮೂಲದ ಮೂವರ ರಕ್ಷಣೆಗೆ ವಿದೇಶಾಂಗ ಸಚಿವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಪತ್ರ ಬರೆದಿದ್ದಾರೆ.

    ಕಲಬುರಗಿ ಜಿಲ್ಲೆಯ ಮೂವರು ಯುವಕರು ಯುದ್ಧಪೀಡಿತ ರಷ್ಯಾದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕುರಿತು ವರದಿಯಾಗಿದ್ದು, ಈ ಹಿನ್ನೆಲೆಯಲ್ಲಿ ನಮ್ಮ ಕಲಬುರಗಿ ಯುವಕರನ್ನು ಸುರಕ್ಷಿತವಾಗಿ ಮರಳಿ ಕರೆತರುವಂತೆ ಮಲ್ಲಿಕಾರ್ಜುನ ಖರ್ಗೆ ಅವರು ಕೇಂದ್ರದ ವಿದೇಶಾಂಗ ಸಚಿವ ಎಸ್. ಜೈಶಂಕರ್ (S Jaishankar) ಅವರಿಗೆ ಪತ್ರ (Letter) ಬರೆದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ರಷ್ಯಾದ ಡೇಂಜರ್‌ ಸೇನೆಯಲ್ಲಿದ್ದಾರೆ ಕಲಬುರಗಿಯ ಮೂವರು – ನಮ್ಮನ್ನು ರಕ್ಷಿಸಿ ಎಂದ ಯುವಕರು

    ಕಲಬುರಗಿ ಜಿಲ್ಲೆಯ ಮೂವರು ಯುವಕರು ಹಾಗೂ ತೆಲಂಗಾಣದ ಒಬ್ಬ ಯುವಕನಿಗೆ ಉದ್ಯೋಗದ ಆಮಿಷವೊಡ್ಡಿ ಇದೀಗ ಅವರನ್ನು ಬಲವಂತವಾಗಿ ಉಕ್ರೇನ್ (Ukraine) ವಿರುದ್ಧದ ಯುದ್ಧಕ್ಕೆ ತಳ್ಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮಾಧ್ಯಮಗಳ ವರದಿ ಪ್ರಕಾರ ಕಳೆದ ಒಂದು ವರ್ಷದಲ್ಲಿ ಭಾರತದ ನೂರಕ್ಕೂ ಹೆಚ್ಚು ಯುವಕರನ್ನು ರಷ್ಯಾದ ಸೈನ್ಯದಲ್ಲಿ ಸಹಾಯಕರಾಗಿ ನೇಮಿಸಿಕೊಳ್ಳಲಾಗಿದೆ ಎಂಬ ಆಘಾತಕಾರಿ ವಿಷಯಗಳು ಬಿತ್ತರವಾಗುತ್ತಿದೆ. ಇದನ್ನೂ ಓದಿ: ಸರ್ಕಾರದ ವಿರುದ್ಧ ಶುಕ್ರವಾರ ರಾಜ್ಯಾದ್ಯಂತ ಪ್ರತಿಭಟನೆಗೆ ಬಿಜೆಪಿ ಕರೆ!

    ರಷ್ಯಾದಲ್ಲಿ ಸಿಲುಕಿ ಸಂಕಷ್ಟ ಎದುರಿಸುತ್ತಿರುವ ಎಲ್ಲಾ ಭಾರತೀಯರು ಹಾಗೂ ಕನ್ನಡಿಗರನ್ನು ಸುರಕ್ಷಿತವಾಗಿ ತಾಯ್ನಡಿಗೆ ಕರೆತರುವಂತೆ ಪತ್ರದ ಮೂಲಕ ಖರ್ಗೆವಿನಂತಿಸಿದ್ದಾರೆ. ಇದನ್ನೂ ಓದಿ: ಭಿನ್ನಾಭಿಪ್ರಾಯಗಳನ್ನು ಮರೆತು ಗೆಲ್ಲಲೇಬೇಕು ಎಂಬ ಛಲದಿಂದ ಕೆಲಸ ಮಾಡಬೇಕು: ಕಾರ್ಯಕರ್ತರಿಗೆ ಸಿದ್ದರಾಮಯ್ಯ ಕರೆ

  • ಕತಾರ್‌ನಲ್ಲಿ ಭಾರತೀಯ ನೌಕಾಪಡೆಯ 8 ಮಾಜಿ ಸಿಬ್ಬಂದಿಗೆ ಮರಣದಂಡನೆ; ಕುಟುಂಬಸ್ಥರ ಭೇಟಿಯಾದ ವಿದೇಶಾಂಗ ಸಚಿವ

    ಕತಾರ್‌ನಲ್ಲಿ ಭಾರತೀಯ ನೌಕಾಪಡೆಯ 8 ಮಾಜಿ ಸಿಬ್ಬಂದಿಗೆ ಮರಣದಂಡನೆ; ಕುಟುಂಬಸ್ಥರ ಭೇಟಿಯಾದ ವಿದೇಶಾಂಗ ಸಚಿವ

    ನವದೆಹಲಿ: ಕತಾರ್‌ನಲ್ಲಿ (Qatar) ಮರಣದಂಡನೆಗೆ ಗುರಿಯಾಗಿರುವ ಭಾರತೀಯ ನೌಕಾಪಡೆಯ (Former Navy Personnel) 8 ಮಂದಿ ಮಾಜಿ ಸಿಬ್ಬಂದಿ ಕುಟುಂಬಸ್ಥರನ್ನು ವಿದೇಶಾಂಗ ಸಚಿವ ಎಸ್.‌ ಜೈಶಂಕರ್‌ (Jaishankar) ಭೇಟಿಯಾದರು.

    ಕುಟುಂಬಸ್ಥರ ಕಳವಳ ಮತ್ತು ನೋವಿಗೆ ಸ್ಪಂದಿಸಿದ ಜೈಶಂಕರ್‌, ಅವರ ಬಿಡುಗಡೆಗೆ ಭಾರತವು ಎಲ್ಲಾ ಪ್ರಯತ್ನಗಳನ್ನು ಮಾಡುವುದನ್ನು ಮುಂದುವರಿಸುತ್ತದೆ ಎಂದು ಅಭಯ ನೀಡಿದ್ದಾರೆ. ಇದನ್ನೂ ಓದಿ: ಕತಾರ್‌ನಲ್ಲಿ ಬಂಧಿತರಾಗಿದ್ದ 8 ಮಾಜಿ ನೌಕಾಪಡೆ ಸಿಬ್ಬಂದಿಗೆ ಮರಣದಂಡನೆ! – ಭಾರತಕ್ಕೆ ಆಘಾತ

    ಈ ಕುರಿತು ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಜೈಶಂಕರ್‌, ಕತಾರ್‌ನಲ್ಲಿ ಬಂಧಿತರಾಗಿರುವ 8 ಭಾರತೀಯರ ಕುಟುಂಬಗಳನ್ನು ಭೇಟಿಯಾದೆ. ಪ್ರಕರಣಕ್ಕೆ ಸರ್ಕಾರ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತದೆ. ಅವರ ಬಿಡುಗಡೆಗೆ ಸರ್ಕಾರ ಎಲ್ಲಾ ಪ್ರಯತ್ನಗಳನ್ನು ಮಾಡುವುದನ್ನು ಮುಂದುವರಿಸುತ್ತದೆ. ಆ ನಿಟ್ಟಿನಲ್ಲಿ ಕುಟುಂಬಗಳೊಂದಿಗೆ ನಿಕಟವಾಗಿ ಸಮನ್ವಯ ಸಾಧಿಸುತ್ತದೆ ಎಂದು ತಿಳಿಸಿದ್ದಾರೆ.

    ಕತಾರ್‌ನಲ್ಲಿ 1 ವರ್ಷಕ್ಕೂ ಹೆಚ್ಚು ಕಾಲ ಬಂಧಿತರಾಗಿರುವ ಭಾರತೀಯ ನೌಕಾಪಡೆಯ 8 ಮಾಜಿ ಸಿಬ್ಬಂದಿಗೆ ಗುರುವಾರ ಕತಾರ್‌ನ ನ್ಯಾಯಾಲಯ ಮರಣದಂಡನೆ ವಿಧಿಸಿದೆ. ಈ ತೀರ್ಪಿಗೆ ಭಾರತ (India) ತೀವ್ರ ಆಘಾತ ವ್ಯಕ್ತಪಡಿಸಿದೆ. ಸಿಬ್ಬಂದಿ ಬಿಡುಗಡೆಗೆ ಸಾಧ್ಯವಿರುವ ಎಲ್ಲಾ ಕಾನೂನು ಕ್ರಮಗಳನ್ನು ಅನ್ವೇಷಿಸುತ್ತಿರುವುದಾಗಿ ಹೇಳಿತ್ತು. ಇದನ್ನೂ ಓದಿ: ಫೇಸ್‍ಬುಕ್ ಗೆಳೆಯನಿಗಾಗಿ ಪಾಕ್‍ಗೆ ತೆರಳಿದ್ದಾಕೆಗೆ ಈಗ ಮಕ್ಕಳನ್ನು ನೋಡುವ ಬಯಕೆ!

    ನಾವು ಮರಣದಂಡನೆಯ ತೀರ್ಪಿನಿಂದ ತೀವ್ರ ಆಘಾತಕ್ಕೊಳಗಾಗಿದ್ದೇವೆ ಮತ್ತು ವಿವರವಾದ ತೀರ್ಪಿಗಾಗಿ ಕಾಯುತ್ತಿದ್ದೇವೆ. ನಾವು ಅವರ ಕುಟುಂಬ ಸದಸ್ಯರು ಮತ್ತು ಕಾನೂನು ತಂಡದೊಂದಿಗೆ ಸಂಪರ್ಕದಲ್ಲಿದ್ದೇವೆ. ಸಾಧ್ಯವಿರುವ ಎಲ್ಲಾ ಕಾನೂನು ಆಯ್ಕೆಗಳನ್ನು ಅನ್ವೇಷಿಸುತ್ತಿದ್ದೇವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಅಧಿಕೃತ ಹೇಳಿಕೆಯಲ್ಲಿ ತಿಳಿಸಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಇಸ್ರೇಲ್‍ನಿಂದ ಭಾರತೀಯರನ್ನು ಕರೆತರಲು ಅಪರೇಷನ್ ಅಜಯ್ ಆರಂಭಿಸಿದ ಕೇಂದ್ರ ಸರ್ಕಾರ

    ಇಸ್ರೇಲ್‍ನಿಂದ ಭಾರತೀಯರನ್ನು ಕರೆತರಲು ಅಪರೇಷನ್ ಅಜಯ್ ಆರಂಭಿಸಿದ ಕೇಂದ್ರ ಸರ್ಕಾರ

    ನವದೆಹಲಿ: ಯುದ್ಧ ಪೀಡಿತ ಇಸ್ರೇಲ್‍ನಲ್ಲಿ (Israel) ಸಿಲುಕಿರುವ ಭಾರತೀಯರನ್ನು (India) ಕರೆತರಲು ಕೇಂದ್ರ ಸರ್ಕಾರ ಆಪರೇಷನ್ ಅಜಯ್ (Operation Ajay) ಹೆಸರಿನಲ್ಲಿ ವಿಶೇಷ ವಿಮಾನಗಳನ್ನು ಕಳಿಸಿಕೊಡಲು ಸಿದ್ಧತೆ ನಡೆಸಿದೆ.

    ಇಸ್ರೇಲ್‍ನಲ್ಲಿ 18,000 ಭಾರತೀಯರಿದ್ದಾರೆ. ಅವರನ್ನು ಕರೆತರಲು ವಿಶೇಷ ಚಾರ್ಟರ್ ಫ್ಲೈಟ್‍ಗಳನ್ನು ಕಳಿಸಲಾಗುವುದು. ವಿದೇಶದಲ್ಲಿರುವ ನಮ್ಮ ಪ್ರಜೆಗಳ ಸುರಕ್ಷತೆ ಮತ್ತು ಯೋಗಕ್ಷೇಮಕ್ಕೆ ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದು ವಿದೇಶಾಂಗ ಸಚಿವ ಎಸ್.ಜೈಶಂಕರ್  (S.Jaishankar) ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಇಸ್ರೇಲ್, ಹಮಾಸ್ ಸಂಘರ್ಷ- ಭಾರತದ ಆರ್ಥಿಕ ಕಾರಿಡಾರ್ ಯೋಜನೆಗೆ ಯುದ್ಧದ ಕಾರ್ಮೋಡ

    ಹಿಂದಿರುಗಲು ಮೊದಲು ನೋಂದಾಯಿಸಿದ ಭಾರತೀಯರಿಗೆ ಸೂಚನೆ ನೀಡಲಾಗಿದೆ. ನಾಳೆ ಭಾರತಕ್ಕೆ ಮೊದಲ ವಿಶೇಷ ವಿಮಾನದಲ್ಲಿ ಅವರನ್ನು ಕಳಿಸಲಾಗುವುದು. ಅಲ್ಲದೇ ನೋಂದಾಯಿತರಿಗೆ ಇಮೇಲ್ ಮೂಲಕ ಸಂದೇಶ ರವಾನಿಸಲಾಗಿದೆ ಎಂದು ಇಸ್ರೇಲ್‍ನಲ್ಲಿರುವ ಭಾರತದ ರಾಯಭಾರ ಕಚೇರಿ ತಿಳಿಸಿದೆ.

    ಇದುವರೆಗೂ ಇಸ್ರೇಲ್ ಹಾಗೂ ಹಮಾಸ್ ಉಗ್ರರ ನಡುವಿನ ಯುದ್ಧದಲ್ಲಿ ಸುಮಾರು 3,000ಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ಇಸ್ರೇಲ್‌ಗೆ ಬಂದಿಳಿದ ಅಮೆರಿಕದ ಶಸ್ತ್ರಾಸ್ತ್ರ ಹೊತ್ತ ಮೊದಲ ವಿಮಾನ – ಇಸ್ರೇಲ್‌ಗೆ ನೂರಾನೆ ಬಲ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚೀನಾ, ಪಾಕಿಸ್ತಾನದೊಂದಿಗೆ ಸಂಬಂಧ ಕಷ್ಟ: ಜೈಶಂಕರ್

    ಚೀನಾ, ಪಾಕಿಸ್ತಾನದೊಂದಿಗೆ ಸಂಬಂಧ ಕಷ್ಟ: ಜೈಶಂಕರ್

    ಎಲ್ಲಿಯವರೆಗೆ ಪಾಕ್ ಭಯೋತ್ಪಾದನೆಗೆ ಕುಮ್ಮಕ್ಕು ಕೊಡುತ್ತೋ ಅಲ್ಲಿಯವರೆಗೆ ಮಾತುಕತೆ ಇಲ್ಲ

    ನವದೆಹಲಿ: ಯಾವುದೇ ಒಂದು ಸದಸ್ಯ ರಾಷ್ಟ್ರ ಭಯೋತ್ಪಾದನಾ ಕೃತ್ಯದಲ್ಲಿ ತೊಡಗಿದ್ದರೂ ಭಾರತ ‘ಸಾರ್ಕ್’ನೊಂದಿಗೆ (ದಕ್ಷಿಣ ಏಷ್ಯಾ ಪ್ರಾದೇಶಿಕ ಸಹಕಾರ ಸಂಘ) ಸಭೆ ನಡೆಸುವುದಿಲ್ಲ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ (S Jaishankar) ಹೇಳಿದ್ದಾರೆ.

    ನವದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಜೈಶಂಕರ್, ಪಾಕಿಸ್ತಾನದಲ್ಲಿ (Pakistan) ಸಮಸ್ಯೆಗಳಿವೆ ಎಂಬುದು ನಮಗೆ ತಿಳಿದಿದೆ. ಹಾಗೂ ಸಮಸ್ಯೆಗಳ ಗಂಭೀರತೆಯನ್ನು ಗುರುತಿಸುವ ಸಮಯ ಇದಾಗಿದೆ. ಪಾಕಿಸ್ತಾನ ಕತ್ತಲಿನ ವೇಳೆಯಲ್ಲಿ ಭಯೋತ್ಪಾದನೆಯನ್ನು ನಡೆಸಿ, ಹಗಲಿನ ವೇಳೆಯಲ್ಲಿ ವ್ಯಾಪಾರವನ್ನು ನಡೆಸುವ ಪರಿಸ್ಥಿತಿಯನ್ನು ಭಾರತ ಎಂದಿಗೂ ಸಹಿಸುವುದಿಲ್ಲ. ಹಾಗೇನಾದರೂ ಆದರೆ ದೇಶ ಸರಿಯಾಗಿ ಕಾರ್ಯ ನಿರ್ವಹಿಸುವುದರಲ್ಲಿ ವಿಫಲವಾಗುತ್ತದೆ ಎಂದು ಹೇಳಿದ್ದಾರೆ.

    ಗಡಿಯಲ್ಲಿ ಶಾಂತಿ ನಿರ್ಮಾಣದತ್ತ ಚೀನಾ ಮುಖ ಮಾಡಬೇಕು:
    ಭಾರತ ಹಾಗೂ ಚೀನಾ (China) ನಡುವಿನ ಗಡಿ ಭಾಗದ ಸ್ಥಿತಿ ಇಂದಿಗೂ ಅಸಹಜವಾಗಿದೆ. ಗಡಿ ನಿರ್ವಹಣೆಗೆ ಸಂಬಂಧಿಸಿದ ಒಪ್ಪಂದಗಳ ಉಲ್ಲಂಘನೆಯಾಗಿರುವುದರಿಂದಾಗಿ ಭಾರತ ಹಾಗೂ ಚೀನಾ ನಡುವಿನ ಸಂಬಂಧ ಕಷ್ಟದ ಹಂತದಲ್ಲಿ ಸಾಗುತ್ತಿದೆ. ಇದನ್ನೂ ಓದಿ: ದೇಶದಾದ್ಯಂತ ಬಕ್ರೀದ್ ಹಬ್ಬ ಆಚರಣೆ – ಮುಸ್ಲಿಂ ಬಾಂಧವರಿಗೆ ಶುಭಾಶಯ ಕೋರಿದ ಪ್ರಧಾನಿ

    ಯಾವುದೇ ಸಂಬಂಧಗಳು ಪರಸ್ಪರರ ಆಸಕ್ತಿಗಳನ್ನು ಹಾಗೂ ಸೂಕ್ಷ್ಮತೆಗಳಿಗೆ ಗೌರವ ನೀಡಬೇಕು. ಚೀನಾ ಗಡಿಯಲ್ಲಿ ಶಾಂತಿ ನಿರ್ಮಾಣದತ್ತ ಮುಖ ಮಾಡಬೇಕು. ಶಾಂತಿ ಒಪ್ಪಂದಗಳನ್ನು ಮೀರಿ ಕೃತ್ಯಗಳನ್ನು ನಡೆಸಿದರೆ ಕಷ್ಟ ಎಂದು ಜೈಶಂಕರ್ ಹೇಳಿದರು. ಇದನ್ನೂ ಓದಿ: ಹಿಂಸಾಚಾರ ಪೀಡಿತ ಮಣಿಪುರಕ್ಕೆ ರಾಹುಲ್ ಗಾಂಧಿ ಭೇಟಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸುಡಾನ್ ಹಿಂಸಾಚಾರ – ಭಾರತೀಯರ ರಕ್ಷಣೆಗೆ ‘ಆಪರೇಷನ್ ಕಾವೇರಿ’

    ಸುಡಾನ್ ಹಿಂಸಾಚಾರ – ಭಾರತೀಯರ ರಕ್ಷಣೆಗೆ ‘ಆಪರೇಷನ್ ಕಾವೇರಿ’

    ನವದೆಹಲಿ: ಸುಡಾನ್‍ನ (Sudan) ಯುದ್ಧ ಪೀಡಿತ ಪ್ರದೇಶದಲ್ಲಿ ಸಿಲುಕಿರುವ ದೇಶದ ನಾಗರಿಕರನ್ನು ಸ್ಥಳಾಂತರಿಸಲು ಭಾರತ (India) ಸರ್ಕಾರವು ಆಪರೇಷನ್ ಕಾವೇರಿ (Operation Kaveri) ಪ್ರಾರಂಭಿಸಿದೆ ಎಂದು ಕೇಂದ್ರ ಸಚಿವ ಎಸ್. ಶಂಕರ್ (S Jaishankar) ತಿಳಿಸಿದರು.

    ಈಗಾಗಲೇ ಸುಮಾರು 500 ಭಾರತೀಯರು ಸುಡಾನ್‌ನ ಬಂದರು ಬಳಿ ತಲುಪಿದ್ದಾರೆ. ರಕ್ಷಣಾ ಕಾರ್ಯಾಚರಣೆಗೆ ಆಪರೇಷನ್ ಕಾವೇರಿ ಎಂದು ಹೆಸರಿಡಲಾಗಿದೆ ಎಂದು ಟ್ವೀಟ್‍ನಲ್ಲಿ ಮಾಹಿತಿ ನೀಡಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ?: ಸುಡಾನ್‍ನಲ್ಲಿ ಸಿಲುಕಿರುವ ನಮ್ಮ ನಾಗರಿಕರನ್ನು ಮರಳಿ ಕರೆತರಲು ಆಪರೇಷನ್ ಕಾವೇರಿ ಪ್ರಾರಂಭಗೊಂಡಿದೆ. ಸುಮಾರು 500 ಭಾರತೀಯರು ಸುಡಾನ್‍ನ ಬಂದರು ಬಳಿ ತಲುಪಿದ್ದಾರೆ. ಈಗಾಗಲೇ ಅವರನ್ನು ಸುರಕ್ಷಿತವಾಗಿ ಕರೆತರಲು ನಮ್ಮ ದೇಶದ ಹಡುಗುಗಳು ಹಾಗೂ ವಿಮಾನಗಳು ಸಜ್ಜಾಗಿವೆ. ಸುಡಾನ್‍ನಲ್ಲಿರುವ ನಮ್ಮ ಎಲ್ಲ ಸಹೋದರರಿಗೆ ಸಹಾಯ ಮಾಡಲು ಬದ್ಧವಾಗಿದ್ದೇವೆ ಎಂದರು.

    ಸೇನೆ ಹಾಗೂ ಅರೆಸೇನಾ ಪಡೆಗಳ ನಡುವಿನ ಘರ್ಷಣೆಯಿಂದ ಸುಡಾನ್ ರಾಜಧಾನಿ ಸೇರಿದಂತೆ ದೇಶಾದ್ಯಂತ ಹಿಂಸಾಚಾರ ಭುಗಿಲೆದ್ದಿದೆ. ಮಿಲಿಟರಿ ಆಡಳಿತದ ವಿರುದ್ಧ ಅರೆಸೇನಾಪಡೆ ದಂಗೆ ಎದ್ದಿದ್ದು, ಖಾರ್ಟೂಮ್‌ನಲ್ಲಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಅಧ್ಯಕ್ಷರ ನಿವಾಸವನ್ನು ವಶಪಡಿಸಿಕೊಳ್ಳಲು ಪ್ರಯತ್ನಿಸಿದೆ. ಈ ಹಿನ್ನೆಲೆ ಎರಡೂ ಕಡೆಗಳಿಂದ ಹಿಂಸಾಚಾರ ಭುಗಿಲೆದ್ದಿದೆ. ಇದನ್ನೂ ಓದಿ: ಸುಡಾನ್ ಸಂಘರ್ಷ – ಭಾರತೀಯರು ಸೇರಿದಂತೆ 150 ಜನರನ್ನು ಸುರಕ್ಷಿತವಾಗಿ ಕರೆತಂದ ಸೌದಿ ಅರೇಬಿಯಾ

    ಈಗಾಗಲೇ ಘರ್ಷಣೆ ನಡೆಯುತ್ತಿರುವ ಪ್ರದೇಶಗಳಿಂದ ಭಾರತದ ನಾಗರಿಕರನ್ನು ರಕ್ಷಿಸಿ ಕರೆತರಲು ಭಾರತೀಯ ರಾಯಭಾರ ಕಚೇರಿಯ  (Indian Embassy) ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಸುಡಾನ್ ಹಿಂಸಾಚಾರ – ವಿಮಾನ ನಿಲ್ದಾಣಗಳ ಸ್ಥಗಿತ; ಪ್ರಜೆಗಳನ್ನು ಕರೆತರಲು ಭೂಮಾರ್ಗ ಹುಡುಕಾಟದಲ್ಲಿ ಭಾರತ

  • ವಿಶ್ವಸಂಸ್ಥೆಯ ಸಂಖ್ಯಾ ಆಯೋಗದ ಚುನಾವಣೆಯಲ್ಲಿ ಭಾರತ ಆಯ್ಕೆ

    ವಿಶ್ವಸಂಸ್ಥೆಯ ಸಂಖ್ಯಾ ಆಯೋಗದ ಚುನಾವಣೆಯಲ್ಲಿ ಭಾರತ ಆಯ್ಕೆ

    ವಿಶ್ವಸಂಸ್ಥೆ: ವಿಶ್ವಸಂಸ್ಥೆಯ (United Nations) ಅಂಕಿಅಂಶ ಆಯೋಗ ಹಾಗೂ ಇತರ 2 ಸಂಸ್ಥೆಗಳಿಗೆ ಭಾರತ (India) ಆಯ್ಕೆಯಾಗಿದೆ. ಆದರೆ ಈ ಕ್ರಮವನ್ನು ವಿರೋಧಿಸಿದ ಚೀನಾ (China) ಅಗತ್ಯ ಮತಗಳನ್ನು ಗಳಿಸಲು ಸಾಧ್ಯವಾಗದೇ ಸೋಲು ಅನುಭವಿಸಿದೆ.

    ಯುಎನ್ ಎಕನಾಮಿಕ್ ಅಂಡ್ ಸೋಶಿಯಲ್ ಕೌನ್ಸಿಲ್‌ನಿಂದ (ಇಕೋಸಾಕ್) ನಾರ್ಕೋಟಿಕ್ ಡ್ರಗ್ಸ್ ಆಯೋಗ ಮತ್ತು ಹೆಚ್‌ಐವಿ/ಏಡ್ಸ್ ಕುರಿತ ಜಂಟಿ ವಿಶ್ವಸಂಸ್ಥೆಯ ಕಾರ್ಯಕ್ರಮದ ಸಮನ್ವಯ ಮಂಡಳಿಗೆ ಬುಧವಾರ ನಡೆದ 2 ಚುನಾವಣೆಗಳಲ್ಲಿ ಭಾರತವನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

    ಸಂಖ್ಯಾ ಆಯೋಗದ ಚುನಾವಣೆಯಲ್ಲಿ ಭಾರತ 53ಕ್ಕೆ 46 ಮತಗಳನ್ನು ಪಡೆಯಿತು. ಪ್ರತಿಸ್ಪರ್ಧಿಗಳಾದ ರಿಪಬ್ಲಿಕ್ ಆಫ್ ಕೊರಿಯಾ- 23, ಚೀನಾ- 19, ಹಾಗೂ ಯುನೈಟೆಡ್ ಅರಬ್ ಎಮಿರೇಟ್ಸ್- 15 ಮತಗಳನ್ನು ಪಡೆದಿವೆ. ಇದನ್ನೂ ಓದಿ: ಕಾಂಗ್ರೆಸ್‌ನಿಂದ ಅಭ್ಯರ್ಥಿಗಳ 2ನೇ ಪಟ್ಟಿ ರಿಲೀಸ್ – ಯಾರಿಗೆ ಎಲ್ಲಿ ಟಿಕೆಟ್?

    ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರು ಟ್ವಿಟ್ಟರ್‌ನಲ್ಲಿ ಈ ವಿಷಯವನ್ನು ತಿಳಿಸಿ, ಹರ್ಷ ವ್ಯಕ್ತಪಡಿಸಿದ್ದಾರೆ. ಅಂಕಿಅಂಶ, ವೈವಿಧ್ಯತೆ ಹಾಗೂ ಜನಸಂಖ್ಯಾ ಕ್ಷೇತ್ರದಲ್ಲಿನ ಭಾರತದ ಪರಿಣತಿಯು ವಿಶ್ವಸಂಸ್ಥೆಯ ಸಂಖ್ಯಾ ಆಯೋಗದ ಸ್ಥಾನ ಗಳಿಸಲು ನೆರವಾಗಿದೆ ಎಂದು ಅವರು ತಿಳಿಸಿದ್ದಾರೆ.

    ಇದೀಗ ವಿಶ್ವಸಂಸ್ಥೆಯ ಸಂಖ್ಯಾ ಆಯೋಗದ ಮುಂದಿನ 4 ವರ್ಷಗಳ ಅವಧಿಗೆ ಭಾರತ ಆಯ್ಕೆಯಾಗಿದ್ದು, 2024ರ ಜನವರಿ 1 ರಿಂದ ಅಧಿಕಾರಾವಧಿ ಪ್ರಾರಂಭವಾಗಲಿದೆ. ಇದನ್ನೂ ಓದಿ: ಅಮಿತ್ ಶಾ ಸೂಚನೆಯನ್ನೇ ಧಿಕ್ಕರಿಸಿದ ಏಕನಾಥ ಶಿಂಧೆ