Tag: S/O Muttanna

  • ದೇವರಾಜ್ ಪುತ್ರ ಪ್ರಣಂ ಸಿನಿಮಾ ಹಾಡಿಗೆ ಸಂಜಿತ್ ಹೆಗ್ಡೆ ದನಿ

    ದೇವರಾಜ್ ಪುತ್ರ ಪ್ರಣಂ ಸಿನಿಮಾ ಹಾಡಿಗೆ ಸಂಜಿತ್ ಹೆಗ್ಡೆ ದನಿ

    ಪುರಾತನ ಫಿಲಂಸ್ ನಿರ್ಮಾಣದ, ಶ್ರೀಕಾಂತ್ ಹುಣಸೂರು ನಿರ್ದೇಶನದ ಹಾಗೂ ಡೈನಾಮಿಕ್ ಸ್ಟಾರ್ ದೇವರಾಜ್ ಅವರ ದ್ವಿತೀಯ ಪುತ್ರ ಪ್ರಣಂ ದೇವರಾಜ್ ನಾಯಕನಾಗಿ ಹಾಗೂ `ದಿಯಾ’ ಖ್ಯಾತಿಯ ಖುಷಿ ರವಿ (Kushi Ravi) ನಾಯಕಿಯಾಗಿ ನಟಿಸಿರುವ `S/O ಮುತ್ತಣ್ಣ’ (`S/O Muttanna) ಚಿತ್ರಕ್ಕಾಗಿ ಯೋಗರಾಜ್ ಭಟ್ ಅವರು ಬರೆದಿರುವ, ಸಂಜಿತ್ ಹೆಗ್ಡೆ ಹಾಡಿರುವ ಹಾಗೂ ಸಚಿನ್ ಬಸ್ರೂರ್ ಸಂಗೀತ ನೀಡಿರುವ `ಮಿಡ್ ನೈಟ್ ರಸ್ತೆಯಲ್ಲಿ’ ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಯಿತು.

    ಬಿಡುಗಡೆಯಾದ ಬೆನ್ನಲ್ಲೇ ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಅಲ್ಲದೇ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ಇದನ್ನೂ ಓದಿ: ಕಾಂತಾರ ಚಾಪ್ಟರ್‌ 1 – ಇದು ಬರೀ ಸಿನಿಮಾ ಅಲ್ಲ `ಶಕ್ತಿ’ ಎಂದ ರಿಷಬ್ ಶೆಟ್ಟಿ

    ನಮ್ಮ ಚಿತ್ರದಲ್ಲಿ ನಾಲ್ಕು ಹಾಡುಗಳಿದೆ. ಇಂದು ಎರಡನೇ ಹಾಡು ಬಿಡುಗಡೆಯಾಗಿದೆ. ಮೊದಲು ಹಾಡು `ಕಮ್ಮಂಗಿ ನನ್ ಮಗನೇ’ ಸಹ ಮೆಚ್ಚುಗೆ ಪಡೆದುಕೊಂಡಿದೆ. ಇಂದು ಬಿಡುಗಡೆಯಾಗಿರುವ `ಮಿಡ್ನೈಟ್ ರಸ್ತೆಯಲ್ಲಿ’ ಹಾಡನ್ನು ಸಂಜಿತ್ ಹೆಗ್ಡೆ ಹಾಡಿದ್ದಾರೆ. ಯೋಗರಾಜ್ ಭಟ್ ಅವರು ಬರೆದಿದ್ದಾರೆ. ಉಳಿದ 2 ಹಾಡುಗಳು ಸಹ ಸದ್ಯದಲ್ಲೇ ಬಿಡುಗಡೆಯಾಗಲಿದೆ ಎಂದು ಸಂಗೀತ ನಿರ್ದೇಶಕ ಸಚಿನ್ ಬಸ್ರೂರ್ ಮಾಹಿತಿ ನೀಡಿದರು. ಇದನ್ನೂ ಓದಿ: 3 ವರ್ಷದ ಸಿನಿ ಪಯಣದ ಒಂದು ಝಲಕ್: ಕಾಂತಾರ ಅದ್ಭುತ ಲೋಕ

    ಪುರಾತನ ಫಿಲಂಸ್ ಸಂಸ್ಥೆ ಎಸ್‌ಆರ್‌ಕೆ ಫಿಲಂಸ್ ಸಹಯೋಗದೊಂದಿಗೆ ನಿರ್ಮಾಣ ಮಾಡಿರುವ ಈ ಚಿತ್ರ ಅಪ್ಪ-ಮಗನ ಬಾಂಧವ್ಯದ ಕುರಿತಾದ ಕಥಾಹಂದರ ಹೊಂದಿದೆ. ರಂಗಾಯಣ ರಘು ಹಾಗೂ ಪ್ರಣಂ ದೇವರಾಜ್ ಅಪ್ಪ-ಮಗನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಖುಷಿರವಿ ಈ ಚಿತ್ರದ ನಾಯಕಿ. ಸಚಿನ್ ಬಸ್ರೂರ್ ಅವರ ಸಂಗೀತ ಸಂಯೋಜನೆಯ 4 ಹಾಡುಗಳು ತುಂಬಾ ಚೆನ್ನಾಗಿದೆ ಎಂದರು.

    ಈಗ ಬಿಡುಗಡೆಯಾಗಿರುವ ಎರಡು ಹಾಡುಗಳನ್ನು ಯೋಗರಾಜ್ ಭಟ್ ಅವರೇ ಬರೆದಿದ್ದಾರೆ. ಅಂದುಕೊಂಡ ಹಾಗೆ ಚಿತ್ರವನ್ನು ಪೂರ್ಣಗೊಳಿಸಲು ಚಿತ್ರತಂಡದ ಸಹಕಾರವೇ ಕಾರಣ. ಇನ್ನೂ ಈ ಚಿತ್ರದ ಹೆಚ್ಚಿನ ಭಾಗದ ಚಿತ್ರೀಕರಣ ವಾರಣಾಸಿಯಲ್ಲಿ ನಡೆದಿದೆ. ಈ ಚಿತ್ರದ ಕಥೆ ಕೇಳಿ ಮೆಚ್ಚಿಕೊಂಡಿದ್ದ ಡೈನಾಮಿಕ್ ಸ್ಟಾರ್ ದೇವರಾಜ್, ಇತ್ತೀಚೆಗೆ ಸಿನಿಮಾ ನೋಡಿ ಪ್ರಶಂಸೆ ನೀಡಿದ್ದು ಬಹಳ ಖುಷಿಯಾಗಿದೆ ಎಂದು ನಿರ್ದೇಶಕ ಶ್ರೀಕಾಂತ್ ಹುಣಸೂರು ತಿಳಿಸಿದರು. ಇದನ್ನೂ ಓದಿ: ಮತ್ತೆ ಒಂದಾಯ್ತು ಗುಡ್ ಬ್ಯಾಡ್ ಅಗ್ಲಿ ಕಾಂಬಿನೇಷನ್

    ಬಳಿಕ ಮಾತನಾಡಿದ ಚಿತ್ರದ ನಾಯಕ ಪ್ರಣಂ ದೇವರಾಜ್, ನಿರ್ದೇಶಕರು ಕಥೆ ಹೇಳಿದ ರೀತಿಯೇ ಬಹಳ ಚೆನ್ನಾಗಿತ್ತು. ಇದೊಂದು ತಂದೆ-ಮಗನ ಬಾಂಧವ್ಯದ ಚಿತ್ರ. ಜೊತೆಗೆ ಪ್ರೇಮ ಕಥಾನಕವೂ ಹೌದು. ಈ ಚಿತ್ರದ ವಿಶೇಷವೆಂದರೆ ಇದರಲ್ಲಿ ಸಾಹಸ ಸನ್ನಿವೇಶಗಳಿಲ್ಲ. ನಿರ್ದೇಶಕರು ಮಾಡಿಕೊಂಡಿರುವ ಕಥೆ, ಚಿತ್ರಕಥೆ ಬಹಳ ಸೊಗಸಾಗಿದೆ. ರಂಗಾಯಣ ರಘು ಅವರಿಂದ ಸಾಕಷ್ಟು ಕಲಿತಿದ್ದೇನೆ. ಸಚಿನ್ ಬಸ್ರೂರ್ ಸಂಗೀತ ಸಂಯೋಜನೆಯಲ್ಲಿ ಸಂಜಿತ್ ಹೆಗ್ಡೆ ಹಾಡಿರುವ ಈ `ಮಿಡ್ ನೈಟ್ ರಸ್ತೆಯಲ್ಲಿ’ ಸಾಂಗ್ ಅಂತೂ ಎಲ್ಲರ ಮನಸ್ಸಿಗೂ ಹತ್ತಿರವಾಗಲಿದೆ. ಧನಂಜಯ್ ಮಾಸ್ಟರ್ ನೃತ್ಯ ನಿರ್ದೇಶನ ಕೂಡ ಹಾಡಿಗೆ ಪೂರಕವಾಗಿದೆ. ಏಳುವರೆ ವರ್ಷಗಳ ನಂತರ ನನ್ನ ಸಿನಿಮಾ ಬಿಡುಗಡೆಯಾಗುತ್ತಿದೆ. ಅವಕಾಶ ನೀಡಿದ ಪುರಾತನ ಫಿಲಂಸ್ ಸಂಸ್ಥೆಗೆ ಹಾಗೂ ನಿರ್ದೇಶಕರಿಗೆ ಧನ್ಯವಾದ. ಎಲ್ಲರು ಚಿತ್ರ ನೋಡಿ. ಪ್ರೋತ್ಸಾಹಿಸಿ ಎಂದರು. ಇದನ್ನೂ ಓದಿ: ಬಿಕ್ಲು ಶಿವ ಕೊಲೆ ಕೇಸ್‌ಗೆ ಟ್ವಿಸ್ಟ್‌ – ಪ್ರಮುಖ ಆರೋಪಿಯಿಂದ ನಟಿ ರಚಿತಾ ರಾಮ್‌ಗೆ ಭರ್ಜರಿ ಗಿಫ್ಟ್

    ನಾಯಕಿ ಖುಷಿ ರವಿ ಮಾತನಾಡಿದ ಅವರು, ನಾನು ಈ ಚಿತ್ರದಲ್ಲಿ ವೈದ್ಯೆ. ಸಾಕ್ಷಿ ನನ್ನ ಪಾತ್ರದ ಹೆಸರು. ಒಂದೊಳ್ಳೆ ಚಿತ್ರದಲ್ಲಿ ನಟಿಸಿದ ಖುಷಿಯಿದೆ. ಇದು ನಾನು ನಾಯಕಿಯಾಗಿ ನಟಿಸಿರುವ ಏಳನೇ ಚಿತ್ರ. ಬೇರೆ ಭಾಷೆಗಳಲ್ಲಿ ನನಗೆ ಅವಕಾಶ ಸಿಗುತ್ತಿದೆ. ಆದರೆ ಕನ್ನಡದಲ್ಲಿ ಹೆಚ್ಚು ಅವಕಾಶಗಳು ಸಿಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

    ಹಾಡಿನ ನೃತ್ಯ ನಿರ್ದೇಶನದ ಬಗ್ಗೆ ಧನು ಮಾಸ್ಟರ್, ಛಾಯಾಗ್ರಹಣದ ಕುರಿತು ಛಾಯಾಗ್ರಾಹಕ ಸ್ಕೇಟಿಂಗ್ ಕೃಷ್ಣ ಮಾಹಿತಿ ನೀಡಿದರು. ಸಂಕಲನಕಾರ ಹರೀಶ್ ಕೊಮ್ಮೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಈ ವೇಳೆ ಸಂಜಿತ್ ಹೆಗ್ಡೆ `ಮಿಡ್ ನೈಟ್ ರಸ್ತೆಯಲ್ಲಿ’ ಹಾಡನ್ನು ವೇದಿಕೆಯ ಮೇಲೆ ಸುಮಧುರವಾಗಿ ಹಾಡಿದರು.

  • ಪ್ರಣಂ ದೇವರಾಜ್, ಖುಷಿ ರವಿ ನಟನೆಯ ‘S/o ಮುತ್ತಣ್ಣ’ನಿಗೆ ಕುಂಬಳಕಾಯಿ ಪ್ರಾಪ್ತಿ

    ಪ್ರಣಂ ದೇವರಾಜ್, ಖುಷಿ ರವಿ ನಟನೆಯ ‘S/o ಮುತ್ತಣ್ಣ’ನಿಗೆ ಕುಂಬಳಕಾಯಿ ಪ್ರಾಪ್ತಿ

    ದೇವರಾಜ್ ಕಿರಿಯ ಮಗ ಪ್ರಣಂ ದೇವರಾಜ್ ನಟನೆಯ ‘ಸನ್ ಆಫ್ ಮುತ್ತಣ್ಣ’ ಸಿನಿಮಾ ಪೂರ್ಣಗೊಂಡಿದೆ. ಈ ಚಿತ್ರಕ್ಕೆ ಕುಂಬಳಕಾಯಿ ಪ್ರಾಪ್ತಿಯಾಗಿದೆ. ಸಿನಿಮಾ ಸೆಟ್ಟೇರಿದ ಜಾಗದಲ್ಲಿ ಕುಂಬಳಕಾಯಿ ಹೊಡೆಯಲು ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿತ್ತು. ಅದರಂತೆ ಬೆಂಗಳೂರಿನ ಬಂಡೆ ಮಾಕಾಳಮ್ಮ ದೇವಸ್ಥಾನದಲ್ಲಿ ಕೊನೆಯ ಹಂತದ ಶೂಟಿಂಗ್ ಮಾಡಿ ಕುಂಬಳಕಾಯಿ ಹೊಡೆಯಲಾಗಿದೆ. ಈ ಸಂದರ್ಭದಲ್ಲಿ ಇಡೀ ಚಿತ್ರತಂಡ ಭಾಗಿಯಾಗಿ ಸಿನಿಮಾ ಕುರಿತು ಮಾಹಿತಿ ಹಂಚಿಕೊಂಡಿದೆ.

    ನಟ ಪ್ರಣಂ ದೇವರಾಜ್ (Pranam Devaraj) ಮಾತನಾಡಿ, ಇವತ್ತು ಖುಷಿಯೂ ಇದೆ. ಬೇಜಾರು ಇದೆ. ಖುಷಿ ಏನಕ್ಕೆ ಅಂದರೆ ನನ್ನ ಸಿನಿಮಾದ ಶೂಟಿಂಗ್ ಮುಕ್ತಾಯಗೊಂಡಿದೆ. ಬೇಜಾರು ಏನಕ್ಕೆ ಅಂದರೆ ನಾಳೆಯಿಂದ ಇವರು ಯಾರು ಸಿಗಲ್ಲ ಅಂತಾ. ಈ ಜರ್ನಿ ಖುಷಿ ಜೊತೆಗೆ ಎಮೋಷನಲ್ ಆಗಿಯೂ ಇತ್ತು. ಟೆನ್ಷನ್ ಕೂಡ ಇತ್ತು. ಸಿನಿಮಾ ತುಂಬಾ ಚೆನ್ನಾಗಿ ಬಂದಿದೆ. ಅಪ್ಪ ಮತ್ತು ಮಗನ ಬಾಂಧವ್ಯದ ಕಥೆ ಇದು. ನಮ್ಮ ಅಪ್ಪ ಮತ್ತು ಮಗನ ಬಾಂಧವ್ಯ ಹೇಗಿದೆ ಅಂತ ಗೊತ್ತಿದೆ, ರಘು ಸರ್ ಸೆಟ್‌ನಲ್ಲಿ ನನಗೆ ತಂದೆ ತರ ಇದ್ದರು. ಇವರಿಂದ ಸಾಕಷ್ಟು ಕಲಿತಿದ್ದೇನೆ. ಖುಷಿ ರವಿ ಅದ್ಭುತ ನಟಿ. ಸಾಕಷ್ಟು ಜನ ಕಲಾವಿದರು ಚಿತ್ರದಲ್ಲಿದ್ದಾರೆ. ಪುರಾತನ ಫಿಲ್ಮಂಸ್ ಈ ರೀತಿ ಅವಕಾಶ ಕೊಟ್ಟಿರುವುದಕ್ಕೆ ಧನ್ಯವಾದ ಎಂದರು.

    ನಾಯಕಿ ಖುಷಿ ರವಿ (Kushee Ravi) ಮಾತನಾಡಿ, ಶೂಟ್ ಮುಗಿಸಿ, ದೃಷ್ಟಿ ತೆಗೆದು ಕುಂಬಳಕಾಯಿ ಹೊಡೆಯೋದನ್ನು ನೋಡಿದ್ದೇವೆ. ಆದರೆ ಪುರಾತನ ಫಿಲ್ಮಂಸ್ ಅದ್ಧೂರಿಯಾಗಿ ಶೂಟಿಂಗ್ ಮುಗಿಸಿದೆ. 49 ದಿನ ಜರ್ನಿಯಲ್ಲಿಯೂ ಯಾವುದೇ ರೀತಿ ಕೊರತೆ ಇಲ್ಲದ ರೀತಿ ನೋಡಿಕೊಂಡಿದ್ದಾರೆ. ಹರೀಶ್ ಸರ್‌ಗೆ ಧನ್ಯವಾದ. ನಿರ್ದೇಶಕ ಶ್ರೀಕಾಂತ್ ಸರ್ ತುಂಬಾ ಕ್ಲಾರಿಟಿ ಇದೆ. ಈ ಜನರೇಷನ್‌ಗೆ ಅಪ್ಪ-ಮಗ, ಅಪ್ಪ-ಮಗಳು, ಸ್ನೇಹ ಎಲ್ಲಾ ಎಮೋಷನ್ ಸಿನಿಮಾದಲ್ಲಿ ತೋರಿಸಿದ್ದಾರೆ. ಸಾಂಗ್ ಸಚಿನ್ ಬಸ್ರೂರ್ ಅದ್ಭುತವಾಗಿ ಕಂಪೋಸ್ ಮಾಡಿದ್ದಾರೆ. ಧನು ಮಾಸ್ಟರ್ ಅದ್ಭುತವಾಗಿ ನನ್ನ ಕೈಯಿಂದ ಡ್ಯಾನ್ಸ್ ಮಾಡಿಸಿದ್ದಾರೆ. ಕೃಷ್ಣಣ್ಣ ನಮ್ಮನ್ನು ತುಂಬಾ ಚೆನ್ನಾಗಿ ಕ್ಯಾಪ್ಟರ್ ಮಾಡಿದ್ದಾರೆ ಎಂದರು.

    ನಿರ್ದೇಶಕ ಶ್ರೀಕಾಂತ್ ಮಾತನಾಡಿ, ಬಂಡಿ ಮಹಾಕಾಳಿ ದೇಗುಲದಲ್ಲಿ ಸಿನಿಮಾ ಶುರು ಮಾಡಿದ್ವಿ. ಹಾಗಾಗಿ ನಿರ್ಮಾಪಕರು ಇಲ್ಲಿಯೇ ಕುಂಬಳಕಾಯಿ ಹೊಡೆಯಬೇಕು ಎಂಬ ಆಸೆ ವ್ಯಕ್ತಪಡಿಸಿದ್ದರು. ಅದಕ್ಕಾಗಿ ಇಲ್ಲಿಯೇ ಕುಂಬಳಕಾಯಿ ಹೊಡೆದಿದ್ದೇವೆ. 49 ದಿನ ಶೂಟಿಂಗ್ ನಡೆಸಲಾಗಿದೆ. ವಾರಣಾಸಿ, ಬೆಂಗಳೂರಿನಲ್ಲಿ ನಡೆಸಲಾಗಿದೆ ಎಂದರು.

    ‘ಸನ್ ಆಫ್ ಮುತ್ತಣ್ಣ’ ಸಿನಿಮಾವನ್ನು ಶ್ರೀಕಾಂತ್ ಹುಣ್ಸೂರ್ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದ ಮೂಲಕ ಶ್ರೀಕಾಂತ್, ಈ ಸಿನಿಮಾದ ಸ್ವತಂತ್ರ ನಿರ್ದೇಶಕರಾಗುತ್ತಿದ್ದಾರೆ. ಪ್ರಣಂ ದೇವರಾಜ್ ನಾಯಕನಾಗಿ ನಟಿಸಿದ್ದು, ಖುಷಿ ರವಿ ನಾಯಕಿಯಾಗಿ ಸಾಥ್ ಕೊಟ್ಟಿದ್ದಾರೆ. ರಂಗಾಯಣ ರಘು, ಸುಚೇಂದ್ರ ಪ್ರಸಾದ್, ಗಿರಿ ಶಿವಣ್ಣ, ತಬಲ ನಾಣಿ, ಶ್ರೀನಿವಾಸ್ ಪ್ರಭು, ಸುಧಾ ಬೆಳವಾಡಿ, ಅರುಣ್ ಚಕ್ರವರ್ತಿ ಸೇರಿದಂತೆ ಅನೇಕರು ನಟಿಸಿದ್ದಾರೆ.

    ಶೀರ್ಷಿಕೆಯೇ ಹೇಳುತ್ತಿರುವಂತೆ ಈ ಸಿನಿಮಾ ಅಪ್ಪ-ಮಗನ ಬಾಂಧವ್ಯದ ಕಥೆ. ಪುರಾತನ ಫಿಲ್ಮಂಸ್ ಬ್ಯಾನರ್ ಅಡಯಲ್ಲಿ ದಿವ್ಯಾ ನಿರ್ಮಾಣ ಮಾಡುತ್ತಿದ್ದಾರೆ. ‘ಸನ್ ಆಫ್ ಮುತ್ತಣ್ಣ’ ಸಿನಿಮಾಕ್ಕೆ ಸ್ಕೇಟಿಂಗ್ ಕೃಷ್ಣ ಛಾಯಾಗ್ರಹಣ ಮಾಡುತ್ತಿದ್ದಾರೆ. ಹರೀಶ್ ಕೊಮ್ಮೆ ಸಂಕಲನ ಮಾಡಿದ್ದಾರೆ, ಸಚಿನ್ ಬಸ್ರೂರ್ ಸಂಗೀತ ನಿರ್ದೇಶನ ಮಾಡುತ್ತಿರುವುದು ವಿಶೇಷ.

  • ದಿಯಾ ಬ್ಯೂಟಿ ಖುಷಿ ರವಿಗೆ ವಿಶೇಷ ಮೇಕಿಂಗ್ ವಿಡಿಯೋ ಗಿಫ್ಟ್

    ದಿಯಾ ಬ್ಯೂಟಿ ಖುಷಿ ರವಿಗೆ ವಿಶೇಷ ಮೇಕಿಂಗ್ ವಿಡಿಯೋ ಗಿಫ್ಟ್

    ದಿಯಾ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ನಲ್ಲಿ ನಾಯಕಿಯಾಗಿ ಗುರುತಿಸಿಕೊಂಡವರು ಖುಷಿ ರವಿ (Khushi Ravi). ದಿಯಾ ಬಳಿಕ ಕನ್ನಡದ ಜೊತೆಗೆ ಪರಭಾಷಾ ಚಿತ್ರಗಳಲ್ಲಿಯೂ ನಟಿಸುತ್ತಿರುವ ಅವರೀಗ ಮತ್ತೊಂದು ಕನ್ನಡದ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಅದೇ ‘S/O ಮುತ್ತಣ್ಣ’.

    ಯಂಗ್ ಡೈನಾಮಿಕ್ ಎಂದೇ ಕರೆಸಿಕೊಳ್ಳುತ್ತಿರುವ ಪ್ರಣಂ ದೇವರಾಜ್  ನಾಯಕನಾಗಿ ನಟಿಸಿತ್ತಿರುವ ಈ ಸಿನಿಮಾದಲ್ಲಿ ಖುಷಿ ರವಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಅವರ ಹುಟ್ಟುಹಬ್ಬದ  (Birthday)ಅಂಗವಾಗಿ ಈ ಬಗ್ಗೆ ಚಿತ್ರತಂಡ ಮಾಹಿತಿ ನೀಡಿದ್ದು, ಸ್ಪೆಷಲ್ ಮೇಕಿಂಗ್ ವಿಡಿಯೋ ಕೂಡ ಬಿಡುಗಡೆ ಮಾಡಿ ಶುಭ ಕೋರಿದೆ.

     

    ಪುರಾತನ ಫಿಲ್ಮಂಸ್ ಬ್ಯಾನರ್ ಅಡಯಲ್ಲಿ ನಿರ್ಮಾಣ ಮಾಡುತ್ತಿದ್ದಾರೆ ‘S/O ಮುತ್ತಣ್ಣ’ (S/O Muttanna) ಸಿನಿಮಾಗೆ ಶ್ರೀಕಾಂತ್ ಹುಣಸೂರು ಆಕ್ಷನ್ ಕಟ್ ಹೇಳುತ್ತಿದ್ದರೆ. ದೇವರಾಜ್ ಪುತ್ರ ಮತ್ತೊಮ್ಮೆ ಈ ಸಿನಿಮಾದ ಮೂಲಕ ಗೆಲುವಿನ ಪರೀಕ್ಷೆಗೆ ಮುಂದಾಗಿದ್ದಾರೆ.

  • ಮುತ್ತಣ್ಣನಾದ ಡೈನಾಮಿಕ್ ಪ್ರಣಂ ದೇವರಾಜ್

    ಮುತ್ತಣ್ಣನಾದ ಡೈನಾಮಿಕ್ ಪ್ರಣಂ ದೇವರಾಜ್

    ಯಂಗ್ ಡೈನಾಮಿಕ್ ಪ್ರಣಂ ದೇವರಾಜ್ (Pranam Devaraj) ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚೆಗಷ್ಟೇ ತೆಲುಗು ಇಂಡಸ್ಟ್ರೀಗೆ ಕಾಲಿಟ್ಟಿರುವ ಪ್ರಣಂ, ಈಗ ‘S/O ಮುತ್ತಣ್ಣ’ (S/O Muttanna) ನಾಗಲು ಸಜ್ಜಾಗಿದ್ದಾರೆ.

    ಯಂಗ್ ಡೈನಾಮಿಕ್  ಪ್ರಣಂ ದೇವರಾಜ್ ಹೊಸ ಸಿನಿಮಾ ಸೆಟ್ಟೇರಿದೆ. ಇತ್ತೀಚೆಗಷ್ಟೇ ಬೆಂಗಳೂರಿನ ಬಂಡೆ ಮಹಾಕಾಳಿ ದೇಗುಲದಲ್ಲಿ S/O ಮುತ್ತಣ್ಣ ಸಿನಿಮಾದ ಮುಹೂರ್ತ ನೆರವೇರಿದೆ. ದೇವರಾಜ್ ದಂಪತಿ ಆಗಮಿಸಿ ಮಗನ ಚಿತ್ರಕ್ಕೆ ಶುಭಾಶಯ ತಿಳಿಸಿದ್ದಾರೆ. ಅಂದಹಾಗೇ S/O ಮುತ್ತಣ್ಣನಿಗೆ ಶ್ರೀಕಾಂತ್ ಹುಣ್ಸೂರ್ (Srikanth Hunsur) ಸಾರಥಿ. ಆರ್.ಚಂದ್ರು ಹಾಗೂ ಪ್ರೇಮ್ಸ್ ಗರಡಿಯಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿರುವ ಶ್ರೀಕಾಂತ್, ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ.

    ಪ್ರಣಂ ದೇವರಾಜ್ ನಾಯಕನಾಗಿ ನಟಿಸುತ್ತಿರುವ S/O ಮುತ್ತಣ್ಣ ಸಿನಿಮಾದಲ್ಲಿ ರಂಗಾಯಣ ರಘು, ಸುಚೇಂದ್ರ ಪ್ರಸಾದ್, ಗಿರಿ ಶಿವಣ್ಣ, ತಬಲ ನಾಣಿ, ಶ್ರೀನಿವಾಸ್ ಪ್ರಭು, ಸುಧಾ ಬೆಳವಾಡಿ, ಅರುಣ್ ಚಕ್ರವರ್ತಿ ತಾರಾಬಳಗದಲ್ಲಿದ್ದಾರೆ. ಟೈಟಲ್ ಹೇಳುವಂತೆ ಇದೊಂದು ಅಪ್ಪ-ಮಗನ ಬಾಂಧವ್ಯದ ಕಥೆಯಾಗಿದ್ದು, ಪುರಾತನ ಫಿಲ್ಮಂಸ್ ಬ್ಯಾನರ್ ನಡಿ ದಿವ್ಯಾ ನಿರ್ಮಾಣ ಮಾಡುತ್ತಿದ್ದಾರೆ. S/O ಮುತ್ತಣ್ಣ ಸಿನಿಮಾಗೆ ಸ್ಕೇಟ್ಟಿಂಗ್ ಕೃಷ್ಣ ಛಾಯಾಗ್ರಹಣ, ಹರೀಶ್ ಕೊಮ್ಮೆ ಸಂಕಲನ, ಸಚಿನ್ ಬಸ್ರೂರ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ.

     

    ಸದ್ಯ ಚಿತ್ರತಂಡ ಶೂಟಿಂಗ್ ನಲ್ಲಿ ಬ್ಯುಸಿಯಾಗಿದೆ.