Tag: S RAMYA

  • ಸುಧಾರಣಾ ಕ್ರಮವಾಗಿ ‘ಅರ್ಜಿ ಸಲ್ಲಿಕೆಯೊಂದಿಗೆ ಪರಿಶೀಲನೆ’ ವ್ಯವಸ್ಥೆ ಜಾರಿ – ವಾಟ್ಸಪ್ ಸಂದೇಶಕ್ಕೆ ಮೊಬೈಲ್ ಆ್ಯಪ್

    ಸುಧಾರಣಾ ಕ್ರಮವಾಗಿ ‘ಅರ್ಜಿ ಸಲ್ಲಿಕೆಯೊಂದಿಗೆ ಪರಿಶೀಲನೆ’ ವ್ಯವಸ್ಥೆ ಜಾರಿ – ವಾಟ್ಸಪ್ ಸಂದೇಶಕ್ಕೆ ಮೊಬೈಲ್ ಆ್ಯಪ್

    – ಜನವರಿ 10ರಿಂದ ಆನ್‌ಲೈನ್ ಅರ್ಜಿ ಸಲ್ಲಿಕೆಗೆ ಅವಕಾಶ

    ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಸಾಮಾನ್ಯ ಪ್ರವೇಶ ಪರೀಕ್ಷೆ (KCET-24) ನಡೆಸುವ ದಿನಾಂಕವನ್ನು ಎರಡು ದಿನಗಳ ಮಟ್ಟಿಗೆ ಹಿಂದೂಡಿದ್ದು, ಆ ಪ್ರಕಾರ ಏಪ್ರಿಲ್ 18 ಮತ್ತು 19ರಂದು ಪರೀಕ್ಷೆಗಳು ನಡೆಯಲಿವೆ. ಈ ಮುಂಚೆ ಏಪ್ರಿಲ್ 20 ಮತ್ತು 21ರಂದು ಪರೀಕ್ಷೆ ನಡೆಸಲು ದಿನಾಂಕ ನಿಗದಿಯಾಗಿತ್ತು.

    ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಈ ಕುರಿತು ಮಂಗಳವಾರ ಪತ್ರಿಕಾ ಪ್ರಕಟಣೆ ನೀಡಿದ್ದು, ಏಪ್ರಿಲ್ 21ರಂದು ಎನ್‌ಡಿಎ (NDA) ಪರೀಕ್ಷೆ ನಡೆಯುತ್ತಿರುವುದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಅದರಂತೆ ಕೆಸಿಇಟಿ ಕನ್ನಡ ಪರೀಕ್ಷೆ ಏಪ್ರಿಲ್ 20ರಂದು ನಡೆಯಲಿದೆ. ವೃತ್ತಿಪರ ಕೋರ್ಸುಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅದಕ್ಕೆ ಅರ್ಹತೆ ಪಡೆಯುವ ನಿಟ್ಟಿನಲ್ಲಿ ಕೆಸಿಇಟಿ-240 ಪರೀಕ್ಷೆ ತೆಗೆದುಕೊಳ್ಳುವುದಕ್ಕಾಗಿ ಜನವರಿ 10ರಿಂದ (ಬುಧವಾರ) ಫೆಬ್ರವರಿ 10ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಇದನ್ನೂ ಓದಿ: ಸಿಇಟಿ ಪರೀಕ್ಷೆ ದಿನಾಂಕ ಬದಲಾವಣೆ

    ಮೆಡಿಕಲ್ / ಡೆಂಟಲ್ / ಆಯುಷ್ / ಬಿಪಿಟಿ, ಬಿಪಿಒ, ಬಿಎಸ್ಸಿ ಅಲೈಡ್ ಹೆಲ್ತ್ ಸೈನ್ಸ್ ಕೋರ್ಸುಗಳಿಗೆ ಸೇರಲು ಆಸಕ್ತಿ ಇರುವ ಅಭ್ಯರ್ಥಿಗಳು ಈಗಲೇ ಅರ್ಜಿ ಸಲ್ಲಿಸಿ ನೋಂದಾಯಿಸಿಕೊಳ್ಳಬೇಕೆಂದು ಸೂಚಿಸಲಾಗಿದೆ. ಯುಜಿನೀಟ್-2024 ಫಲಿತಾಂಶಗಳ ಪ್ರಕಟಣೆಯ ನಂತರ ಕೆಇಎನಲ್ಲಿ ನೋಂದಾಯಿಸಲಾಗಿರುವ ಅಭ್ಯರ್ಥಿಗಳಿಗೆ ನೀಟ್ ಸ್ಕೋರ್ ಮತ್ತು ರೋಲ್ ನಂಬರ್ ದಾಖಲಿಸಲು ಇಂಟರ್‌ಫೇಸ್ ನೀಡಲಾಗುವುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಲಾಗಿದೆ. ಇದನ್ನೂ ಓದಿ: ಅಂಜನಾದ್ರಿಯಿಂದ ಅಯೋಧ್ಯೆಗೆ ಸೈಕಲ್ ಜಾಥಾ; ಗೋಡೆ ಬರಹ ಮಾಡುತ್ತಾ ಸವಾರಿಯ ಸಾಹಸ

    ಸಿಇಟಿ ಪ್ರಕ್ರಿಯೆಯಲ್ಲಿ ಸುಧಾರಣೆ ತರುವ ಭಾಗವಾಗಿ ಈ ಬಾರಿ ಅರ್ಜಿಯನ್ನು ‘ಅರ್ಜಿ ಹಾಗೂ ಪರಿಶೀಲನೆ’ ನಮೂನೆಯಲ್ಲಿ ಹೊರತರಲಾಗಿದೆ. ಇದರಿಂದಾಗಿ, ಅಭ್ಯರ್ಥಿಗಳ ದಾಖಲಾತಿಗಳನ್ನು ಭೌತಿಕವಾಗಿ ಪರಿಶೀಲಿಸಲು ಈ ಮುಂಚೆ ಹಿಡಿಯುತ್ತಿದ್ದ ಹೆಚ್ಚಿನ ಸಮಯ ಉಳಿತಾಯವಾಗುತ್ತದೆ ಎಂದು ವಿವರಿಸಲಾಗಿದೆ. ಇದನ್ನೂ ಓದಿ: 2023ರ ಅರ್ಜುನ ಪ್ರಶಸ್ತಿ ಪಡೆದ ಕೈಗಳಿಲ್ಲದ ಬಿಲ್ಲುಗಾರ್ತಿ ಶೀತಲ್ ದೇವಿ – ಸಾಧನೆಗಳೇನು?

    ಹೊಸ ಮಾದರಿಯಲ್ಲಿ, ಅಭ್ಯರ್ಥಿಗಳ ವಿವರಗಳನ್ನು, ಅಂದರೆ, ಶಾಲೆಗಳ ವ್ಯಾಸಂಗ, ಕನ್ನಡ ಮಾಧ್ಯಮ, ಜಾತಿ, ಆದಾಯ ಮುಂತಾದ ವಿವರಗಳನ್ನು ಎಸ್‌ಎಟಿ ಹಾಗೂ ಕಂದಾಯ ಇಲಾಖೆಯ ವೆಬ್‌ಸರ್ವೀಸ್ ಮುಖಾಂತರ ಆನ್‌ಲೈನ್ ಮೂಲಕವೇ ಪರಿಶೀಲಿಸಲಾಗುವುದು. ಅಭ್ಯರ್ಥಿಗಳು ಪ್ರತ್ಯೇಕವಾಗಿ ದಾಖಲೆಗಳ ಪರಿಶೀಲನೆಗೆ ಭೌತಿಕವಾಗಿ ಹಾಜರಾಗುವ ಅವಶ್ಯಕತೆ ಇರುವುದಿಲ್ಲ. ಪ್ರತಿ ವರ್ಷವೂ ಸುಮಾರು ಒಂದೂವರೆ ತಿಂಗಳ ಕಾಲ ನಡೆಯುತ್ತಿದ್ದ ಪರಿಶೀಲನೆಗಳ ಕಾರ್ಯಗಳು ಈಗ ಅರ್ಜಿ ಸಲ್ಲಿಸುವ ಸಮಯದಲ್ಲಿಯೇ ನಡೆಯಲಿವೆ ಎಂದು ತಿಳಿಸಲಾಗಿದೆ. ಹೀಗಾಗಿ, ಅಭ್ಯರ್ಥಿಗಳು ಎಲ್ಲಾ ವಿವರಗಳನ್ನು ಕಡ್ಡಾಯವಾಗಿ ಎಚ್ಚರಿಕೆಯಿಂದ ಭರ್ತಿ ಮಾಡಲು ಮತ್ತು ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ಅಪ್‌ಲೋಡ್ ಮಾಡಲು ಸೂಚಿಸಲಾಗಿದೆ. ಇದನ್ನೂ ಓದಿ: ರಾಮಮಂದಿರ ಉದ್ಘಾಟನೆ – ಜ.22ರಂದು ಉತ್ತರ ಪ್ರದೇಶದಲ್ಲಿ ಶಾಲಾ ಕಾಲೇಜುಗಳಿಗೆ ರಜೆ

    ಪ್ರಾಧಿಕಾರವು ಸುಮಾರು 250ಕ್ಕೂ ಹೆಚ್ಚು ನುರಿತ ಉಪನ್ಯಾಸಕರನ್ನು ಮಾಸ್ಟರ್ ಟ್ರೈನರ್ ಎಂದು ಗುರುತಿಸಿ ಅವರಿಗೆ ಅರ್ಜಿ ಸಲ್ಲಿಸುವ ಬಗ್ಗೆ ತರಬೇತಿಯನ್ನು ಈಗಾಗಲೇ ನೀಡಿದೆ. ಈ ಮಾಸ್ಟರ್ ಟ್ರೈನರ್‌ಗಳು, ಪ್ರತಿ ವಿಜ್ಞಾನ ಕಾಲೇಜಿನಲ್ಲಿ ಒಂದಿಬ್ಬರು ಉಪನ್ಯಾಸಕರನ್ನು ಗುರುತಿಸಿ ಅವರಿಗೆ ‘ಕಾಲೇಜು ಟ್ರೈನರ್’ ತರಬೇತಿ ನೀಡಿ ಸಜ್ಜುಗೊಳಿಸಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಬಗ್ಗೆ ಸಂದೇಹಗಳಿದ್ದಲ್ಲಿ ತಾವು ವ್ಯಾಸಂಗ ಮಾಡುತ್ತಿರುವ ಕಾಲೇಜಿನಲ್ಲಿನ ಕಾಲೇಜು ಟ್ರೈನರ್‌ಗಳನ್ನು ಸಂಪರ್ಕಿಸಿ ಮಾರ್ಗದರ್ಶನ ಪಡೆಯಬೇಕು ಎಂದು ಸೂಚಿಸಲಾಗಿದೆ. ಇದನ್ನೂ ಓದಿ: ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್‌ಗೆ ಕೊರೊನಾ ದೃಢ

    ಮೊಬೈಲ್ ಆ್ಯಪ್ ಅಭಿವೃದ್ಧಿ:
    ಇದರ ಜೊತೆಗೆ, ಸುಧಾರಣೆಯ ಮತ್ತೊಂದು ಕ್ರಮವಾಗಿ ಕೆಇಎ ಮೊಬೈಲ್ ಆಪ್ ಅಭಿವೃದ್ಧಿಪಡಿಸಿದ್ದು, ಇದನ್ನು ಕೆಇಎ ವೆಬ್‌ಸೈಟ್‌ನಿಂದ ಡೌನ್ಲೋಡ್ ಮಾಡಿಕೊಳ್ಳಬಹುದು. ಇದರಿಂದಾಗಿ ಪರೀಕ್ಷಾ ವೇಳಾಪಟ್ಟಿ, ಸೂಚನೆ, ಅರ್ಜಿ ಪ್ರಕ್ರಿಯೆ ಯಾವ ಹಂತದಲ್ಲಿದೆ ಇತ್ಯಾದಿ ಮಾಹಿತಿಯನ್ನು ವಾಟ್ಸಪ್ ಮೆಸೇಜ್ ಮೂಲಕವೇ ಪಡೆಯಬಹುದು. ಇದು, ಅಭ್ಯರ್ಥಿಗಳು ಪದೇಪದೇ ವೆಬ್‌ಸೈಟ್‌ಗೆ ಹೋಗಿ ಪರಿಶೀಲಿಸಬೇಕಾದ ಅಗತ್ಯವನ್ನು ತಪ್ಪಿಸುತ್ತದೆ. ಶುಲ್ಕ ಪಾವತಿ ಹಾಗೂ ಅರ್ಜಿಗೆ ಸಂಬಂಧಿಸಿದ ವಿವರಗಳು ಅಭ್ಯರ್ಥಿಗಳ ಪೋರ್ಟಲ್‌ನಲ್ಲಿ (ಕ್ಯಾಂಡಿಡೇಟ್ ಪೋರ್ಟಲ್) ಲಭ್ಯವಿರುತ್ತದೆ. ಇದನ್ನೂ ಓದಿ: ದುಡ್ಡು ಇದ್ದವರು ದೇವಸ್ಥಾನ ಕಟ್ಟುತ್ತಾರೆ, ಇಲ್ಲದವರು ಇರುವಲ್ಲೇ ಪೂಜಿಸಿ: ಸಿದ್ದರಾಮಯ್ಯ

  • ಜ.13ರಂದು ಕೆ-ಸೆಟ್ ಪರೀಕ್ಷೆ: ಪ್ರವೇಶಪತ್ರ ಡೌನ್ಲೋಡ್‌ಗೆ ಸೂಚನೆ, ಕಡ್ಡಾಯ ವಸ್ತ್ರ ಸಂಹಿತೆ

    ಜ.13ರಂದು ಕೆ-ಸೆಟ್ ಪರೀಕ್ಷೆ: ಪ್ರವೇಶಪತ್ರ ಡೌನ್ಲೋಡ್‌ಗೆ ಸೂಚನೆ, ಕಡ್ಡಾಯ ವಸ್ತ್ರ ಸಂಹಿತೆ

    ಬೆಂಗಳೂರು: ಜನವರಿ 13ರಂದು ನಡೆಯುವ ಕೆ-ಸೆಟ್ (KSET) ಪರೀಕ್ಷೆಗೆ (Exam) ಹಾಜರಾಗುವ ಅಭ್ಯರ್ಥಿಗಳು http://kea.kar.nic.in ಜಾಲತಾಣದಲ್ಲಿ ಪ್ರವೇಶ ಪತ್ರವನ್ನು (Admission Letter) ಡೌನ್ಲೋಡ್ ಮಾಡಿಕೊಳ್ಳಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ (S Ramya) ತಿಳಿಸಿದ್ದಾರೆ.

    ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಅಭ್ಯರ್ಥಿಗಳು ಪರೀಕ್ಷಾ ಕೇಂದ್ರವನ್ನು ಪ್ರವೇಶಿಸುವ ಮುನ್ನ ಪ್ರವೇಶಪತ್ರ ಮತ್ತು ಸರ್ಕಾರದಿಂದ ಮಾನ್ಯವಾಗಿರುವ ನಿಗದಿತ ಬಗೆಯ ಗುರುತಿನ ಪತ್ರವನ್ನು ತೋರಿಸುವುದು ಕಡ್ಡಾಯವಾಗಿದೆ. ಜೊತೆಗೆ ಪ್ರವೇಶಪತ್ರದಲ್ಲಿ ನಮೂದಿಸಿರುವ ಪರೀಕ್ಷಾ ಕೇಂದ್ರದಲ್ಲಷ್ಟೇ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಬೇಕು. ಅಲ್ಲದೇ ಇತ್ತೀಚಿನ ಎರಡು ಭಾವಚಿತ್ರಗಳನ್ನು ತರಬೇಕು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಮ್ಮ ದೇಶ ಹಿಂದೂ ರಾಷ್ಟ್ರವಾದರೆ ದೇಶಕ್ಕೇ ತೊಂದರೆ: ಯತೀಂದ್ರ ಸಿದ್ದರಾಮಯ್ಯ

    ಪರೀಕ್ಷೆಯು ಜನವರಿ 13ರ ಬೆಳಗ್ಗೆ 10ರಿಂದ 11 ಮತ್ತು ಮಧ್ಯಾಹ್ನ 12ರಿಂದ 2 ಗಂಟೆಯವರೆಗೆ ನಡೆಯಲಿದೆ. ಇದರ ನಡುವೆ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದಿಂದ ಹೊರಹೋಗಲು ಅವಕಾಶ ಕೊಡಲಾಗುವುದಿಲ್ಲ. ಓಎಂಆರ್ ಶೀಟ್ ಮೇಲೆ ಅಭ್ಯರ್ಥಿಗಳೇನಾದರೂ ತಮ್ಮ ನೋಂದಣಿ ಸಂಖ್ಯೆ, ವಿಷಯದ ಕೋಡ್ ಮತ್ತು ಪರೀಕ್ಷಾ ಕೇಂದ್ರದ ಕೋಡ್ ಅನ್ನು ತಪ್ಪಾಗಿ ನಮೂದಿಸಿದಲ್ಲಿ ಅಂಥವರ ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನ ಮಾಡಲಾಗುವುದಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ರಾಮಮಂದಿರ ಉದ್ಘಾಟನೆ ನಂತರ ಕೋಟ್ಯಂತರ ಭಕ್ತರಿಗೆ ಅವಕಾಶ: ಪೇಜಾವರ ಶ್ರೀ

    ವಸ್ತ್ರಸಂಹಿತೆ ಕಡ್ಡಾಯ:
    ಕೆ-ಸೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಪರೀಕ್ಷಾ ಪ್ರಾಧಿಕಾರವು ಕಟ್ಟುನಿಟ್ಟಿನ ವಸ್ತ್ರ ಸಂಹಿತೆಯನ್ನು ಜಾರಿಗೊಳಿಸಿದೆ. ಯಾವುದೇ ಅಕ್ರಮಗಳಿಗೆ ಅವಕಾಶ ನೀಡದಿರಲು ಈ ಕ್ರಮ ಅನುಸರಿಸಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ. ಇದನ್ನೂ ಓದಿ: ಕರ್ನಾಟಕದಲ್ಲಿ ತುಘಲಕ್ ಸರ್ಕಾರ ನಡೆಯುತ್ತಿದೆ: ರೇಣುಕಾಚಾರ್ಯ ಕಿಡಿ

    ಇದರಂತೆ, ಪುರುಷ ಅಭ್ಯರ್ಥಿಗಳು ಅರೆತೋಳಿನ ಅಂಗಿ, ಹೆಚ್ಚಿನ ಜೇಬುಗಳಿಲ್ಲದ ಸರಳ ಪ್ಯಾಂಟ್ ಕಡ್ಡಾಯವಾಗಿದೆ. ಇದರ ಭಾಗವಾಗಿ ಜಿಪ್ ಪಾಕೆಟ್, ದೊಡ್ಡ ಬಟನ್ಸ್ ಮತ್ತು ವಿಸ್ತಾರ ಕಸೂತಿ ಇರುವ ಉಡುಪು ಮತ್ತು ಶೂಗಳನ್ನು ನಿಷೇಧಿಸಲಾಗಿದೆ. ಜೊತೆಗೆ, ಅಭ್ಯರ್ಥಿಗಳು ಯಾವುದೇ ಕಂಠಾಭರಣ, ಕಿವಿಯೋಲೆ, ಉಂಗುರ ಮತ್ತು ಕಡಗಗಳನ್ನು ಧರಿಸಿಕೊಂಡು ಬರಬಾರದು ಎಂದು ಪ್ರಾಧಿಕಾರ ಮಾಹಿತಿ ನೀಡಿದೆ. ಇದನ್ನೂ ಓದಿ: INDIA ಒಕ್ಕೂಟಕ್ಕೆ ಬಿಹಾರ ಸಿಎಂ ನಿತೀಶ್ ಕುಮಾರ್ ಸಂಚಾಲಕ?

    ಮಹಿಳಾ ಅಭ್ಯರ್ಥಿಗಳಿಗೆ ವಿಪರೀತ ಕಸೂತಿ, ಹೂಗಳು, ಬ್ರೂಚ್, ಬಟನ್, ಪೂರ್ಣ ತೋಳಿನ ರವಿಕೆ/ವಸ್ತ್ರ ಇರುವ ಉಡುಪು ಮತ್ತು ಜೀನ್ಸ್ ಪ್ಯಾಂಟ್ ಹಾಗೂ ದಪ್ಪನೆ ಅಡಿಭಾಗವಿರುವ ಚಪ್ಪಲಿ/ಶೂಗಳನ್ನು ಧರಿಸಿಕೊಂಡು ಬರುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಮಂಗಳಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ, ಬೇರಾವುದೇ ಆಭರಣಗಳನ್ನು ಹಾಕಿಕೊಂಡು ಪರೀಕ್ಷಾ ಕೇಂದ್ರಕ್ಕೆ ಬರುವಂತಿಲ್ಲ ಎಂದು ರಮ್ಯಾ ತಿಳಿಸಿದ್ದಾರೆ. ಇದನ್ನೂ ಓದಿ: ಬಿ.ಕೆ ಹರಿಪ್ರಸಾದ್ ಹಿಂದೂವೇ ಅಲ್ಲ, ದೇಶದ್ರೋಹಿ: ಯಶ್‌ಪಾಲ್ ಸುವರ್ಣ

    ನಿಷೇಧಿತ ವಸ್ತುಗಳ ಪಟ್ಟಿ:
    ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಲು ಪಣ ತೊಟ್ಟಿರುವ ಪರೀಕ್ಷಾ ಪ್ರಾಧಿಕಾರವು, ಯಾವುದೇ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಬ್ಲೂಟೂತ್, ಮೊಬೈಲ್ ಫೋನ್, ಎಲೆಕ್ಟ್ರಾನಿಕ್ ವಸ್ತುಗಳು, ಪೆನ್‌ಡ್ರೈವ್, ಇಯರ್ ಫೋನ್, ಕೈ ಗಡಿಯಾರ, ಮೈಕ್ರೋಫೋನ್, ಪೆನ್ಸಿಲ್, ಎರೇಸರ್, ಜಾಮೆಟ್ರಿ ಪೆಟ್ಟಿಗೆ ಮತ್ತು ಲಾಗ್ ಟೇಬಲ್ ಇತ್ಯಾದಿಗಳನ್ನು ತರುವಂತಿಲ್ಲ. ಜೊತೆಗೆ ಟೋಪಿ/ಮಾಸ್ಕ್ ಹಾಕಿಕೊಂಡು ಬರುವಂತಿಲ್ಲ ಎಂದು ಸೂಚನೆ ನೀಡಿದೆ. ಇದನ್ನೂ ಓದಿ: ಜ.6 ರಂದು ಎಕೆಬಿಎಂಎಸ್ ಮಹಿಳಾ ಸಮಾವೇಶ: ನಿರ್ಮಲಾ ಸೀತಾರಾಮನ್ ಉದ್ಘಾಟನೆ