Tag: S.S Mallikarjuna

  • ಪುತ್ರನ ರಾಜಕೀಯ ಭವಿಷ್ಯಕ್ಕಾಗಿ ಕಣಕ್ಕೆ ಇಳಿದ ತಂದೆ!

    ಪುತ್ರನ ರಾಜಕೀಯ ಭವಿಷ್ಯಕ್ಕಾಗಿ ಕಣಕ್ಕೆ ಇಳಿದ ತಂದೆ!

    ದಾವಣಗೆರೆ: ಪುತ್ರನ ರಾಜಕೀಯ ಭವಿಷ್ಯಕ್ಕಾಗಿ ಲೋಕ ಕಣಕ್ಕೆ ಧುಮುಕಲು ತಂದೆ ಸಿದ್ಧರಾಗಿದ್ದು, ಲೋಕಸಭಾ ಅಖಾಡಕ್ಕೆ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ಫೈನಲ್ ಆಗಿದ್ದಾರೆ.

    ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ದಕ್ಷಿಣ ಕ್ಷೇತ್ರವನ್ನ ಪುತ್ರನಿಗೆ ಬಿಟ್ಟುಕೊಡಲು ಶಾಮನೂರು ಸಂಕಲ್ಪ ತೊಟ್ಟಿದ್ದಾರೆ ಎನ್ನಲಾಗುತ್ತಿದೆ. ಶಾಮನೂರು ಶಿವಶಂಕರಪ್ಪ ಪುತ್ರ ಎಸ್.ಎಸ್.ಮಲ್ಲಿಕಾರ್ಜುನ ಈಗಾಗಲೇ ಮೂರು ಬಾರಿ ಜಿ.ಎಂ.ಸಿದ್ದೇಶ್ವರ್ ವಿರುದ್ಧ ಸೋಲು ಕಂಡಿದ್ದಾರೆ. ಆದ್ರೆ ಈ ಬಾರಿ ಸ್ವತಃ ಶಾಮನೂರು ಅವರೇ ಕಣಕ್ಕೆ ಇಳಿದು ಜಿ.ಎಂ.ಸಿದ್ದೇಶ್ವರ್ ವಿರುದ್ಧ ಸ್ಪರ್ಧಿಸುತ್ತಿದ್ದಾರೆ. ಈ ಹಿಂದೆ ಸೋತಿರುವ ಭಯದಿಂದ ಈ ಬಾರಿ ಲೋಕಸಮರಕ್ಕೆ ಎಸ್.ಎಸ್.ಮಲ್ಲಿಕಾರ್ಜುನ್ ಹಿಂದೇಟು ಹಾಕಿದ್ದಾರೆ.

    ಸದ್ಯ ಬೀಗರ ಜಿದ್ದಾಜಿದ್ದಿಗೆ ದಾವಣಗೆರೆ ಲೋಕಸಭಾ ಕ್ಷೇತ್ರ ಸಾಕ್ಷಿಯಾಗಲಿದೆ. ಯಾಕೆಂದರೆ ಶಾಮನೂರು ಹಾಗೂ ಸಿದ್ದೇಶ್ವರ್ ಇಬ್ಬರೂ ಸಂಬಂಧದಲ್ಲಿ ಮಾವ-ಅಳಿಯ ಆಗುತ್ತಾರೆ. ಆದ್ರೆ ಅಳಿಯನ ಹ್ಯಾಟ್ರಿಕ್ ಗೆಲುವಿಗೆ ಬ್ರೇಕ್ ಹಾಕ್ತಾರಾ ಮಾವ ಅನ್ನೋದನ್ನ ಕಾದು ನೋಡಬೇಕಾಗಿದೆ.

  • ಸ್ವ ಪಕ್ಷದ ನಾಯಕರ ವಿರುದ್ಧವೇ ವಾಗ್ದಾಳಿ ನಡೆಸಿದ ಕೈ ನಾಯಕ!

    ಸ್ವ ಪಕ್ಷದ ನಾಯಕರ ವಿರುದ್ಧವೇ ವಾಗ್ದಾಳಿ ನಡೆಸಿದ ಕೈ ನಾಯಕ!

    ದಾವಣಗೆರೆ: ಮಾಜಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ವಿಧಾನಸಭಾ ಚುನಾವಣೆಯಲ್ಲಿ ಸೋಲಲು ಕೈ ನಾಯಕರೇ ಕಾರಣ ಎಂದು ದಾವಣಗೆರೆಯ ಜಿಲ್ಲಾಪಂಚಾಯತ್ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಬಸಂತಪ್ಪ ವಾಗ್ದಾಳಿ ನಡೆಸಿದ್ದಾರೆ.

    ನಗರದ ರೇಣುಕಾ ಮಂದಿರದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಎಸ್.ಎಸ್ ಮಲ್ಲಿಕಾರ್ಜುನ್ ಜಿಲ್ಲೆಯ ಅಭಿವೃದ್ಧಿಗೆ ಸಾಕಷ್ಟು ಶ್ರಮವಹಿಸಿದ್ದರು. ಬಡ ಜನರಿಗೆ 10 ಸಾವಿರ ಮನೆಗಳನ್ನು ನೀಡಿದ್ದರು. ಅಲ್ಲದೆ ಪಕ್ಷದ ಮುಖಂಡರಿಗೆ ತಲಾ ನೂರು ಮನೆಗಳನ್ನು ಕೊಟ್ಟು ಬಡವರಿಗೆ ಹಂಚಿ ಎಂದು ಜವಾಬ್ದಾರಿ ವಹಿಸಿದ್ದರು. ಆದರೆ ಮುಖಂಡರು ಮಾತ್ರ ತನ್ನ ಹೆಂಡತಿ ಮಕ್ಕಳು ಹಾಗೂ ಅನೈತಿಕ ಸಂಬಂಧ ಹೊಂದಿರುವವರಿಗೆ ಮನೆಗಳನ್ನು ನೀಡಿದ್ದಾರೆ ಹೊರತು ಬಡವರಿಗೆ ನೀಡಿಲ್ಲ. ಮಲ್ಲಿಕಾರ್ಜುನ್ ಅವರ ಸೋಲಿಗೆ ಪಕ್ಷದ ಮುಖಂಡರೇ ಕಾರಣ ಎಂದು ವೇದಿಕೆ ಮೇಲೆಯೇ ಕಿಡಿಕಾರಿದ್ದಾರೆ.

    ಒಂದೆಡೆ ಮಾಜಿ ಸಚಿವರು ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸ ಮಾಡಲು ಶ್ರಮಿಸುತ್ತಿದ್ದರೆ ಇನ್ನೊಂದೆಡೆ ಅವರ ಜೊತೆಗಿರುವ ಮುಖಂಡರು ಅವರ ಅಭಿವೃದ್ಧಿ ಕೆಲಸಗಳನ್ನು ಸ್ವಾರ್ಥಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಇದರಿಂದಲೇ ವಿಧಾನಸಭೆ ಚುನಾವಣೆಯಲ್ಲಿ ಅವರು ಸೋಲು ಅನುಭವಿಸುವಂತಾಯಿತು ಎಂದು ಸ್ವ ಪಕ್ಷ ಮುಖಂಡರ ವಿರುದ್ಧ ವಾಗ್ದಾಳಿ ನಡೆಸಿದರು.

    ಪಕ್ಷಕ್ಕೆ ಎಲ್ಲಾ ವರ್ಗದ ಜನರು ಮತ ಹಾಕಿದ್ದಾರೆ. ನಾವು ಧರ್ಮದ ಆಧಾರದ ಮೇಲೆ ಕೆಲಸ ಮಾಡುವುದು ಬೇಡ. ಜನರಿಗಾಗಿ ಕೆಲಸ ಮಾಡಬೇಕು. ಅಷ್ಟೇ ಅಲ್ಲದೆ ಲೋಕಸಭಾ ಚುನಾವಣೆಯಲ್ಲಿ ಮಾಯಕೊಂಡ ಕ್ಷೇತ್ರದಲ್ಲಿ ಎಲ್ಲಾ ಪಕ್ಷಗಳಿಗಿಂತ ಹೆಚ್ಚಿನ ಮತಗಳು ಕಾಂಗ್ರೆಸ್‍ಗೆ ಬೀಳುವಂತೆ ಕೆಲಸ ಮಾಡುತ್ತೇವೆ ಎಂದು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv