Tag: S Somanath

  • 2027ರ ವೇಳೆಗೆ ಚಂದ್ರಯಾನ-4ರ ಸುಳಿವು ಕೊಟ್ಟ ಇಸ್ರೋ; ಚಂದ್ರನಲ್ಲಿಗೆ ಗಗನಯಾತ್ರಿಗಳು ಹೆಜ್ಜೆ ಇಡಲು ಹೇಗೆ ಸಹಕಾರಿ?

    2027ರ ವೇಳೆಗೆ ಚಂದ್ರಯಾನ-4ರ ಸುಳಿವು ಕೊಟ್ಟ ಇಸ್ರೋ; ಚಂದ್ರನಲ್ಲಿಗೆ ಗಗನಯಾತ್ರಿಗಳು ಹೆಜ್ಜೆ ಇಡಲು ಹೇಗೆ ಸಹಕಾರಿ?

    ಚಂದ್ರಯಾನ-3 ಯಶಸ್ಸಿನ ಬಳಿಕ ಇಸ್ರೋ ಬಾಹ್ಯಾಕಾಶ ವಲಯದಲ್ಲಿ ಮತ್ತೊಂದು ಸಾಧನೆಗೆ ಮುಂದಡಿಯಿಟ್ಟಿದೆ. 2040 ಕ್ಕೆ ಚಂದ್ರನಲ್ಲಿ ಮಾನವನ ಹೆಜ್ಜೆ ಗುರುತು ಮೂಡಿಸುವ ಗುರಿ ಹೊಂದಿರುವ ಇಸ್ರೋ, ಅದಕ್ಕೆ ಪೂರಕವಾಗಿ 2027ಕ್ಕೆ ಚಂದ್ರಯಾನ-4 ಉಡಾವಣೆಗೆ ಸಜ್ಜಾಗಿದೆ. ಬಾಹ್ಯಾಕಾಶ ಪರಿಶೋಧನಾ ಕ್ಷೇತ್ರದಲ್ಲಿ ಭಾರತದ ಸಾಮರ್ಥ್ಯವನ್ನು ಇನ್ನಷ್ಟು ಹೆಚ್ಚು ಮಾಡುವ ಇರಾದೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಚಂದ್ರಯಾನ-4 ಯೋಜನೆಗೆ ಹಸಿರು ನಿಶಾನೆ ತೋರಿದೆ. ಹಾಗಿದ್ರೆ ಚಂದ್ರಯಾನ-3ಕ್ಕಿಂತ ಚಂದ್ರಯಾನ-4 ಹೇಗೆ ವಿಭಿನ್ನ? ತಯಾರಿ ಹೇಗಿದೆ? ಚಂದ್ರಯಾನ 4 ಗಗನಯಾತ್ರಿಗಳಿಗೆ ಹೇಗೆ ಸಹಕಾರಿಯಾಗಬಹುದು ಎಂಬ ಕುರಿತು ಇಲ್ಲಿ ವಿವರಿಸಲಾಗಿದೆ.

    ಚಂದ್ರಯಾನ -4 ಯೋಜನೆಯಡಿ ನೌಕೆಯನ್ನು ಚಂದ್ರನ ಅಂಗಳದಲ್ಲಿ ಇಳಿಸುವುದಷ್ಟೇ ಅಲ್ಲದೇ, ಅಲ್ಲಿಂದ ಕಲ್ಲು ಮತ್ತು ಮಣ್ಣಿನ ಮಾದರಿಗಳನ್ನು ಭೂಮಿಗೆ ತರುವ ಉದ್ದೇಶವನ್ನು ಹೊಂದಿದೆ. ಹೀಗಾಗಿ ಈ ಯೋಜನೆಯಲ್ಲಿ ಚಂದ್ರಯಾನ- 3ರ ಯೋಜನೆಯಲ್ಲಿದ್ದ ಪ್ರೊಪಲ್ಷನ್‌ ಮಾಡ್ಯೂಲ್‌, ಡಿಸೆಂಡರ್‌ ಮಾಡ್ಯೂಲ್‌, ಅಸೆಂಡರ್‌ ಮಾಡ್ಯೂಲ್‌ ಜತೆಗೆ ಟ್ರಾನ್ಸಫರ್‌ ಮಾಡ್ಯೂಲ್‌, ರೀ -ಎಂಟ್ರಿ ಮಾಡ್ಯೂಲ್‌ ಎಂಬ ಎರಡು ಹೊಸ ಘಟಕಗಳನ್ನು ಸೇರ್ಪಡೆಗೊಳಿಸಲಾಗುತ್ತಿದೆ ಎಂದು ಇಸ್ರೋ ಅಧ್ಯಕ್ಷ ಎಸ್‌ ಸೋಮನಾಥ್‌ ತಿಳಿಸಿದ್ದಾರೆ.

    ಈ ಮಿಷನ್ ಯಶಸ್ವಿ ಚಂದ್ರನ ಲ್ಯಾಂಡಿಂಗ್, ಚಂದ್ರನ ಮಾದರಿಗಳ ಸಂಗ್ರಹಣೆ ಮತ್ತು ಭೂಮಿಗೆ ಸುರಕ್ಷಿತವಾಗಿ ಮರಳಲು ಅಗತ್ಯವಾದ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸುವುದು ಮತ್ತು ಅವುಗಳನ್ನು ಭೂಮಿಯ ಮೇಲೆ ಪ್ರದರ್ಶನ ಮಾಡುವ ಗುರಿಯನ್ನು ಹೊಂದಿದೆ. ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ಚಂದ್ರಯಾನ-4 ಯೋಜನೆ ಸೇರಿದಂತೆ ಹಲವಾರು ಮಹತ್ವದ ಬಾಹ್ಯಾಕಾಶ ಕಾರ್ಯಾಚರಣೆಗಳಿಗೆ ಅನುಮೋದನೆಯನ್ನು ಘೋಷಿಸಿದರು. ಚಂದ್ರಯಾನ-4 ಮಿಷನ್ ಅನ್ನು ವಿಸ್ತರಿಸಲಾಗಿದೆ. ಮುಂದಿನ ಹಂತವು ಚಂದ್ರನಿಗೆ ಮಾನವಸಹಿತ ಮಿಷನ್ ಅನ್ನು ಜಾರಿ ಮಾಡುವುದಾಗಿದೆ. ಈ ನಿಟ್ಟಿನಲ್ಲಿ ಎಲ್ಲಾ ಪೂರ್ವಸಿದ್ಧತಾ ಕ್ರಮಗಳನ್ನು ಅನುಮೋದಿಸಲಾಗಿದೆ. ವೀನಸ್ ಆರ್ಬಿಟರ್ ಮಿಷನ್, ಗಗನ್‌ಯಾನ್ ಫಾಲೋ-ಆನ್ ಮತ್ತು ಭಾರತೀಯ ಅಂತರಿಕ್ಷ್ ನಿಲ್ದಾಣ ಮತ್ತು ಮುಂದಿನ ಪೀಳಿಗೆ ಲಾಂಚ್ ವೆಹಿಕಲ್ ಅಭಿವೃದ್ಧಿಗೂ ಅನುಮೋದನೆ ನೀಡಲಾಗಿದೆ ಎಂದು ಅಶ್ವಿನಿ ವೈಷ್ಣವ್‌ ತಿಳಿಸಿದ್ದಾರೆ.

    ಚಂದ್ರಯಾನ-4 ಭವಿಷ್ಯದ ಚಂದ್ರನ ಕಾರ್ಯಾಚರಣೆಗಳಿಗೆ ಪ್ರಮುಖವಾದ ಅಡಿಪಾಯ ತಂತ್ರಜ್ಞಾನಗಳನ್ನು ಪ್ರದರ್ಶಿಸುವುದರ ಮೇಲೆ ಕೇಂದ್ರೀಕರಿಸುತ್ತದೆ. ಡಾಕಿಂಗ್ ಮತ್ತು ಅನ್‌ಡಾಕಿಂಗ್ ಕಾರ್ಯವಿಧಾನಗಳು, ಸುರಕ್ಷಿತ ಲ್ಯಾಂಡಿಂಗ್ ತಂತ್ರಗಳು ಮತ್ತು ಚಂದ್ರನ ಮಾದರಿಗಳನ್ನು ಭೂಮಿಗೆ ಹಿಂದಿರುಗಿಸುವ ಸಾಮರ್ಥ್ಯ 2040 ರಲ್ಲಿ ಯೋಜಿಸಲಾದ ಮಾನವಸಹಿತ ಚಂದ್ರನ ಲ್ಯಾಂಡಿಂಗ್‌ನ ಭಾರತದ ಗುರಿಯತ್ತ ಪ್ರಮುಖ ಹೆಜ್ಜೆಯಾಗಿದೆ.

    2035 ರ ವೇಳೆಗೆ ಭಾರತೀಯ ಅಂತರಿಕ್ಷ್ ನಿಲ್ದಾಣವನ್ನು (ಭಾರತೀಯ ಬಾಹ್ಯಾಕಾಶ ನಿಲ್ದಾಣ) ಸ್ಥಾಪಿಸುವುದು ಮತ್ತು 2040 ರ ವೇಳೆಗೆ ಮಾನವಸಹಿತ ಚಂದ್ರನ ಲ್ಯಾಂಡಿಂಗ್ ಅನ್ನು ಸಾಧಿಸುವುದು ಮತ್ತು ಅದರ ತಾಂತ್ರಿಕ ಸಾಧನೆಗಳನ್ನು ನಿರ್ಮಿಸುವುದು ಭಾರತ ಸರ್ಕಾರ ಹಾಗೂ ಇಸ್ರೋದ ಪ್ರಮುಖ ಉದ್ದೇಶವಾಗಿದೆ.

    ಚಂದ್ರಯಾನ 4ಕ್ಕೆ ವೆಚ್ಚವೆಷ್ಟು?
    ಚಂದ್ರಯಾನ 4 ಯೋಜನೆಗೆ 2,104.06 ಕೋಟಿ ರೂ. ಖರ್ಚಾಗಲಿದೆ. 2040ರ ಹೊತ್ತಿಗೆ ಚಂದ್ರನ ಅಂಗಳದಲ್ಲಿ ಗಗನಯಾತ್ರಿಗಳನ್ನು ಇಳಿಸಲು ಇಸ್ರೋ ಯೋಜನೆ ಹಾಕಿಕೊಂಡಿದೆ. 2040ರ ಸುಮಾರಿಗೆ ಭೂಮಿಯಿಂದ ಚಂದ್ರನಿಗೆ, ಚಂದ್ರನಿಂದ ಭೂಮಿಗೆ ಸುಲಭವಾಗಿ ಹೋಗಬಹುದಾಗ ಪರಿಸ್ಥಿತಿ ನಿರ್ಮಾಣವಾಗಬೇಕು ಎಂಬುದು ಇದರ ಗುರಿ.

    ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಬಾಹ್ಯಾಕಾಶ ನೌಕೆಯ ಅಭಿವೃದ್ಧಿಯ ನೇತೃತ್ವವನ್ನು ವಹಿಸುತ್ತದೆ ಮತ್ತು ಮಿಷನ್ ಅನ್ನು ಮೇಲ್ವಿಚಾರಣೆ ಮಾಡುತ್ತದೆ. 36 ತಿಂಗಳುಗಳ ಟೈಮ್‌ಲೈನ್‌ ಇದಕ್ಕೆ ನೀಡಲಾಗಿದೆ. ಯೋಜನೆಯು ಉದ್ಯಮ ಮತ್ತು ಶಿಕ್ಷಣದೊಂದಿಗೆ ಸಹಯೋಗವನ್ನು ಒಳಗೊಂಡಿರುತ್ತದೆ, ತಾಂತ್ರಿಕ ಪ್ರಗತಿಗಳು ಮತ್ತು ಉದ್ಯೋಗಾವಕಾಶಗಳನ್ನು ಉತ್ತೇಜಿಸುತ್ತದೆ.

    ಚಂದ್ರಯಾನ4ರ ವಿಶೇಷತೆ ಏನು?
    ಚಂದ್ರಯಾನ 4ರ ಕಾರ್ಯಾಚರಣೆಯಲ್ಲಿ ಎರಡು ವಿಭಿನ್ನ ರಾಕೆಟ್‌ಗಳಾದ ಹೆವಿ-ಲಿಫ್ಟರ್ LVM-3 ಮತ್ತು PSLV ಬಳಸಲಾಗುತ್ತದೆ. ಇವೆರಡೂ ವಿಭಿನ್ನ ಪೇಲೋಡ್‌ಗಳನ್ನು ಹೊತ್ತೊಯ್ಯುತ್ತವೆ.

    ಚಂದ್ರಯಾನ 4ರ ಗಮನ ಚಂದ್ರನ ಮೇಲೆ ನಿಖರ ಲ್ಯಾಂಡಿಂಗ್, ಮಾದರಿ ಸಂಗ್ರಹಣೆ ಮತ್ತು ಭೂಮಿಗೆ ಸುರಕ್ಷಿತವಾಗಿ ಮರಳುವುದಾಗಿದೆ. ಇದರ ಮೂಲಕ ಭಾರತ ತನ್ನ ಬಾಹ್ಯಾಕಾಶ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಲಿದೆ. ಒಟ್ಟು 5 ಮಾಡ್ಯೂಲ್‌ಗಳನ್ನು ತನ್ನೊಂದಿಗೆ ಚಂದ್ರಯಾನ 4 ಹೊತ್ತೊಯ್ಯಲಿದೆ. ಈ ಎಲ್ಲಾ ಮಾಡ್ಯೂಲ್‌ಗಳು ಒಟ್ಟಾಗಿ ಕೆಲಸ ಮಾಡುತ್ತವೆ ಮತ್ತು ಚಂದ್ರನಿಂದ ಅಗತ್ಯ ಮಾದರಿಗಳನ್ನು ಸಂಗ್ರಹಿಸುತ್ತವೆ. ಇದುವರೆಗೆ ಚೀನಾ ಮತ್ತು ಅಮೆರಿಕ ದೇಶಗಳು ಮಾತ್ರ ಇಂತಹ ಕಠಿಣ ಕಾರ್ಯಾಚರಣೆಯನ್ನು ನಿರ್ವಹಿಸಿವೆ.

    ಭಾರತಕ್ಕೆ ಜಪಾನ್ ನೆರವು:
    ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ಈ ಕುರಿತು ಮಾತನಾಡಿ, ಚಂದ್ರಯಾನ 4 ಕೇವಲ ಚಂದ್ರನಿಂದ ಕಲ್ಲುಗಳನ್ನು ತರುವ ಮಿಷನ್ ಅಲ್ಲ. ಭವಿಷ್ಯದಲ್ಲಿ ಮನುಷ್ಯರು ಚಂದ್ರನಲ್ಲಿಗೆ ಹೋಗಲು ಮತ್ತು ಅಲ್ಲಿಂದ ಸುರಕ್ಷಿತವಾಗಿ ಹಿಂತಿರುಗಲು ಸಾಧ್ಯವಾಗುವಂತಹ ಸಾಮರ್ಥ್ಯವನ್ನು ರಚಿಸುವುದಾಗಿದೆ ಎಂದರು.

    ಈ ಯೋಜನೆಯಲ್ಲಿ ಭಾರತ ಮತ್ತು ಜಪಾನ್ ಒಟ್ಟಾಗಿ ಕೆಲಸ ಮಾಡುತ್ತಿವೆ ಎಂಬ ಮಾಹಿತಿ ದೊರೆತಿದೆ. ಇಸ್ರೋ ತನ್ನ ಲ್ಯಾಂಡರ್ ಅನ್ನು ಸಿದ್ಧಪಡಿಸುತ್ತಿದ್ದು, ಚಂದ್ರನ ರೋವರ್‌ನ ಜವಾಬ್ದಾರಿಯನ್ನು JAXA ವಹಿಸಿಕೊಂಡಿದೆ. ಲ್ಯಾಂಡರ್ ರೋವರ್ ಅನ್ನು ಹೊತ್ತೊಯ್ಯುತ್ತದೆ. ಹೀಗಾಗಿ ಎರಡೂ ದೇಶಗಳು ಚಂದ್ರಯಾನ 4ರ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಲಿವೆ.

    ಭಾರತೀಯ ಬಾಹ್ಯಾಕಾಶ ನಿಲ್ದಾಣ:
    ಗಗನಯಾನ ಕಾರ್ಯಕ್ರಮದ ವ್ಯಾಪ್ತಿಯನ್ನು ವಿಸ್ತರಿಸುವುದರೊಂದಿಗೆ ಭಾರತೀಯ ಬಾಹ್ಯಾಕಾಶ ನಿಲ್ದಾಣದ (ಬಿಎಎಸ್-1) ಮೊದಲ ಮಾಡ್ಯೂಲ್ ಅನ್ನು ಅಭಿವೃದ್ಧಿಪಡಿಸಲು ಕ್ಯಾಬಿನೆಟ್ ಅನುಮೋದನೆ ನೀಡಿದೆ. ಪರಿಷ್ಕೃತ ಗಗನಯಾನ ಕಾರ್ಯಕ್ರಮ BAS-1 ಘಟಕ ಸೇರಿದಂತೆ ಎಂಟು ಕಾರ್ಯಾಚರಣೆಗಳನ್ನು ಒಳಗೊಂಡಿದೆ. ಇದು ಡಿಸೆಂಬರ್ 2028ರೊಳಗೆ ಪೂರ್ಣಗೊಳ್ಳಲಿದೆ.

    ಗಗನಯಾನ ಕಾರ್ಯಕ್ರಮದ ಒಟ್ಟು ನಿಧಿಯನ್ನು 11,170 ಕೋಟಿ ರೂಪಾಯಿಗಳಿಂದ 20,193 ಕೋಟಿ ರೂಪಾಯಿಗಳಿಗೆ ಹೆಚ್ಚಿಸಲಾಗಿದೆ. ಗಗನಯಾನದಲ್ಲಿ 3 ಗಗನಯಾತ್ರಿಗಳನ್ನು 400 ಕಿ.ಮೀ ಮೇಲಿನ ಭೂಮಿಯ ಕಕ್ಷೆಗೆ 3 ದಿನಗಳ ಕಾರ್ಯಾಚರಣೆಗಾಗಿ ಕಳುಹಿಸಲಾಗುತ್ತದೆ. ಇದಾದ ನಂತರ ಸಿಬ್ಬಂದಿ ಇರುವ ಮಾಡ್ಯೂಲ್ ಅನ್ನು ಸಮುದ್ರದಲ್ಲಿ ಸುರಕ್ಷಿತವಾಗಿ ಇಳಿಸಲಾಗುತ್ತದೆ.

    ವೀನಸ್ (ಶುಕ್ರ) ಆರ್ಬಿಟರ್ ಮಿಷನ್:
    ಈ ಯೋಜನೆಗೆ ಕೇಂದ್ರ ಸರ್ಕಾರ 1,236 ಕೋಟಿ ರೂ.ಗಳ ಬಜೆಟ್ ಮೀಸಲಿಟ್ಟಿದೆ. 2028ರ ಮಾರ್ಚ್‌ನಲ್ಲಿ ಯೋಜನೆ ಪ್ರಾರಂಭವಾಗಲಿದೆ. ಇದರ ಪ್ರಾಥಮಿಕ ಉದ್ದೇಶ ಶುಕ್ರನ ಮೇಲ್ಮೈ ಮತ್ತು ವಾತಾವರಣದ ಬಗ್ಗೆ ನಮ್ಮ ತಿಳುವಳಿಕೆಯನ್ನು ಹೆಚ್ಚಿಸುವುದು, ವಾತಾವರಣದ ಮೇಲೆ ಸೂರ್ಯನ ಪ್ರಭಾವದ ಕುರಿತು ಅಧ್ಯಯನ ಮಾಡುವುದಾಗಿದೆ.

  • ಚಿತ್ರದುರ್ಗದಲ್ಲಿ ಪುಷ್ಪಕ್ ಆರ್‌ಎಲ್‍ವಿ ಸ್ಪೇಸ್‍ಶಿಪ್ ಲ್ಯಾಂಡಿಂಗ್ ಪ್ರಯೋಗ ಯಶಸ್ವಿ

    ಚಿತ್ರದುರ್ಗದಲ್ಲಿ ಪುಷ್ಪಕ್ ಆರ್‌ಎಲ್‍ವಿ ಸ್ಪೇಸ್‍ಶಿಪ್ ಲ್ಯಾಂಡಿಂಗ್ ಪ್ರಯೋಗ ಯಶಸ್ವಿ

    ತಿರುವನಂತಪುರಂ/ಚಿತ್ರದುರ್ಗ: ಚಳ್ಳಕೆರೆ ಬಳಿಯ ಎಟಿಆರ್‌ನಲ್ಲಿ (ಎರೋನೆಟಿಕಲ್ ಟೆಸ್ಟ್ ರೇಂಜ್) ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ನಡೆಸಿದ ಪುಷ್ಪಕ್ ಆರ್‍ಎಲ್‍ವಿ (Pushpak RLV) ಲ್ಯಾಂಡಿಂಗ್ ಪ್ರಯೋಗ ಯಶಸ್ವಿಯಾಗಿದೆ. ಈ ಬಗ್ಗೆ ಎಕ್ಸ್‌ನಲ್ಲಿ ಇಸ್ರೋ (ISRO) ಮಾಹಿತಿ ಹಾಗೂ ಸ್ಪೇಸ್‍ಶಿಪ್ ಲ್ಯಾಂಡಿಂಗ್‍ನ ವಿಡಿಯೋ ಹಂಚಿಕೊಂಡಿದೆ.

    ಈ ಬಗ್ಗೆ ಪ್ರತಿಕ್ರಿಯಿಸಿರುವ ಇಸ್ರೋ ಮುಖ್ಯಸ್ಥ ಎಸ್.ಸೋಮನಾಥ್ (S.Somanath), ಪುಷ್ಪಕ್ ಆರ್‍ಎಲ್‍ವಿಯ ಪರೀಕ್ಷೆಯ ಭಾಗವಾಗಿ ವಾಯುಪಡೆಯ ಹೆಲಿಕಾಪ್ಟರ್‌ನಿಂದ ಸ್ಪೇಸ್‍ಶಿಪ್‍ನ್ನು ಬಿಡಲಾಯಿತು. ಬಳಿಕ ಇದು ನಿಖರವಾಗಿ ರನ್‍ವೇಯಲ್ಲಿ ಯಶಸ್ವಿಯಾಗಿ ಇಳಿಯಿತು ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಸಾಲು ಸಾಲು ಆತ್ಮಹತ್ಯೆ- ಪ್ರತಿ ಮೆಟ್ರೋ ನಿಲ್ದಾಣದಲ್ಲೂ ಸ್ಕ್ರೀನ್ ಡೋರ್ ಅಳವಡಿಕೆಗೆ ಪ್ಲಾನ್

    ಪುಷ್ಪಕ್‍ನ್ನು ಭಾರತೀಯ ವಾಯುಪಡೆಯ ಚಿನೂಕ್ ಹೆಲಿಕಾಪ್ಟರ್‌ನಿಂದ ಮೇಲಕ್ಕೆತ್ತಲಾಯಿತು. ಬಳಿಕ 4.5 ಕಿಮೀ ಎತ್ತರದಿಂದ, 4 ಕಿ.ಮೀ ದೂರದಲ್ಲಿ ಇದನ್ನು ಬಿಡಲಾಯಿತು. ನಂತರ ಪುಷ್ಪಕ್ ಸ್ವಯಂಪ್ರೇರಿತವಾಗಿ ರನ್‍ವೇಯನ್ನು ಸಮೀಪಿಸಿ, ನಿಖರವಾಗಿ ಇಳಿಯಿತು. ಬಳಿಕ ರನ್‍ವೇಯಲ್ಲಿ ತನ್ನ ಬ್ರೇಕ್ ಪ್ಯಾರಾಚೂಟ್, ಲ್ಯಾಂಡಿಂಗ್ ಗೇರ್ ಬ್ರೇಕ್‍ಗಳು ಮತ್ತು ನೋಸ್ ವೀಲ್ ಸ್ಟೀರಿಂಗ್ ವ್ಯವಸ್ಥೆಯನ್ನು ಬಳಸಿಕೊಂಡು ನಿಲ್ಲುವಲ್ಲಿ ಯಶಸ್ವಿಯಾಯಿತು ಎಂದು ಇಸ್ರೋ ತಿಳಿಸಿದೆ.

    ಇಂದಿನ ಪ್ರಯೋಗವು ಪುಷ್ಪಕ್‍ನ ಮೂರನೇ ಹಾರಾಟವಾಗಿದೆ. ಇದು ಹೆಚ್ಚು ಸಂಕೀರ್ಣ ಸಂದರ್ಭಗಳಲ್ಲಿ ಅದರ ರೊಬೊಟಿಕ್ ಲ್ಯಾಂಡಿಂಗ್ ಸಾಮಥ್ರ್ಯದ ಪರೀಕ್ಷೆಯ ಭಾಗವಾಗಿದೆ. ಪುಷ್ಪಕ್ ಕಾರ್ಯಾಚರಣೆಗೆ ಇನ್ನೂ ಕೆಲವು ವರ್ಷಗಳನ್ನು ತೆಗೆದುಕೊಳ್ಳುವ ಸಾಧ್ಯತೆ ಇದೆ.

    ಪುಷ್ಪಕ್ ಭಾರತದ ಭವಿಷ್ಯದ ಮರುಬಳಕೆ ಮಾಡಬಹುದಾದ ಉಡಾವಣಾ ವಾಹನವಾಗಿದೆ. ನವೀಕರಣಕ್ಕಾಗಿ ಉಪಗ್ರಹಗಳನ್ನು ಕಕ್ಷೆಯಿಂದ ವಾಪಸ್ ಪಡೆಯಲು ಇದು ನೆರವಾಗಲಿದೆ.

    ಹ್ಯಾಕಾಇಸ್ರೋ ವಿಜ್ಞಾನಿಗಳ ತಂಡದಿಂದ ಬಾಹ್ಯಾಕಾಶ ನೌಕೆಯ ತಯಾರಿಕೆಯು 10 ವರ್ಷಗಳ ಹಿಂದೆ ಪ್ರಾರಂಭವಾಯಿತು. 6.5 ಮೀಟರ್ ಏರೋಪ್ಲೇನ್ ತರಹದ ಈ ಕ್ರಾಫ್ಟ್ 1.75 ಟನ್ ತೂಗುತ್ತದೆ. ಅದರ ಇಳಿಯುವಿಕೆಯ ಸಮಯದಲ್ಲಿ, ಸಣ್ಣ ಥ್ರಸ್ಟರ್‍ಗಳು ವಾಹನವು ಇಳಿಯಬೇಕಾದ ನಿಖರವಾದ ಸ್ಥಳಕ್ಕೆ ನ್ಯಾವಿಗೇಟ್ ಮಾಡಲು ಸಹಾಯ ಮಾಡುತ್ತದೆ. ಈ ಯೋಜನೆಗೆ ಸರ್ಕಾರ 100 ಕೋಟಿಗೂ ರೂ.ಗೂ ಹೆಚ್ಚು ಹೂಡಿಕೆ ಮಾಡಿದೆ.

    ಸ್ವದೇಶಿ ಬಾಹ್ಯಾಕಾಶ ನೌಕೆಯಾಗಿರುವ ಪುಷ್ಪಕ್ ಆರ್‍ಎಲ್‍ವಿ ಯಶಸ್ವಿ ಲ್ಯಾಂಡಿಂಗ್, ಚಂದ್ರಯಾನ-3, ಆದಿತ್ಯ ಎಲ್-1 ಯಶಸ್ಸಿನ ನಂತರದ ಇಸ್ರೋದ ಮಹತ್ವದ ಹೆಜ್ಜೆಯಾಗಿದೆ.

    ಸಂಪತ್ತಿನ ಅಧಿಪತಿ ಕುಬೇರನ ವಾಹನ ಎಂದು ಕರೆಯಲ್ಪಡುವ ರಾಮಾಯಣದಲ್ಲಿ ಉಲ್ಲೇಖಿಸಲಾದ `ಪುಷ್ಪಕ ವಿಮಾನ’ದಿಂದ ಸ್ಪೇಸ್‍ಶಿಪ್‍ಗೆ ಈ ಹೆಸರನ್ನು ಇಡಲಾಗಿದೆ ಎಂದು ಈ ಹಿಂದೆ ಸೋಮನಾಥನ್ ಹೇಳಿದ್ದರು. ಇದನ್ನೂ ಓದಿ: ಏನಿದು ದೆಹಲಿ ಮದ್ಯ ಹಗರಣ? ಕೇಜ್ರಿವಾಲ್‌ ಮೇಲಿರುವ ಆರೋಪ ಏನು? ಬಂಧನವಾದ ಪ್ರಮುಖರು ಯಾರು?

  • ಮಿಷನ್‌ ಗಗನಯಾನ; ಅ.21 ಕ್ಕೆ ಮೊದಲ ಪರೀಕ್ಷಾರ್ಥ ಉಡಾವಣೆ

    ಮಿಷನ್‌ ಗಗನಯಾನ; ಅ.21 ಕ್ಕೆ ಮೊದಲ ಪರೀಕ್ಷಾರ್ಥ ಉಡಾವಣೆ

    ನವದೆಹಲಿ: ಚಂದ್ರಯಾನ-3 (Chandrayaan-3), ಸೂರ್ಯಯಾನ (Aditya L1) ಯಶಸ್ಸಿನ ಬಳಿಕ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಮಾನವ ಸಹಿತ ಗಗನಯಾನಕ್ಕೆ (Gaganyaan Mission) ಸಜ್ಜಾಗಿದೆ. ಇದೇ ತಿಂಗಳ 21 ರಂದು ಪರೀಕ್ಷಾರ್ಥ ಉಡಾವಣೆ ನಡೆಸಲಾಗುವುದು ಎಂದು ಇಸ್ರೋ ತಿಳಿಸಿದೆ.

    ಅ.21 ರಂದು ಬೆಳಗ್ಗೆ 7 ಮತ್ತು 9 ಗಂಟೆ ನಡುವಿನಲ್ಲಿ ಶ್ರೀಹರಿಕೋಟಾದ ಸತೀಶ್‌ ಧವನ್‌ ಉಡಾವಣಾ ಕೇಂದ್ರದಲ್ಲಿ ಮಾನವರಹಿತ ಗಗನಯಾನ ಪರೀಕ್ಷಾರ್ಥ ಉಡಾವಣೆ ನಡೆಯಲಿದೆ ಎಂದು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಇಸ್ರೋ ಪೋಸ್ಟ್‌ ಮಾಡಿದೆ. ಇದನ್ನೂ ಓದಿ: ಮಾನವ ಸಹಿತ ಗಗನಯಾನಕ್ಕೆ ಇಸ್ರೋ ಸಜ್ಜು – ಇದೇ ತಿಂಗಳಲ್ಲಿ ಪರೀಕ್ಷಾರ್ಥ ಉಡಾವಣೆ

    ಗಗನಯಾನ ಮಿಷನ್‌ನಡಿ ನಾಲ್ಕು ಪರೀಕ್ಷಾರ್ಥ ಉಡಾವಣೆ ನಡೆಸಲಾಗುವುದು ಎಂದು ಇಸ್ರೋ ಅಧ್ಯಕ್ಷ ಸೋಮನಾಥ್‌ ತಿಳಿಸಿದ್ದರು. ಅ.21 ರಂದು ಟಿವಿ-ಡಿ1 ಪರೀಕ್ಷಾರ್ಥ ಉಡಾವಣೆ ಮಾಡಲಾಗುವುದು. ಇದರ ಬಳಿಕ ಟಿವಿ-ಡಿ2, ಟಿವಿ-ಡಿ3 ಮತ್ತು ಟಿವಿ-ಡಿ4 ಹೀಗೆ ಇನ್ನೂ ಮೂರು ಪರೀಕ್ಷಾರ್ಥ ಉಡಾವಣೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

    ಕ್ರೂ ಎಸ್ಕೇಪ್ ಸಿಸ್ಟಂನ ಕಾರ್ಯಕ್ಷಮತೆ ಪ್ರದರ್ಶಿಸುವ ಫ್ಲೈಟ್ ಟೆಸ್ಟ್ ವೆಹಿಕಲ್ ಅಬಾರ್ಟ್ ಮಿಷನ್-1 (ಟಿವಿ-ಡಿ1) ಗಾಗಿ ಸಿದ್ಧತೆ ನಡೆಯುತ್ತಿವೆ ಎಂದು ಇಸ್ರೋ ಇತ್ತೀಚೆಗೆ ಹೇಳಿತ್ತು. ಮೊದಲ ಪರೀಕ್ಷಾರ್ಥ ಉಡಾವಣೆ ಭಾಗವಾಗಿರುವ ಫ್ಲೈಟ್ ಟೆಸ್ಟ್ ವೆಹಿಕಲ್ (ಟಿವಿ-ಡಿ1) ತಯಾರಿಯ ಅಂತಿಮ ಹಂತದಲ್ಲಿದೆ. ಇದನ್ನೂ ಓದಿ: 2024ಕ್ಕೆ ಮಾನವ ಬಾಹ್ಯಾಕಾಶಕ್ಕೆ – ಭಾರತದ ಗಗನಯಾನ ನೌಕೆ ಮೊದಲ ಚಿತ್ರ ರಿಲೀಸ್‌

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪ್ರತಿನಿತ್ಯ ನೂರು ಸೈಬರ್ ದಾಳಿಗಳ ವಿರುದ್ಧ ಇಸ್ರೋ ಹೋರಾಟ: ಎಸ್.ಸೋಮನಾಥ್

    ಪ್ರತಿನಿತ್ಯ ನೂರು ಸೈಬರ್ ದಾಳಿಗಳ ವಿರುದ್ಧ ಇಸ್ರೋ ಹೋರಾಟ: ಎಸ್.ಸೋಮನಾಥ್

    ತಿರುವನಂತಪುರಂ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಪ್ರತಿನಿತ್ಯ ನೂರು ಸೈಬರ್ ದಾಳಿಗಳ (Cyber Attacks) ವಿರುದ್ಧ ಹೋರಾಡುತ್ತಿದೆ ಎಂದು ಸಂಸ್ಥೆಯ ಅಧ್ಯಕ್ಷ ಎಸ್.ಸೋಮನಾಥ್ (S.Somanath) ಹೇಳಿದ್ದಾರೆ. ಕೇರಳದ ಕೊಚ್ಚಿಯಲ್ಲಿ ಅಂತಾರಾಷ್ಟ್ರೀಯ ಸೈಬರ್ ಸಮ್ಮೇಳನದ 16ನೇ ಆವೃತ್ತಿಯ ಸಮಾರೋಪ ಸಮಾರಂಭದಲ್ಲಿ ಈ ವಿಚಾರವನ್ನು ಅವರು ಬಹಿರಂಗ ಪಡಿಸಿದ್ದಾರೆ.

    ಅಲ್ಟ್ರಾ-ಆಧುನಿಕ ಸಾಫ್ಟ್‍ವೇರ್ ಬಳಸುವ ರಾಕೆಟ್ ತಂತ್ರಜ್ಞಾನದಲ್ಲಿ ಸೈಬರ್ ದಾಳಿಯ ಸಾಧ್ಯತೆ ಹೆಚ್ಚು. ಅಂತಹ ದಾಳಿಗಳನ್ನು ಎದುರಿಸಲು ಸಂಸ್ಥೆಯು ದೃಢವಾದ ಸೈಬರ್ ಭದ್ರತೆಯ ನೆಟ್‍ವರ್ಕ್‍ನೊಂದಿಗೆ ಸಜ್ಜುಗೊಂಡಿದೆ. ಇದರ ಸಲುವಾಗಿ ಸಾಫ್ಟ್‍ವೇರ್ ಮಾತ್ರವಲ್ಲದೇ ರಾಕೆಟ್‍ಗಳೊಳಗಿನ ಹಾರ್ಡ್‍ವೇರ್ ಚಿಪ್‍ಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ವಿವಿಧ ಸಂಶೋಧನೆಗಳು ನಡೆಯುತ್ತಿವೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಹಮಾಸ್ ಉಗ್ರರಿಂದ ಮಗಳ ಬೆತ್ತಲೆ ಮೆರವಣಿಗೆ- ಸಾರ್ವಜನಿಕರಲ್ಲಿ ತಾಯಿ ಮನವಿ

    ಉಪಗ್ರಹವನ್ನು ನಿಯಂತ್ರಣ ಮಾಡುವ ವಿಧಾನವು ಒಂದೇ ಸಮಯದಲ್ಲಿ ಅನೇಕ ಉಪಗ್ರಹಗಳನ್ನು ನಿಯಂತ್ರಿಸುವ ಸಾಫ್ಟ್‍ವೇರ್ ವಿಧಾನವಾಗಿ ಬದಲಾಗಿದೆ. ಇದು ಈ ವಲಯದ ಮಹತ್ವದ ಬೆಳವಣಿಗೆಯನ್ನು ಸೂಚಿಸುತ್ತದೆ. ಇಂದು ಸಾಮಾನ್ಯ ಜನರ ದೈನಂದಿನ ಜೀವನಕ್ಕೆ ಸಹಾಯ ಮಾಡುವ ಉಪಗ್ರಹಗಳು ಸಹ ಪ್ರಸ್ತುತವಾಗಿವೆ. ಇವೆಲ್ಲವನ್ನೂ ವಿವಿಧ ರೀತಿಯ ಸಾಫ್ಟ್‍ವೇರ್‍ಗಳಿಂದ ನಿಯಂತ್ರಿಸಲಾಗುತ್ತದೆ. ಇವೆಲ್ಲವನ್ನೂ ರಕ್ಷಿಸಲು ಸೈಬರ್ ಸುರಕ್ಷತೆ ಬಹಳ ಮುಖ್ಯ ಎಂದು ಅವರು ತಿಳಿಸಿದ್ದಾರೆ.

    ಸುಧಾರಿತ ತಂತ್ರಜ್ಞಾನವು ಒಂದು ವರದಾನವಾಗಿದೆ. ಇದೇ ವೇಳೆ ಅದು ಬೆದರಿಕೆಗೂ ಕಾರಣವಾಗಿದೆ. ಕೃತಕ ಬುದ್ಧಿಮತ್ತೆಯಂತಹ ತಂತ್ರಜ್ಞಾನವನ್ನು ಬಳಸಿಕೊಂಡು ಸೈಬರ್ ಅಪರಾಧಿಗಳು ಒಡ್ಡುವ ಸವಾಲುಗಳನ್ನು ನಾವು ಅದೇ ತಂತ್ರಜ್ಞಾನದಿಂದ ಎದುರಿಸಬಹುದು. ಈ ನಿಟ್ಟಿನಲ್ಲಿ ಸಂಶೋಧನೆ ಆಗಬೇಕಿದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಹಾವೇರಿ, ಅತ್ತಿಬೆಲೆ ದುರಂತಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ಮಾಡಲಿ: ಬೊಮ್ಮಾಯಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಇಸ್ರೋ ಅಧ್ಯಕ್ಷರಿಗೆ ವಿಕ್ರಂ ಲ್ಯಾಂಡರ್ ಗಿಫ್ಟ್ ನೀಡಿದ ಪುಟ್ಟ ಬಾಲಕ

    ಇಸ್ರೋ ಅಧ್ಯಕ್ಷರಿಗೆ ವಿಕ್ರಂ ಲ್ಯಾಂಡರ್ ಗಿಫ್ಟ್ ನೀಡಿದ ಪುಟ್ಟ ಬಾಲಕ

    ಬೆಂಗಳೂರು: ಚಂದ್ರಯಾನ-3 (Chandrayaan-3) ಯಶಸ್ವಿಯಾದ ಹಿನ್ನೆಲೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ISRO) ಮುಖ್ಯಸ್ಥ ಎಸ್. ಸೋಮನಾಥ್ (S.Somanath)ಅವರಿಗೆ ಪುಟ್ಟ ಪೋರನೋರ್ವ ವಿಕ್ರಂ ಲ್ಯಾಂಡರ್ (Vikram Lander) ಮಾದರಿಯನ್ನು ಗಿಫ್ಟ್ (Gift) ಕೊಡುವ ಮೂಲಕ ಅಭಿನಂದನೆ ಸಲ್ಲಿಸಿದ್ದು, ಈ ಚಿತ್ರ ಎಲ್ಲರ ಮನಗೆದ್ದಿದೆ.

    ಆಗಸ್ಟ್ 23ರಂದು ಚಂದ್ರಯಾನ-3 ಮಿಷನ್ ಯಶಸ್ವಿಯಾಗಿ ಚಂದ್ರನ ದಕ್ಷಿಣ ಧ್ರುವದಲ್ಲಿ ಲ್ಯಾಂಡ್ ಆಗಿದ್ದು, ಪ್ರತಿಯೊಬ್ಬ ಭಾರತೀಯ ಹೆಮ್ಮೆ ಪಡುವ ದಿನ ಅದಾಗಿತ್ತು. ಚಂದ್ರನ ದಕ್ಷಿಣ ಧ್ರುವದಲ್ಲಿ ಸಾಫ್ಟ್ ಲ್ಯಾಂಡ್ ಮಾಡಿದ ಮೊದಲ ದೇಶ ಎಂಬ ಕೀರ್ತಿ ಭಾರತಕ್ಕೆ ಸಂದಿದೆ. ಇಸ್ರೋ ವಿಜ್ಞಾನಿಗಳ ಈ ಅಭೂತಪೂರ್ವ ಕಾರ್ಯಕ್ಕೆ ಗಣ್ಯಾತಿಗಣ್ಯರಿಂದ ಹಿಡಿದು ಇಡೀ ವಿಶ್ವವೇ ಅಭಿನಂದನೆ ಸಲ್ಲಿಸಿತ್ತು. ಇದನ್ನೂ ಓದಿ: ಹೆಚ್‌ಡಿಕೆ ಆಸ್ಪತ್ರೆಯಿಂದ ಡಿಸ್ಚಾರ್ಜ್‌ – ಅಭಿಮಾನಿಯಿಂದ ಕುಂಕುಮ ಅಕ್ಷತೆ ಸ್ವೀಕರಿಸಿದ ಮಾಜಿ ಸಿಎಂ

    ಅದೇ ರೀತಿ ಈ ಪುಟ್ಟ ಬಾಲಕ ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸುವ ಸಲುವಾಗಿ ವಿಕ್ರಂ ಲ್ಯಾಂಡರ್‌ನ ಮಾದರಿಯನ್ನು ರಚಿಸಿದ್ದು, ಎಲ್ಲರ ಪರವಾಗಿ ಇಸ್ರೋ ಅಧ್ಯಕ್ಷರಿಗೆ ನೀಡಿದ್ದಾನೆ. ಇಸ್ರೋ ವಿಜ್ಞಾನಿ ಪಿವಿ ವೆಂಕಟಕೃಷ್ಣನ್ ಅವರು ಟ್ವಿಟ್ಟರ್‌ನಲ್ಲಿ ಈ ಸುಂದರ ಕ್ಷಣದ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದ್ದು, ಬಾಲಕ ಎಸ್ ಸೋಮನಾಥ್ ಅವರಿಗೆ ಗಿಫ್ಟ್ ನೀಡುತ್ತಿರುವ ಚಿತ್ರವನ್ನು ಸಹಾ ಹಂಚಿಕೊಂಡಿದ್ದಾರೆ. ಈ ಕ್ಯೂಟ್ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ನೆಟ್ಟಿಗರ ಮನಗೆದ್ದಿದೆ. ಇದನ್ನೂ ಓದಿ: ಮಹಿಳೆಯ ಮೇಲೆ ಅತ್ಯಾಚಾರ ಆರೋಪ- ತೆಲಂಗಾಣ ಕಾಂಗ್ರೆಸ್ ನಾಯಕನಿಗೆ ನೋಟಿಸ್

    ಸೆ.2ರಂದು ಇಸ್ರೋ ತನ್ನ ಸೌರ ಮಿಷನ್ ಆದಿತ್ಯ ಎಲ್-1 ಅನ್ನು ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಉಡಾವಣೆ ಮಾಡಿದೆ. ಸೂರ್ಯನನ್ನು ಅಧ್ಯಯನ ಮಾಡುವ ಭಾರತದ ಮೊದಲ ಮಿಷನ್ ಇದಾಗಿದೆ. ಈ ಸೋಲಾರ್ ಮಿಷನ್‌ಗೆ ಸುಮಾರು 300 ಕೋಟಿ ರೂ. ವೆಚ್ಚವಾಗಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಸನಾತನ ಧರ್ಮ ಡೆಂಗ್ಯೂ, ಮಲೇರಿಯಾ ಇದ್ದಂತೆ: ಎಂ.ಕೆ ಸ್ಟಾಲಿನ್ ಪುತ್ರನಿಂದ ವಿವಾದಾತ್ಮಕ ಹೇಳಿಕೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ʼಶಿವಶಕ್ತಿʼ ನಾಮಕರಣ ಮಾಡಿದ್ದರಲ್ಲಿ ಯಾವುದೇ ತಪ್ಪಿಲ್ಲ, ಹೊರಗಿನ ಹುಡುಕಾಟಕ್ಕೆ ವಿಜ್ಞಾನವಾದರೆ ಅಂತರಂಗಕ್ಕೆ ಆಧ್ಯಾತ್ಮ: ಇಸ್ರೋ ಅಧ್ಯಕ್ಷ

    ʼಶಿವಶಕ್ತಿʼ ನಾಮಕರಣ ಮಾಡಿದ್ದರಲ್ಲಿ ಯಾವುದೇ ತಪ್ಪಿಲ್ಲ, ಹೊರಗಿನ ಹುಡುಕಾಟಕ್ಕೆ ವಿಜ್ಞಾನವಾದರೆ ಅಂತರಂಗಕ್ಕೆ ಆಧ್ಯಾತ್ಮ: ಇಸ್ರೋ ಅಧ್ಯಕ್ಷ

    ತಿರುವನಂತಪುರಂ: ವಿಕ್ರಂ ಲ್ಯಾಂಡರ್‌ (Vikram Lander) ಚಂದ್ರನ ದಕ್ಷಿಣ ಧ್ರುವದ ಮೇಲೆ ಇಳಿದ ಸ್ಥಳವನ್ನು ಶಿವಶಕ್ತಿ ಪಾಯಿಂಟ್‌ (Shivashakti Point) ಎಂದು ಪ್ರಧಾನಿ ಮೋದಿ ನಾಮಕರಣ ಮಾಡಿದ್ದರಲ್ಲಿ ಯಾವುದೇ ತಪ್ಪಿಲ್ಲ ಎಂದು ಇಸ್ರೋ (ISRO) ಅಧ್ಯಕ್ಷ ಸೋಮನಾಥ್‌ (Somanath) ಹೇಳಿದ್ದಾರೆ.

    ಚಂದ್ರಯಾನ-3 (Chandrayaan-3) ಯಶಸ್ವಿಯಾದ ಬಳಿಕ ಕೇರಳದ ತಿರುವನಂತಪುರಂನಲ್ಲಿರುವ ಪೌರ್ಣಮಿಕಾವು-ಭದ್ರಕಾಳಿ ದೇವಸ್ಥಾನಕ್ಕೆ ಭೇಟಿ ನೀಡಿ ಸೋಮನಾಥ್‌ ಪ್ರಾರ್ಥನೆ ಸಲ್ಲಿಸಿದರು.

    ಈ ವೇಳೆ ಮಾಧ್ಯಮದ ಜೊತೆ ಮಾತನಾಡಿದ ಅವರು, ವಿಕ್ರಂ ಲ್ಯಾಂಡರ್‌ ಚಂದ್ರನನ್ನು ಸ್ಪರ್ಶಿಸಿದ ಜಾಗಕ್ಕೆ ‘ಶಿವಶಕ್ತಿ’ ಎಂದು ನಾಮಕರಣ ಮಾಡಿದ್ದರಲ್ಲಿ ಯಾವುದೇ ತಪ್ಪಿಲ್ಲ. ಆ ಸ್ಥಳಕ್ಕೆ ಹೆಸರಿಡುವ ಹಕ್ಕು ರಾಷ್ಟ್ರಕ್ಕೆ ಇದೆ ಎಂದರು. ಇದನ್ನೂ ಓದಿ: ಚಂದ್ರಲೋಕದಲ್ಲಿ ಜೈ ಹಿಂದ್‌ – ಮೊದಲ ಬಾರಿಗೆ ತಾಪಮಾನ ಪರೀಕ್ಷೆ

    ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ನಮಗೆಲ್ಲರಿಗೂ ಸರಿಹೊಂದುವ ರೀತಿಯಲ್ಲಿ ಶಿವಶಕ್ತಿ ಅರ್ಥವನ್ನು ವಿವರಿಸಿದ್ದಾರೆ. ಅದರಲ್ಲಿ ಯಾವುದೇ ತಪ್ಪಿಲ್ಲ ಎಂದು ನಾನು ಭಾವಿಸುತ್ತೇನೆ. ಚಂದ್ರಯಾನ–2 ಪತನವಾಗಿದ್ದ ಸ್ಥಳವನ್ನು ‘ತಿರಂಗಾ ಪಾಯಿಂಟ್‌ʼ ಎಂದು ಹೆಸರನ್ನು ಇರಿಸಿದ್ದಾರೆ. ಎರಡೂ ಭಾರತೀಯ ಧ್ವನಿಯ ಹೆಸರುಗಳಾಗಿವೆ. ನಾವು ಏನು ಮಾಡುತ್ತಿದ್ದೇವೆ ಎಂಬುದರ ಮಹತ್ವ ನಮಗೆ ತಿಳಿದಿರಬೇಕು  ಎಂದು ಹೇಳಿದರು.

    ನಾನೊಬ್ಬ ಅನ್ವೇಷಕ. ನಾನು ಚಂದ್ರನನ್ನು ಅನ್ವೇಷಿಸುತ್ತೇನೆ. ಆಂತರಂಗದ ಜಾಗವನ್ನು ಅನ್ವೇಷಿಸುತ್ತೇನೆ. ಹೊರಗಿನ ಹುಡುಕಾಟಕ್ಕೆ ವಿಜ್ಞಾನ. ಅಂತರಂಗದ ಹುಡುಕಾಟಕ್ಕೆ ಆಧ್ಯಾತ್ಮ. ನಾನು ಅನೇಕ ದೇವಸ್ಥಾನಗಳಿಗೆ ಭೇಟಿ ನೀಡುತ್ತೇನೆ ಮತ್ತು ಅನೇಕ ಗ್ರಂಥಗಳನ್ನು ಓದುತ್ತೇನೆ. ಈ ಬ್ರಹ್ಮಾಂಡದಲ್ಲಿ ನಮ್ಮ ಅಸ್ತಿತ್ವ ಮತ್ತು ನಮ್ಮ ಪ್ರಯಾಣದ ಅರ್ಥವನ್ನು ಕಂಡುಹಿಡಿಯಲು ನಾನು ಪ್ರಯತ್ನಿಸುತ್ತೇನೆ. ಇದು ನಮ್ಮ ಸಂಸ್ಕೃತಿಯ ಭಾಗವಾಗಿದೆ. ಹೊರಗಡೆ ವಿಜ್ಞಾನ ಮಾಡಿದರೆ ಅಂತರಂಗಕ್ಕೆ ದೇವಸ್ಥಾನಗಳಿಗೆ ಬರುತ್ತೇನೆ ಎಂದು ಹೇಳಿದರು.

    ಮಿಷನ್‌ನ ಪ್ರಸ್ತುತ ಸ್ಥಿತಿಯ ಬಗ್ಗೆ ಕೇಳಿದ್ದಕ್ಕೆ, ಎಲ್ಲವೂ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಚಂದ್ರಯಾನ 3, ಲ್ಯಾಂಡರ್, ರೋವರ್ ತುಂಬಾ ಆರೋಗ್ಯಕರವಾಗಿದ್ದು, ಬೋರ್ಡ್‌ನಲ್ಲಿರುವ ಎಲ್ಲಾ ಐದು ಉಪಕರಣಗಳನ್ನು ಸ್ವಿಚ್ ಆನ್ ಮಾಡಲಾಗಿದೆ. ಇವುಗಳು ಸುಂದರವಾದ ಡೇಟಾವನ್ನು ನೀಡುತ್ತಿದೆ. ಇನ್ನೂ ಹತ್ತು ದಿನಗಳು ಉಳಿದಿವೆ. ವಿವಿಧ ವಿಧಾನಗಳ ಸಂಪೂರ್ಣ ಸಾಮರ್ಥ್ಯದೊಂದಿಗೆ ನಾವು ಎಲ್ಲಾ ಪ್ರಯೋಗಗಳನ್ನು ಪೂರ್ಣಗೊಳಿಸಲು ಸಾಧ್ಯವಾಗುತ್ತದೆ ಎಂದು ನಾವು ಭಾವಿಸುತ್ತೇವೆ ಎಂದು ತಿಳಿಸಿದರು.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪ್ರಧಾನಿ ಮೋದಿಗೆ ಚಂದ್ರಯಾನ-3 ನೌಕೆ ಸೆರೆ ಹಿಡಿದ ಮೊದಲ ಫೋಟೋ ಉಡುಗೊರೆ

    ಪ್ರಧಾನಿ ಮೋದಿಗೆ ಚಂದ್ರಯಾನ-3 ನೌಕೆ ಸೆರೆ ಹಿಡಿದ ಮೊದಲ ಫೋಟೋ ಉಡುಗೊರೆ

    ಬೆಂಗಳೂರು: ಚಂದ್ರನ ಅಂಗಳದಲ್ಲಿ ಇಳಿದು ಚಂದ್ರಯಾನ-3 (Chandrayaan-3) ನೌಕೆ ಸೆರೆ ಹಿಡಿದ ಮೊದಲ ಫೋಟೊವನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ಇಸ್ರೋ (ISRO) ವಿಜ್ಞಾನಿಗಳು ಉಡುಗೊರೆಯಾಗಿ ನೀಡಿದರು.

    ಚಂದ್ರಯಾನ-3 ಯಶಸ್ಸಾದ ಹಿನ್ನೆಲೆಯಲ್ಲಿ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ಮೋದಿ ಅವರು ಶನಿವಾರ ಬೆಂಗಳೂರಿಗೆ ಆಗಮಿಸಿದ್ದರು. ಈ ವೇಳೆ ಚಂದ್ರಯಾನ-3 ನೌಕೆ ಸೆರೆ ಹಿಡಿದ ಮೊದಲ ಫೋಟೊವನ್ನು ಇಸ್ರೋ ಅಧ್ಯಕ್ಷ ಎಸ್. ಸೋಮನಾಥ್ (S.Somanath) ಅವರು ಪ್ರಧಾನಿಗಳಿಗೆ ಉಡುಗೊರೆಯಾಗಿ ಕೊಟ್ಟರು. ಇದನ್ನೂ ಓದಿ: ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಇಳಿದ ಸ್ಥಳ ‘ಶಿವಶಕ್ತಿ’: ಹೆಸರಿಟ್ಟ ಮೋದಿ

    ಆ.23 ರಂದು ಸಂಜೆ 6:04 ರ ಹೊತ್ತಿಗೆ ನಿಗದಿತ ಸಮಯಕ್ಕೆ ಚಂದ್ರಯಾನ-3 ವಿಕ್ರಮ್‌ ಲ್ಯಾಂಡರ್‌ ಚಂದ್ರನ ಮೇಲೆ ಯಶಸ್ವಿಯಾಗಿ ಕಾಲಿಟ್ಟಿತು. ಅದಾದ ಕೆಲವೇ ಗಂಟೆಗಳಲ್ಲಿ ವಿಕ್ರಮ್‌ ಲ್ಯಾಂಡರ್‌ ಚಂದ್ರನ ಮೇಲ್ಮೈ ಚಿತ್ರವನ್ನು ತೆಗೆದಿತ್ತು.

    ಚಂದ್ರನ ಮೇಲ್ಮೈನಲ್ಲಿ ಸಾಫ್ಟ್‌ ಲ್ಯಾಂಡಿಂಗ್‌ ಮಾಡಿರುವ ರಾಷ್ಟ್ರಗಳ ಸಾಲಿಗೆ ಭಾರತವೂ ಸೇರಿದೆ. ಅಮೆರಿಕ, ರಷ್ಯಾ, ಚೀನಾ, ಜಪಾನ್‌ ರಾಷ್ಟ್ರಗಳ ಜೊತೆ ಈಗ ಭಾರತ ಸ್ಥಾನ ಪಡೆದಿದೆ. ಮುಖ್ಯವಾಗಿ ಚಂದ್ರನ ದಕ್ಷಿಣ ಧ್ರುವದಲ್ಲಿ ಹೆಜ್ಜೆಯಿಟ್ಟ ಮೊದಲ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ. ಇದನ್ನೂ ಓದಿ: ಚಂದ್ರಯಾನ-3 ಸಕ್ಸಸ್‌; ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಬೆಂಗಳೂರಿಗೆ ಮೋದಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚಂದ್ರಯಾನ-3 ಸಕ್ಸಸ್‌; ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಬೆಂಗಳೂರಿಗೆ ಮೋದಿ

    ಚಂದ್ರಯಾನ-3 ಸಕ್ಸಸ್‌; ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಬೆಂಗಳೂರಿಗೆ ಮೋದಿ

    ಬೆಂಗಳೂರು: ಚಂದ್ರಯಾನ-3 ಯಶಸ್ಸಿನ ಹಿನ್ನೆಲೆಯಲ್ಲಿ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನ ಪೀಣ್ಯದಲ್ಲಿರುವ ಇಸ್ರೋ ಟೆಲಿಮೆಟ್ರಿ ಟ್ರ್ಯಾಕಿಂಗ್‌ ಅಂಡ್‌ ಕಮಾಂಡ್‌ ನೆಟ್‌ವರ್ಕ್‌ ಕೇಂದ್ರಕ್ಕೆ ಆಗಮಿಸಿದ್ದಾರೆ.

    ಕೇಂದ್ರಕ್ಕೆ ಭೇಟಿ ನೀಡಿ ಇಸ್ರೋ ಅಧ್ಯಕ್ಷ ಸೋಮನಾಥ್‌ ಸೇರಿದಂತೆ ಚಂದ್ರಯಾನ-3 ಮಿಷನ್‌ ತಂಡದೊಂದಿಗೆ ಸುಮಾರು 1 ಗಂಟೆಗಳ ಕಾಲ ಚರ್ಚಿಸಿದರು. ನಂತರ ಚಂದ್ರಯಾನ-3 ಮಿಷನ್‌ ಕುರಿತು ಹೆಚ್ಚಿನ ಮಾಹಿತಿ ಪಡೆದುಕೊಂಡರು. ಇದೇ ವೇಳೆ ಪ್ರಧಾನಿ ಮೋದಿ ಅವರಿಗೆ, ಚಂದ್ರಯಾನ-3 ವಿಕ್ರಮ್‌ ಲ್ಯಾಂಡರ್‌ ಚಂದ್ರನ ಮೇಲ್ಮೈನಲ್ಲಿ ಕಾಲಿಟ್ಟ ದೃಶ್ಯವಿರುವ ಫೋಟೋ ಫ್ರೇಮ್‌ ಅನ್ನು ಇಸ್ರೋ ವಿಜ್ಞಾನಿಗಳು ಉಡುಗೊರೆಯಾಗಿ ನೀಡಿದರು.

    ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ ಮೋದಿ ಅವರು ವಿಶೇಷ ವಿಮಾನದಲ್ಲಿ ಹೆಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ವೇಳೆ ಅವರನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ವಾಗತಿಸಿದರು.

    ಹೆಚ್‌ಎಎಲ್‌ ಏರ್‌ಪೋರ್ಟ್‌ ಹೊರಗಡೆ ಜನರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, ದೂರದ ದೇಶದಿಂದ ನೇರವಾಗಿ ಇಲ್ಲಿಗೆ ಬಂದೆ. ಭಾರತದ ಸೂರ್ಯೋದಯವಾಗುತ್ತಿರುವ ಈ ಹೊತ್ತಿನಲ್ಲಿ ಬೆಂಗಳೂರಿಗೆ ಬಂದಿರುವೆ. ನಮ್ಮ ದೇಶದ ವಿಜ್ಞಾನಿಗಳ ಸಾಧನೆಯಿಂದ ಸಂತೋಷವಾಗಿದೆ ಎಂದು ಪ್ರಧಾನಿ ಹೇಳಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚಂದ್ರಯಾನ-3 ಸಕ್ಸಸ್ – ಇಸ್ರೋ ಅಧ್ಯಕ್ಷರಿಗೆ ಸೋನಿಯಾ ಗಾಂಧಿ ಪತ್ರ

    ಚಂದ್ರಯಾನ-3 ಸಕ್ಸಸ್ – ಇಸ್ರೋ ಅಧ್ಯಕ್ಷರಿಗೆ ಸೋನಿಯಾ ಗಾಂಧಿ ಪತ್ರ

    ನವದೆಹಲಿ: ಚಂದ್ರಯಾನ-3ರ ಯಶಸ್ಸಿನ ಕುರಿತು ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್ (S Somanath) ಅವರಿಗೆ ಕಾಂಗ್ರೆಸ್‌ನ (Congress) ಮಾಜಿ ಮುಖ್ಯಸ್ಥೆ ಸೋನಿಯಾ ಗಾಂಧಿ (Sonia Gandhi) ಗುರುವಾರ ಪತ್ರ (Letter) ಬರೆಯುವ ಮೂಲಕ ಅಭಿನಂದನೆಗಳನ್ನು ತಿಳಿಸಿದ್ದಾರೆ.

    ಬಾಹ್ಯಾಕಾಶ ಸಂಸ್ಥೆಯ ಅತ್ಯುತ್ತಮ ಸಾಮರ್ಥ್ಯಗಳನ್ನು ದಶಕಗಳಿಂದ ನಿರ್ಮಿಸಲಾಗಿದೆ ಮತ್ತು 1960ರ ದಶಕದಿಂದ ಆರಂಭಗೊಂಡ ಇಸ್ರೋ (ISRO) ಈಗ ಸ್ವಾವಲಂಬನೆ ಸಾಧಿಸಿರುವುದು ಅದರ ಯಶಸ್ಸಿಗೆ ಕೊಡುಗೆ ನೀಡಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಚಂದ್ರನ ಮೇಲೆ ನಡೆದಾಡಿದ ಪ್ರಗ್ಯಾನ್‌ ರೋವರ್‌ – ವಿಕ್ರಮ್‌ ಲ್ಯಾಂಡರ್‌ನಿಂದ ಹೊರಬರಲು ತಡವಾಗಿದ್ಯಾಕೆ?

    ಪತ್ರದಲ್ಲಿ ಏನಿದೆ?
    ಬುಧವಾರ ಸಂಜೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಅದ್ಭುತ ಸಾಧನೆಯಿಂದ ನಾನು ಎಷ್ಟು ರೋಮಾಂಚನಗೊಂಡಿದ್ದೇನೆ ಎಂಬುದನ್ನು ತಿಳಿಸಲು ಪತ್ರ ಬರೆದಿದ್ದು, ಇದು ಎಲ್ಲಾ ಭಾರತೀಯರಿಗೆ, ವಿಶೇಷವಾಗಿ ಯುವ ಪೀಳಿಗೆಗೆ ಬಹಳ ಹೆಮ್ಮೆ ಮತ್ತು ಉತ್ಸಾಹದ ವಿಷಯವಾಗಿದೆ. ಇದನ್ನೂ ಓದಿ: ಚಂದ್ರಯಾನ-3 ರಾಷ್ಟ್ರದ ಮೆರವಣಿಗೆಯಲ್ಲಿ ಒಂದು ಮೈಲಿಗಲ್ಲನ್ನು ಪ್ರತಿನಿಧಿಸುತ್ತದೆ: ಡಿ.ವೈ ಚಂದ್ರಚೂಡ್

    ಇಡೀ ಇಸ್ರೋ ಭ್ರಾತೃತ್ವಕ್ಕೆ ನಾನು ಶುಭ ಹಾರೈಸುತ್ತೇನೆ ಮತ್ತು ಈ ಮಹತ್ವದ ಸಂದರ್ಭದಲ್ಲಿ ಅದರ ಪ್ರತಿಯೊಬ್ಬ ಸದಸ್ಯರಿಗೂ ನನ್ನ ಆತ್ಮೀಯ ಶುಭಾಶಯಗಳನ್ನು ತಿಳಿಸುತ್ತೇನೆ ಎಂದು ಬರೆಯುವ ಮೂಲಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಇದನ್ನೂ ಓದಿ: ಯುವ ಕನಸುಗಾರರ ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ- ಚಂದ್ರಯಾನ ಯಶಸ್ಸಿಗೆ ರಾಗಾ ಶ್ಲಾಘನೆ

    ಭಾರತದ ಚಂದ್ರಯಾನ-3 ಮಿಷನ್ ಬುಧವಾರ ಸಂಜೆ 6:04ಕ್ಕೆ ಚಂದ್ರನ ದಕ್ಷಿಣ ಧ್ರುವದಲ್ಲಿ ಸಾಫ್ಟ್ ಲ್ಯಾಂಡಿಂಗ್ ಆಗಿದ್ದು, ಚಂದ್ರನ ದಕ್ಷಿಣ ಧ್ರುವದಲ್ಲಿ ಲ್ಯಾಂಡಿಂಗ್ ಮಾಡಿದ ಮೊದಲ ದೇಶ ಭಾರತ ಎಂಬ ಹೆಗ್ಗಳಿಕೆ ಗಳಿಸಿದೆ. ರಷ್ಯಾದ ಲ್ಯಾಂಡರ್ ಅಪಘಾತಕ್ಕೀಡಾದ ಒಂದು ವಾರದ ಬಳಿಕ ವಿಕ್ರಂ ಲ್ಯಾಂಡರ್ (Vikram Lander) ಚಂದ್ರನ ಮೇಲೆ ಲ್ಯಾಂಡ್ ಆಗಿದ್ದು, ಚಂದ್ರನ ಮೇಲೆ ಕಾಲಿಟ್ಟ ನಾಲ್ಕನೇ ದೇಶ ಭಾರತವಾಗಿದೆ. ಇದನ್ನೂ ಓದಿ: ಚಂದ್ರಯಾನದ ಯಶಸ್ಸು ಸಂಭ್ರಮಿಸಿದ ಟೀಂ ಇಂಡಿಯಾ

    ಚಂದ್ರಯಾನ-3 ಯಶಸ್ವಿ ಲ್ಯಾಂಡಿಂಗ್ ಬಳಿಕ ಹಲವು ಗಂಟೆಗಳ ನಂತರ ವಿಕ್ರಮ್ ಲ್ಯಾಂಡರ್‌ನಿಂದ ರೋವರ್ ಹೊರಬಂದಿದ್ದು, ಚಂದ್ರನ ಮೇಲೆ ವೈಜ್ಞಾನಿಕ ಅಧ್ಯಯನ ಆರಂಭಿಸಿದೆ. ಇದನ್ನೂ ಓದಿ: Chandrayaan-3: ಚಂದ್ರನ ದಕ್ಷಿಣ ಧ್ರುವದಲ್ಲಿ ಹೆಜ್ಜೆ ಇಟ್ಟ ಮೊದಲ ದೇಶ ಭಾರತ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Chandrayaan-3 ಸಕ್ಸಸ್‌; ಇಸ್ರೋ ಅಧ್ಯಕ್ಷರು, ವಿಜ್ಞಾನಿಗಳಿಗೆ ಸಿಎಂ ಅಭಿನಂದನೆ

    Chandrayaan-3 ಸಕ್ಸಸ್‌; ಇಸ್ರೋ ಅಧ್ಯಕ್ಷರು, ವಿಜ್ಞಾನಿಗಳಿಗೆ ಸಿಎಂ ಅಭಿನಂದನೆ

    ಬೆಂಗಳೂರು: ಚಂದ್ರಯಾನ-3 (Chandrayaan-3) ಸಕ್ಸಸ್‌ ಆದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಪೀಣ್ಯದಲ್ಲಿರುವ ಇಸ್ರೋ ಕೇಂದ್ರಕ್ಕೆ ಭೇಟಿ ನೀಡಿ, ಚಂದ್ರಯಾನ-3 ಯಶಸ್ಸಿಗೆ ಕಾರಣರಾದ ಇಸ್ರೋ (ISRO) ವಿಜ್ಞಾನಿಗಳ ತಂಡವನ್ನು ಅಭಿನಂದಿಸಿದರು.

    ಇಸ್ರೋ ಅಧ್ಯಕ್ಷ ಸೋಮನಾಥ ಸೇರಿದಂತೆ ವಿಜ್ಞಾನಿಗಳು, ಸಿಬ್ಬಂದಿ ವರ್ಗದವರನ್ನು ಸಿಎಂ ಸಿದ್ದರಾಮಯ್ಯ ಸನ್ಮಾನಿಸಿದರು. ಇಸ್ರೋ ವಿಜ್ಞಾನಿಗಳಿಗೆ ಸಿಹಿ ತಿನಿಸಿ ಸಂತಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಚಂದ್ರನ ಮೇಲೆ ನಡೆದಾಡಿದ ಪ್ರಗ್ಯಾನ್‌ ರೋವರ್‌ – ವಿಕ್ರಮ್‌ ಲ್ಯಾಂಡರ್‌ನಿಂದ ಹೊರಬರಲು ತಡವಾಗಿದ್ಯಾಕೆ?

    ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಇಸ್ರೋ ಅಧ್ಯಕ್ಷರು ಹಾಗೂ ವಿಜ್ಞಾನಿಗಳನ್ನು ಸರ್ಕಾರದ ವತಿಯಿಂದ ಗೌರವಿಸಲಾಗುತ್ತದೆ. ಸರ್ಕಾರದ ವತಿಯಿಂದ ವಿಧಾನಸೌಧದ ಬಾಂಕ್ವೆಟ್ ಹಾಲ್‌ನಲ್ಲಿ ಕಾರ್ಯಕ್ರಮ ಆಯೋಜಿಸಿ ಗೌರವಿಸಲಾಗುವುದು ಎಂದು ತಿಳಿಸಿದರು.

    ನಮಗೆಲ್ಲ ಹೆಮ್ಮೆ ತರುವಂತಹ ವಿಚಾರ ಇದು. ನಾನು ಕೂಡ ನಿನ್ನೆ ವಿಕ್ರಮ್‌ ಲ್ಯಾಂಡರ್‌ ಲ್ಯಾಂಡಿಂಗ್ ವೀಕ್ಷಣೆ ಮಾಡಿದ್ದೇನೆ. ಖುಷಿ ಆಯ್ತು, ಬಹಳ ಹೆಮ್ಮೆ ಎನಿಸಿತು. ಇದೊಂದು ದೊಡ್ಡ ಸಾಧನೆ. ಹಲವು ವರ್ಷಗಳಿಂದ ವಿಜ್ಞಾನಿಗಳು ಶ್ರಮ ಪಟ್ಟಿದ್ದಾರೆ. ನೂರಾರು ವಿಜ್ಞಾನಿಗಳ ಪರಿಶ್ರಮದ ಫಲ ಇದು ಎಂದು ಶ್ಲಾಘಿಸಿದರು. ಇದನ್ನೂ ಓದಿ: ಈಗ ಕರ್ನಾಟಕಕ್ಕೂ ಚಂದ್ರನಿಗೂ ನೇರ ಸಂಪರ್ಕ

    ಇಸ್ರೋ ತಂಡವನ್ನು ಸನ್ಮಾನಿಸಲು ನಾವು ವಿಶೇಷ ಸಮಾರಂಭ ಮಾಡುತ್ತೇವೆ. ನಾವೆಲ್ಲ ಹೆಮ್ಮೆ ಪಡುವ ಸಾಧನೆ ಇದು. ಬಹಳ ಖುಷಿ ಕೊಡುವ ವಿಚಾರ. ವೈಯಕ್ತಿಕವಾಗಿ ನನಗೆ ಬಹಳ ಸಂತೋಷ ತಂದಿದೆ. ಇದು ಬಹಳ ದೊಡ್ಡ ಸಾಧನೆ. ಈ ಸಾಧನೆಯಲ್ಲಿ ಕರ್ನಾಟಕದ ವಿಜ್ಞಾನಿಗಳೂ ಸೇರಿದ್ದಾರೆ. ಭಾರತದಾದ್ಯಂತ ಸಾವಿರ ವಿಜ್ಞಾನಿಗಳು ಈ ಸಾಧನೆಯಲ್ಲಿ ಪಾಲ್ಗೊಂಡಿದ್ದಾರೆ ಎಂದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]