Tag: S T Somashekhar

  • ನನಗೆ ಕಾಂಗ್ರೆಸ್ ಪಕ್ಷದಿಂದ ಯಾವುದೇ ಆಫರ್ ಬರಲಿಲ್ಲ: ಸೋಮಶೇಖರ್ ಸ್ಪಷ್ಟನೆ

    ನನಗೆ ಕಾಂಗ್ರೆಸ್ ಪಕ್ಷದಿಂದ ಯಾವುದೇ ಆಫರ್ ಬರಲಿಲ್ಲ: ಸೋಮಶೇಖರ್ ಸ್ಪಷ್ಟನೆ

    ಮೈಸೂರು: ನನಗೆ ಕಾಂಗ್ರೆಸ್ (Congress) ಪಕ್ಷದಿಂದ ಯಾವುದೇ ಆಫರ್‌ಗಳು ಬರಲಿಲ್ಲ. ಸಚಿವ ನಾರಾಯಣ ಗೌಡ (Narayana Gowda) ಅವರ ಹೇಳಿಕೆಯನ್ನು ನಾನು ಗಮನಿಸಿದ್ದೇನೆ. ನನಗೆ ಆಫರ್ ಬರಲಿಲ್ಲ ಎಂದು ಅವರು ಹೇಳಿದ್ದಾರೆ. ಬಿಜೆಪಿ (BJP) ಸರ್ಕಾರದಲ್ಲಿ ಒಳ್ಳೆಯ ಕೆಲಸ ಮಾಡಿ ಎಂದು ಜವಾಬ್ದಾರಿ ಕೊಟ್ಟಿದ್ದಾರೆ. ಆ ಕೆಲಸವನ್ನು ಮಾಡುತ್ತಿದ್ದೇನೆ ಎಂದು ಸಚಿವ ಎಸ್.ಟಿ ಸೋಮಶೇಖರ್ (S.T.Somashekhar) ಸ್ಪಷ್ಟನೆ ನೀಡಿದರು.

    ಮೈಸೂರಿನಲ್ಲಿ (Mysuru) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರಿಗೆ ಒಂದು ತಿಂಗಳಿನಿಂದ ಬರದಿರುವುದಕ್ಕೆ ಚುನಾವಣೆ(Election) ಕಾರಣವಲ್ಲ. ಇಲಾಖೆಯ ಬೇರೆ ಬೇರೆ ಕಾರ್ಯಕ್ರಮಗಳ ಕಾರಣದಿಂದಾಗಿ ಬೇರೆ ಜಿಲ್ಲೆಗಳಿಗೆ ಓಡಾಡುತ್ತಿದ್ದೇನೆ. ಹೀಗಾಗಿ ಬರಲಿಲ್ಲ ಅಷ್ಟೆ. ವಿಜಯ ಸಂಕಲ್ಪ ಯಾತ್ರೆಯಲ್ಲಿ (Vijay Sankalpa Yatra) ನನಗೆ ಬೆಂಗಳೂರು ಜವಾಬ್ದಾರಿ ಇದೆ. ಅಲ್ಲಿ ಆ ಕೆಲಸ ಮಾಡುತ್ತಿದ್ದೇನೆ ಎಂದರು. ಇದನ್ನೂ ಓದಿ: ಲೋಕಾಯುಕ್ತ ಭರ್ಜರಿ ಬೇಟೆ- 8.12 ಕೋಟಿ ಹಣ ಸೀಜ್

    ಬಿಜೆಪಿ ಶಾಸಕನ ಮನೆ ಮೇಲೆ ಲೋಕಾಯುಕ್ತ ದಾಳಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಇದರಲ್ಲಿ ಪಕ್ಷಕ್ಕೆ ಯಾವುದೇ ಮುಜುಗರ ಇಲ್ಲ. ಲೋಕಾಯುಕ್ತ ಬಲಪಡಿಸಿದ ಕಾರಣಕ್ಕೆ ಇಂತಹ ದಾಳಿ ನಡೆದಿದೆ. ನನಗೆ ಇನ್ನೂ ಹೆಚ್ಚಿನ ವಿವರಗಳು ಬರಲಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಭ್ರಷ್ಟಾಚಾರಕ್ಕೆ ದಾಖಲೆಯಲ್ಲವೇ?- ಸಿಎಂಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಚಾಟಿ

    S.T. Somashekhar

    ಚಾಮರಾಜನಗರ (Chamarajanagara) ಜಿಲ್ಲೆಯಲ್ಲಿ ನಡೆದ ವಿಜಯ ಸಂಕಲ್ಪ ಯಾತ್ರ‍್ರೆ ಕಾರ್ಯಕ್ರಮಕ್ಕೆ ವಿ.ಸೋಮಣ್ಣ (V.Somanna) ಗೈರು ವಿಚಾರವಾಗಿ ಮಾತನಾಡಿದ ಅವರು, ಸೋಮಣ್ಣ 45 ವರ್ಷದ ರಾಜಕೀಯ ಅನುಭವ ಇರುವವರು. ಈ ಬಗ್ಗೆ ಅವರೇ ಮಾತನಾಡುತ್ತಾರೆ ಎಂದರು. ಇದನ್ನೂ ಓದಿ: ಕೋಟಿ-ಕೋಟಿ ವಿಚಾರ, ವಿರೂಪಾಕ್ಷಪ್ಪ ವಿಚಾರಣೆ ಬಳಿಕ ಸತ್ಯ ತಿಳಿಯಲಿದೆ: ಆರಗ ಜ್ಞಾನೇಂದ್ರ

  • ಯಶವಂತಪುರ ಕ್ಷೇತ್ರದ ಮಹಿಳೆಯರಿಂದ ಚಾಮುಂಡಿ ಬೆಟ್ಟದಲ್ಲಿ ದೇವಿ ಪಾರಾಯಣ

    ಯಶವಂತಪುರ ಕ್ಷೇತ್ರದ ಮಹಿಳೆಯರಿಂದ ಚಾಮುಂಡಿ ಬೆಟ್ಟದಲ್ಲಿ ದೇವಿ ಪಾರಾಯಣ

    ಮೈಸೂರು: ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ. ಸೋಮಶೇಖರ್ ಅವರ ಉಪಸ್ಥಿತಿಯಲ್ಲಿ ಯಶವಂತಪುರ ವಿಧಾನಸಭಾ ಕ್ಷೇತ್ರದ ಶ್ರೀ ಚಾಮುಂಡೇಶ್ವರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಟ್ರಸ್ಟ್‌ನ ಶ್ರೀದೇವಿ ಬಳಗದ ಮಹಿಳೆಯರು ಮೈಸೂರಿನ ಶ್ರೀಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ ಶ್ರೀದೇವಿ ಪಾರಾಯಣ ಮಾಡಿದರು.

    ಕಳೆದ ಮೂರು ತಿಂಗಳಿಂದ ನಮ್ಮ ತಂಡ ಸೌಂದರ್ಯ ಲಹರಿ ಸಂಗೀತಾಭ್ಯಾಸ ಮಾಡಿದೆ. ಅಂತಿಮವಾಗಿ ತಾಯಿ ಶ್ರೀಚಾಮುಂಡೇಶ್ವರಿ ಸನ್ನಿಧಿಯಲ್ಲಿ ಪಾರಾಯಣ ಮಾಡಲು ನಮ್ಮ ಶಾಸಕರು ಹಾಗೂ ಸಹಕಾರ ಸಚಿವರು ಅವಕಾಶ ಮಾಡಿಸಿಕೊಟ್ಟರು ಎಂದು ಮಹಿಳೆಯರು ಖುಷಿಪಟ್ಟರು. ಇದನ್ನೂ ಓದಿ: ಮಾವಿನಹಣ್ಣಿನ ಮಾರ್ಕೆಟ್ ನಮ್ಮದಾಗಬೇಕು – ಹಾಸನದಲ್ಲಿ ಹೊಸ ಅಭಿಯಾನ

    ಮುಡಾ ಅಧ್ಯಕ್ಷರಾದ ಹೆಚ್.ವಿ.ರಾಜೀವ್, ದೇವಸ್ಥಾನದ ಪ್ರಧಾನ ಅರ್ಚಕರಾದ ಡಾ. ಶಶಿಶೇಖರ್ ದೀಕ್ಷಿತ್, ಶ್ರೀಚಾಮುಂಡೇಶ್ವರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಟ್ರಸ್ಟ್‌ನ ಯಶಸ್ವಿನಿ ಮತ್ತು ತಂಡದವರು ಉಪಸ್ಥಿತರಿದ್ದರು.  ಇದನ್ನೂ ಓದಿ: ಮಂಡ್ಯ ವಿದ್ಯಾರ್ಥಿನಿಗೆ ನಗದು ಬಹುಮಾನ – ಹಲಾಲ್ ವಿರುದ್ಧ ಅಭಿಯಾನ: ಎರಡಕ್ಕೂ ನಂಟೇನು?

  • ದಿ ಕಾಶ್ಮೀರ್ ಫೈಲ್ಸ್ : ಪರಿಷತ್ ನಲ್ಲಿ ಗದ್ದಲ

    ದಿ ಕಾಶ್ಮೀರ್ ಫೈಲ್ಸ್ : ಪರಿಷತ್ ನಲ್ಲಿ ಗದ್ದಲ

    ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ವೀಕ್ಷಣೆಗೆ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಕಟಣೆ ಹೊರಡಿಸುತ್ತಿದ್ದಂತೆಯೇ ಕಾಂಗ್ರೆಸ್ ಸದಸ್ಯರು ಗದ್ದಲ ಮಾಡಿದ ಪ್ರಸಂಗ ಇಂದು ಪರಿಷತ್ ನಲ್ಲಿ ನಡೆಯಿತು. ಸೋಮವಾರ ವಿಧಾನಸಭೆಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಇಂದು ಚಿತ್ರ ವೀಕ್ಷಿಸಲು ಸಚಿವರಿಗೆ ಮತ್ತು ಶಾಸಕರಿಗೆ ವ್ಯವಸ್ಥೆ ಮಾಡಿದ್ದೇವೆ. ಎಲ್ಲರೂ ಮಂತ್ರಿ ಮಾಲ್ ಥಿಯೇಟರ್ ಗೆ ಸಿನಿಮಾ ವೀಕ್ಷಿಸಲು ಬರಬೇಕೆಂದು ಆಹ್ವಾನ ನೀಡಿದ್ದರು. ಇದರ ಬೆನ್ನಲ್ಲೇ ಇಂದು ವಿಧಾನ ಪರಿಷತ್ ನಲ್ಲಿ ಬಸವರಾಜ ಹೊರಟ್ಟಿ ಕೂಡ ಪ್ರಕಟಣೆ ಹೊರಡಿಸಿದರು. ಅದಕ್ಕೆ ಪ್ರತಿಪಕ್ಷಗಳಿಂದ ವಿರೋಧ ವ್ಯಕ್ತವಾಯಿತು. ಸಿನಿಮಾ ವೀಕ್ಷಣೆಯ ವಿಚಾರವನ್ನು ಕೂಡಲೇ ಹಿಂಪಡೆಯಬೇಕೆಂದು ಕಾಂಗ್ರಸ್ ಪಟ್ಟು ಹಿಡಿಯಿತು.

    ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಮಾತನಾಡಿ, “ದಿ ಕಾಶ್ಮೀರ್ ಫೈಲ್ಸ್ ಒಂದೇ ಸಿನಿಮಾ ಏಕೆ, ಫರ್ಜಾನಾ ಮತ್ತು ವಾಟರ್ ಸಿನಿಮಾವನ್ನು ತೋರಿಸಿ’ ಎಂದರು. ಮಾತನ್ನು ಮುಂದುವರೆಸಿದ ಹರಿಪ್ರಸಾದ್ “ಕೆಲವರು ಸದನದಲ್ಲಿ ಅಶ್ಲೀಲ ಚಿತ್ರ ನೋಡಿದ್ದಾರೆ. ನಾವು ಯಾವ ಸಿನಿಮಾ ನೋಡಬೇಕು ಅಂತ ಸದನದಲ್ಲಿ ಹೇಳುವ ಹಾಗಿಲ್ಲ. ಸರಕಾರ ಇರುವುದು ಸಿನಿಮಾ ತೋರಿಸುವುದಕ್ಕೆ ಅಲ್ಲ’ ಎಂದು ನುಡಿದರು. ಇದನ್ನೂ ಓದಿ: ಕಾಶ್ಮೀರದಲ್ಲಿದ್ದ ನನ್ನ ಪೂರ್ವಜರು ನೋವು ತಿಂದೆ ಕಾಶ್ಮೀರ ಬಿಟ್ಟರು : ಅನಂತ್ ನಾಗ್ ಬಿಚ್ಚಿಟ್ಟ ಕಾಶ್ಮೀರಿ ಕ್ರೌರ್ಯ

    ಇನ್ನೋರ್ವ ಸದಸ್ಯರಾದ ಸಲೀಂ ಅಹಮದ್ ಕೂಡ ಮಾತನಾಡಿ ‘ಬಜೆಟ್ ಚರ್ಚೆ ಬಿಟ್ಟು ಸಿನಿಮಾ ಯಾಕೆ ನೋಡಬೇಕು’ ಎಂದು ಪ್ರಶ್ನಿಸಿದರು. ಕೊನೆಗೆ ಸಚಿವ ಸೋಮಶೇಖರ್ ಮಾತನಾಡಿ, ‘ಯಾರಿಗೂ ಕಡ್ಡಾಯ ಇಲ್ಲ, ಇಷ್ಟ ಇದ್ರೆ ನೋಡಿ’ ಎಂದು ಪ್ರತಿಭಟಿಸಿದ ಸದಸ್ಯರಿಗೆ ಉತ್ತರ ನೀಡಿದರು. ಈ ವಿಚಾರವಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರ ನಡುವೆ ಸಿನಿಮಾ ವಿಚಾರಕ್ಕೆ ಗದ್ದಲ ಶುರುವಾಯಿತು. ಇದನ್ನೂ ಓದಿ : ದಿ ಕಾಶ್ಮೀರ್ ಫೈಲ್ಸ್ : ಅಂಥದ್ದೇನಿದೆ ಸಿನಿಮಾದಲ್ಲಿ? ದಳ್ಳುರಿಯಲ್ಲಿ ದಹನದ ಕಥನ!

    ಈ ಸಮಯದಲ್ಲಿ ಪರಿಷತ್ ನ ಕೆಲವು ಸದಸ್ಯರು ‘ಬಾಬೂ ಭಜರಂಗಿ’, ‘ಗುಜರಾತ್ ಫೈಲೂ’ ಮತ್ತಿತರ ಸಿನಿಮಾ ತೋರಿಸಿ ಎಂದು ಮತ್ತಷ್ಟು ಗದ್ದಲ ಹೆಚ್ಚಿಸಿದರು.

  • ಕೊರೊನಾದಿಂದ ಮೃತಪಟ್ಟ ರೈತರ ಸಾಲಮನ್ನಾ ಅಸಾಧ್ಯ: ಎಸ್.ಟಿ. ಸೋಮಶೇಖರ್

    ಕೊರೊನಾದಿಂದ ಮೃತಪಟ್ಟ ರೈತರ ಸಾಲಮನ್ನಾ ಅಸಾಧ್ಯ: ಎಸ್.ಟಿ. ಸೋಮಶೇಖರ್

    ಬೆಂಗಳೂರು: ಕೊರೊನಾದಿಂದ ಮೃತರಾದ ರೈತರ ಸಾಲಮನ್ನಾ ಮಾಡಲು ಆದೇಶ ಹೊರಡಿಸಲು ಸಾಧ್ಯವಿಲ್ಲ ಎಂದು ಸಹಕಾರ ಸಚಿವ ಸೋಮಶೇಖರ್ ಸ್ಪಷ್ಟಪಡಿಸಿದ್ದಾರೆ. ವಿಧಾನ ಪರಿಷತ್ ಕಲಾಪದ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ಮುನಿರಾಜುಗೌಡ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಸಾಲಮನ್ನಾ ಸಾಧ್ಯವಿಲ್ಲ ಎಂದಿದ್ದಾರೆ.

    ಕೋವಿಡ್‍ನಿಂದ ಮೃತರಾದ ರೈತರ ಸಾಲಮನ್ನಾ ಮಾಡಬೇಕು. ಈಗಾಗಲೇ ರೈತರ ಮನೆಯಲ್ಲಿ ದೀಪ ಹಾರಿ ಹೋಗಿದೆ. ಹೀಗಾಗಿ ಸರ್ಕಾರ ಕೊರೊನಾದಿಂದ ಮೃತರಾದ ರೈತರ ಸಾಲಮನ್ನಾ ಮಾಡಬೇಕು ಅಂತ ಒತ್ತಾಯ ಬಿಜೆಪಿ ಸದಸ್ಯ ಮುನಿರಾಜುಗೌಡ ಒತ್ತಾಯ ಮಾಡಿದರು. ಇದಕ್ಕೆ ಉತ್ತರ ನೀಡಿದ ಸಚಿವ ಸೋಮಶೇಖರ್, ರಾಜ್ಯದಲ್ಲಿ 1-2 ಕೊರೊನಾ ಅಲೆಯಲ್ಲಿ ಮೃತಪಟ್ಟ ರೈತರ ಪೈಕಿ 10,437 ರೈತರಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಮತ್ತು ಗ್ರಾಮೀಣಾಭಿವೃದ್ಧಿ ಗಳಲ್ಲಿ ಸಾಲ ಪಡೆದಿರುತ್ತಾರೆ. ಮೃತರಾದ ರೈತರ ಸಾಲದ ಮೊತ್ತ 91.97 ಕೋಟಿ ಇದೆ ಅಂತ ಮಾಹಿತಿ ನೀಡಿದರು. ಇದನ್ನೂ ಓದಿ: ನಾನು ಅಡಗಿಕೊಂಡಿಲ್ಲ, ಯಾರಿಗೂ ಹೆದರುವುದಿಲ್ಲ, ನಮ್ಮ ದೇಶಭಕ್ತಿ ಗೆಲ್ಲುತ್ತೆ: ಝೆಲೆನ್ಸ್ಕಿ

    ಕೊರೊನಾದಿಂದ ಮೃತರಾದ ರೈತರು ಸಹಕಾರ ಸಂಘಗಳಲ್ಲಿ ಪಡೆದಿದ್ದ ಸಾಲಮನ್ನಾ ಮಾಡುವ ಆದೇಶ ಇಲಾಖೆ ಹೊರಡಿಸಿಲ್ಲ. ಕೊರೊನಾದಿಂದ ಮೃತಪಟ್ಟ ರೈತರು ಸೇರಿದಂತೆ ಎಲ್ಲಾ ಕುಟುಂಬಕ್ಕೆ 1.5 ಲಕ್ಷ ಆರ್ಥಿಕ ಸಹಾಯ ಸರ್ಕಾರದಿಂದ ಮಾಡಲಾಗಿದೆ. ರೈತರು ಸಾಲ ಮರುಪಾವತಿ ಮಾಡಲು ಕಂತು ಅವಧಿ ವಿಸ್ತರಣೆ ಮಾಡಲಾಗಿದೆ. ಬಡ್ಡಿ ಸಹಾಯಧನವನ್ನು ರಾಜ್ಯ ಸರ್ಕಾರವೇ ಭರಿಸುತ್ತಿದೆ. ಈ ಯೋಜನೆಯು ಕೊರೊನಾದಿಂದ ಮೃತಪಟ್ಟ ರೈತರ ವಾರಸುದಾರರಿಗೂ ಅನ್ವಯ ಆಗುತ್ತದೆ ಎಂದು ತಿಳಿಸಿದರು. ಇದಲ್ಲದೇ ಲಾಭದಲ್ಲಿರುವ ಡಿಸಿಸಿ ಬ್ಯಾಂಕ್‍ಗಳು ತಮ್ಮಲ್ಲಿರುವ ಹಣವನ್ನು ಮೃತ ರೈತ ಸಾಲಮನ್ನಾಗೆ ಬಳಕೆ ಮಾಡಲು ಓರಲ್ ಆಗಿ ಅನುಮತಿ ನೀಡಲಾಗಿದೆ ಎಂದರು. ಇದನ್ನೂ ಓದಿ: ವಸತಿ ಕಟ್ಟಡಗಳ ಮೇಲೆ ಎಕ್ಸ್ ಗುರುತಿನ ಚಿಹ್ನೆ- ಕಟ್ಟಡ ತೊರೆಯುವಂತೆ ಅಧಿಕಾರಿಗಳ ಸೂಚನೆ

  • ಜ್ವರ, ಕೆಮ್ಮಿನಿಂದ ಬಳಲುತ್ತಿದ್ದಾರೆ ಎಸ್.ಟಿ. ಸೋಮಶೇಖರ್

    ಜ್ವರ, ಕೆಮ್ಮಿನಿಂದ ಬಳಲುತ್ತಿದ್ದಾರೆ ಎಸ್.ಟಿ. ಸೋಮಶೇಖರ್

    ಬೆಂಗಳೂರು: ಬಿಜೆಪಿ ಸಹಕಾರ ಸಚಿವ ಎಸ್.ಟಿ ಸೋಮಶೇಖರ್ ಅವರು ಜ್ವರ ಹಾಗೂ ಕೆಮ್ಮಿನಿಂದ ಬಳಲುತ್ತಿದ್ದಾರೆ.

    ಕಳೆದ ಮೂರು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿರುವ ಎಸ್.ಟಿ. ಸೋಮಶೇಖರ್ ಅವರು ಸದಾಶಿವನಗರದಲ್ಲಿರುವ ತಮ್ಮ ಸರ್ಕಾರಿ ನಿವಾಸ, ಬಿಟಿಎಂ ಲೇಔಟ್‍ನಲ್ಲಿರುವ ಸ್ವಂತ ನಿವಾಸಗಳಿಗೆ ಬರದೇ ಅಜ್ಞಾತ ಸ್ಥಳದಲ್ಲಿದ್ದಾರೆ. ಪುತ್ರ ನಿಶಾಂತ್ ಬ್ಲಾಕ್ ಮೇಲ್ ಪ್ರಕರಣ ಬಯಲಾದಾಗಿನಿಂದಲೂ ಸೋಮಶೇಖರ್ ಅವರು ಹೊರಗೆ ಬಂದಿಲ್ಲ. ಅಲ್ಲದೇ ತಮ್ಮನ್ನು ಭೇಟಿಯಾಗಲು ಬರುವವರಿಗೆ ಭೇಟಿ ಮಾಡಲ್ಲ ಎಂದು ಹೇಳುತ್ತಿದ್ದಾರೆ ಹಾಗೂ ಎಲ್ಲರ ಜೊತೆಯೂ ಮೊಬೈಲ್ ಫೋನಿನಲ್ಲಿಯೇ ಸಂಪರ್ಕದಲ್ಲಿರುವ ಸೋಮಶೇಖರ್ ಅವರು ಇನ್ನೂ ಒಂದೆರಡು ದಿನ ಯಾರನ್ನೂ ಭೇಟಿ ಮಾಡದಿರಲು ನಿರ್ಧಾರಿಸಿದ್ದಾರೆ. ಇದನ್ನೂ ಓದಿ: ಸಿಎಂ ಬಸವರಾಜ ಬೊಮ್ಮಾಯಿ ಪುತ್ರನಿಗೂ ಕೋವಿಡ್

    ಸೋಮವಾರ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಕೊರೊನಾ ಸೋಂಕು ಬೆನ್ನೆಲೆ ಇಂದು ಅವರ ಪುತ್ರ ಭರತ್ ಬೊಮ್ಮಾಯಿ ಅವರಿಗೂ ಕೋವಿಡ್-19 ದೃಢಪಟ್ಟಿದೆ. ಸದ್ಯ ಈ ಕುರಿತಂತೆ ಭರತ್ ಟ್ವೀಟ್ ಮಾಡಿದ್ದು, ನನಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಕೇವಲ ಸೂಕ್ಷ್ಮ ಲಕ್ಷಣಗಳನ್ನು ಹೊಂದಿದ್ದೇನೆ. ಇದೀಗ ಮನೆಯಲ್ಲಿಯೇ ಐಸೋಲೇಷನಲ್ಲಿದ್ದೇನೆ. ನನ್ನೊಂದಿಗೆ ಸಂಪರ್ಕದಲ್ಲಿದ್ದವರು ದಯವಿಟ್ಟು ಕೊರೊನಾ ಪರೀಕ್ಷೆಗೆ ಒಳಗಾಗಿ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸಚಿವರ ಪುತ್ರನಿಗೆ ಬ್ಲ್ಯಾಕ್ ಮೇಲ್ ಮಾಡಿದ್ದ ಆರೋಪಿ ಅಂದರ್

    ಇತ್ತೀಚೆಗಷ್ಟೇ ಎಸ್.ಟಿ.ಸೋಮಶೇಖರ್ ಪುತ್ರ ನಿಶಾಂತ್ ಅವರಿಗೆ ನಕಲಿ ಅಶ್ಲೀಲ ವೀಡಿಯೋ ಕಳುಹಿಸಿ ಕಿಡಿಗೇಡಿಗಳು ಬ್ಲಾಕ್ ಮೇಲ್ ಮಾಡುತ್ತಿದ್ದರು. ಈ ಕುರಿತಂತೆ ನಿಶಾಂತ್ ಅವರು ಪೊಲೀಸ್ ಠಾಣಾ ಮೆಟ್ಟಿಲೇರಿದ್ದರು. ಸದ್ಯ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದು, ಉಳಿದವರ ವಿಚಾರಣೆ ನಡೆಸುತ್ತಿದ್ದಾರೆ.

  • ಎಸ್‍ಟಿಎಸ್ ಪುತ್ರನಿಗೆ ಬ್ಲ್ಯಾಕ್ ಮೇಲ್ – ಮಗಳ ಪಾತ್ರ ಇಲ್ಲ ಎಂದ ಶಾಸಕ ಯಶವಂತರಾಯಗೌಡ ಪಾಟೀಲ್

    ಎಸ್‍ಟಿಎಸ್ ಪುತ್ರನಿಗೆ ಬ್ಲ್ಯಾಕ್ ಮೇಲ್ – ಮಗಳ ಪಾತ್ರ ಇಲ್ಲ ಎಂದ ಶಾಸಕ ಯಶವಂತರಾಯಗೌಡ ಪಾಟೀಲ್

    ಬೆಂಗಳೂರು: ಸಹಕಾರ ಸಚಿವ ಎಸ್‍.ಟಿ.ಸೋಮಶೇಖರ್ ಪುತ್ರನಿಗೆ ಬ್ಲ್ಯಾಕ್‍ಮೇಲ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಮಗಳ ಪಾತ್ರ ಏನು ಇಲ್ಲ ಎಂದು ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ಹೇಳಿದ್ದಾರೆ.

    ಸೋಮಶೇಖರ್ ಪುತ್ರ ನಿಶಾಂತ್‍ಗೆ ನಕಲಿ ವೀಡಿಯೋ ಸೃಷ್ಟಿಸಿ ಹಣಕ್ಕಾಗಿ ಬ್ಲಾಕ್ ಮೇಲ್ ಮಾಡುತ್ತಿದ್ದ ಪ್ರಕರಣ ಕುರಿತಂತೆ ಯಶವಂತರಾಯಗೌಡ ಪಾಟೀಲ್ ಅವರು ಇಂದು ಬೆಳಗ್ಗೆ ಶಾಸಕರ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿದರು. ಈ ವೇಳೆ ರಾಜಕಾರಣ ಮಾಡುವವರು ನೇರವಾಗಿ ನನ್ನ ವಿರುದ್ಧ ರಾಜಕಾರಣ ಮಾಡಲಿ. ಮನೆಯವರು, ಮಕ್ಕಳನ್ನು ಇದರಲ್ಲಿ ಯಾಕೆ ತರುತ್ತಾರೆ ಎಂದು ಪ್ರಶ್ನಿಸಿ ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಬೆಂಗಳೂರಲ್ಲಿ ಸೋಂಕಿಗೆ ತುತ್ತಾದವರಲ್ಲಿ ಯುವಕರದ್ದೇ ಸಿಂಹ ಪಾಲು!

    ಸುದ್ದಿಗೋಷ್ಠಿಯಲ್ಲಿ ಹೇಳಿದ್ದು ಏನು?
    ನನ್ನ ಸುಪುತ್ರಿ ಮೇಲೆ ಆಪಾದನೆಯೊಂದು ಬಂದಿದೆ. ನನ್ನ ಮಗಳು ಇಂಗ್ಲೆಂಡ್‍ಗೆ ಎಂಎಸ್ ಕಲಿಯಲು ಹೋಗಿದ್ದಾರೆ. ಡಿಸೆಂಬರ್ 25ಕ್ಕೆ ಆಕೆ ತನ್ನ ಸ್ನೇಹಿತ ರಾಕೇಶ್ ಅಣ್ಣಪ್ಪಗೆ ಒಂದು ಬಿಸಿನೆಸ್ ಕಾಂಟ್ಯಾಕ್ಟ್‍ಗೆ ಒಂದು ಒಟಿಪಿ ಕೊಟ್ಟಿದಾಳೆ. ಈ ಪ್ರಕರಣ ಕುರಿತಂತೆ ಸಿಸಿಬಿ ಅವರು ರಾಕೇಶ್ ವಿಚಾರಣೆ ನಡೆಸಿದಾಗ, ರಾಕೇಶ್ ಬೆಂಗಳೂರಿನಲ್ಲಿರುವ ರಾಹುಲ್ ಭಟ್‍ಗೆ ಸಿಮ್ ಒಟಿಪಿ ಕೊಟ್ಟಿರುವುದಾಗಿ ತಿಳಿಸಿದ್ದಾನೆ. ಇದನ್ನೂ ಓದಿ: S.T. ಸೋಮಶೇಖರ್ ಪುತ್ರನಿಗೆ ನಕಲಿ ಅಶ್ಲೀಲ ವೀಡಿಯೋ ಬ್ಲ್ಯಾಕ್‍ಮೇಲ್

    ಸಚಿವ ಎಸ್.ಟಿ.ಸೋಮಶೇಖರ್ ಹಾಗೂ ನಾನೂ ಉತ್ತಮ ಸ್ನೇಹಿತರು. ನಾವಿಬ್ಬರೂ ಸಿಎಂರನ್ನು ಭೇಟಿ ಮಾಡಿ ಸೂಕ್ತ ತನಿಖೆ ನಡೆಸುವಂತೆ ಮನವಿ ಮಾಡಿದ್ದೇವೆ. ಏನೋ ತಪ್ಪಾಗಿ ಹೀಗೆಲ್ಲಾ ಆಗಿದೆ. ಪ್ರಕರಣದ ಹಿಂದೆ ಇರುವವರನ್ನು ಬಯಲಿಗೆಳೆಯಲಿ. ನನ್ನ ಮಗಳ ಹೆಸರು ಯಾಕೆ ತಂದಿದ್ದಾರೆ ಅಂತ ಗೊತ್ತಿಲ್ಲ. ನನ್ನ ಮಗಳು ಸಹ ಇದೇ 7 ರಂದು ಬಂದಿದ್ದಾಳೆ. ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು.

    ರಾಜಕಾರಣ ಮಾಡುವವರು ನೇರವಾಗಿ ನನ್ನ ವಿರುದ್ಧ ರಾಜಕಾರಣ ಮಾಡಲಿ. ಮನೆಯವರು, ಮಕ್ಕಳನ್ನು ಇದರಲ್ಲಿ ಯಾಕೆ ತರುತ್ತಾರೆ? ನಿಶಾಂತ್ ಮತ್ತು ನನ್ನ ಮಗಳು ಕ್ಲಾಸ್ ಮೇಟ್ಸ್ ಅಲ್ಲ. ಇಬ್ಬರಿಗೂ ಕನೆಕ್ಷನ್ ಇಲ್ಲ. ರಾಕೇಶ್ ಅಪ್ಪಣ್ಣನವರ್ ನನ್ನ ಮಗಳಿಗೆ ಪರಿಚಯ. ಆತನಿಗೆ ಸಿಮ್ ಕೊಟ್ಟಿದ್ದೇ ಇಷ್ಟೆಲ್ಲಾ ರಾದ್ಧಾಂತಕ್ಕೆ ಕಾರಣವಾಗಿದೆ. ಸಿಮ್ ದುರ್ಬಳಕೆ ಆಗುತ್ತದೆ ಅಂತ ಗೊತ್ತಿರಲಿಲ್ಲ. ಇದನ್ನೂ ಓದಿ: ಸಚಿವರ ಪುತ್ರನಿಗೆ ಬ್ಲ್ಯಾಕ್ ಮೇಲ್ ಮಾಡಿದ್ದ ಆರೋಪಿ ಅಂದರ್

    ಸಿಮ್ ನನ್ನ ಮಗಳ ಬಳಿಯೇ ಇದೆ. ಒಟಿಪಿ ಮಾತ್ರ ರಾಕೇಶ್‍ಗೆ ನನ್ನ ಮಗಳು ಕೊಟ್ಟಿದಾಳೆ. ಒಟಿಪಿಯನ್ನು ವಾಟ್ಸಪ್‍ಗೆ ಬಳಸಿದ್ದಾರೋ ಇಲ್ಲವೋ ಅಂತ ಗೊತ್ತಿಲ್ಲ. ನನ್ನ ಮಗಳು ಸಣ್ಣವಳು, ಒಟಿಪಿ ಶೇರ್ ಬಗ್ಗೆ ಏನ್ ಗೊತ್ತಾಗುತ್ತದೆ. ನನ್ನ ಮಗಳ ಜೊತೆ ಈಗಾಗಲೇ ಪೊಲೀಸರು ಫೋನಿನಲ್ಲಿ ಮಾತನಾಡಿದ್ದಾರೆ. ಈಗ ಆಕೆಯೇ ಯುಕೆಯಿಂದ ಬಂದಿದ್ದಾಳೆ. ಪೊಲೀಸರು ಆಕೆಯನ್ನೂ ಸಹ ವಿಚಾರಣೆ ನಡೆಸಲಿ. ಇದರಲ್ಲಿ ನನ್ನ ಮಗಳ ಪಾತ್ರ ಏನು ಇಲ್ಲ. ಸದ್ಯ ಪ್ರಕರಣ ಕುರಿತಂತೆ ತನಿಖೆ ನಡೆಯುತ್ತಿದೆ. ನನಗೆ ಯಾರ ಮೇಲೂ ಅನುಮಾನ ಇಲ್ಲ. ಆದರೆ ತನಿಖೆಯ ನಂತರ ಸತ್ಯ ಹೊರಬೀಳಲಿದೆ.

  • S.T. ಸೋಮಶೇಖರ್ ಪುತ್ರನಿಗೆ ನಕಲಿ ಅಶ್ಲೀಲ ವೀಡಿಯೋ ಬ್ಲ್ಯಾಕ್‍ಮೇಲ್

    S.T. ಸೋಮಶೇಖರ್ ಪುತ್ರನಿಗೆ ನಕಲಿ ಅಶ್ಲೀಲ ವೀಡಿಯೋ ಬ್ಲ್ಯಾಕ್‍ಮೇಲ್

    ಬೆಂಗಳೂರು: ಬಿಜೆಪಿ ಸಚಿವ ಎಸ್.ಟಿ.ಸೋಮಶೇಖರ್ ಪುತ್ರನಿಗೆ ನಕಲಿ ಅಶ್ಲೀಲ ವೀಡಿಯೋ ಕಳುಹಿಸಿ ಅಪರಿಚಿತರು ಬ್ಲಾಕ್ ಮೇಲ್ ಮಾಡಿದ್ದಾರೆ.

    ಎಸ್.ಟಿ.ಸೋಮಶೇಖರ್ ಪುತ್ರ ನಿಶಾಂತ್‍ಗೆ ನಕಲಿ ವೀಡಿಯೋ ಸೃಷ್ಟಿಸಿ ಹಣಕ್ಕೆ ಅಪರಿಚಿತರು ಬ್ಲಾಕ್ ಮೇಲ್ ಮಾಡುತ್ತಿದ್ದರು. ಈ ಹಿನ್ನೆಲೆ ಆಡುಗೋಡಿಯಲ್ಲಿರುವ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ನಿಶಾಂತ್ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ವಾಮಾಚಾರ ನಡೆಸಿ ಮನೆಯ ಬೆಡ್ ರೂಂನ ಮಣ್ಣಿನಡಿಯಲ್ಲಿ ನಿಧಿಗಾಗಿ ಶೋಧ – ಇಬ್ಬರ ಬಂಧ

    ನಾನು ರಾಜಕೀಯವಾಗಿ ಬಿಜೆಪಿ ಪಕ್ಷದಿಂದ ಗುರುತಿಸಿಕೊಂಡಿದ್ದೇನೆ. ನನ್ನ ಮತ್ತು ನನ್ನ ತಂದೆ ರಾಜಕೀಯ ಬೆಳವಣಿಗೆ ಸಹಿಸದ ಕೆಲವು ದುಷ್ಕರ್ಮಿಗಳು ರಾಜಕೀಯವಾಗಿ ನಮ್ಮನ್ನು ಮುಗಿಸಬೇಕೆಂಬ ದುರುದ್ದೇಶದಿಂದ ಈ ಕೃತ್ಯವೆಸಗಿದ್ದಾರೆ. ಯಾರೋ ಮಹಿಳೆಯ ಜೊತೆಯಲ್ಲಿರುವಂತೆ ಆಶ್ಲೀಲವಾದ ನಕಲಿ ವೀಡಿಯೋ ಸೃಷ್ಟಿಸಿ ನನ್ನನ್ನು ನೇರವಾಗಿ ಟಾರ್ಗೆಟ್ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.  ಇದನ್ನೂ ಓದಿ: ಬಿಜೆಪಿ, ಕಾಂಗ್ರೆಸ್, ಹೆಣ್ಣು-ಗಂಡೆಂಬ ಭೇದ ಕೊರೊನಾಗೆ ಇಲ್ಲ: ಆನಂದ್ ಸಿಂಗ್

    ವೀಡಿಯೋ ಮತ್ತು ಫೋಟೋಸ್‍ಗಳನ್ನು ನನ್ನ ತಂದೆಯ ಪಿಎ ಶೀನಿವಾಸಗೌಡ ಮತ್ತು ಭಾನುಪ್ರಕಾಶ್ ಅವರಿಗೆ ಕಳುಹಿಸಿದ್ದಾರೆ. ವಾಟ್ಸಾಪ್ ಮೂಲಕ ಪದೇ, ಪದೇ ಮೇಸೆಜ್‍ಗಳನ್ನು ಕಳುಹಿಸಿ ತಾವು ಕೇಳಿದಷ್ಟು ಹಣವನ್ನು ಕೊಡಬೇಕೆಂದು ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು. ಹಣವನ್ನು ನೀಡದಿದ್ದಲ್ಲಿ ಅಶ್ಲೀಲ ವೀಡಿಯೋ ಹಾಗೂ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿದುಬಿಡುವುದಾಗಿ ಬೆದರಿಕೆಯೊಡ್ಡಿದ್ದಾರೆ.

    ನನ್ನ ಹಾಗೂ ನಮ್ಮ ತಂದೆಯ ರಾಜಕೀಯ ಭವಿಷ್ಯವನ್ನು ಮುಗಿಸುವುದಾಗಿಯೂ ಸಹ ಬೆದರಿಕೆ ಹಾಕಿದ್ದು, ಈ ಸಂಚಿನ ಹಿಂದೆ ತುಂಬಾ ಪ್ರಭಾವಶಾಲಿ ವ್ಯಕ್ತಿಗಳು ಭಾಗಿಯಾಗಿರುವ ಸಾಧ್ಯತೆ ಇದೆ. ಕೆಲ ದುಷ್ಕರ್ಮಿಗಳು, ನಮಗೆ ತೊಂದರೆ ನೀಡಬೇಕೆಂಬ ದುರುದ್ದೇಶದಿಂದ ಈ ರೀತಿ ಸಂಚು ರೂಪಿಸಿದ್ದಾರೆ. ಆ ಆಸಾಮಿಗಳ ಪತ್ತೆ ಮಾಡಿ ಕಾನೂನು ರೀತಿ ಕ್ರಮ ಕೈಗೊಳ್ಳಬೇಕೆಂದು ಮನವಿಮಾಡಿದ್ದಾರೆ.

  • ಇಂದು, ನಾಳೆ ಚಾಮುಂಡಿ ಬೆಟ್ಟ ಓಪನ್: ಎಸ್.ಟಿ.ಸೋಮಶೇಖರ್

    ಇಂದು, ನಾಳೆ ಚಾಮುಂಡಿ ಬೆಟ್ಟ ಓಪನ್: ಎಸ್.ಟಿ.ಸೋಮಶೇಖರ್

    ಮೈಸೂರು: ರಾತ್ರಿ ಎಂಟು ಗಂಟೆಗೆ ಬಂದ್ ಆಗುತ್ತಿದ್ದ ಚಾಮುಂಡೇಶ್ವರಿ ದೇವಸ್ಥಾನವನ್ನು ಇಂದು ಮತ್ತು ನಾಳೆ ರಾತ್ರಿ 10 ಗಂಟೆಯವರೆಗೆ ತೆರೆದು ಸಾರ್ವಜನಿಕರಿಗೆ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸುವಂತೆ ಜಿಲ್ಲಾಧಿಕಾರಿ ಅವರಿಗೆ ಸೂಚನೆ ನೀಡಲಾಗಿದೆ ಎಂದು ಸಹಕಾರ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.

    ಅರಮನೆ ಆವರಣದಲ್ಲಿ ಇಂದು ಬೆಳಗ್ಗೆ ಮಾವುತರು ಮತ್ತು ಕಾವಾಡಿಗರಿಗೆ ಆಯೋಜಿಸಿದ್ದ ಉಪಹಾರ ಕೂಟದಲ್ಲಿ ಭಾಗವಹಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮುಂಡೇಶ್ವರಿ ದೇವಸ್ಥಾನವನ್ನು ರಾತ್ರಿ 8 ಗಂಟೆಗೆ ಬಂದ್ ಮಾಡಲಾಗುತ್ತಿತ್ತು. ನಗರದ ದೀಪಾಲಂಕಾರ ನೋಡಿಕೊಂಡು ದೇವಸ್ಥಾನಕ್ಕೆ ತೆರಳುವವರು ತಾಯಿ ಚಾಮುಂಡೇಶ್ವರಿಯ ದರ್ಶನ ಮಾಡಲೆಂದು ಶುಕ್ರವಾರದವರೆಗೆ ರಾತ್ರಿ 10 ಗಂಟೆಯವರೆಗೆ ದರ್ಶನದ ಅವಧಿ ವಿಸ್ತರಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದಿದ್ದಾರೆ.

    ಜಂಬೂಸವಾರಿಗೆ ಎಲ್ಲ ಸಿದ್ಧತೆ ಆಗಿದೆ. ಕೋವಿಡ್ ನಿಯಮಗಳನ್ನು ಉಲ್ಲಂಘಿಸದೇ 500 ಜನರಿಗೆ ಜಂಬೂಸವಾರಿ ವೀಕ್ಷಿಸಲು ಅವಕಾಶ ನೀಡಲಾಗಿದೆ. ಕೆಲವರು ಒಂದು ವಾರ, ಮತ್ತೆ ಕೆಲವರು ದೀಪಾವಳಿವರೆಗೆ ದೀಪಾಲಂಕಾರ ವಿಸ್ತರಣೆ ಮಾಡುವಂತೆ ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಅವರ ಬಳಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ:  ನಾಡಿನೆಲ್ಲೆಡೆ ಆಯುಧಪೂಜೆಯ ಸಂಭ್ರಮ – ರಾಜವಂಶಸ್ಥರ ಆಯುಧಗಳಿಗೆ ಪೂಜೆ ಸಲ್ಲಿಸಲಿರುವ ಯದುವೀರ್

    ಇದೇ ವೇಳೆ ಡಿಕೆ. ಶಿವಕುಮಾರ್ ಪರ್ಸಂಟೇಜ್ ವಿಚಾರ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಮ್ಮ ಪಕ್ಷದ ಹಿರಿಯ ನಾಯಕರು ಈ ಬಗ್ಗೆ ಹೇಳಿದ್ದಾರೆ. ನಾನು ಶಾಸಕನಾಗಿದ್ದಾಗ ಇದೇನು ಇರಲಿಲ್ಲ. ಆದರೆ ಈಗ ಅವರಿಗೆ ಗೊತ್ತಿರಬಹುದು ಅದಕ್ಕೆ ಹೇಳಿದ್ದಾರೆ. ಕಾಂಗ್ರೆಸ್‍ನಲ್ಲಿ ಷಡ್ಯಂತ್ರ ನಡೆಯುತ್ತಿದೆ ಎಂದು ಹಿಂದೆಯೇ ಹೇಳಿದ್ದೆ. ಸಿದ್ದರಾಮಯ್ಯ ವರ್ಸಸ್ ಡಿಕೆ. ಶಿವಕುಮಾರ್ ಷಡ್ಯಂತ್ರ ನಡೆಯುಸುತ್ತಿದ್ದಾರೆ. ಇದು ಆ ಪಕ್ಷದ ಆಂತರಿಕ ವಿಚಾರ ಎಂದು ಉತ್ತರಿಸಿದ್ದಾರೆ. ಇದನ್ನೂ ಓದಿ: ಸಿಂಹಕ್ಕೂ ಅಂಜದೇ ಮಾಂಸ ತಿನ್ನಿಸಿದ ರಾಕಿ ಬಾಯ್ – ವೀಡಿಯೋ ವೈರಲ್

    23 ಸಚಿವರನ್ನು ಸಿದ್ದರಾಮಯ್ಯ ಬೀದಿಪಾಲು ಮಾಡಿದರು ಎಂಬ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ಕುರಿತಂತೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಪಕ್ಷ ಬಿಡುವಂತೆ ಹೇಳಿಲ್ಲ. ಇದು ಹಳೇ ವಿಷಯ, ಇದನ್ನೇ ಮತ್ತೆ, ಮತ್ತೆ ಹೇಳುವುದು ಸರಿಯಲ್ಲ. ಕುಮಾರಸ್ವಾಮಿ ಅವರು ರಾತ್ರಿ 10 ಗಂಟೆಗೆ ಮಲಗಿ, ಕಣ್ಮುಚ್ಚಿಕೊಂಡು ಯೋಚಿಸಿದರೆ 23 ಜನ ಯಾಕೆ ಹೋದರು ಅಂತ ಗೊತ್ತಾಗುತ್ತದೆ ಎಂದು ಪ್ರತಿಕ್ರಿಯಿಸಿದ್ದಾರೆ.

  • ಮಿತ್ರಮಂಡಳಿಯಲ್ಲಿ ಬಿರುಕು: ಎಸ್‍ಟಿಎಸ್ ವಿರುದ್ಧ ಹೆಚ್. ವಿಶ್ವನಾಥ್ ಬಹಿರಂಗ ಅಸಮಾಧಾನ

    ಮಿತ್ರಮಂಡಳಿಯಲ್ಲಿ ಬಿರುಕು: ಎಸ್‍ಟಿಎಸ್ ವಿರುದ್ಧ ಹೆಚ್. ವಿಶ್ವನಾಥ್ ಬಹಿರಂಗ ಅಸಮಾಧಾನ

    ಮೈಸೂರು: ರಾಜ್ಯ ಬಿಜೆಪಿ ಸರ್ಕಾರ ರಚನೆಗೆ ಕಾರಣರಾದ ಮುಂಬೈ ಟೀಂನಲ್ಲಿ ದೊಡ್ಡ ಬಿರುಕು ಮೂಡಿದೆ. ಇಂದು ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಕಾರ್ಯವೈಖರಿ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸುವ ಮೂಲಕ ಮಿತ್ರ ಮಂಡಳಿಯಲ್ಲಿ ಬಿರುಕನ್ನು ಬಹಿರಂಗಪಡಿಸಿದರು.

    ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಬೆಂಗಳೂರಿನಿಂದ ಮೈಸೂರಿಗೆ ಕಾರಿನಲ್ಲಿ ಬರುವಾಗ ನಮಗೆ ಫೋನ್ ಮಾಡಿ ಸಭೆಗೆ ಆಹ್ವಾನಿಸುತ್ತಾರೆ. ಎರಡು ಮೂರು ಗಂಟೆ ಮುಂಚಿತವಾಗಿ ಸಭೆಗೆ ಬರುವಂತೆ ಫೋನ್‍ನಲ್ಲಿ ಆಹ್ವಾನ ಕೊಡುತ್ತಾರೆ. ನಾವೇನು ನಿರುದ್ಯೋಗಿಗಳಾ? ನೀವು ಕರೆದ ಕೂಡಲೇ ಓಡಿ ಬರೋಕೆ. ಒಂದು ದಿನ ಮುಂಚಿತವಾಗಿ ಜನಪ್ರತಿನಿಧಿಗಳಿಗೆ ಸಭೆಗೆ ಆಹ್ವಾನ ನೀಡಬೇಕು. ನಮ್ಮನ್ನು ಟೇಕ್ ಇಟ್ ಫ್ಹಾರ್ ಗ್ರ್ಯಾಟೆಂಡ್ ಅಂದು ಕೊಂಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸೋಮಶೇಖರ್ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದರು.

    ಮೈಸೂರಿಗೆ ಒಂದು ಸಚಿವ ಸ್ಥಾನ ಕೊಡಿ ಅಂತಾ ಸಿಎಂ ಬಳಿ ಕೇಳಿದ್ದೇನೆ. ಮೈಸೂರು ವಿಭಾಗಕ್ಕೆ ಸಚಿವರೇ ಇಲ್ಲ. ರಾಜಕೀಯವಾಗಿ ಶಕ್ತಿ ಇರುವ ವಿಭಾಗವಿದು. ಮೈಸೂರಿನ ರಾಮದಾಸ್ ರನ್ನು ಮಂತ್ರಿ ಮಾಡಿ. ಅವರನ್ನು ಯಾಕೆ ಮಂತ್ರಿ ಮಾಡಬಾರದು? ನಾಲ್ಕು ಸ್ಥಾನ ಖಾಲಿ ಇದೆ. ರಾಮದಾಸ್ ಹಿರಿಯರು ಇದ್ದಾರೆ. ಅವರಿಗೆ ಒಂದು ಸ್ಥಾನ ಕೊಡಿ ಎಂದು ಹೇಳಿದರು. ಇದನ್ನೂ ಓದಿ: ಸಿದ್ದರಾಮಯ್ಯ ಕಾಲಜ್ಞಾನಿಯಲ್ಲ, ಅವರ ಬಾಯಲ್ಲಿ ಉಲ್ಟಾ ಮಚ್ಚೆ ಇದೆ: ಸಿ.ಟಿ.ರವಿ ವ್ಯಂಗ್ಯ

  • ಯಾವ ಪಿಕ್ಚರ್, ರೀಲು ಇಲ್ಲ: ಸಚಿವ ಆನಂದ್ ಸಿಂಗ್‍ಗೆ ಎಸ್‍ಟಿಎಸ್ ಟಾಂಗ್

    ಯಾವ ಪಿಕ್ಚರ್, ರೀಲು ಇಲ್ಲ: ಸಚಿವ ಆನಂದ್ ಸಿಂಗ್‍ಗೆ ಎಸ್‍ಟಿಎಸ್ ಟಾಂಗ್

    ಚಾಮರಾಜನಗರ: ಸಚಿವ ಸ್ಥಾನದ ಬಗ್ಗೆ ಅಸಮಧಾನಗೊಂಡು ಪಿಕ್ಚರ್ ಅಬಿ ಬಾಕಿ ಹೈ ಎಂದು ಹೇಳಿರುವ ಸಚಿವ ಆನಂದ್ ಸಿಂಗ್ ಗೆ ಯಾವ ಪಿಕ್ಚರ್ರು ಇಲ್ಲ, ಯಾವ ರೀಲು ಇಲ್ಲಾ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಟಾಂಗ್ ನೀಡಿದ್ದಾರೆ.

    ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲದಲ್ಲಿ ಮಾತನಾಡಿದ ಸಚಿವರು, ಸಿಎಂ ಬಸವರಾಜ ಬೊಮ್ಮಾಯಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ಎಲ್ಲವನ್ನೂ ನಿಭಾಯಿಸುವ ಶಕ್ತಿ ಅವರಿಗೆ ಇದೆ. ಏನೇ ಅಸಮಾಧಾನ ಇದ್ದರೂ ಸಿಎಂ ಜೊತೆ ಕುಳಿತು ಮಾತನಾಡಬೇಕೇ ಹೊರತು, ಹೊರಗೆ ನಿಂತು ಮಾತನಾಡಿದ್ರೆ ಪ್ರಯೋಜನವಿಲ್ಲ ಎಂದು ಅವರು ಆನಂದ್ ಸಿಂಗ್ ಗೆ ಪರೋಕ್ಷವಾಗಿ ಸಚಿವ ಎಸ್.ಟಿ ಸೋಮಶೇಖರ್ ಸಲಹೆ ನೀಡಿದರು.

    ಬೊಮ್ಮಾಯಿ ಅವರಿಗೆ ಕ್ಲೀನ್ ಇಮೇಜ್ ಸರ್ಕಾರ ಕೊಡಬೇಕಬೇಕೆಂಬ ಕನಸಿದೆ. ಕಾಂಗ್ರೆಸ್ ನವರು ಸರ್ಕಾರ ಬಿದ್ದು ಹೋಗುತ್ತೆ ಎಂದು ಹಗಲು ಕನಸು ಕಾಣುತ್ತಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೂ ತಿರುಗೇಟು ನೀಡಿದ ಅವರು ಬೊಮ್ಮಾಯಿ ಸಿಎಂ ಆದ ಮೇಲೆ ಕಾಂಗ್ರೆಸ್ ನವರಿಗೆ ನಡುಕ ಉಂಟಾಗಿದೆ. ಬೊಮ್ಮಾಯಿ ಮೇಲೆ ಯಾವುದೇ ರೀತಿಯ ಆರೋಪಗಳಿಲ್ಲ. ಗೃಹ ಸಚಿವರಾಗಿ, ನೀರಾವರಿ ಸಚಿವರಾಗಿ ಉತ್ತಮ ಕೆಲಸ ಮಾಡಿದ್ದಾರೆ. ನಮ್ಮ ಸರ್ಕಾರ ಅವಧಿ ಪೂರೈಸುತ್ತೆ ಎಂದರು. ಇದನ್ನೂ ಓದಿ: ಎಎಪಿ ಕಚೇರಿ ಕಟ್ಟಡದ ಮಾಲೀಕರಿಗೆ ಲಿಂಬಾವಳಿ ಬೆದರಿಕೆ ಆರೋಪ!

    ಆನಂದ್ ಸಿಂಗ್ ಹೇಳಿದ್ದೇನು?:
    ಹೊಸದಾಗಿ ರಚನೆ ಆಗಿರುವ ವಿಜಯನಗರ ಜಿಲ್ಲೆಯಲ್ಲಿ ಮೊದಲ ಬಾರಿಗೆ ಸಚಿವ ಆನಂದ್ ಸಿಂಗ್ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಖಾತೆ ಮತ್ತು ರಾಜೀನಾಮೆ ವಿಚಾರವಾಗಿ ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಮಾತನಾಡಿದ್ದಾರೆ. ಪಿಕ್ಚರ್ ಅಭಿ ಬಾಕಿ ಹೈ ಅಂದಿದ್ದಾರೆ. ಬೆಂಗಳೂರಿಗೆ ನಾನಿನ್ನೂ ಹೋಗಿಲ್ಲ. ಹೋದ ಮೇಲೆ ಮುಂದಿನ ಮಾತು. ಇಲಾಖೆ ಚಾರ್ಜ್ ತೆಗೆದುಕೊಳ್ಳದೇ ಇದ್ರೇ ಏನು ಅಗಲ್ಲ. ಸದ್ಯಕ್ಕೆ ಬೆಂಗಳೂರಿಗೆ ಹೋಗೋ ಬಗ್ಗೆ ಯಾವುದೇ ನಿರ್ಧಾರ ಮಾಡಿಲ್ಲ ಎಂದು ಹೇಳಿದ್ದರು. ಇದನ್ನೂ ಓದಿ: ರಕ್ತಪಾತ ತಡೆಗಾಗಿ ದೇಶ ತೊರೆದೆ- ಅಫ್ಘಾನಿಸ್ತಾನದ ಅಧ್ಯಕ್ಷ ಅಶ್ರಫ್ ಘನಿ