Tag: S T Somashekhar

  • ಕೆಂಪೇಗೌಡ ಜಯಂತಿ – 60 ಟನ್ ತರಕಾರಿ ವಿತರಿಸಿದ ಸೋಮಶೇಖರ್

    ಕೆಂಪೇಗೌಡ ಜಯಂತಿ – 60 ಟನ್ ತರಕಾರಿ ವಿತರಿಸಿದ ಸೋಮಶೇಖರ್

    ಬೆಂಗಳೂರು: ಕೆಂಪೇಗೌಡ ಜಯಂತಿ ಹಿನ್ನೆಲೆಯಲ್ಲಿ ಕ್ಷೇತ್ರದ ಜನತೆಗಾಗಿ ಸಚಿವ ಎಸ್.ಟಿ ಸೋಮಶೇಖರ್ ರೈತರಿಂದ 60 ಟನ್ ತರಕಾರಿ ಖರೀದಿಸಿ ಕ್ಷೇತ್ರದ ಜನತೆಗೆ ವಿತರಣೆ ಮಾಡಿದ್ದಾರೆ. ಯಶವಂತಪುರ ಕ್ಷೇತ್ರ ವ್ಯಾಪ್ತಿ 17 ಸಾವಿರ ತರಕಾರಿ ಕಿಟ್‍ಗಳನ್ನ ಸಿದ್ದಪಡಿಸಿ ಜನತೆಗೆ ವಿತರಿಸಿದ್ದಾರೆ.

    ಬಿಬಿಎಂಪಿ ವ್ಯಾಪ್ತಿಯ ವಾರ್ಡ್ 72ರ ಬ್ಯಾಡರಹಳ್ಳಿ ಪೊಲೀಸ್ ಸ್ಟೇಷನ್ ಪಕ್ಕದ ಬಿಡಿಎ ಸಂಪರ್ಕ ರಸ್ತೆಯಲ್ಲಿ ಸಚಿವರು ತರಕಾರಿ ಕಿಟ್ ವಿತರಣೆ ಮಾಡಿದ್ದಾರೆ. ಕೊರೊನಾ ಸಂಕಷ್ಟ ಕಾಲದಲ್ಲಿ ರೈತರಿಗೂ ಸಹ ಅನುಕೂಲವಾಗಬೇಕು. ಜೊತೆಗೆ ಆರ್ಥಿಕವಾಗಿ ಹಿಂದುಳಿದ ಜನತೆಗೆ, ಕಷ್ಟದಲ್ಲಿರುವವರಿಗೆ ಅನುಕೂಲವಾಗಬೇಕೆಂಬ ನಿಟ್ಟಿನಲ್ಲಿ ತರಕಾರಿಗಳನ್ನು ಸ್ವಂತ ಖರ್ಚಿನಲ್ಲಿ ಖರೀದಿಸಿ ಉಚಿತವಾಗಿ ವಿತರಣೆ ಮಾಡುತ್ತಿದ್ದೇನೆ ಎಂದು ತಿಳಿಸಿದರು.

    ನನಗೆ ಕ್ಷೇತ್ರದ ಕೆಲಸ ಮಾಡುವ ಸಂಬಂಧ ಜನತೆ ಮತ ನೀಡಿ ಆಶೀರ್ವದಿಸಿ ಕಳಿಸಿದ್ದಾರೆ. ಈಗ ಜನತೆ ಕೃಪೆಯಿಂದ ಸಚಿವನೂ ಆಗಿದ್ದೇನೆ. ಹೀಗಾಗಿ ನನಗೆ ಮತ ನೀಡಿದವರ ಋಣ ತೀರಿಸುವ ಸಮಯ ಇದಾಗಿದ್ದರಿಂದ ಅವರಿಗೆ ಸಹಾಯವಾಗುವ ಒಂದಷ್ಟು ಕೆಲಸವನ್ನು ಮಾಡುತ್ತಿದ್ದೇನೆ. ಕ್ಷೇತ್ರದಲ್ಲಿ ಆರ್ಥಿಕವಾಗಿ ಹಿಂದುಳಿದವರ ಕುಟುಂಬದಲ್ಲಿ ಕೊರೊನಾದಿಂದ ಮೃತಪಟ್ಟರೆ ಕುಟುಂಬದವರಿಗೆ ವೈಯಕ್ತಿಕವಾಗಿ 1 ಲಕ್ಷ ರೂ. ಸಹಾಯಧನ ವಿತರಣೆ ಮಾಡುವುದು, ಆಸ್ಪತ್ರೆಗೆ ದಾಖಲಾಗಿದ್ದರೆ ಪರಿಸ್ಥಿತಿ ನೋಡಿಕೊಂಡು ಧನ ಸಹಾಯ ಮಾಡುವುದು, ಪಡಿತರ ಕಿಟ್, ವೈದ್ಯಕೀಯ ಕಿಟ್ ಸೇರಿದಂತೆ ತರಕಾರಿ ಕಿಟ್ ಗಳನ್ನು ಸಹ ವಿತರಣೆ ಮಾಡುವ ಮೂಲಕ ಅವರಿಗೆ ಸ್ಪಂದಿಸುವ ಕಾರ್ಯವನ್ನು ಮಾಡುತ್ತಿದ್ದೇನೆ ಎಂದು ತಿಳಿಸಿದರು. ಇದನ್ನೂ ಓದಿ:ಬಿಜೆಪಿಯವರು ಕಾಂಗ್ರೆಸ್‍ಗೆ ಸಪೋರ್ಟ್ ಮಾಡ್ತೀವಿ ಸಿಎಂ ಆಗಿ ಎಂದಿದ್ದಾರೆ: ಎಸ್.ಎಸ್ ಮಲ್ಲಿಕಾರ್ಜುನ್

  • ಸಾಂಸ್ಕೃತಿಕ ಸುಂದರ ನಗರಿ ಮೈಸೂರಿನ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧ: ಎಸ್.ಟಿ.ಸೋಮಶೇಖರ್

    ಸಾಂಸ್ಕೃತಿಕ ಸುಂದರ ನಗರಿ ಮೈಸೂರಿನ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧ: ಎಸ್.ಟಿ.ಸೋಮಶೇಖರ್

    ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲೆಯ ಜನತೆಯ ಒಟ್ಟಾರೆ ಯೋಗಕ್ಷೇಮಕ್ಕೆ ಶ್ರಮವಹಿಸುತ್ತಿದೆ. ಈ ನಿಟ್ಟಿನಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಮೈಸೂರಿನ ಅಭಿವೃದ್ಧಿಯ ದೃಷ್ಟಿಯಿಂದ ನಿರ್ಣಯವನ್ನು ತೆಗೆದುಕೊಂಡಿದ್ದು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿನ ಹಣವನ್ನು ಬಳಸಲು ಒಪ್ಪಿಗೆ ನೀಡುವ ಮೂಲಕ 2 ದಶಕಗಳಿಂದ ಎದುರಾಗಿದ್ದ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳಲು ಮುಂದಾಗಲಾಗಿದೆ. ಅಭಿವೃದ್ಧಿಯ ದೃಷ್ಟಿಯಿಂದ ಮುಡಾ ಕೈಗೊಳ್ಳಬೇಕಾದ ಕಾಮಗಾರಿಗಳಿಗೆ ಒಪ್ಪಿಗೆ ಸೂಚಿಸಿದ ಮಾನ್ಯ ಮುಖ್ಯಮಂತ್ರಿಗಳಾದ ಬಿ,ಎಸ್.ಯಡಿಯೂರಪ್ಪ ಅವರನ್ನು ವೈಯಕ್ತಿಕವಾಗಿ ಹಾಗೂ ಜಿಲ್ಲೆಯ ಜನತೆ ಪರವಾಗಿ ಅಭಿನಂದಿಸುತ್ತೇನೆ.

    ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ವತಿಯಿಂದ ಈಗಾಗಲೇ ನಿರ್ಮಾಣ ಮಾಡಲಾಗಿರುವ ಅನೇಕ ಬಡವಾಣೆಗಳಲ್ಲಿ ಬಾಕಿ ಉಳಿಸಲಾಗಿದ್ದ ಮೂಲಸೌಕರ್ಯಗಳ ಅಭಿವೃದ್ಧಿಗಾಗಿ ಮುಡಾದಲ್ಲಿರುವ 422 ಕೋಟಿ ರೂಪಾಯಿಯನ್ನು ಬಳಕೆ ಮಾಡುವ ಮೂಲಕ ಕಾಮಗಾರಿಗಳನ್ನು ಕೈಗೊಳ್ಳಲು ಇಂದಿನ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.

    ಇದರ ಮೂಲಕ ಮುಡಾದಿಂದ ಅಭಿವೃದ್ಧಿಪಡಿಸಲಾದ ಬಡವಾಣೆಗಳಲ್ಲಿ ಸ್ಥಳೀಯ ಸಂಸ್ಥೆಗಳಿಗೆ ಹಸ್ತಾಂತರ ಮಾಡಲು ಪೂರ್ವದಲ್ಲಿ ಬಾಕಿ ಇರುವ ಕಾಮಗಾರಿಗಳನ್ನು ಏಕಕಾಲದಲ್ಲಿ ಅಭಿವೃದ್ಧಿಪಡಿಸುವ ಗುರಿಯನ್ನು ಹೊಂದಲಾಗಿದೆ. ಹೀಗೆ ಮಾಡುವುದರ ಜನತೆಗೆ ಅನುಕೂಲ ಕಲ್ಪಿಸಲಾಗುವುದು, ಜೊತೆಗೆ ಮೈಸೂರು ನಗರ ಪಾಲಿಕೆಗೆ ಸುಸಜ್ಜಿತ ಬಡಾವಣೆಗಳನ್ನು ನಿರ್ವಹಣೆಗಾಗಿ ಹಸ್ತಾಂತರವನ್ನು ಮಾಡಲಾಗುವುದು.

    ಮುಡಾ ವತಿಯಿಂದ ಕಳೆದ 25 ವರ್ಷಗಳಿಂದ ಸುಮಾರು 15 ಬಡಾವಣೆಗಳನ್ನು ನಿರ್ಮಿಸಿ ಒಟ್ಟು 46746 ನಿವೇಶನಗಳನ್ನು ಹಂಚಿಕೆ ಮಾಡಲಾಗಿರುತ್ತದೆ. ಸದರಿ ಬಡಾವಣೆಗಳನ್ನು ಪ್ರಾಧಿಕಾರವು ಅಭಿವೃದ್ಧಿಪಡಿಸಿ ಸ್ಥಳೀಯ ಸಂಸ್ಥೆಗಳಿಗೆ ಹಸ್ತಾಂತರ ಮಾಡಬೇಕಿದ್ದರೂ, ಆರ್ಥಿಕ ದೃಷ್ಟಿಯಿಂದ ಸಂಪೂರ್ಣ ಕೆಲಸಗಳನ್ನು ಮಾಡಲಾಗದೆ ಕೆಲವನ್ನು ಹಸ್ತಾಂತರ ಮಾಡಲಾಗಿತ್ತು. ಆದರೆ ಇದರಿಂದ ಅಲ್ಲಿನ ನಿವಾಸಿಗಳಿಗೆ ಅನೇಕ ತೊಂದರೆಗಳು ಎದುರಾಗಿದ್ದು, ಅನೇಕ ದೂರುಗಳು ಬರತೊಡಗಿದ್ದವು. ಅಂದರೆ ಕೆಲವು ಹಳೇ ಬಡಾವಣೆಗಳಲ್ಲಿ ಆಗಿನ ಸಂದರ್ಭಕ್ಕೆ ತಕ್ಕಂತೆ ಪ್ಲಾನಿಂಗ್ ಗಳನ್ನು ಮಾಡಿ ರಸ್ತೆಗಳ ನಿರ್ಮಾಣ, ಒಳಚರಂಡಿ, ವಿದ್ಯುತ್ ಸಂಪರ್ಕ, ನೀರಿನ ವ್ಯವಸ್ಥೆ ಸೇರಿದಂತೆ ಅನೇಕ ಸೌಕರ್ಯಗಳನ್ನು ಕಲ್ಪಿಸಲಾಗಿತ್ತು. ಆದರೆ, ಇಂದು ತಂತ್ರಜ್ಞಾನಗಳು ಬೆಳೆದಿರುವುದರಿಂದ ದೊಡ್ಡ ಮಟ್ಟದ ವಾಹನಗಳ ಸಂಚಾರ, ಡ್ರೈನೇಜ್ ನಿರ್ವಹಣೆ ಸೇರಿದಂತೆ ಹಲವು ತೊಡಕುಗಳು ಕಾಣಿಸಿಕೊಂಡಿವೆ.

    ಇದನ್ನು ಮನಗೊಂಡ ಮುಡಾ ಅಧ್ಯಕ್ಷರಾದ ಹೆಚ್.ವಿ.ರಾಜೀವ್ ಅವರು ನನ್ನ ಗಮನಕ್ಕೆ ತಂದಿದ್ದರು. ಅವರು ಮತ್ತು ಅವರ ತಂಡಗಳ ಜೊತೆಗೆ ನಾನೂ ಸಹ ಅನೇಕ ಬಾರಿ ಹಲವಾರು ಬಡಾವಣೆಗಳಿಗೆ ಭೇಟಿ ನೀಡಿ ಖುದ್ದು ಅಲ್ಲಿನ ನಿವಾಸಿಗಳ ಸಮಸ್ಯೆಗಳನ್ನು ಆಲಿಸಿದ್ದೇವೆ. ಮೈಸೂರು ನಗರದ ಅಭಿವೃದ್ಧಿಯೂ ನಮ್ಮ ಸರ್ಕಾರದ ಆದ್ಯತೆಯಾಗಿದ್ದು, ಈ ನಿಟ್ಟಿನಲ್ಲಿ ಆಗಬೇಕಾದ ಕೆಲಸಗಳು ಹಾಗೂ ವೆಚ್ಚದ ಬಗ್ಗೆ ರೂಪುರೇಷೆ ಸಿದ್ಧಪಡಿಸಿ, ಸಚಿವ ಸಂಪುಟದ ಮುಂದೆ ಇಡಲಾಗಿತ್ತು. ಈಗ ಮುಡಾದಲ್ಲಿರುವ ಹಣವನ್ನು ಬಡಾವಣೆಗಳ ಮೂಲ ಸೌಕರ್ಯ ಕಾಮಗಾರಿಗಳಿಗೆ ಬಳಸಿಕೊಳ್ಳಲು ಅನುಮೋದನೆ ನೀಡುವ ನಿರ್ಣಯವನ್ನು ತೆಗೆದುಕೊಂಡಿರುವುದರಿಂದ ಬಡಾವಣೆಗಳ ಅಭಿವೃದ್ಧಿಗೆ ಮತ್ತಷ್ಟು ಬಲ ಬಂದಂತೆ ಆಗುತ್ತದೆ.

    ಈ ನಿಟ್ಟಿನಲ್ಲಿ ಹಾಲಿ ಇರುವ ಹೊರವರ್ತುಲ ರಸ್ತೆಗೆ ಸಂಪರ್ಕ ರಸ್ತೆಯನ್ನು ಕಲ್ಪಿಸುವುದು, ಮಹಾಯೋಜನೆಯ ರಸ್ತೆಗಳಿಗೆ ಸಂಪರ್ಕ ರಸ್ತೆಯನ್ನು ನಿರ್ಮಿಸುವುದು, ಕೆಲವು ಬಡಾವಣೆಗಳಲ್ಲಿ ಒಳಚರಂಡಿ ವ್ಯವಸ್ಥೆಗಳಿಗೆ ಸಂಬಂಧಪಟ್ಟಂತೆ ಮ್ಯಾನ್ಹೋಲ್ ಗಳ ನಿರ್ಮಾಣ, ಯುಜಿಡಿ ಲೈನ್ ಗಳು ಮತ್ತು ಟ್ರಂಕ್ ಲೈನ್ ಗಳನ್ನು ಜೋಡಣೆ ಮಾಡಿರಬೇಕಾಗಿರುತ್ತದೆ. ಇನ್ನು ಮೈಸೂರಿಗೆ ನೀರು ಸರಬರಾಜು ವ್ಯವಸ್ಥೆಗಳ ಮೇಲೂ ಗಮನಹರಿಸಬೇಕಿದ್ದು, ಹಳೆ ಉಂಡವಾಡಿ ಯೋಜನೆ ಮತ್ತು ಕಬಿನಿ ಉನ್ನತೀಕರಣ ಯೋಜನೆ ಕಾಮಗಾರಿಗಳು ಅಂತಿಮ ಹಂತದಲ್ಲಿದ್ದು, ಸದರಿ ಯೋಜನೆಯಡಿ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯನ್ನೂ ಕಲ್ಪಿಸಬೇಕಿದ್ದು, ಈ ನಿಟ್ಟಿನಲ್ಲಿ ಮೈಸೂರು ಅಭಿವೃದ್ಧಿಗೆ ಮುಡಾ ವತಿಯಿಂದ ಕಾರ್ಯಯೋಜನೆಗಳು ಅನುಷ್ಠಾನಕ್ಕೆ ಬರಲಿದೆ.

    ಮೈಸೂರು ನಗರದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಮುಡಾ ಅಧ್ಯಕ್ಷರಾದ ಹೆಚ್.ವಿ.ರಾಜೀವ್ ಅವರು ಸೇರಿದಂತೆ ಜನಪ್ರತಿನಿಧಿಗಳಿಗೆ ಹಾಗೂ ವಿಶೇಷವಾಗಿ ಮಾನ್ಯ ನಗರಾಭಿವೃದ್ಧಿ ಸಚಿವರಾದ ಬಿ.ಎ. ಬಸವರಾಜು ಅವರನ್ನು ಅಭಿನಂದಿಸುತ್ತೇನೆ ಅಂತಾ ಸಚಿವ ಸೋಮಶೇಖರ್ ತಿಳಿಸಿದ್ದಾರೆ.

  • ಶಿಲ್ಪಾ ನಾಗ್ ರಾಜೀನಾಮೆ ಬೆನ್ನಲ್ಲೇ ಹೊಸ ಟೆನ್ಶನ್ -ಕಠಿಣ ನಿರ್ಧಾರಕ್ಕೆ ಬಂದ್ರಾ ಜಿಲ್ಲಾ ಉಸ್ತುವಾರಿ ಸಚಿವ?

    ಶಿಲ್ಪಾ ನಾಗ್ ರಾಜೀನಾಮೆ ಬೆನ್ನಲ್ಲೇ ಹೊಸ ಟೆನ್ಶನ್ -ಕಠಿಣ ನಿರ್ಧಾರಕ್ಕೆ ಬಂದ್ರಾ ಜಿಲ್ಲಾ ಉಸ್ತುವಾರಿ ಸಚಿವ?

    ಮೈಸೂರು: ಐಎಎಸ್ ವರ್ಸಸ್ ಐಎಎಸ್ ಕದನಕ್ಕೆ ಸೋಮವಾರ ಮೆಗಾ ಟಿಸ್ವ್ ಸಿಗುತ್ತಾ? ಸೋಮವಾರದ ಒಳಗೆ ಜಿಲ್ಲಾಧಿಕಾರಿ ವರ್ಗವಾಗದೆ ಇದ್ದರೆ ರಾಜ್ಯ ಸರ್ಕಾರಕ್ಕೆ ಅತಿ ದೊಡ್ಡ ತಲೆ ನೋವು ಶುರುವಾಗುತ್ತಾ? ಇಂತಹ ಪ್ರಶ್ನೆ ಹುಟ್ಟಿಕೊಂಡಿವೆ. ಇದಕ್ಕೆ ಕಾರಣ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ನೀಡಿದ ಹೇಳಿಕೆ.

    ಮೈಸೂರಲ್ಲಿ ಇಬ್ಬರು ಐಎಎಸ್ ಅಧಿಕಾರಿಗಳ ಕಿತ್ತಾಟ ತಾರಕಕ್ಕೇರಿದ್ದು, ಸರ್ಕಾರಕ್ಕೆ ದೊಡ್ಡ ತಲೆ ನೋವಾಗಿ ಪರಿಣಮಿಸಿದೆ. ಮೈಸೂರು ಡಿಸಿ ತಕ್ಷಣವೇ ವರ್ಗಾವಣೆ ಆಗಬೇಕೆಂದು ನಗರ ಪಾಲಿಕೆ ಸದಸ್ಯರು ಪಟ್ಟುಹಿಡಿದಿದ್ದಾರೆ. ಒಂದು ವೇಳೆ ಡಿಸಿ ರೋಹಿಣಿ ಸಿಂಧೂರಿ ಸೋಮವಾರದೊಳಗೆ ವರ್ಗಾವಣೆ ಆಗದಿದ್ರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರ ಸ್ಥಾನಕ್ಕೆ ರಾಜೀನಾಮೆ ನೀಡ್ತಾರಾ ಎಂಬ ಪ್ರಶ್ನೆ ಹುಟ್ಟಿದೆ.

    ಮೈಸೂರು ಡಿಸಿ ಸಿಂಧೂರಿ ಕಾರ್ಯವೈಖರಿ ವಿರುದ್ಧ ಸಿಡಿದೆದ್ದಿರುವ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ರಾಜೀನಾಮೆ ನಿರ್ಧಾರ ಪ್ರಕಟಿಸಿದ್ರು. ಸರ್ಕಾರ ಶಿಲ್ಪಾ ನಾಗ್ ಅವರ ಮನವೊಲಿಕೆಗೆ ಯತ್ನಿಸುತ್ತಿರುವ ಸಂದರ್ಭದಲ್ಲಿ ಹೊಸ ಬೆಳವಣಿಗೆ ಸಂಚಲನಕ್ಕೆ ಕಾರಣವಾಗಿದೆ. ಡಿಸಿ ವರ್ಗಾವಣೆಗೆ ಆಗ್ರಹಿಸಿ ಪಾಲಿಕೆ ಸದಸ್ಯರು ಪ್ರತಿಭಟನೆ ನಡೆಸ್ತಿದ್ದ ಸ್ಥಳಕ್ಕೆ ತೆರಳಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ನನಗೆ ಎರಡು ದಿನ ಸಮಯ ಕೊಡಿ. ಅಷ್ಟರಳೊಗೆ ಸಮಸ್ಯೆ ಬಗೆಹರಿಯದೆ ಇದ್ದರೆ ನನ್ನ ತೀರ್ಮಾನ ಹೇಳುತ್ತೇನೆ. ಜಿಲ್ಲಾಧಿಕಾರಿಯನ್ನು ವರ್ಗಾವಣೆ ಮಾಡಿಸಲು ಆಗದ ಮೇಲೆ ನನಗೇಕೆ ಬೇಕು ಉಸ್ತುವಾರಿ ಸ್ಥಾನ ಎಂದು ಪ್ರಶ್ನೆ ಮಾಡಿದ್ದಾರೆ.

    ಸಚಿವ ಎಸ್‍ಟಿ ಸೋಮಶೇಖರ್ ಅವರ ಈ ಮಾತುಗಳು ದೊಡ್ಡ ಸಂಚಲನಕ್ಕೆ ಕಾರಣವಾಗಿದೆ. ಡಿಸಿ ವರ್ಗಾವಣೆ ಆಗದೆ ಇದ್ದರೆ ಎಸ್.ಟಿ. ಸೋಮಶೇಖರ್ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಲಾಗುತ್ತಿದೆ. ಒಂದು ವೇಳೆ ರೋಹಿಣಿ ಸಿಂಧೂರಿ ಮೈಸೂರು ಡಿಸಿಯಾಗಿಯೇ ಮುಂದವರಿದಲ್ಲಿ ಮೈಸೂರು ಉಸ್ತುವಾರಿ ಸಚಿವ ಸ್ಥಾನ ತ್ಯಜೀಸೋಕೆ ಎಸ್.ಟಿ.ಸೋಮಶೇಖರ್ ಮುಂದಾಗಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಇದೇ ವೇಳೆ ಆಯುಕ್ತೆ ಶಿಲ್ಪಾ ನಾಗ್ ಬೆಂಬಲಕ್ಕೆ ಎಸ್‍ಟಿ ಸೋಮಶೇಖರ್ ಗಟ್ಟಿಯಾಗಿ ನಿಂತಿದ್ದಾರೆ. ಇದನ್ನೂ ಓದಿ:ಮೇಡಂ ರಾಜೀನಾಮೆ ನೀಡಬೇಡಿ ಎಂದು ಶಿಲ್ಪಾ ನಾಗ್ ಕಾಲು ಹಿಡಿದ ಭದ್ರತಾ ಸಿಬ್ಬಂದಿ

    ಮೈಸೂರು ನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಅವರ ರಾಜೀನಾಮೆಯನ್ನು ಯಾವುದೇ ಕಾರಣಕ್ಕೂ ಅಂಗೀಕರಿಸುವುದಿಲ್ಲ. ಅವರ ಸೇವೆ ಮೈಸೂರು ನಗರಕ್ಕೆ ಅಗತ್ಯವಾಗಿದೆ. ಅವರು ಸಮರ್ಥ ಅಧಿಕಾರಿ ಅವರ ಮನವೊಲಿಸಿ ರಾಜೀನಾಮೆ ಹಿಂಪಡೆಯುವಂತೆ ಮನವಿ ಮಾಡ್ತೇನೆ ಅಂತ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ. ಇದನ್ನೂ ಓದಿ: ಅಧಿಕಾರಿಗಳ ಮಧ್ಯೆ ಸಂಘರ್ಷ – ಎಲ್ಲವನ್ನೂ ಚಾಮುಂಡಿ ತಾಯಿ ನೋಡುತ್ತಿದ್ದಾಳೆ ಎಂದ ಎಸ್‍ಟಿಎಸ್

    ಸೋಮವಾರ ಹೈಕೋರ್ಟ್ ನಲ್ಲಿ ರೋಹಿಣಿ ಸಿಂಧೂರಿ ಮೈಸೂರು ಜಿಲ್ಲಾಧಿಕಾರಿ ನೇಮಕ ಪ್ರಶ್ನಿಸಿ ದಾಖಲಾದ ಅರ್ಜಿಯ ಅಂತಿಮ ವಿಚಾರಣೆ ಇದೆ. ಕೋರ್ಟ್ ಒಂದು ವೇಳೆ ರೋಹಿಣಿ ಸಿಂಧೂರಿ ವಿರುದ್ದದ ಅರ್ಜಿಯನ್ನು ಎತ್ತಿ ಹಿಡಿದರೆ ಎಲ್ಲಾ ಸಮಸ್ಯೆಗೂ ಒಂದೇ ಕ್ಷಣದಲ್ಲಿ ಪರಿಹಾರ ಸಿಗುತ್ತೆ. ಅರ್ಜಿಯ ತೀರ್ಪು ರೋಹಿಣಿ ಸಿಂಧೂರಿ ಪರವಾಗಿದ್ರೆ ಮತ್ತೊಂದು ಡ್ರಾಮಾ ಶುರುವಾಗುತ್ತೆ. ಇದನ್ನೂ ಓದಿ: 12 ಕೋಟಿ ಸಿಎಸ್‍ಆರ್ ಫಂಡ್ ಖರ್ಚಿನ ಮಾಹಿತಿ ಕೇಳಿದ್ದೆ ಅಷ್ಟೇ – ರೋಹಿಣಿ ಸಿಂಧೂರಿ

    ಈ ಎಲ್ಲಾ ಲೆಕ್ಕಾಚಾರದ ಮೇಲೆಯೆ ಸಚಿವ ಎಸ್.ಟಿ. ಸೋಮಶೇಖರ್ ತಮ್ಮದೆ ಸರ್ಕಾರದ ಮೇಲೆ ಒತ್ತಡದ ಹೇರುವ ತಂತ್ರವನ್ನು ಅನುಸರಿಸುತ್ತಿದ್ದಾರೆ. ಇದು ಐಎಎಸ್ ವರ್ಸಸ್ ಐಎಎಸ್ ಕದನಕ್ಕಿಂತ ಜಿಲ್ಲಾ ಉಸ್ತುವಾರಿ ಸ್ಥಾನವನ್ನು ಸೋಮಶೇಖರ್ ತ್ಯಜಿಸುವ ವಿಚಾರ ದೊಡ್ಡ ಅಲ್ಲೋಲ ಕಲ್ಲೋಲವನ್ನೇ ಸೃಷ್ಟಿಸಬಹುದು. ಎಸ್‍ಟಿ ಸೋಮಶೇಖರ್ ಬಳಗ ಹೇರುತ್ತಿರುವ ಒತ್ತಡಕ್ಕೆ ಸಿಎಂ ಯಡಿಯೂರಪ್ಪ ತಲೆ ಬಾಗ್ತಾರಾ..? ರೋಹಿಣಿ ಸಿಂಧೂರಿಯನ್ನು ವರ್ಗಾ ಮಾಡ್ತಾರಾ ಕಾದು ನೋಡಬೇಕು. ಇದನ್ನೂ ಓದಿ: ರೋಹಿಣಿ ಸಿಂಧೂರಿ ನನ್ನನ್ನ ಟಾರ್ಗೆಟ್ ಮಾಡ್ತಿದ್ದಾರೆ: ರಾಜೀನಾಮೆ ನೀಡಿ ಕಣ್ಣೀರಿಟ್ಟ ಶಿಲ್ಪಾನಾಗ್

  • ಯಶವಂತಪುರ, ಆರ್‍ಆರ್ ವಲಯದ ಕೋವಿಡ್ ಕೇರ್ ಸೆಂಟರ್‌ಗೆ  ಡಿವಿಎಸ್, ಎಸ್‌ಟಿಎಸ್‌ ಭೇಟಿ

    ಯಶವಂತಪುರ, ಆರ್‍ಆರ್ ವಲಯದ ಕೋವಿಡ್ ಕೇರ್ ಸೆಂಟರ್‌ಗೆ ಡಿವಿಎಸ್, ಎಸ್‌ಟಿಎಸ್‌ ಭೇಟಿ

    – ಕೋವಿಡ್ ಕೇರ್ ಸೆಂಟರ್ ಗಳ ಮೂಲ ಸೌಕರ್ಯ, ಸ್ಥಿತಿಗತಿ ವಿಕ್ಷಣೆ
    – ಸರ್ಕಾರದಿಂದ ಕೈಗೊಳ್ಳಲಾದ ಕ್ರಮಗಳ ವಿವರಿಸಿದ ಸಚಿವ ಸೋಮಶೇಖರ್
    – ಜನಸೇವಾ ವಿದ್ಯಾಕೇಂದ್ರದ ನೂತನ ಕೇರ್ ಸೆಂಟರ್ಗೆ 16 ಬೆಡ್‍ಗಳಿಗೆ ಆಕ್ಸಿಜನ್ ಕಾನ್ಸಂಟ್ರೇಟರ್ ವ್ಯವಸ್ಥೆ ಮಾಡಿಸಿದ ಎಸ್‍ಟಿಎಸ್
    – ಶಾಶ್ವತ ಸೌಕರ್ಯಗಳ ಬಗ್ಗೆ ಚಿಂತನೆ

    ಬೆಂಗಳೂರು: ಯಶವಂತಪುರ ವಿಧಾನಸಭಾ ಕ್ಷೇತ್ರ ಹಾಗೂ ರಾಜರಾಜೇಶ್ವರಿ ನಗರ ವಲಯದ ಕೋವಿಡ್ ಕೇರ್ ಸೆಂಟರ್‌ಗಳ   ವ್ಯವಸ್ಥೆಗಳ ಬಗ್ಗೆ ಶನಿವಾರ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರಗಳ ಖಾತೆ ಸಚಿವರಾದ ಡಿ.ವಿ.ಸದಾನಂದ ಗೌಡ ಹಾಗೂ ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕರು, ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

    ಕೇಂದ್ರೀಯ ಆಯುರ್ವೇದ ಸಂಶೋಧನಾ ಸಂಸ್ಥೆಗೆ ಭೇಟಿ ನೀಡಿದ ಸಚಿವರುಗಳು, ಅಲ್ಲಿ ನೂತನವಾಗಿ ಪ್ರಾರಂಭಿಸಲು ಉದ್ದೇಶಿಸಿರುವ 100 ಆಕ್ಸಿಜನ್ ಬೆಡ್‍ಗಳ ಪರಿಶೀಲನೆ ನಡೆಸಿದರು. ಜೊತೆಗೆ ಮೂಲ ಸೌಕರ್ಯ ವ್ಯವಸ್ಥೆಗಳನ್ನು ಹೇಗೆ ಮಾಡಿಕೊಳ್ಳಲಾಗಿದೆ. ಸರ್ಕಾರದಿಂದ ಯಾವ ಯಾವ ವ್ಯವಸ್ಥೆಗಳನ್ನು ಮಾಡಲಾಗಿದೆ. ಇನ್ನೂ ಏನೇನು ಬೇಡಿಕೆಗಳು ಇವೆ ಎಂಬೆಲ್ಲ ಮಾಹಿತಿಗಳನ್ನು ಸಚಿವರಾದ ಸೋಮಶೇಖರ್ ಅವರು ಕೇಂದ್ರ ಸಚಿವರಾದ ಡಿ.ವಿ.ಸದಾನಂದಗೌಡ ಅವರಿಗೆ ವಿವರಿಸಿದರು.

    ಮೂಲ ಸೌಲಭ್ಯ ಬಗ್ಗೆ ಮಾಹಿತಿ :
    ಜ್ಞಾನಭಾರತಿ ಕೋವಿಡ್ ಕೇರ್ ಸೆಂಟರ್‍ಗೆ ಭೇಟಿ ನೀಡಿದ ಕೇಂದ್ರ ಸಚಿವರಾದ ಸದಾನಂದಗೌಡ ಅವರು ಹಾಗೂ ಸೋಮಶೇಖರ್ ಅವರು, ಅಲ್ಲಿನ ಮೂಲ ಸೌಲಭ್ಯಗಳ ಬಗ್ಗೆ ಚರ್ಚೆ ನಡೆಸಿದರು. ಜೊತೆಗೆ ಆಕ್ಸಿಜನ್ ಬೆಡ್‍ಗಳ ವ್ಯವಸ್ಥೆ, ಆಕ್ಸಿಜನ್ ಸಿಲಿಂಡರ್‍ಗಳ ಪೂರೈಕೆ, ರೋಗಿಗಳಿಗೆ ಲಭ್ಯವಾಗುತ್ತಿರುವ ಚಿಕಿತ್ಸೆ, ಔಷಧಗಳು, ವೈದ್ಯಕೀಯ ಕಿಟ್‍ಗಳು, ನೀರು-ಊಟದ ವ್ಯವಸ್ಥೆ ಸೇರಿದಂತೆ ಇನ್ನಿತರ ಸೌಕರ್ಯಗಳನ್ನು ಯಾವ ರೀತಿಯಾಗಿ ಕಲ್ಪಿಸಲಾಗಿದೆ. ತುರ್ತು ಅಗತ್ಯವಿರುವ ರೋಗಿಗಳಿಗೆ ಚಿಕಿತ್ಸೆ ನೀಡಲು ಯಾವ ರೀತಿ ಆಸ್ಪತ್ರೆ ಸಜ್ಜಾಗಿದೆ ಎಂಬ ಬಗ್ಗೆ ಸಚಿವರಾದ ಸೋಮಶೇಖರ್ ಅವರು ಕೇಂದ್ರ ಸಚಿವರಿಗೆ ವಿವರಣೆ ನೀಡಿದರು. ಅಲ್ಲದೆ, ಅಚ್ಚುಕಟ್ಟಿನ ವ್ಯವಸ್ಥೆ ಬಗ್ಗೆ ಈ ವೇಳೆ ಕೇಂದ್ರ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.

    ಆಕ್ಸಿಜನ್ ಕಾನ್ಸಂಟ್ರೇಟರ್ ಕೊಡಿಸಿದ ಎಸ್ ಟಿ ಎಸ್:
    ಜನಸೇವಾ ವಿದ್ಯಾ ಕೇಂದ್ರದಲ್ಲಿ ನೂತನವಾಗಿ ಪ್ರಾರಂಭವಾಗಿರುವ 100 ಬೆಡ್‍ಗಳ ಕೋವಿಡ್ ಕೇರ್ ಸೆಂಟರ್‍ಗೆ ಭೇಟಿ ನೀಡಿದ ಕೇಂದ್ರ ಸಚಿವರಾದ ಸದಾನಂದಗೌಡ ಅವರು ಹಾಗೂ ಸಚಿವರಾದ ಸೋಮಶೇಖರ್ ಅವರು, ಅಲ್ಲಿನ ವ್ಯವಸ್ಥೆಯನ್ನು ಪರಿಶೀಲಿಸಿದರು. ಇದೇ ವೇಳೆ 16 ಬೆಡ್‍ಗಳಲ್ಲಿ ಆಕ್ಸಿಜನ್ ಕಾನ್ಸಂಟ್ರೇಟರ್‌ಗಳ ವ್ಯವಸ್ಥೆಗೆ ಬಿಬಿಎಂಪಿ ಮೂಲಕ ಸಚಿವರಾದ ಸೋಮಶೇಖರ್ ಅವರು ವ್ಯವಸ್ಥೆ ಮಾಡಿದ್ದರ ಬಗ್ಗೆ ವೈದ್ಯಾಧಿಕಾರಿಗಳು ಕೇಂದ್ರ ಸಚಿವರ ಗಮನಕ್ಕೆ ತಂದರು.

    ಯಶವಂತಪುರ ವಿಧಾನಸಭಾ ಕ್ಷೇತ್ರ ಹಾಗೂ ರಾಜರಾಜೇಶ್ವರಿ ನಗರ ವಲಯ ವ್ಯಾಪ್ತಿಯಲ್ಲಿ ಹಾಲಿ ಎಲ್ಲ ಕಡೆಗಳಿಂದ ಸೌಲಭ್ಯಗಳನ್ನು ಒದಗಿಸಿಕೊಂಡು ಕೋವಿಡ್ ಕೇರ್ ಸೆಂಟರ್ ಗಳನ್ನು ತೆರೆಯಲಾಗಿದೆ. ಕೆಲವು ಆಸ್ಪತ್ರೆಗಳಲ್ಲಿ ತಾತ್ಕಾಲಿಕ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ. ಆದರೆ, ಆಕ್ಸಿಜನ್ ಬೆಡ್ ಗಳು, ಆಕ್ಸಿಜನ್ ಕಾನ್ಸಂಟ್ರೇಟರ್‌ಗಳು, ಮೆಡಿಕಲ್ ಕಿಟ್ ಗಳು ಸೇರಿದಂತೆ ಆಸ್ಪತ್ರೆಗಳಲ್ಲಿ ಕೋವಿಡ್‍ಗೆ ಸಂಬಂಧಪಟ್ಟಂತೆ ಮೂಲಸೌಕರ್ಯವನ್ನು ಶಾಶ್ವತವಾಗಿ ಒದಗಿಸುವ ನಿಟ್ಟಿನಲ್ಲಿ ಚಿಂತನೆ ನಡೆಸುತ್ತಿದ್ದೇನೆ. ಈ ಬಗ್ಗೆ ಸರ್ಕಾರದೊಂದಿಗೆ ಮಾತನಾಡಿ ಮುಂಬರುವ ದಿನಗಳಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಚಿವರಾದ ಸೋಮಶೇಖರ್ ಅವರು ತಿಳಿಸಿದರು.

    ಈ ಸಂದರ್ಭದಲ್ಲಿ ಯಶವಂತಪುರ ವಿಧಾನಸಭಾ ಕ್ಷೇತ್ರ ಹಾಗೂ ರಾಜರಾಜೇಶ್ವರಿ ನಗರ ವಲಯ ವ್ಯಾಪ್ತಿಯ ವೈದ್ಯಾಧಿಕಾರಿಗಳು, ಬಿಬಿಎಂಪಿ ಅಧಿಕಾರಿಗಳು, ಆರೋಗ್ಯಾಧಿಕಾರಿಗಳು ಸೇರಿದಂತೆ ವೈದ್ಯರು ಹಾಗೂ ಸಿಬ್ಬಂದಿ ಹಾಜರಿದ್ದರು.

  • ಸಿದ್ದರಾಮಯ್ಯ ಜ್ಯೋತಿಷ್ಯ ಕಲಿಯುತ್ತಿರಬೇಕು : ಎಸ್.ಟಿ. ಸೋಮಶೇಖರ್ ವ್ಯಂಗ್ಯ

    ಸಿದ್ದರಾಮಯ್ಯ ಜ್ಯೋತಿಷ್ಯ ಕಲಿಯುತ್ತಿರಬೇಕು : ಎಸ್.ಟಿ. ಸೋಮಶೇಖರ್ ವ್ಯಂಗ್ಯ

    – ಮಾಡೋ ಕೆಲಸ ಮಾಡಲಿ, ಸಿದ್ದರಾಮಯ್ಯನವರ ಸರ್ಟಿಫಿಕೇಟ್ ಬೇಡ

    ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಯಾವಾಗ ಜ್ಯೋತಿಷ್ಯ ಹೇಳುವುದಕ್ಕೆ ಶುರು ಮಾಡಿದರೋ ಗೊತ್ತಿಲ್ಲ. ವಿರೋಧ ಪಕ್ಷದ ನಾಯಕರಾಗಿರುವ ಕಾರಣ ಕೆಲಸ ಇಲ್ಲದೆ ಜ್ಯೋತಿಷ್ಯ ಕಲಿಯುತ್ತಿರಬೇಕು. ಅದಕ್ಕೆ ಮುಖ್ಯಮಂತ್ರಿಗಳ ಬದಲಾವಣೆ ಬಗ್ಗೆ ಆಗಾಗಾ ಜ್ಯೋತಿಷ್ಯ ಹೇಳುತ್ತಾರೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ವ್ಯಂಗ್ಯವಾಡಿದ್ದಾರೆ.

    ಸರ್ಟಿಫಿಕೇಟ್ ಬೇಡ: ಇಂದು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ಈಗ ಪುರುಸೊತ್ತು ಇರಬೇಕು. ವಿರೋಧ ಪಕ್ಷದ ನಾಯಕರಾಗಿ ಮಾಡಬೇಕಾದ ಕೆಲಸವನ್ನು ಮಾಡುವುದು ಬಿಟ್ಟು ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ. ಮೊದಲಿಗೆ ಅವರ ಪಕ್ಷದಲ್ಲಾಗುತ್ತಿರುವುದನ್ನು ನೋಡಿಕೊಳ್ಳಲಿ. ನಮ್ಮ ಪಕ್ಷದ ಉಸಾಬರಿ ಏಕೆ? ರಾಜ್ಯದ ಅಭಿವೃದ್ಧಿ ವಿಚಾರದಲ್ಲಿ ನಮಗೆ ಕೇಂದ್ರ ಗೃಹ ಸಚಿವರ ಸರ್ಟಿಫಿಕೇಟ್ ಸಾಕು ಸಿದ್ದರಾಮಯ್ಯ ಅವರ ಸರ್ಟಿಫಿಕೇಟ್ ಬೇಡ ಎಂದರು.

    ಅವರು ಪದೇ ಪದೇ ಇಲ್ಲ ಸಲ್ಲದ ಹೇಳಿಕೆ ನೀಡುವುದು ಸರಿಯಲ್ಲ. ತಮ್ಮ ಪಕ್ಷದಲ್ಲಿನ ಗೊಂದಲಗಳನ್ನು ಬಗೆಹರಿಸಿಕೊಳ್ಳಲಿ. ಪ್ರಚಾರಕ್ಕಾಗಿ ಅವರು ಇಂತಹ ಹೇಳಿಕೆ ನೀಡುತ್ತಿದ್ದಾರೆ ಅಷ್ಟೇ. ಮುಖ್ಯಮಂತ್ರಿಗಳು ಕೋವಿಡ್ ಹಾಗೂ ಉಳಿದ ಪರಿಸ್ಥಿತಿಯಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಣೆ ಮಾಡುತ್ತಿದ್ದಾರೆಂದು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರೇ ಹೇಳಿದ್ದಾರೆ. ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಅವರು ಇನ್ನು ಎರಡೂವರೆ ವರ್ಷ ಆಡಳಿತ ನಡೆಸುತ್ತಾರೆ. ಉತ್ತಮ ಮತ್ತು ದಕ್ಷ ಆಡಳಿತ ನೀಡುತ್ತಿದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ನಮಗೆ ಶಾ ಅವರ ಸರ್ಟಿಫಿಕೇಟ್ ಸಾಕು. ಸಿದ್ದರಾಮಯ್ಯ ಅವರ ಸರ್ಟಿಫಿಕೇಟ್ ಬೇಡ. ಅದನ್ನು ಅವರೇ ಇಟ್ಟುಕೊಳ್ಳಲಿ ಎಂದು ತಿರುಗೇಟು ನೀಡಿದರು.

    ರಾಜ್ಯದಲ್ಲಿ ದೊಡ್ಡ ಸುದ್ದಿಯಲ್ಲಿರುವ ಸಿಡಿ ವಿಚಾರದ ಬಗ್ಗೆ ಸಚಿವರು ಪ್ರತಿಕ್ರಿಯಿಸಿದ ಅವರು, ನನಗೆ ಯಾವುದೇ ಸಿಡಿ ಬಗ್ಗೆ ಮಾಹಿತಿ ಇಲ್ಲ. ನನಗೆ ಗೊತ್ತಿರುವುದು ಬೆಂಗಳೂರು ಅಭಿವೃದ್ಧಿಯ ಸಿಡಿ. ಮುಖ್ಯಮಂತ್ರಿಗಳು ಈಗಾಗಲೇ 2 ಸಭೆ ನಡೆಸಿ ಬೆಂಗಳೂರಿನ ಅಭಿವೃದ್ಧಿ ಬಗ್ಗೆ ಚರ್ಚಿಸಿದ್ದಾರೆ. ಅದಕ್ಕೊಂದು ರೂಪುರೇಷೆ ನೀಡಿ ಸಂಬಂಧಿಸಿದ ಸಿಡಿಯನ್ನು ನಮಗೆ ಕಳುಹಿಸುವುದಾಗಿ ಹೇಳಿದ್ದಾರೆ. ಅದು ಬಿಟ್ಟು ಬೇರೆ ಮಾಹಿತಿ ನನಗೆ ಇಲ್ಲ. ಅದನ್ನು ಹೇಳಿದವರಿಗೇ ಕೇಳಬೇಕು ಎಂದು ಪ್ರತಿಕ್ರಿಯಿಸಿದರು.

    ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರ “ಡಬಲ್ ಇಂಜಿನ್” ಅಭಿವೃದ್ಧಿ ಹೇಳಿಕೆಯನ್ನು ಸಮರ್ಥಿಸಿಕೊಂಡ ಸಚಿವರು, ರಾಜ್ಯದಲ್ಲಿಯೂ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಸಿಕ್ಕಿದ್ದಲ್ಲದೆ, ವೇಗ ಪಡೆದುಕೊಂಡಿದೆ. ಕೋವಿಡ್ ಹಿನ್ನೆಲೆಯಲ್ಲಿ 8-9 ತಿಂಗಳು ಎಲ್ಲ ಕಡೆಯೂ ಅಭಿವೃದ್ಧಿ ಕುಂಠಿತಗೊಂಡಿತ್ತು. ಆದರೆ ಈಗ ಎಲ್ಲವೂ ಪ್ರಾರಂಭವಾಗಿದೆ. ಒಂದೊಂದು ಕ್ಷೇತ್ರಕ್ಕೆ ಲೋಕೋಪಯೋಗಿಯಿಂದ ಸುಮಾರು 25 ಕೋಟಿ ರೂಪಾಯಿಯಂತೆ ಅನುದಾನ ಬಿಡುಗಡೆ ಮಾಡಲಾಗಿದೆ. ಹೀಗೆ ಒಂದೊಂದಾಗಿ ಚಾಲನೆ ನೀಡಲಾಗುತ್ತಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

  • ನಿಂಬೆಹಣ್ಣಿನ ಬಗ್ಗೆ ಮಾತಾಡೋರಿಗೆ ಹಿಂದುತ್ವ ಗೊತ್ತಿಲ್ಲ: ಎಸ್‍ಟಿಎಸ್ ಹೇಳಿಕೆಗೆ ಪ್ರಜ್ವಲ್ ತಿರುಗೇಟು

    ನಿಂಬೆಹಣ್ಣಿನ ಬಗ್ಗೆ ಮಾತಾಡೋರಿಗೆ ಹಿಂದುತ್ವ ಗೊತ್ತಿಲ್ಲ: ಎಸ್‍ಟಿಎಸ್ ಹೇಳಿಕೆಗೆ ಪ್ರಜ್ವಲ್ ತಿರುಗೇಟು

    – ವಿಜಯೇಂದ್ರ ತಂದೆ ಸ್ಥಾನ ಉಳಿಸಿಕೊಳ್ಳಲಿ

    ಹಾಸನ: ನಿಂಬೆಹಣ್ಣಿನ ಬಗ್ಗೆ ಮಾತಾಡೋರಿಗೆ ಹಿಂದುತ್ವದ ಕುರಿತು ಗೊತ್ತಿಲ್ಲ ಎಂದು ಹೇಳುವ ಮೂಲಕ ಸಚಿವ ಎಸ್.ಟಿ.ಸೋಮಶೇಖರ್ ಹೇಳಿಕೆಗೆ ಸಂಸದ ಪ್ರಜ್ವಲ್ ರೇವಣ್ಣ ತಿರಗೇಟು ನೀಡಿದ್ದಾರೆ. ತಂದೆ, ಮಾಜಿ ಸಚಿವರಾಗಿರುವ ಹೆಚ್.ಡಿ.ರೇವಣ್ಣ ಅವರ ಬಗ್ಗೆ ಮಾತನಾಡೋರಿಗೆ ನಿಂಬೆಹಣ್ಣಿನ ಮಹತ್ವ ಹೇಳಿ ಕಿಡಿಕಾರಿದ್ದಾರೆ.

    ಸಚಿವ ಎಸ್.ಟಿ.ಸೋಮಶೇಖರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಪ್ರಜ್ವಲ್ ರೇವಣ್ಣ, ಕೇಂದ್ರ ಸಚಿವ ರಾಜನಾಥ್ ಸಿಂಗ್ ರಫೆಲ್ ಖರೀದಿಸುವ ವೇಳೆ ವಿಮಾನದ ಚಕ್ರಕ್ಕೆ ನಿಂಬೆಹಣ್ಣು ಇರಿಸಿದ್ದರು. ಅವರು ಮಾಟ-ಮಂತ್ರ ಮಾಡಿ ನಿಂಬೆಹಣ್ಣು ಇಟ್ಟಿದ್ದರಾ ಎಂದು ಪ್ರಶ್ನಿಸಿದರು.

    ಪ್ರತಿ ಗ್ರಾಮಕ್ಕೆ ಹೋದರು ಕೂಡ ಅಲ್ಲಿ ನಿಂಬೆಹಣ್ಣನ್ನ ಕೊಡುವ ಸಂಪ್ರದಾಯವಿದೆ. ಹಾಗಂತ ನಿಂಬೆಹಣ್ಣನ್ನು ಕೊಟ್ಟವರೆಲ್ಲ ಮಾಟ-ಮಂತ್ರ ಮಾಡಿಸುತ್ತಾರೆ ಅಂತ ಅಲ್ಲ. ಯಾವುದೇ ದೇವಸ್ಥಾನಗಳಿಗೆ ಹೋದರೂ ಅಲ್ಲಿ ಮೊದಲಿಗೆ ನಿಂಬೆಹಣ್ಣನ್ನು ಕೊಡುವುದು ಸಂಪ್ರದಾಯ. ಶೃಂಗೇರಿ ದೇವಾಲಯವನ್ನು ರೇವಣ್ಣನವರು ಬಹಳವಾಗಿ ನಂಬಿದ್ದಾರೆ. ಅಲ್ಲಿಯೂ ನಿಂಬೆಹಣ್ಣನ್ನು ಕೊಡುತ್ತಾರೆ. ಹಾಗಂತ ರೇವಣ್ಣನವರು ಮಾಟ-ಮಂತ್ರ ಮಾಡಿಸುತ್ತಿದ್ದಾರೆ ಅಂತ ಹೇಳುವುದಕ್ಕೆ ಆಗುತ್ತಾ? ಅವರಿಗೆ ಹಿಂದುತ್ವದ ಬಗ್ಗೆ ಗೊತ್ತಿಲ್ಲ ಅಂತ ಕಾಣಿಸುತ್ತದೆ ಎಂದು ಎಸ್.ಟಿ.ಸೋಮಶೇಖರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು.

    ಹಾಸನದ ಬೇಲೂರಿನಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಉಪಚುನಾವಣೆ ಫಲಿತಾಂಶದ ಬಗ್ಗೆ ಮಾತನಾಡುತ್ತ ವಿಜಯೇಂದ್ರ ಜೆಡಿಎಸ್ ಪಕ್ಷಕ್ಕೆ ಟಾಂಗ್ ನೀಡಿದ್ರು. ಈ ಬಗ್ಗೆ ಪ್ರತಿಕ್ರಿಯಿಸಿದ ಸಂಸದ ಪ್ರಜ್ವಲ್ ರೇವಣ್ಣ, 50 ವರ್ಷದಿಂದ ನಮ್ಮ ಕುಟುಂಬ ರಾಜಕೀಯ ನೋಡಿಕೊಂಡು ಬಂದಿದೆ. ಇಲ್ಲಿ ಗೆಲುವು ಸೋಲು ಶಾಶ್ವತವಲ್ಲ. ನಮ್ಮ ಬಗ್ಗೆ ಮಾತನಾಡುವ ಬದಲು ಅವರ ತಂದೆ ಸ್ಥಾನ ಉಳಿಸಿಕೊಳ್ಳಲು ಹೋರಾಟ ಮಾಡಲಿ ಎಂದರು.

    ಎಸ್.ಟಿ.ಸೋಮಶೇಖರ್ ಹೇಳಿದ್ದೇನು?: ಹಾಸನದಲ್ಲಿ ಪ್ರೀತಂಗೌಡ್ರೇ ಇರಬೇಕು. ನಿಂಬೆಹಣ್ಣಿಗೆ ಪ್ರತಿ ವಿರುದ್ಧ ನಿಂಬೆಹಣ್ಣು ತೋರಿಸುವಂತವರು ಪ್ರೀತಂಗೌಡ. ಹೀಗಾಗಿ ಹಾಸನ ಜಿಲ್ಲೆಗೆ ಅವರೇ ಸರಿ ಎಂದು ಪ್ರೀತಂಗೌಡರನ್ನು ಹಾಡಿಹೊಗಳಿದ್ದರು. ಇದನ್ನೂ ಓದಿ: ಎಲೆಕ್ಷನ್ ಅಂದ್ರೆ ಏನೂಂತ ಗ್ರಾ.ಪಂ ಚುನಾವಣೆಯಲ್ಲಿ ತೋರಿಸ್ತೇವೆ: ಪ್ರಜ್ವಲ್

    ಆ ನಿಂಬೆಹಣ್ಣು ತೋರಿಸಿದರೆ ರಾಜ್ಯದ ಎಂತೆಂತಹ ನಾಯಕರೇ ತತ್ತರಿಸಿ ಹೋಗುತ್ತಾರೆ. ಆದರೆ ಆ ನಿಂಬೆಹಣ್ಣಿಗೆ ಪ್ರತಿ ನಿಂಬೆಹಣ್ಣು ತೋರಿಸಿ ಕಂಟ್ರೋಲ್ ಮಾಡುವ ಶಕ್ತಿ ಇದ್ದರೆ ಅದು ಪ್ರೀತಂಗೌಡರಿಗೆ ಮಾತ್ರ. ಅವರಿಗೆ ಇನ್ನೂ ಹೆಚ್ಚಿನ ಶಕ್ತಿಯನ್ನು ನಾವು ನೀಡುತ್ತೇವೆ ಎಂದು ಮಾಜಿ ಸಚಿವ ಹೆಚ್‍ಡಿ.ರೇವಣ್ಣ ನಿಂಬೆಹಣ್ಣಿನ ಶಕ್ತಿ ವಿರುದ್ಧ ಪರೋಕ್ಷವಾಗಿ ಮಾತನಾಡಿದ್ದರು.

  • ನಮ್ಮ ಬಗ್ಗೆ ಮಾತಾಡಿದವರಿಗೆ ಪ್ರಮೋಷನ್ ಸಿಗಲಿ: ಡಿಕೆಶಿ

    ನಮ್ಮ ಬಗ್ಗೆ ಮಾತಾಡಿದವರಿಗೆ ಪ್ರಮೋಷನ್ ಸಿಗಲಿ: ಡಿಕೆಶಿ

    ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ನನ್ನ ಬಗ್ಗೆ ಮಾತನಾಡಿದವರಿಗೆ ಬೇಗ ಒಳ್ಳೆಯ ಪ್ರಮೋಷನ್ ಸಿಗಲಿ ಎಂದು ಹೇಳುವ ಮೂಲಕ ಸಚಿವ ಎಸ್.ಟಿ.ಸೋಮಶೇಖರ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.

    ಇಂದು ಮಾಧ್ಯಮಗಳ ಜೊತೆ ಮಾತನಾಡುತ್ತಾ ಎಸ್.ಟಿ.ಸೋಮಶೇಖರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ಬಹಳ ಸಂತೋಷ, ಇಷ್ಟು ಬೇಗ ಸಂತೋಷವಾದ ಸುದ್ದಿ ಹೇಳಿದ್ದಾರೆ. ನನ್ನ ಹಾಗೂ ಸಿದ್ದರಾಮಯ್ಯನವರ ಬಗ್ಗೆ ಮಾತನಾಡಿದರೆ ಮಾಧ್ಯಮದಲ್ಲಿ ಬೆಲೆ ಇದೆ. ನಮ್ಮ ಬಗ್ಗೆ ಮಾತಾಡಿದರೆ ಅವರಿಗೆ ಪ್ರಮೋಷನ್ ಸಿಗುತ್ತೆ ಮತ್ತು ಪಕ್ಷದಲ್ಲಿ ಒಳ್ಳೆಯ ಸ್ಥಾನಮಾನ ಸಿಗುತ್ತದೆ. ಸೋಮಶೇಖರ್, ಸಾಮ್ರಾಟ್ ಅಶೋಕ್, ಸಿ ಟಿ ರವಿ, ಸರ್ವಿಸ್ ಪ್ರವೈಡರ್ ಆಶ್ವಥ್ ಎಲ್ಲ ಮಾತನಾಡ್ತಾ ಇದಾರಲ್ಲ. ಮಾತನಾಡಲಿ ಏನೇನಿದೆಯೋ ಹುಡುಕಾಡಲಿ ಎಂದು ಬಿಜೆಪಿ ನಾಯಕರ ವಿರುದ್ಧ ಮಾತಿನ ಚಾಟಿ ಬೀಸಿದರು.

    ಮುಂದಿನ ಮುಖ್ಯಮಂತ್ರಿ ಯಾರು ಎಂಬುದು ಈಗ ಅಪ್ರಸ್ತುತವಾಗಿದ್ದು, ನಾವೆಲ್ಲ ಶಾಸಕಾಂಗ ಪಕ್ಷದ ನಾಯಕರ ಜೊತೆ ಇದ್ದೇವೆ. ಮುಂದಿನ ಚುನಾವಣೆಯಲ್ಲಿ ಬಹುಮತ ಬರಲಿ, ಕಾಂಗ್ರೆಸ್ ಪಕ್ಷ ಸರ್ಕಾರ ರಚಿಸಲಿ. ಆ ವೇಳೆ ಹೈಕಮಾಂಡ್ ಸಿಎಂ ಯಾರೆಂದು ನಿರ್ಧರಿಸುತ್ತದೆ. ಕೋಳಿವಾಡ ಶಿಸ್ತುಪಾಲನೆ ಬಗ್ಗೆ ಹೇಳಿದ್ದಾರೆ. ನಾನು ಕೊಟ್ಟ ಜವಬ್ದಾರಿಯನ್ನ ಅವರು ನಿರ್ವಹಿಸುತ್ತಿದ್ದಾರೆ. ನಾನು ಸೇರಿದಂತೆ ಎಲ್ಲರೂ ಸಿದ್ದರಾಮಯ್ಯ ಜೊತೆ ಇದ್ದೇವೆ. ಅವರು ನಮ್ಮ ಶಾಸಕಾಂಗ ಪಕ್ಷದ ನಾಯಕರು ಎಂದು ಹೇಳಿ ಬಿಜೆಪಿ ನಾಯಕರ ಆರೋಪಗಳಿಗೆ ತಿರುಗೇಟು ನೀಡಿದರು.

    ಎಸ್.ಟಿ.ಸೋಮಶೇಖರ್ ಹೇಳಿದ್ದೇನು?: ಆರ್.ಆರ್. ನಗರ ಉಪ ಚುನಾವಣೆಯಲ್ಲಿ ಮುನಿರತ್ನ ಅವರನ್ನು ಸೋಲಿಸಲು ಸಾಧ್ಯವೇ ಇಲ್ಲ. ಡಿ.ಕೆ.ಶಿವಕುಮಾರ್ ಹೇಳಿಕೆಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ಡಿಕೆಶಿ ಮಾತಿಗೆ ಸಿದ್ದರಾಮಯ್ಯ ಅವರೇ ಬೆಲೆ ಕೊಡುವುದಿಲ್ಲ. ನಾವು ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿಗಳಾಗಿದ್ದೇವು. ನಮ್ಮನ್ನು ಪಕ್ಷ ಬಿಡಿಸಿದವರು ಯಾರು? ಶೇ.99 ರಷ್ಟು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರಿದ್ದು, ಹೊರಗಡೆಯಿಂದ ಕರೆದುಕೊಂಡು ಬಂದು ಚುನಾವಣೆ ಮಾಡುತ್ತಿದ್ದಾರೆ ಎಂದು ಹೇಳಿದ್ದರು.

  • ಹೆಸರಿಗೆ ಮಾತ್ರ ಸರಳ ದಸರಾ – ಬಿಡುಗಡೆಯಾಗಿದೆ 15 ಕೋಟಿ ಹಣ

    ಹೆಸರಿಗೆ ಮಾತ್ರ ಸರಳ ದಸರಾ – ಬಿಡುಗಡೆಯಾಗಿದೆ 15 ಕೋಟಿ ಹಣ

    – ಸರಳ ದಸರೆಗೆ 15 ಕೋಟಿ ಯಾಕೆ?
    – ಚರ್ಚೆಗೆ ಗ್ರಾಸವಾಗಿದೆ ಸರ್ಕಾರದ ನಡೆ

    ಮೈಸೂರು: ಕೊರೊನಾ ಭೀತಿಯಲ್ಲಿ ಈ ಬಾರಿ ಅತಿ ಸರಳ ದಸರಾ ನಡೆಸಲು ಸರ್ಕಾರ ಮುಂದಾಗಿದೆ. ಅತಿ ಸರಳ ದಸರಾ ಅಂದರೆ ದಸರಾ ವೆಚ್ಚವೂ ಅತಿ ಕಡಿಮೆ ಆಗಬೇಕು. ಆದರೆ ಸರ್ಕಾರ ಸರಳ ದಸರಕ್ಕೂ ಎಂದಿನಂತೆ 15 ಕೋಟಿ ರೂಪಾಯಿ ವೆಚ್ಚ ಮಾಡಲು ಮುಂದಾಗಿದೆ. ಇದನ್ನೂ ಓದಿ: ಅಕ್ಟೋಬರ್ 17ರಿಂದ ಮೈಸೂರು ದಸರಾ- ದಿನಕ್ಕೊಂದು ಸಾಂಸ್ಕೃತಿಕ ಕಾರ್ಯಕ್ರಮ

    ಸರಳ ದಸರಾಗೆ ರಾಜ್ಯ ಸರ್ಕಾರ 10 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ 5 ಕೋಟಿ ರೂಪಾಯಿ ನೀಡುತ್ತಿದೆ. ಅಲ್ಲಿಗೆ ದಸರಾಗೆ 15 ಕೋಟಿ ರೂಪಾಯಿ ಸಿಕ್ಕಿದೆ. ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ಸನ್ನಿಧಾನದಲ್ಲಿ ದಸರಾ ಉದ್ಘಾಟನೆ, ವಿಜಯದಶಮಿ ದಿನ ಅರಮನೆಯ ಒಳಗೆ ಜಂಬೂ ಸವಾರಿ ಹಾಗೂ ಅರಮನೆ ಆವರಣದಲ್ಲಿ 8 ದಿನ ಸಾಂಸ್ಕೃತಿಕ ಕಾರ್ಯಕ್ರಮ ಮಾತ್ರ ನಡೆಯಲಿದೆ. ಇಷ್ಟು ಮಾಡಲು 15 ಕೋಟಿ ರೂಪಾಯಿ ಏಕೆ ಎಂಬುದೇ ದೊಡ್ಡ ಪ್ರಶ್ನೆ.ಇದನ್ನೂ ಓದಿ: ಈ ಬಾರಿ ಮೈಸೂರಿನಲ್ಲಿ ಸರಳ ದಸರಾ ಆಚರಣೆ – ಏನಿರುತ್ತೆ? ಏನಿರಲ್ಲ?

    ರಾಜಕಾರಣಿಗಳು, ಅಧಿಕಾರಿಗಳು ಹಣ ಮಾಡಲು ಇಷ್ಟೊಂದು ಪ್ರಮಾಣದಲ್ಲಿ ಹಣ ನಿಗದಿ ಮಾಡಲಾಗಿದೆ ಅನ್ನೋ ಆರೋಪ ಕೇಳಿ ಬರುತ್ತಿದೆ. ಈ ಬಾರಿ ಯಾವುದೇ ದಸರಾ ಉಪ ಸಮಿತಿಗಳಿಲ್ಲ, ಸಾಂಸ್ಕೃತಿಕ ಕಾರ್ಯಕ್ರಮಗಳಿಲ್ಲ, ದೀಪಾಲಂಕಾರಕ್ಕೂ ಬ್ರೇಕ್ ಬಿದ್ದಿದೆ. ಇವುಗಳು ಇಲ್ಲದೇ ಇರುವಾಗ 15 ಕೋಟಿ ಹಣವನ್ನು ಎಲ್ಲಿ ಹೇಗೆ ಖರ್ಚು ಮಾಡುತ್ತಾರೆ ಎಂಬ ಕುತೂಹಲ ಮೂಡಿದೆ. ಇದನ್ನೂ ಓದಿ: ದಸರಾ ಗಜಪಡೆಯ ನೂತನ ಕ್ಯಾಪ್ಟನ್ ಅಭಿಮನ್ಯು? – ಅರ್ಜುನನಿಗೆ ನಿವೃತ್ತಿ ನಿಶ್ಚಿತ

    ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರ ಸ್ಪಷ್ಟನೆಯೇ ಬೇರೆ ರೀತಿ ಇದೆ. ಸರ್ಕಾರ ಹಣ ನೀಡಿರುವುದು ಕೇವಲ ದಸರಾ ಆಚರಣೆಗೆ ಮಾತ್ರವಲ್ಲ. ಸಮಗ್ರ ಮೈಸೂರು ಅಭಿವೃದ್ಧಿಗಾಗಿ. ಇದರಲ್ಲಿ ರಸ್ತೆ ಸೇರಿದಂತೆ ವಿವಿಧ ಮೂಲಭೂತ ಅಗತ್ಯಗಳಿಗೆ ಹಣ ಬಳಸಲಾಗುತ್ತದೆ. ಒಂದು ರೂಪಾಯಿಯೂ ದುರುಪಯೋಗ ಆಗಲು ಬಿಡುವುದಿಲ್ಲ. ಹಣದ ಬಳಕೆ ಪರಿಪೂರ್ಣ ಲೆಕ್ಕವನ್ನು ದಸರಾ ನಂತರ ನೀಡುತ್ತೇನೆ. ಕೊರೊನಾ ಸಂಕಷ್ಟ ಕಾಲದಲ್ಲೂ ದಸರಾಗೆ ಹಣ ನೀಡಿದೆ. ಇದರ ಸದುಪಯೋಗ ಮಾಡಿಕೊಳ್ಳುತ್ತೀವಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

    ದಸರಾಗೆ ಉಳಿದಿರುವುದು ಇನ್ನೂ 30 ದಿನ ಮಾತ್ರ. ಇನ್ನೂ ರಸ್ತೆ ಕಾಮಗಾರಿಯ ರೂಪುರೇಷೆ ಸಿದ್ಧವಾಗಿಲ್ಲ. ಇದರ ನಡುವೆ ಮಳೆಯೂ ಬರುತ್ತಿದೆ. ಕಾಮಗಾರಿ ನಡೆಸಲು ಮಳೆ ಅಡಿಯಾಗುತ್ತದೆ. ಹೀಗಾಗಿ ಈ ಬಾರಿಯ ದಸರಾಗೆ ಬಿಡುಗಡೆಯಾಗಿರುವ ಹಣದ ಬಗ್ಗೆ ಭಾರೀ ಅನುಮಾನ ಮೂಡಿದೆ.

  • ಯಲವಾಳ ತೋಟದಲ್ಲಿ ಸಹಕಾರಿ, ಕೃಷಿ ಸಚಿವರಿಂದ ಯೋಗ

    ಯಲವಾಳ ತೋಟದಲ್ಲಿ ಸಹಕಾರಿ, ಕೃಷಿ ಸಚಿವರಿಂದ ಯೋಗ

    ಹಾವೇರಿ: ಕೃಷಿ ಸಚಿವರಾದ ಬಿ.ಸಿ ಪಾಟೀಲರು ಮತ್ತು ಸಹಕಾರಿ ಸಚಿವ ಎಸ್.ಟಿ ಸೋಮಶೇಖರ್ ಅವರು ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಸ್ವಗ್ರಾಮ ಯಲವಾಳ ಗ್ರಾಮದ ಕೃಷಿ ಸಚಿವರ ತೋಟದಲ್ಲಿ ಯೋಗ ದಿನಾಚರಣೆ ಪ್ರಯುಕ್ತ ಯೋಗ ದಿನಾಚರಣೆಯಲ್ಲಿ ಅಚರಿಸಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಕೃಷಿ ಸಚಿವ ಬಿ.ಸಿ.ಪಾಟೀಲ್, ಯೋಗ ಎನ್ನುವುದು ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ನೆಮ್ಮದಿಯನ್ನೂ ನೀಡಬಲ್ಲದು. ಋಷಿಮುನಿಗಳು ಈ ಹಿಂದೆ ಆಚರಿಸಿ ಅನುಸರಿಸುತ್ತಿದ್ದ ಯೋಗವನ್ನು ಇಂದಿಗೂ ನಮ್ಮ ದೇಶದಲ್ಲಿ ಪಾರಂಪರಿಕವಾಗಿ ಮುಂದುವರಿಸಿಕೊಂಡು ಬರಲಾಗುತ್ತಿದೆ. ಯೋಗ ದಿನಾಚರಣೆಯಂದು ಮಾತ್ರ ಯೋಗ ಮಾಡದೇ ಪ್ರತಿನಿತ್ಯ ವ್ಯಾಯಾಮ ಯೋಗ ಮಾಡುವುದು ಒಳ್ಳೆಯದು. ಯೋಗ ಎಲ್ಲರ ದೈನಂದಿನ ಭಾಗವಾಗಬೇಕು ಎಂದು ಕರೆ ನೀಡಿದರು.

    ಯೋಗಕ್ಕೆ ತನ್ನದೇ ಆದ ಇತಿಹಾಸದ ಜೊತೆಗೂ ವೈಜ್ಞಾನಿಕವಾಗಿಯೂ ಸಾಬೀತಾಗಿದೆ. ಯೋಗವನ್ನು ಗುರುಗಳಿಂದ ಯೋಗ ಶಾಲೆಯಲ್ಲಿ ಕಲಿಯಬಹುದು. ಕೈಬೆರಳಲ್ಲಿರುವ ಮೊಬೈಲ್‍ನಲ್ಲಿ ಯೋಗ ಕಲಿಸುವ ಅದೆಷ್ಟೋ ಯೋಗದ ವಿಡಿಯೋ ಚಾನೆಲ್‍ಗಳು ಆ್ಯಪ್‍ಗಳು ಸಹ ಲಭ್ಯ. ನಮ್ಮ ನಮ್ಮ ದೇಹಕ್ಕೆ ಅನುಕೂಲಕರವಾಗುವಂತೆ ಆದಷ್ಟು ಮಾರ್ಗದರ್ಶನ ಪಡೆದೇ ಯೋಗವನ್ನು ಅನುಸರಿಸುವುದು ಉತ್ತಮ ಎಂದು ಸಚಿವರು ಸಲಹೆಯಿತ್ತರು.

  • ಬೆಂಗ್ಳೂರಲ್ಲಿ ನಡೆದಿದ್ದು ಅತೃಪ್ತರ ಸಭೆ ಅಲ್ಲ: ಎಸ್.ಟಿ ಸೋಮಶೇಖರ್

    ಬೆಂಗ್ಳೂರಲ್ಲಿ ನಡೆದಿದ್ದು ಅತೃಪ್ತರ ಸಭೆ ಅಲ್ಲ: ಎಸ್.ಟಿ ಸೋಮಶೇಖರ್

    – ಡಿಕೆಶಿ ವಿರುದ್ಧ ಎಸ್‍ಟಿಎಸ್ ಗುಡುಗು

    ಮೈಸೂರು: ಮೊನ್ನೆ ಬೆಂಗಳೂರಿನಲ್ಲಿ ನಡೆದಿರುವ ಬಿಜೆಪಿ ಶಾಸಕರ ಸಭೆ ಅತೃಪ್ತರ ಸಭೆ ಅಲ್ಲ. ಶಾಸಕ ಉಮೇಶ್ ಕತ್ತಿ ತಮ್ಮ ಸಹೋದರನಿಗೆ ರಾಜ್ಯಸಭಾ ಟಿಕೆಟ್ ಕೊಡಿಸಲು ಶಾಸಕರ ಒಟ್ಟಾಗಿ ಸೇರಿಸಿದ್ದಾರೆ ಅಷ್ಟೆ. ಈ ಸಭೆ ಸಿಎಂ ವಿರುದ್ಧ ಅಲ್ಲ ಎಂದು ಸಚಿವ ಎಸ್.ಟಿ. ಸೋಮಶೇಖರ್ ಸ್ಪಷ್ಟಪಡಿಸಿದ್ದಾರೆ.

    ಮೈಸೂರಿನಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ತಮ್ಮವರ ವಿಧಾನಪರಿಷತ್ ನೇಮಕ ಹಾಗೂ ರಾಜ್ಯಸಭೆ ಟಿಕೆಟ್‍ಗಾಗಿ ಒತ್ತಡ ಹೇರಲು ನಡೆದಿರುವ ಸಭೆ ಇದು. ಈ ವಿಚಾರ ಬಿಟ್ಟು ಬೇರೆ ಯಾವ ವಿಚಾರವೂ ಅಲ್ಲಿ ಚರ್ಚೆ ಆಗಿಲ್ಲ ಎಂದರು. ಎಚ್. ವಿಶ್ವನಾಥ್, ಎಂ.ಟಿ.ಬಿ. ನಾಗರಾಜ್ ಹಾಗೂ ಶಂಕರ್ ಮೂವರಿಗೂ ವಿಧಾನ ಪರಿಷತ್ ನೇಮಕ ಮಾಡಬೇಕು. ಈ ಬಗ್ಗೆ ಸಿಎಂಗೆ ಹೇಳಿದ್ದೇವೆ. ನಾವೆಲ್ಲ ಶಾಸಕರು ಈ ಮೂವರ ಪರ ಇದ್ದೇವೆ ಎಂದು ಸ್ಪಷ್ಟಪಡಿಸಿದರು.

    ಆಪರೇಷನ್ ಕಾಂಗ್ರೆಸ್ ವಿಚಾರದ ಬಗ್ಗೆಯೂ ಸಚಿವರು ಪ್ರತಿಕ್ರಿಯಿಸಿ, ಡಿ.ಕೆ. ಶಿವಕುಮಾರ್ ಇನ್ನೂ ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರವೇ ಸ್ವೀಕರಿಸಿಲ್ಲ. ಮೊದಲು ಅವರ ಪಕ್ಷದ ಪದಾಧಿಕಾರಿಗಳ ನೇಮಕ ಮಾಡಿಕೊಳ್ಳಲಿ. ಆಮೇಲೆ ಉಳಿದದ್ದು ನೋಡಲಿ. ಬಿಜೆಪಿಯಲ್ಲಿ ಅತೃಪ್ತರು, ಅಸಮಾಧಾನಿತರು ಎಂಬುದಿಲ್ಲ ಎಂದು ಹೇಳಿದ್ದಾರೆ.