ಕಾರವಾರ: ಬಿಜೆಪಿಯಿಂದ 8 ಶಾಸಕರು ಕಾಂಗ್ರೆಸ್ ಸೇರ್ಪಡೆಯಾಗುವ ಬಗ್ಗೆ ಎಸ್.ಟಿ.ಸೋಮಶೇಖರ್ ಹೇಳಿಕೆ ಬೆನ್ನಲ್ಲೇ ಇದೀಗ ಬಿಜೆಪಿಯಿಂದ ಮಾನಸಿಕವಾಗಿ ವಿಮುಖರಾಗಿರುವ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಬಿನ್ನಮತೀಯ ಶಾಸಕ ಶಿವರಾಮ್ ಹೆಬ್ಬಾರ್ ಕಾಂಗ್ರೆಸ್ ಸೇರುವ ಕುರಿತು ಸುಳಿವು ನೀಡಿದ್ದಾರೆ.
ಇಂದು ಸಂಜೆ ಯಲ್ಲಾಪುರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎಸ್.ಟಿ.ಸೋಮಶೇಖರ್ ಮಾತು ಸತ್ಯ ಇರಬಹುದು. ಸೋಮಶೇಖರ್ ಅವರ ಮಾತು ನೋಡಿದರೆ ಅವರಿಗೆ ಖಚಿತ ಮಾಹಿತಿ ಇರಬಹುದು. ಹಾಗಾಗಿ, ಸೋಮಶೇಖರ್ ಮಾತಿನಲ್ಲಿ ಸತ್ಯತೆ ಇರುತ್ತದೆ ಎಂದು ಹೇಳಿದ್ದಾರೆ.
ಈ ಬಗ್ಗೆ ಮಾತನಾಡಲು ಸೋಮಶೇಖರ್ ಅವರಿಗೆ ಪೋನ್ ಕರೆ ಮಾಡಿದ್ದೆ, ಆದ್ರೆ ಕರೆಗೆ ಸಿಕ್ಕಿಲ್ಲ. ನಾನು ಬಿಜೆಪಿಯಿಂದ ಒಂದು ಕಾಲನ್ನು ಹೊರಗೆ ಇಟ್ಟಿದ್ದೇನೆ ಅಂತಾನಾದ್ರೂ ಬರೆದುಕೊಳ್ಳಿ, ಎರಡು ಕಾಲು ಹೊರಗೆ ಇಟ್ಟಿದ್ದೇನೆ ಅಂತಾನಾದ್ರೂ ಬರೆದುಕೊಳ್ಳಿ, ನಿಮ್ಮ ವಿವೇಚನೆಗೆ ಸೇರಿದ್ದು. ನಮ್ಮ ನಿರ್ಣಯ ನಮ್ಮ ಮುಖಂಡರ ಜತೆ ಚರ್ಚೆ ಮಾಡಿ ತೆಗೆದುಕೊಳ್ಳುತ್ತೇನೆ. ಇದು ರಾಜಕಿಯ ಕ್ಷೇತ್ರ, ಯಾವ ಸಂದರ್ಭ, ಯಾವ ನಿರ್ಣಯ ಕೈಗೊಳ್ಬೇಕು ಎಂಬುದು ನಮಗೆ ಗೊತ್ತು ಎಂದು ತಿಳಿಸಿದ್ದಾರೆ.
ಉಪಚುನಾವಣೆಗೆ ಕಾಲ ಪಕ್ವವಾಗಿಲ್ಲ. ನಾನು ಯಾವ ಪಕ್ಷದ ಚುನಾವಣೆ ಪ್ರಚಾರಕ್ಕೂ ಹೋಗಿಲ್ಲ. ಬೊಮ್ಮಾಯಿ ಅವರು ನನಗೆ ಆತ್ಮೀಯರಾಗಿದ್ದು, ಪ್ರಚಾರಕ್ಕೆ ಕರೆದರೆ ಆಲೋಚನೆ ಮಾಡಿ ನಿರ್ಣಯಿಸುತ್ತೇನೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಡಾ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಅವರು, ಮುಡಾ ಪ್ರಕರಣ ನ್ಯಾಯಾಂಗ ತನಿಖೆಯಲ್ಲಿದ್ದು, ಸತ್ಯಾಸತ್ಯತೆ ಗೊತ್ತಾಗುತ್ತದೆ. ಈ ಪ್ರಕರಣದ ಬಗ್ಗೆ ನಾವು ಮಾತನಾಡುವುದಿಲ್ಲ. ಸಿದ್ದರಾಮಯ್ಯ ಅವರು ಸಾರ್ವಜನಿಕ ಜೀವನದಲ್ಲಿ ದೊಡ್ಡ ಕೆಲಸಗಳನ್ನು ಮಾಡಿದ್ದಾರೆ. ಅವರು ಯಾವತ್ತೂ ಇಂತಹ ಆರೋಪಗಳಿಗೆ ಒಳಗಾಗಿಲ್ಲ. ಸಿದ್ಧರಾಮಯ್ಯ ಮೇಲಿರುವ ಆರೋಪ ನ್ಯಾಯಾಂಗ ತನಿಖೆಯಿಂದ ಗೊತ್ತಾಗುತ್ತೆ. ಸಿಎಂ ಅವರು ಒಬ್ಬರೇ ತೆಗೆದುಕೊಂಡಿದ್ದಾರಾ? ಬೇರೆ ಬೇರೆ ರಾಜಕೀಯ ಮುಖಂಡರು ತೆಗೆದುಕೊಂಡಿದ್ದಾರಾ ಎಂಬುದು ಗೊತ್ತಾಗಲಿದೆ ಎಂದರು.
ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಶಾಸಕ ಸತೀಶ ಸೈಲ್ ಅವರಿಗೆ ಶಿಕ್ಷೆ ಪ್ರಕಣ ಆದೇಶ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನ್ಯಾಯಾಂಗದ ನಿರ್ಣಯವನ್ನು ಪ್ರಶ್ನೆ ಮಾಡುವ ಅಧಿಕಾರ ಯಾರಿಗೂ ಇಲ್ಲ. ನ್ಯಾಯಾಲಯದ ಬಗ್ಗೆ ಮಾತನಾಡುವಂತಹ ಅಧಿಕಾರವು ನಮಗಿಲ್ಲ. ನ್ಯಾಯಾಲಯದ ತೀರ್ಪಿಗೆ ನಾವು ಗೌರವ ಕೊಡಲೇಬೇಕು. ಆದರೆ, ಅದಕ್ಕಿಂತಲೂ ಮೇಲಿನ ನ್ಯಾಯಾಲಯದಲ್ಲಿ ಪ್ರಶ್ನೆ ಮಾಡುವ ಅವಕಾಶವಿದೆ. ಸೈಲ್ ಅವರಿಗೆ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ ಎಂದು ತಿಳಿಸಿದರು.
ಬಿಜೆಪಿ ಆಡಳಿತದಲ್ಲಿ ಎಸ್.ಟಿ.ಸೋಮಶೇಖರ್ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು. ಈ ವೇಳೆ ಸೋಮಶೇಖರ್ ಜೊತೆ ರಾಜೀವ್ ಆಪ್ತರಾಗಿದ್ದರು.
ಈಗಾಗಲೇ ಕಾಂಗ್ರೆಸ್ ನಾಯಕರ ಜೊತೆ ಎಸ್.ಟಿ.ಸೋಮಶೇಖರ್ ಕಾಣಿಸಿಕೊಳ್ಳುತ್ತಿದ್ದಾರೆ. ರಾಜ್ಯಸಭಾ ಚುನಾವಣಾ ಸಂದರ್ಭದಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಮತ ಚಲಾಯಿಸಿದ್ದರು. ಈಗ ಎಸ್‌ಟಿಎಸ್ ನೇತೃತ್ವದಲ್ಲಿ ಆಪ್ತ ಕಾಂಗ್ರೆಸ್ ಸೇರ್ಪಡೆಯಾಗುತ್ತಿರುವುದು ಚರ್ಚೆ ಹುಟ್ಟುಹಾಕಿದೆ. ಇದನ್ನೂ ಓದಿ: ಹಾಟ್ ಫೋಟೋ ಹಾಕಿ ಕೆಣಕಿದ್ದ ಸುಪ್ರಿಯಾಗೆ ಕಂಗನಾ ತಿರುಗೇಟು
ಎಸ್.ಟಿ.ಸೋಮಶೇಖರ್ ಅವರು ಬಿಜೆಪಿ ಸೇರಿದ ಮೇಲೆ ಡಿ.ಕೆ.ಶಿವಕುಮಾರ್ ಜೊತೆ ಕಾಣಿಸಿಕೊಳ್ಳುತ್ತಿರುವುದು ಇದೇ ಮೊದಲೇನಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಸೋಮಶೇಖರ್ ಹಲವು ಕಾರ್ಯಕ್ರಮಗಳಲ್ಲಿ ಡಿಕೆಶಿ ಜೊತೆ ಕಾಣಿಸಿಕೊಂಡಿದ್ದಾರೆ.
ಕಾಂಗ್ರೆಸ್ ಸರ್ಕಾರದ ಬಜೆಟ್ ಬಗ್ಗೆ ವಿಪಕ್ಷಗಳು ಟೀಕೆ ವ್ಯಕ್ತಪಡಿಸಿದ್ದವು. ಆದರೆ ಸೋಮಶೇಖರ್ ಅವರು ಬಜೆಟ್ ಜನಪರ, ಅಭಿವೃದ್ಧಿ ಪರವಾಗಿದೆ ಎಂದು ಬಣ್ಣಿಸಿದ್ದರು. ಅವರ ರಾಜಕೀಯ ನಡೆ ಕುತೂಹಲ ಮೂಡಿಸಿದೆ.
ಬೆಂಗಳೂರು: ಬಿಜೆಪಿ (BJP) ಶಾಸಕರನ್ನ ಆಪರೇಷನ್ ಹಸ್ತದ (Operation Hasta) ಮೂಲಕ ಸೆಳೆಯುವ ‘ಕೈ’ ಪ್ರಯತ್ನಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಎಂಟ್ರಿಯಾಗುವ ಸಾಧ್ಯತೆ ಇದೆ.
ಕಾಂಗ್ರೆಸ್ (Congress) ಆಪರೇಷನ್ ಪ್ರಯತ್ನಕ್ಕೆ ಅಮಿತ್ ಶಾ ಅಡ್ಡಿಯಾಗುವ ಸಾಧ್ಯತೆ ಇದೆ. ಶಾಸಕ ಎಸ್.ಟಿ. ಸೋಮಶೇಖರ್ (S.T.Somashekar) ಆಪರೇಷನ್ ಕಮಲಕ್ಕೆ ಒಳಗಾಗಬಹುದು ಎಂಬ ಅನುಮಾನಗಳ ನಡುವೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಎಂಟ್ರಿ ಆಗುವ ಸಾಧ್ಯತೆ ಇದೆ. ಇದನ್ನೂ ಓದಿ: ಮೇಕೆನೂ ಇಲ್ಲ, ದಾಟು ಇಲ್ಲ: ಡಿಕೆಶಿ ವಿರುದ್ಧ ಅಶೋಕ್ ಲೇವಡಿ
ಸೆಪ್ಟೆಂಬರ್ 2 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ, ಶಾಸಕ ಎಸ್.ಟಿ. ಸೋಮಶೇಖರ್ ಭೇಟಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಶಾಸಕ ಎಸ್.ಟಿ. ಸೋಮಶೇಖರ್ ಸೆಪ್ಟೆಂಬರ್ 2 ರಂದು ಅಮಿತ್ ಶಾ ಭೇಟಿಗೆ ಸಮಯ ನಿಗದಿಯಾಗಿದ್ದು, ದೆಹಲಿಯಲ್ಲಿ ಭೇಟಿಯಾಗಲಿದ್ದಾರೆ ಎನ್ನಲಾಗಿದೆ.
ಇನ್ನೊಂದು ಕಡೆ ಎಸ್.ಟಿ. ಸೋಮಶೇಖರ್‌ಗೆ ಬಿ.ಎಲ್. ಸಂತೋಷ್ ದೆಹಲಿಗೆ ಬುಲಾವ್ ನೀಡಿದ್ದಾರೆ. ಮಾಜಿ ಶಾಸಕ ನಿರ್ಮಲ್ ಕುಮಾರ್ ಸುರಾನ ಮೂಲಕ ದೆಹಲಿಗೆ ಕರೆತರಲು ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ನಿರ್ಮಲ್ ಕುಮಾರ್ ಸುರಾನ ಹಾಗೂ ಎಸ್.ಟಿ.ಸೋಮಶೇಖರ್, ಬಿ.ಎಲ್.ಸಂತೋಷ್ ಭೇಟಿಗೆ ದೆಹಲಿಗೆ ತೆರಳಲಿದ್ದಾರೆ. ಆಗಸ್ಟ್ 25 ರಂದು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಡಿಕೆ ಶಿವಕುಮಾರ್ ಲೂಟಿ ಹೊಡೆಯೋದು ಬಿಟ್ಟರೆ ತಮ್ಮನಾಗಿ ಸ್ವೀಕಾರ ಮಾಡ್ತೀನಿ: ಕುಮಾರಸ್ವಾಮಿ ಷರತ್ತು
ಬೆಂಗಳೂರು: ನಾನು ಸಹಕಾರ ಕ್ಷೇತ್ರದಲ್ಲಿ ಬೆಳೆಯಬೇಕಾದರೆ ನನ್ನ ಗುರುಗಳಾದ ಡಿ.ಕೆ. ಶಿವಕುಮಾರ್ (D.K. Shivakumar) ಕಾರಣ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್ (S.T. Somashekar) ಹೇಳಿದರು.
ಕೆಂಪೇಗೌಡ ಬಡಾವಣೆ ವೀಕ್ಷಣೆ ವೇಳೆ ಡಿಸಿಎಂ ಡಿಕೆಶಿ ಅವರನ್ನು ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್ ಹಾಡಿ ಹೊಗಳಿದ್ದಾರೆ. ನಾನು ಸಹಕಾರ ಕ್ಷೇತ್ರದಲ್ಲಿ ಹೆಸರು ಮಾಡುವುದಕ್ಕೆ ನನ್ನ ಗುರುಗಳಾದ ಡಿ.ಕೆ. ಶಿವಕುಮಾರ್ ಕಾರಣ ಎಂದರು. ಇದನ್ನೂ ಓದಿ: ರಾಜ್ಯ ಸರ್ಕಾರಕ್ಕೆ ಅಸ್ಥಿರತೆ ಕಾಡುತ್ತಿದೆ: ಯಡಿಯೂರಪ್ಪ
ಉತ್ತರಹಳ್ಳಿ ಕ್ಷೇತ್ರದ ಶಾಸಕ ಆಗಬೇಕು ಅಂತ ನನ್ನನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಿದವರು ಡಿ.ಕೆ. ಶಿವಕುಮಾರ್. ಅವರ ಶ್ರಮದಿಂದ ನಾನು ಇವತ್ತು ಇಂತಹ ವೇದಿಕೆ ಮೇಲೆ ನಿಂತು ಮಾತನಾಡಲು ಕಾರಣವಾಗಿದೆ ಎಂದು ನೆನಪಿಸಿಕೊಂಡರು.
ನಾನು ಈ ಮಟ್ಟಕ್ಕೆ ಬೆಳೆಯಲು 100 ಕ್ಕೆ 100 ಕಾರಣ ಡಿಕೆಶಿ. ನಿಮ್ಮಲ್ಲಿ ಒಳಗೊಂದು ಹೊರಗೊಂದು ಇಲ್ಲ. ನಿಮ್ಮಲ್ಲಿ ಬೆಂಗಳೂರಿನ ಜನ ವಿಶ್ವಾಸ ಇಟ್ಟಿದ್ದಾರೆ. ಅದರಂತೆ ನೀವು ಕೆಲಸ ಮಾಡ್ತಾ ಇದ್ದೀರಿ ಡಿ.ಕೆ. ಶಿವಕುಮಾರ್ ಅವರನ್ನು ಕೊಂಡಾಡಿದ್ದಾರೆ. ಇದನ್ನೂ ಓದಿ: ಜೆಡಿಎಸ್ ಸರ್ಕಾರ ಇದ್ದಾಗಲೆಲ್ಲಾ ಭ್ರಷ್ಟಾಚಾರ ಇತ್ತು: ಡಾ.ಶರಣ ಪ್ರಕಾಶ್ ಪಾಟೀಲ್
– ರೈತರಿಗೆ ಕೆಎಂಎಫ್‌ನಿಂದ ಹಾಲಿ ಪ್ರೋತ್ಸಾಹ ಧನ ರೂಪದಲ್ಲಿ ರೂ.339.00 ಕೋಟಿಗಳು ಬಾಕಿ – ಮಂಡ್ಯ ಜಿಲ್ಲೆಯ ಹಾಲು ಉತ್ಪಾದಕರಿಗೆ 36.55 ಕೋಟಿ ರೂ. ಬಾಕಿ – ಶಾಸಕ ದಿನೇಶ್ ಗೂಳಿಗೌಡ ಪ್ರಶ್ನೆಗೆ ಉತ್ತರ ನೀಡಿರುವ ಸಹಕಾರ ಸಚಿವರು
ಬೆಳಗಾವಿ: ಹಾಲು ಉತ್ಪಾದಕ ರೈತರಿಗೆ ಪ್ರಸ್ತುತ ನೀಡುತ್ತಿರುವ 5 ರೂಪಾಯಿ ಪ್ರೋತ್ಸಾಹ ಧನವನ್ನು ಏರಿಕೆ ಮಾಡುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎಂದು ರಾಜ್ಯ ಸರ್ಕಾರ (Karnataka Government) ಸ್ಪಷ್ಟಪಡಿಸಿದೆ.
ಈ ಸಂಬಂಧ ಸ್ಥಳೀಯ ಸಂಸ್ಥೆಗಳ ಮಂಡ್ಯ ಕ್ಷೇತ್ರದ ಶಾಸಕ ದಿನೇಶ್ ಗೂಳಿಗೌಡ (Dinesh Guligowda) ಅವರು ಸದನದಲ್ಲಿ ಕೇಳಿರುವ ಪ್ರಶ್ನೆಗೆ ಉತ್ತರಿಸಿರುವ ಸರ್ಕಾರ, ಸದ್ಯಕ್ಕೆ ಅಂತಹ ಯಾವುದೇ ಉದ್ದೇಶ ಇಲ್ಲ. ಹಾಲಿ ಎಲ್ಲ ರೈತರಿಗೆ ಈಗ ನಿಗದಿ ಮಾಡಿರುವ ಐದು ರೂಪಾಯಿಯನ್ನು ನೀಡುತ್ತಾ ಬಂದಿದೆ ಎಂದು ಸ್ಪಷ್ಟಪಡಿಸಿದೆ. ಇದನ್ನೂ ಓದಿ: ರಾಜ್ಯಗಳ ಪುನರ್ ವಿಂಗಡಣಾ ಕಾಯ್ದೆ: ಭಾಷಾವಾರು ಪ್ರಾಂತ್ಯಗಳ ರಚನೆಯೇ ಅಂತಿಮ – ಸಿಎಂ
ಹಾಲು ಉತ್ಪಾದಕರಿಗೆ ಸರ್ಕಾರ 5 ರೂಪಾಯಿಗಳ ಪ್ರೋತ್ಸಾಹ ಧನವನ್ನು ಪ್ರತಿ ತಿಂಗಳು ನೀಡಲಾಗುತ್ತಿದೆಯೇ? ಪ್ರಸ್ತುತ ನೀಡುತ್ತಿರುವ 5 ರೂಪಾಯಿ ಪ್ರೋತ್ಸಾಹ ಧನವನ್ನು ಹೆಚ್ಚಿಸುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ ಸಂಬಂಧ ಸ್ಥಳೀಯ ಸಂಸ್ಥೆಗಳ ಮಂಡ್ಯ ಕ್ಷೇತ್ರದ ಶಾಸಕ ದಿನೇಶ್ ಗೂಳಿಗೌಡ ಅವರು ಕೇಳಿದ್ದ ಪ್ರಶ್ನೆಗೆ ಸದನದಲ್ಲಿ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ (S.T.Somshekar) ಉತ್ತರಿಸಿದ್ದಾರೆ.
339.00 ಕೋಟಿ ರೂ. ಪ್ರೋತ್ಸಾಹಧನ ಬಾಕಿ
ಜಿಲ್ಲೆಯ ಹಾಲು ಉತ್ಪಾದಕರಿಗೆ ಸರ್ಕಾರ ನೀಡುತ್ತಿರುವ ಪ್ರೋತ್ಸಾಹ ಧನ ಉಳಿಸಿಕೊಳ್ಳಲಾಗಿದೆಯೇ? ಉಳಿಸಿಕೊಂಡಿದ್ದರೆ ಮೊತ್ತವೆಷ್ಟು ಮತ್ತು ಯಾವಾಗ ಬಾಕಿ ಮೊತ್ತವನ್ನು ನೀಡಲಾಗುವುದು ಎಂದು ಶಾಸಕ ದಿನೇಶ್ ಗೂಳಿಗೌಡ ಅವರು ಪ್ರಶ್ನೆ ಮಾಡಿದ್ದರು. ಇದಕ್ಕೆ ಸಾಮಾನ್ಯ ವರ್ಗದ ಹೈನುಗಾರಿಕೆ ಸೆಪ್ಟೆಂಬರ್, ಅಕ್ಟೋಬರ್ ಮತ್ತು ನವೆಂಬರ್ 2022ರಲ್ಲಿ ಹಾಲಿ ಪ್ರೋತ್ಸಾಹ ಧನ 339.00 ಕೋಟಿ ರೂ. ಬಾಕಿಯಿರುತ್ತದೆ. ನವೆಂಬರ್-2022ರ ತಿಂಗಳಲ್ಲಿ ಪರಿಶಿಷ್ಟ ಜಾತಿ ವರ್ಗದ ಹೈನುಗಾರರಿಗೆ 5.00 ಕೋಟಿ ರೂ. ಮತ್ತು ಪರಿಶಿಷ್ಟ ಪಂಗಡ ವರ್ಗದ ಹೈನುಗಾರರಿಗೆ 3.00 ಕೋಟಿಗಳನ್ನು ಪಾವತಿಸಲು ಬಾಕಿಯಿರುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹೊಸವರ್ಷದ ಮೊದಲ ವಾರದಲ್ಲೇ KPTCL ಎಇ, ಜೆಇ ನೇಮಕ ಪರೀಕ್ಷೆ ಫಲಿತಾಂಶ: ಸುನೀಲ್ ಕುಮಾರ್
ಮಂಡ್ಯ ಜಿಲ್ಲೆಯಲ್ಲಿ ಸೆಪ್ಟೆಂಬರ್, ಅಕ್ಟೋಬರ್ ಮತ್ತು ನವೆಂಬರ್ ತಿಂಗಳಿನಲ್ಲಿ ರೈತರಿಗೆ 36.55 ಕೋಟಿ ರೂಪಾಯಿ ಬಾಕಿ ಪ್ರೋತ್ಸಾಹಧನ ನೀಡಬೇಕಿದೆ. ಮಂಡ್ಯ ಹಾಲು ಒಕ್ಕೂಟದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಒಟ್ಟು ನೌಕರರ ಸಂಖ್ಯೆ ಎಷ್ಟು ಎಂಬ ಪ್ರಶ್ನೆಗೆ, 267 ಮಂದಿ ಕಾಯಂ ನೌಕರರು ಕಾರ್ಯನಿರ್ವಹಣೆ ಮಾಡುತ್ತಿದ್ದು, ಗುತ್ತಿಗೆ ಆಧಾರದಲ್ಲಿ 1,057 ಮಂದಿ ಕಾರ್ಮಿಕರು ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ ಎಂಬ ಮಾಹಿತಿಯನ್ನು ರಾಜ್ಯ ಸರ್ಕಾರ ನೀಡಿದೆ.
ಈ ಸಹಕಾರ ಸಂಘಗಳು ಸ್ವಂತ ಕಟ್ಟಡಗಳನ್ನು ಹೊಂದಿದೆಯೇ ಅಥವಾ ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿದೆಯೇ? ಹಾಗಿದ್ದಲ್ಲಿ, ಅವುಗಳ ಒಟ್ಟು ಸಂಖ್ಯೆ ಎಷ್ಟು ಎಂದು ಶಾಸಕ ದಿನೇಶ್ ಗೂಳಿಗೌಡ ಅವರು ಕೇಳಿರುವ ಪ್ರಶ್ನೆಗೆ, ಒಕ್ಕೂಟದ ವ್ಯಾಪ್ತಿಯ ಒಟ್ಟು 1,276 ಹಾಲು ಉತ್ಪಾದಕರ ಸಹಕಾರ ಸಂಘಗಳ ಪೈಕಿ 777 ಹಾಲು ಉತ್ಪಾದಕರ ಸಹಕಾರ ಸಂಘಗಳು ಸ್ವಂತ ಕಟ್ಟಡ ಹೊಂದಿದ್ದು, ಉಳಿದ 499 ಸಂಘಗಳು ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂದು ಸರ್ಕಾರ ಮಾಹಿತಿ ನೀಡಿದೆ. ಇದನ್ನೂ ಓದಿ: ಜಿಲ್ಲಾ ಕೇಂದ್ರಗಳಲ್ಲಿ ಉದ್ಯಮಿಯಾಗು-ಉದ್ಯೋಗ ನೀಡು ಕಾರ್ಯಾಗಾರ: ಸಚಿವ ನಿರಾಣಿ
ಮಂಡ್ಯ ಹಾಲು ಒಕ್ಕೂಟದಿಂದ ಪ್ರತಿ ದಿನ ಬೆಳಗ್ಗೆ ಮತ್ತು ಸಂಜೆ ಎಷ್ಟು ಲೀಟರ್ ಹಾಲನ್ನು ಖರೀದಿ ಮಾಡಲಾಗುತ್ತದೆ ಎಂಬ ಶಾಸಕರ ಪ್ರಶ್ನೆಗೆ ಉತ್ತರಿಸಿರುವ ಸಚಿವರು, ಮಂಡ್ಯ ಹಾಲು ಒಕ್ಕೂಟವು 2022-23ನೇ ಸಾಲಿನಲ್ಲಿ ನವೆಂಬರ್- 2022ರ ಮಾಹೆಯ ಅಂತ್ಯಕ್ಕೆ ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ಸರಾಸರಿ 8,99,048 ಲೀಟರ್ ಹಾಲನ್ನು ರೈತರಿಂದ ಖರೀದಿಸಲಾಗಿದೆ ಎಂದು ಉತ್ತರ ನೀಡಿದ್ದಾರೆ. ಶೀಘ್ರವಾಗಿ ಪ್ರೋತ್ಸಾಹ ಧನವನ್ನು DBT ಮುಖೇನ ನೇರವಾಗಿ ಹಾಲು ಉತ್ಪಾದಕರ ಆಧಾರ್ ಜೋಡಣೆ ಬ್ಯಾಂಕ್ ಖಾತೆಗೆ ಪಾವತಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಪ್ರಭು ಚವ್ಹಾಣ್ (Prabhu Chauhan) ತಿಳಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಸಹಕಾರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಬೆಂಗಳೂರು ವಿಭಾಗದ 9 ಜಿಲ್ಲೆಗಳ 54 ಸಹಕಾರಿಗಳಿಗೆ ‘ಸಹಕಾರ ರತ್ನ’ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
ಕೆಂಗೇರಿ ಉಪನಗರದ ಗಣೇಶ ಮೈದಾನದಲ್ಲಿ ಹಮ್ಮಿಕೊಂಡಿದ್ದ 69ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ವಿಧಾನಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwar Hegde Kageri) ಅವರು ಕಾರ್ಯಕ್ರಮ ಉದ್ಘಾಟಿಸಿ ಪ್ರಶಸ್ತಿ ಪ್ರದಾನ ಮಾಡಿದರು. ಕಾರ್ಯಕ್ರಮ ಉದ್ಘಾಟನೆಗೂ ಮುನ್ನ ಗೋಪೂಜೆ ನೆರವೇರಿಸಿ ಸಹಕಾರಿ ಧ್ವಜಾರೋಹಣ ಮಾಡಿದರು. ಇದೇ ವೇಳೆ ಯಶಸ್ವಿನಿ ಯೋಜನೆಯ ಫಲಾನುಭವಿಗಳಿಗೆ ಯಶಸ್ವಿನಿ ಕಾರ್ಡ್ ವಿತರಿಸಲಾಯಿತು. ಬಳಿಕ ಸಹಕಾರ ಪತ್ರಿಕೆ ವಿಶೇಷ ಸಂಚಿಕೆಯನ್ನು ಬಿಡುಗಡೆ ಮಾಡಲಾಯಿತು. ಇದನ್ನೂ ಓದಿ: ವೋಟರ್ ಡೇಟಾ ಹಗರಣ ಆರೋಪ – ಕಾಂಗ್ರೆಸ್ ವಿರುದ್ಧ ರಾಜ್ಯ ಮುಖ್ಯಚುನಾವಣಾಧಿಕಾರಿ ಬಿಜೆಪಿ ದೂರು
ಕಾರ್ಯಕ್ರಮದಲ್ಲಿ ಮಾತನಾಡಿದ ಕಾಗೇರಿ, ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಸಹಕಾರ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಉತ್ತಮ ಕಾರ್ಯ ಮಾಡುತ್ತಿದ್ದಾರೆ. ಮೈಸೂರು ಉಸ್ತುವಾರಿ ಸಚಿವರಾಗಿ ಸೋಮಶೇಖರ್ (S.T.Somshekar) ಅವರು ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದ್ದಾರೆ. ವಿಶ್ವವಿಖ್ಯಾತ ಮೈಸೂರು ದಸರಾಗೆ ವಿಶೇಷ ಮೆರುಗು ನೀಡಿದವರು ಎಂದು ಸೋಮಶೇಖರ್ ಅವರ ಕಾರ್ಯವೈಖರಿಯನ್ನು ಕೊಂಡಾಡಿದರು.
ಸಹಕಾರ ಕ್ಷೇತ್ರ ಬಹಳ ದೊಡ್ಡ ಕ್ಷೇತ್ರ. ಸಹಕಾರಿ ರತ್ನ ಪ್ರಶಸ್ತಿ ಪಡೆದ ಹಿರಿಯರು, ಸಹಕಾರಿ ಕ್ಷೇತ್ರದ ಏಳಿಗೆಗೆ ಅಪಾರವಾಗಿ ಶ್ರಮಿಸಿದ್ದಾರೆ. ಸಹಕಾರಿ ಕ್ಷೇತ್ರದಲ್ಲಿನ ಸವಾಲುಗಳನ್ನು ಮೆಟ್ಟಿ ನಿಂತು ಜನಜೀವನಕ್ಕೆ ಬೇಕಾದ ಕೊಡುಗೆಗಳನ್ನು ಕೊಡಲು ಸಹಕಾರಿ ಸಪ್ತಾಹ ಕಾರ್ಯಕ್ರಮ ಸಹಕಾರಿಯಾಗಲಿ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಉತ್ತಮ ಸಲಹೆಗಳನ್ನು ನೀಡಲು ಈ ಸಹಕಾರ ಸಪ್ತಾಹ ಕಾರ್ಯಕ್ರಮ ಸಾಕ್ಷಿಯಾಗಬೇಕು. ಸಹಕಾರಿ ಸಂಘಗಳು ಜನತೆಯ ವಿಶ್ವಾಸ ಗಳಿಸುವುದರ ಜೊತೆಗೆ ಭಾವನಾತ್ಮಕ ಸಂಬಂಧ ಹೊಂದಿವೆ ಎಂದು ಹೇಳಿದರು.
ಸಹಕಾರಿ ಸಂಘಗಳಲ್ಲಿ ಶೂನ್ಯ ಬಡ್ಡಿ ದರದಲ್ಲಿ ಸಾಲ ವಿತರಣೆ, ರಾಜ್ಯದ 6 ಸಾವಿರಕ್ಕಿಂತ ಹೆಚ್ಚು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಗಣಕೀಕರಣ, ಬೀದಿಬದಿ ವ್ಯಾಪಾರಿಗಳಿಗೆ ಆರ್ಥಿಕ ಸಹಾಯ, ಯಶಸ್ವಿನಿ ಯೋಜನೆ ಮರುಜಾರಿ, 33 ಲಕ್ಷ ರೈತರಿಗೆ 24 ಸಾವಿರ ಕೋಟಿ ರೂ. ಸಾಲ ವಿತರಣೆಗೆ ಸೋಮಶೇಖರ್ ಅವರು ಸಾಕಷ್ಟು ಶ್ರಮಿಸುತ್ತಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಗುಜರಾತ್ ಮೂಲದ ಗಣಿ ಉದ್ಯಮಿಗೆ ಶಾಸಕನಿಂದ 9 ಕೋಟಿ ದೋಖಾ ಆರೋಪ
ಯಶವಂತಪುರ ಕ್ಷೇತ್ರದಲ್ಲಿಯೂ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡುತ್ತಿದ್ದಾರೆ. 209 ಕೋಟಿ ರೂ. ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ರಸ್ತೆ, ಮೂಲಸೌಕರ್ಯ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಮಂಚನಬೆಲೆಯಿಂದ ಕುಡಿಯುವ ನೀರು ಕಲ್ಪಿಸುವ ಭಗೀರಥ ಪ್ರಯತ್ನ ಮಾಡಿದ್ದಾರೆ ಎಂದರು.
ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಮಾತನಾಡಿ, ನ.14 ರಿಂದ 20ರವರೆಗೆ ಪ್ರತಿ ವರ್ಷ ಏಳು ದಿನಗಳ ಕಾಲ ಸಹಕಾರ ಸಪ್ತಾಹ ಆಚರಣೆ ಮಾಡಲಾಗುತ್ತದೆ. 20 ವರ್ಷಕ್ಕೂ ಹೆಚ್ಚು ಕಾಲದಿಂದ ಸಹಕಾರ ಸಪ್ತಾಹ ಮಾಡಿಕೊಂಡು ಬಂದಿದ್ದೇನೆ. ಸಹಕಾರ ಮಹಾಮಂಡಳ ಮಾತೃ ಸಂಸ್ಥೆಯಾಗಿ ಕೆಲಸ ಮಾಡುತ್ತಿದೆ. ಸಹಕಾರಿ ಕ್ಷೇತ್ರವನ್ನು ಮುನ್ನಡೆಸುವಲ್ಲಿ ಜಿ.ಟಿ.ದೇವೇಗೌಡ ಅವರು ಸಾಕಷ್ಟು ಶ್ರಮಿಸುತ್ತಿದ್ದಾರೆ ಎಂದು ಹೇಳಿದರು.
ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಹಕಾರದಿಂದ ಸಹಕಾರ ಸಚಿವರಾಗಿ ಕೆಲಸ ಮಾಡುತ್ತಿದ್ದೇನೆ. ಶೂನ್ಯ ಬಡ್ಡಿ ದರದಲ್ಲಿ ರೈತರಿಗೆ ಅತಿಹೆಚ್ಚು ಸಾಲ ನೀಡಿದ್ದು ಬಸವರಾಜ ಬೊಮ್ಮಾಯಿ ಅವರ ಸರ್ಕಾರ. 5,700 ಕೋಟಿ ರೂ. ಸಾಲಮನ್ನಾ ಮಾಡಿದ್ದು ನಮ್ಮ ನೆಚ್ಚಿನ ನಾಯಕರಾದ ಬಿ.ಎಸ್.ಯಡಿಯೂರಪ್ಪ ಎಂದು ಬಣ್ಣಿಸಿದರು.
ಸಾಲ ಮನ್ನಾಕ್ಕಾಗಿ ಬಜೆಟ್‌ನಲ್ಲಿ ಹಣ ಒದಗಿಸಿ ಐತಿಹಾಸಿಕ ತೀರ್ಮಾನ ಮಾಡಿದ್ದು ಯಡಿಯೂರಪ್ಪ ಅವರು. ಕಾಂಗ್ರೆಸ್ ಸರ್ಕಾರ ಯಶಸ್ವಿನಿ ಯೋಜನೆಯನ್ನು ರದ್ದು ಮಾಡಿತು. ಆದರೆ ಬಿಜೆಪಿ ಸರ್ಕಾರ ಅದನ್ನು ಮರುಜಾರಿ ಮಾಡಿದೆ. ಈ ಮೂಲಕ ಲಕ್ಷಾಂತರ ರೈತರಿಗೆ ಅನುಕೂಲ ಆಗಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ಯೋಧರ ವಿರುದ್ಧ ಮೀಡಿಯಾ ಪಾಟ್ನರ್ಸ್‌ಗೆ ಜಯ – ಮಾಧ್ಯಮ ತಂಡಕ್ಕೆ ಸೌಹಾರ್ದ ಕ್ರಿಕೆಟ್ ಕಪ್
ಹಾಲು ಪೂರೈಸುವ ರೈತರಿಗೆ ನಂದಿನಿ ಕ್ಷೀರ ಸಮೃದ್ಧಿ ಬ್ಯಾಂಕ್ ಮುಖಾಂತರ ಸಾಲಸೌಲಭ್ಯ ಕಲ್ಪಿಸಲಾಗುವುದು. ಕ್ಷೇತ್ರದ ಜನತೆಯ ಪ್ರೀತಿ, ವಿಶ್ವಾಸದಿಂದ ಶಾಸಕರಾಗಿ ಆಯ್ಕೆಯಾಗಿ, ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಮೈಸೂರು ಉಸ್ತುವಾರಿ ಸಚಿವರಾಗಿ ಯಶಸ್ವಿಯಾಗಿ ದಸರಾ ಆಚರಣೆ ಮಾಡಲಾಯಿತು. ಸರ್ಕಾರ, ಪಕ್ಷಕ್ಕೆ ಮುಜುಗರವಾಗದಂತೆ ಕೆಲಸ ಮಾಡಿದ್ದೇನೆ. ಯಶವಂತಪುರ ಜನತೆಯ ಪ್ರೀತಿ ವಿಶ್ವಾಸ ಉಳಿಸಿಕೊಂಡಿದ್ದೇನೆ. ದ್ವೇಷದ ರಾಜಕಾರಣ ಮಾಡಿಲ್ಲ, ಮಾಡುವುದಿಲ್ಲ ಎಂದರು.
ಕ್ಷೇತ್ರದ ಡಾಂಬರೀಕರಣಕ್ಕೆ 200 ಕೋಟಿ ಹಣ ಬಿಡುಗಡೆ ಮಾಡಲಾಗಿದೆ. ರಾಜಕಾಲುವೆ ಸಮಸ್ಯೆ ಬಗೆಹರಿಸಲು 120 ಕೋಟಿ ಅನುದಾನ ಬಿಡುಗಡೆ ಆಗಿದೆ. ವಿಶ್ವೇಶ್ವರಯ್ಯ, ಬನಶಂಕರಿ 6ನೇ ಹಂತದ ಅಭಿವೃದ್ಧಿಗೆ 208 ಕೋಟಿ ಹಣ ಬಿಡುಗಡೆಯಾಗಿದೆ. ಕಾವೇರಿ ನೀರು ಪೂರೈಕೆ ಕಾಮಗಾರಿ ಆರಂಭವಾಗಿದೆ. ಮಂಚನಬೆಲೆಯಿಂದ 72 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಕೆ ಕಾಮಗಾರಿ ಕೈಗೆತ್ತುಕೊಳ್ಳಲಾಗಿದೆ ಎಂದು ಹೇಳಿದರು. ನಂತರ ಸಹಕಾರ ಮಹಾಮಂಡಳದ ಅಧ್ಯಕ್ಷ ಜಿ.ಟಿ.ದೇವೇಗೌಡ ಅವರು ಮಾತನಾಡಿದರು.
Live Tv
[brid partner=56869869 player=32851 video=960834 autoplay=true]
ಮೈಸೂರು: ಜಿಲ್ಲೆಯಲ್ಲಿ ಪರಿಹಾರ ಕಾಮಗಾರಿ ಕೈಗೊಳ್ಳಲು ಜಿಲ್ಲಾಧಿಕಾರಿಗಳ ಪ್ರಸ್ತಾವನೆಯಂತೆ 283 ಕೋಟಿ ರೂ. ಅನುದಾನ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಗಳಿಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಮನವಿ ಸಲ್ಲಿಸಿದ್ದಾರೆ.
ನಗರ ಮತ್ತು ಜಿಲ್ಲಾದ್ಯಂತ ಇತ್ತೀಚೆಗೆ ಸುರಿದ ಭಾರಿ ಮಳೆಯಿಂದ ಉಂಟಾದ ಹಾನಿ ಸಂಬಂಧ ಪರಿಹಾರ ಕಾಮಗಾರಿ ಕೈಗೊಳ್ಳಬೇಕಾಗಿರುವ 48 ಕಾಮಗಾರಿಗಳಿಗೆ 152.5 ಕೋಟಿ ರೂ. ಹಾಗೂ ಮೈಸೂರು ನಗರ ಒಳಚರಂಡಿ ಸುಧಾರಣೆ ಸಂಬಂಧ 35 ಕಾಮಗಾರಿಗೆ 130.85 ಕೋಟಿ ರೂ. ಸೇರಿದಂತೆ ಒಟ್ಟು 283.35 ಕೋಟಿ ರೂ. ವಿಶೇಷ ಅನುದಾನವನ್ನು ಬಿಡುಗಡೆ ಮಾಡಿ, ತುರ್ತಾಗಿ ಕಾಮಗಾರಿಗಳನ್ನು ಕೈಗೊಳ್ಳಲು ಕ್ರಮವಹಿಸುವಂತೆ ಕೋರಿದ್ದಾರೆ. ಇದನ್ನೂ ಓದಿ: ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡು ಪರಸ್ಪರರನ್ನು ಹಾಡಿ ಹೊಗಳಿಕೊಂಡ ಸಿದ್ದು-ಜಿಟಿಡಿ
ಮೈಸೂರಿನಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆಯಿಂದ ಉಂಟಾದ ಹಾನಿ ಕುರಿತು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ನವೆಂಬರ್ 1ರಂದು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಸಭೆ ನಡೆಸಿ, ಕೂಡಲೇ ತುರ್ತು ಪರಿಹಾರ ಕಾಮಗಾರಿಗೆ ಬೇಕಾದ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದರು. ಇದನ್ನೂ ಓದಿ: ಮುಂಬರುವ ಚುನಾವಣೆಗೆ ಪಕ್ಷ ಬಲಪಡಿಸುವುದಕ್ಕೆ ಜನ ಸ್ವರಾಜ್ ಯಾತ್ರೆ: ಬಿ.ಸಿ ಪಾಟೀಲ್
ಈ ಹಿನ್ನೆಲೆಯಲ್ಲಿ ಮಳೆ ಹಾನಿ ಸಂಬಂಧ ತುರ್ತಾಗಿ ಕೈಗೊಳ್ಳಬೇಕಾಗಿರುವ 48 ಕಾಮಗಾರಿಗೆ 152.50 ಕೋಟಿಗೆ ಹಾಗೂ ಮೈಸೂರು ನಗರದಲ್ಲಿ ಒಳಚರಂಡಿ ತ್ಯಾಜ್ಯ ನೀರು ಮಳೆ ನೀರು ಚರಂಡಿಯಲ್ಲಿ ಹರಿಯುತ್ತಿರುವುದನ್ನು ತಪ್ಪಿಸಿ, ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳಿಗೆ ಸಾಗಿಸಲು ಕೈಗೊಳ್ಳಬೇಕಾಗಿರುವ 35 ಕಾಮಗಾರಿಗೆ 130.35 ಕೋಟಿ ಅನುದಾನಕ್ಕೆ ಜಿಲ್ಲಾಧಿಕಾರಿಗಳು ಪತ್ರ ಬರೆದಿದ್ದಾರೆ.
ಈ ಕಾಮಗಾರಿಗಳನ್ನು ತೆಗೆದುಕೊಳ್ಳಲು ವಿಶೇಷ ಅನುದಾನ ಬಿಡುಗಡೆ ಮಾಡುವಂತೆ ಉಸ್ತುವಾರಿ ಸಚಿವರು ಮುಖ್ಯಮಂತ್ರಿಯವರಿಗೆ ಕೋರಿದ್ದಾರೆ.
ನಂಜನಗೂಡು: ಬಲಿಪಾಡ್ಯಮಿ ದಿನವಾದ ಶುಕ್ರವಾರ ಸಚಿವ ಎಸ್.ಟಿ.ಸೋಮಶೇಖರ್ ಅವರು ನಂಜುಂಡೇಶ್ವರ ದೇವಸ್ಥಾನದಲ್ಲಿ ಗೋವುಗಳಿಗೆ ಪೂಜೆ ಸಲ್ಲಿಸಿದರು.
ದೀಪಾವಳಿ ಹಬ್ಬದ ಪ್ರಯುಕ್ತ ನಂಜನಗೂಡಿಗೆ ಆಗಮಿಸಿದ ಸಚಿವರು ನಂಜುಂಡೇಶ್ವರನ ಸನ್ನಿಧಾನದಲ್ಲಿ ಗೋವುಗಳಿಗೆ ಹಾರ ಹಾಕಿ ಪೂಜೆ ಸಲ್ಲಿಸಿದರು. ನಂತರ ನಂಜುಂಡೇಶ್ವರನಿಗೆ ಪೂಜೆ ಸಲ್ಲಿಸಿದರು. ಇದನ್ನೂ ಓದಿ: ಸ್ವರ್ಗದಲ್ಲಿ ಅಪ್ಪ, ಅಮ್ಮನೊಂದಿಗೆ ಪುನೀತ್ – ಫೋಟೋ ವೈರಲ್
ಬಳಿಕ ದಕ್ಷಿಣ ಕಾಶಿ ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನದ ಬಳಿ ಹಮ್ಮಿಕೊಂಡಿದ್ದ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಉತ್ತರಾಖಂಡದ ಕೇದಾರನಾಥದಲ್ಲಿ ಆದಿ ಶಂಕರಾಚಾರ್ಯರ ನವೀಕೃತ ಪ್ರತಿಮೆ ಉದ್ಘಾಟನೆ ಮಾಡಿದ ನೇರ ಪ್ರಸಾರದ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಕೇದಾರನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ ಶಂಕರಾಚಾರ್ಯರ ಪ್ರತಿಮೆಯನ್ನು ಕೆತ್ತಿದ್ದು ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಎಂಬುದನ್ನು ತಿಳಿದು ಸಚಿವರು ಸಂತಸ ವ್ಯಕ್ತಪಡಿಸಿದರು. 12 ಅಡಿ ಎತ್ತರ, 35 ಟನ್ ತೂಕದ ಕುಳಿತ ಭಂಗಿಯಲ್ಲಿರುವ ಶಂಕರಾಚಾರ್ಯರ ಪ್ರತಿಮೆಗೆ ಹೆಗ್ಗಡದೇವನಕೋಟೆಯಿಂದ 120 ಟನ್ ಕೃಷ್ಣ ಶಿಲೆ ಬಳಸಿದ ವಿಚಾರ ತಿಳಿದು ಖುಷಿಪಟ್ಟರು. ಇದನ್ನೂ ಓದಿ: ವಿಜಯಪುರದಲ್ಲಿ ಮತ್ತೆ ಸರಣಿ ಭೂಕಂಪದ ಅನುಭವ
14 ಲಕ್ಷ ರೈತರಿಗೆ 10203.52 ಕೋಟಿ ರೂ. ಸಾಲ
ದೇವಸ್ಥಾನದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಅಲ್ಪಾವಧಿ, ಮಧ್ಯಮಾವಧಿ ಹಾಗೂ ದೀರ್ಘಾವಧಿ ಸಾಲ ನೀಡಲಾಗುತ್ತಿದೆ. 30 ಲಕ್ಷ ರೈತರಿಗೆ 20810 ಕೋಟಿ ರೂ. ಸಾಲ ವಿತರಣೆ ಗುರಿ ನೀಡಲಾಗಿದ್ದು, ಇದರಲ್ಲಿ 14 ಲಕ್ಷ ರೈತರಿಗೆ 10203.52 ಕೋಟಿ ರೂ. ಸಾಲ ನೀಡಲಾಗಿದೆ ಎಂದು ಹೇಳಿದರು.
ಮೈಸೂರು ಜಿಲ್ಲೆಯಲ್ಲಿ ಮಳೆ ಹಾನಿಯಿಂದ ಉಂಟಾಗಿರುವ ನಷ್ಟ ಹಾಗೂ ಕೈಗೊಳ್ಳಬೇಕಾದ ಪರಿಹಾರ ಕಾರ್ಯಗಳ ಬಗ್ಗೆ ಮುಖ್ಯಮಂತ್ರಿ ಜೊತೆ ಮಾತನಾಡಿದ್ದೇನೆ. ಚಾಮುಂಡಿ ಬೆಟ್ಟದಲ್ಲಿ ಮತ್ತೆ ಭೂಕುಸಿತವಾಗಿರುವ ಬಗ್ಗೆ ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಅವರ ಗಮನಕ್ಕೆ ತರಲಾಗಿದೆ ಎಂದರು.
ಈ ಸಂದರ್ಭದಲ್ಲಿ ಶಾಸಕ ಹರ್ಷವರ್ಧನ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಸಚಿವರ ವಿಶೇಷ ಕರ್ತವ್ಯಾಧಿಕಾರಿ ದಿನೇಶ್ ಗೂಳಿಗೌಡ, ಕಾಫಿ ಬೋರ್ಡ್ ಅಧ್ಯಕ್ಷ ಕೃಷ್ಣಪ್ಪಗೌಡ, ಜಿಲ್ಲಾಧ್ಯಕ್ಷೆ ಮಂಗಳ ಸೋಮಶೇಖರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.