Tag: Saanvi Sudeep

  • ಟಾಲಿವುಡ್‌ ಸಿನಿಮಾದಲ್ಲಿ ಸುದೀಪ್‌ ಪುತ್ರಿ ಸಾನ್ವಿ- ಫ್ಯಾನ್ಸ್‌ಗೆ ಗುಡ್‌ ನ್ಯೂಸ್

    ಟಾಲಿವುಡ್‌ ಸಿನಿಮಾದಲ್ಲಿ ಸುದೀಪ್‌ ಪುತ್ರಿ ಸಾನ್ವಿ- ಫ್ಯಾನ್ಸ್‌ಗೆ ಗುಡ್‌ ನ್ಯೂಸ್

    ಟಾಲಿವುಡ್ ನಟ ನಾನಿ (Nani) ಮತ್ತು ಶ್ರೀನಿಧಿ ಶೆಟ್ಟಿ ನಟನೆಯ ‘ಹಿಟ್ 3’ (Hit 3) ಸಿನಿಮಾ ಇದೇ ಮೇ 1ರಂದು ರಿಲೀಸ್‌ಗೆ ಸಜ್ಜಾಗಿದೆ. ಇದೀಗ ಸಂರ್ದಶವೊಂದರಲ್ಲಿ ನಾನಿ ಇಂಟ್ರೆಸ್ಟಿಂಗ್ ವಿಚಾರವೊಂದನ್ನು ರಿವೀಲ್ ಮಾಡಿದ್ದಾರೆ. ಸುದೀಪ್ ಪುತ್ರಿ ಸಾನ್ವಿ ‘ಹಿಟ್ 3’ ಸಿನಿಮಾದಲ್ಲಿ ಕೆಲಸ ಮಾಡಿದ್ದಾರೆ. ಈ ಬಗ್ಗೆ ನಾನಿ ಬಿಗ್ ನ್ಯೂಸ್ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:‘ಮ್ಯಾಕ್ಸ್’ ಖ್ಯಾತಿಯ ಶ್ರೀಧರ್‌ಗೆ ಅನಾರೋಗ್ಯ- ಚಿಕಿತ್ಸೆಗೆ ಸಹಾಯ ಕೋರಿದ ನಟ

    ಸಂದರ್ಶನವೊಂದರಲ್ಲಿ ಸುದೀಪ್ ಜೊತೆಗಿನ ಒಡನಾಟದ ಬಗ್ಗೆ ಬಿಚ್ಚಿಟ್ಟಿದ್ದಾರೆ. ಸುದೀಪ್ ಅವರು ನನ್ನ ಕುಟುಂಬ. ನಿನ್ನೆಯಷ್ಟೇ ನಾವು ಭೇಟಿಯಾಗಿದ್ದೇವು. ಆ ನಂತರ ಅವರು ‘ಬಿಲ್ಲಾ ರಂಗ ಭಾಷಾ’ ಶೂಟಿಂಗ್‌ಗೆ ತೆರಳಿದರು ಎಂದು ಮಾತನಾಡಿದ್ದಾರೆ. ಈ ವೇಳೆ, ನಿರೂಪಕಿಗೆ ನೀವು ‘ಹಿಟ್ 3’ ಟ್ರೈಲರ್ ನೋಡಿದ್ರಾ ಅದರಲ್ಲಿ ಗಾಯಕಿಯ ಧ್ವನಿ ಕೇಳಿಸುತ್ತದೆ. ಅದು ಸಾನ್ವಿಯ (Sanvi Sudeep) ವಾಯ್ಸ್ ಎಂದು ನಾನಿ ರಿವೀಲ್ ಮಾಡಿದ್ದಾರೆ. ಇದನ್ನೂ ಓದಿ:ಪೊರಕೆ ಹಿಡಿದು ಹೊಸ ಅವತಾರದಲ್ಲಿ ಯುವ ಎಂಟ್ರಿ- ‘‌ಎಕ್ಕ’ ಚಿತ್ರದ ಟೀಸರ್‌ ಔಟ್

    ನಾನು ಸಾನ್ವಿ ವಾಯ್ಸ್‌ಗೆ ಅಭಿಮಾನಿ, ಆಕೆ ಅದ್ಭುತ ಹಾಡುಗಾರ್ತಿ ಎಂದು ನಾನಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಾನಿ ಅವರ ಮೆಚ್ಚುಗೆ ಮಾತುಗಳು ಕಿಚ್ಚನ ಫ್ಯಾನ್ಸ್‌ಗೆ ಖುಷಿ ಕೊಟ್ಟಿದೆ. ‘ಹಿಟ್ 3’ ಸಿನಿಮಾ ನೋಡಲು ಕಾತರದಿಂದ ಫ್ಯಾನ್ಸ್ ಕಾಯುತ್ತಿದ್ದಾರೆ.

    ಅಂದಹಾಗೆ, 2012ರಲ್ಲಿ ನಾನಿ ಹಾಗೂ ಸಮಂತಾ ನಟನೆಯ ‘ಈಗ’ ಸಿನಿಮಾದಲ್ಲಿ ಸುದೀಪ್ (Sudeep) ನಟಿಸಿದ್ದರು. ಚಿತ್ರದಲ್ಲಿ ವಿಲನ್ ಆಗಿ ಅಬ್ಬರಿಸಿದ್ದರು. ಹಾಗಾಗಿ ಸುದೀಪ್ ಜೊತೆ ನಾನಿಗೆ ಉತ್ತಮ ಒಡನಾಟವಿದೆ.

  • BBK 11:’ಬಿಗ್‌ ಬಾಸ್‌’ಗೆ ನೀವು ನೀಡಿರುವ ಕೊಡುಗೆಯ ಬಗ್ಗೆ ಹೆಮ್ಮೆಯಿದೆ: ಸಾನ್ವಿ ಸುದೀಪ್‌

    BBK 11:’ಬಿಗ್‌ ಬಾಸ್‌’ಗೆ ನೀವು ನೀಡಿರುವ ಕೊಡುಗೆಯ ಬಗ್ಗೆ ಹೆಮ್ಮೆಯಿದೆ: ಸಾನ್ವಿ ಸುದೀಪ್‌

    ‘ಬಿಗ್ ಬಾಸ್ ಕನ್ನಡ 11’ರ (Bigg Boss Kannada 11) ಬಳಿಕ ಕಿಚ್ಚ ಸುದೀಪ್ ನಿರೂಪಣೆ ಮಾಡಲ್ಲ ಅಂತ ವಿದಾಯ ಘೋಷಿಸಿದ್ದಾರೆ. ಸುದೀಪ್ ಈ ನಿರ್ಧಾರ ಇದೀಗ ಅಭಿಮಾನಿಗಳ ಪಾಲಿಗೆ ನುಂಗಲಾರದ ತುತ್ತಾಗಿದೆ. ಹೀಗಿರುವಾಗ ತಂದೆಯ ನಿರ್ಧಾರದ ಬಗ್ಗೆ ಪುತ್ರಿ ಸಾನ್ವಿ ಸುದೀಪ್ ರಿಯಾಕ್ಷನ್ ಕೊಟ್ಟಿದ್ದಾರೆ. ಬಿಗ್ ಬಾಸ್ ಶೋಗಾಗಿ ನೀವು ಹಾಕಿದ ಶ್ರಮಕ್ಕೆ ಸರಿಸಾಟಿಯೇ ಇಲ್ಲ ಎಂದು ಸಾನ್ವಿ (Saanvi Sudeep) ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

    ಅಪ್ಪ ನಿಮ್ಮ ಬಿಗ್ ಬಾಸ್ ಜರ್ನಿ ಅತ್ಯಂತ ಹೆಮ್ಮೆ ಪಡುವಂತದ್ದು, ಬೇರೆ ಯಾರು ನಿಮ್ಮ ರೀತಿ ಮಾಡಲು ಸಾಧ್ಯವಿಲ್ಲ. ಬಿಗ್ ಬಾಸ್ ವೇದಿಕೆ ಮೇಲೆ ನಿಮ್ಮನ್ನು ನಾವು ನೋಡಲು ಮಿಸ್ ಮಾಡಿಕೊಳ್ಳುತ್ತಿದ್ದೇವೆ. ಆದರೆ ಬಿಗ್ ಬಾಸ್ ಜರ್ನಿಯಲ್ಲಿ ನಿಮ್ಮನ್ನು ನೋಡಿದ್ದು ನನಗೆ ಅತ್ಯಂತ ಸಂತೋಷವನ್ನು ತಂದಿದೆ. ‘ಬಿಗ್ ಬಾಸ್’ ಶೋಗಾಗಿ ನೀವು ಹಾಕಿದ ಶ್ರಮಕ್ಕೆ ಸರಿಸಾಟಿಯೇ ಇಲ್ಲ. ಇಲ್ಲಿವರೆಗೂ ಬಿಗ್ ಬಾಸ್ ಶೋಗೆ ನೀವು ನೀಡಿರುವ ಕೊಡುಗೆಗೆ ನಾನು ಹೆಮ್ಮೆ ಪಡುತ್ತೇನೆ ಎಂದು ಸಾನ್ವಿ ಸುದೀಪ್ ಬರೆದುಕೊಂಡಿದ್ದಾರೆ.

    ಕಿಚ್ಚನ ಎಕ್ಸ್ ಪೋಸ್ಟ್‌ನಲ್ಲಿ ಏನಿದೆ?

    ನೀವೆಲ್ಲರೂ BBK11 ರಲ್ಲಿ ತೋರಿಸಿರುವ ಪ್ರತಿಕ್ರಿಯೆಗೆ ಧನ್ಯವಾದಗಳು. ಶೋ ಮತ್ತು ನನ್ನ ಮೇಲೆ ತೋರಿಸಿದ ಪ್ರೀತಿಯ ಬಗ್ಗೆ ಹಲವರು ಹೇಳುತ್ತಾರೆ. ಇದು ನಮ್ಮೊಂದಿಗೆ ಪ್ರಯಾಣಿಸಿದ 10+1 ವರ್ಷದ ಶ್ರೇಷ್ಠ ಅನುಭವವಾಗಿತ್ತು, ಮತ್ತು ಈಗ ನಾನು ನನ್ನ ಮುಂದಿನ ಹೆಜ್ಜೆಗೆ ಸಾಗುವ ಸಮಯವಾಗಿದೆ.

    ಇದು BBK ಯಲ್ಲಿನ ನನ್ನ ಕೊನೆಯ ಆವೃತ್ತಿಯಾಗಲಿದೆ. ನನ್ನ ನಿರ್ಧಾರವನ್ನು ನನ್ನ ಅಭಿಮಾನಿಗಳು ಮತ್ತು ಈ ವರ್ಷಗಳಲ್ಲಿ BB ಅನ್ನು ಅನುಸರಿಸಿದ ಎಲ್ಲರೂ ಗೌರವಿಸುತ್ತಾರೆ ಎಂಬುದರಲ್ಲಿ ನನಗೆ ಸಂಪೂರ್ಣ ನಂಬಿಕೆ ಇದೆ. ಈ ಆವೃತ್ತಿಯನ್ನು ಅತ್ಯುತ್ತಮವಾಗಿ ಮಾಡಲು ಪ್ರಯತ್ನಿಸೋಣ. ಎಂದು ಕಿಚ್ಚ ಸುದೀಪ್ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಾಕಿದ್ದಾರೆ. ಇತ್ತೀಚೆಗೆ ಸುದೀಪ್ ಅವರು ದೊಡ್ಮನೆ ಆಟ ಸೀಸನ್ 11 ನಡೆಸಿಕೊಡಲ್ಲ ಅಂತಾ ನೇರವಾಗಿ ತಿಳಿಸಿದ್ದರು. ಆದರೆ ವಾಹಿನಿಯ, ಅಭಿಮಾನಿಗಳ ಒತ್ತಾಯಕ್ಕೆ ಸುದೀಪ್ ಸಾಥ್ ನೀಡಿದ್ದರು. ಈಗ ಮುಂದಿನ ಸೀಸನ್ ನಡೆಸಿಕೊಡಲ್ಲ ಎಂದು ಅಧಿಕೃತವಾಗಿ ಘೋಷಿಸಿದ್ದಾರೆ.

  • ಸುದೀಪ್‌ ಮಗಳ Exclusive ಚಿಟ್‌ ಚಾಟ್‌

    ಸುದೀಪ್‌ ಮಗಳ Exclusive ಚಿಟ್‌ ಚಾಟ್‌

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]