Tag: Sabarimala

  • ಇರುಮುಡಿ ಕಟ್ಟು ಹೊತ್ತು ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ರಾಷ್ಟ್ರಪತಿ ಮುರ್ಮು

    ಇರುಮುಡಿ ಕಟ್ಟು ಹೊತ್ತು ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ರಾಷ್ಟ್ರಪತಿ ಮುರ್ಮು

    – ಶಬರಿಮಲೆಗೆ ಭೇಟಿ ನೀಡಿದ ಮೊದಲ ಹಾಲಿ ರಾಷ್ಟ್ರಪತಿ 

    ತಿರುವನಂತಪುರಂ: ಕೇರಳ ಪ್ರವಾಸದಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು (Draupadi Murmu) ಅವರು ಶಬರಿಮಲೆಗೆ (Sabarimala) ಭೇಟಿ ನೀಡಿ, ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದಿದ್ದಾರೆ.

    ಇರುಮುಡಿ ಕಟ್ಟು ಹೊತ್ತು ಶಬರಿಮಲೆಗೆ ಭೇಟಿ ನೀಡಿದ ದ್ರೌಪದಿ ಮುರ್ಮು ಅವರು ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದಿದ್ದಾರೆ. ಈ ಮೂಲಕ ಶಬರಿಮಲೆಗೆ ಭೇಟಿ ನೀಡಿದ ಮೊದಲ ಹಾಲಿ ರಾಷ್ಟ್ರಪತಿ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ.

    ಸೋಮವಾರದಿಂದ ಸಂಜೆ 6:20ರ ಸುಮಾರಿಗೆ ತಿರುವನಂತಪುರಂಕ್ಕೆ ಆಗಮಿಸಿದ ಮುರ್ಮು ಅವರಿಂದು ಹೆಲಿಕಾಪ್ಟರ್ ಮೂಲಕ ಕೇರಳದ ಪ್ರಮಾಡಂ ಇನ್‌ಡೋರ್ ಸ್ಟೇಡಿಯಂಗೆ ಬಂದಿಳಿದರು, ಈ ವೇಳೆ ಹೆಲಿಕಾಪ್ಟರ್ ಟೈರ್ ಕಾಂಕ್ರೀಟ್‌ನಲ್ಲಿ ಹೂತುಹೋಯಿತು. ಬಳಿಕ ಅಗ್ನಿಶಾಮಕ ಸಿಬ್ಬಂದಿ ಹೆಲಿಕಾಪ್ಟರ್‌ನ್ನು ತಳ್ಳಿ ಬದಿಸರಿಸಿದರು. ನಂತರ ಅಲ್ಲಿಂದ ಶಬರಿಮಲೆಗೆ ತೆರಳಿ ತುಲಾ ಮಾಸ ಪೂಜೆಯ ಕೊನೆಯ ದಿನದಂದು ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದಿದ್ದಾರೆ.

    ಬಳಿಕ ಅ.23ರಂದು ತಿರುವನಂತಪುರದ ರಾಜಭವನದಲ್ಲಿ ಮಾಜಿ ರಾಷ್ಟ್ರಪತಿ ಕೆ.ಆರ್.ನಾರಾಯಣನ್ ಅವರ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ. ನಂತರ ವರ್ಕಲಾದ ಶಿವಗಿರಿ ಮಠದಲ್ಲಿ ಶ್ರೀ ನಾರಾಯಣ ಗುರುಗಳ ಮಹಾಸಮಾಧಿಯ ಶತಮಾನೋತ್ಸವ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ.

    ಅದೇ ದಿನ ಪಲೈನಲ್ಲಿರುವ ಸೇಂಟ್ ಥಾಮಸ್ ಕಾಲೇಜಿನ ಪ್ಲಾಟಿನಂ ಜುಬಿಲಿ ಸಮಾರೋಪ ಸಮಾರಂಭದಲ್ಲಿಯೂ ಭಾಗಿಯಾಗಲಿದ್ದಾರೆ. ಅ.24ರಂದು ಎರ್ನಾಕುಲಂನ ಸೇಂಟ್ ತೆರೇಸಾ ಕಾಲೇಜಿನ ಶತಮಾನೋತ್ಸವ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

  • ಶಬರಿಮಲೆ ಬೆಟ್ಟ ಇಳಿಯುವಾಗ ಹೃದಯಾಘಾತ – 18 ವರ್ಷದ ಅಯ್ಯಪ್ಪ ಭಕ್ತ ಸಾವು

    ಶಬರಿಮಲೆ ಬೆಟ್ಟ ಇಳಿಯುವಾಗ ಹೃದಯಾಘಾತ – 18 ವರ್ಷದ ಅಯ್ಯಪ್ಪ ಭಕ್ತ ಸಾವು

    ರಾಮನಗರ: ಶಬರಿಮಲೆ (Sabarimala) ಅಯ್ಯಪ್ಪನ ದರ್ಶನ ಮುಗಿಸಿ ವಾಪಸ್ ಬರುವಾಗ ಕನಕಪುರ (Kanakapur) ಮೂಲದ 18 ವರ್ಷದ ಅಯ್ಯಪ್ಪನ ಭಕ್ತನೊಬ್ಬ ಹೃದಯಾಘಾತದಿಂದ (Heart Attack) ಸಾವನ್ನಪ್ಪಿದ್ದಾನೆ.

    ಮೃತ ಯುವಕನನ್ನು ಪ್ರಜ್ವಲ್ (18) ಎಂದು ಗುರುತಿಸಲಾಗಿದೆ. ಮೂಲತಃ ಕನಕಪುರ ತಾಲೂಕಿನ ಕೋಡಿಹಳ್ಳಿ ಗ್ರಾಮದ ನಿವಾಸಿ ಪ್ರಜ್ವಲ್, ಕಳೆದ ಹಲವು ವರ್ಷಗಳಿಂದ ಬೆಂಗಳೂರಿನ ವಿಜಯನಗರದಲ್ಲಿ ವಾಸವಾಗಿದ್ದ. ಕಳೆದ ಎರಡು ದಿನಗಳ ಹಿಂದೆ ತಂದೆ ಹಾಗೂ ಸ್ನೇಹಿತರ ಜೊತೆ ಅಯ್ಯಪ್ಪನ ದರ್ಶನಕ್ಕೆ ತೆರಳಿದ್ದ. ಇದನ್ನೂ ಓದಿ: ಭೀಮಾತೀರದ ನಕಲಿ ಎನ್‌ಕೌಂಟರ್ ಕೇಸ್ – ಜು.1ಕ್ಕೆ ವಿಚಾರಣೆ ಮುಂದೂಡಿಕೆ

    ಅಯ್ಯಪ್ಪನ ದರ್ಶನ ಮುಗಿಸಿ, ಬೆಟ್ಟ ಇಳಿಯುವಾಗ ಪ್ರಜ್ವಲ್‌ಗೆ ಹೃದಯಾಘಾತವಾಗಿದೆ. ಕೂಡಲೇ ಸ್ಥಳೀಯರ ಸಹಾಯದಿಂದ ಯುವಕನನ್ನು ಆಸ್ಪತ್ರೆಗೆ ಕರೆದೊಯ್ಯುವ ವ್ಯವಸ್ಥೆ ಮಾಡಲಾಯಿತು. ಆದರೆ ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾನೆ.

    ಸ್ಥಳಕ್ಕೆ ಶಬರಿಮಲೆ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನ ಮರಣೋತ್ತರ ಪರೀಕ್ಷೆ ನಡೆಸಿ ಕನಕಪುರಕ್ಕೆ ತರಲು ಕುಟುಂಬಸ್ಥರು ಸಿದ್ಧತೆ ನಡೆಸಿದ್ದಾರೆ. ಇದನ್ನೂ ಓದಿ: ಶಾರ್ಟ್‌ಕಟ್‌ನಲ್ಲಿ ಬಂದಿದ್ದಕ್ಕೆ ಇಂಗ್ಲಿಷ್‌ನಲ್ಲಿ ಕೆಟ್ಟದಾಗಿ ಬೈಯ್ದು, ಹಲ್ಲೆ ಮಾಡಿದ್ರು – ರ‍್ಯಾಪಿಡೊ ಚಾಲಕ ಸುಹಾಸ್‌

  • ಶಬರಿಮಲೆಗೆ ಭೇಟಿ ನೀಡಲಿದ್ದಾರೆ ರಾಷ್ಟ್ರಪತಿ ದ್ರೌಪದಿ ಮುರ್ಮು

    ಶಬರಿಮಲೆಗೆ ಭೇಟಿ ನೀಡಲಿದ್ದಾರೆ ರಾಷ್ಟ್ರಪತಿ ದ್ರೌಪದಿ ಮುರ್ಮು

    – ರಾಷ್ಟ್ರಪತಿಯೊಬ್ಬರು ಶಬರಿಮಲೆಗೆ ಭೇಟಿ ನೀಡುತ್ತಿರುವುದು ಇದೇ ಮೊದಲು

    ತಿರುವನಂತಪುರ: ರಾಷ್ಟ್ರಪತಿ ದ್ರೌಪದಿ ಮುರ್ಮು(Droupadi Murmu) ಅವರು ಮೇ 19ರಂದು ಕೇರಳದಲ್ಲಿರುವ ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ(Sabarimala Ayyappa Temple) ಭೇಟಿ ನೀಡುವ ಮೂಲಕ ಭಾರತದ ಮೊದಲ ಹಾಲಿ ರಾಷ್ಟ್ರಪತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

    ಮೇ 18ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಕೇರಳಕ್ಕೆ(Kerala) ಆಗಮಿಸಲಿದ್ದು, ಬಳಿಕ ಕೊಟ್ಟಾಯಂ ಜಿಲ್ಲೆಯ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. 19ರಂದು ಬೆಳಗ್ಗೆ ಶಬರಿಮಲೆಯ ಬಳಿಯಿರುವ ನೀಲಕ್ಕಲ್ ಹೆಲಿಪ್ಯಾಡ್‌ಗೆ ಬಂದಿಳಿಯಲಿದ್ದು, ಬಳಿಕ ಪಂಪಾ ಬೇಸ್ ಕ್ಯಾಂಪ್‌ಗೆ ತೆರಳಿದ್ದಾರೆ. ಇದನ್ನೂ ಓದಿ: ಸುಪ್ರೀಂ ಕೋರ್ಟ್‌ನ 33 ಜಡ್ಜ್‌ ಪೈಕಿ 21 ಮಂದಿಯ ಆಸ್ತಿ ಬಹಿರಂಗ

    ಪಂಪಾ ಬೇಸ್ ಕ್ಯಾಂಪ್‌ನಿಂದ ದೇವಾಲಯಕ್ಕೆ ತೆರಳುವ ಪ್ರಯಾಣ ವಿಧಾನದ ಕುರಿತು ಅಂತಿಮ ನಿರ್ಧಾರವನ್ನು ಭದ್ರತಾ ವ್ಯವಸ್ಥೆಯ ವಿಶೇಷ ರಕ್ಷಣಾ ಗುಂಪು ತೆಗೆದುಕೊಳ್ಳಲಿದೆ. ರಾಷ್ಟ್ರಪತಿಯೊಬ್ಬರು ಶಬರಿಮಲೆ ದೇಗುಲಕ್ಕೆ ಭೇಟಿ ನೀಡಲು ನಿರ್ಧರಿಸಿದ್ದು ಇದೇ ಮೊದಲು ಎಂದು ತಿರುವಾಂಕೂರು ದೇವಸ್ವಂ ಮಂಡಳಿಯ ಅಧ್ಯಕ್ಷ ಪಿ.ಎಸ್.ಪ್ರಶಾಂತ್ ತಿಳಿಸಿದರು. ಇದನ್ನೂ ಓದಿ: ಕಾಶ್ಮೀರದಲ್ಲಿ ಮದ್ದುಗುಂಡುಗಳ ಸಹಿತ ಇಬ್ಬರು ಉಗ್ರರು ಅರೆಸ್ಟ್‌

    ರಾಷ್ಟ್ರಪತಿ ಅವರ ಭೇಟಿಯ ಬಗ್ಗೆ ಕೆಲವು ವಾರಗಳಿಂದ ಗಾಳಿ ಸುದ್ದಿ ಹರಿದಾಡುತ್ತಿದ್ದವು. ಅಧಿಕೃತ ಮಾಹಿತಿ ಬಂದ ನಂತರ ಮುಖ್ಯಮಂತ್ರಿ ಪಿಣರಾಯಿ ವಿಜಯನ್(Pinarayi Vijayan) ಅವರು ಸಭೆಯನ್ನು ಕರೆಯಲಿದ್ದಾರೆ. ಅಲ್ಲದೇ ನಾವು ದೇವಾಲಯಕ್ಕೆ ತೆರಳುವ ರಸ್ತೆಯ ತುರ್ತು ದುರಸ್ತಿ ಹಾಗೂ ನಿರ್ಮಾಣ ಕಾರ್ಯದಲ್ಲಿ ತೊಡಗಿಕೊಂಡಿದ್ದೇವೆ ಎಂದು ರಾಷ್ಟ್ರಪತಿ ಭೇಟಿಯ ಕುರಿತು ಬಹಿರಂಗಪಡಿಸಿದರು.

  • ಜ್ಯೋತಿ ರೂಪದಲ್ಲಿ ಭಕ್ತರಿಗೆ ದರ್ಶನ ಕೊಟ್ಟ ಅಯ್ಯಪ್ಪ

    ಜ್ಯೋತಿ ರೂಪದಲ್ಲಿ ಭಕ್ತರಿಗೆ ದರ್ಶನ ಕೊಟ್ಟ ಅಯ್ಯಪ್ಪ

    ಶಬರಿಮಲೆ: ಸಂಕ್ರಾಂತಿಯಂದು ಜ್ಯೋತಿ ರೂಪದಲ್ಲಿ ಅಯ್ಯಪ್ಪ (Ayyappa) ಭಕ್ತರಿಗೆ ದರ್ಶನ ನೀಡಿದ್ದಾನೆ.

    ಸಂಜೆ 6:44ಕ್ಕೆ ಅಯ್ಯಪ್ಪ (Sabarimala) ದೇಗುಲದ ಎದುರಿನ ಪೊನ್ನಂಬಲಮೇಡುವಿನಲ್ಲಿ ಜ್ಯೋತಿ ದರ್ಶನವಾಯಿತು. ಈ ವೇಳೆ ಅಯ್ಯಪ್ಪನ ಭಕ್ತಿಗೀತೆ ಗುಣಗಾನ ಮಾಡುತ್ತಾ ಲಕ್ಷಾಂತರ ಭಕ್ತರು ಮಕರ ಜ್ಯೋತಿ (Makara Jyoti) ದರ್ಶನ ಪಡೆದರು.

    ಶಬರಿಮಲೆ (Sabarimala) ಅಯ್ಯಪ್ಪ ದೇಗುಲದಲ್ಲಿ ಮಕರ ಸಂಕ್ರಾಂತಿ (Makara Sankranti) ಪ್ರಯುಕ್ತ ವಿಶೇಷ ಪೂಜೆಗಳು ನಡೆದವು. ಪಂದಳ ರಾಜಮನೆತನದಿಂದ ಆಭರಣಗಳನ್ನು ತಂದು ಆಯ್ಯಪ್ಪ ಸ್ವಾಮಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಮಹಾಮಂಗಳಾರತಿ ವೇಳೆಗೆ ಜ್ಯೋತಿರೂಪದಲ್ಲಿ ಅಯ್ಯಪ್ಪ ಭಕ್ತರಿಗೆ ದರ್ಶನಕೊಟ್ಟಿದ್ದಾನೆ.

    ಭಕ್ತ ಸಮೂಹದ ನಿರ್ವಹಣೆ ಮತ್ತು ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ದೇವಾಲಯ ಮತ್ತು ಅದರ ಸುತ್ತಮುತ್ತ ಪೊಲೀಸ್ ಭದ್ರತೆ ಕಲ್ಪಿಸಲಾಗಿತ್ತು.

  • ಕರ್ನಾಟಕದ ಅಯ್ಯಪ್ಪ ಭಕ್ತರೇ ಗಮನಿಸಿ.. ಶಬರಿಮಲೆ ದರ್ಶನಕ್ಕೆ ಸ್ಪಾಟ್‌ ಬುಕಿಂಗ್‌ ದಿನಕ್ಕೆ 5,000 ಜನರಿಗೆ ಮಾತ್ರ

    ಕರ್ನಾಟಕದ ಅಯ್ಯಪ್ಪ ಭಕ್ತರೇ ಗಮನಿಸಿ.. ಶಬರಿಮಲೆ ದರ್ಶನಕ್ಕೆ ಸ್ಪಾಟ್‌ ಬುಕಿಂಗ್‌ ದಿನಕ್ಕೆ 5,000 ಜನರಿಗೆ ಮಾತ್ರ

    ತಿರುವನಂತಪುರಂ: ಮಕರ ಸಂಕ್ರಾಂತಿಯಂದು ಕೇರಳದ ಶಬರಿಮಲೆಯಲ್ಲಿ (Sabarimala) ಸಂಭವಿಸುವ ಮಕರ ಜ್ಯೋತಿಯನ್ನು (ಮಕರವಿಳಕ್ಕು) ಕಣ್ತುಂಬಿಕೊಳ್ಳಲು ಅಯ್ಯಪ್ಪ ಭಕ್ತರು ಕಾತರರಾಗಿದ್ದಾರೆ. ಹೀಗಾಗಿ, ಶಬರಿಮಲೆಗೆ ಭಕ್ತರ ದಂಡೇ ಆಗಮಿಸುತ್ತಿದೆ. ಜನಸಂದಣಿಯನ್ನು ನಿಯಂತ್ರಿಸಲು ಶಬರಿಮಲೆ ದರ್ಶನಕ್ಕೆ ಬರುವ ಭಕ್ತರಿಗೆ ಸ್ಪಾಟ್‌ ಬುಕಿಂಗ್‌ ಅನ್ನು 5,000ಕ್ಕೆ ಮಿತಿಗೊಳಿಸಲಾಗಿದೆ.

    ಮಕರ ಜ್ಯೋತಿಯನ್ನು (Makarajyothi) ಕಣ್ತುಂಬಿಕೊಳ್ಳಲು ಶಬರಿಮಲೆಗೆ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಆಗ, ಶಬರಿಮಲೆಯಲ್ಲಿ ಭಕ್ತಾದಿಗಳ ನೂಕುನುಗ್ಗಲು ತಪ್ಪಿಸುವ ನಿಟ್ಟಿನಲ್ಲಿ ಸನ್ನಿಧಾನಂನಲ್ಲಿ ಸ್ಪಾಟ್ ಬುಕ್ಕಿಂಗ್ ಸೌಲಭ್ಯವನ್ನು ನಾಳೆಯಿಂದ (ಜ.8) ಜನವರಿ 15ರ ವರೆಗೆ ದಿನಕ್ಕೆ 5000 ಜನರಿಗೆ ಸೀಮಿತಗೊಳಿಸಲು ನಿರ್ಧರಿಸಲಾಗಿದೆ. ಇದನ್ನೂ ಓದಿ: ಸನ್ ಗ್ಲಾಸ್ ಕ್ಯಾಮೆರಾ ಬಳಸಿ ರಾಮಜನ್ಮಭೂಮಿಯ ಚಿತ್ರೀಕರಣ – ಆರೋಪಿ ಅರೆಸ್ಟ್‌

    ಶಬರಿಮಲೆಯಲ್ಲಿ ಹಬ್ಬ ಹರಿದಿನಗಳಲ್ಲಿ ಜನಸಂದಣಿ ನಿರ್ವಹಣೆಗೆ ಕೇರಳ ಹೈಕೋರ್ಟ್ ನಿರ್ದೇಶನ ನೀಡಿದೆ. ದೇವಸ್ವಂ ಬೋರ್ಡ್ ವೆಬ್‌ಸೈಟ್‌ನಲ್ಲಿ ಜ.12 ರಂದು 60,000, ಜ.13 ರಂದು 50,000 ಮತ್ತು ಜ.14 ರಂದು 40,000 ಎಂದು ವರ್ಚುವಲ್ ಕ್ಯೂ ಮೂಲಕ ಬುಕ್ಕಿಂಗ್ ಅನ್ನು ನಿಗದಿಪಡಿಸಲಾಗಿದೆ. ಮಕರ ಜ್ಯೋತಿ ದಿನ (ಜ.14) ಬೆಟ್ಟದ ಮೇಲೆ ಬಿಡಾರ ಹೂಡದಂತೆ ಭಕ್ತರಿಗೆ ಸಲಹೆ ನೀಡಲಾಗಿದೆ.

    ಜ.10 ರಿಂದಲೇ ಪರ್ಣಶಾಲೆಗಳಲ್ಲಿ ಭಕ್ತರು ಕಾದು ಜ್ಯೋತಿ ದರ್ಶನ ಮಾಡುವುದು ವಾಡಿಕೆ. ಈ ಕಾರಣಕ್ಕಾಗಿ ಮಕರವಿಳಕ್ಕು ದಿನದಂದು ಉಂಟಾಗಬಹುದಾದ ಜನಸಂದಣಿ ತಪ್ಪಿಸಲು ಸಿದ್ಧತೆಗಳು ನಡೆಯುತ್ತಿವೆ. ಸ್ಪಾಟ್ ಬುಕ್ಕಿಂಗ್ ಅನ್ನು ಸೀಮಿತಗೊಳಿಸುವುದರ ಜೊತೆಗೆ ನಿಲಕ್ಕಲ್‌ನಲ್ಲಿ ಭಕ್ತರನ್ನು ಪಂಪಾ ನದಿಗೆ ಪ್ರವೇಶಿಸಲು ಅನುಮತಿಸುವ ಮೊದಲು ಪೊಲೀಸರು ತಪಾಸಣೆ ನಡೆಸುತ್ತಾರೆ. ಪರ್ಣಶಾಲೆಯಲ್ಲಿ ಕುಳಿತುಕೊಳ್ಳುವ ಭಕ್ತರ ಅಡುಗೆ ಮತ್ತು ಇತರ ಚಟುವಟಿಕೆಗಳನ್ನು ನಿಯಂತ್ರಿಸಲು ಪೊಲೀಸರು ಮಾರ್ಗಸೂಚಿಗಳನ್ನು ಜಾರಿಗೆ ತರಲಿದ್ದಾರೆ. ಜ್ಯೋತಿ ದರ್ಶನಕ್ಕೆ ಸಜ್ಜಾಗಿರುವ ವಿವಿಧೆಡೆ ಭದ್ರತೆಗಾಗಿ ನಾನಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಇದನ್ನೂ ಓದಿ: ಪೆನ್ನಾರ್ ನದಿ ನೀರು ವಿವಾದ, ಭದ್ರಾ ಮೇಲ್ದಂಡೆ ಯೋಜನೆ – ಕೇಂದ್ರ ಸಚಿವ ಸೋಮಣ್ಣ ಜೊತೆ ಡಿಕೆಶಿ ಚರ್ಚೆ

    ಜ.12ರಂದು ಮಧ್ಯಾಹ್ನ 1 ಗಂಟೆಗೆ ಪಂದಳಂನ ವಲಿಯ ಕೊಯಿಕ್ಕಲ್ ದೇವಸ್ಥಾನದಿಂದ ಭಕ್ತರ ದರ್ಶನ ಹಾಗೂ ವಿವಿಧ ಕಾರ್ಯಕ್ರಮಗಳ ನಂತರ ತಿರುವಾಭರಣ ಮೆರವಣಿಗೆ ಶಬರಿಮಲೆಗೆ ತೆರಳಲಿದೆ. ವಿವಿಧ ದೇವಸ್ಥಾನಗಳನ್ನು ತಲುಪಿದ ಬಳಿಕ ದರ್ಶನ ಸೌಲಭ್ಯ ಪಡೆದು ರಾತ್ರಿ 9:30ಕ್ಕೆ ಅಯೂರು ಪುತಿಯಕಾವು ದೇವಸ್ಥಾನದಲ್ಲಿ ತಂಗಲಿದೆ. ಜ.13 ರಂದು ಮುಂಜಾನೆ 3 ಗಂಟೆಗೆ ಹೊರಡುವ ಮೆರವಣಿಗೆ ರಾತ್ರಿ 9 ಗಂಟೆಗೆ ಲಾಹಾದಲ್ಲಿ ತಂಗಲಿದೆ. 14ರಂದು ಮಕರವಿಳಕ್ಕು ದಿನ ಲಾಹದಿಂದ ಹೊರಟು ಪಂಡಿತಾವಲಂ, ಚೆರಿಯಾನವಟ್ಟಂ, ನೀಲಿಮಲ, ಅಪಾಚಿಮೇಡು ಮೂಲಕ ಸಂಜೆ 4 ಗಂಟೆಗೆ ಶಬರಿಪೀಠ ತಲುಪಲಿದೆ. ನಂತರ ಸಾರಂಕುತಿ ಮೂಲಕ ಸಂಜೆ 5.30ಕ್ಕೆ ಸನ್ನಿಧಾನಕ್ಕೆ ಬರಮಾಡಿಕೊಳ್ಳಲಾಗುವುದು. ಮೆರವಣಿಗೆ ಮಾರ್ಗಗಳಲ್ಲಿ ಯಾತ್ರಾರ್ಥಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಪೊಲೀಸರು ಅಗತ್ಯ ವ್ಯವಸ್ಥೆಗಳನ್ನು ಮಾಡುತ್ತಿದ್ದಾರೆ.

    ಯಾತ್ರಾರ್ಥಿಗಳ ಸಂಖ್ಯೆಯಲ್ಲಿ ಭಾರೀ ಏರಿಕೆಯಾಗಿರುವುದು ಪೊಲೀಸರ ಸಿದ್ಧತೆಗಳ ಯಶಸ್ಸಿಗೆ ಮತ್ತು ಸುಗಮ ಮತ್ತು ಸುರಕ್ಷಿತ ದರ್ಶನಕ್ಕೆ ಸಾಕ್ಷಿಯಾಗಿದೆ. ನ.15 ರಿಂದ ಈ ವರ್ಷ ಜ.5 ರವರೆಗೆ ತೀರ್ಥಯಾತ್ರೆ ಪ್ರಾರಂಭವಾದಾಗ ದಾಖಲೆಯ 39,02,610 ಅಯ್ಯಪ್ಪ ಭಕ್ತರು ದೇಗುಲಕ್ಕೆ ಭೇಟಿ ನೀಡಿದ್ದರು. ಕಳೆದ ವರ್ಷ ಇದೇ ಅವಧಿಯಲ್ಲಿ 35,12,691 ಭಕ್ತರು ದೇಗುಲಕ್ಕೆ ಭೇಟಿ ನೀಡಿದ್ದರು. ಮಕರವಿಳಕ್ಕು ಆರಂಭವಾದ ಡಿ.30 ರಿಂದ ನಿನ್ನೆಯವರೆಗೆ 6,22,849 ಜನರು ದೇಗುಲಕ್ಕೆ ಭೇಟಿ ನೀಡಿದ್ದಾರೆ ಎಂದು ರಾಜ್ಯ ಪೊಲೀಸ್‌ ಮಾಧ್ಯಮ ಕೇಂದ್ರದ ಉಪ ನಿರ್ದೇಶಕ ಎಸ್‌.ಆರ್‌.ಪ್ರವೀಣ್‌ ತಿಳಿಸಿದ್ದಾರೆ. ಇದನ್ನೂ ಓದಿ: ಭಾರತ್‌ಪೋಲ್ ಪೋರ್ಟಲ್ ಲೋಕಾರ್ಪಣೆ ಮಾಡಿದ ಅಮಿತ್ ಶಾ

  • ಶಬರಿಮಲೆ ದೇಗುಲದ ಸ್ಕೈವಾಕ್‌ನಿಂದ ಜಿಗಿದು ಅಯ್ಯಪ್ಪ ಮಾಲಾಧಾರಿ ಆತ್ಮಹತ್ಯೆ

    ಶಬರಿಮಲೆ ದೇಗುಲದ ಸ್ಕೈವಾಕ್‌ನಿಂದ ಜಿಗಿದು ಅಯ್ಯಪ್ಪ ಮಾಲಾಧಾರಿ ಆತ್ಮಹತ್ಯೆ

    ರಾಮನಗರ: ಶಬರಿಮಲೆ (Sabarimala) ದೇಗುಲದ ಸ್ಕೈವಾಕ್ ಮೇಲಿಂದ ಬಿದ್ದು ಅಯ್ಯಪ್ಪ ಭಕ್ತರೊಬ್ಬರು (Ayyappa Devotee) ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

    ಕನಕಪುರದ (Kanakapura) ಮದ್ದೂರಮ್ಮ ಬೀದಿ ನಿವಾಸಿ ಕುಮಾರ್ (40) ಆತ್ಮಹತ್ಯೆ ಮಾಡಿಕೊಂಡ ಭಕ್ತ. ಮೃತ ಕುಮಾರ್ ಗಾರೆ ಕೆಲಸ ಮಾಡಿಕೊಂಡಿದ್ದರು. ಮೂರು ದಿನದ ಹಿಂದೆ ಕುಮಾರ್ ಸೇರಿ 6 ಮಂದಿ ಶಬರಿಮಲೆಗೆ ತೆರಳಿದ್ದರು. ಅಯ್ಯಪ್ಪನ ದರ್ಶನ ಪಡೆದ ಬಳಿಕ ದೇವಾಲಯದ ಸ್ಕೈವಾಕ್ ಶೆಲ್ಟರ್ ಮೇಲಿನಿಂದ ಜಿಗಿದು ಕುಮಾರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ದೇವಾಲಯದ ಮೇಲಿಂದ ಜಿಗಿಯುವ ದೃಶ್ಯ ಭಕ್ತರೊಬ್ಬರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ಅಭಿಮಾನದಿಂದ ನಟರನ್ನು ನಂಬಿ ಯಾರೂ ಮೋಸಹೋಗಬೇಡಿ: ಎ6 ಜಗದೀಶ್ ತಾಯಿ ಕಣ್ಣೀರು

    ಘಟನೆಯಲ್ಲಿ ಅಯ್ಯಪ್ಪ ಮಾಲಾಧಾರಿ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಕುಮಾರ್‌ಗೆ ಶಬರಿಮಲೆ ಸನ್ನಿಧಾನದ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಕೊಟ್ಟಾಯಂ ಮೆಡಿಕಲ್ ಕಾಲೇಜಿಗೆ ರವಾನೆ ಮಾಡುವ ವೇಳೆ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ಸಂಬಂಧ ಶಬರಿಮಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಕುಮಾರ್ ಕುಟುಂಬಸ್ಥರು ಶಬರಿಮಲೆಗೆ ತೆರಳಿದ್ದಾರೆ.

    ಇನ್ನೂ ಕುಮಾರ್ ಸಾವಿನ ಬಗ್ಗೆ ಪತ್ನಿ ಅನುಮಾನ ವ್ಯಕ್ತಪಡಿಸಿದ್ದಾರೆ.  ಸೋಮವಾರವಷ್ಟೇ ಪತಿ ಪೋನ್ ಮಾಡಿ ಮಾತನಾಡಿದ್ದರು. ಮನೆಯಲ್ಲೂ ಯಾವುದೇ ರೀತಿ ಸಮಸ್ಯೆ ಆಗಿರಲಿಲ್ಲ. ಸ್ನೇಹಿತರ ಜೊತೆ ದೇವಾಲಯಕ್ಕೆ ಹೋಗಿದ್ದವರು ಯಾಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೋ ಗೊತ್ತಿಲ್ಲ. ಸ್ನೇಹಿತರು ಅವರು ಒಬ್ಬರನ್ನೇ ಬಿಟ್ಟು ಎಲ್ಲಿಹೋಗಿದ್ದರು ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಒಂದು ದೇಶ ಒಂದು ಚುನಾವಣೆ ಮಸೂದೆ ಲೋಕಸಭೆಯಲ್ಲಿ ಮಂಡನೆ

  • ಕೇರಳದಲ್ಲೂ ಭಾರೀ ಮಳೆ; ಕಾಲ್ನಡಿಗೆಯಲ್ಲಿ ಬರುವ ಶಬರಿಮಲೆ ಯಾತ್ರಿಕರಿಗೆ ನಿಷೇಧ

    ಕೇರಳದಲ್ಲೂ ಭಾರೀ ಮಳೆ; ಕಾಲ್ನಡಿಗೆಯಲ್ಲಿ ಬರುವ ಶಬರಿಮಲೆ ಯಾತ್ರಿಕರಿಗೆ ನಿಷೇಧ

    ತಿರುವನಂತಪುರಂ: ಫೆಂಗಲ್ ಚಂಡಮಾರುತದ (Fengal Cyclone) ಪರಿಣಾಮ ಕೇರಳದಲ್ಲೂ (Kerala) ಭಾರೀ ಮಳೆಯಾಗುತ್ತಿದೆ. ಮಳೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಶಬರಿಮಲೆಗೆ (Sabarimala) ಅರಣ್ಯದ ದಾರಿ ಮೂಲಕ ಕಾಲ್ನಡಿಗೆಯಲ್ಲಿ ಬರುವ ಯಾತ್ರಿಕರಿಗೆ ನಿಷೇಧ ಹೇರಲಾಗಿದೆ.

    ಕರಿಮಲ, ಪುಲ್ಲುಮೇಡು ದಾರಿಯಲ್ಲಿ ಸಂಚಾರ ಮಾಡದಂತೆ ತಡೆಯಲಾಗಿದೆ. ಭೂಕುಸಿತ ಉಂಟಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಅರಣ್ಯ ಮಾರ್ಗವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಇದನ್ನೂ ಓದಿ: ಕಾಂಗ್ರೆಸ್ ಒಕ್ಕಲಿಗರ ದ್ರೋಹಿ, ಡಿಕೆಶಿ ಸುಳ್ಳಿನ ಶೂರ – ಜೆಡಿಎಸ್ ಲೇವಡಿ

    ಕಾಲ್ನಡಿಗೆ ಯಾತ್ರಿಕರು ನೀಲಕ್ಕಲ್-ಪಂಬಾ ಮೂಲಕ ಶಬರಿಮಲೆಗೆ ತೆರಳುವಂತೆ ಸೂಚನೆ ನೀಡಲಾಗಿದೆ. ಈಗಾಗಲೇ ಅರಣ್ಯ ಮಾರ್ಗದ ಮೂಲಕ ಆಗಮಿಸಿದ್ದ ಭಕ್ತರನ್ನು ವಿಶೇಷ ಕೆಎಸ್‌ಆರ್‌ಟಿಸಿ ಬಸ್ ಮೂಲಕ ಪಂಪಾಗೆ ಕರೆದೊಯ್ಯಲಾಗಿದೆ. ಇದನ್ನೂ ಓದಿ: ರಾಯಚೂರು | ಬೈಕ್‌ಗೆ ಸರ್ಕಾರಿ ಬಸ್ ಡಿಕ್ಕಿ – ಸವಾರ ಸ್ಥಳದಲ್ಲೇ ಸಾವು

    ಪುಲ್ಲುಮೇಡುವಿನಿಂದ ಶಬರಿಮಲೆಗೆ 6 ಕಿ.ಮೀ ದೂರ ಇದೆ. ಭಾನುವಾರದಿಂದ ಈ ಅರಣ್ಯ ದಾರಿಯಲ್ಲಿ ದಟ್ಟ ಮಂಜು ಆವರಿಸಿದೆ. ಅಲ್ಲದೇ ಭೂಕುಸಿತ ಉಂಟಾಗುವ ಸಾಧ್ಯತೆಯಿಂದ ಅರಣ್ಯ ಮಾರ್ಗದಲ್ಲಿ ಕಾಲ್ನಡಿಗೆ ನಿಷೇಧಿಸಲಾಗಿದೆ. ಭಾರೀ ಮಳೆಯ ಹಿನ್ನೆಲೆ ಕೇರಳದ 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಪ್ರವಾಹ ಉಂಟಾಗುವ ಪ್ರದೇಶದಲ್ಲಿ ನೆಲೆಸಿರುವವರನ್ನು ಈಗಾಗಲೇ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚಿಸಲಾಗಿದೆ. ಇದನ್ನೂ ಓದಿ: ಇಂದು ರೈತರ ಪ್ರತಿಭಟನೆ: ದೆಹಲಿ–ನೋಯ್ಡಾ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್

  • ಇಂದಿನಿಂದ ಶಬರಿಮಲೆ ಅಯ್ಯಪ್ಪ ಸ್ವಾಮಿ ಮಂಡಲ ಪೂಜೆ, ದರ್ಶನ ಆರಂಭ

    ಇಂದಿನಿಂದ ಶಬರಿಮಲೆ ಅಯ್ಯಪ್ಪ ಸ್ವಾಮಿ ಮಂಡಲ ಪೂಜೆ, ದರ್ಶನ ಆರಂಭ

    – ನಿತ್ಯ 70,000 ಜನರಿಗೆ ದರ್ಶನ ಅವಕಾಶ ನೀಡಲು ನಿರ್ಧಾರ
    – ಡಿ.26 ರ ತನಕ ದರ್ಶನಕ್ಕೆ ಅವಕಾಶ

    ತಿರುವನಂತಪುರಂ: ಇಂದಿನಿಂದ (ನ.15) ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ (Sabarimala Ayyappa Swami Temple) ಆರಂಭವಾಗಲಿದ್ದು, ಡಿ.25 ರವರೆಗೆ ದರ್ಶನಕ್ಕೆ ಅವಕಾಶ ನೀಡಲಾಗಿದೆ.

    ಇಂದು ಅಯ್ಯಪ್ಪ ಸ್ವಾಮಿ ದರ್ಶನ ಸೇರಿದಂತೆ ಮಂಡಲ ಪೂಜೆ ಪ್ರಾರಂಭಗೊಳ್ಳಲಿದೆ. ದರ್ಶನ ಅವಧಿಯನ್ನು 18 ಗಂಟೆಗೆ ವಿಸ್ತರಿಸಲಾಗಿದ್ದು, ಪ್ರತಿ ನಿತ್ಯ 70,000 ಜನರಿಗೆ ದರ್ಶನ ಅವಕಾಶ ನೀಡುವಂತೆ ದೇವಸ್ಥಾನದ ಆಡಳಿತ ಮಂಡಳಿ ನಿರ್ಧರಿಸಿದೆ. ಜೊತೆಗೆ ಜನಸಂದಣಿ ಹೆಚ್ಚಾದಲ್ಲಿ ಸಮಯವನ್ನು ಅರ್ಧಗಂಟೆ ವಿಸ್ತರಿಸುವಂತೆ ಚಿಂತಿಸಿದೆ.ಇದನ್ನೂ ಓದಿ: ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ – 12 ಬಲಿ

    ಸುಮಾರು 60,000 ಜನರು ವರ್ಚುವಲ್ ಸರತಿ ವ್ಯವಸ್ಥೆಯ ಮೂಲಕ ದರ್ಶನವನ್ನು ಪಡೆಯುತ್ತಾರೆ. ಇನ್ನೂ 10,000 ಜನರು ಸ್ಥಳದಲ್ಲೇ ಬುಕ್ಕಿಂಗ್ ಮಾಡಲು ಅನುಮತಿಸಲಾಗಿದೆ.

    ಇನ್ನೂ ಈ ಕುರಿತು ಶಬರಿಮಲೆ ದೇವಸ್ಥಾನ ಮಂಡಳಿ ಅಧ್ಯಕ್ಷ ಪಿ.ಎಸ್.ಪ್ರಶಾಂತ್ ಮಾತನಾಡಿ, ತೀರ್ಥೋದ್ಭವದ ಆರಂಭದಿಂದ ಪ್ರತಿದಿನ ಬೆಳಗ್ಗೆ 3 ರಿಂದ ಮಧ್ಯಾಹ್ನ 1 ರವರೆಗೆ ಮತ್ತು ಮಧ್ಯಾಹ್ನ 3 ರಿಂದ ರಾತ್ರಿ 11 ರವರೆಗೆ ದರ್ಶನಕ್ಕೆ ನೀಡಲಾಗುವುದು. ಇದರಿಂದಾಗಿ ಭಕ್ತರ ನುಕುನುಗ್ಗಲನ್ನು ಕಡಿಮೆಗೊಳಿಸುವ ಉದ್ದೇಶವನ್ನು ಹೊಂದಿದೆ ಎಂದು ತಿಳಿಸಿದ್ದಾರೆ.

    ಸ್ಥಳದಲ್ಲಿಯೇ ಬುಕ್ಕಿಂಗ್ ಮಾಡಲು ಪಂಪಾ, ಎರುಮೇಲಿ ಮತ್ತು ವಂಡಿಪೆರಿಯಾರ್ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಹಲವಾರು ಕೌಂಟರ್‌ಗಳನ್ನು ಸ್ಥಾಪಿಸಲಾಗಿದೆ. ಸ್ಪಾಟ್ ಬುಕಿಂಗ್ ಆಯ್ಕೆ ಮಾಡಿಕೊಳ್ಳುವ ಭಕ್ತರು ತಮ್ಮ ಗುರುತಿನ ಆಧಾರ್ ಕಾರ್ಡ್‌ನ್ನು ತೋರಿಸುವುದು ಕಡ್ಡಾಯವಾಗಿದೆ.

    ಭಕ್ತರಿಗೆ ಹೆಚ್ಚಿನ ಅನುಕೂಲತೆಗಾಗಿ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಶಬರಿಮಲೆಗೆ ಪ್ರಯಾಣಿಸುವವರಿಗೆ ಆನ್‌ಲೈನ್ ಟಿಕೆಟ್ ಬುಕ್ಕಿಂಗ್ ಮಾಡಲು ಅವಕಾಶ ನೀಡುತ್ತದೆ. ವರ್ಚುವಲ್ ಸರತಿ ವ್ಯವಸ್ಥೆಯ ಮೂಲಕ ದರ್ಶನವನ್ನು ಬುಕ್ ಮಾಡುವಾಗ ಭಕ್ತರು ಕೆಎಸ್‌ಆರ್‌ಟಿಸಿ ಟಿಕೆಟ್‌ಗಳನ್ನು ಖರೀದಿಸಲು ವಿಶೇಷ ಅವಕಾಶವನ್ನು ನೀಡಿದೆ. ಇದಲ್ಲದೆ, ಕನಿಷ್ಠ 40 ಜನರ ಗುಂಪು ಹೊಂದಿರುವವರು 10 ದಿನಗಳ ಮುಂಚಿತವಾಗಿ ಟಿಕೆಟ್ ಕಾಯ್ದಿರಿಸುವ ಆಯ್ಕೆಯನ್ನು ಕೂಡ ನೀಡಲಾಗಿದೆ.

    ಕೇರಳದ ಸಾರಿಗೆ ಸಚಿವ ಕೆಬಿ ಗಣೇಶ್ ಕುಮಾರ್ ಮಾತನಾಡಿ, 2024ರ ಮಂಡಲ ಮಕರವಿಳಕ್ಕು ಯಾತ್ರೆಯ ಮೊದಲ ಹಂತಕ್ಕೆ 383 ಬಸ್‌ಗಳ ವ್ಯವಸ್ಥೆ ಮಾಡಲಾಗಿದ್ದು, ಎರಡನೇ ಹಂತದಲ್ಲಿ ಹೆಚ್ಚುವರಿಯಾಗಿ 550 ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಕೆಲವು ಸಂದರ್ಭದಲ್ಲಿ ಪ್ರಯಾಣಿಕರ ಸಂಖ್ಯೆಗೆ ಅನುಗುಣವಾಗಿ ಬಸ್‌ಗಳ ಸಂಖ್ಯೆಯನ್ನು ಹೆಚ್ಚಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.ಇದನ್ನೂ ಓದಿ: ದಿನ ಭವಿಷ್ಯ 15-11-2024

  • ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ KSRTC ಗುಡ್‌ನ್ಯೂಸ್ – ಮೊದಲ ಬಾರಿಗೆ ಶಬರಿಮಲೆಗೆ ವೋಲ್ವೋ ಬಸ್ ಸಂಚಾರ

    ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ KSRTC ಗುಡ್‌ನ್ಯೂಸ್ – ಮೊದಲ ಬಾರಿಗೆ ಶಬರಿಮಲೆಗೆ ವೋಲ್ವೋ ಬಸ್ ಸಂಚಾರ

    – ನ.29ರಿಂದ ಬೆಂಗಳೂರು ಟು ಶಬರಿಮಲೆ ಬಸ್ ಸಂಚಾರ

    ಬೆಂಗಳೂರು: ಶಬರಿಮಲೆ (Sabarimala) ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಕೆಎಸ್‌ಆರ್‌ಟಿಸಿ (KSRTC) ಗುಡ್‌ನ್ಯೂಸ್ ಕೊಟ್ಟಿದೆ. ಮೊದಲ ಬಾರಿಗೆ ಕೆಎಸ್‌ಆರ್‌ಟಿಸಿಯಿಂದ ಶಬರಿಮಲೆಗೆ ವೋಲ್ವೋ ಬಸ್ (Volvo Bus) ಸಂಚರಿಸಲಿದೆ.

    ಇದೇ ನವೆಂಬರ್ 29ರಿಂದ ಬೆಂಗಳೂರಿನಿಂದ ಶಬರಿಮಲೆಗೆ ಬಸ್ ಸಂಚಾರ ಪ್ರಾರಂಭವಾಗಲಿದೆ. ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ಭಕ್ತಾದಿಗಳು ತೆರಳುವ ಸೀಸನ್ ಇದಾಗಿದ್ದರಿಂದ ಮಾಲಾಧಾರಿಗಳ ಪ್ರಯಾಣಕ್ಕಾಗಿ ಮೊದಲ ಬಾರಿಗೆ ಬೆಂಗಳೂರಿನಿಂದ (Bengaluru) ಶಬರಿಮಲೆಗೆ ವೋಲ್ವೋ ಬಸ್ ಸಂಚರಿಸಲಿದೆ. ಇದನ್ನೂ ಓದಿ: ರಝಾಕರ್‌ಗಳಿಂದಲೇ ಖರ್ಗೆ ತಾಯಿ, ಸಹೋದರಿಯ ಹತ್ಯೆಯಾದರೂ ಮುಸ್ಲಿಮರ ಮತಕ್ಕಾಗಿ ಬಾಯಿ ಬಿಡುತ್ತಿಲ್ಲ: ಯೋಗಿ ತಿರುಗೇಟು

    ಶಾಂತಿನಗರದಿಂದ ಶಬರಿಮಲೆ ನೀಲಕ್ಕಲ್‌ಗೆ 1,750 ರೂ. ಪ್ರಯಾಣ ದರವನ್ನು ಕೆಎಸ್‌ಆರ್‌ಟಿಸಿ ನಿಗದಿ ಮಾಡಿದೆ. ಶಾಂತಿನಗರದಿಂದ ನೀಲಕ್ಕಲ್ ಹಾಗೂ ನೀಲಕ್ಕಲ್‌ನಿಂದ ಶಾಂತಿನಗರಕ್ಕೆ ವೋಲ್ವೋ ಬಸ್ ಸಂಚಾರ ಮಾಡಲಿದೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ. ಇದನ್ನೂ ಓದಿ: ಮದ್ಯದಲ್ಲಿ ಮತ್ತು ಬರಿಸುವ ಔಷಧಿ ಬೆರೆಸಿ ಮನೆಯಿಂದ 1.5 ಕೋಟಿ ದೋಚಿದ್ದ ದಂಪತಿ

  • ಶಬರಿಮಲೆ ಯಾತ್ರೆಗೆ ಆನ್‌ಲೈನ್‌ ಬುಕ್ಕಿಂಗ್‌ ಕಡ್ಡಾಯ – ದಿನಕ್ಕೆ 80,000 ಭಕ್ತರಿಗೆ ದರ್ಶನಕ್ಕೆ ಅವಕಾಶ

    ಶಬರಿಮಲೆ ಯಾತ್ರೆಗೆ ಆನ್‌ಲೈನ್‌ ಬುಕ್ಕಿಂಗ್‌ ಕಡ್ಡಾಯ – ದಿನಕ್ಕೆ 80,000 ಭಕ್ತರಿಗೆ ದರ್ಶನಕ್ಕೆ ಅವಕಾಶ

    ತಿರುವನಂತಪುರಂ: ಶಬರಿಮಲೆಯಲ್ಲಿ (Sabarimala) ನವೆಂಬರ್‌ನಿಂದ ಪ್ರಾರಂಭವಾಗುವ ಎರಡು ತಿಂಗಳ ಮಂಡಲಂ-ಮಕರವಿಳಕ್ಕು ತೀರ್ಥಯಾತ್ರಾ ಹಿನ್ನೆಲೆ ಈ ವರ್ಷ ಆನ್‌ಲೈನ್‌ ಬುಕ್ಕಿಂಗ್‌ ಮಾಡಿದವರಿಗೆ ಮಾತ್ರ ಶಬರಿಮಲೆ ಪ್ರವೇಶಕ್ಕೆ ಅನುಮತಿ ನೀಡಲಾಗುವುದು ಎಂದು ಕೇರಳ ಸರ್ಕಾರ ತಿಳಿಸಿದೆ.

    ಅಯ್ಯಪ್ಪ ದೇಗುಲದಲ್ಲಿ ದಿನಕ್ಕೆ ಗರಿಷ್ಠ 80,000 ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗುವುದು. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದಲ್ಲಿ ಮುಂಬರುವ ತೀರ್ಥಯಾತ್ರೆಯ ಸಿದ್ಧತೆಗಳ ಅವಲೋಕನದ ಮೌಲ್ಯಮಾಪನ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದನ್ನೂ ಓದಿ: ಸಿಲಿಕಾನ್ ಸಿಟಿಯಲ್ಲಿ ಅತಿಹೆಚ್ಚು ಮಳೆ ದಾಖಲು – ಎಲ್ಲೆಲ್ಲಿ ಎಷ್ಟು ಮಳೆ?

    ಸಾಂಪ್ರದಾಯಿಕ ಅರಣ್ಯ ಮಾರ್ಗದಲ್ಲಿ ಭಕ್ತರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗುವುದು. ಜನಸಂದಣಿಯ ಸಮಯದಲ್ಲಿ ವಾಹನಗಳನ್ನು ನಿಯಂತ್ರಿಸಬೇಕಾದರೆ, ಪಾರ್ಕಿಂಗ್‌ಗೆ ಅಗತ್ಯ ಪ್ರದೇಶಗಳನ್ನು ಗುರುತಿಸಿ ಅಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಕಳೆದ ವರ್ಷ ಲಕ್ಷಾಂತರ ಭಕ್ತರು ಅಯ್ಯಪ್ಪ ದರ್ಶನಕ್ಕೆ ಆಗಮಿಸಿದ್ದರಿಂದ ಅದನ್ನು ನಿರ್ವಹಿಸಲು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳದೇ ಇದ್ದಿದ್ದರಿಂದ ಅವ್ಯವಸ್ಥೆ ಉಂಟಾಗಿತ್ತು. ಇದರಿಂದ ಸರ್ಕಾರದ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಈ ವರ್ಷ ಭಕ್ತರ ನಿರ್ವಹಣೆಯನ್ನು ಸಮರ್ಪಕವಾಗಿ ಮಾಡುವ ನಿಟ್ಟಿನಲ್ಲಿ ಆನ್‌ಲೈನ್‌ ಬುಕ್‌ ಮಾಡಿದವರಿಗೆ ಮಾತ್ರ ಅವಕಾಶ ಕಲ್ಪಿಸಲು ಸರ್ಕಾರ ತೀರ್ಮಾನಿಸಿದೆ. ಇದನ್ನೂ ಓದಿ: ಇಂದು ಸಹ ಬೆಂಗಳೂರು ಸೇರಿ ಹಲವೆಡೆ ಭಾರೀ ಮಳೆ ಸಾಧ್ಯತೆ – 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    ಈ ಬಾರಿ ನಿಲಕ್ಕಲ್ ಮತ್ತು ಪಂಪಾದಲ್ಲಿ ಹೆಚ್ಚಿನ ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಲಾಗುತ್ತಿದೆ. ‘ವಿಶುಧಿ ಸೇನಾ’ ಸ್ವಯಂಸೇವಕರಿಗೆ (ಸ್ವಚ್ಛತಾ ಸ್ವಯಂಸೇವಕರು) ಆರೋಗ್ಯ ತಪಾಸಣೆ ಮತ್ತು ತರಬೇತಿಯನ್ನೂ ಏರ್ಪಡಿಸಲಾಗುವುದು. ಶಬರಿಮಲೆಯ ಶಬರಿ ಅತಿಥಿಗೃಹದ ನಿರ್ವಹಣೆ ಶೀಘ್ರದಲ್ಲೇ ಪೂರ್ಣಗೊಳ್ಳಲಿದ್ದು, ಪ್ರಣವಂ ಅತಿಥಿ ಗೃಹದ ನವೀಕರಣ ಈಗಾಗಲೇ ಪೂರ್ಣಗೊಂಡಿದೆ ಎಂದು ತಿಳಿಸಲಾಗಿದೆ.