Tag: Sabarimala ayyappa temple

  • ಅ.22 ರಂದು ಶಬರಿಮಲೆಗೆ ದ್ರೌಪದಿ ಮುರ್ಮು ಭೇಟಿ

    ಅ.22 ರಂದು ಶಬರಿಮಲೆಗೆ ದ್ರೌಪದಿ ಮುರ್ಮು ಭೇಟಿ

    ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು(Droupadi Murmu) ಅವರು ತುಲಾ ಮಾಸ ಪೂಜೆಯ ಕೊನೆಯ ದಿನವಾದ ಅ.22 ರಂದು ಕೇರಳದಲ್ಲಿರುವ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ (Sabarimala Ayyappa Temple) ಭೇಟಿ ನೀಡಲಿದ್ದಾರೆ. ಈ ಮೂಲಕ ಅಯ್ಯಪ್ಪ ದೇವಸ್ಥಾನಕ್ಕೆ ಭೇಟಿ ನೀಡಿದ ಭಾರತದ ಮೊದಲ ಹಾಲಿ ರಾಷ್ಟ್ರಪತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

    ಅ.21 ರಂದು ಸಂಜೆ 6:20ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ತಿರುವನಂತಪುರಂಕ್ಕೆ (Kerala) ಆಗಮಿಸಲಿದ್ದು, ರಾತ್ರಿ ರಾಜಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಅ.22 ರಂದು ತಿರುವನಂತಪುರದಿಂದ ಹೆಲಿಕಾಪ್ಟರ್ ಮೂಲಕ ನೀಲಕ್ಕಲ್‌ಗೆ ಆಗಮಿಸಿ ಬಳಿಕ ರಸ್ತೆ ಮಾರ್ಗದಲ್ಲಿ ಪಂಪಾಗೆ ಆಗಮಿಸಲಿದ್ದಾರೆ.  ಇದನ್ನೂ ಓದಿ:  ಆರ್‌ಎಸ್‌ಎಸ್‌ ಚಟುವಟಿಕೆಯಲ್ಲಿ ಸರ್ಕಾರಿ ನೌಕರರು ಭಾಗವಹಿಸುವುದನ್ನು ನಿಷೇಧಿಸಬೇಕು: ದಿನೇಶ್‌ ಗುಂಡೂರಾವ್‌

    ಪಂಪಾದಿಂದ ಗೂರ್ಖಾ ಫೋರ್ಸ್ ವಾಹನದಲ್ಲಿ ದೇವಾಲಯಕ್ಕೆ ಆಗಮಿಸಿ ಮಧ್ಯಾಹ್ನ 12:20 ರಿಂದ 1 ಗಂಟೆಯ ಒಳಗೆ ಅಯ್ಯಪ್ಪ ದರ್ಶನ ಮಾಡಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ವಿಶೇಷ ವಾಹನದಲ್ಲಿ ಪಂಪಾದಿಂದ ನೀಲಕ್ಕಲ್‌ಗೆ ಆಗಮಿಸಿ ಅಲ್ಲಿಂದ ಹೆಲಿಕಾಪ್ಟರ್‌ನಲ್ಲಿ ತಿರುವನಂತಪುರಕ್ಕೆ ಮರಳಲಿದ್ದಾರೆ. ಇದನ್ನೂ ಓದಿ:  ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ: ಸಿಎಂ

    ರಾಷ್ಟ್ರಪತಿಗಳು ಅಕ್ಟೋಬರ್ 24 ರವರೆಗೆ ರಾಷ್ಟ್ರಪತಿಗಳು ಕೇರಳದಲ್ಲಿ ಇರಲಿದ್ದು ಈ ಸಮಯದಲ್ಲಿ ತಿರುವನಂತಪುರಂ ಮತ್ತು ಕೊಟ್ಟಾಯಂ ಪ್ರದೇಶಗಳಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

    ತುಲಾಮಾಸ ಪೂಜೆಗಾಗಿ ಶಬರಿಮಲೆ ದೇಗುಲದ ಬಾಗಿಲುಗಳನ್ನು ಅ.17 ರಂದು ತೆರೆದು ಅ.22 ರಂದು ಮುಚ್ಚಲಾಗುತ್ತದೆ.

  • ಇಂದಿನಿಂದ ಶಬರಿಮಲೆ ಅಯ್ಯಪ್ಪ ಸ್ವಾಮಿ ಮಂಡಲ ಪೂಜೆ, ದರ್ಶನ ಆರಂಭ

    ಇಂದಿನಿಂದ ಶಬರಿಮಲೆ ಅಯ್ಯಪ್ಪ ಸ್ವಾಮಿ ಮಂಡಲ ಪೂಜೆ, ದರ್ಶನ ಆರಂಭ

    – ನಿತ್ಯ 70,000 ಜನರಿಗೆ ದರ್ಶನ ಅವಕಾಶ ನೀಡಲು ನಿರ್ಧಾರ
    – ಡಿ.26 ರ ತನಕ ದರ್ಶನಕ್ಕೆ ಅವಕಾಶ

    ತಿರುವನಂತಪುರಂ: ಇಂದಿನಿಂದ (ನ.15) ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ (Sabarimala Ayyappa Swami Temple) ಆರಂಭವಾಗಲಿದ್ದು, ಡಿ.25 ರವರೆಗೆ ದರ್ಶನಕ್ಕೆ ಅವಕಾಶ ನೀಡಲಾಗಿದೆ.

    ಇಂದು ಅಯ್ಯಪ್ಪ ಸ್ವಾಮಿ ದರ್ಶನ ಸೇರಿದಂತೆ ಮಂಡಲ ಪೂಜೆ ಪ್ರಾರಂಭಗೊಳ್ಳಲಿದೆ. ದರ್ಶನ ಅವಧಿಯನ್ನು 18 ಗಂಟೆಗೆ ವಿಸ್ತರಿಸಲಾಗಿದ್ದು, ಪ್ರತಿ ನಿತ್ಯ 70,000 ಜನರಿಗೆ ದರ್ಶನ ಅವಕಾಶ ನೀಡುವಂತೆ ದೇವಸ್ಥಾನದ ಆಡಳಿತ ಮಂಡಳಿ ನಿರ್ಧರಿಸಿದೆ. ಜೊತೆಗೆ ಜನಸಂದಣಿ ಹೆಚ್ಚಾದಲ್ಲಿ ಸಮಯವನ್ನು ಅರ್ಧಗಂಟೆ ವಿಸ್ತರಿಸುವಂತೆ ಚಿಂತಿಸಿದೆ.ಇದನ್ನೂ ಓದಿ: ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ – 12 ಬಲಿ

    ಸುಮಾರು 60,000 ಜನರು ವರ್ಚುವಲ್ ಸರತಿ ವ್ಯವಸ್ಥೆಯ ಮೂಲಕ ದರ್ಶನವನ್ನು ಪಡೆಯುತ್ತಾರೆ. ಇನ್ನೂ 10,000 ಜನರು ಸ್ಥಳದಲ್ಲೇ ಬುಕ್ಕಿಂಗ್ ಮಾಡಲು ಅನುಮತಿಸಲಾಗಿದೆ.

    ಇನ್ನೂ ಈ ಕುರಿತು ಶಬರಿಮಲೆ ದೇವಸ್ಥಾನ ಮಂಡಳಿ ಅಧ್ಯಕ್ಷ ಪಿ.ಎಸ್.ಪ್ರಶಾಂತ್ ಮಾತನಾಡಿ, ತೀರ್ಥೋದ್ಭವದ ಆರಂಭದಿಂದ ಪ್ರತಿದಿನ ಬೆಳಗ್ಗೆ 3 ರಿಂದ ಮಧ್ಯಾಹ್ನ 1 ರವರೆಗೆ ಮತ್ತು ಮಧ್ಯಾಹ್ನ 3 ರಿಂದ ರಾತ್ರಿ 11 ರವರೆಗೆ ದರ್ಶನಕ್ಕೆ ನೀಡಲಾಗುವುದು. ಇದರಿಂದಾಗಿ ಭಕ್ತರ ನುಕುನುಗ್ಗಲನ್ನು ಕಡಿಮೆಗೊಳಿಸುವ ಉದ್ದೇಶವನ್ನು ಹೊಂದಿದೆ ಎಂದು ತಿಳಿಸಿದ್ದಾರೆ.

    ಸ್ಥಳದಲ್ಲಿಯೇ ಬುಕ್ಕಿಂಗ್ ಮಾಡಲು ಪಂಪಾ, ಎರುಮೇಲಿ ಮತ್ತು ವಂಡಿಪೆರಿಯಾರ್ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಹಲವಾರು ಕೌಂಟರ್‌ಗಳನ್ನು ಸ್ಥಾಪಿಸಲಾಗಿದೆ. ಸ್ಪಾಟ್ ಬುಕಿಂಗ್ ಆಯ್ಕೆ ಮಾಡಿಕೊಳ್ಳುವ ಭಕ್ತರು ತಮ್ಮ ಗುರುತಿನ ಆಧಾರ್ ಕಾರ್ಡ್‌ನ್ನು ತೋರಿಸುವುದು ಕಡ್ಡಾಯವಾಗಿದೆ.

    ಭಕ್ತರಿಗೆ ಹೆಚ್ಚಿನ ಅನುಕೂಲತೆಗಾಗಿ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಶಬರಿಮಲೆಗೆ ಪ್ರಯಾಣಿಸುವವರಿಗೆ ಆನ್‌ಲೈನ್ ಟಿಕೆಟ್ ಬುಕ್ಕಿಂಗ್ ಮಾಡಲು ಅವಕಾಶ ನೀಡುತ್ತದೆ. ವರ್ಚುವಲ್ ಸರತಿ ವ್ಯವಸ್ಥೆಯ ಮೂಲಕ ದರ್ಶನವನ್ನು ಬುಕ್ ಮಾಡುವಾಗ ಭಕ್ತರು ಕೆಎಸ್‌ಆರ್‌ಟಿಸಿ ಟಿಕೆಟ್‌ಗಳನ್ನು ಖರೀದಿಸಲು ವಿಶೇಷ ಅವಕಾಶವನ್ನು ನೀಡಿದೆ. ಇದಲ್ಲದೆ, ಕನಿಷ್ಠ 40 ಜನರ ಗುಂಪು ಹೊಂದಿರುವವರು 10 ದಿನಗಳ ಮುಂಚಿತವಾಗಿ ಟಿಕೆಟ್ ಕಾಯ್ದಿರಿಸುವ ಆಯ್ಕೆಯನ್ನು ಕೂಡ ನೀಡಲಾಗಿದೆ.

    ಕೇರಳದ ಸಾರಿಗೆ ಸಚಿವ ಕೆಬಿ ಗಣೇಶ್ ಕುಮಾರ್ ಮಾತನಾಡಿ, 2024ರ ಮಂಡಲ ಮಕರವಿಳಕ್ಕು ಯಾತ್ರೆಯ ಮೊದಲ ಹಂತಕ್ಕೆ 383 ಬಸ್‌ಗಳ ವ್ಯವಸ್ಥೆ ಮಾಡಲಾಗಿದ್ದು, ಎರಡನೇ ಹಂತದಲ್ಲಿ ಹೆಚ್ಚುವರಿಯಾಗಿ 550 ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಕೆಲವು ಸಂದರ್ಭದಲ್ಲಿ ಪ್ರಯಾಣಿಕರ ಸಂಖ್ಯೆಗೆ ಅನುಗುಣವಾಗಿ ಬಸ್‌ಗಳ ಸಂಖ್ಯೆಯನ್ನು ಹೆಚ್ಚಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.ಇದನ್ನೂ ಓದಿ: ದಿನ ಭವಿಷ್ಯ 15-11-2024

  • ಸರ್ಕಾರ ರಕ್ಷಣೆ ನೀಡದಿದ್ರೂ ಶಬರಿಮಲೆಗೆ ಭೇಟಿ ನೀಡ್ತೇವೆ- ತೃಪ್ತಿ ದೇಸಾಯಿ

    ಸರ್ಕಾರ ರಕ್ಷಣೆ ನೀಡದಿದ್ರೂ ಶಬರಿಮಲೆಗೆ ಭೇಟಿ ನೀಡ್ತೇವೆ- ತೃಪ್ತಿ ದೇಸಾಯಿ

    ಮುಂಬೈ: ಕೇರಳ ಸರ್ಕಾರದಿಂದ ರಕ್ಷಣೆ ನೀಡುತ್ತಾರೋ ಇಲ್ಲವೋ ಎಂಬುದನ್ನು ಲೆಕ್ಕಿಸದೆ ನವೆಂಬರ್ 20ರ ನಂತರ ಶಬರಿಮಲೆ ದೇವಸ್ಥಾನಕ್ಕೆ ತೆರಳುವುದಾಗಿ ಬಲಪಂಥೀಯ ಕಾರ್ಯಕರ್ತೆ ತೃಪ್ತಿ ದೇಸಾಯಿ ಹೇಳಿದ್ದಾರೆ.

    ನವೆಂಬರ್ 20ರ ನಂತರ ನಾನು ಶಬರಿಮಲೆಗೆ ಹೋಗುತ್ತೇನೆ. ನಾವು ಕೇರಳ ಸರ್ಕಾರದಿಂದ ರಕ್ಷಣೆ ನೀಡುವಂತೆ ಕೇಳಿಕೊಂಡಿದ್ದೇವೆ. ನಮಗೆ ರಕ್ಷಣೆ ನೀಡುವುದು ಬಿಡುವುದು ಅವರಿಗೆ ಬಿಟ್ಟದ್ದು. ರಕ್ಷಣೆ ಒದಗಿಸದಿದ್ದರೂ ನಾನು ದರ್ಶನಕ್ಕಾಗಿ ಶಬರಿಮಲೆಗೆ ಭೇಟಿಯೇ ನೀಡುತ್ತೇನೆ ಎಂದು ತೃಪ್ತಿ ಹೇಳಿದ್ದಾರೆ.

    ಶಬರಿಮಲೆ ದೇವಸ್ಥಾನವನ್ನು ತೆರೆಯುವ ಮುನ್ನ ಕೇರಳ ದೇವಸ್ವಂ ಮಂಡಳಿ ಸಚಿವ ಕೆ.ಸುರೇಂದ್ರನ್ ಈ ಕುರಿತು ಪ್ರತಿಕ್ರಿಯಿಸಿ, ದೇವಾಲಯಕ್ಕೆ ಭೇಟಿ ನೀಡುವ ಯಾವುದೇ ಮಹಿಳೆಗೆ ರಾಜ್ಯ ಸರ್ಕಾರ ರಕ್ಷಣೆ ನೀಡುವುದಿಲ್ಲ. ರಕ್ಷಣೆ ಅಗತ್ಯವಿರುವವರು ಸುಪ್ರೀಂ ಕೋರ್ಟಿನಿಂದ ಆದೇಶ ಪಡೆಯಬೇಕು ಎಂದು ತಿಳಿಸಿದರು.

    ತೃಪ್ತಿ ದೇಸಾಯಿ ಅವರಂಥ ಕಾರ್ಯಕರ್ತರು ತಮ್ಮ ಬಲ ತೋರಿಸುವ ಸ್ಥಳವನ್ನಾಗಿ ದೇವಸ್ಥಾನವನ್ನು ನೋಡಬಾರದು. ರಾಜ್ಯ ಸರ್ಕಾರವು ಶಬರಿಮಲೆ ದೇವಸ್ಥಾನಕ್ಕೆ ಭೇಟಿ ನೀಡುವ ಯಾವುದೇ ಮಹಿಳೆಗೆ ರಕ್ಷಣೆ ನೀಡುವುದಿಲ್ಲ. ಅವರಿಗೆ ಪೊಲೀಸ್ ರಕ್ಷಣೆ ಬೇಕಾದರೆ ಸುಪ್ರೀಂ ಕೋರ್ಟಿನಿಂದ ಆದೇಶ ಪಡೆಯಬೇಕು ಎಂದು ಸುದ್ದಿಗೋಷ್ಠಿಯಲ್ಲಿ ಸುರೇಂದ್ರನ್ ಸ್ಪಷ್ಟಪಡಿಸಿದ್ದಾರೆ.

    ತನ್ನ ಆದೇಶವನ್ನು ಪರಿಶೀಲಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ಕುರಿತು ಸುಪ್ರೀಂ ಕೋರ್ಟಿನ ಪಂಚ ಸದಸ್ಯರ ಪೀಠವು ನ.14ರಂದು ತೀರ್ಪು ನೀಡಿದೆ. ದೇವಾಲಯಕ್ಕೆ ಮಹಿಳೆಯರು ಪ್ರವೇಶಿಸಬೇಕೇ ಬೇಡವೇ ಎಂಬುದರ ಕುರಿತು 3:2 ಅನುಪಾತದಲ್ಲಿ ತೀರ್ಪು ಪ್ರಕಟವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಏಳು ಸದಸ್ಯರಿರುವ ಪೀಠಕ್ಕೆ ವರ್ಗಾಯಿಸಲಾಗಿದೆ. ಈ ಎಲ್ಲದರ ಮಧ್ಯೆ ಸಚಿವರು ಈ ಹೇಳಿಕೆ ನೀಡಿದ್ದಾರೆ.

    ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ಸಾಂವಿಧಾನಿಕ ಪೀಠವು ಸೆಪ್ಟೆಂಬರ್ 2018ರಂದು ದೇವಾಲಯಕ್ಕೆ ಮಹಿಳೆಯರು ಪ್ರವೇಶಿಸಬಹುದು ಎಂದು ತೀರ್ಪು ನೀಡಿತ್ತು. ನಂತರ ತೀರ್ಪನ್ನು ಮರು ಪರಿಶೀಲಿಸುವಂತೆ ಹಲವು ಅರ್ಜಿಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಿ ಸುಪ್ರೀಂ ಕೋರ್ಟ್ 7 ಸದಸ್ಯರ ಪೀಠಕ್ಕೆ ಪ್ರಕರಣವನ್ನು ವರ್ಗಾಯಿಸಿದೆ.

    ಮರು ಪರಿಶೀಲನಾ ಅರ್ಜಿಯಲ್ಲಿ ಜನರ ನಂಬಿಕೆಯಲ್ಲಿ ಸುಪ್ರೀಂ ಕೋರ್ಟ್ ಮಧ್ಯ ಪ್ರವೇಶಿಸಿರುವ ಅಧಿಕಾರದ ಕುರಿತು ಪ್ರಶ್ನಿಸಲಾಗಿದೆ. ಅಲ್ಲದೆ ದೇವಾಲಯದ ದೇವತೆ ಬ್ರಹ್ಮಚಾರಿ ಹಾಗೂ ಮುಟ್ಟಾದ ಮಹಿಳಾ ಆರಾಧಕರ ಪ್ರವೇಶದಿಂದ ಶತಮಾನಗಳಷ್ಟು ಹಳೆಯ ನಂಬಿಕೆಗೆ ಧಕ್ಕೆಯಾಗಲಿದೆ ಎಂದು ವಾದಿಸಲಾಗಿದೆ.