Tag: Sabarimala

  • ಪ್ರಿಯಕರನೊಂದಿಗೆ ಸರಸಕ್ಕೆ ಅಡ್ಡಿಯಾದ ಪತಿ – ಕ್ಷಣಮಾತ್ರದಲ್ಲೇ ಸ್ಕೆಚ್‌ ಹಾಕಿ ಪ್ರಿಯಕರನಿಂದ್ಲೇ ಕೊಲೆ ಮಾಡಿಸಿದ್ಲು ಪತ್ನಿ

    ಪ್ರಿಯಕರನೊಂದಿಗೆ ಸರಸಕ್ಕೆ ಅಡ್ಡಿಯಾದ ಪತಿ – ಕ್ಷಣಮಾತ್ರದಲ್ಲೇ ಸ್ಕೆಚ್‌ ಹಾಕಿ ಪ್ರಿಯಕರನಿಂದ್ಲೇ ಕೊಲೆ ಮಾಡಿಸಿದ್ಲು ಪತ್ನಿ

    ಬೆಂಗಳೂರು: ಶಬರಿಮಲೆ (Sabarimala) ಅಯ್ಯಪ್ಪನ ದರ್ಶನ ಮುಗಿಸಿ ಮನೆಗೆ ಹೋಗದೇ ಅಯ್ಯಪ್ಪನ ಸನ್ನಿದಿಯಿಂದ ನೇರವಾಗಿ ಪ್ರೇಯಸಿಯನ್ನ ನೋಡಲು ಬೆಂಗಳೂರಿಗೆ (Bengaluru) ಬಂದಿದ್ದ ಪ್ರೀಯಕರ, ಇದೀಗ ಪ್ರೇಯಸಿಯೊಂದಿಗೆ ಜೈಲುಪಾಲಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

    ಹೌದು. ಶಬರಿಮಲೆ ಅಯ್ಯಪ್ಪನ ದರ್ಶನ ಮುಗಿಸಿ ಬಂದಿದ್ದ ಪ್ರಿಯಕರನೊಂದಿಗೆ (Lover) ಸರಸವಾಡಲು ಪತಿ ಅಡ್ಡಿಯಾಗಿದ್ದಾನೆ. ಇದರಿಂದ ಆಕ್ರೋಶಗೊಂಡ ಪತ್ನಿ ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಕೊಲೆ ಮಾಡಿಸಿದ್ದಾಳೆ. ಪತಿ ವೆಂಕಟನಾಯ್ಕ್ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿಸಿದ್ದಾಳೆ. ಬಳಿಕ ಪೊಲೀಸ್‌ ಸಹಾಯವಾಣಿ 112ಗೆ ಕರೆ ಮಾಡಿ ಬಾತ್ ರೂಂನಲ್ಲಿ ನನ್ನ ಗಂಡ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾನೆ ಅಂತ ಪೊಲೀಸರ ಮುಂದೆ ಹೈಡ್ರಾಮಾ ಮಾಡಿದ್ದಾಳೆ.

    ಹೆಚ್‌ಎಸ್‌ಆರ್ ಲೇಔಟ್‌ನ (HSR Layout) ನಿವಾಸಿ ಅಗಿರುವ ಆರೋಪಿ ನಂದಿನಿ ಬಾಯಿ ಇದೇ ಜನವರಿ 9ರಂದು ಶಬರಿ ಮಲೆಯಿಂದ ಬಂದಿದ್ದ ಪ್ರಿಯಕರನನ್ನು ತನ್ನ ಮನೆಗೆ ಕರೆಸಿಕೊಂಡಿದ್ದಾಳೆ. ಪತಿ ಇಲ್ಲದ್ದನ್ನು ಗಮನಿಸಿ ಪ್ರಿಯಕರನೊಂದಿಗೆ ಸರಸ ಸಲ್ಲಾಪದಲ್ಲಿ ಮಗ್ನಳಾಗಿದ್ದಳು. ಆದ್ರೆ ಅದೇ ಸಮಯಕ್ಕೆ ಪತಿ ವೆಂಕಟನಾಯ್ಕ್ ಎಂಟ್ರಿ ಕೊಟ್ಟಿದ್ದಾನೆ. ಪತಿಯ ದಿಢೀರ್ ಆಗಮನದಿಂದ ಕಂಗಾಲಾದ ನಂದಿನಿ ಪ್ರೀಯಕರನೊಂದಿಗೆ ಸೇರಿ ತಕ್ಷಣವೇ ಸ್ಕೆಚ್‌ ಹಾಕಿ ಕೊಲೆ ಮಾಡಿಸಿದ್ದಾಳೆ. ಪೊಲೀಸರಿಗೆ ಕೊಲೆ ಎಂದು ಗೋತ್ತಾಗದಂತೆ ಬಾತ್ ರೂಂನಿಂದ ಬಿದ್ದು ಸಾವನ್ನಪ್ಪಿದ್ದಾನೆ ಅನ್ನೋ ರೀತಿಯಲ್ಲಿ ಸೀನ್ ಕ್ರಿಯೇಟ್ ಮಾಡಿದ್ದಾಳೆ. ಇದನ್ನೂ ಓದಿ: ಸಂಸತ್ ದಾಳಿ: ಮೈಸೂರಿನ ಮನೋರಂಜನ್‌ ಸೇರಿ ಐವರಿಗೆ ಮಂಪರು ಪರೀಕ್ಷೆ

    ಮರಣೋತ್ತರ ಪರೀಕ್ಷೆಗೆ ಮೃತದೇಹ ತಗೆದುಕೊಂಡು ಹೋದಾಗ ಇದು ಸಹಜ ಸಾವಲ್ಲ, ಕೊಲೆ ಅನ್ನೋ ಅನುಮಾನ ಪೊಲೀಸರಿಗೆ ಮೂಡಿದೆ. ಕೂಡಲೇ ಹೆಚ್‌ಎಸ್‌ಆರ್ ಲೇಔಟ್ ಪೊಲೀಸರು ಪತ್ನಿ ನಂದಿನಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಅಲ್ಲಿಯೂ ನನ್ನ ಗಂಡನ ಸಾವಿನಿಂದ ನಾನು ಹುಚ್ಚಿಯಾಗಿದ್ದೀನಿ. ನನಗೆ ನನ್ನ ಗಂಡ ಬೇಕು ಎಂದು ಒಂದೇ ಸಮನೇ ಪೊಲೀಸರ ಮುಂದೆ ಹೈಡ್ರಾಮಾ ಮಾಡಿದ್ದಾಳೆ. ಆದ್ರೆ ಇದ್ಯಾವುದಕ್ಕೂ ಜಗ್ಗದೇ ಪೊಲೀಸರು ವಿಚಾರಣೆ ಮುಂದುವರಿಸಿದ್ದು, ನಂತರ ತಪ್ಪೊಪ್ಪಿಕೊಂಡಿದ್ದಾಳೆ. ಇದನ್ನೂ ಓದಿ: ಬೆಂಗಳೂರಿನ ರೇಸ್‌ಕೊರ್ಸ್ ಬುಕ್ಕಿಂಗ್‌ ಕೌಂಟರ್‌ ಮೇಲೆ CCB ದಾಳಿ – 3.47 ಕೋಟಿ ರೂ. ಸೀಜ್

    ಸದ್ಯ ಆರೋಪಿ ನಿತೀಶ್ ಕುಮಾರ್‌ನನ್ನ ಬಂಧಿಸಿ ಪೊಲೀಸರು ತನಿಖೆ ಮಾಡಿದ್ದಾರೆ. ನಂದಿನಿ ಹಾಗೂ ಪ್ರಿಯಕರ ಇಬ್ಬರೂ ಆಂಧ್ರಪ್ರದೇಶ ಮೂಳದವರು ಎಂದು ತಿಳಿದುಬಂದಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಹುಟ್ಟು ಮುಸ್ಲಿಂ ಆಗದಿದ್ರೂ, ಟೋಪಿ ಹಾಕಿದಾಗ ಒರಿಜಿನಲ್‌ ಮುಸ್ಲಿಂ ಥರ ಕಾಣ್ತಾರೆ: ಸಿ.ಟಿ.ರವಿ

  • ಅಯ್ಯಪ್ಪ ಸ್ವಾಮಿ ಮಾಲಾಧಾರಣೆ ಹೇಗೆ..?- ಹೇಗಿರುತ್ತೆ ವ್ರತ, ಜೀವನ ಶೈಲಿ..?

    ಅಯ್ಯಪ್ಪ ಸ್ವಾಮಿ ಮಾಲಾಧಾರಣೆ ಹೇಗೆ..?- ಹೇಗಿರುತ್ತೆ ವ್ರತ, ಜೀವನ ಶೈಲಿ..?

    – ಗುರುಸ್ವಾಮಿಯಾಗಲು ಏನು ಮಾಡಬೇಕು..?

    ಬರಿಮಲೆ (Sabarimala) ಎಂದ ತಕ್ಷಣ ನಮ್ಮ ಕಣ್ಣ ಮುಂದೆ ಬರೋದು ಅಯ್ಯಪ್ಪ ಸ್ವಾಮಿ (Ayyappaswamy) ಮತ್ತು ಮಾಲೆ ಧರಿಸುವ ಭಕ್ತರು. ಈ ಅಯ್ಯಪ್ಪ ಸ್ವಾಮಿಯ ಸಾನಿಧ್ಯವಾದ ಶಬರಿಮಲೆಯನ್ನು ಜಾತ್ಯಾತೀತೆಯ ನೆಲೆಬೀಡೆಂದರೆ ತಪ್ಪಾಗಲಾರದು. ಯಾಕೆಂದರೆ ಮಾಲೆ ಧರಿಸಿದ ಯಾವುದೇ ಜಾತಿಯ ಭಕ್ತನಾದರೂ ಕೂಡ ಶಬರಿಮಲೆಯಲ್ಲಿ ಒಂದಾಗುತ್ತಾರೆ. ಇಲ್ಲಿ ಭಕ್ತರ ಭಕ್ತಿಯೇ ಪ್ರಧಾನವಾಗಿರುತ್ತದೆ ಹೊರತು ಜಾತಿ-ಧರ್ಮವಲ್ಲ. ಮಾಲೆ ಧರಿಸಿದ ಪ್ರತಿಯೊಬ್ಬ ಭಕ್ತನು ಕೂಡ ನಾವೆಲ್ಲ ಒಂದೇ ಕುಟುಂಬದವರು ಎಂಬಂತೆ ಮಕರ ಸಂಕ್ರಾಂತಿಯಂದು ಶಬರಿ ಮಲೆಯಲ್ಲಿ ಬಂದು ಸೇರುತ್ತಾರೆ. ಅಂದು ಮಕರ ಜ್ಯೋತಿಯನ್ನು ಕಣ್ತುಂಬಿಕೊಂಡು ಪುನೀತರಾಗುತ್ತಾರೆ.

    ಪ್ರತೀ ತಿಂಗಳು ಕೇವಲ 5 ದಿನಗಳ ಕಾಲ ಮಾತ್ರ ತೆರೆಯುವ ಈ ದೇವಾಲಯವು ಪ್ರತೀ ವರ್ಷ ನವೆಂಬರ್‍ನಿಂದ ಡಿಸೆಂಬರ್‍ವರೆಗೆ ಅಯ್ಯಪ್ಪ ಸ್ವಾಮಿ ವ್ರತಧಾರಿಗಳಿಗಾಗಿ ತೆರೆದಿರುತ್ತದೆ. ವ್ರತ ಕೈಗೊಂಡು ಮಾಲೆ ಧರಿಸಿದ ಭಕ್ತರು ಪ್ರತೀ ವರ್ಷ ಈ ಸಮಯದಲ್ಲಿ ಶಬರಿ ಮಲೆ ದೇವಾಲಯಕ್ಕೆ ಭೇಟಿ ನೀಡುತ್ತಾರೆ. ಶಬರಿ ಮಲೆ ದೇವಾಲಯಕ್ಕೆ ಮಾಲೆಯನ್ನು ಧರಿಸಿ ಭೇಟಿ ನೀಡುವ ಮುನ್ನ ಅಯ್ಯಪ್ಪ ಭಕ್ತರು 41 ದಿನಗಳ ಕಾಲ ದೈಹಿಕವಾಗಿ ಮತ್ತು ಮಾನಸಿಕವಾಗಿ ಕಠಿಣ ವ್ರತವನ್ನು ಪಾಲಿಸಬೇಕಾಗುತ್ತದೆ. ಹಾಗಿದ್ರೆ ಮಾಲೆ ಹಾಕುವುದು ಹೇಗೆ..?, ವ್ರತ ಹೇಗೆ ಮಾಡುತ್ತಾರೆ..?, ಗುರುಸ್ವಾಮಿ ಅಂದ್ರೆ ಯಾರು..?, ಮಾಲೆ ಹಾಕಿ ಬಳಿಕ ಅವರ ಜೀವನ ಶೈಲಿ ಹೇಗಿರುತ್ತೆ..? ಹೀಗೆ ಮುಂತಾದ ವಿಚಾರಗಳನ್ನು ಡೀಟೈಲ್ ಆಗಿ ಇಲ್ಲಿ ಕೊಡಲಾಗಿದೆ.

    ಮಾಲಾಧಾರಣೆ ಬಗ್ಗೆ: ಅಯ್ಯಪ್ಪ ಸ್ವಾಮಿಯ ಮಾಲಾಧಾರಣೆ ಮಾಡುವಾಗ ಕೆಲವೊಂದು ನಿಯಮಗಳಿವೆ. ಮನೆಯ ಹೊರಗೆ ಎಲ್ಲಿಯಾದರೂ ಮಾಲಾಧಾರಣೆ ಮಾಡಿದರೆ ನೇರವಾಗಿ ಮನೆಗೆ ಹೋಗುವುದು ವಾಡಿಕೆ. ಮಾಲೆ ಹಾಕಿದ ಬಳಿಕ ಯಾವುದೇ ಸಾವು ಸಂಭವಿಸಿದ ಕಡೆ ಹೋಗುವುದು. ಅಂದರೆ ಆಸ್ಪತ್ರೆಗಳು, ಹೋಟೆಲ್‍ಗಳು ಅಥವಾ ಇತರರ ಮನೆಗಳಿಗೆ ಭೇಟಿ ನೀಡುವುದನ್ನು ತಪ್ಪಿಸಬೇಕು. ಮಾಲೆಯನ್ನು ಧರಿಸಿರುವಾಗ ಯಾವುದೇ ಅಂತ್ಯಕ್ರಿಯೆಯ ವಿಧಿಗಳನ್ನು ನಡೆಸಬಾರದು. ಹಾಗೆಯೇ ಅಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಬಾರದು. ಇಷ್ಟು ಮಾತ್ರವಲ್ಲದೇ ಮಾಲೆ ಹಾಕಿದ ಬಳಿಕ ಹಗಲು ಹೊತ್ತಿನಲ್ಲಿ ಮಲಗಬಾರದು ಎಂದು ಸಹ ಹೇಳಲಾಗುತ್ತದೆ.

    ಮಾಲೆ ಧರಿಸಿದ ಸ್ವಾಮಿಗಳು ಕಪ್ಪು ಬಟ್ಟೆಗಳನ್ನು ಧರಿಸುವುದು ಸಾಮಾನ್ಯ. ಆದರೆ ನೀಲಿ, ಕೇಸರಿ ಬಟ್ಟೆಯನ್ನು ಸಹ ಹಾಕಲು ಅವಕಾಶವಿದೆ. ಶಬರಿಮಲೆಗೆ ತೀರ್ಥಯಾತ್ರೆ ಪೂರ್ಣಗೊಳ್ಳುವವರೆಗೆ ಮಾಲೆಯನ್ನು ಯಾವುದೇ ಕಾರಣಕ್ಕೂ ತೆಗೆಯಬಾರದು. ಈ ಸಮಯದಲ್ಲಿ ನಿಮ್ಮನ್ನು ಸ್ವಾಮಿ ಎಂದು ಕರೆಯಲಾಗುತ್ತದೆ. ಅಲ್ಲದೇ ಮಾಲಾಧಾರಿ ಕೂಡ ಎಲ್ಲರನ್ನೂ ಸ್ವಾಮಿ ಎಂದೇ ಕರೆಯಬೇಕು. ಈ ಸಮಯದಲ್ಲಿ ಯಾವುದೇ ರೀತಿಯ ಸೌಂದರ್ಯವರ್ಧಕಗಳು ಅಥವಾ ಇತರ ಅಲಂಕಾರಗಳನ್ನು ಮಾಡುವಂತಿಲ್ಲ. ಭೌತಿಕ ಅಗತ್ಯತೆಗಳು ಮತ್ತು ಆಹಾರದ ವಿಷಯದಲ್ಲಿ ಅತ್ಯಂತ ಸರಳ ಜೀವನವನ್ನು ನಡೆಸಬೇಕು. ಹಾಗೆಯೇ ನಿಮ್ಮ ಉಗುರುಗಳನ್ನು ಕಟ್? ಮಾಡುವುದು ಅಥವಾ ಕೂದಲು ಕತ್ತರಿಸುವುದು ಕೂಡ ಮಾಡಬಾರದು.

    ಹೇಗಿರತ್ತೆ ವ್ರತ?: ತಮ್ಮ ಕಷ್ಟಗಳನ್ನು ದೂರಾಗಿಸುವಂತೆ ಬೇಡಿಕೆಯನ್ನಿಟ್ಟು ಮಾಲೆ ಹಾಕುವ ಭಕ್ತರು ಕಠಿಣ ವ್ರತವನ್ನು ಪಾಲಿಸಬೇಕಾಗುತ್ತದೆ. ಮಾಲೆ ಧರಿಸಿದ ವ್ರತ ಧಾರಿಗಳು ಕೊರೆಯುವ ಚಳಿಯಲ್ಲಿ ಮುಂಜಾನೆ ಬೇಗ ಎದ್ದು, ತಣ್ಣೀರಿನಿಂದ ಸ್ನಾನ ಮಾಡುತ್ತಾರೆ. ಬಾಯಲ್ಲಿ ಅಯ್ಯಪ್ಪ ಸ್ವಾಮಿಯ ಭಜನೆ ಹೇಳುತ್ತಿರುತ್ತಾರೆ. ಹಿಡಿದ ವ್ರತ ಮುಗಿಯುವವರೆಗೆ ಚಪ್ಪಲಿ ಧರಿಸುವುದಿಲ್ಲ. ಒಟ್ಟಾರೆಯಾಗಿ ಮಾಂಸಾಹಾರದೊಂದಿಗಿನ ತಮ್ಮ ಐಷಾರಾಮಿ ಜೀವನ ಶೈಲಿಯನ್ನು ತ್ಯಜಿಸಿ, ದುಶ್ಚಟಗಳಿಂದ ದೂರಾಗಿ ಅಯ್ಯಪ್ಪನ ನಾಮ ಸ್ಮರಣೆಯಲ್ಲಿ ತಲ್ಲೀನರಾಗಿರುತ್ತಾರೆ.

    ಅಯ್ಯಪ್ಪ ಭಕ್ತರು 41 ದಿನಗಳ ಕಾಲ ಉಪವಾಸ ವ್ರತವನ್ನು ಕೈಗೊಳ್ಳಬೇಕು. ಪ್ರತೀ ವರ್ಷದ ನವೆಂಬರ್ ತಿಂಗಳ ಎರಡನೇ ವಾರದಿಂದ ಭಕ್ತರು ಉಪವಾಸ ವ್ರತವನ್ನು ಕೈಗೊಂಡು ಮಾಲೆಯನ್ನು ಧರಿಸುತ್ತಾರೆ. ಉಪವಾಸದ ಸಮಯದಲ್ಲಿ ಅಯ್ಯಪ್ಪ ಭಕ್ತರು ಯಾವುದೇ ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವಂತಿಲ್ಲ. ಭಕ್ತರು ಮಾಲೆ ಧರಿಸಿದ ಸಮಯದಲ್ಲಿ ಕೇವಲ ದೇವರ ಭಜನೆಯಲ್ಲಿ, ಪೂಜೆಯಲ್ಲಿ, ದೇವರ ನಾಮ ಸ್ಮರಣೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು. ಬಡವರಿಗೆ, ನಿರ್ಗತಿಕರಿಗೆ, ರೋಗಿಗಳಿಗೆ ಕೈಲಾದಷ್ಟು ಸಹಾಯವನ್ನು ಮಾಡಬೇಕು.

    ಗುರುಸ್ವಾಮಿ: ಪ್ರತಿಯೊಬ್ಬ ಅಯ್ಯಪ ಸ್ವಾಮಿ ಮಾಲಾಧಾರಿಗೆ ಗುರುಸ್ವಾಮಿಯ ಮಾರ್ಗದರ್ಶನ ಬೇಕಾಗುತ್ತದೆ. ಗುರುಸ್ವಾಮಿಯಾಗಬೇಕಾದರೆ ಓರ್ವ ಅಯ್ಯಪ್ಪ ಮಾಲಾಧಾರಿಯು ಸತತವಾಗಿ 5 ವರ್ಷಗಳ ಕಾಲ ಮಾಲೆಯನ್ನು ಹಾಕಿ, ಪ್ರತೀ ಮಕರ ಸಂಕ್ರಾಂತಿಯಂದು ಅಯ್ಯಪ್ಪನ ದರ್ಶನ ಭಾಗ್ಯವನ್ನು ಪಡೆದುಕೊಳ್ಳಬೇಕಾಗುತ್ತದೆ. 5 ವರ್ಷ ಸಂಪೂರ್ಣಗೊಂಡ ನಂತರ ಅಯ್ಯಪ್ಪ ಸ್ವಾಮಿಯ ಸಾನಿಧ್ಯದಲ್ಲಿ ಶಬರಿಮಲೆಯ ತಂತ್ರಿಗಳ ಉಪಸ್ಥಿತಿಯಲ್ಲಿ ಗುರುಗಳಿಂದ ದೀಕ್ಷೆಯನ್ನು ಪಡೆದು ನಂತರ ಗುರುಸ್ವಾಮಿಯಾಗಬೇಕಾಗುತ್ತದೆ.

    ದೀಕ್ಷೆ ಪಡೆದ ನಂತರ ಅಲ್ಲಿಗೆ ತನ್ನ ಕರ್ತವ್ಯವನ್ನು ಕೈಬಿಡುವಂತಿಲ್ಲ. ಪ್ರತೀ ವರ್ಷ ಒಬ್ಬ ಕನ್ನಿ ಸ್ವಾಮಿಯೊಂದಿಗೆ ಶಬರಿಮಲೆಗೆ ಹೋಗಬೇಕಾಗುತ್ತದೆ. ತನ್ನ ಶಿಷ್ಯರ ಯಾತ್ರೆಯ ಎಲ್ಲಾ ಜವಬ್ದಾರಿಗಳು, ನೀತಿ – ನಿಯಮಗಳು ಗುರುಸ್ವಾಮಿಯ ಮೇಲಿರುತ್ತದೆ. ಈ ಗುರುಸ್ವಾಮಿಯವರ ಕೈಯಿಂದ ಇತರೆ ವ್ರತಧಾರಿಗಳು ಮಾಲಾಧಾರಣೆ ಮಾಡಿಕೊಂಡು, ಗುರುಸ್ವಾಮಿ ಬೋಧಿಸಿದ ನೀತಿ ನಿಯಮಗಳನ್ನು ಪಾಲಿಸಿಕೊಂಡು ವ್ರತಾಚರಣೆ ಮಾಡಬೇಕಾಗುತ್ತದೆ.

    ಜೀವನ ಶೈಲಿ: ಒಂದು ಬಾರಿ ಮಾಲೆ ಹಾಕಿ ಅಯ್ಯಪ್ಪ ಸ್ವಾಮಿಯ ಭಕ್ತರಾದರೆ ಅವರು ಯಾವುದೇ ಕಾರಣಕ್ಕೂ ಮಾಂಸಾಹಾರವನ್ನು ಸೇವಿಸುವಂತಿಲ್ಲ. ಕಾಲಿಗೆ ಚಪ್ಪಲಿಯನ್ನು ಹಾಕುವಂತಿಲ್ಲ, ಬರಿಗಾಲಿನಲ್ಲೇ ನಡೆಯವೇಕು. ಹಾಸಿಗೆ ಮೇಲೆ ಮಲಗುವಂತಿಲ್ಲ, ನೆಲದ ಮೇಲೆ ಮಲಗಬೇಕು. ಮನಸ್ಸಿನಲ್ಲಿ ಸಕಾರಾತ್ಮಕ ಚಿಂತನೆಗಳನ್ನು ಬೆಳೆಸಿಕೊಳ್ಳಬೇಕು. ವ್ರತಧಾರಿಗಳು ಕೈಯಲ್ಲಿ ತುಳಸಿ ಎಲೆಗಳನ್ನು ಇಟ್ಟುಕೊಂಡಿರಬೇಕು. ಯಾವುದೇ ಕಾರಣಕ್ಕೂ ತಲೆಗೆ ಮತ್ತು ದೇಹಕ್ಕೆ ಎಣ್ಣೆಯನ್ನು ಹಚ್ಚಿಕೊಳ್ಳಬಾರದು. ಒಟ್ಟಿನಲ್ಲಿ ಈ ಸಮಯದಲ್ಲಿ ಆಡಂಭರದ ಬದುಕಿನಿಂದ ಅತ್ಯಂತ ಸರಳ ಜೀವನಕ್ಕೆ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು.

    ಬಟ್ಟೆ: ಇಷ್ಟೆಲ್ಲಾ ಕಠಿಣ ನಿಯಮಗಳನ್ನು ಪಾಲಿಸಿದ ಬಳಿಕ ಇರುಮುಡಿ ಹೊತ್ತು ಶಬರಿಮಲೆಯತ್ತ ಸಾಗುತ್ತಾರೆ. ಭಕ್ತರು ಕಡ್ಡಾಯವಾಗಿ ಕಪ್ಪು ಬಟ್ಟೆಯನ್ನು, ಕೇಸರಿ ಬಟ್ಟೆಯನ್ನು ಮಾತ್ರ ಧರಿಸಿ ಹಣೆಗೆ ಗಂಧವನ್ನು ಹಚ್ಚಿಕೊಂಡಿರಬೇಕು. ದೇವಸ್ಥಾನಕ್ಕೆ ಹೋಗುವಾಗ ಜೋಳಿಗೆಯನ್ನು ಹಿಡಿದುಕೊಂಡು ಹೋಗಬೇಕು. ಅಯ್ಯಪ್ಪ ವ್ರತಧಾರಿಗಳು ಧರಿಸುವ ಜೋಳಿಗೆಯಲ್ಲೂ ಕೆಲವೊಂದು ನಿಯಮಗಳಿವೆ. ದೇವಸ್ಥಾನಕ್ಕೆ ಮೊದಲಬಾರಿ ಹೋಗುವ ಭಕ್ತರು ಕೆಂಪು ಬಣ್ಣದ ಜೋಳಿಗೆ ಹೊಂದಿರಬೇಕು. ಮೂರನೇ ಬಾರಿ ದೇಗುಲಕ್ಕೆ ಭೇಟಿ ನೀಡುವರು ನೀಲಿ ಜೋಳಿಗೆ ಈಗಾಗಲೇ ಅನೇಕ ಬಾರಿ ಹೋದವರಿಗೆ ಕೇಸರಿ ಬಣ್ಣದ ಜೋಳಿಗೆ ನೀಡುವ ಕ್ರಮವಿದೆ.

  • ಶಬರಿಮಲೆ ಅಯ್ಯಪ್ಪ ಭಕ್ತರಿದ್ದ ಕಾರು ಅಪಘಾತ _ ಓರ್ವ ಸಾವು, ಮೂವರು ಗಂಭೀರ

    ಶಬರಿಮಲೆ ಅಯ್ಯಪ್ಪ ಭಕ್ತರಿದ್ದ ಕಾರು ಅಪಘಾತ _ ಓರ್ವ ಸಾವು, ಮೂವರು ಗಂಭೀರ

    ಮಡಿಕೇರಿ: ಶಬರಿಮಲೆ (Sabarimala) ಅಯ್ಯಪ್ಪ ಭಕ್ತರಿದ್ದ (Ayyappa Devotees) ಕಾರು (Car) ಅಪಘಾತವಾದ (Accident) ಪರಿಣಾಮ ಓರ್ವ ಸಾವನ್ನಪ್ಪಿದ್ದು, ಮೂವರು ಗಂಭೀರ ಗಾಯಗೊಂಡ ಘಟನೆ ಅಂಗಮಾಲಿ (Angamaly) ಪೆರುಂಬುರ್ ಬಳಿ ನಡೆದಿದೆ.

    ಶಬರಿಮಲೆಯಿಂದ ಹಿಂದಿರುಗುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು, ಕೊಡಗು (Kodagu) ಜಿಲ್ಲೆ ಕುಶಾಲನಗರದ ಹಾರಂಗಿ ದೊಡ್ಡತ್ತೂರು ನಿವಾಸಿ ರಾಮ ಎಂಬವರ ಪುತ್ರ ಚಂದ್ರ ಘಟನೆಯಲ್ಲಿ ಮೃತಪಟ್ಟಿದ್ದಾರೆ. ಇನ್ನೂ ಈ ಘಟನೆಯಲ್ಲಿ ಕಾರಿನಲ್ಲಿದ್ದ ಮೂವರು ಗಂಭೀರ ಗಾಯಗೊಂಡಿದ್ದಾರೆ. ಇದನ್ನೂ ಓದಿ: ಶಸ್ತ್ರಚಿಕಿತ್ಸೆ ವೇಳೆ ವೃದ್ಧೆಯ ತಲೆಗೆ 3 ಬಾರಿ ಪಂಚ್‌ ಕೊಟ್ಟ ವೈದ್ಯ- ಮುಂದೇನಾಯ್ತು?

    ಗಾಯಾಳುಗಳನ್ನು ಕುಶಾಲನಗರದ ಲಿಂಗಂ, ಹರೀಶ್ ಹಾಗೂ ಸಂತೋಷ್ ಎಂದು ಗುರುತಿಸಲಾಗಿದೆ. ಗಾಯಾಳುಗಳಿಗೆ ಪೆರಂಬೂರಿನ ರಾಜಗಿರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ವ್ಯಕ್ತಿಯ ಕಾಲಿಗೆ ಸರಪಳಿ ಹಾಕಿ ಜೀತಕ್ಕಿಟ್ಟ ಮಾಲೀಕ- ಕಾರ್ಮಿಕನ ರಕ್ಷಣೆ

  • 39 ದಿನಗಳಲ್ಲಿ ಶಬರಿಮಲೆಗೆ 204 ಕೋಟಿ ರೂ. ಆದಾಯ- ಕಳೆದ ವರ್ಷ ಎಷ್ಟಿತ್ತು?

    39 ದಿನಗಳಲ್ಲಿ ಶಬರಿಮಲೆಗೆ 204 ಕೋಟಿ ರೂ. ಆದಾಯ- ಕಳೆದ ವರ್ಷ ಎಷ್ಟಿತ್ತು?

    ಪತ್ತನಂತಿಟ್ಟ: ಅಯ್ಯಪ್ಪ (Ayyappa) ಸನ್ನಿಧಾನದಲ್ಲಿ ಕಳೆದ 39 ದಿನಗಳಲ್ಲಿ ಬರೋಬ್ಬರಿ 204.30 ಕೋಟಿ ರೂ. ಆದಾಯ (Revenue) ಸಂಗ್ರಹವಾಗಿದೆ. ಆದರೆ ಕಳೆದ ವರ್ಷಕ್ಕಿಂತ ಈ ವರ್ಷ ಸುಮಾರು 18 ಕೋಟಿ ಆದಾಯ ಕಡಿಮೆಯಾಗಿದೆ ಎಂಬುದಾಗಿ ವರದಿಯಾಗಿದೆ.

    ಶಬರಿಮಲೆ (Sabarimala) ದೇಗುಲದಲ್ಲಿ 41 ದಿನಗಳ ಕಾಲ ನಡೆದ ಮಂಡಲಂ-ಮಕರವಿಳಕ್ಕು (Mandalam-Makaravilakku) ಯಾತ್ರೆಯ ಮೊದಲ ಹಂತ ಇಂದು ಮುಕ್ತಾಯಗೊಳ್ಳಲಿದೆ. ಮೊದಲ 39 ದಿನಗಳ ಅಂದರೆ ಡಿಸೆಂಬರ್ 25 ರವರೆಗೆ ಬೆಟ್ಟದ ದೇಗುಲದ ಆದಾಯವು 204,30,76,704 ರೂ.ಗೆ ತಲುಪಿದೆ. ಆದಾಯದಲ್ಲಿ ಕಳೆದ ವರ್ಷಕ್ಕಿಂತ ಈ ವರ್ಷ ಕಡಿಮೆಯಾಗಿದೆ. ಆದರೆ ಮೊದಲ 39 ದಿನಗಳಲ್ಲಿ ದೇವಾಲಯಕ್ಕೆ ಭೇಟಿ ನೀಡಿದ ಯಾತ್ರಾರ್ಥಿಗಳ ಸಂಖ್ಯೆ ಹಿಂದಿನ ವರ್ಷಕ್ಕಿಂತ ಹೆಚ್ಚಾಗಿದೆ.

    ತಿರುವಾಂಕೂರು ದೇವಸ್ವಂ ಬೋರ್ಡ್ (TDB) ಅಧ್ಯಕ್ಷ ಪಿ.ಎಸ್.ಪ್ರಶಾಂತ್ ಶಬರಿಮಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕಳೆದ ವರ್ಷ ಈ ಬಾರಿ 222,98,70,250 (222.98 ಕೋಟಿ ರೂ.) ಆದಾಯ ಬಂದಿದ್ದು, ಈ ಬಾರಿ 18,67,93, 546 ರೂ. ಇಳಿಕೆಯಾಗಿದೆ. ಇನ್ನು ನಾಣ್ಯಗಳನ್ನು ಎಣಿಸಿದ ನಂತರ ‘ಕುತಕ ಲೇಲಂ’ ಆದಾಯವನ್ನು ಸೇರಿಸಿದರೆ ಆದಾಯ ಹೆಚ್ಚಾಗಬಹುದು ಎಂದು ಅವರು ತಿಳಿಸಿದ್ದಾರೆ.

    ಭಕ್ತರು ಸಲ್ಲಿಸಿರುವ ಕಾಣಿಕೆಯಿಂದ 63.89 ಕೋಟಿ ರೂ. ಸಂಗ್ರಹವಾಗಿದೆ. ಅರವಣ ಪ್ರಸಾದದಿಂದ 96.32 ಕೋಟಿ ರೂ., ಅಪ್ಪಂ ಪ್ರಸಾದ ಮಾರಾಟದಿಂದ 12.39 ಕೋಟಿ ರೂ. ಆದಾಯ ಬಂದಿದೆ. ಈ ಋತುವಿನಲ್ಲಿ 31 ಲಕ್ಷ ಯಾತ್ರಾರ್ಥಿಗಳು ಬೆಟ್ಟದ ದೇಗುಲಕ್ಕೆ ಭೇಟಿ ನೀಡಿದ್ದಾರೆ. ಕಳೆದ ಋತುವಿನಲ್ಲಿ ಸುಮಾರು 30 ಲಕ್ಷ ಭಕ್ತರು ಶಬರಿಮಲೆಗೆ ಭೇಟಿ ನೀಡಿದ್ದರು. ಹಿಂದಿನ ವರ್ಷ 50 ಲಕ್ಷ ಭಕ್ತರು ಇಡೀ ತೀರ್ಥೋದ್ಭವದಲ್ಲಿ ಪಾಲ್ಗೊಂಡಿದ್ದರು. ಈ ಬಾರಿ 50 ಲಕ್ಷಕ್ಕೂ ಹೆಚ್ಚು ಯಾತ್ರಾರ್ಥಿಗಳನ್ನು ನಿರೀಕ್ಷಿಸುತ್ತಿದ್ದೇವೆ ಎಂದು ಪ್ರಶಾಂತ್‌ ವಿವರಿಸಿದ್ದಾರೆ.

  • ಅವ್ಯವಸ್ಥೆಯ ಆಗರವಾಗಿದೆ ಶಬರಿಮಲೆ: ಕೆ.ಎಸ್ ಈಶ್ವರಪ್ಪ ಕಿಡಿ

    ಅವ್ಯವಸ್ಥೆಯ ಆಗರವಾಗಿದೆ ಶಬರಿಮಲೆ: ಕೆ.ಎಸ್ ಈಶ್ವರಪ್ಪ ಕಿಡಿ

    ಶಿವಮೊಗ್ಗ: ಶಬರಿಮಲೆಯಲ್ಲಿ (Sabarimala) ಅವ್ಯವಸ್ಥೆಯ ಆಗರವಾಗಿದೆ. ಕೇರಳ ಸರ್ಕಾರವು ಇದನ್ನು ಶೀಘ್ರವಾಗಿ ಸರಿಪಡಿಸಲಿ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ (KS Eshwarappa) ಒತ್ತಾಯಿಸಿದರು.

    ಈ ಸಂಬಂಧ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಭಕ್ತರ ನೂಕುನುಗ್ಗಲಿಗೆ ಎಂಟು ವರ್ಷದ ಮಗು ಬಲಿಯಾಗಿದೆ. ರಸ್ತೆ ಬದಿಯಲ್ಲಿ ಮಲಗಿದ್ದ ಯುವಕನ ಮೇಲೆ ಬಸ್ ಹರಿದು ಕಾಲು ಊನವಾಗಿದೆ. ಕೇರಳ ಸರ್ಕಾರ ಅಯ್ಯಪ್ಪಸ್ವಾಮಿ ಮಾಲಾಧಾರಿಗಳ ಮೇಲೆ ದಬ್ಬಾಳಿಕೆ ನಡೆಸುತ್ತಿದೆ ಎಂದು ಆರೋಪಿಸಿದರು.

    ನಾನು ಸಹ ಎರಡು ಬಾರಿ ಶಬರಿಮಲೆಗೆ ಹೋಗಿದ್ದೇನೆ. ಆಗ ಇಂತಹ ಸಮಸ್ಯೆ ಇರಲಿಲ್ಲ. ಈಗ ಬೇಕುಂತಲೇ ಸಮಸ್ಯೆ ಸೃಷ್ಟಿಸುತ್ತಿದ್ದಾರೆ. ಕೇರಳ ಸರ್ಕಾರ (Kerala Govt) ಈ ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸಬೇಕು. ಇಲ್ಲದಿದ್ದರೆ ರಾಜ್ಯದ ಅಯ್ಯಪ್ಪ (Ayyappa) ಭಕ್ತರು ಸೇರಿಕೊಂಡು ಕೇರಳದಲ್ಲಿ ದೊಡ್ಡ ಆಂದೋಲನ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಮಲೆನಾಡಿಗರನ್ನೂ ಬಿಟ್ಟೂ ಬಿಡದೇ ಕಾಡ್ತಿದೆ ಮಂಗನ ಕಾಯಿಲೆ – ವರ್ಷದ ಮೊದಲ ಕೇಸ್‌ ಪತ್ತೆ, ಹೆಚ್ಚಿದ ಆತಂಕ

    ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಿ ದೇವಸ್ಥಾನವನ್ನು ತನ್ನ ಸುಪರ್ದಿಗೆ ತೆಗೆದುಕೊಳ್ಳಬೇಕು ಎಂದು ಇದೇ ವೇಳೆ ಈಶ್ವರಪ್ಪ ಆಗ್ರಹಿಸಿದರು.

  • ಅಯ್ಯಪ್ಪ ದರ್ಶನ ಸಿಗದೇ ವಾಪಸ್‌ – ಭಕ್ತರ ನಿರ್ವಹಣೆಯಲ್ಲಿ ಕೇರಳ ಸರ್ಕಾರ ಸಂಪೂರ್ಣ ವಿಫಲ

    ಅಯ್ಯಪ್ಪ ದರ್ಶನ ಸಿಗದೇ ವಾಪಸ್‌ – ಭಕ್ತರ ನಿರ್ವಹಣೆಯಲ್ಲಿ ಕೇರಳ ಸರ್ಕಾರ ಸಂಪೂರ್ಣ ವಿಫಲ

    ತಿರುವನಂತಪುರಂ: ಅಯ್ಯಪ್ಪನ (Ayyappa) ದರ್ಶನಕ್ಕೆಂದೇ 48 ದಿನಗಳವರೆಗೂ ವ್ರತ ಆಚರಿಸಿ ಶಬರಿಮಲೆಗೆ (Sabarimala) ತೆರಳಿದ್ದ ಕರ್ನಾಟಕ (Karnatka) ಸೇರಿ ಹಲವು ರಾಜ್ಯಗಳ ಭಕ್ತರು, ಅಯ್ಯಪ್ಪನ ದರ್ಶನ ಮಾಡಲಾಗದೆಯೇ ಮರಳುತ್ತಿದ್ದಾರೆ.

    ಭಕ್ತರ ನಿರ್ವಹಣೆ, ಭಕ್ತರ ವಾಹನಗಳ ನಿರ್ವಹಣೆಯಲ್ಲಿ ಟ್ರಾವಂಕೂರು ದೇವಸ್ಥಾನ ಮಂಡಳಿ (Travancore Devaswom Board) ಮತ್ತು ಪೊಲೀಸರು ಪೂರ್ಣ ವಿಫಲರಾಗಿದ್ದು ಕೇರಳ ಸರ್ಕಾರದ (Kerala Government) ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ.

    ದೇವರ ದರ್ಶನಕ್ಕೆ ಭಕ್ತರು ಹಲವು ಗಂಟೆಗಳ ಕಾಲ ಅನ್ನ, ನೀರು ಇಲ್ಲದೇ ಸರದಿಯಲ್ಲಿ ನಿಲ್ಲಬೇಕಾದ ಪರಿಸ್ಥಿತಿ ಎದುರಾಗಿದೆ. ಅವ್ಯವಸ್ಥೆ ಪ್ರಶ್ನಿಸಿದ್ದಕ್ಕೆ ಪೊಲೀಸರು ಭಕ್ತರ ಮೇಲೆಯೇ ಹಲ್ಲೆ ನಡೆಸಿದ್ದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿದಾಡುತ್ತಿದೆ.   ಇದನ್ನೂ ಓದಿ: ಆಕಾಂಕ್ಷಿಯೂ ಅಲ್ಲದೆ ಕೊನೇ ಸಾಲಿನಲ್ಲಿದ್ದ ಭಜನ್ ಲಾಲ್ ಸಿಎಂ ಆಗಿದ್ದು ಹೇಗೆ?

    ಮೊದಲು ಪಂಬೆಯಲ್ಲಿ ಪಾರ್ಕ್‌ ಮಾಡಿ ದೇವಸ್ಥಾನಕ್ಕೆ ಭಕ್ತರು ತೆರಳಬಹುದಿತ್ತು. ಆದರೆ ಈಗ ಕೇರಳ ಸರ್ಕಾರ ನಿಲಕ್ಕಲ್‌ನಲ್ಲಿ (Nilakkal) ಭಕ್ತರ ವಾಹನಗಳಿಗೆ ಪಾರ್ಕಿಂಗ್‌ ವ್ಯವಸ್ಥೆ ಮಾಡಿದೆ. ಇಲ್ಲಿಂದ ಸರ್ಕಾರಿ ಬಸ್ಸಿನ ಮೂಲಕ ಭಕ್ತರು ಹೋಗುತ್ತಿದ್ದಾರೆ. ಅವ್ಯವಸ್ಥೆಯ ಕಾರಣದಿಂದ ದರ್ಶನ ಸಿಗದೇ ಕರ್ನಾಟಕ, ತಮಿಳುನಾಡು, ಆಂಧ್ರ ಸೇರಿ ಹಲವು ರಾಜ್ಯಗಳ ಭಕ್ತರು ಪಂದಳಂನಿಂದಲೇ ಹಿಂದಿರುಗುತ್ತಿದ್ದಾರೆ.

    ಕಣ್ಣೀರಿಟ್ಟ ಬಾಲಕ: ನೀಲಕ್ಕಲ್‌ನಲ್ಲಿ ತಂದೆಯಿಂದ ತಪ್ಪಿಸಿಕೊಂಡ ಪುಟ್ಟ ಬಾಲಕನೊಬ್ಬ ಬಸ್ಸಿನಲ್ಲೇ ತಂದೆಯನ್ನು ಹುಡುಕಿಕೊಡುವಂತೆ ಕಣ್ಣೀರೀಟ್ಟು ಕೈಮುಗಿದು ಬೇಡಿಕೊಳ್ಳುತ್ತಿರುವ ವಿಡಿಯೋ ವೈರಲ್‌ ಆಗಿದೆ. ಬಾಲಕ ಕಣ್ಣೀರಿಟ್ಟ ಕೆಲ ಹೊತ್ತಿನಲ್ಲೇ ಆತನ ತಂದೆ ವಾಹನದ ಬಳಿ ಪುತ್ರನನ್ನು ಸಂತೈಸಿದ್ದು ವಿಡಿಯೋದಲ್ಲಿ ಸೆರೆಯಾಗಿದೆ.

    ಪಬ್ಲಿಕ್‌ ಟಿವಿ ಜೊತೆ ಮಾತನಾಡಿದ ಭಕ್ತರೊಬ್ಬರು, ಹಿಂದೆ ನಾನು ಹೋದಾಗ ಈ ರೀತಿಯ ಅನುಭವ ಆಗಲಿಲ್ಲ. ಭಕ್ತರ ಸಂಖ್ಯೆ ಜಾಸ್ತಿ ಏನು ಇಲ್ಲ. ಪಂಬೆಯಲ್ಲಿ ಪಾರ್ಕಿಂಗ್‌ ಜಾಗ ಇದ್ದರೂ ಕಡ್ಡಾಯವಾಗಿ ಭಕ್ತರಿಂದ ಹಣವನ್ನು ಸುಲಿಗೆ ಮಾಡುವ ಉದ್ದೇಶದಿಂದಲೇ ಸರ್ಕಾರಿ ಬಸ್‌ ಓಡಿಸುತ್ತಿದ್ದಾರೆ. ಆದರೆ ಕೇರಳ ನೋಂದಣಿಯ ವಾಹನಗಳನ್ನು ಬಿಡುತ್ತಿದ್ದಾರೆ. ಭಕ್ತರ ನಿರ್ವಹಣೆಯಲ್ಲಿ ಕೇರಳ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ದೂರಿದರು.

     

  • ಭಕ್ತರನ್ನು ಹೊತ್ತು ಶಬರಿಮಲೆಗೆ ತೆರಳುತ್ತಿದ್ದ ಬಸ್ ಪಲ್ಟಿ – 17 ಮಂದಿಗೆ ಗಾಯ

    ಭಕ್ತರನ್ನು ಹೊತ್ತು ಶಬರಿಮಲೆಗೆ ತೆರಳುತ್ತಿದ್ದ ಬಸ್ ಪಲ್ಟಿ – 17 ಮಂದಿಗೆ ಗಾಯ

    ಕೋಲಾರ: ಕರ್ನಾಟಕದ (Karnataka) ಭಕ್ತರನ್ನು ಹೊತ್ತು ಶಬರಿಮಲೆಗೆ (Sabarimala) ತೆರಳುತ್ತಿದ್ದ ಬಸ್ ಪಲ್ಟಿಯಾದ ಪರಿಣಾಮ 13 ಮಂದಿ ಸೇರಿ ಒಟ್ಟು 17 ಮಂದಿ ಶಬರಿಮಲೆ ಯಾತ್ರಿಕರು (Pilgrims) ಗಾಯಗೊಂಡಿರುವ ಘಟನೆ ಕೇರಳದ (Kerala) ಅತ್ತಿವಲವುನ ಎರುಮೆಲಿನಲ್ಲಿ (Erumeli) ನಡೆದಿದೆ.

    ಕೇರಳ ರಾಜ್ಯದ ಕೊಟ್ಟಾಯಂ (Kottayam) ಜಿಲ್ಲೆಯಲ್ಲಿ ಈ ಅಪಘಾತ (Accident) ಸಂಭವಿಸಿದ್ದು, ಕೋಲಾರ (Kolar) ಮೂಲದ 13 ಮಂದಿ ಸೇರಿದಂತೆ ಒಟ್ಟು 17 ಮಂದಿ ಗಾಯಗೊಂಡಿದ್ದಾರೆ. ಶಬರಿಮಲೆ ಯಾತ್ರಿಕರನ್ನು ಹೊತ್ತ ಬಸ್ ಪತ್ತನಂತಿಟ್ಟ ಜಿಲ್ಲೆಯಲ್ಲಿರುವ ಬೆಟ್ಟದ ದೇಗುಲಕ್ಕೆ ತೆರಳುತ್ತಿದ್ದ ವೇಳೆ ಪಲ್ಟಿಯಾಗಿದೆ. ಇದನ್ನೂ ಓದಿ: ಕೋರಮಂಗಲದ ಕಟ್ಟಡದಲ್ಲಿ ಬೆಂಕಿ ಅವಘಡ – ಪ್ರಾಣ ಉಳಿಸಿಕೊಳ್ಳಲು 4ನೇ ಮಹಡಿಯಿಂದ ಜಿಗಿದ

    ಬಸ್ಸಿನಲ್ಲಿ ಒಟ್ಟು 43 ಮಂದಿ ಯಾತ್ರಿಕರು ಪ್ರಯಾಣಿಸುತ್ತಿದ್ದರು. ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಬಸ್ ಪಲ್ಟಿಯಾಗಿದೆ. ಗಾಯಾಳುಗಳನ್ನು ಮುಳಬಾಗಿಲು ತಾಲೂಕಿನ ತಮ್ಮರೆಡ್ಡಿಹಳ್ಳಿ, ಬಂಗವಾದಿ, ಮಜರಾ ಕಿತ್ತೂರು, ಗ್ರಾಮದವರು ಎನ್ನಲಾಗಿದೆ. ಯಾತ್ರಾರ್ಥಿಗಳು ಮುಳಬಾಗಿಲಿನಿಂದ ವಿನಾಯಕ ಖಾಸಗಿ ಬಸ್‌ನಲ್ಲಿ ಶಬರಿಮಲೆಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಇದನ್ನೂ ಓದಿ: ಗೋವಾದಿಂದ ಟ್ರಾನ್ಸ್‌ಫಾರ್ಮರ್‌ನಲ್ಲಿ ಮದ್ಯ ಸಾಗಾಟ – ಆರೋಪಿ ಅರೆಸ್ಟ್

    ಗಾಯಗೊಂಡ 17 ಮಂದಿಯಲ್ಲಿ 15 ಮಂದಿಯನ್ನು ಕಂಜಿರಪ್ಪಲಿ ತಾಲೂಕು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಉಳಿದ ಇಬ್ಬರನ್ನು ಕೊಟ್ಟಾಯಂ ವೈದ್ಯಕೀಯ ಕಾಲೇಜಿಗೆ ವರ್ಗಾಯಿಸಲಾಗಿದೆ. ಇದನ್ನೂ ಓದಿ: 20 ವರ್ಷಗಳ ಹಿಂದಿನ ಕೊಲೆ ಪ್ರಕರಣ – ಮೃತ ವ್ಯಕ್ತಿಯನ್ನು ಬಂಧಿಸಿದ ಪೊಲೀಸರು!

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಶಬರಿಮಲೆಯಲ್ಲಿ ಕಾಣಿಸಿಕೊಂಡ ಪ್ರಸಿದ್ಧ ನಟಿ ಸಿತಾರಾ

    ಶಬರಿಮಲೆಯಲ್ಲಿ ಕಾಣಿಸಿಕೊಂಡ ಪ್ರಸಿದ್ಧ ನಟಿ ಸಿತಾರಾ

    ಹಾಲುಂಡ ತವರು ಸೇರಿದಂತೆ ಕನ್ನಡದಲ್ಲಿ ಸಾಕಷ್ಟು ಸಿನಿಮಾಗಳನ್ನು ಮಾಡಿರುವ ಸಿತಾರಾ (Sitara), ಹಲವು ವರ್ಷಗಳಿಂದ ಚಿತ್ರೋದ್ಯಮದಲ್ಲಿ ಕಾಣಿಸಿಕೊಂಡಿರಲಿಲ್ಲ. ಅವರು ದೇಶದಲ್ಲಿ ಇದ್ದರಾ ಅಥವಾ ವಿದೇಶದಲ್ಲಿ ನೆಲೆಯೂರಿದ್ದರಾ ಎನ್ನುವ ಕುರಿತೂ ಮಾಹಿತಿ ಇರಲಿಲ್ಲ. ಇದೀಗ ಏಕಾಏಕಿ ಶಬರಿಮಲೆಯಲ್ಲಿ (Sabarimala) ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ.

    ಚಿರಂಜೀವಿ ಸರ್ಜಾ ನಟನೆಯ ‘ಅಮ್ಮ ಐ ಲವ್ ಯೂ’ ಚಿತ್ರದ ನಂತರ ಬಹುತೇಕ ಚಿತ್ರರಂಗದಿಂದಲೇ ದೂರವಿದ್ದ ಸಿತಾರಾಗೆ ಶಬರಿಮಲೆಗೆ ಹೋಗಬೇಕು ಎನ್ನುವ ಸಂಕಲ್ಪವಿತ್ತು ಎಂದು ಹೇಳಲಾಗುತ್ತಿದೆ. ಅದನ್ನು ಈಗ ಪೂರೈಸಿದ್ದಾರೆ. ಹಲವು ಮಹಿಳೆಯರ ಜೊತೆ ಶಬರಿಮಲೆಗೆ ಬಂದಿದ್ದ ಸಿತಾರಾ ಅಯ್ಯಪ್ಪನ ದರ್ಶನ (Darshana) ಪಡೆದಿದ್ದಾರೆ. ಇದನ್ನೂ ಓದಿ:ಅಭಿಮಾನಿ ವರ್ತನೆಗೆ ಬೆಚ್ಚಿಬಿದ್ದ ವಿಜಯ್ ದೇವರಕೊಂಡ

    ಕಾರ್ತಿಕ ಮಾಸದ ಆರಂಭದ ದಿನಗಳಲ್ಲಿ ಶಬರಿಮಲೆ ಬಾಗಿಲು ತೆರೆದಿರುತ್ತದೆ. ಹಾಗಾಗಿ ಇದೇ ಸಂದರ್ಭದಲ್ಲಿ ಸಿತಾರಾ ಅಯ್ಯಪ್ಪನ (Ayyappa) ದರ್ಶನಕ್ಕೆ ಆಗಮಿಸಿದ್ದಾರೆ. ಕುಟುಂಬದ ಸದಸ್ಯರು ಮತ್ತು ಆಪ್ತರೊಂದಿಗೆ ಶಬರಿಮಲೆಗೆ ಬಂದಿದ್ದ ಅವರು, ಅಯ್ಯಪ್ಪನ ದರ್ಶನ ಮಾಡಿದ್ದಾರೆ. ಆ ಫೋಟೋಗಳು ಸದ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

     

    ಕಣ್ಣೀರಿನ ಪಾತ್ರಗಳಿಗೆ ಹೇಳಿ ಮಾಡಿಸಿದಂತಿದ್ದರು ಸಿತಾರಾ. ಅದರಲ್ಲೂ ಹಾಲುಂಡ ತವರು ಸಿನಿಮಾ ಅವರಿಗೆ ಸಾಕಷ್ಟು ಹೆಸರು ತಂದುಕೊಟ್ಟಿತ್ತು. ಕನ್ನಡದಲ್ಲೇ ಅವರು ಐವತ್ತಕ್ಕೂ ಹೆಚ್ಚು ಸಿನಿಮಾಗಳನ್ನು ಮಾಡಿದ್ದಾರೆ. ವಿಷ್ಣುವರ್ಧನ್ ಸೇರಿದಂತೆ ಹಲವು ಸ್ಟಾರ್ ನಟರ ಜೊತೆ ತೆರೆಹಂಚಿಕೊಂಡ ಹೆಗ್ಗಳಿಕೆ ಅವರದ್ದು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸ್ಯಾಂಟ್ರೋ ರವಿ ಪ್ರಕರಣ ಸಿಐಡಿ ಒಪ್ಪಿಸಿ ಶಬರಿಮಲೆಗೆ ಹೊರಟ ಆರಗ ಜ್ಞಾನೇಂದ್ರ

    ಸ್ಯಾಂಟ್ರೋ ರವಿ ಪ್ರಕರಣ ಸಿಐಡಿ ಒಪ್ಪಿಸಿ ಶಬರಿಮಲೆಗೆ ಹೊರಟ ಆರಗ ಜ್ಞಾನೇಂದ್ರ

    ಬೆಂಗಳೂರು: ಸ್ಯಾಂಟ್ರೋ ರವಿ ಪ್ರಕರಣವನ್ನು (Santro Ravi Case)  ಸರ್ಕಾರ ಸಿಐಡಿ (CID) ತನಿಖೆಗೆ ಒಪ್ಪಿಸಿದೆ. ಗೃಹಸಚಿವ ಆರಗ ಜ್ಞಾನೇಂದ್ರ ಸೂಚನೆ ಮೇರೆಗೆ ಈಗಾಗಲೇ ಸಿಐಡಿ ತನಿಖೆಗೆ ಪೊಲೀಸ್ ಮಹಾನಿರ್ದೇಶಕರು ಆದೇಶಿಸಿದ್ದಾರೆ.

    ಸರ್ಕಾರ ಪ್ರಕರಣವನ್ನು ಸಿಐಡಿಗೆ ವಹಿಸಿರುವ ಹಿನ್ನೆಲೆ ಮೈಸೂರು ವಿಜಯನಗರ ಪೊಲೀಸರು ತನಿಖೆ ನಡೆಸಲು ಸಾಧ್ಯವಿಲ್ಲ. ಹೀಗಾಗಿ ಪ್ರಕರಣದ ಸಂಪೂರ್ಣ ಮಾಹಿತಿಯನ್ನು ಸಿಐಡಿ ಪೊಲೀಸರಿಗೆ ಎಸಿಪಿ ಶಿವಶಂಕರ್ ನೀಡಲಿದ್ದಾರೆ. ಈ ಬಗ್ಗೆ ನ್ಯಾಯಾಲಯಕ್ಕೆ ಮೈಸೂರು ಪೊಲೀಸರು ಮಾಹಿತಿ ನೀಡಿದ್ದಾರೆ. ಇದೇ ಕಾರಣಕ್ಕೆ ಜನವರಿ 25 ರವರೆಗೆ ಸ್ಯಾಂಟ್ರೋ ರವಿ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆಯಾಗಿದೆ. ಇದನ್ನೂ ಓದಿ: ಗೃಹ ಸಚಿವರಿಗೆ ಅವರ ಇಲಾಖೆಯಲ್ಲಿ ನಡೆಯೋ ವಿಷಯ ಗೊತ್ತಿಲ್ಲವೇ?: ಹೆಚ್‍ಡಿಕೆ ವಾಗ್ದಾಳಿ

    ಸ್ಯಾಂಟ್ರೋ ರವಿ ಪರ ವಕೀಲರು ಇನ್ನೆರಡು ದಿನಗಳಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಇನ್ನು, ನಟೋರಿಯಸ್ ಕ್ರಿಮಿನಲ್‍ನ್ನು ಯಾಕೆ ನ್ಯಾಯಾಂಗ ಬಂಧನಕ್ಕೆ ನೀಡಿದರು? ಸೂಕ್ತ ತನಿಖೆಗೆ ಒಳಪಡಿಸಬೇಕು ಅಂತ ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಮಧ್ಯೆ, ಆರಗ ಜ್ಞಾನೇಂದ್ರ ಅಯ್ಯಪ್ಪ ಮಾಲಾಧಾರಿಯಾಗಿದ್ದು, ಇರುಮುಡಿ ಹೊತ್ತು ಶಬರಿ ಮಲೆಗೆ ಸೆಕ್ಯೂರಿಟಿ ಜೊತೆ ತೆರಳಿದ್ದಾರೆ. ಇದನ್ನೂ ಓದಿ: ನನಗೆ ಯಾವುದೇ ನೋಟಿಸ್‌ ಬಂದಿಲ್ಲ: ಯತ್ನಾಳ್‌

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k